Tag: Liquor Price

  • ಪ್ರೀಮಿಯಂ ಬ್ರ‍್ಯಾಂಡ್‌ಗಳ ಮದ್ಯದ ದರ ಇಳಿಕೆ ಮಾಡೋ ಚಿಂತನೆ ಇದೆ – ಆರ್.ಬಿ ತಿಮ್ಮಾಪುರ್

    ಪ್ರೀಮಿಯಂ ಬ್ರ‍್ಯಾಂಡ್‌ಗಳ ಮದ್ಯದ ದರ ಇಳಿಕೆ ಮಾಡೋ ಚಿಂತನೆ ಇದೆ – ಆರ್.ಬಿ ತಿಮ್ಮಾಪುರ್

    ಬೆಂಗಳೂರು: ಅಬಕಾರಿ ಇಲಾಖೆಯ (Excise Department) ಆದಾಯವು ಎರಡು ತ್ರೈಮಾಸಿಕದಲ್ಲಿ ನಿರೀಕ್ಷೆ ಮೀರಿ ಸಂಗ್ರಹವಾಗಿದೆ. ಜೊತೆಗೆ ಪ್ರೀಮಿಯಂ ಬ್ರ‍್ಯಾಂಡ್ ಮದ್ಯದ ದರ ಇಳಿಕೆ ಮಾಡುವ ಚಿಂತನೆ ಇದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ (RB Timmapur) ತಿಳಿಸಿದರು.

    ವಿಧಾನಸೌಧದಲ್ಲಿ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಬಕಾರಿ ಇಲಾಖೆಯಿಂದ ಆದಾಯದ ನಿರೀಕ್ಷೆ ಇರುತ್ತದೆ. ಎರಡು ತ್ರೈಮಾಸಿಕದಲ್ಲಿ ನಮ್ಮ ಆದಾಯ ನಿರೀಕ್ಷೆಗೂ ಮೀರಿ ಸಂಗ್ರಹವಾಗಿದೆ. 2 ತ್ರೈಮಾಸಿಕದಲ್ಲಿ ನಮ್ಮ ನಿರೀಕ್ಷೆ 16,290 ಕೋಟಿ ರೂ. ಇತ್ತು. ಆದರೆ ಈಗ 16,358.76 ಕೋಟಿ ರೂ. ಸಂಗ್ರಹವಾಗಿದೆ. ನಿರೀಕ್ಷೆ ಮೀರಿ 142% ಜಾಸ್ತಿ ಸಂಗ್ರಹ ಆಗಿದೆ ಎಂದರು.ಇದನ್ನೂ ಓದಿ: ತಲೆಬುರುಡೆ ರಹಸ್ಯ | ಶೀಘ್ರದಲ್ಲೇ ಎಲ್ಲದಕ್ಕೂ ಕ್ಲ್ಯಾರಿಟಿ ಕೊಡ್ತೀನಿ: ಯೂಟ್ಯೂಬರ್ ಸಮೀರ್ ಫಸ್ಟ್ ರಿಯಾಕ್ಷನ್

    ನಮ್ಮ ಇಲಾಖೆಯಲ್ಲಿ ಹೊಸ ಹೊಸ ಬದಲಾವಣೆ ತರಲಾಗಿದೆ. ಮೊದಲ ಬಾರಿಗೆ ಅಬಕಾರಿ ಹುದ್ದೆಗಳ ನೇಮಕ ಕೌನ್ಸಿಲಿಂಗ್ ಮೂಲಕ ಮಾಡಲಾಗ್ತಿದೆ. ಲೈಸೆನ್ಸ್‌ನ್ನು ಪ್ರತಿ ವರ್ಷ ನವೀಕರಣ ಮಾಡಬೇಕಿತ್ತು. ಆದರೆ ಈಗ ಇದನ್ನ 5 ವರ್ಷಕ್ಕೆ ಮಾಡಿದ್ದೇವೆ. CL-7 ಪರ್ಮಿಷನ್‌ಗೆ ಕಾಲಾವಕಾಶ ಬೇಕಿತ್ತು. ಆದರೆ ಈಗ ಇದರಲ್ಲಿ ಕೆಲವು ಬದಲಾವಣೆ ಮಾಡಿ ಆದಷ್ಟು ಬೇಗ ಅನುಮತಿ ಕೊಡುವ ಕೆಲಸ ಮಾಡ್ತಿದ್ದೇವೆ. ಡ್ರಗ್ಸ್, ಗಾಂಜಾ ಹಾವಳಿ ತಡೆಯಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡ್ತಿದ್ದಾರೆ ಎಂದು ಹೇಳಿದರು.

    CL2/CL9 ಅನುಮತಿ ಕೊಡಲು ನಿಯಮ ಬದಲಾವಣೆ ಮಾಡಿ, ಹರಾಜು ಮೂಲಕ ಕೊಡುವ ನಿರ್ಧಾರ ಮಾಡಲಾಗಿದೆ. 571 ಹರಾಜು ಹಾಕಿ ಅನುಮತಿ ಕೊಡ್ತೀವಿ. ಆದಷ್ಟೂ ಬೇಗ ಈ ಪ್ರತಿಕ್ರಿಯೆ ಮಾಡ್ತೀವಿ. ಜನಸಂಖ್ಯೆ ಅನುಗುಣವಾಗಿ ಜಾಸ್ತಿ ಅನುಮತಿ ಕೊಡುವ ಕೆಲಸ ಮಾಡ್ತೀವಿ ಎಂದು ಮಾಹಿತಿ ನೀಡಿದರು.ಇದನ್ನೂ ಓದಿ: ಪಕ್ಷ ವಿರೋಧಿ ಚಟುವಟಿಕೆ; ಪುತ್ರಿ ಕವಿತಾರನ್ನೇ ಪಕ್ಷದಿಂದ ಹೊರಹಾಕಿದ ಕೆಸಿಆರ್‌

    ನಮ್ಮ ಸಂಘಗಳಿಗೆ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಳ್ತೀವಿ. ನಮಗೆ ಆದಾಯ ಕಡಿಮೆ ಆಗಬಾರದು. ಆನ್‌ಲೈನ್ ಅರ್ಜಿಗೂ ಕೂಡ ವ್ಯವಸ್ಥೆ ಮಾಡಿದ್ದೇವೆ. ನಕಲಿ ಮದ್ಯ ಮಾರಾಟ, ಗೋವಾ ಡ್ರಿಂಕ್ಸ್ ಮಾರಾಟ ಮಾಡ್ತಾರೆ. ಹೀಗಾಗಿ ಈ ಬಗ್ಗೆ ನಿಗಾ ಇಡಲಾಗಿದೆ. ನಮ್ಮ ಮದ್ಯ ಸ್ಲ್ಯಾಬ್ 5ರ ಮೇಲಿನ ಪ್ರೀಮಿಯಂ ಬ್ರ‍್ಯಾಂಡ್ ಮೇಲೆ ದರ ಜಾಸ್ತಿ ಇದೆ. ಹೊಸ ಎಂಎಸ್‌ಐಎಲ್ ಮಳಿಗೆ ಕೊಡುವುದಿಲ್ಲ. ಇರುವ ಮಳಿಗೆ ಹರಾಜು ಹಾಕಿ ಕೊಡ್ತೀವಿ ಅಷ್ಟೇ ಎಂದು ಸ್ಪಷ್ಟಪಡಿಸಿದರು.

    ಪ್ರೀಮಿಯಂ ಬ್ರ‍್ಯಾಂಡ್‌ಗಳ ಮದ್ಯದ ದರ ಕಡಿಮೆ ಮಾಡೋ ಬಗ್ಗೆ ಚಿಂತನೆ ಇದೆ. ಸದ್ಯಕ್ಕೆ ಈಗಲೇ ಆಗುವುದಿಲ್ಲ. ಅಕ್ಕ ಪಕ್ಕದ ರಾಜ್ಯಗಳ ವಿವರ ನೋಡಿ, ಮುಂದಿನ ದಿನಗಳಲ್ಲಿ ನಾವು ಈ ಬಗ್ಗೆ ತೀರ್ಮಾನ ಮಾಡ್ತೀವಿ. ಅಬಕಾರಿ ಇಲಾಖೆಯಲ್ಲಿ ಯಾರು ತರದ ಬದಲಾವಣೆ ಮಾಡ್ತೀನಿ, ಇದು ತಿಮ್ಮಾಪುರ್ ಸ್ಟೈಲ್ ಎಂದರು.ಇದನ್ನೂ ಓದಿ: ಚಿಕ್ಕಮಗಳೂರು | ಗಣೇಶ ಉತ್ಸವದಲ್ಲಿ ಡ್ಯಾನ್ಸ್ ಮಾಡ್ತಿದ್ದ ಯುವತಿಯರ ಮೇಲೆ ನೋಟು ತೂರಿ ದರ್ಪ

  • ಕರ್ನಾಟಕಕ್ಕಿಂತ ಕಡಿಮೆ – ಆಂಧ್ರದಲ್ಲಿ ಮದ್ಯದ ದರ ಭಾರೀ ಇಳಿಕೆ

    ಕರ್ನಾಟಕಕ್ಕಿಂತ ಕಡಿಮೆ – ಆಂಧ್ರದಲ್ಲಿ ಮದ್ಯದ ದರ ಭಾರೀ ಇಳಿಕೆ

    – ಗ್ರಾಹಕರಿಗೆ ಮಾಸಿಕ 116 ಕೋಟಿ ರೂ. ಉಳಿತಾಯ

    ಅಮರಾವತಿ: ಕರ್ನಾಟಕದಲ್ಲಿ (Karnataka) ಅಬಕಾರಿ ತೆರಿಗೆ ಸಂಗ್ರಹಕ್ಕೆ ಮದ್ಯದ ದರ ಏರಿಕೆ ಮಾಡುತ್ತಿದ್ದರೆ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರವು (Andhra Pradesh) ಇದೇ ಮೊದಲ ಬಾರಿ ಮದ್ಯದ ದರ ಇಳಿಸಿದ್ದು, ಪ್ರತಿ ಬಾಟಲ್‌ಗೆ 10 ರೂ.ಯಿಂದ 100 ರೂ.ವರೆಗೆ ಕಡಿತಗೊಳಿಸಿದೆ. ಈ ಮೂಲಕ ರಾಜ್ಯದಲ್ಲಿ ಮದ್ಯ ಗ್ರಾಹಕರಿಗೆ ಪ್ರತಿ ತಿಂಗಳು 116 ಕೋಟಿ ರೂ. ಉಳಿತಾಯ ಆಗಲಿದೆ.

    ಈ ಕುರಿತು ಅಧಿಕಾರಿಗಳ ಜೊತೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಚಂದ್ರಬಾಬು ನಾಯ್ಡು (Chandrababu Naidu), ಮದ್ಯ ನೀತಿಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಂಡು, ಕೈಗೆಟುಕುವ ದರದಲ್ಲಿ ಅದನ್ನು ಪೂರೈಕೆ ಮಾಡಿ. ಜೊತೆಗೆ ನಕಲಿ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಸೂಚಿಸಿದ್ದಾರೆ. ಈ ಹೊಸ ನೀತಿಯಿಂದ ರಾಜ್ಯದ ಆದಾಯ ಹೆಚ್ಚುವ ನಿರೀಕ್ಷೆಯಿದೆ ಎಂದಿದ್ದಾರೆ.ಇದನ್ನೂ ಓದಿ: ಶೈನ್ ಶೆಟ್ಟಿ, ಅಂಕಿತ ಅಮರ್ ಚಿತ್ರಕ್ಕೆ ಸೆನ್ಸಾರ್ ಅಸ್ತು

    ಇದೇ ವೇಳೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಗುಣಮಟ್ಟದ ಬ್ರ‍್ಯಾಂಡ್‌ಗಳನ್ನು ಮಾತ್ರ ರಾಜ್ಯಕ್ಕೆ ಅನುಮತಿಸುವಂತೆ ಮತ್ತು ಸುಂಕ ಪಾವತಿಸದ, ಅಕ್ರಮ ಅಥವಾ ನಕಲಿ ಮದ್ಯದ ಮಾರಾಟವನ್ನು ನಿಷೇಧಿಸುವಂತೆ ಹಾಗೂ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವಂತೆ ತಿಳಿಸಿದರು.

    ಈ ಮೂಲಕ ಆಂಧ್ರಪ್ರದೇಶದಲ್ಲಿ 30 ಬ್ರಾಂಡ್‌ಗಳ ಬೆಲೆಯು ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡಿನ ಬೆಲೆಗಳಿಗಿಂತ ಕಡಿಮೆಯಾಗಿದೆ. ಪ್ರವಾಸಿ ತಾಣಗಳಲ್ಲಿ ದುರುಪಯೋಗವನ್ನು ತಡೆಗಟ್ಟಲು ಪರವಾನಗಿ ಇಲ್ಲದ ಅಂಗಡಿಗಳನ್ನು ನಿಷೇಧಿಸುವಂತೆ, ಡಿಜಿಟಲ್ ಪಾವತಿ, ಎಐ ಆಧಾರಿತ ಟ್ರ‍್ಯಾಕಿಂಗ್ ಜಾರಿಗೊಳಿಸಲು ನಿರ್ದೇಶನ ನೀಡಿದ್ದಾರೆ.ಇದನ್ನೂ ಓದಿ: ಬೆನ್ನಿ ಸಿನಿಮಾ ಮೂಲಕ ಜಿಂಕೆ ಮರಿ ಶ್ವೇತಾ ಸ್ಯಾಂಡಲ್‌ವುಡ್‌ಗೆ ಕಂಬ್ಯಾಕ್

  • ಬಿಯರ್ ಪ್ರಿಯರಿಗೆ ಮತ್ತೆ ಶಾಕ್ – ಅಕ್ಟೋಬರ್ 1ರಿಂದಲೇ ಪರಿಷ್ಕೃತ ದರ ಜಾರಿಗೆ ಸಾಧ್ಯತೆ!

    ಬಿಯರ್ ಪ್ರಿಯರಿಗೆ ಮತ್ತೆ ಶಾಕ್ – ಅಕ್ಟೋಬರ್ 1ರಿಂದಲೇ ಪರಿಷ್ಕೃತ ದರ ಜಾರಿಗೆ ಸಾಧ್ಯತೆ!

    ಬೆಂಗಳೂರು: ಒಂದೇ ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದ ಸರ್ಕಾರ ಈಗ ಮತ್ತೊಮ್ಮೆ ಶಾಕ್ ಕೊಡಲು ಮುಂದಾಗಿದೆ. ಅಕ್ಟೋಬರ್ ಮೊದಲ ವಾರದಿಂದಲೇ ಮತ್ತೆ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

    ಈಗಾಗಲೇ ಒಂದು ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ದರ ಏರಿಕೆ (Liquor Price Increase) ಮಾಡಿ ಸರ್ಕಾರ ಶಾಕ್ ನೀಡಿತ್ತು. ಇದೀಗ ಮತ್ತೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ.ಇದನ್ನೂ ಓದಿ: ಸಿಖ್ಖರ ಅವಹೇಳನ ಆರೋಪ – ಚಂಡೀಗಢ ಕೋರ್ಟ್‌ನಿಂದ ಕಂಗನಾಗೆ ʻಎಮರ್ಜೆನ್ಸಿʼ ನೋಟಿಸ್‌!

    ಹೌದು. 2023ರ ಜುಲೈನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯನವರು (CM Siddaramaiah) ಐಎಂಎಲ್ ಮೇಲೆ ಶೇ.20 ಮತ್ತು ಬಿಯರ್ ಮೇಲೆ ಶೇ.10 ಅಬಕಾರಿ ಸುಂಕ ಹೆಚ್ಚಿಸಿದ್ದರು. ಇದಕ್ಕೂ ಮುನ್ನ ರಾಜ್ಯದಲ್ಲಿ ತಯಾರಿಸಲಾದ ಅಥವಾ ಆಮದು ಮಾಡಿಕೊಳ್ಳುವ ಬಿಯರ್ ಬಾಟಲ್ ಮೇಲೆ ಹೆಚ್ಚವರಿ ಅಬಕಾರಿ ಸುಂಕವನ್ನು ಶೇ.10ರಷ್ಟು ಹೆಚ್ಚಿಸಲಾಗಿತ್ತು.

    ಈಗ ಮತ್ತೊಮ್ಮೆ ಬಿಯರ್ ಬೆಲೆ ಏರಿಕೆ ಬಗ್ಗೆ ಅಬಕಾರಿ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸರ್ಕಾರ ಅಸ್ತು ಅಂದಿದ್ದು, ಅ.1 ರಿಂದ ಬೆಲೆ ಏರಿಕೆಯಾಗುವ ಸಾಧ್ಯತೆ ಖಚಿತವಾದಂತಿದೆ. ಕಳೆದ ಆ.29ರಿಂದ ಪ್ರೀಮಿಯಂ, ಸೆಮಿ ಪ್ರೀಮಿಯಂ ಮದ್ಯದ ದರ ಇಳಿಸಿದ ಬೆನ್ನಲ್ಲೇ ಬಿಯರ್ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದ್ದು, ಅ.1ರಿಂದ ಹೊಸ ದರಗಳು ಪರಿಷ್ಕರಣೆಗೊಳ್ಳುವ ಸಾಧ್ಯತೆ ಇದೆ.

    ಇನ್ನೂ ಸರ್ಕಾರದ ನಿರ್ಧಾರಕ್ಕೆ ಬಾರ್ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ. ಒಂದೂವರೆ ವರ್ಷದಲ್ಲಿ ಮೂರನೇ ಬಾರಿಗೆ ದರ ಪರಿಷ್ಕರಣೆಯಾಗುತ್ತಿದೆ. ರಾಜ್ಯದಲ್ಲಿ ಬಿಯರ್ ಮಾರಾಟ ಹೆಚ್ಚಾಗಿದೆ. ಈ ಮಧ್ಯೆ ಸರ್ಕಾರ ಸುಂಕ ಹೆಚ್ಚಳ ಮಾಡಿದರೆ ಗ್ರಾಹಕರ ಜೊತೆಗೆ ಮಾರಾಟಗಾರರಿಗೂ ಹೊಡೆತ ಬೀಳಲಿದೆ. ಸರ್ಕಾರ ಏರಿಕೆ ಬದಲು ದರ ಇಳಿಕೆ ಬಗ್ಗೆ ಯೋಚನೆ ಮಾಡಿದರೆ ಹೆಚ್ಚು ಮಾರಾಟವಾಗಲಿದೆ. ಈ ಮೂಲಕ ಸರ್ಕಾರ ಮತ್ತು ಮಾಲೀಕರಿಗೆ ಅನೂಕೂಲವಾಗಲಿದೆ ಎನ್ನುತ್ತಿದ್ದಾರೆ.

    ಯಾವ್ಯಾವ ಬಿಯರ್ ಬೆಲೆ ಎಷ್ಟಾಗಬಹುದು…?

    ಬಿಯರ್                              ಈಗಿನದರ                ಪರಿಷ್ಕೃತ ದರ ಸಾಧ್ಯತೆ

    ಬೂಮ್ ಸ್ಟ್ರಾಂಗ್                      163                           172/175
    ಬಡ್ವೈಸರ್ ಮ್ಯಾಗ್ನಮ್                                                213/230
    ಬಡ್ವೈಸರ್ ಪ್ರಿಮಿಯಂ              200                             215
    ಕೆಎಫ್ ಪ್ರಿಮಿಯಂ                   168                              180
    ಕೆಎಫ್ ಸ್ಟ್ರೋಮ್                    177                              187
    ಕೆಎಫ್ ಸ್ಟ್ರಾಂಗ್                      168                             180
    ಕೆಎಫ್ ಅಲ್ಟ್ರಾ                        199                              220
    ಟ್ಯುಬರ್ಗ್ ಸ್ಟ್ರಾಂಗ್                   168                            180
    ಯುಬಿ ಪ್ರಿಮೀಯಂ                   131                              143
    ಯುಬಿ ಸ್ಟ್ರಾಂಗ್                       131                               142

    ಇಷ್ಟೇ ಅಲ್ಲದೆ ಇನ್ನುಳಿದ ಬ್ರ‍್ಯಾಂಡ್‌ಗಳ ಮೇಲೂ ಸುಮಾರು 10 ರಿಂದ 20 ರೂ.ವರೆಗೂ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಅಕ್ಟೋಬರ್ ಮೊದಲ ವಾರವೇ ಹೊಸ ದರಗಳು ಪರಿಷ್ಕರಣೆಗೊಳ್ಳುವ ಸಾಧ್ಯತೆ ಇದೆ.ಇದನ್ನೂ ಓದಿ: PUBLiC TV Impact | ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ BMRCLಗೆ ಮಹಿಳಾ ಆಯೋಗ ಪತ್ರ

  • ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ – ಇಂದಿನಿಂದ ಮದ್ಯದ ದರ ಇಳಿಕೆ

    ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ – ಇಂದಿನಿಂದ ಮದ್ಯದ ದರ ಇಳಿಕೆ

    ಬೆಂಗಳೂರು: ರಾಜ್ಯದ ಮದ್ಯಪ್ರಿಯರಿಗೆ ಗುಡ್ ಇದು ನ್ಯೂಸ್. ಇಂದಿನಿಂದ ಮದ್ಯ ದರ (Liquor Price) ಇಳಿಕೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್‌ಗಳ (Premium Brand) ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.

    ಭಾರತದಲ್ಲಿ (India) ತಯಾರಿಸಿರುವ ಮದ್ಯದ ಅಬಕಾರಿ ಸುಂಕದ (Excise Duty) ಸ್ಲ್ಯಾಬ್‌ಗಳ ಸಂಖ್ಯೆಯನ್ನು ಇತರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿ ಮದ್ಯದ ದರದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಾಸವಾಗಲಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಇದನ್ನೂ ಓದಿ: 1 ವರ್ಷದಿಂದ ಸವಾಲಿನ ಮೇಲೆ ಸವಾಲು – ಪರಮೇಶ್ವರ್ ಇಮೇಜ್‌ಗೆ ಧಕ್ಕೆ ಮತ್ತೆ ಮುಜುಗರ

    ಈಗಾಗಲೇ ಕರಡು ಅಧಿಸೂಚನೆ ಹೊರಡಿಸಿ ಒಂದೂವರೆ ತಿಂಗಳಾದರೂ ಅಂತಿಮಗೊಳಿಸದ ಕಾರಣ ಮಾರುಕಟ್ಟೆಯಲ್ಲಿ ಪ್ರೀಮಿಯಂ ಬ್ರಾಂಡ್‌ಗಳ ಮದ್ಯಕ್ಕೆ ಭಾರಿ ಕೊರತೆ ಉಂಟಾಗಿತ್ತು. ಇದೀಗ ಅಂತಿಮ ಅಧಿಸೂಚನೆಯಂತೆ ಸ್ಲ್ಯಾಬ್‌ಗಳ (Slab) ಸಂಖ್ಯೆ 18 ರಿಂದ 16ಕ್ಕೆ ಇಳಿಸಲಾಗಿದೆ. ಆದರೆ ಮೊದಲ ಮೂರು ಸ್ಲ್ಯಾಬ್ ಗಳಲ್ಲಿ ದರದ ವ್ಯತ್ಯಾಸ ಆಗುವುದಿಲ್ಲ. ನಾಲ್ಕನೇ ಸ್ಲ್ಯಾಬ್ ನಲ್ಲಿ ಮದ್ಯದ ದರ ಸ್ವಲ್ಪ ಏರಿಕೆಯಾಗಲಿದೆ. ಉಳಿದಂತೆ ಐದನೇ ಸ್ಲಾಬ್ ಬಳಿಕ 16ನೇ ಸ್ಲ್ಯಾಬ್‌ವರೆಗೆ ದರ ಕಡಿಮೆಯಾಗಲಿದೆ. ಆ ಸ್ಲ್ಯಾಬ್ ಗಳಲ್ಲಿನ ವಿಸ್ಕಿ, ರಮ್, ಬ್ರಾಂಡಿಗಳ ಬೆಲೆ ಸಹಜವಾಗಿಯೇ ಕಡಿಮೆಯಾಗಲಿದೆ.

    ರಾಜ್ಯದಲ್ಲಿ ಈವರೆಗೆ 18 ಸ್ಲ್ಯಾಬ್ ಗಳಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ ವಿಧಿಸಲಾಗುತ್ತಿತ್ತು. ಈಗ ಸ್ಲ್ಯಾಬ್‌ಗಳ ಸಂಖ್ಯೆಯನ್ನು 16ಕ್ಕೆ ಇಳಿಕೆ ಮಾಡಲಾಗಿದೆ. ಪ್ರತಿ ಬಲ್ಕ್ ಲೀಟರ್ ಮದ್ಯದ ಘೋಷಿತ ಉತ್ಪಾದನಾ ದರ 449 ರೂ. ಮೊದಲ ಸ್ಲ್ಯಾಬ್‌ನಲ್ಲಿದ್ದರೆ 15 ಸಾವಿರ ರೂ.ನಿಂದ ಮೇಲಿನ ಘೋಷಿತ ದರದ ಎಲ್ಲ ಮದ್ಯಗಳನ್ನು 18ನೇ ಸ್ಲ್ಯಾಬ್‌ನಲ್ಲಿಡಲಾಗಿತ್ತು.

    ಪರಿಷ್ಕೃತ ಪಟ್ಟಿಯ ಪ್ರಕಾರ, ಪ್ರತಿ ಬಲ್ಕ್ ಲೀಟರ್‌ನ ಘೋಷಿತ ಉತ್ಪಾದನಾ ದರ 450 ರೂ. ಹೊಂದಿರುವ ಮದ್ಯ ಮೊದಲ ಸ್ಲ್ಯಾಬ್‌ನಲ್ಲಿದ್ದರೆ 20 ಸಾವಿರ ರೂ. ಮತ್ತು ಅದಕ್ಕಿಂತ ಹೆಚ್ಚಿನ ಘೋಷಿತ ಉತ್ಪಾದನಾ ದರ ಹೊಂದಿರುವ ಮದ್ಯವನ್ನು 16ನೇ ಸ್ಲ್ಯಾಬ್‌ಗೆ ಸೇರಿಸಲಾಗಿದೆ.

     

  • ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ – ಇನ್ನೆರಡು ದಿನದಲ್ಲಿ ದುಬಾರಿ ಮದ್ಯ ದರ ಇಳಿಕೆ?

    ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ – ಇನ್ನೆರಡು ದಿನದಲ್ಲಿ ದುಬಾರಿ ಮದ್ಯ ದರ ಇಳಿಕೆ?

    ಬೆಂಗಳೂರು: ನೆರೆಯ ರಾಜ್ಯಗಳ ಮದ್ಯ ಮಾರಾಟ ದರವನ್ನು (Liquor Price) ಪರಿಗಣಿಸಿ ರಾಜ್ಯದಲ್ಲೂ ದುಬಾರಿ ಮದ್ಯವನ್ನು ಅಗ್ಗದ ದರದಲ್ಲಿ ನೀಡಲು ಸರ್ಕಾರ (Karnatak Government) ಚಿಂತನೆ ನಡೆಸಿದೆ. ಅಬಕಾರಿ ಆದಾಯ ಹೆಚ್ಚಿಸಲು ಮದ್ಯದ ದರ ಇಳಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಇದರಿಂದಾಗಿ ಶೀಘ್ರದಲ್ಲೇ ಮದ್ಯ ದರ ಇಳಿಕೆಯಾಗುವ ಸಾಧ್ಯತೆ ಇದೆ.

    ನೆರೆಹೊರೆಯ ರಾಜ್ಯಕ್ಕಿಂತ ನಮ್ಮ ರಾಜ್ಯದಲ್ಲಿ ಮದ್ಯದ ದರ ಹೆಚ್ಚಿದೆ. ಹೀಗಾಗಿ ಗಡಿಭಾಗದ ಜನ ಅನ್ಯ ರಾಜ್ಯಕ್ಕೆ ತೆರಳಿ ಮದ್ಯ ಖರೀದಿ ಮಾಡುತ್ತಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ರೂ. ಹಣ ನಷ್ಟವಾಗುತ್ತಿತ್ತು. ಈ ನಷ್ಟವನ್ನು ತಪ್ಪಿಸಲು ಮದ್ಯ ದರ ಇಳಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇದನ್ನೂ ಓದಿ: MUDA Scam| ಜಮೀನಿಗೆ ಮಾರುಕಟ್ಟೆ ದರ ಒಪ್ಪದೇ ಸೈಟ್ ಪಡೆದಿದ್ದ ಸಿಎಂ ಪತ್ನಿ

    ಹೀಗಾಗಿ 16 ಸ್ಲ್ಯಾಬ್‌ಗಳ ದರ ಇಳಿಕೆಗೆ ಅಬಕಾರಿ ಇಲಾಖೆ ಮುಂದಾಗಿದ್ದು, ಸೆ.1 ರಿಂದ ರಾಜ್ಯದಲ್ಲಿ ದುಬಾರಿ ಮದ್ಯ ಕಡಿಮೆ ಬೆಲೆಗೆ ಸಿಗಲಿದೆ. ದುಬಾರಿ ಬೆಲೆಯ ಬ್ರಾಂದಿ, ವಿಸ್ಕಿ ಜಿನ್, ರಮ್ ಈ ತಿಂಗಳಲ್ಲೇ ಅಗ್ಗವಾಗಲಿದೆ. ಪ್ರತಿ ಬ್ರ್ಯಾಂಡ್ ಮದ್ಯದ ಪರಿಷ್ಕøತ ದರ ಪಟ್ಟಿ ಶುಕ್ರವಾರ (ಇಂದು) ಅಥವಾ ಶನಿವಾರ ಬಿಡುಗಡೆಯಾಗುವ ಸಂಭವವಿದೆ.

    ನೆರೆಹೊರೆಯ ರಾಜ್ಯಗಳ ಮದ್ಯ ಮಾರಾಟ ದರವನ್ನು ಪರಿಗಣಿಸಿ ಕರ್ನಾಟಕದಲ್ಲೂ ಮದ್ಯದ ದರ ಪರಿಷ್ಕರಣೆ ಮಾಡಲಾಗುವುದು ಎಂದು ಮುಖ್ಯಮಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‍ನಲ್ಲಿ ಘೋಷಿಸಿದ್ದರು. ಬಳಿಕ ಜುಲೈನಿಂದ ದರ ಹೆಚ್ಚಳ ಆಗಬೇಕಿತ್ತು, ಆದರೆ ಸಿಎಂ ಸೂಚನೆಯ ಮೇರೆಗೆ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು. ಇದನ್ನೂ ಓದಿ: ಪ್ರಾಸಿಕ್ಯೂಷನ್‌ ವಾರ್‌ – ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆಸಲು ಮುಂದಾದ ಕಾಂಗ್ರೆಸ್‌

  • ಹೊಸ ವರ್ಷಕ್ಕೆ ಪಕ್ಕದ ರಾಜ್ಯಗಳಿಂದ ಮದ್ಯ ಸರಬರಾಜು – ಹದ್ದಿನ ಕಣ್ಣಿಟ್ಟ ಅಬಕಾರಿ ಇಲಾಖೆ

    ಹೊಸ ವರ್ಷಕ್ಕೆ ಪಕ್ಕದ ರಾಜ್ಯಗಳಿಂದ ಮದ್ಯ ಸರಬರಾಜು – ಹದ್ದಿನ ಕಣ್ಣಿಟ್ಟ ಅಬಕಾರಿ ಇಲಾಖೆ

    ಕಲಬುರಗಿ: ಈ ಬಾರಿ ಹೊಸ ವರ್ಷ ಸಂಭ್ರಮಕ್ಕೆ (New Year 2024) ರಾಜ್ಯದ ಅಬಕಾರಿ ಇಲಾಖೆಯಿಂದ ಕೋಟಿ ಕೋಟಿ ತೆರಿಗೆ ಹಣದ ನಿರೀಕ್ಷೆಯಲ್ಲಿದೆ. ಆದ್ರೆ, ರಾಜ್ಯದಲ್ಲಿ ಮಧ್ಯದ ದರ ಹೆಚ್ಚಾದ (Liquor Price Hike) ಹಿನ್ನೆಲೆಯಲ್ಲಿ ನೆರೆಯ ಗೋವಾ, ತೆಲಂಗಾಣ ಹಾಗೂ ಮಹಾರಾಷ್ಟ್ರಗಳಿಂದ ಮದ್ಯ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರಿಂದ ರಾಜ್ಯ ಸರ್ಕಾರದ ಬೊಕಸಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ನಷ್ಟವಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

    2024ರ ಹೊಸ ವರ್ಷದ ಸಂಭ್ರಮವನ್ನ ಕೊಂಡಾಡಲು ಇಡೀ ದೇಶವೇ ತುದಿಗಾಲಲ್ಲಿ ನಿಂತಿದೆ. ಈ ಸಂತಸದ ಕ್ಷಣವನ್ನ ಸಂಭ್ರಮಿಸಲು ಲೆಕ್ಕವಿಲ್ಲದಷ್ಟು ಮದ್ಯ (Liquor) ಮಾರಾಟವಾಗುತ್ತೆ. ಆದ್ರೆ ರಾಜ್ಯದಲ್ಲಿ ಮದ್ಯದ ದರ ಗಣನೀಯವಾಗಿ ಏರಿಕೆಯಾದ ಹಿನ್ನೆಲೆಯಲ್ಲಿ, ಎಲ್ಲರ ಕಣ್ಣು ಪಕ್ಕದಲ್ಲಿರೋ ಗೋವಾದತ್ತ ನೆಟ್ಟಿದೆ. ಕರ್ನಾಟಕದಲ್ಲಿ ಮದ್ಯದ ದರ ದುಪ್ಪಟ್ಟಾದ ಹಿನ್ನೆಲೆ ನೆರೆಯ ರಾಜ್ಯಗಳಿಂದ ಮದ್ಯ ಆಮದು ಮಾಡಿಕೊಳ್ಳುವ ತಯಾರಿ ನಡೆದಿದೆ. ಇದನ್ನೂ ಓದಿ: ರಾಜ್ಯಾದ್ಯಂತ ʻಕಾಟೇರʼ ದರ್ಶನ – ಮುಗಿಲು ಮುಟ್ಟಿದ ಡಿಬಾಸ್‌ ಅಭಿಮಾನಿಗಳ ಸಂಭ್ರಮ

    ಗೋವಾದಿಂದ ಅಕ್ರಮವಾಗಿ ಕಲಬುರಗಿಗೆ ಮದ್ಯ ಸಾಗಿಸುತ್ತಿದ್ದ ವೇಳೆ ಖಾಸಗಿ ಬಸ್ ಮೇಲೆ ಕಲಬುರಗಿ ಜಿಲ್ಲಾ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 48 ಲೀಟರ್ ಮದ್ಯ ಸೀಜ್ ಮಾಡಿದ್ದಾರೆ. ಇದರೊಂದಿಗೆ 51 ಲಕ್ಷ ರೂ. ಮೌಲ್ಯದ ಒಂದು ಖಾಸಗಿ ಬಸ್ ಹಾಗೂ 2 ಬೈಕ್ ಸೀಜ್ ಮಾಡಿದ್ದಾರೆ. ಅಲ್ಲದೇ 6 ಜನರನ್ನ ಬಂಧಿಸಿದ್ದು, 2 ಬೈಕ್‌ಗಳನ್ನೂ ಸೀಜ್ ಮಾಡಲಾಗಿದೆ. ಪಣಜಿಯಿಂದ ಬರುತ್ತಿದ್ದ ಖಾಸಗಿ ಬಸ್‌ನ ವಿವಿಧೆಡೆ ಮದ್ಯದ ಬಾಟಲಿಗಳನ್ನ ಇಡಲಾಗಿತ್ತು. ಬಸ್ ಕಲಬುರಗಿ ಗಡಿಗೆ ಎಂಟ್ರಿ ಕೊಡುತ್ತಿದ್ದಂತೆ ಅಲರ್ಟ್ ಆದ ಕಲಬುರಗಿ ಅಬಕಾರಿ ಪೊಲೀಸರು, ಇಡೀ ಬಸ್ ಜಾಲಾಡಿದ್ದಾರೆ. ಈ ವೇಳೆ ನೂರಾರು ಬಾಟಲ್‌ಗಳು ಅಬಕಾರಿ ಪೊಲೀಸರ ಕೈಗೆ ಸಿಕ್ಕಿವೆ.

    ನೆರೆ ರಾಜ್ಯ ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕಡಿಮೆ ಬೆಲೆಗೆ ಮದ್ಯ ಸಿಗುತ್ತೆ. ಹೀಗಾಗಿ ನ್ಯೂ ಇಯರ್ ಸೆಲಬ್ರೇಷನ್‌ಗಾಗಿ ಈ ಎರಡು ರಾಜ್ಯದ ಅಗ್ಗದ ಮದ್ಯಕ್ಕೆ ಸಾಕಷ್ಟು ಡಿಮ್ಯಾಂಡ್ ಇದೆ. ಅದಕ್ಕಾಗಿ ಅಕ್ರಮವಾಗಿ ಮದ್ಯ ಸಾಗಾಟ ಮಾಡಲಾಗುತಿದೆ ಎಂದು ಹೇಳಲಾಗಿದೆ. ಇನ್ನಷ್ಟು ಮದ್ಯ ರಾಜ್ಯಕ್ಕೆ ಆಮದಾಗುವ ಸಾಧ್ಯತೆಗಳಿದ್ದು, ರಾಜ್ಯ ಅಬಕಾರಿ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಇದನ್ನೂ ಓದಿ: ಹೊಸ ವರ್ಷಕ್ಕೂ ಮುನ್ನವೇ ಪೆಟ್ರೋಲ್, ಡೀಸೆಲ್ ದರದಲ್ಲಿ 10 ರೂ. ಇಳಿಕೆ?

  • ಸರ್ಕಾರಕ್ಕೆ ಶಾಕ್‌ ಕೊಟ್ಟ ಮದ್ಯಪ್ರಿಯರು – ಮದ್ಯ ಮಾರಾಟ ಪ್ರಮಾಣ 15% ಇಳಿಕೆ

    ಸರ್ಕಾರಕ್ಕೆ ಶಾಕ್‌ ಕೊಟ್ಟ ಮದ್ಯಪ್ರಿಯರು – ಮದ್ಯ ಮಾರಾಟ ಪ್ರಮಾಣ 15% ಇಳಿಕೆ

    ಬೆಂಗಳೂರು: ಗ್ಯಾರಂಟಿ ಯೋಜನೆಗಳ ಪರಿಣಾಮವಾಗಿ ಮದ್ಯದ (Liquor Price) ಬೆಲೆ ಏರಿಸಿ ಬಿಸಿ ಮುಟ್ಟಿಸಿದ್ದ ಸರ್ಕಾರಕ್ಕೆ ಈಗ ಮದ್ಯಪ್ರಿಯರೇ ಶಾಕ್‌ ಕೊಟ್ಟಿದ್ದಾರೆ.

    ನಿರಂತರ ಬೆಲೆ ಏರಿಕೆಯಿಂದ ಮದ್ಯಪ್ರಿಯರು ಎಣ್ಣೆ ಖರೀದಿಸಲು ನಿರಾಸಕ್ತಿ ತೋರಿದ್ದಾರೆ. ಇದರಿಂದಾಗಿ ಮದ್ಯ ಮಾರಾಟದಲ್ಲಿ ಗಣನೀಯ ಇಳಿಕೆಯಾಗಿದೆ. ಭಾರತೀಯ ಮದ್ಯ ಮಾರಾಟ (IML) ಪ್ರಮಾಣ ಶೇ.15 ರಷ್ಟು ಕುಸಿತ ಕಂಡಿದೆ. ಇದನ್ನೂ ಓದಿ: ಜಮೀನಿನಲ್ಲಿ ಧರೆಗುರುಳಿದ ಚಾಲಕ ರಹಿತ ತಪಸ್ ಯುಎವಿ

    ಆದರೆ ಬಿಯರ್ ಮಾರಾಟದಲ್ಲಿ ಅಂತಹ ವ್ಯತ್ಯಯ ಕಂಡುಬಂದಿಲ್ಲ. ರಾಜ್ಯ ಪಾನೀಯ ನಿಗಮಕ್ಕೆ ಲಿಕ್ಕರ್‌ಗೆ ಸಲ್ಲಿಸುವ ಖರೀದಿ ಬೇಡಿಕೆ ಇಳಿಕೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ಪ್ರತಿ ತಿಂಗಳು ಎರಡೂವರೆ ಸಾವಿರ ಕೋಟಿ ಆದಾಯ ಬರುತ್ತಿತ್ತು. ಈ ಆಗಸ್ಟ್‌ನಲ್ಲಿ 962 ಕೋಟಿ ಮಾತ್ರ ಸಂಗ್ರಹವಾಗಿದೆ.

    ಎಷ್ಟೆಷ್ಟು ಮಾರಾಟ, ಇಳಿಕೆ?
    2022-ಆಗಸ್ಟ್: ಸ್ವದೇಶಿ ಬ್ರ್ಯಾಂಡ್ – 25.50 ಲಕ್ಷ ಬಾಕ್ಸ್, ಬಿಯರ್ – 10.34 ಲಕ್ಷ ಬಾಕ್ಸ್ ಮಾರಾಟ.

    2023 ಆಗಸ್ಟ್: ದೇಶಿ ಬ್ರ್ಯಾಂಡ್ – 21.87 ಲಕ್ಷ ಬಾಕ್ಸ್, ಬಿಯರ್ – 12.52 ಲಕ್ಷ ಬಾಕ್ಸ್ ಮಾರಾಟ.

    ಕಡಿಮೆ ದರದ ಬ್ರ್ಯಾಂಡ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. ಸ್ಕಾಚ್ ಪ್ರಿಯರು ಪ್ರೀಮಿಯರ್ ಬ್ರ್ಯಾಂಡ್‌ ಕಡೆಗೆ ವಾಲಿದ್ದಾರೆ. ಪ್ರೀಮಿಯಮ್ ಪ್ರಿಯರು ನಾರ್ಮಲ್ ಬ್ರ್ಯಾಂಡ್‌ಗೆ ಶಿಫ್ಟ್‌ ಆಗಿದ್ದಾರೆ. ಹೀಗಾಗಿ ಸರ್ಕಾರಿ ಆದಾಯ ಸಂಗ್ರಹದ ಮೇಲೂ ಪರಿಣಾಮ ಬೀರಿದೆ. ಇದನ್ನೂ ಓದಿ: ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆಯೂ ಯಶಸ್ವಿ – ಚಂದ್ರನ ಅಂಗಳಕ್ಕೆ ಇನ್ನೊಂದೇ ಹೆಜ್ಜೆ

    ಆದಾಯ ಎಷ್ಟೆಷ್ಟು?
    ಏಪ್ರಿಲ್ – 2,308 ಕೋಟಿ ರೂ.
    ಮೇ – 2,607 ಕೋಟಿ ರೂ.
    ಜೂನ್ – 3,549 ಕೋಟಿ ರೂ.
    ಜುಲೈ – 2,980 ಕೋಟಿ ರೂ.

    ಐಎಂಎಲ್ ಮೇಲೆ ಶೇ.20 ರಷ್ಟು ಸುಂಕ ಹೆಚ್ಚಳ ಪರಿಣಾಮವಾದ ಪರಿಣಾಮ ಎಲ್ಲಾ 18 ಸ್ಲಾಬ್‌ಗಳ ಲಿಕ್ಕರ್ ದರ ಏರಿಕೆಯಾಗಿದೆ. ಪ್ರತಿ ಪೆಗ್‌ಗೆ 10 ರಿಂದ 20 ರೂಪಾಯಿ ಹೆಚ್ಚಳವಾಗಿದೆ. ಪ್ರತಿ ಬಾಟಲ್‌ಗೆ 50 ರಿಂದ 200 ರೂ. ಏರಿಕೆ ಕಂಡಿದೆ. ಪ್ರತಿ ತಿಂಗಳು ಸರಾಸರಿ 61 ಲಕ್ಷ ಟನ್ ಬಾಕ್ಸ್ ಮಾರಾಟವಾಗುತ್ತಿತ್ತು. ಬೆಲೆ ಏರಿಕೆಯಿಂದ ಆಗಸ್ಟ್‌ನಲ್ಲಿ 18.8 ಲಕ್ಷ ಟನ್ ಬಾಕ್ಸ್ ಮಾತ್ರ ಮಾರಾಟವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬ್ರ್ಯಾಂಡೆಡ್ ಲಿಕ್ಕರ್ ಬೆಲೆ ಇಳಿಕೆ

    ಬ್ರ್ಯಾಂಡೆಡ್ ಲಿಕ್ಕರ್ ಬೆಲೆ ಇಳಿಕೆ

    ನವದೆಹಲಿ: ದೇಶದ ರಾಜಧಾನಿಯಲ್ಲಿ ಕೆಲವೇ ದಿನಗಳಲ್ಲಿ ಬ್ರ್ಯಾಂಡೆಡ್ ಮತ್ತು ವಿದೇಶಿ ಲಿಕ್ಕರ್ ಬೆಲೆಯಲ್ಲಿ ಇಳಿಕೆಯಾಗಲಿದೆ. ಅಂದಾಜು 1 ಸಾವಿರ ರೂ. ಬೆಲೆ ಇಳಿಕೆಯಾಗಲಿದೆ ಎಂದು ವರದಿಯಾಗಿದೆ.

    ಈಗಾಗಲೇ Chivas Regal, Ballantine Finest ಮತ್ತು Absolut Vodka ತನ್ನ ಬೆಲೆ ಇಳಿಕೆಯನ್ನು ಖಚಿತಪಡಿಸಿವೆ. ಮುಂದಿನ ದಿನಗಳಲ್ಲಿ ಇನ್ನುಳಿದ ಕಂಪನಿಗಳು ಬೆಲೆಯನ್ನು ಇಳಿಸುವ ಸೂಚನೆಗಳಿವೆ. ಹೊಸ ಬೆಲೆಯ ಉತ್ಪನ್ನಗಳು 3-4 ದಿನಗಳಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿವೆ. ದೆಹಲಿಯ ಹೊಸ ಅಬಕಾರಿ ನಿಯಮ ಹಿನ್ನೆಲೆಯಲ್ಲಿ ಕಂಪನಿಗಳು ತಮ್ಮ ಉತ್ಪನ್ನಗಳ ಬೆಲೆಯನ್ನು ಕಡಿತಗೊಳಿಸಲು ನಿರ್ಧರಿಸಿವೆ. ದೆಹಲಿ ಹೊಸ ಅಬಕಾರಿ ನಿಯಮ ಆಗಸ್ಟ್ 16ರಿಂದ ಜಾರಿಯಾಗಿದೆ. ಹೊಸ ನಿಯಮದ ಹಿನ್ನೆಲೆಯಲ್ಲಿ ಲಿಕ್ಕರ್ ಬೆಲೆಯಲ್ಲಿ ಇಳಿಕೆಯಾಗಿದೆ.

    ಎಷ್ಟು ವ್ಯತ್ಯಾಸ?
    ಬೇಸ್ ರೇಟ್ ಹೆಚ್ಚಳದಿಂದಾಗಿ ದೆಹಲಿಯಲ್ಲಿ ಮದ್ಯದ ಬೆಲೆ ಏರಿಕೆ ಕಂಡಿತ್ತು. 750 ಮಿಲೀ ಬ್ಲ್ಯಾಕ್ ಲೇಬಲ್ ಗುರುಗ್ರಾಮದಲ್ಲಿ 2,300 ರೂ.ಗೆ ದೊರೆತರೆ ದೆಹಲಿಯಲ್ಲಿ 3,900 ರೂ.ಗೆ ಸಿಗುತ್ತಿತ್ತು. ಇದೇ ರೀತಿ ಚಿವಾಸ್ ರೆಗಲ್ ದೆಹಲಿಯಲ್ಲಿ 1,400 ರೂ.ಗೆ ಏರಿಕೆ ಕಂಡಿತ್ತು.

    ಚಿವಾಸ್ ರೆಗಲ್ (750 ಮಿಲಿ) 1,800 ರೂ. ನಿಂದ 1,400 ರೂ. ಆಗಲಿದೆ. ಬ್ಯಾಲೆಂನಟೈನ್ ಫೈನೆಸ್ಟ್ 1,800 ರೂ. ನಿಂದ 1,350 ರೂ ಮತ್ತು ಅಬಸ್ಲೂಟ್ ವೊಡ್ಕಾ 3,850 ರೂ. ನಿಂದ 2,800 ರೂ.ಗೆ ಇಳಿಕೆಯಾಗಲಿದೆ.

    ಬೆಲೆ ಏರಿಕೆಯಾಗಿದ್ದೇಕೆ?
    ಈ ಮೊದಲು ಸ್ವದೇಶಿ ಮತ್ತು ವಿದೇಶಿ ಬ್ರ್ಯಾಂಡೆಡ್ ಲಿಕ್ಕರ್ ಗಳ ಬೇಸ್ ರೇಟ್ ಹೆಚ್ಚಿರುತ್ತಿತ್ತು. ಬೇಸ್ ರೇಟ್ ನೊಂದಿಗೆ ಟ್ಯಾಕ್ಸ್ ಸೇರಿ ಬೆಲೆ ಏರಿಕೆ ಆಗಿತ್ತು. ಹೀಗಾಗಿ ಬ್ರ್ಯಾಂಡೆಡ್ ಲಿಕ್ಕರ್ ಗಳು ತಮ್ಮ ಬೇಸ್ ರೇಟ್ ಕಡಿತಗೊಳಿಸಿಕೊಂಡಿವೆ. ದೆಹಲಿಯಲ್ಲಿ ಮಾರಾಟ ಮಾಡುವ ಎಲ್ಲ ಮದ್ಯದ ಕಂಪನಿಗಳು ತಮ್ಮ ಹೆಸರನ್ನು ಅಬಕಾರಿ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬೇಕು. ಬೇಸ್ ರೇಟ್ ಇಳಿಕೆಯಾಗಿದ್ದರಿಂದ ಇತರೆ ರಾಜ್ಯಗಳಲ್ಲಿ ದೊರೆಯುವ ಬೆಲೆಯಲ್ಲಿಯೇ ದೆಹಲಿಯಲ್ಲಿ ದೊರೆಯಲಿದೆ ಎಂದು ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.