Tag: Lok Sbaha ELECTION

  • ಏ.28ಕ್ಕೆ ಬೆಳಗಾವಿಗೆ ನರೇಂದ್ರ ಮೋದಿ: ಅನಿಲ್ ಬೆನಕೆ

    ಏ.28ಕ್ಕೆ ಬೆಳಗಾವಿಗೆ ನರೇಂದ್ರ ಮೋದಿ: ಅನಿಲ್ ಬೆನಕೆ

    ಬೆಳಗಾವಿ: ಏ.28ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಬೆಳಗಾವಿಗೆ (Belagavi) ಆಗಮಿಸಲಿದ್ದು, ಬೃಹತ್ ಚುನಾವಣಾ ಸಮಾವೇಶ ನಡೆಸಲಿದ್ದಾರೆ. ಬೆಳಗಾವಿ ಲೋಕಸಭಾ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಒಳಗೊಂಡಂತೆ ಬೃಹತ್ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ (Anil Benake) ತಿಳಿಸಿದರು.

    ನಗರದ ಬಿಜೆಪಿ ಮಾಧ್ಯಮ ಕಾರ್ಯಾಲಯದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.28ಕ್ಕೆ ಸಂಜೆ 5 ಗಂಟೆಗೆ ಸಮಾವೇಶ ನಡೆಯಲಿದೆ ಎಂದು ಮಾಹಿತಿ ಇತ್ತು. ಆದರೆ ಸದ್ಯದ ಮಾಹಿತಿ ಪ್ರಕಾರ, ಅಂದು ಬೆಳಗ್ಗೆ 11:30ಕ್ಕೆ ಬೆಳಗಾವಿಗೆ ಮೋದಿ ಆಗಮಿಸಿ, 12 ಗಂಟೆಗೆ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎರಡೂ ಲೋಕಸಭೆಯ ಅಭ್ಯರ್ಥಿಗಳಾದ ಅಣ್ಣಾಸಾಬ ಜೊಲ್ಲೆ ಹಾಗೂ ಜಗದೀಶ್ ಶೆಟ್ಟರ್ ಅವರು ವೇದಿಕೆ ಮೇಲೆ ಉಪಸ್ಥಿತರಿರಲಿದ್ದಾರೆ ಎಂದರು. ಇದನ್ನೂ ಓದಿ: ಕರ್ನಾಟಕಕ್ಕೆ ಅನ್ಯಾಯ, ಮೋದಿ ಸರ್ಕಾರ ರೈತರನ್ನು ದ್ವೇಷಿಸುತ್ತಿದೆ: ಸಿಎಂ ಕಿಡಿ

    ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯ ಚುನಾವಣಾ ಪ್ರಭಾರಿ ರಾಧಾ ಮೋಹನ್ ದಾಸ್, ಬೆಳಗಾವಿ ಜಿಲ್ಲೆಯ ಸಂಸದರು, ಶಾಸಕರು, ಮಾಜಿ ಶಾಸಕರು ಭಾಗವಹಿಸುತ್ತಾರೆ. ಚಿಕ್ಕೋಡಿ ಲೋಕಸಭಾ ಹಾಗೂ ಬೆಳಗಾವಿ ಲೋಕಸಭಾ ಒಳಗೊಂಡಂತೆ ಕಾರ್ಯಕ್ರಮ ಆಗಲಿದೆ. ಈಗಾಗಲೇ ಬೆಳಗಾವಿ ಹೊರವಲಯದ ಮಾಲಿನಿ ಸಿಟಿಯಲ್ಲಿ ಪೆಂಡಾಲ್ ಹಾಕಲು ಪೂಜೆ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ!

    ಬಿಜೆಪಿ ಮುಖಂಡ ಎಂ.ಬಿ.ಜಿರಲಿ ಮಾತನಾಡಿ, ಜನಪ್ರಿಯ ನಾಯಕ ಮೋದಿಯವರು ಚುನಾವಣಾ ಪ್ರಚಾರಕ್ಕೆ ರವಿವಾರ ಬರುತ್ತಿದ್ದಾರೆ. ಎರಡು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಸೇರುತ್ತಾರೆ ಎಂದು ತಿಳಿಸಿದರು. ಈ ವೇಳೆ ಎಂಎಲ್‌ಸಿ ಹನಮಂತ ನಿರಾಣಿ, ಮಾಜಿ ಶಾಸಕ ಸಂಜಯ್ ಪಾಟೀಲ್, ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸುತಾರ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಶುಭಾಷ್ ಪಾಟೀಲ್, ಎಫ್‌ಎಸ್ ಸಿದ್ದನಗೌಡ, ಹನಮಂತ ಕೊಂಗಾಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳೋದು ಅಪರಾಧ: ಬೆಂಗ್ಳೂರಿನ ಹಲ್ಲೆ ಪ್ರಸ್ತಾಪಿಸಿ ಮೋದಿ ಕಿಡಿ

  • ರಾಜ್ಯಾಧ್ಯಕ್ಷರ ಬದಲಾವಣೆಯಾದರೆ ಚುನಾವಣೆಗೆ ಸ್ಪರ್ಧಿಸಲ್ಲ: ಈಶ್ವರಪ್ಪ

    ರಾಜ್ಯಾಧ್ಯಕ್ಷರ ಬದಲಾವಣೆಯಾದರೆ ಚುನಾವಣೆಗೆ ಸ್ಪರ್ಧಿಸಲ್ಲ: ಈಶ್ವರಪ್ಪ

    – ಚುನಾವಣಾ ಕಣದಿಂದ ಹಿಂದೆ ಸರಿಯಲ್ಲ ಎಂದ ಬಿಜೆಪಿ ಬಂಡಾಯ ನಾಯಕ
    – ಅಮಿತ್ ಶಾ ಕರೆಗೆ ಸಕಾರಾತ್ಮಕ ಸ್ಪಂದನೆ

    ಶಿವಮೊಗ್ಗ: ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ಅವರಿಗೆ ಮಂಗಳವಾರ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಕರೆ ಮಾಡಿ ಮಾತನಾಡಿದ್ದು, ಬುಧವಾರ ದೆಹಲಿಗೆ (New Delhi) ಬರುವಂತೆ ಸೂಚಿಸಿದ್ದಾರೆ.

    ಅಮಿತ್ ಶಾ ಕರೆಗೆ ಸಕರಾತ್ಮಕವಾಗಿ ಸ್ಪಂದಿಸಿರುವ ಈಶ್ವರಪ್ಪ ಈ ಬಗ್ಗೆ ಆಪ್ತರ ವಲಯದಲ್ಲಿ ಚರ್ಚಿಸಿದ್ದಾರೆ. ಕರೆ ಮಾಡಿದ್ದಾರೆ. ದೆಹಲಿಗೆ ಹೋಗುತ್ತೇನೆ. ಆದರೆ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದೇನೆ. ಚುನಾವಣೆಗೆ ನಿಂತೇ ನಿಲ್ಲುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇಲ್ಲ: ಸಿದ್ದರಾಮಯ್ಯ

    ಈ ಕುರಿತು ಶಿವಮೊಗ್ಗದಲ್ಲಿ (Shivamogga) ಪ್ರತಿಕ್ರಿಯಿಸಿದ ಈಶ್ವರಪ್ಪ, ಮೋದಿ ಅವರು ಕಾಂಗ್ರೆಸ್‌ನಲ್ಲಿ ಕುಟುಂಬ ಸಂಸ್ಕೃತಿ ಇದೆ ಎನ್ನುತ್ತಿದ್ದರು. ಅದೇ ರೀತಿ ರಾಜ್ಯದಲ್ಲಿ ಬಿಜೆಪಿ ಕುಟುಂಬದ ಕೈಯಲ್ಲಿದೆ. ಆ ಕುಟುಂಬದಿಂದ ಪಕ್ಷ ಮುಕ್ತಿ ಆಗಬೇಕು. ಕಾರ್ಯಕರ್ತರಿಗೆ ನೋವಾಗಿದೆ. ಕಾರ್ಯಕರ್ತರ ನೋವು ನಿವಾರಿಸಲು ಸ್ಪರ್ಧೆ ಮಾಡುತ್ತೇನೆ. ಹಿಂದುತ್ವಕ್ಕೆ ಬೆಲೆ ಸಿಗಬೇಕು, ಸಂಘಟನೆಗೆ ಬೆಲೆ ಸಿಗಬೇಕು. ಹಿಂದುಳಿದವರಿಗೆ ರಾಜ್ಯದಲ್ಲಿ ಟಿಕೆಟ್ ಕೊಟ್ಟಿಲ್ಲ. ಅವ್ಯವಸ್ಥೆ ಸರಿಪಡಿಸಲು ಸ್ಪರ್ಧೆ ಮಾಡುತ್ತಿದ್ದೇನೆ. ಕಣದಿಂದ ಹಿಂದಕ್ಕೆ ಸರಿಯಿರಿ. ಆಮೇಲೆ ಬದಲಾವಣೆ ಮಾಡೋಣ ಎಂದರು. ನಾನು ನಿಮಗೆ ಗೌರವ ಕೊಟ್ಟು ದೆಹಲಿಗೆ ಬರುತ್ತೇನೆ. ಆದರೆ ಕಣದಿಂದ ಹಿಂದಕ್ಕೆ ಮಾತ್ರ ಸರಿಯುವುದಿಲ್ಲ ಎಂದು ಹೇಳಿದ್ದೇನೆ ಎಂದರು. ಇದನ್ನೂ ಓದಿ: ಬಾವನನ್ನು ಗೆಲ್ಲಿಸಲು ಪಣ – ಬೆಂಗಳೂರು ಗ್ರಾಮಾಂತರವನ್ನು ಪ್ರತಿಷ್ಠೆಯಾಗಿ ಹೆಚ್‌ಡಿಕೆ ತೆಗೆದುಕೊಂಡಿದ್ದು ಯಾಕೆ?

    ನಿಮ್ಮ ಮಗನ ರಾಜಕಾರಣ ಭವಿಷ್ಯ ನೋಡಬೇಕು ಅಂದಿದ್ದಾರೆ. ನನಗೆ ರಾಜಕೀಯ ಭವಿಷ್ಯ ಸಿಗದಿದ್ದರೂ ಬೇಡ, ಪಕ್ಷ ಶುದ್ದೀಕರಣ ಆಗಬೇಕು ಎಂದು ನನ್ನ ಮಗನೇ ಹೇಳಿದ್ದಾನೆ. ಅದಕ್ಕಾಗಿ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ತಿಳಿಸಿದ್ದೇನೆ. ನಾಳೆ ಮಾತನಾಡೋಣ ಅಂದಿದ್ದಾರೆ. ನಾಳೆ ರಾತ್ರಿ ಅಮಿತ್ ಶಾ ಭೇಟಿ ಮಾಡುತ್ತೇನೆ. ನಾಳೆ ಬೆಳಗ್ಗೆಯೇ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟವಾಗಿ ಈಶ್ವರಪ್ಪ ತಿಳಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿ ಅಲ್‌ ಜಜೀರಾ ನಿಷೇಧ – ಇದು ಉಗ್ರರ ವಾಹಿನಿ ಎಂದ ನೆತನ್ಯಾಹು