Tag: Liver

  • ಹೆಪಟೈಟಿಸ್-ಬಿ ವೈರಸ್ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ.ಶಕೀಲಾ

    ಹೆಪಟೈಟಿಸ್-ಬಿ ವೈರಸ್ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ.ಶಕೀಲಾ

    – ಲಕ್ಷಣಗಳು ಕಂಡ ಕೂಡಲೇ ಚಿಕಿತ್ಸೆ ಪಡೆಯಬೇಕು

    ಬಳ್ಳಾರಿ: ಯಕೃತ್ತಿನ (Liver) ಮೇಲೆ ಪರಿಣಾಮ ಬೀರುವ ಹೆಪಟೈಟಿಸ್-ಬಿ (Hepatitis B) ಒಂದು ವೈರಸ್ (Virus) ಸೋಂಕಾಗಿದ್ದು, ಗಾಢವಾದ ಮೂತ್ರದ ಬಣ್ಣದಲ್ಲಿ ಬದಲಾವಣೆ, ವಾಕರಿಕೆ ಮುಂತಾದವುಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ (Government Hospital) ಚಿಕಿತ್ಸೆ ಪಡೆಯುವ ಮೂಲಕ ಆರಂಭದಲ್ಲಿಯೇ ರೋಗ ನಿಯಂತ್ರಣಕ್ಕೆ ಸಹಕರಿಸಿ ಎಂದು ರಾಷ್ಟ್ರೀಯ ವೈರಲ್ ಹೆಪಟೈಟಿಸ್ ನಿಯಂತ್ರಣ ಕಾರ್ಯಕ್ರಮದ ಉಪನಿರ್ದೇಶಕರಾದ ಡಾ.ಶಕೀಲಾ.ಎನ್ ಹೇಳಿದ್ದಾರೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ನಿರ್ದೇಶನಾಲಯದಡಿ ರಾಷ್ಟ್ರೀಯ ವೈರಲ್ ಹೆಪಟೈಟಿಸ್ ನಿಯಂತ್ರಣ ಕಾರ್ಯಕ್ರಮದ ಮೂಲಕ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳು, ಫಿಜಿಷಿಯನ್, ತಜ್ಞ ವೈದ್ಯರುಗಳಿಗೆ ಬಳ್ಳಾರಿ ನಗರದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

    ಸಾಮಾನ್ಯವಾಗಿ ಕಾಮಾಲೆ ಎಂದು ಕರೆಸಿಕೊಳ್ಳುವ ಹೆಪಟೈಟಿಸ್‌-ಬಿ ಸೋಂಕು ಆರಂಭದಲ್ಲಿ ಚಿಹ್ನೆಗಳನ್ನು ಗುರುತಿಸಲು ಸಾಧ್ಯವಾಗುವುದಿಲ್ಲ. ಕ್ರಮೇಣ ಚರ್ಮ ಮತ್ತು ಕಣ್ಣುಗಳ ಹಳದಿ, ಗಾಢ ಮೂತ್ರ, ತೀವ್ರ ಆಯಾಸ, ವಾಕರಿಕೆ, ವಾಂತಿ ಸ್ನಾಯು ಮತ್ತು ಕೀಲು ನೋವು, ಹಸಿವಾಗದಿರುವಿಕೆ, ಹೊಟ್ಟೆ ಬಲಭಾಗದಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದು, ಈ ಹಂತದಲ್ಲಿಯೂ ನಿರ್ಲಕ್ಷಿಸಿದರೆ ಗಂಭೀರ ಸ್ಥಿತಿಗೆ ರೋಗಿಯ ಆರೋಗ್ಯ ಬದಲಾಗಬಹುದು. ಇದಕ್ಕಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ತಪಾಸಣೆ ಮತ್ತು ಪರೀಕ್ಷೆ ಕೈಗೊಳ್ಳಲಾಗುತ್ತಿದ್ದು, 2030 ರ ವೇಳೆಗೆ ಹೆಪಟೈಟಿಸ್‌ ಮುಕ್ತ ದೇಶವನ್ನಾಗಿಸುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಿ ಕರ್ತವ್ಯ ನಿರ್ವಹಿಸಬೇಕು ಎಂದರು. ಇದನ್ನೂ ಓದಿ: ಗ್ಯಾರಂಟಿಗೆ ಅನುದಾನ ಕಳೆದ ಬಾರಿ ಎಷ್ಟಿತ್ತು? ಈ ಬಾರಿ ಎಷ್ಟು ಹಂಚಿಕೆಯಾಗಿದೆ? ಸಾಲ ಎಷ್ಟು?

    ಕಾರ್ಯಕ್ರಮದಲ್ಲಿ ಡಿಎಚ್ಓ ಡಾ.ಯಲ್ಲಾ ರಮೇಶ್ ಬಾಬು, ಬಿಮ್ಸ್ ನಿರ್ದೇಶಕ ಡಾ.ಬಿ.ಗಂಗಾಧರ ಗೌಡ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್ ಬಸರೆಡ್ಡಿ, ಎನ್.ವಿ.ಹೆಚ್.ಸಿ.ಪಿ ಸಲಹೆಗಾರರಾದ ಡಾ.ಹರ್ಷಿತಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಡಿಪಿಸಿ ಅರ್ಚನಾ, ಡ್ಯಾಪ್ಕೋ ಮೇಲ್ವಿಚಾರಕ ಗಿರೀಶ್, ಪಿಪಿಸಿ ಅನಿಲ್ ಕುಮಾರ್, ಆರೋಗ್ಯ ನಿರೀಕ್ಷಣಾಧಿಕಾರಿ ಪಂಪಾಪತಿ ಸೇರಿದಂತೆ 7 ಜಿಲ್ಲೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

  • ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಯಕೃತ್‌ ದಾನ – ಯಶಸ್ವಿ ಯಕೃತ್‌ ಕಸಿ ಶಸ್ತ್ರಚಿಕಿತ್ಸೆ

    ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಯಕೃತ್‌ ದಾನ – ಯಶಸ್ವಿ ಯಕೃತ್‌ ಕಸಿ ಶಸ್ತ್ರಚಿಕಿತ್ಸೆ

    ಬೆಂಗಳೂರು: ಯಕೃತ್‌ ಕ್ಯಾನ್ಸರ್‌ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್‌ ಭಾಗವನ್ನು ದಾನ ಮಾಡುವ ಮೂಲಕ ಮಹಿಳೆಗೆ ಯಶಸ್ವಿಯಾಗಿ ಯಕೃತ್‌ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

    ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸಕರಾದ ಡಾ.ಕಿಶೋರ್ ಜಿ.ಎಸ್‌.ಬಿ. ಮತ್ತು ಡಾ.ಪಿಯೂಷ್ ಸಿನ್ಹಾ ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ.ಬಿ.ಎಸ್ ರವೀಂದ್ರ ಅವರ ತಂಡ ಯಶಸ್ವಿಯಾಗಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದೆ. ಇದನ್ನೂ ಓದಿ: ಮಳೆಗೆ ಮುಳುಗಿದ ಕರುನಾಡು – ಹಾವೇರಿ, ಕೊಡಗು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ

    ಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ಲಿವರ್‌ ಟ್ರಾನ್ಸ್‌ಪ್ಲಾಂಟ್‌ ಸರ್ಜನ್‌ ಡಾ. ಕಿಶೋರ್ ಜಿಎಸ್‌ಬಿ, ಮತ್ತು ಡಾ. ಪಿಯೂಷ್ ಸಿನ್ಹಾ, 2021 ರಲ್ಲಿ 52 ವರ್ಷದ ಲೀಲಾ ಎಂಬುವವರು ಕಾಮಾಲೆ ಕಾಯಿಲೆಗೆ ತುತ್ತಾದರು. ಇದರ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಲಿವರ್ ಸಿರೋಸಿಸ್ ಇರುವುದು ಪತ್ತೆಯಾಯಿತು. ಬಳಿಕ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ದೀರ್ಘಕಾಲದಿಂದ ಯಕೃತ್‌ನ ಕಾಯಿಲೆ ಇರುವ ಕಾರಣ ಅವರ ಯಕೃತ್‌ನಲ್ಲಿ ದ್ರವದ ಶೇಖರಣೆಯಾಗಿ ಯಕೃತ್‌ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಇದರಿಂದ ಅವರ ಜೀವನ ಶೈಲಿಯ ಮೇಲೆ ತೀವ್ರ ಪರಿಣಾಮ ಉಂಟು ಮಾಡುತ್ತಿತ್ತು. ಅವರನ್ನು ಮತ್ತಷ್ಟು ತಪಾಸಣೆಗೆ ಒಳಪಡಿಸಿದ ಬಳಿಕ ಪಿತ್ತರಸ ನಾಳದಲ್ಲಿ ಕಲ್ಲು ಇರುವುದು ಪತ್ತೆಯಾಯಿತು. ಗ್ಯಾಸ್ಟ್ರೋ ತಂಡವು ಈ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆ ವೇಳೆ ಆಕೆಗೆ ಯಕೃತ್‌ನ ಕ್ಯಾನ್ಸರ್‌ ಪ್ರಾರಂಭಿಕ ಹಂತದಲ್ಲಿರುವುದು ಸಹ ತಿಳಿದುಬಂತು. ಹೀಗಾಗಿ ಆಕೆಗೆ ಲಿವರ್ ಸಿರೋಸಿಸ್ ಮತ್ತು ಯಕೃತ್ತಿನ ಕ್ಯಾನ್ಸರ್‌ಗೆ ಕೂಡಲೇ ಯಕೃತ್‌ ಕಸಿ ಅಗತ್ಯತೆ ಬಿತ್ತು. ಸ್ವತಃ 31 ವರ್ಷದ ಮಗನೇ ತನ್ನ ಯಕೃತ್‌ನ ಭಾಗವನ್ನು ದಾನ ಮಾಡಲು ಮುಂದಾದರು. ಸಕಾಲದಲ್ಲಿ ಯಕೃತ್‌ ಸಿಕ್ಕ ಪರಿಣಾಮ ಅವರಿಗೆ ಯಶಸ್ವಿಯಾಗಿ ಕಸಿ ಮಾಡಲಾಯಿತು ಎಂದು ವಿವರಿಸಿದರು.

    ದಾನಿಯ ಯಕೃತ್ತಿನ ಉಳಿದ ಭಾಗವು ತಕ್ಷಣವೇ ಪುನರುತ್ಪಾದಿಸಲು ಪ್ರಾರಂಭಿಸುತ್ತದೆ. 6 ರಿಂದ 8 ವಾರಗಳಲ್ಲಿ ಅದರ ಸಾಮಾನ್ಯ ಗಾತ್ರಕ್ಕೆ ಯಕೃತ್‌ ಬೆಳೆಯುತ್ತದೆ. ಹೆಚ್ಚಿನ ಯಕೃತ್‌ ದಾನಿಗಳು ಶಸ್ತ್ರಚಿಕಿತ್ಸೆಯ ಒಂದು ವಾರದ ನಂತರ ಸಾಮಾನ್ಯ ಜೀವನಕ್ಕೆ ಮರಳಬಹುದು ಎಂದರು. ಇದನ್ನೂ ಓದಿ: 2 ವರ್ಷಗಳ ಬಳಿಕ ಭಾರೀ ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್‌ ಮುಕ್ತ – ಈ ಷರತ್ತು ಅನ್ವಯ

    ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ನಿರ್ದೇಶಕ ಡಾ.ಬಿ.ಎಸ್ ರವೀಂದ್ರ ಮಾತನಾಡಿ, ಯಕೃತ್ತಿನ ಕ್ಯಾನ್ಸರ್ ಅನ್ನು CT ಸ್ಕ್ಯಾನ್ ಸ್ಕ್ರೀನಿಂಗ್‌ನಲ್ಲಿ ಪತ್ತೆ ಹಚ್ಚಲಾಯಿತು. ಕೊಲಾಂಜೈಟಿಸ್‌ನೊಂದಿಗೆ ಸಿರೋಟಿಕ್ ರೋಗಿಗೆ ಚಿಕಿತ್ಸೆ ನೀಡುವುದು ಸವಾಲಿನ ಸಂಗತಿ, ಜೊತೆಗೆ ಸಾಮಾನ್ಯ ಪಿತ್ತರಸ ನಾಳದಿಂದ ಕಲ್ಲುಗಳನ್ನು ಯಶಸ್ವಿಯಾಗಿ ಹೊರತೆಗೆದು ಸ್ಟೆಂಟ್‌ಗಳನ್ನು ಇರಿಸಲು ಸಾಧ್ಯವಾಯಿತು ಎಂದು ವಿವರಿಸಿದರು. ಇದನ್ನೂ ಓದಿ: ಮೋದಿಯನ್ನು ಭೇಟಿಯಾದ ಹೆಚ್‌ಡಿಡಿ, ಹೆಚ್‌ಡಿಕೆ – ಮಹತ್ವದ ವಿಚಾರಗಳ ಕುರಿತು ಚರ್ಚೆ

  • ಮಾರಕ ಕಾಯಿಲೆಗಳಿಂದ ಯುವಕರನ್ನು ದೂರವಿಡಲು ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣ: ದಿನೇಶ್ ಗುಂಡೂರಾವ್

    ಮಾರಕ ಕಾಯಿಲೆಗಳಿಂದ ಯುವಕರನ್ನು ದೂರವಿಡಲು ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣ: ದಿನೇಶ್ ಗುಂಡೂರಾವ್

    ಬೆಂಗಳೂರು: ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣ ನೀಡುವ ಮೂಲಕ ಯುವಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು ಅತಿ ಅವಶ್ಯಕವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅಭಿಪ್ರಾಯ ಪಟ್ಟಿದ್ದಾರೆ.

    ಬೆಂಗಳೂರಿನಲ್ಲಿ ಶುಕ್ರವಾರ ವಿಶ್ವ ಹೆಪಟೈಟಿಸ್ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೆಪಟೈಟಿಸ್ (Hepatitis) ಸೋಂಕು ಆಹಾರ ಮತ್ತು ಜೀವನಶೈಲಿಯಲ್ಲಿ ಆಗುವ ಬದಲಾವಣೆಗಳಿಂದ ಬರುತ್ತದೆ. ಮಾನವನ ಅಂಗಾಂಗದಲ್ಲಿ ಯಕೃತ್ತಿಗೆ (liver) ನಾವು ಹೆಚ್ಚು ಪ್ರಾಮುಖ್ಯತೆ ನೀಡಬೇಕಾಗಿದೆ. ಲಿವರ್ ಅನ್ನು ನಾವು ಎಷ್ಟು ಚೆನ್ನಾಗಿ ನೋಡಿಕೊಳ್ಳುತ್ತೇವೋ ಅದು ನಮಗೆ ಅಷ್ಟೇ ಉತ್ತಮ ಆರೋಗ್ಯವನ್ನು ನೀಡುವಂತಹ ಒಂದು ಅಂಗಾಂಗವಾಗಿದೆ ಎಂದು ತಿಳಿಸಿದರು.

    ಮಾನವನ ದೇಹದಲ್ಲಿ ಲಿವರ್ 500 ಕ್ಕೂ ಹೆಚ್ಚು ಕಾರ್ಯವನ್ನು ಮಾಡುವ ಪ್ರಮುಖ ಅಂಗಾಂಗ. A,B,C,D ಮತ್ತು E ರೀತಿಯ ಹೆಪಟೈಟಿಸ್ ವೈರಸ್‌ಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ B ಮತ್ತು C ವೈರಸ್ ಲಿವರ್ ಡ್ಯಾಮೇಜ್ ಮಾಡುವ ವೈರಸ್‌ಗಳಾಗಿದ್ದು, ಮಾರಕ ಕಾಯಿಲೆಯನ್ನು ಉಂಟುಮಾಡುತ್ತವೆ ಎಂದರು.

    ಹೆಪಟೈಟಿಸ್ ವೈರಸ್‌ನಿಂದಾಗಿ ದೇಶದಲ್ಲಿ ಇಂದು 3.5 ಕೋಟಿಗೂ ಹೆಚ್ಚು ಜನರು ಇಂದು ಲಿವರ್ ಸಮಸ್ಯೆ ಎದುರಿಸುತ್ತಿದ್ದಾರೆ. ಕರ್ನಾಟದಲ್ಲಿ 1% ರಷ್ಟು ಹೆಪಟೈಟಿಸ್ ಸೋಂಕು ಕಂಡುಬಂದಿದೆ. 2030 ರೊಳಗೆ ಹೆಪಟೈಟಿಸ್ C ವೈರಸ್ ಮುಕ್ತ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದ್ದು, ಹೆಪಟೈಟಿಸ್ B ವೈರಸ್ ಅನ್ನು ಕೂಡಾ ನಿಯಂತ್ರಣದಲ್ಲಿಡಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಇದನ್ನೂ ಓದಿ: ಶಾಸಕತ್ವ ಅಸಿಂಧು ಕೋರಿ ಅರ್ಜಿ – ಸಿದ್ದರಾಮಯ್ಯಗೆ ಹೈಕೋರ್ಟ್‌ನಿಂದ ನೋಟಿಸ್‌ ಜಾರಿ

    ಈ ನಿಟ್ಟಿನಲ್ಲಿ ಸಮಾಜದಲ್ಲಿ ಜಾಗೃತಿ ಅತ್ಯವಶ್ಯಕವಾಗಿದೆ ಹೆಪಟೈಟಿಸ್ ವೈರಸ್ ಒಂದೇ ಅಲ್ಲ, ಕಿಡ್ನಿ ವೈಫಲ್ಯದಂತಹ ಮಾರಕ ಕಾಯಿಲೆಗಳಿಂದ ಯುವಕರನ್ನು ದೂರವಿಡಲು ವಿದ್ಯಾರ್ಥಿಗಳ ಪಠ್ಯದಲ್ಲಿಯೇ ಆರೋಗ್ಯ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಸಚಿವರು ಪ್ರತಿಪಾದಿಸಿದರು. ಯುವಕರು ಒಂದೆಡೆ ವ್ಯಸನಗಳಿಗೆ ಮಾರುಹೋಗಿ ನಂತರದ ದಿನಗಳಲ್ಲಿ ಕಾಯಿಲೆಗಳಿಗೆ ಈಡಾಗುತ್ತಾರೆ. ಅಲ್ಲದೇ ಆಹಾರ ಪದ್ಧತಿ, ಜೀವನ ಶೈಲಿಯಲ್ಲಾಗುವ ಬದಲಾವಣೆಗಳು ಇಂದು ಮಾರಕ ವೈರಸ್‌ಗಳು ಮನಷ್ಯನ ಅಂಗಾಂಗಗಳಿಗೆ ಸಮಸ್ಯೆಯುಂಟುಮಾಡುತ್ತಿವೆ ಎಂದರು.

    ಪ್ರೌಢ ಹಾಗೂ ಪದವಿ ಪಠ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣವನ್ನು ನೀಡುವ ಮೂಲಕ ಬಹುತೇಕ ಯುವಕರನ್ನು ಜಾಗೃತಗೊಳಿಸಬಹುದು. ಮಾರಕ ಕಾಯಿಲೆಗಳನ್ನು ಯುವಕರಿಂದ ದೂರವಿಡಬಹುದು. ಉತ್ತಮ ಆರೋಗ್ಯ ನೀಡುವ ಆಹಾರಗಳ ಬಗ್ಗೆ ಅರಿವು ಮೂಡಿಸಬೇಕು. ಹೆಪಟೈಟಿಸ್‌ನಂತಹ ವೈರಸ್‌ಗಳು, ಹೇಗೆ ಬರುತ್ತವೆ, ಲಿವರ್ ನ ಮಹತ್ವದ ಬಗ್ಗೆ ಶಿಕ್ಷಣ ಅತ್ಯಗತ್ಯ. ಹೆಪಟೈಟಿಸ್ ವೈರಸ್ ಆರಂಭದಲ್ಲೇ ಪತ್ತೆ ಹಚ್ವಿದರೆ ಲಿವರ್ ಫೇಲ್ಯೂರ್ ಆಗುವುದನ್ನು ತಡೆಗಟ್ಟಬಹುದಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸ್ಕ್ರೀನಿಂಗ್ ಮಾಡುವುದರ ಜೊತೆಗೆ ಲಸಿಕೆ ಹಾಕುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ವಿಶೇಷವಾಗಿ ಗರ್ಭಿಣಿಯರಿಗೆ ಹೆಪಟೈಟಿಸ್ B ಸ್ಕ್ರೀನಿಂಗ್ ಕಡ್ಡಾಯವಾಗಿ ಮಾಡಿ. ಪಾಸಿಟಿವ್ ಗರ್ಭಿಣಿಯರಿಗೆ ಜನಿಸುವ ಶಿಶುಗಳಿಗೆ ಹೆಪಟೈಟಿಸ್ ಬಿ ಚುಚ್ಚುಮದ್ದು ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು. ಇದನ್ನೂ ಓದಿ: ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ – ಪ್ರಧಾನಿ ಮೋದಿ ತಯಾರಿ ಏನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಿವರ್ ದಾನ ಮಾಡಿ ಅಪ್ಪನ ಜೀವ ಉಳಿಸಿದ ಮಗಳು

    ಲಿವರ್ ದಾನ ಮಾಡಿ ಅಪ್ಪನ ಜೀವ ಉಳಿಸಿದ ಮಗಳು

    – ಮಗಳ ಕಾರ್ಯಕ್ಕೆ ಶಾಲೆಯ ವತಿಯಿಂದ ಸನ್ಮಾನ
    – ಲಿವರ್ ಟ್ಯೂಮರ್‍ನಿಂದ ಬಳಲುತ್ತಿದ್ದ ತಂದೆ

    ಚಂಢೀಗಡ್: ಹರಿಯಾಣದ ಸಿರಸಾ ಜಿಲ್ಲೆಯಲ್ಲಿ ಮಗಳೊಬ್ಬಳು ಲಿವರ್(ಯಕೃತ್ತು) ದಾನ ಮಾಡುವ ಮೂಲಕ ತನ್ನ ತಂದೆಗೆ ಹೊಸ ಜೀವನ ನೀಡಿದ್ದಾಳೆ.

    ನೇಹಾ ರಾಣಿ ದೆಹಲಿಯ ಗ್ರೇಟರ್ ಕೈಲಾಶ್ ನಿವಾಸಿಯಾಗಿದ್ದು, ಸಿರಸಾದಲ್ಲಿ ಶಾ ಸತ್ನಾಮ್ ಗರ್ಲ್ಸ್ ಸ್ಕೂಲಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ನೇಹಾ ತನ್ನ ಲಿವರ್ ದಾನ ಮಾಡಿ ತನ್ನ ತಂದೆಯ ಜೀವ ಉಳಿಸಿದ್ದಕ್ಕೆ ಹೆಮ್ಮೆ ಪಡುತ್ತಿದ್ದಾಳೆ. ನೇಹಾಳ ಕಾರ್ಯಕ್ಕೆ ಶಾಲಾ ಆಡಳಿತ ಮಂಡಳಿ ಆಕೆಗೆ ಸನ್ಮಾನ ಮಾಡಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ನೇಹಾ, “ನನ್ನ ತಂದೆ ಲಿವರ್ ಟ್ಯೂಮರ್ ನಿಂದ ಬಳಲುತ್ತಿದ್ದರು. ಅಲ್ಲದೆ ವೈದ್ಯರು ಶೀಘ್ರದಲ್ಲೇ ಲಿವರ್ ಬದಲಾಯಿಸಬೇಕು ಎಂದು ಹೇಳಿದ್ದರು. ನಮ್ಮ ಮನೆಯಲ್ಲಿ ಅಮ್ಮ, ಅಣ್ಣ ಹಾಗೂ ಅತ್ತಿಗೆ ಇದ್ದಾರೆ. ಎಲ್ಲರ ಮೊದಲು ನಾನು ನನ್ನ ಲಿವರ್ ದಾನ ಮಾಡುತ್ತೇನೆ ಎಂದು ಹೇಳಿದ್ದೆ. ವೈದ್ಯರು ಪರಿಶೀಲನೆ ನಡೆಸಿದ ನಂತರ ನಾನು ನನ್ನ ಲಿವರ್ ದಾನ ಮಾಡಿದೆ” ಎಂದು ಹೇಳಿದ್ದಾಳೆ.

    ಮಕ್ಕಳಿಗಾಗಿ ತಂದೆ-ತಾಯಿ ತಮ್ಮ ಜೀವನವನ್ನು ತ್ಯಾಗ ಮಾಡುತ್ತಾರೆ. ಹಾಗೆಯೇ ಮಕ್ಕಳು ಕೂಡ ತಂದೆ-ತಾಯಿಯ ಸೇವೆಯಲ್ಲಿ ತಮ್ಮ ಜೀವನವನ್ನು ತ್ಯಾಗ ಮಾಡಬೇಕು. ನನ್ನ ಈ ಕಾರ್ಯಕ್ಕೆ ಶಾಲೆಯ ಪ್ರಿನ್ಸಿಪಲ್ ಡಾ. ಶೀಲಾ ಪುಣಿಯಾ ಅವರು ಪ್ರಶಂಸೆ ನೀಡಿದರು. ಅಲ್ಲದೆ ನನಗೆ ಸನ್ಮಾನ ಕೂಡ ಮಾಡಿದರು. ನನ್ನ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಕಲಿಸುವುದರ ಜೊತೆಗೆ ಮಾನವೀಯತೆಯ ಪಾಠ ಕೂಡ ಹೇಳಿ ಕೊಡುತ್ತಾರೆ ಎಂದು ನೇಹಾ ತಿಳಿಸಿದ್ದಾಳೆ.

  • ಸಾವು ಬದುಕಿನ ಮಧ್ಯೆ ಹೋರಾಟ – ತಂದೆಗೆ ಲಿವರ್ ನೀಡಿ ಮರುಜನ್ಮ ನೀಡಿದ ಮಗಳು

    ಸಾವು ಬದುಕಿನ ಮಧ್ಯೆ ಹೋರಾಟ – ತಂದೆಗೆ ಲಿವರ್ ನೀಡಿ ಮರುಜನ್ಮ ನೀಡಿದ ಮಗಳು

    ಚೆನ್ನೈ: ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ.

    ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಲಿವರ್ ಡ್ಯಾಮೇಜ್ ಆಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ತಂದೆಗೆ ಮಗಳ ಲಿವರ್ ನ ಒಂದು ಭಾಗವನ್ನು ಕಸಿ ಮಾಡುವಲ್ಲಿ ಚೆನ್ನೈನ ಜಿಇಎಂ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯಲ್ಲಿ ಕೇವಲ ಪಿತ್ತಜನಕಾಂಗದ ಒಂದು ಭಾಗವನ್ನು ಮಾತ್ರ ಕಸಿ ಮಾಡಲಾಗಿದೆ.

    ಈ ವಿಚಾರದ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಇಎಂ ಆಸ್ಪತ್ರೆಯ ವೈದ್ಯರು, ರೋಗಿಗೆ ಲಿವರ್ ನ ಒಂದು ಭಾಗ ಮಾತ್ರ ಡ್ಯಾಮೇಜ್ ಆಗಿ ಕೊನೆಯ ಹಂತ ತಲುಪಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಲಿವರ್ ಸಿಗುತ್ತಾ ಅಂತ ದಾನಿಗಳಿಗೆ ಕಾಯುತ್ತಿದ್ದೆವು. ಆದರೆ ದಾನಿಗಳು ಸಿಗದ ಕಾರಣ ಮಗಳು ಹತಾಶೆಗೊಂಡು ತಂದೆಯ ಸ್ಥಿತಿಯನ್ನು ನೋಡಿ ನಾನೇ ನನ್ನ ಅಂಗವನ್ನು ದಾನ ಮಾಡುತ್ತೇನೆ ಎಂದು ಮಗಳು ಮುಂದೆ ಬಂದಳು ಎಂದು ಹೇಳಿದ್ದಾರೆ.

    ಮಗಳು ಈ ನಿರ್ಧಾರಕ್ಕೆ ಕುಟುಂಬದ ಸದಸ್ಯರು ಒಪ್ಪಲಿಲ್ಲ. ಆಕೆ ಇನ್ನೂ ಮದುವೆಯಾಗಿಲ್ಲ. ಶಸ್ತ್ರಚಿಕಿತ್ಸೆ ಮಾಡಿದರೆ ಹೊಟ್ಟೆ ಭಾಗದಲ್ಲಿ ಮಾರ್ಕ್ ಆಗುತ್ತದೆ. ಈ ರೀತಿ ಆದರೆ ಮುಂದೆ ಈಕೆಯನ್ನು ಯಾರು ವಿವಾಹ ಆಗುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು. ಆದರೆ ನಾವು ಆಕೆ ಕುಟುಂಬದವರಿಗೆ ಶಸ್ತ್ರಚಿಕಿತ್ಸೆಯ ವಿಧಾನವನ್ನು ವಿವರಿಸಿದ್ದೇವೆ. ಮತ್ತು ಆದರ ಕಾರ್ಯ ವಿಧಾನದ ಬಗ್ಗೆಯೂ ಅರ್ಥವಾಗುವಂತೆ ವಿವರಿಸಿ ಹೇಳಿದಾಗ ಅವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದರು ಎಂದು ವೈದ್ಯರು ಹೇಳಿದ್ದಾರೆ.

    ಇದೇ ಮೊದಲ ಬಾರಿಗೆ ಭಾರತದಲ್ಲಿ ಡಾ. ಸಿ ಪಳನಿವೆಲು ಮತ್ತು ಅವರ ತಂಡವು ಲ್ಯಾಪರೊಸ್ಕೋಪಿಕ್ ಪಿತ್ತಜನಕಾಂಗದ ಕಸಿ ಮಾಡಿದೆ. ಲಿವರಿನ ಬಲ ಅರ್ಧವನ್ನು ಮೂರೂವರೆ ಗಂಟೆಗಳಲ್ಲಿ ಯಶಸ್ವಿಯಾಗಿ ಬೇರ್ಪಡಿಸಿ ನಂತರ ತಂದೆಗೆ ಮಗಳ ಪಿತ್ತಜನಕಾಂಗದ ಅರ್ಧ ಭಾಗವನ್ನು ಜೋಡಣೆ ಮಾಡಲಾಗಿದೆ ಎಂದು ವೈದ್ಯರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ವೈದ್ಯರ ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಭೇಟಿಯಾಗಿ ಈ ಕೆಲಸದ ಬಗ್ಗೆ ವಿವರಿಸಿದ್ದಾರೆ. ವೈದ್ಯರ ಈ ಸಾಧನೆಯನ್ನು ಮೆಚ್ಚಿರುವ ಪಳನಿಸ್ವಾಮಿ ಅವರು ವೈದ್ಯರ ಜೊತೆ ತಂದೆಗೆ ಅಂಗವನ್ನು ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿಯನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.