Tag: Lingayat Rituals

  • ಪೊಲೀಸ್ ಗೌರವಗಳೊಂದಿಗೆ, ಯಾವುದೇ ವಿಧಿವಿಧಾನವಿಲ್ಲದೇ ಗೌರಿ ಲಂಕೇಶ್ ಅಂತ್ಯಕ್ರಿಯೆ

    ಪೊಲೀಸ್ ಗೌರವಗಳೊಂದಿಗೆ, ಯಾವುದೇ ವಿಧಿವಿಧಾನವಿಲ್ಲದೇ ಗೌರಿ ಲಂಕೇಶ್ ಅಂತ್ಯಕ್ರಿಯೆ

    ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಅವರ ಅಂತ್ಯಕ್ರಿಯೆ ಚಾಮರಾಜ ಪೇಟೆಯ ರುದ್ರಭೂಮಿ ಟಿಆರ್ ಮಿಲ್ ನಲ್ಲಿ ಬುಧವಾರ ಸಂಜೆ ನಡೆಯಿತು.

    ರುದ್ರಭೂಮಿಗೆ ಮೃತ ಶರೀರ ಬಂದ ಬಳಿಕ ಪೊಲೀಸರು ಮೂರು ಸುತ್ತು ಕುಶಾಲು ತೋಪು ಹಾರಿಸಿ ಗೌರವ ಸಲ್ಲಿಸಿದರು. ಯಾವುದೇ ಸಂಪ್ರದಾಯವನ್ನು ನೆರವೇರಿಸದೇ ಹೂವನ್ನು ಇಟ್ಟು ಪಾರ್ಥಿವ ಶರೀರವನ್ನು ಹೂಳಲಾಯಿತು. ಬಳಿಕ ಅವರ ಅಭಿಮಾನಿಗಳು ಕೈಯಲ್ಲಿ ಮಣ್ಣನ್ನು ಹಾಕಿದರು.

    ಅಂತ್ಯಸಂಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಮೇಶ್ ಕುಮಾರ್, ರಾಮಲಿಂಗಾ ರೆಡ್ಡಿ, ನಟ ಪ್ರಕಾಶ್ ರೈ ಭಾಗವಹಿಸಿದ್ದರು. ಅಂತ್ಯ ಸಂಸ್ಕಾರಕ್ಕೂ ಮೊದಲು ಅಭಿಮಾನಿಯೊಬ್ಬರು ‘ಗೌರಿ ಲಂಕೇಶ್ ಅಮರ್ ರಹೇ’ ‘ಮತ್ತೆ ಹುಟ್ಟಿಬಾ ಗೌರಿ’ ಎಂದು ಘೋಷಣೆ ಕೂಗಿದರು.

    ವಿಧಿವಿಧಾನ ಯಾಕಿಲ್ಲ:ಜೀವನದುದ್ದಕ್ಕೂ ಧಾರ್ಮಿಕ ಆಚರಣೆ ಮೇಲೆ ಗೌರಿ ಲಂಕೇಶ್ ನಂಬಿಕೆ ಇಟ್ಟಿರಲಿಲ್ಲ. ಹಾಗಾಗಿ ಕೊನೆ ಕ್ಷಣದಲ್ಲಿ ಅವರ ನಂಬಿದ ತತ್ವಗಳಿಗೆ ಧಕ್ಕೆ ತರದೇ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸದೇ ಕುಟುಂಬ ಸದಸ್ಯರು ಪಾರ್ಥಿವ ಶರೀರದ ಮೇಲೆ ಹೂಗಳನ್ನು ಇರಿಸಿ ಅಂತ್ಯಸಂಸ್ಕಾರ ನೆರವೇರಿಸಿದರು.

    ಮಂಗಳವಾರ ರಾತ್ರಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಅಂತ್ಯ ಸಂಸ್ಕಾರ ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ ಎನ್ನುವ ಸುದ್ದಿ ಬೆಳಗ್ಗೆ ಮಾಧ್ಯಮಗಳಿಗೆ ಸಿಕ್ಕಿತ್ತು.

  • ಗೌರಿ ಲಂಕೇಶ್ ಅಂತ್ಯಸಂಸ್ಕಾರದಲ್ಲಿ ಯಾವುದೇ ವಿಧಿವಿಧಾನ ಇರಲ್ಲ

    ಗೌರಿ ಲಂಕೇಶ್ ಅಂತ್ಯಸಂಸ್ಕಾರದಲ್ಲಿ ಯಾವುದೇ ವಿಧಿವಿಧಾನ ಇರಲ್ಲ

    ಬೆಂಗಳೂರು: ಗೌರಿ ಲಂಕೇಶ್ ನಂಬಿರುವ ಸಿದ್ಧಾಂತದಂತೆ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಸಹೋದರ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ.

    ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುವುದಿಲ್ಲ. ಅಂತ್ಯಸಂಸ್ಕಾರದಲ್ಲಿ ಯಾವುದೇ ವಿಧಿವಿಧಾನವನ್ನು ಅನುಸರಿಸುವುದಿಲ್ಲ. ಪಾರ್ಥಿವ ಶರೀರದ ಮೇಲೆ ಹೂಗಳನ್ನು ಇರಿಸಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಪ್ರತಿಕ್ರಿಯಿಸಿದ್ದಾರೆ.

    ಜೀವನದುದ್ದಕ್ಕೂ ಧಾರ್ಮಿಕ ಆಚರಣೆ ಮೇಲೆ ಗೌರಿ ನಂಬಿಕೆ ಇಟ್ಟಿರಲಿಲ್ಲ. ಹಾಗಾಗಿ ಕೊನೆ ಕ್ಷಣದಲ್ಲಿ ಅವರ ನಂಬಿದ ತತ್ವಗಳಿಗೆ ಧಕ್ಕೆ ತರುವುದಿಲ್ಲ ಎಂದು ಹೇಳಿದರು.

    ಮಂಗಳವಾರ ರಾತ್ರಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಅಂತ್ಯ ಸಂಸ್ಕಾರ ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ ಎನ್ನುವ ಸುದ್ದಿ ಬೆಳಗ್ಗೆ ಮಾಧ್ಯಮಗಳಿಗೆ ಸಿಕ್ಕಿತ್ತು.

    ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ಬುಧವಾರ ಸಂಜೆ 4:30ಕ್ಕೆ ಗೌರಿ ಲಂಕೇಶ್ ಅಂತ್ಯ ಸಂಸ್ಕಾರ ನಡೆಯಲಿದ್ದು, ಆಜಾದ್ ನಗರ ಪಾಲಿಕೆ ಸದಸ್ಯೆ ಸುಜಾತ ಡಿಸಿ ರಮೇಶ್ ಮಾರ್ಗದರ್ಶನ ದಂತೆ ಗುಂಡಿ ತೆಗೆಯುವ ಕಾರ್ಯ ನಡೆದಿದೆ. ಆದರೆ ಕೊನೆ ಕ್ಷಣದಲ್ಲಿ ಅಂತ್ಯಸಂಸ್ಕಾರದ ವಿಧಿವಿಧಾನ ಬದಲಾವಣೆಯಾಗಿದೆ.

  • ಲಿಂಗಾಯತ ಸಂಪ್ರದಾಯದ ಪ್ರಕಾರ ಗೌರಿ ಲಂಕೇಶ್ ಅಂತ್ಯಕ್ರಿಯೆ

    ಲಿಂಗಾಯತ ಸಂಪ್ರದಾಯದ ಪ್ರಕಾರ ಗೌರಿ ಲಂಕೇಶ್ ಅಂತ್ಯಕ್ರಿಯೆ

    ಬೆಂಗಳೂರು: ಮಂಗಳವಾರ ರಾತ್ರಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಅಂತ್ಯ ಸಂಸ್ಕಾರ ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ.

    ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ಬುಧವಾರ ಸಂಜೆ 4:30ಕ್ಕೆ ಗೌರಿ ಲಂಕೇಶ್ ಅಂತ್ಯ ಸಂಸ್ಕಾರ ನಡೆಯಲಿದ್ದು, ಇದಕ್ಕಾಗಿ ಕಾರ್ಮಿಕರು ಗುಂಡಿ ತೋಡುತ್ತಿದ್ದಾರೆ.

    ಆಜಾದ್ ನಗರ ಪಾಲಿಕೆ ಸದಸ್ಯೆ ಸುಜಾತ ಡಿಸಿ ರಮೇಶ್ ಮಾರ್ಗದರ್ಶನ ದಂತೆ ಗುಂಡಿ ತೆಗೆಯುವ ಕಾರ್ಯ ನಡೆಯುತ್ತಿದ್ದು, ಹೂಳುವ ಸಂಪ್ರದಾಯದಂತೆ ಸಂಜೆ ಅಂತ್ಯ ಸಂಸ್ಕಾರ ನಡೆಯಲಿದೆ.

    ಗೌರಿ ಲಂಕೇಶ್ ಮೃತದೇಹದ ಮರಣೋತ್ತರ ಪರೀಕ್ಷೆ ಮಧ್ಯಾಹ್ಯ ಮುಕ್ತಾಯಗೊಂಡಿದೆ. ರವೀಂದ್ರ ಕಲಾಕ್ಷೇತ್ರದ ಸಂಸಬಯಲು ರಂಗ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.