Tag: Local

  • ಕದ್ದು ಪರಾರಿಯಾಗುತ್ತಿದ್ದವನನ್ನು ಹಿಡಿದು ಥಳಿಸಿದ ಸ್ಥಳೀಯರು – ಕಳ್ಳ ಸಾವು

    ಕದ್ದು ಪರಾರಿಯಾಗುತ್ತಿದ್ದವನನ್ನು ಹಿಡಿದು ಥಳಿಸಿದ ಸ್ಥಳೀಯರು – ಕಳ್ಳ ಸಾವು

    ನವದೆಹಲಿ: ಮನೆಯೊಂದರಲ್ಲಿ ಕಳ್ಳತನ ಮಾಡಲು ಯತ್ನಿಸಿದ 30 ವರ್ಷದ ವ್ಯಕ್ತಿಯನ್ನು ಸ್ಥಳೀಯರು ಥಳಿಸಿದ್ದರಿಂದ ಆತ ಸಾವನ್ನಪ್ಪಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

    ಸೆಕ್ಟರ್ 63 ಪೊಲೀಸ್ ಠಾಣೆ ವ್ಯಾಪ್ತಿಯ ಚೋಟ್‍ಪುರ್ ಗ್ರಾಮದಲ್ಲಿ ಜನರು ಕಳ್ಳನನ್ನು ಹಿಡಿದು ಬೆಳಿಗ್ಗೆ 5.30 ರ ಸುಮಾರಿಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಳ್ಳನನ್ನು ವಶಕ್ಕೆ ಪಡೆದು, ಆತನ ಬಳಿಯಿದ್ದ ಒಂದು ಪಿಸ್ತೂಲ್ ಮತ್ತು ಕೆಲವು ಕದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ತೀವ್ರವಾಗಿ ಗಾಯಗೊಂಡಿದ್ದರಿಂದ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ವ್ಯಕ್ತಿ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮಲೆಮಹದೇಶ್ವರ ಜಾತ್ರಾಮಹೋತ್ಸವ – ಪೂರ್ವಸಿದ್ಧತೆಗಳ ಕುರಿತಂತೆ ಸಭೆ ನಡೆಸಿದ ಸೋಮಣ್ಣ

    ಮೃತ ವ್ಯಕ್ತಿಯನ್ನು ಪಂಕಜ್ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ಕನ್ನೌಜ್ ಜಿಲ್ಲೆಯ ನಿವಾಸಿಯಾಗಿದ್ದಾನೆ. ಚೋಟ್‍ಪುರ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿ ಜಿಗಿಯುತ್ತಿದ್ದ ವೇಳೆ ಶಬ್ಧ ಕೇಳಿಸಿಕೊಂಡ ಕೆಲವು ಸ್ಥಳೀಯ ನಿವಾಸಿಗಳು ಶೀಘ್ರವೇ ಆತನನ್ನು ಹಿಡಿದಿದ್ದಾರೆ. ಈ ವೇಳೆ ಕಳ್ಳ ತನ್ನ ಬಳಿ ಇದ್ದ ಪಿಸ್ತೂಲ್ ಹೊರ ತೆಗೆದಿದ್ದಾನೆ. ಆಗ ಅಲ್ಲಿದ್ದ ಸ್ಥಳೀಯರು ಆತನನ್ನು ಚೆನ್ನಾಗಿ ಥಳಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ಸಂಬಂಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ: ಆಮ್ ಆದ್ಮಿ, ಕಾಂಗ್ರೆಸ್ ಪಕ್ಷದ Xerox copy: ಮೋದಿ ವ್ಯಂಗ್ಯ

  • ಊರಿನವ್ರ ಕಿರುಕುಳ-  ಗ್ರಾ.ಪಂ ಡಾಟಾ ಎಂಟ್ರಿ ಸಿಬ್ಬಂದಿ ಆತ್ಮಹತ್ಯೆ

    ಊರಿನವ್ರ ಕಿರುಕುಳ- ಗ್ರಾ.ಪಂ ಡಾಟಾ ಎಂಟ್ರಿ ಸಿಬ್ಬಂದಿ ಆತ್ಮಹತ್ಯೆ

    ಬಾಗಲಕೋಟೆ: ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಡಾಟಾ ಎಂಟ್ರಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಹಳದೂರು ಗ್ರಾಮದಲ್ಲಿ ನಡೆದಿದೆ.

    ಅನ್ನಪೂರ್ಣ ಪಾದಗಟ್ಟಿ ಎಂಬ ಮಹಿಳಾ ಸಿಬ್ಬಂದಿ ಮೃತ ದುರ್ದೈವಿ. ಸ್ಥಳೀಯರ ಕಿರುಕುಳಕ್ಕೆ ಬೇಸತ್ತಿದ್ದ ಅನ್ನಪೂರ್ಣ, ಗ್ರಾಮ ಪಂಚಾಯತಿ ಅಭಿವೃದ್ಧಿ ಕಾರ್ಯಗಳಲ್ಲಿ ಭ್ರಷ್ಟಾಚಾರ ಎಸಗಿದ್ದಾರೆಂದು ಊರಿನವರು ಆರೋಪಿಸಿ, ಮೇಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಇದರಿಂದ ಅನ್ನಪೂರ್ಣ ಬೇಸತ್ತು ಹೋಗಿದ್ದರು. ಇತ್ತ ಸ್ಥಳೀಯರ ದೂರಿನ ಆಧಾರದ ಮೇಲೆ ಪರಿಶೀಲನೆಗೆ ಬಂದ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಅಧಿಕಾರಿಯ ಮುಂದೆಯೇ ಅನ್ನಪೂರ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

    ಕಳೆದ ಎರಡು ವರ್ಷಗಳಿಂದ ಮೇಲಾಧಿಕಾರಿ ಹಾಗೂ ಸ್ಥಳೀಯ ಮುಖಂಡರು ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನ ಆಗಿರಲಿಲ್ಲ ಎಂದು ಹೇಳಲಾಗುತ್ತಿದೆ. ಇದರಿಂದ ಮಹಿಳಾ ಸಿಬ್ಬಂದಿ ಮನನೊಂದು ಆತ್ಮಹತ್ಯಗೆ ಯತ್ನಿಸಿದ್ದಾರೆ. ಸೋಮವಾರ ಭ್ರಷ್ಟಾಚಾರ ನಡೆದಿದೆ ಎಂಬ ದೂರಿನನ್ವಯ ಹಳದೂರು ಗ್ರಾಮಪಂಚಾಯತಿಗೆ ಪರಿಶೀಲಿಸಲು ಬಂದಿದ್ದ ಅಧಿಕಾರಿಯ ಮುಂದೆ, ಕಿರುಕುಳದ ಬಗ್ಗೆ ಮಾಹಿತಿ ನೀಡಿ ಅಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಬಳಿಕ ತಕ್ಷಣವೇ ಅವರನ್ನು ಗುಳೇದಗುಡ್ಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೃತ ಮಹಿಳೆಯ ಸಂಬಂಧಿಕರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿ ಆಸ್ಪತ್ರೆ ಎದುರು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ಅನ್ನಪೂರ್ಣ ಶವವನ್ನ ನಿನ್ನೆ ಮಧ್ಯರಾತ್ರಿವರೆಗೂ ಆಸ್ಪತ್ರೆಯಲ್ಲಿ ಬಿಟ್ಟು, ಅವಳ ಸಾವಿಗೆ ಕಾರಣರಾದಾವರನ್ನು ಬಂಧಿಸುವಂತೆ ಆಸ್ಪತ್ರೆಯ ಎದುರು ಮೃತ ಅನ್ನಪೂರ್ಣ ಮನೆಯವರು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ಧರಣಿ ನಡೆಸಿದ್ದಾರೆ.

    ನಂತರ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿ, ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಮನೆಯವರು ಅನ್ನಪೂರ್ಣ ಶವ ತಗೆದುಕೊಂಡು ಹೋಗಿ ಅಂತ್ಯಕ್ರಿಯೆ ಮಾಡಿದ್ದಾರೆ. ಈ ಕುರಿತು ಗುಳೆದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಧಾರಾವಾಹಿ ಖ್ಯಾತಿಯ ನಟಿ ಚೈತ್ರಾ ರೈ ಸೀಮಂತ

  • ಮಂಗನ ಕಾಟಕ್ಕೆ ಬೆಚ್ಚಿಬಿದ್ದ ಮಸ್ಕಿ ಜನ- ಒಂದೇ ದಿನ ನಾಲ್ಕು ಜನರ ಮೇಲೆ ದಾಳಿ

    ಮಂಗನ ಕಾಟಕ್ಕೆ ಬೆಚ್ಚಿಬಿದ್ದ ಮಸ್ಕಿ ಜನ- ಒಂದೇ ದಿನ ನಾಲ್ಕು ಜನರ ಮೇಲೆ ದಾಳಿ

    ರಾಯಚೂರು: ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಜನ ಮಂಗಗಳ ಕಾಟಕ್ಕೆ ಬೆಚ್ಚಿಬಿದ್ದಿದ್ದಾರೆ. ಇಂದು ಮಧ್ಯಾಹ್ನದ ವೇಳೆ ಏಕಾಏಕಿ ದಾಳಿ ನಡೆಸಿದ ಮಂಗಗಳು ಸಿಕ್ಕಸಿಕ್ಕವರ ಮೇಲೆರಗಿ ಕಚ್ಚಿ ಗಾಯಗೊಳಿಸಿವೆ.

    ಪಟ್ಟಣದ ರಥ ಬೀದಿಯಲ್ಲಿ ಇಂದು ಒಂದೇ ದಿನ ನಾಲ್ಕು ಜನರ ಮೇಲೆ ದಾಳಿ ಮಾಡಿರುವ ಮಂಗಗಳು, ಮಕ್ಕಳು ಹಾಗೂ ದಾರಿ ಹೋಕರಿಗೆ ಕೈ, ಕಾಲಿಗೆ ಮನಬಂದಂತೆ ಕಚ್ಚಿ ಗಾಯಗೊಳಿಸಿವೆ. ಗಾಯಾಳುಗಳು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಮಲ್ಲಿಕಾರ್ಜುನಸ್ವಾಮಿ ದೇವಾಲಯದ ಸುತ್ತಮುತ್ತ ಓಡಾಡಿಕೊಂಡಿರುವ ಮಂಗಗಳ ಹಾವಳಿ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಭಾರೀ ಗಾಳಿಗೆ ಮನೆ ಮೇಲೆ ಬಿದ್ದ ವಿದ್ಯುತ್ ಕಂಬ – ಸ್ಥಳದ ಅಕ್ಕಪಕ್ಕದಲ್ಲಿ ಗ್ರೌಂಡಿಂಗ್

    ಭಾರೀ ಗಾಳಿಗೆ ಮನೆ ಮೇಲೆ ಬಿದ್ದ ವಿದ್ಯುತ್ ಕಂಬ – ಸ್ಥಳದ ಅಕ್ಕಪಕ್ಕದಲ್ಲಿ ಗ್ರೌಂಡಿಂಗ್

    ಚಿಕ್ಕಮಗಳೂರು: ವಿದ್ಯುತ್ ಕಂಬವೊಂದು ಭಾರೀ ಗಾಳಿಗೆ ಮನೆ ಮೇಲೆ ಮುರಿದು ಬಿದ್ದು, ಕಂಬ ಬಿದ್ದ ಸ್ಥಳದ ಅಕ್ಕಪಕ್ಕದಲ್ಲಿ ಗ್ರೌಂಡಿಂಗ್ ಆಗುತ್ತಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಕಮಕ್ಕಿ ಗ್ರಾಮದಲ್ಲಿ ನಡೆದಿದೆ.

    ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಮಲೆನಾಡಿಗರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆ ಬೀಸುತ್ತಿರುವ ರಣ ಗಾಳಿಯಿಂದ ಮುರಿದು ಬಿದ್ದ ಮರ, ವಿದ್ಯುತ್ ಕಂಬಗಳು ಲೆಕ್ಕವೇ ಇಲ್ಲ. ಈ ಮಧ್ಯೆ ಮನೆ ಮೇಲೆ ಬಿದ್ದ ವಿದ್ಯುತ್ ಕಂಬದ ಸುತ್ತಮುತ್ತ ಗ್ರೌಂಡಿಂಗ್ ಆಗಿದೆ. ಇದನ್ನೂ ಓದಿ: ಮಲೆನಾಡಲ್ಲಿ ಮಳೆ ಅಬ್ಬರ – ಅಜ್ಜಿ ಪಾರು, ಹೆದ್ದಾರಿ ಬಂದ್, ಮನೆ-ಕಟ್ಟಡಗಳ ಕುಸಿತ

    ಹೀಗಾಗಿ ಕೂಡಲೇ ಸ್ಥಳಿಯರು ವಿಷಯವನ್ನು ಮೆಸ್ಕಾಂ ಸಿಬ್ಬಂದಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಮಳೆ ಸುರಿಯುತ್ತಿದೆ, ಸ್ಥಳದಲ್ಲಿ ಗ್ರೌಂಡಿಂಗ್ ಮತ್ತೊಂದು ಅನಾಹುತವಾಗುವುದು ಬೇಡವೆಂದು ಸ್ಥಳೀಯರೇ ಮುಂದಾಗಿ ರಸ್ತೆಗೆ ಮರದ ದಿಮ್ಮೆಗಳನ್ನು ಅಡ್ಡವಿಟ್ಟು ಸಂಚಾರವನ್ನೇ ಬಂದ್ ಮಾಡಿದ್ದಾರೆ.

    ನಂತರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದ ವಿಷಯ ತಿಳಿದ ಬಣಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುವ ವೇಳೆ ಸ್ಥಳೀಯರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಕೊನೆಗೆ ಫೋನ್ ಮಾಡಿದ ಬಳಿಕವೂ ತಡವಾಗಿ ಬಂದ ಮೆಸ್ಕಾಂ ಸಿಬ್ಬಂದಿಗೆ ಕೂಡ ಸ್ಥಳೀಯರೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಕೊಡಗಿನ ವಿವಿಧೆಡೆ ಮುಂದುವರಿದ ಮಳೆ- ಹೆಗ್ಗಳ ಗ್ರಾಮದಿಂದ ಕುಟುಂಬಗಳ ಸ್ಥಳಾಂತರ

  • 150 ಅಡಿ ಆಳದ ಬೋರ್‌ವೆಲ್‌ಗೆ ಬಿತ್ತು 5ರ ಮಗು

    150 ಅಡಿ ಆಳದ ಬೋರ್‌ವೆಲ್‌ಗೆ ಬಿತ್ತು 5ರ ಮಗು

    ಲಕ್ನೋ: ಆಟ ಆಡುತ್ತಿದ್ದ ವೇಳೆ 5 ವರ್ಷದ ಮಗು 150 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿರುವ ಘಟನೆ ಆಗ್ರಾದ ಧರಿಯೈ ಗ್ರಾಮದಲ್ಲಿ ಸೋಮವಾರ ನಡೆದಿದೆ. ಸದ್ಯ ಘಟನೆ ಕುರಿತಂತೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

    ಬೆಳಗ್ಗೆ ಸುಮಾರು 8:30ಕ್ಕೆ ಆಗ್ರಾ ಗ್ರಾಮೀಣ ಪ್ರದೇಶದ ಫತೇಹಾಬಾದ್‍ನ ನಿಬೋಹರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆಯಲ್ಲಿ ಜರುಗಿದೆ. ಮಗುವಿನ ಚಲನೆಯನ್ನು ಗಮನಿಸಬಹುದಾಗಿದ್ದು, ಪ್ರತಿಕ್ರಿಯೆ ನೀಡುತ್ತಿದೆ. ಅಲ್ಲದೆ ಘಟನೆ ಕುರಿತಂತೆ ಮಾಹಿತಿ ದೊರೆತ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಮಗುವನ್ನು ರಕ್ಷಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸ್ಟೇಷನ್ ಹೌಸ್ ಸೂರಜ್ ಪ್ರಸಾದ್ ತಿಳಿಸಿದ್ದಾರೆ. ಇದನ್ನೂ ಓದಿ: ಲಾರಿ ,ಕಾರ್ ಡಿಕ್ಕಿ – ಊರಿಗೆ ಹೊರಟವನು ಸ್ಥಳದಲ್ಲೇ ಸಾವು

    ತನ್ನ ಸ್ವಂತ ತಂದೆ ಅಗೆದ ಬೋರ್‌ವೆಲ್‌ಗೆ ಹೋಗಿ ಮಗು ಬಿದ್ದಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

  • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಆಪರೇಷನ್ ಕಮಲ!

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಆಪರೇಷನ್ ಕಮಲ!

    – ಗದ್ದುಗೆ ಹಿಡಿಯಲು ಕತ್ತಿ ಸೋದರರಿಂದ ಪ್ಲಾನ್

    ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಬೇರೆ ಪಕ್ಷದ ಅಭ್ಯರ್ಥಿಗಳನ್ನ ಸೆಳೆದು ಆಪರೇಷನ್ ಕಮಲದ ಮೂಲಕ ಗುರುತಿಸಿಕೊಳ್ಳುವ ಬಿಜೆಪಿ ಪಕ್ಷ ಈಗ ಸ್ಥಳೀಯ ಸಂಸ್ಥೆಗಳಾದ ಹುಕ್ಕೇರಿ ಮತ್ತು ಸಂಕೇಶ್ವರ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲೂ ಆಪರೇಷನ್ ಕಮಲ ನಡೆಸಿ ಅಧಿಕಾರ ಪಡೆಯಲು ಶಾಸಕ ಉಮೇಶ್ ಕತ್ತಿ, ಸಹೋದರ ರಮೇಶ್ ಕತ್ತಿ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಸಿದ್ಧತೆ ನಡೆದಿದೆ.

    ಬಿಜೆಪಿ ಪಕ್ಷ ಕೇವಲ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಆಪರೇಷನ್ ಕಮಲ ಮಾಡುತ್ತಿಲ್ಲ. ಈ ಸ್ಥಳೀಯ ಸಂಸ್ಥೆಗಳಲ್ಲೂ ಆಪರೇಷನ್ ಕಮಲ ನಡೆಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಯತ್ನಿಸುತ್ತಿದೆ. ಇಂದು ಮತ್ತು ನಾಳೆ ಜರಗುವ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಾಗೂ ಸಂಕೇಶ್ವರ ಪುರಸಭೆಗಳನ್ನ ಬಿಜೆಪಿ ಪಕ್ಷ ತನ್ನ ತೆಕ್ಕೆಗೆ ಹಾಕಿಕೊಳ್ಳಲು ಸಕಲ ಸನ್ನದ್ದವಾಗಿದೆ. ಅದರಲ್ಲೂ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಈ ಬಾರಿ ಎರಡೂ ಪುರಸಭೆಗಳಲ್ಲಿ ಬಿಜೆಪಿ ಸಂಖ್ಯಾಬಲ ಇಲ್ಲದಿದ್ದರೂ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನೇ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮಾಡಲು ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ.

    ಹುಕ್ಕೇರಿ ಪುರಸಭೆಯ 23 ವಾರ್ಡಗಳಲ್ಲಿ ಬಿಜೆಪಿ ಪಕ್ಷ ಗೆದ್ದಿದ್ದು ಕೇವಲ 8 ವಾರ್ಡ್‍ಗಳಲ್ಲಿ. 12 ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರೆ 3 ಪಕ್ಷೇತರ ಅಭ್ಯರ್ಥಿಗಳು ಪುರಸಭೆಗೆ ಆಯ್ಕೆಯಾಗಿದ್ದಾರೆ. ಕೇವಲ 8 ಜನರ ಸಂಖ್ಯಾಬಲ ಬಿಜೆಪಿಯಲ್ಲಿದ್ದರೂ ಈಗ ಹುಕ್ಕೇರಿ ಪುರಸಭೆಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎನ್ನಲಾಗುತ್ತಿದೆ. 3 ಜನ ಪಕ್ಷೇತರ ಅಭ್ಯರ್ಥಿಗಳನ್ನ ಸೆಳೆದು ಹಾಗೂ ಬಿಜೆಪಿ ಶಾಸಕ ಉಮೇಶ್ ಕತ್ತಿ ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ ಹಾಕಿದರೆ 13 ಮತಗಳು ಬಿಜೆಪಿ ಪರ ಬೀಳಲಿದ್ದು ಸುಲಭವಾಗಿ ಹುಕ್ಕೇರಿ ಪುರಸಭೆಯಲ್ಲಿ ಬಿಜೆಪಿ ಪಕ್ಷ ಅಧಿಕಾರ ಹಿಡಿಯಬಹದು ಎನ್ನುವ ಲೆಕ್ಕಾಚಾರದಲ್ಲಿ ಬಿಜೆಪಿ ಪಕ್ಷ ಇದೆ.

    ಸಂಕೇಶ್ವರ ಪುರಸಭೆಗೆ 23 ಅಭ್ಯರ್ಥಿಗಳ ಪೈಕಿ 11 ಜನ ಕಾಂಗ್ರೆಸ್ ಪಕ್ಷದಿಂದ ಹಾಗೂ 11 ಜನ ಬಿಜೆಪಿ ಪಕ್ಷದಿಂದ ಹಾಗೂ ಓರ್ವ ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಇದರಲ್ಲಿ ಈಗಾಗಲೇ ಕತ್ತಿ ಸಹೋದರರು ಪಕ್ಷೇತರ ಅಭ್ಯರ್ಥಿಯನ್ನ ಸೆಳೆಯುವದರ ಜೊತೆಗೆ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳನ್ನ ಬಿಜೆಪಿ ಪಾಳಯಕ್ಕೆ ಕರೆ ತಂದಿದ್ದಾರೆ. ಹೀಗಾಗಿ ಸಂಕೇಶ್ವರ ಪುರಸಭೆಯಲ್ಲಿ ಬಿಜೆಪಿ ಪರ ಆಗುವುದರಲ್ಲಿ ಸಂಶಯವೇ ಇಲ್ಲ.

    ಒಟ್ಟಿನಲ್ಲಿ ಆಪರೇಷನ್ ಕಮಲದ ಮೂಲಕ ಚರ್ಚೆಯಲ್ಲಿರುವ ಬಿಜೆಪಿ ಪಕ್ಷ ಈಗ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲೂ ಆಪರೇಷನ್ ಕಮಲದ ಅಸ್ತ್ರವನ್ನ ಬಳಿಸಿ ಯಶಸ್ವಿಯಾಗುತ್ತಾ ಅನ್ನೋದನ್ನ ಕಾಯ್ದು ನೋಡಬೇಕಿದೆ.

  • ಗುಡ್ಡ ನೋಡಲು ಹೋಗಿ ನಾಪತ್ತೆಯಾದ ಯುವಕರು ಪತ್ತೆ- ದಾರಿ ಕಾಣದೆ ಕಂಗಾಲು

    ಗುಡ್ಡ ನೋಡಲು ಹೋಗಿ ನಾಪತ್ತೆಯಾದ ಯುವಕರು ಪತ್ತೆ- ದಾರಿ ಕಾಣದೆ ಕಂಗಾಲು

    – ಫೋನ್ ನೆಟ್‍ವರ್ಕ್ ಸಿಕ್ಕಿದ್ದರು, ಯುವಕರು ಸಿಕ್ಕಿರಲಿಲ್ಲ

    ಚಿಕ್ಕಮಗಳೂರು: ಪ್ರವಾಸಕ್ಕೆ ಹೋಗಿದ್ದ ನಾಲ್ವರು ಯುವಕರು ವಾಪಸ್ ಬರಲು ದಾರಿ ಗೊತ್ತಾಗದೆ ಗುಡ್ಡದ ತುದಿಯಲ್ಲೇ ದಾರಿತಪ್ಪಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದ ರಾಣಿಝರಿ ಹಾಗೂ ಬಲ್ಲಳರಾಯನ ಕೋಟೆಯಲ್ಲಿ ನಡೆದಿದೆ.

    ಈ ಜಾಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದು. ಈ ಗುಡ್ಡದ ತುದಿಗೆ ಹೋದ್ರೆ ಸ್ವರ್ಗ ಅಂಗೈಯಲ್ಲಿ ಎಂಬ ಅನುಭವವಾಗುತ್ತೆ. ಆದರೆ ಇಲ್ಲಿಗೆ ಹೋಗುವ ಮಾರ್ಗ ಕೂಡ ಅತಿ ದುಸ್ಥರವಾಗಿದೆ. ಹೊಸಬರು ಬೇಗ ಹೋಗಿ ಬೇಗ ವಾಪಸ್ ಬರೋದು ಒಳ್ಳೆಯದು. ಇಲ್ಲಿ ಫೋನ್ ಸಂಪರ್ಕ ಕೂಡ ಸಿಗಲ್ಲ. ಸಿಕ್ಕರೂ ಅಲ್ಲೊಂದು, ಇಲ್ಲೊಂದು ಪಾಯಿಂಟ್ ನೆಟ್ವರ್ಕ್ ಸಿಗುತ್ತೆ. ಆದರೆ ಇಲ್ಲಿನ ಸೌಂದರ್ಯ ಸವಿಯಲು ಹೋದ ಚಿಕ್ಕಮಗಳೂರಿನ ನಾಲ್ವರು ಯುವಕರು ವಾಪಸ್ ಬರಲು ದಾರಿ ಗೊತ್ತಾಗದೆ ಅಲ್ಲೇ ಉಳಿದಿದ್ದರು.

    ದಾರಿ ಹುಡುಕಿಕೊಂಡು ಮತ್ತೆಲ್ಲಿಗೆ ಹೋಗಿದ್ದಾರೋ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿರಲಿಲ್ಲ. ಕೆಲವೆಡೆ ಸಿಕ್ಕ ನೆಟ್‍ವರ್ಕ್ ನಿಂದ ಅವರು ದಾರಿ ತಪ್ಪಿದ್ದಾರೆಂಬುದು ಗೊತ್ತಾಗಿತ್ತು. ಸ್ಥಳೀಯರು ಹಾಗೂ ಅರಣ್ಯಾಧಿಕಾರಿಗಳು ನಾಪತ್ತೆಯಾಗಿರೋರಿಗಾಗಿ ಹುಡುಕಾಟ ಆರಂಭಿಸಿದ್ದರು. ರಾಣಿಝರಿಗೆ ಹೋದ ಯುವಕರು ಅಲ್ಲಿಂದ ಬಲ್ಲಾಳರಾಯನ ದುರ್ಗಕ್ಕೆ ಹೋಗುವಾಗ ದಾರಿ ತಪ್ಪಿದ್ದರು. ಅಲ್ಲಿಂದ ವಾಪಸ್ ಕೊಟ್ಟಿಗೆಹಾರಕ್ಕೂ ಬರಲು ಗೊತ್ತಾಗದೆ ಕತ್ತಲಲ್ಲಿ ಕಂಗಾಲಾಗಿದ್ದರು.

    ಮೊಬೈಲ್ ನೆಟ್‍ವರ್ಕ್ ಸಿಗುತ್ತಿತ್ತು. ಸ್ಥಳೀಯರು ಹುಡುಕಾಡುತ್ತಿದ್ದರು. ಆದರೆ ನಾಪತ್ತೆಯಾಗಿರುವ ಯುವಕರು ತಾವಿರೋ ಜಾಗದ ಬಗ್ಗೆಯೂ ಸಂಕ್ಷಿಪ್ತ ಮಾಹಿತಿ ನೀಡದ ಹಿನ್ನೆಲೆ ಹುಡುಕುವವರು ಕೂಡ ಎಲ್ಲಿ ಹುಡುಕುವುದು ಎಂದು ದಾರಿಕಾಣದಂತಾಗಿತ್ತು. ದಾರಿಕಾಣದ ನಾಪತ್ತೆಯಾಗಿರೋ ಯುವಕರು ಸಹಾಯಕ್ಕಾಗಿ ಬೇಡಿಕೊಂಡಿದ್ದರು. ಆದರೆ ಸ್ಥಳೀಯರು ಹಾಗೂ ಅರಣ್ಯಾಧಿಕಾರಿಗಳಿಗೂ ಕೂಡ ಅವರಿರುವ ಜಾಗದ ಮಾಹಿತಿ ಸಿಗದೆ ಹುಡುಕುವುದು ಕಷ್ಟವಾಗಿತ್ತು. ಸದ್ಯ ನಾಪತ್ತೆಯಾದ ಯುವಕರು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

  • ಶೌಚಕ್ಕೆ ತೆರಳಿದ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ

    ಶೌಚಕ್ಕೆ ತೆರಳಿದ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ

    ನವದೆಹಲಿ: ಅಪ್ರಾಪ್ತೆ ಶೌಚಕ್ಕೆ ಹೋದಾಗ ಇಬ್ಬರು ಕಾಮುಕರು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ.

    ಆಗ್ನೇಯ ದೆಹಲಿಯ ಜೆಜೆ ಕಾಲೋನಿಯಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದ್ದು, 13 ವರ್ಷದ ಬಾಲಕಿ ಸಾಮೂಹಿಕ ಶೌಚಾಲಯಕ್ಕೆ ತೆರಳಿದಾಗ ಇಬ್ಬರು ಕಾಮುಕರು ಬಾಲಕಿಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇದರಲ್ಲಿ ಒಬ್ಬ ಬಾಲಕಿ ಮನೆಯ ನೆರೆಹೊರೆಯವನು ಎನ್ನಲಾಗಿದೆ.

    ರಾತ್ರಿ 9ರ ಸಮಾರಿಗೆ ಬಾಲಕಿ ಶೌಚಕ್ಕೆಂದು ಸಾಮೂಹಿಕ ಶೌಚಾಲಯಕ್ಕೆ ಬಂದಿದ್ದಾಳೆ. ಈ ವೇಳೆ ಅದೇ ಪ್ರದೇಶದ ವ್ಯಕ್ತಿ ಹತ್ತಿರದ ಅರಣ್ಯ ಪ್ರದೇಶಕ್ಕೆ ಬಾಲಕಿಯನ್ನು ಎಳೆದೊಯ್ದಿದ್ದಾನೆ. ನಂತರ ಸ್ನೇಹಿತನನ್ನು ಕಾವಲಿಗೆ ಇರಿಸಿ ಅತ್ಯಾಚಾರ ಎಸಗಿದ್ದಾನೆ. ಅಪರಾಧ ಎಸಗಿದ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಬಾಲಕಿ ಕಾಣದ್ದನ್ನು ಗಮನಿಸಿದ ಮನೆಯವರು, ಹುಡುಕಲು ಆರಂಭಿಸಿದ್ದಾರೆ. ಆದರೆ ಬಲಕಿ ಸಿಕ್ಕಿಲ್ಲ.

    ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಸೆಕ್ಷನ್‍ಗಳಡಿ ಹಾಗೂ ಪೋಕ್ಸೋ ಕಾಯ್ದೆಯಡಿ ಬಾಲಕಿಯ ತಂದೆ ಪ್ರಕರಣ ದಾಖಲಿಸಿದ್ದು, ಈಗಾಗಲೇ ನಾವು ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಪೊಲೀಸರು ಅವರನ್ನು ವಿಚಾರಣೆಗೊಳಪಡಿಸಿದ್ದಾರೆ ಎಂದು ಆಗ್ನೇಯ ಡಿಸಿಪಿ ಆರ್‍ಪಿ ಮೀನಾ ತಿಳಿಸಿದ್ದಾರೆ ಎಂದು ವರದಿಯಾಗಿದೆ.

    ಬಾಲಕಿಯ ತಂದೆ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಊಟದ ಬಳಿಕ ಬಾಲಕಿ ಮನೆಯಿಂದ ಸುಮಾರು 50-100 ಮೀಟರ್ ದೂರದಲ್ಲಿರುವ ಶೌಚಾಲಯಕ್ಕೆ ತೆರಳಿದ್ದಳು. ನಂತರ ತುಂಬಾ ಸಮಯ ಕಳೆದರೂ ಬಾಲಕಿ ಮರಳಿಲಿಲ್ಲ. 15-20 ನಿಮಿಷಗಳ ಬಳಿಕ ನಾವೇ ಹುಡುಕಲು ಪ್ರಾರಂಭಿಸಿದೆವು. ಕಾಡಿನ ಬಳಿ ಗಾಯಗೊಂಡ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    ಘಟನೆ ಕುರಿತು ಬಾಲಕಿ ತನ್ನ ತಂದೆಗೆ ವಿವರಿಸಿದ್ದು, ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಾಮಾನ್ಯವಾಗಿ ಯಾವಾಗಲೂ ಅವಳ ತಾಯಿಯೇ ಅವಳನ್ನು ಶೌಚಕ್ಕೆ ಕರೆದೊಯ್ಯುತ್ತಿದ್ದಳು. ಆದರೆ ಹತ್ತಿರವಿದ್ದರಿಂದ ಅಂದು ಒಬ್ಬಳನ್ನೆ ಕಳುಹಿಸಿದೆವು. ಹೊರಗಡೆ ಸುರಕ್ಷಿತವಾಗಿಲ್ಲ ಎಂಬುದನ್ನು ನಾವು ನಿರೀಕ್ಷಿಸಿರಲೇ ಇಲ್ಲ. ಬಾಲಕಿಯ ಹೊಟ್ಟೆ ಭಾಗದಲ್ಲಿ ಕೆಲ ಗಾಯಗಳಾಗಿವೆ. ಪಕ್ಕದ ಮನೆಯವನೇ ಮಾಡಿರುವ ಕುರಿತು ನಮಗೆ ತಿಳಿದಿದೆ ಎಂದು ಬಾಲಕಿಯ ಕುಟುಂಬಸ್ಥರು ವಿವರಿಸಿದ್ದಾರೆ.

    ಬಾಲಕಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದು, ಅತ್ಯಾಚಾರ ಎಸಗಿರುವುದು ವೈದ್ಯಕೀಯ ಪರೀಕ್ಷೆ ವೇಳೆ ಖಚಿತವಾಗಿದೆ. ಕಳೆದ 10 ದಿನಗಳಲ್ಲಿ ಈ ಭಾಗದಲ್ಲಿ ಬಾಲಕಿಯರ ಮೇಲೆ ದೌರ್ಜನ್ಯ ನಡೆಯುತ್ತಿರುವ 4ನೇ ಪ್ರಕರಣ ಇದಾಗಿದೆ ಎನ್ನಲಾಗಿದೆ.

  • ರಾತ್ರೋರಾತ್ರಿ ಗುಂಪು ಸೇರಿದ ಯುವಕರು – ಪ್ರಶ್ನಿಸಿ ಗದರಿಸಿದ್ದಕ್ಕೆ ಕಾಲ್ಕಿತ್ತರು

    ರಾತ್ರೋರಾತ್ರಿ ಗುಂಪು ಸೇರಿದ ಯುವಕರು – ಪ್ರಶ್ನಿಸಿ ಗದರಿಸಿದ್ದಕ್ಕೆ ಕಾಲ್ಕಿತ್ತರು

    – ನಮಗೆ ಕೊರೊನಾ ಬರಲ್ಲ ಎಂದು ಉಡಾಫೆ

    ಹಾಸನ: ರಾತ್ರೋರಾತ್ರಿ ಗುಂಪು ಸೇರಿದ ಯುವಕರನ್ನು ಸ್ಥಳೀಯರು ಪ್ರಶ್ನೆ ಮಾಡಿ ಗದರಿಸಿ ವಾಪಸ್ ಕಳಿಸಿರುವ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ನಗರದ ಮುಜಾವರ್ ಮೊಹಲ್ಲಾ ಬಡಾವಣೆಯಲ್ಲಿ ನಡೆದಿದೆ.

    ಕೊರೊನಾ ಭಯದಿಂದ ದೇಶ ಲಾಕ್‍ಡೌನ್ ಆಗಿದೆ. ಗುಂಪಾಗಿ ಸೇರದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಸರ್ಕಾರ ಮನವಿ ಮಾಡಿಕೊಳ್ಳುತ್ತದೆ. ಆದರೆ ಅರಸೀಕೆರೆ ನಗರದಲ್ಲಿ 20 ಜನ ಯುವಕರು ಒಟ್ಟಿಗೆ ಸೇರಿಕೊಂಡಿದ್ದರು. ಇವರನ್ನು ಪ್ರಶ್ನಿಸಿದರೆ ನಾವು ನಮಾಜ್ ಮಾಡಲು ಬಂದಿದ್ದೇವೆ. ನಮಗೆ ಕೊರೊನಾ ಬರಲ್ಲ ಎಂದು ಉಡಾಫೆ ಉತ್ತರ ನೀಡಿದ್ದಾರೆ.

    ಇದರಿಂದ ಕೋಪಗೊಂಡ ಸ್ಥಳೀಯ ಯುವಕನೋರ್ವ ವಿಡಿಯೋ ಮಾಡುತ್ತಾ ತಕ್ಷಣ ಇಲ್ಲಿಂದ ತೆರಳಿ. ಇಲ್ಲದಿದ್ದರೆ ಪೊಲೀಸರಿಗೆ ಫೋನ್ ಮಾಡಬೇಕಾಗುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾನೆ. ಜೊತೆಗೆ ಕೊರೊನಾ ಕರ್ಫ್ಯೂ ಇರುವುದರಿಂದ ಗುಂಪಾಗಿ ಸೇರಬಾರದು ಎಂಬುದು ಗೊತ್ತಿಲ್ವಾ ಎಂದು ಪ್ರಶ್ನೆ ಮಾಡಿದ್ದಾನೆ. ಯುವಕನ ಪ್ರಶ್ನೆಗೆ ಹೆದರಿದ ಯುವಕರು ನಂತರ ಅಲ್ಲಿಂದ ಕಾಲ್ಕಿತ್ತಿದ್ದಾರೆ.

  • ಕುಡಿದು ಆಸ್ಪತ್ರೆಯಲ್ಲಿ ಬೆತ್ತಲಾಗಿ ಮಲಗಿದ ವೈದ್ಯ – ರೋಗಿ ಸಾವು

    ಕುಡಿದು ಆಸ್ಪತ್ರೆಯಲ್ಲಿ ಬೆತ್ತಲಾಗಿ ಮಲಗಿದ ವೈದ್ಯ – ರೋಗಿ ಸಾವು

    ಚಿಕ್ಕಮಗಳೂರು: ರೋಗಿ ಆಸ್ಪತ್ರೆಗೆ ಬಂದಾಗ ಆಸ್ಪತ್ರೆಯಲ್ಲಿದ್ದ ವೈದ್ಯರು ಮದ್ಯಪಾನ ಸೇವನೆ ಮಾಡುವುದರಲ್ಲಿ ಬ್ಯುಸಿ ಇದ್ದ ಕಾರಣ ರೋಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರದ ಸರ್ಕಾರಿ ಆಸ್ಪತ್ರೆಯ ವೈದ್ಯ ಚನ್ನಕೇಶವನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದ್ದು, ವೈದ್ಯ ಚನ್ನಕೇಶವ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಜ್ಜಂಪುರ ಸಮೀಪದ ಹೆಬ್ಬುರು ಮೂಲದ ಪುಟ್ಟಮ್ಮಗೆ ಬಿಪಿ ಹಾಗೂ ಶುಗರ್ ಹೆಚ್ಚಿದ್ದ ಪರಿಣಾಮ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಗ ಡ್ಯೂಟಿಯಲ್ಲಿದ್ದ ಚನ್ನಕೇಶವ ಮದ್ಯಪಾನ ಮಾಡಿ ರೋಗಿಗೆ ಚಿಕಿತ್ಸೆ ನೀಡಿಲ್ಲ. ಆಸ್ಪತ್ರೆಯಲ್ಲಿದ್ದ ನರ್ಸ್‍ಗಳು ರೋಗಿಗೆ ಚಿಕಿತ್ಸೆ ನೀಡಿದ್ದಾರೆ.

    ಆಸ್ಪತ್ರೆಗೆ ಬಂದ ಸ್ವಲ್ಪ ಹೊತ್ತಿನಲ್ಲೇ ರೋಗಿ ಸಾವನ್ನಪ್ಪಿದ್ದಾರೆ. ರೋಗಿ ಪುಟ್ಟಮ್ಮ ಬಿಪಿ ಹಾಗೂ ಶುಗರ್‍ನಿಂದಲೇ ಸಾವನ್ನಪ್ಪಿದರೋ ಅಥವಾ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದರೋ ಎಂಬುದು ಸ್ಪಷ್ಟವಾಗಿಲ್ಲ. ಆದರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ವೈದ್ಯರ ಕೊಠಡಿಗೆ ಹೋದಾಗ, ವೈದ್ಯರು ಫುಲ್ ಎಣ್ಣೆ ಕುಡಿದು ಬೆತ್ತಲೆ ಮಲಗಿದ್ದಾರೆ. ಮೈಮೇಲೆ ಒಂದಿಂಚು ಬಟ್ಟೆ ಹಾಗೂ ಪ್ರಜ್ಞೆ ಇಲ್ಲದಂತೆ ಮಲಗಿದ್ದ ವೈದ್ಯನ ಕಂಡು ಸ್ಥಳೀಯರು ಮತ್ತಷ್ಟು ರೊಚ್ಚಿಗೆದ್ದಿದ್ದಾರೆ.

    ಕೂಡಲೇ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಈ ರೀತಿಯ ವೈದ್ಯರು ಯಾವ ಆಸ್ಪತ್ರೆಗೂ ಬೇಡ, ಇವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.