Tag: local election

  • ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ತಯಾರಿಸಿ ಕೇಂದ್ರಕ್ಕೆ ಸಲ್ಲಿಕೆ: ಧ್ರುವನಾರಾಯಣ

    ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ತಯಾರಿಸಿ ಕೇಂದ್ರಕ್ಕೆ ಸಲ್ಲಿಕೆ: ಧ್ರುವನಾರಾಯಣ

    ಚಾಮರಾಜನಗರ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ವಿಸ್ತೃತ ಮೇಕೆದಾಟು ಯೋಜನೆ ತಯಾರಿಸಿ ಕೇಂದ್ರಕ್ಕೆ ಸಲ್ಲಿಸಲಾಗಿದೆ. ಆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರಾಗಿ ಡಿ.ಕೆ ಶಿವಕುಮಾರ್ ಇದ್ದರು ಎಂದು ಹೇಳಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಗೆ ಕೆಪಿಸಿಸಿ ಕಾರ್ಯದರ್ಶಿ ಧ್ರುವನಾರಾಯಣ ತಿರುಗೇಟು ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ವಿಸ್ತೃತ ಯೋಜನಾ ವರದಿ ಸಲ್ಲಿಸಿ ಒಂದೂವರೆ ವರ್ಷ ಕಳೆದಿದೆ. ಆದರೂ ಸರ್ಕಾರ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತೇವೆ. ಇದು ರಾಜಕೀಯಕ್ಕೋಸ್ಕರ ಅಥವಾ ಜನರ ಮತ ಸೆಳೆಯಲು ಮಾಡುತ್ತಿಲ್ಲ. ಈ ವಿಚಾರವನ್ನು ಕುಮಾರಸ್ವಾಮಿ ಅರಿತುಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.

    ರಾಜ್ಯದಲ್ಲೂ ಬಿಜೆಪಿ ಸರ್ಕಾರವಿದೆ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಕಳೆದ ಒಂದೂವರೆ ವರ್ಷದಿಂದ ಈ ಯೋಜನೆಯ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ಈ ಯೋಜನೆಯಿಂದ ಬೆಂಗಳೂರಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ. ಯೋಜನೆ ಜಾರಿಗೊಳಿಸುವಂತೆ ಒಂದು ರಾಜಕೀಯ ಪಕ್ಷವಾಗಿ ಒತ್ತಾಯಿಸುವುದು ತಪ್ಪೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ:  ಹಿಂದೂಗಳಿಗೆ ಹಿಂದೂಗಳಾಗಿ ಹುಟ್ಟಿದ್ದೇ ತಪ್ಪು ಅನ್ನಿಸಬಾರದು: ಸಿ.ಟಿ.ರವಿ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ವಿಚಾರವಾಗಿ ಮಾತನಾಡಿದ ಅವರು, ಸಹಜವಾಗಿ ಆಡಳಿತ ಪಕ್ಷ ಹೆಚ್ಚಿನ ಸ್ಥಾನ ಗಳಿಸುತ್ತದೆ. ಆದರೆ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಬಿಜೆಪಿ ಸರ್ಕಾರ ಕೋವಿಡ್ ಸಂದರ್ಭದಲ್ಲಿ ಜನರ ಕಷ್ಟ ಕೇಳಲಿಲ್ಲ. ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ನೀಡಲು ವಿಫಲವಾಗಿದೆ. ಅಷ್ಟೇ ಅಲ್ಲದೆ ಬೆಲೆ ಏರಿಕೆ ನಿಯಂತ್ರಣದಲ್ಲಿ ವಿಫಲವಾಗಿದೆ. ಈ ಎಲ್ಲಾ ಕಾರಣದಿಂದಾಗಿ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ ಎಂದರು. ಇದನ್ನೂ ಓದಿ: ಪಾದಯಾತ್ರೆಗೆ ಭಾಗವಹಿಸಿ ಏನು ಮಾಡಲಿ ಹೇಳಿ: ಡಿಕೆಶಿಗೆ ಟಾಂಗ್ ಕೊಟ್ಟ HDK

    ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಪ್ರಾರಂಭವಾಗಿದೆ. ಈ ಫಲಿತಾಂಶ ಮುಂಬರುವ ಜಿಪಂ, ತಾಪಂ, ವಿಧಾನಸಭಾ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಜನಪರ ಆಡಳಿತ ನೀಡುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಪ್ರತಿಕ್ರಿಯಿಸಿದರು.

  • ಕಾಲೇಜು ವಿದ್ಯಾರ್ಥಿನಿ ಈಗ ಪುರಸಭೆ ಸದಸ್ಯೆ

    ಕಾಲೇಜು ವಿದ್ಯಾರ್ಥಿನಿ ಈಗ ಪುರಸಭೆ ಸದಸ್ಯೆ

    ಕೋಲಾರ: ರಾಜ್ಯದಲ್ಲಿ ನಗರಸಭೆ, ಪರಸಭೆ ಹಾಗೂ ಪಟ್ಟಣ ಪಂಚಾಯ್ತಿ ಮತ ಎಣಿಕೆ ನಡೆದಿದ್ದು, ಕೋಲಾರದ ಮಾಲೂರು ಪುರಸಭೆ ಚುನಾವಣೆಯಲ್ಲಿ  ಯುವತಿ ಗೆಲುವು ಸಾಧಿಸಿದ್ದಾರೆ.

    ಸುಮಿತ್ರ ಬಿಜೆಪಿ ಅಭ್ಯರ್ಥಿಯಾಗಿದ್ದು, ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ. ಸುಮಿತ್ರ ಅವರು ಜೆಡಿಎಸ್ ಅಭ್ಯರ್ಥಿ ವಿರುದ್ಧ 373 ಮತಗಳನ್ನ ಪಡೆದು ಜಯಶಾಲಿಯಾಗಿದ್ದಾರೆ. ಈಕೆ ಮಾಲೂರು ಪಟ್ಟಣದ ವಾರ್ಡ್ ನಂಬರ್ 27 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು.

     

    ಲೋಕ ಸಮರ ನಂತರ ಕೋಲಾರ ಜಿಲ್ಲೆಯ ಮಾಲೂರು, ಬಂಗಾರಪೇಟೆ ಹಾಗೂ ಶ್ರೀನಿವಾಸಪುರ ಪುರಸಭೆಯಲ್ಲಿ ಲೋಕಲ್ ಫೈಟ್ ನಡೆದಿದೆ. ಮಾಲೂರಿನಲ್ಲಿ ಒಟ್ಟು 27 ವಾರ್ಡ್ ಗಳಲ್ಲಿ 79 ಜನ ಕಣದಲ್ಲಿದ್ದರು. ಬಂಗಾರಪೇಟೆಯಲ್ಲಿ ಒಟ್ಟು 27 ವಾರ್ಡ್ ಗಳಿಗೆ ಚುನಾವಣೆ ನಡೆದಿದ್ದು, 80 ಜನ ಅಭ್ಯರ್ಥಿಗಳು ಕಣದಲ್ಲಿದ್ದರು. ಇತ್ತ ಶ್ರೀನಿವಾಸಪುರದಲ್ಲಿ ಒಟ್ಟು 23 ವಾರ್ಡ್‍ಗಳಿಗೆ ಚುನಾವಣೆ ನಡೆದಿದ್ದು, 87 ಜನ ಅಭ್ಯರ್ಥಿಗಳು ಕಣದಲ್ಲಿದ್ದರು.

    ಕಳೆದ ಬಾರಿ ಮಾಲೂರಿನಲ್ಲಿ ಬಿಜೆಪಿ, ಬಂಗಾರಪೇಟೆಯಲ್ಲಿ ಕಾಂಗ್ರೆಸ್, ಶ್ರೀನಿವಾಸಪುರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು. ಮಾಲೂರು 27 ವಾರ್ಡ್ ಗಳಲ್ಲಿ 30,125 ಮತದಾರರು ಮತದಾನ ಮಾಡಿದ್ದು, ಬಂಗಾರಪೇಟೆ 27 ವಾರ್ಡ್‍ಗಳಲ್ಲಿ ಒಟ್ಟು-80 ಅಭ್ಯರ್ಥಿಗಳು ಕಣದಲ್ಲಿದ್ದರು. ಇಲ್ಲಿ 36,773 ಮತದಾರರು ಮತದಾನ ಮಾಡಿದ್ದಾರೆ. ಶ್ರೀನಿವಾಸಪುರ 23 ವಾರ್ಡ್ ಗಳಲ್ಲಿ ಒಟ್ಟು – 87 ಅಭ್ಯರ್ಥಿಗಳು ಕಣದಲ್ಲಿದ್ದು, 20,164 ಮತದಾರರು ಮತ ಚಲಾಯಿಸಿದ್ದಾರೆ.

  • ಕಾಂಗ್ರೆಸ್, ಬಿಜೆಪಿಯಿಂದ ಪರಸ್ಪರ ಕಲ್ಲು ತೂರಾಟ – ಇಬ್ಬರಿಗೆ ಗಾಯ, ಬಿಗಿ ಪೊಲೀಸ್ ಬಂದೋಬಸ್ತ್

    ಕಾಂಗ್ರೆಸ್, ಬಿಜೆಪಿಯಿಂದ ಪರಸ್ಪರ ಕಲ್ಲು ತೂರಾಟ – ಇಬ್ಬರಿಗೆ ಗಾಯ, ಬಿಗಿ ಪೊಲೀಸ್ ಬಂದೋಬಸ್ತ್

    ಯಾದಗಿರಿ: ಸ್ಥಳೀಯ ಸಂಸ್ಥೆ ಚುನಾವಣೆಯ ಮತದಾನ ಆರಂಭಕ್ಕೂ ಮುಂಚೆ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ಪಟ್ಟಣದ ರಂಗಂಪೇಟೆ ಬಳಿ ನಡೆದಿದೆ.

    ಪ್ರಚಾರಕ್ಕೆ ತೆರಳಿದ ವೇಳೆ ಕೈ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಸಂಭವಿಸಿ ನಂತರ ಕಲ್ಲು ತೂರಾಟ ನಡೆಸಿದ್ದಾರೆ. ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಯಡಾ ಮಾರ್ಟಿನ ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಇತ್ತ ಸುರಪುರ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಇದನ್ನೂ ಓದಿ: ಪಕ್ಷಗಳಿಗೆ ಲೋಕಲ್ ಎಲೆಕ್ಷನ್ ಟೆಸ್ಟ್ – ಸ್ಥಳೀಯ ಸಂಸ್ಥೆಗಳಿಗೆ ಮತದಾನ ಆರಂಭ

    ಗಲಾಟೆ ಸಂಬಂಧ ಶಾಸಕ ರಾಜುಗೌಡ ಪ್ರತಿಕ್ರಿಯಿಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುರಪುರ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿಯೇ ಬಿಜೆಪಿ ಕಾರ್ಯಕರ್ತರ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಮತದಾರರ ಮೇಲೆ ಕೈ ಕಾರ್ಯಕರ್ತರು ದೌರ್ಜನ್ಯ ಮಾಡುತ್ತಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಕ್ಷಗಳಿಗೆ ಲೋಕಲ್ ಎಲೆಕ್ಷನ್ ಟೆಸ್ಟ್ – ಸ್ಥಳೀಯ ಸಂಸ್ಥೆಗಳಿಗೆ ಮತದಾನ ಆರಂಭ

    ಪಕ್ಷಗಳಿಗೆ ಲೋಕಲ್ ಎಲೆಕ್ಷನ್ ಟೆಸ್ಟ್ – ಸ್ಥಳೀಯ ಸಂಸ್ಥೆಗಳಿಗೆ ಮತದಾನ ಆರಂಭ

    ಬೆಂಗಳೂರು: ಶತಕ ಬಾರಿಸಿದ ಬೆನ್ನಲ್ಲೇ ದೋಸ್ತಿ ಸರ್ಕಾರಕ್ಕೆ ಮತ್ತು ವಿಪಕ್ಷ ಬಿಜೆಪಿಗೆ ಲೋಕಲ್ ಟೆಸ್ಟ್ ನಡೆಯುತ್ತಿದ್ದು, ರಾಜ್ಯದ 22 ಜಿಲ್ಲೆಗಳಲ್ಲಿ ಮೊದಲ ಹಂತದ ಸ್ಥಳೀಯ ಸಂಸ್ಥೆ ಚುನಾವಣೆ ಆರಂಭವಾಗಿದೆ.

    ರಾಜ್ಯದ ಮೂರು ಮಹಾನಗರ ಪಾಲಿಕೆಗಳಾದ ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಸೇರಿ 102 ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆಯುತ್ತಿದೆ. 22 ಜಿಲ್ಲೆಗಳ 29 ನಗರಸಭೆ, 53 ಪುರಸಭೆ, 20 ಪಟ್ಟಣ ಪಂಚಾಯಿತಿಗಳಿಗೆ ಈ ಎಲೆಕ್ಷನ್ ನಡೆಯುತ್ತಿದೆ.

    ಒಟ್ಟು 2634 ವಾರ್ಡ್‍ಗಳಲ್ಲಿ ಕಣಕ್ಕೆ ಇಳಿದಿದ್ದಾರೆ. 9,121 ಅಭ್ಯರ್ಥಿಗಳಿದ್ದು, ಈ ಪೈಕಿ ನಗರಸಭೆಯ 12, ಪುರಸಭೆಯ 17 ವಾರ್ಡ್‍ಗಳಲ್ಲಿ ಅವಿರೋಧ ಆಯ್ಕೆ ಮಾಡಲಾಗಿದೆ. ಲೋಕಸಮರಕ್ಕೆ ಮುನ್ನ 49 ಲಕ್ಷ ಮತದಾರರು ಲೋಕಲ್ ಭವಿಷ್ಯ ಬರೆಯಲಿದ್ದಾರೆ. ಪ್ರಕೃತಿ ವಿಕೋಪಕ್ಕೆ ತುತ್ತಾದ ಮಡಿಕೇರಿ 3 ಪಟ್ಟಣ ಪಂಚಾಯಿತಿಗಳಲ್ಲಿ ಈ ಚುನಾವಣೆ ಇಲ್ಲ.

    ಅಫಜಲಪುರ ಪುರಸಭೆಯ 19ನೇ ವಾರ್ಡ್‍ನಲ್ಲಿ ಸಲ್ಲಿಕೆಯಾಗಿದ್ದ ಎಲ್ಲಾ ನಾಮಪತ್ರ ತಿರಸ್ಕೃತಗೊಂಡಿದೆ. ಕೊಳ್ಳೆಗಾಲ ನಗರಸಭೆಯ 9ನೇ ವಾರ್ಡ್‍ನಲ್ಲಿ ಬಿಎಸ್‍ಪಿ ಅಭ್ಯರ್ಥಿ ನಿಧನದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರ ಬಳಕೆ ಮಾಡಲಾಗಿದ್ದು, ಸೆಪ್ಟೆಂಬರ್ 3ರಂದು ದೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ದೂರು ದಾಖಲು

    ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ದೂರು ದಾಖಲು

    ಕೊಪ್ಪಳ: ಮತದಾರರಿಗೆ ಹಣದ ಆಮಿಷವೊಡ್ಡಿದ ಆರೋಪದಡಿ ಮಾಜಿ ಶಾಸಕ ಮತ್ತು ನಗರಸಭೆ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ದೂರು ದಾಖಲಾಗಿದೆ.

    ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ನಗರಸಭೆ ಕಾಂಗ್ರೆಸ್ ಅಭ್ಯರ್ಥಿ ಖಾಸಿಂ ಸಾಬ್ ಗದ್ವಾಲ್ ವಿರುದ್ಧ ಗಂಗಾವತಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಎಂ.ಸಿ.ಸಿ ತಂಡದ ಪರಸಪ್ಪರಿಂದ ಅನ್ಸಾರಿ ಹಾಗೂ ಖಾಸಿಂ ಸಾಬ್ ವಿರುದ್ಧ ದೂರು ದಾಖಲಿಸಿದ್ದಾರೆ.

    ಕೆಲವು ದಿನಗಳ ಹಿಂದೆ ಸ್ಥಳೀಯ ಸಂಸ್ಥೆಗಳ ಚುನವಾಣೆ ಪ್ರಚಾರದಲ್ಲಿ ಇಕ್ಬಾಲ್ ಅನ್ಸಾರಿ ಹಣದ ಆಮಿಷ ನೀಡುವ ಬಗ್ಗೆ ಭಾಷಣ ಮಾಡಿದ್ದರು. ಹಾಲಿ ಶಾಸಕ ಪರಣ್ಣ ಮುನವಳ್ಳಿಗೆ ಟಾಂಗ್ ಕೊಡಲು ಹೋಗಿ ಹಣದ ಆಮಿಷ ಒಡ್ಡಿದ್ದರು.

    ನಿಮಗೆ ಖೋಟಾ ನೋಟು ಬೇಕಾ ಅಥವಾ ಅನ್ಸಾರಿ ಹಾಗೂ ಖಾಸಿಂ ಸಾಬ್‍ನ ಅಸಲಿ ನೋಟು ಬೇಕಾ ಎಂದು ಭಾಷಣ ಮಾಡಿದ್ದಾರೆ. ನಿಮಗೆ ಅಸಲಿ 100 ನೋಟು ಬೇಕಾ ಅಥವಾ ವಿರೋಧ ಪಕ್ಷಗಳು ಕೊಡುವ  500 ಮತ್ತು 1000 ರೂ. ಖೋಟಾ ನೋಟು ಬೇಕಾ ಎಂದು ಬಹಿರಂಗವಾಗಿ ಹೇಳಿದ್ದಾರೆ.

    ಇದೇ 25 ರಂದು ವಾರ್ಡ್ ನಂ8 ರಲ್ಲಿ ಭಾಷಣ ಮಾಡಿದ್ದರು. ಆದ್ದರಿಂದ ಈ ರೀತಿ ಭಾಷಣ ಮಾಡಿ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿರುವುದರಿಂದ ಅವರ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಗಂಗಾವತಿ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 171(ಇ) ಅಡಿಯಲ್ಲಿ ದೂರು ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೋಮುವಾದಿಗಳನ್ನು ದೂರವಿಡಲು ಮೈತ್ರಿ ಸರ್ಕಾರ ರಚನೆ- ಈಶ್ವರ್ ಖಂಡ್ರೆ

    ಕೋಮುವಾದಿಗಳನ್ನು ದೂರವಿಡಲು ಮೈತ್ರಿ ಸರ್ಕಾರ ರಚನೆ- ಈಶ್ವರ್ ಖಂಡ್ರೆ

    ಹಾಸನ: ಕೋಮುವಾದಿಗಳನ್ನು ದೂರವಿಡಲು ಅನಿವಾರ್ಯವಾಗಿ ಪಕ್ಷದ ವರಿಷ್ಠರು ಮೈತ್ರಿ ಸರ್ಕಾರ ರಚನೆಗೆ ಒಪ್ಪಿಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಶೇಕಡ 70 ರಷ್ಟು ನಮ್ಮ ಪಾಲುದಾರಿಕೆ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

    ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಯಲು ಶೌಚ ಮುಕ್ತ ಯೋಜನೆಯನ್ನು ಜಾರಿಗೆ ತಂದು, ಅದನ್ನು ಯಶಸ್ವಿಗೊಳಿಸಲು ಕೇಂದ್ರ ಯುಪಿಎ ಸರ್ಕಾರ ಶ್ರಮಿಸಿತ್ತು. ಆದರೆ ಈಗ ಬಿಜೆಪಿಯವರು ಸ್ವಚ್ಛ ಭಾರತವೆಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿದರು.

    ಕಾಂಗ್ರೆಸ್ಸಿಗೆ ಬಹುಮತ ನೀಡಲಿಲ್ಲ ಅಂತಾ ರಾಜ್ಯದ ಜನರು ಪರಿತಪಿಸುತ್ತಿದ್ದಾರೆ. ನಮ್ಮ ಕಾರ್ಯಕರ್ತರು ಹೆದರುವ ಅಗತ್ಯವಿಲ್ಲ. ಮುಂದೆ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ರಾಜಕೀಯ ದಿಕ್ಸೂಚಿ ಆಗಲಿದೆ. ಕಳೆದ ಬಾರಿ ನಮ್ಮ ಪಕ್ಷಕ್ಕೆ ಬಹುಮತ ಸಿಕ್ಕಿತ್ತು. ಆದರೆ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಅಪಪ್ರಚಾರ ಮಾಡಿ, ಜನತೆಯ ದಾರಿ ತಪ್ಪಿಸಿದ್ದವು. ಹೀಗಾಗಿ ನಮ್ಮ ಫಲಿತಾಂಶದಲ್ಲಿ ಕೊಂಚ ಏರುಪೇರಾಗಿದೆ ಎಂದು ದೂರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್, ಜೆಡಿಎಸ್‍ನವರು ಬಟ್ಟೆ ಬಿಚ್ಚಿ ಬೇಕಾದ್ರೆ ಕುಣಿಲಿ-ನಮಗೆ ಸಂಬಂಧ ಇಲ್ಲ: ಸೋಮಣ್ಣ ವ್ಯಂಗ್ಯ

    ಕಾಂಗ್ರೆಸ್, ಜೆಡಿಎಸ್‍ನವರು ಬಟ್ಟೆ ಬಿಚ್ಚಿ ಬೇಕಾದ್ರೆ ಕುಣಿಲಿ-ನಮಗೆ ಸಂಬಂಧ ಇಲ್ಲ: ಸೋಮಣ್ಣ ವ್ಯಂಗ್ಯ

    ತುಮಕೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಸ್ ಮೈತ್ರಿ ಮಾಡಿಕೊಂಡರೆ ಮಾಡಿಕೊಳ್ಳಲಿ ಇಲ್ಲವೇ ಬಟ್ಟೆ ಬಿಚ್ಚಿ ಕುಣಿಯಲಿ, ನಮ್ಮ ಕೆಲಸ ನಾವು ಮಾಡಿಕೊಂಡು ಹೋಗುತ್ತೇವೆ ಎಂದು ಮಾಜಿ ಸಚಿವ ವಿ ಸೋಮಣ್ಣ ವ್ಯಂಗ್ಯವಾಡಿದ್ದಾರೆ.

    ಇಂದು ತುಮಕೂರು ಸಿದ್ದಗಂಗಾ ಮಠ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಮುಖ್ಯ ಮಂತ್ರಿಯಾಗಿ ಕುಮಾರಸ್ವಾಮಿ ಸಂಕಷ್ಟ ಪರಿಸ್ಥಿತಿಯಲ್ಲಿ ಇದ್ದಾರೆ. ಸಿಎಂ ಆಗಿ ಅವರು ತಮ್ಮ ಕೆಲಸ ತಾವು ಮಾಡುತ್ತಿದ್ದಾರೆ. ಆದರೆ 37 ಶಾಸಕರೊಂದಿಗೆ ಅವರೊಂದಿಗೆ ಸಂಕಷ್ಟ ಅನುಭವಿಸುತ್ತಿದ್ದು, ಮತ್ತೊಬ್ಬ ಶಾಸಕನನ್ನು ಕರೆತರುವ ಶಕ್ತಿ ಇಲ್ಲ. ಅದ್ದರಿಂದ ಅವರು ಎರವಲು ವ್ಯವಸ್ಥೆಯಲ್ಲಿ ಮುಖ್ಯಮಂತ್ರಿಯಾಗಿ ಜನರಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಅವರು ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿ ಅಥವಾ ಬಟ್ಟೆ ಬಿಚ್ಚಿ ಬೇಕಾದರು ಕುಣಿಯಲಿ ನಮಗೇ ಸಂಬಂಧವಿಲ್ಲ ಎಂದರು.

    ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಿ ಜನರ ಮುಂದೇ ಹೋಗುತ್ತೇವೆ. ಆದರೆ ಜನರು ಯಾರು ಗೆಲ್ಲ ಬೇಕು ಎಂದು ತೀರ್ಮಾನಿಸುತ್ತಾರೆ. ಬಿಜೆಪಿ ಏಕಾಂಗಿಯಾಗಿ ಹೋರಾಟ ಮಾಡಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ: ಮಾಜಿ ಸಿಎಂ

    ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ: ಮಾಜಿ ಸಿಎಂ

    ಹುಬ್ಬಳ್ಳಿ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಯಾವುದೇ ಮೈತ್ರಿ ಇಲ್ಲವೆಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

    ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸದ್ಯ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಯಾವುದೇ ಮೈತ್ರಿ ಇಲ್ಲವೆಂದು ತಿಳಿಸಿದ್ದಾರೆ. ಅಲ್ಲದೆ ಮೈತ್ರಿ ವಿಚಾರ ಜಿಲ್ಲಾ ಮಟ್ಟದ ನಾಯಕರಿಗೆ ಬಿಟ್ಟಿದ್ದು, ಈ ವಿಚಾರವಾಗಿ ಜಿಲ್ಲಾ ಮಟ್ಟದ ನಾಯಕರುಗಳ ಯಾವ ರೀತಿ ತೀರ್ಮಾನ ಕೈಗೊಳ್ಳುತ್ತಾರೋ ಹಾಗೆ ಮುಂದುವರೆಯುತ್ತೆ ಎಂದು ಹೇಳಿದರು.

    ಲೋಕಸಭಾ ಮೈತ್ರಿ ವಿಚಾರವನ್ನು ಸಮನ್ವಯ ಸಮಿತಿಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಬಹುತೇಕ ಲೋಕಸಭಾ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಅಲಯನ್ಸ್ ಆಗುತ್ತವೆ. ಸಮ್ಮಿಶ್ರ ಸರ್ಕಾರದಲ್ಲಿನ ಯಾವುದೇ ಸಮಸ್ಯೆಗಳನ್ನು ಬಹಿರಂಗವಾಗಿ ಚರ್ಚೆ ನಡೆಸುವುದು ಸರಿಯಲ್ಲ. ಅದಕ್ಕಾಗಿ ಸಮನ್ವಯ ಸಮಿತಿಯನ್ನು ಸಿದ್ದಪಡಿಸಿದ್ದೇವೆ. ಎಲ್ಲರೂ ಸಮಿತಿಯ ರೀತಿ-ನೀತಿಗಳಿಗೆ ಬದ್ಧರಾಗಿರಬೇಕು. ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮನ್ವಯತೆಯಿಂದ ನಡೆಯಬೇಕಿದೆ. ಹೀಗಾಗಿ ಕೆಲವೊಂದು ಹೊಂದಾಣಿಕೆ ಮಾಡಿಕೊಳ್ಳುವುದು ಅನಿವಾರ್ಯ ಎಂದು ಅವರು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಯಾವುದೇ ಕಾರಣಕ್ಕೂ ಮೈತ್ರಿಯಿಲ್ಲ- ಮಾಜಿ ಶಾಸಕ ಕೆ.ಎನ್ ರಾಜಣ್ಣ

    ಯಾವುದೇ ಕಾರಣಕ್ಕೂ ಮೈತ್ರಿಯಿಲ್ಲ- ಮಾಜಿ ಶಾಸಕ ಕೆ.ಎನ್ ರಾಜಣ್ಣ

    ತುಮಕೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಇರಬಹುದು. ಆದ್ರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿಯಿಲ್ಲ ಅಂತ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ.

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಇರಬಹುದು ಮಧುಗಿರಿಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಮಂತ್ರ ಇಲ್ಲ. ಸ್ಥಳೀಯ ಮತದಾರರು ಹಾಗೂ ಸ್ಥಳೀಯ ಮುಖಂಡರೇ ನಮಗೆ ಹೈಕಮಾಂಡ್. ಈ ಮೂಲಕ ಹೈಕಮಾಂಡ್ ಗೆ ಮಾತಿಗೂ ಮನ್ನಣೆ ಇಲ್ಲ ಎಂದು ಪರೋಕ್ಷ ಸಂದೇಶ ರವಾನಿಸಿದ್ದಾರೆ.

    ಮಧುಗಿರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಬಿಗ್ ಫೈಟ್ ಸಾಧ್ಯತೆ ಇದೆ. ಪುರಸಭೆಯಲ್ಲಿ ಈ ಬಾರಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಅಂತ ಪುರಸಭಾ ಚುನಾವಣೆ ಪೂರ್ವಾಭಾವಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೆಎನ್‍ಆರ್ ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಕಾಲುವೆಯಿಂದ ನೀರು ಬಿಟ್ಟಹಾಗೆ ಸರ್ಕಾರ ಕೂಡ ಬೀಳ್ಬೋದು: ಡಿವಿಎಸ್ ವ್ಯಂಗ್ಯ

    ಕಾಲುವೆಯಿಂದ ನೀರು ಬಿಟ್ಟಹಾಗೆ ಸರ್ಕಾರ ಕೂಡ ಬೀಳ್ಬೋದು: ಡಿವಿಎಸ್ ವ್ಯಂಗ್ಯ

    ಬೆಂಗಳೂರು: ರಾಜ್ಯದ ರಾಜಕಾರಣ ನಿಂತ ನೀರಲ್ಲ. ಸಾಕಷ್ಟು ಮಳೆಯಾಗಿ ಜಲಾಶಯಗಳು ಭರ್ತಿಯಾಗಿದ್ದು, ಕ್ರಸ್ಟ್ ಗೇಟ್ ತೆರೆದು ನೀರು ಹೊರಬಿಡುವಂತೆ ಯಾವುದೇ ಕ್ಷಣದಲ್ಲಿ ಬೇಕಾದರೂ ಸರ್ಕಾರ ಬೀಳಬಹುದು ಅಂತ ಕೇಂದ್ರ ಸಚಿವ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾವು ಯಾವುದೇ ಸರ್ಕಾರವನ್ನು ಬೀಳಿಸುವ ಕೆಲಸ ಮಾಡಲ್ಲ. ಸರ್ಕಾರವೇ ತನ್ನಷ್ಟಕ್ಕೆ ತಾನೇ ಉರುಳಿಹೋಗುತ್ತೆ. ಇದನ್ನು ರಾಜ್ಯದ ಜನ ತೀರ್ಮಾನ ಮಾಡಿದ್ದಾರೆ. ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ರಾಜ್ಯದ ರಾಜಕಾರಣ ನಿಂತ ನೀರಲ್ಲ. ಕ್ರಸ್ಟ್ ಗೇಟ್ ತೆರೆದು ಜಲಾಶಯಗಳಲ್ಲಿ ನೀರು ಹೊರಬಿಡುವಂತೆ ಯಾವುದೇ ಕ್ಷಣದಲ್ಲಿ ಬೇಕಾದರೂ ಸರ್ಕಾರ ಬೀಳಬಹುದು. ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಸಿದರು.

    ಇದೇ ವೇಳೆ ಮುಂದೆ ಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಹಾಗೂ ಬಿಜೆಪಿ ಅವರಿಗೆ ಬುದ್ಧಿ ಕಲಿಸುತ್ತಾರೆ. ಅದ್ದರಿಂದ 70% ರಷ್ಟು ಸ್ಥಾನಗಳು ಬಿಜೆಪಿಗೆ ಸಿಗುತ್ತವೆ ಎಂಬ ವಿಶ್ವಾಸವಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕಾಲದಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ಹಗರಣಗಳು ಮುಂದುವರಿದ್ದು, ಮೊದಲು ಅವರು ಒಬ್ಬರೇ ಲೂಟಿ ಮಾಡುತ್ತಿದ್ದರು. ಈಗ ಇಬ್ಬರು ಸೇರಿಕೊಂಡು ಲೂಟಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಲೂಟಿ ಮಾಡುವ ಸರ್ಕಾರವಿದ್ದು, ಭ್ರಷ್ಟಾಚಾರಕ್ಕೆ ಇಬ್ಬರು ಕ್ಯಾಪ್ಟನ್ ಗಳಾಗಿದ್ದಾರೆ. ತಮ್ಮ ತಪ್ಪುಗಳನ್ನ ಮರೆಮಾಚಲು ಪ್ರತ್ಯೇಕ ಉತ್ತರ ಕರ್ನಾಟಕ ವಿಚಾರವನ್ನು ಎಳೆದು ತಂದಿದ್ದಾರೆ ಎಂದು ಆರೋಪಿಸಿದರು.

    ಸಿಎಂ ಕಣ್ಣೀರಿಗೆ ವ್ಯಂಗ್ಯ:
    ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಬೇಕಿತ್ತೆಂಬ ನೋವು ಎಲ್ಲರ ಮನಸ್ಸಿನಲ್ಲಿ ಇದ್ದು, ಸಣ್ಣ ಪುಟ್ಟ ಕಾರಣಗಳಿಂದ ಕೇಂದ್ರ ನಿರೀಕ್ಷೆಯಂತೆ ನಾವು ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಆಟಕ್ಕುಂಟು ಲೆಕ್ಕಕಿಲ್ಲ ಎನ್ನುವವರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಸಿಎಂ ಆಗುವವರಿಗೆ ಎದೆಗಾರಿಗೆ ಇರಬೇಕು. ಜನರ ಸಮಸ್ಯೆ ಎಷ್ಟೇ ಕಠಿಣವಾಗಿದ್ದರೂ ಅದಕ್ಕೆ ಪರಿಹಾರ ಕಂಡು ಹಿಡಿರುವ ಶಕ್ತಿ ಇರಬೇಕು. ಆದರೆ ಕಣ್ಣೀರು ಹಾಕೋಕು ಇತಿಮಿತಿ ಇದೆ. ಎರಡು ಮೂರು ಕರ್ಚಿಫ್ ಒದ್ದೆ ಆಗೋಷ್ಟು ಕಣ್ಣೀರು ಮುಖ್ಯಮಂತ್ರಿ ಹಾಕುತ್ತಾರೆ ಎಂದರೇ ಆ ಕರ್ಚಿಫ್ ಅಲ್ಲಿ ಅದೇನಿತ್ತೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.