ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ (Transportation Agency) ಆರ್ಥಿಕ ಮುಗ್ಗಟ್ಟು ಹಿನ್ನೆಲೆ ಸಾರಿಗೆ ಸಂಸ್ಥೆಗಳಿಗೆ ಹಣಕಾಸಿನ ಸಂಸ್ಥೆಗಳಿಂದ ಸಾಲ (Loan) ತೆಗೆದುಕೊಳ್ಳಲು ಸರ್ಕಾರ ಅನುಮೋದನೆ ನೀಡಿದೆ.
ಸರ್ಕಾರದ ಗ್ಯಾರಂಟಿಯೊಂದಿಗೆ ಷರತ್ತುಬದ್ಧ ಅನುಮತಿಯನ್ನು ಸರ್ಕಾರ ಕೊಟ್ಟಿದೆ. ನಾಲ್ಕೂ ಸಾರಿಗೆ ಸಂಸ್ಥೆಗಳಿಂದ ಒಟ್ಟು 2,000 ಕೋಟಿ ರೂ. ಸಾಲ ಪಡೆಯಲು ಸರ್ಕಾರ ಅನುಮತಿ ನೀಡಿದೆ. ಸಾರಿಗೆ ನೌಕರರ ಭವಿಷ್ಯನಿಧಿ ಹಾಗೂ ಇಂಧನ ಪಾವತಿಗೆ ಸಾಲ ಪಡೆಯಲು ಅನುಮೋದನೆ ನೀಡಲಾಗಿದೆ. ಇದನ್ನೂ ಓದಿ: ಮೋದಿ ಮೆಚ್ಚಿದ ಗಾಯಕಿಯನ್ನು ಮದ್ವೆಯಾಗಲಿದ್ದಾರೆ ತೇಜಸ್ವಿ ಸೂರ್ಯ
ಯಾವ ಸಾರಿಗೆ ಸಂಸ್ಥೆಗೆ ಎಷ್ಟು ಸಾಲ?
ಕೆಎಸ್‌ಆರ್‌ಟಿಸಿ – 623 ಕೋಟಿ ರೂ.
ಬಿಎಂಟಿಸಿ – 589 ಕೋಟಿ ರೂ.
ಎನ್‌ಡಬ್ಲ್ಯೂಕೆಆರ್‌ಟಿಸಿ – 646 ಕೋಟಿ ರೂ.
ಕೆಕೆಆರ್‌ಟಿಸಿ – 141 ಕೋಟಿ ರೂ.
ಬೀದರ್: ಆನ್‌ಲೈನ್ ಗೇಮ್ ಹುಚ್ಚಾಟದಿಂದ ಲಕ್ಷಾಂತರ ರೂ. ಸಾಲ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಈ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ (Bhalki) ತಾಲೂಕಿನ ಜ್ಯೋತಿ ತಾಂಡದಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ ಮೈಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಎರಡೂ ದಿನಗಳ ಕಾಲ ನರಳಾಡಿ ಇಂದು (ಡಿ.28) ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.
ಮೃತ ಯುವಕ ಬಿ.ಫಾರ್ಮಸಿ ಪದವೀಧರನಾಗಿದ್ದು, ಆನ್ಲೈನ್ ಗೇಮ್ ಹುಚ್ಚಿಗೆ ಬಿದ್ದು 5 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದ. ಇದಕ್ಕೂ ಮುನ್ನ 10 ಲಕ್ಷ ರೂ. ಸಾಲ ಮಾಡಿದ್ದ, ಅದನ್ನು ಆತನ ಕುಟುಂಬಸ್ಥರು ತೀರಿಸಿದ್ದರು. ಅದಾದ ಬಳಿಕ ಮತ್ತೆ 5 ಲಕ್ಷ ರೂ. ಸಾಲ ಮಾಡಿದ್ದನು. ಈ ವಿಷಯ ಮನೆಯಲ್ಲಿ ಗೊತ್ತಾದರೆ ತೊಂದರೆ ಆಗುತ್ತದೆ ಎಂದು ಆತ್ಮಹತ್ಯೆಗೆ ಯತ್ನಿಸಿದ್ದನು. ಈ ಕುರಿತು ಮೇಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ – ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿ 6 ಮಂದಿ ವಿರುದ್ಧ ಎಫ್ಐಆರ್
ಬೆಂಗಳೂರು: 2023-24ರ ಅವಧಿಯಲ್ಲಿ ನಮ್ಮದು ಒಟ್ಟು ಸಾಲ (Loan) 90,280 ಕೋಟಿ ರೂ. ಇತ್ತು. 2024-25ರಲ್ಲಿ 1.4 ಲಕ್ಷ ಕೋಟಿ ಸಾಲ ಮಾಡಿದ್ದೇವೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದ್ರೆ ನಮ್ಮದು ಸಾಲದ ಪ್ರಮಾಣ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ಯಾವುದೇ ಸರ್ಕಾರ ತನ್ನ ಕೆಲಸಗಳಿಗೆ ಹಣ ಖರ್ಚು ಮಾಡಲು ಸಾಲ ಮಾಡಬೇಕಾಗುತ್ತದೆ. ಸಾಮರ್ಥ್ಯ ನೋಡಿಕೊಂಡು ಸಾಲ ಮಾಡಬೇಕು. ಎಷ್ಟು ಸಾಲ ಕೊಡಬೇಕು ಅಂತ ಕೇಂದ್ರ ಸರ್ಕಾರ ನಿಗದಿ ಮಾಡುತ್ತದೆ. ಅದರ ಪ್ರಕಾರ ನಾವು ಸಾಲ ಪಡೆಯುತ್ತೇವೆ, ಸಾಲದ ಮಿತಿ ಕೊಟ್ಟಷ್ಟು ಸಾಲ ಪಡೆದಿದ್ದೇವೆ. ನಿಯಮದ ಪ್ರಕಾರ 3 ಮಾನದಂಡ ನಿಗದಿಯಾಗಿದೆ. ನಮ್ಮಲ್ಲಿ ವಿತ್ತೀಯ ಕೊರತೆಯು (Financial Deficit) 2024-25ರಲ್ಲಿ 2.9% ಇದೆ, 2023-24ರಲ್ಲಿ 2.6% ಇತ್ತು ಎಂದು ತಿಳಿಸಿದರು.
2023-24 ರಲ್ಲಿ ನಮ್ಮದು ಒಟ್ಟು ಸಾಲ 90,280 ಕೋಟಿ ರೂ. ಇತ್ತು. 2024-25ರಲ್ಲಿ 1.4 ಲಕ್ಷ ಕೋಟಿ ರೂ. ಸಾಲ ಮಾಡಿದ್ದೇವೆ. ಆಂಧ್ರ, ಅಸ್ಸಾಂ, ಹಿಮಾಲಯ ಪ್ರದೇಶ, ಕೇರಳ, ಮಹಾರಾಷ್ಟ್ರ, ಮಧ್ಯ ಪ್ರದೇಶ, ತಮಿಳುನಾಡು ಸೇರಿ ಬೇರೆ ರಾಜ್ಯಕ್ಕೆ ಹೋಲಿಕೆ ಮಾಡಿದರೆ ನಮ್ಮ ಸಾಲದ ಪ್ರಮಾಣ ಕಡಿಮೆ ಎಂದು ಸಿಎಂ ಹೇಳಿದರು. ಇದನ್ನೂ ಓದಿ: ಪ್ರತಿಭಟನೆಯಲ್ಲಿ ಭಾಗಿಯಾಗಿ ಸಮಾಜದ ಋಣ ತೀರಿಸಿ – ವಚನಾನಂದ ಶ್ರೀಗಳ ವಿರುದ್ಧ ಮಾಜಿ ಶಾಸಕ ಗರಂ
ಅನಗತ್ಯ ಖರ್ಚಿಗೆ ಕಡಿವಾಣ:
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ. ಬಜೆಟ್‌ನಲ್ಲಿ ಒದಗಿಸಲಾಗಿದೆ. ಇದು ಹೆಚ್ಚಾಗಬಹುದು. ಹೆಚ್ಚಾದರೆ ಪೂರಕ ಬಜೆಟ್‌ನಲ್ಲಿ ಸೇರಿಸಿಕೊಳ್ತೀವಿ. ಗ್ಯಾರಂಟಿಯಿಂದ ರಾಜ್ಯದ ಬೊಕ್ಕಸ ಖಾಲಿ ಆಯ್ತು ಅಂತ ವಿಪಕ್ಷಗಳು ಆರೋಪ ಮಾಡುತ್ತಿವೆ. ಇದರಲ್ಲಿ ಯಾವುದೇ ಹುರುಳಿಲ್ಲ. ಅಭಿವೃದ್ಧಿಗೆ ಹಣ ಇದೆ, ರಾಜ್ಯದಲ್ಲಿ ಈ ವರ್ಷ 3.71 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಆಗಿದೆ. ಇದರಲ್ಲಿ 1.20 ಲಕ್ಷ ಕೋಟಿ ರೂ. ಅಭಿವೃದ್ಧಿಗೆ ಬಳಕೆ ಮಾಡ್ತಿದ್ದೇವೆ. ಇನ್ನೂ ಈ ಬಾರಿ 14 ಸಾವಿರ ಕೋಟಿ ರೂ. ವಿತ್ತೀಯ ಕೊರತೆ ಆಗಿದ್ದು, ಅನಗತ್ಯ ಖರ್ಚಿಗೆ ಕಡಿವಾಣ ಹಾಕಿ, ಸರಿ ದೂಗಿಸುತ್ತೇವೆ ಎಂದು ಸಿಎಂ ವಿವರಿಸಿದರು.
ಇದೇ ವೇಳೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾಯಾರಣಸ್ವಾಮಿ ಮಾತನಾಡಿ, 52 ಸಾವಿರ ಕೋಟಿ ರೂ. ಗ್ಯಾರಂಟಿಗೆ ಹಣ ಇಟ್ಡಿದ್ದೇವೆ ಅಂತ ಸಿಎಂ ಹೇಳಿದ್ದಾರೆ. SCSP-TSPಯಿಂದ ಹಣ ತೆಗೆದಿದ್ದೀರಾ? ಅದನ್ನ ಯಾವುದಕ್ಕೆ ಖರ್ಚು ಮಾಡಿದ್ದೀರಾ? ಗ್ಯಾರಂಟಿ ಕೊಡಬೇಡಿ ಎಂದು ನಾವು ಹೇಳಿಲ್ಲ. ಆದ್ರೆ ಅಭಿವೃದ್ಧಿಗೆ ಹಣ ಕೊಟ್ಟಿಲ್ಲ, ಗ್ಯಾರಂಟಿ ನಿಲ್ಲಿಸಿ ಅಂತ ನಿಮ್ಮ ಶಾಸಕರೇ ಹೇಳ್ತಿದ್ದಾರೆ, ಇದಕ್ಕೇನು ಹೇಳ್ತೀರಾ? ಅಂತ ಪ್ರಶ್ನೆ ಮಾಡಿದರು.
ಇದಕ್ಕೆ ಪ್ರತ್ಯುತ್ತರ ನೀಡಿದ ಸಿಎಂ, ಗಣಿಗಾರಿಕೆಗೆ ತೆರಿಗೆ ಪರಿಷ್ಕರಣೆ ಮಾಡಿದ್ದೇವೆ. ಅದರ ಪ್ರಕಾರ 4,700 ಕೋಟಿ ರೂ. ಹೆಚ್ಚುವರಿ ಆದಾಯ ಬರುತ್ತದೆ. ಶಾಸಕ ರಾಜು ಕಾಗೆ ಅವರು ಕೇಳಿದ್ದು, ಹೆಚ್ಚುವರಿ ಅನುದಾನ ಕೊಡಿ ಅಂತ. ಅದನ್ನ ಕೊಡೋಕೆ ಹೇಳಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಸೋನಿಯಾ ಗಾಂಧಿ ಮನವೊಲಿಸಲು ವಯನಾಡಿಗೆ ನೂರು ಮನೆ: ಈಶ್ವರಪ್ಪ ವ್ಯಂಗ್ಯ
ಮುಂದುವರಿದು, SCSP-TSP ಯೋಜನೆ ಹಣ ಬಿಜೆಪಿ ಅವಧಿಯಲ್ಲಿ ಕಡಿಮೆ ಮಾಡಿದ್ದರು. ನಾವು ಈ ಬಾರಿ 39,000 ಕೋಟಿ ರೂ. ಇಟ್ಟಿದ್ದೇವೆ. ಬಿಜೆಪಿ ಅಧಿಕಾರ ಮಾಡ್ತಿರೋ ಬೇರೆ ರಾಜ್ಯಗಳಲ್ಲಿ SCSP-TSP ಕಾಯ್ದೆಯೇ ಇಲ್ಲ. ಇಡೀ ದೇಶದಲ್ಲಿ ಕರ್ನಾಟಕ, ಆಂಧ್ರ, ತೆಲಂಗಾಣ ಬಿಟ್ಟು ಇನ್ಯಾವುದೇ ರಾಜ್ಯದಲ್ಲಿ ಈ ಕಾಯ್ದೆ ಇಲ್ಲ. ಅಲ್ಲದೇ ಪರಿಶಿಷ್ಟ ಜಾತಿಯವರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಇರೋದು ಕರ್ನಾಟಕದಲ್ಲಿ ಮಾತ್ರ ಎಂದು ಸ್ಪಷ್ಟನೆ ನೀಡಿದರು. ಸಿಎಂ ಉತ್ತರಕ್ಕೆ ವಿಪಕ್ಷ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು, ಈ ವೇಳೆ ಸದನದಲ್ಲಿ ಗದ್ದಲ ಏರ್ಪಟ್ಟಿತು.
ಬಸವೇಶ್ವರನಗರದ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಗುರುಪ್ರಸಾದ್ ನಂತರ ಜಯನಗರ ಕನಕನಪಾಳ್ಯದ ಅಶೋಕ್ ಪಿಲ್ಲರ್ ಬಳಿ ವಾಸವಿದ್ದರು. ಕೆಲದಿನಗಳ ಕಾಲ ಮನೆ ಬಿಟ್ಟು ಒಬ್ಬಂಟಿಯಾಗಿ ಹೋಟೆಲಿನಲ್ಲಿ ಗುರುಪ್ರಸಾದ್ ರೂಂ ಮಾಡಿಕೊಂಡಿದ್ದರು.
ಸದ್ಯ ಕಳೆದ ಕೆಲ ತಿಂಗಳುಗಳಿಂದ ಮಾದನಾಯಕನಹಳ್ಳಿ ಬಳಿಯ ನ್ಯೂ ಹೆವೆನ್ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು. ಮಾದನಾಯಕನಹಳ್ಳಿ ಬಳಿಯ ಫ್ಲಾಟ್ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿಯನ್ನು ಗುರುಪ್ರಸಾದ್ ನೀಡಿರಲಿಲ್ಲ.
ಚೆಕ್ ಬೌನ್ಸ್ ಪ್ರಕರಣದಲ್ಲಿ ಗುರುಪ್ರಸಾದ್ ಕೋರ್ಟ್, ಕಚೇರಿ ಅಲೆಯುತ್ತಿದ್ದರು. ಈ ನಡುವೆ ಜಯನಗರದಲ್ಲಿ ಪುಸ್ತಕ ಖರೀದಿ ಮಾಡಿ ಹಣ ನೀಡಿಲ್ಲ ಎಂಬ ಆರೋಪದ ಅಡಿ ಮತ್ತೊಂದು ಕೇಸ್ ದಾಖಲಾಗಿತ್ತು. ಹೀಗಾಗಿ ಆರ್ಥಿಕವಾಗಿ ಒಂದಷ್ಟು ಸಮಸ್ಯೆಯನ್ನು ಗುರುಪ್ರಸಾದ್ ಎದುರಿಸುತ್ತಿದ್ದರು.
ಚಿಕ್ಕಬಳ್ಳಾಪುರ: ಇದ್ದ ಕೆಲಸ ಬಿಟ್ಟು, ಈಗ ಬೈಕ್ (Bike) ಇಎಂಐ ಕಂತು (Loan) ಹೇಗೆ ಕಟ್ತೀಯಾ? ಎಂದು ತಂದೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗ ನೇಣಿಗೆ ಶರಣಾದ ಘಟನೆ ಮಾಡೇಶ್ವರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಗ್ರಾಮದ ನಿಖಿಲ್ (25) ನೇಣಿಗೆ ಶರಣಾಗಿರುವ ಯುವಕ. ಆತ ಖಾಸಗಿ ಕಾರ್ಖಾನೆಗೆ ಕೆಲಸಕ್ಕೆ ತೆರಳುತ್ತಿದ್ದ. ಇತ್ತೀಚೆಗೆ ಕೆಲಸ ಬಿಟ್ಟು ಹಸು ಮೇಯುಸುತ್ತಿದ್ದ. ಅಲ್ಲದೇ ಇತ್ತೀಚೆಗಷ್ಟೇ ಸಾಲ ಮಾಡಿ ಬೈಕ್ ಖರೀದಿಸಿದ್ದ. ಇದಕ್ಕೆ ಪೋಷಕರು ಈಗ ಬೈಕ್ ಅಗತ್ಯವೆನಿತ್ತು? ಕೆಲಸ ಬೇರೆ ಬಿಟ್ಟಿದ್ದೀಯಾ ತಿಂಗಳು ತಿಂಗಳು ಇಎಂಐ ಹೇಗೆ ಕಟ್ತೀಯಾ ಎಂದು ಬೈದು ಬುದ್ಧಿವಾದ ಹೇಳಿದ್ದರು.
ಪೋಷಕರ ಮಾತಿಗೆ ಬೇಸತ್ತು, ಹಸು ಮೇಯಿಸಲು ತೆರಳಿದ್ದ ವೇಳೆ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ: ಸಾಲಭಾದೆ (Loan) ತಾಳಲಾರದೇ ಒಂದೇ ಕುಟುಂಬದ ಮೂವರು ನಾಲೆಗೆ ಹಾರಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಕೆರೆಬೀದಿಯಲ್ಲಿ ನಡೆದಿದೆ.
ಶ್ರೀನಿವಾಸ್ (43), ಆತನ ಪತ್ನಿ ಶ್ವೇತಾ (36) ಹಾಗೂ ಪುತ್ರಿ ನಾಗಶ್ರೀ (13) ಮೃತ ದುರ್ದೈವಿಗಳು. ಶ್ರೀನಿವಾಸ್ ಕಾರು ಚಾಲಕನಾಗಿದ್ದು, ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಪುತ್ರಿ ನಾಗಶ್ರೀ ಏಳನೇ ತರಗತಿ ಓದುತ್ತಿದ್ದಳು. ಇದನ್ನೂ ಓದಿ: 12 ವರ್ಷಗಳಲ್ಲೇ ಬೆಂಗ್ಳೂರು ಮೆಟ್ರೋದಲ್ಲಿ ದಾಖಲೆ ಪ್ರಯಾಣ
ಶ್ರೀನಿವಾಸ್ ಕೊರೊನಾ ಸಂದರ್ಭದಲ್ಲಿ ಡ್ರೈವರ್ ಕೆಲಸ ಬಿಟ್ಟು ಊರಿಗೆ ಮರಳಿದ್ದ. ಆನಂತರದಲ್ಲಿ ಕೆಲಸಕ್ಕೆ ಹೋಗದೇ ಆನ್‌ಲೈನ್ ರಮ್ಮಿ (Online Rummy) ಚಟಕ್ಕೆ ಬಿದ್ದು, ಇದರಿಂದಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಸಾಲ ಮರು ಪಾವತಿಸುವಂತೆ ಸಾಲ ನೀಡಿದವರು ಪೀಡಿಸುತ್ತಿದ್ದರು. ಸಾಲ ವಾಪಾಸ್ ನೀಡಲು ಸಾಧ್ಯವಾಗದೇ ಶ್ರೀನಿವಾಸ್ ಸಂಕಷ್ಟಕ್ಕೆ ಸಿಲುಕಿದ್ದ.
ಪೊಲೀಸರು ಹುಡುಕಾಟ ನಡೆಸಿದ್ದು ಬುಧವಾರ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ಹೇಮಾವತಿ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಎರಡು ಮೃತದೇಹಗಳನ್ನು ಹೊರತೆಗೆದಿದ್ದು, ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಕರಣದಲ್ಲಿ ಮಲ್ಯ ಸೇರಿ ಹತ್ತು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೀಗ ವಿಜಯ್ ಮಲ್ಯಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ಬಾಕಿ ಉಳಿದ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ (Renuka Swamy Murder) ಮುಚ್ಚಿ ಹಾಕಲು ದರ್ಶನ್ (Darshan) ಏನೆಲ್ಲಾ ಮಾಡಲು ಯತ್ನಿಸಿದ್ದರು ಎಂಬ ಸ್ಪೋಟಕ ವಿಚಾರ ಬಯಲಾಗಿದೆ. ಮೊನ್ನೆಯಷ್ಟೇ ದರ್ಶನ್ ಮನೆಯಲ್ಲಿ 37 ಲಕ್ಷ ರೂ., ಪತ್ನಿ ವಿಜಯಲಕ್ಷ್ಮಿ ಬಳಿಯಿಂದ 3 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿತ್ತು.
ವಿಚಾರಣೆ ಮುಂದಾಗುತ್ತಿದ್ದಂತೆ ಮೋಹನ್‌ರಾಜ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ದರ್ಶನ್‌ಗೆ ಈ ಹಣ ನೀಡುವಾಗ ಮೋಹನ್‌ರಾಜ್‌ಗೆ ಕೊಲೆ ವಿಚಾರ ಗೊತ್ತಾಗಿತ್ತಾ ಇಲ್ವಾ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಒಂದೊಮ್ಮೆ ಕೊಲೆ ಪ್ರಕರಣ ಮೊದಲೇ ಗೊತ್ತಿತ್ತು ಎನ್ನುವುದಾದ್ರೆ ಮೋಹನ್‌ರಾಜ್‌ಗೂ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.
ದರ್ಶನ್ ಹಣದ ವಹಿವಾಟುಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೊಲೀಸರು ಐಟಿ ಇಲಾಖೆಗೆ ಪತ್ರ ಬರೆಯಲು ಚಿಂತನೆ ನಡೆಸಿದ್ದಾರೆ.
ಚಿಕ್ಕೋಡಿ: ಸಾಲ (Loan) ಮರುಪಾವತಿ ವಿಳಂಬವಾಗಿದ್ದಕ್ಕೆ ಮಹಿಳೆಯೊಬ್ಬಳು ರೈತನ ಪತ್ನಿ ಹಾಗೂ ಪುತ್ರನನ್ನು ಗೃಹ ಬಂಧನದಲ್ಲಿಟ್ಟಿದ್ದಕ್ಕೆ ಮನನೊಂದು ರೈತ (Farmer) ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಹುಕ್ಕೇರಿಯ (Hukkeri) ಇಸ್ಲಾಂಪುರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ರಾಜು ಖೋತಗಿ ಎಂದು ಗುರುತಿಸಲಾಗಿದೆ. ಮೃತ ರಾಜು ರೈತನಾಗಿದ್ದು, ಭೀಕರ ಬರದಿಂದ ಬೆಳೆ ನಷ್ಟದಿಂದ ಅದೇ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಮಹಿಳೆ ಬಳಿ 5 ತಿಂಗಳ ಹಿಂದೆ 1.5 ಲಕ್ಷ ರೂ. ಸಾಲ ಮಾಡಿದ್ದರು. ಎರಡು ದಿನದ ಹಿಂದೆ ಒಂದೇ ಬಾರಿಗೆ ಹಣ ಕೊಡುವಂತೆ ಸಿದ್ದವ್ವ ಕೇಳಿದ್ದಾಳೆ. ಹಣ ಕೊಡುವ ತನಕ ರೈತನ ಪತ್ನಿ ಹಾಗೂ ಪುತ್ರನನ್ನು ಮನೆಯಲ್ಲಿ ಬಿಟ್ಟು ಹೋಗುವಂತೆ ಹೇಳಿದ್ದಳು. ಬಳಿಕ ರೈತನ ಪತ್ನಿ ಹಾಗೂ ಪುತ್ರನನ್ನು ಎರಡು ದಿನದಿಂದ ಗೃಹ ಬಂಧನದಲ್ಲಿಟ್ಟಿದ್ದಳು. ಮಹಿಳೆ ಬಳಿ ರಾಜು ತನ್ನ ಪತ್ನಿ ಹಾಗೂ ಪುತ್ರನನ್ನು ಗೃಹಬಂಧನದಿಂದ ಬಿಡುವಂತೆ ಪರಿಪರಿಯಾಗಿ ಬೇಡಿಕೊಂಡರೂ ಬಿಡುಗಡೆ ಮಾಡದಿರುವ ಕಾರಣ ಮನನೊಂದು ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಅಪ್ರಾಪ್ತನ ಹುಚ್ಚಾಟಕ್ಕೆ ಇಬ್ಬರು ಟೆಕ್ಕಿಗಳು ಬಲಿ – ಅಪಘಾತದ ಬಗ್ಗೆ ಪ್ರಬಂಧ ಬರೆಯುವಂತೆ ಸೂಚಿಸಿದ ಕೋರ್ಟ್
ರಾಜು ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು 10%ರಷ್ಟು ಬಡ್ಡಿಯನ್ನು ಕಟ್ಟುತ್ತಿದ್ದರು. ಅಲ್ಲದೇ ಒಂದೇ ಬಾರಿ ಹಣ ಮರಳಿಸುವಂತೆ ಸಿದ್ದವ್ವ ಕೇಳಿದಾಗ ಎರಡು ದಿನ ಕಾಲಾವಕಾಶ ಕೇಳಿದ್ದ ಎಂದು ತಿಳಿದು ಬಂದಿದೆ. ಇದಕ್ಕೆ ಒಪ್ಪದ ಮಹಿಳೆಯು ರೈತ, ಪತ್ನಿ ಹಾಗೂ ಪುತ್ರನನ್ನು ಗೃಹ ಬಂದನದಲ್ಲಿಟ್ಟಿದ್ದಳು. ಒಂದು ದಿನದ ಬಳಿಕ ರಾಜುನನ್ನು ಬಿಡುಗಡೆ ಮಾಡಿ, ಮಗ ಮತ್ತು ಪತ್ನಿಯನ್ನು ಗೃಹಬಂಧನದಲ್ಲಿಟ್ಟಳು.
ಈ ಸಂಬಂಧ ದೂರು ನೀಡಲು ತೆರಳಿದಾಗ ಪೊಲೀಸರು ವಿಳಂಬ ಮಾಡಿದ್ದಾರೆ. ಬೆಳಗ್ಗೆಯಿಂದ ಠಾಣೆಯಲ್ಲಿ ಕೂರಿಸಿಕೊಂಡು ರಾತ್ರಿ ವೇಳೆ ದೂರು ದಾಖಲಿಸಿಕೊಂಡಿದ್ದಾರೆ ಎಂದು ಯಮಕನಮರಡಿ ಠಾಣೆ ಪೊಲೀಸರ (Yamakanmardi police) ವಿರುದ್ಧ ರೈತನ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಕೊವಾಕ್ಸಿನ್ ಅಡ್ಡ ಪರಿಣಾಮ ಅಧ್ಯಯನ – ಸಂಶೋಧನಾ ವರದಿ ಕಳಪೆ ಎಂದ ICMR
ಮೈಸೂರು: ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದು, ಜನರನ್ನ ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ (Farmers) ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಒತ್ತಾಯಿಸಿದ್ದಾರೆ.
ಮೈತ್ರಿಗೆ ಭಂಗವಿಲ್ಲ:
ಬಿಜೆಪಿ-ಜೆಡಿಎಸ್ ಮೈತ್ರಿ ಬಿರುಕುಂಟಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ಭಂಗವಾಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಜೆಡಿಎಸ್‌ಗೆ 2 ಸ್ಥಾನ ಬಿಟ್ಟುಕೊಟ್ಟು, ನಾವು 4 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಎಲ್ಲೆಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ?
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಈ ಬಾರಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನ ಗೆದ್ದು ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ-ಚಂದ್ರ ಇರೋದು ಎಷ್ಟು ಸತ್ಯ ಇದು ಅಷ್ಟೆ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು ಈಗಲೇ ಚಿಂತೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾನ ಗೆಲ್ಲುತ್ತೇನೆ. ಕಾಂಗ್ರೆಸ್ ನವರು ಏನೇ ಹೇಳಿದ್ರು ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್ ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದ್ರೆ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ಎಲ್ಲರ ಅಭಿಪ್ರಾಯ ಎಂದು ಯಡಿಯೂರಪ್ಪ ಹೇಳಿದ್ದಾರೆ.