Tag: Lip Lock

  • ‘ಲಿಪ್ ಲಾಕ್’ ಚಿತ್ರಕ್ಕೆ ಮುಹೂರ್ತ: ಯಂಗ್ ಮ್ಯಾನ್ ನಿರ್ದೇಶಕರ ಚಿತ್ರ

    ‘ಲಿಪ್ ಲಾಕ್’ ಚಿತ್ರಕ್ಕೆ ಮುಹೂರ್ತ: ಯಂಗ್ ಮ್ಯಾನ್ ನಿರ್ದೇಶಕರ ಚಿತ್ರ

    ಒಂದೇ ಟೇಕ್ ನಲ್ಲಿ ಚಿತ್ರೀಕರಣವಾಗಿದ್ದ “ಯಂಗ್ ಮ್ಯಾನ್” ಚಿತ್ರದ ನಿರ್ದೇಶಕ ಮುತ್ತುರಾಜ್ ನಿರ್ದೇಶನದ ಮುಂದಿನ ಚಿತ್ರ “ಲಿಪ್ ಲಾಕ್”. ಇತ್ತೀಚೆಗೆ ಈ ನೂತನ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರ ಸಹೋದರಿ ಸ್ಪೂರ್ತಿ ಕೃಷ್ಣಮೂರ್ತಿ ಆರಂಭ ಫಲಕ ತೋರಿದರು. ನಿರ್ದೇಶಕರ ಪುತ್ರ ಲಿಖಿತ್ ಗೌಡ ಕ್ಯಾಮೆರಾ ಚಾಲನೆ ಮಾಡಿದರು. ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

    ಎಲ್ಲರೂ ಅಂದುಕೊಂಡಿರುವ “ಲಿಪ್ ಲಾಕ್” ಬೇರೆ. ಆದರೆ “ಲಿಪ್ ಲಾಕ್” ನಿಜವಾದ ಅರ್ಥ ಬೇರೆ ಎಂದು ತಿಳಿಸುವ ನಿರ್ದೇಶಕ ಮುತ್ತುರಾಜ್, ಇದೊಂದು ಪರಿಶುದ್ಧ ಪ್ರೇಮಕಥೆ. ಯಾವುದೇ ಮುಜುಗರವಿಲ್ಲದೆ ಕುಟುಂಬ ಸಮೇತ ಬಂದು ಎಲ್ಲರೂ ನೋಡಬಹುದಾದ ಕೌಟುಂಬಿಕ ಕಥೆಯೂ ಹೌದು. ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯುತ್ತದೆ‌. ಕರಣ್ ಆರ್ಯನ್, ತ್ರಿವಿಕ್ರಮ್ ಹಾಗೂ ಚಿತ್ರದ ನಿರ್ಮಾಪಕರೂ ಆಗಿರುವ ಹೇಮಂತ್ ಕುಮಾರ್ ಈ ಚಿತ್ರದ ನಾಯಕರಾಗಿದ್ದು, ನಾಯಕಿಯರಾಗಿ ದೀಪ, ಜಗದೀಶ್, ಸೃಷ್ಟಿ , ನಿಹಾರಿಕಾ ನಟಿಸುತ್ತಿದ್ದಾರೆ. ಜಗಪ್ಪ, ಆನಂದ್, ಕರಿಬಸವ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಲೋಕಿ ತವಸ್ಯ ಸಂಗೀತ ನಿರ್ದೇಶನ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಹಾಗೂ ಸತೀಶ್ ಚಂದ್ರಯ್ಯ ಅವರ ಸಂಕಲನ ಈ ಚಿತ್ರಕ್ಕಿದೆ‌ ಎಂದರು.

    ನಿರ್ಮಾಪಕನಾಗಿ ಇದು ಮೊದಲ ಚಿತ್ರ . ಹೇಮಂತ್ ಸಿನಿಮಾಸ್ ಹಾಗೂ ಪರಿ ಮೂವೀ ಮೇಕರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ನಿರ್ಮಾಣದ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದೇನೆ ಎಂದರು ಹೇಮಂತ್ ಕೃಷ್ಣಮೂರ್ತಿ.

     ನಿರ್ದೇಶಕರು ಮಾಡಿಕೊಂಡಿರುವ ಕಥೆ ಚೆನ್ನಾಗಿದೆ. ನನ್ನದು ಈ ಚಿತ್ರದಲ್ಲಿ ಕೆಳ ಮಧ್ಯಮ ವರ್ಗದ ಹುಡುಗನ ಪಾತ್ರ‌ ಎಂದರು ನಟ ಕರಣ್ ಆರ್ಯನ್.  ನನ್ನ ಪಾತ್ರ ಕೂಡ ವಿಭಿನ್ನವಾಗಿದೆ. “ಬ್ಯಾಡ್ ಮ್ಯಾನರ್ಸ್” ಚಿತ್ರದ ನಂತರ ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ ಎಂದರು”ಪದ್ಮಾವತಿ ” ಧಾರಾವಾಹಿ ಖ್ಯಾತಿಯ ತ್ರಿವಿಕ್ರಮ್.  ನಟಿಯರಾದ ದೀಪ ಜಗದೀಶ್ , ಸೃಷ್ಟಿ ಹಗೂ ನಿಹಾರಿಕಾ ಕೂಡ ಚಿತ್ರದ ಕುರಿತು ಮಾತನಾಡಿದರು

  • ಕಾರಿನಲ್ಲಿ ಲಿಪ್ ಲಾಕ್ ಮಾಡುವಾಗ ಕಷ್ಟವಾಯ್ತು : ನಟಿ ಅನುಪಮಾ

    ಕಾರಿನಲ್ಲಿ ಲಿಪ್ ಲಾಕ್ ಮಾಡುವಾಗ ಕಷ್ಟವಾಯ್ತು : ನಟಿ ಅನುಪಮಾ

    ಟಿ ಅನುಪಮಾ ಪರಮೇಶ್ವರನ್ ಅವರು ಟಿಲ್ಲು ಸ್ಕ್ವೇರ್ (Tillu Square) ಸಿನಿಮಾದಲ್ಲಿ ಲಿಪ್ ಲಾಕ್ ಮಾಡಿರುವುದು ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಈ ರೀತಿಯ ದೃಶ್ಯದಲ್ಲಿ ಅನುಪಮಾ ಮೊದಲ ಬಾರಿಗೆ ಕಂಡಿದ್ದರಿಂದ ಸ್ವತಃ ಅಭಿಮಾನಿಗಳೇ ನಾನಾ ರೀತಿಯಲ್ಲಿ ಪ್ರಶ್ನೆ ಮಾಡಿದ್ದರು. ಈ ಕುರಿತಂತೆ ಅನುಪಮಾ ಮಾತನಾಡಿದ್ದು, ಕಾರಿನಲ್ಲಿ ತಮಗೆ ಲಿಪ್ ಲಾಕ್ ಮಾಡಲು ಕಷ್ಟವಾಯಿತು ಎಂದು ಹೇಳಿದ್ದಾರೆ.

    ನೂರಾರು ಜನರ ಎದುರು, ಅದು ಕಾರಿನಲ್ಲಿ (Car) ಅಂತಹ ದೃಶ್ಯ ಮಾಡುವಾಗ ಬೇರೆಯದ್ದೇ ಮನಸ್ಥಿತಿ ಬೇಕಾಗುತ್ತದೆ. ಹಾಗಾಗಿ ಆ ದೃಶ್ಯದಲ್ಲಿ ನಟಿಸುವಾಗ ನನಗೆ ತೀರಾ ಕಷ್ಟವಾಯಿತು. ಆದರೆ, ಅದು ಬೇರೆಯದ್ದೇ ರೀತಿಯ ಪಾತ್ರವಾಗಿದ್ದರಿಂದ ಮಾಡಿದೆ ಎಂದು ಅನುಪಮಾ ಮಾತನಾಡಿದ್ದಾರೆ.

    ಕನ್ನಡವೂ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ನಟಿ ಅನುಪಮಾ ಪರಮೇಶ್ವರನ್  (Anupama Parameswaran) ಟಿಲ್ಲು ಸ್ಕ್ವೇರ್ ಸಿನಿಮಾದಲ್ಲಿ ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಆ ಪಾತ್ರವು ಸಖತ್ ಬೋಲ್ಡ್‍ ಮತ್ತು ಹಾಟ್ ಆಗಿದೆ. ಡೀಪ್ ಲಿಪ್ ಲಾಕ್ ಕೂಡ ಮಾಡಿಕೊಂಡಿದ್ದಾರೆ. ಹಾಗಾಗಿ ಇಂತಹ ಪಾತ್ರಗಳು ನಿಮಗೆ ಬೇಕಾ? ಎಂದು ಹಲವಾರು ಜನ ಪ್ರಶ್ನೆ ಮಾಡಿದ್ದಾರೆ.

    ನಿನ್ನೆ ಟಿಲ್ಲು ಸ್ಕ್ವೇರ್ ಸಿನಿಮಾದ ಮತ್ತೊಂದು ಹಾಡು ಬಿಡುಗಡೆ ಆಗಿದೆ. ಈ ಹಾಡು ಬಿಡುಗಡೆ ಸಮಾರಂಭದಲ್ಲಿ ತಮ್ಮ ಮೇಲಿನ ಆರೋಪಕ್ಕೆ ಅನುಪಮಾ ಖಡಕ್ಕಾಗಿಯೇ ಉತ್ತರ ಕೊಟ್ಟಿದ್ದಾರೆ. ದಿನವೂ ಯಾರೂ ಪಲಾವು, ಬಿರಿಯಾನಿ ತಿನ್ನಲ್ಲ. ಒಂದೊಂದು ಸಲ ಬೇರೆ ಟೇಸ್ಟ್ ಮಾಡಬೇಕು ಅನಿಸತ್ತೆ. ನನಗೆ ಒಂದೇ ಪಾತ್ರ ಮಾಡೋಕೆ ಆಗಲಿಲ್ಲ. ಹಾಗಾಗಿ ಭಿನ್ನ ಪಾತ್ರ ಆಯ್ಕೆ ಮಾಡಿಕೊಂಡಿದ್ದೇನೆ ಅಂದಿದ್ದಾರೆ. ಅಲ್ಲದೇ, ಚಿತ್ರದಲ್ಲಿ ಅಡಲ್ಟ್ ಕಂಟೆಂಟ್ ಏನೂ ಇಲ್ಲ ಎಂಬ ಮಾಹಿತಿಯನ್ನೂ ನೀಡಿದ್ದಾರೆ.

    ಈ ಸಿನಿಮಾದಲ್ಲಿ ಸಿದ್ದು ಜೊನ್ನಲಗಡ್ಡ ಜೊತೆಯಾಗಿ ನಟಿಸಿರುವ ಅನುಪಮಾ ಅಭಿಮಾನಿಗಳಿಗೆ ಮತ್ತೇರಿಸುವಂತ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ. ಬೋಲ್ಡ್ ಪಾತ್ರಗಳಲ್ಲಿ ಮಾಡಲ್ಲ ಅಂತಿದ್ದ ಈ ನಟಿ ಟಿಲ್ಲು ಸ್ಕ್ವೇರ್ (Tillu Square) ಸಿನಿಮಾದಲ್ಲಿ ಬೋಲ್ಡ್ ಆಗಿ ನಟಿಸಿದ್ದಾರೆ. ಜೊತೆಗೆ ಲಿಪ್ ಲಾಕ್ (Lip Lock) ಕೂಡ ಮಾಡಿದ್ದಾರೆ. ಈ ಹಿಂದೆ ರೌಡಿ ಬಾಯ್ಸ್ ಸಿನಿಮಾದಲ್ಲಿ ಈ ರೀತಿಯ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರೂ, ಅಭಿಮಾನಿಗಳಿಗೆ ಅಷ್ಟೇನೂ ಅವು ಮತ್ತೇರಿಸಿರಲಿಲ್ಲ.

  • ‘ಲಿಪ್ ಲಾಕ್’ ದೃಶ್ಯದ ಬಗ್ಗೆ ಪಲಾವು, ಬಿರಿಯಾನಿ ಕಥೆ ಹೇಳಿದ ನಟಿ ಅನುಪಮಾ

    ‘ಲಿಪ್ ಲಾಕ್’ ದೃಶ್ಯದ ಬಗ್ಗೆ ಪಲಾವು, ಬಿರಿಯಾನಿ ಕಥೆ ಹೇಳಿದ ನಟಿ ಅನುಪಮಾ

    ನ್ನಡವೂ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ನಟಿ ಅನುಪಮಾ ಪರಮೇಶ್ವರನ್  (Anupama Parameswaran) ಟಿಲ್ಲು ಸ್ಕ್ವೇರ್ ಸಿನಿಮಾದಲ್ಲಿ ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಆ ಪಾತ್ರವು ಸಖತ್ ಬೋಲ್ಡ್‍ ಮತ್ತು ಹಾಟ್ ಆಗಿದೆ. ಡೀಪ್ ಲಿಪ್ ಲಾಕ್ ಕೂಡ ಮಾಡಿಕೊಂಡಿದ್ದಾರೆ. ಹಾಗಾಗಿ ಇಂತಹ ಪಾತ್ರಗಳು ನಿಮಗೆ ಬೇಕಾ? ಎಂದು ಹಲವಾರು ಜನ ಪ್ರಶ್ನೆ ಮಾಡಿದ್ದಾರೆ.

    ನಿನ್ನೆ ಟಿಲ್ಲು ಸ್ಕ್ವೇರ್ ಸಿನಿಮಾದ ಮತ್ತೊಂದು ಹಾಡು ಬಿಡುಗಡೆ ಆಗಿದೆ. ಈ ಹಾಡು ಬಿಡುಗಡೆ ಸಮಾರಂಭದಲ್ಲಿ ತಮ್ಮ ಮೇಲಿನ ಆರೋಪಕ್ಕೆ ಅನುಪಮಾ ಖಡಕ್ಕಾಗಿಯೇ ಉತ್ತರ ಕೊಟ್ಟಿದ್ದಾರೆ. ದಿನವೂ ಯಾರೂ ಪಲಾವು, ಬಿರಿಯಾನಿ ತಿನ್ನಲ್ಲ. ಒಂದೊಂದು ಸಲ ಬೇರೆ ಟೇಸ್ಟ್ ಮಾಡಬೇಕು ಅನಿಸತ್ತೆ. ನನಗೆ ಒಂದೇ ಪಾತ್ರ ಮಾಡೋಕೆ ಆಗಲಿಲ್ಲ. ಹಾಗಾಗಿ ಭಿನ್ನ ಪಾತ್ರ ಆಯ್ಕೆ ಮಾಡಿಕೊಂಡಿದ್ದೇನೆ ಅಂದಿದ್ದಾರೆ. ಅಲ್ಲದೇ, ಚಿತ್ರದಲ್ಲಿ ಅಡಲ್ಟ್ ಕಂಟೆಂಟ್ ಏನೂ ಇಲ್ಲ ಎಂಬ ಮಾಹಿತಿಯನ್ನೂ ನೀಡಿದ್ದಾರೆ.

    ಈ ಸಿನಿಮಾದಲ್ಲಿ ಸಿದ್ದು ಜೊನ್ನಲಗಡ್ಡ ಜೊತೆಯಾಗಿ ನಟಿಸಿರುವ ಅನುಪಮಾ ಅಭಿಮಾನಿಗಳಿಗೆ ಮತ್ತೇರಿಸುವಂತ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ. ಬೋಲ್ಡ್ ಪಾತ್ರಗಳಲ್ಲಿ ಮಾಡಲ್ಲ ಅಂತಿದ್ದ ಈ ನಟಿ ಟಿಲ್ಲು ಸ್ಕ್ವೇರ್ (Tillu Square) ಸಿನಿಮಾದಲ್ಲಿ ಬೋಲ್ಡ್ ಆಗಿ ನಟಿಸಿದ್ದಾರೆ. ಜೊತೆಗೆ ಲಿಪ್ ಲಾಕ್ (Lip Lock) ಕೂಡ ಮಾಡಿದ್ದಾರೆ. ಈ ಹಿಂದೆ ರೌಡಿ ಬಾಯ್ಸ್ ಸಿನಿಮಾದಲ್ಲಿ ಈ ರೀತಿಯ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರೂ, ಅಭಿಮಾನಿಗಳಿಗೆ ಅಷ್ಟೇನೂ ಅವು ಮತ್ತೇರಿಸಿರಲಿಲ್ಲ.

    ಟಿಲ್ಲು ಸ್ಕ್ವೇರ್ ಸ್ವೀಕೆಲ್ ಸಿನಿಮಾ. ಈ ಹಿಂದೆ 2022ರಲ್ಲಿ ಬಿಡುಗಡೆಯಾಗಿದ್ದ ಡಿಜೆ ಟಿಲ್ಲು ಸಿನಿಮಾದ ಮುಂದುವರೆದ ಭಾಗ ಇದಾಗಿದೆ.  ಟಿಲ್ಲು ಸ್ಕ್ವೇರ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಅನುಪಮಾ ಅಚ್ಚರಿ ಎನ್ನುವಂತೆ ಬೋಲ್ಡ್ ಸ್ಟೆಪ್ ಇಟ್ಟಿದ್ದಾರೆ.  ಈ ಸಿನಿಮಾವನ್ನು ಮಲ್ಲಿಕ್ ರಾಮ್ ನಿರ್ದೇಶನ ಮಾಡಿದ್ದು, ಸೂರ್ಯದೇವರ ನಾಗ್ ವಂಶಿ ನಿರ್ಮಾಣ ಮಾಡಿದ್ದಾರೆ.

    ಅನುಪಮಾ ಈ ಹಿಂದೆ ಈಗಲ್ ಸಿನಿಮಾದಲ್ಲಿ ನಟಿಸಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಬೆನ್ನಲ್ಲೆ ಟಿಲ್ಲು ಸ್ಕ್ವೇರ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಮಾರ್ಚ್ 29ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ.

  • ನಟಿ ಅನುಪಮಾ ‘ಲಿಪ್ ಲಾಕ್’ ಬಲು ದುಬಾರಿ

    ನಟಿ ಅನುಪಮಾ ‘ಲಿಪ್ ಲಾಕ್’ ಬಲು ದುಬಾರಿ

    ಕ್ಷಿಣದ ಖ್ಯಾತ ನಟಿ ಅನುಪಮಾ ಪರಮೇಶ್ವರನ್ ಟಿಲ್ಲು ಸ್ಕ್ವೇರ್ ಸಿನಿಮಾದಲ್ಲಿ ಸಖತ್ ಬೋಲ್ಡ್ ಆಗಿ ನಟಿಸಿದ್ದಾರೆ. ಕಾರಿನಲ್ಲಿ ಕೂತುಕೊಂಡು ನಾಯಕ ನಟನ ಜೊತೆ ಲಿಪ್ ಲಾಕ್ ಮಾಡಿಕೊಂಡಿದ್ದಾರೆ. ಇದೊಂದು ದುಬಾರಿ ಲಿಪ್ ಲಾಕ್ ಎಂದು ಬಣ್ಣಿಸಲಾಗುತ್ತಿದೆ. ಕಾರಣ ಅನುಪಮಾ ಈ ಸಿನಿಮಾಗಾಗಿ ಡಬಲ್ ಸಂಭಾವನೆಯನ್ನು ಪಡೆದಿದ್ದಾರಂತೆ.

    ಸಾಮಾನ್ಯವಾಗಿ ಅನುಪಮಾ ಸಿನಿಮಾವೊಂದಕ್ಕೆ ಒಂದು ಕೋಟಿ ಅಥವಾ ಒಂದೂವರೆ ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ. ಈ ಸಿನಿಮಾಗಾಗಿ ಅವರು ಎರಡು ಕೋಟಿಗೂ ಹೆಚ್ಚು ಸಂಭಾವನೆ ಪಡೆದಿದ್ದಾರಂತೆ. ಕಾರಣ ಪಾತ್ರ ಸಖತ್ ಬೋಲ್ಡ್ ಆಗಿ ಇರುವುದೇ ಆಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

    ಕನ್ನಡವೂ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ನಟಿ ಅನುಪಮಾ ಪರಮೇಶ್ವರನ್  (Anupama Parameswaran)ಇದೀಗ ಟಿಲ್ಲು ಸ್ಕ್ವೇರ್ ಸಿನಿಮಾದಲ್ಲಿ ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಸಿದ್ದು ಜೊನ್ನಲಗಡ್ಡ ಜೊತೆಯಾಗಿ ನಟಿಸಿರುವ ಅನುಪಮಾ ಅಭಿಮಾನಿಗಳಿಗೆ ಮತ್ತೇರಿಸುವಂತ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ.

    ಬೋಲ್ಡ್ ಪಾತ್ರಗಳಲ್ಲಿ ಮಾಡಲ್ಲ ಅಂತಿದ್ದ ಈ ನಟಿ ಟಿಲ್ಲು ಸ್ಕ್ವೇರ್ (Tillu Square) ಸಿನಿಮಾದಲ್ಲಿ ಬೋಲ್ಡ್ ಆಗಿ ನಟಿಸಿದ್ದಾರೆ. ಜೊತೆಗೆ ಲಿಪ್ ಲಾಕ್ (Lip Lock) ಕೂಡ ಮಾಡಿದ್ದಾರೆ. ಈ ಹಿಂದೆ ರೌಡಿ ಬಾಯ್ಸ್ ಸಿನಿಮಾದಲ್ಲಿ ಈ ರೀತಿಯ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರೂ, ಅಭಿಮಾನಿಗಳಿಗೆ ಅಷ್ಟೇನೂ ಅವು ಮತ್ತೇರಿಸಿರಲಿಲ್ಲ.

    ಟಿಲ್ಲು ಸ್ಕ್ವೇರ್ ಸ್ವೀಕೆಲ್ ಸಿನಿಮಾ. ಈ ಹಿಂದೆ 2022ರಲ್ಲಿ ಬಿಡುಗಡೆಯಾಗಿದ್ದ ಡಿಜೆ ಟಿಲ್ಲು ಸಿನಿಮಾದ ಮುಂದುವರೆದ ಭಾಗ ಇದಾಗಿದೆ.  ಟಿಲ್ಲು ಸ್ಕ್ವೇರ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಅನುಪಮಾ ಅಚ್ಚರಿ ಎನ್ನುವಂತೆ ಬೋಲ್ಡ್ ಸ್ಟೆಪ್ ಇಟ್ಟಿದ್ದಾರೆ.  ಈ ಸಿನಿಮಾವನ್ನು ಮಲ್ಲಿಕ್ ರಾಮ್ ನಿರ್ದೇಶನ ಮಾಡಿದ್ದು, ಸೂರ್ಯದೇವರ ನಾಗ್ ವಂಶಿ ನಿರ್ಮಾಣ ಮಾಡಿದ್ದಾರೆ.

    ಅನುಪಮಾ ಈ ಹಿಂದೆ ಈಗಲ್ ಸಿನಿಮಾದಲ್ಲಿ ನಟಿಸಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಬೆನ್ನಲ್ಲೆ ಟಿಲ್ಲು ಸ್ಕ್ವೇರ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಮಾರ್ಚ್ 29ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ.

  • ಮುತ್ತಿಟ್ಟು ಅಭಿಮಾನಿಗಳಿಗೆ ಮತ್ತೇರಿಸಿದ ನಟಿ ಅನುಪಮಾ

    ಮುತ್ತಿಟ್ಟು ಅಭಿಮಾನಿಗಳಿಗೆ ಮತ್ತೇರಿಸಿದ ನಟಿ ಅನುಪಮಾ

    ನ್ನಡವೂ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ನಟಿ ಅನುಪಮಾ ಪರಮೇಶ್ವರನ್  (Anupama Parameswaran)ಇದೀಗ ಟಿಲ್ಲು ಸ್ಕ್ವೇರ್ ಸಿನಿಮಾದಲ್ಲಿ ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಸಿದ್ದು ಜೊನ್ನಲಗಡ್ಡ ಜೊತೆಯಾಗಿ ನಟಿಸಿರುವ ಅನುಪಮಾ ಅಭಿಮಾನಿಗಳಿಗೆ ಮತ್ತೇರಿಸುವಂತ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ.

    ಬೋಲ್ಡ್ ಪಾತ್ರಗಳಲ್ಲಿ ಮಾಡಲ್ಲ ಅಂತಿದ್ದ ಈ ನಟಿ ಟಿಲ್ಲು ಸ್ಕ್ವೇರ್ (Tillu Square) ಸಿನಿಮಾದಲ್ಲಿ ಬೋಲ್ಡ್ ಆಗಿ ನಟಿಸಿದ್ದಾರೆ. ಜೊತೆಗೆ ಲಿಪ್ ಲಾಕ್ (Lip Lock) ಕೂಡ ಮಾಡಿದ್ದಾರೆ. ಈ ಹಿಂದೆ ರೌಡಿ ಬಾಯ್ಸ್ ಸಿನಿಮಾದಲ್ಲಿ ಈ ರೀತಿಯ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರೂ, ಅಭಿಮಾನಿಗಳಿಗೆ ಅಷ್ಟೇನೂ ಅವು ಮತ್ತೇರಿಸಿರಲಿಲ್ಲ.

    ಟಿಲ್ಲು ಸ್ಕ್ವೇರ್ ಸ್ವೀಕೆಲ್ ಸಿನಿಮಾ. ಈ ಹಿಂದೆ 2022ರಲ್ಲಿ ಬಿಡುಗಡೆಯಾಗಿದ್ದ ಡಿಜೆ ಟಿಲ್ಲು ಸಿನಿಮಾದ ಮುಂದುವರೆದ ಭಾಗ ಇದಾಗಿದೆ.  ಟಿಲ್ಲು ಸ್ಕ್ವೇರ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಅನುಪಮಾ ಅಚ್ಚರಿ ಎನ್ನುವಂತೆ ಬೋಲ್ಡ್ ಸ್ಟೆಪ್ ಇಟ್ಟಿದ್ದಾರೆ.  ಈ ಸಿನಿಮಾವನ್ನು ಮಲ್ಲಿಕ್ ರಾಮ್ ನಿರ್ದೇಶನ ಮಾಡಿದ್ದು, ಸೂರ್ಯದೇವರ ನಾಗ್ ವಂಶಿ ನಿರ್ಮಾಣ ಮಾಡಿದ್ದಾರೆ.

    ಅನುಪಮಾ ಈ ಹಿಂದೆ ಈಗಲ್ ಸಿನಿಮಾದಲ್ಲಿ ನಟಿಸಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಬೆನ್ನಲ್ಲೆ ಟಿಲ್ಲು ಸ್ಕ್ವೇರ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಮಾರ್ಚ್ 29ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ.

  • ‘ಲಿಪ್ ಲಾಕ್’ ಮಾಡಿ ಗಂಡನಿಗೆ ವಿಶ್ ಮಾಡಿದ ನಟಿ ಕಿಯಾರಾ

    ‘ಲಿಪ್ ಲಾಕ್’ ಮಾಡಿ ಗಂಡನಿಗೆ ವಿಶ್ ಮಾಡಿದ ನಟಿ ಕಿಯಾರಾ

    ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ, ಪತಿಯ ಹುಟ್ಟು ಹಬ್ಬಕ್ಕೆ ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. ಪತಿಯೊಂದಿಗೆ ಲಿಪ್ ಲಾಕ್ ಮಾಡಿಕೊಂಡು ಶುಭಾಶಯ ತಿಳಿಸಿದ್ದಾರೆ. ಈ ಹಿಂದೆ ತಮ್ಮ ಹುಟ್ಟುಹಬ್ಬವನ್ನು ಪತಿ ಸಿದ್ಧಾರ್ಥ್ (Siddarth Malhotra) ಜೊತೆ ಥೈಲ್ಯಾಂಡ್‌ನಲ್ಲಿ ಆಚರಿಸಿಕೊಂಡಿದ್ದವರು, ಪತಿಯ ಹುಟ್ಟು ಹಬ್ಬವನ್ನು ಸಿಂಪಲ್ ಆಗಿ ಆಚರಿಸಿದ್ದಾರೆ. ಲಿಪ್ ಲಾಕ್ ಕಾರಣದಿಂದಾಗಿ ಸುದ್ದಿ ಆಗಿದ್ದಾರೆ.

    Kiara Advani

    ಈ ನಡುವೆ ವೈಯಕ್ತಿಕ ಕಾರಣದಿಂದಾಗಿಯೂ ಕಿಯಾರಾ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ತಮ್ಮ ವೈಯಕ್ತಿಕ ಜೀವನದ ಬಗ್ಗೆ ನಾನಾ ರೀತಿಯ ಉತ್ತರಗಳನ್ನೂ ಅವರು ಕೊಡ್ತಾರೆ. ಮದುವೆಯಾದ್ಮೇಲೆ ಸಿದ್ಧಾರ್ಥ್‌ಗಾಗಿ ತಯಾರಿಸಿದ ಮೊದಲ ಅಡುಗೆ ಯಾವುದು? ಎಂಬ ಪ್ರಶ್ನೆಗೆ ಅಚ್ಚರಿಯ ಹೇಳಿಕೆಯನ್ನ ನಟಿ ನೀಡಿದ್ದಾರೆ.

    ಮದುವೆ ಆದ ಬಳಿಕ ನೀವು ಮಾಡಿದ ಮೊದಲ ತಿನಿಸು ಯಾವುದು ಎಂದು ಕಿಯಾರಾಗೆ ಕೇಳಲಾಯಿತು. ಇದಕ್ಕೆ ಕಿಯಾರಾ ಅವರು ಉತ್ತರಿಸಿದ್ದಾರೆ. ಇಲ್ಲಿಯವರೆಗೆ ನಾನು ಏನನ್ನೂ ಮಾಡಿಲ್ಲ. ಬಹುಶಃ ನೀರನ್ನು ಬಿಸಿ ಮಾಡಿರಬಹುದು ಅಷ್ಟೇ. ನನ್ನ ಪತಿಗೆ ಅಡುಗೆ ಮಾಡುವುದು ಎಂದರೆ ಇಷ್ಟ. ಅವರು ಯಾವಾಗಲೂ ಏನಾದರೂ ಮಾಡುತ್ತಲೇ ಇರುತ್ತಾರೆ. ನಾನು ಕೂಡ ಅದನ್ನು ತಿಂದು ಎಂಜಾಯ್ ಮಾಡುತ್ತೇನೆ ಎಂದಿದ್ದಾರೆ.

    ಸಿದ್ದಾರ್ಥ್ ಅವರು ವಿಶೇಷವಾಗಿ ತಯಾರಿಸುವ ಪದಾರ್ಥ ಯಾವುದು ಎಂದು ಕೇಳಲಾಯಿತು. ಇದಕ್ಕೆ ಕಿಯಾರಾ ಬ್ರೆಡ್ ಎನ್ನುವ ಉತ್ತರ ನೀಡಿದ್ದಾರೆ. ಸಿದ್ದಾರ್ಥ್ ಅವರು ಬ್ರೆಡ್‌ನ ಚೆನ್ನಾಗಿ ಮಾಡುತ್ತಾರೆ. ಅದನ್ನು ಮಾಡೋದು ನಿಜಕ್ಕೂ ಕಠಿಣ ಸವಾಲು. ಆದರೆ, ಸಿದ್ದಾರ್ಥ್ ಬ್ರೆಡ್‌ನ ಚೆನ್ನಾಗಿ ಸಿದ್ಧಪಡಿಸುತ್ತಾರೆ ಎಂದು ಕಿಯಾರಾ ಪತಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

    ಸಿದ್ಧಾರ್ಥ್- ಕಿಯಾರಾ ಅಡ್ವಾಣಿ ಈ ವರ್ಷ ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟರು. ಹಲವು ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಿದ್ದರು. ಇಬ್ಬರು ಜೊತೆಯಾಗಿ ಖುಷಿಯಾಗಿ ಜೀವನ ಸಾಗಿಸುತ್ತಿದ್ದಾರೆ. ಮದುವೆ ಬಳಿಕ ಕಿಯಾರಾ ಮತ್ತಷ್ಟು ಬೋಲ್ಡ್‌ ಆಗಿ ಕಾಣಿಸಿಕೊಳ್ತಿದ್ದಾರೆ.

  • ಯುವ ಉದ್ಯಮಿ ಜೊತೆ ಅಮಲಾ ಲಿಪ್ ಲಾಕ್: ವಿಡಿಯೋ ವೈರಲ್

    ಯುವ ಉದ್ಯಮಿ ಜೊತೆ ಅಮಲಾ ಲಿಪ್ ಲಾಕ್: ವಿಡಿಯೋ ವೈರಲ್

    ಟಿ ಅಮಲಾ ಜೊತೆ ಲಿಪ್ ಲಾಕ್ ಮಾಡಿಕೊಂಡಿದ್ದ ವಿಡಿಯೋವನ್ನು ಜಗತ್ ದೇಸಾಯಿ ಅನ್ನುವವರು ಇನ್ಸ್ಟಾದಲ್ಲಿ ಶೇರ್ ಮಾಡಿದ್ದರು. ಈ ಜಗತ್ ದೇಸಾಯಿ ಯಾರು ಎನ್ನುವ ಹುಡುಕಾಟ ಹಲವು ದಿನಗಳಿಂದ ನಡೆದಿತ್ತು. ಅದಕ್ಕೀಗ ಬ್ರೇಕ್ ಬಿದ್ದಿದೆ. ಜಗತ್ ದೇಸಾಯಿ ಯುವ ಉದ್ಯಮಿಯಾಗಿದ್ದು, ಅವರೊಂದಿಗೆ ಅಮಲಾ ಎರಡನೇ ಮದುವೆ ಆಗಲಿದ್ದಾರೆ ಎನ್ನುವುದು ಅಸಲಿ ಸಮಾಚಾರ.

    ವಿಭಿನ್ನವಾಗಿ ಪ್ರಪೋಸ್

    ಕನ್ನಡ ಸೂಪರ್ ಹಿಟ್ ಸಿನಿಮಾ ಹೆಬ್ಬುಲಿಯ ನಾಯಕಿ ಅಮಲಾ ಪೌಲ್ (Amala Paul) ಮತ್ತೊಂದು ಮದುವೆಗೆ (marriage) ಸಿದ್ಧರಾಗಿದ್ದಾರೆ. ಈ ಬಾರಿ ವಿಭಿನ್ನವಾಗಿ ಮದುವೆಯ ಪ್ರಪೋಸಲ್ ಅನ್ನು ಅವರು ಸ್ವೀಕರಿಸಿದ್ದಾರೆ. ಅಮಲಾ ಅವರ ಹುಟ್ಟು ಹಬ್ಬದ ದಿನದಂದೇ ಬಾಯ್ ಫ್ರೆಂಡ್ ವಿಶೇಷವಾದ ಸನ್ನಿವೇಶವೊಂದನ್ನು ಸೃಷ್ಟಿ ಮಾಡಿ ಅಮಲಾ ಕೈಗೆ ಉಂಗುರು ತೊಡಿಸಿದ್ದಾರೆ.

    ದಕ್ಷಿಣ ಭಾರತದ ಖ್ಯಾತಿ ನಟಿ ಆಗಿರುವ ಅಮಲಾ ಪೌಲ್, ಸಿನಿಮಾಗಳಿಗಿಂತ ಹೆಚ್ಚು ವಿವಾದಗಳಿಂದಲೇ ಸುದ್ದಿ ಆದವರು. ಆದರೂ, ಅವರ ಡಿಮಾಂಡ್ ಕಡಿಮೆ ಆಗಿರಲಿಲ್ಲ. ಒಂದಲ್ಲ ಒಂದು ಸಿನಿಮಾಗಳಲ್ಲಿ ನಟಿಸುತ್ತಲೇ ಬಂದರು. 2014ರಲ್ಲಿ ತಮಿಳು ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾದರು. ಆದರೆ, ಆ ಸಂಬಂಧ ತುಂಬಾ ದಿನ ಉಳಿಯಲಿಲ್ಲ. ಮದುವೆಯಾದ ಮೂರೇ ಮೂರು ವರ್ಷಕ್ಕೆ ಜೀವನ ಮುರಿದು ಬಿತ್ತು.

    ಆನಂತರ ಈ ನಟಿಯ ಹೆಸರು ಹಲವಾರು ನಟರ ಹೆಸರಿನೊಂದಿಗೆ ತಳುಕು ಹಾಕಿಕೊಂಡಿತ್ತು. ಅನೇಕ ನಿರ್ದೇಶಕರ ಹೆಸರು ಕೂಡ ಕೇಳಿ ಬಂದಿತ್ತು. ಆದರೆ, ಯಾವತ್ತೂ ಅಮಲಾ ಉತ್ತರಿಸಲಿಲ್ಲ. ಇದೀಗ ಬಾಯ್ ಫ್ರೆಂಡ್ ಜೊತೆಗಿನ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಬಾಯ್ ಫ್ರೆಂಡ್ ಮಾಡಿರೋ ಪ್ರಪೋಸ್‍ಗೆ ಒಪ್ಪಿಕೊಂಡಿದ್ದಾರೆ.

    ಜಗತ್ ದೇಸಾಯಿ (Jagat Desai) ಜೊತೆ ಅಮಲಾ ಡೇಟಿಂಗ್ ನಲ್ಲಿದ್ದರು. ಅವರೇ ಹೋಟೆಲ್ ವೊಂದರಲ್ಲಿ ಅಮಲಾ ಅವರ ಹುಟ್ಟು ಹಬ್ಬಕ್ಕೆ ಸಿದ್ಧತೆ ಮಾಡಿದ್ದಾರೆ. ನೃತ್ಯ ಮಾಡುತ್ತಲೇ ನಟಿಗೆ ಪ್ರಪೋಸ್ ಮಾಡಿದ್ದಾರೆ. ಅಚ್ಚರಿಯಿಂದಲೇ ಅಮಲಾ ಕೂಡ ಬಾಯ್ ಫ್ರೆಂಡ್ ತುಟಿಗೆ ಮುತ್ತಿಡುತ್ತಾ (Lip Lock) ಉಂಗುರು ತೊಡಿಸಿದ್ದಾರೆ.

    ಆ ರೋಮ್ಯಾಂಟಿಕ್ ವಿಡಿಯೋವನ್ನು ದೇಸಾಯಿ ತಮ್ಮ ಇನ್ಸ್ಟಾ ಪೇಜ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ. ಅನೇಕರು ಈ ಜೋಡಿಗೆ ಶುಭಾಶಯಗಳನ್ನೂ ತಿಳಿಸಿದ್ದಾರೆ. ಚೆನ್ನಾಗಿ ಬದುಕಿರಿ ಎಂದು ಹಾರೈಸಿದ್ದಾರೆ. ಆ ವಿಡಿಯೋ ಸದ್ಯ ಸಖತ್ ವೈರಲ್ ಕೂಡ ಆಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೊಂದು ಹಾಡಿನಲ್ಲೂ ರಶ್ಮಿಕಾ-ರಣಬೀರ್ ಲಿಪ್ ಲಾಕ್

    ಮತ್ತೊಂದು ಹಾಡಿನಲ್ಲೂ ರಶ್ಮಿಕಾ-ರಣಬೀರ್ ಲಿಪ್ ಲಾಕ್

    ಶ್ಮಿಕಾ ಮಂದಣ್ಣ (Rashmika Mandanna) ಮತ್ತು ರಣಬೀರ್ ಕಪೂರ್ ಕಾಂಬಿನೇಷನ್ ನ  ‘ಅನಿಮಲ್’ (Animal) ಸಿನಿಮಾದ ಮತ್ತೊಂದು ಹಾಡು ರಿಲೀಸ್ ಆಗಿದ್ದು, ಈ ಹಾಡಿನಲ್ಲೂ ರಣಬೀರ್ ಜೊತೆ ರಶ್ಮಿಕಾ ಲಿಪ್ ಲಾಕ್ (Lip Lock) ಮಾಡಿಕೊಂಡಿದ್ದಾರೆ. ಸತ್ರಂಗ.. ಹೆಸರಿನಲ್ಲಿ ಈ ಹಾಡು ಮೂಡಿ ಬಂದಿದ್ದು, ಈ ಹಾಡಿನಲ್ಲಿ ಜೋಡಿ ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಹುವಾ ಮೇ ಹಾಡಿನಲ್ಲೂ ಇಬ್ಬರೂ ಲಿಪ್ ಲಾಕ್ ಆಗಿದ್ದರು.

    ಹುವಾ ಮೇ ಹಾಡಿನಲ್ಲಿ ರಣಬೀರ್ ಕಪೂರ್ ಜೊತೆ ರಶ್ಮಿಕಾ ಮಂದಣ್ಣ ಲಿಪ್ ಲಾಕ್ ಮಾಡಿಕೊಂಡಿದ್ದರು. ವಿಮಾನದಲ್ಲಿ ಮಾತ್ರವಲ್ಲ, ಮನೆಯವರ ಎದುರೇ ರಣಬೀರ್ ಗೆ ಲಿಪ್ ಲಾಕ್ ಮಾಡುವ ದೃಶ್ಯಗಳು ವೈರಲ್ ಆಗಿದ್ದವು. ರಣಬೀರ್ ಜೊತೆ ರಶ್ಮಿಕಾ ಲಿಪ್ ಲಾಕ್ ಮಾಡಿಕೊಂಡರೆ, ವಿಜಯ್ ದೇವರಕೊಂಡ (Vijay Devarakonda) ಗತಿ ಏನು ಎಂದು ನೆಟ್ಟಿಗರು ಟ್ರೋಲ್ ಮಾಡಿದ್ದರು.

    ಈ ಹಿಂದೆ ರಶ್ಮಿಕಾ ಮಂದಣ್ಣ ಮತ್ತು ರಣಬೀರ್ ಕಪೂರ್ ಕಾಂಬಿನೇಷನ್ ನ ನಟನೆಯ ಅನಿಮಲ್ ಸಿನಿಮಾದ ಹಾಡೊಂದು ರಿಲೀಸ್ ಆಗಿತ್ತು. ‘ಹುವಾ ಮೈನ್‍’ ಹೆಸರಿನ ಈ ಹಾಡಿನಲ್ಲಿ ರಶ್ಮಿಕಾ ಮತ್ತು ರಣಬೀರ್ ತುಟಿಗೆ ತುಟಿಗೆ ಬೆರೆಸಿದ್ದರು. ಈ ದೃಶ್ಯವನ್ನು ಕಂಡ ಫ್ಯಾಮಿಲಿ ಶಾಕ್ ಆಗಿದ್ದರು. ತನ್ನ ಗೆಳೆಯನನ್ನು ಕುಟುಂಬಕ್ಕೆ ಪರಿಚಯಿಸುವಂತಹ ಗೀತೆ ಇದಾಗಿತ್ತು. ಮನೆಯಲ್ಲಿ ಮತ್ತು ವಿಮಾನದಲ್ಲಿ ಎರಡರಲ್ಲೂ ಈ ಜೋಡಿ ಲಿಪ್ ಲಾಕ್ ಮಾಡಿಕೊಂಡಿತ್ತು.

    ‘ಅನಿಮಲ್’ (Animal) ಸಿನಿಮಾದಲ್ಲಿ ರಣ್‌ಬೀರ್‌ಗೆ ರಶ್ಮಿಕಾ ಜೊತೆಯಾಗಿದ್ದಾರೆ. ಕೆಲ ದಿನಗಳ ಹಿಂದೆ ಟ್ರೈಲರ್ ಮೂಲಕ ‘ಅನಿಮಲ್’ ಚಿತ್ರದ ತುಣುಕು ಗಮನ ಸೆಳೆದಿತ್ತು. ಈಗ ಚಿತ್ರದ ಪೋಸ್ಟರ್‌ನಲ್ಲಿ ಹಸಿ ಬಿಸಿ ದೃಶ್ಯದ ಫೋಟೋ ಪಡ್ಡೆಹುಡುಗರ ನಿದ್ದೆ ಕೆಡಿಸಿದೆ.

    ರಶ್ಮಿಕಾಗೆ ಲಿಪ್ ಲಾಕ್ ದೃಶ್ಯದಲ್ಲಿ ನಟಿಸೋದು ಹೊಸದೇನಲ್ಲ. ಈ ಹಿಂದೆ ‘ಗೀತಾ ಗೋವಿಂದಂ’, ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ವಿಜಯ್ ದೇವರಕೊಂಡ ಜೊತೆ ನಟಿ ಬೋಲ್ಡ್ ಆಗಿಯೇ ಲಿಪ್ ಲಾಕ್ ಮಾಡಿದ್ದರು. ಈಗ ರಣ್‌ಬೀರ್ ಜೊತೆ ಚುಂಬನದ ದೃಶ್ಯದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

    ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಅನಿಮಲ್’ ಸಿನಿಮಾ ಡಿಸೆಂಬರ್ 1ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಮೂಲಕ ರಶ್ಮಿಕಾ ಅವರ ಬಾಲಿವುಡ್‌ನ(Bollywood) ಭವಿಷ್ಯ ತಿಳಿಯಲಿದೆ. ಈ ಹಿಂದೆ, ರಶ್ಮಿಕಾ ನಟಿಸಿದ ಗುಡ್ ಬೈ, ಮಿಷನ್ ಮಜ್ನು ಚಿತ್ರಗಳು ಮಕಾಡೆ ಮಲಗಿವೆ. ರಣ್‌ಬೀರ್ (Ranbir Kapoor) ಜೊತೆ ‘ಕಿರಿಕ್ ಪಾರ್ಟಿ’ (Kirik Paty) ನಟಿ ಗೆದ್ದು ಬೀಗುತ್ತಾರಾ ಕಾಯಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಿಪ್ ಲಾಕ್ ಮಾಡಿ, 2ನೇ ಮದುವೆಗೆ ಲಾಕ್ ಆದ ಅಮಲಾ ಪೌಲ್

    ಲಿಪ್ ಲಾಕ್ ಮಾಡಿ, 2ನೇ ಮದುವೆಗೆ ಲಾಕ್ ಆದ ಅಮಲಾ ಪೌಲ್

    ನ್ನಡ ಸೂಪರ್ ಹಿಟ್ ಸಿನಿಮಾ ಹೆಬ್ಬುಲಿಯ ನಾಯಕಿ ಅಮಲಾ ಪೌಲ್ (Amala Paul) ಮತ್ತೊಂದು ಮದುವೆಗೆ (marriage) ಸಿದ್ಧರಾಗಿದ್ದಾರೆ. ಈ ಬಾರಿ ವಿಭಿನ್ನವಾಗಿ ಮದುವೆಯ ಪ್ರಪೋಸಲ್ ಅನ್ನು ಅವರು ಸ್ವೀಕರಿಸಿದ್ದಾರೆ. ಅಮಲಾ ಅವರ ಹುಟ್ಟು ಹಬ್ಬದ ದಿನದಂದೇ ಬಾಯ್ ಫ್ರೆಂಡ್ ವಿಶೇಷವಾದ ಸನ್ನಿವೇಶವೊಂದನ್ನು ಸೃಷ್ಟಿ ಮಾಡಿ ಅಮಲಾ ಕೈಗೆ ಉಂಗುರು ತೊಡಿಸಿದ್ದಾರೆ.

    ದಕ್ಷಿಣ ಭಾರತದ ಖ್ಯಾತಿ ನಟಿ ಆಗಿರುವ ಅಮಲಾ ಪೌಲ್, ಸಿನಿಮಾಗಳಿಗಿಂತ ಹೆಚ್ಚು ವಿವಾದಗಳಿಂದಲೇ ಸುದ್ದಿ ಆದವರು. ಆದರೂ, ಅವರ ಡಿಮಾಂಡ್ ಕಡಿಮೆ ಆಗಿರಲಿಲ್ಲ. ಒಂದಲ್ಲ ಒಂದು ಸಿನಿಮಾಗಳಲ್ಲಿ ನಟಿಸುತ್ತಲೇ ಬಂದರು. 2014ರಲ್ಲಿ ತಮಿಳು ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾದರು. ಆದರೆ, ಆ ಸಂಬಂಧ ತುಂಬಾ ದಿನ ಉಳಿಯಲಿಲ್ಲ. ಮದುವೆಯಾದ ಮೂರೇ ಮೂರು ವರ್ಷಕ್ಕೆ ಜೀವನ ಮುರಿದು ಬಿತ್ತು.

    ಆನಂತರ ಈ ನಟಿಯ ಹೆಸರು ಹಲವಾರು ನಟರ ಹೆಸರಿನೊಂದಿಗೆ ತಳುಕು ಹಾಕಿಕೊಂಡಿತ್ತು. ಅನೇಕ ನಿರ್ದೇಶಕರ ಹೆಸರು ಕೂಡ ಕೇಳಿ ಬಂದಿತ್ತು. ಆದರೆ, ಯಾವತ್ತೂ ಅಮಲಾ ಉತ್ತರಿಸಲಿಲ್ಲ. ಇದೀಗ ಬಾಯ್ ಫ್ರೆಂಡ್ ಜೊತೆಗಿನ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಬಾಯ್ ಫ್ರೆಂಡ್ ಮಾಡಿರೋ ಪ್ರಪೋಸ್‍ಗೆ ಒಪ್ಪಿಕೊಂಡಿದ್ದಾರೆ.

    ಜಗತ್ ದೇಸಾಯಿ (Jagat Desai) ಎನ್ನುವವರ ಜೊತೆ ಅಮಲಾ ಡೇಟಿಂಗ್ ನಲ್ಲಿದ್ದರು. ಅವರೇ ಹೋಟೆಲ್ ವೊಂದರಲ್ಲಿ ಅಮಲಾ ಅವರ ಹುಟ್ಟು ಹಬ್ಬಕ್ಕೆ ಸಿದ್ಧತೆ ಮಾಡಿದ್ದಾರೆ. ನೃತ್ಯ ಮಾಡುತ್ತಲೇ ನಟಿಗೆ ಪ್ರಪೋಸ್ ಮಾಡಿದ್ದಾರೆ. ಅಚ್ಚರಿಯಿಂದಲೇ ಅಮಲಾ ಕೂಡ ಬಾಯ್ ಫ್ರೆಂಡ್ ತುಟಿಗೆ ಮುತ್ತಿಡುತ್ತಾ (Lip Lock) ಉಂಗುರು ತೊಡಿಸಿದ್ದಾರೆ.

    ಆ ರೋಮ್ಯಾಂಟಿಕ್ ವಿಡಿಯೋವನ್ನು ದೇಸಾಯಿ ತಮ್ಮ ಇನ್ಸ್ಟಾ ಪೇಜ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ. ಅನೇಕರು ಈ ಜೋಡಿಗೆ ಶುಭಾಶಯಗಳನ್ನೂ ತಿಳಿಸಿದ್ದಾರೆ. ಚೆನ್ನಾಗಿ ಬದುಕಿರಿ ಎಂದು ಹಾರೈಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತುಟಿಗೆ ತುಟಿ ಬೆರೆಸಿ ಬೆರಗು ಮೂಡಿಸಿದ ನ್ಯಾಷನಲ್ ಕ್ರಶ್ ರಶ್ಮಿಕಾ

    ತುಟಿಗೆ ತುಟಿ ಬೆರೆಸಿ ಬೆರಗು ಮೂಡಿಸಿದ ನ್ಯಾಷನಲ್ ಕ್ರಶ್ ರಶ್ಮಿಕಾ

    ಶ್ಮಿಕಾ ಮಂದಣ್ಣ ಮತ್ತು ರಣಬೀರ್ ಕಪೂರ್ ಕಾಂಬಿನೇಷನ್ ನ ನಟನೆಯ ಅನಿಮಲ್ ಸಿನಿಮಾದ ಹಾಡೊಂದು ರಿಲೀಸ್ ಆಗಿದೆ. ‘ಹುವಾ ಮೈನ್‍’ ಹೆಸರಿನ ಈ ಹಾಡಿನಲ್ಲಿ ರಶ್ಮಿಕಾ ಮತ್ತು ರಣಬೀರ್ ತುಟಿಗೆ ತುಟಿಗೆ ಬೆರೆಸಿದ್ದಾರೆ. ಈ ದೃಶ್ಯವನ್ನು ಕಂಡ ಫ್ಯಾಮಿಲಿ ಶಾಕ್ ಆಗಿದ್ದಾರೆ. ತನ್ನ ಗೆಳೆಯನನ್ನು ಕುಟುಂಬಕ್ಕೆ ಪರಿಚಯಿಸುವಂತಹ ಗೀತೆ ಇದಾಗಿದೆ. ಮನೆಯಲ್ಲಿ ಮತ್ತು ವಿಮಾನದಲ್ಲಿ ಎರಡರಲ್ಲೂ ಈ ಜೋಡಿ ಲಿಪ್ ಲಾಕ್ ಮಾಡಿಕೊಂಡಿದೆ.

    ನಿನ್ನೆಯಷ್ಟೇ ರಶ್ಮಿಕಾ ಮಂದಣ್ಣ (Rashmika Mandanna) ಈಗ ಲಿಪ್ ಲಾಕ್ ವಿಚಾರವಾಗಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಆಲಿಯಾ ಪತಿ, ರಣ್‌ಬೀರ್ ಕಪೂರ್ ಜೊತೆ ‘ಪುಷ್ಪ’ (Pushpa) ನಟಿ ಲಿಪ್ ಲಾಕ್ ಮಾಡಿದ್ದ ಫೋಟೋಗಳು ವೈರಲ್ ಆಗಿದ್ದವು. ಇಬ್ಬರ ರೊಮ್ಯಾಂಟಿಕ್ ಫೋಟೋ ಸಖತ್ ವೈರಲ್ ಆಗುತ್ತಿವೆ.

    ‘ಅನಿಮಲ್’ (Animal) ಸಿನಿಮಾದಲ್ಲಿ ರಣ್‌ಬೀರ್‌ಗೆ ರಶ್ಮಿಕಾ ಜೊತೆಯಾಗಿದ್ದಾರೆ. ಕೆಲ ದಿನಗಳ ಹಿಂದೆ ಟ್ರೈಲರ್ ಮೂಲಕ ‘ಅನಿಮಲ್’ ಚಿತ್ರದ ತುಣುಕು ಗಮನ ಸೆಳೆದಿತ್ತು. ಈಗ ಚಿತ್ರದ ಪೋಸ್ಟರ್‌ನಲ್ಲಿ ಹಸಿ ಬಿಸಿ ದೃಶ್ಯದ ಫೋಟೋ ಪಡ್ಡೆಹುಡುಗರ ನಿದ್ದೆ ಕೆಡಿಸಿದೆ.

    ರಶ್ಮಿಕಾಗೆ ಲಿಪ್ ಲಾಕ್ ದೃಶ್ಯದಲ್ಲಿ ನಟಿಸೋದು ಹೊಸದೇನಲ್ಲ. ಈ ಹಿಂದೆ ‘ಗೀತಾ ಗೋವಿಂದಂ’, ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ವಿಜಯ್ ದೇವರಕೊಂಡ (Vijay Devarakonda) ಜೊತೆ ನಟಿ ಬೋಲ್ಡ್ ಆಗಿಯೇ ಲಿಪ್ ಲಾಕ್ ಮಾಡಿದ್ದರು. ಈಗ ರಣ್‌ಬೀರ್ ಜೊತೆ ಚುಂಬನದ ದೃಶ್ಯದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.