Tag: loc

  • ಕದನ ವಿರಾಮ ಉಲ್ಲಂಘಿಸಿದ ಪಾಕ್ – ಲೀಪಾ ಕಣಿವೆಯ ಎಲ್‌ಒಸಿ ಉದ್ದಕ್ಕೂ ಗುಂಡಿನ ದಾಳಿ

    ಕದನ ವಿರಾಮ ಉಲ್ಲಂಘಿಸಿದ ಪಾಕ್ – ಲೀಪಾ ಕಣಿವೆಯ ಎಲ್‌ಒಸಿ ಉದ್ದಕ್ಕೂ ಗುಂಡಿನ ದಾಳಿ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಲೀಪಾ ಕಣಿವೆಯಲ್ಲಿ (Leepa valley) ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನಿ ಸೇನೆ (Pakistani Army) ಕದನ ವಿರಾಮವನ್ನು ಉಲ್ಲಂಘಿಸಿ (Ceasefire Violation) ಭಾರತೀಯ ಪೋಸ್ಟ್‌ಗಳ ಮೇಲೆ ಗುಂಡು ಹಾರಿಸಿದೆ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್ 26-27ರ ಮಧ್ಯರಾತ್ರಿ ಪಾಕಿಸ್ತಾನ ಸಣ್ಣ ಶಸ್ತ್ರಾಸ್ತ್ರಗಳನ್ನು ಮತ್ತು ಮಾರ್ಟರ್ ಶೆಲ್ಲಿಂಗ್ ಬಳಸಿ ದಾಳಿ ನಡೆಸಿದೆ.

    ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯು ಸೂಕ್ತ ಪ್ರತ್ಯುತ್ತರ ನೀಡಿದೆ ಎಂದು ಮೂಲಗಳು ತಿಳಿಸಿವೆ. ಲೀಪಾ 9 ಕಿ.ಮೀ ಎತ್ತರದ ಕಣಿವೆಯಾಗಿದ್ದು, ಇದು ಕಾಜಿನಾಗ್ ಸ್ಪ್ರಿಂಗ್ ಮೂಲಕ ಹಾದುಹೋಗುತ್ತದೆ ಮತ್ತು ಇದು ಬಹಳ ಹಿಂದಿನಿಂದಲೂ ಒಳನುಸುಳುವಿಕೆ ಪ್ರಯತ್ನಗಳಿಗೆ ಪ್ರಮುಖ ಮಾರ್ಗವಾಗಿದೆ. ಇದನ್ನೂ ಓದಿ: ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ., 25 ಲಕ್ಷ ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಬಿಹಾರಿಗಳಿಗೆ ಮಹಾಘಟಬಂಧನ್ ‘ಗ್ಯಾರಂಟಿ’

    ಮೂರು ದಿನಗಳ ಯುದ್ಧದ ನಂತರ ಪಾಕಿಸ್ತಾನವು ಕದನ ವಿರಾಮಕ್ಕಾಗಿ ಭಾರತಕ್ಕೆ ಮನವಿ ಮಾಡಿದ ಹಿನ್ನೆಲೆ ಕಳೆದ ಮೇ 10ರಿಂದ ಎಲ್‌ಒಸಿ ಕದನ ವಿರಾಮ ಘೋಷಿಸಿತ್ತು. ಆಗಸ್ಟ್ನಲ್ಲಿ ಪೂಂಚ್ ಪ್ರದೇಶದಲ್ಲಿ ಪಾಕಿಸ್ತಾನ ಗುಂಡು ಹಾರಿಸುವ ಮೂಲಕ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂಬ ವರದಿಗಳು ಬಂದವು. ಆದರೆ, ಸೇನೆಯು ಈ ವರದಿಗಳನ್ನು ನಿರಾಕರಿಸಿತ್ತು. ಇದನ್ನೂ ಓದಿ: ಬೆಳಗಾವಿ | ಭಿಕ್ಷೆ ಬೇಡುತ್ತಾ ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಹರಿದ ಲಾರಿ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

  • Jammu Kashmir | ಅಕ್ರಮವಾಗಿ ಗಡಿ ನುಸುಳಲು ಯತ್ನ –  ಇಬ್ಬರು ಉಗ್ರರ ಎನ್‌ಕೌಂಟರ್

    Jammu Kashmir | ಅಕ್ರಮವಾಗಿ ಗಡಿ ನುಸುಳಲು ಯತ್ನ – ಇಬ್ಬರು ಉಗ್ರರ ಎನ್‌ಕೌಂಟರ್

    ಶ್ರೀನಗರ: ಜಮ್ಮು ಕಾಶ್ಮೀರದ (Jammu and Kashmir) ಬಂಡಿಪೋರಾ (Bandipora) ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ (LoC) ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು (Terrorists) ಭದ್ರತಾ ಪಡೆ ಹೊಡೆದುರುಳಿಸಿದೆ.

    ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಎನ್‌ಕೌಂಟರ್ ಮಾಡಿದ್ದಾರೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಇದನ್ನೂ ಓದಿ: ಉಕ್ರೇನ್ ರಷ್ಯಾ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದ ಅಮೆರಿಕ

    ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಭಯೋತ್ಪಾದನಾ ನಿಗ್ರಹ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಶಾಕ್ – ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ರದ್ದು

  • ಭಾರತ ಭಾರೀ ನಷ್ಟದಲ್ಲಿರೋದ್ರಿಂದ ಮತ್ತೆ ಸಂಘರ್ಷ ಮರುಕಳಿಸೋ ಸಾಧ್ಯತೆ ಕಡಿಮೆ: ಪಾಕ್‌ ಸಚಿವ ಇಶಾಕ್‌ ದಾರ್‌

    ಭಾರತ ಭಾರೀ ನಷ್ಟದಲ್ಲಿರೋದ್ರಿಂದ ಮತ್ತೆ ಸಂಘರ್ಷ ಮರುಕಳಿಸೋ ಸಾಧ್ಯತೆ ಕಡಿಮೆ: ಪಾಕ್‌ ಸಚಿವ ಇಶಾಕ್‌ ದಾರ್‌

    ಇಸ್ಲಾಮಾಬಾದ್‌: ಭಾರತ ಭಾರೀ ನಷ್ಟ ಅನುಭವಿಸುತ್ತಿರುವುದರಿಂದ 2 ರಾಷ್ಟ್ರಗಳ ನಡುವೆ ಪೂರ್ಣ ಪ್ರಮಾಣದ ಯುದ್ಧ ಸಂಭವಿಸುವ ಸಾಧ್ಯತೆಗಳು ತೀರಾ ಕಡಿಮೆ ಅಂತ ಪಾಕಿಸ್ತಾನದ (Pakistan) ಸಚಿವ ಇಶಾಕ್‌ ದಾರ್‌ (Ishaq Dar) ಹೇಳಿದ್ದಾರೆ.

    ಗಡಿಯಲ್ಲಿ ಭಾರತದಿಂದ ಉಂಟಾದ ಭಾರೀ ನಷ್ಟಗಳ ಬಗ್ಗೆ ವರದಿಯಾಗುತ್ತಿದ್ದಂತೆ ಇಸ್ಲಾಮಾಬಾದ್‌ನಲ್ಲಿ (Islamabad) ಮಾಧ್ಯಮಗಳೊಂದಿಗೆ ಅವರು ಮಾತನಾಡಿ, ಪಾಕಿಸ್ತಾನ ಶಾಂತಿ ಮಾತುಕತೆಗೆ ಸಿದ್ಧವಾಗಿದ್ದರೂ ಭಾರತ ಆಸಕ್ತಿ ತೋರುತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕೃಷಿ ಬೆಳೆಯನ್ನೇ ಧ್ವಂಸ ಮಾಡೋ ಅಪಾಯಕಾರಿ ಶಿಲೀಂಧ್ರ ಕಳ್ಳ ಸಾಗಾಣೆ-ಅಮೆರಿಕದಲ್ಲಿ ಇಬ್ಬರು ಚೀನಿಯರು ಅರೆಸ್ಟ್‌

    ಸಿಂಧೂ ಜಲ ಒಪ್ಪಂದ ಸೇರಿದಂತೆ ಬಹು ವಿವಾದಾತ್ಮಕ ವಿಷಯಗಳನ್ನೊಳಗೊಂಡ ಸಮಗ್ರ ಚರ್ಚೆಗೆ ಪಾಕಿಸ್ತಾನ ಮುಕ್ತವಾಗಿದೆ. ಆದ್ರೆ ಭಾರತ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಮಾತ್ರ ತೊಡಗಿಕೊಂಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಗ್ರ ಪ್ರೇಮಿ ಪಾಕ್‌ಗೆ ಮಿಲಿಟರಿ ಬಜೆಟ್ಟೇ ಭಸ್ಮಾಸುರ!?

    ಮುಂದುವರಿದು.. ಭಾರತದ ಎಲ್‌ಒಸಿ ಬಳಿ ಗಡಿಯಾಚೆಗಿನ ಭಯೋತ್ಪಾದನೆ ಕಾರ್ಯಾಚರಣೆ ವೇಳೆ ಭಾರೀ ನಷ್ಟ ಅನುಭವಿಸಿದೆ ಅನ್ನೋ ಮಾಹಿತಿಗಳು ಬಂದಿವೆ ಎಂದಿದ್ದಾರೆ. ಆದ್ರೆ ಪಾಕಿಸ್ತಾನದ ಉತ್ತನ ಅಧಿಕಾರಿಗಳು ಈ ಬಗ್ಗೆ ಎಲ್ಲಿಯೂ ಅಧಿಕೃತ ಹೇಳಿಕೆಗಳನ್ನ ನೀಡಿಲ್ಲ. ಇದನ್ನೂ ಓದಿ: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಉಪ್ಪಿನ ಬಿಕ್ಕಟ್ಟು – ಕಾರಣ ಏನು?

    ಕಳೆದ ಏಪ್ರಿಲ್‌ 22ರಂದು ಪಹಲ್ಗಾಮ್‌ನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿ ಬಳಿಕ ನಡೆದ ಭದ್ರತಾ ಸಂಪುಟ ಸಮಿತಿಯಲ್ಲಿ ಭಾರತ ಸಿಂಧೂ ಜಲಒಪ್ಪಂದವನ್ನು ರದ್ದುಗೊಳಿಸುವ ತೀರ್ಮಾನ ಕೈಗೊಂಡಿತ್ತು. ಆದ್ರೆ ಪಾಕಿಸ್ತಾನದ ಶೇ.80 ರಷ್ಟು ಕೃಷಿ ಭೂಮಿಗೆ ಈ ನೀರಿನ ಮೂಲವೇ ಆಧಾರವಾಗಿದೆ. ಸದ್ಯ ಭಾರತದಿಂದ ನೀರಿನ ಪ್ರಮಾಣ ಇಳಿಕೆ ಮಾಡಿರೋದ್ರಿಂದ ಕೃಷಿಯಲ್ಲೂ ಪಾಕಿಸ್ತಾನ ನಷ್ಟ ಅನುಭವಿಸುವ ಆತಂಕದಲ್ಲಿದೆ ಎಂದು ತಿಳಿದುಬಂದಿದೆ.

  • ಎಲ್‌ಒಸಿಯಲ್ಲಿ ಭಾರತ-ಪಾಕ್ ಸಂಘರ್ಷ; ಭಾರತೀಯ ಯೋಧ ಹುತಾತ್ಮ

    ಎಲ್‌ಒಸಿಯಲ್ಲಿ ಭಾರತ-ಪಾಕ್ ಸಂಘರ್ಷ; ಭಾರತೀಯ ಯೋಧ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (LOC) ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ (Andhra Pradesh) ಮೂಲದ ಯೋಧ (Army Jawan) ಹುತಾತ್ಮರಾಗಿದ್ದಾರೆ.

    ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ (Sathya Sai) ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ಹುತಾತ್ಮರಾಗಿದ್ದಾರೆ. ಮುರಳಿ ನಾಯ್ಕ್ ಅವರ ಪಾರ್ಥಿವ ಶರೀರ ಮೇ 10ರ ವೇಳೆಗೆ ಸ್ವಗ್ರಾಮಕ್ಕೆ ತಲುಪುವ ನಿರೀಕ್ಷೆಯಿದೆ. ಇದನ್ನೂ ಓದಿ: ಗುಜರಾತ್ ಸಿಎಂ ಜೊತೆ ಗಡಿ ಜಿಲ್ಲೆಗಳ ಭದ್ರತೆ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ

    ಗುರುವಾರ ರಾತ್ರಿ ಭಾರತದ ವಿರುದ್ಧ ಪಾಕಿಸ್ತಾನ ಸೇನೆ ಜಮ್ಮು ಕಾಶ್ಮೀರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿತು. ಈ ವೇಳೆ ಭಾರತೀಯ ಸೇನೆಯೂ ಪ್ರತಿದಾಳಿ ನಡೆಸಿ ಪಾಕ್‌ಗೆ ತಿರುಗೇಟು ನೀಡಿದೆ. ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಮುರಳಿ ನಾಯ್ಕ್ ಅವರಿಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: India’s Strike | ಪಾಕ್‌ ಮೇಲೆ ಭಾರತ ಪ್ರಯೋಗಿಸಿದ 3 ರಾಷ್ಟ್ರಗಳ ಶಸ್ತ್ರಾಸ್ತ್ರಗಳು ಎಷ್ಟು ಪವರ್‌ಫುಲ್?‌

  • ಉಗ್ರರ ಮೇಲಿನ ದಾಳಿಗೆ ಭಾರತದ ಪ್ರಜೆಗಳ ಮೇಲೆ ಗುಂಡು – 7 ಸಾವು

    ಉಗ್ರರ ಮೇಲಿನ ದಾಳಿಗೆ ಭಾರತದ ಪ್ರಜೆಗಳ ಮೇಲೆ ಗುಂಡು – 7 ಸಾವು

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ (LOC) ಹಾಗೂ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ (Pakistan) ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ 7 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

    ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ (POK) ಭಯೋತ್ಪಾದಕ ತಾಣಗಳನ್ನು ಗುರಿಯಾಗಿರಿಸಿಕೊಂಡು ಭಾರತ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ನಡೆಸಿದೆ. ಸುಮಾರು 100ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಸಬ್‌, ಡೇವಿಡ್‌ ಹೆಡ್ಲಿ ತರಬೇತಿ ಪಡೆದ ಕ್ಯಾಂಪ್‌ ಧ್ವಂಸ: ಭಾರತ

    ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲೆ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಅನೇಕ ಕ್ರಮಗಳನ್ನು ಕೈಗೊಂಡಿತ್ತು. ಮಂಗಳವಾರ ತಡರಾತ್ರಿ 1:45ರ ಸುಮಾರಿಗೆ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ (Operation Sindoor) ಹೆಸರಲ್ಲಿ ಪ್ರಮುಖ ಉಗ್ರರ ತಾಣಗಳನ್ನು ಗುರಿಯಾಗಿಸಿ ಏರ್‌ಸ್ಟ್ರೈಕ್ ನಡೆಸಿತು. ಸುಮಾರು 100ಕ್ಕೂ ಹೆಚ್ಚು ಉಗ್ರರನ್ನು ಸೇನಾಪಡೆ ಹೊಡೆದುರುಳಿಸಿದೆ. ಇದನ್ನೂ ಓದಿ: Operation Sindoor | ತಲೆ ಕೆಡಿಸಿಕೊಂಡು ʻಸಿಂಧೂರʼ ಅರ್ಥ ಹುಡುಕಾಡ್ತಿದೆ ಪಾಕ್‌ – ಗೂಗಲ್‌ನಲ್ಲಿ ಟ್ರೆಂಡ್‌

    ಈ ಬೆನ್ನಲ್ಲೇ ಪಾಕಿಸ್ತಾನ ಎಲ್‌ಒಸಿಯಲ್ಲಿ ಶೆಲ್ ದಾಳಿ ನಡೆಸಿ 7 ನಾಗರಿಕರನ್ನು ಬಲಿ ತೆಗೆದುಕೊಂಡಿದೆ. ಶೆಲ್ ದಾಳಿಯಿಂದಾಗಿ ಪೂಂಚ್‌ನ ವಿವಿಧ ಪ್ರದೇಶಗಳಲ್ಲಿ 35ಕ್ಕೂ ಹೆಚ್ಚು ನಾಗರಿಕರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರದ ಮೂಲಕ ನರಮೇಧಕ್ಕೆ ಉತ್ತರ: ಅಮಿತ್ ಶಾ ಶ್ಲಾಘನೆ

  • ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ – LOCಯಲ್ಲಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ

    ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ – LOCಯಲ್ಲಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ

    ನವದೆಹಲಿ: ಗಡಿಯಲ್ಲಿ ಪಾಕಿಸ್ತಾನ ಮತ್ತೆ ಮತ್ತೆ ಕದನ ವಿರಾಮ ಉಲ್ಲಂಘಿಸುವ ಮೂಲಕ ಭಾರತವನ್ನು ಕೆಣಕುತ್ತಿದೆ. ಎಲ್‌ಒಸಿಯಲ್ಲಿ ಅಪ್ರಚೋದಿತ ಸತತ 7ನೇ ರಾತ್ರಿಯೂ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ.

    ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಉರಿ ಮತ್ತು ಅಖ್ನೂರ್ ವಲಯಗಳ ಕಡೆಗೆ ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದೆ. ಈ ಗುಂಡಿನ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ.

    ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಉಭಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುತ್ತಿದೆ. ಪಾಕಿಸ್ತಾನದ ಪಡೆಗಳು ಬುಧವಾರ ರಾತ್ರಿ ಅಂತರರಾಷ್ಟ್ರೀಯ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿಯನ್ನು ಪ್ರಾರಂಭಿಸಿದವು.

    ಮಂಗಳವಾರ ಕದನ ವಿರಾಮ ಉಲ್ಲಂಘನೆಗಳ ಕುರಿತು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಸಂಭಾಷಣೆ ನಡೆಸಿದರು. ಅಪ್ರಚೋದಿತ ಗುಂಡಿನ ದಾಳಿಯ ವಿರುದ್ಧ ಪಾಕಿಸ್ತಾನ ಸೇನೆಗೆ ಎಚ್ಚರಿಕೆ ನೀಡಿದ್ದಾರೆ.

    ಕದನ ವಿರಾಮ ಉಲ್ಲಂಘನೆಗಳು 2003 ರ ಕದನ ವಿರಾಮ ಒಪ್ಪಂದಕ್ಕೆ ವಿರುದ್ಧವಾಗಿವೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವಂತೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಸಲಹೆ ನೀಡಿದ್ದಾರೆ.

  • ಭಾರತದ ಗಡಿಯಲ್ಲಿ ಗುಂಡಿನ ಚಕಮಕಿ – ಪಾಕ್ ನುಸುಳುಕೋರರನ್ನು ಹಿಮ್ಮೆಟ್ಟಿಸುವ ಪ್ರಯತ್ನದಲ್ಲಿ ಓರ್ವ ಯೋಧ ಹುತಾತ್ಮ

    ಭಾರತದ ಗಡಿಯಲ್ಲಿ ಗುಂಡಿನ ಚಕಮಕಿ – ಪಾಕ್ ನುಸುಳುಕೋರರನ್ನು ಹಿಮ್ಮೆಟ್ಟಿಸುವ ಪ್ರಯತ್ನದಲ್ಲಿ ಓರ್ವ ಯೋಧ ಹುತಾತ್ಮ

    ಶ್ರೀನಗರ: ಜಮ್ಮುವಿನ ಅಖ್ನೂರ್‌ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (LOC) ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ (Indian Army) ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

    ರಜೌರಿ ಜಿಲ್ಲೆಯ ಅಖ್ನೂರ್‌ನಲ್ಲಿ ಪಾಕ್ ನುಸುಳುಕೋರರನ್ನು ಹಿಮ್ಮೆಟ್ಟಿಸುವ ಪ್ರಯತ್ನದಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ (JoC) ಕುಲ್‌ದೀಪ್‌ ಚಂದ್‌ (Kuldeep Chand) ಹುತಾತ್ಮರಾಗಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಸಮರ ಸಾರಿದ ಸೇನೆ – ಜೈಶ್ ಕಮಾಂಡೋ ಸೇರಿ ಮೂವರು ಭಯೋತ್ಪಾದಕರ ಹತ್ಯೆ

    ಶುಕ್ರವಾರ ತಡರಾತ್ರಿ ಕೇರಿ ಭಟ್ಟಾಲ್‌ನ ಅರಣ್ಯ ಪ್ರದೇಶದ ಹೊಳೆ ಬಳಿ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪಿನ ಚಲನವಲನ ಗಮನಿಸಿದ್ದಾರೆ. ಕೂಡಲೇ ಎಚ್ಚೆತ್ತ ಸೇನಾ ಪಡೆದ ಅವರನ್ನು ಎದುರಿಸಲು ಮುಂದಾಗಿವೆ. ಈ ವೇಳೆ ಎರಡೂಕಡೆಯಿಂದ ತೀವ್ರ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಕುಲ್‌ದೀಪ್‌ ಚಂದ್‌ ಅವರಿಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ ಎಂದು ಉನ್ನತ ಸೇನಾಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಕಾರ್ಯಾಚರಣೆ ಮುಂದುವರಿಸಿರುವ ಸೇನೆ ಉಗ್ರರರು ಅಡಗಿರುವ ಪ್ರದೇಶವನ್ನು ಸುತ್ತುವರಿದಿದೆ.

    INDIAN ARMY

    ಕಳೆದ ಫೆಬ್ರವರಿ 11ರಂದು ಇದೇ ಪ್ರದೇಶದಲ್ಲಿ ಭಯೋತ್ಪಾದಕರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು, ಮತ್ತೊಬ್ಬರು ಗಾಯಗೊಂಡಿದ್ದರು. ಇದನ್ನೂ ಓದಿ: ಪಾಕಿಸ್ತಾನದಲ್ಲಿ 5.3 ತೀವ್ರತೆಯ ಭೂಕಂಪ – ಜಮ್ಮು-ಕಾಶ್ಮೀರದಲ್ಲೂ ಭೂಮಿ ಕಂಪಿಸಿದ ಅನುಭವ

    ಕಿಶ್ತ್ವಾರದಲ್ಲಿ ಮೂವರು ಉಗ್ರರ ಹತ್ಯೆ
    ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಿಶ್ತ್ವಾರ್‌ನಲ್ಲಿ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಕಮಾಂಡರ್ ಸೈಫುಲ್ಲಾ ಸೇರಿದಂತೆ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು (Indian Army) ಹತ್ಯೆಗೈದಿವೆ. ಈ ಪೈಕಿ ಕಾರ್ಯಾಚರಣೆಯಲ್ಲಿ ಒಟ್ಟು ನಾಲ್ವರು ಉಗ್ರರನ್ನು ಹತ್ಯೆಗೈಯಲಾಗಿದೆ.

    ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಛತ್ರುವಿನ ಕಾಡಿನ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಸಾಧ್ಯತೆಯನ್ನು ಗಮನಿಸಿದ ಸೇನೆ, ಶೋಧ ಕಾರ್ಯಾಚರಣೆಯನ್ನು ಆರಂಭಿಸಿತು. ಈ ವೇಳೆ ಭಯೋತ್ಪಾದಕರೊಂದಿಗೆ ತೀವ್ರ ಗುಂಡಿನ ಚಕಮಕಿಯಾಗಿದ್ದು, ಒಬ್ಬ ಭಯೋತ್ಪಾದಕನನ್ನು ಸೇನೆಯು ಯಶಸ್ವಿಯಾಗಿ ಹೊಡೆದುರುಳಿಸಿದೆ. ಇದನ್ನೂ ಓದಿ: UPI Down | ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ವ್ಯತ್ಯಯ – ಬ್ಯಾಂಕಿಂಗ್‌ ಸೇವೆಗಳ ಮೇಲೂ ಪರಿಣಾಮ

  • ಭಾರತದ ಗಡಿಯೊಳಗೆ ನುಗ್ಗಲು ಪಾಕ್ ಸೇನೆ ಯತ್ನ – ಭಾರತದಿಂದ ಪ್ರತಿದಾಳಿ

    ಭಾರತದ ಗಡಿಯೊಳಗೆ ನುಗ್ಗಲು ಪಾಕ್ ಸೇನೆ ಯತ್ನ – ಭಾರತದಿಂದ ಪ್ರತಿದಾಳಿ

    ಶ್ರೀನಗರ: ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಜಮ್ಮು ಮತ್ತು ಕಾಶ್ಮೀರದ (Jammu Kashmir) ಪೂಂಚ್ ಪ್ರದೇಶದ ಗಡಿ ನಿಯಂತ್ರಣ ರೇಖೆಯ (LOC) ಉದ್ದಕ್ಕೂ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕ್ ಸೇನೆಯಿಂದ (Pakistan Army) ಅಪ್ರಚೋದಿತ ಗುಂಡಿನ ದಾಳಿ ಮತ್ತು ಅತಿಕ್ರಮಣ ನಡೆದಿದೆ. ಭಾರತದ ಗಡಿಯೊಳಗೆ ನುಗ್ಗಲು ನೋಡಿದ ಪಾಕ್ ಸೇನೆಯನ್ನು ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ.

    ಭಾರತದ ನೆಲಕ್ಕೆ ನುಗ್ಗಿದ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆಯೂ (Indian Army) ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬರ್ತ್ವಾಲ್ ಹೇಳಿದ್ದಾರೆ. ಇದನ್ನೂ ಓದಿ: ಭಾರತದ ಎನ್‌ಜಿಒಗಳಿಗೆ ಜಾರ್ಜ್ ಸೊರೊಸ್ ನಿಧಿಯಿಂದ ಹಣ ವರ್ಗಾವಣೆ – ಪತ್ತೆ ಹಚ್ಚಿದ ಇಡಿ

    ಏಪ್ರಿಲ್ 1 ರಂದು ಗಡಿ ನಿಯಂತ್ರಣ ರೇಖೆಯಾದ್ಯಂತ ದಾಟಿ ಪಾಕಿಸ್ತಾನ ಸೇನೆಯ ಒಳನುಸುಳುವಿಕೆಯ ಪರಿಣಾಮವಾಗಿ ಕೃಷ್ಣ ಘಾಟಿ ವಲಯದಲ್ಲಿ ಗಣಿ ಸ್ಫೋಟ ಸಂಭವಿಸಿದೆ. ಇದರ ನಂತರ ಕದನ ವಿರಾಮ ಒಪ್ಪಂದದ ಉಲ್ಲಂಘನೆ ಮಾಡಿರುವ ಪಾಕಿಸ್ತಾನ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸಾವು ನೋವಿನ ಬಗ್ಗೆ ಯಾವುದೇ ವರದಿ ಆಗಿಲ್ಲ. ಭಾರತ ಪಾಕಿಸ್ತಾನದೊಂದಿಗೆ ಒಟ್ಟು 3,323 ಕಿಮೀ ಗಡಿಯನ್ನು ಹಂಚಿಕೊಂಡಿದೆ. ಇದನ್ನೂ ಓದಿ: ಆರ್‌ಬಿಐ ನೂತನ ಡೆಪ್ಯೂಟಿ ಗವರ್ನರ್ ಆಗಿ ಪೂನಮ್ ಗುಪ್ತಾ ನೇಮಕ

  • ಗಡಿಯಲ್ಲಿ ನೆಲಬಾಂಬ್‌ ಸ್ಫೋಟ – ಐಇಡಿ ಹೊತ್ತುಕೊಂಡು ಭಾರತಕ್ಕೆ ನುಗ್ಗುತ್ತಿದ್ದ ಐವರು ಉಗ್ರರು ಸಾವು

    ಗಡಿಯಲ್ಲಿ ನೆಲಬಾಂಬ್‌ ಸ್ಫೋಟ – ಐಇಡಿ ಹೊತ್ತುಕೊಂಡು ಭಾರತಕ್ಕೆ ನುಗ್ಗುತ್ತಿದ್ದ ಐವರು ಉಗ್ರರು ಸಾವು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಗಡಿಯ ಪೂಂಚ್ ಜಿಲ್ಲೆಯ ಬಟ್ಟಲ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯ (LoC) ಬಳಿ ನೆಲಬಾಂಬ್ ಸ್ಫೋಟದಿಂದ (Landmine blast) ಕನಿಷ್ಠ ಐವರು ಪಾಕ್‌ ಉಗ್ರರು (Pakistani Militants) ಸಾವನ್ನಪ್ಪಿದ್ದಾರೆ.

    ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ದಾಟುತ್ತಿದ್ದ ಉಗ್ರರಲ್ಲಿ ಓರ್ವ ಆಕಸ್ಮಿಕವಾಗಿ ಭಾರತದ ಕಡೆ ಹಾಕಲಾಗಿದ್ದ ನೆಲಬಾಂಬ್ ಮೇಲೆ ಹೆಜ್ಜೆ ಇಟ್ಟಿದ್ದಾನೆ. ಈ ಸಂದರ್ಭದಲ್ಲಿ ಬಾಂಬ್‌ ಸ್ಫೋಟಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

    ಹತ್ಯೆಯಾದ ಉಗ್ರರು ಐಇಡಿಯನ್ನು ಹೊತ್ತುಕೊಂಡು ಸಾಗುತ್ತಿದ್ದರು. ನೆಲಬಾಂಬ್‌ ಸ್ಫೋಟದೊಂದಿಗೆ ಐಇಡಿ ಸಹ ಸ್ಫೋಟಿಸಿದೆ. ಇದನ್ನೂ ಓದಿ: RBI: 5 ವರ್ಷಗಳ ಬಳಿಕ ರೆಪೊ ದರ ಕಡಿತ ಮಾಡಿದ ಆರ್‌ಬಿಐ

    ಉಗ್ರರು ಒಳನುಸುಳಿ ಭಾರತದ ಕಡೆ ಬರುವ ಜಾಗದಲ್ಲಿ ನೆಲಬಾಂಬ್‌ಗಳನ್ನು ಹುದುಗಿ ಇಡಲಾಗಿದೆ. ಕೆಲವೊಮ್ಮೆ ಮಳೆಯಿಂದಲಾಗಿ ಈ ಬಾಂಬ್‌ಗಳು ದೂರ ಸಾಗಿ ಹೋಗುತ್ತವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಇಂಡೋ-ಪಾಕ್ ಗಡಿಯಲ್ಲಿ ಸೈನಿಕರೊಂದಿಗೆ ಯೋಗ ಪ್ರದರ್ಶಿಸಿದ ಶ್ವಾನಗಳು

    ಇಂಡೋ-ಪಾಕ್ ಗಡಿಯಲ್ಲಿ ಸೈನಿಕರೊಂದಿಗೆ ಯೋಗ ಪ್ರದರ್ಶಿಸಿದ ಶ್ವಾನಗಳು

    ಶ್ರೀನಗರ: ಜಮ್ಮುವಿನ ಇಂಡೋ-ಪಾಕ್ ಗಡಿ ನಿಯಂತ್ರಣ ರೇಖೆಯ (LOC) ಬಳಿ ಸೈನಿಕರೊಂದಿಗೆ, ಎರಡು ಶ್ವಾನಗಳು (Army Dogs) ಯೋಗಾಸನದಲ್ಲಿ ಪಾಲ್ಗೊಂಡಿರುವ ವೀಡಿಯೋವನ್ನು ಭದ್ರತಾ ಪಡೆ ಎಕ್ಸ್‌ನಲ್ಲಿ ಹಂಚಿಕೊಂಡಿದೆ.

    ಭದ್ರತಾ ಪಡೆಗಳು (Indian Army) ಬಿಡುಗಡೆ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವೀಡಿಯೋದಲ್ಲಿ ಸಶಸ್ತ್ರ ಪಡೆಗಳ ಭಾಗವಾಗಿರುವ ಶ್ವಾನಗಳು, ಸೈನಿಕರು ಯೋಗ ಮಾಡುವುದನ್ನು ಅವುಗಳು ಸಹ ಯೋಗ ಮ್ಯಾಟ್ ಮೇಲೆ ಅನುಸರಿಸಿವೆ. ಸಾಮಾನ್ಯವಾಗಿ ಗಸ್ತು, ಟ್ರ್ಯಾಕಿಂಗ್, ರಕ್ಷಣಾ ಕಾರ್ಯಾಚರಣೆ ಹಾಗೂ ಸ್ಫೋಟಕಗಳ ಪತ್ತೆಯಂತಹ ಕಾರ್ಯಗಳನ್ನು ನಿರ್ವಹಿಸುವ ಶ್ವಾನಗಳು ಇಂದು ಯೋಗ ಮ್ಯಾಟ್‍ನಲ್ಲಿ ತಮ್ಮ ಚಾಣಾಕ್ಷತೆಯನ್ನು ತೋರಿಸಿರುವುದು ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: Photos Gallery: ಯೋಗ ದಿನಾಚರಣೆ ವೇಳೆ ಕಾಶ್ಮೀರಿ ಮಹಿಳೆಯರೊಂದಿಗೆ ಮೋದಿ ಸೆಲ್ಫಿ!

    ವೀಡಿಯೋದಲ್ಲಿ ಎರಡು ಲ್ಯಾಬ್ರಡಾರ್ ಶ್ವಾನಗಳು ಮುಂಭಾಗದ ಸೈನಿಕರ ಸಾಲಿನಲ್ಲಿ ತರಬೇತುದಾರರ ಸೂಚನೆಗಳನ್ನು ಅನುಸರಿಸಿವೆ. ಅಲ್ಲದೇ ಸೈನಿಕರು ಯೋಗ ಭಂಗಿಗಳನ್ನು ಬದಲಿಸಿದಂತೆ ಅವುಗಳು ಸಹ ಅನುಕರಿಸಿವೆ.

    ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‍ಡಿಆರ್‍ಎಫ್) ಬಿಡುಗಡೆ ಮಾಡಿದ ಮತ್ತೊಂದು ವೀಡಿಯೋದಲ್ಲಿ, ಶ್ವಾನವಾದ ಜಿಮ್ಮಿ, ಪಡೆಯ 13ನೇ ಬೆಟಾಲಿಯನ್‍ನೊಂದಿಗೆ ಯೋಗ ಪ್ರದರ್ಶಿದೆ. ಈ ವೇಳೆ ತನ್ನದೇ ಆದ ಯೋಗದ ಮ್ಯಾಟ್ ಮೇಲೆ ಕುಳಿತು, ತರಬೇತುದಾರರ ಸೂಚನೆಯಂತೆ ಜಿಮ್ಮಿ ಯೋಗ ಪ್ರದರ್ಶನ ಮಾಡಿದೆ. ಇದನ್ನೂ ಓದಿ: ಕಾಶ್ಮೀರದ ದಾಲ್‌ ಸರೋವರ ದಡದಲ್ಲಿ ‘ನಮೋ’ ಯೋಗ – PHOTOS ನೋಡಿ