Tag: Life story

  • ಕಾರವಾರದಲ್ಲಿ ಬದುಕಿದ್ದ ವಿಲಕ್ಷಣ ವ್ಯಕ್ತಿಯ ಕಥೆಯೇ ‘ಟೋಬಿ’ : ಗುಟ್ಟು ರಟ್ಟು

    ಕಾರವಾರದಲ್ಲಿ ಬದುಕಿದ್ದ ವಿಲಕ್ಷಣ ವ್ಯಕ್ತಿಯ ಕಥೆಯೇ ‘ಟೋಬಿ’ : ಗುಟ್ಟು ರಟ್ಟು

    ನಿನ್ನೆಯಿಂದ ರಾಜ್ ಬಿ ಶೆಟ್ಟಿ ನಟನೆಯ ‘ಟೋಬಿ’ ಸಿನಿಮಾದ ಫಸ್ಟ್ ಲುಕ್ ಟ್ರೆಂಡಿಂಗ್ ನಲ್ಲಿದೆ. ವಿಲಕ್ಷಣವಾದ ಪೋಸ್ಟರ್ ಇದಾಗಿದ್ದು, ಸಿನಿಮಾದ ಕಥೆಯ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿತ್ತು. ಈ ಪೋಸ್ಟರ್ ಗೂ ಕಥೆಗೂ ಏನಾದರೂ ಸಂಬಂಧವಿದೆಯಾ ಎನ್ನುವ ಪ್ರಶ್ನೆಯೂ ಮೂಡಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

    ಈ ಸಿನಿಮಾದ ಕಥೆ, ಚಿತ್ರಕಥೆ ಬರೆದಿರುವುದು ಕಥೆಗಾರ ಟಿ.ಕೆ.ದಯಾನಂದ್ (TK Dayanand). ಅವರೇ ಸಿನಿಮಾದ ಕಥೆಯ ಗುಟ್ಟನ್ನೂ ರಟ್ಟು ಮಾಡಿದ್ದಾರೆ. ತಾವೇ ಸ್ವತಃ ನೋಡಿದ ಕಾರವಾರದ (Karwar) ವಿಲಕ್ಷಣ ವ್ಯಕ್ತಿಯ ಬದುಕನ್ನು ಈ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರಂತೆ. ಆ ವ್ಯಕ್ತಿಯನ್ನು ನೋಡಿದಾಗಿಂದ, ನನ್ನಲ್ಲಿ ಆತ  ನಾನಾ ರೀತಿಯಲ್ಲಿ ಕಾಡಿದ. ಆ ಕಾಡಿದ ವ್ಯಕ್ತಿಯ ಕಥೆಯೇ ಟೋಬಿ ಸಿನಿಮಾ ಎಂದಿದ್ದಾರೆ ಟಿ.ಕೆ.ದಯಾನಂದ್.

    ನಿನ್ನೆ ‘ಟೋಬಿ’ (Toby) ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಸಾಕಷ್ಟು ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಚಿತ್ರದ ಮೂಲಕ ರಾಜ್ ಧೂಳೆಬ್ಬಿಸಲು ರೆಡಿಯಾಗಿದ್ದಾರೆ. ಸದ್ಯ ‘ಟೋಬಿ’ ಸಿನಿಮಾದ ಫಸ್ಟ್ ಲುಕ್ ಮೂಲಕ ರಾಜ್ ಬಿ ಶೆಟ್ಟಿ (Raj B Shetty) ಸಂಚಲನ ಮೂಡಿಸಿದ್ದಾರೆ. ಇದನ್ನೂ ಓದಿ:‘ಎಮರ್ಜೆನ್ಸಿ’ ನಂತರದ ಸಿನಿಮಾ ಸುಳಿವು ಕೊಟ್ಟ ಕಂಗನಾ ರಣಾವತ್

    ಒಂದು ಮೊಟ್ಟೆಯ ಕಥೆ ಸಿನಿಮಾದ ಮೂಲಕ ಸ್ಯಾಂಡಲ್ವುಡ್ ನಟ ಕಮ್ ನಿರ್ದೇಶಕನಾಗಿ ಎಂಟ್ರಿ ಕೊಟ್ಟ ರಾಜ್ ಬಿ ಶೆಟ್ಟಿ ಅವರು ಭಿನ್ನ ಕಥೆಗಳನ್ನ ಆಯ್ಕೆ ಮಾಡಿ, ಸಿನಿಮಾ ಮಾಡುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ರಾಜ್ ಬಿ ಶೆಟ್ಟಿ, ಅವರ ಮೇಲಿನ ಕ್ರೇಜ್ ಫ್ಯಾನ್ಸ್ಗೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ‘ಟೋಬಿ’ ಚಿತ್ರದ ಸುದ್ದಿನೂ ಅದಕ್ಕೆ ಸಾಕ್ಷಿ ಆಗಿದೆ. ಸೋಷಿಯಲ್ ಮೀಡಿಯಾದ ಯಾವುದೇ ಪೇಜ್ ತೆಗೆದ್ರು ಅಷ್ಟೇನೆ, ಅಲ್ಲಿ `ಟೋಬಿ’ ಚಿತ್ರದ ಕ್ರೇಜ್ ಕಂಡು ಬರುತ್ತಿದೆ. ಅಷ್ಟರ ಮಟ್ಟಿಗೆ ಸಿನಿಮಾ ರಿಲೀಸ್ ಮುನ್ನವೇ ಸಂಚಲನ ಸೃಷ್ಟಿಸಿದೆ.

    ಇತ್ತೀಚಿಗಷ್ಟೇ ಟೋಬಿ ಸಿನಿಮಾದ ಸಣ್ಣ ಝಲಕ್‌ವೊಂದು ರಿವೀಲ್ ಆಗಿತ್ತು. ಇದು ಸೋಷಿಯಲ್ ಮೀಡಿಯಾ ಶೇಕ್ ಮಾಡುವಷ್ಟು ಸಿನಿಪ್ರಿಯರ ಗಮನ ಸೆಳೆಯಿತು. ಈಗ ಟೋಬಿ ಚಿತ್ರದ ಫಸ್ಟ್ ರಿವೀಲ್ ಆಗಿದೆ. ಅದರಲ್ಲಿ ರಾಜ್ ಬಿ ಶೆಟ್ಟಿ ಅವರು ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಮೂಗಿಗೆ ರಿಂಗ್ ಧರಿಸಿದ್ದು, ಮುಖದ ಇಂಟು ಮಾರ್ಕ್ ಇದೆ. ಟೋಟಲಿ ರಾ ಲುಕ್‌ನಲ್ಲಿ ಶೆಟ್ರು ಶೈನ್ ಆಗಿದ್ದಾರೆ. ಫಸ್ಟ್‌ ಲುಕ್‌ ಟೀಸರ್‌ನಲ್ಲಿ ರಕ್ತ-ಸಿಕ್ತ ಅವತಾರದಲ್ಲಿ ನಟ ಕಾಣಿಸಿಕೊಂಡಿದ್ದಾರೆ. ‘ಟೋಬಿ’ ಸಿನಿಮಾದ ಮೂಲಕ ಶೆಟ್ರು ಏನೋ ಹೇಳೋದ್ದಕ್ಕೆ ಹೊರಟಿದ್ದಾರೆ ಏನು ಎಂಬ ಕುತೂಹಲ ಈಗಾಗಲೇ ಅಭಿಮಾನಿಗಳಲ್ಲಿ ಮೂಡಿದೆ. ರಾಜ್ ಬಿ ಶೆಟ್ಟಿಗೆ ಜೋಡಿಯಾಗಿ ಚೈತ್ರಾ ಆಚಾರ್ ನಟಿಸಿದ್ದಾರೆ.

     

    ‘ಟೋಬಿ’ ಸಿನಿಮಾದಲ್ಲಿ ಕಂಟೆಂಟ್ ಇದೆ. ಕಮರ್ಷಿಯಲ್ ಟಚ್ ಕೂಡ ಇದೆ. ಎರಡೂ ಇರೋ ಈ ಚಿತ್ರವನ್ನ ಕಂಟೆಂಟ್ ಬೇಸ್ ಕಮರ್ಷಿಯಲ್ ಸಿನಿಮಾ ಅಂತಲೇ ರಾಜ್ ಬಿ ಶೆಟ್ರು ಹೇಳಿಕೊಂಡಿದ್ದಾರೆ. ಜೊತೆಗೆ ಈ ಚಿತ್ರದ ರಾಜ್ ಬಿ ಶೆಟ್ರ ಚಿತ್ರ ಜೀವನದ ಮೊದಲ ಕರ್ಮಷಿಯಲ್ ಸಿನಿಮಾ ಕೂಡ ಆಗಿದೆ. ಫಸ್ಟ್ ಲುಕ್ ನೋಡಿದ್ರೆ ರಾಜ್ ಬಿ ಶೆಟ್ಟಿ ಅವರ ಕೆರಿಯರ್‌ನಲ್ಲಿ ಈ ಸಿನಿಮಾ ಮೈಲುಗಲ್ಲು ಸೃಷ್ಟಿಸೋದಂತೂ ಗ್ಯಾರಂಟಿ ಅಂತಿದ್ದಾರೆ ಸಿನಿಪಂಡಿತರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಜಯ ಕುಮಾರ್ ಮುಂದೆ ‘ಸಂಚಾರಿ’ ಬಂದಿದ್ದು ಹೇಗೆ?

    ವಿಜಯ ಕುಮಾರ್ ಮುಂದೆ ‘ಸಂಚಾರಿ’ ಬಂದಿದ್ದು ಹೇಗೆ?

    ಬೆಂಗಳೂರು: ಅದ್ಭುತ ನಟನೆ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಎಲ್ಲರ ಗಮನ ಸೆಳೆದ ನಟ ಸಂಚಾರಿ ವಿಜಯ್ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಅವರು ಜೀವನದುದ್ದಕ್ಕೂ ನಡೆದ ಬಂದಿರು ಹಾದಿಯನ್ನು ಗಮನಿಸಿದರೆ ಅವರು ಪಟ್ಟ ಶ್ರಮ ಎಷ್ಟಿದೆ ಎನ್ನುವುದು ಅನಾವರಣಗೊಳ್ಳುತ್ತದೆ.

    ವಿಜಯ್ 37ನೇ ವಯಸ್ಸಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನಟನೆ ಹಾಗೂ ಸಮಾಜಮುಖಿ ಕೆಲಸ ಎರಡರಲ್ಲೂ ಸೈ ಎನ್ನಿಸಿಕೊಂಡಿದ್ದ ಅವರ ಅಕಾಲಿಕ ವಿದಾಯ ಎಲ್ಲರಲ್ಲೂ ಶೋಕ ಮಡುಗಟ್ಟುವಂತೆ ಮಾಡಿದೆ. ಇವರ ನಿಧನಕ್ಕೆ ಚಿತ್ರರಂಗ, ಅಭಿಮಾನಿಗಳು, ಗಣ್ಯರು ಕಂಬನಿಯನ್ನು ಮಿಡಿದಿದ್ದಾರೆ. ಇದನ್ನೂ ಓದಿ: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ

    1983 ಜುಲೈ 18ರಂದು ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ವಿಜಯ್ ಅವರ ಮೂಲ ಹೆಸರು ವಿಜಯ್ ಕುಮಾರ್ ಬಿ. ಸಣ್ಣ ವಯಸ್ಸಿನಿಂದಲೇ ನಟನೆ ಬಗ್ಗೆ ಆಸಕ್ತಿ ಹೊಂದಿದ್ದ ವಿಜಯ್ ರಂಗಭೂಮಿಯಲ್ಲಿ ಪಳಗಿದರು. ಇವರು ಸಂಚಾರಿ ಹೆಸರಿನ ಥಿಯೇಟರ್ ಗ್ರೂಪ್‍ನಿಂದ ಬಂದ ಕಾರಣ ಸ್ಯಾಂಡಲ್‍ವುಡ್‍ನನಲ್ಲಿ ವಿಜಯ್ ಮುಂದೆ ‘ಸಂಚಾರಿ’ ಬಂತು. ನಂತರ ‘ಸಂಚಾರಿ ವಿಜಯ್’ ಪ್ರಖ್ಯಾತವಾಯ್ತು. ಇದನ್ನೂ ಓದಿ: ಲಾಕ್‍ಡೌನ್ ಮೊದಲು ಮಾತನಾಡಿದ್ದೆ, ಈಗ ಆಘಾತಗೊಂಡಿದ್ದೇನೆ: ಸುದೀಪ್

    ಚಿತ್ರರಂಗದಲ್ಲಿ ಅದೃಷ್ಟಪರೀಕ್ಷೆಗೆ ಸಾಕಷ್ಟು ಜನರು ಮುಂದಾಗುತ್ತಾರೆ. ಆದರೆ, ಎಲ್ಲರಿಗೂ ಯಶಸ್ಸು ಸಿಗೋದಿಲ್ಲ. ಆದರೆ, ಸಂಚಾರಿ ವಿಜಯ್‍ಗೆ ನಟನಾ ಕಲೆ ಅದ್ಭುತವಾಗಿ ಒಲಿದಿತ್ತು. ಯಾವುದೇ ಪಾತ್ರ ಕೊಟ್ಟರೂ ಅದನ್ನು ಸುಲಲಿತವಾಗಿ ನಿಭಾಯಿಸುತ್ತಿದ್ದರು. ತಾವು ಸೆಲೆಬ್ರಿಟಿ ಎನ್ನುವ ಯಾವುದೇ ಅಹಂ ಅವರಲ್ಲಿ ಎಂದಿಗೂ ಇರಲಿಲ್ಲ. ಕೊರೊನಾ ಸಂದರ್ಭದಲ್ಲಿ ಸಂಚಾರಿ ವಿಜಯ್ ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದರು. ಈ ಹಿಂದೆ ಕೂಡಾ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ವಿಜಯ್ ಇದೇ ಕಾರಣಕ್ಕಾಗಿ ಬಣ್ಣದ ಲೋಕದಾಚೆಗೂ ಅಭಿಮಾನಿಗಳನ್ನು ಹೊಂದಿದ್ದರು. ಇದನ್ನೂ ಓದಿ: ಮತ್ತೆ ಹುಟ್ಟಿ ಬಾ ಗೆಳೆಯ ಎಂದ ಸ್ಯಾಂಡಲ್‍ವುಡ್

    2011ರಲ್ಲಿ ತೆರೆಗೆ ಬಂದ ರಂಗಪ್ಪ ಹೋಗ್ಬಿಟ್ಟಾ ಸಿನಿಮಾ ಸಂಚಾರಿ ವಿಜಯ್ ಅವರ ಮೊದಲ ಸಿನಿಮಾ. ರಮೇಶ್ ಅರವಿಂದ್ ಅಭಿನಯಿಸಿದ ಈ ಚಿತ್ರದಲ್ಲಿ ನೀನಾಸಂ ಸತೀಶ್, ಮೊದಲಾದವರು ನಟಿಸಿದ್ದರು. ಈ ಚಿತ್ರದಲ್ಲಿ ಸಂಚಾರಿ ವಿಜಯ್ ಕೂಡ ಕಾಣಿಸಿಕೊಂಡಿದ್ದರು. ಅದೇ ವರ್ಷ ತೆರೆಗೆ ಬಂದ ರಾಮ ರಾಮ ರಘು ರಾಮ ಚಿತ್ರದಲ್ಲಿ ವಿಜಯ್ ನಟಿಸಿದರು. 2013ರಲ್ಲಿ ಪ್ರೇಮ್ ನಟನೆಯ ದಾಸ್ವಾಳ ಚಿತ್ರದಲ್ಲಿ ಪಾತ್ರ ಒಂದನ್ನು ನಿರ್ವಹಿಸಿದ್ದರು. 2014ರಲ್ಲಿ ಬಂದ ಹರಿವು ಚಿತ್ರದಲ್ಲಿ ಸಂಚಾರಿ ಮೊದಲ ಬಾರಿಗೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡರು. ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಇದನ್ನೂ ಓದಿ: ನಟ ಸಂಚಾರಿ ವಿಜಯ್ ನಿಧನಕ್ಕೆ ಸಿಎಂ ಸಂತಾಪ

     

    2015ರಲ್ಲಿ ತೆರೆಗೆ ಬಂದ ಅವರ ನಟನೆಯ ನಾನು ಅವನಲ್ಲ ಅವಳು ಸಿನಿಮಾ ಸಂಚಾರಿ ವಿಜಯ್ ಅವರ ವೃತ್ತಿ ಜೀವನವನ್ನೇ ಬದಲಾಯಿಸಿತು. ಈ ಚಿತ್ರದಲ್ಲಿ ಅವರ ಅದ್ಭುತ ನಟನೆಗೆ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಗಳು ಸಿಕ್ಕವು. ಈ ಚಿತ್ರ ತೆರೆಕಂಡ ನಂತರ ಅವರಿಗೆ ಅವಕಾಶಗಳು ತೀವ್ರವಾಗಿ ಹೆಚ್ಚಿದವು. 2017 ಮತ್ತು 2018ರಲ್ಲಿ ಅವರ ನಟನೆಯ 8-9 ಚಿತ್ರಗಳು ತೆರೆಗೆ ಬಂದವು. ಆ್ಯಕ್ಟ್ 1978 ಅವರ ಕೊನೆಯ ಚಿತ್ರವಾಗಿದೆ. ವಿಜಯ್ ಸಿನಿಮಾ ಮಾತ್ರವಲ್ಲದೇ ಅನೇಕ ಸಾಮಾಜಿಕ ಕಾರ್ಯಗಳ ಮೂಲಕವಾಗಿಯೂ ತಮ್ಮನ್ನೂ ತಾವು ಗುರುತಿಸಿಕೊಮಡಿದ್ದರು. ಇದೀಗ ಅವರ ಅಗಲಿಕೆ ಸ್ಯಾಂಡಲ್‍ವುಡ್‍ಗೆ ತುಂಬಲಾರದ ನಷ್ಟವಾಗಿದೆ.

  • ಗುಡ್ಡಗಾಡಿನಲ್ಲಿ 16 ಕೆರೆ- ಮಂಡ್ಯದ ಕಾಮೇಗೌಡರ ಸಾಧನೆಗೆ ಮೋದಿ ಮೆಚ್ಚುಗೆ

    ಗುಡ್ಡಗಾಡಿನಲ್ಲಿ 16 ಕೆರೆ- ಮಂಡ್ಯದ ಕಾಮೇಗೌಡರ ಸಾಧನೆಗೆ ಮೋದಿ ಮೆಚ್ಚುಗೆ

    ಬೆಂಗಳೂರು: ಸ್ವಂತ ಕೆಲಸದೊಂದಿಗೆ ಗುಡ್ಡಗಾಡು ಪ್ರದೇಶದಲ್ಲಿ 16 ಕೆರೆಗಳನ್ನು ನಿರ್ಮಿಸಿದ ಮಂಡ್ಯ ಜಿಲ್ಲೆಯ ಕಾಮೇಗೌಡರ ಸಾಮಾಜಿಕ ಕಳಕಳಿಯನ್ನು ಪ್ರಧಾನಿ ನರೇಂದ್ರ ಮೋದಿ ಹಾಡಿಹೊಗಳಿದ್ದಾರೆ.

    ಪ್ರಧಾನಿ ಮೋದಿ ಇಂದಿನ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ, ರಾಜ್ಯೋತ್ಸವ ಪುರಷ್ಕೃತ ಕಾಮೇಗೌಡ ಅವರನ್ನು ಶ್ಲಾಘಿಸಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸಮದೊಡ್ಡಿ ಗ್ರಾಮದ ಕುರಿಗಾಹಿ 83 ವರ್ಷದ ಕಾಮೇಗೌಡ ಅವರು 16 ಕೆರೆಗಳನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ ಎರಡು ಸಾವಿರಕ್ಕೂ ಹೆಚ್ಚು ಗಿಡ ನೆಟ್ಟು ಪರಿಸರ ಪ್ರೇಮ ಮೆರೆದಿದ್ದಾರೆ.

    ನೀಲಿ ವೆಂಕಟಗೌಡ, ರಾಜಮ್ಮ ದಂಪತಿಯ ಮಗ ಕ್ಯಾಮೆಗೌಡ ಅವರು ಶಾಲೆಯ ಮೆಟ್ಟಿಲು ಏರಿದವರಲ್ಲ. ಆದರೆ ತಮಗಿರುವ ಪರಿಸರ ಕಾಳಜಿಯಿಂದ ಅನೇಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರ ಕೆಲಸವನ್ನು ಗುರುತಿಸಿದ ರಾಜ್ಯ ಸರ್ಕಾರವು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಇಂದು ಪ್ರಧಾನಿ ಮೋದಿ ಕ್ಯಾಮೇಗೌಡರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅವರನ್ನು ದೇಶಕ್ಕೆ ಪರಿಚಯಿಸಿದ್ದಾರೆ.

    ಕೆರೆ ನಿರ್ಮಾಣಕ್ಕೆ ಕೈ ಹಾಕಿದ್ಯಾಕೆ?:
    ಕುರಿಗಾಹಿಯಾಗಿರುವ ಕ್ಯಾಮೇಗೌಡ ಅವರು ಸುಮಾರು 13 ವರ್ಷಗಳ ಹಿಂದೆ ಕುಂದೂರು ಬೆಟ್ಟಕ್ಕೆ ಕುರಿ ಮೇಯಿಸಲು ಹೋಗಿದ್ದರು. ಆಗ ವಿಪರೀತ ದಾಹವಾಗಿ ನೀರಿಗಾಗಿ ಪರದಾಟಿದ್ದರು. ಬಳಿಕ ಸ್ವಲ್ಪ ದೂರದ ಮನೆಗೆ ಹೋಗಿ ನೀರು ಕೇಳಿಪಡೆದಿದ್ದರು. ನಾನು ದಾಹ ತೀರಿಸಿಕೊಂಡೆ ಆದ್ರೆ ಪ್ರಾಣಿಗಳ ಪರಿಸ್ಥಿತಿ ಏನು ಎನ್ನುವ ಚಿಂತೆ ಅವರಿಗೆ ಕಾಡಿತ್ತು. ಹೀಗಾಗಿ ಗುಡ್ಡದಲ್ಲಿ ಕೆರೆ ನಿರ್ಮಾಣಕ್ಕೆ ಮುಂದಾದರು.

    ಕ್ಯಾಮೇಗೌಡರು ಗುಡ್ಡದಲ್ಲಿ ಕೆರೆ ತೋಡುತ್ತಿದ್ದನ್ನ ಕಂಡು ಅನೇಕರು ಗೇಲಿ ಮಾಡಿದ್ದರು. ಇವನಿಗೆ ಹುಚ್ಚು ಹಿಡಿದಿದೆ, ಅದಕ್ಕೆ ಇಲ್ಲಿ ಕೆರೆ ತೋಡುತ್ತಿದ್ದಾನೆ ಎಂದು ಮಾತನಾಡಿದ್ದರು. ಆದರೆ ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳದೆ ತಮ್ಮ ಕೆಲಸವನ್ನು ಮುಂದುವರಿಸಿದ ಕ್ಯಾಮೇಗೌಡರು ಸದ್ಯ 16 ಕೆರೆಗಳನ್ನು ನಿರ್ಮಿಸಿ ಪ್ರಧಾನಿ ಮೋದಿ, ದೇಶದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಕ್ಯಾಮೇಗೌಡರು ತೋಡಿದ ಕೆರೆಗಳಲ್ಲಿ ಕಡು ಬೇಸಿಗೆಯಲ್ಲಿ ಕೂಡ ನೀರು ತುಂಬಿರುತ್ತದೆ. ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ನೀರು ಕಡಿಮೆಯಾದರೂ ಸಹ ಅವರು ತೋಡಿದ ಕೆರೆಗಳಲ್ಲಿ ನೀರು ಸಾಕಷ್ಟು ಇರುತ್ತದೆ. ತಮ್ಮ ಕುರಿಗಳನ್ನು ಮತ್ತು ಜಾನುವಾರುಗಳನ್ನು ಮೇಯಿಸುವಾಗ ಪರ್ವತ ಪ್ರದೇಶದ ಕಣಿವೆಗಳಲ್ಲಿ ನೀರು ಸಿಗದೆ ಪರಿತಪಿಸುತ್ತಿರುವ ಪ್ರಾಣಿ-ಪಕ್ಷಿಗಳನ್ನು ಕಂಡು ಕೆರೆಗಳನ್ನು ಅಗೆಯುವ ಆಲೋಚನೆ ಹೊಳೆಯಿತು ಎಂದು ಕಾಮೇಗೌಡರು ಈ ಹಿಂದೆ ಹೇಳಿದ್ದರು.

    ಸಂಸದ ಪಿಸಿ ಮೋಹನ್ ಟ್ವೀಟ್ ಮಾಡಿ, ಮಂಡ್ಯ ಜಿಲ್ಲೆಯ ಮಲವಳ್ಳಿ ತಾಲೂಕಿನ ದಾಸನಡೋಡ್ಡಿ ಗ್ರಾಮದ ಕಾಮೇಗೌಡ ಅವರು ಇಡೀ ಬೆಟ್ಟದ ಪ್ರದೇಶವನ್ನು ಹಸಿರೀಕರಣಗೊಳಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಅಸಾಮಾನ್ಯ ವ್ಯಕ್ತಿತ್ವವನ್ನು ಹೊಂದಿದ್ದರೂ ಅವರು ಸಾಮಾನ್ಯ ಕೃಷಿಕರಾಗಿ ಪರಿಸರ ಕಾಳಜಿ ಮೆರೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

     

  • ಕನ್ನಡ ಸಿನಿಮಾವಾಗಲಿದೆ ಕಂಬಳ ವೀರ ಶ್ರೀನಿವಾಸ್ ಜೀವನ ಚರಿತ್ರೆ

    ಕನ್ನಡ ಸಿನಿಮಾವಾಗಲಿದೆ ಕಂಬಳ ವೀರ ಶ್ರೀನಿವಾಸ್ ಜೀವನ ಚರಿತ್ರೆ

    – ಕಂಬಳ ಹೆಸರಿನಲ್ಲಿ ಟೈಟಲ್ ರಿಜಿಸ್ಟರ್

    ಮಂಗಳೂರು: ಕಂಬಳ ವೀರ ಶ್ರೀನಿವಾಸ್ ಗೌಡ ಅವರು ವಿಶ್ವದಾದ್ಯಂತ ಭಾರೀ ಸುದ್ದಿಯಾಗುತ್ತಿದ್ದಂತೆ ಸಿನಿಮಾ ಕ್ಷೇತ್ರ ಕೂಡ ಕಂಬಳ ಕ್ಷೇತ್ರದ ದಾಖಲೆಯನ್ನು ಮೂಲ ವಿಷಯವನ್ನಾಗಿ ಇಟ್ಟುಕೊಂಡು ಕನ್ನಡ ಸಿನಿಮಾ ತಯಾರಿಸಲ ನಿರ್ಮಾಪಕರೊಬ್ಬರು ಮುಂದಾಗಿದೆ.

    ಮಂಗಳೂರು ಸಮೀಪ ಐಕಳದಲ್ಲಿ ಫೆಬ್ರವರಿ 2ರಂದು ನಡೆದ ಕಂಬಳದಲ್ಲಿ ಮೂಡಬಿದ್ರೆ ಮಿಜಾರು ಅಶ್ವತ್ಥಪುರದ ಶ್ರೀನಿವಾಸ್ ಗೌಡ ಅವರು ದಾಖಲೆ ಬರೆದು ವಿಶ್ವದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಾಗಿಸಿ ಕಥೆ ತಯಾರಾಗಲಿದೆ. ಕರಾವಳಿ ಮೂಲದ ಉದ್ಯಮಿ ಲೋಕೇಶ್ ಶೆಟ್ಟಿ ಎಂಬವರು ಈಗಾಗಲೇ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ ಮಾಡಿದ್ದು, ನಿಖಿಲ್ ಮಂಜು ಅವರು ನಿರ್ದೇಶನ ಮಾಡಲಿದ್ದಾರೆ. ಇದನ್ನೂ ಓದಿ: ಕಂಬಳ ಹೀರೋಗೆ ಸಖತ್ ಡಿಮ್ಯಾಂಡ್- ಒಲಂಪಿಕ್ಸ್‌ಗೆ ಇಳಿಯೋ ಮುನ್ನವೇ ಶೂ ಕಂಪನಿಗಳಿಂದ ಕರೆ

    ಶ್ರೀನಿವಾಸ್ ಗೌಡ ಅವರ ಪಾತ್ರದಲ್ಲಿ ನಟಿಸುವ ನಟರಿಗೆ ಶೋಧ ನಡೆಯುತ್ತಿದೆ. ಅಷ್ಟೇ ಅಲ್ಲದೆ ಕರಾವಳಿಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಸಿನಿಮಾ ತಂಡದಿಂದ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಶ್ರೀನಿವಾಸ ಗೌಡರಿಗೆ ಖಾಲಿ ಕವರ್ ನೀಡಿ ಪೋಸ್‍ಕೊಟ್ಟ ಸಿಟಿ ರವಿ, ಹೆಬ್ಬಾರ್

  • ಪ್ರಧಾನಿ ಜೀವನಚರಿತ್ರೆಗೆ ವಿವೇಕ್ ಓಬೆರಾಯ್ ಯಾಕೆ ಬೆಸ್ಟ್: ಸಂದೀಪ್ ಎಸ್ ಸಿಂಗ್ ಸ್ಪಷ್ಟನೆ

    ಪ್ರಧಾನಿ ಜೀವನಚರಿತ್ರೆಗೆ ವಿವೇಕ್ ಓಬೆರಾಯ್ ಯಾಕೆ ಬೆಸ್ಟ್: ಸಂದೀಪ್ ಎಸ್ ಸಿಂಗ್ ಸ್ಪಷ್ಟನೆ

    ಮುಂಬೈ: ಪ್ರಧಾನಿ ಮೋದಿ ಅವರ ಜೀವಚರಿತ್ರೆ ಆಧಾರಿತ `ಪಿಎಂ ನರೇಂದ್ರ ಮೋದಿ’ ಸಿನಿಮಾಕ್ಕೆ ವಿವೇಕ್ ಒಬೆರಾಯ್ ಅವರನ್ನು ಯಾಕೆ ಆಯ್ಕೆ ಮಾಡಲಾಯ್ತು ಎನ್ನುವ ಪ್ರಶ್ನೆಗೆ ಚಿತ್ರದ ನಿರ್ಮಾಪಕ ಸಂದೀಪ್ ಎಸ್. ಸಿಂಗ್ ಉತ್ತರಿಸಿದ್ದಾರೆ.

    ಸೋಮವಾರದಂದು ಬಿಡುಗಡೆಯಾದ `ಪಿಎಂ ನರೇಂದ್ರ ಮೋದಿ’ ಸಿನಿಮಾದ ಮೊದಲ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ವಿವೇಕ್ ಓಬೆರಾಯ್ ಸೂಕ್ತ ಅಲ್ಲ ಎಂದು ಹಲವರು ಟೀಕಿಸಿದ್ದಾರೆ. ಆದರಿಂದ ಜನರಿಗೆ ಯಾಕೆ ವಿವೇಕ್ ಅವರನ್ನೇ ಈ ಚಿತ್ರಕ್ಕೆ ಆಯ್ಕೆ ಮಾಡಲಾಯ್ತು ಎಂದು ನಿರ್ಮಾಪಕರು ತಿಳಿಸಿದ್ದಾರೆ.

    ಮಂಗಳವಾರ ಖಾಸಗಿ ಚಾನೆಲ್‍ವೊಂದರ ಸಂದರ್ಶನದಲ್ಲಿ ಈ ಕುರಿತು ಮಾತನಾಡಿ, ಈ ಚಿತ್ರದಲ್ಲಿ ಏನೇನು ಇರಬೇಕು, ಯಾವ ನಟರು ಮುಖ್ಯ ಪಾತ್ರಕ್ಕೆ ಸೂಕ್ತ ಎಂದು ಸೆಟ್ ಮಾಡಲು ನನಗೆ ಮೂರು ವರ್ಷ ಬೇಕಾಯ್ತು. ಚಿತ್ರದ ಬಗ್ಗೆ ಮೊದಲು ವಿವೇಕ್ ಅವರನ್ನು ಕೇಳಿದಕ್ಕೆ ತಕ್ಷಣ ಅವರು ನಟಿಸಲು ಒಪ್ಪಿಕೊಂಡರು. ಅವರಂತಹ ಪ್ರತಿಭಾವಂತ ನಟರೇ ನನಗೆ ಬೇಕಾಗಿತ್ತು. ಅವರಿಗೆ 18 ವರ್ಷ ಚಿತ್ರರಂಗದಲ್ಲಿ ನಟನೆಯ ಅನುಭವವಿದೆ. ಮೊದಲ ಚಿತ್ರದಲ್ಲೇ ವಿವೇಕ್ ಅವರ ಉತ್ತಮ ನಟನೆಯಿಂದ ಎಲ್ಲರ ಗಮನ ಸೆಳೆದವರು. ಶೃದ್ಧೆಯಿಂದ ನಟನೆ ಮಾಡುತ್ತಾರೆ. ಅವರು ಮೋದಿಯವರ ಪಾತ್ರವನ್ನು ಚೆನ್ನಾಗಿ ನಿಭಾಯಿಸಬಲ್ಲರು ಎಂಬ ನಂಬಿಕೆ ನನಗಿದೆ ಎಂದು ಹೇಳಿದರು.

    ಈ ಚಿತ್ರದ ಮೊದಲ ಪೋಸ್ಟರ್‍ವೊಂದಕ್ಕೆ ನಟ ವಿವೇಕ್ ಓಬೆರಾಯ್ ಸತತ 7 ಗಂಟೆ ಮೇಕಪ್ ಮಾಡಿಕೊಂಡು ಸುಮಾರು 15 ಲುಕ್‍ಗಳಲ್ಲಿ ಪೋಸ್ ಕೊಟ್ಟಿದ್ದಾರೆ. ಈ ಚಿತ್ರಕ್ಕಾಗಿ ಬಹಳ ಶೃದ್ಧೆಯಿಂದ ಕೆಲಸ ಮಾಡುತ್ತಿದ್ದಾರೆ. ಇಂತಹ ಅತ್ಯುತ್ತಮ ಪ್ರತಿಭೆಯನ್ನು ಟೀಕಿಸುವುದು ಸರಿಯಲ್ಲ ಎಂದರು. ಹಾಗೆಯೇ ಜನವರಿ ಮಧ್ಯದಲ್ಲಿ ಈ ಚಿತ್ರದ ಶೂಟಿಂಗ್ ಆರಂಭವಾಗಲಿದೆ ಎಂದು ಚಿತ್ರ ತಂಡ ತಿಳಿಸಿದೆ.

    ಇತ್ತೀಚಿಗಷ್ಟೆ `ದಿ ಆಕ್ಸಿಡೆಂಟೆಲ್ ಪ್ರೈಮ್ ಮಿನಿಸ್ಟರ್’ ಸಿನಿಮಾದ ಟ್ರೇಲರ್ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಈ ಚಿತ್ರದ ವಿರುದ್ಧ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆಯೇ ಮತ್ತೆ ರಾಜಕೀಯ ವಲಯದಲ್ಲಿ ಸದ್ದು ಮಾಡಲು `ಪಿಎಂ ನರೇಂದ್ರ ಮೋದಿ’ ಸಿನಿಮಾ ತಯಾರಾಗ್ತಿದೆ.

    ಈ ಚಿತ್ರದಲ್ಲಿ ನರೇಂದ್ರ ಮೋದಿ ಅವರ ಪಾತ್ರದಲ್ಲಿ ವಿವೇಕ್ ಓಬೆರಾಯ್ ನಟಿಸುತ್ತಿದ್ದಾರೆ. ಚಿತ್ರವನ್ನು ಓಮಂಗ್ ಕುಮಾರ್ ನಿರ್ದೇಶಿಸುತ್ತಿದ್ದು, ಸುರೇಶ್ ಓಬೆರಾಯ್ ಹಾಗೂ ಸಂದೀಪ್ ಎಸ್. ಸಿಂಗ್ ನಿರ್ಮಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಪ್ರಧಾನಿಯಿಂದ ಆಸ್ಪತ್ರೆಯಲ್ಲಿಯೇ ಸ್ನೇಹಿತನ ಜೀವನ ಕಥನ ಬಿಡುಗಡೆ

    ಮಾಜಿ ಪ್ರಧಾನಿಯಿಂದ ಆಸ್ಪತ್ರೆಯಲ್ಲಿಯೇ ಸ್ನೇಹಿತನ ಜೀವನ ಕಥನ ಬಿಡುಗಡೆ

    ಮಂಗಳೂರು: ಮಾಜಿ ಸಿಎಂ ದಿ.ರಾಮಕೃಷ್ಣ ಹೆಗಡೆ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆತ್ಮೀಯ ಅವಿಭಜಿತ ಜನತಾದಳ ಮುಖಂಡರಾಗಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕದ್ರಿ ಎಂ.ಸಂಜೀವ ಅವರ ಜೀವನ ಕಥನವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶುಕ್ರವಾರ ರಾತ್ರಿ ಯುನಿಟಿ ಆಸ್ಪತ್ರೆಯ ವಾರ್ಡಿನಲ್ಲಿ ಬಿಡುಗಡೆ ಮಾಡಿದರು.

    ಮಂಗಳೂರಿಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಮಾಜಿ ಪ್ರಧಾನಿ ಎಚ್.ಡಿದೇವೇಗೌಡ್ರು, ಆಸ್ಪತ್ರೆಗೆ ದಾಖಲಾಗಿದ್ದ ತಮ್ಮ ರಾಜಕೀಯ ಸ್ನೇಹಿತ ಎಂ.ಸಂಜೀವ ಅವರ ಯೋಗ ಕ್ಷೇಮ ವಿಚಾರಿಸಲು ತೆರಳಿದರು. ಇದೇ ಸಂದರ್ಭದಲ್ಲಿ ಎಂ.ಸಂಜೀವ ಅವರ `ಸಂಜೀವನ- ಜನನಾಯಕ ಎಂ.ಸಂಜೀವ ಅವರ ಜೀವನ ಕಥನ’ ಎಂಬ ಕೃತಿಯನ್ನು ಬಿಡುಗಡೆ ಮಾಡಿದರು.

    ಪುಸ್ತಕ ಬಿಡಗಡೆಗೊಳಿಸಿದ ಬಳಿಕ ಮಾತನಾಡಿದ ಮಾಜಿ ಪ್ರಧಾನಿ, ತನಗಾಗಿ ಜೀವನ ನಡೆಸದೆ ಯಾವುದೇ ಫಲಾಪೇಕ್ಷೆ ಇಲ್ಲದೆ ಇತರರಿಗಾಗಿ ಕೆಲಸ ಮಾಡಿದವರಿದ್ದರೆ ಅದು ಸಂಜೀವರು. ಸಂಜೀವರಿಗೆ ಸ್ಥಾನಮಾನಗಳು ಸಿಗಲಿ ಸಿಗದೇ ಇರಲಿ, ಅವರು ನಂಬಿದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕಾಯಕ ಜೀವಿಯಾಗಿದ್ದರು. ಬಡವರು, ಕಾರ್ಮಿಕರು, ಹಿಂದುಳಿದ ವರ್ಗದ ಪರವಾಗ ನಿರಂತರ ಹೋರಾಟ ಮಾಡುತ್ತಲೇ ತಮ್ಮ ಆಯುಷ್ಯದ ಬಹುಪಾಲು ಸವೆಸಿದವರು ಸಂಜೀವ ಅಂತ ಹೇಳಿದರು.

    ಅಷ್ಟೆ ಅಲ್ಲದೆ ಶಾಲಾ ದಿನಗಳಲ್ಲಿ ಸ್ವಾತಂತ್ರ್ಯ ಹೋರಾಟದಿಂದ ಸಾಮಾಜಿಕ ಜೀವನ ಪ್ರವೇಶಿಸಿದ ಸಂಜೀವರು ತುರ್ತು ಪರಿಸ್ಥಿತಿಯಲ್ಲಿ ಸಕ್ರಿಯರಾಗಿದ್ದು ಅವರನ್ನು ಹಲವು ಬಾರಿ ಬಂಧಿಸಲಾಗಿತ್ತು. ಅನಂತರ, ಭೂಸುಧಾರಣೆ ಕಾಲದಲ್ಲಿ ಬಡವರಿಗೆ ಭೂಮಿ ದೊರಕಿಸಲು, ಬಾಡಿಗಾರರ ವಿರುದ್ಧ ನಡೆಯುತ್ತಿದ್ದ ಅನ್ಯಾಯದ ವಿರುದ್ಧ ಕೆಲಸ ಮಾಡಿದ್ದರು. ಮಾಜಿ ಸಿಎಂ ದಿ.ರಾಮಕೃಷ್ಣ ಹೆಗಡೆ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆತ್ಮೀಯರಾಗಿದ್ದ ಎಂ.ಸಂಜೀವ ಅವರು ತುರ್ತು ಪರಿಸ್ಥಿತಿ ಕಾಲದಿಂದಲೂ ಜನಪರ ಹೋರಾಟದಲ್ಲಿ ಭಾಗಿಯಾಗಿದ್ದರು. ಯಾವುದೇ ರೀತಿಯ ರಾಜಕೀಯ ಅಧಿಕಾರ ದೊರೆಯದಿದ್ದರೂ ಎಂ.ಸಂಜೀವ ಅವರು ಜನಪರವಾದ ಕಾರ್ಯದಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡಿದವರು ಎಂದು ಹೇಳಿದರು.

    ಮಾಜಿ ಪ್ರಧಾನಿ ದೇವೇಗೌಡ ಅವರು ತಮ್ಮ ಸ್ನೇಹಿತ ಎಂ.ಸಂಜೀವ ಅವರಿಗಿಂತ ಕೇವಲ ಹತ್ತು ದಿವಸ ಹಿರಿಯರಾಗಿದ್ದಾರೆ. ಸಂಸ್ಥಾ ಕಾಂಗ್ರೆಸ್, ಜನತಾ ಪಕ್ಷ, ಜನತಾದಳ ಮುಖಂಡರಾಗಿದ್ದ ಎಂ.ಸಂಜೀವ ಅವರು ತಮ್ಮ ಜೀವನವನ್ನು ಪರರಿರಾಗಿ ತ್ಯಾಗ ಮಾಡಿದ ಸಮಾಜ ಸೇವಕ ಮತ್ತು ಬ್ರಹ್ಮಚಾರಿ ಆಗಿದ್ದರು. ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಜನತಾದಳ ಟಿಕೇಟಿನಿಂದ ಸ್ಪರ್ಧಿಸಿ ಅಲ್ಪ ಅಂತರದಿಂದ ಸೋಲನುಭವಿಸಿದ್ದರು. ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾಗ ಹಲವಾರು ವಸತಿ ಬಡಾವಣೆ ಅಭಿವೃದ್ಧಿ ಮಾಡಿದ್ದಲ್ಲದೆ ನಗರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಅನುಷ್ಠಾನ ಮಾಡಿದ್ದರು.

    ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಮಾಜಿ ಸಚಿವರಾದ ಅಮರನಾಥ ಶೆಟ್ಟಿ ದಂಪತಿಗಳು, ಯೆನೆಪೋಯ ಮೊಹಮ್ಮದ್ ಕುಂಞ, ಯುನಿಟಿ ಆಸ್ಪತ್ರೆಯ ಹಬೀಬ್ ರೆಹಮಾನ್, ಹಬೀಬ್ ಮೊಹಮ್ಮದ್ ಆಜ್ಮಾಲ್, ಪ್ರಜ್ವಲ್ ರೇವಣ್ಣ, ಜಾತ್ಯತೀತ ಜನತಾದಳ ಮುಖಂಡರಾದ ಮಹಮ್ಮದ್ ಕುಂಞ, ಎಂ.ಬಿ.ಸದಾಶಿವ, ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ, ಎಂ.ಸಂಜೀವ ಅವರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews