Tag: Lok Sabha Election 2024

  • ಲೋಕಸಭೆ ಟಾಸ್ಕ್ ಗೆಲ್ಲದೇ ಹೋದರೆ ಸಚಿವರ ತಲೆದಂಡ: ಪರಮೇಶ್ವರ್

    ಲೋಕಸಭೆ ಟಾಸ್ಕ್ ಗೆಲ್ಲದೇ ಹೋದರೆ ಸಚಿವರ ತಲೆದಂಡ: ಪರಮೇಶ್ವರ್

    ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಗೆಲ್ಲಲು ಸಚಿವರಿಗೆ ಹೈಕಮಾಂಡ್ ಟಾಸ್ಕ್ ನೀಡಿದೆ. ಟಾಸ್ಕ್‍ನಲ್ಲಿ ಉತ್ತಮ ಫಲಿತಾಂಶ ನೀಡದ ಸಚಿವರ ತಲೆದಂಡ ಕೂಡಾ ಆಗಲಿದೆ ಎಂದು ಹೈಕಮಾಂಡ್ ಎಚ್ಚರಿಕೆ ಕೊಟ್ಟಿದೆ ಎಂಬ ವಿಚಾರವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G.Parameshwar) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಸಚಿವರಿಗೆ ಟಾಸ್ಕ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಲೋಕಸಭೆಯಲ್ಲಿ ಉತ್ತಮ ರಿಸಲ್ಟ್ ಕೊಡದೇ ಇರುವ ಸಚಿವರ ತಲೆದಂಡ ಆಗುತ್ತದೆ ಎಂದು ಹೈಕಮಾಂಡ್ ಹೇಳಿದೆ. ಸಚಿವರ ಸ್ಪರ್ಧೆ ಬಗ್ಗೆ ನಿನ್ನೆಯ ಸಭೆಯಲ್ಲಿ ಮಾತಾಡಿಲ್ಲ. ನಿರೀಕ್ಷೆಯ ಫಲಿತಾಂಶ ಬಾರದೇ ಹೋದರೆ ಸಚಿವರ ತಲೆದಂಡವಾಗಲಿದೆ. ಸಚಿವರು ಚುನಾವಣೆ ಸಿರಿಯಸ್ ಆಗಿ ತೆಗೆದುಕೊಳ್ಳಬೇಕು. ಗೆಲ್ಲುವ ಕಡೆ ಸೋತರೆ ಅದನ್ನು ಸಹಿಸೋದಿಲ್ಲ. ಅದನ್ನ ನಾವು ಸಿರಿಯಸ್ ಆಗಿ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ 11 ದಿನಗಳ ವ್ರತದ ಮಹತ್ವ ಏನು?

    ಸಚಿವರು ಚುನಾವಣೆ ಸಿರಿಯಸ್ ಆಗಿ ತಗೊಂಡಿಲ್ಲ ಎಂದರೆ ಕಷ್ಟ ಆಗಲಿದೆ. ಸಚಿವರಂತೆ ಸಿಎಂ ಹಾಗೂ ಡಿಸಿಎಂಗೆ ಸಹ ಟಾಸ್ಕ್ ಅನ್ವಯ ಆಗುತ್ತಾ ಎಂಬ ಪ್ರಶ್ನೆಗೆ, ಯಾರಿಗೆ ಇದು ಅನ್ವಯ ಆಗುತ್ತೆ ಎನ್ನುವ ವಿಚಾರ ಗೊತ್ತಿಲ್ಲ. ನಮಗೆ ಜನರಲ್ ಆಗಿ ಅವರು ಹೇಳಿದ್ದಾರೆ. ಎಲ್ಲರೂ ಸಿರಿಯಸ್ ಆಗಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮುಂದೆ ಕಷ್ಟ ಆಗಲಿದೆ ಎಂದು ಎಚ್ಚರಿಕೆ ಕೋಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರಾಮೋತ್ಸವಕ್ಕೆ ರಾಜ್ಯದಿಂದ ಅಯೋಧ್ಯೆಗೆ ಹೆಚ್ಚುವರಿ ರೈಲು – ಇಲಾಖೆಯಿಂದ ಚಿಂತನೆ

  • ಬಿಜೆಪಿಗೆ ಹಿಜಬ್ ಅಸ್ತ್ರ, ಕಾಂಗ್ರೆಸ್‍ನಲ್ಲಿ ಸ್ಟ್ಯಾಂಡ್ ಗೊಂದಲ

    ಬಿಜೆಪಿಗೆ ಹಿಜಬ್ ಅಸ್ತ್ರ, ಕಾಂಗ್ರೆಸ್‍ನಲ್ಲಿ ಸ್ಟ್ಯಾಂಡ್ ಗೊಂದಲ

    – ಲೋಕಸಭಾ ಚುನಾವಣೆಯಲ್ಲಿ ಹಿಂದುತ್ವದ ವಿರುದ್ಧ ಸೆಟೆದು ನಿಲ್ಲುತ್ತಾ ಕಾಂಗ್ರೆಸ್?

    ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಹಿಜಬ್ (Hijab) ಸದ್ದು ಭಾರೀ ಸದ್ದು ಮಾಡುತ್ತಿದ್ದು, ಹಿಜಬ್ ನಿಷೇಧ ಆದೇಶದ ವಾಪಸ್ ಬಗ್ಗೆ ಮಾತಾಡಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ತೀರ್ಮಾನ ಆಗಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಈ ನಡುವೆ ಕಾಂಗ್ರೆಸ್ (Congress) ಸ್ಟ್ಯಾಂಡ್ ಬಗ್ಗೆ ಗೊಂದಲ ಉಂಟಾಗಿದ್ದು, ಕೆಪಿಸಿಸಿ ಅಧ್ಯಕ್ಷರು ತುಟಿಬಿಚ್ಚಿಲ್ಲ. ಈ ನಡುವೆ ಬಿಜೆಪಿ ಹಿಜಬ್ ಅಸ್ತ್ರ ಹಿಡಿದು ಸಿಎಂ ಮೇಲೆ ಮುಗಿಬಿದ್ದಿದೆ.

    ವಿಧಾನಸಭೆಗೆ ಸಾಫ್ಟ್ ಹಿಂದುತ್ವ, ಲೋಕಸಭೆಗೆ ನೇರಾ ನೇರ ಫೈಟ್, ಈ ಕಾಂಗ್ರೆಸ್ ಲೆಕ್ಕಾಚಾರ ಏನು? ಎಂಬ ಬಗ್ಗೆ ಚರ್ಚೆ ಕೂಡ ಶುರುವಾಗಿದೆ. ಹಿಜಬ್ ವಿಚಾರದಲ್ಲಿ ಕಾಂಗ್ರೆಸ್ ಸ್ಟ್ಯಾಂಡ್ ಬಿಜೆಪಿಗೆ ಅಸ್ತ್ರವಾಗಿದ್ದು, ಸಿಎಂ ಹೇಳಿಕೆಯಿಂದ ಕೆಪಿಸಿಸಿ ಅಧ್ಯಕ್ಷರಿಗೆ ತಳಮಳ ಶುರುವಾಗಿದೆ ಎನ್ನಲಾಗಿದೆ. ವಿಧಾನಸಭೆ ಚುನಾವಣೆ ವೇಳೆ ನಮ್ಮದು ಬದುಕಿನ ಜೊತೆ ಹೋರಾಟ, ಬಿಜೆಪಿಯವರದ್ದು ಭಾವನೆಗಳ ಜೊತೆ ಹೋರಾಟ ಎಂದಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ ಕಡೇ ತನಕವೂ ಎಚ್ಚರ ತಪ್ಪಿರಲಿಲ್ಲ. ಚುನಾವಣೆ ಮುಗಿಯುವ ತನಕ ಸಾಫ್ಟ್ ಹಿಂದುತ್ವದಲ್ಲೇ ಕೆಪಿಸಿಸಿ ಅಧ್ಯಕ್ಷರ ತಂತ್ರಗಾರಿಕೆ ನಡೆದಿತ್ತು. ಈಗ ಮುಸ್ಲಿಮರಿಗೆ ಸಂಪತ್ತು ಹಂಚಿಕೆ ವಿವಾದದ ಬಳಿಕ ಹಿಜಬ್ ವಾಪಸ್ ಎಂಬ ಸಿಎಂ ಘೋಷಣೆ ಗೊಂದಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಕುಮಾರಸ್ವಾಮಿ ಪಕ್ಷ ಉಳಿಸಿಕೊಳ್ಳಲು ಹೇಳಿಕೆ ನೀಡುತ್ತಿದ್ದಾರೆ ಡಿ.ಕೆ.ಸುರೇಶ್

    ಶುಕ್ರವಾರ ಮೈಸೂರಿನಲ್ಲಿ ಹಿಜಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದಿದ್ದ ಸಿಎಂ, ಈಗ ಸರ್ಕಾರ ಇನ್ನೂ ತೀರ್ಮಾನ ಮಾಡಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಇದರ ಜೊತೆಗೆ ಸಿಎಂ ಮಾತನ್ನ ಸಮರ್ಥನೆ ಮಾಡಿಕೊಂಡಿರುವ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಎರಡರಿಂದ ಮೂರು ದಿನದಲ್ಲಿ ಆದೇಶ ಆಗಲಿದೆ ಎಂದು ಗೊಂದಲ ಹುಟ್ಟು ಹಾಕಿದ್ದಾರೆ. ಈ ಬಗ್ಗೆ ಇಲ್ಲಿಯ ತನಕ ಕೆಪಿಸಿಸಿ ಅಧ್ಯಕ್ಷರು ಮಾತ್ರ ತುಟಿ ಬಿಚ್ಚಿಲ್ಲ.

    ಸಿಎಂ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧ ಮುಗಿಬಿದ್ದಿದೆ. ಹಿಂದುತ್ವ ಅಸ್ತ್ರವನ್ನ ಹಿಡಿದು ಲೋಕಸಭೆ ಸಮರಕ್ಕೆ ಇಳಿಯಲು ಸಜ್ಜಾದಂತೆ ಕಾಣ್ತಿದೆ. ಸಿದ್ದರಾಮಯ್ಯ ತುಷ್ಟೀಕರಣದ ಪರಾಕಾಷ್ಟೆ ಇದು. ಹಿಜಬ್ ಎಲ್ಲಾ ಕಡೆ ನಿಷೇಧ ಮಾಡಿಲ್ಲ, ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಇರುವ ಕಡೆ ನಿಷೇಧ ಆಗಿದೆ. ಹಾಗಾಗಿ ಶಾಲೆಗಳಲ್ಲಿ ಹಿಜಬ್ ಬೇಡ ಎಂದು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಅನೇಕರು ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿದ್ದಾರೆ.

    ಒಟ್ಟಾರೆ ಸಿಎಂ ಸಿದ್ದರಾಮಯ್ಯ ಅವರ ಮುಸ್ಲಿಂ ಸಮುದಾಯಕ್ಕೆ ಸಂಪತ್ತಿನ ಸಮಾನ ಹಂಚಿಕೆ, ಹಿಜಬ್ ನಿಷೇಧ ವಾಪಸ್ ಎರಡು ಹೇಳಿಕೆಗಳ ಬಗ್ಗೆ ಕೆಪಿಸಿಸಿಯಿಂದ ಸ್ಪಷ್ಟ ನಿಲುವು ಇರದಿದ್ದರೂ ಸಿಎಂ ಹೇಳಿಕೆ ಸಮರ್ಥನೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಉಂಟಾಗಿದೆ. ಈ ಬೆಳವಣಿಗೆಯಿಂದ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್ ನಿಲುವು ಹಿಂದುತ್ವದ ವಿರುದ್ಧ ಸೆಟೆದು ನಿಲ್ಲಲಿದೆಯೇ ಎಂಬ ಕುತೂಹಲ ಮನೆ ಮಾಡಿದೆ. ಇದನ್ನೂ ಓದಿ: ಹಿಜಬ್ ವಿಚಾರದಲ್ಲಿ ಸರ್ಕಾರದ ಆದೇಶ 2, 3 ದಿನದಲ್ಲಿ ಹೊರಬೀಳುತ್ತೆ: ಹೆಚ್.ಕೆ. ಪಾಟೀಲ್

  • ಲೋಕ ಸಮರಕ್ಕೆ ತಯಾರಿ – ಸಿಎಂ ಪುತ್ರ ಯತೀಂದ್ರಗೆ ಸಿಗುತ್ತಾ ಟಿಕೆಟ್?

    ಲೋಕ ಸಮರಕ್ಕೆ ತಯಾರಿ – ಸಿಎಂ ಪುತ್ರ ಯತೀಂದ್ರಗೆ ಸಿಗುತ್ತಾ ಟಿಕೆಟ್?

    ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election 2024) ಭರ್ಜರಿ ತಯಾರಿಯಲ್ಲಿರುವ ಕಾಂಗ್ರೆಸ್ (Congress), ಮೈಸೂರಿನಿಂದ (Mysuru) ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ. ಆದರೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮೌನವಾಗಿದ್ದು ಕಾದು ನೋಡುವ ತಂತ್ರ ಅನುಸರಿಸಿದ್ದಾರೆ.

    ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಮಾತುಗಳ ಬೆನ್ನಲ್ಲೇ ಕಾಂಗ್ರೆಸ್ ಈ ತಂತ್ರ ಹೆಣೆದಿದೆ ಎನ್ನಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಪುತ್ರನನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. ಇನ್ನೊಂದೆಡೆ ಈ ನಿರ್ಧಾರದಿಂದ ವಿರೋಧಿಗಳು ಮತ್ತೆ ಒಂದಾಗುವ ಆತಂಕ ಕೂಡ ಎದುರಾಗಿದೆ. ಹೀಗಾಗಿ ಪುತ್ರನ ಸ್ಪರ್ಧೆಗೆ ಸಿಎಂ ಹೆಚ್ಚಿನ ಒಲವು ತೋರಿಸುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದನ್ನೂ ಓದಿ: ಶನಿವಾರವೇ ಸುಪ್ರೀಂಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಸಿಎಂ ತೀರ್ಮಾನ; ತಜ್ಞರ ಸಲಹೆಗಳೇನು?

    ವಿರೋಧಿಗಳು ಒಂದಾದರೆ ಚುನಾವಣೆಯ ಫಲಿತಾಂಶದ ಬಗ್ಗೆ ಆತಂಕ ಕೂಡ ಇದೆ. ಇದೇ ಕಾರಣಕ್ಕೆ ಪುತ್ರನ ಭವಿಷ್ಯದ ಬಗ್ಗೆ ಕಾದು ನೋಡುವ ತಂತ್ರದಲ್ಲಿ ಸಿಎಂ ಇದ್ದಾರೆ. ಆದರೆ ಪಕ್ಷದಲ್ಲಿ ಮಾತ್ರ ಯತೀಂದ್ರ ಅವರನ್ನು ಕಣಕ್ಕಿಳಿಸುವ ಚರ್ಚೆ ಜೋರಾಗಿದೆ. ಇದರ ನಡುವೆಯೇ ಅವರಿಗೆ ಕ್ಷೇತ್ರದಲ್ಲಿ ಸ್ಲೋ ಡೌನ್ ಸಂದೇಶ ಇದೆ ಎಂಬ ಮಾತುಗಳು ಕೇಳಿ ಬಂದಿವೆ.

    ಈ ಕ್ಷೇತ್ರದಿಂದ ಅವರು ಕಣಕ್ಕಿಳಿದರೆ ರಾಜಕೀಯ ಲೆಕ್ಕಚಾರ ಬದಲಾಗುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗುತ್ತಿದೆ. ಅಲ್ಲದೇ ಪಕ್ಷದಲ್ಲಿ ಕ್ಷೇತ್ರದ ಟಿಕೆಟ್‌ಗಾಗಿ ಆಕಾಂಕ್ಷಿಗಳ ಪೈಪೋಟಿಗೆ ತಡೆಯಾಗಲಿದೆ. ಆದರೆ ಸಿಎಂ ಮಾತ್ರ ಪುತ್ರನನ್ನು ರಾಜ್ಯ ರಾಜಕಾರಣದಲ್ಲೇ ಉಳಿಸುವ ಬಗ್ಗೆ ಯೋಚನೆಯಲ್ಲಿದ್ದಾರೆ. ಇದೇ ಕಾರಣಕ್ಕೆ ಚುನಾವಣೆ ವರೆಗೂ ಈ ಬಗ್ಗೆ ತಟಸ್ಥವಾಗಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಕೂಡ ರಾಷ್ಟ್ರ ರಾಜಕಾರಣಕ್ಕೆ ನಾನು ಹೋಗುವುದಿಲ್ಲ ಎಂದಿದ್ದರು. ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಸಂಸದ ಅನಂತ್‌ಕುಮಾರ್ ಹೆಗಡೆ ಬಿಜೆಪಿ ಅಭ್ಯರ್ಥಿ: ಕಾಗೇರಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2024ಕ್ಕೆ ಮತ್ತೆ ಬರ್ತೀನಿ – ಹವಾ ಎಬ್ಬಿಸಿದ ಮೋದಿ ಟರ್ಮಿನೇಟರ್‌ ಪೋಸ್ಟರ್‌

    2024ಕ್ಕೆ ಮತ್ತೆ ಬರ್ತೀನಿ – ಹವಾ ಎಬ್ಬಿಸಿದ ಮೋದಿ ಟರ್ಮಿನೇಟರ್‌ ಪೋಸ್ಟರ್‌

    ನವದೆಹಲಿ: ಮುಂಬೈನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ‘INDIA’ ಸಭೆಗೆ ಮುನ್ನ ಬಿಜೆಪಿ ಇಂದು ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಅರ್ನಾಲ್ಡ್ ಶ್ವಾರ್ಜಿನೆಗ್ಗರ್ ಅಭಿನಯದ ‘ಟರ್ಮಿನೇಟರ್’ ಸಿನಿಮಾ ಫ್ರಾಂಚೈಸ್‌ನ ಕಾಲ್ಪನಿಕ ಸೈಬೋರ್ಗ್ ಪಾತ್ರ ಎಂದು ಬಿಂಬಿಸಿದೆ. ಪೋಸ್ಟರ್ ಅನ್ನು ಅವರ ಪ್ರಸಿದ್ಧ ಸಂಭಾಷಣೆಗೆ ಹೋಲಿಸಿ ಟ್ರೆಂಡ್‌ ಸೃಷ್ಟಿಸಿದೆ.

    ʻ2024! ನಾನು ಮರಳಿ ಬರುತ್ತೇನೆ!ʼಎಂದು ಪೋಸ್ಟರ್‌ ಮೇಲೆ ಬರೆಯಲಾಗಿದೆ. ಈ ಮೂಲಕ 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಒಗ್ಗಟ್ಟಿನ ಹೋರಾಟ ನಡೆಸುತ್ತಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡುವ ಪ್ರಯತ್ನವನ್ನು ಬಿಜೆಪಿ ಮಾಡಿದೆ.

    ಬಿಜೆಪಿಯ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಈ ಪೋಸ್ಟರ್‌ನ ಹಂಚಿಕೊಳ್ಳಲಾಗಿದೆ. ಪ್ರಧಾನಿ ಮೋದಿಯನ್ನು ಸೋಲಿಸಬಹುದು ಎಂದು ಪ್ರತಿಪಕ್ಷಗಳು ಭಾವಿಸುತ್ತಿವೆ. ಕನಸು ಕಾಣಿ! ಟರ್ಮಿನೇಟರ್ (Terminator) ಯಾವಾಗಲೂ ಗೆಲ್ಲುತ್ತಾನೆ’ ಎಂದು ಶೀರ್ಷಿಕೆಯನ್ನೂ ನೀಡಿದ್ದಾರೆ.

    ಮುಂಬೈನಲ್ಲಿ ‘ಐಎನ್‌ಡಿಐಎ’ ಸಭೆ:
    2024ರ ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳಲ್ಲೂ ರಾಜಕೀಯ ಚಟುವಟಿಕೆಗಳು ಶುರುವಾಗಿವೆ. ತಾಲೀಮು ನಡೆಯುತ್ತಿದೆ. ಪ್ರತಿಪಕ್ಷ ‘ಭಾರತ’ ಬಣಗಳು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ಕಾರ್ಯತಂತ್ರದ ಸಭೆಗಳನ್ನು ನಡೆಸಲಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2024ರ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ: ಅಮಿತ್‌ ಶಾ

    2024ರ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ: ಅಮಿತ್‌ ಶಾ

    ಅಗರ್ತಲಾ: 2024ರ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿಗೆ (BJP) ಪ್ರತಿ ಸ್ಪರ್ಧಿಯೇ ಇಲ್ಲ. ದೇಶದ ಜನತೆ ಪೂರ್ಣ ಹೃದಯದಿಂದ ಪ್ರಧಾನಿ ಮೋದಿ ಅವರ ಪರವಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪ್ರತಿಕ್ರಿಯಿಸಿದ್ದಾರೆ.

    ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, 2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷದ ಬಗ್ಗೆ ದೇಶದ ಜನರು ನಿರ್ಧರಿಸುತ್ತಾರೆ. ಅವರು ಯಾವುದೇ ಪಕ್ಷಕ್ಕೆ ವಿರೋಧ ಪಕ್ಷದ ಹಣೆಪಟ್ಟಿ ನೀಡಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಲ್‌ಟಿಟಿಇ ಮುಖ್ಯಸ್ಥ ಜೀವಂತವಾಗಿದ್ದಾನಾ? – ಇದು ತಮಾಷೆ ಎಂದ ಶ್ರೀಲಂಕಾ

    ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ಸೇರಿದಂತೆ ಈ ವರ್ಷ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಭಾರತವು ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ. ಆಂತರಿಕ ಭದ್ರತೆಯನ್ನು ಹೆಚ್ಚಿಸಲು ಮತ್ತು ರಕ್ಷಣೆಯಲ್ಲಿ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಸರ್ಕಾರ ತೆಗೆದುಕೊಂಡ ಕ್ರಮಗಳಿಂದಾಗಿ ದೇಶವು ವೇಗವಾಗಿ ಬೆಳೆಯುತ್ತಿದೆ ಎಂದು ಶಾ ಹೇಳಿದ್ದಾರೆ. ಇದನ್ನೂ ಓದಿ: ಭದ್ರಾವತಿ VISL ಮುಚ್ಚುತ್ತೇವೆ: ಕೇಂದ್ರದಿಂದ ಅಧಿಕೃತ ಉತ್ತರ

    ಎಂಟು ವರ್ಷಗಳ ಅವಧಿಯಲ್ಲಿ ದೇಶದ 60 ಕೋಟಿ ಬಡವರ ಜೀವನಮಟ್ಟವನ್ನು ಸುಧಾರಿಸುವಲ್ಲಿ ಯಶಸ್ವಿಯಾಗಿದ್ದೇವೆ. ರೈಲ್ವೆಯಲ್ಲಿ ಪ್ರಮುಖ ಬದಲಾವಣೆಗಳಿವೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ನೀತಿ ಇದೆ. ಹೊಸ ನೀತಿಯೊಂದಿಗೆ ನಾವು ಡ್ರೋನ್ ವಲಯದಲ್ಲಿ ಮುನ್ನಡೆಯುತ್ತಿದ್ದೇವೆ ಎಂದು ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k