Tag: loc

  • ಎಲ್‍ಒಸಿ ಬಳಿ ಪಾಕ್ ದಾಳಿ – ಇಬ್ಬರು ಸಾವು, ಆರು ಮಂದಿಗೆ ಗಾಯ

    ಎಲ್‍ಒಸಿ ಬಳಿ ಪಾಕ್ ದಾಳಿ – ಇಬ್ಬರು ಸಾವು, ಆರು ಮಂದಿಗೆ ಗಾಯ

    ಶ್ರೀನಗರ: ಎಲ್‍ಒಸಿ(ಗಡಿ ನಿಯಂತ್ರಣ ರೇಖೆ) ಬಳಿ ಪಾಕಿಸ್ತಾನ ಸೈನಿಕರು ಮಾಡಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಬಂಡಿ ಚೆಚಿಯನ್ ಪ್ರದೇಶದ ಮೇಲೆ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ ಎಂದು ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಇದಕ್ಕೆ ಭಾರತೀಯ ಸೇನೆ ಸೂಕ್ತವಾದ ಪ್ರತೀಕಾರ ತೀರಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.

    ಇಂದು ಮಧ್ಯಾಹ್ನ 2:30ರ ಸುಮಾರಿಗೆ ಭಾರತದ ನಾಗರೀಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೈನಿಕರು ಗುಂಡಿನ ದಾಳಿ ಮತ್ತು ಶೆಲ್ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಗುಲ್ನಾಜ್ ಅಖ್ತರ್ (35) ಮತ್ತು ಶೋಹೈಬ್ (16) ಮೃತಪಟ್ಟಿದ್ದಾರೆ ಮತ್ತು ಆರು ಜನ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದೇವೆ ಎಂದು ಸೇನೆ ತಿಳಿಸಿದೆ.

    ಕಳೆದ ಒಂದು ವಾರದಿಂದ ಪಾಕಿಸ್ತಾನ ಎಲ್‍ಒಸಿ ಬಳಿ ತನ್ನ ಪುಂಡಾಟ ಮುಂದುವರಿಸಿದ್ದು, ಭಾರತೀಯ ನಾಗರಿಕ ಪ್ರದೇಶದ ಮೇಲೆ ಅಪ್ರಚೋದಿತ ಶೆಲ್ ದಾಳಿ ಮತ್ತು ಗುಂಡಿನ ದಾಳಿ ನಡೆಸುತ್ತಿದೆ. ಕಳೆದ ಮೂರು ದಿನಗಳಲ್ಲಿ ಇದಕ್ಕೆ ಎರಡನೇ ಬಾರಿ ಪೂಂಚ್ ಜಿಲ್ಲೆಯ ಎಲ್‍ಒಸಿ ಬಳಿ ಪಾಕಿಸ್ತಾನ ಗುಂಡಿನ ದಾಳಿ ಮಾಡುತ್ತಿದೆ. ನವೆಂಬರ್ 25 ರಿಂದ ಸತತವಾಗಿ ಅಖ್ನೂರ್ ವಲಯದಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಲೇ ಇದೆ ಎಂದು ಸೇನೆ ಹೇಳಿದೆ.

  • ಎಲ್‍ಒಸಿ ಬಳಿ ಟ್ರಕ್‍ನಲ್ಲಿ ಹೋಗ್ತಿದ್ದಾಗ ಸ್ಫೋಟ – ಓರ್ವ ಯೋಧ ಹುತಾತ್ಮ, ಇಬ್ಬರಿಗೆ ಗಾಯ

    ಎಲ್‍ಒಸಿ ಬಳಿ ಟ್ರಕ್‍ನಲ್ಲಿ ಹೋಗ್ತಿದ್ದಾಗ ಸ್ಫೋಟ – ಓರ್ವ ಯೋಧ ಹುತಾತ್ಮ, ಇಬ್ಬರಿಗೆ ಗಾಯ

    ಶ್ರೀನಗರ: ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿದ್ದು, ಓರ್ವ ಯೋಧ ಹುತಾತ್ಮರಾಗಿ ಇಬ್ಬರು ಯೋಧರಿಗೆ ಗಾಯಗೊಂಡಿದ್ದಾರೆ.

    ಈ ಘಟನೆ ಭಾನುವಾರ ಸಂಜೆ ಅಖ್ನೂರ್ ಸೆಕ್ಟರ್ ಬಳಿ ನಡೆದಿದ್ದು, ಎಲ್‍ಓಸಿ ಬಳಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿದೆ. ಈ ವೇಳೆ ಅಲ್ಲಿ ಟ್ರಕ್‍ನಲ್ಲಿ ತೆರೆಳುತ್ತಿದ್ದ ಮೂವರು ಯೋಧರಿಗೆ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಉಧಂಪುರ್ ಪ್ರದೇಶದ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ವರದಿಗಳ ಪ್ರಕಾರ, ಪಲ್ಲನ್ವಾಲಾ ಸೆಕ್ಟರ್ ನ ಲೈನ್ ಆಫ್ ಕಂಟ್ರೋಲ್ (ಎಲ್‍ಒಸಿ) ಬಳಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸಿಡಿದಿದೆ. ಸ್ಫೋಟದ ನಂತರ ಗಾಯಗೊಂಡ ಮೂವರು ಸೇನಾ ಸಿಬ್ಬಂದಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಓರ್ವ ಯೋಧ ಆಸ್ಪತ್ರೆಯಲ್ಲಿ ಹುತಾತ್ಮರಾಗಿದ್ದಾರೆ.

    ಶನಿವಾರ ಪಾಕಿಸ್ತಾನವು ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ನಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿತ್ತು. ಪಾಕಿಸ್ತಾನ ಪಡೆಗಳು ಈ ಪ್ರದೇಶದ ನಾಗರಿಕರನ್ನು ಗುರಿಯಾಗಿಸಿಕೊಂಡು ನಿಯಂತ್ರಣ ರೇಖೆಯ ಉದ್ದಕ್ಕೂ ಅಪ್ರಚೋದಿತ ಶೆಲ್ ದಾಳಿ ನಡೆಸಿದ್ದವು.

  • ಪಾಕಿನ 9 ಜೀವಂತ ಮಾರ್ಟರ್ ಶೆಲ್‍ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಯೋಧರು

    ಪಾಕಿನ 9 ಜೀವಂತ ಮಾರ್ಟರ್ ಶೆಲ್‍ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಯೋಧರು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಹಾರಿಸಿದ್ದ 9 ಜೀವಂತ ಮಾರ್ಟರ್ ಶೆಲ್‍ಗಳನ್ನು ಭಾರತೀಯ ಭದ್ರತಾ ಪಡೆ ನಿಷ್ಕ್ರಿಯಗೊಳಿಸಿದೆ.

    ಪಾಕಿಸ್ತಾನ ಸೇನೆಯು ಪೂಂಚ್ ಮತ್ತು ರಾಜೌರಿ ಜಿಲ್ಲೆಯ ಸಾರ್ವಜನಿಕರನ್ನು ಗುರಿ ಮಾಡಿಕೊಂಡು ದಾಳಿ ನಡೆಸುತ್ತಿದೆ. ಆದ್ದರಿಂದ ಗಡಿ ನಿಯಂತ್ರಣ ರೇಖೆ ಬಳಿ ಹಾಗೂ ಫಾರ್ವರ್ಡ್ ಪೋಸ್ಟ್‌ಗಳ ಬಳಿ ಸಣ್ಣ ಶಸ್ತ್ರಾಸ್ತ್ರ ಮತ್ತು ಮಾರ್ಟರ್ ಶೆಲ್‍ಗಳನ್ನು ಪಾಕ್ ಹಾರಿಸಿತ್ತು. ಇದನ್ನೂ ಓದಿ:ಶರಣಾದ ಪಾಕ್ – ಶ್ವೇತ ಬಾವುಟ ತೋರಿಸಿ ಮೃತದೇಹ ಹೊತ್ತೊಯ್ದ ಇಮ್ರಾನ್ ಸೇನೆ

    ಬುಧವಾರ ಮೆಂಧರ್ ವಲಯದ ಬಾಲಕೋಟೆ, ಸ್ಯಾಂಡೋಟೆ ಮತ್ತು ಬಾಸೋನಿ ಪ್ರದೇಶಗಳಲ್ಲಿ 120 ಎಂಎಂ ಮತ್ತು 81 ಎಂಎಂನ 9 ಮಾರ್ಟರ್ ಶೆಲ್‍ಗಳನ್ನು ಭದ್ರತಾ ಪಡೆ ಯೋಧರು ಸುರಕ್ಷಿತವಾಗಿ ನಿಷ್ಕ್ರಿಯಗೊಳಿಸಿದ್ದಾರೆ. ಈ ಕೆಲವು ಮಾರ್ಟರ್ ಶೆಲ್‍ಗಳು ವಲಯದ ಗ್ರಾಮ ಪ್ರದೇಶಗಳಲ್ಲಿ ಕೂಡ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:ಪಾಕ್ ಸ್ಫೋಟಕ ನಾಶಗೊಳಿಸಿದ ಭಾರತೀಯ ಯೋಧರು – ವಿಡಿಯೋಗೆ ಭಾರೀ ಮೆಚ್ಚುಗೆ

    ಈ ಹಿಂದೆ ಭಾನುವಾರ ಮೇಂದಾರ್ ಸೆಕ್ಟರ್ ನ ಬಾಲಕೋಟ್ ಪ್ರದೇಶದ ಮನೆಯೊಂದರ ಬಳಿ ಸ್ಫೋಟಕದ ಶೆಲ್ ಬಿದ್ದಿತ್ತು. ಇದನ್ನು ಕೆಲ ಗ್ರಾಮಸ್ಥರು ಗಮನಿಸಿದ್ದು, ಈ ಬಗ್ಗೆ ಸೇನಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಮಾಹಿತಿ ತಿಳಿದ ತಕ್ಷವೇ ಸೇನೆಯಲ್ಲಿನ ತಜ್ಞರು ಸ್ಥಳಕ್ಕೆ ಬಂದು ಸ್ಫೋಟಿಸದ ಮಾರ್ಟರ್ ಶೆಲ್ ಅನ್ನು ಸುರಕ್ಷಿತವಾಗಿ ನಾಶಗೊಳಿಸಿದ್ದರು.

  • ಭಾರತಕ್ಕೆ ನುಸುಳಲು ತುದಿಗಾಲಲ್ಲಿ ನಿಂತಿದ್ದಾರೆ 50ಕ್ಕೂ ಹೆಚ್ಚು ಉಗ್ರರು

    ಭಾರತಕ್ಕೆ ನುಸುಳಲು ತುದಿಗಾಲಲ್ಲಿ ನಿಂತಿದ್ದಾರೆ 50ಕ್ಕೂ ಹೆಚ್ಚು ಉಗ್ರರು

    – ಇಬ್ಬರು ಉಗ್ರರಿಂದ ಭಯಾನಕ ಮಾಹಿತಿ ಬಹಿರಂಗ

    ನವದೆಹಲಿ: ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ಪಾಕಿಸ್ತಾನ ಭಾರೀ ಸಂಚು ರೂಪಿಸಿದ್ದು, ಪಾಕಿಸ್ತಾನಿ ಸೈನಿಕರ ಸಹಾಯದಿಂದ 50ಕ್ಕೂ ಹೆಚ್ಚು ಲಷ್ಕರ್-ಇ-ತೋಯ್ಬಾ(ಎಲ್‍ಇಟಿ) ಉಗ್ರರು ದೇಶ ಪ್ರವೇಶಿಸಲು ಕಾಯುತ್ತಿದ್ದಾರೆ ಎಂಬ ಭಯಾನಕ ಮಾಹಿತಿ ಪ್ರಕಟವಾಗಿದೆ.

    ಎಲ್‍ಇಟಿಯೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ಪಾಕ್ ನಾಗರಿಕರು ಕಾಶ್ಮೀರದ ಮೂಲಕ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಇವರ ವಿಚಾರಣೆ ವೇಳೆ 50 ಉಗ್ರರು ಭಾರತಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಅಲ್ಲದೆ, ಪಾಕಿಸ್ತಾನಿ ಸೈನಿಕರು ಹಾಗೂ ಆಂತರಿಕ ಗುಪ್ತಚರ ದಳದ ಸಹಾಯದಿಂದ ಭಾರತ ಪ್ರವೇಶಿಸಲು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿಯನ್ನು ಈ ಇಬ್ಬರು ಹೊರ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಪಾಕಿಸ್ತಾನದ ಪ್ರಜೆಗಳಾದ ಖಲೀಲ್ ಅಹ್ಮದ್ ಮತ್ತು ಮೊಜಾಮ್ ಖೋಕರ್ ಇಬ್ಬರೂ ವಿಚಾರಣೆ ವೇಳೆ ಮಾಹಿತಿ ನೀಡಿದ್ದು, ಪಾಕಿಸ್ತಾನದ ಸೈನಿಕರು ಕಚಾರ್ಬನ್ ಪೋಸ್ಟ್ ಮೂಲಕ ಭಯೋತ್ಪಾದಕರನ್ನು ಭಾರತಕ್ಕೆ ನುಸುಳಲು ಸಹಾಯ ಮಾಡುತ್ತಿದ್ದಾರೆ. ಇದಕ್ಕಾಗಿ ಪಾಕಿಸ್ತಾನ ಸೇನೆ ಮತ್ತು ಐಎಸ್‍ಐ ಗಡಿ ನಿಯಂತ್ರಣ ರೇಖೆಯಾದ್ಯಂತ(ಎಲ್‍ಓಸಿ) ಒಂದು ಡಜನ್‍ಗೂ ಹೆಚ್ಚು ಲಾಂಚಿಂಗ್ ಪ್ಯಾಡ್(ಉಗ್ರರಿಗೆ ಎಲ್ಲ ರೀತಿಯ ತರಬೇತಿ ನೀಡಿ ಅವರನ್ನು ಸಂಪೂರ್ಣವಾಗಿ ಸಿದ್ಧಗೊಳಿಸಿ ಶಸ್ತ್ರಾಸ್ತ್ರಗಳನ್ನು ನೀಡಿ ದೇಶದ ಒಳಗಡೆ ಕಳುಹಿಸಲು ಸ್ಥಾಪಿಸಲಾದ ಕೇಂದ್ರ) ಗಳನ್ನು ಸಕ್ರಿಯಗೊಳಿಸಿವೆ.

    ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಓಕೆ)ದ ಮೂರು ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಯೋತ್ಪಾದಕರಿದ್ದು, ಪಾಕ್ ಸೇನೆ ಪಿಓಕೆಯ ಮೂರು ಲಾಂಚ್ ಪ್ಯಾಡ್‍ಗಳಲ್ಲಿ ಐಎಸ್‍ಐ ಭಯೋತ್ಪಾದಕರಿಗೆ ಆಶ್ರಯ ನೀಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪಿಓಕೆಯ ಲಿಪಾ ಕಣಿವೆಯ ಲಾಂಚ್ ಪ್ಯಾಡ್‍ನಲ್ಲಿ 100ಕ್ಕೂ ಹೆಚ್ಚು ಭಯೋತ್ಪಾದಕರು ತಂಗಿದ್ದಾರೆ ಎಂದು ಶಂಕಿಸಲಾಗಿದೆ.

    ಲಾಂಚ್ ಪ್ಯಾಡ್‍ಗಳಲ್ಲಿನ ಭಯೋತ್ಪಾದಕರು ಜೈಷ್-ಎ-ಮೊಹಮ್ಮದ್ ಹಾಗೂ ಅಲ್-ಬದ್ರ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಲಿಪಾ ಲಾಂಚ್ ಪ್ಯಾಡ್ ಜಮ್ಮು ಕಾಶ್ಮೀರದ ತಂಗ್‍ಧಾರ್ ಹಾಗೂ ಉರಿ ವಲಯದಲ್ಲಿದೆ. ಪಿಓಕೆಯ ಲ್ಯಾಂಜೋಟೆ ಮತ್ತು ಕಲು ಲಾಂಚ್‍ಪ್ಯಾಡ್‍ಗಳಲ್ಲಿ 60ರಿಂದ 70 ಭಯೋತ್ಪಾದಕರಿದ್ದಾರೆ. ಈ ಕಲು ಲಾಂಚ್ ಪ್ಯಾಡ್ ಮೂಲಕ ಸಹ ಜಮ್ಮು ಕಾಶ್ಮೀರವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಇಬ್ಬರು ಪಾಕಿಸ್ತಾನಿ ಪ್ರಜೆಗಳು ಕಾಶ್ಮೀರವನ್ನು ಪ್ರವೇಶಿಸಲು ಯತ್ನಿಸುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ ಎಂದು ಉನ್ನತ ಭದ್ರತಾ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

    ಕಣಿವೆಯಲ್ಲಿ ಶಾಂತಿ ಭಂಗಗೊಳಿಸಲು ಭಯೋತ್ಪಾದಕರನ್ನು ಒಳನುಸುಳಿಸುವಲ್ಲಿ ವಿಫಲವಾದ್ದರಿಂದ ಪಾಕಿಸ್ತಾನ ಹತಾಶವಾಗಿದೆ ಎಂದು ಸೇನೆಯ 15 ಕಾಪ್ರ್ಸ್‍ನ ಜನರಲ್ ಆಫೀಸರ್ ಕಮಾಂಡಿಂಗ್(ಜಿಓಸಿ) ಲೆಫ್ಟಿನೆಂಟ್ ಜನರಲ್ ಕೆಜೆಎಸ್ ಧಿಲ್ಲಾನ್ ಅವರು ಕಾಶ್ಮೀರದ ಎಡಿಜಿಪಿ ಮುನಿರ್ ಖಾನ್ ಅವರಿಂದೊಗೆ ನಡೆದ ಜಂಟಿ ಸುದ್ದಿಗೋಷ್ಠಿ ವೇಳೆ ತಿಳಿಸಿದ್ದಾರೆ.

    ಎಲ್‍ಇಟಿಗೆ ಸಂಬಂಧಿಸಿದ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಆಗಸ್ಟ್ 21ರಂದು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಬಂಧಿತ ಪಾಕಿಸ್ತಾನಿಗಳು ಒಳನುಸುಳುವಿಕೆಯನ್ನು ಒಪ್ಪಿಕೊಂಡಿರುವ ವಿಡಿಯೋವನ್ನು ಸಹ ಸುದ್ದಿಗೋಷ್ಠಿಯಲ್ಲಿ ತೋರಿಸಿದ್ದಾರೆ.

    ಈ ಎರಡು ವಿಡಿಯೋಗಳು ಪಾಕಿಸ್ತಾನಿ ಸೇನೆ ನಾಗರಿಕರನ್ನು ಕಾಶ್ಮೀರಕ್ಕೆ ಹೇಗೆ ತಳ್ಳುತ್ತಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ವಿಶೇಷವಾಗಿ ಆಗಸ್ಟ್ 5ರಿಂದ ಕಾಶ್ಮೀರದಲ್ಲಿ ನೆಲೆಸಿರುವ ಶಾಂತಿಯನ್ನು ಭಂಗಗೊಳಿಸಲು ಕಣಿವೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಕೈಗೊಳ್ಳುತ್ತಿದೆ ಎಂದು ಧಿಲ್ಲಾನ್ ತಿಳಿಸಿದ್ದಾರೆ.

    ಒಳನುಸುಳುವಿಕೆ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಭಾರತೀಯ ಸೇನೆ ಈ ವರೆಗೆ ಇಂತಹ ಅನೇಕ ಪ್ರಯತ್ನಗಳನ್ನು ವಿಫಲಗೊಳಿಸಿದೆ ಎಂದು ಮುನೀರ್ ಖಾನ್ ತಿಳಿಸಿದ್ದಾರೆ.

  • ಉಗ್ರ ಸಂಘಟನೆಗೆ ಯುವಕರನ್ನ ಭರ್ತಿ ಮಾಡಿಕೊಳ್ತಿದೆ ಪಾಕ್

    ಉಗ್ರ ಸಂಘಟನೆಗೆ ಯುವಕರನ್ನ ಭರ್ತಿ ಮಾಡಿಕೊಳ್ತಿದೆ ಪಾಕ್

    ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಗೊಳಿಸಿದ ಬೆನ್ನಲ್ಲೆ ನೆರೆಯ ಪಾಕಿಸ್ತಾನಕ್ಕೆ ಆತಂಕ ಶುರುವಾಗಿದೆ. ಗಡಿ ನಿಯಂತ್ರಣ ರೇಖೆ(ಎಲ್‍ಒಸಿ) ಬಳಿ ಒಳನುಸಳಿಸಲು ಸಂಚು ರೂಪಿಸುತ್ತಿದ್ದು, ಕಾಶ್ಮೀರದಲ್ಲಿ ಶಾಂತಿ ಕದಡುವ ಕಾರ್ಯಕ್ಕೆ ಮುಂದಾಗುವ ಪ್ರಯತ್ನಕ್ಕೆ ನೀಚ ಪಾಕಿಸ್ತಾನ ಮುಂದಾಗುತ್ತಿದೆ ಎನ್ನಲಾಗುತ್ತಿದೆ. ಇದೀಗ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್‍ಐ (ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್) ಉಗ್ರ ಸಂಘಟನೆಗಳಿಗೆ ಯುವಕರನ್ನು ಭರ್ತಿ ಮಾಡಿಕೊಳ್ಳಲು ಆರಂಭಿಸಿದೆ ಎಂದು ಭಾರತೀಯ ಗುಪ್ತಚರ ಇಲಾಖೆ ತಿಳಿಸಿದೆ.

    ಪಾಕಿಸ್ತಾನದ ಮುಜಾಫರ್‍ಬಾದ್ ನಲ್ಲಿರುವ ಬಸನಾಡ್ ಶಿಬಿರದಲ್ಲಿ ಯುವಕರನ್ನು ಉಗ್ರ ಸಂಘಟನೆ ಸೇರ್ಪಡೆಯಾಗುವಂತೆ ಪ್ರಚೋದನೆ ನೀಡಲಾಗುತ್ತಿದೆ. ಉಗ್ರ ಸಂಘಟನೆಗಳಿಗೆ ನೇಮಕವಾದ ಯುವಕರಿಗೆ ಭಯೋತ್ಪಾದನೆ ಚಟುವಟಿಕೆ ಕುರಿತು ತರಬೇತಿಯನ್ನು ನೀಡಲಾಗುತ್ತಿದೆ. ತರಬೇತಿ ಬಳಿಕ ಉಗ್ರರನ್ನು ಐಎಸ್‍ಐ ತನ್ನ ನೇತೃತ್ವದಲ್ಲಿ ಲೀಪಾ ಮತ್ತು ಕೇರನ್ ಸೆಕ್ಟರ್ ನ ಲ್ಯಾಂಚ್ ಪ್ಯಾಡ್ ಮೂಲಕ ಜಮ್ಮು ಕಾಶ್ಮೀರ ಪ್ರವೇಶಿಸಲು ಸಂಚು ರೂಪಿಸಿದೆ ಎಂದು ಗುಪ್ತಚರ ಇಲಾಖೆಯ ಮೂಲಗಳನ್ನು ಆಧಾರಿಸಿ ಮಾಧ್ಯಮ ವರದಿ ಮಾಡಿದೆ. ಇದನ್ನೂ ಓದಿ: ಪಾಕಿಗೆ ಹರಿಯತ್ತಿರುವ ನೀರನ್ನು ನಿಲ್ಲಿಸುವ ಕೆಲಸ ಆರಂಭಗೊಂಡಿದೆ – ಕೇಂದ್ರ ಸರ್ಕಾರ

    ಗುಪ್ತಚರ ಇಲಾಖೆಯ ಮೂಲಗಳ ಪ್ರಕಾರ, ಪೇಶಾವರ ಮತ್ತು ಕ್ವೇಟ್ಟಾ ಪ್ರದೇಶಗಳ ಗುಡ್ಡುಗಾಡು ಇಲಾಖೆಯಲ್ಲಿ ಪಾಕಿಸ್ತಾನ ಭಯೋತ್ಪಾದಕ ಸಂಘಟನೆಗಳಿಗೆ ಯುವಕರನ್ನು ಭರ್ತಿ ಮಾಡಿಕೊಳ್ಳುವುದಕ್ಕೆ ಅಭಿಯಾನವನ್ನು ಆರಂಭಿಸಿದೆ. ಇತ್ತ ಪಾಕ್ ಆಕ್ರಮಿತ ಕಾಶ್ಮೀರದ ಪುಂಛ್, ಬಾಗ್ ಮತ್ತು ಕೊಟಲಿ ಭಾಗಗಳಲ್ಲಿ ಯುವಕರನ್ನು ಉಗ್ರ ಸಂಘಟನೆಗಳಿಗೆ ಭರ್ತಿ ಮಾಡಿಕೊಳ್ಳುವ ಅಭಿಯಾನವನ್ನು ಆರಂಭಿಸಿದೆ. ಆಗಸ್ಟ್ 9 ರಿಂದಲೇ ಮೀರ್‍ಪುರ ಮತ್ತು ಸಿಯಾಲ್‍ಕೋಟ್ ನಲ್ಲಿರು ಉಗ್ರ ಶಿಬಿರಗಳಲ್ಲಿ ಅಂಡರ್ ವಾಟರ್ ಟ್ರೈನಿಂಗ್ ಆರಂಭಗೊಂಡಿದೆ ಎಂಬ ಮಾಹಿತಿ ಲಭಿಸಿದೆ. ಇದನ್ನೂ ಓದಿ: 370 ಕಿತ್ತು ಹಾಕಿದ ಬಳಿಕ ಮೊದಲ ಗುಂಡಿನ ಚಕಮಕಿ – ಉಗ್ರ ಹತ್ಯೆ, ಪೊಲೀಸ್ ಅಧಿಕಾರಿ ಹುತಾತ್ಮ

    ಬಾಲಕೋಟ್ ದಾಳಿ ಬಳಿಕ ತಮ್ಮ ಕ್ಯಾಂಪ್ ಬದಲಿಸಿಕೊಂಡಿರುವ ಉಗ್ರರಿಗೆ 10 ದಿನಗಳ ಬಳಿಕವೇ ರಿಫ್ರೆಶರ್ ಟ್ರೈನಿಂಗ್ ಸಹ ಆರಂಭಗೊಂಡಿದೆ. ಪಾಕ್ ಆಕ್ರಮಿತ ಕಾಶ್ಮೀರದ ಮನಶೆರಾ, ಗುಲಪುರ ಮತ್ತು ಕೊಟಲಿ ಭಾಗಗಳಲ್ಲಿ ತರಬೇತಿ ನಡೆಯುತ್ತಿದೆ. ಗುಪ್ತಚರ ಮಾಹಿತಿ ಅನ್ವಯ ಐಎಸ್‍ಐ ಮತ್ತು ಉಗ್ರರು ಕಾಶ್ಮೀರದ ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಳ್ಳುವ ಪ್ರಯತ್ನಕ್ಕೆ ಮುಂದಾಗುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಭಿನಂದನ್‍ಗೆ ಹೊಡೆದು, ಗಾಯಗೊಳಿಸಿದ್ದ ಪಾಕ್ ಯೋಧನನ್ನು ಹತ್ಯೆಗೈದ ಭಾರತೀಯ ಸೇನೆ

  • ಅಭಿನಂದನ್‍ಗೆ ಹೊಡೆದು, ಗಾಯಗೊಳಿಸಿದ್ದ ಪಾಕ್ ಯೋಧನನ್ನು ಹತ್ಯೆಗೈದ ಭಾರತೀಯ ಸೇನೆ

    ಅಭಿನಂದನ್‍ಗೆ ಹೊಡೆದು, ಗಾಯಗೊಳಿಸಿದ್ದ ಪಾಕ್ ಯೋಧನನ್ನು ಹತ್ಯೆಗೈದ ಭಾರತೀಯ ಸೇನೆ

    ನವದೆಹಲಿ: ಪಾಕ್ ಭೂಪ್ರದೇಶದಲ್ಲಿ ಪತನಗೊಂಡಿದ್ದ ಭಾರತೀಯ ಯುದ್ಧ ವಿಮಾನದ ಪೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಸೆರೆ ಹಿಡಿದು ಹಿಂಸೆ ನೀಡಿದ್ದ ಪಾಕ್ ಯೋಧನೊಬ್ಬನನ್ನು ಭಾರತೀಯ ಯೋಧರು ಹತ್ಯೆಗೈದಿದ್ದಾರೆ.

    ಪಾಕಿಸ್ತಾನದ ಅಹ್ಮದ್ ಖಾನ್ ಭಾರತೀಯ ಯೋಧರ ಗುಂಡಿಗೆ ಬಲಿಯಾದ ಯೋಧ. ಅಹ್ಮದ್ ಖಾನ್ ಪಾಕ್ ಸೇನೆಯಲ್ಲಿ ಸುಬೇದಾರ್ ಆಗಿ ಕೆಲಸ ಮಾಡುತ್ತಿದ್ದ. ಅಹ್ಮದ್ ಖಾನ್ ಆಗಸ್ಟ್ 17ರಂದು ಕಾಶ್ಮೀರದ ನಕ್ಯಾಲ್ ಗಡಿ ನಿಯಂತ್ರಣಾ ರೇಖೆಯ ಮೂಲಕ ಭಾರತದ ಭೂಪ್ರದೇಶದೊಳಕ್ಕೆ ನುಸುಳಲು ಯತ್ನಿಸಿದ್ದ. ಇದನ್ನು ಗಮನಿಸಿದ ನಮ್ಮ ಸೈನಿಕರು ಗುಂಡು ಹಾರಿಸಿದ್ದಾರೆ. ಪರಿಣಾಮ ಅಹ್ಮದ್ ಖಾನ್‍ಗೆ ಗುಂಡು ತಗುಲಿ ಪ್ರಾಣ ಬಿಟ್ಟಿದ್ದಾನೆ. ಇದನ್ನೂ ಓದಿ: ಆರ್ 73 ಸೆಲೆಕ್ಟ್ ಮಾಡಿದ್ದೇನೆ : ಅಭಿನಂದನ್ ಕೊನೆಯ ರೇಡಿಯೋ ಸಂದೇಶ – ಡಾಗ್ ಫೈಟ್ ಹೇಗೆ ನಡೆಯಿತು?

     

    ಅಹ್ಮದ್ ಖಾನ್ ನೌಶೆರಾ ಸುಂದರ್ ಬಾನಿ ಹಾಗೂ ಪಲ್ಲಾನ್ ವಾಲಾ ಸೆಕ್ಟರ್ ಪ್ರದೇಶದಲ್ಲಿ ಭಾರತದೊಳಗೆ ನುಸುಳುವ ಉಗ್ರರಿಗೆ ಸಹಕರಿಸುತ್ತಿದ್ದ. ಉತ್ತಮ ತರಬೇತಿ ಪಡೆದಿದ್ದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಎಂಬ ಮಾಹಿತಿ ಸೇನಾ ಮೂಲಗಳಿಂದ ಲಭ್ಯವಾಗಿದೆ.

    ಕೃಷ್ಣ ಘಾಟಿ ಪ್ರದೇಶದಲ್ಲಿ ಆಗಸ್ಟ್ 17ರಂದು ಪಾಕ್ ಸೇನೆ ಗುಂಡಿನ ದಾಳಿ ನಡೆಸಿತ್ತು. ಈ ಮೂಲಕ ಅತಿಕ್ರಮಣಕಾರರು ಭಾರತದೊಳಗೆ ನುಸುಳಲು ಸಹಕರಿಸುತಿತ್ತು. ಇದರಿಂದಾಗಿ ಭಾರತೀಯ ಸೇನೆಯು ಪ್ರತಿ ದಾಳಿ ನಡೆಸಿದ ಸಂದರ್ಭದಲ್ಲಿ ಅಹಮ್ಮದ್ ಖಾನ್ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

    ಬಾಲಾಕೋಟ್ ಏರ್ ಸ್ಟ್ರೈಕ್ ನಂತರ ಪಾಕಿಸ್ತಾನ ತನ್ನ ಎಫ್-16 ಯುದ್ಧ ವಿಮಾನದ ಮೂಲಕ ಭಾರತವನ್ನು ಗುರಿಯಾಗಿಸಿಕೊಂಡು ವಾಯು ದಾಳಿ ನಡೆಸಿದ ಸಂದರ್ಭದಲ್ಲಿ ಅಭಿನಂದನ್ ವರ್ಧಮಾನ್ ತಮ್ಮ ಮಿಗ್-21 ವಿಮಾನದ ಮೂಲಕ ಪಾಕ್ ವಿಮಾನವನ್ನು ಹೊಡೆದುರುಳಿಸಿದ್ದರು. ಈ ವೇಳೆ ಅಭಿನಂದನ್ ಅವರ ಮಿಗ್-21 ವಿಮಾನ ಪಾಕಿಸ್ತಾನದಲ್ಲಿ ಪತನಗೊಂಡಿತ್ತು. ಆಗ ಪಾಕ್ ಕೆಲ ಯೋಧರು ಅಭಿನಂದನ್ ಅವರ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ಅವರನ್ನು ಹಿರಿಯ ಅಧಿಕಾರಿಗಳಿಗೆ ಒಪ್ಪಿಸಿದ್ದರು. ಸುಮಾರು 58 ಗಂಟೆಗಳ ಕಾಲ ಅಭಿನಂದನ್ ಪಾಕಿಸ್ತಾನದ ಕಸ್ಟಡಿಯಲ್ಲೇ ಇದ್ದರು. ನಂತರ ಕೇಂದ್ರ ಸರ್ಕಾರ ಪಾಕ್ ಮೇಲೆ ಒತ್ತಡ ಹೇರಿ ಅಭಿನಂದನ್ ಅವರನ್ನು ಬಿಡಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿತ್ತು.

  • ಸ್ವಾತಂತ್ರ್ಯ ದಿನವೇ ಭಾರತದ ಗುಂಡೇಟಿಗೆ ಮೂವರು ಪಾಕ್ ಸೈನಿಕರು ಬಲಿ

    ಸ್ವಾತಂತ್ರ್ಯ ದಿನವೇ ಭಾರತದ ಗುಂಡೇಟಿಗೆ ಮೂವರು ಪಾಕ್ ಸೈನಿಕರು ಬಲಿ

    ನವದೆಹಲಿ: ಸ್ವಾತಂತ್ರ್ಯ ದಿನದಂದು ಪಾಕ್ ಸೇನೆಯ ಮೂವರು ಸೈನಿಕರು ಭಾರತ ಸೇನಾ ಪಡೆಗಳ ಗುಂಡಿನ ದಾಳಿಗೆ ಸಾವನ್ನಪ್ಪಿದ್ದಾರೆ.

    ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ್ದಕ್ಕೆ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸುತ್ತಿರುವ ಪಾಕ್ ಸೇನೆ ಇಂದು ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಲು ಆರಂಭಿಸಿತ್ತು. ಈ ದಾಳಿಗೆ ಭಾರತ ಸೈನಿಕರು ಪ್ರತಿದಾಳಿ ನಡೆಸಿ ಗುಂಡಿನ ಸುರಿಮಳೆಗೈದಿದ್ದರು. ಪರಿಣಾಮ ಭಾರತದ ಸೈನಿಕರ ಗುಂಡೇಟಿಗೆ ಮೂವರು ಪಾಕ್ ಸೈನಿಕರು ಮೃತಪಟ್ಟಿದ್ದಾರೆ.

    ಪಾಕಿಸ್ತಾನ ಡಿಜಿಐಸ್‍ಪಿಆರ್ ಅಬ್ದುಲ್ ಗಫೂರ್ ಸೈನಿಕರು ಮೃತಪಟ್ಟ ವಿಚಾರವನ್ನು ಟ್ವೀಟ್ ಮಾಡಿ ತಿಳಿಸಿದ್ದಾರೆ. ಭಾರತ ಕದನ ವಿರಾಮವನ್ನು ಉಲ್ಲಂಘಿಸಿ ದಾಳಿ ನಡೆಸಿದ್ದು, ನಮ್ಮ ಮೂವರು ಸೈನಿಕರು ಮೃತಪಟ್ಟಿದ್ದಾರೆ. ನಾವು ನಡೆಸಿದ ಪ್ರತಿ ದಾಳಿಗೆ ಭಾರತದ ಐವರು ಸೈನಿಕರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

    ನಮ್ಮ ಸೈನಿಕರು ಯಾರೂ ಮೃತಪಟ್ಟಿಲ್ಲ ಭಾರತ ಸೈನ್ಯದ ಮೂಲಗಳನ್ನು ಆಧಾರಿಸಿ ಮಾಧ್ಯಮ ವರದಿ ಮಾಡಿದೆ.

    ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ಪಾಕಿಸ್ತಾನ ಉಗ್ರರನ್ನು ಭಾರತಕ್ಕೆ ಗಡಿಯಲ್ಲಿ ಕಳುಹಿಸಲು ಸದಾ ಸಿದ್ಧವಾಗಿರುತ್ತದೆ. ಈ ಸಂದರ್ಭದಲ್ಲಿ ಒಂದು ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸಿ ಭಾರತದ ಸೈನಿಕರ ಗಮನವನ್ನು ಸೆಳೆದು ಉಗ್ರರಿಗೆ ನುಸುಳಲು ಸಹಾಯ ಮಾಡುತ್ತದೆ. ಪಾಕಿಸ್ತಾನ ಈ ಕುತಂತ್ರ ಭಾರತಕ್ಕೆ ಗೊತ್ತಾಗಿದ್ದು ಗಡಿಯಲ್ಲಿ ಹೆಚ್ಚಿನ ಸಂಖ್ಯೆ  ಸೈನಿಕರನ್ನು ನಿಯೋಜನೆ ಮಾಡಿ ಉಗ್ರರ ಜೊತೆ ಪಾಕ್ ಸೈನಿಕರನ್ನು ಹತ್ಯೆ ಮಾಡಿ ತಿರುಗೇಟು ನೀಡುತ್ತಿದೆ. ಇದನ್ನೂ ಓದಿ: ಉಗ್ರರ ಜೊತೆ ಸೈನಿಕರ ಹೆಣ ಬಿದ್ದಿದೆ. ಶ್ವೇತ ಬಾವುಟ ತೋರಿಸಿ,ಶವಗಳನ್ನು ತೆಗೆದುಕೊಂಡು ಹೋಗಿ-ಪಾಕಿಸ್ತಾನಕ್ಕೆ ಭಾರತದ ಸಂದೇಶ

  • ಪಾಕ್‍ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ ಓರ್ವ ಸೈನಿಕ ಹುತಾತ್ಮ

    ಪಾಕ್‍ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ ಓರ್ವ ಸೈನಿಕ ಹುತಾತ್ಮ

    ಶ್ರೀನಗರ: ಪಾಕಿಸ್ತಾನ ಮತ್ತೆ ತನ್ನ ಕೋತಿ ಬುದ್ಧಿ ತೋರಿಸಿದ್ದು, ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಗಡಿ ಭದ್ರತಾ ರೇಖೆ (ಎಲ್‍ಓಸಿ) ಬಳಿ ಪಾಕಿಸ್ತಾನ ಹಾಗೂ ಭಾರತ ಸೈನಿಕರ ಮಧ್ಯೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.

    ಹುತಾತ್ಮ ಯೋಧರನ್ನು ರಾಷ್ಟ್ರೀಯ ರೈಫಲ್ಸ್‍ನ ಲ್ಯಾನ್ಸ್ ನಾಯಕ್ ರಾಜೇಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಕುಪ್ವಾರಾ ಜಿಲ್ಲೆಯ ಮಚಿಲ್ ಸೆಕ್ಟರ್‍ನಲ್ಲಿ ಎಲ್‍ಓಸಿ ಬಳಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೈನಿಕರು ಭಾರತದ ಗಡಿಯ ಹೊರ ಠಾಣೆಗಳನ್ನು ಗುರಿಯಾಗಿಸಿಕೊಂಡು ಭಾರೀ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ರಾಜೇಂದರ್ ಸಿಂಗ್ ಹುತಾತ್ಮರಾಗಿದ್ದಾರೆ.

    ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತವೂ ಸಹ ತೀವ್ರವಾಗಿ ಪ್ರತೀಕಾರ ತೀರಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

    ಪಾಕಿಸ್ತಾನ ಸೈನಿಕರು ನಡೆಸಿದ ಗುಂಡಿನ ಚಕಮಕಿ ವೇಳೆ ರಾಷ್ಟ್ರೀಯ ರೈಫಲ್ಸ್‍ನ ಲ್ಯಾನ್ಸ್ ನಾಯಕ್ ರಾಜೇಂದರ್ ಸಿಂಗ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರದ ವೈದ್ಯಕೀಯ ಘಟಕಕ್ಕೆ ಸ್ಥಳಾಂತರಿಸಲಾಯಿತು. ಗಂಭೀರ ಗಾಯವಾಗಿದ್ದರಿಂದ ಅವರು ಹುತಾತ್ಮರಾದರು ಎಂದು ಸೇನೆಯ ಮೂಲಗಳು ತಿಳಿಸಿವೆ.

    ಘಟನೆ ಕುರಿತು ಸೇನೆಯು ಅಧಿಕೃತವಾಗಿ ದೃಢಪಡಿಸಿಲ್ಲ. ಘಟನೆ ನಡೆದ ಸಂದರ್ಭದಲ್ಲಿ ರಾಷ್ಟ್ರೀಯ ರೈಫಲ್ ಸೈನಿಕರು ಎಲ್‍ಓಸಿ ಗಡಿಯ ಮೇಲೆ ಜಾಗೃತೆ ವಹಿಸಿದ್ದರು ಎಂದು ತಿಳಿದು ಬಂದಿದೆ.

    ಇಂದು ಬೆಳಗ್ಗೆ ಸಹ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹತ್ಯೆ ಮಾಡಿದೆ.

  • ಬಾಲಕೋಟ್ ಏರ್‌ಸ್ಟ್ರೈಕ್ ಬಳಿಕ ಪಾಕ್ ಎಂದಿಗೂ ಎಲ್‍ಓಸಿ ದಾಟಿಲ್ಲ: ಏರ್‌ಚೀಫ್‌ ಮಾರ್ಷಲ್

    ಬಾಲಕೋಟ್ ಏರ್‌ಸ್ಟ್ರೈಕ್ ಬಳಿಕ ಪಾಕ್ ಎಂದಿಗೂ ಎಲ್‍ಓಸಿ ದಾಟಿಲ್ಲ: ಏರ್‌ಚೀಫ್‌ ಮಾರ್ಷಲ್

    ನವದೆಹಲಿ: ಬಾಲಕೋಟ್ ಮೇಲೆ ಏರ್‌ಸ್ಟ್ರೈಕ್ ನಡೆಸಿದ ಬಳಿಕ ಪಾಕಿಸ್ತಾನ ಎಂದಿಗೂ ಭಾರತದ ಗಡಿ ನಿಯಂತ್ರಣಾ ರೇಖೆಯನ್ನು ದಾಟಿಲ್ಲ ಎಂದು ಐಎಎಫ್ ಮುಖ್ಯಸ್ಥ ಬಿರೇಂದ್ರ ಸಿಂಗ್ ಧನೋವಾ ತಿಳಿಸಿದ್ದಾರೆ.

    ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನ ತನ್ನ ವಾಯು ಮಾರ್ಗವನ್ನು ಮುಚ್ಚಿರುವುದು ನೆರೆಯ ದೇಶಗಳಿಗೆ ತೊಂದರೆಯಾಗಿದೆಯೇ ಹೊರೆತು ಭಾರತಕ್ಕೆ ಯಾವುದೇ ಸಮಸ್ಯೆಯಾಗಿಲ್ಲ. ಪಾಕಿಸ್ತಾನ ಹಾಗೂ ಭಾರತ ಎರಡೂ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಇದೆ. ಆದರೆ ಪಾಕ್‍ನ ಈ ನಿರ್ಣಯ ದೇಶದ ಒಳಗಡೆ ಇರುವ ನಾಗರಿಕಾ ವಿಮಾನಯಾನಕ್ಕೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಹೇಳಿದರು.

    ಪುಲ್ವಾಮ ದಾಳಿಗೆ ಪ್ರತ್ಯುತ್ತರವಾಗಿ ಐಎಎಫ್ ಪಾಕಿಸ್ತಾನದ ಬಾಲಕೋಟ್ ಪ್ರದೇಶದಲ್ಲಿರುವ ಜೈಶ್ ಉಗ್ರರ ಅಡಗು ತಾಣದ ಮೇಲೆ ಏರ್‌ಸ್ಟ್ರೈಕ್ ಮಾಡಿತು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಪಾಕ್ ಗಡಿ ನಿಯಂತ್ರಣ ರೇಖೆ ದಾಟಿ ಬಂದಿತ್ತು. ಆದರೆ ಉತ್ತರ ಕೊಡುವಲ್ಲಿ ವಿಫಲವಾಯ್ತು. ಭಾರತ ತನ್ನ ಕಾರ್ಯಾಚರಣೆಯಲ್ಲಿ ವಿಫಲವಾಗಿಲ್ಲ. ಹೀಗಾಗಿ ಏರ್‌ಸ್ಟ್ರೈಕ್ ಬಳಿಕ ಪಾಕಿಸ್ತಾನ ಎಂದಿಗೂ ಗಡಿ ನಿಯಂತ್ರಣಾ ರೇಖೆ ದಾಟಿ ಬಂದಿಲ್ಲ ಎಂದು ಐಎಎಫ್ ಕಾರ್ಯವನ್ನು ಹೆಮ್ಮೆಯಿಂದ ಹೇಳಿಕೊಂಡರು.

    ಪಾಕ್ ನಮ್ಮ ವಾಯು ನೆಲೆಯ ಮೇಲೆ ಬಂದಿಲ್ಲ. ಇದಕ್ಕೆ ಮುಖ್ಯ ಕಾರಣ ನಮ್ಮ ಸೈನ್ಯದ ಕಾರ್ಯವೈಕರಿ. ನಾವು ಬಾಲಕೋಟ್‍ನಲ್ಲಿ ಏರ್‌ಸ್ಟ್ರೈಕ್ ಮಾಡಲು ಕಾರ್ಯಾಚರಣೆ ನಡೆಸಿದೆವು. ಅದನ್ನು ಸಾಧಿಸಿ ತೋರಿಸಿದೆವು. ಹಾಗೆಯೇ ಪಾಕಿಸ್ತಾನ ಕೂಡ ನಮ್ಮ ಸೈನ್ಯದ ಮೇಲೆ ದಾಳಿ ನಡೆಸಲು ಬಂದಿತ್ತು. ಆದರೆ ಅವರಿಂದ ಅದು ಸಾಧ್ಯವಾಗಿಲ್ಲ. ಹೇಗೆ ಕಾರ್ಯಾಚರಣೆ ನಡೆಸಿದ್ದೇವೆ? ಎಷ್ಟು ಜೆಟ್ ಉಪಯೋಗಿಸಿದ್ದೇವೆ ಎನ್ನುವುದಕ್ಕಿಂತ ನೀವು ನಿಮ್ಮ ಸೈನ್ಯದ ಗುರಿಯನ್ನು ತಲುಪಿದ್ದೀರಾ ಎನ್ನುವುದೇ ಮುಖ್ಯವಾಗುತ್ತದೆ. ಈ ವಿಚಾರದಲ್ಲಿ ನಾವು ನಿರೀಕ್ಷಿತ ಸಾಧನೆ ಮಾಡಿದ್ದೇವೆ ಎಂದರು.

    ಈ ವೇಳೆ ಕಾರ್ಗಿಲ್ ಯುದ್ಧವಾಗಿ 20 ವರ್ಷ ಕಳೆದಿರುವ ಬಗ್ಗೆ ಮಾತನಾಡಿ, ಈವೆರೆಗೆ ಭಾರತ ನಡೆಸಿದ ಎಲ್ಲಾ ದಾಳಿಯಲ್ಲೂ ನಾವು ನಮ್ಮ ಸಂಕಲ್ಪ ಹಾಗೂ ಸಾಮರ್ಥ್ಯವನ್ನು ತೋರಿಸಿದ್ದೇವೆ ಎಂದು ತಿಳಿಸಿದರು.

    ಭಾರತ ವಾಯು ಮಾರ್ಗ ಮುಚ್ಚುವ ಬಗ್ಗೆ ಪ್ರಶ್ನಿಸಿದಾಗ, ನಾವು ಫೆ.27ರಂದು ಶ್ರೀನಗರದ ವಾಯು ಮಾರ್ಗವನ್ನು ಮುಚ್ಚಿದ್ದೆವು. ಅದು ಕೇವಲ 2ರಿಂದ 3 ಗಂಟೆಗಳ ಕಾಲ ಮಾತ್ರ ಅಷ್ಟೇ ಎಂದು ಹೇಳಿದರು.

    ಪಾಕಿಸ್ತಾನದ ಜೊತೆ ಇರುವ ಉದ್ವಿಗ್ನ ಸ್ಥಿತಿಯಿಂದ ಭಾರತದ ವಿಮಾನಯಾನಕ್ಕೆ ಯಾವುದೇ ತೊಂದರೆಯಾಗಿಲ್ಲ. ಯಾಕೆಂದರೆ ನಮ್ಮ ಆರ್ಥಿಕತೆ ಅವರಿಗಿಂತ ಬಹಳ ದೊಡ್ಡದು. ಪಾಕಿಸ್ತಾನ ಅವರ ವಾಯು ಮಾರ್ಗವನ್ನು ಮುಚ್ಚಿದ್ದಾರೆ ಎಂದರೆ ಅದು ಅವರ ಸಮಸ್ಯೆ. ಆದರೆ ನಮ್ಮ ಆರ್ಥಿಕತೆಯಲ್ಲಿ ವಾಯು ಸಂಚಾರವು ಮುಖ್ಯ ಭಾಗವಾಗಿದೆ. ಹೀಗಾಗಿ ವಾಯುಪಡೆ ಕೂಡ ಎಂದಿಗೂ ನಾಗರಿಕ ವಿಮಾನಗಳನ್ನು ತಡೆಯುವುದಿಲ್ಲ ಎಂದು ಉತ್ತರಿಸಿದರು.

  • ಪಾಕ್‍ನಿಂದ ಗುಂಡಿನ ದಾಳಿ- ಯೋಧ ಹುತಾತ್ಮ, ಮೂವರಿಗೆ ಗಾಯ

    ಪಾಕ್‍ನಿಂದ ಗುಂಡಿನ ದಾಳಿ- ಯೋಧ ಹುತಾತ್ಮ, ಮೂವರಿಗೆ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ನಡೆಸಿದ ಗುಂಡಿನ ದಾಳಿಯಲ್ಲಿ ಒರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

    ರಾಜೌರಿ ಜಿಲ್ಲೆಯ ಅಖನೂರು ಪ್ರದೇಶದ ಕೆರಿ ಬಟ್ಟಾಲ್ ಗ್ರಾಮದ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ. ಶೆಲ್ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನಾ ತಿಳಿಸಿವೆ.

    ಇಂದು ಬೆಳಗಿನ ಜಾವ ಸುಂದರಬನಿ ಸೆಕ್ಟರ್ ಬಳಿ ಸುಮಾರು 5.30ಕ್ಕೆ ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸಿತು. ಗುಂಡಿನ ದಾಳಿ ಜೊತೆಗೆ ಮಾರ್ಟರ್ ಶೆಲ್ ದಾಳಿಯನ್ನು ನಡೆಸಿದೆ. ಪ್ರತಿಯಾಗಿ ಭಾರತೀಯ ಸೇನೆ ಪ್ರತ್ಯುತ್ತರವನ್ನು ನೀಡಿದೆ. ಬೆಳಗ್ಗೆ 7.15ಕ್ಕೆ ಗುಂಡಿನ ದಾಳಿ ನಿಂತಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರ ದೇವೇಂದ್ರ ಆನಂದ್ ತಿಳಿಸಿದ್ದಾರೆ.