ಬೆಂಗಳೂರು: ಬೇರೆಯವರು ತಾಳಿಕಟ್ಟಿದವರ ಬಳಿ ಹೋಗಿ ಲವ್ ಲೆಟರ್ ಬರೆದರೆ ಆಗುತ್ತಾ ಎಂದು ಜೆಡಿಎಸ್ ಶಾಸಕ ಸಿಎಂ ಇಬ್ರಾಹಿಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯ ಜೆಡಿಎಸ್ ಶಾಸಕರಿಗೆ ಪತ್ರ ಬರೆದ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಕದ ಮನೆಯವನ ಧರ್ಮ ಪತ್ನಿಗೆ ಪತ್ರ ಬರೆಯುತ್ತೀರಾ? ಇದು ಅಪರಾಧ ಅಲ್ವಾ, ಇದು ನೈತಿಕತೆಯಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಜೊತೆ ಡೀಲ್, ಸಿದ್ದರಾಮಯ್ಯ ಬಣ್ಣ ಬಯಲಾಯ್ತು: ಹೆಚ್‌ಡಿಕೆ ಬಾಂಬ್
ಶ್ರೀನಿವಾಸ್ ನಮ್ಮ ಬಳಿ ಜೆಡಿಎಸ್‍ಗೆ ಮತ ಹಾಕ್ತೀವಿ ಅಂತಾ ಹೇಳಿದ್ದಾರೆ. ಎಲ್ಲರೂ ಮತ ಹಾಕುತ್ತಾರೆ ಅಂತಾ ನಮಗೆ ಭರವಸೆ ಇದೆ. ದೇವರು ನಮ್ಮ ಪಕ್ಷದ 35 ಅಭ್ಯರ್ಥಿಗಳಿಗೆ ಒಳ್ಳೆ ಬುದ್ಧಿ ಕೊಡುತ್ತಾನೋ ಕಾದು ನೋಡಬೇಕಿದೆ. ಲೆಹರ್ ಸಿಂಗ್ ಕನ್ನಡದವರಾ? ಸಿದ್ದರಾಮಯ್ಯ ಕನ್ನಡಕ್ಕಾಗಿ ಕೈ ಎತ್ತು ಅಂತಾರೆ. ಅವರೇನು ಬಡವರಾ? ನಮ್ಮದು ಹಳ್ಳಿಲಿ ಆಫೀಸ್ ಇರೋದು ಉಳಿದ ಪಕ್ಷಗಳಂತೆ ದೆಹಲಿಯಲ್ಲಿ ಇಲ್ಲ. ಜೆಡಿಎಸ್ ಇವತ್ತು ಬದುಕುತ್ತಿರುವುದು ಸತ್ಯ ಧರ್ಮದ ಆಧಾರದ ಮೇಲೆ. ನಮ್ಮದು ಬಡವರ ಪಕ್ಷ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಕಚೇರಿಗೆ ಸಿಟಿ ರವಿ!
ಬೀದರ್/ಬೆಂಗಳೂರು: ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ ಇತಿಹಾಸ ತಿರುಚಲಾಗಿದೆ ಎಂದು ಲಿಂಗಾಯತ ಮಠಾಧೀಶರ ಒಕ್ಕೂಟ ಆಕ್ರೋಶ ಹೊರಹಾಕಿದೆ. 100ಕ್ಕೂ ಹೆಚ್ಚು ಲಿಂಗಾಯತ ಮಠಾಧೀಶರು ಇರುವ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಬಸವಣ್ಣನವರ ಪಠ್ಯವನ್ನು ತಿರುಚಲಾಗಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.
ಬಸವಣ್ಣನವರ ತಿರುಚಿರುವ ಪಠ್ಯವನ್ನು ಸರಿಪಡಿಸದೇ ಹೋದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುತ್ತೇವೆ ಎಂದು ಲಿಂಗಾಯತ ಮಠಾಧೀಶರ ಒಕ್ಕೂಟ ಎಚ್ಚರಿಕೆ ನೀಡಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಪಠ್ಯದಲ್ಲಿರುವ ತಮ್ಮ ಕವಿತೆ ವಾಪಸ್ ಪಡೆದ ಮತ್ತೊಬ್ಬ ಸಾಹಿತಿ
9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬಸವಣ್ಣ ಕುರಿತಾಗಿ ತಪ್ಪಾಗಿ ಉಲ್ಲೇಖಿಸಲಾಗಿದೆ. ಉಪನಯನ ಆದ ನಂತರ ಕೂಡಲ ಸಂಗಮಕ್ಕೆ ನಡೆದರು ಎಂದು ಪಠ್ಯದಲ್ಲಿ ತಪ್ಪಾಗಿ ಬರೆಯಲಾಗಿದೆ. ಆದರೆ ಬಸವಣ್ಣನವರು ತಮ್ಮ ಅಕ್ಕ ನಾಗಾಯಿಗೆ ಇಲ್ಲದ ಉಪನಯನ ನನಗೇಕೆ ಎಂದು ಧಿಕ್ಕರಿಸಿದ್ದರು. ಇದು ಐತಿಹಾಸಿಕ ಸಂಗತಿ ಎಂದು ಮಠಾಧೀಶರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಶೈವ ಗುರುಗಳ ಸಾನಿಧ್ಯದಲ್ಲಿ ಲಿಂಗ ದೀಕ್ಷೆಯನ್ನು ಪಡೆದರು ಎಂದು ಬರೆಯಲಾಗಿದೆ. ಆದರೆ ಬಸವಣ್ಣನವರೇ ಇಷ್ಟಲಿಂಗದ ಜನಕರು. ಈ ಬಗ್ಗೆ ಅಲ್ಲಮ್ಮಪ್ರಭು ಆದಿಯಾಗಿ ಎಲ್ಲಾ ಶರಣರು ತಮ್ಮ ವಚನದಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯ ಪರಿಷ್ಕರಣೆ ಮುಕ್ತಾಯ
ಬಸವಣ್ಣನವರು ವೀರ ಶೈವ ಮತವನ್ನು ಅಭಿವೃದ್ಧಿ ಪಡಿಸಿದರು ಎಂದು ಪಠ್ಯದಲ್ಲಿ ಸೇರಿಸಿದ್ದಾರೆ. ಇದು ಕೂಡ ತಪ್ಪು. ವಾಸ್ತವದಲ್ಲಿ ವೀರ ಶೈವ, ಶೈವ ಪಂಥದ ಶಾಖೆ. ಅದು ಲಿಂಗಾಯತ ಧರ್ಮದ ಒಂದು ಪಂಗಡ ಎಂದು ಇತಿಹಾಸ ಹೇಳುತ್ತದೆ. ಸರ್ಕಾರದ ದಾಖಲೆಯಲ್ಲೂ ಹೀಗೆಯೇ ಇದೆ ಎಂದು ಹೇಳಿದ್ದಾರೆ.
ಶೈವರಲ್ಲಿ ವರ್ಣಾಶ್ರಮದ ಆಚರಣೆಯಿದೆ. ಲಿಂಗಾಯತರಲ್ಲಿ ವರ್ಣಾಶ್ರಮ ಪದ್ಧತಿ ಇಲ್ಲ. ಹೀಗಾಗಿ ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿ ಪಡಿಸಿದರು ಎಂಬುವುದು ಸುಳ್ಳು ಎಂದು ಪತ್ರದಲ್ಲಿ ಉಲ್ಲೇಖಿಸಿ, ಪಠ್ಯ ಪರಿಷ್ಕರಣೆ ಬಗ್ಗೆ ಭಾರೀ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಏನಿದೆ?
ಪಠ್ಯ ಪುಸ್ತಕ ಸಮಿತಿಯು ಪ್ರಮುಖ ದಾರ್ಶನಿಕರ ಮತ್ತು ದೇಶಭಕ್ತರ ಬಗೆಗಿನ ಪಠ್ಯಗಳನ್ನು ಕೈ ಬಿಟ್ಟಿದೆ. ರಾಜ್ಯದ ಹೆಮ್ಮೆಯ ಸಾಹಿತಿಗಳ ಮತ್ತು ಬಹುತ್ವದ ಸಂಸ್ಕೃತಿಗೆ ಪೂರಕವಾದ ಲೇಖನಗಳನ್ನು ಕೈ ಬಿಟ್ಟಿದೆ. ಸಂಕುಚಿತವಾದವನ್ನು ಬೆಂಬಲಿಸುವ ಹಾಗೂ ಮತೀಯವಾದವನ್ನು ಪ್ರಚೋದಿಸುವ ವ್ಯಕ್ತಿಗಳ ಲೇಖನಗಳನ್ನು ಸೇರಿಸಲಾಗಿದೆ. ಈ ಕುರಿತಂತೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ ಎಂದಿದ್ದಾರೆ. ಇದನ್ನೂ ಓದಿ: ಕಣ್ಣು ಮಂಕಾಗ್ತಿದೆ, ಬೆರಳು ಅಲುಗಾಡ್ತಿದೆ – ಪುಟಿನ್ ಬದುಕಿರೋದು ಇನ್ನೂ ಮೂರೇ ವರ್ಷ!
ಕನ್ನಡಿಗರು, ಹೆತ್ತವರು ಮತ್ತು ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಕನ್ನಡದ ಹೆಮ್ಮೆಯ ಮತ್ತು ಅತ್ಯಂತ ಗೌರವಾನ್ವಿತ ರಾಷ್ಟ್ರಕವಿಗಳಾದ ಕುವೆಂಪುರವರ ಬಗ್ಗೆ ಅತ್ಯಂತ ಕೀಳಾಗಿ ಅಪಮಾನ ಮಾಡಲಾಗಿದೆ. ನಾಡಗೀತೆಗೆ ಅವಮಾನ ಮತ್ತು ಧ್ವಜವನ್ನು ಅಪಹಾಸ್ಯ ಮಾಡಿರುವ ಸಮಿತಿಯ ಅಧ್ಯಕ್ಷರ ಬಗ್ಗೆ ಜನರು ರೊಚ್ಚಿಗೆದ್ದಿದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಜೆಡಿಎಸ್‍ಗೆ ಸಿದ್ದರಾಮಯ್ಯ ಚೆಕ್ – ಬಿಜೆಪಿಗೆ ಕುದುರುತ್ತಾ ಲಕ್?
ಸಮಿತಿಯ ಪಠ್ಯಪುಸ್ತಕಗಳಲ್ಲಿ ಬಾಬಾಸಾಹೇಬ ಅಂಬೇಡ್ಕರ್, ಬಸವಣ್ಣ, ಬುದ್ದ, ನಾರಾಯಣಗುರುಗಳು ಮತ್ತು ಸಾರಾ ಅಬೂಬಕರ್ ಅವರ ಪಾಠಗಳನ್ನು ತಿರುಚಲಾಗಿದೆ. ಇತಿಹಾಸಕ್ಕೆ ಕೋಮುದ್ವೇಷದ ಲೇಪ ಹಚ್ಚಲಾಗಿದೆ. ಶ್ರೀಮತಿ ಬಿ ಟಿ ಲಲಿತಾ ನಾಯಕ್‍ರವರ ಪದ್ಯವನ್ನು ಕಿತ್ತು ಹಾಕಲಾಗಿದೆ. ಕೋಮುವಾದ ಎಂದರೇನು? ಮುಸ್ಲಿಂ ಕೋಮುವಾದ ಎಂದು ಬಿಂಬಿಸಿದೆ. ಪ್ರಾದೇಶಿಕವಾದ ಎಂದರೆ ದೇಶದ್ರೋಹ ಅಂತ ಬಿಂಬಿಸಿದೆ ಎಂದಿದ್ದಾರೆ.
ಮಹಿಳೆಯರನ್ನು ಕೀಳಾಗಿ ಚಿತ್ರಿಸಿದ ಪಾಠ ಸೇರಿಸಲಾಗಿದೆ. ವಿದ್ಯಾ ರಂಗದ ಮೇಲೆ ಇತ್ತೀಚಿಗೆ ಅಸಂವಿಧಾನಿಕ ದಾಳಿ ಮತ್ತು ದಬ್ಬಾಳಿಕೆ ನಡೆಯುತ್ತಿದೆ. ಇದರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಮೌನ ಮತ್ತು ಬಹಿರಂಗವಾಗಿಯೇ ಮತೀಯ ದ್ವೇಷವನ್ನು ಹೊರಡುವವರನ್ನು ಸರ್ಕಾರ ನಿಗ್ರಹಿಸಿಲ್ಲ. ನಿಷ್ಕ್ರಿಯತೆಯಿಂದ ಕೆಲ ಸಾಹಿತಿಗಳು ಪುಸ್ತಕದಲ್ಲಿ ಅಳವಡಿಸಲು ನೀಡಿರುವ ಸಮ್ಮತಿಯನ್ನು ವಾಪಸು ಪಡೆದಿದ್ದಾರೆ. ಎಸ್ ಜಿ ಸಿದ್ದರಾಮಯ್ಯ, ಎಚ್ ಎಸ್ ರಾಘವೇಂದ್ರರಾವ್, ನಟರಾಜ ಬೂದಾಳು, ಚಂದ್ರಶೇಖರ್ ನಂಗ್ಲಿ, ಕೆ ಎಸ್ ಮಧುಸೂದನ್ ಸೇರಿದಂತೆ ಮುಂತಾದವರು ರಾಜ್ಯ ಸರ್ಕಾರದ ಸಮಿತಿಗೆ ರಾಜೀನಾಮೆ ಕೂಡ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.
ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವ ಈರಪ್ಪ ಕಂಬ್ಳಿ ಶ್ರೀ ಚಂದ್ರಶೇಖರ ತಾಳ್ಯ ಮುಂತಾದವರು. ತಮ್ಮ ಲೇಖನಗಳನ್ನು ಪಠ್ಯದಲ್ಲಿ ಪುಸ್ತಕದಲ್ಲಿ ಅಳವಡಿಸಲು ನೀಡಿರುವ ಸಮ್ಮತಿಯನ್ನು ವಾಪಸ್ ಪಡೆದಿದ್ದಾರೆ. ವಿದ್ಯಾ ರಂಗಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಈ ಆತಂಕದ ವಿದ್ಯಮಾನಗಳನ್ನು ತಾವು ಆದ್ಯತೆಯ ಮೇಲೆ ಪರಿಗಣಿಸಬೇಕು. ಪಠ್ಯಪುಸ್ತಕ ಪರಿಷ್ಕೃತ ಸಮಿತಿಯನ್ನು ತಕ್ಷಣದಿಂದಲೇ ರದ್ದುಗೊಳಿಸಬೇಕು. ಹೊಸ ಪಠ್ಯ ಪುಸ್ತಕಗಳನ್ನು ಹಿಂಪಡೆದು ಹಳೆಯ ಪಠ್ಯಪುಸ್ತಕಗಳನ್ನು ಮುಂದುವರಿಸಿ ವಾತಾವರಣವನ್ನು ತಿಳಿಗೊಳಿಸಬೇಕು. ಈ ವಿಚಾರವಾಗಿ ಎಲ್ಲ ಕಡೆಯಿಂದ ವ್ಯಾಪಕವಾದ ಆಕ್ರೋಶ ವ್ಯಕ್ತವಾಗುತ್ತಿದೆ ಎಂದಿದ್ದಾರೆ.
ನವದೆಹಲಿ: ಚೀನಾ ದೇಶದ ಪ್ರಜೆಗಳಿಗೆ ವೀಸಾ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯಾ ತನಿಖಾ ದಳದ(ಸಿಬಿಐ) ಅಧಿಕಾರಿಗಳು ತಮ್ಮ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ ಸಮಯದಲ್ಲಿ ಕೆಲವು ಸೂಕ್ಷ್ಮ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಆರೋಪಿಸಿದ್ದಾರೆ.
ಈ ಕುರಿತಂತೆ ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿರುವ ಅವರು, ದಾಳಿ ನಡೆಸಿದ ವೇಳೆ ಕೆಲವು ಸಿಬಿಐನ ಅಧಿಕಾರಿಗಳು ಮಾಹಿತಿ ಮತ್ತು ತಂತ್ರಜ್ಞಾನಕ್ಕಾಗಿ ಸಂಸದೀಯ ಸ್ಥಾಯಿ ಸಮಿತಿಗೆ ಸಂಬಂಧಿಸಿದ ನನ್ನ ಅತ್ಯಂತ ಗೌಪ್ಯ ಮತ್ತು ಸೂಕ್ಷ್ಮ ವೈಯಕ್ತಿಕ ಪುಸ್ತಕಗಳನ್ನು ಮತ್ತು ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ಲಂಚ ಪಡೆದ ಆರೋಪದಡಿ ದೆಹಲಿ ಸಿಬಿಐ ಪ್ರಧಾನ ಕಚೇರಿಯಲ್ಲಿ ಕಾರ್ತಿ ಅವರನ್ನು ಸತತ ಎರಡನೇ ದಿನಗಳಿಂದ ವಿಚಾರಣೆ ನಡೆಸಲಾಗುತ್ತಿದೆ. ಈ ಮಧ್ಯೆ ತಮ್ಮ ಕರಡು ಟಿಪ್ಪಣಿಗಳು ಮತ್ತು ಪ್ರಶ್ನೆಗಳನ್ನು ಸಿಬಿಐ ವಶಪಡಿಸಿಕೊಂಡಿದೆ ಎಂದು ಸಿಬಿಐ ಅಧಿಕಾರಿಗಳ ವಿರುದ್ಧ ಕಾರ್ತಿ ಚಿದಂಬರಂ ಆರೋಪಿಸಿದ್ದಾರೆ.
2011ರಲ್ಲಿ ಪಿ. ಚಿದಂಬರಂ ಕೇಂದ್ರ ಗೃಹ ಸಚಿವರಾಗಿದ್ದಾಗ 263 ಚೀನಾ ದೇಶದ ಪ್ರಜೆಗಳಿಗೆ ವೀಸಾ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ವಿದೇಶದಿಂದ ಆಗಮಿಸಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರನ್ನು 9 ಗಂಟೆಗಳ ಕಾಲ ಸಿಬಿಐ ಗುರುವಾರ ವಿಚಾರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬಟದ್ರವ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಮುಖ ಆರೋಪಿ ಅರೆಸ್ಟ್
263 ಚೀನಾದ ಕೆಲಸಗಾರರಿಗೆ ವೀಸಾ ಒದಗಿಸಲು ಪಂಜಾಬ್ ನಲ್ಲಿ ವಿದ್ಯುತ್ ಘಟಕವೊಂದನ್ನು ನಿರ್ಮಿಸಿರುವ ವೇದಾಂತ ಗ್ರೂಪ್ ಕಂಪನಿಯ ಉನ್ನತ ಕಾರ್ಯನಿರ್ವಾಹಕರಿಂದ ಕಾರ್ತಿ ಮತ್ತು ಅವರ ಆಪ್ತ ಎಸ್ ಭಾಸ್ಕರರಮಣ್ ಅವರಿಂದ 50 ಲಕ್ಷ ಲಂಚ ಪಡೆದಿದ್ದಾರೆ ಎಂದು ಸಿಬಿಐ ಎಫ್‍ಐಆರ್ ನಲ್ಲಿ ದಾಖಲಿಸಿದೆ. ಆದರೆ, ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಕಾರ್ತಿ ತಳ್ಳಿ ಹಾಕಿದ್ದಾರೆ.
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರಿನ ಹೆಸರನ್ನು ಉಳಿಸಿ ಎಂದು ಸ್ಯಾಂಡಲ್‍ವುಡ್ ನಟ ಅನಿರುದ್ಧ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಐಟಿ ಹಬ್, ಗ್ರೀನ್ ಸಿಟಿ ಹೀಗೆ ಇಡೀ ವಿಶ್ವದಲ್ಲಿಯೇ ಗಮನ ಸೆಳೆದ ಬೆಂಗಳೂರು ಇತ್ತೀಚೆಗೆ ಅವ್ಯವಸ್ಥೆಗಳ ಕೂಪವಾಗುತ್ತಿದೆ. ಬೆಂಗಳೂರಿನ ಸಮಸ್ಯೆಯನ್ನು ಆಲಿಸಲು ಪ್ರತ್ಯೇಕವಾಗಿರುವ ಇಲಾಖೆಯನ್ನು ರಚಿಸಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಕಿವಿ ಹಿಂಡುವ ಕೆಲಸ ಮಾಡಬೇಕು. ಇಲ್ಲಿನ ಜನಪ್ರತಿನಿಧಿಗಳು ಇಚ್ಛಾ ಶಕ್ತಿ ಪ್ರದರ್ಶಿಸಿದರೆ ಸ್ವಚ್ಛ ನಗರಿ ಬೆಂಗಳೂರು ಆಗಬಹುದು ಅಂತ ಪ್ರಧಾನಿಗೆ ಪತ್ರದ ಮೂಲಕ ಅನಿರುದ್ಧ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್‍ಗೆ ಪಿತೃ ವಿಯೋಗ
ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರಂತರ ಮುಂಗಾರ ಪೂರ್ವ ಮಳೆಯಗುತ್ತಿದ್ದು ಇದರಿಂದ ಹಲವು ಅವಾಂತರಗಳು ಘಟಿಸಿ ಜನಜೀವನಕ್ಕೆ ತೀವ್ರ ತೊಂದರೆಯನ್ನು ಉಂಟುಮಾಡಿದೆ. ಅದರಲ್ಲೂ ವಿಶ್ವದಲ್ಲಿನ ವೇಗದ ಬೆಳವಣಿಗೆಗಳ ನಗರಗಳ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ನಗರದಲ್ಲಿನ ಮಳೆ ಅನಾಹುತಗಳು ಆತಂಕ ಹುಟ್ಟಿಸಿದೆ. ಇದು ‘ಬ್ರಾಂಡ್ ಬೆಂಗಳೂರು’ ಹೆಸರಿಗೆ ಆತಂಕ ಸೃಷ್ಟಿಸಿದ್ದು, ಭವಿಷ್ಯತ್ತಿನಲ್ಲಿ ಇದರಿಂದ ಕೈಗಾರಿಕೆಗಳ ಸ್ಥಾಪನೆ ಮತ್ತು ರಾಜ್ಯಕ್ಕೆ ಬಂಡವಾಳ ಹೂಡುವ ಹೂಡಿಕೆದಾರರಿಗೆ ತಪ್ಪು ಸಂದೇಶ ರವಾನೆಯಾಗಲಿದೆ. ಅದರಿಂದ ಇಲ್ಲಿ ಪ್ರತಿಷ್ಟಾಪನೆಗೊಳ್ಳಬಹುದಾದ ಕೈಗಾರಿಕಾ ವಸಹಾತುಗಳು ಬೇರೆ ರಾಜ್ಯಗಳ ಪಾಲಗಿ ನಮ್ಮ ರಾಜ್ಯದ ಅಭಿವೃದ್ಧಿಗೆ ತೊಡಕಾಗಲಿದೆ ಎಂದು ಎಸ್.ಎಂ. ಕೃಷ್ಣ ಅವರು ಪತ್ರದಲ್ಲಿ ಕಳವಳವನ್ನು ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ನಟ ಅನಿರುದ್ಧ್ ಕೂಡ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಪ್ರಶ್ನೆ ಮಾಡಿದ್ದಾರೆ.
ಪತ್ರದಲ್ಲಿ ಏನಿದೆ?: ಪ್ರಧಾನಿ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಕೆಲಸ ಮಾಡಿ ನ್ಯಾಯ ಕೊಡಿಸುತ್ತಾರೆ ಅನ್ನೋ ನಂಬಿಕೆಯಿದೆ. ಒಂದು ವೇಳೆ ನ್ಯಾಯ ಕೊಡಿಸದೇ ಹೊದರೆ ನಾವೂ ಮುಂದೆ ಟೆರರಿಸ್ಟ್‌ಗಳ ಜೊತೆ ಕೈಜೋಡಿಸುತ್ತೇವೆ.
ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಹಣ ಇದ್ದವರಿಗೆ ಎನ್ನುವಂತಹ ವ್ಯವಸ್ಯೆ ಬಂದುಬಿಟ್ಟಿದೆ. ಸರ್ಕಾರದ ಈ ವ್ಯವಸ್ಥೆಯಿಂದ ನಾವು ಮಾನಸಿಕವಾಗಿ ಸತ್ತುಹೋಗಿದ್ದೇವೆ. ಆದ್ದರಿಂದ ಇನ್ನು ಮುಂದೆ ಸರ್ಕಾರಿ ಹುದ್ದೆಗೆ ಪರೀಕ್ಷೆಗಳನ್ನು ಬರೆಯುವುದಿಲ್ಲ. ಟೆರೆರಿಸ್ಟ್‌ಗಳು, ನಕ್ಸಲರ ಸಂಘಟನೆ ಸೇರಲು ಇಚ್ಛಿಸಿದ್ದೇವೆ. ಅವರ ಬಳಿ ಹಣ ಪಡೆದು ಬಡ ಕುಟುಂಬಕ್ಕೆ ನಾವು ಸಹಾಯ ಮಾಡುತ್ತೇವೆ. ನಾವು 8 ಮಂದಿ ಇದ್ದೇವೆ. ನಾವೆಲ್ಲರೂ ಈ ನಿರ್ಧಾರ ಮಾಡಿದ್ದೇವೆ. ಇದನ್ನೂ ಓದಿ: ಉದ್ದನೆ ಕೂದಲಿನ, ತುಟಿಗೆ ಬಣ್ಣ ಹಚ್ಚಿ ದೈತ ದಾಂಡಿಗನಾಗಿ ಗಮನಸೆಳೆದ ಸೈಮಂಡ್ಸ್ ಇನ್ನು ನೆನಪು ಮಾತ್ರ
ಪಿಎಸ್‌ಐ ಪರೀಕ್ಷೆಯಲ್ಲಿ ಮೋಸ ಹೋದವರಿಗೆ ನ್ಯಾಯ ಸಿಗಬೇಕು. ಅನ್ಯಾಯ ಮಾಡಿದವರನ್ನು ಜೈಲಿಗೆ ಹಾಕಬೇಕು. ಬಳಿಕ 2021ರಲ್ಲಿ ನಡೆದ ಎಫ್‌ಡಿಎ ಪರೀಕ್ಷೆಯಲ್ಲೂ ಅಕ್ರಮ ನಡೆದಿದ್ದು, ಅದನ್ನು ಸಹ ತನಿಖೆ ಮಾಡಿ ನ್ಯಾಯ ಕೊಡಿಸಬೇಕು ಮೋದಿ ಜೀ ಎಂದು ಪತ್ರದ ಮೂಲಕ ನೊಂದ ಅಭ್ಯರ್ಥಿಗಳು ಕೋರಿದ್ದಾರೆ.
ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಕುರಿತು ತನಿಖೆ ಆರಂಭಿಸಿರುವ ಸಿಐಡಿ ಪೊಲೀಸರು 55ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.
ಭೋಪಾಲ್: ಕುಡಕನೊಬ್ಬ ಎರಡು ಕ್ವಾರ್ಟರ್ ಕುಡಿದರೂ ನಶೆಯೇರುತ್ತಿಲ್ಲ ಎಂದು ಗೃಹ ಸಚಿವರಿಗೆ ಹಾಗೂ ಅಬಕಾರಿ ಸಚಿವರಿಗೆ ದೂರು ನೀಡಿದ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಉಜ್ಜಯಿನಿಯ ಬಹದ್ದೂರ್ ಗಂಜ್‍ನಲ್ಲಿರುವ ಆರ್ಯ ಸಮಾಜ ಮಾರ್ಗದಲ್ಲಿ ವಾಸಿಸುವ ಲೋಕೇಂದ್ರ ಸೋಥಿಯಾ ಮದ್ಯಕ್ಕೆ ದಾಸನಾಗಿದ್ದ. ಈತ ಏಪ್ರಿಲ್ 12ರಂದು ಇಂದೋರ್‌ನಲ್ಲಿ ಸ್ಥಳೀಯ ಮದ್ಯದ ಅಂಗಡಿಯಿಂದ 4 ಕ್ವಾರ್ಟರ್ ದೇಸಿ ಮದ್ಯವನ್ನು ಖರೀದಿಸಿದ್ದ. ಎರಡು ಕ್ವಾರ್ಟರ್ ಕುಡಿದರೂ ಆತನಿಗೆ ಅಮಲು ಏರಲಿಲ್ಲವಾಗಿತ್ತು. ಇದರಿಂದಾಗಿ ಆತನಿಗೆ ಗುತ್ತಿಗೆದಾರರು ಮದ್ಯದ ಬದಲು ನೀರು ಹಾಕಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರಿಗೆ ದೂರು ನೀಡಲು ಮದ್ಯದಂಗಡಿಗೆ ತೆರಳಿದ್ದಾನೆ. ಆಗ ಅಲ್ಲಿದ್ದ ನೌಕರರು ಆತನಿಗೆ ಬೈದು ಅಲ್ಲಿಂದ ಓಡಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಲೋಕೇಂದ್ರ ಮದ್ಯದ ಗುತ್ತಿಗೆದಾರರ ವಿರುದ್ಧ ಗೃಹ ಸಚಿವ ನರೋತ್ತಮ್ ಮಿಶ್ರಾ ಹಾಗೂ ಅಬಕಾರಿ ಇಲಾಖೆಗೆ ದೂರ ನೀಡಿದ್ದಾನೆ.
ಪತ್ರದಲ್ಲಿ ಏನಿದೆ?: ಎರಡು ಕ್ವಾರ್ಟರ್ ಕುಡಿದರೂ ನಶೆಯೇ ಏರುತ್ತಿಲ್ಲ. ಇದರಿಂದಾಗಿ ಗುತ್ತಿಗೆದಾರರು ಮದ್ಯದಲ್ಲಿ ನೀರು ಬೇರೆಸಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ತನ್ನ ಬಳಿ ಎರಡು ಸೀಲ್ಡ್ ಕ್ವಾರ್ಟರ್‌ಗಳಿವೆ. ಇವುಗಳನ್ನು ಲ್ಯಾಬ್‍ನಲ್ಲಿ ಪರಿಶೀಲನೆ ನಡೆಸಿದರೆ ಮದ್ಯದಲ್ಲಿ ನೀರು ಬೆರೆಸಲಾಗಿದೆಯೇ ಎಂಬುದು ಗೊತ್ತಾಗಲಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿದ್ದಾನೆ.
ಆದರೆ, ಈ ಪ್ರಕರಣದಲ್ಲಿ ಅಬಕಾರಿ ಅಧಿಕಾರಿ ರಾಮ್ ಹನ್ಸ್ ಪಚೌರಿ ಅವರು ಇನ್ನೂ ದೂರು ಸ್ವೀಕರಿಸಿಲ್ಲ, ನಂತರ ತನಿಖೆ ನಡೆಸಲಾಗುವುದು ಎಂದು ಹೇಳಿದ್ದರು. ಆದರೆ, ಮೇ 6ರವರೆಗೆ ಅವರ ದೂರಿನ ಮೇರೆಗೆ ಏನೂ ಆಗಿಲ್ಲ, ಆದ್ದರಿಂದ ಅಸಮಾಧಾನಗೊಂಡ ಲೋಕೇಂದ್ರ ಗ್ರಾಹಕರ ವೇದಿಕೆಗೆ ಹೋಗುವುದಾಗಿ ತಿಳಿಸಿದರು. ಇದನ್ನೂ ಓದಿ:ಉಕ್ರೇನ್‌ಗೆ ಬ್ರಿಟನ್‌ನಿಂದ ಮತ್ತೆ 12 ಸಾವಿರ ಕೋಟಿ ಮಿಲಿಟರಿ ನೆರವು
ನವದೆಹಲಿ: ಜಹಾಂಗೀರ್‌ಪುರಿ ಹಿಂಸಾಚಾರ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪ್ರಮುಖ ಆರೋಪಿ ಅನ್ಸಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಆಸ್ತಾನಾ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಅನ್ಸಾರ್‌ಗೆ ಬೇರೆ ಬೇರೆ ಮೂಲಗಳಿಂದ ಹಣಕಾಸಿನ ನೆರವು ಸಿಕ್ಕಿರುವಂತೆ ಭಾಸವಾಗುತ್ತಿದ್ದು ಈ ಬಗ್ಗೆ ತನಿಖೆ ನಡೆಸಬೇಕು ಎಂದು ರಾಕೇಶ್ ಅಸ್ತಾನಾ ಮನವಿ ಮಾಡಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪತ್ರವನ್ನು ಪರಿಶೀಲಿಸುತ್ತಿದ್ದು ಶೀಘ್ರ ಕ್ರಮ ಕೈಗೊಳ್ಳುವ ಸಾಧ್ಯತೆಗಳಿದೆ.
ಈ ನಡುವೆ ದೇಶದ ಹಲವು ಭಾಗಗಳಲ್ಲಿ ಕೋಮು ಘರ್ಷಣೆ ನಡೆಯುತ್ತಿದ್ದು ಅದರ ಭಾಗವಾಗಿ ಜಹಾಂಗೀರ್‌ಪುರಿಯಲ್ಲೂ ಕಲ್ಲು ತೂರಾಟ ನಡೆದಿತ್ತು. ರಾಕೇಶ್ ಅಸ್ತಾನಾ ಬರೆದಿರುವ ಪತ್ರ ಈಗ ಮಹತ್ವ ಪಡೆದುಕೊಂಡಿದ್ದು ಘಟನೆಯ ಹಿಂದೆ ದೊಡ್ಡ ಹಣಕಾಸಿನ ನೆರವು ಇರಬಹುದು ಎನ್ನಲಾಗುತ್ತಿದ್ದು ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಲಾಗುತ್ತಿದೆ.
ಕಳೆದ ಶನಿವಾರ ಹನುಮಾನ್ ಜಯಂತಿ ದಿನ ಶೋಭಾಯಾತ್ರೆ ನಡೆಸಲಾಗುತ್ತಿತ್ತು. ಮಸೀದಿಯ ಬಳಿ ತೆರಳುವ ವೇಳೆ ಬೆಂಬಲಿಗರೊಂದಿಗೆ ಬಂದಿದ್ದು ಅನ್ಸಾರ್ ರಂಜಾನ್ ಇಫ್ತಾರ್ ಸಮಯ ನಡೆಯುತ್ತಿದ್ದು ಮುಂದೆ ಸಾಗುವಂತೆ ಕೇಳಿಕೊಂಡಿದ್ದರು. ಇದು ಪರಿಸ್ಪರ ವಾಗ್ವಾದಕ್ಕೆ ಕಾರಣವಾಗಿ ಕಲ್ಲು ತೂರಾಟ ನಡೆದು ಸ್ಥಳದಲ್ಲಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಘಟನೆಯಲ್ಲಿ ಎಂಟು ಮಂದಿ ಪೋಲೀಸರು ಗಾಯಗೊಂಡಿದ್ದರು.
ಪ್ರಕರಣ ಸಂಬಂಧ 26 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು. ಈ ಪೈಕಿ ಅನ್ಸಾರ್ ಪ್ರಮುಖ ಆರೋಪಿಯಾಗಿದ್ದಾನೆ. ಅನ್ಸಾರ್ ಹಿಂದೆ ಎರಡು ಹಲ್ಲೆ ಪ್ರಕರಣ, ಜೂಜು ಹಾಗೂ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪದಲ್ಲಿ ಬಂಧಿಯಾಗಿದ್ದ. ಹಿಂಸಾಚಾರ ಘಟನೆಯೂ ಪೂರ್ವ ನಿಯೋಜಿತ ಎಂದು ದೆಹಲಿ ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.
ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಅಂದಿನ ಜಿಲ್ಲಾ ಪಂಚಾಯತ್ ಅಧ್ಯಕ್ಷೆ, ಕಾಂಗ್ರೆಸ್ ನಾಯಕಿ ಆಶಾ ಐಹೊಳೆ ಪತ್ರ ಬರೆದಿರುವ ವಿಚಾರ ಈಗ ಬೆಳಕಿಗೆ ಬಂದಿದೆ.
ʼಅನುಮೋದನೆಗಾಗಿ ಆದೇಶಿಸಲಾಗಿದೆʼ ಎಂದು ಫೆಬ್ರವರಿ 26ರಂದು ಸಹಿ ಮಾಡಲಾಗಿದೆ. ಆದೇಶದ ಪ್ರತಿಗಳನ್ನು ಮಾರ್ಚ್ 5ರಂದು ನೀಡಲಾಗುವುದು’ ಎಂದು ಕೈಬರಹದಲ್ಲಿ ಬರೆದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆಯ ಕಾರ್ಯದರ್ಶಿ ಸಹಿ ಮತ್ತು ಸೀಲ್ ಹಾಕಲಾಗಿದೆ.
ನವದೆಹಲಿ: ಸುಪ್ರೀಂಕೋರ್ಟ್ ಹಾಲಿ ನ್ಯಾಯಮೂರ್ತಿಗಳ ಮೂಲಕ ಜಹಾಂಗೀರ್‌ಪುರ ಗಲಭೆ ಪ್ರಕರಣದ ತನಿಖೆ ನಡೆಸುವಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರಿಗೆ ಪತ್ರ ಬರೆಯಲಾಗಿದೆ. ವಕೀಲ ಅಮೃತಪಾಲ್ ಸಿಂಗ್ ಖಾಲ್ಸಾ ಈ ಪತ್ರ ಬರೆದಿದ್ದು ಸುಪ್ರೀಂಕೋರ್ಟ್ ತನ್ನ ‘ಎಪಿಸ್ಟೋಲರಿ ಅಧಿಕಾರ ವ್ಯಾಪ್ತಿ’ಯನ್ನು ಚಲಾಯಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ದೆಹಲಿಯಲ್ಲಿ ಕೋಮು ಗಲಭೆಗಳು ಹೆಚ್ಚಾಗುತ್ತಿವೆ. ೨೦೨೦ ರಲ್ಲಿ ದೆಹಲಿ ಪೊಲೀಸರಿಂದ ಕೋಮು ಗಲಭೆ ತಡೆಯಲು ಸಾಧ್ಯವಾಗಿಲ್ಲ. ಪರಿಸ್ಥಿತಿ ನಿಭಾಯಿಸದ ಅವರು ವಿಶ್ವಾಸರ್ಹತೆ ಕಳೆದುಕೊಂಡಿದ್ದಾರೆ. ಪೊಲೀಸರ ಹಿಂದಿನ ತನಿಖೆಗಳು ಕೋಮುವಾದಿ ಶಕ್ತಿಯನ್ನು ರಕ್ಷಿಸುವಂತೆ ಕಂಡು ಬರುತ್ತಿದೆ. ಹೀಗಾಗಿ ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕು ಎಂದು ಮನವಿ ಮಾಡಿದ್ದಾರೆ.
ಹನುಮ ಜಯಂತಿ ಶೋಭಾ ಯಾತ್ರೆಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಕೆಲವು ಶಸ್ತ್ರಸಜ್ಜಿತ ಸದಸ್ಯರು ಮಸೀದಿಗೆ ನುಗ್ಗಿ ಕೇಸರಿ ಧ್ವಜವನ್ನು ಅಳವಡಿಸಿದ್ದಾರೆ. ನಂತರ ನಡೆದದ್ದು ಎರಡೂ ಸಮುದಾಯಗಳಿಂದ ಕಲ್ಲು ತೂರಾಟವಾಗಿದೆ ಎಂದು ಮಾಧ್ಯಮ ವರದಿಗಳು ಮಾಡಿವೆ. ಇದನ್ನೂ ಓದಿ: ಬಿಜೆಪಿ ಸೇರ್ತಾರಾ ಸಂಸದೆ ಸುಮಲತಾ ಆಪ್ತ?
ಕಳೆದ ಶನಿವಾರ ಜಹಾಂಗೀರ್‌ಪುರ ಪ್ರದೇಶದಲ್ಲಿ ಜಯಂತಿಯ ದಿನದಂದು ಕೋಮು ಗಲಭೆ ನಡೆದಿತ್ತು. ಘಟನೆಯಲ್ಲಿ 7-8 ಸಿಬ್ಬಂದಿ ಗಾಯಗೊಂಡಿದ್ದಾರೆ. ಸಾರ್ವಜನಿಕ ಆಸ್ತಿ-ಪಾಸ್ತಿಗೆ ಧಕ್ಕೆಯಾಗಿದೆ. ಘಟನೆ ಸಂಬಂಧ ಮುಸ್ಲಿಂ ಸಮುದಾಯದ ಹತ್ತಕ್ಕೂ ಹೆಚ್ಚು ಯುವಕರನ್ನು ಬಂಧಿಸಲಾಗಿದೆ.