Tag: Lok Sabha Election 2024

  • ಸಿದ್ದರಾಮಯ್ಯ ಇದ್ದರು ಒಮ್ಮೆಯೂ ಗೆದ್ದಿಲ್ಲ ಜನತಾ ಪರಿವಾರ – ಜನತಾ ಪರಿವಾರದ ಸೋಲಿನ ಚರಿತ್ರೆ

    ಸಿದ್ದರಾಮಯ್ಯ ಇದ್ದರು ಒಮ್ಮೆಯೂ ಗೆದ್ದಿಲ್ಲ ಜನತಾ ಪರಿವಾರ – ಜನತಾ ಪರಿವಾರದ ಸೋಲಿನ ಚರಿತ್ರೆ

    ಮೈಸೂರು: ಲೋಕಸಭಾ ಕ್ಷೇತ್ರದಲ್ಲಿ ಜನತಾ ಪರಿವಾರ ಅಥವಾ ಈಗಿನ ಜೆಡಿಎಸ್ ಒಮ್ಮೆಯೂ ಗೆಲುವಿನ ನಗೆ ಬೀರಿಯೆ ಇಲ್ಲ. ಜನತಾ ಪರಿವಾರದ ಘಟಾನುಘಟಿ ನಾಯಕರು ಮೈಸೂರಿನವರೆ (Mysuru Lok Sabha) ಆದರೂ ಕೂಡ ಜನತಾ ಪರಿವಾರಕ್ಕೆ ಇಲ್ಲಿ ಗೆಲವು ಮರೀಚಿಕೆಯೆ ಆಗಿದೆ.

    1983 ರಲ್ಲಿ ರಾಜ್ಯದಲ್ಲಿ ಪ್ರಥಮ ಕಾಂಗ್ರೆಸ್ಸೇತರ ಸರ್ಕಾರ ರಾಮಕೃಷ್ಣ ಹೆಗಡೆ ನೇತೃತ್ವದಲ್ಲಿ ರಚನೆಯಾಗಿದ್ದರಿಂದ, 1984 ರ ಲೋಕಸಭಾ ಚುನಾವಣೆ ಮಹತ್ವ ಪಡೆದುಕೊಂಡಿತ್ತು. ಮೈಸೂರಿನಿಂದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕಾಂಗ್ರೆಸ್ ಅಭ್ಯರ್ಥಿಯಾದರು. ಮೊದಲಿಗೆ ಜನತಾ ಪಕ್ಷವು ನಗರದ ಮೊದಲ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರೂ ಆಗಿದ್ದ ಮಾಜಿ ಸಚಿವ ಕೆ. ಪುಟ್ಟಸ್ವಾಮಿ ಅವರ ಪುತ್ರ ಪಿ. ವಿಶ್ವನಾಥ್ ಅವರಿಗೆ ಟಿಕೆಟ್ ನೀಡಿತು. ಅವರ ಬಿ ಫಾರಂ ಸಲ್ಲಿಸಿಯಾಗಿತ್ತು. ನಂತರ ಅಂದಿನ ಹನೂರು ಶಾಸಕ ಕೆ.ಪಿ. ಶಾಂತಮೂರ್ತಿ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಿತು. ಹೀಗಾಗಿ ಜನತಾಪಕ್ಷದ ‘ನೇಗಿಲು ಹೊತ್ತ ರೈತ’ ನ ಗುರುತು ವಿಶ್ವನಾಥ್ ಪಾಲಾಗಿದ್ದರಿಂದ ಶಾಂತಮೂರ್ತಿ ‘ಎರಡು ಎಲೆ’ ಗುರುತಿನಿಂದ ಜನತಾಪಕ್ಷ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತರು. ಇದನ್ನೂ ಓದಿ: ಇಲ್ಲಿ ಎಲ್ಲಾ ಜಾತಿಗೂ ಗೆಲುವು! ಎಲ್ಲಾ ಜಾತಿಗೂ ಸೋಲು!

    1989 ರ ಲೋಕಸಭಾ ಚುನಾವಣೆ ವೇಳೆಗೆ ಜನತಾಪಕ್ಷ ಇಬ್ಭಾಗವಾಗಿತ್ತು. ಜನತಾದಳದಿಂದ ಪ. ಮಲ್ಲೇಶ್ ಹಾಗೂ ಸಮಾಜವಾದಿ ಜನತಾ ಪಕ್ಷದಿಂದ ಡಿ. ಮಾದೇಗೌಡ ಸ್ಪರ್ಧಿಸಿ, ಸೋತರು. 1991 ರಲ್ಲಿ ಮತ್ತೆ ಡಿ. ಮಾದೇಗೌಡ ಜನತಾದಳ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪರಾಭವಗೊಂಡರು.

    1996 ರಲ್ಲಿ ಜಿ.ಟಿ.ದೇವೇಗೌಡ ಜನತಾದಳ ಅಭ್ಯರ್ಥಿಯಾಗಿ 11,676 ಮತಗಳ ಅಂತರದಿಂದ ಸೋತರು. 1998 ರಲ್ಲಿ ಜಿ.ಟಿ.ದೇವೇಗೌಡ ಮತ್ತೆ ಜನತಾದಳದ ಅಭ್ಯರ್ಥಿ. ಆದರೆ ಮೂರನೇ ಸ್ಥಾನಕ್ಕೆ ಹೋದರು. 1999 ರಲ್ಲಿ ಬಿ.ಎಸ್. ಮರಿಲಿಂಗಯ್ಯ ಜೆಡಿಎಸ್ ಅಭ್ಯರ್ಥಿಯಾಗಿ ಹೀನಾಯವಾಗಿ ಸೋತರು. 2004 ರಲ್ಲಿ ಮಾಜಿ ಶಾಸಕ ಎ.ಎಸ್. ಗುರುಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ 10,150 ಮತಗಳ ಅಂತರದಿಂದ ಸೋತರು. ಇದನ್ನೂ ಓದಿ: ಮೈಸೂರು ಕ್ಷೇತ್ರದಲ್ಲಿ 13 ಬಾರಿ ‘ಕೈ’, ನಾಲ್ಕು ಬಾರಿ ಕಮಲಕ್ಕೆ ಜೈ – ಒಂದೂ ಬಾರಿಯೂ ಗೆದ್ದಿಲ್ಲ ಜೆಡಿಎಸ್!

    2009 ರಲ್ಲಿ ಬಿ.ಎ. ಜೀವಿಜಯ, 2014 ರಲ್ಲಿ ನ್ಯಾ. ಚಂದ್ರಶೇಖರಯ್ಯ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಮೂರನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಒಟ್ಟಾರೆ 1996 ಹಾಗೂ 2004 ರಲ್ಲಿ ಜನತಾದಳ ಅಲೆ ಇದ್ದಿದ್ದರಿಂದ ಜನತಾ ಪರಿವಾರದ ಅಭ್ಯಥಿಗಳು ಗೆಲುವಿನ ಸಮೀಪ ಬಂದಿದ್ದರು, ಆದರೆ ಗೆಲ್ಲಲಾಗಲಿಲ್ಲ. ಸಿದ್ದರಾಮಯ್ಯ, ವಿ. ಶ್ರೀನಿವಾಸಪ್ರಸಾದ್, ಡಾ.ಹೆಚ್.ಸಿ. ಮಹದೇವಪ್ಪ, ಹೆಚ್.ಎಸ್. ಮಹದೇವಪ್ರಸಾದ್ ಅವರಂಥ ಘಟಾನುಘಟಿ ನಾಯಕರು ಪಕ್ಷದಲ್ಲಿ ಇದ್ದಾಗಲೇ ಜನತಾ ಪರಿವಾರ ಗೆದ್ದಿಲ್ಲ ಎಂಬುದು ವಿಶೇಷ.

  • ಬಿಜೆಪಿ-ಜೆಡಿಎಸ್ ಒಂದೇ ದೇಹದ ಎರಡು ಕಣ್ಣುಗಳು: ಹೆಚ್‍ಡಿಕೆ

    ಬಿಜೆಪಿ-ಜೆಡಿಎಸ್ ಒಂದೇ ದೇಹದ ಎರಡು ಕಣ್ಣುಗಳು: ಹೆಚ್‍ಡಿಕೆ

    – ಈ ಚುನಾವಣೆ ಒಂದು ಧರ್ಮಯುದ್ಧ ಎಂದ ಹೆಚ್‌ಡಿಕೆ

    ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಧರ್ಮಯುದ್ಧ ನಡೆಯುತ್ತಿದೆ. ಇಲ್ಲಿಯ ಅಧರ್ಮದ ರಾಜಕಾರಣಕ್ಕೆ ಉತ್ತರ ಕೊಡಲು ಮಂಜುನಾಥ್ ಅವರನ್ನು ಕಣಕ್ಕಿಳಿಸಿರೋದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಹೇಳಿದ್ದಾರೆ.

    ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಮಂಜುನಾಥ್ (Dr.C.N Manjunath) ಅವರು ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ಈ ಕಾರಣಕ್ಕೆ ಅಮಿತ್ ಶಾ ಮಂಜುನಾಥ್ ಅವರನ್ನು ಬಿಜೆಪಿ ಅಭ್ಯರ್ಥಿ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ (BJP-JDS) ಒಂದೇ ದೇಹದ ಎರಡು ಕಣ್ಣುಗಳಿದ್ದ ಹಾಗೆ. ಕಳೆದ ಎರಡು ಚುನಾವಣೆಯಲ್ಲಿ ನನ್ನ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದ್ದೀರಿ. ಇಡೀ ರಾಜ್ಯದಲ್ಲಿ ನಾನು ಚುನಾವಣೆಗೆ ಕೆಲಸ ಮಾಡ್ತಾ ಇದ್ದೀನಿ. ನನ್ನ ಹೃದಯ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿದೆ. ನಾನು ರಾಮನಗರ ಬಿಟ್ಟು ಹೋಗಲ್ಲ. ಇವತ್ತು ಅನಿವಾರ್ಯವಾಗಿ ಬಿಜೆಪಿ ಜೊತೆ ಅಭಿವೃದ್ಧಿಗಾಗಿ ಕೈ ಜೋಡಿಸಿದ್ದೇವೆ. ದಯಮಾಡಿ ನನ್ನ ಚನ್ನಪಟ್ಟಣದ ಜನರು ಕ್ಷಮಿಸಬೇಕು ಎಂದಿದ್ದಾರೆ.

    ಏ.4ಕ್ಕೆ ನಾನು ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿ ಬಳಿಕ ಇಲ್ಲಿಗೆ ಬರುತ್ತೇನೆ. ಅಂದು ಮಂಜುನಾಥ್ ಅವರು ನಾಮಪತ್ರ ಸಲ್ಲಿಸುತ್ತಾರೆ. ಅಂದು ಎಲ್ಲಾ ವಿಚಾರವನ್ನು ಪ್ರಸ್ತಾಪ ಮಾಡಲಿದ್ದೇನೆ. ದೇಶದ ಜನರು ಮೋದಿಯವರನ್ನು ಬೆಂಬಲಿಸಿದ್ದಾರೆ. ರಾಜ್ಯದಲ್ಲಿ 28 ಮೈತ್ರಿ ಅಭ್ಯರ್ಥಿಗಳು ಗೆಲ್ಲಬೇಕು. ಚನ್ನಪಟ್ಟಣ ಗಂಡು ಮೆಟ್ಟಿದ ನೆಲ. ಇಲ್ಲಿ ಅಮಿತ್ ಶಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಜನರಿಗೆ ಆಮೀಷ ತೋರಿಸುತ್ತಿದ್ದಾರೆ. ಸೀರೆ, ಕುಕ್ಕರ್‍ನ್ನು ಜನರಿಗೆ ನೀಡ್ತಾ ಇದ್ದಾರೆ. ಜನರಿಗಾಗಿ ಮಿಡಿಯುವ ಮಂಜುನಾಥ್ ಅವರನ್ನು ಗೆಲ್ಲಿಸಿ ಉತ್ತರ ಕೊಡಬೇಕು ಎಂದು ಅವರು ಹೇಳಿದ್ದಾರೆ.

    ಬಿಜೆಪಿ ಜೊತೆ ಸೇರಿ ಜೆಡಿಎಸ್ ಸತ್ತು ಹೋಗಿದೆ ಎಂದು ಕಾಂಗ್ರೆಸ್‍ನವರು ಹೇಳುತ್ತಿದ್ದಾರೆ. ಹಾಗೆ ಹೇಳುವವರಿಗೆ ಜೆಡಿಎಸ್ ಬದುಕಿಯೋ? ಸತ್ತಿದೆಯೋ ಎಂದು ಅವರಿಗೆ ಚನ್ನಪಟ್ಟಣದ ಜನ ಉತ್ತರ ಕೊಟ್ಟಿದ್ದೀರಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • ದೇಶ ಒಡೆಯುವ ಮಾತುಗಳನ್ನಾಡಿದವರಿಗೆ ಕಾಂಗ್ರೆಸ್ ಟಿಕೆಟ್: ಡಿಕೆಸು ವಿರುದ್ಧ ಮೋದಿ ಪರೋಕ್ಷ ವಾಗ್ದಾಳಿ

    ದೇಶ ಒಡೆಯುವ ಮಾತುಗಳನ್ನಾಡಿದವರಿಗೆ ಕಾಂಗ್ರೆಸ್ ಟಿಕೆಟ್: ಡಿಕೆಸು ವಿರುದ್ಧ ಮೋದಿ ಪರೋಕ್ಷ ವಾಗ್ದಾಳಿ

    ನವದೆಹಲಿ: ಕಾಂಗ್ರೆಸ್‍ಗೆ (DK Suresh) ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಈಗ ಭಾರತದಲ್ಲಿ ಅರಾಜಕತೆ ಮತ್ತು ಅಸ್ಥಿರತೆಯನ್ನು ಸೃಷ್ಠಿಸಲು ಬಯಸುತ್ತಿದೆ. ದೇಶವನ್ನು ಎರಡು ಭಾಗ ಮಾಡುವ ಬಗ್ಗೆ ಮಾತನಾಡಿದ ಕರ್ನಾಟಕದ ನಾಯಕನಿಗೆ ಟಿಕೆಟ್ ನೀಡಿದೆ ಎಂದು ಸಂಸದ ಡಿ.ಕೆ ಸುರೇಶ್ (DK Suresh) ಹೇಳಿಕೆ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಉತ್ತರಾಖಂಡದ ರುದ್ರಪುರದಲ್ಲಿ ಸಾರ್ವಜನಿಕ ರ‍್ಯಾಲಿಯಲ್ಲಿ (Uttarakhand BJP Rally) ಮಾತನಾಡಿದ ಅವರು, ಕೇವಲ 10 ವರ್ಷ ಅಧಿಕಾರದಿಂದ ದೂರ ಉಳಿದಿರುವ ಕಾಂಗ್ರೆಸ್ ಭಾರತದಲ್ಲಿ ಬೆಂಕಿ ಹೊತ್ತಿಸುವ ಬಗ್ಗೆ ಮಾತನಾಡಲು ಪ್ರಾರಂಭಿಸಿದೆ. ಅಂತಹವರಿಗೆ ನೀವು ಶಿಕ್ಷೆ ನೀಡುತ್ತೀರಾ? ಎಂದು ಜನರನ್ನು ಪ್ರಶ್ನಿಸಿದರು. ಈ ಬಾರಿಯ ಚುನಾವಣೆಯಲ್ಲಿ ಅವರನ್ನು ಕ್ಷೇತ್ರದಲ್ಲಿ ಬಿಡಬೇಡಿ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೇರಿ ಇಲ್ಲವೇ ಬಂಧನಕ್ಕೆ ಸಿದ್ಧರಾಗಿ – ಆಪ್ ಸಚಿವೆ ಅತಿಶಿ ಗಂಭೀರ ಆರೋಪ

    ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುವವರಿಗೆ ಶಿಕ್ಷೆಯಾಗಬೇಕಲ್ಲವೇ? ಅವರನ್ನು ಶಿಕ್ಷಿಸುವ ಬದಲು ಕಾಂಗ್ರೆಸ್ ಚುನಾವಣಾ (Lok Sabha Election 2024) ಟಿಕೆಟ್ ನೀಡಿದೆ ಎಂದು ಪರೋಕ್ಷವಾಗಿ ಡಿ.ಕೆ ಸುರೇಶ್ ಹೆಸರು ಹೇಳದೆಯೇ ಕಿಡಿ ಕಾರಿದ್ದಾರೆ.

    ಬಿಜೆಪಿ ಬೆಂಬಲಿಸುವಂತೆ ಮನವಿ:
    ನಾವು ಮಹಿಳೆಯರ ಸಬಲೀಕರಣಕ್ಕಾಗಿ `ನಮೋ ಡ್ರೋನ್ ದೀದಿ’ ಯೋಜನೆಯನ್ನು ಪ್ರಾರಂಭಿಸಿದ್ದೇವೆ. ಈ ಯೋಜನೆ ಅಡಿಯಲ್ಲಿ, ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಡ್ರೋನ್ ಪೈಲಟ್‍ಗಳಾಗಲು ಸಹಾಯ ಮಾಡಲು ಲಕ್ಷಾಂತರ ರೂಪಾಯಿ ಮೌಲ್ಯದ ಡ್ರೋನ್‍ಗಳನ್ನು ನೀಡಲಾಗುತ್ತಿದೆ. ಇದು ಉತ್ತರಾಖಂಡದ ನಮ್ಮ ಹೆಣ್ಣುಮಕ್ಕಳು ಮತ್ತು ಸಹೋದರಿಯರಿಗೂ ಪ್ರಯೋಜನ ನೀಡುತ್ತದೆ. ಉತ್ತರಾಖಂಡ ಅಭಿವೃದ್ದಿಗೆ ಕೇಂದ್ರ ಬದ್ಧವಾಗಿದೆ. ನಮ್ಮ ಇಚ್ಛೆ ಸರಿಯಾಗಿದ್ದರೆ ಅದರ ಫಲಿತಾಂಶವೂ ಸರಿಯಾಗಿರುತ್ತದೆ. ಮತ್ತಷ್ಟು ಕೆಲಸ ಮಾಡಲು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಹೊಸ ಮಧ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ – ಎಎಪಿ ಸಂಸದ ಸಂಜಯ್ ಸಿಂಗ್‌ಗೆ ಸುಪ್ರೀಂ ಜಾಮೀನು

  • 2.03 ಕೋಟಿ ಆಸ್ತಿ ಘೋಷಿಸಿಕೊಂಡ ಸಾರಿಗೆ ಸಚಿವರ ಪುತ್ರಿ ಸೌಮ್ಯಾ ರೆಡ್ಡಿ

    2.03 ಕೋಟಿ ಆಸ್ತಿ ಘೋಷಿಸಿಕೊಂಡ ಸಾರಿಗೆ ಸಚಿವರ ಪುತ್ರಿ ಸೌಮ್ಯಾ ರೆಡ್ಡಿ

    – 1.50 ಕೋಟಿ ರೂ. ಸಾಲ; ತಂದೆಯಿಂದಲೇ 56.28 ಲಕ್ಷ ಸಾಲ ಪಡೆದಿರೋ ಮಗಳು
    – ಮಾಜಿ ಶಾಸಕಿ ಮೇಲೆ 6 ಕ್ರಿಮಿನಲ್‌ ಕೇಸ್‌

    ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ (Sowmya Reddy) ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ (Congress) ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಜೊತೆಗೆ 2.03 ಕೋಟಿ ರೂ. ಆಸ್ತಿ ಘೋಷಿಸಿದ್ದಾರೆ. ಬ್ಯಾಂಕ್ ಹಾಗೂ ವೈಯಕ್ತಿಕ ಸಾಲ ಒಟ್ಟು 1.50 ಕೋಟಿ ರೂ. ಇವರ ಮೇಲಿದೆ.

    2022-23 ರಲ್ಲಿ ವಾರ್ಷಿಕ ಆದಾಯ 17.39 ಲಕ್ಷ ರೂ. ಇದೆ ಎಂದು ತಾವು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಸೌಮ್ಯಾ ರೆಡ್ಡಿ ತಿಳಿಸಿದ್ದಾರೆ. ಪ್ರಸ್ತುತ ನಗದು ಹಣ 44,135 ರೂ. ಹಾಗೂ ಬ್ಯಾಂಕ್ ಖಾತೆಯಲ್ಲಿ 40,96,352 ರೂ. ಹಣ ಹೊಂದಿದ್ದಾರೆ. ಇದನ್ನೂ ಓದಿ: ಪತ್ನಿ ಸೇರಿ ಒಟ್ಟು 60.78 ಕೋಟಿ ರೂ. ಆಸ್ತಿ ಘೋಷಿಸಿದ ಸೋಮಣ್ಣ

    19.85 ಲಕ್ಷ ರೂ. ಮೌಲ್ಯದ ಒಂದು ಇನ್ನೋವಾ ಕಾರು ಇವರ ಬಳಿಯಿದೆ. 5 ಕೆಜಿ ಬೆಳ್ಳಿ, 950 ಗ್ರಾಂ ಚಿನ್ನ (28,02,500 ಮೌಲ್ಯದ ಒಡವೆ) ಇದೆ. ಬೇಗೂರು ಬಳಿ 1.24 ಲಕ್ಷ ಮೌಲ್ಯದ ಪ್ಲಾಟ್ ಕೂಡ ಇದೆ. ಸಾರ್ವಜನಿಕ ಆಸ್ತಿ ಹಾನಿ ಸೇರಿದಂತೆ 6 ಪ್ರಕರಣಗಳು ಇವರ ಮೇಲಿದೆ.

    1.07 ಕೋಟಿ ರೂ. ಚರಾಸ್ತಿ ಹಾಗೂ 1.24 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. ಸೌಮ್ಯಾ ರೆಡ್ಡಿ ಅವರ ಬಳಿ ಯಾವುದೇ ಕೃಷಿ ಭೂಮಿ, ಕೃಷಿಯೇತರ ಭೂಮಿ, ವಾಣಿಜ್ಯ ಸಂಕೀರ್ಣಗಳು ಇಲ್ಲ. ಇದನ್ನೂ ಓದಿ: ಕಾರು, ನಿವೇಶನ ಹೊಂದಿಲ್ಲ – 4.99 ಕೋಟಿ ರೂ. ಆಸ್ತಿ ಘೋಷಿಸಿದ ಯದುವೀರ್‌

    ಸೌಮ್ಯಾ ರೆಡ್ಡಿ ಅವರು ಕೈ ಸಾಲ ಕೂಡ ಮಾಡಿದ್ದಾರೆ. ತಮ್ಮ ತಂದೆಯವರಿಂದಲೂ ಸಾಲ ಪಡೆದುಕೊಂಡಿದ್ದಾರೆ. ರಾಮಲಿಂಗಾ ರೆಡ್ಡಿ (Ramalinga Reddy) ತಮ್ಮ ಪುತ್ರಿಗೆ 56.28 ಲಕ್ಷ ರೂ. ಸಾಲ ನೀಡಿದ್ದಾರೆ.

  • ರಾಜವಂಶದವರು ಜನರ ಕೈಗೆ ಸಿಗ್ತಾರಾ? ಎದೆ ಮುಟ್ಟಿಕೊಂಡು ಸಿಗ್ತಾರೆ ಎನಿಸಿದ್ರೆ ಮತ ಹಾಕಿ: ಪೊನ್ನಣ್ಣ

    ರಾಜವಂಶದವರು ಜನರ ಕೈಗೆ ಸಿಗ್ತಾರಾ? ಎದೆ ಮುಟ್ಟಿಕೊಂಡು ಸಿಗ್ತಾರೆ ಎನಿಸಿದ್ರೆ ಮತ ಹಾಕಿ: ಪೊನ್ನಣ್ಣ

    – ಪ್ರತಾಪ್ ಸಿಂಹ ಹಲವಾರು ಕೆಲಸ ಮಾಡ್ತಿದ್ರು

    ಮಡಿಕೇರಿ: ಜನಸಾಮಾನ್ಯರಿಗೆ ಯದುವೀರ್ (Yaduveer Wadiyar) ಸಿಗ್ತಾರಾ? ರಾಜವಂಶದಿಂದ ಬಂದವರು ಜನರ ಕೈಗೆ ಸಿಗ್ತಾರೆ ಎಂಬ ಪ್ರಶ್ನೆಗೆ ಯಾರದರೂ ತಮ್ಮ ಎದೆ ಮುಟ್ಟಿಕೊಂಡು ಹೌದು ಎಂಬ ಉತ್ತರ ಸಿಕ್ಕರೆ ಮತ ಹಾಕಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ (A.S Ponnanna) ಹೇಳಿದ್ದಾರೆ.

    ಕೊಡಗಿನ ವಿರಾಜಪೇಟೆಯಲ್ಲಿ ಮಾತಾನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆ ಅಡಿಯಲ್ಲಿ ಆಯ್ಕೆಯಾಗಿ ಬಂದ ವ್ಯಕ್ತಿ ಪ್ರತಾಪ್ ಸಿಂಹ (Pratap Simha) ಹಲವಾರು ಕೆಲಸ ಮಾಡ್ತಾ ಇದ್ದರು. ಅವರಿಗೆ ಕಾರಣವೇ ನೀಡದೇ ವಿನಾಕಾರಣ ಎತ್ತಿ ದೂರ ಹಾಕಿದ್ದಾರೆ. ಆಸಕ್ತಿ ಇಲ್ಲದೇ ಇದ್ದವರನ್ನು ರಾಜಕೀಯಕ್ಕೆ ಕರೆತರುವ ಕೆಲಸ ಮಾಡಿದ್ದಾರೆ ಎಂದು ಸಂಸದರ ಪರ ಬ್ಯಾಟ್ ಬೀಸಿದ್ದಾರೆ. ಇದನ್ನೂ ಓದಿ: ಇಲ್ಲಿ ಎಲ್ಲಾ ಜಾತಿಗೂ ಗೆಲುವು! ಎಲ್ಲಾ ಜಾತಿಗೂ ಸೋಲು!

    ಸ್ಥಳೀಯವಾಗಿ 24/7 ಜನರೊಂದಿಗೆ ಇದ್ದರೂ ಅವರ ನಿರೀಕ್ಷೆಗಳನ್ನು ಮುಟ್ಟಲು ಸಾದ್ಯವಾಗುತ್ತಿಲ್ಲ. ಜನರು ಎಲ್ಲಾ ಸಮಸ್ಯೆಗಳು ಬಗೆಹರಿಯಬೇಕು ಎಂದು ಬಯಸುತ್ತಾರೆ. ಆ ನಿರೀಕ್ಷೆಯನ್ನು ಈಡೇರಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂಬುದು ಜನಪ್ರತಿನಿಧಿಯ ಕರ್ತವ್ಯ ಆಗಿರುತ್ತದೆ. ಈ ಕೆಲಸ ರಾಜಮನೆತನದಿಂದ ಬಂದವರ ಬಳಿ ಆಗುತ್ತಾ? ಈ ರೀತಿ ಜನ ಆಲೋಚಿಸುತ್ತಿದ್ದಾರೆ. ಯಾರು ಜನಸಾಮಾನ್ಯರ ಕೈಗೆ ಸಿಗ್ತಾರೆ, ಯಾರು ಜನರ ಸಮಸ್ಯೆಗೆ ಸ್ಪಂದಿಸುತ್ತಾರೆ. ಈಗ ಅವರ ಬಾಯಿಯಲ್ಲೇ ಬರುತ್ತಿದೆ. ಏಸಿ ರೂಮ್‍ನಲ್ಲಿ ಇದ್ದವರು ಪೊಲೀಸ್ ಠಾಣೆಗೆ ಬರುತ್ತಾರಾ? ಜನರಿಗೆ ಸಮಸ್ಯೆಯಾಗುವಾಗ ಅವರು ಬರುತ್ತಾರಾ? ಎಂದು, ಬಿಜೆಪಿ ಅಭ್ಯರ್ಥಿ ಯದುವೀರ್ ಹೆಸರು ಹೇಳದೆ ಟೀಕಿಸಿದ್ದಾರೆ.

    ರಾಷ್ಟ್ರೀಯ ನಾಯಕರು ಅವರನ್ನು ಆಯ್ಕೆ ಮಾಡಿಕೊಂಡಿರುವುದೇ ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನೆಯನ್ನು ಕೇಳಬೇಕು. ಪ್ರಶ್ನೆಗಳಿಗೆ ಉತ್ತರ ಸಿಗಬೇಕು. ಪ್ರಶ್ನೆ ಇಷ್ಟೇ, ಜನಸಾಮಾನ್ಯರಿಗೆ ಯದುವೀರ್ ಸಿಗ್ತಾರಾ? ಅವರಿಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಇದನ್ನು ಕೆಲ ತಿಂಗಳ ಹಿಂದೆ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಅವರೇ ಹೇಳಿದ್ದಾರೆ. ಈಗ ರಾಜಕೀಯ ಆಸಕ್ತಿ ಇಲ್ಲದೇ ಇರುವವರನ್ನು ಜನಸಾಮಾನ್ಯರ ಮೇಲೆ ಯಾಕೆ ಹೇರುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಇಂದು ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ

  • ಆರ್‌ಎಸ್‌ಎಸ್ ವಿಷ ಇದ್ದಂತೆ, ಟೇಸ್ಟ್ ನೋಡೋಕೆ ಯತ್ನಿಸಿದ್ರೆ ಸಾಯ್ತಿರಾ: ಮಲ್ಲಿಕಾರ್ಜುನ ಖರ್ಗೆ

    ಆರ್‌ಎಸ್‌ಎಸ್ ವಿಷ ಇದ್ದಂತೆ, ಟೇಸ್ಟ್ ನೋಡೋಕೆ ಯತ್ನಿಸಿದ್ರೆ ಸಾಯ್ತಿರಾ: ಮಲ್ಲಿಕಾರ್ಜುನ ಖರ್ಗೆ

    -ಮೋದಿ ಮೈತ್ರಿ ಆಹ್ವಾನ ತಿರಸ್ಕರಿಸಿದ್ದಕ್ಕೆ ಹೇಮಂತ್ ಸೊರೇನ್ ಬಂಧನ ಆರೋಪ

    ನವದೆಹಲಿ: ಆರ್‌ಎಸ್‌ಎಸ್ (RSS) ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು ಎಂದು ಪ್ರಯತ್ನಿಸಿದರೆ ಸಾವನ್ನಪ್ಪುತ್ತೀರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು‌ (Mallikarjun Kharge) ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಐ.ಎನ್.ಡಿ.ಐ.ಎ ಒಕ್ಕೂಟ ಸಭೆಯಲ್ಲಿ ಮಾತನಾಡಿದ ಅವರು ಆರ್‌ಎಸ್‌ಎಸ್ ಹಾಗೂ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ದೇಶಕ್ಕಾಗಿ ಏನು ಮಾಡಿದೆ? ಬ್ರಿಟಿಷರ ಪರವಾಗಿ ಸರ್ಕಾರಿ ನೌಕರಿ ಮಾಡುವಂತೆ ಹಾಗೂ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗಿಯಾಗದಂತೆ ಹೇಳುತ್ತಿತ್ತು ಎಂದಿದ್ದಾರೆ. ಇದನ್ನೂ ಓದಿ: ಮತ್ತೆ ಮೋದಿಯನ್ನ ಪ್ರಧಾನಿ ಮಾಡೋದು ಪರಿಶಿಷ್ಟರ ಸಂಕಲ್ಪ: ಪ್ರಹ್ಲಾದ್ ಜೋಶಿ

    ನಾವು ಚುನಾವಣಾ (Lok Sabha Election 2024) ಪ್ರಚಾರ ಮಾಡದಂತೆ ತಡೆಯಲಾಗುತ್ತಿದೆ. ಪ್ರಜಾಪ್ರಭುತ್ವದ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಐಟಿ, ಇಡಿ ಸಿಬಿಐ ಬಳಿಕ ವಿರೋಧ ಪಕ್ಷ ಇರಲಿ ತಮ್ಮ ಮೈತ್ರಿ ಪಕ್ಷಗಳನ್ನು ಹೆದರಿಸುತ್ತಿದ್ದಾರೆ. ಬೆದರಿಸಿ ಶಾಸಕರು, ಸಂಸದರನ್ನು ಖರೀದಿಸಿ ಸರ್ಕಾರ ರಚನೆ ಮಾಡಿದ್ದಾರೆ. ಮೋದಿಯವರು ತೊಲಗುವವರೆಗೂ ದೇಶದಲ್ಲಿ ಸಮೃದ್ಧಿ ಇರದು ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

    ಸಂವಿಧಾನ ಉಳಿಸಬೇಕು, ಸಂವಿಧಾನ ಉಳಿದರೆ ಮೀಸಲಾತಿ, ಬಡವರಿಗೆ ಹಕ್ಕುಗಳು ಲಭಿಸಲಿದೆ. ನಾವು ದೇಶಕ್ಕೆ ಸ್ವಾತಂತ್ರ್ಯ ಕೊಡಿಸಲು ರಕ್ತವನ್ನು ಹರಿಸಿದ್ದೇವೆ. ಇಂದಿರಾಗಾಂಧಿ, ರಾಜೀವ್ ಗಾಂಧಿ ಜೀವವನ್ನು ತೆತ್ತಿದ್ದಾರೆ. ಈಗ ದೇಶದಲ್ಲಿ ಕೆಲವು ನಾಯಕರ ಅಭಿವೃದ್ಧಿಯನ್ನಲ್ಲ, ಮೋದಿಯನ್ನ ಬಯಸುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

    ಮೈತ್ರಿಗಾಗಿ ಹೇಮಂತ್ ಸೊರೇನ್‍ಗೆ ಮೋದಿಯಿಂದ ಆಹ್ವಾನ ಬಂದಿತ್ತು. ಮೈತ್ರಿ ಒಪ್ಪದೇ ಇರುವುದಕ್ಕೆ ಅವರನ್ನು ಬಂಧಿಸಲಾಯಿತು. ಅವರನ್ನು ಚುನಾವಣೆ ಹೊತ್ತಲ್ಲಿ ಬಂಧಿಸುವ ಅಗತ್ಯ ಏನಿತ್ತು? ಬಿಜೆಪಿ ಸೋಲಿಸುವ ತನಕ ಶಾಂತಿ ನೆಲೆಸುವುದಿಲ್ಲ. 140 ಕೋಟಿ ಜನರ ರಕ್ಷಿಸಲು ಬಿಜೆಪಿ ಸೋಲಿಸಬೇಕು ಎಂದು ಅವರು ಕರೆಕೊಟ್ಟಿದ್ದಾರೆ. ಇದನ್ನೂ ಓದಿ: ವಿಕಸಿತ ಭಾರತಕ್ಕಾಗಿ ಈ ಚುನಾವಣೆ; ಜನ ಅಭಿವೃದ್ಧಿಯ ಟ್ರೇಲರ್ ಮಾತ್ರ ನೋಡಿದ್ದಾರೆ ಎಂದ ಮೋದಿ

  • ಮತ್ತೆ ಮೋದಿಯನ್ನ ಪ್ರಧಾನಿ ಮಾಡೋದು ಪರಿಶಿಷ್ಟರ ಸಂಕಲ್ಪ: ಪ್ರಹ್ಲಾದ್ ಜೋಶಿ

    ಮತ್ತೆ ಮೋದಿಯನ್ನ ಪ್ರಧಾನಿ ಮಾಡೋದು ಪರಿಶಿಷ್ಟರ ಸಂಕಲ್ಪ: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಪರಿಶಿಷ್ಟ ಸಮುದಾಯ ಈ ಬಾರಿಯೂ ನರೇಂದ್ರ ಮೋದಿಯವರನ್ನೇ (Narendra Modi) ಪ್ರಧಾನಿ ಮಾಡಲು ಸಂಕಲ್ಪ ತೊಟ್ಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.

    ಲೋಕಸಭಾ ಚುನಾವಣೆ (Lok Sabha Election 2024) ಹಿನ್ನಲೆಯಲ್ಲಿ ಏರ್ಪಡಿಸಿದ್ದ ಬಿಜೆಪಿ ಎಸ್‍ಸಿ ಮೋರ್ಚಾ (BJP SC Morcha )ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಮ್ಮ ಕೇಂದ್ರ ಸರ್ಕಾರ ಸಮಾಜದಲ್ಲಿ ಸಮಾನತೆ ತರಲೆಂದು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜನರು ಈ ಬಾರಿಯೂ ಮೋದಿ ಬೆಂಬಲಕ್ಕೆ ನಿಂತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ನರೇಂದ್ರ ಮೋದಿಯವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ನೋಡಲು ಸಂಕಲ್ಪ ಮಾಡಿ ಬಿಜೆಪಿ ಎಸ್‌ಸಿ ಮೋರ್ಚಾ ಮುಖಂಡರು ಮತ್ತು ಪದಾಧಿಕಾರಿಗಳು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಎಸ್‍ಸಿ ಮೋರ್ಚಾ ಕಾರ್ಯಕರ್ತರ ಸುಮಾವೇಶ ಹಮ್ಮಿಕೊಂಡಿದ್ದು, ಅಗತ್ಯ ಸಿದ್ಧತೆ ನಡೆದಿದೆ ಎಂದಿದ್ದಾರೆ.

    ಸಮಾವೇಶ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಭಾನುವಾರವೂ (ಮಾ.31) ಎಲ್ಲಾ ಪದಾಧಿಕಾರಿಗಳ ಪೂರ್ವಭಾವಿ ಸಭೆ ಕರೆದು ಚರ್ಚಿಸಲಾಯಿತು. ಸಭೆಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಪಕ್ಷದ ಪ್ರಮುಖರಾದ ಬಸವರಾಜ ಅಮ್ಮಿನಬಾವಿ, ಮಹೇಂದ್ರ ಕೌತಾಳ ಹಾಗೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

  • ವಿಕಸಿತ ಭಾರತಕ್ಕಾಗಿ ಈ ಚುನಾವಣೆ; ಜನ ಅಭಿವೃದ್ಧಿಯ ಟ್ರೇಲರ್ ಮಾತ್ರ ನೋಡಿದ್ದಾರೆ ಎಂದ ಮೋದಿ

    ವಿಕಸಿತ ಭಾರತಕ್ಕಾಗಿ ಈ ಚುನಾವಣೆ; ಜನ ಅಭಿವೃದ್ಧಿಯ ಟ್ರೇಲರ್ ಮಾತ್ರ ನೋಡಿದ್ದಾರೆ ಎಂದ ಮೋದಿ

    – ನಾನೂ ಬಡತನದಲ್ಲಿ ಬದುಕಿದ್ದೇನೆ – ಬಡವರ ದುಃಖ, ನೋವು ನನಗೆ ಅರ್ಥವಾಗುತ್ತದೆ

    ಲಕ್ನೋ: ಈ ಬಾರಿಯ ಲೋಕಸಭಾ ಚುನಾವಣೆ (Lok Sabha Election 202) `ವಿಕಸಿತ ಭಾರತ’ ವನ್ನು (Viksit Bharat) ನಿರ್ಮಾಣ ಮಾಡುವ ಉದ್ದೇಶಕ್ಕಾಗಿ ನಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

    ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡ ಬಳಿಕ ಉತ್ತರ ಪ್ರದೇಶದಲ್ಲಿ (Uttar Pradesh) ತಮ್ಮ ಮೊದಲ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಕೇವಲ ಸರ್ಕಾರ ರಚನೆಗಾಗಿ ಮಾತ್ರ ಚುನಾವಣೆ ನಡೆಯುವುದಿಲ್ಲ. ಜನರು ದೇಶದ ಅಭಿವೃದ್ಧಿಯ ಟ್ರೇಲರ್ ಅನ್ನು ಮಾತ್ರ ನೋಡಿದ್ದಾರೆ. ಮುಂದಿನ 5 ವರ್ಷಕ್ಕೆ ಬೇಕಾದ ಮಾರ್ಗಸೂಚಿಯನ್ನು ನಮ್ಮ ಸರ್ಕಾರ ಸಿದ್ಧಪಡಿಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಮಿತ್‌ ಶಾ ವಿರುದ್ಧ ʻರೌಡಿʼ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ಪುತ್ರ – ಮೋದಿ ವಿರುದ್ಧವೂ ವಾಗ್ದಾಳಿ

    ಈಗಾಗಲೇ ಮೂರನೇ ಅವಧಿಗೆ ನಮ್ಮ ಸರ್ಕಾರ ಸಿದ್ಧತೆಗಳನ್ನು ಪ್ರಾರಂಭಿಸಿದೆ. ನಾವು ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ತಯಾರಿಸುತ್ತಿದ್ದೇವೆ. ಮೊದಲ 100 ದಿನಗಳಲ್ಲಿ ನಾವು ಯಾವ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಅನ್ನೋ ಬಗೆಗಿನ ಕೆಲಸಗಳು ವೇಗವಾಗಿ ನಡೆಯುತ್ತಿವೆ. ಕಳೆದ 10 ವರ್ಷಗಳಲ್ಲಿ, ಜನರು ಅಭಿವೃದ್ಧಿಯ ಟ್ರೇಲರ್‍ನ್ನು ಮಾತ್ರ ನೋಡಿದ್ದೀರಿ, ಈಗ ನಾವು ದೇಶವನ್ನು ಇನ್ನೂ ಹೆಚ್ಚು ಮುಂದಕ್ಕೆ ಕೊಂಡೊಯ್ಯಬೇಕಾಗಿದೆ ಎಂದಿದ್ದಾರೆ.

    ನಾನು ಬಡತನದಲ್ಲಿ ಬದುಕಿದ್ದೇನೆ. ಹಾಗಾಗಿಯೇ ಪ್ರತಿಯೊಬ್ಬ ಬಡವರ ದುಃಖ ಮತ್ತು ನೋವು ನನಗೆ ಚೆನ್ನಾಗಿ ಅರ್ಥವಾಗುತ್ತದೆ. ನಾವು ಬಡವರ ಪ್ರತಿಯೊಂದು ಸಮಸ್ಯೆಯನ್ನು ಪರಿಹರಿಸಲು ಯೋಜನೆಗಳನ್ನು ಕೈಗೊಂಡಿದ್ದೇವೆ. ಬಡವರ ಸಬಲೀಕರಣ ಮಾತ್ರ ಮಾಡಿಲ್ಲ. ಬಡವರ ಆತ್ಮಗೌರವವನ್ನು ಅವರಿಗೆ ಮರಳಿಸಿದ್ದೇವೆ ಎಂದಿದ್ದಾರೆ.

    ಇತ್ತೀಚೆಗೆ ಬಿಜೆಪಿ ನೇತೃತ್ವದ ಎನ್‍ಡಿಎ ಸೇರ್ಪಡೆಗೊಂಡ ರಾಷ್ಟ್ರೀಯ ಲೋಕದಳದ ಅಧ್ಯಕ್ಷ ಜಯಂತ್ ಚೌಧರಿ ಅವರು ರ‍್ಯಾಲಿಯಲ್ಲಿ ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಂಡರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹರಿಯಾಣ ಸಿಎಂ ನಾಯಬ್ ಸಿಂಗ್ ಸೈನಿ ಹಾಗೂ ಮೀರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ, ರಾಮಾಯಣ ಧಾರಾವಾಹಿ ಖ್ಯಾತಿಯ ಹಿರಿಯ ನಟ ಅರುಣ್ ಗೋವಿಲ್ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಮ್ಯಾಚ್‌ ಫಿಕ್ಸಿಂಗ್‌ ಇಲ್ಲದೇ 400 ಸೀಟು ಗೆಲ್ಲಲು ಸಾಧ್ಯವಿಲ್ಲ – ಮೋದಿ ವಿರುದ್ಧ ಘರ್ಜಿಸಿದ ರಾಗಾ

  • ಅಮಿತ್‌ ಶಾ ವಿರುದ್ಧ ʻರೌಡಿʼ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ಪುತ್ರ – ಮೋದಿ ವಿರುದ್ಧವೂ ವಾಗ್ದಾಳಿ

    ಅಮಿತ್‌ ಶಾ ವಿರುದ್ಧ ʻರೌಡಿʼ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ಪುತ್ರ – ಮೋದಿ ವಿರುದ್ಧವೂ ವಾಗ್ದಾಳಿ

    ಮಡಿಕೇರಿ: ಇತ್ತೀಚೆಗಷ್ಟೇ ಅಮಿತ್ ಶಾ ಓರ್ವ ಗೂಂಡಾ, ರೌಡಿ ಎಂದು ಹೇಳಿಕೆ ನೀಡಿದ್ದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಜೊತೆಗೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕೊಡಗಿನ ವಿರಾಜಪೇಟೆಯಲ್ಲಿಂದು ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ತಮ್ಮ ಹೇಳಿಕೆ ಖಂಡಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಅಮಿತ್‌ ಶಾ ಅವರನ್ನ ರೌಡಿ ಎಂದು ನಾನೇ ಹುಟ್ಟಿಸಿಕೊಂಡು ಹೇಳಿದಂತಹ ಮಾತಲ್ಲ, ಈ ಹಿಂದೆ ಸಿಬಿಐ ಕೂಡ ಹೇಳಿತ್ತು. ಅಮಿತ್ ಶಾ ಅವರಿಗೆ ಕ್ರಿಮಿನಲ್ ಬ್ಯಾಗ್ರೌಂಡ್‌ ಇದೆ ಅಂತ ಹೇಳಿದೆ ಎಂದು ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.

    2010ರಲ್ಲಿ ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ ಗುಜರಾತ್ ಕೋರ್ಟ್‌ಗೆ ಸಿಬಿಐ ಕೊಟ್ಟ ಹೇಳಿಕೆ ಅದು. ಅದೇ ಹೇಳಿಕೆಯನ್ನು ನಾನು ಪುನರುಚ್ಚರಿಸಿದ್ದೇನೆ ಅಷ್ಟೇ. ನನ್ನ ಹೇಳಿಕೆಯಿಂದ ಬಿಜೆಪಿಗೆ ಕೋಪ ಬಂದಿದ್ದರೇ, ಮೊದಲು ಸಿಬಿಐ ಮೇಲೆ ಅವರು ಕೋಪ ಮಾಡಿಕೊಳ್ಳಬೇಕು. ಈಗಾಗಲೇ ನನಗೆ ಚುನಾವಣಾ ಆಯೋಗ ನೋಟಿಸ್ ಕೊಟ್ಟಿದೆ. ಅದಕ್ಕೆ ನಾನು ಏನು ಉತ್ತರ ಕೊಡಬೇಕೋ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ಓರ್ವ ಗೂಂಡಾ, ರೌಡಿ ಗುಜರಾತ್‍ನಲ್ಲಿ ನರಮೇಧ ಮಾಡಿದ್ರು: ಯತೀಂದ್ರ ಸಿದ್ದರಾಮಯ್ಯ

    ಮೋದಿ ವಿರುದ್ಧವೂ ಯತೀಂದ್ರ ಕಿಡಿ:
    ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. ಈ‌ ಹತ್ತು ವರ್ಷಗಳಲ್ಲಿ ದೇಶವನ್ನು ಎಷ್ಟು ಹಾಳು ಮಾಡಲು ಸಾಧ್ಯವೋ ಅಷ್ಟು ಹಾಳುಮಾಡಿದ್ದಾರೆ. ಮೋದಿ ಸರ್ಕಾರದ ಬಂದ ಮೇಲೆ ನಮ್ಮ ದೇಶ 25 ವರ್ಷ ಹಿಂದಕ್ಕೆ ಹೋಗಿದೆ. ಕೇಂದ್ರ ಸರ್ಕಾರ ಈ ಹಿಂದೆ ಜನರಿಗೆ ಏನು ಭರವಸೆ ನೀಡಿತ್ತೋ ಅದನ್ನು ನೆರವೇರಿಸಿಲ್ಲ ಎಂದು ಯತೀಂದ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರದಿಂದ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್‌ಗೆ ಟಿಕೆಟ್‌; ಅಧಿಕೃತ ಘೋಷಣೆ

    ಮೋದಿ ಅವರು ಶ್ರೀಮಂತರ ಕಪ್ಪು ಹಣ ತರುತ್ತೀನಿ ಎಲ್ಲರ ಬ್ಯಾಂಕ್ ಖಾತೆಗೆ ಹಣ ಹಾಕ್ತೀನಿ ಅಂತಾ ಹೇಳಿದ್ದರು. ಸುಪ್ರೀಂ ಕೋರ್ಟ್‌ ಕಪ್ಪು ಹಣ ಇಟ್ಟವರ ಪಟ್ಟಿ ಕೇಳಿದಾಗ, ಆ ಪಟ್ಟಿಯೇ ಇಲ್ಲ ಅಂತ ಹೇಳಿದರು. ರೈತರ ಬದುಕು ಹಸನಾಗಿ ಮಾಡ್ತೀನಿ ಅಂದ್ರು, ಅದು ಇಂದಿಗೂ ಮಾಡಿಲ್ಲ. ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆಂದೋಲನ ನಡೆಸಿದ್ರು. ಆದ್ರೆ ಇವತ್ತು ಭ್ರಷ್ಟಾಚಾರ ಬಿಜೆಪಿಯಲ್ಲಿ ಮಿತಿಮೀರಿ ಹೋಗಿದೆ. ಚುನಾವಣಾ ಬಾಂಡ್‌ ವಿಚಾರದಲ್ಲಿ 12,000 ಕೋಟಿ ರೂ.ನಲ್ಲಿ 6 ಸಾವಿರ ಕೋಟಿ ಹಣ ಹೋಗಿರುವುದು ಬಿಜೆಪಿ ಪಕ್ಷಕ್ಕೆ. ನ್ಯಾಯಾಲಯಗಳನ್ನೂ ತಪ್ಪ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.

    ಈ ಬಾರಿ 400ಕ್ಕೂ ಹೆಚ್ಚು ಸೀಟ್‌ಗಳನ್ನ ಗೆದ್ದು ಬರುತ್ತೇವೆ ಎಂದಿದ್ದಾರೆ. 400ಕ್ಕೂ ಹೆಚ್ಚು ಸೀಟ್ ಗೆಲುವು ಯಾಕೆ ಬೇಕು ಅಂತ ಅವರ ಪಕ್ಷದ ಅನಂತ್ ಕುಮಾರ್ ಹೆಗ್ಡೆ ಅವರೇ ಸತ್ಯ ಬಿಚ್ಚಿಟ್ಟಿದ್ದಾರೆ. ಆದ್ದರಿಂದ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸಂವಿಧಾನವನ್ನು ಬದಲಾವಣೆ ಮಾಡುತ್ತಾರೆ. ದೇಶದಲ್ಲಿ ಸರ್ವಾಧಿಕಾರ ಸರ್ಕಾರ ಆಡಳಿತಕ್ಕೆ ಬರುತ್ತದೆ. ಸಮಾನತೆ ಹೋಗಿ ಅಸಮಾನತೆ ಸೃಷ್ಟಿಯಾಗುತ್ತದೆ ಎಂದು ಆತಂಕಪಟ್ಟಿದ್ದಾರೆ. ಇದನ್ನೂ ಓದಿ: ಮ್ಯಾಚ್‌ ಫಿಕ್ಸಿಂಗ್‌ ಇಲ್ಲದೇ 400 ಸೀಟು ಗೆಲ್ಲಲು ಸಾಧ್ಯವಿಲ್ಲ – ಮೋದಿ ವಿರುದ್ಧ ಘರ್ಜಿಸಿದ ರಾಗಾ

  • ಸುಮಲತಾ ನಿರ್ಧಾರ ಪ್ರಕಟಕ್ಕೂ ಮುನ್ನವೇ ಆಪ್ತನಿಂದ ಶಾಕ್ – ಹೆಚ್‍ಡಿಕೆ ಪರ ಪ್ರಚಾರಕ್ಕಿಳಿದ ಸಚ್ಚಿದಾನಂದ

    ಸುಮಲತಾ ನಿರ್ಧಾರ ಪ್ರಕಟಕ್ಕೂ ಮುನ್ನವೇ ಆಪ್ತನಿಂದ ಶಾಕ್ – ಹೆಚ್‍ಡಿಕೆ ಪರ ಪ್ರಚಾರಕ್ಕಿಳಿದ ಸಚ್ಚಿದಾನಂದ

    – ಕಾಂಗ್ರೆಸ್ ಸಂವಿಧಾನದ ವಿರುದ್ಧವಾಗಿ ರಾಜ್ಯ ಸರ್ಕಾರಗಳ ವಜಾ ಮಾಡಿತ್ತು

    ಮಂಡ್ಯ: ಸಂಸದೆ ಸುಮಲತಾ (Sumalatha) ರಾಜಕೀಯ ನಡೆ ಪ್ರಕಟಕ್ಕೂ ಮುನ್ನವೇ ಅವರ ಆಪ್ತ ಇಂಡುವಾಳು ಸಚ್ಚಿದಾನಂದ (Induvalu Sachidananda), ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಪರ ಪ್ರಚಾರಕ್ಕಿಳಿದಿದ್ದಾರೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಸುಮಲತಾ ಬೆನ್ನಿಗೆ ನಿಂತಿದ್ದ ಸಚ್ಚಿದಾನಂದ, ಈ ಬಾರಿಯೂ ತಮ್ಮ ಪರವಾಗಿ ನಿಲ್ಲುತ್ತಾರೆಂಬ ನಿರೀಕ್ಷೆಯಲ್ಲಿದ್ದ ಅವರಿಗೆ ಇದರಿಂದ ದೊಡ್ಡ ಆಘಾತ ಉಂಟಾಗಿದೆ.

    ಶ್ರೀರಂಗಪಟ್ಟಣದ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಸಚ್ಚಿದಾನಂದ ಅವರು ಭಾಗಿಯಾಗಿದ್ದಾರೆ. ಶನಿವಾರ ನಡೆದ ಸುಮಲತಾ ಬೆಂಬಲಿಗರ ಸಭೆಗೂ ಅವರು ಗೈರಾಗಿದ್ದರು. ಈ ಮೂಲಕ ಸುಮಲತಾ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ರೆ ತಮ್ಮ ಬೆಂಬಲ ಇಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಅಪ್ಪ-ಮಗಳನ್ನು ದೂರ ಮಾಡಿದ ಅಪಕೀರ್ತಿ ಬೇಡ ಎಂದು ಸುಮ್ಮನಿದ್ದೇನೆ: ಡಿಕೆಶಿ

    ಸಭೆಯಲ್ಲಿ ಮಾತನಾಡಿರುವ ಸಚ್ಚಿದಾನಂದ ಅವರು, ಸಮಾಜದ ತಳ ಸಮುದಾಯದವರನ್ನು ಗುರುತಿಸಿ ಅವಕಾಶ ನೀಡಿದ್ದು ಪ್ರಧಾನಿ ಮೋದಿ, ಏ.2 ರಂದು ಬಿಜೆಪಿಯಿಂದ ನಾವು ಸಭೆ ಮಾಡುತ್ತೇವೆ. ಆ ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಲ್ಲ. ಅವರು ನಮ್ಮ ಮೈತ್ರಿ ಆಭ್ಯರ್ಥಿ ಎಂದು ಘೋಷಣೆ ಮಾಡಿ ಬೆಂಬಲ ನೀಡುತ್ತೇವೆ. ಈ ಮೂಲಕ ಮೋದಿಯವರ ಗೆಲುವಿಗೆ ನಾವು ಕುಮಾರಣ್ಣಾ ಅವರಿಗೆ ಬೆಂಬಲ ನೀಡಬೇಕು. ದೇಶ ಕಟ್ಟುವ ಕೆಲಸ ಮೋದಿ ಮಾಡಿದ್ದಾರೆ. ಅವರಿಂದ ದೇಶದಲ್ಲಿ ಅಪಾರ ಅಭಿವೃದ್ಧಿಯಾಗಿದೆ. ಸುಭದ್ರ ದೇಶ ಕಟ್ಟಲು ನರೇಂದ್ರ ಮೋದಿಯವರು ಅವಶ್ಯಕ, ಮತ್ತೆ ಮೋದಿ ಪ್ರಧಾನಿಯಾಗಬೇಕು ಎಂದಿದ್ದಾರೆ.

    ಹೆಚ್‍ಡಿಕೆ ಆರೋಗ್ಯದ ಬಗ್ಗೆ ಕೆಲವರು ಟೀಕೆ ಮಾಡುತ್ತಿದ್ದಾರೆ. ರಮೇಶ್ ಬಂಡಿಸಿದ್ದೇಗೌಡ ಕ್ಷೇತ್ರದಲ್ಲಿ ಗೆದ್ದಿದ್ದು ಹೇಗೆ? ಅವರಿಗೆ ಬೆಂಬಲವಾಗಿ ದೊಡ್ಡಗೌಡರು ಹೇಗೆ ಸಹಕಾರ ನೀಡಿದರು. ಅದನ್ನೆಲ್ಲಾ ದೊಡ್ಡಗೌಡರು ಇಲ್ಲಿ ಬಂದು ಹೇಳಬೇಕು ಎಂದಿದ್ದಾರೆ.

    ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ಕಾಂಗ್ರೆಸ್ ಅತಿ ಹೆಚ್ಚು ತಿದ್ದುಪಡಿ ಮಾಡಿತ್ತು. 300ಕ್ಕೂ ಹೆಚ್ಚು ಸಲ ಕಾಂಗ್ರೆಸ್ ತಿದ್ದುಪಡಿ ಮಾಡಿದೆ. ಕಾಂಗ್ರೆಸ್ ಸಂವಿಧಾನ ವಿರೋಧವಾಗಿ ರಾಜ್ಯ ಸರ್ಕಾರಗಳನ್ನು ವಜಾ ಮಾಡಿತ್ತು. ಪ್ರಧಾನಿ ಮೋದಿ ಅವರು ಯಾವುದೇ ರಾಜ್ಯ ಸರ್ಕಾರವನ್ನು ವಜಾ ಮಾಡಿದ ಉದಾಹರಣೆ ಇಲ್ಲ ಎಂದು ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಮಾಜದಲ್ಲಿ ಬದಲಾವಣೆ ತರಲು ಕಾಂಗ್ರೆಸ್‌ ಸೇರಲು ಚಿಂತನೆ: ನಿಶಾ ಯೋಗೇಶ್ವರ್‌