Tag: letter

  • ಅಸುರಕ್ಷತೆಯ ವಾತಾವರಣವಿದೆ, ಗನ್ ಮ್ಯಾನ್ ನೀಡಿ: ಜೆಡಿಎಸ್ ಸದಸ್ಯನ ಮನವಿ

    ಅಸುರಕ್ಷತೆಯ ವಾತಾವರಣವಿದೆ, ಗನ್ ಮ್ಯಾನ್ ನೀಡಿ: ಜೆಡಿಎಸ್ ಸದಸ್ಯನ ಮನವಿ

    ಚಿಕ್ಕಮಗಳೂರು: ರಾಜ್ಯದಲ್ಲಿನ ಕೋಮು ಸಂಘರ್ಷ ಹಾಗೂ ಜಾತಿ ದ್ವೇಷದ ಹೆಸರಿನಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯಿಂದ ನಗರಸಭೆ ಸದಸ್ಯರು ಆತಂಕಗೊಂಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಗನ್ ಮ್ಯಾನ್ ಕೇಳಿದ್ದಾರೆ.

    ನಗರಸಭೆಯ 8ನೇ ವಾರ್ಡಿನ ಜೆಡಿಎಸ್ ಸದಸ್ಯ ಎ.ಸಿ.ಕುಮಾರ್ ಗನ್ ಮ್ಯಾನ್ ಕೋರಿ ಎಸ್‌ಪಿ ಅಕ್ಷಯ್‍ಗೆ ಪತ್ರ ಬರೆದಿದ್ದಾರೆ. ನಗರಸಭೆಯಲ್ಲಿ ಈ ಹಿಂದೆ ಹಾಗೂ ಈಗ ನಡೆಯುತ್ತಿರುವ ಕಾನೂನುಬಾಹಿರ ಕಾಮಗಾರಿಗಳು, ಟೆಂಡರ್‌ಗಳು, ಅಕ್ರಮ ನೇಮಕಾತಿ, ಕಾನೂನು ಬಾಹಿರವಾಗಿ ಇಟ್ಟಿರುವ ಖಾತೆಗಳು, ಕಾನೂನು ಉಲ್ಲಂಘಿಸಿ ನಿರ್ಮಿಸುತ್ತಿರುವ ಅನಧಿಕೃತ ಕಟ್ಟಡಗಳು, ಸರ್ಕಾರಿ ಆಸ್ತಿ ಒತ್ತುವರಿಗಳ ಬಗ್ಗೆ ಮಾಹಿತಿ ಹಕ್ಕಿನಡಿ ದಾಖಲೆಗಳನ್ನು ಪಡೆದು ಅಕ್ರಮ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದೇನೆ. ನಗರದ ಜನತೆಗೂ ಕೂಡ ನಗರಸಭೆಯಲ್ಲಿನ ಭ್ರಷ್ಟಾಚಾರದ ಮಾಹಿತಿಯನ್ನು ತಿಳಿಸುತ್ತಿದ್ದೇನೆ. ಇದನ್ನೂ ಓದಿ: ಕಳ್ಳ-ಪೊಲೀಸ್ ಆಟವಾಡುತ್ತಾ ನೆರೆ ಮನೆಯ ಬಾಲಕನನ್ನು ಕೊಂದ ಬಿಜೆಪಿ ಮುಖಂಡನ ಮಗ

    ಹಾಗಾಗಿ, ನನ್ನ ಮೇಲೆ ಜಾತಿ ನಿಂದನೆ ಕಾಯ್ದೆಯಡಿ ಸುಳ್ಳು ದೂರು ದಾಖಲಿಸಿದ್ದು, ನಗರಸಭೆ ಪೌರಾಯುಕ್ತರು ಹಾಗೂ ಅಧ್ಯಕ್ಷರು ಸಿಬ್ಬಂದಿಗಳನ್ನು ಪ್ರಚೋದಿಸಿ ನನ್ನ ವಿರುದ್ಧ ದೂರು ತೆಗೆದುಕೊಂಡಿದ್ದಾರೆ. ನಾನು ಮಾಹಿತಿ ನೀಡಿರುವ ಅಕ್ರಮ ಕಟ್ಟಡಗಳ ಮಾಲೀಕರು ನನ್ನ ವಿರುದ್ಧ ದೂರು ನೀಡುವಂತೆ ಎತ್ತಿಕಟ್ಟಿದ್ದಾರೆ. ನನ್ನ ವಾಸದ ಮನೆಯನ್ನು ಕೂಡ ಅಕ್ರಮವಾಗಿ ಕಟ್ಟಿದ್ದೀರಿ ಎಂದು ಗುರು ಅರ್ಜಿಯನ್ನು ಪಡೆದುಕೊಂಡು ನನ್ನ ವಾಸದ ಮನೆಗೆ ನೋಟಿಸ್ ನೀಡಿದ್ದಾರೆ.

    ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಾಗೂ ನಗರದಲ್ಲಿ ನಡೆಯುತ್ತಿರುವ ನನ್ನ ವಿರುದ್ಧದ ಪಿತೂರಿಯಿಂದ ಅಸುರಕ್ಷತೆಯ ವಾತಾವರಣ ನಿರ್ಮಾಣವಾಗಿದೆ. ನನಗೆ ನೀವು ಗನ್ ಮ್ಯಾನ್ ನೀಡಿ ಕಾನೂನುಬದ್ಧ ರಕ್ಷಣೆ ನೀಡಬೇಕೆಂದು ಎಸ್‍ಪಿಗೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:  ಭಾವನಾತ್ಮಕ ವಿಷಯ ಕೆದಕಿ ಕೆಲ ಪಕ್ಷಗಳು ರಾಜಕೀಯ ಲಾಭ ಪಡೆಯಲು ಹೊರಟಿವೆ: ಹೆಚ್‍ಡಿಕೆ 

    Live Tv
    [brid partner=56869869 player=32851 video=960834 autoplay=true]

  • ಸರ್ಕಾರಿ ನೌಕರರ ಕ್ಷಮೆಯಾಚಿಸಿ: ಸಿ.ಎಸ್‌.ಷಡಕ್ಷರಿಗೆ ರವಿ ಕೃಷ್ಣಾರೆಡ್ಡಿ ಪತ್ರ

    ಸರ್ಕಾರಿ ನೌಕರರ ಕ್ಷಮೆಯಾಚಿಸಿ: ಸಿ.ಎಸ್‌.ಷಡಕ್ಷರಿಗೆ ರವಿ ಕೃಷ್ಣಾರೆಡ್ಡಿ ಪತ್ರ

    ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಮೊಬೈಲ್‌ ಬಳಸುವಂತಿಲ್ಲ ಎಂದು ಆದೇಶ ಹೊರಡಿಸಿ ತೀವ್ರ ಟೀಕೆಗಳ ನಂತರ ಆದೇಶವನ್ನು ವಾಪಸ್‌ ತೆಗೆದುಕೊಂಡು ರಾಜ್ಯ ಸರ್ಕಾರ ಮುಜುಗರಕ್ಕೀಡಾಗಿದೆ. ಈ ಆದೇಶ ಜಾರಿಗೆ ಪ್ರಮುಖ ಕಾರಣ ನಾನೇ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರಿಗೆ ಪತ್ರ ಬರೆದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

    ಸರ್ಕಾರದ ದುರುದ್ದೇಶಪೂರಿತ ಆದೇಶಕ್ಕೆ ನಾನೇ ಕಾರಣ ಎಂದು ಸಭೆಯೊಂದರಲ್ಲಿ ಕೊಚ್ಚಿಕೊಳ್ಳುವ ಮೂಲಕ ನಿಮ್ಮ ತಪ್ಪನ್ನು ಒಪ್ಪಿಕೊಂಡಿದ್ದೀರಿ. ಈ ಆದೇಶದಿಂದ ಆದ ಬೆಳವಣಿಗೆಯಿಂದ ರಾಜ್ಯದ ಲಕ್ಷಾಂತರ ಪ್ರಮಾಣಿಕ ಸರ್ಕಾರಿ ನೌಕರರ ಭಾವನೆಗಳಿಗೆ ಧಕ್ಕೆಯಾಗಿದೆ. ಇದಕ್ಕೆ ಕಾರಣರಾದ ನೀವು ಸರ್ಕಾರಿ ನೌಕರರ ಕ್ಷಮೆಯಾಚಿಸಬೇಕು ಎಂದು ಪತ್ರದಲ್ಲಿ ರವಿ ಕೃಷ್ಣಾರೆಡ್ಡಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವೀಡಿಯೋ ಮಾಡುವಂತಿಲ್ಲ

    ಪತ್ರದಲ್ಲೇನಿದೆ?
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ,

    ನನ್ನ ತಂದೆ ಕೃಷ್ಣಾರೆಡ್ಡಿ ವಿ.ಯವರು 1970-80ರ ದಶಕದಲ್ಲಿ ಸರ್ಕಾರಿ ನೌಕರರಾಗಿದ್ದವರು. ಹಾಗಾಗಿ ಸರ್ಕಾರದ ಹಾಗೂ ಜನರ ತೆರಿಗೆಯ ಹಣದ ಋಣ ನನ್ನ ಮತ್ತು ನನ್ನ ಕುಟುಂಬದ ಮೇಲಿದೆ. ಆ ಹಿನ್ನೆಲೆಯಲ್ಲಿ ನಾನು ಅತ್ಯಂತ ಪ್ರೀತಿ, ನೋವು, ಬೇಸರ, ದುಃಖ, ಕಾಳಜಿ, ಅಸಹನೆಯಿಂದ ಕೂಡಿದ ಮಿಶ್ರಭಾವದಿಂದ ನಿಮಗೆ ಮತ್ತು ನಿಮ್ಮ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಈ ಬಹಿರಂಗ ಪತ್ರವನ್ನು ಬರೆಯುತ್ತಿದ್ದೇನೆ.

    ನಿಮ್ಮ ದುರಾಲೋಚನೆ, ವ್ಯಾಪ್ತಿ ಮೀರಿದ ನಡವಳಿಕೆ ಮತ್ತು ದುಷ್ಕೃತ್ಯದಿಂದಾಗಿ ನೀವು ರಾಜ್ಯದ ಲಕ್ಷಾಂತರ ಪ್ರಾಮಾಣಿಕ ಸರ್ಕಾರಿ ನೌಕರರ ಘನತೆ ಮತ್ತು ಗೌರವಕ್ಕೆ ಚ್ಯುತಿ ತಂದಿದ್ದೀರಿ. ರಾಜ್ಯದ ಮುಖ್ಯಮಂತ್ರಿಯನ್ನು ಮತ್ತು DPAR ಇಲಾಖೆಯ ಅಯೋಗ್ಯ ಅಧಿಕಾರಿಗಳನ್ನು ದಾರಿ ತಪ್ಪಿಸಿ, ಅವರಿಂದ ಕಾನೂನುಬಾಹಿರ ಮತ್ತು ಜನವಿರೋಧಿ ಆದೇಶವನ್ನು ಹೊರಡಿಸಿ, ತದನಂತರ ಕೇವಲ ಒಂದೇ ದಿನದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ಆ Draconian ಆದೇಶವನ್ನು ಹಿಂಪಡೆಯುವಂತೆ ಆಗಿ, ರಾಜ್ಯ ಸರ್ಕಾರಕ್ಕೆ ಹಾಗೂ ಅದರ ನೌಕರರಿಗೆ ಮುಜುಗರ ಮತ್ತು ಅವಮಾನ ಆಗುವಂತಾಗಲು ನೇರ ಕಾರಣ ಆಗಿದ್ದೀರಿ. ಆ ದುರುದ್ದೇಶಪೂರಿತ ಆದೇಶಕ್ಕೆ ನಾನೇ ಕಾರಣ ಎಂದು ಆಲಮಟ್ಟಿಯಲ್ಲಿ ನಡೆದ ಸಭೆಯಲ್ಲಿ ಕೊಚ್ಚಿಕೊಳ್ಳುವ ಮೂಲಕ ನಿಮ್ಮ ತಪ್ಪನ್ನು ಒಪ್ಪಿಕೊಂಡಿದ್ದೀರಿ. ಇದರಲ್ಲಿ ಯಾವ ಪಾತ್ರವೂ ಇಲ್ಲದ ಮತ್ತು ಈ ಘಟನೆಯ ಕಾರಣಕ್ಕಾಗಿ ತೀವ್ರವಾಗಿ ನೊಂದಿರುವ ರಾಜ್ಯದ ಲಕ್ಷಾಂತರ ಪ್ರಾಮಾಣಿಕ ಸರ್ಕಾರಿ ನೌಕರರ ಭಾವನೆಗಳಿಗೆ ಧಕ್ಕೆ ತಂದಿದ್ದೀರಿ. ಹಾಗಾಗಿ, ಈ ಕೂಡಲೇ ನೀವು ರಾಜ್ಯದ ಎಲ್ಲಾ ಸರ್ಕಾರಿ ನೌಕರರಲ್ಲಿ Unconditional ಕ್ಷಮೆ ಯಾಚಿಸಬೇಕು ಎಂದು ನಾನು ಮೊದಲಿಗೆ ಆಗ್ರಹಿಸುತ್ತೇನೆ.

    ಅಂದಹಾಗೆ, ನೀವು ಸರ್ಕಾರಿ ನೌಕರರ ಸ್ವಾಭಿಮಾನದ ಬಗ್ಗೆ ಮಾತನಾಡಿದ್ದೀರಿ. ರಾಜ್ಯದ 6 ಲಕ್ಷ ಸರ್ಕಾರಿ ನೌಕರರಲ್ಲಿ ಕನಿಷ್ಠ ನಾಲ್ಕೈದು ಲಕ್ಷ ಸರ್ಕಾರಿ ನೌಕರರು ಈಗಲೂ ಸ್ವಾಭಿಮಾನ ಮತ್ತು ಘನತೆಯಿಂದ ಬದುಕುತ್ತಿದ್ದಾರೆ. ಯಾಕೆಂದರೆ ಅವರ ಇಲಾಖೆಗಳಲ್ಲಿ ಭ್ರಷ್ಟಾಚಾರ ಮತ್ತು ಲಂಚಕ್ಕೆ ಅವಕಾಶ ಬಹಳ ಕಡಿಮೆ ಇರುತ್ತದೆ. ಲಂಚಗುಳಿತನ ಮತ್ತು ಅಕ್ರಮಗಳಿಗೆ ಅಪಾರ ಅವಕಾಶ ಇರುವ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, RDPR ಇಲಾಖೆ, ಅಬಕಾರಿ ಇಲಾಖೆ, ಕೃಷಿ ಇಲಾಖೆಯಂತಹ ಕೆಲವೇ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇಲ್ಲಿಯೂ ಎಲ್ಲರೂ ಭ್ರಷ್ಟರಲ್ಲ. ಆದರೆ ಭ್ರಷ್ಟರ ಅಟ್ಟಹಾಸ ಮಾತ್ರ ಮಿತಿಮೀರಿದೆ. ತಮ್ಮ ಹಾಗೆ ಎಲ್ಲರೂ ಪರಮಭ್ರಷ್ಟರೇ ಎನ್ನುವ ಸಾರ್ವತ್ರಿಕ ಭಾವನೆಯನ್ನು ಸೃಷ್ಟಿಸಿರುವುದು ಆ ಅಲ್ಪಸಂಖ್ಯಾತ ಭ್ರಷ್ಟರೇ. ಬಹುಸಂಖ್ಯಾತ ಪ್ರಾಮಾಣಿಕ ನೌಕರರು ಹೆದರುಪುಕ್ಕಲರಾಗಿ ಭ್ರಷ್ಟಾಚಾರ ಬೆಳೆಯಲು ಪರೋಕ್ಷವಾಗಿ ಕಾರಣರಾಗಿದ್ದಾರೆ. ಆ ಕಾರಣದಿಂದಾಗಿಯೇ ಅವರೂ ಆರೋಪಗಳಿಗೆ ಗುರಿಯಾಗುತ್ತಿದ್ದಾರೆ.

    ಅಂದಹಾಗೆ, ಸ್ವಾಭಿಮಾನ ಇರುವ ಯಾವುದೇ ನೌಕರ ಭ್ರಷ್ಟ ಅಥವಾ ಲಂಚಕೋರ ಆಗಲು ಸಾಧ್ಯವಿಲ್ಲ. ಹಾಗಾಗಿ ಭ್ರಷ್ಟರನ್ನು ಮತ್ತು ಲಂಚಕೋರರನ್ನು ಪ್ರಶ್ನಿಸಿದಾಗ ಮಾನಧನರೇ ಅಲ್ಲದ ಅವರ ಯಾವ ರೀತಿಯ ಸ್ವಾಭಿಮಾನಕ್ಕೆ ಧಕ್ಕೆ ಆಗುತ್ತದೆ? ಇದನ್ನೂ ಓದಿ: ಚಾಮುಂಡೇಶ್ವರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ- ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ

    ನೀವು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ. ಇಂದು ಸರ್ಕಾರಿ ನೌಕರರ ಘನತೆಗೆ ಹೆಚ್ಚು ಚ್ಯುತಿ ಬಂದಿರುವುದು ಈಗಾಗಲೇ ಹೇಳಿದಂತೆ ನಿಮ್ಮಲ್ಲಿಯ ಕೆಲವರು ಮಾಡುವ ಭ್ರಷ್ಟಾಚಾರ, ಲಂಚಕೋರತನ, ಕರ್ತವ್ಯಲೋಪ, ಸಾರ್ವಜನಿಕರೊಂದಿಗಿನ ದುರ್ನಡತೆ ಮುಂತಾದ ಅವಗುಣಗಳ ಕಾರಣಕ್ಕೆ. ಸರ್ಕಾರಿ ನೌಕರರಿಗೆ ತಕ್ಕುದಲ್ಲದ ನಡವಳಿಕೆಯ ಕಾರಣಕ್ಕೆ. ಸಮಾಜದಲ್ಲಿ ಸರ್ಕಾರಿ ನೌಕರರ ಘನತೆ ಮತ್ತು ಗೌರವ ಹೆಚ್ಚಾಗಬೇಕು ಎಂದರೆ ಅವರು ತಮ್ಮ ದುರ್ನಡತೆ, ದುಷ್ಕೃತ್ಯ, ಅಕ್ರಮ ಮತ್ತು ಕಾನೂನುಬಾಹಿರ ಕೆಲಸಗಳನ್ನು ನಿಲ್ಲಿಸಬೇಕು. ಜನರ ವಿಶ್ವಾಸ ಪಡೆಯಬೇಕು.

    ಹಾಗಾಗಿ ನೀವು ಸರ್ಕಾರಿ ನೌಕರರ ಯಾವುದೇ ಸಭೆಯಲ್ಲಿ ನಿಮ್ಮ ಸಹನೌಕರರಿಗೆ ಅವರು “ಯಾವುದೇ ಕಾರಣಕ್ಕೂ ಲಂಚ ತೆಗೆದುಕೊಳ್ಳಬಾರದು, ಅಕ್ರಮಗಳನ್ನು ಮಾಡಬಾರದು, ಸಾರ್ವಜನಿಕರನ್ನು ವಿನಾಕಾರಣ ಸತಾಯಿಸಬಾರದು, ಅವರೊಂದಿಗೆ ಸೌಜನ್ಯ ಮತ್ತು ಗೌರವದಿಂದ ನಡೆದುಕೊಳ್ಳಬೇಕು” ಎಂದು ಎಂದಾದರೂ ಹೇಳಿದ್ದೀರಾ? ಇಲ್ಲವಾದಲ್ಲಿ ನೀವು ಎಂತಹ ನೌಕರರ ಸಂಘದ ಅಧ್ಯಕ್ಷ? ನಿಮ್ಮ ಸಂಘದ ಲಕ್ಷಾಂತರ ಸದಸ್ಯರ ಗೌರವ ಮತ್ತು ಘನತೆಯನ್ನು ನೀವು ಇನ್ಯಾವ ರೀತಿ ಕಾಪಾಡುತ್ತೀರಿ, ಹೆಚ್ಚಿಸುತ್ತೀರಿ?

    ಬಹುಶಃ, ಮೊನ್ನೆ ಮಾಡಿದ ರೀತಿಯಲ್ಲಿಯೇ ಇರಬೇಕು. ಒಬ್ಬ ಸುಳ್ಳುಗಾರ ಮತ್ತು ಅದಕ್ಷ ಮುಖ್ಯಮಂತ್ರಿಯ ಜೊತೆ ಕಾರಿನಲ್ಲಿ ಖಾಸಗಿಯಾಗಿ ಕುಳಿತು ಅವರಿಂದ ಹೀನ ಮತ್ತು ಜನದ್ರೋಹಿ ಆದೇಶ ಹೊರಡಿಸುವಂತೆ ಮಾಡುವ ಮೂಲಕ ಅಲ್ಲವೇ? ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ/ವೀಡಿಯೋ ತೆಗೆಯಬಾರದು ಎಂದು ಸರ್ಕಾರ ಆದೇಶ ಹೊರಡಿಸಿದ ನಂತರ ನಡೆದ ಕ್ಷಿಪ್ರ ಬೆಳವಣಿಗೆಯಲ್ಲಿ ರಾಜ್ಯದ ಸರ್ಕಾರಿ ನೌಕರರ ಮಾನ ಮತ್ತು ಮರ್ಯಾದೆ ಯಾವ ರೀತಿ ಹರಾಜು ಆಗಿದೆ ಎಂದು ನಿಮಗೆ ಗೊತ್ತಿದೆಯೇ?

    ಈ ವಿಷಯದಲ್ಲಿ ನಿಮ್ಮ ದುರಾಲೋಚನೆ ಮತ್ತು ಅಹಂಕಾರದ ಏಕೈಕ ಕಾರಣದಿಂದಾಗಿ ತಮಗಾಗಿರುವ ಮಾನಹಾನಿ ಕುರಿತು ಸರ್ಕಾರಿ ನೌಕರರು ಇಷ್ಟೊತ್ತಿಗೆ ನಿಮ್ಮಿಂದ ರಾಜೀನಾಮೆ ಪಡೆಯಬೇಕಿತ್ತು. ಆದರೆ ಅದನ್ನು ಮಾಡದ ಅವರ ಮೌನವೂ ಸಹ ಸರ್ಕಾರಿ ನೌಕರರು ಈಗ ಯಾವ ಮನಸ್ಥಿತಿಗೆ ತಲುಪಿದ್ದಾರೆ ಎನ್ನುವುದನ್ನು ಸೂಚಿಸುತ್ತದೆ. ಇದು ದುರಂತ.

    ನಮಗೆ ತಿಳಿದು ಬಂದಿರುವ ಹಾಗೆ, ನೀವೂ ಸೇರಿದಂತೆ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾಗಿರುವ ಅನೇಕರು ಸರ್ಕಾರದಲ್ಲಿ ತಮಗೆ ಕೊಟ್ಟಿರುವ ಕೆಲಸ ಮಾಡುವುದನ್ನು ಬಿಟ್ಟು ಇತರೆ ನೌಕರರ ವರ್ಗಾವಣೆ ಮಾಡಿಸುವುದು, ಭ್ರಷ್ಟರನ್ನು ಕಾನೂನಿನ ಪ್ರಕ್ರಿಯೆಗಳಿಂದ ರಕ್ಷಿಸುವುದು, ಕೆಲವು ಭ್ರಷ್ಟ ರಾಜಕಾರಣಿಗಳ ಚೇಲಾಗಳಾಗಿ ವರ್ತಿಸುವುದು, ತಮ್ಮ ಮಾತು ಒಪ್ಪದ ಇತರೆ ಪ್ರಾಮಾಣಿಕ ಸರ್ಕಾರಿ ನೌಕರರ ಮೇಲೆ ದಬ್ಬಾಳಿಕೆ ಮಾಡುವುದೂ ಸೇರಿದಂತೆ ಹಲವು ಕುಕೃತ್ಯ ಮತ್ತು ಸರ್ಕಾರಿ ನೌಕರರಿಗೆ ತಕ್ಕುದಲ್ಲದ ನಡವಳಿಕೆಯಲ್ಲಿ ತೊಡಗಿರುವ ಕುರಿತು ಆರೋಪಗಳಿವೆ. ನೀವಂತೂ KAS/IAS/IPS ಅಧಿಕಾರಿಗಳನ್ನೂ ವರ್ಗಾವಣೆ ಮಾಡಿಸುವಷ್ಟು ಪ್ರಭಾವಶಾಲಿ ಎನ್ನುತ್ತಾರೆ. ನಿಮ್ಮಂತಹವರ ಇಂತಹ ಅನುಚಿತ ಮತ್ತು ವ್ಯಾಪ್ತಿ ಮೀರಿದ ನಡವಳಿಕೆಯೂ ಇವತ್ತಿನ ದುರಾಡಳಿತಕ್ಕೆ ತನ್ನದೇ ಆದ ಕೆಟ್ಟ ಕೊಡುಗೆ ನೀಡಿದೆ.

    ಅಂದಹಾಗೆ, ನೀವು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು. ಸಂಘದ ಕೆಲಸ ಕಾರ್ಯಗಳನ್ನು ಕಚೇರಿಯ ಅವಧಿಯ ನಂತರ ಮಾಡಬೇಕೇ ವಿನಃ ದಿನಪೂರ್ತಿ ಅದನ್ನೇ ಮಾಡುವಂತಿಲ್ಲ. ಆ ರೀತಿಯ ವಿಶೇಷ ಹಕ್ಕುಗಳು ನೌಕರರ ಸಂಘದ ಪದಾಧಿಕಾರಿಗಳಿಗೆ ಇಲ್ಲ. ಯಾವ ಕೆಲಸಕ್ಕಾಗಿ ನಿಮಗೆ ಜನರ ತೆರಿಗೆಯ ಹಣವನ್ನು ಸರ್ಕಾರ ಸಂಬಳವಾಗಿ ನೀಡುತ್ತಿದೆಯೋ, ಅದನ್ನು ಮಾಡಿಯೇ ನೀವು ಇತರೆ ಖಾಸಗಿ ಕೆಲಸಗಳನ್ನು ಮಾಡಬೇಕು. ಆದರೆ ನೀವು ನಿಮ್ಮ ದುಷ್ಪ್ರಭಾವ ಬಳಸಿ ನಿಮ್ಮ ಅಧಿಕೃತ ಸರ್ಕಾರಿ ಕೆಲಸವನ್ನೇ ಮಾಡುತ್ತಿಲ್ಲ ಎನ್ನುವ ಮಾಹಿತಿ ಬಂದಿದೆ.

    ಇದೆಲ್ಲವೂ ಭ್ರಷ್ಟ J.C.B ಪಕ್ಷಗಳ ಕಾಲದಲ್ಲಿ ನಡೆಯುತ್ತಿತ್ತು. ಈಗ ಜನ ಎಚ್ಚತ್ತಿದ್ದಾರೆ. KRS ಪಕ್ಷದ ನಿರಂತರ ಹೋರಾಟದ ಕಾರಣಕ್ಕೆ ಇಂದು ರಾಜ್ಯದ ಲಕ್ಷಾಂತರ ಜನಸಾಮಾನ್ಯರಲ್ಲಿ ನವಚೈತನ್ಯ ಸಂಚರಿಸುತ್ತಿದೆ. ಅನ್ಯಾಯವನ್ನು ಸಾರ್ವಜನಿಕವಾಗಿ ಪ್ರಶ್ನಿಸುವ ಸ್ಥೈರ್ಯ ಬೆಳೆಸಿಕೊಂಡಿದ್ದಾರೆ. ಹಾಗಾಗಿ ನೀವೂ ಸೇರಿದಂತೆ ಯಾವೆಲ್ಲಾ ಸರ್ಕಾರಿ ನೌಕರರು ತಮ್ಮ ನಿಯೋಜಿತ ಸ್ಥಾನದಲ್ಲಿ ಕರ್ತವ್ಯ ನಿರ್ವಹಣೆ ಮಾಡುವುದನ್ನು ಬಿಟ್ಟು ರಾಜಕಾರಣಿಗಳ ಹಾಗೆ ಊರೂರು ಸುತ್ತಿ ಸರ್ಕಾರಿ ನೌಕರರ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದೀರೋ, ಅದೆಲ್ಲವೂ ಈ ಕೂಡಲೇ ಬಂದ್ ಆಗಬೇಕು. ಇದನ್ನೂ ಓದಿ: ಉಕ್ಕಿ ಹರಿಯುವ ತುಂಗಭದ್ರಾ ನದಿಯಲ್ಲಿ ಪ್ರವಾಸಿಗರ ಮೋಜುಮಸ್ತಿ – ಮಿತಿಮೀರಿದ ಹುಚ್ಚಾಟ

    ಇನ್ನು, ನೀವು ಮಾಡಿದ್ದೀರಿ ಎನ್ನಲಾದ ಹಲವು ಕುಕೃತ್ಯಗಳು ಮತ್ತು ಅಕ್ರಮ ಆಸ್ತಿಯ ಬಗ್ಗೆ ನಮಗೆ ಶಿವಮೊಗ್ಗ ಜಿಲ್ಲೆಯ ಹಲವರು ಕೆಲವು ವಿವರಗಳ ಸಹಿತ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಇವೆಲ್ಲವೂ ಗಂಭೀರ ಆರೋಪಗಳು. ಈ ವಿಚಾರದಲ್ಲಿ ಏನೆಲ್ಲಾ ಕಾನೂನು ಕ್ರಮಗಳನ್ನು ಜರುಗಿಸಬೇಕೋ ಅದನ್ನು ನಾವು ಶೀಘ್ರದಲ್ಲಿಯೇ ಜರುಗಿಸಲಿದ್ದೇವೆ.

    ಅದರ ಜೊತೆಗೆ, ನೀವು ಯಾವ ಹುದ್ದೆಯಲ್ಲಿ ಮತ್ತು ಸ್ಥಳದಲ್ಲಿ ಕೆಲಸ ಮಾಡುತ್ತಿದ್ದೀರೋ ಅದೇ ಸ್ಥಳಕ್ಕೆ ಇಷ್ಟರಲ್ಲಿಯೇ KRS ಪಕ್ಷದ ನಿಯೋಗ ಭೇಟಿ ನೀಡಿ, ನಿಮ್ಮ ಅನುಚಿತ ವರ್ತನೆ, ಕೆಲಸದ ಸ್ಥಳದಲ್ಲಿ ಗೈರು ಹಾಜರಿ, ಕರ್ತವ್ಯಲೋಪ ಮುಂತಾದ ವಿಚಾರಗಳ ಕುರಿತು ನಿಮ್ಮ ಮೇಲಧಿಕಾರಿಗೆ ದೂರು ನೀಡಲಿದೆ. ಲೋಕಾಯುಕ್ತದ ಗಮನಕ್ಕೂ ತರಲಿದೆ.

    ಸಂಬಳ ನನ್ನ ಹಕ್ಕು, ಗಿಂಬಳ ನನ್ನ ತಾಕತ್ತು, ಕೆಲಸ ನನ್ನ ಮರ್ಜಿ ಎನ್ನುವ ಮನಸ್ಥಿತಿಯ ಕೆಲವು ಭ್ರಷ್ಟ ಸರ್ಕಾರಿ ನೌಕರರಿಗೆ ಅವರ ನೈಜ ಕರ್ತವ್ಯವನ್ನು ನೆನಪಿಸುವ ಕೆಲಸವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಮಾಡುತ್ತಾ ಬಂದಿದೆ. ಆ ಮೂಲಕ ಲಂಚ ಮುಕ್ತ ಕರ್ನಾಟಕ, ಬಸವಣ್ಣನ ಕಲ್ಯಾಣ ಕರ್ನಾಟಕ, ಕುವೆಂಪುರ ಸರ್ವೋದಯ ಕರ್ನಾಟಕವನ್ನು ಕಟ್ಟಲು ಕಟಿಬದ್ಧವಾಗಿದೆ. ಆ ಹಾದಿಯಲ್ಲಿ ಎದುರಾಗುವ ಎಂತಹ ದುಷ್ಟಶಕ್ತಿಗಳನ್ನೂ ಜನ ಬಲ ಮತ್ತು ಸಂಘ ಬಲದಿಂದ KRS ಪಕ್ಷ ಮೆಟ್ಟಿ ನಿಲ್ಲುತ್ತದೆ. ಇದು ಸತ್ಯ ಮತ್ತು ವಾಸ್ತವ.

    ಇದನ್ನು ನೀವೂ ಸೇರಿದಂತೆ ಕರ್ನಾಟಕ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ನೆನಪಿಡಬೇಕು. ನಾಡು ಕಟ್ಟುವ ಕೆಲಸದಲ್ಲಿ ಪ್ರಾಮಾಣಿಕ ನೌಕರರು ನಮ್ಮೊಡನೆ ಕೈಜೋಡಿಸಬೇಕು ಎಂದು ಮನವಿ ಮಾಡುತ್ತೇವೆ. ಇದೆಲ್ಲವನ್ನೂ ನಾನು ಕರುನಾಡಿನ ಹಿತದೃಷ್ಟಿಯಿಂದ ಹೇಳಿದ್ದೇನೆ. ನೀವೂ ಸೇರಿದಂತೆ ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ.

    ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ. ಶುಭವಾಗಲಿ ಎಂದು ರವಿ ಕೃಷ್ಣಾರೆಡ್ಡಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೇವಾಲಯ ತೊರೆಯದಿದ್ರೆ ಶಿರಚ್ಛೇದ ಮಾಡಲಾಗುವುದು – ಉದಯಪುರ ಘಟನೆ ಬಳಿಕ ಇನ್ನೊಂದು ಬೆದರಿಕೆ ಪತ್ರ

    ದೇವಾಲಯ ತೊರೆಯದಿದ್ರೆ ಶಿರಚ್ಛೇದ ಮಾಡಲಾಗುವುದು – ಉದಯಪುರ ಘಟನೆ ಬಳಿಕ ಇನ್ನೊಂದು ಬೆದರಿಕೆ ಪತ್ರ

    ಜೈಪುರ: ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಅವರ ಶಿರಚ್ಛೇದದ ಮೂಲಕ ನಡೆಸಿರು ಭೀಕರ ಹತ್ಯೆಯ ಬೆನ್ನಲ್ಲೇ ಇದೀಗ ಇನ್ನೊಂದು ಬೆದರಿಕೆ ಪತ್ರ ಸಿಕ್ಕಿದೆ. ಪತ್ರದಲ್ಲಿ ದೇವಾಲಯದ ಅರ್ಚಕರಿಗೆ ದೇವಾಲಯ ತೊರೆಯುವಂತೆ ಹೇಳಲಾಗಿದ್ದು, ಇಲ್ಲವೆಂದರೆ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ.

    ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಎಂಎಸ್‌ಜೆ ಕಾಲೇಜು ಆವರಣದಲ್ಲಿ ನಿರ್ಮಿಸಲಾಗಿರುವ ದೇವಸ್ಥಾನದ ಅರ್ಚಕರಿಗೆ ಬೆದರಿಕೆ ಒಡ್ಡಲಾಗಿದೆ. ದೇವಸ್ಥಾನದಲ್ಲಿ ಪತ್ತೆಯಾದ ಬೆದರಿಕೆ ಪತ್ರದಲ್ಲಿ ದೇವಸ್ಥಾನದ ಅರ್ಚಕ ದೇವಾಲಯ ತೊರೆಯದಿದ್ದರೆ 10 ದಿನಗಳಲ್ಲಿ ತಲೆ ಕಡಿಯುವುದಾಗಿ ಬರೆಯಲಾಗಿದೆ. ನಮ್ಮ ಮಾತಿಗೆ ಮಣಿಯದೇ ಹೋದಲ್ಲಿ ಅದರ ಪರಿಣಾಮವನ್ನು ಅರ್ಚಕನೇ ಎದುರಿಸಬೇಕಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಗರ್ಭಪಾತ ಬೇಡ, ಮಗುವಿಗೆ ಜನ್ಮ ನೀಡಿ ದತ್ತು ಕೊಡಿ – ದೆಹಲಿ ಹೈಕೋರ್ಟ್

    ಈ ವಿಷಯ ಬೆಳಕಿಗೆ ಬರುತ್ತಲೇ ಜಿಲ್ಲೆಯ ಹಿಂದೂ ಸಂಘಟನೆಗಳು ಭಾರೀ ಅಸಮಾಧಾನ ವ್ಯಕ್ತಪಡಿಸಿವೆ. ಭರತ್‌ಪುರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಆರೋಪಿಗಳನ್ನು ಶೀಘ್ರವೇ ಹಿಡಿಯಬೇಕಾಗಿ ಜನರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

    ಕಾಲೇಜಿನಲ್ಲಿರುವ ದೇವಸ್ಥಾನದ ಅರ್ಚಕರಿಗೆ ಈ ರೀತಿಯಾಗಿ ಸಾರ್ವಜನಿಕವಾಗಿ ಬೆದರಿಕೆ ಹಾಕಿರುವುದು ತಿಳಿದುಬರುತ್ತಲೇ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾಲೇಜು ಗೇಟ್‌ಗೆ ಬೀಗ ಹಾಕಿ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ: ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವೀಡಿಯೋ ಮಾಡುವಂತಿಲ್ಲ

    ಇದೀಗ ಸ್ಥಳೀಯ ಪೊಲೀಸ್ ಠಾಣೆ ಈ ಬಗ್ಗೆ ದೂರನ್ನು ಸ್ವೀಕರಿಸಿದ್ದು, ದೇವಾಲಯದ ಗೋಡೆಯಲ್ಲಿ ಅಂಟಿಸಿದ್ದ ಪತ್ರವನ್ನು ತೆಗೆದು, ತನಿಖೆ ಪ್ರಾರಂಭಿಸಿದೆ. ಪಕ್ಕದಲ್ಲಿಯೇ ಇದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ಗೆ ಕೊಲೆ ಬೆದರಿಕೆ ಪತ್ರ – ಲಿಸ್ಟ್‌ನಲ್ಲಿ ಸಿದ್ದು, ಹೆಚ್‌ಡಿಕೆ ಹೆಸರು

    ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ಗೆ ಕೊಲೆ ಬೆದರಿಕೆ ಪತ್ರ – ಲಿಸ್ಟ್‌ನಲ್ಲಿ ಸಿದ್ದು, ಹೆಚ್‌ಡಿಕೆ ಹೆಸರು

    ಬೆಂಗಳೂರು: ಲೇಖಕಿ ಹಾಗೂ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಕೊಲೆ ಬೆದರಿಕೆ ಲಿಸ್ಟ್‌ನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್‌.ಡಿ.ಕುಮಾರಸ್ವಾಮಿ ಅವರ ಹೆಸರೂ ಇದೆ.

    ಸಂಜಯನಗರದಲ್ಲಿರುವ ಲಲಿತಾ ನಾಯಕ್‌ ಅವರ ನಿವಾಸದ ವಿಳಾಸಕ್ಕೆ ಕಿಡಿಗೇಡಿಗಳು ಪತ್ರ ಬರೆದಿದ್ದಾರೆ. ಕೊಲೆ ಬೆದರಿಕೆ ಪತ್ರದಲ್ಲಿ ಮಾಜಿ ಸಿಎಂಗಳ ಜೊತೆಗೆ ಕೆಲವರು ಸಾಹಿತಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಈ‌ ಹಿನ್ನೆಲೆಯಲ್ಲಿ ಸಂಜಯನಗರ ಪೊಲೀಸರಿಗೆ ಲಲಿತಾ ನಾಯಕ್‌ ಅವರು ದೂರು ನೀಡದ್ದಾರೆ. ಇದನ್ನೂ ಓದಿ: ಕಳ್ಳ ಮಾರ್ಗದಲ್ಲಿ ಹಣ ಸಂಪಾದಿಸುವವರು ಸುಳ್ಳಿನ ಪುಸ್ತಕವನ್ನು ಬಿಡುಗಡೆ ಮಾಡುತ್ತಾರೆ: ಸಿದ್ದುಗೆ ತಿರುಗೇಟು ನೀಡಿದ ಜೋಶಿ

    ಪತ್ರದಲ್ಲೇನಿದೆ?
    ಪಿಎಫ್‌ಐ , ಸಿಎಫ್‌ಐ, ಎಸ್‌ಡಿಪಿಐ ಪರ ಮಾತಾಡಬಾರದು. ಅವರ ಸಭೆ-ಸಮಾರಂಭಗಳಲ್ಲಿ ಭಾಗಿವಹಿಸಬಾರದು. ಪಠ್ಯದಲ್ಲಿ ದೇಶಪ್ರೇಮ, ದೇಶ ಭಕ್ತಿ, ದೇಶ ರಕ್ಷಣೆ ಪಾಠ ಸೇರಿಸಿದ್ದಕ್ಕೆ ನಿಮಗೆಲ್ಲಾ ಭಯ. ನೀವು ನಿಜವಾದ ದೇಶದ್ರೋಹಿಗಳು. ನಮ್ಮ ದೇಶವನ್ನು ನಾಶ ಮಾಡಲು ಹೊಂಚು ಹಾಕುತ್ತಿದ್ದೀರಾ? ಭಯೋತ್ಪಾದಕರು, ನಕ್ಸಲೈಟ್‌ಗಳು, ಮಾವೋವಾದಿಗಳು, ದೇಶದ್ರೋಹಿ ಮುಸ್ಲಿಂಮರಿಗೆ ಬೆಂಬಲವಾಗಿ ನಿಂತಿದ್ದೀರಿ. ಪಿಎಫ್‌ಐ ಕಾರ್ಯಕ್ರಮದಲ್ಲಿ ನಮ್ಮ ವೀರ ಸೈನಿಕರ ಬಗ್ಗೆ ಅಗೌರವವಾಗಿ ಮಾತನಾಡಿದ್ದೀರಿ? ನೀವು ಕ್ಷಮೆ ಕೇಳಬೇಕು. ನೀವು ಎಚ್ಚರಿಕೆಯಿಂದ ಇರೀ ಎಂದು ಪತ್ರದಲ್ಲಿ ಬರೆಯಲಾಗಿದೆ.

    ಜೈ ಹಿಂದೂರಾಷ್ಟ್ರ ಎಂದು ಹೆಸರು
    ಪತ್ರದ ಕೊನೆಯಲ್ಲಿ ʼಜೈಹಿಂದೂ ರಾಷ್ಟ್ರ, ಭಾರತ ಮಾತೆಗೆ ಜೈ, ಜೈ ಕರ್ನಾಟಕ ಮಾತೆ, ಸಹಿಷ್ಣು, ಹಿಂದೂ ಎಂದು ಬರೆದಿದೆ. ಅಲ್ಲದೇ ರಾಜಾಜಿ ನಗರದ ಸೀಲ್ ಇದೆ. ಶ್ರೀರಾಮ್ ಅಂತಾ ಪತ್ರದಲ್ಲಿ ಬರೆದಿದೆ. ಇದನ್ನೂ ಓದಿ: 8 ವರ್ಷಗಳಲ್ಲಿ ದೇಶದ ಒಟ್ಟು ಸಾಲ 102 ಲಕ್ಷ ಕೋಟಿ ರೂ. ಪ್ರತಿಯೊಬ್ಬರ ತಲೆ ಮೇಲೆ 1.70 ಲಕ್ಷ ರೂ. ಸಾಲ: ಸಿದ್ದು

    ಶನಿವಾರ ಬೆಳಗ್ಗೆ 10 ಗಂಟೆಗೆ ಪತ್ರ ಬಂದಿದೆ. ಸಾಹಿತಿಗಳು, ರಾಜಕೀಯದವರನ್ನು ತುಂಬಾ ಕೆಟ್ಟ ಪದಗಳಿಂದ ಬೈದಿದ್ದಾರೆ. ನಿಮ್ಮೆಲ್ಲರನ್ನೂ ದೇಶಬಿಟ್ಟು ಕಳಿಸಬೇಕು, ನಿಮ್ಮನ್ನೆಲ್ಲಾ ಗುಂಡಿಟ್ಟು ಕೊಲೆ ಮಾಡಬೇಕು. ಪಿಎಫ್‌ಐ, ಎಸ್‌ಡಿಪಿಐ ಸಂಘಟನೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಬಾರದು. ಒಂದು ವೇಳೆ ಮಾತಾಡಿದ್ರೆ, ಕೊಲೆಯಾಗ್ತಿರಿ ಎಚ್ಚರಿಕೆ ಅಂತಾ ಬರೆದಿದ್ದಾರೆ. 10 ಜನರ ಹೆಸರು ಸೇರಿಸಿ, 61 ಜನರ ಅಂತಾ ಹೇಳಿದ್ದಾರೆ. 61 ಜನರಲ್ಲಿ ಯಾರನ್ನು ಬೇಕಾದರೂ ಕೊಲೆ ಮಾಡಬಹುದು. ಇನ್ನೂ ಯಾರ್ಯಾರಿಗೆ ಬಂದಿದೆ ಗೊತ್ತಿಲ್ಲ. ಈ ಬಗ್ಗೆ ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ. ಎಂದು ಬಿ.ಟಿ.ಲಲಿತಾ ನಾಯಕ್‌ ಅವರು ತಿಳಿಸಿದ್ದಾರೆ.

    Live Tv

  • ಈದ್ ಉಲ್ ಫಿತರ್ ಅನ್ನು ಬಸವ ಜಯಂತಿಯಂತೆ ಆಚರಿಸಿದ್ದರೆ ಮತ್ತಷ್ಟು ಹೃದಯ ಸ್ಪರ್ಶಿಯಾಗುತ್ತಿತ್ತು: ಸಿಎಂಗೆ ಸಾಹಿತಿಗಳು, ಚಿಂತಕರಿಂದ ಪತ್ರ

    ಈದ್ ಉಲ್ ಫಿತರ್ ಅನ್ನು ಬಸವ ಜಯಂತಿಯಂತೆ ಆಚರಿಸಿದ್ದರೆ ಮತ್ತಷ್ಟು ಹೃದಯ ಸ್ಪರ್ಶಿಯಾಗುತ್ತಿತ್ತು: ಸಿಎಂಗೆ ಸಾಹಿತಿಗಳು, ಚಿಂತಕರಿಂದ ಪತ್ರ

    ಬೆಂಗಳೂರು: ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಬಂದಿದೆ. ಸಾರ್ವಜನಿಕ ಶಾಂತಿಯ ತೋಟವನ್ನು ಮರುಸ್ಥಾಪನೆ ಮಾಡಬೇಕಿದೆ ಎಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಸಾಹಿತಿಗಳು, ಚಿಂತಕರು ಸಿನಿ ಕ್ಷೇತ್ರದವರು ಹಾಗೂ ಎಡಪಂಥೀಯರು ಪತ್ರ ಬರೆದಿದ್ದಾರೆ.

    ಸಾಹಿತಿ ವೈದೇಹಿ, ಚಲನ ಚಿತ್ರ ನಿರ್ದೇಶಕ ಬಿ.ಸುರೇಶ್, ಗಿರೀಶ್ ಕಾಸರವಳ್ಳಿ, ಗಾಯಕಿ ಎಂಡಿ ಪಲ್ಲವಿ, ವಸುಂಧರ ಭೂಪತಿ, ನಾಗೇಶ್ ಹೆಗ್ಡೆ ಸೇರಿದಂತೆ ವಿವಿಧ ಕ್ಷೇತ್ರಗಳ 75 ಮಂದಿ ಪತ್ರ ಬರೆದಿದ್ದಾರೆ.

    ಪತ್ರದಲ್ಲೇನಿದೆ?
    ಕರ್ನಾಟಕದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಬಗ್ಗೆ ಕಾಳಜಿ ಹಾಗೂ ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ತುರ್ತಾಗಿ ಮರುಸ್ಥಾಪಿಸುವುದರ ವಿಷಯದ ಬಗ್ಗೆ ಬರೆಯಲಾಗಿದೆ.

    ಕಳೆದ ಒಂದು ತಿಂಗಳಿಂದ ತಮ್ಮನ್ನು ಭೇಟಿ ಮಾಡಿ ಈ ಕೆಳಕಂಡ ಪತ್ರವನ್ನು ಸಲ್ಲಿಸಲು ತಮ್ಮ ಕಚೇರಿಯ ಮೂಲಕ ಪ್ರಯತ್ನಿಸಿದ್ದೇವೆ. ನಮ್ಮ ಪ್ರಯತ್ನಗಳು ವಿಫಲವಾಗಿರುವುದರಿಂದ, ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಕೂಡಿರುವ ಈ ಪತ್ರವನ್ನು ಬಹಿರಂಗ ಪತ್ರವನ್ನಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ. ನಮ್ಮ ಕಾಳಜಿಯನ್ನೂ ಸಲಹೆಗಳನ್ನೂ ತಮ್ಮ ಗಮನಕ್ಕೆ ತರುವುದು ನಾಗರಿಕರಾಗಿ ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ. ತಾವು ಹಾಗೂ ತಮ್ಮ ಸರ್ಕಾರವು ಈ ಪತ್ರವನ್ನು ಗಂಭೀರವಾಗಿ ಪರಿಗಣಿಸುವಿರೆಂದು ನಂಬಿದ್ದೇವೆ.

    ನಾವು ಕರ್ನಾಟಕದಲ್ಲಿ ನೆಲೆಸಿರುವ ವಿವಿಧ ಕ್ಷೇತ್ರ ಮತ್ತು ವೃತ್ತಿಗಳಿಗೆ ಸೇರಿದ ಸಾರ್ವಜನಿಕ ಕಳಕಳಿಯುಳ್ಳ ನಾಗರಿಕರಾಗಿದ್ದೇವೆ. ಶಾಂತಿ, ಸಹಬಾಳ್ವೆ, ವೈವಿದ್ಯತೆ, ಬಹುತ್ವಕ್ಕೆ ಹೆಸರಾಗಿದ್ದ ಈ ನಾಡಿನಲ್ಲಿ ಇವುಗಳನ್ನೆಲ್ಲ ನಾಶಗೊಳಿಸುವಂತಹ ಇತ್ತೀಚಿನ ಬೆಳವಣಿಗೆಗಳನ್ನು ನೋಡಿ ಲಕ್ಷಾಂತರ ನಾಗರಿಕರಂತೆ ನಾವೂ ಸಹ ತೀವ್ರವಾಗಿ ವ್ಯಾಕುಲಗೊಂಡಿದ್ದೇವೆ. ಇಂತಹ ತಪ್ಪು ನಡೆಗಳನ್ನು ಸರಿಪಡಿಸಲು ಈಗಲೂ ಅವಕಾಶವಿದ್ದು ಅದಕ್ಕೆ ಅಗತ್ಯವಾದ ಸಲಹೆಗಳನ್ನು ಸರ್ಕಾರಕ್ಕೆ ನೀಡುವುದು ನಾಗರಿಕರಾದ ನಮ್ಮ ಕರ್ತವ್ಯವೆಂದು ಭಾವಿಸಿ ಈ ಪತ್ರವನ್ನು ತಮಗೆ ಸಲ್ಲಿಸುತ್ತಿದ್ದೇವೆ. ಇದನ್ನೂ ಓದಿ: ಗಡಿಯಲ್ಲಿರುವಾಗಲೇ ಸೈನಿಕನಾದವನು ಚಿಂತೆಗೆ ಬೀಳಬೇಕು- ಅಗ್ನಿಪಥ್ ವಿರುದ್ಧ ನಲಪಾಡ್ ಕಿಡಿ

    ಕೋಮು ಸೌಹಾರ್ದತೆಯ ವಿಷಯದಲ್ಲಿ ನಮ್ಮ ರಾಜ್ಯಕ್ಕೆ ಭವ್ಯ ಪರಂಪರೆಯಿದೆ. 1956 ರಲ್ಲಿ ಕರ್ನಾಟಕ ಏಕೀಕರಣವಾಯಿತು. ಆದರೆ ಕರ್ನಾಟಕದ ಮತೀಯ ಸೌಹಾರ್ದತೆಯ ಇತಿಹಾಸ ಇದಕ್ಕಿಂತಲೂ ಹಳೆಯದು. ಹನ್ನೆರಡನೆಯ ಶತಮಾನದಲ್ಲಿಯೇ ಕವಿ-ದಾರ್ಶನಿಕ ಬಸವಣ್ಣನವರ ಪ್ರಯತ್ನಗಳಿಂದಾಗಿ ಸಾಮಾಜಿಕ ಹಾಗೂ ಧಾರ್ಮಿಕ ಸುಧಾರಣೆಯಲ್ಲಿ ನಮ್ಮ ಕನ್ನಡ ನಾಡು ಸೌಹಾರ್ದತೆಯ ಇತಿಹಾಸವನ್ನೇ ನಿರ್ಮಿಸಿದೆ. ಸಮ್ಮಿಶ್ರ ಸಂಪ್ರದಾಯಗಳಿಗೆ, ಹಿಂದು ಮುಸ್ಲಿಮರನ್ನು ಒಳಗೊಂಡಂತೆ ಜನಸಮುದಾಯಗಳ ನಡುವೆ ಶಾಂತಿಯುತ ಸಹಬಾಳ್ವೆಗೆ ನಮ್ಮ ನಾಡಿನ ಇತಿಹಾಸ ಸಾಕ್ಷಿಯಾಗಿದೆ. ಈ ಭವ್ಯ ಪರಂಪರೆಯ ಹಿನ್ನೆಲೆಯಲ್ಲೇ ನಮ್ಮ ರಾಷ್ಟ್ರಕವಿ ಕುವೆಂಪುರವರು 100 ವರ್ಷಗಳಷ್ಟು ಹಿಂದೆಯೇ ಈ ನಾಡನ್ನು ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಬಣ್ಣಿಸಿದ್ದಾರೆ.

    ಕರ್ನಾಟಕದ ಈ ಮುಕ್ತ ಮನಸ್ಸಿನ ಹಲನಡಾವಳಿಯ, ಸಂಸ್ಕೃತಿಯೇ ಈ ಕಾಲಘಟ್ಟದಲ್ಲಿ ಸೃಜನಶೀಲ ಮತ್ತು ಹೊಸತನ್ನರಸುವ ವ್ಯಕ್ತಿಗಳನ್ನು ರಾಷ್ಟ್ರದ ಎಲ್ಲೆಡೆಯಿಂದ ಸೂಜಿಗಲ್ಲಿನಂತೆ ಆಕರ್ಷಿಸಿದೆ. ಭಾರತದ ವಿವಿಧ ಪ್ರಾಂತ್ಯಗಳಿಗೆ ಸೇರಿದ ವಿಭಿನ್ನ ಜನಸಮುದಾಯಗಳ ಜನರು ಕರ್ನಾಟಕಕ್ಕೆ ಅಪಾರ ಸಂಖ್ಯೆಯಲ್ಲಿ ವಲಸೆ ಬಂದು ಇಲ್ಲಿ ನೆಲೆಸಿ ನಮ್ಮ ರಾಜ್ಯದ ಸಮೃದ್ಧ ವೈವಿಧ್ಯಮಯ ಸಂಸ್ಕೃತಿಯನ್ನು ಮೆಚ್ಚಿ ತಮ್ಮ ಬದುಕಿನಲ್ಲೂ ಅವುಗಳನ್ನು ಅಳವಡಿಸಿಕೊಂಡಿದ್ದಾರೆ. ತನ್ಮೂಲಕ ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಆರೋಗ್ಯ ರಕ್ಷಣೆ, ಉದ್ಯಮಶೀಲತೆ, ಸಾಹಿತ್ಯ, ಕಲೆ, ಸಾಮಾಜಿಕ, ಸಾಂಸ್ಕೃತಿಕ ಮತ್ತಿತರ ಕ್ಷೇತ್ರಗಳಲ್ಲಿ ಕರ್ನಾಟಕವನ್ನು ಚೈತನ್ಯಶೀಲ ರಾಜ್ಯವಾಗಿ ರೂಪಿಸಿದ್ದಾರೆ.

    ಇಂತಹ ಉಜ್ವಲ ಹಿನ್ನೆಲೆಯ ನಾಡಿನಲ್ಲಿ ಇತ್ತೀಚೆಗೆ ಮುಸ್ಲಿಂ, ಕ್ರೈಸ್ತ ಮತ್ತು ದಲಿತ ಸಮುದಾಯಗಳ ಮೇಲೆ ನಾನಾ ರೀತಿಯಲ್ಲಿ ಹಲ್ಲೆಗಳು ನಡೆಯುತ್ತಿವೆ. ಸರ್ವರನ್ನೂ ಒಳಗೊಳ್ಳುವ, ಒಪ್ಪಿ ಅಪ್ಪಿಕೊಳ್ಳುವ ಗುಣಲಕ್ಷಣದ ಕರ್ನಾಟಕ ರಾಜ್ಯದ ಬಗ್ಗೆ ಹೆಮ್ಮೆ, ಅಭಿಮಾನ ಹೊಂದಿರುವ ಜನರಲ್ಲಿ ಈ ಘಟನೆಗಳು ಆಘಾತ ಮೂಡಿಸಿವೆ. ಸಂಕುಚಿತ ಮತೀಯವಾದಿಗಳು ಹಾಗೂ ದ್ವೇಷಪೂರಿತ ಕೆಲ ವ್ಯಕ್ತಿಗಳು ಮತ್ತು ಗುಂಪುಗಳು ಧರ್ಮ ಮತ್ತು ಜಾತಿಯ ಆಧಾರದಲ್ಲಿ ಅಲ್ಪಸಂಖ್ಯಾತರನ್ನು ಪ್ರತ್ಯೇಕಿಸಿ ದೂರವಿಡುವ ಹಾಗೂ ಅವರನ್ನು ದಮನಗೊಳಿಸುವ ಕೃತ್ಯಗಳಲ್ಲಿ ತೊಡಗಿರುವುದು ಆತಂಕದ ವಿಷಯವಾಗಿದೆ.

    ಭಾರತ ಸಂವಿಧಾನದ ಮೌಲ್ಯ ಮತ್ತು ಆಶಯಗಳನ್ನು ಅಕ್ಷರಶಃ ಎತ್ತಿ ಹಿಡಿಯುತ್ತೇವೆಂದು ಪ್ರಮಾಣವಚನ ಸ್ವೀಕರಿಸಿರುವ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಜವಾಬ್ದಾರಿ ಹುದ್ದೆಗಳಲ್ಲಿರುವ ಹಲವರು ಈ ವಚನವನ್ನು ಬಹಿರಂಗವಾಗಿ ಉಲ್ಲಂಘಿಸಿ ಅಲ್ಪಸಂಖ್ಯಾತ ಸಮುದಾಯದವರನ್ನು ಭೀತರನ್ನಾಗಿಸುವುದು ಇದಕ್ಕಿಂತಲೂ ಕಳವಳದ ಹಾಗೂ ಹತಾಶೆಯ ಸಂಗತಿಯಾಗಿದೆ. ಇದಲ್ಲದೆ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ಈ ಕೇರುಕೃತ್ಯಗಳನ್ನು ಸಮರ್ಥಿಸಿಕೊಳ್ಳುತ್ತಾ ಹಿಂಸೆ ದುರಾಕ್ರಮಣ ಕೃತ್ಯಗಳಿಗೆ ಉತ್ತೇಜನ ನೀಡುತ್ತಿರುವುದಂತೂ ಇನ್ನೂ ನೋವಿನ ಸಂಗತಿಯಾಗಿದೆ. ಇನ್ನೂ ಮುಂದುವರಿದು ಈ ಸಮುದಾಯಗಳ ಮೇಲೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರ ಹಾಕಿ ಅವರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಪರಿಗಣಿಸಿ ಅವರ ಸಾಂವಿಧಾನಿಕ ಹಕ್ಕುಗಳನ್ನು ಅನುಭವಿಸದಂತೆ ಹತ್ತಿಕ್ಕುತ್ತಿರುವುದು ಹೀನಾಯ ಕೃತ್ಯವಾಗಿದೆ.

    ಈ ಹಿನ್ನೆಲೆಯಲ್ಲಿ, ಭಾರತದ ಸಂವಿಧಾನದ ಅನುಚ್ಚೇದ 51A(e) ಯಲ್ಲಿ ‘ಭಾರತದ ಎಲ್ಲ ಜನರ ನಡುವೆ ಧಾರ್ಮಿಕ, ಭಾಷೆ, ಪ್ರಾದೇಶಿಕ ಹಾಗೂ ವರ್ಗಿಯ ವೈವಿಧ್ಯತೆಗಳನ್ನು ಮೀರಿ ಪರಸ್ಪರ ಸೌಹಾರ್ದತೆ ಮತ್ತು ಬಂಧುತ್ವವನ್ನು ಉತ್ತೇಜಿಸುವುದು’ ಪ್ರತಿಯೊಬ್ಬ ನಾಗರಿಕರ ಮೂಲಭೂತ ಕರ್ತವ್ಯ ಎಂದು ಹೇಳಿವೆ. ಅನುಚ್ಛೇದ 5A(1)ವು ‘ಸಮ್ಮಿಶ್ರ ಸಂಸ್ಕೃತಿಯನ್ನೊಳಗೊಂಡ ದೇಶದ ಭವ್ಯ ಪರಂಪರೆಗೆ ಪ್ರಾಮುಖ್ಯತೆ ನೀಡಿ ಅದನ್ನು ಉಳಿಸಬೇಕು’ ಎಂದು ಪ್ರತಿಯೊಬ್ಬ ನಾಗರಿಕರನ್ನು ಒತ್ತಾಯಿಸುತ್ತದೆ. ಆದರೆ ನಮ್ಮ ಚುನಾಯಿತ ಜನಪ್ರತಿನಿಧಿಗಳು ಇದನ್ನು ಮರೆತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

    ರಾಜ್ಯವು ಅಭಿವೃದ್ಧಿ ಹೊಂದಿ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್’ ಅಂದರೆ ‘ಎಲ್ಲರ ಜೊತೆ, ಎಲ್ಲರ ವಿಶ್ವಾನದೊಂದಿಗೆ, ಎಲ್ಲರ ಅಭಿವೃದ್ಧಿ’ಯನ್ನು ಸಾಧಿಸಬೇಕಾದರೆ ಶಾಂತಿ, ಸೌಹಾರ್ದತೆ ಮತ್ತು ನ್ಯಾಯದಾನಗಳು ಅತ್ಯಗತ್ಯ ಮೂಲ ಅಂಶಗಳಾಗಿವೆ. ಸರ್ವ ಜನರ ಸುಸ್ಥಿರ ಮತ್ತು ಉತ್ತಮ ಭವಿಷ್ಯದ ನೀಲ ನಕ್ಷೆಯೆಂಬಂತಿರುವ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳ 16 ನೆಯ ಅಂಶವೂ ಸಹ ಇದನ್ನೇ ಹೇಳುತ್ತದೆ. ಏನೆಂದರೆ, ‘ಜಾಗತಿಕ ಸುಸ್ಥಿರ ಅಭಿವೃದ್ಧಿಯ ಯಾವುದೇ ಉದ್ದೇಶವನ್ನು ಈಡೇರಿಸುವಲ್ಲಿ ಮೊದಲ ಹೆಜ್ಜೆಯೆಂದರೆ, ಸಾಂಸ್ಥಿಕ ನಿರ್ಬಂಧಗಳ ಹೇರಿಕೆಯಿಂದ ನ್ಯಾಯವಂಚಿತರಾಗಿ ಅಥವಾ ನೇರ ದಂಗೆ ಹಿಂಸೆಗಳಿಂದಾಗಿ ತಮ್ಮ ಮೂಲಭೂತ ಸ್ವಾತಂತ್ರ‍್ಯಕ್ಕೆ ಅಪಾಯವನ್ನು ಎದುರಿಸುತ್ತಿರುವ ವ್ಯಕ್ತಿಗಳ ಜೀವ ರಕ್ಷಣೆ ಹಾಗೂ ಮಾನವ ಹಕ್ಕುಗಳನ್ನು ಸಂರಕ್ಷಿಸುವುದಾಗಿದೆ’.

    ಇತ್ತೀಚಿಗೆ ಕೆಲವು ವಿಭಜಕ ಕೃತ್ಯಗಳಿಂದ ನಿರ್ದಿಷ್ಟ ಸಮುದಾಯಗಳನ್ನು ಅನ್ಯಗೊಳಿಸಿ ಆ ಜನರನ್ನು ಮೂಲಭೂತ ಹಕ್ಕುಗಳಿಂದ ವಂಚಿತರನ್ನಾಗಿಸುವ ಪ್ರವೃತ್ತಿ ಕಂಡು ಬರುತ್ತಿದೆ. ಇದು ರಾಜ್ಯದ ಪ್ರಗತಿಯನ್ನು ಕುಂಠಿತಗೊಳಿಸುವುದಷ್ಟೇ ಅಲ್ಲದೆ ನಮ್ಮ ರಾಜ್ಯದ ಕೀರ್ತಿಯನ್ನು ಸಹ ಕುಂದಿಸುವ ಜೊತೆಗೆ ಹೂಡಿಕೆದಾರರು ಮತ್ತು ಹೊಸತನ್ನರಸುವ ಉದ್ಯಮಿಗಳ ನಂಬಿಕೆ ಮತ್ತು ವಿಶ್ವಾಸವನ್ನು ಹುಸಿಗೊಳಿಸುತ್ತದೆ. ನಾಗರಿಕರಲ್ಲಿ ಅಪನಂಬಿಕೆ ಮಾತು ಅಸುರಕ್ಷಿತ ಭಾವನೆ ಮೂಡಿಸಿ ಭಯದ ವಾತಾವರಣವನ್ನು ಸೃಷ್ಟಿಸುತ್ತದೆ. ಇದು ಸಮಾಜದ ಎಲ್ಲ ವರ್ಗಗಳಿಗೂ ಹಾನಿ ಉಂಟು ಮಾಡುವುದಲ್ಲದೆ ನಮ್ಮ ದೇಶದ ಸಮಗ್ರತೆಗೆ ಕೂಡ ಧಕ್ಕೆ ತರುತ್ತದೆ. ಇಂತಹ ‘ದಿಗಿಲು ಹುಟ್ಟಿಸುವ ಭಾರತ’ ಮತ್ತು ‘ಕಳಂಕಿತ ಭಾರತ’ದ ವಾತಾವರಣದಲ್ಲಿ ‘ಭಾರತದಲ್ಲಿ ತಯಾರಿಸು’ (Make in India) ಎನ್ನುವ ಘೋಷ ವಾಕ್ಯವನ್ನು ಸಾಕಾರಗೊಳಿಸುವುದು ಸಾಧ್ಯವಿಲ್ಲದ ಮಾತು.

    ಇತ್ತೀಚಿಗೆ ನಡೆದ ‘ಬಸವ ಜಯಂತಿ – 2022’ ಸಂದರ್ಭದಲ್ಲಿ ಬಸವಣ್ಣನವರ ಕನಸಿನ ಸಮಾನತೆಯ ಸೌಹಾರ್ದಯುತ ಸಮಾಜವನ್ನು ಕಟ್ಟುವುದು ನಮ್ಮ ಗುರಿ ಎಂದು ಸರ್ಕಾರದ ಜಾಹಿರಾತಿನಲ್ಲಿ ಪ್ರಕಟಿಸಲಾಗಿದೆ. ಸಾಮಾಜಿಕ ಸೌಹಾರ್ದತೆ, ಬ್ರಾತೃತ್ವ, ಏಕತೆ ಮತ್ತು ಅಂತಃಕರಣಕ್ಕೆ ಬಸವಣ್ಣನವರು ಒತ್ತು ನೀಡಿದ್ದರು ಎನ್ನುವ ನಮ್ಮ ಪ್ರಧಾನ ಮಂತ್ರಿಯವರ ಮಾತುಗಳನ್ನು ಸಹ ಇದರ ಜೊತೆ ಉದ್ಧರಿಸಲಾಗಿದೆ. ಈ ಸಂದರ್ಭದಲ್ಲಿ ಸರ್ಕಾರವು ಪವಿತ್ರ ರಂಜಾನ್ ಈದ್ ಉಲ್ ಫಿತರ್ ಹಬ್ಬವನ್ನು ಬಸವ ಜಯಂತಿಯಂತೆಯೇ ಆಚರಿಸಿ ಸತತವಾಗಿ ಕೋಮು ದ್ವೇಷಿಗಳ ದಾಳಿಗೆ ತುತ್ತಾಗುತ್ತಿರುವ ಮುಸ್ಲಿಂ ನಾಗರಿಕರನ್ನು ಉದ್ದೇಶಿಸಿ ಅವರ ರಕ್ಷಣೆ ಮತ್ತು ಸುರಕ್ಷತೆ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದರೆ ಅದು ಮತ್ತಷ್ಟು ಹೃದಯ ಸ್ಪರ್ಶಿಯಾಗುತ್ತಿತ್ತು.

    ಶಾಂತಿ ಸೌಹಾರ್ದತೆ ಮತ್ತು ನ್ಯಾಯದಾನ ನೀಡುವ ಹೊಣೆಗಾರಿಕೆಯನ್ನು ಕರ್ನಾಟಕ ಸರ್ಕಾರವು ನಿರ್ವಹಿಸುತ್ತದೆ ಎನ್ನುವ ನಂಬಿಕೆಯಿಂದ ನಾವು ಮುಖ್ಯಮಂತ್ರಿಗಳಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವ ಮೂಲಕ ಎಲ್ಲ ನಾಗರಿಕರ ಸೌಖ್ಯ ಮತ್ತು ವಿಶ್ವಾಸವನ್ನು ಪುನರ್ ಪ್ರತಿಷ್ಠಾಪಿಸಬೇಕೆಂದು ಮನವಿ ಮಾಡಿ ಕೊಳ್ಳುತ್ತೇವೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು

    1. ರಾಜ್ಯ ಪೊಲೀಸ್ ಪಡೆಯು ತನ್ನ ಸಾಂವಿಧಾನಿಕ ಕರ್ತವ್ಯಕ್ಕೆ ಬದ್ಧವಾಗಿ ಕಾನೂನು ಪಾಲನೆಯನ್ನು ಎತ್ತಿ ಹಿಡಿದು ಸಮಾಜದ ದುರ್ಬಲ ವರ್ಗದ ನಾಗರಿಕರ ರಕ್ಷಣೆ ಮಾಡುವಂತೆ ಸೂಕ್ತ ನಿರ್ದೇಶನ ನೀಡಬೇಕು, ಮತೀಯವಾದಿ ಮತ್ತು ಜಾತಿವಾದಿ ಅಪರಾಧಗಳಿಗೆ ತುತ್ತಾಗುವ ನಾಗರಿಕರಿಗೆ ಪೂರ್ಣ ನ್ಯಾಯ ದೊರಕುವಂತೆಯೂ, ಇಂತಹ ಅಪರಾಧಗಳನ್ನು ಎಸಗುವವರ ವಿರುದ್ಧ ಸಾಕ್ಷಿದಾರರು ಧೈರ್ಯದಿಂದ ಮುಂದೆ ಬಂದು ಮುಕ್ತವಾಗಿ ತಮ್ಮ ಸಾಕ್ಷ್ಯವನ್ನು ನೀಡುವಂತೆಯೂ, ಅವರಿಗೆಲ್ಲಾ ಪೂರ್ಣ ರಕ್ಷಣೆ ಒದಗಿಸಿ ಅವರಲ್ಲಿ ವಿಶ್ವಾಸ ತುಂಬಿಸಬೇಕು.

    2. ಕೋಮುವಾದಿ ಗಲಭೆಗಳಿಂದಾಗಿ ಹಿಂಸೆ, ಸಾವು ಹಾಗೂ ಬದುಕು ನಷ್ಟವಾದಾಗ, ಸ್ಥಳೀಯ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಜವಾಬ್ದಾರರಾದ ಅಧಿಕಾರಿಗಳ ವಿರುದ್ಧ, ವಿಶೇಷವಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾಡಳಿತ ಹಾಗೂ ಪೋಲಿಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು.

    3. ನಿರ್ದಿಷ್ಟ ಕೋಮಿನ ಜನರನ್ನು ನಿಂದಿಸಿ ಅಮಾನವೀಕರಣಗೊಳಿಸುವುದರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ದೈಹಿಕ ಹಿಂಸೆಗೆ ಪ್ರಚೋದನೆ ನೀಡುವಂತಹ ಪ್ರವೃತ್ತಿಗೆ ತಡೆಯೊಡ್ಡಿ ಅಲ್ಪಸಂಖ್ಯಾತರ ವಿರುದ್ಧ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡಿ ಸಮಾಜದ ಸ್ವಾಸ್ಥ್ಯ ಹಾಳುಗೆಡುವುತ್ತಿರುವ ವ್ಯಕ್ತಿಗಳ ವಿರುದ್ಧ ಪ್ರಬಲ ಕಾನೂನು ಕ್ರಮ ಜರುಗಿಸಬೇಕು.

    4. ಸಾಮಾಜಿಕ ಜಾಲತಾಣಗಳು ಹಾಗೂ ಇನ್ನಿತರ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಸಹ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಸುಳ್ಳು ಸುದ್ದಿಗಳು ಮತ್ತು ಗಾಳಿ ಸಮಾಚಾರಗಳನ್ನು ಹಬ್ಬಿಸುವ ಕೃತ್ಯ ನಡೆಯುತ್ತಿದೆ. ಇದರಿಂದ ಈ ಸಮುದಾಯಗಳನ್ನು ಅನ್ಯವಾಗಿಸುವ ಮತ್ತು ಅವರನ್ನು ಹಿಂಸೆಗೆ ಒಳಪಡಿಸುವ ಅಪಾಯ ಹೆಚ್ಚಾಗುತ್ತಿದೆ. ಇಂತಹ ಅಪರಾಧಗಳ ವಿರುದ್ಧ ಸರ್ಕಾರ ಬಹಿರಂಗವಾಗಿ ದನಿಯೆತ್ತಿ ಮಾತನಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.

    5. ನೀತಿಯುತ ಪತ್ರಿಕೋದ್ಯಮದ ತತ್ವಬದ್ಧ ಮೌಲ್ಯಗಳನ್ನು ಉಲ್ಲಂಘಿಸಿ ಸುಳ್ಳು ಮಾಹಿತಿಯ ಸುದ್ದಿ ಬಿತ್ತರಿಸುತ್ತಾ ಸಮಾಜದಲ್ಲಿ ಅಸಹಿಷ್ಣುತೆ, ದ್ವೇಷ, ಮತ್ತು ಹಿಂಸೆಯನ್ನು ಪ್ರಚೋದಿಸುತ್ತಿರುವ ಮಾಧ್ಯಮಗಳಲ್ಲಿನ ಹಲವರಿಗೆ ಅಂತಹ ಕರ್ತವ್ಯಲೋಪಗಳನ್ನು ನಿಗ್ರಹಿಸುವಂತೆ ಒತ್ತಾಯಿಸಬೇಕು. ರಾಜ್ಯದಲ್ಲಿನ ಸೌಹಾರ್ದಯುತ ವಾತಾವರಣವನ್ನು ನಿರ್ಭೀತರಾಗಿ ಹಾಳುಗೆಡವುತ್ತಿರುವುದು ಒಪ್ಪಿತವಲ್ಲವೆಂಬುದನ್ನು ಮನದಟ್ಟು ಮಾಡಬೇಕು.

    ಕರ್ನಾಟಕ ಸರ್ಕಾರ ಈ ಸಕ್ರಿಯ ಕ್ರಮಗಳನ್ನು ಕೈಗೊಂಡರೆ ಹಿಂಸೆಯಲ್ಲಿ ತೊಡಗಿರುವ ಹಾಗೂ ಹಿಂಸೆಗೆ ಪ್ರಚೋದನೆ ನೀಡುತ್ತಿರುವರಿಗೆ ಹಾಗೂ ನಾಗರಿಕರಲ್ಲಿ ಭಯ ಮತ್ತು ಅಭದ್ರತೆಯ ವಾತಾವರಣ ಮೂಡಿಸುತ್ತಿರುವವರಿಗೆ ಇಂತಹ ಕಾನೂನು ಬಾಹಿರ ಹಾಗೂ ಒಪ್ಪಿತವಲ್ಲದ ವರ್ತನೆಗಳನ್ನು ಹಾಗೂ ದ್ವೇಷಪೂರಿತ ಅಪರಾಧಗಳನ್ನು ಸರ್ಕಾರ ಸಹಿಸುವುದಿಲ್ಲ ಎನ್ನುವ ಸ್ಪಷ್ಟ ಸಂದೇಶ ಸಾರಿದಂತಾಗುವುದು. ರಾಜ್ಯವು ಇಂತಹ ಸಂಕ್ರಮಣ ಸ್ಥಿತಿಯಲ್ಲಿರುವಾಗ ಮತೀಯ ಸೌಹಾರ್ದತೆಯನ್ನು ಮರುಪ್ರತಿಷ್ಠಾಪಿಸುವುದು ಪ್ರಾಮುಖ್ಯವಾದ ಮತ್ತು ಅತ್ಯಂತ ತುರ್ತಿನ ಕಾರ್ಯವೆಂದು ನಾವು ಪರಿಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ತಮ್ಮ ನೇತೃತ್ವದ ಸರ್ಕಾರವು ಮುನ್ನಡಿ ಇಡಬೇಕೆಂದು ಬಯಸುತ್ತೇವೆ. ಈ ಸಂದರ್ಭದಲ್ಲಿ ರಾಜ್ಯವು ಪ್ರಗತಿಯೆಡೆಗೆ ಸಾಗುವ ಬದಲಾಗಿ ಸರ್ಕಾರದ ನಿಷ್ಕ್ರಿಯತೆಯಿಂದಾಗಿ ತಳಮಟ್ಟಕ್ಕಿಳಿಯಿತು ಎನ್ನುವ ಅಪಖ್ಯಾತಿಗೆ ತಾವು ಒಳಗಾಗಬಾರದು ಎನ್ನುವ ಆಶಯ ನಮ್ಮದು.

    ಈ ನಿಟ್ಟಿನಲ್ಲಿ ಸರ್ಕಾರದ ಪ್ರಬಲ, ಸ್ಪಷ್ಟ, ಅಧಿಕೃತ ಆದೇಶ ಕ್ರಮಗಳನ್ನು ನಾವು ನಿಮ್ಮಿಂದ ನಿರೀಕ್ಷಿಸುತ್ತಿದ್ದೇವೆ ಎಂದು ಪತ್ರದಲ್ಲಿ ಬರೆಯಲಾಗಿದೆ.

    Live Tv

  • ಹಣವಿಲ್ಲದಿದ್ರೂ ಬಾಗಿಲಿಗೆ ಯಾಕೆ ಬೀಗ ಹಾಕಿದ್ದೀರಾ?- ಅಂಗಡಿ ಮಾಲೀಕನಿಗೆ ಪತ್ರ ಬರೆದ ಕಳ್ಳ

    ಹಣವಿಲ್ಲದಿದ್ರೂ ಬಾಗಿಲಿಗೆ ಯಾಕೆ ಬೀಗ ಹಾಕಿದ್ದೀರಾ?- ಅಂಗಡಿ ಮಾಲೀಕನಿಗೆ ಪತ್ರ ಬರೆದ ಕಳ್ಳ

    ತಿರುವನಂತಪುರಂ: ಅಂಗಡಿಯೊಂದಕ್ಕೆ ದರೋಡೆ ಮಾಡಲು ಬಂದಿದ್ದ ಕಳ್ಳನೊಬ್ಬ ಏನು ಸಿಗದೇ ಬರಿಗೈಯಲ್ಲಿ ಹೋಗುವಾಗ ‘ಹಣ ಇಲ್ಲದಿದ್ದರೂ ಯಾಕೆ ಬೀಗ ಹಾಕಿದ್ದಿರಾ’ ಎಂದು  ಅಂಗಡಿ ಮಾಲೀಕನಿಗೆ ಪ್ರಶ್ನಿಸಿ ಪತ್ರ ಬರೆದಿರುವ ವಿಲಕ್ಷಣ ಘಟನೆ ಕೇರಳದ ಕುಂದಂಕುಲಂನಲ್ಲಿ ನಡೆದಿದೆ.

    ಪುಲ್ಪಳ್ಳಿ ಮೂಲದ ವಿಶ್ವರಾಜ್(40) ಬಂಧಿತ ಆರೋಪಿ. ವಿಶ್ವರಾಜ್ ಕುಂದಂಕುಲಂನ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ 3 ಅಂಗಡಿಗಳನ್ನು ದರೋಡೆ ಮಾಡಲು ಹೋಗಿದ್ದ. ಅದರಲ್ಲಿ ಮೊದಲನೇ ಅಂಗಡಿಯಿಂದ 12,000 ರೂ., ಎರಡನೇ ಅಂಗಡಿಯಿಂದ 500 ರೂ.ಗಳನ್ನು ಕದ್ದಿದ್ದ.

    ಇದಾದ ಬಳಿಕ ಮೂರನೇ ಅಂಗಡಿಯಲ್ಲೂ ಕಳ್ಳತನ ಮಾಡಲು ಹೋಗಿದ್ದ. ಆದರೆ ಆತನಿಗೆ ಹಣ ಸಿಗದೆ ಬರಿಗೈಯಲ್ಲಿ ವಾಪಸ್ ಹೋಗಬೇಕಾಗಿ ಬಂದಿದೆ. ಇದರಿಂದಾಗಿ ಕೋಪಗೊಂಡ ಆತ ಹೋಗುವಾಗ ಅಲ್ಲಿಯ ಮಾಲೀಕನಿಗೆ ಒಂದು ಚೀಟಿಯನ್ನು ಬರೆದು ಹೋಗಿದ್ದಾನೆ. ಅದರಲ್ಲಿ ಹಣವಿಲ್ಲದಿದ್ದರೂ ಬಾಗಿಲಿಗೆ ಬೀಗ ಹಾಕಿದ್ದು ಏಕೆ ಎಂದು ಪ್ರಶ್ನಿಸಿ ಹೋಗಿದ್ದಾನೆ. ಪ್ರಕರಣ ಸಂಬಂಧಿಸಿ ಕ್ರಮ ಕೈಗೊಂಡ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾರನ್ನು ಬಿಜೆಪಿ ದೆಹಲಿ ಸಿಎಂ ಅಭ್ಯರ್ಥಿಯನ್ನಾಗಿ ಮಾಡುತ್ತೆ: ಓವೈಸಿ

    crime

    ಈ ಹಿಂದೆಯೂ ವಿಶ್ವರಾಜ್‍ ಕಲ್ಪೆಟ್ಟಾದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಸಂದರ್ಭದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ. ಅಷ್ಟೇ ಅಲ್ಲದೇ ಈತ ಕೇರಳದ ವಿವಿಧ ಜಿಲ್ಲೆಗಳಲ್ಲಿ ಸುಮಾರು 53 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಇದನ್ನೂ ಓದಿ: `ಅಗ್ನಿಪಥ್’ ಪ್ರತಿಭಟನೆ – ಸಿಕಂದರಾಬಾದ್ ಹಿಂಸಾಚಾರದ ಮಾಸ್ಟರ್ ಮೈಂಡ್ ಅರೆಸ್ಟ್

    Live Tv

  • ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಬಗ್ಗೆ ಕ್ರಮಕೈಗೊಳ್ಳಿ – ರಾಷ್ಟ್ರಪತಿಗೆ ಭಜರಂಗದಳದಿಂದ ಪತ್ರ

    ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಬಗ್ಗೆ ಕ್ರಮಕೈಗೊಳ್ಳಿ – ರಾಷ್ಟ್ರಪತಿಗೆ ಭಜರಂಗದಳದಿಂದ ಪತ್ರ

    ಬೆಂಗಳೂರು: ದೇಶದಲ್ಲಿ ಹೆಚ್ಚುತ್ತಿರುವ ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಕರ್ನಾಟಕ ಭಜರಂಗದಳ ಸುದೀರ್ಘ ಪತ್ರ ಬರೆದಿದೆ.

    ಶ್ರೀರಾಮ ನವಮಿಯಂದು ದೇಶಾದ್ಯಂತ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ, ದಾಳಿ ನಡೆಸಲಾಗಿದೆ. ಇದರಿಂದ ಹಿಂದೂ ಸಮಾಜ ತಾಳ್ಮೆ ಕಾಯ್ದುಕೊಂಡಿತ್ತಾದರೂ ಶಾಂತವಾಗಿ ವರ್ತಿಸುತ್ತಿದ್ದೇವೆ. ಹಾಗಾಗಿ, ಜಿಹಾದಿ ಧರ್ಮಾಂಧತೆ ಬಗ್ಗೆ ಕ್ರಮ ಕೈಗೊಳ್ಳಿ ಅಂತ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್- ಬೆಂಗಳೂರು ಸೇರಿ 21 ಕಡೆ ದಾಳಿ

    ಪತ್ರದಲ್ಲಿ ಏನಿದೆ?
    * ನಮಾಜ್ ಮುಗಿಸಿ ಬರುವ ಯುವಕರನ್ನು ಪ್ರಚೋದಿಸುವವರ ಮೇಲೆ ಕ್ರಮ ಕೈಗೊಳ್ಳಬೇಕು
    * ಮುಲ್ಲಾಗಳು/ಮೌಲ್ವಿಗಳು ಅಥವಾ ಬೇರೆಯವರು ಜಿಹಾದಿ ಭಾಷಣ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು
    * ಬೆದರಿಕೆಗೆ ಒಳಗಾದವರಿಗೆ ಭದ್ರತೆಯನ್ನು ಒದಗಿಸಬೇಕು
    * ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು
    * ಎನ್‍ಐಎಯಿಂದ ಗಲಭೆ ನಡೆದ ರಾಜ್ಯಗಳಲ್ಲಿ ತನಿಖೆಗೆ ಆದೇಶಿಸಬೇಕು
    * ಪಿಎಫ್‍ಐ, ತಬ್ಲಿಘಿ ಜಮಾತ್‍ನಂತಹ ಸಂಘಟನೆಗಳ ಮೇಲೆ ತಕ್ಷಣ ಶಾಶ್ವತ ನಿಷೇಧ ಹೇರಬೇಕು
    * ಹಿಂದೂ ಅಲ್ಪಸಂಖ್ಯಾತರಾಗಿರುವ ಸ್ಥಳಗಳಲ್ಲಿ ಭದ್ರತೆಗೆ ವ್ಯವಸ್ಥೆ ಮಾಡಬೇಕು.

  • ಕೊಳವೆ ಬಾವಿ ತೋಡಿಸಿಕೊಡಿ ಅಂತಾ ಮತಪೆಟ್ಟಿಗೆಗೆ ಪತ್ರ ಹಾಕಿರುವ ಯುವಕ!

    ಕೊಳವೆ ಬಾವಿ ತೋಡಿಸಿಕೊಡಿ ಅಂತಾ ಮತಪೆಟ್ಟಿಗೆಗೆ ಪತ್ರ ಹಾಕಿರುವ ಯುವಕ!

    ಮೈಸೂರು‌: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಮತ ಎಣಿಕೆ ಬುಧವಾರದಿಂದ ನಡೆಯುತ್ತಿದೆ. ಮತ ಪೆಟ್ಟಿಗೆಯಲ್ಲಿ ಬ್ಯಾಲೆಟ್‌ ಪೇಪರ್‌ ಜೊತೆಗೆ ವಿಭಿನ್ನ ಕೋರಿಕೆಯ ಪತ್ರವನ್ನು ಮತದಾರರು ಹಾಕಿರುವ ಘಟನೆ ನಡೆದಿದೆ.

    ನಾನು ಎಂ.ಎ, ಬಿ.ಎಡ್ ಮಾಡಿದ್ದೇನೆ. ಆದರೆ ನನಗೆ ಕೆಲಸ ಇಲ್ಲ. ನಮ್ಮಪ್ಪನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಜಮೀನಿಗೆ ಕೊಳವೆ ಬಾವಿ ಅವಶ್ಯಕತೆ ಇದೆ. ನನಗೆ ಸರ್ಕಾರಿ ಕೆಲಸ ಕೊಡಿ, ಇಲ್ಲ ಅಂದ್ರೆ ಜಮೀನಿನಲ್ಲಿ‌ ಕೊಳವೆಬಾವಿ ತೋಡಿಸಿಕೊಡಿ ಎಂದು ಯುವಕನೊಬ್ಬ ಪತ್ರ ಬರೆದು ಮತ ಪೆಟ್ಟಿಗೆಯಲ್ಲಿ ಹಾಕಿದ್ದಾನೆ. ಇದನ್ನೂ ಓದಿ: ಗುಂಡು ಹಾರಿಸಿಕೊಂಡು ಕರ್ತವ್ಯ ನಿರತ ಪೊಲೀಸ್ ಪೇದೆ ಆತ್ಮಹತ್ಯೆ

    ರಸಗೊಬ್ಬರ ಬೆಲೆ ಕಡಿಮೆ ಮಾಡಿ ಎಂದು ಪತ್ರ ಬರೆದು ಬ್ಯಾಲೆಟ್ ಪೇಪರ್‌ ಜೊತೆಗೆ ಮತದಾರ ತನ್ನ ಪತ್ರ ಹಾಕಿದ್ದಾನೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗಣಿಗನೂರು ಗ್ರಾಮದ ರಾಜೇಂದ್ರ ಈ ಮನವಿ ಮಾಡಿದ್ದಾನೆ.

    ಬ್ಯಾಲೆಟ್ ಪತ್ರದ ಮೇಲೆಯೇ ಅಭ್ಯರ್ಥಿಗಳ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಯಾವ ಅಭ್ಯರ್ಥಿಗಳು ಹಣ ಕೊಟ್ಟಿಲ್ಲ ಎಂದು ಬ್ಯಾಲೆಟ್ ಪೇಪರ್ ಮೇಲೆ ಮತದಾರ ಬರೆದಿದ್ದಾನೆ. ಇದನ್ನೂ ಓದಿ: ದೇಶದಲ್ಲಿ 2023ರ ಮಾರ್ಚ್ ವೇಳೆಗೆ ಪೂರ್ಣ ಪ್ರಮಾಣದ 5G ಸೇವೆ: ಕೇಂದ್ರ ಸಚಿವ

    Live Tv

  • ಮೇಕೆದಾಟು ಯೋಜನೆ ವಿರೋಧಿಸಿ ಪ್ರಧಾನಿಗೆ ಸ್ಟಾಲಿನ್ ಪತ್ರ

    ಮೇಕೆದಾಟು ಯೋಜನೆ ವಿರೋಧಿಸಿ ಪ್ರಧಾನಿಗೆ ಸ್ಟಾಲಿನ್ ಪತ್ರ

    ಚೆನ್ನೈ: ಮೇಕೆದಾಟು ವಿಚಾರವಾಗಿ ತಮಿಳುನಾಡು ಮತ್ತೆ ಖ್ಯಾತೆ ತೆಗೆದಿದೆ. ಮೇಕೆದಾಟು ಸಂಬಂಧ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ ಬರೆದಿದ್ದಾರೆ.

    ಜೂನ್ 17ರಂದು ನಡೆಯಲಿರುವ ಸಭೆಯಲ್ಲಿ ಮೇಕೆದಾಟು ಯೋಜನೆ ಕುರಿತು ಚರ್ಚಿಸದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಬೇಕು ಎಂದು ಸ್ಟಾಲಿನ್ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಹುಲ್‍ಗೆ 11 ಗಂಟೆ ಇಡಿ ಡ್ರಿಲ್‌ – ಇಂದು ಹಾಜರಾಗುವಂತೆ ಸೂಚನೆ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕಾರ್ಯ ಚಟುವಟಿಕೆಯ ವ್ಯಾಪ್ತಿಯು ಸುಪ್ರೀಂಕೋರ್ಟ್ ನಿರ್ದೆಶನಗಳನ್ನು ಪಾಲಿಸುವ ಮಿತಿಯನ್ನು ಮಾತ್ರ ಹೊಂದಿದೆ. ಬೇರೆ ವಿಷಯಗಳನ್ನು ಪ್ರಾಧಿಕಾರ ಪರಿಗಣಿಸುವಂತಿಲ್ಲ. ಇದನ್ನೂ ಓದಿ: ಪ್ರತಿಭಟನೆ ವೇಳೆ ತಳ್ಳಿದ ಪೊಲೀಸರು – ಮೂಳೆ ಮುರಿತಕ್ಕೊಳಗಾದ ಪಿ.ಚಿದಂಬರಂ

    ಮೇಕೆದಾಟು ಸಂಬಂಧ ತಮಿಳುನಾಡಿನ ಹಲವು ಅರ್ಜಿಗಳು ವಿಚಾರಣೆ ಹಂತದಲ್ಲಿದೆ. ಹಾಗಾಗಿ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ಈ ವಿಷಯದ ಬಗ್ಗೆ ಯಾವುದೇ ಚರ್ಚೆಮಾಡದಂತೆ ಪ್ರಾಧಿಕಾರಕ್ಕೆ ಸಲಹೆ ನೀಡುವಂತೆ ಜಲಶಕ್ತಿ ಸಚಿವಾಲಯಕ್ಕೆ ಸೂಚಿಸಿ ಎಂದು ಪತ್ರದಲ್ಲಿ ಕೋರಿದ್ದಾರೆ.

  • ಸಲ್ಮಾನ್ ಖಾನ್‌ಗೆ ಬೆದರಿಕೆ ಪತ್ರ : ಕೊನೆಗೂ ಗ್ಯಾಂಗ್ ಪತ್ತೆ

    ಸಲ್ಮಾನ್ ಖಾನ್‌ಗೆ ಬೆದರಿಕೆ ಪತ್ರ : ಕೊನೆಗೂ ಗ್ಯಾಂಗ್ ಪತ್ತೆ

    ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆಗೆ ಕೊಲೆ ಬೆದರಿಕೆ ಪತ್ರ ಬರೆದು, ಮುಂಬೈ ಪೊಲೀಸರ ನಿದ್ದೆ ಗೆಡಿಸಿದ್ದ ಗ್ಯಾಂಗ್ ಅನ್ನು ಪತ್ತೆ ಹಚ್ಚುವಲ್ಲಿ ಕೊನೆಗೂ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ. ದೆಹಲಿಯ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯಿ ಮತ್ತು ತಂಡದವರೇ ಈ ಕೃತ್ಯ ಮಾಡಿದ್ದಾರೆ ಎಂದು ಶಂಕಿಸಲಾಗಿತ್ತು. ಹಾಗಾಗಿ ಆತನನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು. ಆದರೆ, ಬಿಷ್ಣೋಯಿ ಅದನ್ನು ನಿರಾಕರಿಸಿದ್ದ. ಇದನ್ನೂ ಓದಿ: ನಾಲ್ಕು ಕೈ- ನಾಲ್ಕು ಕಾಲು ಇರುವ ಮಗುವಿನ ಶಸ್ತ್ರ ಚಿಕಿತ್ಸೆಗೆ ನೆರವಾದ ಸೋನು ಸೂದ್

    ಲಾರೆನ್ಸ್ ಬಿಷ್ಣೋಯಿ ನಿರಾಕರಿಸಿದ್ದರು, ಅವನ ಮತ್ತು ಆತನ ತಂಡದ ಮೇಲೆ ನಿಗಾ ಇಟ್ಟಿದ್ದ ಪೊಲೀಸ್ ಅಧಿಕಾರಿಗಳು, ಇವನ ತಂಡಕ್ಕೆ ಸೇರಿದ್ದ ಮೂವರಿಂದಲೇ ಸಲ್ಮಾನ್ ಖಾನ್‌ಗೆ ಪತ್ರ ಬರೆದದ್ದು ಎಂದು ಪತ್ತೆ ಹಚ್ಚಿದ್ದಾರೆ. ಪಂಜಾಬ್ ಗಾಯಕ ಸಿಧು ಮೂಸೆವಾಲ ಪ್ರಕರಣದಲ್ಲಿ ಇತ್ತೀಚೆಗೆ ಮೂವರನ್ನು ಬಂಧಿಸಲಾಗಿತ್ತು. ಅವರೇ ಆ ಪತ್ರಗಳನ್ನು ಬರೆದಿದ್ದಾರೆ ಎಂದು ತನಿಖೆಯಿಂದ ತಿಳಿದು ಬಂದಿದೆ ಎನ್ನಲಾಗುತ್ತಿದೆ.

     

    ಸಲ್ಮಾನ್ ಖಾನ್ ತಂದೆಯು ವಾಯು ವಿಹಾರದಲ್ಲಿದ್ದಾಗ ತಂಡವೊಂದು ಇವರ ಮೇಲೆ ಪತ್ರ ಎಸೆದು ಪರಾರಿಯಾಗಿತ್ತು. ಆ ಪತ್ರದಲ್ಲಿ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬರೆದಿತ್ತು. ಪತ್ರ ಸಲ್ಮಾನ್ ಖಾನ್‌ಗೆ ತಲುಪುತ್ತಿದ್ದಂತೆಯೇ ಮುಂಬೈ ಪೊಲೀಸರು ಅವರ ಮನೆಗೆ ಹೆಚ್ಚಿನ ಭದ್ರತೆಯನ್ನು ನೀಡಿದ್ದರು. ಅಲ್ಲದೇ ತನಿಖೆಯನ್ನೂ ಚುರುಕುಗೊಳಿಸಿದ್ದರು.