Tag: Local bodies election

  • ಮಡಿಕೇರಿ ನಗರಸಭೆ ಬಿಜೆಪಿ ಪಾಲು, ಎಸ್‍ಡಿಪಿಐ ಪ್ರಮುಖ ವಿರೋಧ ಪಕ್ಷ- ಕಾಂಗ್ರೆಸ್‍ಗೆ ತೀವ್ರ ಮುಖಭಂಗ

    ಮಡಿಕೇರಿ ನಗರಸಭೆ ಬಿಜೆಪಿ ಪಾಲು, ಎಸ್‍ಡಿಪಿಐ ಪ್ರಮುಖ ವಿರೋಧ ಪಕ್ಷ- ಕಾಂಗ್ರೆಸ್‍ಗೆ ತೀವ್ರ ಮುಖಭಂಗ

    ಮಡಿಕೇರಿ: ನಗರಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಈ ಮೂಲಕ ಕಳೆದ ಬಾರಿ ಹೆಚ್ಚು ಸ್ಥಾನ ಗೆದ್ದಿದ್ದ ಕಾಂಗ್ರೆಸ್‍ಗೆ ತೀವ್ರ ಮುಖಭಂಗವಾಗಿದೆ.

    ಮಡಿಕೇರಿ ನಗರಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು 23 ವಾರ್ಡ್ ಗಳಲ್ಲಿ 16 ಸ್ಥಾನಗಳನ್ನು ಗೆಲ್ಲುವ ಮೂಲಕ ಈ ಬಾರಿ ನಗರಸಭೆಯ ಆಡಳಿತವನ್ನು ಬಿಜೆಪಿ ಪಡೆದಿದೆ. ಐದು ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿದ್ದು, ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಕೇವಲ ಒಂದು ಸ್ಥಾನ ಗಳಿಸುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ. ಜೆಡಿಎಸ್ ಕೂಡ ಒಂದು ಸ್ಥಾನ ಗಳಿಸಿ ತೃಪ್ತಿ ಪಟ್ಟುಕೊಂಡಿದೆ.

    ಕಳೆದ ಬಾರಿ ಇದ್ದ ಸದಸ್ಯರನ್ನು ಮತದಾರ ಮನೆಗೆ ಕಳುಹಿಸಿದ್ದು, ಈ ಬಾರಿ ಪ್ರಮುಖರು ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್‍ನಿಂದ ನಗರಸಭೆಯ ಮಾಜಿ ಅಧ್ಯಕ್ಷರಾದ ಹೆಚ್.ಎಂ.ನಂದಕುಮಾರ್, ಜುಲೇಕಾಬಿ, ಕಾವೇರಮ್ಮ ಸೋಮಣ್ಣ, ಮಾಜಿ ಸದಸ್ಯರಾದ ಕೆ.ಯು.ಅಬ್ದುಲ್ ರಜಾಕ್, ಎ.ಸಿ.ದೇವಯ್ಯ, ಪ್ರಕಾಶ್ ಆಚಾರ್ಯ, ಟಿ.ಎಂ.ಅಯ್ಯಪ್ಪ, ಮುನೀರ್ ಅಹಮ್ಮದ್, ಸುನೀಲ್ ನಂಜಪ್ಪ, ಮಾಜಿ ಸದಸ್ಯ ಪಕ್ಷೇತರ ಅಭ್ಯರ್ಥಿ ಕೆ.ಜಿ.ಪೀಟರ್, ಕೆ.ಟಿ.ಬೇಬಿಮ್ಯಾಥ್ಯು ಸೋತಿದ್ದಾರೆ.

    ಕಳೆದ ಬಾರಿ ಗೆದ್ದ ಅಭ್ಯರ್ಥಿಗಳು ತಮ್ಮ ವಾರ್ಡ್ ಗಳಲ್ಲಿ ಉತ್ತಮ ಕೆಲಸ ಮಾಡಿದ ಪ್ರಭಾವದಿಂದಾಗಿ ಈ ಬಾರಿಯು ಗೆದ್ದಿದ್ದಾರೆ. ಬಿಜೆಪಿಯಿಂದ ಮಾಜಿ ಸದಸ್ಯರಾದ ಕೆ.ಎಸ್.ರಮೇಶ್, ಅನಿತಾ ಪೂವಯ್ಯ, ಎಸ್‍ಡಿಪಿಐಯಿಂದ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಸದಸ್ಯ ಎಂ.ಕೆ.ಮನ್ಸೂರ್, ಅಮಿನ್ ಮೊಹಿಸಿನ್ ಗೆಲುವು ಸಾಧಿಸಿದ್ದಾರೆ.

    ಕೋವಿಡ್ ನಿಯಮ ಉಲ್ಲಂಘನೆ
    ಮಡಿಕೇರಿ ನಗರಸಭೆಯ ಚುನಾವಣಾ ಫಲಿತಾಂಶ ಇಂದು ಹೋರ ಬಿಳುತ್ತಿದಂತೆ ಅಭ್ಯರ್ಥಿಗಳು ಕಾರ್ಯಕರ್ತರೊಂದಿಗೆ ಸಂಭ್ರಮಾಚರಿಸಿದರು. ಕೋವಿಡ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನ ಪ್ರತಿನಿಧಿಗಳಾಗಿ ಕಾರ್ಯ ನಿರ್ವಹಿಸಬೇಕಿರುವ ವಾರ್ಡ್ ಗಳ ಸದಸ್ಯರು ಕೋವಿಡ್ ನಿಯಮವನ್ನು ಉಲ್ಲಂಘಿಸಿದ್ದಾರೆ. ಕನಿಷ್ಠ ಕಾರ್ಯಕರ್ತರೊಂದಿಗೆ ಬೇರೆಯುವಾಗ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಎಂದಿನಂತೆ ಓಡಾಟ ನಡೆಸಿ, ಪೊಲೀಸರೊಂದಿಗೆ ಬುದ್ಧಿವಾದ ಹೇಳಿಸಿಕೊಂಡು ಮನೆಗೆ ಹೋಗಿದ್ದಾರೆ.

  • 1 ನಗರಸಭೆ, 3 ಪುರಸಭೆಯಲ್ಲಿ ಗೆಲುವು – ಮತ್ತೊಮ್ಮೆ ಜೆಡಿಎಸ್‍ನ ಭದ್ರಕೋಟೆಯಾದ ಮಂಡ್ಯ

    1 ನಗರಸಭೆ, 3 ಪುರಸಭೆಯಲ್ಲಿ ಗೆಲುವು – ಮತ್ತೊಮ್ಮೆ ಜೆಡಿಎಸ್‍ನ ಭದ್ರಕೋಟೆಯಾದ ಮಂಡ್ಯ

    ಮಂಡ್ಯ: 18 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆಡಿಎಸ್ ನಗರಸಭೆಯನ್ನು ಗೆದ್ದುಕೊಂಡಿದ್ದು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

    ಮಂಡ್ಯ ಹಿಂದುಳಿದ ನಗರವಾಗಿತ್ತು. ಇನ್ನು ಮುಂದೆ ಅಭಿವೃದ್ಧಿ ಪಥದತ್ತ ಸಾಗಲಿದೆ. ಸಿಎಂ ನಮ್ಮವರು, ಮಂಡ್ಯದಲ್ಲಿ ನಾನು ಶಾಸಕನಾಗಿದ್ದೇನೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಕೆಲಸ ಆಗಲಿದೆ. ನಗರಸಭೆಯಲ್ಲಿ ಜೆಡಿಎಸ್ ಪಕ್ಷ ಬಹುಮತ ಪಡೆಯಲು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆಡಳಿತ ವೈಖರಿ ಮತ್ತು ಮಾಜಿ ಪ್ರದಾನಿ ದೇವೇಗೌಡರ ಆದರ್ಶವೇ ಕಾರಣ ಎಂದು ಮಂಡ್ಯ ಶಾಸಕ ಶ್ರೀನಿವಾಸ್ ಮತ್ತು ಜೆಡಿಎಸ್ ಪಕ್ಷದ ಪ್ರದಾನ ಕಾರ್ಯರ್ಶಿ ಜಫ್ರುಲ್ಲಾ ಖಾನ್ ಹರ್ಷ ವ್ಯಕ್ತಪಡಿಸಿ ಜಿಲ್ಲೆಯ ಜನರಿಗೆ ಧನ್ಯವಾದ ಸಲ್ಲಿಸಿದ್ದಾರೆ.

    ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದ ಜೆಡಿಎಸ್, ಈಗ ಮಂಡ್ಯ ನಗರಸಭೆಯಲ್ಲೂ ಬಹುಮತ ಪಡೆಯುವ ಮೂಲಕ ಜೆಡಿಎಸ್ ಭದ್ರಕೋಟೆ ಎನ್ನುವುದು ಮತ್ತೊಮ್ಮೆ ಸಾಬೀತು ಮಾಡಿದೆ. ಮಂಡ್ಯ, ಮದ್ದೂರು, ನಾಗಮಂಗಲ ಮತ್ತು ಪಾಂಡವಪುರ ಪುರಸಭೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ.

    ಇದೇ ವೇಳೆ ಕಾರ್ಯಕರ್ತ ನಿಂಗರಾಜು ಶಾಸಕ ಎಂ ಶ್ರೀನಿವಾಸ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ವಿರುದ್ಧ ಕಿಡಿಕಾರಿದ್ದರು. ನನಗೆ ಟಿಕೆಟ್ ನೀಡಿದ್ರೆ ನಾನೇ ಗೆಲುತ್ತಿದ್ದೆ. ನನಗೆ ಅನ್ಯಾಯ ಮಾಡಿದ್ದೀರಿ. ನಾನು 20 ವರ್ಷಗಳಿಂದ ಪಕ್ಷಕ್ಕೆ ದುಡಿದ್ದೀನಿ. ಇಂದು ನನ್ನ ಮನೆ ಹಾಳಾಗಿದೆ ಎಂದು ನೋವುವನ್ನು ಹೇಳಿಕೊಂಡಿದ್ದರು.

    ಈ ವೇಳೆ ಬೆಂಬಲಿಗರು ನೊಂದ ಕಾರ್ಯಕರ್ತನನ್ನು ಶಾಸಕರ ಕಚೇರಿಯಿಂದ ಹೊರ ಹಾಕಿದ್ದಾರೆ. ನಿಂಗರಾಜು ಅವರ ಮಂಡ್ಯ ನಗರಸಭೆಯ 12ನೇ ವಾರ್ಡ್ ನಿಂದ ಸ್ಪರ್ಧಿಸಿದ್ದು, ನಾಲ್ಕನೇ ಸ್ಥಾನ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಜೆಪಿಗೆ ಡಬಲ್ ಸೀಟ್, ಸರ್ಕಾರದ ಕೌಂಟ್‍ಡೌನ್ ಆರಂಭ: ಆರ್. ಅಶೋಕ್

    ಬಿಜೆಪಿಗೆ ಡಬಲ್ ಸೀಟ್, ಸರ್ಕಾರದ ಕೌಂಟ್‍ಡೌನ್ ಆರಂಭ: ಆರ್. ಅಶೋಕ್

    ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ನೋಡುವಾಗ ಈ ಸಮ್ಮಿಶ್ರ ಸರ್ಕಾರದ ಕೌಂಟ್‍ಡೌನ್ ಶುರುವಾಗಿದೆ ಎಂದು ಬಿಜೆಪಿ ಮುಖಂಡ ಆರ್. ಆಶೋಕ್ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಂದಿದ್ದ ಹೊಸ ಸರ್ಕಾರಕ್ಕೆ ಬೆಂಬಲ ಸಿಗುತ್ತದೆ. ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಇಡೀ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ ಅಂತ ಹೇಳಿದ್ದರು. ಆದರೆ ಈ ಸ್ಥಳೀಯ ಸಂಸ್ಥೆಗಳ ಚುನವಾಣೆಯಲ್ಲಿ ಜೆಡಿಎಸ್ ಒಂದು ರೀತಿ ಹೀನಾಯ ಸ್ಥಿತಿಗೆ ಹೋಗಿರುವುದು ಗೊತ್ತಾಗುತ್ತಿದೆ ಎಂದು ವ್ಯಂಗ್ಯವಾಗಿ ಹೇಳಿದರು.

    ಕಾಂಗ್ರೆಸ್ ಕೂಡ ಕಳೆದ ಬಾರಿ ಗೆದ್ದಿದ್ದ ಸ್ಥಾನಕ್ಕಿಂತ ಕಡಿಮೆ ಸ್ಥಾನವನ್ನು ಗಳಿಸಿದ್ದು, ಸ್ಥಾನಗಳನ್ನು ಕಳೆದುಕೊಂಡಿರುವುದು ಕಾಣುತ್ತದೆ. ಕೆಲವು ಮಹಾನಗರ ಪಾಲಿಕೆ, ಪುರಸಭೆ ಮತ್ತು ನಗರಸಭೆಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತವನ್ನು ಗಳಿಸಿದೆ. ಕಳೆದ ಬಾರಿಗಿಂತ ಡಬಲ್ ಸೀಟುಗಳು ಬಿಜೆಪಿ ಕಡೆ ವಾಲಿದೆ. ಆದ್ದರಿಂದ ನನಗೆ ಎಲ್ಲೋ ಒಂದು ಕಡೆ ಈ ಸರ್ಕಾರದ ಕೌಂಟ್‍ಡೌನ್ ಶುರುವಾಗಿದೆ ಅನ್ನಿಸುತ್ತದೆ ಎಂದು ಹೇಳಿದ್ದಾರೆ.

    ಈ ಫಲಿತಾಂಶಕ್ಕೆ ಜೆಡಿಎಸ್ ನ ಪ್ರಾಬಲ್ಯ ಮತ್ತು ಕಾಂಗ್ರೆಸ್ಸಿನ ಜಗಳ ಇರಬಹುದು. ಇವರ ಮಧ್ಯೆ ಇಂದು ರಾಜ್ಯದ ಜನರು, ಸಾಮಾನ್ಯವಾಗಿ ಯಾವ ಸರ್ಕಾರ ಅಧಿಕಾರದಲ್ಲಿ ಇರುತ್ತದೋ ಆ ಸರ್ಕಾರಕ್ಕೆ ಸಾರ್ವಜನಿಕರು ಬೆಂಬಲ ಕೊಡುತ್ತಾರೆ. ಆದ್ದರಿಂದ ಈ ಚುನಾವಣೆಯಲ್ಲಿ ಜನರು ಬೆಂಬಲ ಕೊಡುವುದು ಸರ್ವೇ ಸಾಮಾನ್ಯ. ಆದರೆ ಎಲ್ಲೂ ಕೂಡ ಈ ಸರ್ಕಾರಕ್ಕೆ ಸ್ಪಷ್ಟ ಬಹುಮತ ಬಂದಿಲ್ಲ ಎಂದ್ರು.

    ಮೈಸೂರಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಸ್ಪಷ್ಟ ಬಹುಮತ ಲಭಿಸಿಲ್ಲ. ಜೆಡಿಎಸ್ ನ ಭದ್ರಕೋಟೆಯಾದ ಹಾಸನದಲ್ಲೂ ಸ್ಪಷ್ಟ ಬಹುಮತ ಸಿಗಲಿಲ್ಲ. ಶಿವಮೊಗ್ಗದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಇದೆಲ್ಲವನ್ನು ನೋಡಿದರೆ ಈ ಸರ್ಕಾರಕ್ಕೆ ಜನ ಬೆಂಬಲ ಇಲ್ಲ ಎಂದು ಅನಿಸುತ್ತದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲೋಕಸಭೆ ಚುನಾವಣೆಗೆ ದಿನೇಶ್ ಗುಂಡೂರಾವ್ ರಣತಂತ್ರ

    ಲೋಕಸಭೆ ಚುನಾವಣೆಗೆ ದಿನೇಶ್ ಗುಂಡೂರಾವ್ ರಣತಂತ್ರ

    ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನವೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ ರಣತಂತ್ರ ರೂಪಿಸುತ್ತಿದ್ದು, ಈಗಾಗಲೆ 7 ಮತಕ್ಷೇತ್ರಗಳ ಮುಖಂಡರ ಜೊತೆಗೆ ಮಾತುಕತೆ ನಡೆಸಿದ್ದಾರೆ.

    ಶುಕ್ರವಾರ ರಾಜ್ಯದ 7 ಲೋಕಸಭಾ ಕ್ಷೇತ್ರಗಳ ಸ್ಥಳೀಯ ಮುಖಂಡರ ಜೊತೆ ಸಭೆ ನಡೆಸಲಾಗಿದ್ದು, ಪಕ್ಷ ಸಂಘಟನೆ, ವಿಧಾನಸಭೆ ಸೋಲು ಗೆಲುವುಗಳ ಚರ್ಚೆ ಮಾಡಲಾಗಿದೆ. ಮುಂದಿನ ವಾರ ಉಳಿದ 21 ಮತಕ್ಷೇತ್ರಗಳ ಮುಖಂಡರ ಸಭೆ ನಿಗದಿ ಪಡಿಸಲಾಗಿದೆ. ಆದರೆ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿಲ್ಲ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

    ಸ್ಥಳೀಯ ಸಂಸ್ಥೆಗಳ ಚುನಾವಣಾ ಮೈತ್ರಿ ಕುರಿತಾಗಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದರೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೊತೆಗೆ ಚರ್ಚೆ ಬಳಿಕ, ಮೈತ್ರಿಯ ನಿರ್ಧಾರ ಎಂದ ಅವರು, ಆಷಾಢ ಮುಗಿದ ನಂತರ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಆಗಸ್ಟ್ 15ರ ನಂತರ ದೆಹಲಿಗೆ ತೆರಳಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು.

    ಅಧ್ಯಕ್ಷನಾಗಿ ನೇಮಕಗೊಂಡ ಬಳಿಕ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿಲ್ಲ. ಹೀಗಾಗಿ ಇಂದು ಸಂಜೆ ಅವರ ನಿವಾಸಕ್ಕೆ ಹೋಗುತ್ತಿರುವೆ. ಈ ವೇಳೆ ಅವರೊಂದಿಗೆ ಅನೇಕ ವಿಚಾರಗಳನ್ನು ಚರ್ಚೆ ಮಾಡಲಾಗುತ್ತದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಲೋಕಲ್ ಚುನಾವಣೆಯ ಮೈತ್ರಿ ತಂತ್ರ ರಿವೀಲ್ ಮಾಡಿದ್ರು ದೇಶಪಾಂಡೆ

    ಲೋಕಲ್ ಚುನಾವಣೆಯ ಮೈತ್ರಿ ತಂತ್ರ ರಿವೀಲ್ ಮಾಡಿದ್ರು ದೇಶಪಾಂಡೆ

    ಕಾರವಾರ: ರಾಜ್ಯ ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ನಾಯಕರು ಮೈತ್ರಿ ಮಂತ್ರ ಪಟಿಸುತ್ತಿದ್ದು, ಈಗ ಸ್ಥಳೀಯ ಸಂಸ್ಥೆಯಲ್ಲಿಯೂ ದೋಸ್ತಿಗೆ ಮುಂದಾಗಿರುವ ತಂತ್ರವನ್ನು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ತೆರೆದಿಟ್ಟಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಜೆಡಿಎಸ್ ಯಾವ ಕ್ಷೇತ್ರದಲ್ಲಿ ದುರ್ಬಲವಾಗಿದೆ ಅಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತದೆ. ಕಾಂಗ್ರೆಸ್ ಭದ್ರಕೋಟೆಯಲ್ಲಿ ಜೆಡಿಎಸ್‍ಗೆ ಅವಕಾಶವಿಲ್ಲ. ಇನ್ನು ಯಾವ ಕ್ಷೇತ್ರದಲ್ಲಿ ಎರಡೂ ಪಕ್ಷಗಳು ಬಲಿಷ್ಠವಾಗಿಲ್ಲವೋ ಅಲ್ಲಿ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಹೊಂದಾಣಿಕೆ ಮೂಲಕ ಮತಕ್ಷೇತ್ರದ ಹಂಚಿಕೆಗೆ ಎರಡು ಪಕ್ಷದ ಅಧ್ಯಕ್ಷರು ಚಿಂತನೆ ನಡೆಸಿದ್ದಾರೆ ಎಂದು ತಿಳಿಸಿದರು.

    ಅಕ್ರಮವಾಗಿ ಬಾಂಗ್ಲಾದೇಶ ಸೇರಿದಂತೆ ಬೇರೆ ದೇಶಗಳಿಂದ ವಲಸೆ ಬಂದು ರಾಜ್ಯದಲ್ಲಿ ನೆಲೆಸಿದ್ದಾರೆ. ಕೆಲವು ವಿದೇಶಿಗರು ವಿಸಾ ಅವಧಿ ಮುಗಿದಿದ್ದರೂ ರಾಜ್ಯದಲ್ಲಿ ಉಳಿದುಕೊಂಡಿದ್ದಾರೆ. ಅಂತಹ ವ್ಯಕ್ತಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ‘ಆರೋಗ್ಯ ಕರ್ನಾಟಕ ಕಾರ್ಡ್’ ಯೋಜನೆಯನ್ನು ಜಾರಿಗೆ ತಂದಿತ್ತು. ಅದನ್ನು ಶೀಘ್ರದಲ್ಲಿಯೇ ಚಾಲ್ತಿಗೆ ತರಲಾಗುವುದು. ಜೊತೆಗೆ ಹಿಂದೆ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಘೋಷಿಸಿದ್ದ ಎಲ್ಲಾ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರಲಾಗುತ್ತದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews