Tag: Lilavati Hospital

  • ಸೈಫ್‌ ಅಲಿ ಖಾನ್‌ಗೆ ಇರಿದದ್ದು ನಿಜವೇ ಅಥವಾ ನಟಿಸ್ತಿದ್ದಾರೆಯೇ? – ಬಿಜೆಪಿ ಸಚಿವ ರಾಣೆ ಲೇವಡಿ

    ಸೈಫ್‌ ಅಲಿ ಖಾನ್‌ಗೆ ಇರಿದದ್ದು ನಿಜವೇ ಅಥವಾ ನಟಿಸ್ತಿದ್ದಾರೆಯೇ? – ಬಿಜೆಪಿ ಸಚಿವ ರಾಣೆ ಲೇವಡಿ

    ಮುಂಬೈ: ಸೈಫ್‌ ಅಲಿ ಖಾನ್‌ (Saif Ali Khan) ಮೇಲೆ ಚಾಕು ಇರಿತ ದಾಳಿ ನಡೆದಿದ್ದು ನಿಜವೇ ಅಥವಾ 54 ವರ್ಷದ ನಟನ ನಟನೆಯೇ ಅಂತ ಬಿಜೆಪಿ ಮಹಾರಾಷ್ಟ್ರದ ಮೀನುಗಾರಿಕೆ ಸಚಿವರೂ ಆಗಿರುವ ಬಿಜೆಪಿ ನಾಯಕ ನಿತೇಶ್ ರಾಣೆ (Nitesh Rane) ಪ್ರಶ್ನೆ ಮಾಡಿದ್ದಾರೆ.

    ಚಾಕು ಇರಿತದಿಂದ (stabbed) ಚೇತರಿಸಿಕೊಂಡು 5 ದಿನಗಳ ಬಳಿಕ ಆಸ್ಪತ್ರೆಯಿಂದ ಮನೆಗೆ ವಾಪಾಸ್ಸಾಗಿರುವ ಬಾಲಿವುಡ್ ನಟ ಸೈಫ್ ಅಲಿ ಖಾನ್ ವಿರುದ್ಧ ರಾಣೆ ವಾಗ್ದಾಳಿ ನಡೆಸಿದ್ದಾರೆ. ಪುಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿತೇಶ್ ರಾಣೆ, ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿಯನ್ನು ಪ್ರಶ್ನಿಸಿದ್ದಾರೆ. ಸೈಫ್‌ ಅಲಿ ಖಾನ್‌ ಮೇಲಿನ ದಾಳಿ ನಿಜವೇ ಅಥವಾ 54 ವರ್ಷದ ನಟನ ʻಕೇವಲ ನಟನೆಯೇʼ ಎಂದು ಪ್ರಶ್ನೆ ಮಾಡಿದ್ದಾರೆ.

    ಸೈಫ್ ಅಲಿ ಖಾನ್ ಡಿಸ್ಚಾರ್ಜ್ ಆದ ನಂತರ ಅವರನ್ನು ನೋಡಿದಾಗ, ಅವರು ನಿಜವಾಗಿಯೂ ಇರಿದಿದ್ದಾರೆಯೇ ಅಥವಾ ನಟಿಸಿದ್ದಾರೆಯೇ ಎಂದು ನನಗೆ ಅನುಮಾನವಾಯಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: Hyderabad | ಪತ್ನಿಯ ಹತ್ಯೆಗೈದು, ಕುಕ್ಕರ್‌ನಲ್ಲಿ ಬೇಯಿಸಿ ಕೆರೆಗೆ ಎಸೆದ ಮಾಜಿ ಸೈನಿಕ

    ಮುಂದುವರಿದು, ಶಾರುಖ್ ಖಾನ್, ಸೈಫ್ ಅಲಿ ಖಾನ್ ಅವರಂತಹ ‘ಖಾನ್‌’ಗಳು ಗಾಯಗೊಂಡಾಗ ಎಲ್ಲರೂ ಅದರ ಬಗ್ಗೆ ಮಾತನಾಡಲು ಪ್ರಾರಂಭಿಸುತ್ತಾರೆ. ಸುಶಾಂತ್ ಸಿಂಗ್ ರಜಪೂತ್ ಅವರಂತಹ ಹಿಂದೂ ನಟ ಚಿತ್ರಹಿಂಸೆಗೊಳಗಾದಾಗ ಯಾರೂ ಏನನ್ನೂ ಹೇಳಲು ಮುಂದೆ ಬರುವುದಿಲ್ಲ ಎಂದು ಕಿಡಿಕಾರಿದ್ದಾರೆ.

    ಹಿಂದೂ ಕಲಾವಿದರ ಬಗ್ಗೆ ಆ ಮುಂಬ್ರಾದ ಜೀತುದ್ದೀನ್ (ಜಿತೇಂದ್ರ ಅವ್ವಾದ್), ಬಾರಾಮತಿಯ ತಾಯಿ (ಸುಪ್ರಿಯಾ ಸುಳೆ) ಎಂದಾದರೂ ಚಿಂತಿಸುವುದನ್ನು ನೋಡಿದ್ದೀರಾ? ಅವರಿಗೆ ಸೈಫ್ ಅಲಿ ಖಾನ್‌, ಶಾರುಖ್ ಖಾನ್ ಮಗ ಮತ್ತು ನವಾಬ್ ಮಲಿಕ್ ಬಗ್ಗೆ ಮಾತ್ರ ಚಿಂತೆಯಿದೆ. ಈ ಎಲ್ಲಾ ವಿಷಯಗಳ ಬಗ್ಗೆ ಹಿಂದೂಗಳು ಗಮನಹರಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಾರ್ವಜನಿಕವಾಗಿ ಹಸು ಕೊಂದು ಅಡುಗೆ ಮಾಡಿದ ವೀಡಿಯೋ ಹರಿಬಿಟ್ರು – ಅಸ್ಸಾಂನಲ್ಲಿ 6 ಮಂದಿ ಬಂಧನ

    ಸೈಫ್‌ ಅಲಿಖಾನ್‌ ಮನೆಗೆ ನುಗ್ಗಿದ ವ್ಯಕ್ತಿಯನ್ನು ಬಾಂಗ್ಲಾದೇಶಿ ಮೂಲದವನು ಎಂದು ಗುರುತಿಸಲಾಗಿದೆ. ಈ ಮೊದಲು ಬಾಂಗ್ಲಾದೇಶಿಗಳು ಮುಂಬೈ ಬಂದರಿನಲ್ಲಿ ತಂಗುತ್ತಿದ್ದರು. ಈಗ ಪರಿಸ್ಥಿತಿ ನೋಡಿ… ಮನೆಗಳಿಗೇ ನುಗ್ಗಲು ಪ್ರಾರಂಭಿಸಿದ್ದಾರೆ. ಬಹುಶಃ ಆ ಸಮಯದಲ್ಲಿ ನಟನನ್ನು ಕರೆದುಕೊಂಡು ಹೋಗಲು ಬಂದಿರಬಹುದು ಎಂದೂ ಹೇಳಿದ್ದಾರೆ.

    ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಸೈಫ್ ಅಲಿ ಖಾನ್ ಮಂಗಳವಾರ ಡಿಸ್ಚಾರ್ಜ್ ಆಗಿದ್ದರು. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಬಡಿಸಿದ ಸುಧಾ ಮೂರ್ತಿ

  • ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ – ಸಿದ್ದಿಕಿ ಹತ್ಯೆಗೆ ಸರ್ಕಾರವೇ ಹೊಣೆ: ರಾಗಾ ಸಿಡಿಮಿಡಿ

    ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ – ಸಿದ್ದಿಕಿ ಹತ್ಯೆಗೆ ಸರ್ಕಾರವೇ ಹೊಣೆ: ರಾಗಾ ಸಿಡಿಮಿಡಿ

    ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಸಿದ್ದಿಕ್ಕಿ ಅವರ ಹತ್ಯೆಗೆ ಸರ್ಕಾರವೇ ನೇರ ಹೊಣೆ ಎಂದು ರಾಜ್ಯ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ವಾಗ್ದಾಳಿ ನಡೆಸಿದ್ದಾರೆ.

    ಮಾಜಿ ಸಚಿವ ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್‌ ನಲ್ಲಿ ಪ್ರತಿಕ್ರಿಯೆ ಹಂಚಿಕೊಂಡಿರುವ ರಾಗಾ, ಬಾಬಾ ಸಿದ್ದಿಕಿ ಜೀ ಅವರ ದುರಂತ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದೇನೆ, ತುಂಬಾ ನೋವು ತಂದಿದೆ. ಈ ಕಷ್ಟದ ಸಮಯದಲ್ಲಿ ನಾವು ಅವರ ಕುಟುಂಬದೊಂದಿಗೆ ಇರುತ್ತೇವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು

    ಅಲ್ಲದೇ ಈ ಭಯಾನಕ ಘಟನೆಯು ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ (law and order) ಸಂಪೂರ್ಣ ಕುಸಿದಿರುವುದನ್ನು ಬಹಿರಂಗಪಡಿಸುತ್ತದೆ. ಸರ್ಕಾರವೇ ಇದರ ಜವಾಬ್ದಾರಿ ವಹಿಸಬೇಕು. ಸಿದ್ದಿಕಿ ಕುಟುಂಬಕ್ಕೆ ನ್ಯಾಯ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿಗೆ ಗುಂಡಿಕ್ಕಿ ಹತ್ಯೆ

    ಈಗಾಗಲೇ ನಟಿ ಶಿಲ್ಪಾ ಶೆಟ್ಟಿ, ಸಲ್ಮಾನ್‌ ಖಾನ್‌, ಸಂಜಯ್‌ ದತ್‌, ರಾಜ್‌ ಕುಂದ್ರಾ, ಇನ್ನೂ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಬಾಬಾ ಸಿದ್ದಿಕ್ಕಿ ಅವರೊಂದಿಗಿನ ನಿಕಟ ಬಾಂಧವ್ಯವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಕುಟುಂಬದೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ.

    ಸಲ್ಮಾನ್‌ ಖಾನ್‌ ನಿವಾಸಕ್ಕೆ ಹೆಚ್ಚಿದ ಭದ್ರತೆ:
    ಸಿದ್ದಿಕಿ ಹತ್ಯೆ ಹಿಂದೆ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೊಯ್‌ ಕೈವಾಡ ಶಂಕೆ ವ್ಯಕ್ತವಾಗುತ್ತಿದ್ದಂತೆ ಮುಂಬೈನ ಗ್ಯಾಲಕ್ಸಿ ಅಪಾರ್ಟ್ಮೆಂಟ್‌ನಲ್ಲಿರುವ ಸಲ್ಮಾನ್‌ ಖಾನ್‌ ನಿವಾಸಕ್ಕೆ ಹೆಚ್ಚಿನ ಪೊಲೀಸ್‌ ಭದ್ರತೆ ನಿಯೋಜಿಸಲಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ನಟ ಸಲ್ಮಾನ್ ಖಾನ್ ಅವರಿಗೆ ಬಿಷ್ಣೋಯಿ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಬಂದಿತ್ತು. ಇದರಿಂದ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ. ಇದೀಗ ಸಿದ್ದಿಕ್ಕಿ ಹತ್ಯೆ ಬೆನ್ನಲ್ಲೇ ಭದ್ರತೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಮಾಜಿ ಸಚಿವ ಸಿದ್ದಿಕಿ ಹತ್ಯೆ – ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಶಿಲ್ಪಾಶೆಟ್ಟಿ, ಆಸ್ಪತ್ರೆಗೆ ಬಾಲಿವುಡ್‌ ತಾರಾ ದಂಡೇ ದೌಡು

    ಏನಾಗಿತ್ತು?
    ಮುಂಬೈನ ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ. ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು.

  • ಮಾಜಿ ಸಚಿವ ಸಿದ್ದಿಕಿ ಹತ್ಯೆ – ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಶಿಲ್ಪಾಶೆಟ್ಟಿ, ಆಸ್ಪತ್ರೆಗೆ ಬಾಲಿವುಡ್‌ ತಾರಾ ದಂಡೇ ದೌಡು

    ಮಾಜಿ ಸಚಿವ ಸಿದ್ದಿಕಿ ಹತ್ಯೆ – ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಶಿಲ್ಪಾಶೆಟ್ಟಿ, ಆಸ್ಪತ್ರೆಗೆ ಬಾಲಿವುಡ್‌ ತಾರಾ ದಂಡೇ ದೌಡು

    – ಸಲ್ಮಾನ್‌ ಖಾನ್‌ ನಿವಾಸಕ್ಕೆ ಭದ್ರತೆ ಹೆಚ್ಚಳ

    ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ (66) (Baba Siddique) ಅವರು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ.‌ ಸಿದ್ದಿಕ್ಕಿ ಅವರ ಪಾರ್ಥೀವ ಶರೀರ ವೀಕ್ಷಣೆಗೆ ಬಾಲಿವುಡ್‌ ದಂಡೇ ಮುಂಬೈನ ಲೀಲಾವತಿ ಆಸ್ಪತ್ರೆಗೆ (Lilavati Hospital) ದಾಂಗುಡಿಯಿಟ್ಟಿದೆ.

     

    View this post on Instagram

     

    A post shared by Varinder Chawla (@varindertchawla)

    ನಟಿ ಶಿಲ್ಪಾ ಶೆಟ್ಟಿ (Shilpa Shetty), ಸಲ್ಮಾನ್‌ ಖಾನ್‌, ಸಂಜಯ್‌ ದತ್‌, ರಾಜ್‌ ಕುಂದ್ರಾ, ಇನ್ನೂ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಬಾಬಾ ಸಿದ್ದಿಕ್ಕಿ ಅವರೊಂದಿಗಿನ ನಿಕಟ ಬಾಂಧವ್ಯವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಕುಟುಂಬದೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ಭೇಟಿ ಹೊತ್ತಲ್ಲೇ ಬೆಳಗಾವಿಯಲ್ಲಿ ʻಭವಿಷ್ಯದ ಮುಖ್ಯಮಂತ್ರಿʼ ಬ್ಯಾನರ್ – ರಾಜಕೀಯದಲ್ಲಿ ಸಂಚಲನ

    ಸಲ್ಮಾನ್‌ ಖಾನ್‌ ನಿವಾಸಕ್ಕೆ ಹೆಚ್ಚಿದ ಭದ್ರತೆ:
    ಸಿದ್ದಿಕಿ ಹತ್ಯೆ ಹಿಂದೆ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೊಯ್‌ ಕೈವಾಡ ಶಂಕೆ ವ್ಯಕ್ತವಾಗುತ್ತಿದ್ದಂತೆ ಮುಂಬೈನ ಗ್ಯಾಲಕ್ಸಿ ಅಪಾರ್ಟ್ಮೆಂಟ್‌ನಲ್ಲಿರುವ ಸಲ್ಮಾನ್‌ ಖಾನ್‌ *(Salman Khan) ನಿವಾಸಕ್ಕೆ ಹೆಚ್ಚಿನ ಪೊಲೀಸ್‌ ಭದ್ರತೆ ನಿಯೋಜಿಸಲಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ನಟ ಸಲ್ಮಾನ್ ಖಾನ್ ಅವರಿಗೆ ಬಿಷ್ಣೋಯಿ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಬಂದಿತ್ತು. ಇದರಿಂದ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ. ಇದೀಗ ಸಿದ್ದಿಕ್ಕಿ ಹತ್ಯೆ ಬೆನ್ನಲ್ಲೇ ಭದ್ರತೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಮಾಜಿ ಸಚಿವ ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು

    ಮುಂಬೈ ಕ್ರೈಂ ಬ್ರ್ಯಾಂಚ್‌ ತನಿಖೆ ಚುರುಕು:
    ಘಟನೆ ಬಳಿಕ ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂಬ ಆರೋಪಿಗಳನ್ನು ಬಂಧಿಸಿರುವ ಮುಂಬೈ ಕ್ರೈಂ ಬ್ರ್ಯಾಂಚ್‌ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ತನಿಖೆಗೆ 4 ವಿಶೇಷ ತಂಡಗಳನ್ನ ರಚಿಸಿದ್ದು, 2 ಆಯಾಮಗಳಿಂದ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ. ಒಂದು ಬಿಷ್ಣೋಯ್ ಗ್ಯಾಂಗ್, ಮತ್ತೊಂದು ಸ್ಲಂ ಪುನರ್ವಸತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಆದ್ರೆ ಸಿದ್ದಿಕಿ ಅವರಿಗೆ ಯಾವುದೇ ಬೆದರಿಕೆಗಳೂ ಬಂದಿರಲಿಲ್ಲ ಎನ್ನಲಾಗಿದೆ. ಇದನ್ನೂ ಓದಿ: Tungabhadra Dam | ಒಳಹರಿವು ಹೆಚ್ಚಳ – ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ

    ಸ್ಫೋಟಕ ಮಾಹಿತಿ:
    ಡಜನ್ ಗಟ್ಟಲೇ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ಗುಜರಾತ್ ಜೈಲಿನಲ್ಲಿದ್ದಾನೆ. ಆದ್ರೆ ಅವನ ಗ್ಯಾಂಗ್‌ನಿಂದ ಉದ್ಯಮಿಗಳು, ಪ್ರಮುಖ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಲೇ ಇವೆ. ಸದ್ಯ ಬಿಷ್ಣೋಯ್ ಗ್ಯಾಂಗ್‌ನಲ್ಲಿ 700ಕ್ಕೂ ಹೆಚ್ಚು ಶೂಟರ್‌ಗಳಿದ್ದಾರೆ. ದೇಶಾದ್ಯಂತ ಅನೇಕ ಸಣ್ಣ ಮತ್ತು ದೊಡ್ಡ ಕ್ರಿಮಿನಲ್‌ಗಳು ಅವನಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಏನಾಗಿತ್ತು?
    ಮುಂಬೈನ ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ. ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು.

  • 12 ದಿನಗಳ ಜೈಲುವಾಸದ ನಂತರ ಪತಿಯನ್ನು ನೋಡಿ ಕಣ್ಣೀರಿಟ್ಟ ನವನೀತ್ ರಾಣಾ

    12 ದಿನಗಳ ಜೈಲುವಾಸದ ನಂತರ ಪತಿಯನ್ನು ನೋಡಿ ಕಣ್ಣೀರಿಟ್ಟ ನವನೀತ್ ರಾಣಾ

    ಮುಂಬೈ: 12 ದಿನಗಳ ಜೈಲುವಾಸದ ನಂತರ ಮತ್ತೆ ಶಾಸಕ ಪತಿ ರವಿ ರಾಣಾ ಮತ್ತು ಅಮರಾವತಿ ಸಂಸದೆ ನವನೀತ್ ರಾಣಾ ಒಂದಾಗಿದ್ದು, ಕಣ್ಣೀರಿಟ್ಟಿದ್ದಾರೆ.

    ಗುರುವಾರ ನವನೀತ್ ರಾಣಾ ಬೈಕುಲ್ಲಾ ಜೈಲಿನಿಂದ ಬಿಡುಗಡೆಯಾಗಿದ್ದು, ಆಕೆಯ ಪತಿ ರವಿ ರಾಣಾ ತಲೋಜಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ವೇಳೆ ನವನೀತ್ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಹಿನ್ನೆಲೆ ರವಿ, ಆಸ್ಪತ್ರೆಗೆ ಮಡದಿಯನ್ನು ನೋಡಲು ಬಂದಿದ್ದಾರೆ. ಪತಿಯನ್ನು ನೋಡಿದ ತಕ್ಷಣ ನವನೀತ್ ಅಳಲು ಪ್ರಾರಂಭ ಮಾಡಿದ್ದಾರೆ. ದಂಪತಿ ಭಾವನಾತ್ಮಕವಾಗಿ ಒಬ್ಬರನ್ನೊಬ್ಬರು ನೋಡಿಕೊಂಡಿದ್ದು, ನಂತರ ರವಿ ಅವರು ಸಾಂತ್ವನ ಮಾಡಿದರು. ಇದನ್ನೂ ಓದಿ: ಬಂಧನದಲ್ಲಿರುವ ರಾಣಾ ದಂಪತಿ ನಿವಾಸದಲ್ಲಿ ಅಕ್ರಮ ಕಟ್ಟಡ – ಬಿಎಂಸಿ ನೋಟೀಸ್

    ನವನೀತ್ ರಾಣಾ ಅವರ ವಕೀಲರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಸಂಸದರು ಅಸ್ವಸ್ಥರಾಗಿದ್ದರು. ಅವರ ರಕ್ತದೊತ್ತಡ ಹೆಚ್ಚಾಗಿದೆ. ಅವರಿಗೆ ದೇಹದಲ್ಲಿ ನೋವು ಮತ್ತು ಸ್ಪಾಂಡಿಲೈಟಿಸ್ ಇತ್ತು. ನಂತರ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದರು.

    Navneet Rana Ravi Rana 2

    ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124(ಎ) (ದೇಶದ್ರೋಹ) ಮತ್ತು 153 (ಎ) (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ರಾಣಾ ದಂಪತಿಯನ್ನು ಏಪ್ರಿಲ್ 23 ರಂದು ಖಾರ್ ಪೊಲೀಸರು ಬಂಧಿಸಿದ್ದರು.

  • ಕೆಜಿಎಫ್‍ನ ಅಧೀರ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಕೆಜಿಎಫ್‍ನ ಅಧೀರ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಮುಂಬೈ: ಬಾಲಿವುಡ್ ನಟ ಹಾಗೂ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರ ನಿರ್ವಹಿಸುತ್ತಿರುವ ಸಂಜಯ್ ದತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಉಸಿರಾಟದ ತೊಂದರೆ ಹಾಗೂ ಎದೆ ನೋವಿನಿಂದ ಆಗಸ್ಟ್ 8ರಂದು ಸಂಜಯ್ ದತ್ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಲೀಲಾವತಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಭಾನುವಾರವಷ್ಟೇ ಸಂಜಯ್ ದತ್ ಆರಾಮಾಗಿದ್ದಾರೆ, ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಆಸ್ಪತ್ರೆ ತಿಳಿಸಿತ್ತು.

    ಸಂಜಯ್ ದತ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ನೆಗೆಟಿವ್ ವರದಿ ಬಂದಿತ್ತು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಂಜಯ್ ದತ್ ಈ ಕುರಿತು ತಮ್ಮ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದರು. ನಾನು ಆರಾಗಿದ್ದೇನೆ, ಎಲ್ಲ ಕೆಲಸಗಳನ್ನು ಮಾಡುತ್ತಿದ್ದೇನೆ. ವೈದ್ಯಕೀಯ ನಿಗಾ ವಹಿಸಲಾಗಿದೆ. ಕೊರೊನಾ ಪರೀಕ್ಷಾ ವರದಿ ಸಹ ನೆಗೆಟಿವ್ ಬಂದಿದೆ ಎಂದು ಸ್ಪಷ್ಟಪಡಿಸಿದ್ದರು.

    ಲೀಲಾವತಿ ಆಸ್ಪತ್ರೆ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿ ತುಂಬಾ ಕಾಳಜಿ ವಹಿಸಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಮನೆಗೆ ಮರಳುತ್ತೇನೆ. ನಿಮ್ಮ ಹಾರೈಕೆಗೆ ಧನ್ಯವಾದಗಳು. ಎಲ್ಲರೂ ಸುರಕ್ಷಿತವಾಗಿರಿ ಎಂದು ಈ ಹಿಂದೆ ಮಾಡಿದ್ದ ಟ್ವೀಟ್‍ನಲ್ಲಿ ತಿಳಿಸಿದ್ದರು.

    ಸಂಜಯ್ ದತ್ ಮಾನ್ಯತಾ ದತ್ ಅವರನ್ನು ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಲ್ಲದೆ ಮೊದಲ ಪತ್ನಿಯ ಒಬ್ಬ ಮಗಳಿದ್ದಾಳೆ. ಸಂಜಯ್ ದತ್ ಕನ್ನಡದ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಬಾಲಿವುಡ್‍ನ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.