Tag: life term

  • ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

    ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

    ತಿರುವನಂತಪುರಂ: ತನ್ನ ಅಪ್ರಾಪ್ತ ಮಗಳ (Minor Daughter) ಮೇಲೆ ಪದೇ ಪದೇ ಅತ್ಯಾಚಾರವೆಸಗಿ (Rape), ಆಕೆಯನ್ನು ಗರ್ಭಿಣಿ (Pregnant) ಮಾಡಿದ್ದ ವ್ಯಕ್ತಿಗೆ ಕೇರಳ ನ್ಯಾಯಾಲಯ (Kerala Court) 3 ಜೀವಾವಧಿ ಶಿಕ್ಷೆ ವಿಧಿಸಿದೆ.

    ಮಂಜೇರಿ ಫಾಸ್ಟ್ ಟ್ರ‍್ಯಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಕೆ ವ್ಯಕ್ತಿಯನ್ನು ದೋಷಿಯೆಂದು ಪ್ರಕಟಿಸಿದ್ದಾರೆ. ಐಪಿಸಿ ಸೆಕ್ಷನ್ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೋ (POCSO) ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಈ ಎಲ್ಲಾ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ 3 ಜೀವಾವಾಧಿ ಶಿಕ್ಷೆಯ ಜೊತೆಗೆ 6.6 ಲಕ್ಷ ರೂ. ದಂಡವನ್ನು ವಿಧಿಸಿದೆ.

    ಪ್ರಕರಣದ ಬಗ್ಗೆ ವಿವರಣೆ ನೀಡಿದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಎ ಸೋಮಸುಂದರನ್, ಅಪರಾಧಿ ಮದರಸಾದಲ್ಲಿ ಶಿಕ್ಷಕನಾಗಿದ್ದು, ಮೊದಲ ಬಾರಿಗೆ 2021ರ ಮಾರ್ಚ್‌ನಲ್ಲಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ತನ್ನ 15 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ. ಆ ಸಂದರ್ಭ ಕೋವಿಡ್-19 ಇದ್ದಿದ್ದರಿಂದ ಬಾಲಕಿ ಆನ್‌ಲೈನ್ ತರಗತಿಯಲ್ಲಿ ಓದುತ್ತಿದ್ದಳು. ಈ ಸಂದರ್ಭ ಆತ ಮಗಳನ್ನು ತನ್ನ ಮಲಗುವ ಕೋಣೆಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದ ಎಂದು ವಾದಿಸಿದ್ದರು. ಇದನ್ನೂ ಓದಿ: ಸದಾ ಟಚ್‍ನಲ್ಲಿರುವಂತೆ 15ರ ಬಾಲಕನಿಗೆ 20 ಸಾವಿರ ರೂ. ಮೌಲ್ಯದ ಮೊಬೈಲ್ ಕೊಡಿಸಿದ್ಳು!

    ತಂದೆಯ ಕೃತ್ಯವನ್ನು ಸಂತ್ರಸ್ತೆ ವಿರೋಧಿಸಿದಾಗ ಆಕೆಯ ತಾಯಿಯನ್ನು ಕೊಲ್ಲುವುದಾಗಿ ಆತ ಬೆದರಿಕೆ ಹಾಕಿದ್ದ. ಆತ 2021ರ ಅಕ್ಟೋಬರ್‌ವರೆಗೂ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ತನ್ನ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ.

    2021ರಲ್ಲಿ ಆನ್‌ಲೈನ್ ತರಗತಿಗಳು ಮುಕ್ತಾಯವಾಗಿ ಶಾಲೆಗಳು ಪುನರಾರಂಭವಾದಾಗ ಬಾಲಕಿ ಶಾಲೆಗೆ ಹೋಗಲು ಪ್ರಾರಂಭಿಸಿದ್ದಾಳೆ. ಈ ವೇಳೆ ಆಕೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆ ಸಂದರ್ಭ ಏನೂ ಪತ್ತೆಯಾಗಿರಲಿಲ್ಲ. 2022ರ ಜನವರಿಯಲ್ಲಿ ಆಕೆಗೆ ಮತ್ತೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ವೈದ್ಯರಲ್ಲಿಗೆ ಕರೆದುಕೊಂಡು ಹೋದಾಗ ಆಕೆ ಗರ್ಭಿಣಿ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಪಾಕ್‌ನಲ್ಲಿ ನಡೆದಿದ್ದು ಪ್ರತೀಕಾರದ ದಾಳಿ – ಸ್ಫೋಟದ ಸ್ಥಳದಲ್ಲಿ ಆತ್ಮಾಹುತಿ ಬಾಂಬರ್‌ನ ತುಂಡರಿಸಿದ ತಲೆ ಪತ್ತೆ

    ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಂತ್ರಸ್ತ ಬಾಲಕಿಯ ತಂದೆಯನ್ನು ಬಂಧಿಸಿದ್ದರು. ಬಳಿಕ ಸಂತ್ರಸ್ತೆಯ ಗರ್ಭಪಾತ ಮಾಡಿಸಲಾಗಿದ್ದು, ಭ್ರೂಣದ ಡಿಎನ್‌ಎ ಸಂಗ್ರಹಿಸಿ ಆಕೆಯ ತಂದೆಯ ಡಿಎನ್‌ಎಯೊಂದಿಗೆ ವಿಶ್ಲೇಷಣೆ ಮಾಡಲಾಗಿತ್ತು. ಇದರಿಂದ ಬಾಲಕಿಯ ತಂದೆಯೇ ಅಪರಾಧಿ ಎಂಬುದು ಸಾಬೀತಾಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪತ್ನಿಯನ್ನ 21 ಬಾರಿ ಇರಿದು ಕೊಂದವನಿಗೆ ಜೀವಾವಧಿ ಶಿಕ್ಷೆ!

    ಪತ್ನಿಯನ್ನ 21 ಬಾರಿ ಇರಿದು ಕೊಂದವನಿಗೆ ಜೀವಾವಧಿ ಶಿಕ್ಷೆ!

    ನವದೆಹಲಿ: 6 ವರ್ಷಗಳ ಹಿಂದೆ ಪತ್ನಿಯನ್ನ ಚಾಕುವಿನಿಂದ 21 ಬಾರಿ ಇರಿದು, ತಲೆಗೆ ಇಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ ವ್ಯಕ್ತಿಗೆ ದೆಹಲಿ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

    ಮಹಿಳೆಯ ತಲೆ ಮೇಲೆ ಎಷ್ಟು ಬರ್ಬರವಾಗಿ ಹಲ್ಲೆ ಮಾಡಲಾಗಿತ್ತೆಂದರೆ ತಲೆಬುರುಡೆಯ ಮೂಳೆಯೇ ಮುರಿದುಹೋಗಿತ್ತು. 2012ರ ಅಕ್ಟೋಬರ್ 31 ಹಾಗೂ ನವೆಂಬರ್ 1ರ ಮಧ್ಯರಾತ್ರಿ ದೇವೇಂದ್ರ ದಾಸ್ ತನ್ನ ಹೆಂಡತಿಯೊಂದಿಗೆ ಜಗಳವಾಡಿದ್ದು, ಬಳಿಕ ಆಕೆಯನ್ನ 21 ಬಾರಿ ಚಾಕುವಿನಿಂದ ಇರಿದು, ತಲೆ ಮೇಲೆ ಇಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದ. ಮನೆ ಮಾಲೀಕ ಪೊಲೀಸರಿಗೆ ವಿಷಯ ತಿಳಿಸಿದ ಮೇಲೆ ಪ್ರಕರಣ ಬೆಳಕಿಗೆ ಬಂದಿತ್ತು. ಯಾವುದೇ ಪ್ರಚೋದನೆ ಇಲ್ಲದೆ ವ್ಯಕ್ತಿ ಇಷ್ಟೊಂದು ಕ್ರೂರವಾಗಿ ವರ್ತಿಸಿದ್ದಾನೆ ಎಂಬುದನ್ನ ಮನಗಂಡ ಕೋರ್ಟ್ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

    ದಾಸ್ ತನ್ನ ಹೆಂಡತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಸ್ಪಷ್ಟ. ಆದ್ದರಿಂದ ನಮ್ಮ ಪ್ರಕಾರ ದಾಸ್ ಮಾಡಿದ ಅಪರಾಧ ಕೊಲೆಯ ಉದ್ದೇಶವಿಲ್ಲದೆ ಮಾಡಿದ ಕೃತ್ಯ ಎಂದು ಹೇಳಲು ಸಾಧ್ಯವಿಲ್ಲ. ಇದೊಂದು ಬರ್ಬರ ಹತ್ಯೆ ಎಂದು ಕೋರ್ಟ್ ಹೇಳಿದೆ.

    ಈ ಪ್ರಕರಣದಲ್ಲಿ ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ದಾಸ್ ವಾದಿಸಿದ್ದ. ಆದ್ರೆ ಆತನ ಮನವಿಯನ್ನ ತಿರಸ್ಕರಿಸಿದ ನ್ಯಾ. ಸುನಿಲ್ ಗೌರ್ ಹಾಗೂ ಪ್ರತಿಭಾ ಎಂ ಸಿಂಗ್ ಅವರ ಪೀಠ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.