Tag: Lingayat leaders

  • ಲಿಂಗಾಯತ ನಾಯಕರು ಕಾಂಗ್ರೆಸ್‌ನಲ್ಲಿ ಅಲೆಮಾರಿಗಳಾಗಿದ್ದಾರೆ: ಗೋವಿಂದ ಕಾರಜೋಳ

    ಲಿಂಗಾಯತ ನಾಯಕರು ಕಾಂಗ್ರೆಸ್‌ನಲ್ಲಿ ಅಲೆಮಾರಿಗಳಾಗಿದ್ದಾರೆ: ಗೋವಿಂದ ಕಾರಜೋಳ

    ಬಾಗಲಕೋಟೆ: ಕಾಂಗ್ರೆಸ್‌ನಲ್ಲಿ (Congress) ಲಿಂಗಾಯತರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಗೌಪ್ಯ ಸಭೆಗಳಿರಲಿ, ಲಿಂಗಾಯತರಿಗೆ ಊಟ, ಉಪಾಹಾರದ ಸಭೆಗಳಿಗೂ ಕರೆಯುತ್ತಿಲ್ಲ. ಪಕ್ಷದಲ್ಲಿ ಲಿಂಗಾಯತ ನಾಯಕರು (Lingayat Leaders) ಅಲೆಮಾರಿಗಳಾಗಿದ್ದಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಆಕ್ರೋಶ ಹೊರಹಾಕಿದ್ದಾರೆ.

    ಬಾಗಲಕೋಟೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು (BJP) ಲಿಂಗಾಯತರಿಗೆ ಅನ್ಯಾಯ ಮಾಡಿದ್ದಾರೆಂದು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ನವರು ಆರೋಪ ಮಾಡಿದ್ದರು. ಜನರಿಗೆ ಸುಳ್ಳು ಹೇಳಿ ಮತಬ್ಯಾಂಕ್‌ ಮಾಡಿಕೊಂಡು ಅಧಿಕಾರಕ್ಕೆ ಬಂದರು. ಇವತ್ತು ಕಾಂಗ್ರೆಸ್‌ ಪಕ್ಷದಲ್ಲಿ ಲಿಂಗಾಯತರ ಪರಿಸ್ಥಿತಿ ಏನಾಗಿದೆ? ಎಂಬುದನ್ನು ಸಿದ್ದರಾಮಯ್ಯ (Siddaramaiah) ಅವರೇ ಹೇಳಬೇಕು. ಗುಪ್ತ ಸಮಾಲೋಚನೆಗಳಿಗೆ ಕರೆಯದೇ ಇದ್ದರೂ ಬಹಿರಂಗವಾಗಿ ಊಟಕ್ಕೆ, ತಿಂಡಿಗಾದರೂ ಕರೆದು ಗೌರವ ಕೊಟ್ಟಿದ್ದೇವೆ ಎಂದು ಹೇಳಿಕೊಳ್ಳುವ ಯಾವ ಉದಾಹರಣೆಯೂ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಕಾಣಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ವ್ಯಕ್ತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಮಕ್ಕಳಿಂದ ಮಹಿಳೆ ಮೇಲೆ ಹಲ್ಲೆ

    ದಲಿತರಿಗೂ ಅನ್ಯಾಯ ಅಗಿದೆ:
    ಗೃಹ ಸಚಿವ ಜಿ.ಪರಮೇಶ್ವರ್‌ ಅವರ ಮನೆಯಲ್ಲಿ ಊಟಕ್ಕೆ ಕರೆದ್ರು, ಅಲ್ಲಿಯೂ ಲಿಂಗಾಯತರಿಗೆ ಒಬ್ಬರಿಗೂ ಕರೆಯಲಿಲ್ಲ. ಸಿದ್ದರಾಮಯ್ಯ ಮನೆಯಲ್ಲಿ ಉಪಹಾರಕ್ಕೆ ಕರೆದಾಗಲೂ ಲಿಂಗಾಯತ ಸಮುದಾಯದ ಒಬ್ಬ ನಾಯಕನನ್ನ ಕರೆಯಲಿಲ್ಲ. ಕಾಂಗ್ರೆಸ್‌ನಲ್ಲಿ 38 ಮಂದಿ ಲಿಂಗಾಯತ ಶಾಸಕರು, 7 ಮಂದಿ ಲಿಂಗಾಯತ ಸಚಿವರಿದ್ದಾರೆ. ಆದ್ರೂ ಅವರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲದಂತಾಗಿದೆ. ಅಧಿಕಾರ ಹಂಚಿಕೆಯಲ್ಲೂ ಲಿಂಗಾಯತರಿಗೆ ಮತ್ತು ದಲಿತರಿಗೆ ಅನ್ಯಾಯ ಆಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಮಂಗಳೂರು, ಕಾರವಾರದಲ್ಲಿ ಬಂದರು ನಿರ್ಮಾಣ – 13 ಐಲ್ಯಾಂಡ್ ಅಭಿವೃದ್ಧಿ: ಮಂಕಾಳ್ ವೈದ್ಯ

    ವಿಷ ಹಾಕಿ ಸಾಯಿಸಲ್ಲ:
    ಬಿಜೆಪಿ ಯಿಂದ ಕಾಂಗ್ರೆಸ್ ನಾಯಕರನ್ನ ಸೆಳೆಯವ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ನವರೇ ಬಂಡೆದ್ದು, ಸಿಎಂಗೆ 41 ಜನ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿ ನಯಾ ಪೈಸೆ ಹಣ ಕೊಟ್ಟಿಲ್ಲ ಹಾಗೂ ನಮ್ಮ ಕೆಲಸ ಕಾರ್ಯಗಳು ಆಗ್ತಿಲ್ಲ. ಮಂತ್ರಿಗಳು ನಾವು ಶಿಫಾರಸ್ಸು ಮಾಡಿದ ಅಧಿಕಾರಿಯನ್ನ ವರ್ಗಾವಣೆ ಮಾಡದೇ ಅವ್ರೇ ದುಡ್ಡು ತಗೊಂಡು ವರ್ಗಾವಣೆ ಮಾಡ್ತಿದ್ದಾರೆ. ಮಂತ್ರಿಗಳೇ ದೊಡ್ಡ ಬಿಸಿನೆಸ್‌ ಮಾಡಿಕೊಂಡಿದ್ದಾರೆ ಎಂದು ಸಿಎಂಗೆ ಪತ್ರ ಬರೆದಿದ್ದಾರೆ. ನಾವು ಅವರನ್ನು ಪಕ್ಷಕ್ಕೆ ಸೆಳೆಯಲ್ಲ, ಆ ಪಾಪದ ಕೆಲಸ ನಾವು ಮಾಡಲ್ಲ. ಹಾಲು ಕುಡಿದು ಸಾಯುವವರಿಗೆ, ವಿಷ ಹಾಕಿ ಸಾಯಿಸಲ್ಲ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಅತ್ಯುತ್ತಮ ನಾಯಕ – ಹಾಡಿ ಹೊಗಳಿದ ಅಮೆರಿಕ ಗಾಯಕಿ

  • ಜನವರಿಯಿಂದ ಪಕ್ಷಾಂತರ ಪರ್ವ ಆರಂಭ – ಪ್ರಭಾವಿ ಲಿಂಗಾಯತ ಲೀಡರ್ ಬಿಜೆಪಿ ಸೇರ್ಪಡೆ?: ಸತೀಶ್ ಜಾರಕಿಹೊಳಿ

    ಜನವರಿಯಿಂದ ಪಕ್ಷಾಂತರ ಪರ್ವ ಆರಂಭ – ಪ್ರಭಾವಿ ಲಿಂಗಾಯತ ಲೀಡರ್ ಬಿಜೆಪಿ ಸೇರ್ಪಡೆ?: ಸತೀಶ್ ಜಾರಕಿಹೊಳಿ

    ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಜನವರಿಯಿಂದ ಪಕ್ಷಾಂತರ ಪರ್ವ ಆರಂಭವಾಗಲಿದೆ. ಆ ಕಡೆಯಿಂದ ಈ ಕಡೆಗೆ, ಈ ಕಡೆಯಿಂದ ಆ ಕಡೆಗೆ ಪಕ್ಷಾಂತರ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

    ನಗರದಲ್ಲಿ ಪ್ರಭಾವಿ ಲಿಂಗಾಯತ ಲೀಡರ್ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜನವರಿಯಲ್ಲಿ ಖಂಡಿತವಾಗಿ ಪಕ್ಷಾಂತರ ಪರ್ವ ಆರಂಭ ಆಗಲಿದೆ. ಒಮ್ಮೊಮ್ಮೆ ಬುಕ್ಕಿಂಗ್ ಮಾಡ್ತಾರೆ. ಕೊನೆ ಕ್ಷಣದಲ್ಲಿ ಕ್ಯಾನ್ಸಲ್ ಮಾಡ್ತಾರೆ. ರಾಜಕೀಯ ಅಂದ್ರೆ ಹೀಗೆ. ಕೆಲವೊಮ್ಮೆ ಆನ್‍ಲೈನ್ ಬುಕ್ಕಿಂಗ್ ಸಹ ಆಗುತ್ತದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಆಪರೇಷನ್ ಅಮರನಾಥ ಚಾಲೆಂಜ್ ಆಗಿದೆ: ಕರ್ನಲ್ ವಿ.ಎಂ. ನಾಯಕ್

    ಪ್ರಭಾಕರ ಕೋರೆ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿ, ಬಿಜೆಪಿಯ ಬೇರೆ ಬೇರೆ ಗುಂಪಿನಲ್ಲಿ ಚರ್ಚೆ ಆಗುತ್ತಿದೆ. ಕೆಲವರು ನಾವು ಬಿಜೆಪಿಯಲ್ಲಿ ಇರಬೇಕಾ, ಬೇರೆ ಪಕ್ಷಕ್ಕೆ ಹೋಗಬೇಕಾ ಅಂತಾ ಚರ್ಚೆ ನಡೆಸುತ್ತಿದ್ದಾರೆ. ಅದು ಬಿಜೆಪಿ ಪಕ್ಷ ಅಷ್ಟೇ ಅಲ್ಲ ಎಲ್ಲಾ ಪಕ್ಷದಲ್ಲೂ ಪಕ್ಷಾಂತರ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಎಲ್ಲಾ ಪಕ್ಷದಲ್ಲೂ ತಮ್ಮ ತಮ್ಮ ಸ್ಥಾನಮಾನ ಗಟ್ಟಿ ಮಾಡಲು ಚರ್ಚೆ ಮಾಡುತ್ತಲೇ ಇರುತ್ತಾರೆ. ಅಂತಿಮ ನಿರ್ಧಾರ ಅವರಿಗೆ ಬಿಟ್ಟಿರುವುದು. ಬಿಜೆಪಿಯವರು ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದಾರೆ. ಅವರನ್ನು ಸೈಡ್‌ಲೈನ್‌ ಮಾಡಿದ್ದಾರೆ. ಈಗ ಅವರ ಮಕ್ಕಳು ಇಲ್ಲ. ಮುಂದಿನ ಚುನಾವಣೆಯಲ್ಲಿ ಪೂರ್ತಿ ಯಡಿಯೂರಪ್ಪ ಕುಟುಂಬವನ್ನು ಸೈಡ್‌ಲೈನ್‌ ಮಾಡ್ತಾರೆ ಎಂದರು.

    ಕಾಂಗ್ರೆಸ್ ಸೇರಲು 6 ಬಿಜೆಪಿ ಕಾರ್ಪೊರೇಟರ್‌ಗಳ ಚಿಂತನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರು ಅಸಮಾಧಾನಗೊಂಡಿದ್ದು ಚರ್ಚೆ ನಡೀತಿದೆ ಎಂಬ ಮಾತು ನನ್ನ ಕಿವಿಗೆ ಬಿದ್ದಿದೆ. ಬಿಜೆಪಿ ಕಾರ್ಪೊರೇಟರ್‌ಗಳು ಪಕ್ಷಕ್ಕೆ ಬಂದ್ರೆ ಸೇರಿಸಿಕೊಳ್ಳುವ ವಿಚಾರ ಚರ್ಚೆ ಆಗಿಲ್ಲ. ಬಂದಾಗ ನೋಡೋಣ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬೆಳಗಾವಿಗೆ ಮೂರು ದಿನ ಯಲ್ಲೋ ಅಲರ್ಟ್ – ತಹಶೀಲ್ದಾರ್ ಅಕೌಂಟ್‍ನಲ್ಲಿ ಹಣ ಇದೆ ಯಾವುದೇ ಸಮಸ್ಯೆ ಇಲ್ಲ: ಡಿ.ಸಿ ನಿತೇಶ್ ಪಾಟೀಲ್

    ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಂಚಮಸಾಲಿ ಮೀಸಲಾತಿ ಸೇರಿಸುವ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ಪ್ರಣಾಳಿಕೆ ಜನವರಿ, ಫೆಬ್ರವರಿಯಲ್ಲಿ ಅಂತಿಮ ಆಗುತ್ತದೆ. ಈ ವೇಳೆ ಪಕ್ಷ ಈ ಬಗ್ಗೆ ತೀರ್ಮಾನಿಸುತ್ತದೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಸುಪ್ರೀಂ ಹಿರಿಯ ವಕೀಲ ಸಂಕೇತ ಏಣಗಿ ಬಿಜೆಪಿಗೆ ಸೆಳೆಯಲು ಲಿಂಗಾಯತ ನಾಯಕರ ಸರ್ಕಸ್

    ಸುಪ್ರೀಂ ಹಿರಿಯ ವಕೀಲ ಸಂಕೇತ ಏಣಗಿ ಬಿಜೆಪಿಗೆ ಸೆಳೆಯಲು ಲಿಂಗಾಯತ ನಾಯಕರ ಸರ್ಕಸ್

    ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಪಕ್ಷಾಂತರ ಪರ್ವ ಕೂಡ ಪ್ರಾರಂಭವಾಗಿದೆ. ಅನ್ಯ ಪಕ್ಷಗಳ ಪ್ರಭಾವಿ ನಾಯಕರುಗಳನ್ನು ತಮ್ಮ ಪಕ್ಷದಡೆಗೆ ಸೆಳೆಯುವ ಸಾಕಷ್ಟು ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ.

    SUPREME COURT

    ರಾಜ್ಯ ಕಾಂಗ್ರೆಸ್ ವಕ್ತಾರ, ಸುಪ್ರೀಂಕೋರ್ಟ್ ನ್ಯಾಯವಾದಿ ಸಂಕೇತ್ ಏಣಗಿ ಸೆಳೆಯಲು ಬಿಜೆಪಿ ಗಾಳ ಹಾಕಿರುವುದು ಬೆಳಕಿಗೆ ಬಂದಿದೆ. ರಾಜ್ಯ ಕಾಂಗ್ರೆಸ್ ಪಾಲಿಗೆ ನ್ಯಾಯಾಂಗ ಹೋರಾಟದಲ್ಲಿ ಶಕ್ತಿಯಾಗಿರುವ ಏಣಿಗೆ, ಹಲವು ಕಾನೂನು ಹೋರಾಟದಲ್ಲಿ ಕಾಂಗ್ರೆಸ್‍ಗೆ ಬಲ ತುಂಬಿದ್ದಾರೆ. ಹೇಗಾದರೂ ಮಾಡಿ ಸಂಕೇತ್ ಏಣಗಿಯವರನ್ನು ಸೆಳೆದು ಕಾಂಗ್ರೆಸ್‍ಗೆ ಮರ್ಮಾಘಾತ ನೀಡಲು ಬಿಜೆಪಿ ಪ್ಲಾನ್ ಮಾಡಿದೆ. ಲಿಂಗಾಯತ ಸಮುದಾಯದಲ್ಲೂ ಪ್ರಭಾವ ವರ್ಚಸ್ಸು ಹೊಂದಿರುವ ಏಣಗಿ ಅವರನ್ನು ಸೆಳೆಯಲು ಬಿಜೆಪಿಯ ಕೆಲ ಲಿಂಗಾಯತ ಮುಖಂಡ ಮೂಲಕ ಪ್ರಯತ್ನ ನಡೆದಿದೆ ಎನ್ನಲಾಗಿದೆ.

    ಕಾಂಗ್ರೆಸ್‍ನಲ್ಲಿ ಅತೃಪ್ತಿ ಹಾಗೂ ಭಿನ್ನಮತ ಹೆಚ್ಚಾದ ಹಿನ್ನೆಲೆಯಲ್ಲಿ ಸಾಕಷ್ಟು ಕಾಂಗ್ರೆಸ್ ನಾಯಕರುಗಳು ಪಕ್ಷ ತೊರೆಯುತ್ತಿದ್ದು, ಇತ್ತೀಚೆಗಷ್ಟೇ ಮಾಜಿ ಕೇಂದ್ರ ಮಂತ್ರಿ ಕಪಿಲ್ ಸಿಬಲ್ ಕಾಂಗ್ರೆಸ್ ಪಕ್ಷ ತೊರೆದು ಸಮಾಜವಾದಿ ಪಕ್ಷ ಸೇರಿ ರಾಜ್ಯಸಭೆಗೆ ನಾಮಪತ್ರವನ್ನು ಸಲ್ಲಿಸಿದ್ದಾರೆ. ಈ ಆಘಾತದಿಂದ ಇನ್ನೂ ಚೇತರಿಸಿಕೊಳ್ಳುವ ಮುನ್ನವೇ ಬಿಜೆಪಿಯು ಇನ್ನಿತರ ಕಾಂಗ್ರೆಸ್ಸಿನ ಪ್ರಭಾವಿ ವಕೀಲರುಗಳನ್ನು ತನ್ನ ಪಕ್ಷಕ್ಕೆ ಸೆಳೆಯಲು ಶತಾಯಗತಾಯ ಪ್ರಯತ್ನಿಸುತ್ತಿದೆ. ಇದನ್ನೂ ಓದಿ: ಫೋಟೋಗ್ರಾಫರ್ ಇಲ್ಲ ಅಂತ ಮದುವೆ ಕ್ಯಾನ್ಸಲ್ ಮಾಡಿದ ವಧು

    ರಾಜ್ಯದ ಚುನಾವಣೆಗಳಲ್ಲಿ ಪ್ರಮುಖ ಪಾತ್ರವಹಿಸುವ ಲಿಂಗಾಯತ ಮತದಾರರನ್ನು ಉಳಿಸಿಕೊಳ್ಳಲು ಹಾಗೂ ಇನ್ನೂ ಹೆಚ್ಚಿಸಿಕೊಳ್ಳಲು ಸಾಕಷ್ಟು ಲಿಂಗಾಯತ ಸಮಾಜದ ಪ್ರಭಾವಿ ಹಾಗೂ ನಿಷ್ಠಾವಂತ ನಾಯಕರುಗಳನ್ನು ತನ್ನ ಪಕ್ಷಕ್ಕೆ ಸೆಳೆಯಲು ಬಿಜೆಪಿ ಶತಾಯಗತಾಯ ಪ್ರಯತ್ನಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಸುಪ್ರೀಂಕೋರ್ಟ್ ಹಿರಿಯ ವಕೀಲ ಸಂಕೇತ ಏಣಗಿ ಸೆಳೆಯಲು ಬಿಜೆಪಿಯ ಹಿರಿಯ ಲಿಂಗಾಯತ ನಾಯಕರುಗಳು ಇತ್ತೀಚೆಗೆ ಖಾಸಗಿ ಕಾರ್ಯಕ್ರಮವನ್ನು ಆಯೋಜಿಸಿ, ಆ ಮೂಲಕ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನಾವು ಬೇರೆ ಭಾಷೆಯನ್ನು ಇಂಪ್ರೆಸ್ ಮಾಡೋದು ಬೇಕಿಲ್ಲ: ಸುದೀಪ್ 

    ಪಕ್ಷದ ರಾಜ್ಯ ನಾಯಕರುಗಳನ್ನು ಕಡೆಗಣಿಸಿ ಹೈಕಮಾಂಡ್ ರಾಜ್ಯದಿಂದ ರಾಜ್ಯಸಭೆಗೆ ಜೈರಾಮ್ ರಮೇಶ್ ಅವರನ್ನು ಕಣಕ್ಕಿಳಿಸಿರುವುದು ಭಿನ್ನಮತ ಸ್ಫೋಟಕ್ಕೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಹಾಗೂ ಮಹಿಳಾ ಘಟಕದ ಪ್ರಮುಖ ನಾಯಕಿ ಕವಿತಾರೆಡ್ಡಿ ಕೂಡ ಇತ್ತೀಚೆಗೆ ಕಾಂಗ್ರೆಸ್ ಪಕ್ಷನಲ್ಲಿಯ ಮಹಿಳಾ ಮೀಸಲಾತಿ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ಈ ಎಲ್ಲಾ ವಿದ್ಯಮಾನಗಳ ನಡುವೆ ವಕೀಲ ಸಂಕೇತ ಏಣಗಿ ಕೂಡ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದರೆ ಅಚ್ಚರಿ ಪಡಬೇಕಿಲ್ಲ.