Tag: licence

  • ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಶಾಕ್ – ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ರದ್ದು

    ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಶಾಕ್ – ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ರದ್ದು

    – ಮೊದಲು ನೋಟಿಸ್, ಆಮೇಲೆ ದಂಡಂ ದಶಗುಣಂ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪಬ್, ಕ್ಲಬ್, ಹೋಟೆಲ್, ಬಾರ್‌ಗಳಿಗೆ ಬಿಬಿಎಂಪಿ (BBMP) ಬಿಗ್‌ಶಾಕ್ ನೀಡಿದೆ. ಬಿಬಿಎಂಪಿ ನೋಟಿಸ್ ಜಾರಿ ಮಾಡಿದರೂ ಪ್ರತಿಕ್ರಿಯಿಸದ ಹೋಟೆಲ್‌ಗಳು, ಪಬ್, ಕ್ಲಬ್, ರೆಸ್ಟೋರೆಂಟ್ ಪರವಾನಗಿ (Licence) ರದ್ದು ಮಾಡಲು ಬಿಬಿಎಂಪಿ ಮುಂದಾಗಿದೆ.

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಳೆದ 15 ದಿನಗಳ ಹಿಂದೆ ಸುಮಾರು 300ಕ್ಕೂ ಹೆಚ್ಚು ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ ನೋಟಿಸ್ ಜಾರಿ ಮಾಡಿತ್ತು. ಸ್ಮೋಕಿಂಗ್ ಝೋನ್  (Smoking Zone) ನಿರ್ಮಾಣ ಮಾಡಿಲ್ಲ ಅಂತಾ ನೋಟಿಸ್ ನೀಡಿ ಎಚ್ಚರಿಸಿತ್ತು. ನೋಟಿಸ್ ಜಾರಿ ಮಾಡಿದರೂ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳು ಸರಿಪಡಿಸಿಕೊಂಡಿಲ್ಲ ಎಂಬ ಮಾಹಿತಿ ಬಿಬಿಎಂಪಿ ಪರಿಶೀಲನೆ ವೇಳೆ ಗೊತ್ತಾಗಿದೆ. ಹೀಗಾಗಿ ಅಂತಹ ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ ಬಿಸಿ ಮುಟ್ಟಿಸಲು ಪಾಲಿಕೆ ಮುಂದಾಗಿದೆ. ಇದನ್ನೂ ಓದಿ: ಪ್ರವಾಸಿಗರಿಗೆ ಹುಡುಗಿಯರು ಮತ್ತು ಮಹಿಳೆಯರು ಲಭ್ಯವಿದ್ದಾರೆ – ಸಾಮಾಜಿಕ ಜಾಲತಾಣದಲ್ಲಿ ಕೊಡಗಿನ ಬಗ್ಗೆ ಅಪಪ್ರಚಾರ

    ಇನ್ನೂ ಬಿಬಿಎಂಪಿ ಮುಂದಿನ ವಾರ ನೋಟಿಸ್ ನೀಡಿದ್ದ ಸ್ಥಳಗಳನ್ನು ಪರಿಶೀಲನೆ ನಡೆಸಲಿದೆ. ಪರಿಶೀಲನೆ ನಡೆಸಿ ನೋಟಿಸ್ ಕೊಟ್ಟ ಮೇಲೂ ಸ್ಮೋಕಿಂಗ್ ಝೋನ್ ಅಳವಡಿಸಿಕೊಂಡಿಲ್ಲ ಎಂಬುದು ಕಂಡು ಬಂದರೆ ಪರವಾನಗಿ ರದ್ದು ಮಾಡಲಿದ್ದಾರೆ. ಇದನ್ನೂ ಓದಿ:ಬುರುಡೆ ಗ್ಯಾಂಗ್‌ ಹೇಳಿದಂತೆ ನಾನು ಮಾಡಿದ್ದೇನೆ – ಎಸ್‌ಐಟಿ ಪ್ರಶ್ನೆಗಳಿಗೆ ಸುಜಾತ ಥಂಡಾ

    ಬೆಂಗಳೂರಿನಲ್ಲಿರುವ ಎಲ್ಲಾ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳು ನಿಯಮಾನುಸಾರ ಕ್ರಮವಹಿಸಬೇಕು. ಸ್ಮೋಕಿಂಗ್ ಝೋನ್ ಕಡ್ಡಾಯ ಇರಲೇಬೇಕು. ಇಲ್ಲದೇ ಹೋದರೆ ಕೇಸ್ ಹಾಕಿ ಪರವಾನಗಿ ರದ್ದು ಮಾಡಲು ಬಿಬಿಎಂಪಿ ಮುಂದಾಗಿದೆ. ಇದನ್ನೂ ಓದಿ: ಚಾಮುಂಡೇಶ್ವರಿ ದೇವಸ್ಥಾನ ಹಿಂದೂ ದೇಗುಲವಲ್ಲದೇ ಇದ್ದಿದ್ರೆ ಮುಜರಾಯಿ ವ್ಯಾಪ್ತಿಗೆ ತರುತ್ತಿರಲಿಲ್ಲ – ಪ್ರಮೋದಾ ದೇವಿ ಒಡೆಯರ್‌

  • ಪಂಜಾಬ್‍ನಲ್ಲಿ ಗನ್ ಸಂಸ್ಕೃತಿ ವಿರುದ್ಧ ಕ್ರಮ – ರಾಜ್ಯದಲ್ಲಿ 813 ಗನ್ ಪರವಾನಗಿ ರದ್ದು

    ಪಂಜಾಬ್‍ನಲ್ಲಿ ಗನ್ ಸಂಸ್ಕೃತಿ ವಿರುದ್ಧ ಕ್ರಮ – ರಾಜ್ಯದಲ್ಲಿ 813 ಗನ್ ಪರವಾನಗಿ ರದ್ದು

    ಚಂಡೀಗಢ: ಪಂಜಾಬ್‍ನಲ್ಲಿ (Punjab) ಗನ್ ಸಂಸ್ಕೃತಿ (Gun Culture) ವಿರುದ್ಧ ಭಗವಂತ್ ಮಾನ್ ನೇತೃತ್ವದ ಸರ್ಕಾರ ಪ್ರಮುಖ ಕ್ರಮವನ್ನು ಕೈಗೊಂಡಿದ್ದು, ರಾಜ್ಯದಲ್ಲಿ 813 ಬಂದೂಕುಗಳ ಪರವಾನಗಿಯನ್ನು ರದ್ದುಗೊಳಿಸಿದೆ.

    ಭಗವಂತ್ ಮಾನ್ (Bhagwant Mann) ಸರ್ಕಾರವು ಲೂಧಿಯಾನ ಗ್ರಾಮಾಂತರದಿಂದ 87, ಶಹೀದ್ ಭಗತ್ ಸಿಂಗ್ ನಗರದಿಂದ 48, ಗುರುದಾಸ್‍ಪುರದಿಂದ 10, ಫರೀದ್‍ಕೋಟ್‍ನಿಂದ 84, ಪಠಾಣ್‍ಕೋಟ್‍ನಿಂದ 199, ಹೋಶಿಯಾಪುರದಿಂದ 47, ಕಪುರ್ತಲಾದಿಂದ 6, ಎಸ್‍ಎಎಸ್ ಕಸ್ಬಾದಿಂದ 235 ಮತ್ತು ಸಂಗ್ರೂರ್‍ನಿಂದ 16 ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ. ಅಮೃತಸರ ಕಮಿಷನರೇಟ್‍ನ 27 ಮತ್ತು ಜಲಂಧರ್ ಕಮಿಷನರೇಟ್‍ನ 11 ಮತ್ತು ಇತರ ಹಲವು ಜಿಲ್ಲೆಗಳ ಶಸ್ತ್ರಾಸ್ತ್ರ ಪರವಾನಗಿಯನ್ನು (Licence) ಸಹ ರದ್ದುಗೊಳಿಸಲಾಗಿದೆ. ಪಂಜಾಬ್ ಸರ್ಕಾರ ಇದುವರೆಗೆ 2,000 ಕ್ಕೂ ಹೆಚ್ಚು ಶಸ್ತ್ರಾಸ್ತ್ರ ಪರವಾನಗಿಗಳನ್ನು ರದ್ದುಗೊಳಿಸಿದೆ.

    ಬಂದೂಕುಗಳನ್ನು ಇಟ್ಟುಕೊಳ್ಳುವವರು ನಿಯಮಗಳನ್ನು ಅನುಸರಿಸಬೇಕು. ಪಂಜಾಬ್‍ನಲ್ಲಿ ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಸ್ಥಳಗಳು, ಮದುವೆ ಸಮಾರಂಭಗಳು ಅಥವಾ ಇತರ ಯಾವುದೇ ಕಾರ್ಯಕ್ರಮಗಳಲ್ಲಿ ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯಲು ಹಾಗೂ ಪ್ರದರ್ಶಿಸುವುದಕ್ಕೆ ನಿಷೇಧ ಹೇರಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

    ಪಂಜಾಬ್‍ನಲ್ಲಿ ಒಟ್ಟು 3,73,053 ಶಸ್ತ್ರಾಸ್ತ್ರ ಪರವಾನಗಿಗಳಿವೆ. ಬಂದೂಕು ಸಂಸ್ಕøತಿಯನ್ನು ಕೊನೆಗಾಣಿಸಲು ನಿರಂತರವಾಗಿ ಕ್ರಮ ಕೈಗೊಳ್ಳುತ್ತಿರುವುದಾಗಿ ಪಂಜಾಬ್ ಸರ್ಕಾರ ಹೇಳಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಮೋದಿ ರೋಡ್ ಶೋ – ಸ್ವಾಗತಿಸಲು ನಿಂತಿದ್ದ ಅಭಿಮಾನಿಗಳಿಗೆ ಪ್ರಧಾನಿ ಪುಷ್ಪಾರ್ಚನೆ

    ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಯು ಗನ್ ಸಂಸ್ಕೃತಿಯ ಪರ-ವಿರೋಧ ಬಗ್ಗೆ ತೀವ್ರ ಚರ್ಚೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ನಿಯಂತ್ರಣ ಮಾಡಬೇಕು ಎಂಬುದು ಹೆಚ್ಚಾಗಿ ಕೇಳಿ ಬಂದಿತ್ತು.  ಇದನ್ನೂ ಓದಿ: ಕಾಂಗ್ರೆಸ್ ಕೌರವರನ್ನು ಪಾಂಡವರಂತೆ ಸದೆಬಡಿಯುತ್ತೇವೆ: ಶ್ರೀರಾಮುಲು

  • ಲೈಸೆನ್ಸ್ ರಿನ್ಯೂವಲ್ ಮಾಡಿಲ್ಲ- ಅಂಗಡಿ ವ್ಯಾಪಾರಿಗೆ ಜನಪ್ರತಿನಿಧಿಯಿಂದ ಹಲ್ಲೆ

    ಲೈಸೆನ್ಸ್ ರಿನ್ಯೂವಲ್ ಮಾಡಿಲ್ಲ- ಅಂಗಡಿ ವ್ಯಾಪಾರಿಗೆ ಜನಪ್ರತಿನಿಧಿಯಿಂದ ಹಲ್ಲೆ

    ಮಡಿಕೇರಿ: ಲೈಸೆನ್ಸ್ (License) ರಿನ್ಯೂವಲ್ ಮಾಡಿಲ್ಲ ಎಂದು ಚಿಪ್ಸ್ ಅಂಗಡಿ ಮಾಲೀಕನಿಗೆ ಜನಪ್ರತಿನಿಧಿಯೋರ್ವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ನಗರದ ಗೌರಿಕೆರೆ ವಾರ್ಡಿನಲ್ಲಿ ನಡೆದಿದೆ.

    ಚಿಪ್ಸ್ ಅಂಗಡಿ ಹಾಗೂ ಬೇಕರಿ ವ್ಯಾಪಾರಿ ನಡೆಸುತ್ತಿದ್ದ ಅಂಗಡಿ ಮಾಲೀಕ ಕಾರ್ತಿಕ್ ಮೇಲೆ ವಿರಾಜಪೇಟೆ ಪುರಸಭೆ ಕಾಂಗ್ರೆಸ್‍ನ ಸದಸ್ಯ ಪೃಥ್ವಿನಾಥ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿರಾಜಪೇಟೆ ಪುರಸಭೆ ಹೊರಗುತ್ತಿಗೆ ನೌಕರ ಸಣ್ಣು ಎಂಬಾತನು ಅಂಗಡಿ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ (CC Camera) ಸೆರೆಯಾಗಿದೆ.

    ಬೇಕರಿ ಮಾಲೀಕ ಒಂದು ವರ್ಷದಿಂದ ವ್ಯಾಪಾರ ಲೈಸೆನ್ಸ್ ಪಡೆದಿಲ್ಲವೆಂದು ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದ ಅಂಗಡಿ ಮಾಲೀಕ ಕಾರ್ತಿಕ್‍ನಿಂದ ವಿರಾಜಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೇ ಜನಪ್ರತಿನಿಧಿ ಮಾಡಿರುವ ಹಲ್ಲೆಯನ್ನು ಸಾರ್ವಜನಿಕರು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಶಾರೀಕ್‌ ಬಳಿಯಿದ್ದ ಕುಕ್ಕರ್‌ ಬಾಂಬ್‌ಗೆ ಬಸ್ಸನ್ನೇ ಸ್ಫೋಟಿಸುವ ಸಾಮರ್ಥ್ಯ ಇತ್ತು

    ಅಷ್ಟೇ ಅಲ್ಲದೆ ವಿರಾಜಪೇಟೆ ಪಟ್ಟಣ ಪಂಚಾಯತಿ ಮುಂಭಾಗ ಸಾರ್ವಜನಿಕರು ಹಾಗೂ ಇತರೆ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿ ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿರಾಜಪೇಟೆ ಮುಖ್ಯಕಾರ್ಯನಿರ್ವಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ದಿಢೀರ್ ಕಾಂಗ್ರೆಸ್‌ಗೆ ಗುಡ್‌ಬೈ – 300ಕ್ಕೂ ಹೆಚ್ಚು ಕಾರ್ಯಕರ್ತರು BJP ಸೇರ್ಪಡೆ

    Live Tv
    [brid partner=56869869 player=32851 video=960834 autoplay=true]

  • ರಾಜ್ಯಾದ್ಯಂತ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿದ ಸರ್ಕಾರ

    ರಾಜ್ಯಾದ್ಯಂತ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿದ ಸರ್ಕಾರ

    ಬೆಂಗಳೂರು: ಕರ್ನಾಟಕದಲ್ಲಿ (Karnataka) ಆಜಾನ್ (Azaan) ದಂಗಾಲ್ ಹಿನ್ನೆಲೆ ಪರವಾನಗಿ ಇಲ್ಲದೇ ಲೌಡ್ ಸ್ಪೀಕರ್ (Loudspeaker) ಬಳಸುವಂತಿಲ್ಲ ಎಂದು ಸರ್ಕಾರ ನಿರ್ಬಂಧ ಹೇರಿತ್ತು. ಆ ಬಳಿಕ ಇದೀಗ ಪರವಾನಿಗೆ ನೀಡಿ ಒಟ್ಟು 10,889 ಮಸೀದಿಗಳಿಗೆ (Mosques)  ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿದೆ.

    loudspeakers

    ಆಜಾನ್ ವಿರುದ್ಧ ವಿರೋಧ ಕೇಳಿ ಬಂದ ಬಳಿಕ ರಾಜ್ಯ ಸರ್ಕಾರ ಲೌಡ್ ಸ್ಪೀಕರ್‌ಗೆ ಬ್ರೇಕ್ ಹಾಕಲು ಮುಂದಾಗಿತ್ತು. ಪರವಾನಗಿ ಇಲ್ಲದೇ ಲೌಡ್ ಸ್ಪೀಕರ್ ಬಳಸುವಂತಿಲ್ಲ ಎಂದು ನಿರ್ಬಂಧ ಹೇರಲಾಗಿತ್ತು. ಆ ಬಳಿಕ ಪರವಾನಿಗೆ ನೀಡಲು ಮಸೀದಿ, ದೇವಾಲಯ (Temples), ಚರ್ಚ್‍ಗಳಿಗೆ (Churche) ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ನೀಡಿತ್ತು. ಪರವಾನಗಿ ನೀಡುವ ಅಧಿಕಾರವನ್ನು ಸರ್ಕಾರ ರಾಜ್ಯ ಪೊಲೀಸರಿಗೆ ನೀಡಿತ್ತು. ಈ ಹಿನ್ನೆಲೆ ಮಂದಿರ, ಮಸೀದಿ, ಚರ್ಚ್‍ಗಳಿಂದ 17 ಸಾವಿರಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ರಾಜ್ಯಾದ್ಯಂತ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿ ಕರ್ನಾಟಕ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಈ ಬಾರಿ ಸಂಪುಟ ವಿಸ್ತರಣೆಯೋ, ಪುನರ್‌ ರಚನೆಯೋ ಕಾದು ನೋಡಿ: ಬೊಮ್ಮಾಯಿ

    loud speaker

    17 ಸಾವಿರದ 850 ಅರ್ಜಿಗಳ ಪೈಕಿ 10 ಸಾವಿರ ಅರ್ಜಿಗಳಿಗೆ ಸರ್ಕಾರ ಎರಡು ವರ್ಷಗಳ ಅವಧಿಗೆ ಅನುಮತಿ ನೀಡಿ ಆದೇಶ ಮಾಡಿದೆ. 450 ರೂಪಾಯಿ ಶುಲ್ಕ ಪಡೆದು ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ಪಡೆಯಲಾಗಿತ್ತು. ಈ ಪೈಕಿ ಬೆಂಗಳೂರಿನಲ್ಲಿ (Bengaluru) 1,841 ಮಸೀದಿಗಳಿಗೆ ಅನುಮತಿ ನೀಡಲಾಗಿದೆ. ರಾಜ್ಯಾದ್ಯಂತ ಮೂರು ಸಾವಿರಕ್ಕೂ ಹೆಚ್ಚು ಹಿಂದೂ ದೇವಾಲಯ, 1,400ಕ್ಕೂ ಹೆಚ್ಚು ಚರ್ಚ್‍ಗಳಿಗೆ ಸರ್ಕಾರ ಅನುಮತಿ ನೀಡಿದೆ. ಇದನ್ನೂ ಓದಿ: ಜನಪ್ರತಿನಿಧಿಗಳೇ ಬದುಕಿದ್ದೀರಾ? ಅಧಿಕಾರಿಗಳೇ ಇತ್ತ ಗಮನಿಸಿ – ಫ್ಲೆಕ್ಸ್‌ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ

     17 ಸಾವಿರದ 850 ಅರ್ಜಿಗಳನ್ನು ಪರಿಶೀಲಿಸಿ ಸದ್ಯ 10 ಸಾವಿರ ಅರ್ಜಿದಾರರಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿರುವ ರಾಜ್ಯ ಸರ್ಕಾರ ಕೆಲ ನಿಯಮಾವಳಿಗಳನ್ನು ಜಾರಿಗೆ ತಂದಿದೆ.

    ನಿಯಮಾವಳಿಗಳು:
    ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಲೌಡ್ ಸ್ಪೀಕರ್ ಬಳಸಬೇಕು. ನಿಯಮಿತ ಡೆಸಿಬಲ್ ಮಾತ್ರ ಬಳಸಬೇಕು. ಡೆಸಿಬಲ್ ನಿಯಂತ್ರಿಸೋ ಉಪಕರಣ ಅಳವಡಿಕೆ ಕಡ್ಡಾಯ. ರೆಸಿಡೆನ್ಸಿಯಲ್, ಕಮರ್ಷಿಯಲ್, ಕೈಗಾರಿಕಾ ಪ್ರದೇಶಗಳ ಅನುಗುಣವಾಗಿ ಡೆಸಿಬಲ್ ಅಳವಡಿಕೆ, ಮಸೀದಿ – ಮಂದಿರದ ಆವರಣದ ಒಳಗೆ ಲೌಡ್ ಸ್ಪೀಕರ್‌ಗಳು ಇರಬೇಕು. ಪೊಲೀಸರು ಸೂಚಿಸಿರುವಷ್ಟು ಮಾತ್ರ ಲೌಡ್ ಸ್ಪೀಕರ್ ಬಳಸಬೇಕು.

    Live Tv
    [brid partner=56869869 player=32851 video=960834 autoplay=true]

  • ಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್‍ನ ಲೈಸನ್ಸ್ ರದ್ದುಪಡಿಸಿದ RBI

    ಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್‍ನ ಲೈಸನ್ಸ್ ರದ್ದುಪಡಿಸಿದ RBI

    ನವದೆಹಲಿ: ಆರ್ಥಿಕವಾಗಿ ಸಮಸ್ಯೆ ಎದುರಿಸುತ್ತಿರುವ ಕಾರಣಕ್ಕಾಗಿ ಮಹಾರಾಷ್ಟ್ರ (Maharashtra) ಮೂಲದ ಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ (Laxmi Cooperative Bank) ಲಿಮಿಟೆಡ್‍ನ ಪರವಾನಿಗೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ರದ್ದು ಪಡಿಸಿದೆ.

    ಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಆರ್ಥಿಕವಾಗಿ ದುರ್ಬಲಗೊಂಡಿದ್ದು, ಬಂಡವಾಳ ಮತ್ತು ಗಳಿಕೆ ಬಗ್ಗೆ ಯಾವುದೇ ಗ್ಯಾರಂಟಿ ಇಲ್ಲ. ಹಾಗಾಗಿ ಆರ್‌ಬಿಐ ಇಂದಿನಿಂದ ಬ್ಯಾಂಕಿನ ವ್ಯವಹಾರವನ್ನು ಸ್ಥಗಿತಗೊಳಿಸಿ ಲೈಸನ್ಸ್ (Licence) ರದ್ದುಪಡಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಎಎಪಿ ಶಾಸಕ ಲಾಭ್ ಸಿಂಗ್ ಉಗೋಕೆ ತಂದೆ ಆತ್ಮಹತ್ಯೆಗೆ ಯತ್ನ!

    ಬ್ಯಾಂಕ್ ಆರ್ಥಿಕವಾಗಿ ಸಮಸ್ಯೆಯಲ್ಲಿರುವುದರಿಂದಾಗಿ ಈ ಬಗ್ಗೆ ಮಹಾರಾಷ್ಟ್ರ ಸರ್ಕಾರಿ ಇಲಾಖೆ ಆಯುಕ್ತ ಮತ್ತು ಸಹಕಾರ ಸಂಘಗಳ ರಿಜಿಸ್ಟ್ರಾರ್ ಆರ್‌ಬಿಐಗೆ ಪತ್ರಬರೆದಿದ್ದರು. ಆ ಬಳಿಕ ಆರ್‌ಬಿಐ ಲೈಸನ್ಸ್ ರದ್ದು ಪಡಿಸಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬ್ಯಾಂಕ್ ಠೇವಣಿದಾರರಿಗೆ ಪೂರ್ಣ ಪ್ರಮಾಣದಲ್ಲಿ ವ್ಯವಹಾರವನ್ನು ನಡೆಸಲು ಸಹಕರಿಸಲು ಕಷ್ಟವಾಗಲಿದೆ. ಹಾಗಾಗಿ ಠೇವಣಿದಾರರ ಹಿತಾಸಕ್ತಿಯನ್ನು ಮನಗಂಡು ಈ ನಿರ್ಧಾರವನ್ನು ಆರ್‌ಬಿಐ ತೆಗೆದುಕೊಂಡಿರುವುದಾಗಿ ತಿಳಿಸಿದೆ. ಇದನ್ನೂ ಓದಿ: PayCM ಅಂದ್ರೆ ಪೇ ಟು ಕಾಂಗ್ರೆಸ್ ಮೇಡಂ – ನಳಿನ್ ಕುಮಾರ್ ಕಟೀಲ್ ತಿರುಗೇಟು

    ಬ್ಯಾಂಕ್ ಲೈಸನ್ಸ್ ರದ್ದು ಪಡಿಸಿದ್ದರೂ ಈಗಾಗಲೇ ಬ್ಯಾಂಕ್‍ನಲ್ಲಿ ವ್ಯವಹಾರ ನಡೆಸುತ್ತಿದ್ದ ಠೇವಣಿದಾರರು, ಠೇವಣಿ ವಿಮೆ, ಸಾಲ ಖಾತರಿ ನಿಗಮದ ನಿಯಮದಂತೆ 5 ಲಕ್ಷ ರೂ.ವರೆಗೆ ಪಡೆಯಬಹುದಾಗಿದೆ. ಈಗಾಗಲೇ ಬ್ಯಾಂಕ್ ನೀಡಿರುವ ಮಾಹಿತಿ ಆಧಾರದಲ್ಲಿ ಸುಮಾರು ಶೇ.99 ಠೇವಣಿದಾರರು ಬ್ಯಾಂಕ್‍ನಲ್ಲಿ ಇಟ್ಟಿರುವ ಸಂಪೂರ್ಣ ಠೇವಣಿ ಮೊತ್ತವನ್ನು ಡಿಐಸಿಜಿಯಿಂದ ಪಡೆಯಬಹುದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮೊದಲು ಉದ್ದಿಮೆ ಆರಂಭಿಸಿ 3 ವರ್ಷದ ಬಳಿಕ ಪರವಾನಗಿ ಪಡೆಯಿರಿ

    ಮೊದಲು ಉದ್ದಿಮೆ ಆರಂಭಿಸಿ 3 ವರ್ಷದ ಬಳಿಕ ಪರವಾನಗಿ ಪಡೆಯಿರಿ

    – ಕರ್ನಾಟಕ ಕೈಗಾರಿಕಾ ಸೌಲಭ್ಯ ಅಧಿನಿಯಮ 2020ರ ತಿದ್ದುಪಡಿ
    – ರಾಜ್ಯಾದ್ಯಂತ ಹೂಡಿಕೆ ಉತ್ತೇಜಿಸಲು ರಾಜ್ಯ ಸಂಪುಟದ ಮಹತ್ವದ ನಿರ್ಣಯ
    – ಸುಲಲಿತ ವ್ಯವಹಾರಕ್ಕೆ ನೆರವಾಗಲಿದೆ ಈ ತಿದ್ದುಪಡಿ ಕಾಯ್ದೆ

    ಬೆಂಗಳೂರು: ಉದ್ಯಮ ಸ್ಥಾಪನೆಗೆ ಇರುವ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ‌ ಸರ್ಕಾರ, “ಮೊದಲು ಉದ್ದಿಮೆ ಆರಂಭಿಸಿ, 3 ವರ್ಷದ ಬಳಿಕ ಪರವಾನಗಿ ಪಡೆಯುವ ವಿಧಾನ” ಜಾರಿಗೊಳಿಸಲು ನಿರ್ಧರಿಸಿದೆ. ಅದಕ್ಕಾಗಿ ‘ಕರ್ನಾಟಕ ಕೈಗಾರಿಕಾ ಸೌಲಭ್ಯ ಕಾಯ್ದೆ- 2002’ಕ್ಕೆ ತಿದ್ದುಪಡಿ ತರಲು ಗುರುವಾರ ಸಚಿವ ಸಂಪುಟ‌ ಒಪ್ಪಿಗೆ ನೀಡಿದೆ.

    ಉದ್ಯಮಗಳಿಗೆ ಅನುಕೂಲ ಒದಗಿಸುವ ಜತೆಗೆ ಹೊಸ ಹೂಡಿಕೆಗಳಿಗೆ ಅನುಕೂಲವಾಗುವಂತೆ ನಿಯಂತ್ರಕ ಚೌಕಟ್ಟನ್ನು ಸರಳಗೊಳಿಸಲು ರಾಜ್ಯ ಸರ್ಕಾರ, ಕರ್ನಾಟ ಕೈಗಾರಿಕ (ಸೌಲಭ್ಯ) ಅಧಿನಿಯಮ 2020 ಜಾರಿಗೊಳಿಸಲು ತೀರ್ಮಾನಿಸಿದೆ.

    ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೈಗಾರಿಕಾ ಸಚಿವ‌ ಜಗದೀಶ್ ಶೆಟ್ಟರ್, “ಕೈಗಾರಿಕಾ ವಲಯದಲ್ಲಿ ಬದಲಾವಣೆ ತರುವ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ. ಕರ್ನಾಟಕದ ಇತಿಹಾಸದಲ್ಲಿ ಇದು ಮಹತ್ವದ ಹೆಜ್ಜೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸುಲಲಿತ ವ್ಯವಹಾರಕ್ಕೆ ಒತ್ತು ನೀಡಿದ್ದು, ಅದಕ್ಕೆ ಪೂರಕವಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ. ನಿಯಮಗಳ ಸರಳೀಕರಣ ಮತ್ತು ಕಾರ್ಯವಿಧಾನದ ಅವಶ್ಯಕತೆಗಳನ್ನು ಕಡಿಮೆಗೊಳಿಸುವ ಉದ್ದೇಶದಿಂದ ಈ ಅಧಿನಿಯಮ ಜಾರಿಗೊಳಿಸಾಗುತ್ತಿದೆ. ಇದು ಉದ್ದಿಮೆ, ಹೂಡಿಕೆ ಅನುಮೋದನೆ ಮತ್ತು ಕಾಲಮಿತಿಗೆ ಅನುಗುಣವಾಗಿ ದಾಖಲೆಗಳನ್ನು ಒದಗಿಸಿ ರಾಜ್ಯದಲ್ಲಿ ಹೂಡಿಕೆದಾರ ಸ್ನೇಹಿ ವಾತಾವರಣ ಸಾಧಿಸಲು ಸಹಾಯವಾಗಲಿದೆ” ಎಂದು ಹೇಳಿದರು.

     

    “ದೇಶದಲ್ಲಿ ಗುಜರಾತ್‌ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಸ್ಥಾಪನೆ ಮತ್ತು ಕಾರ್ಯಾಚರಣೆಯ ಸೌಲಭ್ಯ) ಅನುಕೂಲಕ್ಕಾಗಿ ಇಂತಹ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಆದರೆ, ನಮ್ಮ ರಾಜ್ಯದಲ್ಲಿ ಇನ್ನು ಒಂದು ಹೆಜ್ಜೆಯನ್ನು ಮುಂದಿಟ್ಟಿದ್ದು, ಎಲ್ಲಾ ಕೈಗಾರಿಕೆಗಳ ಸ್ಥಾಪನೆಗೂ ಇದು ಅನ್ವಯವಾಗಲಿದೆ. ನಮ್ಮ ಇಲಾಖೆಯ ವತಿಯಿಂದ ರಾಜಸ್ಥಾನ ಮತ್ತು ಗುಜರಾತ್‌ ರಾಜ್ಯಗಳ ಮೇಲ್ಕಂಡ ಅಧಿನಿಯಮಗಳನ್ನು ಅಧ್ಯಯನ ಮಾಡಿದ್ದು, ವಿವಿಧ ಇಲಾಖೆಗಳೊಂದಿಗೆ ರಾಜ್ಯದ ಕರ್ನಾಟಕ ಕೈಗಾರಿಕಾ (ಸೌಲಭ್ಯ) ಅಧಿನಿಯಮ, 2002 ತಿದ್ದುಪಡಿಯ ಬಗ್ಗೆ ವಿಸ್ತೃತ ಚರ್ಚೆಯನ್ನು ನಡೆಸಲಾಗಿದೆ” ಎಂದು ಹೇಳಿದರು.

    ಪ್ರಯೋಜನ ಏನು?
    “ರಾಜ್ಯ ಹಾಗೂ ಜಿಲ್ಲಾ ಮಟ್ಟದ ಸಮಿತಿ ಇದ್ದು, ಅಲ್ಲಿ ಉದ್ದಿಮೆ ಸ್ಥಾಪಿಸಲು ಅನುಮತಿ ಪಡೆದ ಕೂಡಲೇ, ನಿರ್ದಿಷ್ಟ ಭೂಮಿ ಗುರುತಿಸಿ ಕಟ್ಟಡ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗುವುದು. ಈ ಅನುಮೋದನೆಯೊಂದಿಗೆ ಉದ್ದಿಮೆದಾರರು ತಕ್ಷಣವೇ ಕಟ್ಟಡ ನಿರ್ಮಾಣ, ಯಂತ್ರಗಳ ಸ್ಥಾಪನೆ ಮುಂತಾದ ಕೆಲಸ ಆರಂಭಿಸಬಹುದು, ಇದಕ್ಕೆ 3 ವರ್ಷದ ಕಾಲವಕಾಶ ನೀಡಲಾಗುವುದು. ಈ ಅವಧಿಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ, ವಹಿವಾಟು ಪರವಾನಗಿ ಸೇರಿದಂತೆ ನಾನಾ ಇಲಾಖೆಗಳಿಂದ ನಿರಾಕ್ಷೇಪಣೆ ಅಥವಾ ಅನುಮತಿ ಪಡೆಯಬಹುದು”ಎಂದು ಅವರು ವಿವರಿಸಿದರು.

  • ಜೀನ್ಸ್ ಧರಿಸಿದ್ದರಿಂದ ಮಹಿಳಾ ಟೆಕ್ಕಿಯ ಡ್ರೈವಿಂಗ್  ಟೆಸ್ಟ್‌ಗೆ ನಿರ್ಬಂಧ

    ಜೀನ್ಸ್ ಧರಿಸಿದ್ದರಿಂದ ಮಹಿಳಾ ಟೆಕ್ಕಿಯ ಡ್ರೈವಿಂಗ್ ಟೆಸ್ಟ್‌ಗೆ ನಿರ್ಬಂಧ

    ಚೆನ್ನೈ: ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ.

    ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್‌ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು.

    ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ ಧರಿಸಿಕೊಂಡು ಬಂದೆ ಎಂದು ಪವಿತ್ರಾ ತಿಳಿಸಿದ್ದಾರೆ.

    ಕೆಲ ದಿನಗಳ ಹಿಂದೆಯಷ್ಟೇ ಕಾಲೇಜು ವಿದ್ಯಾರ್ಥಿನಿ ಸುಮತಿ ಮನೆಗೆ ವಾಪಸ್ಸಾಗಿ ಬೇರೆ ಬಟ್ಟೆ ಧರಿಸಿ ಆರ್‌ಟಿಓ ಕಚೇರಿಗೆ ಬಂದಿದ್ದರು. ಅಂದು ಸುಮತಿ ಬರ್ಮುಡಾ ಹಾಗೂ ಶರ್ಟ್ ಧರಿಸಿದ್ದರು. ಹೀಗಾಗಿ ಮತ್ತೆ ಮನೆಗೆ ತೆರಳಿ ನಿಯತ್ತಾದ ಡ್ರೆಸ್ ಧರಿಸಿ ಬಂದಿದ್ದರು. ಇದಕ್ಕೂ ಮೊದಲು ಡ್ರೆಸ್ ಕುರಿತಂತೆ ಸುಮತಿ ಹಾಗೂ ಇನ್ಸ್ ಪೆಕ್ಟರ್ ಮಧ್ಯೆ ವಾಗ್ವಾದ ನಡೆದಿತ್ತು. ಇವರಿಬ್ಬರ ಜಗಳ ತಾರಕಕ್ಕೇರುತ್ತಿದ್ದಂತೆಯೇ ಇನ್ಸ್ ಸ್ಪೆಕ್ಟರ್ ಸಹೋದ್ಯೋಗಿಗಳು ಸ್ಥಳದಲ್ಲಿ ಜಮಾಯಿಸಿ ಸಮಜಾಯಿಷಿ ನೀಡಿದ್ದಾರೆ.

    ಲೈಸೆನ್ಸ್ ಸಿಗುವ ಈ ಅವಕಾಶವನ್ನು ದುರುಪಯೋಗಪಡಿಸಿಕೊಳ್ಳಲು ನನಗೆ ಇಷ್ಟವಿರಲಿಲ್ಲ. ಹೀಗಾಗಿ ನಾನು ಮತ್ತೆ ಮನೆಗೆ ತೆರಳಿ ಬಟ್ಟೆ ಬದಲಾಯಿಸಿಕೊಂಡು ಬಂದೆ ಎಂದು ಸುಮತಿ ತಿಳಿಸಿದ್ದಾರೆ.

    ಈ ಬಗ್ಗೆ ವಕೀಲ ವಿ. ಎಸ್ ಸುರೇಶ್ ಮಾತನಾಡಿ, ಡ್ರೈವಿಂಗ್ ಟೆಸ್ಟ್ ಗೆ ಇಂತದ್ದೇ ಡ್ರೆಸ್ ಹಾಕಿಕೊಂಡು ಬರಬೇಕೆಂಬ ನಿಯಮ ಕಾನೂನಿನಲ್ಲಿ ಇಲ್ಲ. ಆದರೆ ಲೈಸೆನ್ಸ್ ಸಿಗಬೇಕಾದರೆ ವ್ಯಕ್ತಿಗೆ 18 ವರ್ಷ ಆಗಿರಬೇಕು ಅಷ್ಟೇ ಎಂದು ತಿಳಿಸಿದ್ದಾರೆ.

  • ಮೈಸೂರಿನ ರಸ್ತೆಯಲ್ಲಿ ಗನ್ ಹಿಡಿದು ಶೋಲೆಯ ಗಬ್ಬರ್ ಸಿಂಗ್ ನಂತೆ ಪೋಸ್!

    ಮೈಸೂರಿನ ರಸ್ತೆಯಲ್ಲಿ ಗನ್ ಹಿಡಿದು ಶೋಲೆಯ ಗಬ್ಬರ್ ಸಿಂಗ್ ನಂತೆ ಪೋಸ್!

    ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲೊಬ್ಬ ‘ಶೋಲೆ’ ಸಿನಿಮಾದ ವಿಲನ್ ಗಬ್ಬರ್ ಸಿಂಗ್ ರೀತಿ ಸಾರ್ವಜನಿಕವಾಗಿ ಗನ್ ಹಿಡಿದು ಅತಿರೇಕದ ವರ್ತನೆ ಮಾಡಿದ್ದಾನೆ.

    ಮೈಸೂರಿನ ಅಶೋಕಪುರಂ ನಿವಾಸಿ ಗಣೇಶ್ ಪ್ರಸಾದ್ ಎಂಬಾತ ಕಡು ಕೆಂಪು ಬಣ್ಣದ ಸ್ಕೂಟರ್ ನಲ್ಲಿ ಅದೇ ಬಣ್ಣದ ಬಟ್ಟೆ ತೊಟ್ಟು ಲೈಸೆನ್ಸ್ ಸಿಂಗಲ್ ಬ್ಯಾರಲ್ ಗನ್ ಹಿಡಿದು ಗುಂಡುಗಳ ಸಮೇತ ಪೋಸ್ ಕೊಟ್ಟಿದ್ದಾನೆ.

    ಲೈಸೆನ್ಸ್ ಪ್ರಕಾರ ಗನ್ ಹಿಡಿದು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನ ಮಾಡುವಂತಿಲ್ಲ. ಆದರೆ ಗಣೇಶ್ ಪ್ರಸಾದ್ ನಿಯಮಗಳನ್ನು ಗಾಳಿಗೆ ತೂರಿ ಡಕಾಯಿತನ ತರಹ ಉಡುಪು ಧರಿಸಿ ಪೋಸ್ ನೀಡಿದ್ದಾನೆ.

    ಈ ಹಿಂದೆ ಈತ ಸೆಪ್ಟೆಂಬರ್ 16 ರಂದು ಸಾರ್ವಜನಿಕ ಸ್ಥಳದಲ್ಲಿ ಓಪನ್ ಫೈರಿಂಗ್ ಮಾಡಿ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದ್ದನು. ಈತ ನಿಯಮ ಉಲ್ಲಂಘನೆ ಮಾಡಿ ತನ್ನ ಅತಿರೇಕದ ವರ್ತನೆಯಿಂದ ಜನರಲ್ಲಿ ಭಯ ಉಂಟು ಮಾಡುತ್ತಿರುವುದನ್ನು ಖಂಡಿಸಿ ಸಾರ್ವಜನಿಕರು ಈತನ ಗನ್ ಲೈಸೆನ್ಸ್ ರದ್ದುಪಡಿಸುವಂತೆ ಆಗ್ರಹಿಸಿದ್ದಾರೆ.

  • ಲೈಸೆನ್ಸ್ ಗೆ ಅಲೆದು ಬೇಸತ್ತ ದಂಪತಿ ಪಟ್ಟಣಪಂಚಾಯತ್ ಬಾಗಿಲಲ್ಲೇ ರೆಸ್ಟೊರೆಂಟ್ ತೆರೆದ್ರು

    ಲೈಸೆನ್ಸ್ ಗೆ ಅಲೆದು ಬೇಸತ್ತ ದಂಪತಿ ಪಟ್ಟಣಪಂಚಾಯತ್ ಬಾಗಿಲಲ್ಲೇ ರೆಸ್ಟೊರೆಂಟ್ ತೆರೆದ್ರು

    ತುಮಕೂರು: ರೆಸ್ಟೊರೆಂಟ್ ತೆರೆಯಲು ಲೈಸೆನ್ಸ್ ಗಾಗಿ ಅಲೆದು ಅಲೆದು ಬೇಸತ್ತ ದಂಪತಿ ಕೊನೆಗೆ ಪಟ್ಟಣ ಪಂಚಾಯತ್ ಬಾಗಿಲಲ್ಲೇ ಹೊಟೇಲ್ ತೆರೆದು ವಿನೂತನವಾಗಿ ಪ್ರತಿಭಟಿಸಿದ್ದಾರೆ.

    ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣ ಪಂಚಾಯತ್ ದ್ವಾರದಲ್ಲಿ ಪ್ರಭಾಕರ್-ಇಂದಿರಾ ದಂಪತಿ ವಿನೂತನವಾಗಿ ಪ್ರತಿಭಟಿಸಿದ್ದಾರೆ. ಅನ್ನ ಸಾಂಬಾರ್, ಚಪಾತಿ, ಪರೋಟಾ ತಯಾರಿಸಿ ಮುನ್ಸಿಪಲ್ ಪ್ರವೇಶ ದ್ವಾರದಲ್ಲೇ ಗ್ರಾಹಕರಿಗೆ ಮಾರಾಟ ಮಾಡುವ ಮೂಲಕ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪ್ರಭಾಕರ- ಇಂದಿರಾ ದಂಪತಿ 2014 ರಲ್ಲಿ ಮಾಯಸಂದ್ರ ರಸ್ತೆಯಲ್ಲಿ ಶ್ರಿನಿಧಿ ಗ್ರೀನ್ ಲ್ಯಾಂಡ್ ಹೆಸರಿನಲ್ಲಿ ರೆಸ್ಟೊರೆಂಟ್ ತೆರೆದಿದ್ರು. ಅದಕ್ಕೆ ಪಟ್ಟಣ ಪಂಚಾಯತ್ ಅಧಿಕಾರಿಗಳ ಸೂಚನೆಯಂತೆ ಕೊಡಿಗೆಹಳ್ಳಿ ಗ್ರಾಮ ಪಂಚಾಯತಿಯಿಂದ ಪರವಾನಗಿ ಪಡೆದಿದ್ರು. ಸುಮಾರು ನಾಲ್ಕು ತಿಂಗಳು ರೆಸ್ಟೊರೆಂಟ್ ತೆರೆದಿತ್ತು. ಆಗ ಕ್ಯಾತೆ ತೆಗೆದ ಪಟ್ಟಣ ಪಂಚಾಯತ್ ಅಧಿಕಾರಿಗಳು, ರೆಸ್ಟೊರೆಂಟ್ ಜಮೀನು ವಿವಾದ ಕೋರ್ಟ್ ನಲ್ಲಿದೆ ಎಂದು ಸಬೂಬು ಹೇಳಿ ಏಕಾಏಕಿ ರೆಸ್ಟೊರೆಂಟ್ ಗೆ ಬೀಗ ಹಾಕಿದ್ದಾರೆ ಎನ್ನುವುದು ಪ್ರಭಾಕರ್ ದಂಪತಿಯ ಆರೋಪ.

    ಅಲ್ಲಿಂದ ಕಳೆದ ಮೂರು ವರ್ಷದಿಂದ ಪರವಾನಗಿ ನೀಡುವಂತೆ ದಂಪತಿ ಪಟ್ಟಣ ಪಂಚಾಯತಿಗೆ ಅಲೆದು ಅಲೆದು ಬೆಸತ್ತು ಈಗ ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ಪರವಾನಗಿ ಕೊಡದಿರಲು ಕಾಂಗ್ರೆಸ್ ಮುಖಂಡ ಟಿ.ಎನ್.ಶಿವರಾಜರೇ ಕಾರಣ ಎಂದು ಪ್ರಭಾಕರ್ ಆರೋಪಿಸಿದ್ದಾರೆ.