Tag: lok sabha 2019 election
-

ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್‍ಸಿ ಮೈತ್ರಿ
– ಶ್ರೀನಗರದಿಂದ ಎನ್‍ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಸ್ಪರ್ಧೆ
– ಕಾಂಗ್ರೆಸ್ ಜೊತೆಗೆ ಮೈತ್ರಿಯಿಲ್ಲ: ಮೆಹಬೂಬಾ ಮುಫ್ತಿಶ್ರೀನಗರ: ಲೋಕಸಭಾ ಚುನಾವಣೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‍ಸಿ) ಮೈತ್ರಿ ಮಾಡಿಕೊಂಡಿವೆ. ಈ ಮೂಲಕ ಪಿಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಕಟ್ಟಿಹಾಕಲು ಕಾಂಗ್ರೆಸ್-ಎನ್‍ಸಿ ಭರ್ಜರಿ ರಣತಂತ್ರ ರೂಪಿಸಿವೆ.
ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜದ್ ಮತ್ತು ನ್ಯಾಷನಲ್ ಕಾನ್ಫರೆನ್ಸಿನ ಫಾರೂಕ್ ಅಬ್ದುಲ್ಲಾ ಜಂಟಿಯಾಗಿ ಮೈತ್ರಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಶ್ರೀನಗರದಿಂದ ಮೈತ್ರಿ ಅಭ್ಯರ್ಥಿಯಾಗಿ ಎನ್‍ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಸ್ಪರ್ಧೆ ಮಾಡಲಿದ್ದಾರೆ. ಇದರಿಂದಾಗಿ ಜಮ್ಮು ಮತ್ತು ಉದಮ್‍ಪುರ ಕ್ಷೇತ್ರಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಲು ನಿರ್ಧರಿಸಲಾಗಿದೆ. ಆದರೆ ಉಳಿದ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಎನ್‍ಸಿ ಫ್ರೆಂಡ್ಲಿ ಫೈಟ್ ನೀಡಲು ನಿರ್ಧರಿಸಿವೆ ಎನ್ನಲಾಗಿದೆ.
ಇತ್ತ ಪಿಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ನಾಯಕಿ ಮೆಹಬೂಬಾ ಮುಫ್ತಿ ಅವರು, ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ತಳ್ಳಿಹಾಕಿದ್ದಾರೆ. ಹೀಗಾಗಿ ಜಮ್ಮು-ಕಾಶ್ಮೀರ ಆರು ಲೋಕಸಭಾ ಕ್ಷೇತ್ರಗಳಿಂದ ಪಿಡಿಪಿ ಅಭ್ಯರ್ಥಿ ಕಣಕ್ಕೆ ಇಳಿಯುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಜಮ್ಮು-ಕಾಶ್ಮೀರದ ಆರು ಕ್ಷೇತ್ರಗಳ ಪೈಕಿ ಪಿಡಿಪಿ 3 ಸ್ಥಾನ ಹಾಗೂ ಬಿಜೆಪಿ 3 ಸ್ಥಾನ ಪಡೆದಿತ್ತು. ಕಾಂಗ್ರೆಸ್ ಮತ್ತು ಎನ್‍ಸಿ ತಮ್ಮ ಅಸ್ಥಿತ್ವವನ್ನೇ ಕಳೆದುಕೊಂಡಿತ್ತು. ಹೀಗಾಗಿ ಈ ಬಾರಿ ಮತ್ತೆ ಜಮ್ಮು-ಕಾಶ್ಮೀರದಲ್ಲಿ ಗೆಲ್ಲಲು ಕಾಂಗ್ರೆಸ್-ಎನ್‍ಸಿ ಮೈತ್ರಿ ಮಾಡಿಕೊಂಡಿವೆ.
-

ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮಾಯಾವತಿ
ಲಕ್ನೋ: ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ನಾಯಕಿ ಮಾಯಾವತಿ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಯಾವತಿ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ನಿರ್ಧಾರ ಕೈಗೊಂಡಿದ್ದೇನೆ. ನನ್ನ ಈ ನಿರ್ಧಾರವನ್ನು ಪಕ್ಷದ ಕಾರ್ಯಕರ್ತರು ಅರ್ಥ ಮಾಡಿಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ. ಆದರೆ ಸ್ಪರ್ಧೆ ಅನಿವಾರ್ಯವಾದರೆ ಚುನಾವಣಾ ಕಣಕ್ಕೆ ಇಳಿಯುತ್ತೇನೆ ಎಂದು ತಿಳಿಸಿದ್ದಾರೆ.
Bahujan Samaj Party (BSP) Chief Mayawati: I will not contest the Lok Sabha elections. pic.twitter.com/88oGmtd6Ww
— ANI UP/Uttarakhand (@ANINewsUP) March 20, 2019
ಉತ್ತರ ಪ್ರದೇಶದಲ್ಲಿ ಮಾಯಾವತಿ ಅವರು ಕಾಂಗ್ರೆಸ್ ಜೊತೆಗೆ ಮೈತ್ರಿ ನಿರಾಕರಿಸಿದ್ದರು. ಹೀಗಾಗಿ ಸಮಾಜವಾದಿ ಪಕ್ಷದ ಜೊತೆಗೆ ಕೈಜೋಡಿಸಿದ್ದು, ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಈಗಾಗಲೇ ಬಿಎಸ್‍ಪಿ-ಎಸ್‍ಪಿ ಸೀಟುಗಳ ಹಂಚಿಕೆ ಕೂಡ ಆಗಿದ್ದು, ಬಿಜೆಪಿಯನ್ನು ಸೋಲಿಸಲು ರಣತಂತ್ರ ರೂಪಿಸಲಾಗಿದೆ. ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‍ಗಿಂತ ಬಿಎಸ್‍ಪಿ-ಎಸ್‍ಪಿ ಮೈತ್ರಿ ಬಲಿಷ್ಠವಾಗಿದೆ ಎಂದು ಈ ಹಿಂದೆಯೇ ಮಾಯಾವತಿ ಹೇಳಿದ್ದರು. ಅಷ್ಟೇ ಅಲ್ಲದೆ ಕಾಂಗ್ರೆಸ್ ಜೊತೆಗೆ ಮೈತ್ರಿ ಇಲ್ಲದಿದ್ದರೂ ಉತ್ತರ ಪ್ರದೇಶದ ಅಮೇಠಿ ಹಾಗೂ ರಾಯ್‍ಬರೇಲಿ ಕ್ಷೇತ್ರಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಲಾಗಿದೆ.








