Tag: letter

  • ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗೆ ಸಾವಿರ ಮಂದಿ ಕಾಫಿನಾಡಿಗರಿಂದ ಪತ್ರ

    ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗೆ ಸಾವಿರ ಮಂದಿ ಕಾಫಿನಾಡಿಗರಿಂದ ಪತ್ರ

    ಚಿಕ್ಕಮಗಳೂರು: ಭದ್ರಾ ಹುಲಿ ಯೋಜನೆ ಹಾಗೂ ಬಫರ್ ಝೋನ್‍ನಿಂದ ನಮ್ಮ ಬದುಕು ಬೀದಿಗೆ ಬೀಳುವಂತಾಗಿದೆ. ಯೋಜನೆ ಜಾರಿಗೆ ಬರುವ ಮುನ್ನ ನಮಗೆ ದಯಾಮರಣಕ್ಕೆ ಅನುಮತಿ ನೀಡಿ ಎಂದು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ 10ಕ್ಕೂ ಹೆಚ್ಚು ಹಳ್ಳಿಯ ಜನ ರಾಷ್ಟ್ರಪತಿ ರಾಮನಾಥ್ ಕೋವಿಂದ್‍ಗೆ ಪತ್ರ ಬರೆದಿದ್ದಾರೆ.

    ಎನ್.ಆರ್.ಪುರ ತಾಲೂಕಿನ ಸಾಲೂರು, ಹೊನ್ನಂಗಿ, ಬೆಳ್ಳಂಗಿ, ಅಳೇಹಳ್ಳಿ, ಆಡುವಳ್ಳಿ, ಕೊಳಲೆ, ಮುದುಗುಣಿ, ಬಾಳೆಗದ್ದೆ, ನಂದಿಗಾವೆ, ಬೈರಾಪುರ ಸೇರಿದಂತೆ ವಿವಿಧ ಹಳ್ಳಿಗಳ ಸಾವಿರಕ್ಕೂ ಹೆಚ್ಚು ಜನ ರಾಷ್ಟ್ರಪತಿಗೆ ದಯಾಮರಣಕ್ಕಾಗಿ ಪತ್ರ ಬರೆದಿದ್ದಾರೆ. ಈ ಹಿಂದೆ ಕೂಡ ಸರ್ಕಾರ ವಿವಿಧ ಕಾರಣಗಳಿಂದ ಜನರನ್ನ ಒಕ್ಕಲೆಬ್ಬಿಸಿತ್ತು. ಈ ಹಿಂದೆ ಸರ್ಕಾರ ಒಕ್ಕಲೆಬ್ಬಿಸಿದ್ದ ವೇಳೆ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡಿದ್ದೇವೆ. ಇಲ್ಲಿಂದ ಈಗ ಮತ್ತೆ ಒಕ್ಕಲೆಬ್ಬಿಸಿದರೆ ಎಲ್ಲಿಗೆ ಹೋಗೋದು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ಭದ್ರಾ ಹುಲಿ ಯೋಜನೆ ಹಾಗೂ ಬಫರ್ ಝೋನ್ ನೂರಾರು ಹಳ್ಳಿಯ ಜನರಿಗೆ ಮರಣಶಾಸನವಾಗಿದೆ. ಹಾಗಾಗಿ ಯೋಜನೆ ಜಾರಿಗೆ ಬರುವ ಮುನ್ನ ದಯಾಮರಣಕ್ಕೆ ನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಈಗ ಒಂದು ಸಾವಿರ ಜನ ಪತ್ರ ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ಐದು ಸಾವಿರ ಜನ ಪತ್ರ ಬರೆಯಲು ನಿರ್ಧರಿಸಿದ್ದಾರೆ. ಈ ಹಿಂದೆ ಕೂಡ ಇದೇ ಯೋಜನೆಯನ್ನ ವಿರೋಧಿಸಿ ಸಾವಿರಾರು ರೈತರು ಎನ್.ಆರ್.ಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಜಡ್ಜ್ ಭೇಟಿ ವೇಳೆ ಬಾಗಿಲು ಮುಚ್ಚಿದ್ದ ಇನ್ಸ್‌ಪೆಕ್ಟರ್ ಸಸ್ಪೆಂಡ್

    ಗ್ರಾಮ ಪಂಚಾಯಿತಿ ಚುನಾವಣೆಯನ್ನ ಬಹಿಷ್ಕರಿಸಿದ್ದರು. ಈ ಯೋಜನೆ ಜಾರಿಗೆ ಬಂದರೆ 125ಕ್ಕೂ ಹೆಚ್ಚು ಹಳ್ಳಿಗಳಿಗೆ ತೊಂದರೆಯಾಗಲಿದೆ. ಶತಮಾನಗಳ ಬದುಕು ಬೀದಿಗೆ ಬರಲಿದೆ. ಹಾಗಾಗಿ ಜನ ಯೋಜನೆ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಕೇಂದ್ರ-ರಾಜ್ಯ ಸರ್ಕಾರದ ಗಮನ ಸೆಳೆಯಲು ಎಲ್ಲಾ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ, ಯೋಜನೆ ವಿರುದ್ಧ ದಯಾಮರಣಕ್ಕೆ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

  • ತಂದೆ ಬರೆದ ಪತ್ರವನ್ನೇ ವೆಡ್ಡಿಂಗ್ ಡ್ರೆಸ್‌ಗೆ ಡಿಸೈನ್ ಮಾಡಿಕೊಂಡ ವಧು

    ತಂದೆ ಬರೆದ ಪತ್ರವನ್ನೇ ವೆಡ್ಡಿಂಗ್ ಡ್ರೆಸ್‌ಗೆ ಡಿಸೈನ್ ಮಾಡಿಕೊಂಡ ವಧು

    ಜೈಪುರ: ಮದುವೆಗೆ ವಧು, ವರ ಹಾಕುವ ಡ್ರೆಸ್, ಆಭರಣಗಳನ್ನು ಡಿಸೈನರ್ ಬಳಿಯಲ್ಲಿ ವಿಶೇಷವಾಗಿ ಮಾಡಿಸುತ್ತಾರೆ. ಆದರೆ ಈ ಮದುವೆಯಲ್ಲಿ ವಧು ತೊಟ್ಟಿರುವ ಡ್ರೆಸ್‌ ಸಖತ್‌ ಸ್ಟೆಷಲ್‌ ಆಗಿದೆ.  ವಧು, ತಂದೆ ಬರೆದಿರುವ ಸಾಲುಗಳನ್ನು ಮದುವೆ ದಿನ ಧರಿಸುವ ದುಪಟ್ಟಕ್ಕೆ ಕಸೂತಿ ಮಾಡಲಾಗಿದೆ.

    ವಧು ಸುವನ್ಯಾ, ಇತ್ತೀಚೆಗೆ ರಾಜಸ್ಥಾನದಲ್ಲಿ ದಾಂಪತ್ಯಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯಲ್ಲಿ ಸಿಂಪಲ್ ಆಗಿರುವ ಉಡುಗೆಯನ್ನು ತೊಟ್ಟುಕೊಂಡಿದ್ದಾರೆ. ವಧುವಿನ ಲೆಹೆಂಗಾವನ್ನು ಡಿಸೈನರ್ ಸುನೈನಾ ಖೇರಾ ವಿನ್ಯಾಸಗೊಳಿಸಿದ್ದಾರೆ. ಸುವನ್ಯಾ ತಂದೆ ಸಾವನ್ನಪ್ಪಿದ್ದಾರೆ. ಆದರೆ ಅವರು ಎಂದಿಗೂ ಜೊತೆಗೆ ಇರುತ್ತಾರೆ ಎನ್ನುವ ಸಂದೇಶವವನ್ನು ವಧು ವಿಭಿನ್ನವಾಗಿ ಸಾರಿದ್ದಾಳೆ. ಇದನ್ನೂ ಓದಿ: ಆಸ್ಕರ್‌ ವಿಜೇತ ಮೊದಲ ಕಪ್ಪುವರ್ಣೀಯ ಸಿಡ್ನಿ ಪೊಯ್ಟಿಯರ್‌ ನಿಧನ

     

    View this post on Instagram

     

    A post shared by Shaadi Ek Baar (@shaadiekbaar)

    ವೀಡಿಯೋದಲ್ಲಿ ಏನಿದೆ?: ಸುವನ್ಯಾ ತೊಟ್ಟಿರುವ ಕೆಂಪು ಬಣ್ಣದ ಲೆಹೆಂಗಾ ಸುಂದರವಾಗಿದೆ. ಲೆಹೆಂಗಾದೊಂದಿಗೆ ನೆಟ್ ರೀತಿ ಕಾಣುವ ಬಟ್ಟೆಯಿಂದ ಮಾಡಿರುವ ಕೆಂಪು ದುಪಟ್ಟ ಧರಿಸಿದ್ದಾರೆ. ಆದರೆ ಇದರಲ್ಲೊಂದು ವಿಶೇಷತೆ ಇದೆ. ಸುವನ್ಯಾ ತಂದೆ ಜನ್ಮದಿನದಂದು ತನಗಾಗಿ ಬರೆದ ಪತ್ರದಲ್ಲಿನ ಸಾಲುಗಳನ್ನು ಮದುವೆ ದಿನ ಧರಿಸುವ ದುಪಟ್ಟದಲ್ಲಿ ಕಸೂತಿ ಮೂಲಕ ಬಳಸಿಕೊಂಡಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತಂದೆ, ಮಗಳ ಬಾಂಧವ್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ಇದನ್ನೂ ಓದಿ: ಡ್ರ್ಯಾಗನ್ ಫ್ರೂಟ್‍ನಲ್ಲಿ ಕೊರೊನಾ!

  • ಯಶ್ ಹುಟ್ಟುಹಬ್ಬಕ್ಕೆ ರಜೆ ಕೋರಿ ಪ್ರಾಂಶುಪಾಲರಿಗೆ ಪತ್ರ ಬರೆದ ಅಭಿಮಾನಿ

    ಯಶ್ ಹುಟ್ಟುಹಬ್ಬಕ್ಕೆ ರಜೆ ಕೋರಿ ಪ್ರಾಂಶುಪಾಲರಿಗೆ ಪತ್ರ ಬರೆದ ಅಭಿಮಾನಿ

    ಬಳ್ಳಾರಿ: ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬಕ್ಕೆ ರಜಾ ಕೋರಿ ಅಭಿಮಾನಿಯೊಬ್ಬರು ಪತ್ರ ಬರೆದಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

    ಅಭಿಮಾನಿ ಕೆ.ಶಿವಕುಮಾರ್ ಅವರು ಪ್ರಾಂಶುಪಾಲರಿಗೆ ರಜಾ ಕೋರಿ ಪತ್ರ ಬರೆದ ವಿದ್ಯಾರ್ಥಿ. ಇವರು ಬಳ್ಳಾರಿಯ ಸರಳದೇವಿ ಕಾಲೇಜಿನಲ್ಲಿ ಬಿಕಾಂ ಮೂರನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಜ.8 ರಂದು ಯಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಾಂಶುಪಾಲರಿಗೆ ರಜೆ ಕೋರಿ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಒಂದು ದಿನ ರಜಾ ನೀಡಿ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶಿವಕುಮಾರ್, ರಾಕಿಂಗ್ ಸ್ಟಾರ್ ಯಶ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಯಶ್ ಅಭಿನಯದ ಎಲ್ಲಾ ಚಿತ್ರಗಳನ್ನು ನೋಡಿದ್ದಾರೆ.

    ಪತ್ರದಲ್ಲಿ ಏನಿದೆ?: ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬಕ್ಕೆ ಇನ್ನೂ 2 ದಿನ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ನಾಳೆ ಅಭಿಮಾನಿಗಳು 24 ಗಂಟೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್‌ನಲ್ಲಿ ಭಾಗವಹಿಸುತ್ತಿದ್ದಾರೆ. ನಾನು ಅದರಲ್ಲೂ ಭಾಗವಹಿಸುತ್ತೇನೆ. ಹೀಗಾಗಿ ನನಗೆ ಹಾಗೂ ಇತರ ಯಶ್ ಅಭಿಮಾನಿಗಳಿಗೂ ರಜೆ ಕೊಡಿ ಎಂದು ವಿನಂತಿಸಿಕೊಂಡಿದ್ದಾರೆ. ಜೊತೆಗೆ ಅಭಿಮಾನಿಗಳ ಶುಭಾಶಯಗಳನ್ನು ನೀವು ನೋಡಿ, ಬಾಸ್‌ಗೆ ವಿಶ್ ಮಾಡಿ ಎಂದು ಪತ್ರದಲ್ಲಿ ಬರೆದಿದ್ದಾರೆ. ಇದನ್ನೂ ಓದಿ:  ನಮ್ಮ ಜಿಲ್ಲೆಯನ್ನೇ ಹಾಳ್ ಮಾಡಿಬಿಟ್ಟಿದ್ದಾನೆ – ಮಾಧುಸ್ವಾಮಿ ವಿರುದ್ಧ ಬಸವರಾಜ್, ಬೈರತಿ ಗುಸು ಗುಸು

  • ಭಾರೀ ಮಳೆ ಬಗ್ಗೆ ಎಚ್ಚರಿಸುವಲ್ಲಿ ಹವಾಮಾನ ಇಲಾಖೆ ವಿಫಲ- ಅಮಿತ್ ಶಾಗೆ ತಮಿಳುನಾಡು ಸಿಎಂ ಪತ್ರ

    ಭಾರೀ ಮಳೆ ಬಗ್ಗೆ ಎಚ್ಚರಿಸುವಲ್ಲಿ ಹವಾಮಾನ ಇಲಾಖೆ ವಿಫಲ- ಅಮಿತ್ ಶಾಗೆ ತಮಿಳುನಾಡು ಸಿಎಂ ಪತ್ರ

    ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಬಗ್ಗೆ ಮಾಹಿತಿ ನೀಡುವಲ್ಲಿ ಹವಾಮಾನ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪತ್ರ ಬರೆದಿದ್ದಾರೆ.

    ತಮಿಳುನಾಡಿನಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಭಾರೀ ಅನಾಹುತ ಸಂಭವಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರವನ್ನು ಎಚ್ಚರಿಸುವಲ್ಲಿ ಭಾರತೀಯ ಹವಮಾನ ಇಲಾಖೆ ವಿಫಲವಾಗಿದೆ ಪತ್ರದಲ್ಲಿ ದೂರಿದ್ದಾರೆ.

    ವಿಪತ್ತು ಪರಿಸ್ಥಿತಿಗಳನ್ನು ನಿಭಾಯಿಸುವಲ್ಲಿ ಎಚ್ಚರಿಸಲು ಭಾರತೀಯ ಹವಮಾನ ಇಲಾಖೆ ಮುಖ್ಯ ಪಾತ್ರವನ್ನು ವಹಿಸುತ್ತದೆ. ಇದರಿಂದ ರಾಜ್ಯ ಹಾಗೂ ಜಿಲ್ಲಾಡಳಿತಕ್ಕೆ ಜನರ ಸುರಕ್ಷತೆಯ ಬಗ್ಗೆ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಲು ಸಹಾಯವಾಗುತ್ತದೆ. ಆದರೆ ರೆಡ್ ಅಲರ್ಟ್ ನ್ನು ಘೋಷಿಸುವ ಸಂಬಂಧ ತಿಳಿಸುವಲ್ಲಿ ಐಎಂಸಿ ವಿಫಲವಾಗಿದೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ:  ಬಿಹಾರ್‌ ಸಿಎಂ ಪುತ್ರ ತನ್ನ ತಂದೆಗಿಂತಲೂ 5 ಪಟ್ಟು ಹೆಚ್ಚು ಶ್ರೀಮಂತ

    ಹವಮಾನ ಇಲಾಖೆ ಡಿ.30ರಂದು ಮಧ್ಯಾಹ್ನ ತಮಿಳುನಾಡಿನಲ್ಲಿ ಮಳೆಯಾಗುವುದರ ಬಗ್ಗೆ ತಿಳಿಸಿತ್ತು. ಆದರೆ ಕರಾವಳಿಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತದೆ. ಆದರೆ ವಿಲುಪುರಂ, ಕಡಲೂರು ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ, ಬಿರುಗಾಳಿ ಹಾಗೂ ಚೆನ್ನೈನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದಷ್ಟೇ ಮುನ್ಸೂಚನೆ ನೀಡಿತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್‌ ನೀಡದಿದ್ದಕ್ಕೆ ಅಖಿಲೇಶ್‌ ಯಾದವ್‌ ಮೊದಲು ಕ್ಷಮೆಯಾಚಿಸಲಿ: ಯೋಗಿ ಆದಿತ್ಯನಾಥ್

    ಸಂಜೆ 4:15ಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಆದರೆ ಈ ವೇಳೆಗೆ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್‌ಪೇಟ್ ಜಿಲ್ಲೆಗಳಾದ್ಯಂತ ಧಾರಾಕಾರ ಮಳೆಯಾಗಿದೆ. ಇದರಿಂದಾಗಿ ಅನೇಕ ಸ್ಥಳಗಳು ಜಲಾವೃತಗೊಂಡಿದ್ದು, ನಗರದಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

  • ಓಮಿಕ್ರಾನ್ ಭೀತಿ – ಕರ್ನಾಟಕ ಸೇರಿ ಎಂಟು ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಪತ್ರ

    ಓಮಿಕ್ರಾನ್ ಭೀತಿ – ಕರ್ನಾಟಕ ಸೇರಿ ಎಂಟು ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಪತ್ರ

    ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಸೋಂಕು ಹರಡುವಿಕೆ ತೀವ್ರವಾಗುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಸೋಂಕು ಹೆಚ್ಚಾಗುತ್ತಿರುವ ಎಂಟು ರಾಜ್ಯಗಳಿಗೆ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ ಪತ್ರ ಬರೆದಿದ್ದು ಎಚ್ಚರವಹಿಸುವಂತೆ ಸೂಚನೆ ನೀಡಿದ್ದಾರೆ.

    ದೆಹಲಿ, ಹರಿಯಾಣ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್, ಕರ್ನಾಟಕ ಮತ್ತು ಜಾರ್ಖಂಡ್‌ಗೆ ಪತ್ರ ಬರೆಯಲಾಗಿದ್ದು ವ್ಯಾಕ್ಸಿನೇಷನ್‌ ವ್ಯಾಪ್ತಿ ಹೆಚ್ಚಿಸಬೇಕು. ಟೆಸ್ಟಿಂಗ್ ಹೆಚ್ಚು ಮಾಡಬೇಕು ಮತ್ತು ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಸಿದ್ಧವಾಗಿಡಬೇಕು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: 4 ಬಾರಿ ಕೋವಿಡ್‌ ಲಸಿಕೆ ಪಡೆದಿದ್ದ ಮಹಿಳೆಗೆ ಕೊರೊನಾ ಪಾಸಿಟಿವ್‌

    ದೇಶದ ಎಲ್ಲ ರಾಜ್ಯಗಳಲ್ಲಿ ಸದ್ಯ ಓಮಿಕ್ರಾನ್ ಪತ್ತೆಯಾಗುತ್ತಿದ್ದು, ಮುಂಬೈ, ದೆಹಲಿ ಸೇರಿದಂತೆ 14 ಮಹಾನಗರಗಳಲ್ಲಿ ಸೋಂಕು ಹೆಚ್ಚುತ್ತಿದೆ. ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಓಮಿಕ್ರಾನ್ ಹರಡುವಿಕೆ ವೇಗವಾಗುತ್ತಿರುವ ಹಿನ್ನೆಲೆಯಲ್ಲಿ ಈ ಪತ್ರವನ್ನು ಬರೆಯಲಾಗಿದ್ದು ತಕ್ಷಣದ ಕ್ರಮಕ್ಕೆ ಸಲಹೆ ನೀಡಿದೆ.

    ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಶ್ಲೇಷಿಸಲಾದ 115 ಕೋವಿಡ್ -19 ಮಾದರಿಗಳಲ್ಲಿ ಶೇ.46 ರಷ್ಟು ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. ವೇಗವಾಗಿ ಹರಡುತ್ತಿರುವ ರೂಪಾಂತರವು ಕ್ರಮೇಣ ಸಮುದಾಯದಲ್ಲಿ ಹರಡುತ್ತಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ. ದೆಹಲಿ ಆಸ್ಪತ್ರೆಗಳಲ್ಲಿ 200 ಕೋವಿಡ್ ರೋಗಿಗಳಿದ್ದು, ಅವರ ಪೈಕಿ 102 ಮಂದಿ ನಗರಕ್ಕೆ ಸೇರಿದವರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಐವರಿಗೆ ಓಮಿಕ್ರಾನ್ ದೃಢ – 43ಕ್ಕೇರಿದ ಸೋಂಕಿತರ ಸಂಖ್ಯೆ

    24 ಗಂಟೆಗಳ ಅವಧಿಯಲ್ಲಿ ಮುಂಬೈನಲ್ಲಿ 2,510 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದು ಶೇ. 82 ಕ್ಕೆ ಜಿಗಿದಿದೆ. ದೆಹಲಿಯಲ್ಲಿ ಬುಧವಾರ 923 ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿನ ಪ್ರಮಾಣ ಶೇ. 86 ರಷ್ಟು ಹೆಚ್ಚಿದೆ. ರಾತ್ರಿ ಕರ್ಫ್ಯೂ, ಸೆಕ್ಷನ್ 144 ಮತ್ತು ಕಡ್ಡಾಯ ವ್ಯಾಕ್ಸಿನೇಷನ್‌ ನಿರ್ಧಾರಗಳನ್ನು ಹಲವು ರಾಜ್ಯಗಳು ಕೈಗೊಂಡಿವೆ. ಪ್ರಕರಣಗಳು ಹೆಚ್ಚಾದಂತೆ ಹೊಸ ವರ್ಷದ ಸಂಭ್ರಮಾಚರಣೆಯನ್ನು ನಿಯಂತ್ರಣದಲ್ಲಿಡಲು ಹಲವಾರು ರಾಜ್ಯಗಳು ಕಠಿಣ ನಿರ್ಬಂಧಗಳನ್ನು ವಿಧಿಸಿವೆ.

  • ಶುಲ್ಕ ಕಟ್ಟಿಲ್ಲ ಎಂದು ವಿದ್ಯಾರ್ಥಿಯನ್ನು ಹೊರ ಹಾಕಿದ ಶಾಲೆ- ಪ್ರಧಾನಿಗೆ ಪತ್ರ ಬರೆದ ವಿದ್ಯಾರ್ಥಿ ತಂದೆ

    ಶುಲ್ಕ ಕಟ್ಟಿಲ್ಲ ಎಂದು ವಿದ್ಯಾರ್ಥಿಯನ್ನು ಹೊರ ಹಾಕಿದ ಶಾಲೆ- ಪ್ರಧಾನಿಗೆ ಪತ್ರ ಬರೆದ ವಿದ್ಯಾರ್ಥಿ ತಂದೆ

    ಮಡಿಕೇರಿ: ಶುಲ್ಕವನ್ನು ಕಟ್ಟಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರ ಹಾಕಿದ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪದಲ್ಲಿ ನಡೆದಿದೆ. ಇದರಿಂದ ಬೇಸತ್ತ ವಿದ್ಯಾರ್ಥಿಯ ತಂದೆ ಬೆಳ್ಳಿಯಪ್ಪ ಎಂಬವರು ಪ್ರಧಾನಿ ಮೋದಿ ಅವರಿಗೆ ಇ ಮೇಲ್ ಮೂಲಕ ಪತ್ರ ಬರೆದು ದೂರು ಸಲ್ಲಿಸಿದ್ದಾರೆ. ಜೊತೆಗೆ ಕೊಡಗು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ್ ಅವರಿಗೂ ದೂರು ನೀಡಿದ್ದಾರೆ.

    ಹೌದು, ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ ಮುತ್ತಣ್ಣ ವಿದ್ಯಾರ್ಥಿ 5ನೇ ತರಗತಿ ಓದುತ್ತಿದ್ದ. ಆದರೆ ಪೋಷಕರು ಪೂರ್ತಿ ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿ ಮುತ್ತಣ್ಣ ಸೇರಿದಂತೆ ಒಟ್ಟು 20 ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಕ್ಕೆ ಹಾಕಿ ಶಾಲೆಯ ಗ್ರಂಥಾಲಯದಲ್ಲಿ ಮೂರು ದಿನಗಳ ಕಾಲ ಕೂರಿಸಿದ್ದರು ಎನ್ನಲಾಗಿದೆ. ವಿಷಯ ತಿಳಿದು ವಿದ್ಯಾರ್ಥಿಯ ತಂದೆ ಬೆಳ್ಳಿಯಪ್ಪ ಶಾಲೆಯ ಆಡಳಿತ ಮಂಡಳಿಯನ್ನು ಪ್ರಶ್ನಿಸಿದ್ದಾರೆ. ಆದರೆ ಶಾಲೆಯಿಂದ ಸರಿಯಾದ ಉತ್ತರ ಬಂದಿಲ್ಲ. ಇದರಿಂದ ಬೇಸರಗೊಂಡ ವಿದ್ಯಾರ್ಥಿ ತಂದೆ, ಪ್ರಧಾನಿ ಮೋದಿಯವರಿಗೆ ಇ-ಮೇಲ್ ಮೂಲಕವೇ ದೂರು ನೀಡಿದ್ದಾರೆ. ಇದನ್ನೂ ಓದಿ: 100 ಕೋಟಿ ರೂ. ಆಸೆಗೆ ಒಂದು ಮೂಕ್ಕಾಲು ಕೋಟಿ ಹಣ ಕಳ್ಕೊಂಡ

    ಈಗಾಗಲೇ ಶಾಲೆಗೆ 60 ಸಾವಿರ ರೂ. ಶುಲ್ಕ ಕಟ್ಟಿದ್ದೇನೆ. ಕೋವಿಡ್ ಕಾಲದಲ್ಲೂ ಶುಲ್ಕ ಜಾಸ್ತಿ ಮಾಡಿ ತೊಂದರೆ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದಾರೆ. ದೂರು ನೀಡಿದ ಬಳಿಕ ಶಾಲಾ ಆಡಳಿತ ಮಂಡಳಿ, ವಿದ್ಯಾರ್ಥಿಯ ಅಜ್ಜಿಯನ್ನು ಕರೆಸಿ ಫೀಸ್ ಕಟ್ಟುವಂತೆ ಸೂಚಿಸಿ ಅಂದಿನಿಂದ ವಿದ್ಯಾರ್ಥಿಯನ್ನು ತರಗತಿಗೆ ಸೇರಿಸಿಕೊಂಡಿದ್ದಾರೆ ಎನ್ನಲಾಗಿದೆ. ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಗುರುವಾರ ಕೊಡಗು ಡಿಡಿಪಿಐ ವೇದಮೂರ್ತಿ ಅವರು ಕೂರ್ಗ್ ಪಬ್ಲಿಕ್ ಶಾಲೆಗೆ ಭೇಟಿ ನೀಡಿದ್ದಾರೆ. ಶಾಲೆಗೆ ವಿದ್ಯಾರ್ಥಿಯ ತಾಯಿ ಮತ್ತು ಅಜ್ಜಿಯನ್ನು ಕರೆಸಿ ಘಟನೆಯ ನೈಜತೆ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಯ ತಾಯಿ ಸ್ನೇಹ ಅವರು, ನಮ್ಮ ಮಗನನ್ನು ಮೂರು ದಿನಗಳ ಕಾಲ ಗ್ರಂಥಾಲಯದಲ್ಲಿ ಕೂರಿಸಿದ್ದಾರೆ. ಬಳಿಕ ನಮ್ಮ ಮಗ ತೀವ್ರ ನೋವಿನಿಂದ ಸಹಾಯವಾಣಿಗೂ ಕರೆ ಮಾಡಿ ಹೇಳಿದ್ದಾನೆ. ಶಾಲೆಯ ವರ್ತನೆಗೆ ಬೇಸತ್ತು ನಮ್ಮ ಪತಿ ಕೂಡ ಜಿಲ್ಲಾಧಿಕಾರಿ, ಬಿಇಓ ಮತ್ತು ಪ್ರಧಾನ ಮಂತ್ರಿಯವರಿಗೂ ದೂರು ನೀಡಿದ್ದರು ಎಂದಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಶಾಲೆಯ ಮ್ಯಾನೇಜರ್ ಮಾನಸಾ, ಇದೆಲ್ಲಾ ಸುಳ್ಳು. ನಮ್ಮ ಶಾಲೆಯ ಹೆಸರು ಹಾಳು ಮಾಡುವುದಕ್ಕಾಗಿ ಇಂತಹ ಹುನ್ನಾರ ನಡೆಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಬೀಗ ಹಾಕಿ ಕೆಲಸಕ್ಕೆ ಹೋಗಿದ್ವಿ, ಬಂದು ನೋಡುವಾಗ ಹೆಲಿಕಾಪ್ಟರ್ ಬಿದ್ದು ಮನೆಗೆ ಹಾನಿಯಾಗಿತ್ತು: ಜೈಶಂಕರ್

    ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಗ್ರಂಥಾಲಯದಲ್ಲಿ ಕೂರಿಸುತ್ತಿದ್ದರು ಎಂಬ ದೂರು ಕೇಳಿಬಂದಿದೆ. ಹೀಗಾಗಿ ಪರಿಶೀಲಿಸಿ ವರದಿ ನೀಡುವಂತೆ ಡಿಡಿಪಿಐ ಅವರಿಗೆ ಸೂಚಿಸಿದ್ದೇನೆ. ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

  • ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ: ಸ್ನೇಹಲ್ ಲೋಖಂಡೆ

    ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ: ಸ್ನೇಹಲ್ ಲೋಖಂಡೆ

    ಕಲಬುರಗಿ: ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ. ನನ್ನ ಮಾನಹಾನಿಯಾಗುತ್ತಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರೂ ಆಗಿರುವ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ಹೇಳಿದ್ದಾರೆ.

    snehal lokhande

    ಮದುವೆಯಾಗುವುದಾಗಿ ನಂಬಿಸಿ ವಂಚಿಸಿರುವುದಾಗಿ ಯುವತಿಯೊಬ್ಬಳು ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ವಿರುದ್ಧ ಗಂಭೀರವಾಗಿ ಆರೋಪಿಸಿದ್ದಳು. ಯುವತಿ ದೆಹಲಿ ಮೂಲದವಳಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿ ಅವರಿಗೆ ಟ್ವಿಟ್ಟರ್ ಮೂಲಕ ಪತ್ರ ಬರೆದು ಲಗತ್ತಿಸಿದ್ದಾಳೆ. ಆ ಪತ್ರದಲ್ಲಿ 2017ರ ಬ್ಯಾಚ್‍ನ ಐಎಎಸ್ ಅಧಿಕಾರಿ ಲೋಖಂಡೆಯು ತನ್ನ ಜೊತೆಗೆ ಹೋಟೆಲ್‍ಗಳಲ್ಲಿ ಕಾಲ ಕಳೆದ, ಹೊರಗಡೆ ಸುತ್ತಾಡಿದ, ವಾಟ್ಸಾಪ್‍ಗಳಲ್ಲಿ ಚಾಟ್ ಮಾಡಿದ್ದ ಬಗ್ಗೆ ದಿನಾಂಕ, ಸ್ಥಳ ಸಮೇತ ವಿವರಿಸಿದ್ದು, ವಾಟ್ಸಾಪ್ ಚಾಟ್ ಅನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಳು. ದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ – ಕಲಬುರಗಿ ಪಾಲಿಕೆ ಆಯುಕ್ತ ಸ್ನೇಹಲ್ ವಿರುದ್ಧ ದೂರು

    ಈ ಕುರಿತಂತೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ. ನನ್ನ ಮಾನಹಾನಿಯಾಗುತ್ತಿದೆ. ನಾನು ಈ ಕುರಿತಂತೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸುತ್ತೇನೆ. ಕಲಬುರಗಿ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ಮಾಹಿತಿ ಕೂಡ ನೀಡಿದ್ದೇನೆ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವತಿ ನನ್ನ ವಿರುದ್ಧ ಮಾಡಿರುವ ಆರೋಪಗಳೆಲ್ಲಾ ಸುಳ್ಳು. ವಾಟ್ಸಾಪ್ ಚಾಟ್, ಫೋಟೋ ಎಲ್ಲವೂ ಕೂಡ ಫೇಕ್. ನನ್ನ ಫೋಟೋ ಅವರಿಗೆ ಹೇಗೆ ಸಿಕ್ಕಿತು ನನಗೆ ಗೊತ್ತಿಲ್ಲ. ಆ ಯುವತಿ ಬರೆದಿರುವ ಪತ್ರವನ್ನು ಓದಿದ್ದೇನೆ. ಅದೆಲ್ಲಾವೂ ಕೂಡ ಸುಳ್ಳು. ಕುಟುಂಬಸ್ಥರಾಗಲಿ, ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮೀಷನರ್ ಯಾರು ಕೂಡ ಸಂಧಾನ ಮಾಡಲು ಪ್ರಯತ್ನಿಸಿಲ್ಲ ಎಂದು ಹೇಳಿದ್ದಾರೆ. ದನ್ನೂ ಓದಿ: ಮದುವೆ ಆಗುವಂತೆ ಯುವತಿಗೆ ಬ್ಲಾಕ್‍ಮೇಲ್- ಠಾಣೆ ಮೆಟ್ಟಿಲೇರಿದ ಪ್ರಕರಣ

    ಮತ್ತೊಂದೆಡೆ ಕಲಬುರಗಿ ಪೊಲೀಸ್ ಆಯುಕ್ತ ರವಿಕುಮಾರ್ ಅವರು, ಯುವತಿ ನಮಗೆ ಲಿಖಿತ ದೂರು ನೀಡಿಲ್ಲ. ಆದರೆ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ದೂರು ನೀಡಿದ್ದಾರೆ. `ಯುವತಿ, ಆಕೆಯ ತಂದೆ-ತಾಯಿ ನಮ್ಮನ್ನು ಭೇಟಿ ಆಗಿದ್ದರು. ಆದರೆ ಈ ಘಟನೆ ದೆಹಲಿಯಲ್ಲಿ ಆಗಿರುವ ಕಾರಣ, ದೆಹಲಿಯಲ್ಲಿಯೇ ದೂರು ನೀಡಬೇಕೆಂದು ಹೇಳಿದ್ದೇವೆ ಎಂದು ಹೇಳಿದ್ದಾರೆ.

  • ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ – ಕಲಬುರಗಿ ಪಾಲಿಕೆ ಆಯುಕ್ತ ಸ್ನೇಹಲ್ ವಿರುದ್ಧ ದೂರು

    ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ – ಕಲಬುರಗಿ ಪಾಲಿಕೆ ಆಯುಕ್ತ ಸ್ನೇಹಲ್ ವಿರುದ್ಧ ದೂರು

    ಕಲಬುರಗಿ: ಐಎಎಸ್ ಅಧಿಕಾರಿಯೊಬ್ಬರು ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ.

    ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರೂ ಆಗಿರುವ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ಮದುವೆಯಾಗುವುದಾಗಿ ನಂಬಿಸಿ ಆಕೆಗೆ ವಂಚನೆ ಮಾಡಿರುವುದಾಗಿ ಯುವತಿ ಗಂಭೀರವಾಗಿ ಆರೋಪಿಸಿದ್ದಾಳೆ.

    ಯುವತಿ ದೆಹಲಿ ಮೂಲದವಳಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿ ಅವರಿಗೆ ಟ್ವಿಟ್ಟರ್ ಮೂಲಕ ಪತ್ರ ಬರೆದು ಲಗತ್ತಿಸಿದ್ದಾಳೆ. ಆ ಪತ್ರದಲ್ಲಿ 2017ರ ಬ್ಯಾಚ್‍ನ ಐಎಎಸ್ ಅಧಿಕಾರಿ ಲೋಖಂಡೆಯು ತನ್ನ ಜೊತೆಗೆ ಹೋಟೆಲ್‍ಗಳಲ್ಲಿ ಕಾಲ ಕಳೆದ, ಹೊರಗಡೆ ಸುತ್ತಾಡಿದ, ವಾಟ್ಸಾಪ್‍ಗಳಲ್ಲಿ ಚಾಟ್ ಮಾಡಿದ್ದ ಬಗ್ಗೆ ದಿನಾಂಕ, ಸ್ಥಳ ಸಮೇತ ವಿವರಿಸಿದ್ದು, ವಾಟ್ಸಾಪ್ ಚಾಟ್‍ನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ.

    ಈ ಸಂಬಂಧ ಸ್ನೇಹಲ್ ಲೋಖಂಡೆ ಅವರು ಯುವತಿ ನನಗೆ ಪರಿಚಯವಷ್ಟೇ, ಆದರೆ ಆಕೆ ಮಾಡಿರುವ ಆರೋಪಗಳೆಲ್ಲವೂ ಸುಳ್ಳು. ಹೀಗಾಗಿ ಯುವತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ದನ್ನೂ ಓದಿ: ಮದುವೆ ಆಗುವಂತೆ ಯುವತಿಗೆ ಬ್ಲಾಕ್‍ಮೇಲ್- ಠಾಣೆ ಮೆಟ್ಟಿಲೇರಿದ ಪ್ರಕರಣ

    ಯುವತಿ ಬರೆದಿರುವ ಪತ್ರದಲ್ಲಿ ಏನಿದೆ:
    `ಯುಪಿಎಸ್‍ಸಿ ಪರೀಕ್ಷೆ ಬರೆಯುತ್ತಿದ್ದಾಗ ಫೇಸ್‍ಬುಕ್‍ನಲ್ಲಿ ಪರಿಚಯವಾಗಿದ್ದ ಸ್ನೇಹಲ್ ಲೋಖಂಡೆ ನನ್ನ ಮೇಲೆ ಆಸಕ್ತಿ ತೋರಿಸಿದರು. ಮೇ 26, 2019ರಂದು ದೆಹಲಿಯಲ್ಲಿ ನನ್ನನ್ನು ಭೇಟಿ ಆಗಿದ್ದ ಸ್ನೇಹಲ್ ಮೂರು ದಿನ ನನ್ನ ಜೊತೆಗೆ ಇದ್ದರಲ್ಲದೇ ನನ್ನ ಮದ್ವೆ ಆಗುವುದಾಗಿ ಮಾತುಕೊಟ್ಟಿದ್ದರು. ನನ್ನ ಜೊತೆಗೆ ಇರುವ ಸಲುವಾಗಿಯೇ ಟ್ರೈನಿಂಗ್‍ಗಾಗಿ ದೆಹಲಿಗೆ ಬಂದಿದ್ದ ಸ್ನೇಹಲ್ ಬಸ್ ಮಿಸ್ ಮಾಡ್ಕೊಂಡು ದೆಹಲಿಯಲ್ಲೇ ನನ್ನ ಒಂದು ದಿನ ಇದ್ದರು. ನನ್ನ ಹುಟ್ಟುಹಬ್ಬ ಆಚರಿಸಲು ನನ್ನ ತಾಯಿಯ ಅನುಮತಿ ಪಡೆದು ಜುಲೈ 8ರಂದು ಹೌನ್ಜ್ ಖಾಸ್‍ಗೆ ಮಧ್ಯರಾತ್ರಿ ಹೋಗಿದ್ದೆವು. ಜುಲೈ 20, 2019ರಂದು ನನ್ನನ್ನು ಮದ್ವೆ ಆಗುವುದಾಗಿ ಹೇಳಿದ್ದ ಅವರು, ಕೆ ಜಿ ಮಾರ್ಗ್‍ನಲ್ಲಿರುವ ತನ್ನ ಹಾಸ್ಟೆಲ್‍ಗೆ ಬರುವಂತೆ ಹೇಳಿ ಅಲ್ಲಿ ನಾವಿಬ್ಬರೂ ಒಂದು ರಾತ್ರಿ ಜೊತೆಯಾಗಿ ಕಳೆದಿದ್ವಿ. ಮರು ದಿನ ನನ್ನನ್ನು ಭೇಟಿ ಆಗಿದ್ದ ಅವರು ಐ-ಪಿಲ್ ಮಾತ್ರೆ ತೆಗೆದುಕೊಳ್ಳುವಂತೆ ಹೇಳಿದ್ದರು.

    ಆಗಸ್ಟ್ 4ರಂದು ರಾಯಲ್ ಪ್ಲಾಜಾದಲ್ಲಿ ಅವರು ರೂಂ ಬುಕ್ ಮಾಡಿದ್ದರು, ಅವತ್ತು ಅಲ್ಲಿ ಒಟ್ಟಿಗೆ ಉಳಿದುಕೊಂಡೆವು. ದೆಹಲಿಯಲ್ಲಿ ತರಬೇತಿಗೆ ಬಂದಿದ್ದ ವೇಳೆ ಅವರು ನನ್ನನ್ನು ಪ್ರತಿನಿತ್ಯ ಭೇಟಿ ಆಗುತ್ತಿದ್ದರು. ನಾನು ಎಲ್ಲವನ್ನೂ ನನ್ನ ತಾಯಿಗೆ ಹೇಳಿದ ಬಳಿಕ ನನ್ನ ತಾಯಿ ಅವರ ಹಾಸ್ಟೆಲ್‍ನಲ್ಲಿ ಭೇಟಿ ಆಗಿ ಮದ್ವೆ ಬಗ್ಗೆ ಮಾತಾಡಿದರು ಮತ್ತು ಆಗ ಮದುವೆಗೆ ನನಗೆ ಸ್ವಲ್ಪ ಟೈಂ ಬೇಕು ಎಂದು ಹೇಳಿದ್ದರು. ಕರ್ನಾಟಕದ ಇಂಡಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಆದ ಬಳಿಕ ಅವರು ನನ್ನನ್ನು ದೂರವಿರಿಸಲು ಶುರು ಮಾಡಿದರು, ನಾನು ಕರೆ ಮಾಡಿದಾಗಲೆಲ್ಲ ಬ್ಯುಸಿ ಇರುವುದಾಗಿ ಹೇಳುತ್ತಿದ್ದರು. 2020ರ ಜನವರಿ 26ರಂದು ನನ್ನ ಹೆತ್ತವರು ಇಂಡಿಗೆ ತೆರಳಿ ಅವರ ತಂದೆ ಸುಧಾಕರ್ ಲೋಖಂಡೆ ಜೊತೆಗೆ ಮಾತಾಡಿದರು ಮತ್ತು ಅವರು ನಾಗ್ಪುರದಲ್ಲಿರುವ ತಮ್ಮ ಸಹೋದರನ ಜೊತೆಗೆ ಆದಷ್ಟು ಬೇಗ ಮಾತಾಡುವುದಾಗಿಯೂ ಮತ್ತು ಶೀಘ್ರವೇ ದೆಹಲಿಗೆ ಬರುವುದಾಗಿಯೂ ಹೇಳಿದ್ದರು. 15 ದಿನಗಳ ಬಳಿಕ ನನ್ನ ತಂದೆ ಸುಧಾಕರ್ ಲೋಖಂಡೆಗೆ ಕರೆ ಮಾಡಿದಾಗ ಅವರು ಕೆಟ್ಟದಾಗಿ ಮಾತಾಡಿದರು ಮತ್ತು ನಿಮ್ಮ ಮಗಳು ನನ್ನ ಮಗನ ಎದುರು ನಿಲ್ಲಲು ಯೋಗ್ಯಳಲ್ಲ ಎಂದರು. ಆ ಬಳಿಕ ಸ್ನೇಹಲ್ ಲೋಖಂಡೆಯಾಗಲೀ ಅವರ ತಂದೆಯಾಗಲೀ ನಮಗೆ ಕರೆ ಮಾಡಿಲ್ಲ. ನನ್ನನ್ನು ಬಳಸಿಕೊಂಡು ನನ್ನ ಜೀವನ ಹಾಳು ಮಾಡಿರುವುದು ಇದರಿಂದ ಸ್ಪಷ್ಟವಾಗುತ್ತದೆ. ದನ್ನೂ ಓದಿ: ಒಳ್ಳೆ ಬುದ್ಧಿ ಕಲಿಯಿರಿ ಎಂದಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಕೊಲೆಗೈದ ಬಾಲಕರು!

    ಅವರಿಗೆ (ಸ್ನೇಹಲ್‍ಗೆ) ಈ ಮೊದಲು ಒಂದು ಸಂಬಂಧವಿತ್ತು ಮತ್ತು ಅವರ ಸ್ನೇಹಿತೆ ಆ ಸಂಬಂಧದ ಅವಧಿಯಲ್ಲಿ ಐ-ಪಿಲ್ ಮಾತ್ರೆಗಳನ್ನು ತೆಗೆದುಕೊಳ್ಳುತ್ತಲೇ ಇದ್ದರು. ಆಕೆ ಮದುವೆ ಆಗುವಂತೆ ಕೇಳಿದಾಗ ಆಕೆಯಿಂದ ದೂರ ಆಗಿದ್ದಾಗಿ ಅವರೇ ನನಗೆ ಆರಂಭದಲ್ಲಿ ಹೇಳಿದ್ದರು. ಹುದ್ದೆ ಮತ್ತು ಪ್ರತಿಷ್ಠೆ ಬಳಸಿಕೊಂಡು ಹುಡುಗಿಯರನ್ನು ಆಕರ್ಷಿಸಿ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ನನ್ನ ಜೊತೆಗೆ 2 ವರ್ಷ ಸಂಬಂಧದಲ್ಲಿದ್ದ ನನಗೂ ಹಾಗೇ ಮಾಡಿದ್ದಾರೆ. ಮದ್ವೆಯ ನೆಪದಲ್ಲಿ ನನ್ನನ್ನು ಬಳಸಿಕೊಂಡಿದ್ದಾರೆ. ಇತರ ವೈಯಕ್ತಿಕ, ದೈಹಿಕ ಮತ್ತು ಮಾನಸಿಕ ಜೀವನದಲ್ಲಿ ಆಟ ಆಡುವ ಈ ವ್ಯಕ್ತಿಯನ್ನು ಶಿಕ್ಷಿಸಬೇಕು. ಅವರು ಜೈಲಿನಲ್ಲಿರಬೇಕು, ಇಲ್ಲವಾದರೆ ಅವರು ಇಂತಹ ಕೆಲಸಗಳನ್ನು ಮಾಡುತ್ತಲೇ ಇರುತ್ತಾರೆ. ಇಂತಹ ಅಪರಾಧಕ್ಕಾಗಿ ಅವರು ಜೈಲಿನಲ್ಲಿರಬೇಕು.

    ಈ ಹಿನ್ನೆಲೆಯಲ್ಲಿ ನಾನು ಗೌರವಾನ್ವಿತ ಪ್ರಾಧಿಕಾರದಿಂದ ನ್ಯಾಯವನ್ನು ನಿರೀಕ್ಷಿಸುತ್ತಿದ್ದೇನೆ ಮತ್ತು ಪ್ರಾಧಿಕಾರ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಯುವತಿ ಮನವಿ ಮಾಡಿದ್ದಾಳೆ.

  • ಅಭಿಮಾನ ಆವೇಶವಾಗಬಾರದು, ಅಭಿಮಾನ ಹಾಡಿನಂತಿರಬೇಕು: ಪತ್ರ ಬರೆದ ಹಂಸಲೇಖ

    ಅಭಿಮಾನ ಆವೇಶವಾಗಬಾರದು, ಅಭಿಮಾನ ಹಾಡಿನಂತಿರಬೇಕು: ಪತ್ರ ಬರೆದ ಹಂಸಲೇಖ

    ಬೆಂಗಳೂರು: ಇತ್ತೀಚೆಗಷ್ಟೇ ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆಯೊಂದನ್ನು ನೀಡಿದ ಬಳಿಕ ಕ್ಷಮೆ ಕೇಳಿದ್ದ ಹಂಸಲೇಖ ಅವರು ತಮ್ಮ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿ ಕುರಿತು ಸ್ಪಷ್ಟನೆ ನೀಡಿದ್ದಾರೆ.

    ತಮ್ಮ ಆರೋಗ್ಯ ಕ್ಷೇಮವಾಗಿದ್ದು, ಯಾರು ಭಯ ಪಡುವ ಅಗತ್ಯವಿಲ್ಲ. ಸರ್ಕಾರ ಎಲ್ಲ ರೀತಿಯ ಭದ್ರತೆಯನ್ನು ನೀಡಿದೆ ಹಾಗೂ ಲಕ್ಷಾಂತರ ಅಭಿಮಾನಿಗಳು ನನಗೆ ಧೈರ್ಯ ತುಂಬಿದ್ದಾರೆ ಎಂದು ನಾದ ಬ್ರಹ್ಮ ಹಂಸಲೇಖ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಕೇಳಲಿದೆ ಜೆಸಿಬಿ ಸದ್ದು – ಶೀಘ್ರವೇ ರಾಜಕಾಲುವೆ ಒತ್ತುವರಿ ತೆರವು

    ಪೋಸ್ಟ್‌ನಲ್ಲಿ ಏನಿದೆ?
    ಪೂಜ್ಯ ಕರ್ನಾಟಕವೇ.. ನಾನು ಆರೋಗ್ಯವಾಗಿದ್ದೇನೆ. ನನಗೆ ಆರೋಗ್ಯ ತಪ್ಪಿದೆ ಎಂದು ಇಡೀ ಕರ್ನಾಟಕದಿಂದ ಕರೆಗಳು ಬರುತ್ತಿವೆ. ಎಲ್ಲರೂ ಆರೋಗ್ಯದ ಕುರಿತು ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿಯನ್ನು ಪಡೆಯೋಕೆ ನಾನು ತುಂಬಾನೇ ಸವೆದಿದ್ದೀನಿ. ಸಹಿಸಿದ್ದೀನಿ. ಇದರ ಸುಖ ಇವತ್ತು ಅನುಭವಿಸುತ್ತಿದ್ದೀನಿ.

    ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆಯನ್ನು ಕೊಟ್ಟಿದೆ. ಇಡೀ ಕರ್ನಾಟಕದ ಲಕ್ಷಾಂತರ ಜನ ಅಭಿಮಾನಿಗಳು ನನ್ನ ಪರವಾಗಿ ಮಾತನಾಡುತ್ತಿದ್ದಾರೆ. ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸಿದ್ದಾರೆ. ಇದನ್ನೂ ಓದಿ: ಇಳಕಲ್ ಸೀರೆಯುಟ್ಟು ಹಾಟ್ ಪೋಸ್ ಕೊಟ್ಟ ರಾಗಿಣಿ

    ಅಭಿಮಾನ ಆವೇಶವಾಗಬಾರದು, ಆವೇಶ ಅವಗಢಗಳಿಗೆ ಕಾರಣವಾಗಬಾರದು. ಅಭಿಮಾನ ಹಾಡಿನಂತಿರಬೇಕು. ಹಾಡು ಕೇಳಿಸುತ್ತದೆ. ಹಾಡು ಮುಟ್ಟುಸುತ್ತದೆ ಎಂದು ಹಂಸಲೇಖ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾರೆ.

  • ಕೂಡಲೇ ಸಭೆ ಕರೆಯಿರಿ – ಸೋನಿಯಾಗೆ ಪತ್ರ ಬರೆದು ಸಿಧು ಆಗ್ರಹ

    ಕೂಡಲೇ ಸಭೆ ಕರೆಯಿರಿ – ಸೋನಿಯಾಗೆ ಪತ್ರ ಬರೆದು ಸಿಧು ಆಗ್ರಹ

    ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪಂಜಾಬ್ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮುಂದೆ ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪ್ರಚಾರ ಕಾರ್ಯಗಳ ಸಂಬಂಧ ಪತ್ರ ಬರೆದಿದ್ದಾರೆ.

    ಅಕ್ಟೋಬರ್ 15ರಂದೇ ಸಿಧು ಪತ್ರ ಬರೆದಿದ್ದು, ಇಂದು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ರಾಹುಲ್ ಗಾಂಧಿ ಮತ್ತು ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಪಂಜಾಬ್ ಕಾಂಗ್ರೆಸ್‍ನ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆದ ಸಿಧು, ಎಲ್ಲವೂ ಬಗೆಹರಿದಿದೆ ಎಂದು ಪ್ರತಿಕ್ರಿಯಿಸಿದ್ದರು. ಅದರ ಬೆನ್ನಲ್ಲೇ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವುದು ಕೂತುಹಲ ಕೆರಳಿಸಿದೆ. ಇನ್ಮುಂದೆ ತಪ್ಪು ಮಾಡಲ್ಲ, ಬಡವರಿಗೆ ನೆರವಾಗುತ್ತೇನೆ: ಆರ್ಯನ್ ಖಾನ್

    ಪತ್ರದಲ್ಲಿ ಏನಿದೆ: ಧರ್ಮ ಅಪವಿತ್ರಗೊಳಿಸಿದ ಪ್ರಕರಣಗಳಲ್ಲಿ ನ್ಯಾಯ, ಪಂಜಾಬ್‍ನ ಡ್ರಗ್ಸ್ ಕಿರುಕುಳ, ಕೃಷಿ ವಿಚಾರಗಳು, ಉದ್ಯೋಗ ಅವಕಾಶಗಳು, ಮರಳು ಗಣಿಗಾರಿಕೆ ಹಾಗೂ ಹಿಂದುಳಿದ ವರ್ಗಗಳ ಉನ್ನತಿ ಕುರಿತ ಅಂಶಗಳು ಪಕ್ಷದ ಪ್ರಚಾರ ಕಾರ್ಯಸೂಚಿಯಲ್ಲಿವೆ. ಮುಂದಿನ ವರ್ಷ ಪಂಜಾಬ್ ವಿಧಾನಸಭೆಗೆ ಚುನಾವಣೆ ನಿಗದಿಯಾಗಿದ್ದು, ಹದಿಮೂರು ಅಂಶಗಳನ್ನು ಒಳಗೊಂಡ ಕಾರ್ಯಸೂಚಿಯನ್ನು ಪ್ರಸ್ತುತ ಪಡಿಸಲು ಸಭೆ ಸೇರುವ ಕುರಿತು ಸಿಧು ಸೋನಿಯಾ ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಮಹಾರಾಣಿ ಧಿರಿಸಿನಲ್ಲಿ ಮೇಘನಾ ಫುಲ್ ಮಿಂಚಿಂಗ್