Tag: liquor policy case

  • Breaking – ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌!

    Breaking – ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌!

    ನವದೆಹಲಿ: ಆಮ್‌ ಆದ್ಮಿ ಪಕ್ಷದ (AAP) ನಾಯಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ (Arvind Kejriwal) ಅವರು ಮುಂದಿನ 48 ಗಂಟೆಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಭಾನುವಾರ ಘೋಷಿಸಿದ್ದಾರೆ.

    ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ (Liquor Policy Case) ಬರೋಬ್ಬರಿ 6 ತಿಂಗಳು ಜೈಲಿನಲ್ಲಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಇದೇ ಸೆಪ್ಟೆಂಬರ್‌ 13ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿಂದ ರಿಲೀಸ್‌ ಆದ ನಂತರ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನೂತನ ಮುಖ್ಯಮಂತ್ರಿ ಆಯ್ಕೆಗೆ ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಮಹಾರಾಷ್ಟ್ರ ಚುನಾವಣೆಯೊಂದಿಗೆ ದೆಹಲಿ ವಿಧಾನಸಭಾ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

    ಮುಂದಿನ 48 ಗಂಟೆಗಳ ಒಳಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ. ಆ ನಂತರ ಸಚಿವ ಸಂಪುಟ ಸಭೆಯಲ್ಲಿ ಪಕ್ಷದ ಸದಸ್ಯರೊಬ್ಬರನ್ನು ಮುಖ್ಯಮಂತ್ರಿಯಾಗಿ ಹೆಸರಿಸಲಾಗುವುದು. ನಾನು ಜನತೆ ತೀರ್ಪು ನೀಡುವವರೆಗೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ಪ್ರತಿ ಮನೆ, ಬೀದಿಗೆ ಹೋಗುತ್ತೇನೆ, ಅಲ್ಲಿಯವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರುವುದಿಲ್ಲ. ನಾನು ಜನರಿಂದ ತೀರ್ಪು ಪಡೆಯುತ್ತೇನೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: Suicide Pod; ಒಂದು ಬಟನ್‌ ಒತ್ತಿದರೆ ಸಾಕು ನಿಮಿಷದಲ್ಲಿ ನೋವಿಲ್ಲದೇ ಸಾಯಬಹುದು!

    ಕೇಸ್‌ ಹಾಕಿದ್ರೆ ರಾಜೀನಾಮೆ ಕೊಡಬೇಡಿ:
    ಪ್ರಜಾಪ್ರಭುತ್ವ ಉಳಿಸುವ ಉದ್ದೇಶದಿಂದ ಈ ಹಿಂದೆ ಬಂಧನಕ್ಕೊಳಗಾಗಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ ಎಂದ ಅವರು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಉಲ್ಲೇಖಿಸಿದರು. ನಾನು ಬಿಜೆಪಿಯೇತರರಿಗೆ ಮನವಿ ಮಾಡಲು ಬಯಸುತ್ತೇನೆ, ಅವರು ನಿಮ್ಮ ವಿರುದ್ಧ ಪ್ರಕರಣ ದಾಖಲಿಸಿದರೆ ರಾಜೀನಾಮೆ ನೀಡಬೇಡಿ. ಇದು ಅವರ ಹೊಸ ಆಟ ಎಂದು ಕರೆ ನೀಡಿದ್ದಾರೆ.

    ಇದು ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಗಿಂತ ಹೆಚ್ಚು ಸರ್ವಾಧಿಕಾರಿ ಆಡಳಿತವಾಗಿದೆ. ಕೇಂದ್ರ ಸರ್ಕಾರ ಏನೇ ಪಿತೂರಿ ಮಾಡಿದರೂ ನಮ್ಮ ಸಂಕಲ್ಪ ಮುರಿಯಲು ಸಾಧ್ಯವಿಲ್ಲ, ರಾಷ್ಟ್ರಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: Video | ಕೇಸರಿ ಶಾಲು ಹಿಡಿದು ವೇದಿಕೆಗೆ ನುಗ್ಗಿದ ಯುವಕ – ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ?

    ಜೈಲಿನ ಕಹಿ ಘಟನೆ ನೆನೆದ ಕೇಜ್ರಿವಾಲ್‌:
    ಇದೇ ವೇಳೆ ಜೈಲಿನ ಕಹಿ ಘಟನೆಗಳನ್ನು ನೆನೆದು ಕೇಜ್ರಿವಾಲ್‌ ಮಾತನಾಡಿದ್ದಾರೆ. ನಾನು ಜೈಲಿನಲ್ಲಿದ್ದಾಗ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನನ್ನ ಅನುಪಸ್ಥಿತಿಯಲ್ಲಿ ಅತಿಶಿ ಅವರಿಂದ ಧ್ವಜಾರೋಹಣಕ್ಕೆ ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದೆ. ಆದ್ರೆ ಪತ್ರವನ್ನ ಹಿಂತಿರುಗಿಸಿದರು. ನನ್ನ ಕುಟುಂಬವನ್ನು ಭೇಟಿ ಮಾಡಬೇಕೆಂದು ಮತ್ತೊಂದು ಪತ್ರ ಬರೆದೆ, ಅದನ್ನೂ ತಿರಸ್ಕರಿಸಲಾಯಿತು ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಶಾಸಕ ಮುನಿರತ್ನ ಬಂಧನ ಪ್ರಕರಣ – ತಪ್ಪು ಮಾಡಿರೋದು ಸಾಮಾನ್ಯ ವ್ಯಕ್ತಿಯಲ್ಲ ಒಬ್ಬ ಮಾಜಿ ಮಂತ್ರಿ: ಡಿಕೆ ಸುರೇಶ್‌

  • ಬಿಜೆಪಿ ಸೇರಿ ಇಲ್ಲವೇ ಬಂಧನಕ್ಕೆ ಸಿದ್ಧರಾಗಿ – ಆಪ್ ಸಚಿವೆ ಅತಿಶಿ ಗಂಭೀರ ಆರೋಪ

    ಬಿಜೆಪಿ ಸೇರಿ ಇಲ್ಲವೇ ಬಂಧನಕ್ಕೆ ಸಿದ್ಧರಾಗಿ – ಆಪ್ ಸಚಿವೆ ಅತಿಶಿ ಗಂಭೀರ ಆರೋಪ

    ನವದೆಹಲಿ: ತಮ್ಮ ಆಪ್ತ ಸಹಾಯಕರೊಬ್ಬರ ಮೂಲಕ ಪಕ್ಷ ಸೇರುವಂತೆ ನನ್ನನ್ನು ಬಿಜೆಪಿ ಸಂಪರ್ಕಿಸಿದೆ. ಬಿಜೆಪಿ (BJP) ಸೇರದಿದ್ದರೆ ಮುಂಬರುವ ಒಂದು ತಿಂಗಳಲ್ಲಿ ಇಡಿ (Enforcement Directorate) ನಿಮ್ಮನ್ನು ಬಂಧಿಸಲಿದೆ ಎಂದು ಬೆದರಿಸುವ ಪ್ರಯತ್ನ ಮಾಡಿದ್ದಾರೆ ಎಂದು ದೆಹಲಿ ಸಚಿವೆ ಅತಿಶಿ  (Atishi) ಗಂಭೀರ ಆರೋಪ ಮಾಡಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಸಂಜಯ್ ಸಿಂಗ್ ಮತ್ತು ಸತ್ಯೇಂದ್ರ ಜೈನ್ ಜೈಲು ಸೇರಿದರೂ, ಆಮ್ ಆದ್ಮಿ ಪಕ್ಷವು (Aam Aadmi Party) ಇನ್ನೂ ಒಗ್ಗಟ್ಟಿನಿಂದ ಪ್ರಬಲವಾಗಿದೆ. ಆಮ್ ಆದ್ಮಿ ಪಕ್ಷ ಮತ್ತು ಅದರ ಮುಂದಿನ ಎಲ್ಲಾ ನಾಯಕರನ್ನು ಹತ್ತಿಕ್ಕಲು ಮತ್ತು ಅವರನ್ನು ತೊಡೆದುಹಾಕಲು ಬಿಜೆಪಿ ಬಯಸಿದೆ. ಲೋಕಸಭಾ ಚುನಾವಣೆಗೂ ಮುನ್ನ ನನ್ನನ್ನೂ ಸೇರಿದಂತೆ ಸೌರಭ್ ಭಾರದ್ವಾಜ್, ದುರ್ಗೇಶ್ ಪಾಠಕ್ ಮತ್ತು ರಾಘವ್ ಚಡ್ಡಾರ ಬಂಧನವಾಗಲಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಆಯುರ್ವೇದ ಉತ್ಪನ್ನ ಉತ್ತೇಜಿಸಲು ದಾರಿತಪ್ಪಿಸುವ ಜಾಹೀರಾತು ಪ್ರಸಾರ; ಬಾಬಾ ರಾಮದೇವ್ ಕ್ಷಮೆ ಒಪ್ಪದ ಸುಪ್ರೀಂ

    ಒಂದೂವರೆ ವರ್ಷಗಳಿಂದ ಇಡಿ ಮತ್ತು ಸಿಬಿಐ ಬಳಿ ಇರುವ ಹೇಳಿಕೆಯ ಆಧಾರದ ಮೇಲೆ ಇಡಿ ಅಧಿಕಾರಿಗಳ ಸೋಮವಾರ ಸೌರಭ್ ಭಾರದ್ವಾಜ್ ಮತ್ತು ನನ್ನ ಹೆಸರನ್ನು ನ್ಯಾಯಾಲಯದಲ್ಲಿ ಪ್ರಸ್ತಾಪಿಸಿದ್ದಾರೆ. ಈ ಮೂಲಕ ಅವರು ಆಮ್ ಆದ್ಮಿ ಪಕ್ಷದ ಮುಂದಿನ ನಾಯಕತ್ವವನ್ನು ಜೈಲಿಗೆ ಹಾಕಲು ಯೋಜಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

    ಅರವಿಂದ್ ಕೇಜ್ರಿವಾಲ್ (Arvind Kejriwal) ರಾಜೀನಾಮೆ ವಿಚಾರವಾಗಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಇದಕ್ಕೆ ಸಂಬಂಧಿಸಿದಂತೆ ಎರಡು ಸಾಂವಿಧಾನಿಕ ಮತ್ತು ಕಾನೂನು ನಿಬಂಧನೆಗಳಿವೆ. ಪ್ರಜಾಪ್ರತಿನಿಧಿ ಕಾಯಿದೆಯು ಎರಡು ವರ್ಷಕ್ಕಿಂತ ಹೆಚ್ಚು ಶಿಕ್ಷೆಯಾದರೆ ಸಾರ್ವಜನಿಕ ಪ್ರತಿನಿಧಿಯಾಗಿ ಉಳಿಯಲು ಸಾಧ್ಯವಿಲ್ಲ ಎನ್ನುತ್ತದೆ. ಅರವಿಂದ್ ಕೇಜ್ರಿವಾಲ್ ದೋಷಿ ಎಂದು ಸಾಬೀತಾಗಿಲ್ಲ. ಕೇಜ್ರಿವಾಲ್‍ಗೆ ದೆಹಲಿ ವಿಧಾನಸಭೆಯ ಅಗಾಧ ಬಹುಮತವನ್ನು ಹೊಂದಿದ್ದಾರೆ. ಆದ್ದರಿಂದ ಅವರು ರಾಜೀನಾಮೆ ನೀಡಲು ಯಾವುದೇ ಕಾರಣವಿಲ್ಲ. ಅವರೇನಾದ್ರೂ ರಾಜೀನಾಮೆ ನೀಡಿದರೆ ಅದು ವಿರೋಧ ಪಕ್ಷಗಳ ಸರ್ಕಾರಗಳನ್ನು ಉರುಳಿಸಲು ಬಿಜೆಪಿಗೆ ಅತ್ಯಂತ ಸರಳ ಮಾರ್ಗವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊಸ ಮಧ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ – ಎಎಪಿ ಸಂಸದ ಸಂಜಯ್ ಸಿಂಗ್‌ಗೆ ಸುಪ್ರೀಂ ಜಾಮೀನು

  • ಅರವಿಂದ್‌ ಕೇಜ್ರಿವಾಲ್‌ 7 ದಿನಗಳ ಕಾಲ ಇ.ಡಿ ಕಸ್ಟಡಿಗೆ

    ಅರವಿಂದ್‌ ಕೇಜ್ರಿವಾಲ್‌ 7 ದಿನಗಳ ಕಾಲ ಇ.ಡಿ ಕಸ್ಟಡಿಗೆ

    ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಏಳು ದಿನಗಳ ಕಾಲ (ಮಾರ್ಚ್ 28 ವರೆಗೆ) ಜಾರಿ ನಿರ್ದೇಶನಾಲಯದ (ED) ವಶಕ್ಕೆ ನೀಡಲಾಗಿದೆ.

    ತಮ್ಮ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಅರವಿಂದ್‌ ಕೇಜ್ರಿವಾಲ್‌ ಹಿಂಪಡೆದಿದ್ದರು. ಅದಾದ ಬಳಿಕ ದೆಹಲಿಯ ರೂಸ್ ಅವೆನ್ಯೂ ಕೋರ್ಟ್, ಇ.ಡಿ ವಶಕ್ಕೆ ವಹಿಸಿ ಆದೇಶ ಹೊರಡಿಸಿದೆ.

    ಕೇಜ್ರಿವಾಲ್ ಅವರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೇಂದ್ರೀಯ ಸಂಸ್ಥೆ ಕೋರಿತ್ತು. ತನ್ನ ತನಿಖೆಯನ್ನು ಪೂರ್ಣಗೊಳಿಸಲು ಮತ್ತು ಆಮ್ ಆದ್ಮಿ ಪಕ್ಷದ ನಾಯಕನನ್ನು ಪ್ರಕರಣದಲ್ಲಿ ಬಂಧಿತ ಆರೋಪಿಗಳೊಂದಿಗೆ ವಿಚಾರಣೆಗೆ ಸಮಯ ಬೇಕಾಗುತ್ತದೆ ಎಂದು ಹೇಳಿತ್ತು.

    ಶುಕ್ರವಾರದ ವಿಚಾರಣೆಯಲ್ಲಿ, ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಕರಣದ ಕಿಂಗ್‌ಪಿನ್‌ ಎಂದು ಇ.ಡಿ ಕರೆದಿದೆ. ಆಪಾದಿತ ಹಗರಣದ ಒಟ್ಟು ಆದಾಯವು 600 ಕೋಟಿ ಮೀರಿದೆ. ಇದರಲ್ಲಿ ‘ಸೌತ್ ಗ್ರೂಪ್’ ಪಾವತಿಸಿದ 100 ಕೋಟಿಯೂ ಸೇರಿದೆ ಎಂದು ಇ.ಡಿ ತಿಳಿಸಿದೆ.

  • ಕೇಜ್ರಿವಾಲ್‌ ನಿವಾಸದಲ್ಲಿ ಇ.ಡಿ ಶೋಧ – ದೆಹಲಿ ಸಿಎಂ ಬಂಧನ ಸಾಧ್ಯತೆ

    ಕೇಜ್ರಿವಾಲ್‌ ನಿವಾಸದಲ್ಲಿ ಇ.ಡಿ ಶೋಧ – ದೆಹಲಿ ಸಿಎಂ ಬಂಧನ ಸಾಧ್ಯತೆ

    ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಇದರ ಬೆನ್ನಲ್ಲೇ ಇ.ಡಿ (Enforcement Directorate) ಅಧಿಕಾರಿಗಳ ತಂಡವು ಕೇಜ್ರಿವಾಲ್‌ ಅವರ ನಿವಾಸಕ್ಕೆ ತೆರಳಿ ಶೋಧ ಕಾರ್ಯ ನಡೆಸುತ್ತಿವೆ.

    12 ಅಧಿಕಾರಿಗಳ ತಂಡವು ಸರ್ಚ್ ವಾರಂಟ್‌ನೊಂದಿಗೆ ದೆಹಲಿ ಸಿಎಂ ಕೇಜ್ರಿವಾಲ್‌ ನಿವಾಸಕ್ಕೆ ತೆರಳಿದೆ ಎಂದು ಮೂಲಗಳು ತಿಳಿಸಿವೆ. ಇ.ಡಿ ಯಿಂದ ಕೇಜ್ರಿವಾಲ್‌ ಬಂಧನ ಸಾಧ್ಯತೆ ಇದೆ. ಇದನ್ನೂ ಓದಿ: ಕೊಯಮತ್ತೂರಿನಿಂದ ಅಣ್ಣಾಮಲೈ ಸ್ಪರ್ಧೆ – ಬಿಜೆಪಿಯಿಂದ 3ನೇ ಪಟ್ಟಿ ರಿಲೀಸ್‌

    ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್, ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ಎಂಟು ಸಮನ್ಸ್‌ಗಳಿಗೂ ಸ್ಪಂದಿಸಿಲ್ಲ. ದೆಹಲಿ ಜಲ ಮಂಡಳಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಒಂದು ಸಮನ್ಸ್‌ಗೂ ಕೂಡ ಪ್ರತಿಕ್ರಿಯಿಸಿಲ್ಲ.

    ಒಂಬತ್ತು ಬಾರಿ ಇ.ಡಿ ಸಮನ್ಸ್‌ ನೀಡಿದೆ. ಮಧ್ಯಂತರ ರಕ್ಷಣೆ ಕೋರಿ ಕೇಜ್ರಿವಾಲ್‌ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಇದನ್ನೂ ಓದಿ: ಐತಿಹಾಸಿಕ ಸೋಲಿನ ಭೀತಿ ಹಿನ್ನೆಲೆ ಬಿಜೆಪಿ ವಿರುದ್ಧ ಆರೋಪ – ಕಾಂಗ್ರೆಸ್ ಆರೋಪಕ್ಕೆ ಜೆಪಿ ನಡ್ಡಾ ತಿರುಗೇಟು

  • ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್ – ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು

    ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್ – ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು

    ನವದೆಹಲಿ: ನೂತನ ಅಬಕಾರಿ ನೀತಿ ಪ್ರಕರಣಕ್ಕೆ (Liquor Policy Case) ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ರೋಸ್ ಅವೆನ್ಯೂ ಕೋರ್ಟ್ ನಿರೀಕ್ಷಣಾ‌ ಜಾಮೀನು ಮಂಜೂರು ಮಾಡಿದೆ.

    ಸಮನ್ಸ್ ಹಿನ್ನೆಲೆ ಶನಿವಾರ ಕೋರ್ಟ್ ಮುಂದೆ ಅರವಿಂದ್ ಕೇಜ್ರಿವಾಲ್ ಹಾಜರಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು. ವಿಚಾರಣೆ ಬಳಿಕ 15,000 ರೂ. ಮೌಲ್ಯದ ಶ್ಯೂರಿಟಿ ಬಾಂಡ್ ಮತ್ತು 1 ಲಕ್ಷ ರೂ. ವೈಯಕ್ತಿಕ ಬಾಂಡ್‌ನೊಂದಿಗೆ ಜಾಮೀನು ಮಂಜೂರು ಮಾಡಲಾಯಿತು‌. ಇದನ್ನೂ ಓದಿ: ನಾವು ಎಷ್ಟು ಅರ್ಜಿಗಳನ್ನು ಪರಿಗಣಿಸಬೇಕು? – EVM ಬೇಡವೆಂದು ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿ ವಜಾ

    ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ‌ ನಿರ್ದೇಶನಾಲಯದ ಅಧಿಕಾರಿಗಳು ಸಿಎಂ ಅರವಿಂದ್ ಕೇಜ್ರಿವಾಲ್ 8 ಬಾರಿ ಸಮನ್ಸ್ ಜಾರಿ ಮಾಡಿದ್ದರು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಇಡಿ ಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಖುದ್ದು ಹಾಜರಾಗಲು ಸಮನ್ಸ್ ಜಾರಿ ಮಾಡಿತ್ತು.

    ಇಂದು ವಿಚಾರಣೆ ವೇಳೆ ಅರವಿಂದ್ ಕೇಜ್ರಿವಾಲ್ ನ್ಯಾಯಾಧೀಶರ ಮುಂದೆ ಹಾಜರಾಗುತ್ತಿದ್ದಂತೆ ಅವರ ಅನುಪಸ್ಥಿತಿಯಲ್ಲಿ ವಿಚಾರಣೆ ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಕೋರ್ಟ್ ಒಪ್ಪಿತು. ಬಳಿಕ ಕೇಜ್ರಿವಾಲ್ ಕೋರ್ಟ್‌ನಿಂದ ಹೊರ ಬಂದರು. ಇನ್ನು ಕೇಜ್ರಿವಾಲ್ ವಿಚಾರಣೆ ಹಿನ್ನೆಲೆ ಕೋರ್ಟ್ ಮುಂದೆ ಭಾರಿ ಭದ್ರತೆ ಒದಗಿಸಲಾಗಿತ್ತು. ಈ ಹಿಂದೆ ಇಡಿ ಸಲ್ಲಿಸಿದ ದೂರಿನ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣೆಗೆ ತಡೆ ಕೋರಿ ಕೇಜ್ರಿವಾಲ್ ಮಾಡಿದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಇದನ್ನೂ ಓದಿ: ಚುನಾವಣಾ ಬಾಂಡ್ ಪ್ರಕರಣ – ಅಸಮರ್ಪಕ ಮಾಹಿತಿ ನೀಡಿದ ಎಸ್‌ಬಿಐಗೆ ಮತ್ತೆ ಸುಪ್ರೀಂ ತರಾಟೆ

  • ಮುಚ್ಚಿಡಲು ಏನೂ ಇಲ್ಲ, ಸಮನ್ಸ್ ರಾಜಕೀಯ ಪ್ರೇರಿತ: ಕೇಜ್ರಿವಾಲ್

    ಮುಚ್ಚಿಡಲು ಏನೂ ಇಲ್ಲ, ಸಮನ್ಸ್ ರಾಜಕೀಯ ಪ್ರೇರಿತ: ಕೇಜ್ರಿವಾಲ್

    ನವದೆಹಲಿ: ‌ ನನಗೆ ಮುಚ್ಚಿಡಲು ಏನೂ ಇಲ್ಲ, ಸಮನ್ಸ್‌ ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ಈ ಕೂಡಲೇ ಸಮನ್ಸ್‌ (Summons) ಹಿಂಪಡೆಯಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಹೇಳಿದರು.

    ಮದ್ಯ ನೀತಿ ಪ್ರಕರಣದಲ್ಲಿ (Liquor Policy Case) ತಮಗೆ ಜಾರಿ ಮಾಡಿರುವ ಇಡಿ ಸಮನ್ಸ್‌ಗೆ ಗುರುವಾರ ಪ್ರತಿಕ್ರಿಯಿಸಿದ್ದು, ಸಂಸ್ಥೆ ನೀಡಿದ ಹಿಂದಿನ ಸಮನ್ಸ್‌ನಂತೆಯೇ ಈ ಸಮನ್ಸ್ ಕೂಡ ಕಾನೂನುಬಾಹಿರವಾಗಿದೆ. ಇದು ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿರುವುದರಿಂದ ಸಮನ್ಸ್ ಅನ್ನು ಇಡಿ ಹಿಂಪಡೆಯಬೇಕು ಎಂದು ಹೇಳಿದ್ದಾರೆ.

    ಸಮನ್ಸ್‌ಗೆ ಪ್ರತಿಯಾಗಿ ಆರು ಪುಟಗಳ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್, ನನಗೆ ಕಳುಹಿಸಲಾಗುತ್ತಿರುವ ಸಮನ್ಸ್‌ಗಳು ಯಾವುದೇ ವಸ್ತುನಿಷ್ಠ ಅಥವಾ ತರ್ಕಬದ್ಧ ಮಾನದಂಡವನ್ನು ಆಧರಿಸಿಲ್ಲ, ದೇಶದಲ್ಲಿ ಬಹು ನಿರೀಕ್ಷಿತ ಸಂಸತ್ತಿನ ಚುನಾವಣೆಯ ಕೊನೆಯ ಕೆಲವು ತಿಂಗಳುಗಳಲ್ಲಿ ಸಂವೇದನಾಶೀಲ ಸುದ್ದಿಯನ್ನು ಸೃಷ್ಟಿಸಲು ಈ ಸಮನ್ಸ್ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸಿದ್ದು, ಡಿಕೆಶಿಯ ಶಾಸಕರ ಪಟ್ಟಿಗೆ ಹೈಕಮಾಂಡ್‌ ಬ್ರೇಕ್‌ – ದೆಹಲಿ ಸಭೆಯ ಇನ್‌ಸೈಡ್‌ ಸ್ಟೋರಿ

    ಸದ್ಯ ರದ್ದುಗೊಂಡಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಇದು ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯದಿಂದ ನೀಡಿರುವ ಎರಡನೇ ಸಮನ್ಸ್ ಆಗಿದೆ.

    ಕಳೆದ ತಿಂಗಳು ಜಾರಿ ನಿರ್ದೇಶನಲಾಯ ಅರವಿಂದ್ ಕೇಜ್ರಿವಾಲ್ ಅವರಿಗೆ ನವೆಂಬರ್ 2 ರಂದು ಮೊದಲ ಬಾರಿ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಕೇಳಿತ್ತು. ಆದರೆ ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರು ವಿಚಾರಣೆಗೆ ಹಾಜರಾಗದೆ ಚುನಾವಣೆ ಪ್ರಚಾರಕ್ಕೆ ತೆರಳಿದ್ದರು.

  • ದೆಹಲಿ ಅಬಕಾರಿ ನೀತಿ ಹಗರಣ- ಮನೀಶ್ ಸಿಸೋಡಿಯಾ ಜಾಮೀನು ನಿರಾಕರಿಸಿದ ಸುಪ್ರೀಂ

    ದೆಹಲಿ ಅಬಕಾರಿ ನೀತಿ ಹಗರಣ- ಮನೀಶ್ ಸಿಸೋಡಿಯಾ ಜಾಮೀನು ನಿರಾಕರಿಸಿದ ಸುಪ್ರೀಂ

    ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (AAP) ನಾಯಕ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರಿಗೆ ಸುಪ್ರೀಂಕೋರ್ಟ್ (Supreme Court) ಸೋಮವಾರ ಜಾಮೀನು (Bail) ನಿರಾಕರಿಸಿದೆ.

    ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ (Sanjiv Khanna) ಮತ್ತು ಎಸ್‌ವಿಎನ್ ಭಟ್ಟಿ (SVN Bhatti) ಅವರ ಪೀಠ ಈ ಆದೇಶವನ್ನು ಪ್ರಕಟಿಸಿದೆ. ವಿಶ್ಲೇಷಣೆಯಲ್ಲಿ ಅನುಮಾನಾಸ್ಪದವಾದ ಕೆಲವು ಅಂಶಗಳಿವೆ. ಆರರಿಂದ ಎಂಟು ತಿಂಗಳೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಲಾಗುವುದು ಎಂದು ಪ್ರಾಸಿಕ್ಯೂಷನ್ ಭರವಸೆ ನೀಡಿದೆ ಎಂದು ನ್ಯಾಯಾಲಯ ಹೇಳಿದೆ. ಆದ್ದರಿಂದ ಮೂರು ತಿಂಗಳೊಳಗೆ, ವಿಚಾರಣೆಯು ನಿಧಾನವಾಗಿ ಮುಂದುವರಿದರೆ ಸಿಸೋಡಿಯಾ ಜಾಮೀನಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಪೀಠ ಹೇಳಿದೆ. ಇದನ್ನೂ ಓದಿ: ವೃದ್ಧೆಯ ಮೇಲೆ ಅತ್ಯಾಚಾರ – ಅಪರಾಧಿಗೆ 10 ವರ್ಷ ಜೈಲು, 10 ಸಾವಿರ ದಂಡ

    ಈ ವರ್ಷ ಫೆಬ್ರವರಿ 26ರಿಂದ ಸಿಸೋಡಿಯಾ ಬಂಧನದಲ್ಲಿದ್ದಾರೆ. ಅವರನ್ನು ಕೇಂದ್ರೀಯ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯ (ED) ಎರಡೂ ತನಿಖೆ ನಡೆಸುತ್ತಿವೆ. ಲಂಚದ ಬದಲಾಗಿ ಕೆಲವು ವ್ಯಾಪಾರಿಗಳಿಗೆ ಮದ್ಯದ ಪರವಾನಗಿ ನೀಡಲು ದೆಹಲಿ ಸರ್ಕಾರದ ಅಧಿಕಾರಿಗಳು ಸಂಚು ರೂಪಿಸಿದ್ದಾರೆ ಎಂಬ ಆರೋಪವನ್ನು ಹಗರಣ ಒಳಗೊಂಡಿದೆ. ಆರೋಪಿ ಅಧಿಕಾರಿಗಳು ಕೆಲವು ಮದ್ಯ ಮಾರಾಟಗಾರರಿಗೆ ಅನುಕೂಲವಾಗುವಂತೆ ಅಬಕಾರಿ ನೀತಿಯನ್ನು ತಿರುಚಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಹೆಣ್ಣುಮಕ್ಕಳು ಲೈಂಗಿಕ ಪ್ರಚೋದನೆ ಕಂಟ್ರೋಲ್‌ ಮಾಡಬೇಕು.. 2 ನಿಮಿಷದ ಸುಖಕ್ಕಾಗಿ ಸೋಲಬೇಡಿ: ಹೈಕೋರ್ಟ್‌

    ದೆಹಲಿ ಹೈಕೋರ್ಟ್ ಈ ಹಿಂದೆ ಎರಡು ಕೇಂದ್ರೀಯ ಸಂಸ್ಥೆಗಳಿಂದ ಸಿಸೋಡಿಯಾ ಅವರ ವಿರುದ್ಧದ ಪ್ರಕರಣಗಳಲ್ಲಿ ಜಾಮೀನು ನಿರಾಕರಿಸಿದ್ದು, ಎಎಪಿ ನಾಯಕ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್ಗೆ ತೆರಳಲು ಪ್ರೇರೇಪಿಸಿತ್ತು. ವಿಚಾರಣೆಯ ಸಂದರ್ಭದಲ್ಲಿ, ಪೀಠವು ಮನಿ ಲಾಂಡರಿಂಗ್ ತಡೆಗಟ್ಟುವಿಕೆ ಕಾಯ್ದೆ (PMLA) ಅಡಿಯಲ್ಲಿ ಮನಿ ಲಾಂಡರಿಂಗ್ ಅಪರಾಧಕ್ಕೆ ಪೂರ್ವ ದಿನಾಂಕವನ್ನು ಹೊಂದಿರಬೇಕು ಮತ್ತು ಇಡಿ ಮುನ್ಸೂಚನೆಯ ಅಪರಾಧವನ್ನು ರಚಿಸಲು ಸಾಧ್ಯವಿಲ್ಲ ಎಂದು ಇಡಿಗೆ ತಿಳಿಸಿತ್ತು. ಇದನ್ನೂ ಓದಿ: ಡಿಕೆಶಿ ಅರ್ಜಿ ವಜಾಗೊಂಡಿದ್ದು ಯಾಕೆ? ಹೈಕೋರ್ಟ್‌ ನೀಡಿದ ಕಾರಣ ಏನು?

    ಈ ಪ್ರಕರಣದಲ್ಲಿ ಎಎಪಿಯನ್ನು ಆರೋಪಿಯನ್ನಾಗಿ ಸೇರಿಸಲು ಚಿಂತನೆ ನಡೆಸಿರುವುದಾಗಿ ಸಿಬಿಐ ಮತ್ತು ಇಡಿ ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದವು. ಆಪಾದಿತ ಹಗರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಒಳಗೊಂಡಿರುವ ಲಂಚದ ಯಾವುದೇ ಪುರಾವೆಗಳಿವೆಯೇ ಎಂದು ಸಿಬಿಐ ಮತ್ತು ಇಡಿಯಿಂದ ಪೀಠವು ಕೇಳಿದೆ. ಇದನ್ನೂ ಓದಿ: ಕ್ಷುಲ್ಲಕ ಮೇಲ್ಮನವಿ – ಅರ್ಜಿದಾರನಿಗೆ 5 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್

    ಸಿಬಿಐ ಮತ್ತು ಇಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ವಾದ ಮಂಡಿಸಿದ್ದರು. ಮನೀಶ್ ಸಿಸೋಡಿಯಾ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು. ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಸಹಪಾಠಿಗಳಿಂದ ಕಪಾಳಮೋಕ್ಷ – ಘಟನೆ ರಾಜ್ಯದ ಆತ್ಮಸಾಕ್ಷಿ ಅಲ್ಲಾಡಿಸುತ್ತದೆ: ಸುಪ್ರೀಂ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೊಸ ಮದ್ಯ ನೀತಿ ಪ್ರಕರಣದ ಕಿಂಗ್‌ಪಿನ್ ಸರದಿಯೂ ಬರಲಿದೆ; ದೆಹಲಿ ಸಿಎಂಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟ ಅನುರಾಗ್ ಠಾಕೂರ್

    ಹೊಸ ಮದ್ಯ ನೀತಿ ಪ್ರಕರಣದ ಕಿಂಗ್‌ಪಿನ್ ಸರದಿಯೂ ಬರಲಿದೆ; ದೆಹಲಿ ಸಿಎಂಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟ ಅನುರಾಗ್ ಠಾಕೂರ್

    ನವದೆಹಲಿ: ದೆಹಲಿ ಹೊಸ ಮದ್ಯ ನೀತಿ ಪ್ರಕರಣದಲ್ಲಿ (Delhi Liquor Policy Case) ಡಿಸಿಎಂ ಮನೀಶ್ ಸಿಸೊಡಿಯಾ ಸೇರಿ‌ ಹಲವು ನಾಯಕರು ಬಂಧನಕ್ಕೊಳಪಟ್ಟಿದ್ದಾರೆ. ಪ್ರಕರಣದ ಕಿಂಗ್‌ಪಿನ್ ಇನ್ನೂ ಹೊರಗಿದ್ದು ಅವರ ಸರದಿಯೂ ಬರಲಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ವಾಗ್ದಾಳಿ ನಡೆಸಿದ್ದಾರೆ. ತಮ್ಮ ಹೇಳಿಕೆಯಲ್ಲಿ ಪರೋಕ್ಷವಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಟಾರ್ಗೆಟ್‌ ಮಾಡಿದ್ದಾರೆ.

    ಛತ್ತೀಸ್‌ಗಢದ ರಾಯ್‌ಪುರದಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಠಾಕೂರ್, ಭ್ರಷ್ಟಾಚಾರದ ವಿರುದ್ಧ ಭಾರತ ಎನ್ನುವ ಘೋಷಣೆಯ ಮೇಲೆ ಅಧಿಕಾರಕ್ಕೆ ಬಂದವರು ಈಗ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದು ಎಎಪಿಯನ್ನ (AAP) ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: Bigg Boss Kannada 10: ದೊಡ್ಮನೆಗೆ ಜಗ್ಗೇಶ್ ಎಂಟ್ರಿ: ನಟ ಹೇಳಿದ್ದೇನು?

    ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿಕೆ ನೋಡಿ ಜನರು ನಗುತ್ತಿದ್ದಾರೆ. ಇದೇ ವ್ಯಕ್ತಿಗಳು ಆರಂಭದಲ್ಲಿ ಭ್ರಷ್ಟಾಚಾರದ ವಿರುದ್ಧ ಭಾರತ ಎಂಬ ಘೋಷಣೆಯನ್ನು ಪ್ರತಿಪಾದಿಸಿದ್ದರು. ಆದರೀಗ ಅದೇ ಭ್ರಷ್ಟ ಅಭ್ಯಾಸಗಳಲ್ಲಿ ಸಿಲುಕಿಕೊಂಡಿದ್ದಾರೆ. ಪಂಜಾಬ್‌ನಲ್ಲಿ, ಆಪ್‌ ಅಧಿಕಾರಕ್ಕೆ ಬಂದಿತು, ಆದರೆ  ಎರಡು ತಿಂಗಳೊಳಗೆ ರಾಜ್ಯದ ಆರೋಗ್ಯ ಸಚಿವರು ಭ್ರಷ್ಟಾಚಾರದ ಕಾರಣದಿಂದ ಕೆಳಗಿಳಿಯಬೇಕಾಯಿತು ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಇಸ್ಪೀಟ್ ಅಡ್ಡೆಯ ಮೇಲೆ ದಾಳಿ – 1.78 ಲಕ್ಷ ರೂ. ಜಪ್ತಿ

    ಕೇಜ್ರಿವಾಲ್ ಅವರು ತಮ್ಮ ಖ್ಯಾತಿಗೆ ಕಳಂಕ ತಂದಿರುವ ಮದ್ಯದ ಹಗರಣದ ಬಗ್ಗೆ ವಿವರಣೆ ನೀಡಲು ವಿಫಲರಾಗಿದ್ದಾರೆ. ದೆಹಲಿಯ ಉಪಮುಖ್ಯಮಂತ್ರಿ ಮತ್ತು ಇತರರು ಜೈಲುವಾಸದಲ್ಲಿದ್ದಾಗ, ಅದರ ಹಿಂದಿನ ಮಾಸ್ಟರ್ ಮೈಂಡ್ ತಲೆಮರೆಸಿಕೊಂಡಿದ್ದಾರೆ. ತನಿಖೆ ನಡೆಯುತ್ತಿದೆ ಮತ್ತು ಮಾಸ್ಟರ್ ಮೈಂಡ್ ಕೂಡ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಠಾಕೂರ್ ಪರೋಕ್ಷವಾಗಿ ಕೇಜ್ರಿವಾಲ್ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿ ಸೂಚನೆ ನೀಡಿದರೆ ಸಿಬಿಐ ನನ್ನನ್ನು ಬಂಧಿಸಬಹುದು: ಅರವಿಂದ್ ಕೇಜ್ರಿವಾಲ್

    ಬಿಜೆಪಿ ಸೂಚನೆ ನೀಡಿದರೆ ಸಿಬಿಐ ನನ್ನನ್ನು ಬಂಧಿಸಬಹುದು: ಅರವಿಂದ್ ಕೇಜ್ರಿವಾಲ್

    ನವದೆಹಲಿ: ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ (CBI) ವಿಚಾರಣೆಗೆ ಮುನ್ನ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ತಮ್ಮನ್ನು ಬಂಧಿಸುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

    ಭಾರತೀಯ ಜನತಾ ಪಕ್ಷ (BJP) ಸೂಚನೆ ನೀಡಿದರೆ ಸಿಬಿಐ ನನ್ನನ್ನು ಬಂಧಿಸುವ ಸಾಧ್ಯತೆಯಿದೆ. ಕೆಲವು ಬಿಜೆಪಿ ನಾಯಕರು ನನ್ನನ್ನು ಬಂಧಿಸುವ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಆಪ್ (AAP) ನಾಯಕ ಹೇಳಿದ್ದಾರೆ.

    ಬಿಜೆಪಿಗರು ಅತ್ಯಂತ ಶಕ್ತಿಶಾಲಿಗಳು. ಅವರು ಯಾರನ್ನು ಬೇಕಾದರೂ ಜೈಲಿಗೆ ಕಳುಹಿಸಬಹುದು. ಅವರು ಅಮಾಯಕರು ಎಂಬುವುದನ್ನು ಕೂಡಾ ನೋಡುವುದಿಲ್ಲ ಎಂದು ಕೇಜ್ರಿವಾಲ್ ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಾಳೆ ಬೀದರ್‌ಗೆ ರಾಹುಲ್ ಗಾಂಧಿ ಎಂಟ್ರಿ

    ಶುಕ್ರವಾರವೂ ಬಿಜೆಪಿಯನ್ನು ಟೀಕಿಸಿರುವ ಕೇಜ್ರಿವಾಲ್, ಮದ್ಯ ನೀತಿ ಹಗರಣ ನಡೆದಿಲ್ಲ. ಬಿಜೆಪಿಯವರು ದುರಹಂಕಾರಿಗಳು. ಅವರು ಯಾರನ್ನೂ ಅರ್ಥಮಾಡಿಕೊಳ್ಳುವುದಿಲ್ಲ. ಯಾರಿಗೆ ಬೇಕಾದರೂ ಬೆದರಿಕೆ ಹಾಕಬಲ್ಲರು. ಅವರು ನ್ಯಾಯಾಧೀಶರು, ಮಾಧ್ಯಮಗಳು ಮತ್ತು ಕೈಗಾರಿಕೋದ್ಯಮಿಗಳಿಗೂ ಬೆದರಿಕೆ ಹಾಕುತ್ತಾರೆ ಎಂದು ಹೇಳಿದ್ದಾರೆ.

    ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿಂತೆ ವಿಚಾರಣೆಗೆ ಕೇಜ್ರಿವಾಲ್ ಅವರು ಭಾನುವಾರ ಸಿಬಿಐ ಕಚೇರಿಗೆ ತೆರಳಿದ್ದಾರೆ. ಫೆಬ್ರವರಿ 26ರಂದು ಸಿಬಿಐ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿತ್ತು. ಇದನ್ನೂ ಓದಿ: ಅತಿಕ್, ಅಶ್ರಫ್ ಹತ್ಯೆ – ಮೂವರು ಹಂತಕರ ಬಂಧನ, ಯುಪಿಯಲ್ಲಿ ಹೈ ಅಲರ್ಟ್

  • ನನಗೆ AAP ತೊರೆಯುವಂತೆ ಒತ್ತಡ ಹೇರಿದ್ದಾರೆ – ಸಿಸೋಡಿಯಾ ಆರೋಪ, CBI ಪ್ರತಿಕ್ರಿಯೆ

    ನನಗೆ AAP ತೊರೆಯುವಂತೆ ಒತ್ತಡ ಹೇರಿದ್ದಾರೆ – ಸಿಸೋಡಿಯಾ ಆರೋಪ, CBI ಪ್ರತಿಕ್ರಿಯೆ

    ನವದೆಹಲಿ: ದೆಹಲಿಯ (Delhi) ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರು ಸೋಮವಾರ ಕೇಂದ್ರೀಯ ತನಿಖಾ ದಳದ (CBI) 9 ಗಂಟೆಗಳ ವಿಚಾರಣೆಯ ಬಳಿಕ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ದೆಹಲಿ ಸರ್ಕಾರದ ವಿವಾದಿತ ಮದ್ಯ ನೀತಿಯ (Liquor Policy Case) ಬಗ್ಗೆ ಪ್ರಶ್ನಿಸಬೇಕಿದ್ದ ಅಧಿಕಾರಿಗಳು ನನಗೆ ಆಡಳಿತಾರೂಢ ಆಮ್ ಆದ್ಮಿ ಪಕ್ಷವನ್ನು (AAP) ತೊರೆಯುವಂತೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ.

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿ ಮೇ ತಿಂಗಳಿನಿಂದ ಜೈಲಿನಲ್ಲಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರ ಪ್ರಕರಣದಂತೆಯೇ ನಿಮ್ಮ ಪ್ರಕರಣವೂ ಆಗಬಹುದು ಎಂದು ಅಧಿಕಾರಿಗಳು ಬೆದರಿಕೆ ಹಾಕಿದ್ದಾರೆ ಎಂದು ಸಿಸೋಡಿಯಾ ಮಾಧ್ಯಮಗಳೊಂದಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು, ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ- ಇಬ್ಬರು ಸ್ಥಳೀಯೇತರ ಕಾರ್ಮಿಕರು ಬಲಿ

    ಆದರೆ ಸಿಬಿಐ ಈ ಆರೋಪಗಳನ್ನು ಬಲವಾಗಿ ತಳ್ಳಿಹಾಕಿದೆ. ಎಫ್‌ಐಆರ್‌ನಲ್ಲಿರುವ ಅವರ ವಿರುದ್ಧದ ಆರೋಪಗಳ ಪ್ರಕಾರವೇ ಸಿಸೋಡಿಯಾ ಅವರಿಗೆ ಕಾನೂನು ರೀತಿಯಲ್ಲಿ ವಿಚಾರಣೆ ನಡೆಸಲಾಗಿದೆ. ಪ್ರಕರಣದ ತನಿಖೆ ಕಾನೂನಿನ ಪ್ರಕಾರವೇ ಮುಂದುವರಿಯುತ್ತದೆ ಎಂದು ಹೇಳಿದೆ.

    ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಭಾನುವಾರ ಮನೀಶ್ ಸಿಸೋಡಿಯಾಗೆ ಸೋಮವಾರ ವಿಚಾರಣೆ ಹಾಜರಾಗುವಂತೆ ಸಮನ್ಸ್ ನೀಡಿತ್ತು. ಅದರಂತೆ ನಿನ್ನೆ ಮಧ್ಯಾಹ್ನ ಪ್ರಾರಂಭವಾದ ಸಿಬಿಐ ವಿಚಾರಣೆ 9 ಗಂಟೆಗಳವರೆಗೆ ನಡೆದಿದೆ. ಇದನ್ನೂ ಓದಿ: ಬೆಂಗಳೂರು ಗುಂಡಿಗೆ ಮಹಿಳೆ ಬಲಿ – KSRTC ಡ್ರೈವರ್‌ ಅರೆಸ್ಟ್‌

    Live Tv
    [brid partner=56869869 player=32851 video=960834 autoplay=true]