Tag: Lieutenant Governor

  • Jammu Kashmir | ಫಲಿತಾಂಶಕ್ಕೆ ಮೊದಲೇ ಐವರು ಶಾಸಕರಾಗಿ ಆಯ್ಕೆ – LG ನಿರ್ಧಾರ ಸರಿಯೇ?

    Jammu Kashmir | ಫಲಿತಾಂಶಕ್ಕೆ ಮೊದಲೇ ಐವರು ಶಾಸಕರಾಗಿ ಆಯ್ಕೆ – LG ನಿರ್ಧಾರ ಸರಿಯೇ?

    ನವದೆಹಲಿ: ಜಮ್ಮು ಕಾಶ್ಮೀರ ಚುನಾವಣಾ (Jammu Kashmir) ಫಲಿತಾಂಶ ಪ್ರಕಟವಾಗುವುದಕ್ಕೆ ಮೊದಲೇ ಐವರು ಶಾಸಕರಾಗಿ ನಾಮನಿರ್ದೇಶನವಾಗಿದ್ದು, ಈ ಐವರು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

    ಹೌದು, ಲೆಫ್ಟಿನೆಂಟ್‌ ಗವರ್ನರ್‌ (Lieutenant Governor) ಮನೋಜ್‌ ಸಿನ್ಹಾ (Manoj Sinha) ಐವರು ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ 2019 ಗೆ ತಿದ್ದುಪಡಿಗಳ ಭಾಗವಾಗಿ ಇಬ್ಬರು ಮಹಿಳೆಯರು, ಇಬ್ಬರು ಕಾಶ್ಮೀರಿ ಪಂಡಿತರು ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಿಂದ ಆಗಮಿಸಿದ ನಿರಾಶ್ರಿತ ವ್ಯಕ್ತಿಯೊಬ್ಬರನ್ನು ನಾಮನಿರ್ದೇಶನ ಮಾಡಿದ್ದಾರೆ.

    90 ಸ್ಥಾನಗಳಿಗೆ ಚುನಾವಣೆ ನಡೆದರೂ ಐವರು ನಾಮನಿರ್ದೇಶನಗೊಂಡ ಸದಸ್ಯರಿಗೆ ಮತದಾನದ ಹಕ್ಕು ಇರುವ ಕಾರಣ ಜಮ್ಮು ಕಾಶ್ಮೀರ ವಿಧಾನಸಭೆಯ ಒಟ್ಟು ಶಾಸಕರ ಬಲಾಬಲ 95ಕ್ಕೆ ಏರಿಕೆಯಾಗಿದೆ. ಹೀಗಾಗಿ ಬಹುಮತಕ್ಕೆ 48 ಸದಸ್ಯರ ಬೆಂಬಲ ಬೇಕು. ಇದನ್ನೂ ಓದಿ: Exit Poll Result | ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟಕ್ಕೆ ಅಧಿಕಾರ – ಬಿಜೆಪಿಗೆ ಹಿಂದಿಗಿಂತ ಹೆಚ್ಚು ಸ್ಥಾನ

    ಜಮ್ಮು ಕಾಶ್ಮೀರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಬಹುದು ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದ ಬೆನ್ನಲ್ಲೇ ಈ ಐವರ ಪಾತ್ರ ಭಾರೀ ಮಹತ್ವ ಪಡೆದಿದೆ.

    ಸರ್ಕಾರ ರಚನೆಗೂ ಮೊದಲೇ ಗವರ್ನರ್‌ ನಾಮನಿರ್ದೇಶನ ಮಾಡಿದ್ದಕ್ಕೆ ಕಾಂಗ್ರೆಸ್‌ (Congress) ಆಕ್ಷೇಪ ವ್ಯಕ್ತಪಡಿಸಿದೆ. ಕಾಶ್ಮೀರದ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ರವೀಂದ್ರ ಶರ್ಮಾ, ಐವರು ಶಾಸಕರ ನಾಮ ನಿರ್ದೇಶನವನ್ನು ನಾವು ವಿರೋಧಿಸುತ್ತೇವೆ. ಸರ್ಕಾರ ರಚನೆಗೂ ಮೊದಲೇ ನಾಮ ನಿರ್ದೇಶನ ಅಗತ್ಯವಿಲ್ಲ. ಇಂತಹ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ ಅಲ್ಲದೇ ಜನರ ತೀರ್ಪನ್ನು ಅಗೌರವಿಸುವ ನಡೆ ಎಂದು ಕಿಡಿಕಾರಿದ್ದಾರೆ.

    ಕೇಂದ್ರಾಡಳಿತ ರಾಜ್ಯವಾಗಿರುವ ಜಮ್ಮು ಕಾಶ್ಮೀರ ಪುದುಚೇರಿ (Puducherry) ವಿಧಾನಸಭಾ ಮಾದರಿಯಲ್ಲಿ ರಚನೆಯಾಗಿದೆ. ಅಲ್ಲಿ ಮೂವರನ್ನು ರಾಜ್ಯಪಾಲರು ನಾಮ ನಿರ್ದೇಶನ ಮಾಡಬಹುದು. ಅವರು ಚುನಾಯಿತ ಶಾಸಕರಂತೆ ಕೆಲಸ ಮಾಡುತ್ತಾರೆ ಮತ್ತು ಮತದಾನ ಮಾಡುವ ಹಕ್ಕನ್ನು ಸಹ ಹೊಂದಿದ್ದಾರೆ.

    ಸುಪ್ರೀಂ ಹೇಳಿದ್ದೇನು?
    2017 ರಲ್ಲಿ ಪುದುಚೇರಿ ಲೆಫ್ಟಿನೆಂಟ್‌ ಗವರ್ನರ್‌ ಆಗಿದ್ದ ಕಿರಣ್ ಬೇಡಿ ಅವರು ಮೂವರನ್ನು ನಾಮನಿರ್ದೇಶನ ಮಾಡಿದ್ದನ್ನು ಕಾಂಗ್ರೆಸ್‌ ಸುಪ್ರೀಂನಲ್ಲಿ ಪ್ರಶ್ನಿಸಿತ್ತು. ನಮ್ಮ ಸರ್ಕಾರವನ್ನು ಕೇಳದೇ ನಾಮ ನಿರ್ದೇಶನ ಮಾಡಿದ್ದು ಸರಿಯಲ್ಲ ಎಂದು ಕಾಂಗ್ರೆಸ್‌ ವಾದಿಸಿತ್ತು. ಆದರೆ ಅಂತಿಮವಾಗಿ 2018 ರಲ್ಲಿ ಸುಪ್ರೀಂ ಕೋರ್ಟ್ ಲೆಫ್ಟಿನೆಂಟ್‌ ಗವರ್ನರ್‌ ನಿರ್ಧಾರವನ್ನು ಎತ್ತಿ ಹಿಡಿದು ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು.

    ಪುದುಚೇರಿ ವಿಧಾನಸಭೆಗೆ ನಾಮನಿರ್ದೇಶನ ಮಾಡುವುದು ಪುದುಚೇರಿ ಸರ್ಕಾರದ ವ್ಯವಹಾರವಲ್ಲ. ಇದು ಕೇಂದ್ರ ಸರ್ಕಾರದ ವ್ಯವಹಾರ ಎಂದು ನ್ಯಾಯಮೂರ್ತಿ ಎ.ಕೆ.ಸಿಕ್ರಿ, ನ್ಯಾಯಮೂರ್ತಿ ಅಶೋಕ್ ಭೂಷಣ್ ಮತ್ತು ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರ ಪೀಠ ಹೇಳಿತ್ತು.

     

  • ಸರ್ಕಾರಿ ಹಣದಲ್ಲಿ AAP ಜಾಹೀರಾತು – 97 ಕೋಟಿ ವಸೂಲಿಗೆ LG ಆದೇಶ

    ಸರ್ಕಾರಿ ಹಣದಲ್ಲಿ AAP ಜಾಹೀರಾತು – 97 ಕೋಟಿ ವಸೂಲಿಗೆ LG ಆದೇಶ

    ನವದೆಹಲಿ: ಸರ್ಕಾರಿ ಜಾಹೀರಾತು ಹೆಸರಿನಲ್ಲಿ ಆಮ್ ಆದ್ಮಿ ಪಕ್ಷ (AAP) ರಾಜಕೀಯ ಜಾಹೀರಾತುಗಳಿಗೆ ಬಳಸಿರುವ 97 ಕೋಟಿ ರೂ. ಹಣವನ್ನು ವಸೂಲಿ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ (Lieutenant Governor VK Saxena) ಅವರು ಮುಖ್ಯ ಕಾರ್ಯದರ್ಶಿಗಳಿಗೆ ಮಂಗಳವಾರ ಆದೇಶ ನೀಡಿದ್ದಾರೆ.

    ದೆಹಲಿಯ ಆಡಳಿತಾರೂಢ ಆಪ್ ಸುಪ್ರೀಂ ಕೋರ್ಟ್‌ನ ಆದೇಶಗಳನ್ನು, 2016ರ ದೆಹಲಿ ಹೈಕೋಟ್ ಆದೇಶವನ್ನು ಹಾಗೂ 2016ರ ಸರ್ಕಾರಿ ಜಾಹೀರಾತುಗಳಲ್ಲಿ ವಿಷಯ ನಿಯಂತ್ರಣ ಸಮಿತಿ (CCRGA) ಆದೇಶಗಳನ್ನು ಉಲ್ಲಂಘಿಸಿದೆ ಎಂದು ಸಕ್ಸೇನಾ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಗಡಿ ವಿವಾದ – ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯಿಲ್ಲ: ದೇವೇಂದ್ರ ಫಡ್ನವಿಸ್

    ಎಫ್ಟಿನೆಂಟ್ ಗವರ್ನರ್ ಸರ್ಕಾರ ಪ್ರಕಟಿಸಿರುವ ಕೆಲವು ನಿರ್ದಿಷ್ಟ ಜಾಹೀರಾತುಗಳನ್ನು ಗುರುತಿಸಿ, ಇದು ಮಾರ್ಗಸೂಚಿಗಳ ಸಂಪೂರ್ಣ ಉಲ್ಲಂಘನೆಯಾಗಿದೆ. ಅಂತಹ ಜಾಹೀರಾತುಗಳಿಗೆ ಖರ್ಚು ಮಾಡಿರುವ ಮೊತ್ತವನ್ನು ಲೆಕ್ಕ ಹಾಕಲು ಹಾಗೂ ಆಪ್ ನಿಂದ ವಸೂಲಿ ಮಾಡುವಂತೆ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ಇದನ್ನೂ ಓದಿ: ಕೊಟ್ಟ ಮಾತು ಉಳಿಸಿದ ಬಿಜೆಪಿ – ಸಭಾಪತಿ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ ಸಲ್ಲಿಕೆ

    Live Tv
    [brid partner=56869869 player=32851 video=960834 autoplay=true]

  • CRPF ನನ್ನ ಮೇಲೆ ಜೈಲಿನಲ್ಲಿ ಹಲ್ಲೆ ನಡೆಸಿದೆ – ಸುಕೇಶ್ ಚಂದ್ರಶೇಖರ್ ಆರೋಪ

    CRPF ನನ್ನ ಮೇಲೆ ಜೈಲಿನಲ್ಲಿ ಹಲ್ಲೆ ನಡೆಸಿದೆ – ಸುಕೇಶ್ ಚಂದ್ರಶೇಖರ್ ಆರೋಪ

    ದೆಹಲಿ: ಬಹುಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ವಂಚಕ ಸುಕೇಶ್ ಚಂದ್ರಶೇಖರ್ (Sukesh Chandrashekhar) ನನ್ನ ಮೇಲೆ ಜೈಲಿನಲ್ಲಿ CRPF ಹಲ್ಲೆ ನಡೆಸಿದೆ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾಗೆ (Lieutenant Governor Vinai Kumar Saxena) ಪತ್ರ ಬರೆದು ಎಎಪಿ (AAP) ಸಚಿವರ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾನೆ.

    215 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ನಡುವಿನ ಪ್ರಕರಣಕ್ಕೆ ನಾನಾ ರೀತಿಯ ತಿರುವುಗಳು ಸಿಗುತ್ತಿವೆ. ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಬರೆದಿರುವ ಪತ್ರದಲ್ಲಿ, ಜೈಲು ಆಡಳಿತದಿಂದ ನಿರಂತರ ಬೆದರಿಕೆ ಮತ್ತು ಒತ್ತಡ ಹಾಕಲಾಗುತ್ತಿದೆ. ಎಎಪಿ ನಾಯಕರ ವಿರುದ್ಧ ನೀಡಿರುವ ಕೇಸ್‌ ವಾಪಸ್‌ ತೆಗೆದುಕೊಳ್ಳುವಂತೆ ಒತ್ತಡವಿದೆ. ಜೈಲಿನಲ್ಲಿ ನನ್ನ ಮೇಲೆ ಹಲ್ಲೆ ನಡೆದಿದೆ. ಪಂಜಾಬ್ ಮತ್ತು ಗೋವಾ ಚುನಾವಣೆ ಸಂದರ್ಭದಲ್ಲಿ ಹಣ ನೀಡುವಂತೆ ಆಮ್ ಆದ್ಮಿ ಪಕ್ಷದ ಸತ್ಯೇಂದರ್ ಜೈನ್ (Satyendar Jain) ನನ್ನನ್ನು ಕೇಳಿದ್ದರು. ಹೀಗಾಗಿ ಕಾನೂನಿನಂತೆ ನಡೆಯಲು ನಿರ್ಧರಿಸಿದ್ದೇನೆ. ಯಾರ ಸಹಾಯವನ್ನು ಪಡೆಯುವುದಿಲ್ಲ. ನನ್ನ ಕೇಸ್ ನಿರ್ವಹಿಸುವ ಸಾಮರ್ಥ್ಯ ನನಗಿದ್ದು ಅಮಾಯಕ ಎಂದು ಸಾಬೀತುಪಡಿಸುತ್ತೇನೆ. ನನ್ನ ಕೇಸ್‍ಗೆ ಸಂಬಂಧಿಸಿದ ಎಲ್ಲಾ ಮೂಲಗಳನ್ನು ಹೊಂದಿದ್ದೇನೆ. ಯಾರ ಸಹಾಯವೂ ಬೇಡ ಎಂದು ಮಾಂಡೊಲಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ತಿಳಿಸಿದ್ದಾನೆ. ಇದನ್ನೂ ಓದಿ: ಗುಜರಾತ್‍ನಲ್ಲಿ ಕಾಂಗ್ರೆಸ್‍ಗೆ ಮತ್ತೆ ಆಘಾತ – ಝಲೋದ್ ಭವೇಶ್ ಕಟಾರಾ ರಾಜೀನಾಮೆ

    ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಸತ್ಯೇಂದರ್ ಜೈನ್ ಅವರಿಗೆ ಸಂಬಂಧಿಸಿದ ಹಲವು ವೈಯಕ್ತಿಕ ವಿಚಾರಗಳು ನನಗೆ ಗೊತ್ತು ಎಂದು ಬೆದರಿಕೆ ಹಾಕಿರುವ ಚಂದ್ರಶೇಖರ್, ನಾನು ಅವರ ವೈಯಕ್ತಿಕ ವಿಚಾರಗಳನ್ನು ಬಿಚ್ಚಿಟ್ಟರೆ ದೇಶವನ್ನೇ ಅಲುಗಾಡಿಸುವಂತಹ ಸ್ಫೋಟಕ ಸತ್ಯವದು. ಕೇಜ್ರಿವಾಲ್ ಅವರೇ, ನೀವು ಮತ್ತು ನಿಮ್ಮ ಸಹಚರರು ಹೇಳುತ್ತಿರುವಂತೆ, ದೆಹಲಿ ಲೆಫ್ಟಿನೆಂಟ್ ಗವರ್ನರ್ ಮುಂದೆ ತಾನು ಪ್ರಸ್ತಾಪಿಸಿರುವ ಯಾವುದೇ ವಿಷಯ ಸುಳ್ಳಾದರೆ ತಾನು ನೇಣಿಗೇರಲು ಸಿದ್ಧನಿದ್ದೇನೆ. ಆದರೆ, ಒಂದು ವೇಳೆ ದೂರು ಸಾಬೀತಾದರೆ, ನೀವು ರಾಜೀನಾಮೆ ನೀಡುತ್ತೀರಾ? ರಾಜಕೀಯದಿಂದ ನಿವೃತ್ತಿ ಹೊಂದುವಿರಾ ಎಂದು ಪ್ರಶ್ನೆ ಹಾಕಿದ್ದಾನೆ. ಇದನ್ನೂ ಓದಿ: ಜಾಕ್ವೆಲಿನ್‌ಗೆ ಕಿಸ್ ಮಾಡುತ್ತಿರುವ ಸುಕೇಶ್ ಚಂದ್ರಶೇಖರ್ – ರೋಮ್ಯಾಂಟಿಕ್ ಫೋಟೋ ವೈರಲ್

    ಗೋವಾ ಮತ್ತು ಪಂಜಾಬ್ ಚುನಾವಣೆಗಾಗಿ ಸತ್ಯೇಂದರ್ ಜೈನ್ ನನ್ನ ಬಳಿ ಹಣ ಕೇಳಿದರು. ಜೈಲಿನ ಸಿಬ್ಬಂದಿ ಮೂಲಕ ನಿರಂತರ ಒತ್ತಡ, ಬೆದರಿಕೆಗಳಿತ್ತು. ಪಂಜಾಬ್ ಮತ್ತು ಗೋವಾ ಚುನಾವಣೆಯ ಸಂದರ್ಭದಲ್ಲಿ ನಾನು ತನಿಖೆಗೆ ಒಳಪಡುತ್ತಿದ್ದರೂ ಧೈರ್ಯದಿಂದ ಹಣ ನೀಡುವಂತೆ ಜೈನ್ ನನ್ನನ್ನು ಕೇಳಿದರು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾನೆ. ಈ ಆರೋಪವನ್ನು ಎಎಪಿ ತಿರಸ್ಕರಿಸಿದ್ದು, ಸುಳ್ಳು ಹೇಳುತ್ತಿದ್ದಾನೆ ಎಂದು ಪ್ರತ್ಯಾರೋಪ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • AAP ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ದೆಹಲಿ ಲೆಫ್ಟಿನೆಂಟ್ ಗವರ್ನರ್

    AAP ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ದೆಹಲಿ ಲೆಫ್ಟಿನೆಂಟ್ ಗವರ್ನರ್

    ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ತಮ್ಮ ವಿರುದ್ಧದ ಸುಳ್ಳು ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಎಎಪಿ ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

    ಎಎಪಿ ಶಾಸಕರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ದುರ್ಗೇಶ್ ಪಾಠಕ್ ಸೇರಿದಂತೆ ಇತರ ಎಎಪಿ ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಸಕ್ಸೆನಾ 2016ರಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷರಾಗಿದ್ದಾಗ 1,400 ಕೋಟಿ ರೂ. ಭ್ರಷ್ಟಾಚಾರ ಮಾಡಿದ್ದಾರೆ ಎಂದು ಎಎಪಿ ನಾಯಕರು ಆರೋಪಿಸಿದ್ದರು. ಈ ಆರೋಪವನ್ನು ವಿ.ಕೆ ಸಕ್ಸೇನಾ ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ಲಕ್ಷ್ಮೀನಾರಾಯಣ ಕಾಂಗ್ರೆಸ್‌ಗೆ ರಾಜೀನಾಮೆ- ಬಿಜೆಪಿ ಸೇರಲು ಸಿದ್ಧ

    ಕಳೆದ ತಿಂಗಳು ಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಸಕ್ಸೆನಾ ಶಿಫಾರಸು ಮಾಡಿದ ಬಳಿಕ ಆಡಳಿತ ಪಕ್ಷ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವೆ ಜಿದ್ದಾಜಿದ್ದಿ ಆರಂಭವಾಗಿತ್ತು. ಆ ಬಳಿಕ ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇದೀಗ ಎಎಪಿ ಶಾಸಕರು ಸೇರಿದಂತೆ ದೆಹಲಿಯ ಸಂವಾದ ಮತ್ತು ಅಭಿವೃದ್ಧಿ ಆಯೋಗದ ಉಪಾಧ್ಯಕ್ಷರಾಗಿರುವ ಜಾಸ್ಮಿನ್ ಶಾ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇದೀಗ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಏಪ್ರಿಲ್‌- ಜೂನ್‌ GDP ಬೆಳವಣಿಗೆ 13.5% ರಷ್ಟು ಏರಿಕೆ

    Live Tv
    [brid partner=56869869 player=32851 video=960834 autoplay=true]

  • ಹೊಸ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ – ಮಾಜಿ ಲೆಫ್ಟಿನೆಂಟ್ ಗವರ್ನರ್ ಮೇಲೆ ಎಎಪಿ ಆರೋಪ

    ಹೊಸ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ – ಮಾಜಿ ಲೆಫ್ಟಿನೆಂಟ್ ಗವರ್ನರ್ ಮೇಲೆ ಎಎಪಿ ಆರೋಪ

    ನವದೆಹಲಿ: ರಾಷ್ಟ್ರ ರಾಜಧಾನಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಹೊಸ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ದೆಹಲಿ ಸರ್ಕಾರ ಶನಿವಾರ ಆರೋಪಿಸಿದೆ.

    ಹೊಸ ಅಬಕಾರಿ ನೀತಿಯಿಂದ ರಾಜ್ಯಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ. ಅದರ ಅನುಷ್ಠಾನದ ಬಗ್ಗೆ ಸಿಬಿಐ ತನಿಖೆ ನಡೆಸಿದ ಬಳಿಕ ಅದನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಅನಿಲ್ ಬೈಜಾಲ್ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜ್ಯದ ಮುಖ್ಯಮಂತ್ರಿ ಸುಳ್ಳು ಹೇಳಲ್ಲ ಎಂದು ಅಂದುಕೊಂಡಿದ್ದೇವೆ: ಯು.ಟಿ ಖಾದರ್

    ಹೊಸ ಅಬಕಾರಿ ನೀತಿಯಿಂದಾಗಿ ಕೆಲವು ಬಾರ್ ಮಾಲೀಕರು ಸಾವಿರಾರು ಕೋಟಿ ರೂ. ಲಾಭ ಪಡೆದಿದ್ದಾರೆ. ಇದರಿಂದ ಸರ್ಕಾರ ಸಾವಿರಾರು ಕೋಟಿ ರೂ. ಕಳೆದುಕೊಂಡಿದೆ. ದೆಹಲಿ ಸರ್ಕಾರ 2021-22 ರ ಹೊಸ ಅಬಕಾರಿ ನೀತಿಯನ್ನು ಅನುಮತಿಸದ ಕಾರಣ ಕೆಲವು ಜನರಿಗೆ ಪ್ರಯೋಜನವಾಗಿದೆ ಎಂದರು. ಇದನ್ನೂ ಓದಿ: ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್‌ ಶಾ ಬಳಿ ನೆರೆ ಪರಿಹಾರ ಕೇಳಲಿಲ್ಲವೇಕೆ – BJP ಸರ್ಕಾರಕ್ಕೆ ಕಾಂಗ್ರೆಸ್‌ ಪ್ರಶ್ನೆ

    ಅನಿಲ್ ಬೈಜಾಲ್ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿದ್ದಾಗ ಅರವಿಂದ್ ಕೇಜ್ರಿವಾಲ್ ಸರ್ಕಾರ 2021ರ ನವೆಂಬರ್ 17 ರಂದು ಹೊಸ ಅಬಕಾರಿ ನೀತಿಯನ್ನು ಸಿದ್ಧಪಡಿಸಿತ್ತು. 2021ರಲ್ಲಿ ಅಂಗೀಕರಿಸಿದ ಹೊಸ ಅಬಕಾರಿ ನೀತಿಯಲ್ಲಿ ಪ್ರತೀ ಪ್ರದೇಶಗಳಲ್ಲೂ ಸಮಾನ ಸಂಖ್ಯೆಯ ಮದ್ಯದ ಅಂಗಡಿಗಳು ಇರಬೇಕೆಂದು ನಿರ್ಧರಿಸಲಾಗಿದೆ. ಆದರೆ ಈ ಹಿಂದೆ ಒಂದೇ ಸ್ಥಳದಲ್ಲಿ 20 ಬಾರ್‌ಗಳಿದ್ದರೆ, ಇನ್ನೂ ಕೆಲವೆಡೆ ಒಂದೂ ಇರುತ್ತಿರಲಿಲ್ಲ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಸಿಂಗಾಪುರ ಭೇಟಿಗೆ ಕೇಜ್ರಿವಾಲ್‌ಗೆ ಅನುಮತಿ ನಿರಾಕರಿಸಿದ ಲೆಫ್ಟಿನೆಂಟ್ ಗವರ್ನರ್

    ಸಿಂಗಾಪುರ ಭೇಟಿಗೆ ಕೇಜ್ರಿವಾಲ್‌ಗೆ ಅನುಮತಿ ನಿರಾಕರಿಸಿದ ಲೆಫ್ಟಿನೆಂಟ್ ಗವರ್ನರ್

    ನವದೆಹಲಿ: ಆಗಸ್ಟ್ 1 ರಂದು ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋರಿದ ಅನುಮತಿಯನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್(ಎಲ್‌ಜಿ) ವಿ.ಕೆ ಸಕ್ಸೇನಾ ಗುರುವಾರ ತಿರಸ್ಕರಿಸಿದ್ದಾರೆ.

    ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆ ಮೇಯರ್‌ಗಳಿಗೆ ಮೀಸಲಾಗಿದ್ದು, ಆ ಕಾರ್ಯಕ್ರಮದಲ್ಲಿ ಸಿಎಂ ಹಾಜರಾಗುವುದು ಸರಿಯಲ್ಲ ಎಂದು ಸಕ್ಸೇನಾ ಹೇಳಿದ್ದಾರೆ.

    ಲೆಫ್ಟಿನೆಂಟ್ ಗವರ್ನರ್ ಶೃಂಗಸಭೆಯ ಭೇಟಿಗೆ ಅನುಮತಿ ನೀಡದಿದ್ದರೂ ಕೇಜ್ರಿವಾಲ್ ಸಿಂಗಾಪುರಕ್ಕೆ ಭೇಟಿ ನೀಡುವುದಾಗಿ ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಕೈ ಕೊಟ್ಟ ಮೋದಿ ಪ್ಲಾನ್ – ಕಾಡುಗಳ್ಳರ ಪತ್ತೆ ಹಚ್ಚಲು ವಿಫಲವಾಯ್ತು ಮುಧೋಳ ತಳಿಯ ಶ್ವಾನ

    ಅನುಮತಿ ನಿರಾಕರಣೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ನಮ್ಮ ದೇಶದ ಪ್ರತಿಯೊಂದು ಸಾಂವಿಧಾನಿಕ ಪ್ರಾಧಿಕಾರದ ಭೇಟಿಯನ್ನು ಆ ಪ್ರಾಧಿಕಾರದ ವ್ಯಾಪ್ತಿಯೊಳಗೆ ಬರುವ ವಿಷಯಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ನಿಮ್ಮ ಮಾತಿನಂತೆ ನಡೆಯುವುದಾದರೆ, ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ವಿದೇಶಿ ಭೇಟಿಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಹೆಚ್ಚಿನ ಭೇಟಿಗಳಲ್ಲಿ ರಾಜ್ಯದ ಪಟ್ಟಿಯಲ್ಲಿ ಹಾಗೂ ಅಧಿಕಾರದ ವ್ಯಾಪ್ತಿಯಲ್ಲಿ ಬಾರದ ವಿಷಯಗಳನ್ನೇ ಚರ್ಚಿಸುತ್ತಾರೆ ಎಂದಿದ್ದಾರೆ.

    ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಶೃಂಗಸಭೆಗೆ ಆಹ್ವಾನಿಸಿದ್ದರು. ಈ ಬಗ್ಗೆ ಕಳೆದ ವಾರ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಸಿಂಗಾಪುರ ಭೇಟಿಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ

    ಕೇಂದ್ರ ತನಗೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅನುಮತಿ ನೀಡದೇ ಹೋದಾಗ ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿ, ನಾನು ಅಪರಾಧಿಯಲ್ಲ, ದೆಹಲಿಯ ಚುನಾಯಿತ ಮುಖ್ಯಮಂತ್ರಿ. ಸಿಂಗಾಪುರದಲ್ಲಿ ನಡೆಯುತ್ತಿರುವ ಜಾಗತಿಕ ಶೃಂಗಸಭೆಯಲ್ಲಿ ಭಾಗವಹಿಸುವುದು ಹೆಮ್ಮೆಯ ವಿಚಾರ. ಆದರೆ ಕೇಂದ್ರ ನನಗೆ ಭೇಟಿಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.

    Live Tv
    [brid partner=56869869 player=32851 video=960834 autoplay=true]

  • ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ

    ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ತಮ್ಮ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಬುಧವಾರ ಮೂಲಗಳು ತಿಳಿಸಿವೆ.

    ಈ ಹಿಂದೆ 2016ರ ಡಿಸೆಂಬರ್‌ನಲ್ಲಿ ನಜೀಬ್ ಜಂಗ್ ದೆಹಲಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಹಠಾತ್ ರಾಜೀನಾಮೆ ನೀಡಿದ್ದರು. ಬಳಿಕ ಬೈಜಾಲ್ ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಇದನ್ನೂ ಓದಿ: ಕುದುರೆ ರೇಸ್, ಆನ್‌ಲೈನ್‌ ಆಟ, ಕ್ಯಾಸಿನೋಗಳ ಮೇಲೆ ಶೇ.28 ಜಿಎಸ್‌ಟಿ

    ದೆಹಲಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಯಾವುದೇ ನಿಶ್ಚಿತ ಅಧಿಕಾರಾವಧಿ ಇಲ್ಲ. ಇದೀಗ 5 ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿರುವ ಬೈಜಾಲ್ ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಎಲೆಕ್ಷನ್- ಒಬಿಸಿ ಕೋಟಾಕ್ಕೆ ಸುಪ್ರೀಂ ಸಮ್ಮತಿ

    ಬೈಜಾಲ್ ಯಾರು?
    ಅನಿಲ್ ಬೈಜಾಲ್ ಕೇಂದ್ರಾಡಳಿತ ಪ್ರದೇಶದ ಕೇಡರ್‌ನ 1969ರ ಬ್ಯಾಚ್‌ನ ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಇದಕ್ಕೂ ಮುನ್ನ ಅವರು ದೆಹಲಿ ಅಭಿವೃದ್ಧಿ ಪ್ರಾಧಿಕಾರದ(ಡಿಡಿಎ) ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸಾರ ಭಾರತಿ ಹಾಗೂ ಇಂಡಿಯನ್ ಏರ್‌ಲೈನ್ಸ್‌ನಂತಹ ಪ್ರಮುಖ ಸಾರ್ವಜನಿಕ ವಲಯದ ಕಂಪನಿಗಳ ಮುಖ್ಯಸ್ಥರಾಗಿದ್ದರು.

  • ನಿರ್ಭಯಾ ಕೇಸ್ – ಜೀವ ಉಳಿಸಿಕೊಳ್ಳಲು ದೋಷಿಗಳಿಂದ ಮತ್ತೊಂದು ಹೊಸ ಪ್ರಯತ್ನ

    ನಿರ್ಭಯಾ ಕೇಸ್ – ಜೀವ ಉಳಿಸಿಕೊಳ್ಳಲು ದೋಷಿಗಳಿಂದ ಮತ್ತೊಂದು ಹೊಸ ಪ್ರಯತ್ನ

    ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ದೋಷಿಗಳು ಜೀವ ಉಳಿಸಿಕೊಳ್ಳಲು ಮತ್ತೊಂದು ಹೊಸ ಪ್ರಯತ್ನ ಆರಂಭಿಸಿದ್ದಾರೆ.

    ಗಲ್ಲು ಶಿಕ್ಷೆಗೆ 10 ದಿನಗಳು ಬಾಕಿ ಇರುವಾಗ ದೋಷಿ ವಿನಯ್ ಶರ್ಮಾ ಕ್ಷಮಾದಾನ ಕೋರಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಅರ್ಜಿ ಸಲ್ಲಿಸಿದ್ದಾನೆ. ಇದನ್ನೂ ಓದಿ: ಕೊನೆಗೂ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಫಿಕ್ಸ್ – ಮಾರ್ಚ್ 20ಕ್ಕೆ ಡೆತ್ ವಾರೆಂಟ್ ಜಾರಿ

    ಹೈ ಕೋರ್ಟ್, ಸುಪ್ರೀಂಕೋರ್ಟ್, ರಾಷ್ಟ್ರಪತಿಗಳಿಗೆ ಕ್ಷಮದಾನ ಅರ್ಜಿ ಸಲ್ಲಿಸಿ ವಜಾ ಆದ ಬಳಿಕ ನಾಲ್ವರು ಅಪರಾಧಿಗಳು ಮತ್ತೊಂದು ಹೊಸ ಪ್ರಯತ್ನ ಆರಂಭಿಸಿದ್ದು, ಕಡೆಯ ಕಾನೂನು ಅವಕಾಶ ಬಳಸಿಕೊಳ್ಳಲು ಮುಂದಾಗಿದ್ದಾರೆ.

    ಈಗಾಗಲೇ ಮೂರು ಬಾರಿ ಗಲ್ಲು ಶಿಕ್ಷೆಗೆ ಡೆತ್ ವಾರೆಂಟ್ ಜಾರಿಯಾಗಿದ್ದ ನಾಲ್ವರು ಅಪರಾಧಿಗಳನ್ನು ಬೇರೆ ಬೇರೆ ಕಾನೂನು ಹೋರಾಟಗಳ ನೆಪವೊಡ್ಡಿ ಗಲ್ಲು ಶಿಕ್ಷೆಯಿಂದ ಪಾರಾಗಿದ್ದರು. ಈಗ ನಾಲ್ಕನೇ ಬಾರಿಗೆ ಡೆತ್ ವಾರಂಟ್ ಜಾರಿಯಾಗಿದ್ದು, ಮಾರ್ಚ್ 20ಕ್ಕೆ ದಿನಾಂಕ ನಿಗದಿ ಮಾಡಲಾಗಿದೆ.

  • ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲ: ಕಿರಣ್ ಬೇಡಿಗೆ ಮದ್ರಾಸ್ ಹೈಕೋರ್ಟ್ ಆದೇಶ

    ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲ: ಕಿರಣ್ ಬೇಡಿಗೆ ಮದ್ರಾಸ್ ಹೈಕೋರ್ಟ್ ಆದೇಶ

    ಪುದುಚೇರಿ: ಪುದುಚೇರಿ ಸರ್ಕಾರದ ದೈನಂದಿನ ಚಟುವಟಿಕಗಳಲ್ಲಿ ಮಧ್ಯ ಪ್ರವೇಶ ಮಾಡುವ ಅಧಿಕಾರ ರಾಜ್ಯಪಾಲರಾದ ಕಿರಣ್ ಬೇಡಿ ಅವರಿಗೆ ಇಲ್ಲ ಎಂದು ಮದ್ರಾಸ್ ಹೈಕೋರ್ಟ್ ಇಂದು ಮಹತ್ವದ ಆದೇಶ ಪ್ರಕಟಿಸಿದೆ.

    ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ ಹಾಗೂ ಅಲ್ಲಿನ ರಾಜ್ಯಪಾಲರಾದ ಕಿರಣ್ ಬೇಡಿ ಮಧ್ಯೆ ಉಂಟಾಗಿದ್ದ ವಿವಾದಕ್ಕೆ ಮದ್ರಾಸ್ ಹೈಕೋರ್ಟ್ ತೆರೆ ಎಳೆದಿದೆ. ಇದನ್ನೂ ಓದಿ: ಕಿರಣ್ ಬೇಡಿ ನಿವಾಸದ ಎದುರೇ ಮಲಗಿದ ಪುದುಚೇರಿ ಸಿಎಂ

    ಸಿಎಂ ವಿ.ನಾರಾಯಣ ಸ್ವಾಮಿ ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬೇಡಿ. ಸರ್ಕಾರದ ಯಾವುದೇ ರೀತಿಯ ದಾಖಲೆಗಳನ್ನು ರಾಜ್ಯಪಾಲರು ಕೇಳುವ ಅಧಿಕಾರ ಹೊಂದಿಲ್ಲ ಎಂದು ಕೋರ್ಟ್ ಆದೇಶ ಹೊರಡಿಸಿದೆ.

    ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ವಿ.ನಾರಾಯಣ ಸ್ವಾಮಿ ಅವರು, ಮದ್ರಾಸ್ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಇದು ಸಂವಿಧಾನ ಉಳಿಸಲು ಸರ್ಕಾರ ನಡೆಸಿದ ಹೋರಾಟಕ್ಕೆ ಸಿಕ್ಕ ಜಯ ಎಂದು ತಿಳಿಸಿದ್ದಾರೆ.

    ಏನಿದು ಪ್ರಕರಣ?:
    ಪುದುಚೇರಿ ರಾಜ್ಯಪಾಲರಾದ ಕಿರಣ್ ಬೇಡಿ ಅವರು ಸರ್ಕಾರದ ಕಾರ್ಯವೈಕರಿಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಸಿಎಂ ವಿ.ನಾರಾಯಣ ಸ್ವಾಮಿ ಆರೋಪಿಸಿದ್ದರು. ಬಳಿಕ ನಾರಾಯಣಸ್ವಾಮಿ ಅವರು ಪುದುಚೇರಿ ರಾಜಭವನದ ಮುಂದೆ ತಮ್ಮ ಸಚಿವರು, ಶಾಸಕರೊಂದಿಗೆ ಪ್ರತಿಭಟನೆ ಕೂಡ ನಡೆಸಿದ್ದರು.

    ಕಿರಣ್ ಬೇಡಿ ಅವರು ಆಡಳಿತದಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಲಕ್ಷ್ಮೀ ನಾರಾಯಣನ್ 2017ರಲ್ಲಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು.

  • ನಾನೇ ಸೂಪರ್ ಮ್ಯಾನ್ ಅಂತೀರಾ, ಕೆಲ್ಸಾನೇ ಮಾಡಲ್ಲ-ದೆಹಲಿ ಗವರ್ನರ್ ಗೆ ಸುಪ್ರೀಂ ಚಾಟಿ

    ನಾನೇ ಸೂಪರ್ ಮ್ಯಾನ್ ಅಂತೀರಾ, ಕೆಲ್ಸಾನೇ ಮಾಡಲ್ಲ-ದೆಹಲಿ ಗವರ್ನರ್ ಗೆ ಸುಪ್ರೀಂ ಚಾಟಿ

    ನವದೆಹಲಿ: ನಾನೇ ಸೂಪರ್ ಮ್ಯಾನ್ ಎಂದು ಹೇಳುತ್ತೀರಿ, ಆದರೆ ಯಾವುದೇ ಕೆಲಸ ಮಾಡುವುದಿಲ್ಲ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರನ್ನು ಗುರುವಾರ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

    ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕಸದ ಸಮಸ್ಯೆ ಕುರಿತು ದೆಹಲಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಂ.ಬಿ. ಲೋಕೂರ್ ಮತ್ತು ದೀಪಕ್ ಗುಪ್ತರ ದ್ವಿಸದಸ್ಯ ಪೀಠದಲ್ಲಿ ನಡೆಯಿತು.

    ಈ ವೇಳೆ ಕಸದ ಸಮಸ್ಯೆಯನ್ನು ಸರಿಯಾಗಿ ನಿರ್ವಹಣೆ ಮಾಡದ್ದಕ್ಕೆ “ನನಗೆ ಅಧಿಕಾರ ಇದೆ, ನಾನೇ ಸೂಪರ್ ಮ್ಯಾನ್ ಎಂದು ನೀವು ಹೇಳುತ್ತೀರಿ. ಆದರೆ ನೀವು ಏನೂ ಕೆಲಸ ಮಾಡುವುದಿಲ್ಲ” ಎಂದು ಹೇಳಿ ಚಾಟಿ ಬೀಸಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್ ಕಸ ವಿಲೇವಾರಿ ಸಂಬಂಧ ಸುಪ್ರೀಂ ಕೋರ್ಟ್ ಕೇಳಿದ್ದ ಸಮಯ ನಿಗದಿಗೆ ಸಮಪರ್ಕವಾದ ಉತ್ತರ ನೀಡದ್ದಕ್ಕೆ ಗರಂ ಆದ ನ್ಯಾಯಾಮೂರ್ತಿಗಳು ತರಾಟೆಗೆ ತೆಗೆದುಕೊಂಡರು.

    ಈ ಸಮಸ್ಯೆಗೆ ದೆಹಲಿ ಮಹಾನಗರ ಪಾಲಿಕೆ ಕಾರಣ ಎಂದು ನೀವು ಹೇಳುತ್ತೀರಿ. ಪಾಲಿಕೆಯ ನಿಯಂತ್ರಣ ನಿಮ್ಮಲ್ಲಿರುವಾಗ ನಾವು ಯಾಕೆ ಅವರನ್ನು ಪ್ರಶ್ನೆ ಮಾಡಬೇಕು. ಹೀಗಾಗಿ ಈ ಸಮಸ್ಯೆ ಪರಿಹಾರಕ್ಕೆ ಮಾರ್ಗಗಳನ್ನು ಹುಡುಕಿ ಎಂದು ಆದೇಶಿಸಿತು.

    ರಾಷ್ಟ್ರ ರಾಜಧಾನಿಯ ಕಸದ ಸಮಸ್ಯೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೂರುವಂತಿಲ್ಲ. ಈ ವಿಚಾರದಲ್ಲಿ  ದೆಹಲಿ ಸಿಎಂ ಅವರನ್ನು ಎಳೆದು ತರಬೇಡಿ ಎಂದು ಹೇಳಿತು.

    ಜುಲೈ 16ರ ಒಳಗಡೆ ಕಸ ವಿಲೇವಾರಿಗೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮಗಳ ಬಗ್ಗೆ ಅಫಿಡವಿಟ್ ಸಲ್ಲಿಸಿ ಎಂದು ಕೋರ್ಟ್ ಲೆಫ್ಟಿನೆಂಟ್ ಗವರ್ನರ್ ಗೆ ಸೂಚಿಸಿ ಅರ್ಜಿ ವಿಚಾರಣೆಯನ್ನು ಮುಂದೂಡಿತು.