Tag: Lok Saba Election

  • ಪಿತ್ರಾರ್ಜಿತ ಆಸ್ತಿಗೆ 55% ತೆರಿಗೆ – ಅಮೆರಿಕ ಉದಾಹರಿಸಿ ಸಂಪತ್ತಿನ ಮರು ಹಂಚಿಕೆಯನ್ನು ಸಮರ್ಥಿಸಿಕೊಂಡ ಸ್ಯಾಮ್‌ ಪಿತ್ರೋಡಾ

    ಪಿತ್ರಾರ್ಜಿತ ಆಸ್ತಿಗೆ 55% ತೆರಿಗೆ – ಅಮೆರಿಕ ಉದಾಹರಿಸಿ ಸಂಪತ್ತಿನ ಮರು ಹಂಚಿಕೆಯನ್ನು ಸಮರ್ಥಿಸಿಕೊಂಡ ಸ್ಯಾಮ್‌ ಪಿತ್ರೋಡಾ

    ನವದೆಹಲಿ:  ಭಾರತೀಯ ಸಾಗರೋತ್ತರ ಕಾಂಗ್ರೆಸ್ (Congress) ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ (Sam Pitroda) ಅವರು ಅಮೆರಿಕದ ಉತ್ತರಾಧಿಕಾರ ತೆರಿಗೆ (Inheritance Tax) ಬಗ್ಗೆ ಪ್ರಸ್ತಾಪಿಸಿ ಸಂಪತ್ತಿನ ಮರು ಹಂಚಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಅಮೆರಿಕದ ಚಿಕಾಗೋದಲ್ಲಿ ಮಾತನಾಡಿದ ಅವರು, ಅಮೇರಿಕಾದ ಸಂಯುಕ್ತ ಸಂಸ್ಥಾನದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ವ್ಯಕ್ತಿಯ ಸಂಪತ್ತಿನ ಮೇಲೆ 55% ತೆರಿಗೆ ಹಾಕಲಾಗುತ್ತದೆ. ವ್ಯಕ್ತಿಯ ಮಕ್ಕಳು, ಕುಟುಂಬಕ್ಕೆ ಕೇವಲ 45 ಪ್ರತಿಶತ ಪಾಲನ್ನು ವರ್ಗಾಯಿಸಬಹುದು ಎಂದು ಹೇಳಿದ್ದಾರೆ.

    ವ್ಯಕ್ತಿಯೊಬ್ಬ 100 ಮಿಲಿಯನ್‌ ಡಾಲರ್‌ ಮೌಲ್ಯದ ಸಂಪತ್ತನ್ನು ಹೊಂದಿದ್ದರೆ ಆತನ 45 ಪ್ರತಿಶತ ಸಂಪತ್ತು ಮಕ್ಕಳಿಗೆ ವರ್ಗಾವಣೆಯಾಗುತ್ತದೆ. 55% ಸಂಪತ್ತು ಸರ್ಕಾರಕ್ಕೆ ಹೋಗುತ್ತದೆ. ಇದೊಂದು ಆಸಕ್ತಿದಾಯಕ ಕಾನೂನು. ಈ ರೀತಿಯ ಯಾವುದೇ ಕಾನೂನು ಭಾರತದಲ್ಲಿ ಇಲ್ಲ. ಯಾರಾದರೂ 10 ಶತಕೋಟಿ ಮೌಲ್ಯದವರು ಮೃತಪಟ್ಟರೆ ಅವರ ಮಕ್ಕಳು 10 ಶತಕೋಟಿ ಪಡೆಯುತ್ತಾರೆ ಮತ್ತು ಸಾರ್ವಜನಿಕರಿಗೆ ಏನೂ ಸಿಗುವುದಿಲ್ಲ. ಈ ರೀತಿಯ ವಿಷಯಗಳ ಬಗ್ಗೆ ಜನರು ಚರ್ಚಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸುಮಲತಾ ಮಂಡ್ಯ ಪ್ರಚಾರ ರದ್ದು

    ಕಾಂಗ್ರೆಸ್ ಪಕ್ಷವು ಸಂಪತ್ತಿನ ಹಂಚಿಕೆಯನ್ನು ಉತ್ತಮಗೊಳಿಸುವ ನೀತಿಯನ್ನು ರೂಪಿಸುತ್ತದೆ. ಭಾರತದಲ್ಲಿ ಕನಿಷ್ಠ ವೇತನ ಇಲ್ಲ. ಬಡವರಿಗೆ ಇಷ್ಟು ಹಣವನ್ನು ನೀಡಬೇಕು ಎಂದು ಕಾನೂನು ತಂದರೆ ಅದು ಸಂಪತ್ತಿನ ಮರು ಹಂಚಿಕೆ ಎಂದರು.

    ಇಂದು ಶ್ರೀಮಂತರು ತಮ್ಮ ಮನೆಯ ಸಹಾಯಕರಿಗೆ ಹಣವನ್ನು ನೀಡುವುದಿಲ್ಲ. ಆದರೆ ಅವರು ದುಬೈ ಮತ್ತು ಲಂಡನ್‌ನಲ್ಲಿ ವಿಹಾರಕ್ಕೆ ಆ ಹಣವನ್ನು ಖರ್ಚು ಮಾಡುತ್ತಾರೆ. ನಮ್ಮ ಸಂಪತ್ತನ್ನು ಸಾರ್ವಜನಿಕರಿಗಾಗಿ ಬಿಟ್ಟುಬಿಡಬೇಕು ಎಂದು ಅವರು ಹೇಳಿದರು.

  • ಚುನಾವಣೆ ಹೊಸ್ತಿಲಲ್ಲಿ ಆಪರೇಷನ್‌ ಕಾಂಗ್ರೆಸ್‌ – ಕೊತ್ತುರು ಬಾಂಬ್‌ಗೆ ಸಮೃದ್ಧಿ, ವೆಂಕಟಶಿವಾರೆಡ್ಡಿ ಸ್ಪಷ್ಟನೆ

    ಚುನಾವಣೆ ಹೊಸ್ತಿಲಲ್ಲಿ ಆಪರೇಷನ್‌ ಕಾಂಗ್ರೆಸ್‌ – ಕೊತ್ತುರು ಬಾಂಬ್‌ಗೆ ಸಮೃದ್ಧಿ, ವೆಂಕಟಶಿವಾರೆಡ್ಡಿ ಸ್ಪಷ್ಟನೆ

    ಕೋಲಾರ: ಲೋಕಸಭಾ ಚುನಾವಣೆ (Lok Saba Election) ಹೊಸ್ತಿಲಲ್ಲಿ ಆಪರೇಷನ್ ಕಾಂಗ್ರೆಸ್ (Operation Congress) ಶುರುವಾಗಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಇಂಥಾದೊಂದು ಅನುಮಾನಕ್ಕೆ ಕಾರಣವಾಗಿದ್ದು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ (Kothur Manjunath) ಸಿಡಿಸಿದ ಬಾಂಬ್.

    ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ದಿ ಮಂಜುನಾಥ್ (Samruddhi Manjunath) ಹಾಗೂ ಶ್ರೀನಿವಾಸಪುರ ಶಾಸಕ ವೆಂಕಟಶಿವಾರೆಡ್ಡಿ (Venkatashiva Reddy) ಶೀಘ್ರ ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೊತ್ತೂರು ಮಂಜುನಾಥ್ ಹೇಳಿಕೆ ನೀಡಿದ್ದಾರೆ.  ಇದನ್ನೂ ಓದಿ: ಜಿಮ್ಸ್ ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿದ 38 ವಿದ್ಯಾರ್ಥಿಗಳು ಅಮಾನತು

     

    ಇಬ್ಬರು ಜೆಡಿಎಸ್ ಶಾಸಕರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಪರಮೇಶ್ವರ್‌ ಸಮ್ಮುಖದಲ್ಲಿ ಮಾತುಕತೆ ನಡೆದಿದೆ. ಸಚಿವ ಕೆ.ಹೆಚ್ ಮುನಿಯಪ್ಪ ಸಮ್ಮುಖದಲ್ಲಿ ಆಪರೇಷನ್ ನಡೆಯುತ್ತಿದೆ ಎಂದು ಕೊತ್ತೂರು ಮಂಜುನಾಥ್ ಹೇಳಿದ್ದಾರೆ. ಈ ಬೆಳವಣಿಗೆ ಜಿಲ್ಲೆಯಲ್ಲಿ ಹಾಗೂ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದನ್ನೂ ಓದಿ: ಸಂಸತ್ತಿನಲ್ಲಿ ಇಂದು ರಾಮ ಮಂದಿರ ಗೊತ್ತುವಳಿ: ಬಿಜೆಪಿ ಸಂಸದರಿಗೆ ವಿಪ್‌ ಜಾರಿ

    ಕೊತ್ತೂರು ಮಂಜುನಾಥ್ ಆಪರೇಷನ್ ಹಸ್ತ ಬಾಂಬ್‌ಗೆ ಜೆಡಿಎಸ್ ಶಾಸಕರು ಸ್ಪಷ್ಟನೆ ನೀಡಿದ್ದಾರೆ. ಕ್ಷೇತ್ರದ ಅಭಿವೃದ್ದಿಗಾಗಿ ಸಿಎಂ, ಡಿಸಿಎಂ ಭೇಟಿಯಾಗಿ ಅನುದಾನ ಕೇಳಿದ್ದು ನಿಜ. ಈ ವೇಳೆ ಅವರು ಪಕ್ಷಕ್ಕೆ ಬರುವಂತೆ ಕರೆದಿದ್ದು ನಿಜ. ಆದರೆ ನಾವು ಯಾವತ್ತೂ ಪಕ್ಷಕ್ಕೆ ಬರುವುದಾಗಿ ಹೇಳಿಲ್ಲ ಎಂದು ಶಾಸಕ ಸಮೃದ್ದಿ ಮಂಜುನಾಥ್ ಹಾಗೂ ಜಿ.ಕೆ.ವೆಂಕಟಶಿವಾರೆಡ್ಡಿ ಆಪರೇಷನ್ ವಿಚಾರವನ್ನು ತಳ್ಳಿಹಾಕಿದ್ದಾರೆ.

    ಒಟ್ಟಿನಲ್ಲಿ ಲೋಕಸಭೆ ಚುನಾವಣೆಯ ಹತ್ತಿರವಾಗುತ್ತಿದ್ದಂತೆ ರಾಜಕೀಯ ನಾಯಕರುಗಳ ರಾಜಕೀಯ ಪ್ರಹಸನಗಳು ಶುರುವಾಗಿದೆ. ಆಪರೇಷನ್ ಹಸ್ತ ನಿಜವೇ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

     

  • ಬುಧವಾರ ನಡೆಯಬೇಕಿದ್ದ INDIA ಒಕ್ಕೂಟದ ಸಭೆ ಮುಂದೂಡಿಕೆ

    ಬುಧವಾರ ನಡೆಯಬೇಕಿದ್ದ INDIA ಒಕ್ಕೂಟದ ಸಭೆ ಮುಂದೂಡಿಕೆ

    ನವದೆಹಲಿ: ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆ ಬುಧವಾರ ನಡೆಯಬೇಕಿದ್ದ INDIA ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ.

    ಪಂಚರಾಜ್ಯಗಳ ಚುನಾವಣೆ ಹಿನ್ನಲೆ ಒಕ್ಕೂಟದ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ಲೋಕಸಭೆ ಚುನಾವಣೆ (Lok Sabha Election) ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದರು‌.

    ಮಿಚಾಂಗ್‌ ಚಂಡಮಾರುತದಿಂದ (Cyclone Michaung) ಚೆನ್ನೈ ವಿಮಾನ ನಿಲ್ದಾಣವನ್ನು ಮುಚ್ಚಿದ್ದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರು ದೆಹಲಿಗೆ ಭೇಟಿ ನೀಡಲು ಮತ್ತು ಸಭೆಗೆ ಬರಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    ನಿತೀಶ್ ಕುಮಾರ್ ಅವರು ಅಸ್ವಸ್ಥರಾಗಿದ್ದು, ಪಶ್ಚಿಮ‌ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಸಭೆಗೆ ಗೈರಾಗುವ ಬಗ್ಗೆ‌‌ ಮೊದಲೇ ಮಾಹಿತಿ‌ ನೀಡಿದ್ದರು. ಇದನ್ನೂ ಓದಿ: ಹಾಡಹಗಲೇ ಕರ್ಣಿ ಸೇನಾ ಮುಖ್ಯಸ್ಥನ ಗುಂಡಿಕ್ಕಿ ಕೊಲೆ

    ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೂಡಾ ಸಭೆಯಲ್ಲಿ ಭಾಗಿಯಾಗಿರುವ ಖಚಿತ ಪಡಿಸಿದ್ದರು. ಆಮ್ ಆದ್ಮಿ ಪಕ್ಷವು ಸಭೆಯಲ್ಲಿ ಭಾಗಿಯಾಗುವ ಬಗ್ಗೆ ಯಾವುದೇ ದೃಢೀಕರಣ ನೀಡಿರಲಿಲ್ಲ.

    ಪ್ರಮುಖ ನಾಯಕರ ಅಲಭ್ಯತೆ ಹಿನ್ನಲೆ ಸಭೆಯನ್ನು ಮುಂದೂಡಲು ನಿರ್ಧರಿಸಿದ್ದು ಮುಂದಿನ ಎರಡು ವಾರಗಳಲ್ಲಿ ಮತ್ತೆ ಸಭೆಗೆ ದಿನಾಂಕ‌ ನಿಗದಿ ಮಾಡಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ. ಸಭೆ ರದ್ದಾದ ಹಿನ್ನಲೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ತಮ್ಮ ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

     

    ಕಡೆಯ ಒಕ್ಕೂಟದ ಸಭೆಯನ್ನು ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಆಯೋಜಿಸಿದ್ದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಐದು ರಾಜ್ಯಗಳ ಮುಖ್ಯಮಂತ್ರಿಗಳು ಹಾಜರಿದ್ದರು. ಎರಡು ದಿನಗಳ ಚರ್ಚೆಗಳಲ್ಲಿ, ಮೈತ್ರಿಯು ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಪ್ರಮುಖ ಚುನಾವಣಾ ವಿಷಯಗಳನ್ನು ಚರ್ಚಿಸಿ ಸಮನ್ವಯ ಸಮಿತಿಯನ್ನು ರಚಿಸಿತು. ಲೋಕಸಭಾ ಚುನಾವಣೆಯಲ್ಲಿ ಸಾಧ್ಯವಾದಷ್ಟು ಒಟ್ಟಾಗಿ ಹೋರಾಡಲು ಮೂರು ಅಂಶಗಳ ನಿರ್ಣಯವನ್ನು ಅಂಗೀಕರಿಸಿತು.