Tag: Liz Truss

  • ಬ್ರಿಟನ್‌ ಪ್ರಧಾನಿ ಸ್ಥಾನಕ್ಕೆ ಸ್ಪರ್ಧೆ – ರಿಷಿ ಸುನಾಕ್‌ ಘೋಷಣೆ

    ಲಂಡನ್‌: ಲಿಜ್ ಟ್ರಸ್ (Liz Truss) ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಬ್ರಿಟನ್‌ನ ಮಾಜಿ ಹಣಕಾಸು ಸಚಿವ ರಿಷಿ ಸುನಾಕ್ (Rishi Sunak) ಅವರು ಯುಕೆ ಪ್ರಧಾನಿ (UK PM Race) ಸ್ಥಾನಕ್ಕೆ ಸ್ಪರ್ಧಿಸಲು ಉಮೇದುವಾರಿಕೆ ಸಲ್ಲಿಸುವುದಾಗಿ ಭಾನುವಾರ ಘೋಷಿಸಿದ್ದಾರೆ.

    ಬೋರಿಸ್‌ ಜಾನ್ಸನ್‌ ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಸಂದರ್ಭದಲ್ಲಿ ಆ ಸ್ಥಾನಕ್ಕೆ ಸ್ಪರ್ಧಿಸಿ ಲಿಜ್‌ ಟ್ರಸ್‌ ಎದುರು ಸೋಲನುಭವಿಸಿದ್ದ ಭಾರತ ಮೂಲದ ರಿಷಿ ಸುನಾಕ್‌ ಈಗ ಮತ್ತೆ ಸ್ಪರ್ಧೆಗೆ ಮುಂದಾಗಿದ್ದಾರೆ. ಅಲ್ಲದೇ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಶ್ರಮಿಸುವುದಾಗಿ ಭರವಸೆ ಕೂಡ ಕೊಟ್ಟಿದ್ದಾರೆ. ಇದನ್ನೂ ಓದಿ: ಅಧಿಕಾರಕ್ಕೆ ಬಂದ ಕೆಲವೇ ವಾರಗಳಲ್ಲಿ ಬ್ರಿಟನ್‌ ಪ್ರಧಾನಿ ಸ್ಥಾನಕ್ಕೆ ಲಿಜ್‌ ಟ್ರಸ್‌ ರಾಜೀನಾಮೆ

    ಈ ಕುರಿತು ಟ್ವೀಟ್‌ ಮಾಡಿರುವ ಸುನಾಕ್‌, ಯುನೈಟೆಡ್ ಕಿಂಗ್‌ಡಮ್ ಒಂದು ಶ್ರೇಷ್ಠ ದೇಶವಾಗಿದೆ. ಆದರೆ ನಾವು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದೇವೆ. ಆರ್ಥಿಕ ಬಿಕ್ಕಟ್ಟು ಸುಧಾರಿಸುವುದಕ್ಕಾಗಿ ನಿಮ್ಮ ಮುಂದಿನ ಪ್ರಧಾನಿಯಾಗಲು ನಿಂತಿದ್ದೇನೆ ಎಂದು ತಿಳಿಸಿದ್ದಾರೆ.

    ದೇಶದ ಆರ್ಥಿಕತೆಯನ್ನು ಸರಿಪಡಿಸಬೇಕಾಗಿದೆ. ಅಷ್ಟೇ ಅಲ್ಲ ನಮ್ಮ ಪಕ್ಷವನ್ನು ಸಹ ಒಗ್ಗೂಡಿಸುತ್ತೇನೆ. ಅದರ ಪ್ರಯೋಜನವನ್ನು ದೇಶಕ್ಕೆ ನೀಡಲು ಕಾರ್ಯಪ್ರವೃತ್ತನಾಗುತ್ತೇನೆ ಎಂದು ಸುನಾಕ್‌ ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್ ಬಿಟ್ಟು ಬನ್ನಿ – ಭಾರತೀಯರಿಗೆ 5 ಬಾರ್ಡರ್ ಕ್ರಾಸಿಂಗ್ ಗುರುತಿಸಿದ ರಾಯಭಾರ ಕಚೇರಿ

    ಪ್ರತಿಪಕ್ಷಗಳು ಸಾರ್ವತ್ರಿಕ ಚುನಾವಣೆಯ ಬೇಡಿಕೆಯನ್ನು ಪುನರುಚ್ಚರಿಸಿದ್ದರಿಂದ ಗುರುವಾರ ಪ್ರಧಾನಿ ಸ್ಥಾನಕ್ಕೆ ಟ್ರಸ್ ರಾಜೀನಾಮೆ ನೀಡಿದರು. ಇದರ ಬೆನ್ನಲ್ಲೇ ಪ್ರಧಾನಿ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಸುನಾಕ್‌ ಘೋಷಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರತ ತಂಡದಲ್ಲಿ 150+ ವೇಗದ ಬೌಲರ್ ಇಲ್ಲ – ಇಂಗ್ಲೆಂಡ್‍ನಲ್ಲಿ ಪ್ರಧಾನಿಯೇ ಇಲ್ಲ: ಜಾಫರ್ ವ್ಯಂಗ್ಯ

    ಭಾರತ ತಂಡದಲ್ಲಿ 150+ ವೇಗದ ಬೌಲರ್ ಇಲ್ಲ – ಇಂಗ್ಲೆಂಡ್‍ನಲ್ಲಿ ಪ್ರಧಾನಿಯೇ ಇಲ್ಲ: ಜಾಫರ್ ವ್ಯಂಗ್ಯ

    ಮುಂಬೈ: ಟಿ20 ವಿಶ್ವಕಪ್‍ಗಾಗಿ (T20 World Cup) ಇದೀಗ ಆಸ್ಟ್ರೇಲಿಯಾದಲ್ಲಿರುವ (Australia) ತಂಡಗಳ ಪೈಕಿ ಭಾರತ (India) ತಂಡದಲ್ಲಿ 150ಕ್ಕೂ ಹೆಚ್ಚಿನ ವೇಗದಲ್ಲಿ ಬಾಲ್ ಎಸೆಯುವ ಬೌಲರ್ ಇಲ್ಲ. ಅತ್ತ ಇಂಗ್ಲೆಂಡ್‍ನಲ್ಲಿ (England) ಪ್ರಧಾನಿಯೇ ಇಲ್ಲ ಎಂದು ಟೀಂ ಇಂಡಿಯಾದ ಮಾಜಿ ಆಟಗಾರ ವಾಸಿಮ್ ಜಾಫರ್ (Wasim Jaffer) ವ್ಯಂಗ್ಯವಾಡಿದ್ದಾರೆ.

    ಟ್ವಿಟ್ಟರ್‌ನಲ್ಲಿ ಭಾರತ, ಶ್ರೀಲಂಕಾ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡದ ಕುರಿತಾಗಿ ವ್ಯಂಗ್ಯವಾಡಿರುವ ಜಾಫರ್, ಭಾರತ ತಂಡದಲ್ಲಿ ಗಂಟೆಗೆ 150ಕ್ಕೂ ಹೆಚ್ಚು ವೇಗದಲ್ಲಿ ಬೌಲಿಂಗ್ ಮಾಡುವ ಬೌಲರ್ ಇಲ್ಲ. ಪಾಕಿಸ್ತಾನ ತಂಡದಲ್ಲಿ ಮ್ಯಾಚ್ ಫಿನಿಶರ್ ಕೊರತೆ ಕಾಡುತ್ತಿದೆ. ಇದನ್ನೂ ಓದಿ: ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ಟಿ20 ವಿಶ್ವಕಪ್ ಟೂರ್ನಿಯಿಂದಲೇ ಔಟ್

    ನ್ಯೂಜಿಲೆಂಡ್ ತಂಡ ಆಸ್ಟ್ರೇಲಿಯಾ ನೆಲದಲ್ಲಿ ಉತ್ತಮ ಸಾಧನೆ ಮಾಡಿಲ್ಲ. ಶ್ರೀಲಂಕಾ ತಂಡಕ್ಕೆ ಅನುಭವವಿಲ್ಲ. ಅತ್ತ ಇಂಗ್ಲೆಂಡ್‍ನಲ್ಲಿ ಪ್ರಧಾನಿಯೇ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಗ್ರೀನ್‍ಗೆ ಸಿಕ್ತು ಟಿ20 ವಿಶ್ವಕಪ್ ಗ್ರೀನ್ ಸಿಗ್ನಲ್

    ಇದೀಗ ಜಾಫರ್ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಅತ್ತ ಇಂಗ್ಲೆಂಡ್‍ನ ಬ್ರಿಟನ್‍ನಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಪ್ರಧಾನಿ ಲಿಜ್ ಟ್ರಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಧಿಕಾರಕ್ಕೆ ಬಂದ ಕೆಲವೇ ವಾರಗಳಲ್ಲಿ ಬ್ರಿಟನ್‌ ಪ್ರಧಾನಿ ಸ್ಥಾನಕ್ಕೆ ಲಿಜ್‌ ಟ್ರಸ್‌ ರಾಜೀನಾಮೆ

    ಅಧಿಕಾರಕ್ಕೆ ಬಂದ ಕೆಲವೇ ವಾರಗಳಲ್ಲಿ ಬ್ರಿಟನ್‌ ಪ್ರಧಾನಿ ಸ್ಥಾನಕ್ಕೆ ಲಿಜ್‌ ಟ್ರಸ್‌ ರಾಜೀನಾಮೆ

    ಲಂಡನ್:‌ ಬ್ರಿಟನ್‌ನಲ್ಲಿ (United Kingdom) ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಪ್ರಧಾನಿ ಲಿಜ್‌ ಟ್ರಸ್‌ (Liz Truss) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ವಾರಗಳಲ್ಲಿ ಅವರು ರಾಜೀನಾಮೆ ಘೋಷಿಸಿದ್ದಾರೆ.

    ಆರ್ಥಿಕ ಮತ್ತು ಅಂತಾರಾಷ್ಟ್ರೀಯ ಅಸ್ಥಿರತೆಯ ಸಮಯದಲ್ಲಿ ತಾನು ಅಧಿಕಾರಕ್ಕೆ ಬಂದಿದ್ದೆ. ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಉತ್ತರಾಧಿಕಾರಿ ಆಯ್ಕೆಯಾಗುವವರೆಗೂ ನಾನು ಪ್ರಧಾನಿಯಾಗಿಯೇ ಮುಂದುವರಿಯುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಿಷಿ ಸುನಾಕ್‌ಗೆ ಸಿಗುತ್ತಾ ಬ್ರಿಟನ್ ಪ್ರಧಾನಿ ಹುದ್ದೆ?

    ಬ್ರಿಟನ್‌ ಪ್ರಧಾನಿ ಲಿಜ್‌ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಅವರ ಸರ್ಕಾರದಿಂದ ಒಬ್ಬೊಬ್ಬರೇ ಅಧಿಕಾರದಿಂದ ಹೊರ ನಡೆದರು. ಈಚೆಗಷ್ಟೇ ಹಣಕಾಸು ಸಚಿವ ಸ್ಥಾನಕ್ಕೆ ಕ್ವಾಸಿ ಕ್ವಾರ್ಟೆಂಗ್‌ ರಾಜೀನಾಮೆ ನೀಡಿದ್ದರು. ಬುಧವಾರ ಕೂಡ ಗೃಹ ಸಚಿವೆ, ಭಾರತೀಯ ಮೂಲದ ಸುಯೆಲ್ಲಾ ಬ್ರೇವರ್‌ಮನ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

    ಬಲಪಂಥೀಯ ಆರ್ಥಿಕತೆಯ ಕಾರ್ಯಸೂಚಿಯಿಂದ ಪ್ರಧಾನಿ ಟ್ರಸ್‌ ಹಿಂದೆ ಸರಿಯುತ್ತಿದ್ದಂತೆಯೇ ಅವರು ಕೂಡ ಅಧಿಕಾರದಲ್ಲಿ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಹೇಳಲಾಗಿತ್ತು. ಅದರಂತೆಯೇ ಟ್ರಸ್‌ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಅಗ್ನಿ ಅವಘಡದಿಂದ ಕುಸಿದ ಮಸೀದಿಯ ಗುಮ್ಮಟ- ವೀಡಿಯೋ ವೈರಲ್

    ಪ್ರಧಾನಿ ಸ್ಥಾನಕ್ಕೆ ಬೋರಿಸ್‌ ಜಾನ್ಸನ್‌ ರಾಜೀನಾಮೆ ನೀಡಿದ ಬಳಿಕ ನಡೆದ ಚುನಾವಣೆಯಲ್ಲಿ ಲಿಜ್‌ ಟ್ರಸ್‌ ಮತ್ತು ಭಾರತ ಮೂಲದ ರಿಷಿ ಸುನಾಕ್‌ ನಡುವೆ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆದಿತ್ತು. ಕೊನೆಗೆ ಸುನಕ್‌ ಮಣಿಸಿ ಟ್ರಸ್‌ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ರಿಷಿ ಸುನಾಕ್‌ಗೆ ಸಿಗುತ್ತಾ ಬ್ರಿಟನ್ ಪ್ರಧಾನಿ ಹುದ್ದೆ?

    ರಿಷಿ ಸುನಾಕ್‌ಗೆ ಸಿಗುತ್ತಾ ಬ್ರಿಟನ್ ಪ್ರಧಾನಿ ಹುದ್ದೆ?

    ಲಂಡನ್‌: ಭಾರತ ಮೂಲದ ರಿಷಿ ಸುನಾಕ್(Rishi Sunak) ಮುಂದೆ ಬ್ರಿಟನ್‌ ಪ್ರಧಾನಿಯಾಗುತ್ತಾರಾ ಹೀಗೊಂದು ಪ್ರಶ್ನೆ ಎದ್ದಿದೆ.

    ಅಧಿಕಾರಕ್ಕೆ ಏರಿದ ಕೆಲ ದಿನದಲ್ಲೇ ತಮ್ಮ ಪಕ್ಷದ ಸಂಸದರ ವಿಶ್ವಾಸವನ್ನು ಕಳೆದುಕೊಂಡಿರುವ ಬ್ರಿಟನ್ ಪ್ರಧಾನಿ ಲಿಜ್ ಟ್ರಸ್(Liz Truss) ಅವರ ಬದಲು ರಿಷಿ ಸುನಾಕ್‌ ಪ್ರಧಾನಿಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

    ಪ್ರಧಾನಿ ಹುದ್ದೆಯನ್ನು ಏರುವ ಮೊದಲು ಲಿಜ್‌ ಟ್ರಸ್‌ ಹಲವು ಅಶ್ವಾಸನೆ ನೀಡಿದ್ದರು. ಆದರೆ ಅಧಿಕಾರಕ್ಕೆ ಏರಿದ ಬಳಿಕ ಟ್ರಸ್ಟ್‌ ಉಲ್ಟಾ ಹೊಡೆದ ಹಿನ್ನೆಲೆಯಲ್ಲಿ ರಿಷಿ ಸುನಾಕ್ ಈಗ ಬುಕ್ಕಿಗಳ ಫೇವರಿಟ್ ಆಗಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಅಪಾಯಕಾರಿ ಅಲ್ಲ, ಜವಾಬ್ದಾರಿಯುತ ರಾಷ್ಟ್ರ: ಶೆಹಬಾಜ್ ಷರೀಫ್

    ಅಧಿಕಾರಕ್ಕೆ ಬಂದ ಬಳಿಕವೂ ಹಣದುಬ್ಬರ(Inflation) ನಿಯಂತ್ರಣಕ್ಕೆ ಬಂದಿಲ್ಲ. ಸಚಿವೆಯಾಗಿದ್ದಾಗ ಟ್ರಸ್‌ ಅವರ ಆಪ್ತರಾಗಿದ್ದ ಕ್ಯಾಸಿ ಕ್ವಾರ್ಟೆಂಗ್‌ರನ್ನು ಹುದ್ದೆಯಿಂದ ತೆಗೆದುಹಾಕಿದ್ದಕ್ಕೆ ಸಂಸದರು ಟ್ರಸ್‌ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದ್ದರು. ಆರ್ಥಿಕತೆಯನ್ನು ಸರಿ ಮಾಡುವ ನಿಟ್ಟಿನಲ್ಲಿ ಟ್ರಸ್‌ ಕೈಗೊಂಡ ಹಠಾತ್‌ ನಿರ್ಧಾರಗಳಿಗೆ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

    ರಿಷಿ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿಯವರ ಪುತ್ರಿ ಅಕ್ಷತಾ ಮೂರ್ತಿಯ ಪತಿಯಾಗಿದ್ದು, ಬ್ರಿಟನ್‌ನಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿ ಎಂದೇ ಹೆಸರು ಪಡೆದಿದ್ದಾರೆ. ಇವರನ್ನು ಬೋರಿಸ್ ಜಾನ್ಸನ್ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಭಾರತದ ರಿಷಿಗೆ ಸೋಲು – ಬ್ರಿಟನ್ ಪ್ರಧಾನಿ ಗದ್ದುಗೆ ಏರಿದ ಲಿಜ್ ಟ್ರಸ್

    ಭಾರತದ ರಿಷಿಗೆ ಸೋಲು – ಬ್ರಿಟನ್ ಪ್ರಧಾನಿ ಗದ್ದುಗೆ ಏರಿದ ಲಿಜ್ ಟ್ರಸ್

    ಲಂಡನ್: ಬ್ರಿಟನ್‍ನ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ.

    ಬೋರಿಸ್ ಜಾನ್ಸನ್ ಬ್ರಿಟನ್ ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಬಳಿಕ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬ ಪ್ರಶ್ನೆ ಮನೆಮಾಡಿತ್ತು. ಬಳಿಕ ಭಾರತ ಮೂಲದ ರಿಷಿ ಸುನಾಕ್ ರಕ್ಷಣಾ ಕಾರ್ಯದರ್ಶಿ ಬೆನ್ ವ್ಯಾಲೇಸ್, ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್, ಮಾಜಿ ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ಪ್ರಧಾನಿ ಹುದ್ದೆಗೆ ಸ್ಫರ್ಧಿಸಿದ್ದರು. ಇವರಲ್ಲಿ ರಿಷಿ ಸುನಕ್ ಮತ್ತು ಲಿಜ್ ಟ್ರಸ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದರು. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಅಂತಿಮ ಸುತ್ತಿನಲ್ಲಿ ರಿಷಿ ಸುನಾಕ್ ಮತ್ತು ಲಿಜ್ ಟ್ರಸ್ ನಡುವೆ ಬಾರಿ ಪೈಪೋಟಿ ಇತ್ತು. ಅಂತಿಮವಾಗಿ ಲಿಜ್ ಟ್ರಸ್ 81,326 ಮತಗಳನ್ನು ಪಡೆದು ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ರಿಟನ್‍ನ ಮೂರನೇ ಮಹಿಳಾ ಪ್ರಧಾನಿಯಾಗಿ ಲೀಜ್ ಟ್ರಸ್ ಆಯ್ಕೆಯಾಗಿದ್ದಾರೆ. ರಿಷಿ ಸುನಕ್ 60,399 ಮತಗಳನ್ನು ಪಡೆದು ಪರಾಭವಗೊಂಡರು. ಇದನ್ನೂ ಓದಿ: ನಮಗೆ ದ್ರೋಹ ಬಗೆದ ಉದ್ಧವ್ ಠಾಕ್ರೆಗೆ ಪಾಠ ಕಲಿಸಬೇಕು: ಅಮಿತ್ ಶಾ ಗುಡುಗು

    ಪರಾಭವಗೊಂಡ ರಿಷಿ ಸುನಕ್ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿಯವರ ಪುತ್ರಿ ಅಕ್ಷತಾ ಮೂರ್ತಿಯ ಪತಿಯಾಗಿದ್ದು, ಬ್ರಿಟನ್‍ನಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದರು. ಇವರನ್ನು ಬೋರಿಸ್ ಜಾನ್ಸನ್ 2020ರಲ್ಲಿ ಮೊದಲ ಬಾರಿಗೆ ಪೂರ್ಣ ಕ್ಯಾಬೆನೆಟ್ ಸ್ಥಾನವನ್ನು ನೀಡಿದ್ದರು. ಹಣಕಾಸು ಸಚಿವರಾಗಿ ಬೋರಿಸ್ ಜಾನ್ಸನ್ ಸರ್ಕಾರದಲ್ಲಿ ರಿಷಿ ಸುನಾಕ್ ಕಾರ್ಯನಿರ್ವಹಿಸಿದ್ದರು.

    ಆ ಬಳಿಕ ಬೋರಿಸ್ ಜಾನ್ಸನ್ ವಿರುದ್ಧ ಭಿನ್ನಾಭಿಪ್ರಾಯದಿಂದ ಸಾಜಿದ್ ಜಾವೇಜ್ ರಾಜೀನಾಮೆ ನೀಡಿದ ಬೆನ್ನಲ್ಲೇ ರಿಷಿ ಸುನಕ್ ಕೂಡ ಹಣಕಾಸು ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಪ್ರಧಾನಿ ಹುದ್ದೆಗೆ ಸ್ಫರ್ಧಿಸಿ ಅಂತಿಮ ಸುತ್ತಿಗೆ ಆಯ್ಕೆಗೊಂಡಿದ್ದರು. ಇದನ್ನೂ ಓದಿ: ಶಾಸಕ ಜಮೀರ್ ಕಚೇರಿಯಲ್ಲಿ ಅದ್ಧೂರಿ ಗಣೇಶೋತ್ಸವ..!

    ಪ್ರಧಾನಿ ಬೋರಿಸ್ ಜಾನ್ಸನ್ ಜುಲೈ 7 ರಂದು ಕನ್ಸರ್ವೇಟಿವ್ ಪಕ್ಷದ ನಾಯಕತ್ವವನ್ನು ತ್ಯಜಿಸುವುದಾಗಿ ಘೋಷಿಸಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಗೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬ್ರಿಟನ್ ಪ್ರಧಾನಿ ಗದ್ದುಗೆ ಏರಲು ಸಿದ್ಧರಾದ ರಿಷಿ ಸುನಕ್ – ಅಂತಿಮ ಸುತ್ತಿನಲ್ಲಿ ಲಿಜ್ ಟ್ರಸ್

    ಬ್ರಿಟನ್ ಪ್ರಧಾನಿ ಗದ್ದುಗೆ ಏರಲು ಸಿದ್ಧರಾದ ರಿಷಿ ಸುನಕ್ – ಅಂತಿಮ ಸುತ್ತಿನಲ್ಲಿ ಲಿಜ್ ಟ್ರಸ್

    ಲಂಡನ್: ಬ್ರಿಟನ್ ಹಣಕಾಸು ಸಚಿವರಾಗಿದ್ದ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಕ್ ಬ್ರಿಟನ್ ಪ್ರಧಾನಿ ಗದ್ದುಗೆ ಏರಲು ಇನ್ನೊಂದು ಮೆಟ್ಟಿಲು ಮಾತ್ರ ಬಾಕಿ ಇದೆ. ಇಂದು ನಡೆದ 5ನೇ ಸುತ್ತಿನ ಮತದಾನದಲ್ಲಿ 137 ಮತಗಳನ್ನು ಪಡೆಯುವ ಮೂಲಕ ರಿಷಿ ಸುನಕ್ ಮುನ್ನಡೆ ಪಡೆದುಕೊಂಡಿದ್ದಾರೆ.

    ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಸ್ಥಾನಕ್ಕೆ ನಡೆಯುತ್ತಿರುವ ಮತದಾನದ 5ನೇ ಸುತ್ತಿನಲ್ಲಿ ರಿಷಿ ಸುನಕ್ 137 ಮತಗಳನ್ನು ಪಡೆದರೆ, ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ 113 ಮತಗಳನ್ನು ಪಡೆದುಕೊಂಡು ಅಂತಿಮ ಹಂತಕ್ಕೇರಿದ್ದಾರೆ. ಇದನ್ನೂ ಓದಿ: ಅಂತ್ಯಕ್ರಿಯೆಗೆ GST ಸುಳ್ಳೆಂದ ಕೇಂದ್ರ ಸರ್ಕಾರ- ತೆರಿಗೆ ವಾಪಸ್‍ಗೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

    ಕನ್ಸರ್ವೇಟಿವ್ ಪಕ್ಷದ ನಾಯಕನಾಗುವ ಸ್ಪರ್ಧೆಯಲ್ಲಿ ಮುನ್ನಡೆ ಸಾಧಿಸಿರುವ ಸುನಕ್ 5ನೇ ಸುತ್ತಿನ ಮತದಾನದಲ್ಲಿ ಮುನ್ನಡೆ ಪಡೆದು ಅಂತಿಮ ಸುತ್ತಿನ ಇಬ್ಬರು ಅಬ್ಯರ್ಥಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಲಿಜ್ ಟ್ರಸ್ ಮತ್ತು ಸುನಕ್ ನಡುವೆ ಯಾರು ಪ್ರಧಾನಿಯಾಗಿ ಆಯ್ಕೆ ಆಗಲಿದ್ದಾರೆ ಎಂಬ ಕುತೂಹಲ ಮನೆ ಮಾಡಿದೆ. ಇದನ್ನೂ ಓದಿ: ಟೋಲ್‍ಗೇಟ್‍ನಲ್ಲಿ ಅಂಬುಲೆನ್ಸ್ ಅಪಘಾತ ಪ್ರಕರಣ- ಸಾವಿನ ಸಂಖ್ಯೆ 4ಕ್ಕೆ ಏರಿಕೆ

    3ನೇ ಸುತ್ತಿನ ಮತದಾನದಲ್ಲಿ ಸುನಾಕ್ 115 ಮತಗಳನ್ನು ಪಡೆದಿದ್ದರು. 4ನೇ ಸುತ್ತಿನ ಮತದಾನದಲ್ಲಿ 118 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನ ಪಡೆದರೆ, 5ನೇ ಸುತ್ತಿನಲ್ಲೂ 137 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನದಲ್ಲೇ ಮುಂದುವರಿದು ಪ್ರಧಾನಿ ಸ್ಥಾನಕ್ಕೆ ಇನ್ನಷ್ಟು ಹತ್ತಿರವಾಗಿದ್ದಾರೆ. ಇದೀಗ ಉಳಿದಿರುವ ಇಬ್ಬರಲ್ಲಿ ಪಕ್ಷದ ಸಂಸದರಿಂದ 120 ಮತ ಗಳಿಸಿದ ಅಥವಾ ಕನ್ಸರ್ವೇಟಿವ್ ಪಕ್ಷದ ಸಂಸದರ ಮೂರನೇ ಒಂದು ಭಾಗದಷ್ಟು ಮತ ಪಡೆದವರು ಪ್ರಧಾನಿ ಹುದ್ದೆಗೇರಲಿದ್ದಾರೆ.

    ಪ್ರಧಾನಿ ಬೋರಿಸ್ ಜಾನ್ಸನ್ ಜುಲೈ 7ರಂದು ಕನ್ಸರ್ವೇಟಿವ್ ಪಕ್ಷದ ನಾಯಕತ್ವವನ್ನು ತ್ಯಜಿಸುವುದಾಗಿ ಘೋಷಿಸಿದ್ದರು. ಸೆಪ್ಟೆಂಬರ್ 5ರಂದು ಹೊಸ ನಾಯಕನ ಆಯ್ಕೆಯಾಗುವವರೆಗೂ ಬೋರಿಸ್ ಜಾನ್ಸನ್ ಪ್ರಧಾನಿಯಾಗಿ ಮುಂದುವರಿಯುತ್ತಾರೆ. ಆ ಬಳಿಕ ರಿಷಿ ಸುನಕ್ ಅಥವಾ ಲಿಜ್ ಟ್ರಸ್ ಪ್ರಧಾನಿ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]