Tag: Lok Sabha Elections

  • ಲೋಕಸಭೆ ಚುನಾವಣೆ: RSS ಹಿನ್ನೆಲೆಯುಳ್ಳ ಅಭ್ಯರ್ಥಿಗಳು ಬಿಜೆಪಿಯಿಂದ ಕಣಕ್ಕೆ?

    ಲೋಕಸಭೆ ಚುನಾವಣೆ: RSS ಹಿನ್ನೆಲೆಯುಳ್ಳ ಅಭ್ಯರ್ಥಿಗಳು ಬಿಜೆಪಿಯಿಂದ ಕಣಕ್ಕೆ?

    ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ (Lok Sabha Elections) ಸಂಬಂಧಿಸಿದಂತೆ ಬಿಜೆಪಿ (BJP) ಶೀಘ್ರದಲ್ಲೇ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಹಾಗಾಗಿ ಯಾವ ಕ್ಷೇತ್ರದಿಂದ ಯಾರು ಅಭ್ಯರ್ಥಿ ಆಗ್ತಾರೆ ಅನ್ನೋದು ಕುತೂಹಲ ಮೂಡಿಸಿದೆ.

    ರಾಜ್ಯಸಭೆಗೆ ಬಿಜೆಪಿಯಿಂದ ಸಂಘ ಪರಿವಾರ ಹಿನ್ನೆಲೆಯ ಅಭ್ಯರ್ಥಿ ಆಯ್ಕೆ ಬೆನ್ನಲ್ಲೇ ಲೋಕಸಭೆಗೂ ಆರ್‌ಎಸ್‌ಎಸ್ (RSS) ಹಿನ್ನೆಲೆಯುಳ್ಳ ಅಭ್ಯರ್ಥಿಗಳನ್ನು ಬಿಜೆಪಿ ಕಣಕ್ಕಿಳಿಸುವ ಚಿಂತನೆ ನಡೆಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಸಂಘಪರಿವಾರದ ಹಿನ್ನೆಲೆಯುಳ್ಳವರನ್ನು ಕಣಕ್ಕಿಳಿಸಲು ಬಿಜೆಪಿ ಈಗಾಗಲೇ ತಾಲೀಮು ಆರಂಭಿಸಿದ್ದು, ಸಂಘದ ಬಲ ಯಾವ ಕ್ಷೇತ್ರಗಳಲ್ಲಿ ಹೇಗಿದೆ? ಎಂಬ ಬಗ್ಗೆ ಸರ್ವೆಯನ್ನೂ ಕೈಗೊಂಡಿದೆ. ಸೋಲು-ಗೆಲುವಿನ ಲೆಕ್ಕಾಚಾರಗಳನ್ನಿಟ್ಟುಕೊಂಡು ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Rajyasabha Polls: ಗುಜರಾತ್‌ನಿಂದ ಜೆ.ಪಿ ನಡ್ಡಾ, ಮಹಾರಾಷ್ಟ್ರದಿಂದ ಅಶೋಕ್ ಚವಾಣ್‌ಗೆ ಟಿಕೆಟ್‌

    ಹಿರಿಯ ನಾಯಕರೊಂದಿಗೆ ಚರ್ಚೆ:
    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕವನ್ನು ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿರುವ ಬಿಜೆಪಿ 28ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲುವ ಗುರಿ ಹೊಂದಿದೆ. ಅದರಲ್ಲೂ ಸಿಎಂ ತವರು ಕ್ಷೇತ್ರದಲ್ಲಿ ಹೆಚ್ಚಿನ ಲೀಡ್ ತರಲೇಬೇಕೆಂದು ಕೇಂದ್ರ ಸಚಿವ ಅಮಿತ್ ಶಾ, ರಾಜ್ಯ ನಾಯಕರಿಗೆ ಸೂಚನೆ ಕೊಟ್ಟಿದ್ದಾರೆ. ಈ ಬೆನ್ನಲ್ಲೇ ಆರ್‌ಎಸ್‌ಎಸ್ ಮುಂಚೂಣಿ ನಾಯಕರು, ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

    2023ರ ವಿಧಾನಸಭಾ ಚುನಾವಣೆಯಲ್ಲಿ ಸಂಘ ಪರಿವಾರದ ಹಿನ್ನೆಲೆಯುಳ್ಳ 10 ಮಂದಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗಿತ್ತು. ಹಾಗಾಗಿ ಲೋಕಸಭಾ ಚುನಾವಣೆಗೆ ಕನಿಷ್ಠ 3 ಅಥವಾ 4 ಕ್ಷೇತ್ರಗಳಲ್ಲಿ ಸಂಘಪರಿವಾರದ ಹಿನ್ನೆಲೆಯುಳ್ಳ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಚಿಂತನೆ ನಡೆದಿದೆ. ಇದನ್ನೂ ಓದಿ: ಅಜ್ಜನ ಕನಸು ನೆರವೇರಿಸಲು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮೊಗ

  • ವಿದೇಶದಲ್ಲಿ ಅಲ್ಲ, ಈ ಬಾರಿಯೂ ಭಾರತದಲ್ಲೇ IPL – ಯಾವಾಗಿನಿಂದ ಶುರು?

    ವಿದೇಶದಲ್ಲಿ ಅಲ್ಲ, ಈ ಬಾರಿಯೂ ಭಾರತದಲ್ಲೇ IPL – ಯಾವಾಗಿನಿಂದ ಶುರು?

    ಮುಂಬೈ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 17ನೇ ಆವೃತ್ತಿ IPLನ ಕೆಲ ಪಂದ್ಯಗಳು ವಿದೇಶದಲ್ಲಿ ನಡೆಯಲಿವೆ ಎಂಬ ಊಹಾಪೋಹಗಳಿಗೆ ಐಪಿಎಲ್ ಮುಖ್ಯಸ್ಥ ಅರುಣ್‌ ಧುಮಾಲ್ (Arun Dhumal) ತೆರೆ ಎಳೆದಿದ್ದಾರೆ. ಈ ಬಾರಿ ಐಪಿಎಲ್ ಭಾರತದಲ್ಲೇ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಈ ಬಾರಿ ಐಪಿಎಲ್‌ ಭಾರತದಲ್ಲೇ ನಡೆಯಲಿದೆ. ಈ ಬಗ್ಗೆ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಲೋಕಸಭೆ ಚುನಾವಣೆಗೆ (Lok Sabha Elections) ವೇಳಾಪಟ್ಟಿ ಪ್ರಕಟಗೊಳ್ಳಲು ಕಾಯುತ್ತಿದೇವೆ. ಆ ಬಳಿಕ ಐಪಿಎಲ್ ವೇಳಾಪಟ್ಟಿ ಅಂತಿಮಗೊಳಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್‌ ವಿರುದ್ಧ 3ನೇ ಟೆಸ್ಟ್‌ ಪಂದ್ಯಕ್ಕೆ ಜಡ್ಡು ಇನ್‌ – ಕೆ.ಎಲ್‌ ರಾಹುಲ್‌ ಬದಲಿಗೆ ಮತ್ತೊಬ್ಬ ಕನ್ನಡಿಗನಿಗೆ ಚಾನ್ಸ್‌

    ಎಲ್ಲವೂ ಅಂದುಕೊಂಡಂತೆ ನಡೆದರೆ ಮಾರ್ಚ್ ಅಂತ್ಯದ ವೇಳೆಗೆ ಟೂರ್ನಿ ಆರಂಭಗೊಳ್ಳುವ ನಿರೀಕ್ಷೆಯಿದೆ. ಏಪ್ರಿಲ್‌ನಲ್ಲಿ ಚುನಾವಣೆ ನಡೆಯಬಹುದು. ಹೀಗಾಗಿ ಸರ್ಕಾರದ ಜೊತೆ ಸಂಪರ್ಕದಲ್ಲಿದ್ದೇವೆ. ಜೊತೆಗೆ ಎಲ್ಲಾ ಪಂದ್ಯಗಳು ಭಾರತದಲ್ಲಿ ನಡೆಯುವಂತೆ ನೋಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 1,078 ತಂಡಗಳು, 16,100 ಆಟಗಾರರು – ಮೋದಿ ತವರಲ್ಲಿ ʻಲೋಕಸಭಾ ಪ್ರೀಮಿಯರ್‌ ಲೀಗ್‌ʼಗೆ ಚಾಲನೆ

    ಐಪಿಎಲ್‌ ಯಾವಾಗಿನಿಂದ ಶುರು?
    17ನೇ ಆವೃತ್ತಿಯ ಐಪಿಎಲ್‌ ಮಾರ್ಚ್‌ 22 ರಿಂದ ಆರಂಭವಾಗಿ ಮೇ 26ರ ವರೆಗೆ ನಡೆಯುವ ಸಾಧ್ಯತೆಗಳಿವೆ. ಚುನಾವಣಾ ವೇಳಾಪಟ್ಟಿ ನಿಗದಿಪಡಿಸಿದ ನಂತರ ಐಪಿಎಲ್‌ ದಿನಾಂಕ ಘೋಷಣೆ ಮಾಡುವ ಸಾಧ್ಯತೆಗಳಿವೆ. ಐಪಿಎಲ್‌ಗೂ ಮುನ್ನ ಮಹಿಳಾ ಪ್ರೀಮಿಯರ್‌ ಲೀಗ್‌ ಸಹ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 8 ತಿಂಗಳಲ್ಲಿ ಆಸ್ಟ್ರೇಲಿಯಾ ವಿರುದ್ಧವೇ 3 ವಿಶ್ವಕಪ್‌ ಟ್ರೋಫಿ ಕಳೆದುಕೊಂಡ ಭಾರತ!

    ಲೋಕಸಭೆ ಚುನಾವಣೆ ವರ್ಷದಲ್ಲಿ ಭಾರತದ ಐಪಿಎಲ್‌ ಟೂರ್ನಿ ನಡೆಯುತ್ತಿರುವುದು ಇದು ನಾಲ್ಕನೇ ಬಾರಿ. ಈ ಹಿಂದೆಯೂ 2009, 2014 ಮತ್ತು 2019 ರಲ್ಲಿಯೂ ಲೋಕಸಭಾ ಚುನಾವಣಾ ವರ್ಷದಲ್ಲೇ ಐಪಿಎಲ್‌ ನಡೆದಿತ್ತು. ಅಲ್ಲದೇ 2009 ಮತ್ತು 2014ರಲ್ಲಿ ದೇಶದ ಹೊರಗೆ ಐಪಿಎಲ್ ಅನ್ನು ಸ್ಥಳಾಂತರಿಸಲಾಗಿತ್ತು. ಆದ್ರೆ 2019ರಲ್ಲಿ ಭಾರತದಲ್ಲಿಯೇ ನಡೆದಿತ್ತು.

  • ಹೀಗೆನ್ನುತ್ತಲೇ 70 ವರ್ಷ ಸರ್ಕಾರ ನಡೆಸಿಕೊಂಡು ಬಂದ್ರು – ಪಕ್ಷ ತೊರೆದ ಬಳಿಕ ಕಾಂಗ್ರೆಸ್‌ ವಿರುದ್ಧ ಶೆಟ್ಟರ್‌ ವಾಗ್ದಾಳಿ

    ಹೀಗೆನ್ನುತ್ತಲೇ 70 ವರ್ಷ ಸರ್ಕಾರ ನಡೆಸಿಕೊಂಡು ಬಂದ್ರು – ಪಕ್ಷ ತೊರೆದ ಬಳಿಕ ಕಾಂಗ್ರೆಸ್‌ ವಿರುದ್ಧ ಶೆಟ್ಟರ್‌ ವಾಗ್ದಾಳಿ

    ಹುಬ್ಬಳ್ಳಿ: 2023ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ (Jagadish Shettar), ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಇದೀಗ ಮತ್ತೆ ಬಿಜೆಪಿ ಸೇರುತ್ತಿದ್ದಂತೆ ಕಾಂಗ್ರೆಸ್‌ ವಿರುದ್ಧ ಕಿಡಿ ಕಾರಿದ್ದಾರೆ.

    ಹುಬ್ಬಳ್ಳಿಯಲ್ಲಿಂದು (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೋಡ್ಸೇ ಗಾಂಧಿಯನ್ನ‌ ಹತ್ಯೆ ಮಾಡಿದ್ದಾರೆ ಎನ್ನುತ್ತಲೇ 70 ವರ್ಷ ಕಾಂಗ್ರೆಸ್‌ನವರು ಸರ್ಕಾರ ನಡೆಸಿಕೊಂಡು ಬಂದಿದ್ದಾರೆ. ಅದಕ್ಕೆ ಬಿಜೆಪಿ (BJP) ಕೂಡ ಉತ್ತರ ಕೊಟ್ಟಿದೆ. ಅದನ್ನೇ ಪದೇ-ಪದೇ ಹೇಳಿ ಜನರನ್ನ ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಶೆಟ್ಟರ್‌ ಹೇಳಿದ್ದಾರೆ. ಇದನ್ನೂ ಓದಿ: ಭೂಮಿ ತಾಯಿಯ ಋತುಸ್ರಾವವನ್ನು ಸಂಭ್ರಮಿಸುವ ಹಬ್ಬ ಕೆಡ್ಡಸ- ತುಳುನಾಡಿನಲ್ಲಿ ಆಚರಣೆ ಹೇಗೆ?

    ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂಬ ಕೆ.ಎಸ್ ಈಶ್ವರಪ್ಪ‌ (KS Eshwarappa) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಈಗಾಗಲೇ ಪ್ರತಿಕ್ರಿಯಿಸಿದ್ದಾರೆ. ಯಾರೇ ಆಗಲಿ ಲಕ್ಷ್ಮಣ ರೇಖೆ ದಾಟಬಾರದು ಎಂದು ಹೇಳುವ ಮೂಲಕ ಈಶ್ವರಪ್ಪರನ್ನ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಾನವನ ದೇಹಕ್ಕೆ ಕೃತಕ ಉಸಿರಾಟ ಒದಗಿಸುವ ಕಬ್ಬಿಣದ ಶ್ವಾಸಕೋಶ – ಹೇಗೆ ಕೆಲಸ ಮಾಡುತ್ತೆ?

    ಇನ್ನೂ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಪಕ್ಷದ ಹೈಕಮಾಂಡ್ ನಾಯಕರು‌ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಕುರಿತು ಸಭೆಯಲ್ಲಿ ಚರ್ಚೆಗಳಾಗಿವೆ. ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ. ಪಕ್ಷದ ಹೈಕಮಾಂಡ್ ಸ್ಪರ್ಧೆ ವಿಚಾರದ ಬಗ್ಗೆ ಏನು ತೀರ್ಮಾನ ತೆಗೆದುಕೊಳ್ಳುತ್ತೋ‌ ಅದಕ್ಕೆ ನಾನು ಬದ್ಧ ಎಂದಿದ್ದಾರೆ.

    ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಪಕ್ಷದ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು, ಈ ಬಗ್ಗೆ ಪಕ್ಷದ ನಾಯಕರು ಯಾರೂ ಚರ್ಚೆ ಮಾಡಿಲ್ಲ. ಪಕ್ಷದ ನಾಯಕರ ಯಾವುದೇ ನಿರ್ಧಾರಕ್ಕೆ ನಾನು ಬದ್ಧ ಎಂದು ಹೇಳುವ ಮೂಲಕ ಪರೋಕ್ಷವಾಗಿ‌ ಧಾರವಾಡ ಲೋಕಸಭಾ ಚುನಾವಣೆಯ ಸ್ಪರ್ಧೆ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಕಣ ರಂಗು – ಪುಟ್ಟಣ್ಣ ಸೋಲಿಸುವಂತೆ ಶಿಕ್ಷಕರಿಗೆ ವಿಜಯೇಂದ್ರ ಮನವಿ

  • ಮಂಡ್ಯ ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ತಾರೆ – ಜಿ.ಟಿ ದೇವೇಗೌಡ ಹೊಸ ಬಾಂಬ್‌!

    ಮಂಡ್ಯ ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ತಾರೆ – ಜಿ.ಟಿ ದೇವೇಗೌಡ ಹೊಸ ಬಾಂಬ್‌!

    – ಹಾಸನ, ಮಂಡ್ಯ, ಮೈಸೂರು ಸೇರಿ 8 ಕ್ಷೇತ್ರ ಕೇಳಿದ್ದೇವೆ
    – ಗೌಡರ ಕುಟುಂಬದಿಂದ ಇಬ್ಬರು ಅಖಾಡಕ್ಕೆ ಎಂದ ಮಾಜಿ ಸಚಿವ

    ಹುಬ್ಬಳ್ಳಿ: ಮಂಡ್ಯ ಸಂಸದೆ ಸುಮಲತಾ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಜೆಡಿಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷ ಜಿ.ಟಿ ದೇವೇಗೌಡ (GT DeveGowda) ಹೊಸ ಬಾಂಬ್‌ ಸಿಡಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿರುವ ಅವರು, ಮುಂದಿನ ಲೋಕಸಭಾ ಚುನಾವಣೆಗೆ (Lok Sabha Elections) ಸುಮಲತಾ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದ್ರೆ, ನಾವು ಬೆಂಬಲ ನೀಡುತ್ತೇವೆ. ಆದ್ರೆ ಅವರು ಕಾಂಗ್ರೆಸ್‌ (Congress) ಸೇರುವ ಸಾಧ್ಯತೆಗಳಿವೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: Bigg Boss: ಮುನಿಸು ಮರೆತು ರೊಮ್ಯಾಂಟಿಕ್ ಮೂಡ್‌ಗೆ ಜಾರಿದ ಅಂಕಿತಾ ದಂಪತಿ

    ಸುಮಲತಾ ಕಾಂಗ್ರೆಸ್ ಸೇರಿದರೆ ನಮ್ಮ ಬೆಂಬಲ ಇಲ್ಲ. ಸುಮಲತಾ ಪರವಾಗಿ ಟಿಕೆಟ್ ಕೇಳಿದ ನಾರಾಯಣಗೌಡ ಇದೀಗ ಸಿದ್ದರಾಮಯ್ಯ ಮನೇಲಿ ಕೂತಿದ್ದಾರೆ. ಹೀಗಾಗಿ ಸುಮಲತಾ ಕಾಂಗ್ರೆಸ್‌ಗೆ ಹೋಗಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯಲ್ಲಿ ಪ್ರೀ ವೆಡ್ಡಿಂಗ್ ಚಿತ್ರೀಕರಣ – ಹೊರಗುತ್ತಿಗೆ ವೈದ್ಯ ಕರ್ತವ್ಯದಿಂದ ವಜಾ

    ಇನ್ನೂ ಈ ಬಾರಿ ದೇವೇಗೌಡರ ಕುಟುಂಬದ ಇಬ್ಬರು ಸ್ಪರ್ಧೆ ಮಾಡ್ತಾರೆ. ಕುಮಾರಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ ಇಬ್ಬರು ಅಭ್ಯರ್ಥಿಗಳಾಗಬಹುದು. ಬಿಜೆಪಿ – ಜೆಡಿಎಸ್ ಮೈತ್ರಿಯಲ್ಲಿ ನಾವು 6 ರಿಂದ 8 ಕ್ಷೇತ್ರ ಕೇಳಿದ್ದೇವೆ ತುಮಕೂರು, ಹಾಸನ, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಕ್ಷೇತ್ರ ಕೇಳಿದ್ದೇವೆ ಎಂದು ತಿಳಿಸಿದ್ದಾರೆ.

  • ರಾಹುಲ್ ಗಾಂಧಿ ಬಾಯಿ ಬಿಟ್ಟರೆ ಬರೀ ಸುಳ್ಳು – ಸಚಿವ ಪ್ರಹ್ಲಾದ್‌ ಜೋಶಿ ಕಿಡಿ

    ರಾಹುಲ್ ಗಾಂಧಿ ಬಾಯಿ ಬಿಟ್ಟರೆ ಬರೀ ಸುಳ್ಳು – ಸಚಿವ ಪ್ರಹ್ಲಾದ್‌ ಜೋಶಿ ಕಿಡಿ

    ­- 1999ರಲ್ಲೇ ಮೋದಿ ಜೀಗೆ OBC ಸ್ಥಾನಮಾನ ನೀಡಲಾಗಿದೆ

    ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ನಾಚಿಕೆಯೇ ಆಗುವುದಿಲ್ಲವೇ? ಬರೀ ಸುಳ್ಳು ಸುಳ್ಳು ಸುದ್ದಿಗಳನ್ನು ಹರಿ ಬಿಡುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು OBC ಜಾತಿಯಲ್ಲಿ ಹುಟ್ಟಿಲ್ಲ ಮತ್ತು ಅವರು ಗುಜರಾತ್‌ ಸಿಎಂ ಆದ ಮೇಲೆ OBC ಜಾತಿಯನ್ನು ಸೂಚಿಸಿದ್ದಾರೆ ಎಂದಿರುವ ರಾಹುಲ್ ಗಾಂಧಿ ಆರೋಪಕ್ಕೆ ಸಚಿವ ಜೋಶಿ ಅವರು ತಿರುಗೇಟು ನೀಡಿದ್ದು, ತಮ್ಮ X ಖಾತೆಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ ಕಾಂಗ್ರೆಸ್ ಕಾರ್ಯಕರ್ತರು

    ಕಾಂಗ್ರೆಸ್‌ನ (Congress) ಸುಳ್ಳಿನ ಬುತ್ತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವ ಸಮಯ ಬಂದಿದೆ. ವಾಸ್ತವ ಬೇರೆಯೇ ಇರುವಾಗ ಕಾಂಗ್ರೆಸ್ ಬರೀ ಸುಳ್ಳುಗಳನ್ನೇ ಹೆಣೆದು ಜನರ ಕಿವಿಗೆ ಹೂವಿನ ಗೊಂಚಲೇ ಇಡುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮಂಗಳ ಗ್ರಹಕ್ಕೆ ಸೋಲಾರ್‌ ಚಾಲಿತ ವಿಮಾನ ಕಳಿಸಲು ನಾಸಾ ಚಿಂತನೆ – ಏನಿದರ ವಿಶೇಷ?

    ಇಲ್ಲಿದೆ ಸತ್ಯ:
    ಮೋದಿಯವರು ಗುಜರಾತ್ (Gujarat) ಮುಖ್ಯಮಂತ್ರಿಯಾಗುವ ಎರಡು ವರ್ಷಗಳ ಮೊದಲು 1999ರ ಅಕ್ಟೋಬರ್ 27ರಂದು ಅವರ OBC ಸ್ಥಾನಮಾನವನ್ನು ಗುರುತಿಸಲಾಗಿದೆ ಎಂದು ಜೋಶಿ ದಾಖಲೆ ಸಮೇತ ಸ್ಪಷ್ಟಪಡಿಸಿದ್ದಾರೆ.

    ಪ್ರಧಾನಿ ಮೋದಿ ಅವರನ್ನು OBC ಅಲ್ಲ ಎನ್ನುವ ಮೂಲಕ ಕಾಂಗ್ರೆಸ್ ಮತ್ತೊಮ್ಮೆ ಇಡೀ OBC ಸಮುದಾಯವನ್ನೇ ಅವಮಾನಿಸಿದೆ. ಒಬಿಸಿ ವರ್ಗದವರೆಲ್ಲ ಲೋಕಸಭೆ ಚುನಾವಣೆಯಲ್ಲಿ ಪ್ರತಿಧ್ವನಿಸುವ ಮೂಲಕ ರಾಹುಲ್ ಗಾಂಧಿ ಆರೋಪಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೋಶಿ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಸಮಯ ಸಿಕ್ಕಾಗ ವಿದ್ಯಾರ್ಥಿ ಮನೆಗೇ ಹೋಗಿ ಸೆಕ್ಸ್‌ ಮಾಡ್ತಿದ್ದೆ – ತಪ್ಪೊಪ್ಪಿಕೊಂಡ ಶಿಕ್ಷಕಿಗೆ 50 ವರ್ಷ ಜೈಲು

    ರಾಹುಲ್‌ ಗಾಂಧಿ ಹೇಳಿದ್ದೇನು?
    ಒಡಿಶಾದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಮೂಲತಃ ಹಿಂದುಳಿದ ವರ್ಗದಲ್ಲಿ ಜನಿಸಿಲ್ಲ, ಆದ್ರೆ ತಮ್ಮನ್ನು ಒಬಿಸಿ ಎಂದು ಹೇಳಿಕೊಳ್ಳುವ ಮೂಲಕ ಇತರೇ ವರ್ಗದ ಜನರನ್ನ ದಾರಿ ತಪ್ಪಿಸುತ್ತಿದ್ದಾರೆ. ಮೋದಿ ಜೀ ಅವರು `ತೇಲಿ’ ಜಾತಿಯ ಕುಟುಂಬದಲ್ಲಿ ಜನಿಸಿದ್ದಾರೆ. 2000ನೇ ಇಸವಿಯಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ತಮ್ಮನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದರು. ಆದ್ದರಿಂದ ಮೋದಿ ಜಿ ಹುಟ್ಟಿನಿಂದ ಒಬಿಸಿ ಅಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರತಿಪಾದಿಸಿದ್ದರು.

  • ಬಿಜೆಪಿಯವರು 543 ಕ್ಷೇತ್ರಗಳಲ್ಲೂ ಗೆಲ್ಲಲಿ – ಡಿಕೆ ಶಿವಕುಮಾರ್

    ಬಿಜೆಪಿಯವರು 543 ಕ್ಷೇತ್ರಗಳಲ್ಲೂ ಗೆಲ್ಲಲಿ – ಡಿಕೆ ಶಿವಕುಮಾರ್

    ಬೆಂಗಳೂರು: ಬಿಜೆಪಿ (BJP) ಅವರು 28 ಕ್ಷೇತ್ರ ಮಾತ್ರ ಅಲ್ಲ 543 ಕ್ಷೇತ್ರವನ್ನೂ ಗೆಲ್ಲಲಿ ಅಂತ ಬಿಜೆಪಿಗೆ ಡಿಸಿಎಂ ಡಿಕೆಶಿವಕುಮಾರ್ (DK Shivakumar) ತಿರುಗೇಟು ನೀಡಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ (Lok Sabha Elections) 28 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದಲ್ಲಿ 224 ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿತ್ತು. ಆದರೆ ಏನಾಯಿತು? 136 ಸ್ಥಾನ ನಮಗೆ ಬಂತು. 28 ಕ್ಷೇತ್ರ ಮಾತ್ರವಲ್ಲ ಬಿಜೆಪಿಯವರು ಲೋಕಸಭೆಯ 543 ಸ್ಥಾನಗಳನ್ನೂ ಗೆಲ್ಲಲಿ, ಬೇಡ ಎಂದವರು ಯಾರು? ಎಂದು ಕುಟುಕಿದ್ದಾರೆ.

    ವಿಧಾನಸಭಾ ಚುನಾವಣೆಯಲ್ಲಿ ನಾವು 136-140 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದೆವು. ಅವರು 224 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಆನಂತರ ಏನಾಯಿತು? ಅಂತ ವಿಧಾನಸಭೆ ಸೋಲನ್ನ ಬಿಜೆಪಿಗೆ ನೆನಪು ಮಾಡಿದರು. ಇದನ್ನೂ ಓದಿ: Breaking: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ಮೈತ್ರಿ ಸರ್ಕಾರ ಪತನ

    I.N.D.I.A ಒಕ್ಕೂಟದಿಂದ ನಿತೀಶ್ ಕುಮಾರ್ ಹೊರ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ಮುಂದೆ ಏನಾಗುತ್ತದೆ ನೋಡೋಣ. ಅಮೇಲೆ ಪ್ರತಿಕ್ರಿಯೆ ಕೊಡ್ತೀನಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಲ್ಕಾಜಿ ದೇಗುಲದಲ್ಲಿ ವೇದಿಕೆ ಕುಸಿದುಬಿದ್ದು ಮಹಿಳೆ ಸಾವು – 17 ಮಂದಿಗೆ ಗಾಯ

  • ಮೋದಿ ಮತ್ತೆ ಪ್ರಧಾನಿಯಾಗಬೇಕು ಅನ್ನೋದನ್ನ ಶಾಮನೂರು ಸೂಕ್ಷ್ಮವಾಗಿ ಹೇಳಿದ್ದಾರೆ: ಸಿ.ಟಿ ರವಿ

    ಮೋದಿ ಮತ್ತೆ ಪ್ರಧಾನಿಯಾಗಬೇಕು ಅನ್ನೋದನ್ನ ಶಾಮನೂರು ಸೂಕ್ಷ್ಮವಾಗಿ ಹೇಳಿದ್ದಾರೆ: ಸಿ.ಟಿ ರವಿ

    ಬೆಂಗಳೂರು: ಶಾಮನೂರು ಶಿವಶಂಕರಪ್ಪನವರು (Shamanur Shivashankarappa) ದೇಶಕ್ಕೆ ಒಂದೊಳ್ಳೆ ಸಂದೇಶ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಅವರನ್ನು ಒಪ್ಪಿದ್ದಾರೆ. ಮೋದಿ ಮತ್ತೆ ಪ್ರಧಾನಿ ಆಗಬೇಕು ಅನ್ನೋದನ್ನ ಸೂಕ್ಷ್ಮವಾಗಿ ಹೇಳಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ (CT Ravi) ಶ್ಲಾಘಿಸಿದ್ದಾರೆ.

    ಬೆಂಗಳೂರಿನ  ಅರಮನೆ ಮೈದಾನದಲ್ಲಿ (Bangalore Palace Ground) ಬಿಜೆಪಿ ರಾಜ್ಯಘಟಕದ ಕಾರ್ಯಕಾರಿಣಿ ಸಭೆ ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಬಿಜೆಪಿ ನಾಯಕರ ಫ್ಲೆಕ್ಸ್, ಬ್ಯಾನರ್‌ಗಳ ಅಬ್ಬರ ಜೋರಾಗಿದ್ದು, ಅರಮನೆ ಮೈದಾನ ಕೇಸರಿ ಮಯವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಮೊದಲ ಕಾರ್ಯಕಾರಿಣಿ ಸಭೆಯೂ ಇದಾಗಿದೆ. ಸಭೆಯಲ್ಲಿ ಮತ್ತೆ ಬಿಜೆಪಿ ಸೇರ್ಪಡೆಯಾದ ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಭೂಪೇಂದ್ರ ಯಾದವ್, ಭಗವಂತ ಖೂಬಾ, ನಾರಾಯಣ ಸ್ವಾಮಿ, ಹಾಲಿ-ಮಾಜಿ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಪಕ್ಷದ ಪ್ರಮುಖರು, ಪದಾಧಿಕಾರಿಗಳು 900ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

    ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ ಅವರು ಬಿ.ವೈ ರಾಘವೇಂದ್ರ (BY Raghavendra) ಅವರನ್ನು ಗೆಲ್ಲಿಸಬೇಕು ಎನ್ನುವ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: Loksabha Elections: ಬಿಜೆಪಿ ರಾಜ್ಯವಾರು ಚುನಾವಣಾ ಉಸ್ತುವಾರಿಗಳ ಪಟ್ಟಿ ಪ್ರಕಟ

    ಶಾಮನೂರು ಶಿವಶಂಕರಪ್ಪನವರು ದೇಶಕ್ಕೆ ಒಂದೊಳ್ಳೆ ಸಂದೇಶ ಕೊಟ್ಟಿದ್ದಾರೆ. ದೇಶದ ಹಿತದೃಷ್ಟಿಯಿಂದ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರಬೇಕು ಎಂಬ ಸಂದೇಶ ಕೊಟ್ಟಿದ್ದಾರೆ. ಅವರ ಹೇಳಿಕೆಯನ್ನ ಸ್ವಾಗತ ಮಾಡ್ತೀನಿ ಎಂದಿದ್ದಾರೆ.

    ಶಾಮನೂರು ಅವರು ಮೋದಿಯನ್ನು ಒಪ್ಪಿದ್ದಾರೆ. ಮತ್ತೆ ಮೋದಿ (Narendra Modi) ಪ್ರಧಾನಿ ಆಗಲಿ ಎಂಬುದನ್ನ ಪರೋಕ್ಷವಾಗಿ ಮತ್ತು ಅಷ್ಟೇ ಸೂಕ್ಮವಾಗಿ ಹೇಳಿದ್ದಾರೆ. ಶಾಮನೂರು ಅವರ ಹೇಳಿಕೆಯಂತೆ ಮೋದಿಗೆ ಎಲ್ಲರೂ ಮತ ಹಾಕಬೇಕು, ಬಿಜೆಪಿಯನ್ನ ಗೆಲ್ಲಿಸಬೇಕು. ಅಭಿವೃದ್ಧಿ ಆಗಬೇಕು ಎಂದರೆ ಮೋದಿ ಬೇಕು. ಹಾಗಾಗಿ ಪ್ರತಿಯೊಬ್ಬರೂ ಬಿಜೆಪಿಗೆ ಮತ ಹಾಕಿ, ಮೋದಿಯನ್ನ ಮತ್ತೊಮ್ಮೆ ಪ್ರಧಾನಿ ಮಾಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಗೆ ನೋಟಿಸ್; ಕೇಸ್ ದಾಖಲಿಸಿ ಕ್ರಮಕ್ಕೆ ಸೂಚನೆ!

    ಲಕ್ಷ್ಮಣ ಸವದಿ ಸಹ ಬಿಜೆಪಿಗೆ ಬರ್ತಾರಾ ಅನ್ನೋ ಹೇಳಿಗೆ ಪ್ರತಿಕ್ರಿಯಿಸಿ, ಲಕ್ಷ್ಮಣ ಸವದಿ ಜೊತೆಗೆ ಸ್ನೇಹ ಇದೆ. ಅವರು ನಮ್ಮ ಪಕ್ಷವನ್ನ ಬಿಟ್ಟಿದ್ದಾರೆಯೇ ಹೊರತು ಸ್ನೇಹ ಬಿಟ್ಟಿಲ್ಲ. ಅವರು ಪಾರ್ಟಿ ಬಿಡುವಾಗ, ಬೇಡ ಎಂದು ಹೇಳಿದ್ದೆ. ಮುಂದೆ ಅವರಿಗೆ ಪಶ್ಚಾತಾಪಾ ಆದಾಗ, ಕಾಲ ಕೂಡಿಬಂದಾಗ ಅವರೇ ಬರಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: 7 ಶಾಸಕರನ್ನ ಖರೀದಿಸಲು ಬಿಜೆಪಿಯಿಂದ ತಲಾ 25 ಕೋಟಿ ರೂ. ಆಫರ್‌ – ಕೇಜ್ರಿವಾಲ್‌ ಹೊಸ ಬಾಂಬ್‌

  • 7 ಶಾಸಕರನ್ನ ಖರೀದಿಸಲು ಬಿಜೆಪಿಯಿಂದ ತಲಾ 25 ಕೋಟಿ ರೂ. ಆಫರ್‌ – ಕೇಜ್ರಿವಾಲ್‌ ಹೊಸ ಬಾಂಬ್‌

    7 ಶಾಸಕರನ್ನ ಖರೀದಿಸಲು ಬಿಜೆಪಿಯಿಂದ ತಲಾ 25 ಕೋಟಿ ರೂ. ಆಫರ್‌ – ಕೇಜ್ರಿವಾಲ್‌ ಹೊಸ ಬಾಂಬ್‌

    ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಆಪ್‌ ಸರ್ಕಾರವನ್ನು ಕೆಡವಲು ಸಂಚು ರೂಪಿಸಿರುವ ಬಿಜೆಪಿ 7 ಆಮ್ ಆದ್ಮಿ ಪಕ್ಷದ ಶಾಸಕರನ್ನ (AAP MLAs) ಖರೀದಿಸಲು ಪ್ರಯತ್ನಿಸುತ್ತಿದೆ. 7 ಶಾಸಕರಿಗೆ ಬಿಜೆಪಿ ತಲಾ 25 ಕೋಟಿ ರೂ. ಆಫರ್‌ ನೀಡಿದೆ ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಹೊಸ ಬಾಂಬ್‌ ಸಿಡಿಸಿದ್ದಾರೆ.

    ಈ ಕುರಿತು ಸೋಶಿಯಲ್‌ ಮೀಡಿಯಾ X ಖಾತೆಯಲ್ಲಿ ಸುದೀರ್ಘ‌ ಪೋಸ್ಟ್‌ ಹಂಚಿಕೊಂಡಿರುವ ಕೇಜ್ರಿವಾಲ್‌, ಬಿಜೆಪಿ (BJP) ಆಪ್‌ ಶಾಸಕರೊಂದಿಗೆ ಮಾತುಕತೆಯಲ್ಲಿ ತೊಡಗಿದೆ. ಆಪ್‌ ಸರ್ಕಾರವನ್ನು ಸಂಪೂರ್ಣವಾಗಿ ಮುಗಿಸಲು ಪ್ಲ್ಯಾನ್‌ ಮಾಡಿದೆ. ಆದ್ದರಿಂದ ದೆಹಲಿ ಮದ್ಯ ನೀತಿ ಪ್ರಕರಣಕ್ಕೆ (Delhi liquor Policy Case) ಸಂಬಂಧಿಸಿದಂತೆ ಮುಖ್ಯಮಂತ್ರಿಗಳನ್ನು ಬಂಧಿಸುವುದಾಗಿ ಬೆದರಿಕೆ ಹಾಕಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮರಾಠ ಮೀಸಲಾತಿ ಹೋರಾಟಕ್ಕೆ ಜಯ – ಬೇಡಿಕೆಗಳಿಗೆ ಮಹಾರಾಷ್ಟ್ರ ಸರ್ಕಾರ ಅಸ್ತು

    ಸರ್ಕಾರವನ್ನೇ ಮುಗಿಸೋದಕ್ಕೆ ಬಿಜೆಪಿ ಪ್ಲ್ಯಾನ್‌:
    ಇತ್ತೀಚೆಗೆ ಬಿಜೆಪಿ ನಾಯಕರು ಎಎಪಿಯ 7 ಶಾಸಕರನ್ನ ಸಂಪರ್ಕಿಸಿದ್ದಾರೆ. ಕೆಲ ದಿನಗಳ ನಂತರ ನಾವು ಕೇಜ್ರಿವಾಲ್‌ ಅವರನ್ನ ಬಂಧಿಸುತ್ತೇವೆ. ನಂತರ ಶಾಸಕರನ್ನ ಇಬ್ಭಾಗ ಮಾಡುತ್ತೇವೆ. ದೆಹಲಿಯ ಆಪ್‌ ಸರ್ಕಾರವನ್ನ ಸಂಪೂರ್ಣವಾಗಿ ಉರುಳಿಸುತ್ತೇವೆ. ಈಗಾಗಲೇ 21 ಶಾಸಕರೊಟ್ಟಿಗೆ ಮಾತುಕತೆ ನಡೆಸಿದ್ದೇವೆ. ನೀವೂ ಬಂದುಬಿಡಿ, ಪ್ರತಿಯೊಬ್ಬರಿಗೆ ತಲಾ 25 ಕೋಟಿ ರೂ. ಕೊಡುತ್ತೇವೆ. ಜೊತೆಗೆ ಬಿಜೆಪಿಯಿಂದ ಟಿಕೆಟ್‌ ನೀಡುತ್ತೇವೆ ಎಂದು ಆಮಿಷ ತೋರಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಎಂಜಿ ರೋಡ್- ಬೈಯಪ್ಪನಹಳ್ಳಿ ಮೆಟ್ರೋ ಸಂಚಾರದಲ್ಲಿ ತಾತ್ಕಾಲಿಕ ಸ್ಥಗಿತ- ಪ್ರಯಾಣಿಕರ ಪರದಾಟ

    9 ವರ್ಷಗಳಿಂದಲೂ ಷಡ್ಯಂತ್ರ ಫಲಿಸಿಲ್ಲ:
    ಇದು ಬಿಜೆಪಿಯ ನಡವಳಿಕೆಯನ್ನು ತೋರಿಸುತ್ತದೆ. ಮದ್ಯ ನೀತಿ ಹಗರಣ ತನಿಖೆಯಲ್ಲಿ ನನ್ನನ್ನು ಬಂಧಿಸಲಾಗುತ್ತಿಲ್ಲ. ಆದ್ದರಿಂದ ಆಪ್‌ ಸರ್ಕಾರವನ್ನು ಉರುಳಿಸಲು ಸಂಚು ರೂಪಿಸುತ್ತಿದ್ದಾರೆ. ಅವರ ಷಡ್ಯಂತ್ರ ಇದೇ ಮೊದಲೇನಲ್ಲ. ಕಳೆದ 9 ವರ್ಷಗಳಿಂದಲೂ ಇಂತಹ ಅನೇಕ ಷಡ್ಯಂತ್ರಗಳನ್ನು ಮಾಡುತ್ತಲೇ ಬಂದಿದ್ದಾರೆ. ಯಾವುದೂ ಸಕ್ಸಸ್‌ ಆಗಿಲ್ಲ. ಏಕೆಂದರೆ ದೇವರು ಮತ್ತು ಈ ರಾಜ್ಯದ ಜನತೆ ಸದಾ ನಮ್ಮನ್ನ ಬೆಂಬಲಿಸಿದ್ದಾರೆ. ನಮ್ಮ ಎಲ್ಲ ಶಾಸಕರೂ ಬಲವಾಗಿ ಜೊತೆಯಲ್ಲಿದ್ದು ಆಫರ್‌ ಅನ್ನು ದೃಢವಾಗಿ ತಿರಸ್ಕರಿಸಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ: ಮೋದಿ ಹೊಗಳಿದ ರೆಡ್ಡಿ 

  • ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಾರದು ಎಂಬುದೇ ನಮ್ಮ ಗುರಿಯಾಗಿರಬೇಕು – ಸ್ಟಾಲಿನ್‌ ಕರೆ

    ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಾರದು ಎಂಬುದೇ ನಮ್ಮ ಗುರಿಯಾಗಿರಬೇಕು – ಸ್ಟಾಲಿನ್‌ ಕರೆ

    ಚೆನ್ನೈ: ಈ ದೇಶದಲ್ಲಿ ಬಿಜೆಪಿ (BJP) ಮತ್ತೆ ಅಧಿಕಾರಕ್ಕೆ ಬರಬಾರದು ಎಂಬುದೋಂದೇ ನಮ್ಮ ಗುರಿಯಾಗಿರಬೇಕು. ಅದಕ್ಕಾಗಿ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಬೇಕು ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ (MK Stalin) ಕರೆ ನೀಡಿದ್ದಾರೆ.

    ತಿರುಚಿನಾಪಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಟಾಲಿನ್‌, ಈ ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಬಿಡಬಾರದು ಎಂಬ ಒಂದೇ ಗುರಿಯನ್ನು ಎಲ್ಲರೂ ಹೊಂದಿರಬೇಕು. ಬಿಜೆಪಿ ವಿರುದ್ಧದ ಮತಗಳು ಯಾವುದೇ ಕಾರಣಕ್ಕೂ ವಿಜನೆಯಾಗದಂತೆ ನೋಡಿಕೊಳ್ಳಬೇಕು ಎಂದು ಕರೆ ಕೊಟ್ಟಿದ್ದಾರೆ.

    ಪ್ರತಿಯೊಬ್ಬರಿಗೂ ಒಂದೇ ಗುರಿ ಇರಬೇಕು. ಅದು ಈ ದೇಶದಲ್ಲಿ ಮತ್ತೆ ಬಿಜೆಪಿಯನ್ನ ಅಧಿಕಾರಕ್ಕೆ ಬರಲು ಬಿಡಬಾರದು. ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ಇರುವುದಿಲ್ಲ ಎಂದು ಎಚ್ಚರಿಸಿದರು. ಇದನ್ನೂ ಓದಿ: ಲೋಕಸಮರ ಗೆಲ್ಲೋಕೆ ಪ್ಲಾನ್- 5 ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗಾಗಿ ಬಿಜೆಪಿ ಸರ್ವೇ

    INDIA ಒಕ್ಕೂಟದಲ್ಲಿ ( INDIA Block) ಅಸಮಾಧಾನ: ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ಆಮ್ ಆದ್ಮಿ ಪಕ್ಷವು ಹರಿಯಾಣದ ಎಲ್ಲಾ 90 ವಿಧಾನಸಭಾ ಸ್ಥಾನಗಳಿಗೆ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಪಕ್ಷದ ರಾಷ್ಟ್ರೀಯ ನಾಯಕರಿಗೆ ನಮ್ಮ ನಿಲುವನ್ನು ತಿಳಿಸಿದ್ದೇವೆ. ನಾವು ಪ್ರಬಲರಾಗಿರುವುದರಿಂದ ಚುನಾವಣೆಯಲ್ಲಿ ಮೈತ್ರಿ ಮತ್ತು ಸ್ವತಂತ್ರವಾಗಿಯೂ ಸ್ಪರ್ಧಿಸಬಹುದು. ಅಂತಿಮ ನಿರ್ಧಾರವನ್ನು ಪಕ್ಷದ ನಾಯಕರು ತೆಗೆದುಕೊಳ್ಳುತ್ತಾರೆ ಎಂದು ಎಎಪಿ ನಾಯಕ ಸುಶೀಲ್ ಗುಪ್ತಾ ಹೇಳಿದ್ದಾರೆ. ಇದರಿಂದ ಐಎನ್‌ಡಿಐಎ ಒಕ್ಕೂಟದಲ್ಲಿ ಅಸಮಾಧಾನ ತಲೆದೋರಿದೆ.

    ಈ ಬೆನ್ನಲ್ಲೇ ಬಿಹಾರದ ಮುಖ್ಯಮಂತ್ರಿ ಮಹಾಘಟಬಂಧನ್‌ (ಮಹಾಮೈತ್ರಿಕೂಟ) ಜೊತೆಗಿನ ಸಂಬಂಧ ಕಡಿದುಕೊಂಡು ಮತ್ತೆ ಬಿಜೆಪಿ ಜೊತೆಗೆ ಸರ್ಕಾರ ರಚಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳೂ ಇವೆ ಎಂದು ಜೆಡಿಯು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜೈಲಿನಲ್ಲಿ ಶ್ರೀರಾಮೋತ್ಸವ ಆಚರಿಸಿದ್ದಕ್ಕೆ ಹಿಂದೂ ಕೈದಿಗಳ ಮೇಲೆ ಹಲ್ಲೆ ಆರೋಪ!

    ಈ ಎಲ್ಲದರ ನಡುವೆ ರಾಷ್ಟ್ರವ್ಯಾಪಿ ಅನ್ಯಾಯದ ವಿರುದ್ಧ ಹೋರಾಡುವಲ್ಲಿ ಇಂಡಿಯಾ ಒಕ್ಕೂಟದ ಬಣಗಳ ಏಕತೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ನಾನು: ಹೆಚ್.ಡಿ ದೇವೇಗೌಡ

    ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ನಾನು: ಹೆಚ್.ಡಿ ದೇವೇಗೌಡ

    ಹಾಸನ: ಅಂದು ಒಕ್ಕಲಿಗ ಸಮುದಾಯಕ್ಕೆ (Vokkaliga Community) ನೀಡಿದ್ದ ಮೀಸಲಾತಿಯನ್ನು ಕಡಿಮೆ ಮಾಡಿ, ಮುಸ್ಲಿಂ (Muslims) ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದು ನಾನು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Devegowda) ಹೇಳಿಕೊಂಡಿದ್ದಾರೆ.

    ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತನಾಡಿದ ದೊಡ್ಡಗೌಡರು, ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಒದಗಿಸಲು ಒಳಮೀಸಲಾತಿ ಕೊಡಬೇಕೆಂದು ಸಚಿವ ಸಂಪುಟ ಸಭೆ ತುರ್ತು ನಿರ್ಣಯ ಮಾಡಿ ಈಗ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ. ಈ ಕೆಲಸವನ್ನು ನಾನೂ ನನ್ನ ಅಧಿಕಾರ ಅವಧಿಯಲ್ಲೇ ಮಾಡಿದ್ದೆ. ಅಂದು ಮುಸ್ಲಿಮರಿಗೆ ಮೀಸಲಾತಿ (Muslims Reservation) ಕೊಟ್ಟಿದ್ದು ದೇವೇಗೌಡ. ನಾನು ಅಧಿಕಾರದಲ್ಲಿದ್ದಾಗ ಒಕ್ಕಲಿಗರಿಗೆ ನೀಡಿದ್ದನ್ನು ಕಡಿಮೆ ಮಾಡಿ, ಮುಸ್ಲಿಮರಿಗೆ ಮೀಸಲಾತಿ ಕೊಟ್ಟೆ. ಇದನ್ನು ನಿರ್ಣಯ ಮಾಡಿದ್ದು ದೇವೇಗೌಡ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣಗೆ ಅಗ್ನಿ ಪರೀಕ್ಷೆ; ಚುನಾವಣೆಯಲ್ಲಿ ಅಕ್ರಮ ಆರೋಪ ಪ್ರಕರಣ ಸುಪ್ರೀಂನಲ್ಲಿ ಇಂದು ವಿಚಾರಣೆ

    ಗುಂಡೂರಾವ್‌ ಸರ್ಕಾರದಲ್ಲಿ ಅಂಬೇಡ್ಕರ್ ಅವರು ನೀಡಿದ್ದ 18% ಮೀಸಲಾತಿಯಲ್ಲಿ ಎಸ್ಸಿಗೆ 15%, ಎಸ್ಟಿಗೆ 3% ನೀಡಿದ್ದರು. ಆದ್ರೆ ಆ ಕೋಟಾ ಭರ್ತಿ ಮಾಡಲಿಲ್ಲ. ನಂತರ ನಾನು 1983ರಲ್ಲಿ ಲೋಕೋಪಯೋಗಿ ಸಚಿವನಾದಾಗ ಅಂಬೇಡ್ಕರ್ ಕೊಟ್ಟಂತಹ ಕೋಟಾ ಭರ್ತಿಯಾಗಲು 15% ಮೀಸಲಾತಿಯನ್ನು 18%ಗೆ ಹೆಚ್ಚಿಸಿದೆ. 3% ಇದ್ದ ಎಸ್ಟಿ ಮೀಸಲಾತಿಯನ್ನು 5%ಗೆ ಹೆಚ್ಚಿಸಿದೆ. ಅಂಬೇಡ್ಕರ್ ಅವರ ಆಶಯದಂತೆ ಆ ಕೋಟಾ ಗುರಿಮುಟ್ಟುವವರೆಗೂ ಕೆಲಸ ಮಾಡಿದ್ದೇನೆ. ಅದು ಖಾಯಂ ಆಗಿರಬೇಕು ಅಂತ ಮಾಡಿದ್ದೆ. ಇದು ಎಲ್ಲಾ ಇಲಾಖೆಗಳ ಮೇಲೆ ಪರಿಣಾಮ ಬೀರುತ್ತೆ ಅಂತ ಎಲ್ಲರೂ ಹೇಳಿದ್ರು, ಆದರೂ ನಾನು ಮೀಸಲಾತಿ ಹೆಚ್ಚಿಸಿದ್ದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Ram Mandir: ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ವಿಗ್ರಹ ಹೇಗಿದೆ ನೋಡಿ – Photos

    ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಒಳಮೀಸಲಾತಿ ಬಗ್ಗೆ ಇವತ್ತು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದಾರೆ. ಅಹಿಂದ ಅಹಿಂದ ಅಂತ ಹೇಳಿದ್ದೇ, ಹೇಳಿದ್ದು, ದೇವೇಗೌಡರು ಈ ರಾಜ್ಯದಲ್ಲಿ ಏನು ಮಾಡಿದ್ರು ಅನ್ನೋದನ್ನ ಮರೆಮಾಚುವ ಕೆಲಸ ಮಾಡಿಬಿಟ್ಟರು. ಏಕೆಂದರೆ ನಾನೊಬ್ಬ ಒಕ್ಕಲಿಗ ಅದಕ್ಕೆ ಮಾಡಿದ್ರು, ಬೇಕಿದ್ದರೆ ಇದೆಲ್ಲದರ ಬಗ್ಗೆ ಚರ್ಚೆಯಾಗಲಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಮತ್ತೊಂದು ದಾಖಲೆ ಬರೆದ ಕಾಟೇರ: 200 ಕೋಟಿ ರೂ. ಕ್ಲಬ್ ಸೇರಿದ ಸಂಭ್ರಮ

    ನಾನು ಪ್ರಧಾನಿಯಾಗಿದ್ದಾಗ ನಮ್ಮ ಸರ್ಕಾರವನ್ನು ತೆಗೆದುಹಾಕಿದ್ದು ಯಾರು? ಕುಮಾರಸ್ವಾಮಿ ಸರ್ಕಾರವನ್ನ ಬೀಳಿಸಿದ್ದು ಯಾರು? ನನ್ನನ್ನ ಪ್ರಧಾನ ಮಂತ್ರಿ ಸ್ಥಾನದಿಂದ ತೆಗೆದುಹಾಕಿದ್ದು ಯಾರು? 60 ವರ್ಷ ರಾಜಕೀಯ ಹೋರಾಟ ಮಾಡಿದ್ದೇನೆ. ಈ ವಿಷಯ ರಾಜ್ಯಾದ್ಯಂತ ಚರ್ಚೆ ಆಗಬೇಕು. 1995 ರಲ್ಲಿ ನಾನು ನಿರ್ಣಯ ಮಾಡಿದ್ದೆ, ಇವತ್ತು ಒಳಮೀಸಲಾತಿ ಜಾರಿ ಮಾಡಲು ಹೊರಟಿದ್ದಾರೆ. ಇದನ್ನೇ ಈ ಚುನಾವಣೆಯಲ್ಲಿಟ್ಟುಕೊಂಡು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೈದಿಗಳಿಗೆ ಮಂತ್ರಾಕ್ಷತೆ, ರಾಮ ಕಥಾ ಪುಸ್ತಕ ವಿತರಣೆ – ವಿಭಿನ್ನ ಆಚರಣೆಗೆ ಸಾಕ್ಷಿಯಾಯ್ತು ಚಾಮರಾಜನಗರದ ಜೈಲು