Tag: local body elections

  • ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿರೋದೇ ಮತಗಳ್ಳತನದಿಂದ ಅಂತ ಪ್ರಮಾಣಿಕರಿಸಿಕೊಂಡಂತಿದೆ: ವಿಜಯೇಂದ್ರ ಕಿಡಿ

    ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿರೋದೇ ಮತಗಳ್ಳತನದಿಂದ ಅಂತ ಪ್ರಮಾಣಿಕರಿಸಿಕೊಂಡಂತಿದೆ: ವಿಜಯೇಂದ್ರ ಕಿಡಿ

    ಬೆಂಗಳೂರು: ಮತಪತ್ರಗಳ (Ballot Paper) ಬಳಕೆಯಿಂದ ಚುನಾವಣಾ ಅಕ್ರಮ ಎಸೆಗಬಹುದು, ಮತಗಟ್ಟೆಗಳಲ್ಲಿ ದೌರ್ಜನ್ಯ ಮೆರೆಯಬಹುದು, ಎಗ್ಗಿಲ್ಲದೇ ಕಳ್ಳ ಮತದಾನವನ್ನೂ ಮಾಡಬಹುದು ಎಂಬ ಏಕೈಕ ಕಾರಣಕ್ಕಾಗಿ ಕಾಂಗ್ರೆಸ್ ಮತ ಪತ್ರ ಆಧರಿಸಿದ ಚುನಾವಣೆಯನ್ನು ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್‌ ಬೆಂಬಲಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌ ಬಳಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ ವಿಚಾರಕ್ಕೆ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ‌ ಬ್ಯಾಲೆಟ್ ಪೇಪರ್ ಎಲೆಕ್ಷನ್: ಕಾನೂನು ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ

    ವಿಜಯೇಂದ್ರ ಎಕ್ಸ್‌ನಲ್ಲಿ ಏನಿದೆ?
    ಮುಂದಿನ ಚುನಾವಣೆಗಳಲ್ಲಿ (ಸ್ಥಳೀಯ ಸಂಸ್ಥೆಗಳು) EVM ಯಂತ್ರ ಬದಿಗಿಟ್ಟು ಮತ ಪತ್ರ (ಬ್ಯಾಲಟ್ ಪೇಪರ್) ಬಳಕೆಗೆ ನಿರ್ಧರಿಸಿರುವ ಕಾಂಗ್ರೆಸ್‌ ಸರ್ಕಾರದ ಸಂಪುಟದ ತೀರ್ಮಾನ ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ಸ್ವಯಂ ಪ್ರಮಾಣಿಕರಿಸಿಕೊಂಡಂತಿದೆ. ಇದನ್ನೂ ಓದಿ: ದೇಶದಲ್ಲೇ ಫಸ್ಟ್‌ – ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಗೆ ಚಾಲನೆ

    ಈ ಹಿನ್ನೆಲೆಯಲ್ಲಿ EVM ಮತಯಂತ್ರ ಬಳಸಿ ರಾಜ್ಯದಲ್ಲಿ 2೦23ರ ಚುನಾವಣೆಯಲ್ಲಿ ಆರಿಸಿ ಬಂದಿರುವ 136 ಕಾಂಗ್ರೆಸ್ ಶಾಸಕರಿಂದ ಮೊದಲು ರಾಜೀನಾಮೆ ಕೊಡಿಸಲಿ, ರಾಜ್ಯದಿಂದ ಆಯ್ಕೆಯಾದ ಒಂಬತ್ತು ಕಾಂಗ್ರೆಸ್ ಲೋಕಸಭಾ ಸದಸ್ಯರಿಂದ ರಾಜೀನಾಮೆ ಕೊಡಿಸಲಿ, ಮತಪತ್ರ ಬಳಸಿ ಮತ್ತೆ ಚುನಾವಣೆಯಿಂದ ಗೆದ್ದು ಬರಲಿ, ಇಲ್ಲದಿದ್ದರೆ ಮತಗಳ್ಳತನದಿಂದ ನಾವು ಆಯ್ಕೆಯಾಗಿ ಅಧಿಕಾರಕ್ಕೆ ಬಂದಿರುವುದು ಎಂದು ಒಪ್ಪಿಕೊಳ್ಳಲಿ. ಇದನ್ನೂ ಓದಿ: ಮೋದಿ ಸರ್ಕಾರ GST ಸರಳೀಕರಣ ಮಾಡಿ ದಸರಾ, ದೀಪಾವಳಿ ಉಡುಗೊರೆ ಕೊಟ್ಟಿದೆ – ಮಹೇಶ್ ತೆಂಗಿನಕಾಯಿ

    ದೇಶದಲ್ಲಿ ಅತಿಹೆಚ್ಚು ಅಕ್ರಮ ಮತದಾನ, ಮತಗಳ್ಳತನದ ದೂರುಗಳು, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳು ನಡೆದ ಬಗ್ಗೆ ನ್ಯಾಯಾಲಯಗಳಲ್ಲಿ ದೂರುಗಳು ಅತಿ ಹೆಚ್ಚು ದಾಖಲಾಗಿದ್ದರೆ ಅದು ಮತಪತ್ರ ಆಧರಿಸಿ ನಡೆಸಿದ ಚುನಾವಣೆಗಳಲ್ಲಿ, ಅದೂ ಕಾಂಗ್ರೆಸ್ಸಿಗರ ಮೇಲೇ ಹೆಚ್ಚು ಎಂಬುದನ್ನು ಕಾಂಗ್ರೆಸ್ಸಿಗರು ಇತಿಹಾಸದ ಪುಟಗಳನ್ನು ತೆರೆದು ನೋಡಲಿ. ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲು ಕಾರಣವಾಗಿದ್ದು ಅವರು ನಡೆಸಿದ ಮತಗಳ್ಳತನ ಹಾಗೂ ಅಕ್ರಮ ಚುನಾವಣೆಯ ಹಿನ್ನೆಲೆಯಲ್ಲಿ ನ್ಯಾಯಾಲಯ ನೀಡಿದ ತೀರ್ಪಿನಿಂದ ಎಂಬ ಇತಿಹಾಸವನ್ನು ದೇಶದ ಜನ ಮರೆತಿಲ್ಲ.

    ಮತ ಪತ್ರ ಆಧರಿಸಿದ ಚುನಾವಣೆಗಳಲ್ಲಿ ಅಕ್ರಮ ಹಾಗೂ ಮತಗಳ್ಳತನ ನಡೆಸುವುದರಲ್ಲಿ ನಿಷ್ಣಾತರಾದ ಕಾಂಗ್ರೆಸ್ಸಿಗರು ಚುನಾವಣೆಗಳ ನಿರಂತರ ಸೋಲುಗಳಿಂದ ಮೂಲೆಗುಂಪಾಗುತ್ತಿರುವ ಪರಿಸ್ಥಿತಿಯಿಂದ ಕಂಗೆಟ್ಟು ಹೋಗಿದ್ದಾರೆ. ಈ ಕಾರಣದಿಂದಾಗಿ ಆಧಾರ ರಹಿತ, ಅಪ್ರಬುದ್ಧ, ವಿತಂಡ ವಾದವನ್ನು ಮುಂದಿಟ್ಟುಕೊಂಡು ರಾಹುಲ್‌ ಗಾಂಧಿ ಅವರು ಮತಗಳ್ಳತನದ ಹೆಸರಿನಲ್ಲಿ ಬಾಲಿಶ ವಿವಾದ ಹುಟ್ಟು ಹಾಕಲು ಹೊರಟಿದ್ದಾರೆ, ಇದನ್ನು ಬೆಂಬಲಿಸಲು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರವನ್ನು ಬಳಸಿ ಚುನಾವಣೆ ನಡೆಸುವುದಾಗಿ ನಿರ್ಣಯ ಕೈಗೊಂಡಿದೆ. ಇಡೀ ದೇಶ, ಜಗತ್ತು ತಂತ್ರಜ್ಞಾನವನ್ನು ಆಧರಿಸಿ ವೇಗವಾಗಿ ನಡೆಯುತ್ತಿದ್ದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಂತ್ರಜ್ಞಾನವನ್ನು ಅಪಮಾನಿಸಿ ಹೆಬ್ಬೆಟ್ಟಿನ ದಿನಗಳನ್ನು ನೆನಪಿಸಲು ಹೊರಟಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆಗಿನ ಟ್ರಂಪ್‌ ವೈಯಕ್ತಿಕ ಬಾಂಧವ್ಯ ಈಗ ಇಲ್ಲ: ಅಮೆರಿಕ ಮಾಜಿ ಅಧಿಕಾರಿ

    ಕಾಂಗ್ರೆಸ್ ಸರ್ಕಾರ ಅಧಿಕಾರವಿದ್ದ ಅವಧಿಯಲ್ಲಿ ಮತಪತ್ರ ಬಳಸಿ ನಡೆದ ಚುನಾವಣೆಗಳಲ್ಲಿ ಎಷ್ಟು ಅಕ್ರಮ ನಡೆದಿದೆ ಎನ್ನುವುದಕ್ಕೆ ಇವತ್ತಿಗೂ ದಾಖಲೆಗಳಿವೆ, 90ರ ದಶಕದಲ್ಲಿ ದಾವಣಗೆರೆಯಲ್ಲಿ ಜಯಗಳಿಸಿದ್ದ ಲೋಕಸಭಾ ಬಿಜೆಪಿ ಅಭ್ಯರ್ಥಿಯನ್ನು ಮರು ಎಣಿಕೆಯಲ್ಲಿ ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲಾಯಿತು, ಬಿಜೆಪಿ ಅಭ್ಯರ್ಥಿಯ ಮತ ಪತ್ರಗಳನ್ನು ಹೇಗೆ ತಿರಸ್ಕೃತಗೊಳಿಸಲಾಯಿತು ಎಂಬುದಕ್ಕೆ ಅಂದು ದಾವಣಗೆರೆಯ ಮತ ಎಣಿಕೆ ಕೇಂದ್ರದ ಶೌಚಾಲಯಗಳಲ್ಲೆಲ್ಲಾ ಬಿಜೆಪಿ ಅಭ್ಯರ್ಥಿಯ ಮತ ಪತ್ರಗಳು ಚೆಲ್ಲಾಡಿರುವುದನ್ನು ಅಂದು ಮಾಧ್ಯಮಗಳು ವರದಿ ಮಾಡಿದ್ದವು.

    ಮತಪತ್ರಗಳ ಬಳಕೆಯಿಂದ ಚುನಾವಣಾ ಅಕ್ರಮ ಎಸೆಗಬಹುದು, ಮತಗಟ್ಟೆಗಳಲ್ಲಿ ದೌರ್ಜನ್ಯ ಮೆರೆಯಬಹುದು, ಎಗ್ಗಿಲ್ಲದೇ ಕಳ್ಳ ಮತದಾನವನ್ನೂ ಮಾಡಬಹುದು ಎಂಬ ಏಕೈಕ ಕಾರಣಕ್ಕಾಗಿ ಕಾಂಗ್ರೆಸ್ ಮತ ಪತ್ರ ಆಧರಿಸಿದ ಚುನಾವಣೆಯನ್ನು ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಬೆಂಬಲಿಸುತ್ತಿದೆ, ಅದನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಲು ಮೊದಲ ಹೆಜ್ಜೆ ಇಡಲು ಹೊರಟಿದೆ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಪಾರದರ್ಶಕ ಚುನಾವಣೆಯನ್ನು ಧಿಕ್ಕರಿಸುವುದೇ ಕಾಂಗ್ರೆಸ್‌ನ ಅಜೆಂಡಾ ಹಾಗೂ ಗುರಿಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

  • ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೇ ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ – ಸಿಎಂಗೆ ಹೆಚ್‌ಡಿಕೆ ಸವಾಲ್

    ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೇ ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ – ಸಿಎಂಗೆ ಹೆಚ್‌ಡಿಕೆ ಸವಾಲ್

    ಬೆಂಗಳೂರು: ಮಾನವ ಸರಪಳಿ (Human Chain) ರಚಿಸಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಾಡಿದ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ (H.D Kumaraswamy) ಕಿಡಿಕಾರಿದ್ದಾರೆ.

    ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಕುಮಾರಸ್ವಾಮಿ, ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೇ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ (Local Body Elections) ಮಾಡಿ ಅಂತ‌ ಸಿಎಂ ಸಿದ್ದರಾಮಯ್ಯಗೆ (Siddaramaiah) ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲೇ ಯುವಕನ ಬಟ್ಟೆ ಬಿಚ್ಚಿಸಿ ಹಲ್ಲೆ – ಬೆಂಗಳೂರಲ್ಲಿ ಇದೆಂತಹ ಅಮಾನವೀಯ ಕೃತ್ಯ!

    ಹೆಚ್‌ಡಿಕೆ ಎಕ್ಸ್‌ನಲ್ಲಿ ಏನಿದೆ?
    ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೇ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ?

    ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಮಾನ್ಯ ಸಿದ್ದರಾಮಯ್ಯನವರೇ, ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ. ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ.

    ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಅಂತ ಕುಮಾರಸ್ವಾಮಿ ಟ್ವೀಟ್ ಮಾಡಿ‌ ಸರ್ಕಾರಕ್ಕೆ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

  • ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಏಕಾಂಗಿ ಸ್ಪರ್ಧೆ: ಎಚ್‍ಡಿಡಿ

    ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಏಕಾಂಗಿ ಸ್ಪರ್ಧೆ: ಎಚ್‍ಡಿಡಿ

    ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ಪರ್ಧೆ ನಡೆಸಲಿದ್ದು, ಯಾವುದೇ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಕಣಕ್ಕೆ ಇಳಿಯಲಿದೆ ಎಂದು ಜೆಡಿಎಸ್ ವರಿಷ್ಠ ಎಚ್‍ಡಿ ದೇವೇಗೌಡ ಅವರು ಹೇಳಿದ್ದಾರೆ.

    ಪಕ್ಷ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಚುನಾವಣೆ ಆಯೋಗ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಮಂಗಳೂರಿನಲ್ಲಿ ಜೆಡಿಎಸ್ ಪಕ್ಷದ 4 ರಿಂದ 5 ಸ್ಥಾನ ಗೆಲ್ಲುವ ಸಾಧ್ಯತೆ ಇದ್ದು, ಹೀಗಾಗಿ ಅಲ್ಲಿ ಸ್ಪರ್ಧೆ ಮಾಡುತ್ತೇವೆ. ಈ ಹಿಂದೆ ಬಿಜೆಪಿ ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್‍ಗೆ ಬೆಂಬಲ ನೀಡಿದ್ದೇವು. ಆದರೆ ಈ ಬಾರಿ ಜೆಡಿಎಸ್ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಸ್ಪರ್ಧೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದರು.

    ಚುನಾವಣೆಯ ನಡೆಯುವ ರಾಜ್ಯದ ಎಲ್ಲಾ ಭಾಗದಲ್ಲೂ ಅಗತ್ಯವಿರುವ ಕಡೆ ಮಾತ್ರ ಸ್ಪರ್ಧೆ ಮಾಡುತ್ತೇವೆ. ಈ ಬಗ್ಗೆ ಫಾರೂಖ್‍ರೊಂದಿಗೆ ಚರ್ಚೆ ಮಾಡಿ ಟಿಕೆಟ್ ಫೈನಲ್ ಮಾಡುತ್ತೇವೆ. ಸ್ವತಃ ನಾನೇ ಮಂಗಳೂರು, ಯಾದಗಿರಿ ಸೇರಿದಂತೆ ವಿವಿಧ ಭಾಗಗಳಲ್ಲಿ ಪ್ರವಾಸ ಮಾಡುತ್ತೇನೆ. ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಅಗತ್ಯಿವಿರುವ ಎಲ್ಲಾ ಕಡೆ ಸ್ಪರ್ಧೆ ಮಾಡುತ್ತಾರೆ ಎಂದರು.

    ತೊಂದರೆ ಕೊಟ್ಟರೆ ಸುಮ್ಮನಿರಲ್ಲ: ಇದೇ ವೇಳೆ ಸಿಎಂ ಬಿಎಸ್‍ವೈ ಅವರ ಕಾರಿಗೆ ತಡೆಯೊಡ್ಡಿ ಪ್ರತಿಭಟನೆ ನಡೆಸಿದ ಯಾದಗಿರಿ ಪಕ್ಷದ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ ಹಿಂಸೆ ನೀಡಲಾಗುತ್ತಿದೆ. ಸಿಎಂ ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ನೀಡಿದ ಅನುದಾನವನ್ನು ಕಡಿತ ಮಾಡಿದ್ದ ಪರಿಣಾಮ ಕಾರ್ಯಕರ್ತರು ತೆರಳಿದ್ದರು. ಈ ವೇಳೆ ಸಿಎಂ ತೆರಳುತ್ತಿದ್ದ ಕಾರಣ ಕಾರಿಗೆ ಅಡ್ಡ ಹಾಕಿದ್ದರು ಅಷ್ಟೇ. ಆದರೆ ಇದನ್ನೇ ದೂರು ಮಾಡಿಕೊಂಡು ಪ್ರಕರಣ ದಾಖಲಿಸಿ ಅವರಿಗೆ ಕಾರ್ಯಕರ್ತರಿಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಅವರಿಗೆ ಧೈರ್ಯ ಹೇಳುವ ಸಾಲುವಾಗಿ ನಾಳೆ ಅಲ್ಲಿಗೆ ಭೇಟಿ ನೀಡುತ್ತಿದ್ದೇನೆ ಎಂದರು.

    ಜೆಡಿಎಸ್ ಶಾಸಕರು ಇರುವ 37 ಕ್ಷೇತ್ರದ ಅನುದಾನವನ್ನು ಸಿಎಂ ಯಡಿಯೂರಪ್ಪ ಕಡಿತ ಮಾಡಿದ್ದಾರೆ. ನಾಳೆ ನಾನು ಅಲ್ಲಿಗೆ ಹೋಗಿ ಅವರಿಗೆ ಬೆಂಬಲ ನೀಡುತ್ತೇನೆ. ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಮಾತ್ರ ಸುಮ್ಮನೆ ಇರುವುದಿಲ್ಲ. ನನಗೆ ಹೋರಾಟ ಹೊಸದಲ್ಲ ಎಂದರು. ಇದೇ ವೇಳೆ ರಾಷ್ಟ್ರ ರಾಜಕಾರಣಕ್ಕೆ ಇಂದಿನ ದಿನ ದೇವೇಗೌಡರು ಅನಿವಾರ್ಯತೆ ಇದೆ ಎಂಬ ಮಾಜಿ ಸಿಎಂ ಎಚ್‍ಡಿಕೆ ಅವರ ಹೇಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ದೇಶದ ಇಂದಿನ ಬೆಳವಣಿಗೆಗಳ ಕುರಿತು ನಿರಂತರ ಮಾಹಿತಿ ಪಡೆಯುತ್ತಿದ್ದೇನೆ. ಆದರೆ ಮೊದಲು ರಾಜ್ಯದಲ್ಲಿ ನಮ್ಮ ಪಕ್ಷ ಸಂಘಟನೆ ಮಾಡುತ್ತೇನೆ. ಮೊದಲು ರಾಜ್ಯದಲ್ಲಿ ನಮ್ಮ ಪಕ್ಷ ಸಂಘಟನೆ ನನ್ನ ಆದ್ಯತೆ ಎಂದರು.

  • ಸ್ಥಳೀಯ ಸಂಸ್ಥೆ ಚುನಾವಣೆ – ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

    ಸ್ಥಳೀಯ ಸಂಸ್ಥೆ ಚುನಾವಣೆ – ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

    ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಪಡೆದರೆ, ಬಿಜೆಪಿ 2ನೇ ಸ್ಥಾನ ಹಾಗೂ ಜೆಡಿಎಸ್ 3ನೇ ಸ್ಥಾನ ಪಡೆದಿದೆ.

    ರಾಜ್ಯದ 8 ನಗರಸಭೆ, 33 ಪುರಸಭೆ ಹಾಗೂ 22 ಪಟ್ಟಣ ಪಂಚಾಯತ್‍ಗಳಿಗೆ ಎರಡು ದಿನಗಳ ಹಿಂದೆ ಚುನಾವಣೆ ನಡೆದಿತ್ತು. ಇಂದು ಪ್ರಕಟಗೊಂಡ ಫಲಿತಾಂಶದಲ್ಲಿ ಕಾಂಗ್ರೆಸ್ 13 ಪುರಸಭೆ, 4 ಪಟ್ಟಣ ಪಂಚಾಯತ್, 2 ನಗರಸಭೆಗಳಲ್ಲಿ ಜಯ ಪಡೆದಿದೆ.

    ಬಿಜೆಪಿ 9 ಪಟ್ಟಣ ಪಂಚಾಯತ್, 6 ಪುರಸಭೆ ಹಾಗೂ ಒಂದು ನಗರಸಭೆಯಲ್ಲಿ ಗೆಲುವು ಪಡೆದಿದೆ. ಇನ್ನು ಜೆಡಿಎಸ್ ಪಕ್ಷ 2 ಪುರಸಭೆಗಳಲ್ಲಿ ಪಡೆದಿದ್ದು, ಪಕ್ಷೇತರರು 2 ಪುರಸಭೆಗಳಲ್ಲಿ ಮೇಲುಗೈ ಸಾಧಿಸಿದ್ದಾರೆ.

    2 ನಗರಸಭೆ ಹಾಗೂ ಒಂದು ಪುರಸಭೆಯಲ್ಲಿ ಮೈತ್ರಿ ಪಕ್ಷಗಳು ಅಧಿಕಾರ ಪಡೆದಿವೆ. ಉಳಿದಂತೆ 6 ಪಟ್ಟಣ ಪಂಚಾಯತ್, 6 ಪುರಸಭೆ ಮತ್ತು 2 ನಗರಸಭೆಗಳಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.

  • ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೊಂದಾಣಿಕೆ ಕಷ್ಟ – ಫ್ರೆಂಡ್ಲಿ ಫೈಟ್ ಮಾಡ್ತೇವೆ: ಸಾರಾ ಮಹೇಶ್

    ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೊಂದಾಣಿಕೆ ಕಷ್ಟ – ಫ್ರೆಂಡ್ಲಿ ಫೈಟ್ ಮಾಡ್ತೇವೆ: ಸಾರಾ ಮಹೇಶ್

    ಮೈಸೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಕಷ್ಟವಾಗುವುದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಪ್ರತ್ಯೇಕ ಸ್ಪರ್ಧೆ ಮಾಡುತ್ತೇವೆ. ಆ ಮೂಲಕ ಫ್ರೆಂಡ್ಲಿ ಫೈಟ್ ನಡೆಸುತ್ತೇವೆ. ಒಂದು ವೇಳೆ ವರಿಷ್ಠರು ತೀರ್ಮಾನ ಮಾಡಿದರೆ ಒಂದಾಗುತ್ತೇವೆ ಎಂದು ಸಚಿವ ಸಾರಾ ಮಹೇಶ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಹೊಂದಾಣಿಕೆ ಇಲ್ಲ. ಮೈತ್ರಿ ಸರ್ಕಾರ ಇದ್ದರು ಕೂಡ ಪ್ರತ್ಯೇಕ ಪ್ರತ್ಯೇಕ ಸ್ಪರ್ಧೆ ಮಾಡಿ, ಫ್ರೆಂಡ್ಲಿ ಫೈಟ್‍ಗೆ ನಿರ್ಧಾರ ಮಾಡಲಾಗಿದೆ. ಸ್ಥಳೀಯ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಎರಡು ಪಕ್ಷಗಳಿಗೆ ಕಷ್ಟ ಆಗುವುದರಿಂದಲೇ ಚಿಂತನೆ ನಡೆಸಲಾಗಿದೆ. ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಮಾಡುತ್ತಾರೆ ಎಂದರು.

    ಒಂದೊಮ್ಮೆ ನಾಯಕರ ಹಂತದಲ್ಲಿ ಹೊಂದಾಣಿಕೆ ಮುಂದಾದರು ಅದು ಯಶಸ್ವಿ ಆಗುವುದಿಲ್ಲ. ಏಕೆಂದರೆ ಹಲವು ವರ್ಷಗಳಿಂದ ತಳಮಟ್ಟದಲ್ಲಿ ಪಕ್ಷಕ್ಕಾಗಿ ಕಾರ್ಯಕರ್ತರು ಕೆಲಸ ಮಾಡಿರುತ್ತಾರೆ. ಈಗ ಹೊಂದಾಣಿಕೆ ಎಂದರೆ ಅವರು ಬೇರೆ ಪಕ್ಷಕ್ಕೆ ಹೋಗುತ್ತಾರೆ. ಇಲ್ಲವಾದರೆ ಬಂಡಾಯವಾಗಿ ಸ್ಪರ್ಧೆ ಮಾಡುತ್ತಾರೆ ಎಂದರು.

    ಇದೇ ವೇಳೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಬಿಜೆಪಿಗೆ ಮತಹಾಕಿದ್ದಾರೆ ಎಂಬ ಸಚಿವ ಜಿಟಿಡಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಜಿಟಿ ದೇವೆಗೌಡರು ಅವರಿಗಿರುವ ಮಾಹಿತಿ ಮೇರೆಗೆ ಹೇಳಿಕೆ ನೀಡಿದ್ದಾರೆ. ಇಲ್ಲಿ ನಮ್ಮ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡಿದ್ದಾರೆ. ಒಂದು ಬೂತ್ ವಿಚಾರವಾಗಿ ಮಾತ್ರ ಜಿಟಿಡಿ ಅವರು ಹೇಳಿಕೆ ನೀಡಿದ್ದು ನಿಜ. ಇಡೀ ಲೋಕಸಭಾ ವ್ಯಾಪ್ತಿಯಲ್ಲಿ ನಾಯಕರು ತೀರ್ಮಾನಿಸಿದಂತೆ ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡಿದ್ದೇವೆ. ಮಂಡ್ಯದಲ್ಲಿ ನಮ್ಮ ಅಭ್ಯರ್ಥಿ ಲಕ್ಷ ಮತಗಳ ಅಂತರದಿಂದ ಗೆಲುವು ಪಡೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೇ ಮೈಸೂರಿನಲ್ಲೂ ಕಡಿಮೆ ಅಂತರದಿಂದ ಗೆಲುವು ಪಡೆಯುತ್ತೇವೆ ಎಂದರು.

  • ಕೋಟೆನಾಡಿನಲ್ಲಿ ದಂಪತಿ ಗೆಲುವು

    ಕೋಟೆನಾಡಿನಲ್ಲಿ ದಂಪತಿ ಗೆಲುವು

    ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ನಡೆದ ನಗರಸಭೆ ಚುನಾವಣೆಯಲ್ಲಿ ಕುಟುಂಬ ರಾಜಕಾರಣ ಎಂಟ್ರಿಯಾಗಿದ್ದು, ನಗರಸಭೆ ಚುನಾವಣೆಯಲ್ಲಿ ಎರಡು ಕುಟುಂಬದ ಪತಿ ಹಾಗು ಪತ್ನಿಯರು ಪ್ರತ್ಯೇಕ ವಾರ್ಡ್ ಗಳಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ.

    ಕಳೆದ ಬಾರಿಯ ನಗರಸಭೆಯ ಅಧ್ಯಕ್ಷರಾಗಿದ್ದ ಗೊಪ್ಪೆ ಮಂಜುನಾಥ್ ಅವರು ಪಕ್ಷೇತರ ಅಭ್ಯರ್ಥಿಯಾಗಿ 11ನೇ ವಾರ್ಡ್ ನಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ. ಅವರ ಪತ್ನಿ ಜಯಂತಿ 14 ವಾರ್ಡ್ ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಗಳಿಸಿದ್ದಾರೆ.

    ಬಿಜೆಪಿಯಿಂದಲೂ ಮತ್ತೊಂದು ದಂಪತಿ ಸ್ಪರ್ಧಿಸಿದ್ದು, 16ನೇ ವಾರ್ಡ್ ನಿಂದ ಮಾಜಿ ನಗರಸಭಾ ಸದಸ್ಯ ವೆಂಕಟೇಶಪ್ಪ ಹಾಗು 19 ನೇ ವಾರ್ಡ್ ನಿಂದ ಅವರ ಪತ್ನಿ ತಿಪ್ಪಮ್ಮ ಕೂಡ ಅಖಾಡದಲ್ಲಿದ್ದು, ಪ್ರತಿಸ್ಪರ್ಧಿಗಳ ವಿರುದ್ಧ ಗೆಲುವು ಸಾಧಿಸಿದ್ದಾರೆ. ಈ ಮೂಲಕ ನಗರಸಭೆಗೂ ಕುಟುಂಬ ರಾಜಕೀಯ ಎಂಟ್ರಿ ಕೊಟ್ಟಂತಾಗಿದೆ.

    ಹಿಂದುಳಿದಿರುವ ಕೋಟೆನಾಡನ್ನ ಅಭಿವೃದ್ಧಿ ಪಡಿಸುವಲ್ಲಿ ನಾಯಕರು ವಿಫಲರಾಗಿದ್ದಾರೆ ಎನ್ನುವ ಆರೋಪ ಇದೆ. ಈಗ ನಗರಸಭೆ ಅಖಾಡದ ಮೂಲಕ ಹೊಸದಾಗಿ ರಾಜಕೀಯ ಪ್ರವೇಶ ಮಾಡಿರುವ ಮಹಿಳಾ ಮಣಿಗಳು ಎಷ್ಟರಮಟ್ಟಿಗೆ ಅವರಿಗೆ ಸಿಕ್ಕಿರುವ ಜವಬ್ದಾರಿಯನ್ನ ನಿರ್ವಹಿಸುವರೋ ಎಂಬ ಕುತೂಹಲ ಜನರಲ್ಲಿ ಮೂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾನೂ ವೋಟ್ ಹಾಕುತ್ತೇನೆಂದು ಹಠ ಹಿಡಿದ 3ರ ಪೋರ- ಕೈಗೆ ಇಂಕ್ ಹಾಕಿಸಿಕೊಂಡು ಖುಷಿಪಟ್ಟ

    ನಾನೂ ವೋಟ್ ಹಾಕುತ್ತೇನೆಂದು ಹಠ ಹಿಡಿದ 3ರ ಪೋರ- ಕೈಗೆ ಇಂಕ್ ಹಾಕಿಸಿಕೊಂಡು ಖುಷಿಪಟ್ಟ

    ಉಡುಪಿ: ಅಪ್ಪ ಅಮ್ಮನ ಜೊತೆ ಹೋಗಿ ನಾನೂ ವೋಟ್ ಹಾಕುತ್ತೇನೆ ಅಂತಾ ನಿಟ್ಟೂರಿನ 3 ವರ್ಷದ ಪೋರ ಹಠ ಹಿಡಿದು, ಕೊನೆಗೆ ಅತ್ತು ಕರೆದು ಕೈಗೆ ಇಂಕ್ ಹಾಕಿಸಿಕೊಂಡಿದ್ದಾನೆ.

    ಹಾಲುಗಲ್ಲದ ಹಸುಳೆ ರಿಹಾಂಶ್‍ಗೆ ಈಗ ಮೂರರ ಹರೆಯ. ಇವನು ಉಡುಪಿ ಶಾಸಕ ರಘುಪತಿ ಭಟ್ಟರ ಮಗ. ಅಪ್ಪ ಅಮ್ಮನ ಜೊತೆಗೆ ಮತಗಟ್ಟೆಗೆ ಬಂದ, ಅವರು ಮತದಾನ ಮಾಡಲು ಹೋಗುತ್ತಿದ್ದಂತೆ ನಾನೂ ವೋಟ್ ಹಾಕುತ್ತೇನೆ ಅಂತಾ ಹಠ ಮಾಡಿ, ಅಳಲಾರಂಭಿಸಿದ್ದಾನೆ. ಶಾಸಕರ ಕಾರು ಚಾಲಕ ವಿಜಯ್, ಅಧಿಕಾರಿಗಳ ಬಳಿಗೆ ರಿಹಾಂಶ್‍ನನ್ನು ಕರದೊಯ್ದರು. ಮತಗಟ್ಟೆಯ ಹೊರಗೆ ಕುಳಿತ್ತಿದ್ದ ಅಧಿಕಾರಿಗಳು ಪೆನ್ನಿನಿಂದ ರಿಹಾಂಶ್ ಎಡಗೈ ತೋರ್ಬೆರಳಿಗೆ ಶಾಹಿಮುದ್ರೆ ಹಾಕಿಸಿದ್ದಾರೆ. ಆಗ ಆತನು ಅಳುವುದನ್ನು ನಿಲ್ಲಿಸಿದ್ದಾನೆ.

    ಗಮ್ಮತ್ತು ಏನಂದರೆ ಶಾಹಿ ಹಾಕ್ಕೊಂಡು ಬಂದವನೇ ವಿಕ್ಟರಿ ಸಿಂಬಲ್ ತೋರಿಸುತ್ತಾನೆ. ಮೋದಿ ಗೆಲ್ತಾರೆ ಅಂತಾನೆ. ನಾಳೆ ಪೇಪರಲ್ಲಿ ಫೋಟೋ ಹಾಕಿ ಅಂತಾ ಮಾಧ್ಯಮದವರಿಗೆ ಮನವಿ ಮಾಡಿಕೊಂಡಿದ್ದಾನೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ರಘುಪತಿ ಭಟ್, ಕಳೆದ ಕೆಲವು ದಿನಗಳಿಂದ ಮನೆಯಲ್ಲಿ ಚುನಾವಣೆಯದ್ದೇ ವಾತಾವರಣ. ಹಾಗಾಗಿ ವೋಟ್ ಹಾಕುತ್ತೇನೆ ಅಂತಾ ಹಠ ಮಾಡುತ್ತಿದ್ದ. ಆತ ಕೂಡ ನಮ್ಮಂತೆ ಮೋದಿ ಅಭಿಮಾನಿ ಅಂತಾ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜಯಮಾಲಾ ವೆರಿ ಗ್ಲ್ಯಾಮರಸ್ ಮಿನಿಸ್ಟರ್- ಬಾಯಿತುಂಬಾ ಹೊಗಳಿದ ಪ್ರಮೋದ್ ಮಧ್ವರಾಜ್

    ಜಯಮಾಲಾ ವೆರಿ ಗ್ಲ್ಯಾಮರಸ್ ಮಿನಿಸ್ಟರ್- ಬಾಯಿತುಂಬಾ ಹೊಗಳಿದ ಪ್ರಮೋದ್ ಮಧ್ವರಾಜ್

    ಉಡುಪಿ: ಸ್ಥಳೀಯ ಚುನಾವಣೆ ಪ್ರಚಾರದಲ್ಲಿ ಜಯಮಾಲಾ ಗಾಳಿ ಎದ್ದಿದೆ. ಜಯಮಾಲಾರಷ್ಟು ಗ್ಲಾಮರ್ ಯಾರಿಗಿದೆ ಹೇಳಿ? ಶಿ ಈಸ್ ವೆರಿ ಗ್ಲ್ಯಾಮರಸ್ ಡಿಸ್ಟ್ರಿಕ್ಟ್ ಮಿನಿಸ್ಟರ್ ಎಂದು ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಜಯಮಾಲಾರನ್ನು ಹೊಗಳಿದ್ದಾರೆ.

    ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಉಡುಪಿಯ ಪ್ರೆಸ್ ಕ್ಲಬ್‍ನಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಚಿವೆ ಜಯಮಾಲಾರನ್ನು ಹಾಡಿಹೊಗಳಿದರು. ಚುನಾವಣೆಗೆ ಜಿಲ್ಲೆಯಾದ್ಯಂತ ಹೆಚ್ಚು ಓಡಾಟ ನಡೆಸದಿದ್ದರೂ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಜಯಮಾಲಾ ಗಾಳಿ ಎದ್ದಿದೆ. ಒಂದೇ ದಿನದ ಪ್ರಚಾರವೇ ಸಾಕಷ್ಟು ಪರಿಣಾಮ ಬೀರಿದೆ. ಜಯಮಾಲಾ ನನಗಿಂತ ಹೆಚ್ಚಾಗಿ ಗ್ಲಾಮರ್ ಇದೆ ಎಂದು ಹೇಳಿದರು.

    ಸ್ಥಳೀಯ ಸಂಸ್ಥೆಗಳ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಅಳಿವು ಉಳಿವಿನ ಪ್ರಶ್ನೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಧ್ವರಾಜ್, ಕಾಂಗ್ರೆಸ್ ಪಕ್ಷ ಆನೆ ಇದ್ದ ಹಾಗೆ, ಆನೆಯ ಚಿತ್ರ ಎಷ್ಟೇ ಚಿಕ್ಕದಾಗಿ ಬರೆದರೂ ಅದು ಆನೆಯೇ. ಸೂರ್ಯ ಚಂದ್ರರು ಇರುವವರೆಗೂ ಕಾಂಗ್ರೆಸ್ ಪಕ್ಷ ಸದೃಢವಾಗಿರುತ್ತದೆ. ಹಿಂದೂ, ಸನಾತನ ಧರ್ಮ ಹೇಗೆ ಪುರಾತನವೋ ಹಾಗೇ ಕಾಂಗ್ರೆಸ್ ಪಕ್ಷವೂ ಹಾಗೆ ಪ್ರಾಚೀನವಾದ ಪಕ್ಷ. ಕಾಂಗ್ರೆಸ್ ಪಕ್ಷವನ್ನು ಯಾರಿಂದಲೂ ಅಳಿಸಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ನಾನು ಕಾಂಗ್ರೆಸ್ ಬಿಟ್ಟರೂ ಕಾಂಗ್ರೆಸ್ ಪಕ್ಷ ಉಳಿಯುತ್ತೆ. ಯಾರೂ ಇಲ್ಲದಿದ್ದರೂ ಕಾಂಗ್ರೆಸ್ ಪಕ್ಷವನ್ನು ಮುಕ್ತ ಮಾಡಲು ಅಸಾಧ್ಯ. ಹಾಗಂತ ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ. ಚುನಾವಣಾ ವಾತಾವರಣ ಕಾಂಗ್ರೆಸ್ ಪರವಾಗಿದೆ. ಬಿಜೆಪಿ ಶಾಸಕರ ಹಣೆಬರಹ ಏನಂತ ಜನಕ್ಕೆ ನಾಲ್ಕು ತಿಂಗಳಲ್ಲಿ ಗೊತ್ತಾಗಿದೆ. ಯಾವುದೇ ಕೆಲಸ ಈ ಅವಧಿಯಲ್ಲಿ ಆಗಿಲ್ಲ ಎಂದು ಶಾಸಕ ರಘುಪತಿ ಭಟ್ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನು ಓದಿ: ಮೋದಿ ಕರ್ನಾಟಕದ ಜನಕ್ಕೇನು ಮಾಡಿದ್ದಾರೆ? ಜಯಮಾಲಾ ಪ್ರಶ್ನೆ

    ಉಡುಪಿ ನಗರಸಭೆ ಕಳೆದ 5 ವರ್ಷ ಕಾಂಗ್ರೆಸ್ ಕೈಯಲ್ಲಿ ಇತ್ತು. ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಯಿತು. ಆದರೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯವನ್ನು ಜನ ಮೆಚ್ಚಿಕೊಂಡಿದ್ದಾರೆ. ನಗರಸಭೆ ವಿರುದ್ಧ ಪ್ರತಿಭಟನೆ ಮಾಡಲು ಬಿಜೆಪಿಗೆ ಆಸ್ಪದವೇ ಇರಲಿಲ್ಲ. ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡಿದ್ದೇವೆ. ಈ ಬಾರಿ ಮತ್ತೆ ಜನ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಮಧ್ವರಾಜ್ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ಥಳೀಯ ಸಮರಕ್ಕೆ ದೊಡ್ಡಗೌಡರಿಂದ ಮಾಸ್ಟರ್ ಪ್ಲಾನ್

    ಸ್ಥಳೀಯ ಸಮರಕ್ಕೆ ದೊಡ್ಡಗೌಡರಿಂದ ಮಾಸ್ಟರ್ ಪ್ಲಾನ್

    – ಚುನಾವಣೆ ಬಳಿಕ ಅಗತ್ಯ ಬಿದ್ದರೆ ಮೈತ್ರಿ

    ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯನ್ನ ಅಧಿಕಾರದಿಂದ ದೂರ ಇಡಲು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಅವರು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆಂದು ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಚುನಾವಣೆ ನಂತರ ಸ್ಥಳೀಯ ಸಂಸ್ಥೆಯಲ್ಲಿ ದೋಸ್ತಿಗೆ ದೇವೇಗೌಡರು ಚಿಂತನೆ ನಡೆಸಿದ್ದಾರೆ. ಈ ಮೂಲಕ ಪಕ್ಷ ಉಳಿಸೋದರ ಜೊತೆಗೆ ಬಿಜೆಪಿ ದೂರ ಇಡುವುದಕ್ಕೆ ಭರ್ಜರಿ ಯೋಜನೆ ಹಾಕಿದ್ದಾರಂತೆ. ಮೈಸೂರು ಭಾಗ ಸೇರಿ ಹಲವೆಡೆ ಕಾಂಗ್ರೆಸ್-ಜೆಡಿಎಸ್ ನಡುವೆಯೇ ಫೈಟ್ ಮಾಡಲಿದ್ದು, ಮೈತ್ರಿ ಮಾಡಿಕೊಂಡರೆ ಜೆಡಿಎಸ್ ಭದ್ರಕೋಟೆ ಒಡೆದು ಹೋಗುವ ಆತಂಕ ಎದುರಾಗಿದೆಯಂತೆ.

    ಕಾರ್ಯಕರ್ತರು ಪಕ್ಷ ಬಿಟ್ಟು ಬಿಜೆಪಿ ಕಡೆ ಮುಖ ಮಾಡಬಹುದು ಎಂಬ ಭೀತಿಯಿಂದ ಚುನಾವಣೋತ್ತರ ಮೈತ್ರಿಗೆ ಜೆಡಿಎಸ್ ವರಿಷ್ಠ ಎಚ್‍ಡಿಡಿ ಪ್ಲಾನ್ ಮಾಡಿದ್ದಾರೆ. ಪ್ರತ್ಯೇಕವಾಗಿಯೇ ಚುನಾವಣೆ ಎದರಿಸೋಣ. ಬಳಿಕ ಅಗತ್ಯ ಬಿದ್ದರೆ ಮೈತ್ರಿ ಮಾಡೋಣ. ಇದರಿಂದ ಸರ್ಕಾರಕ್ಕೂ ಡ್ಯಾಮೇಜ್ ಆಗಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬಹುದು. ಚುನಾವಣೆ ನಂತರ ಮೈತ್ರಿ ಬಗ್ಗೆ ಎಚ್‍ಡಿ ದೇವೇಗೌಡರ ಮಾತಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.

    ಇದೇ ಸ್ಥಳೀಯ ಸಂಸ್ಥೆ, ಲೋಕಸಭೆ ಚುನಾವಣೆ ಮೈತ್ರಿ ವಿಚಾರವಾಗಿ ಇಂದು ಜೆಡಿಎಸ್ ಮಹತ್ವದ ಸಭೆ ನಡೆಸುತ್ತಿದೆ. ಜೆಡಿಎಸ್ ವರಿಷ್ಠ ದೇವೇಗೌಡರ ನೇತೃತ್ವದಲ್ಲಿ ಶಾಸಕರು, ಸಚಿವರ ಸಭೆ ನಡೆಯಲಿದೆ. ಪ್ರಮುಖವಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೊಂದಾಣಿಕೆ ಬಗ್ಗೆ ಅಂತಿಮ ನಿರ್ಧಾರವನ್ನ ತೆಗದುಕೊಳ್ಳುವ ಸಾಧ್ಯತೆ ಇದೆ. ಇದಲ್ಲದೆ ಲೋಕಸಭೆ ಚುನಾವಣೆಯಲ್ಲಿ ದೋಸ್ತಿಗೆ ಈಗಾಗಲೇ ಓಕೆ ಅಂದಿರುವ ಜೆಡಿಎಸ್, ಯಾವ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನ ಇಳಿಸಬೇಕು. ಎಷ್ಟು ಸ್ಥಾನವನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು ಅಂತ ನಿರ್ಧರಿಸಲಿದೆ. ಇದರ ಜೊತೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನ ಬೇರೆಯವರಿಗೆ ವಹಿಸುವ ಕುರಿತು ಶಾಸಕರು, ಸಚಿವರ ಅಭಿಪ್ರಾಯ ಸಂಗ್ರಹಿಸುವ ಸಾಧ್ಯತೆ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ರಾಹುಲ್ ಜಯಗಳಿಸಿರೋ ಅಮೇಥಿ ಕಾಂಗ್ರೆಸ್ಸಿನ ಭದ್ರಕೋಟೆ ಯಾಕೆ?

    ರಾಹುಲ್ ಜಯಗಳಿಸಿರೋ ಅಮೇಥಿ ಕಾಂಗ್ರೆಸ್ಸಿನ ಭದ್ರಕೋಟೆ ಯಾಕೆ?

    ಲಕ್ನೋ: ಗುಜರಾತ್ ವಿಧಾನಸಭಾ ಚುನಾವಣೆಯ ಸೆಮಿಫೈನಲ್ ಎಂದೇ ಪರಿಗಣಿತವಾದ ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಮುಖಭಂಗ ಅನುಭವಿಸಿದೆ. ಆಡಳಿತರೂಢ ಬಿಜೆಪಿ ಎದುರು ಕಾಂಗ್ರೆಸ್ ಧೂಳೀಪಟವಾಗಿದೆ.

    ಕಾಂಗ್ರೆಸ್ ಮುಕ್ತ ಭಾರತಕ್ಕೆ ಹೊರಟಿರುವ ಬಿಜೆಪಿ, ಇದೀಗ ಕಾಂಗ್ರೆಸ್ಸಿನ ಭದ್ರಕೋಟೆ ಅಮೇಥಿಗೆ ಲಗ್ಗೆ ಇಟ್ಟಿದೆ. ರಾಹುಲ್ ಗಾಂಧಿ ಪ್ರತಿನಿಧಿಸುವ ಅಮೇಥಿ ನಗರ ಪಂಚಾಯ್ತಿಯ 16 ಕ್ಷೇತ್ರಗಳ ಪೈಕಿ, 14ರಲ್ಲಿ ಬಿಜೆಪಿ ಜಯ ಸಾಧಿಸಿ, ವಿಜಯೋತ್ಸವ ಆಚರಿಸಿದೆ.

    ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಮೇಥಿ ಯಾಗ ವಿಫಲವಾಗಿದ್ದು, ಬಿಜೆಪಿ ವಶವಾಗಿರೋದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಘಾತ ಮೂಡಿಸಿದೆ. ಅಮೇಥಿಯಲ್ಲದೆ, ಕಾಂಗ್ರೆಸ್ ಅಧ್ಯಕ್ಷೆ ಪ್ರತಿನಿಧಿಸುವ ರಾಯ್ ಬರೇಲಿ ಕ್ಷೇತ್ರದಲ್ಲೂ ಕಮಲ ಅರಳಿದೆ.

    ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಪ್ರತಿನಿಧಿಸುವ ಗೋರಖ್‍ಪುರದಲ್ಲಿಯೂ ಕೇಸರಿ ಪತಾಕೆ ಹಾರಿದೆ. ಮುಖ್ಯಮಂತ್ರಿಯಾದ ಮೊದಲ ವರ್ಷದಲ್ಲೇ ಯೋಗಿ ಆದಿತ್ಯಾನಾಥ್ ಗೆದ್ದಿದ್ದಾರೆ. ಬಿಜೆಪಿ ಮೊದಲ ಸ್ಥಾನದಲ್ಲಿದ್ರೆ ಬಿಎಸ್‍ಪಿ ಎರಡನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿ ಎಸ್ಪಿ ಇದೆ.

    ಫಲಿತಾಂಶದ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಇದು ಪ್ರಧಾನಿ ಮೋದಿ ಅಭಿವೃದ್ಧಿ ಕೆಲಸಗಳಿಗೆ ಸಿಕ್ಕ ಜಯ ಎಂದಿದ್ದಾರೆ. ಈ ಫಲಿತಾಂಶ ನೋಡಿದ್ರೆ ಗುಜರಾತ್ ಫಲಿತಾಂಶ ಊಹಿಸಬಹುದು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ 80 ಕ್ಷೇತ್ರಗಳನ್ನ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಕೂಡ ಹರ್ಷ ವ್ಯಕ್ತಪಡಿಸಿದ್ದಾರೆ.

    ಅಮೇಥಿ ಭದ್ರಕೋಟೆ ಯಾಕೆ?ಅಮೇಥಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆಯೆಂದೇ ಪರಿಗಣಿಸಲಾಗಿದೆ. ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿಯಿಂದ ಹಿಡಿದು ಈಗಿನ ತಲೆಮಾರಿನ ರಾಹುಲ್ ಗಾಂಧಿವರೆಗೆ ರಾಜಕೀಯ ಪುರ್ನಜನ್ಮ ನೀಡಿದ ಕ್ಷೇತ್ರವೇ ಅಮೇಥಿ. ಜನತಾ ಪಾರ್ಟಿ ಹಾಗೂ ಬಿಜೆಪಿ ಒಂದೊಂದು ಬಾರಿ ಗೆದ್ದಿದ್ದು ಬಿಟ್ಟರೆ, ಕಾಂಗ್ರೆಸ್ ಹಿಡಿತದಲ್ಲೇ ಇರೋ ಲೋಕಸಭಾ ಕ್ಷೇತ್ರವೇ ಅಮೇಥಿ. (ಇದನ್ನೂ ಓದಿ:ಕಾಂಗ್ರೆಸ್‍ಗೆ ಮತ್ತೆ ಮತ್ತೆ ಸೋಲು: ಅಮೇಥಿಯಲ್ಲಿ ರಾಹುಲ್‍ಗೆ ಭಾರೀ ಮುಖಭಂಗ)