Tag: Lok Sabha constituency

  • ಚುನಾವಣೆಗೂ ಮುನ್ನವೇ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಗುಂಡಿನ ದಾಳಿಗೆ ಮಾಜಿ ಸರ್ಪಂಚ್‌ ಬಲಿ, ದಂಪತಿಗೆ ಗಾಯ!

    ಚುನಾವಣೆಗೂ ಮುನ್ನವೇ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಗುಂಡಿನ ದಾಳಿಗೆ ಮಾಜಿ ಸರ್ಪಂಚ್‌ ಬಲಿ, ದಂಪತಿಗೆ ಗಾಯ!

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನಕ್ಕೆ ಕ್ಷಣನೆ ಬಾಕಿಯಿರುವಾಗಲೇ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಒಂದೇ ದಿನ ಎರಡು ಕಡೆ ಉಗ್ರರು ನಾಗರಿಕರು ಹಾಗೂ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ.

    ಇಲ್ಲಿನ ಶೋಪಿಯಾನ್‌ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮಾಜಿ ಸರ್ಪಂಚ್‌ (Ex Sarpanch) ಒಬ್ಬರು ಹತರಾದರೆ, ಅನಂತನಾಗ್‌ ಜಿಲ್ಲೆಯಲ್ಲಿ ರಾಜಸ್ಥಾನದ ದಂಪತಿಯು ಗಾಯಗೊಂಡಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು (J & K Police) ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಗಳು ಹೆಚ್ಚಾಗಿದ್ದು, ಕಳೆದ ಏಪ್ರಿಲ್‌ನಲ್ಲೂ ಶೋಪಿಯಾನ್‌ ಜಿಲ್ಲೆಯಲ್ಲಿ ಟೂರಿಸ್ಟ್‌ ಗೈಡ್‌ ಒಬ್ಬನನ್ನ ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: ಜೀನ್ಸ್ ಪ್ಯಾಂಟ್, ಟೀಶರ್ಟ್‍ನಲ್ಲಿಟ್ಟು ಸಾಗಿಸುತ್ತಿದ್ದ 1.96 ಕೋಟಿ ಮೌಲ್ಯದ ಚಿನ್ನ ಸೀಜ್

    ಶೋಪಿಯಾನ್‌ ಜಿಲ್ಲೆಯ ಹುರ್ಪುರ ಗ್ರಾಮದಲ್ಲಿ ಉಗ್ರರ ದಾಳಿಯಲ್ಲಿ (Terrorist Attacks) ಮಾಜಿ ಸರ್ಪಂಚ್‌ ಐಜಾಜ್‌ ಅಹ್ಮದ್‌ ಶೇಖ್‌ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆಗೆ ದೇಹ ಸ್ಪಂಧಿಸದೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 10ಕ್ಕೂ ಹೆಚ್ಚು ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ – ಸೋಮವಾರದ ಒಳಗೆ ಬಂದ್‌ಗೆ ಸೂಚನೆ!

    ದಂಪತಿಗೆ ಗಾಯ:
    ಅನಂತನಾಗ್‌ನಲ್ಲಿಯೂ ಉಗ್ರರ ದಾಳಿ ನಡೆದಿದ್ದು, ರಾಜಸ್ಥಾನ ಮೂಲದ ಪತಿ-ಪತ್ನಿ (Tourist Couple) ಗಾಯಗೊಂಡಿದ್ದಾರೆ. ಟೂರಿಸ್ಟ್‌ ಕ್ಯಾಂಪ್‌ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಪರ್ಹಾ ಹಾಗೂ ಅವರ ಪತಿ ತಬ್ರೇಜ್‌ ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಎರಡೂ ಕಡೆ ದಾಳಿ ಮಾಡಿದವರು ಯಾವ ಸಂಘಟನೆಗೆ ಸೇರಿದವರು ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಸ್ಪಷ್ಟ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ ಮೇ 20ರಂದು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಲೋಕಸಭಾ ಕ್ಷೇತ್ರಕ್ಕೆ (Lok Sabha Constituency) ಮತದಾನ ನಡೆಯಲಿದೆ.

  • ಪವಿತ್ರ ಗಂಗೆಗೆ ನಮಿಸಿ ಮೂರನೇ ಬಾರಿ ವಾರಣಾಸಿಯಿಂದ ನಾಮಪತ್ರ ಸಲ್ಲಿಸಿದ ಮೋದಿ

    ಪವಿತ್ರ ಗಂಗೆಗೆ ನಮಿಸಿ ಮೂರನೇ ಬಾರಿ ವಾರಣಾಸಿಯಿಂದ ನಾಮಪತ್ರ ಸಲ್ಲಿಸಿದ ಮೋದಿ

    ಲಕ್ನೋ: ಮೂರನೇ ಬಾರಿ ಅಧಿಕಾರ ಹಿಡಿಯಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಾರಣಾಸಿ ಲೋಕಸಭಾ ಕ್ಷೇತ್ರದ (Varanasi Lok Sabha Constituency) ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಎನ್‌ಡಿಎ ಮಿತ್ರ ಪಕ್ಷದ ನಾಯಕರು, ಬಿಜೆಪಿ ಮುಖ್ಯಮಂತ್ರಿಗಳು ಮೋದಿಗೆ ಸಾಥ್‌ ನೀಡಿದರು.

    ನಾಮಪತ್ರ ಸಲ್ಲಿಕೆ ಮಾಡುವುದಕ್ಕೆ ಮೊದಲು ದಶಾಶ್ವಮೇಧ ಘಾಟ್‌ನಲ್ಲಿ (Dashashwamedh Ghat) ಗಂಗಾ ನದಿಗೆ (Ganga River) ಗಂಗಾ ಆರತಿ ಮಾಡಿದರು. ನಂತರ ವಾರಣಾಸಿ ಕಾಲಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಮೂರನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಿದರು.

    ಯಾರೆಲ್ಲಾ ಸಾಥ್‌?
    ಜೆಪಿ ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ಯೋಗಿ ಆದಿತ್ಯನಾಥ್, ಏಕನಾಥ್ ಶಿಂಧೆ, ಕಾನ್ರಾಡ್ ಸಂಗ್ಮಾ, ಪ್ರಫುಲ್ ಪಟೇಲ್, ರಾಮದಾಸ್ ಅಠವಾಲೆ, ಹರ್ದೀಪ್ ಪುರಿ, ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್, ಜಿತನ್ ರಾಮ್ ಮಾಂಝಿ, ಉಪೇಂದ್ರ ಕುಶ್ವಾಹ, ಸಂಜಯ್ ನಿಶಾದ್, ಅನುಪ್ರಿಯಾ ಪಟೇಲ್, ಓಂಪ್ರಕಾಶ್ ರಾಜಭರ್, ಜಯಂತ್ ಚೌಧರಿ, ಅಂಬುಮಣಿ ರಾಮದಾಸ್, ಜಿಕೆ ವಾಸನ್, ದೇವನಾಥನ್ ಯಾದವ್, ತುಶಾರ್ ವೆಲ್ಲಪ್ಪಲ್ಲಿ, ಅತುಲ್ ಬೋರಾ, ಪ್ರಮೋದ್ ಬೋರೋ, ಪಶುಪತಿ ಪಾರಸ್ ಮತ್ತು ಭೂಪೇಂದ್ರ ಚೌಧರಿ ಮೋದಿಗೆ ಸಾಥ್‌ ನೀಡಿದರು.

     
    ಇಂದೇ ನಾಮಪತ್ರ ಸಲ್ಲಿಸಿದ್ದು ಯಾಕೆ?
    ಇಂದು ಗಂಗಾ ಸಪ್ತಮಿ. ಹಿಂದೂಗಳ ಪಾಲಿಗೆ ಪವಿತ್ರವಾದ ದಿನವಾಗಿದೆ. ಗಂಗೆ ಜನಿಸಿದಳು ಎಂಬ ನಂಬಿಕೆಯಿದೆ. ಗಂಗಾ ಸಪ್ತಮಿಯಂದು ಶುಭ ಅಭಿಜಿನ್ ಲಗ್ನದಲ್ಲಿ ಮೋದಿ ನಾಮಪತ್ರ ಸಲ್ಲಿಸುವುದು ಶ್ರೇಯಸ್ಕರ ಎಂದು ಪಂಡಿತ್ ಗಣೇಶ್ವರ್ ಶಾಸ್ತ್ರಿ ಸೂಚಿಸಿದ ಹಿನ್ನೆಲೆಯಲ್ಲಿ ಇಂದು ಮೋದಿ ನಾಮಪತ್ರ ಸಲ್ಲಿಕೆ ಮಾಡಿದರು. ರಾಮಮಂದಿರ ಲೋಕಾರ್ಪಣೆಗೆ ಮಹೂರ್ತವನ್ನು ಪಂಡಿತ್ ಗಣೇಶ್ವರ್ ಶಾಸ್ತ್ರಿ ನೀಡಿದ್ದರು.

  • ಅಭ್ಯರ್ಥಿ ಹೆಸರಿನಿಂದ ಗೊಂದಲ; ಲಡಾಖ್‌ನಲ್ಲಿ ಕಾಂಗ್ರೆಸ್‌ ಟಿಕೆಟ್‌ ನೀಡಿದ್ದು ಬಿಜೆಪಿ ಸಂಸದನಿಗಲ್ಲ – ಸ್ಪಷ್ಟನೆ

    ಅಭ್ಯರ್ಥಿ ಹೆಸರಿನಿಂದ ಗೊಂದಲ; ಲಡಾಖ್‌ನಲ್ಲಿ ಕಾಂಗ್ರೆಸ್‌ ಟಿಕೆಟ್‌ ನೀಡಿದ್ದು ಬಿಜೆಪಿ ಸಂಸದನಿಗಲ್ಲ – ಸ್ಪಷ್ಟನೆ

    – ನಾನು ಬಿಜೆಪಿ ನಿಷ್ಠಾವಂತ ಕಾರ್ಯಕರ್ತ ಎಂದ ಸಂಸದ ತ್ಸೆರಿಂಗ್

    ಲಡಾಖ್‌: ಇಲ್ಲಿನ ಲೋಕಸಭಾ ಕ್ಷೇತ್ರದಿಂದ (Ladakh Constituency) ಬಿಜೆಪಿ ಹಾಲಿ ಸಂಸದನಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ಬಿಜೆಪಿ ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ (Jamyang Tsering Namgyal )ಸ್ಪಷ್ಟನೆ ನೀಡಿದ್ದಾರೆ.

    ʻತ್ಸೆರಿಂಗ್ ನಮ್ಗ್ಯಾಲ್ʼ (Tsering Namgyal) ಅಭ್ಯರ್ಥಿಯ ಹೆಸರು ಈ ಗೊಂದಲಕ್ಕೆ ಕಾರಣವಾಗಿದೆ. ಇಲ್ಲಿನ ಬಿಜೆಪಿ ಸಂಸದರ ಹೆಸರೂ ಸಹ ಇದೇ ಆಗಿದ್ದರಿಂದ ಗೊಂದಲ ಉಂಟಾಗಿದೆ. ಈ ಬಗ್ಗೆ ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ರಾಯ್‌ಬರೇಲಿಯಿಂದ ರಾಹುಲ್‌, ಅಮೇಠಿಯಿಂದ ಕಿಶೋರಿ ಲಾಲ್‌ ಶರ್ಮಾ ಕಣಕ್ಕೆ

    ʻನಾನು ಆ ರೀತಿಯ ಪದಗಳನ್ನು ಎಂದಿಗೂ ಹೇಳಿಲ್ಲ. ನನ್ನ ಹೆಸರಿನಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವವರನ್ನು ತೀವ್ರವಾಗಿ ಖಂಡಿಸುತ್ತೇನೆ. ನಾನು ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತ, ಅತ್ಯಂತ ಕ್ರಿಯಾಶೀಲ ನಾಯಕ ನರೇಂದ್ರ ಮೋದಿ (PM Modi) ಅವರೇ ಎಂದಿಗೂ ನಮ್ಮ ನಾಯಕʼ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಯಾವುದೇ ಲಸಿಕೆಯ ಮೊದಲ ಆದ್ಯತೆ ಸುರಕ್ಷತೆ: ಕೋವ್ಯಾಕ್ಸಿನ್‌ ಅಭಿವೃದ್ಧಿಪಡಿಸಿದ ಭಾರತ್‌ ಬಯೋಟೆಕ್‌ ಹೇಳಿಕೆ

    ಕಾಂಗ್ರೆಸ್‌ ಟಿಕೆಟ್‌ ನೀಡಿದ್ದ ತ್ಸೆರಿಂಗ್ ಯಾರು?
    ಲೇಹ್‌ ಮೂಲದ ತ್ಸೆರಿಂಗ್ ನಮ್ಗ್ಯಾಲ್ ಲಡಾಖ್ ಸ್ವಾಯತ್ತ ಹಿಲ್ ಡೆವಲಪ್‌ಮೆಂಟ್ ಕೌನ್ಸಿಲ್ (LAHDC)ನಲ್ಲಿ ವಿರೋಧ ಪಕ್ಷದ ನಾಯಕನಾಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಕಾರ್ಗಿಲ್‌ ಜಿಲ್ಲೆಯಲ್ಲಿ ಶಿಯಾ ಮುಸ್ಲಿಂ ಪಂಗಡದ ಪ್ರಭಾವಿ ಹಾಜಿ ಹನೀಫಾ ಜಾನ್ ವಿರುದ್ಧ ಕಣಕ್ಕಿಳಿದಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್‌ಭೂಷಣ್‌ಗೆ ಟಿಕೆಟ್‌ ಇಲ್ಲ – ಪುತ್ರನಿಗೆ ಬಿಜೆಪಿ ಮಣೆ

  • ಗೃಹಲಕ್ಷ್ಮಿ ಚಾಲನೆಗೆ ಮೈಸೂರನ್ನೇ ಆಯ್ಕೆ ಮಾಡಿದ್ದು ಯಾಕೆ – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಗೃಹಲಕ್ಷ್ಮಿ ಚಾಲನೆಗೆ ಮೈಸೂರನ್ನೇ ಆಯ್ಕೆ ಮಾಡಿದ್ದು ಯಾಕೆ – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಬೆಂಗಳೂರು: ಗೃಹಲಕ್ಷ್ಮಿ (Gruha Lakshmi) ಯೋಜನೆಯ ಚಾಲನೆಗೆ ಮೈಸೂರು ನಗರವನ್ನು (Mysuru) ಆಯ್ಕೆ ಮಾಡಿದರ ಹಿಂದೆ ಕಾಂಗ್ರೆಸ್‌ (Congress) ಮಾಸ್ಟರ್‌ ಪ್ಲ್ಯಾನ್‌ ಮಾಡಿದೆ. ಒಂದು ಅದ್ದೂರಿ ಕಾರ್ಯಕ್ರಮದ ಮೂಲಕ ನಾಲ್ಕು ಲೋಕಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್‌ ಕಣ್ಣು ಹಾಕಿದೆ.

    ಹಳೆ ಮೈಸೂರು (Old Mysuru) ಭಾಗದ ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ಹಾಸನ ಲೋಕಸಭಾ ಕ್ಷೇತ್ರವನ್ನು (Lok Sabha Constituency) ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ನಾಲ್ಕು ಕ್ಷೇತ್ರದ ಮತದಾರರ ಒಟ್ಟಿಗೆ ಸೇರಿಸಿ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮೂಲಕ ರಣಕಹಳೆ ಮೊಳಗಿಸಲು ಕಾಂಗ್ರೆಸ್‌ ಮುಂದಾಗಿದೆ. ಇದನ್ನೂ ಓದಿ: ಜೋ ಬೈಡೆನ್ ಸಿಬ್ಬಂದಿಗಾಗಿ ದೆಹಲಿಯ ಹೋಟೆಲ್‌ನಲ್ಲಿ 400 ರೂಮ್ ಬುಕ್

     

    ಕಳೆದ ಚುನಾವಣೆಯಲ್ಲಿ ಮೈಸೂರು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ, ಹಾಸನದಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿದ್ದರೆ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಸುಮಲತಾಗೆ ಗೆಲುವು ಪಡೆದಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಉತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಈ ಬಾರಿ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಗೆದ್ದುಕೊಳ್ಳಲು ಕಾಂಗ್ರೆಸ್‌ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ.

    ಸರ್ಕಾರ  ಅಧಿಕಾರಕ್ಕೆ ಬಂದ ಆರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ  ಲಕ್ಷ್ಮಿ ಹೆಬ್ಬಾಳ್ಕರ್‌ ಬೆಳಗಾವಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಚಿಂತನೆ ಮಾಡಿದ್ದೇವೆ ಎಂದು ತಿಳಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಂದು ಕ್ಷೇತ್ರಕ್ಕೆ ಬರೋಬ್ಬರಿ 200 ಕೋಟಿ ಖರ್ಚು -ರಾಷ್ಟ್ರಮಟ್ಟದ ಟಾಪ್ 10 ಕ್ಷೇತ್ರಗಳಲ್ಲಿ ಒಂದಾದ ಕಲಬುರಗಿ

    ಒಂದು ಕ್ಷೇತ್ರಕ್ಕೆ ಬರೋಬ್ಬರಿ 200 ಕೋಟಿ ಖರ್ಚು -ರಾಷ್ಟ್ರಮಟ್ಟದ ಟಾಪ್ 10 ಕ್ಷೇತ್ರಗಳಲ್ಲಿ ಒಂದಾದ ಕಲಬುರಗಿ

    ಕಲಬುರಗಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎದುರು ಡಾ.ಉಮೇಶ್ ಜಾಧವ್ ಸ್ಪರ್ಧೆಯಿಂದ ಕಲಬುರಗಿ ಲೋಕಸಭೆ ಇದೀಗ ಸ್ಟಾರ್ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಈ ಬಾರಿ ಕನಿಷ್ಟ ಅಂದ್ರು 200 ಕೋಟಿಗೂ ಅಧಿಕ ಕುರುಡು ಕಾಂಚಾಣ ಹರಿಯಲ್ಲಿದೆಯಂತೆ. ಹೀಗಾಗಿ ಚುನಾವಣಾ ಆಯೋಗ ಈ ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿದೆ.

    ಕಲಬುರಗಿ ಲೋಕಸಭೆ ಮೀಸಲು ಕ್ಷೇತ್ರ ಇದೀಗ ರಾಷ್ಟ್ರಮಟ್ಟದ ಟಾಪ್ 10 ಕ್ಷೇತ್ರಗಳಲ್ಲಿ ಒಂದಾಗಿದೆ. ಯಾಕಂದ್ರೆ ಈ ಕ್ಷೇತ್ರದಿಂದ ಕಾಂಗ್ರೆಸ್ ಸಂಸದ ಹಾಗೂ ಸೋಲಿಲ್ಲದ ಸರ್ದಾರ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿಯಾದ್ರೆ, ಇತ್ತ ಬಿಜೆಪಿಯಿಂದ ಕಾಂಗ್ರೆಸ್ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಬಹುತೇಕ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಇವರಿಬ್ಬರ ನಡುವಿನ ಫೈಟ್ ಜಿಲ್ಲೆಯ ರಾಜಕಾರಣದಲ್ಲಿ ಹುಬ್ಬೆರಿಸುವಂತೆ ಮಾಡಿದೆ. ಚುನಾವಣೆಯ ದಿನಾಂಕ ನಿಗದಿಯಾಗದಿದ್ರು ಈ ಇಬ್ಬರು ಅಭ್ಯರ್ಥಿಗಳು ಇದೀಗ ಜಿಲ್ಲೆಯ ಗಲ್ಲಿ ಗಲ್ಲಿಗಳಿಗೆ ತೆರಳಿ ಮತ ಬೇಟೆ ಶುರು ಮಾಡಿದ್ದಾರೆ.

    ಶತಾಯಗತಾಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಲಿಸಬೇಕೆಂದು ಬಿಜೆಪಿ ಟೊಂಕ ಕಟ್ಟಿ ನಿಂತಿದೆ. ಇತ್ತ ಸೋಲಿಲ್ಲದ ಸರ್ದಾರ ಪಟ್ಟ ಉಳಿಸಿಕೊಳ್ಳಲು ಖರ್ಗೆ ಸಹ ಫೀಲ್ಡ್ ಗಿಳಿದಿದ್ದಾರೆ. ಈ ಮದಗಜಗಳ ಜಗಳದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳೇ ಗೆಲ್ಲಬೇಕು ಅಂತಾ ಎರಡು ರಾಷ್ಟ್ರೀಯ ಪಕ್ಷಗಳು ಪ್ರತಿಷ್ಟೆಯಾಗಿ ತೆಗೆದುಕೊಂಡಿವೆ. ಪರಿಣಾಮ ಕಲಬುರಗಿ ಲೋಕಸಭಾ ಕ್ಷೇತ್ರವೊಂದರಲ್ಲೇ 200 ಕೋಟಿಗೂ ಹೆಚ್ಚು ಹಣದ ಹೊಳೆ ಹರಿಸಲು ಎರಡು ಪಕ್ಷಗಳ ಸಿದ್ದತೆ ನಡೆಸಿವೆಯಂತೆ. ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಪ್ರತಿ ಕ್ಷೇತ್ರಕ್ಕೆ ಕನಿಷ್ಟ ಅಂದ್ರು 12 ರಿಂದ 15 ಕೋಟಿ ರೂಪಾಯಿ ಹಂಚಲು ಎರಡು ಪಕ್ಷಗಳು ನಿರ್ಧರಿಸಿದ್ದು, ಈಗಾಗಲೇ ಹಣ ಹಂಚಿಕೆಯ ಬ್ಲೂ ಪ್ರಿಂಟ್ ಕೂಡ ರೆಡಿಯಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಕುರುಡು ಕಾಂಚಾಣಾ ಹರಿಯುವ ಹಿನ್ನೆಲೆ ಕಲಬುರಗಿ ಲೋಕಸಭೆ ಮೇಲೆ ಕೇಂದ್ರ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದ್ದು, ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಬೇಟೆಯಾಡಲು ಸಜ್ಜಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv