Tag: Life threatening

  • ಹಿಂಡಲಗಾ ಕೈದಿ ಹೆಸರಲ್ಲಿ ನಿತಿನ್ ಗಡ್ಕರಿ ಕಚೇರಿಗೆ ಮತ್ತೊಮ್ಮೆ ಜೀವಬೆದರಿಕೆ ಕರೆ

    ಹಿಂಡಲಗಾ ಕೈದಿ ಹೆಸರಲ್ಲಿ ನಿತಿನ್ ಗಡ್ಕರಿ ಕಚೇರಿಗೆ ಮತ್ತೊಮ್ಮೆ ಜೀವಬೆದರಿಕೆ ಕರೆ

    ಬೆಳಗಾವಿ: ತಾಲೂಕಿನ ಹಿಂಡಲಗಾ ಜೈಲಿನಲ್ಲಿರುವ (Hindalaga Jail) ಕೈದಿಯ (Prisoner) ಹೆಸರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಮತ್ತೊಮ್ಮೆ ಜೀವಬೆದರಿಕೆ ಕರೆ (Life threatening Call) ಮಾಡಲಾಗಿದ್ದು ಈ ಬಗ್ಗೆ ಮಹಾರಾಷ್ಟ್ರ (Maharashtra) ಎಟಿಎಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

    ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ಜಯೇಶ್ ಕಾಂತಾ ಅಲಿಯಾಸ್ ಜಯೇಶ್ ಪೂಜಾರಿ ಹೆಸರು ಬಳಸಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಮತ್ತೊಮ್ಮೆ ಜೀವಬೆದರಿಕೆ ಕರೆ ಮಾಡಲಾಗಿದೆ. ಮಹಾರಾಷ್ಟ್ರದ ನಾಗ್ಪುರದ ನಿತಿನ್ ಗಡ್ಕರಿ ಜನಸಂಪರ್ಕ ಕಚೇರಿಯ ಲ್ಯಾಂಡ್‌ಲೈನ್‌ಗೆ ಕರೆ ಮಾಡಲಾಗಿದ್ದು 10 ಕೋಟಿ ರೂ. ನೀಡುವಂತೆ ಬೇಡಿಕೆ ಇಡಲಾಗಿದೆ. ಈ ಹಿನ್ನೆಲೆ ನಾಗ್ಪುರದ ನಿತಿನ್ ಗಡ್ಕರಿ ಕಚೇರಿ ಬಳಿ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ಇದನ್ನೂ ಓದಿ: ದೆಹಲಿ ಹೊಸ ಮದ್ಯ ನೀತಿ ಹಗರಣ – ಕೆ. ಕವಿತಾ ಮೊಬೈಲ್ ವಶಕ್ಕೆ ಪಡೆದ ಇಡಿ

    ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳಿಂದ ತನಿಖೆ ಮುಂದುವರಿದ್ದು ಈ ಹಿಂದೆ ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ಜಯೇಶ್ ಕಾಂತಾ ಹೆಸರಿನಿಂದ ಜನವರಿ 14 ರಂದು ನಿತಿನ್ ಗಡ್ಕರಿ ಕಚೇರಿಗೆ ಜೀವ ಬೆದರಿಕೆ ಕರೆ ಬಂದಿತ್ತು. ಆಗ ಹಿಂಡಲಗಾ ಜೈಲಿಗೆ ಭೇಟಿ ನೀಡಿದ್ದ ಮಹಾರಾಷ್ಟ್ರದ ಅಧಿಕಾರಿಗಳ ತಂಡ ತನಿಖೆ ನಡೆಸಿದ್ದರು. ಈಗ ಮತ್ತೆ ಕೈದಿ ಜಯೇಶ್ ಕಾಂತಾ ಹೆಸರಿನಲ್ಲಿ ಜೀವ ಬೆದರಿಕೆ ಹಾಕಲಾಗಿದ್ದು, ಈ ಕರೆ ಎಲ್ಲಿಂದ ಬಂದಿದೆ ಎಂಬ ಬಗ್ಗೆ ತನಿಖೆಯನ್ನು ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳು ನಡೆಸುತ್ತಿದ್ದಾರೆ. ಇದನ್ನೂ ಓದಿ: 80 ಸಾವಿರ ಪೊಲೀಸರು ಏನ್ ಮಾಡ್ತಿದ್ದಾರೆ – ಅಮೃತ್‌ಪಾಲ್ ಸಿಂಗ್ ಬಂಧಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ

  • ಮೋದಿ, ಅಮಿತ್‌ ಶಾ, ಯೋಗಿಗೆ ಜೀವ ಬೆದರಿಕೆ – ಆರೋಪಿಯನ್ನು ಬಂಧಿಸಿ ಬಿಟ್ಟು ಕಳುಹಿಸಿದ ಪೊಲೀಸರು

    ಮೋದಿ, ಅಮಿತ್‌ ಶಾ, ಯೋಗಿಗೆ ಜೀವ ಬೆದರಿಕೆ – ಆರೋಪಿಯನ್ನು ಬಂಧಿಸಿ ಬಿಟ್ಟು ಕಳುಹಿಸಿದ ಪೊಲೀಸರು

    ಹೈದರಾಬಾದ್‌: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಜೀವ ಬೆದರಿಕೆ ಪೋಸ್ಟ್‌ ಹಾಕಿದ್ದ ಆರೋಪದಡಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನಂತರ ಬಿಟ್ಟು ಕಳುಹಿಸಿದ್ದಾರೆ.

    ಅಬ್ದುಲ್‌ ಮಜೀದ್‌ ಬಂಧಿತ ಆರೋಪಿ. ಈತನನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಯಿತು. ಪ್ರಭಾವಿ ನಾಯಕರನ್ನು ಕೊಲೆ ಮಾಡುವುದಾಗಿ ಸೋಷಿಯಲ್‌ ಮೀಡಿಯಾದಲ್ಲಿ ಬೆದರಿಕೆ ಪೋಸ್ಟ್‌ ಹಾಕಿದ್ದ. ಇದನ್ನೂ ಓದಿ: ಮೊಬೈಲ್‍ನಲ್ಲಿ ಗೇಮ್ ಆಡೋದು ಬಿಟ್ಟು, ಕೆಲಸ ಹುಡುಕು ಎಂದಿದ್ದಕ್ಕೆ ಅತ್ತಿಗೆಯನ್ನೇ ಕೊಂದ

    ಪ್ರವಾದಿ ಮೊಹಮ್ಮದ್‌ ಅವರ ಬಗ್ಗೆ ಉಚ್ಚಾಟಿತ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ ಮತ್ತು ಬಿಜೆಪಿ ನಾಯಕರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಆರೋಪಿ ಪೋಸ್ಟ್‌ ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಹೈದರಾಬಾದ್‌ನ ಮೊಘಲ್‌ಪುರ ಪೊಲೀಸರು, ಪ್ರಚೋದನಕಾರಿ ಪೋಸ್ಟ್‌ಗಾಗಿ ಅಬ್ದುಲ್ ಮಜೀದ್ ವಿರುದ್ಧ ಪ್ರಕರಣ ದಾಖಲಿಸಿ ಬುಧವಾರ ಬಂಧಿಸಿದ್ದಾರೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸಿಆರ್‌ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ನೋಟಿಸ್ ನೀಡುವಂತೆ ಪೊಲೀಸರಿಗೆ ಸೂಚಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕನ್ಹಯ್ಯಾ ಲಾಲ್ ಕುಟುಂಬಕ್ಕೆ ನೆರವು – 24 ಗಂಟೆಯಲ್ಲಿ ಬಂತು 1 ಕೋಟಿ

    ಅದರಂತೆ ಅಬ್ದುಲ್ ಮಜೀದ್‌ಗೆ ನೋಟಿಸ್ ಜಾರಿ ಮಾಡಿದ್ದು, ನಂತರ ಆತನನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

    Live Tv

  • 3 ನಂಬರ್‌ನಿಂದ ನನಗೆ ಕಿರಿಕಿರಿ, ಧಮ್ಕಿ, ಬೆದರಿಕೆ ಕರೆ ಬರುತ್ತಿದೆ: ಮುತಾಲಿಕ್

    3 ನಂಬರ್‌ನಿಂದ ನನಗೆ ಕಿರಿಕಿರಿ, ಧಮ್ಕಿ, ಬೆದರಿಕೆ ಕರೆ ಬರುತ್ತಿದೆ: ಮುತಾಲಿಕ್

    ಹುಬ್ಬಳ್ಳಿ: ಮೂರು ನಂಬರ್‌ನಿಂದ ನನಗೆ ಕಿರಿಕಿರಿ, ಧಮ್ಕಿ, ಬೆದರಿಕೆ ಕರೆ ಬರುತ್ತಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದರು.

    ಪ್ರಮೋದ್ ಮುತಾಲಿಕ್ ವಿರುದ್ಧ ಇನ್‍ಸ್ಟಾಗ್ರಾಮ್‍ನಲ್ಲಿ ಜೀವ ಬೆದರಿಕೆ ಪೋಸ್ಟ್ ಮಾಡಲಾಗಿತ್ತು. ಈ ಹಿನ್ನೆಲೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮುತಾಲಿಕ್ ಅವರು ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ದಿನದ ಹಿಂದೆ ಮಾರಿಗುಡಿ ಗ್ರೂಪ್‍ನಲ್ಲಿ ನನಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಸದ್ಯ ಪೊಲೀಸ್ ಆಯುಕ್ತರ ಜೊತೆ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯಸಭೆ ಫೈಟ್‍ನಲ್ಲಿ ಟ್ವಿಸ್ಟ್ – ಕಾಂಗ್ರೆಸ್, ಜೆಡಿಎಸ್ ಮಧ್ಯೆ ‘ಆತ್ಮಸಾಕ್ಷಿ’ ಫೈಟ್

    ಮೂರು ನಂಬರ್‌ನಿಂದ ನನಗೆ ಕಿರಿಕಿರಿ, ಧಮ್ಕಿ, ಅಶ್ಲೀಲ ಶಬ್ಧ ಬಳಸಿ ಬೆದರಿಕೆ ಹಾಕುತ್ತಿದ್ದಾರೆ. ಆ ಮೂರು ನಂಬರ್ ಕೂಡಾ ದೂರಿನಲ್ಲಿ ಉಲ್ಲೇಖ ಮಾಡಿದ್ದೇನೆ. ಇದಕ್ಕೆ ಹಿಂದೇಟು ಹಾಕಿ ಸುಮ್ಮನೆ ಕುಳಿತುಕೊಳ್ಳುವ ಮಾನಸಿಕತೆ ನನಗಿಲ್ಲ. ನಾವು ವಾಸ ಮಾಡುವ ಸ್ಥಳೀಯ ಠಾಣೆಗೆ ದೂರನ್ನ ಕೊಡಲು ಹೇಳಿದ್ದಾರೆ. ಅದನ್ನ ನಾನು ಮಾಡುತ್ತೇನೆ ಎಂದರು.

    ಇನ್‍ಸ್ಟಾಗ್ರಾಮ್‍ನಲ್ಲಿ ನನಗೆ ಜೀವ ಬೆದರಿಕೆ ಹಾಕಿದ್ದಕ್ಕೆ 60 ಜನ ಲೈಕ್ ಮಾಡಿದ್ದಾರೆ. ಕೆಲವರು ಕಾಮೆಂಟ್ ಮಾಡಿ ದುಡ್ಡು ಕೊಡುವುದು ಬೇಡ, ನಾವು ಹಾಗೆಯೇ ಕೊಂದು ಹಾಕುತ್ತೇವೆ ಎಂದಿದ್ದಾರೆ. 60 ಜನ ಲೈಕ್ ಮಾಡಿದ್ದು, ಈ  ಮೂಲಕ ಪೋಸ್ಟ್‌ಗೆ ಬೆಂಬಲ ಕೊಡುತ್ತಿದ್ದಾರೆ ಎಂದು ಅರ್ಥವಾಗುತ್ತೆ. ಅವರು ಅಪರಾಧಿ ಆಗ್ತಾರೆ. ಪೋಸ್ಟ್ ಹಾಕಿದ ಹಾಗೂ ಕಾಮೆಂಟ್ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ದೂರು ಕೊಟ್ಟಿದ್ದೇನೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ:  ಸಂಖ್ಯೆ 19 ರಲ್ಲಿದೆ ಲೆಹರ್ ಸಿಂಗ್ ಗೆಲುವಿನ ಸೀಕ್ರೆಟ್