Tag: Lilavati

  • ವಿಧಾನಸಭೆ ಚುನಾವಣೆ 2023 : ಮೊದಲ ಮತದಾನ ಮಾಡಿದ ನಟಿ ಲೀಲಾವತಿ

    ವಿಧಾನಸಭೆ ಚುನಾವಣೆ 2023 : ಮೊದಲ ಮತದಾನ ಮಾಡಿದ ನಟಿ ಲೀಲಾವತಿ

    ರ್ನಾಟಕ ವಿಧಾನಸಭೆ ಚುನಾವಣೆ (Legislative Assembly) ಕಣ ರಂಗೇರಿದೆ. ಸುದೀಪ್ ಸೇರಿದಂತೆ ಹಲವು ನಟರು ನಾನಾ ಪಕ್ಷಗಳ ಪರ ಪ್ರಚಾರ ಮಾಡುತ್ತಿದ್ದಾರೆ. ಆದರೆ ನಟಿ ಲೀಲಾವತಿ (Leelavathi) ಮತದಾನ (Voting) ಮಾಡುವ ಮೂಲಕ ಮಾದರಿಯಾಗಿದ್ದಾರೆ. ಮೇ 10ರಂದು ಮತದಾನ ದಿನಾಂಕ ಘೋಷಣೆ ಆಗಿದ್ದರೂ, ಚುನಾವಣೆ ಆಯೋಗ ಹಿರಿಯ ನಾಗರಿಕರಿಗೆ ವಿಶೇಷ ಸೌಲಭ್ಯ ಕಲ್ಪಿಸಿರುವುದರಿಂದ ಇಂದು ಲೀಲಾವತಿ ಅವರು ಮತದಾನ ಮಾಡಿದ್ದಾರೆ. ಈ ಬಾರಿಯ ಮತದಾನ ಮಾಡಿದ ಮೊದಲ ನಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಎಂಭತ್ತು ವರ್ಷ ತುಂಬಿದ ನಾಗರಿಕರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದೆ ಚುನಾವಣೆ (Election) ಆಯೋಗ. ಇದರ ಅಡಿಯಲ್ಲಿ ಹಿರಿಯ ನಟಿ ಲೀಲಾವತಿ, ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಮನೆಯಲ್ಲಿ ಮತದಾನ ಮಾಡಿದ್ದಾರೆ. ಮಗ ವಿನೋದ್ ರಾಜ್ (Vinod) ಸಹಾಯದಿಂದ ಅವರು ಮನೆಯಲ್ಲಿ ಮತದಾನ ಮಾಡಿದ್ದಾರೆ. ಇದನ್ನೂ ಓದಿ:ಪತಿ ಜೊತೆ ವಿದೇಶಕ್ಕೆ ಹಾರಿದ ‘ಬಿಗ್ ಬಾಸ್’ ಬೆಡಗಿ ಅಕ್ಷತಾ ಕುಕಿ

    ಈ ಸಂದರ್ಭದಲ್ಲಿ ಮಾತನಾಡಿದ ಲೀಲಾವತಿ, ‘ಚುನಾವಣೆ ಆಯೋಗ ಈ ಅವಕಾಶ ಕಲ್ಪಿಸಿದ್ದು ನನ್ನಂತಹ ಹಿರಿಯರಿಗೆ ಅನುಕೂಲವಾಗಿದೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿ’ ಎಂದು ಹೇಳಿದರು. ಮತದಾನ ಮನೆಯಲ್ಲೇ ಮಾಡಿದ್ದು ಸಂಭ್ರಮ ತಂದಿದೆ ಎಂದಿದ್ದಾರೆ. ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ಚುನಾವಣೆ ಪ್ರಕ್ರಿಯೆ ನಡೆದಿದೆ.

  • ಲೀಲಾವತಿ ಚಿತ್ರಜಗತ್ತಿನ ಎವರ್ ಗ್ರೀನ್ ಕಲಾವಿದೆ: ಆಸ್ಪತ್ರೆ ಉದ್ಘಾಟಿಸಿ ಹೊಗಳಿದ ಸಿಎಂ ಬೊಮ್ಮಾಯಿ

    ಲೀಲಾವತಿ ಚಿತ್ರಜಗತ್ತಿನ ಎವರ್ ಗ್ರೀನ್ ಕಲಾವಿದೆ: ಆಸ್ಪತ್ರೆ ಉದ್ಘಾಟಿಸಿ ಹೊಗಳಿದ ಸಿಎಂ ಬೊಮ್ಮಾಯಿ

    ನ್ನಡ ಸಿನಿಮಾ ರಂಗದ ಹಿರಿಯ ನಟಿ ಡಾ.ಲೀಲಾವತಿ (Leelavati) ಅವರು ನೆಲಮಂಗಲ ಹತ್ತಿರದ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿರುವ ಆಸ್ಪತ್ರೆಯನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಉದ್ಘಾಟಿಸಿದರು. ಹಿರಿಯ ನಟಿಯ ಈ ಸೇವೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿಗಳು, ಲೀಲಾವತಿ ಅವರನ್ನು ಮನಸಾರೆ ಹೊಗಳಿದರು. ಇನ್ನೂ ನೂರ್ಕಾಲ ಬಾಳಬೇಕು ಎಂದು ಹಾರೈಸಿದರು. ಅಲ್ಲದೇ, ಚಿತ್ರ ಜಗತ್ತಿನ ಎವರ್ ಗ್ರೀನ್ ಕಲಾವಿದೆ ಎಂದು ಬಣ್ಣಿಸಿದರು.

    ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಬೊಮ್ಮಾಯಿ, ‘ಸೋಲದೇವನಹಳ್ಳಿ (Soladevanahalli)  ಅಂದ್ರೆ ಏನಿದು ಅಂತ ಯೋಚನೆ ಮಾಡ್ತಿದ್ದೆ. ದೇವರು ಕೂಡ ಇಲ್ಲಿಯ ನಿಸರ್ಗ ಸೌಂದರ್ಯಕ್ಕೆ ಸೋತಿರುವುದೇ ಸೋಲದೇವನಹಳ್ಳಿ. ಇಂತಹ ಜಾಗದಲ್ಲಿ ಲೀಲಾವತಿ ಅವರು ನೆಲೆಸಿದ್ದಾರೆ. ಬದುಕಿನಲ್ಲಿ ನಿರಂತರವಾಗಿ ಎಲ್ಲವನ್ನೂ ನೀಡಿ, ಎಲ್ಲಾ ಅಡೆತೆಡೆಗಳನ್ನೂ ಹಾಗೂ  ಹಲವಾರು ಸವಾಲನ್ನು ಎದರಿಸಿದ್ದಾರೆ. ಲೀಲಾವತಿಯವರು ಮನಸ್ಸು ಮಾಡಿದ್ರೆ ಪ್ರತಿಷ್ಠಿತ ಬಡಾವಣೆಗಳಲ್ಲಿ ಮನೆ ಮಾಡಿಕೊಂಡು ನೆಮ್ಮದಿಯಾಗಿ ಜೀವನ ಮಾಡಬಹುದಿತ್ತು. ಆದರೆ, ಎಲ್ಲಾ ಬಿಟ್ಟು ಈ ಸೋಲದೇವನಹಳ್ಳಿಗೆ ಬಂದು ತೋಟ ಮಾಡಿದ್ದಾರೆ. ಅವರೇ ಹೇಳಿದ್ ಹಾಗೇ ಈ ಜಾಗ ಸಮತಟ್ಟಾಗಿರಲಿಲ್ಲ. ಆದ್ರೆ ಅವರ ಮನಸ್ಸು ಸಮತಟ್ಟವಾಗಿದೆ’ ಎಂದು ಲೀಲಾವತಿ ಅವರನ್ನು ಹಾಡಿ ಹೊಗಳಿದರು ಸಿಎಂ. ಇದನ್ನೂ ಓದಿ:ರಿಲೇಶನ್ ಶಿಪ್ ಇಟ್ಕೊಳ್ಳೋಕೆ ಬಿಗ್ ಬಾಸ್ ಮನೆಗೆ ಬಂದಿಲ್ಲ ಎಂದು ಕಣ್ಣೀರಿಟ್ಟ ನಟಿ ಮಯೂರಿ

    ಇದೇ ಸಂದರ್ಭದಲ್ಲಿ ಲೀಲಾವತಿ ಅವರ ಮತ್ತೊಂದು ಬೇಡಿಕೆಯ ಬಗ್ಗೆಯೂ ಮಾತನಾಡಿದ ಬೊಮ್ಮಾಯಿ, ಈ ಸೋಲದೇವನಹಳ್ಳಿಗೆ ಒಂದು ಪಶು ಆಸ್ಪತ್ರೆ (Hospital) ಬೇಕು ಎಂದು ಕೇಳಿದ್ದಾರೆ. ಆದಷ್ಟು ಬೇಗ ಈ ಬೇಡಿಕೆಯನ್ನು ಈಡೇರಿಸುತ್ತೇನೆ ಅಂದಿದ್ದಾರೆ. ಲೀಲಾವತಿ ಅವರು ನಿರ್ಮಿಸಿರುವ ಆಸ್ಪತ್ರೆಗೆ ಬೇಕಿರುವ ಎಲ್ಲ ಸೌಲಭ್ಯಗಳನ್ನೂ ಒದಗಿಸುವ ಭರವಸೆ ಕೊಟ್ಟಿದ್ದಾರೆ. ಸರ್ಕಾರದಿಂದ ಡಾಕ್ಟರ್ ಮತ್ತು ನರ್ಸ್ ನೇಮಿಸುವ ಕುರಿತು ಅವರು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • ಕಾವೇರಿ ನದಿಗೆ ತರ್ಪಣ ಬಿಟ್ಟ ವಿನೋದ್ ರಾಜ್

    ಕಾವೇರಿ ನದಿಗೆ ತರ್ಪಣ ಬಿಟ್ಟ ವಿನೋದ್ ರಾಜ್

    ಮಂಡ್ಯ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನ ಹಿನ್ನೆಲೆ ಇಂದು 11ನೇ ದಿನದ ಪುಣ್ಯತಿಥಿಯನ್ನು ಬೆಂಗಳೂರಿನಲ್ಲಿ ಕುಟುಂಬಸ್ಥರು ನೇರವೇರಿಸಿದ್ದರೆ, ಇತ್ತ ಕಾವೇರಿ ನದಿ ಬಳಿ ನಟ ವಿನೋದ್ ರಾಜ್ ಹಾಗೂ ಅವರ ತಾಯಿ ಲೀಲಾವತಿ ಅವರು ಪುನೀತ್ ಅವರ ಆತ್ಮಕ್ಕೆ ಸದ್ಗತಿ ದೊರಕಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

    ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಂ ಬಳಿಯ ಕಾವೇರಿ ನದಿಯ ಸಂಗಮದಲ್ಲಿ ವಿನೋದ್ ರಾಜ್ ಹಾಗೂ ಲೀಲಾವತಿ ಅವರು ಪುನೀತ್ ಆತ್ಮಕ್ಕೆ ಸದ್ಗತಿ ದೊರಕುವಂತೆ ಪೂಜೆ ಸಲ್ಲಿಸಿದರು.  ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ – ಕಣ್ಣು ದಾನ ಮಾಡಿದ ಅಪ್ಪು ಅಭಿಮಾನಿ 

    ಈ ವೇಳೆ ಮೊದಲಿಗೆ ಇವರು ಆಶ್ಲೇಷ ಬಲಿ ಹಾಗೂ ನಾರಾಯಣ ಬಲಿ ಪೂಜೆಯನ್ನು ಕಾವೇರಿ ನದಿ ತೀರದಲ್ಲಿ ಮಾಡಿದರು. ಬಳಿಕ ಕಾವೇರಿ ನದಿಗೆ ವಿನೋದ್ ರಾಜ್ ಅವರು ತರ್ಪಣ ಬಿಟ್ಟು, ಪುನೀತ್ ಆತ್ಮಕ್ಕೆ ಶಾಂತಿ ಕೋರಿದರು.

  • ಗ್ರಾಮದ ಬೀದಿ ಬೀದಿಗಳಲ್ಲಿ ರಾಸಾಯನಿಕ ಸಿಂಪಡಿಸಿದ ವಿನೋದ್ ರಾಜ್

    ಗ್ರಾಮದ ಬೀದಿ ಬೀದಿಗಳಲ್ಲಿ ರಾಸಾಯನಿಕ ಸಿಂಪಡಿಸಿದ ವಿನೋದ್ ರಾಜ್

    – ಪುತ್ರನಿಗೆ ತಾಯಿ ಲೀಲಾವತಿ ಸಾಥ್

    ಬೆಂಗಳೂರು: ಕೊರೊನಾ ವೈರಸ್ ಹರಡದಂತೆ ಎಚ್ಚರ ವಹಿಸುವುದರ ಭಾಗವಾಗಿ ನಟ ವಿನೋದ್ ರಾಜ್ ತಮ್ಮ ಹಳ್ಳಿಯನ್ನು ಕಾಪಾಡಲು ಮುಂದಾಗಿದ್ದು, ಇಡೀ ಗ್ರಾಮದ ರಸ್ತೆ ಹಾಗೂ ಮನೆಯ ಗೋಡೆಗಳಿಗೆ ರಾಸಾಯನಿಕ ಸಿಂಪಡಣೆ ಮಾಡಿದ್ದಾರೆ.

    ಸ್ವಗ್ರಾಮ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಟ ವಿನೋದ್ ರಾಜ್ ರಾಸಾಯನಿಕ ಸಿಂಪಡಣೆ ಮಾಡಿಸಿದ್ದು, ಈ ಮೂಲಕ ತಮ್ಮ ಗ್ರಾಮದ ಸುರಕ್ಷತೆಗೆ ಮುಂದಾಗಿದ್ದಾರೆ. ಹಿರಿಯ ನಟಿ ಡಾ.ಲೀಲಾವತಿ ಸಹ ಇದಕ್ಕೆ ಕೈ ಜೋಡಿಸಿದ್ದಾರೆ. ನಟ ವಿನೋದ್ ರಾಜ್ ಅವರು ಸ್ವತಃ ಕ್ರಿಮಿನಾಶಕ ಗನ್ ಹಿಡಿದು ಸಿಂಪಡಿಸಿದ್ದಾರೆ. ಗ್ರಾಮಕ್ಕೆ ವೈರಸ್ ಕಾಲಿಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಔಷಧಿಯನ್ನು ಸಿಂಪಡಣೆ ಮಾಡಿಸಿದ್ದಾರೆ.

    ಗ್ರಾಮದ ಬೀದಿ, ಮನೆಗಳ ಗೋಡೆಗಳಿಗೆ ರಾಸಾಯನಿಕ ಸಿಂಪಡಣೆ ಮಾಡಲಾಗಿದೆ. ವಿನೋದ್ ರಾಜ್ ಅವರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಡೀ ಗ್ರಾಮವೇ ನಟ ವಿನೋದ್ ರಾಜ್ ಬೆಂಬಲಕ್ಕೆ ನಿಂತು ಗ್ರಾಮದ ಸ್ವಚ್ಛತೆಗೆ ಮುಂದಾಗಿದೆ. ತಮ್ಮ ತೋಟದಲ್ಲಿ ಬಳಸುವ ಮಿನಿ ಟ್ರ್ಯಾಕ್ಟರ್ ಹಾಗೂ ಪಂಪ್ ಸಹಾಯದಿಂದ ಕ್ರಿಮಿನಾಶಕ ಸಿಂಪಡಣೆ ಮಾಡಿದ್ದಾರೆ.

    ಈ ವೇಳೆ ಹಿರಿಯ ನಟಿ ಲೀಲಾವತಿ ಅವರು ಕೈಮುಗಿದು ಬೇಡಿಕೊಂಡಿದ್ದು, ಎಲ್ಲರೂ ಚೆನ್ನಾಗಿ ಬಾಳಬೇಕು ಅಂತ ಇಲ್ಲಿ ಬಂದವರು. ಆದರೆ ದೇವರು ಕಷ್ಟ ಕೊಟ್ಟಿದ್ದಾನೆ. ಕೊರೊನಾ ವೈರಸ್ ನಮ್ಮ ಕರ್ಮ ಆಗಿಬಿಟ್ಟಿದೆ. ಸರ್ಕಾರದ ಕಾನೂನು ಮೀರಬೇಡಿ, ಮನೆಯಲ್ಲೇ ಇದ್ದು ಸಹಕರಿಸಿ. ನಿಮ್ಮ ಮನೆ, ಜಾಗವನ್ನು ಶುದ್ಧವಾಗಿಟ್ಟುಕೊಳ್ಳಬೇಕು. ಪೊಲೀಸರು ಹೊಡೆದರು ಎಂದು ಹೇಳುವ ಬದಲು ಹೊಡೆಯದ ಹಾಗೆ ಇರಿ. ಮಾಸ್ಕ್ ಧರಿಸಿ ಶುಚಿತ್ವ ಕಾಪಾಡಿ ಎಂದು ಮನವಿ ಮಾಡಿದ್ದಾರೆ.

  • ಹಿರಿಯ ನಟಿ ಲೀಲಾವತಿ ನಿರ್ಮಾಣದ ಆಸ್ಪತ್ರೆ ಸಿಬ್ಬಂದಿಗೆ ಸಂಬಳ ನೀಡದ ಸರ್ಕಾರ!

    ಹಿರಿಯ ನಟಿ ಲೀಲಾವತಿ ನಿರ್ಮಾಣದ ಆಸ್ಪತ್ರೆ ಸಿಬ್ಬಂದಿಗೆ ಸಂಬಳ ನೀಡದ ಸರ್ಕಾರ!

    ಬೆಂಗಳೂರು: ಹಿರಿಯ ನಟಿ ಲೀಲಾವತಿ ನಿರ್ಮಾಣದ ಆಸ್ಪತ್ರೆ ಸಿಬ್ಬಂದಿಗೆ ಸರ್ಕಾರ ಸಂಬಳ ನೀಡದ ಹಿನ್ನಲೆಯಲ್ಲಿ ಆಸ್ಪತ್ರೆಗೆ ಬೀಗ ಹಾಕುವ ಪರಿಸ್ಥಿತಿ ಎದುರಾಗಿದ್ದು, ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

    ಹಿರಿಯ ನಟಿ ಡಾ. ಲೀಲಾವತಿಯವರು ಎಂಟು ವರ್ಷದ ಹಿಂದೆ ಗ್ರಾಮೀಣ ಪ್ರದೇಶದ ಬಡ ರೈತರ ಉಪಯೋಗಕ್ಕೆಂದು ಸ್ವಂತ ಹಣದಿಂದ ಈ ಆಸ್ಪತ್ರೆಯನ್ನು ನಿರ್ಮಿಸಿದ್ದರು. ಕಾಲಕ್ರಮೇಣ ಆಸ್ಪತ್ರೆಯನ್ನ ನಿರ್ವಹಿಸಲು ಸರ್ಕಾರಿ ಆರೋಗ್ಯ ಇಲಾಖೆಯ ವಶಕ್ಕೆ ನೀಡಿದ್ದರು. ಅಂದಿನಿಂದ ಸರ್ಕಾರವೇ ವೈದ್ಯರಿಗೆ ಸಂಬಳ ನೀಡುತ್ತಿತ್ತು. ಆದರೆ ಸರ್ಕಾರಿ ಅಧಿಕಾರಿಗಳು ವೈದ್ಯರಿಗೆ ಕಳೆದ 2 ತಿಂಗಳಿನಿಂದ ಸಂಬಳ ನೀಡದೇ ಕರ್ತವ್ಯಲೋಪವೆಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

    ಈ ಆಸ್ಪತ್ರೆಯನ್ನ ಉನ್ನತ ದರ್ಜೆಗೆ ಏರಿಸುವ ಭರವಸೆಯನ್ನ ಅಧಿಕಾರಿಗಳು ಹಾಗೂ ಸಚಿವರು ನೀಡಿದ್ದರು. ಸರಿಯಾದ ಸಂಬಳ ನೀಡದ ಹಿನ್ನೆಲೆಯಲ್ಲಿ ವೈದ್ಯರು ಕೆಲಸಕ್ಕೆ ಬಾರದೆ ಬೇರೆ ಆಸ್ಪತ್ರೆಗೆ ಹೋಗುವ ಊಹಾಪೋಹಗಳು ಹರಿದಾಡುತ್ತಿದೆ. ವೈದ್ಯರಿಗೆ ಸಂಬಳ ನೀಡಿ ಆಸ್ಪತ್ರೆಯನ್ನು ಉಳಿಸಿಕೊಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಘಟನೆಯಿಂದ ನಟಿ ಲೀಲಾವತಿ, ನಟ ವಿನೋದ್ ರಾಜ್ ಹಾಗೂ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.

     

  • ಹಿರಿಯ ನಟಿ ಲೀಲಾವತಿ ಬಡವರಿಗಾಗಿ ನಿರ್ಮಿಸಿದ್ದ ಆಸ್ಪತ್ರೆ ದುಷ್ಕರ್ಮಿಗಳಿಂದ ಧ್ವಂಸ

    ಹಿರಿಯ ನಟಿ ಲೀಲಾವತಿ ಬಡವರಿಗಾಗಿ ನಿರ್ಮಿಸಿದ್ದ ಆಸ್ಪತ್ರೆ ದುಷ್ಕರ್ಮಿಗಳಿಂದ ಧ್ವಂಸ

    ಬೆಂಗಳೂರು: ಬಡವರ ಅನುಕೂಲಕ್ಕಾಗಿ ಹಿರಿಯ ನಟಿ ಡಾ.ಲೀಲಾವತಿ ಅವರು ನಿರ್ಮಿಸಿದ್ದ ಆಸ್ಪತ್ರೆಯನ್ನು ಭಾನುವಾರ ರಾತ್ರಿ ಕಿಡಿಗೇಡಿಗಳು ದಾಂಧಲೆ ನಡೆಸಿ ಧ್ವಂಸಗೊಳಿಸಿದ್ದಾರೆ.

     

     

    ಸ್ಯಾಂಡಲ್‍ವುಡ್ ನ ಹಿರಿಯ ನಟಿ ಲೀಲಾವತಿ ನಗರದ ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಡಾ.ಎಂ.ಲೀಲಾವತಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಿರ್ಮಿಸಿದ್ರು. ಐದು ವರ್ಷದ ಹಿಂದೆ ಗ್ರಾಮಾಂತರ ಪ್ರದೇಶದ ಹಳ್ಳಿಗಾಡಿನ ಬಡವರಿಗಾಗಿ ಲೀಲಾವತಿಯವರು, ಸ್ವಂತ ಖರ್ಚಿನಲ್ಲಿ ಆಸ್ಪತ್ರೆಯನ್ನ ನಿರ್ಮಿಸಿ ಸರ್ಕಾರದ ಸುಪರ್ದಿಗೆ ನೀಡಿದ್ದರು.

    ಭಾನುವಾರ ರಾತ್ರಿ ಯಾರು ಇಲ್ಲದ ವೇಳೆಯಲ್ಲಿ ಕಿಡಿಗೇಡಿಗಳು ದಾಂಧಲೆ ನಡೆಸಿ ಪೀಠೋಪಕರಣ, ಔಷಧಿಗಳು, ಸೇರಿದಂತೆ ಆಸ್ಪತ್ರೆಯ ಮೇಲ ಚಾವಣಿಯನ್ನು ಸಹ ಧ್ವಂಸಗೊಳಿಸಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ನಟಿ ಲೀಲಾವತಿ ಹಾಗೂ ಮಗ ವಿನೋದ್‍ರಾಜ್ ಭೇಟಿ ನೀಡಿ ಬೇಸರದಿಂದ ಕಣ್ಣೀರಿಟ್ಟರು.

    ಪದೇ ಪದೇ ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಇಂತಹ ಕೃತ್ಯಗಳನ್ನು ಮಾಡಿ ನಮಗೆ ನೋವುಂಟು ಮಾಡುತ್ತಿದ್ದಾರೆ ಎಂದು ನಟಿ ಲೀಲಾವತಿ ಬೇಸರ ವ್ಯಕ್ತಪಡಿಸಿದ್ರು. ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆಯನ್ನ ನಡೆಸುತಿದ್ದಾರೆ.