Tag: Lok shabha Elections 2024

  • ಕಾಂಗ್ರೆಸ್ ಷರಿಯಾ ಕಾನೂನು ಜಾರಿಗೊಳಿಸಲು ಬಯಸಿದೆ: ಯೋಗಿ ಆದಿತ್ಯನಾಥ್

    ಕಾಂಗ್ರೆಸ್ ಷರಿಯಾ ಕಾನೂನು ಜಾರಿಗೊಳಿಸಲು ಬಯಸಿದೆ: ಯೋಗಿ ಆದಿತ್ಯನಾಥ್

    ಲಕ್ನೋ: ಕಾಂಗ್ರೆಸ್ (Congress) ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದಲ್ಲಿ ಷರಿಯಾ ಕಾನೂನನ್ನು ಜಾರಿಗೊಳಿಸುವ ಮತ್ತು ಜನರ ಆಸ್ತಿಯನ್ನು ಮರುಹಂಚಿಕೆ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಹೇಳಿದ್ದಾರೆ.

    ಅಮ್ರೋಹಾದಲ್ಲಿ ಚುನಾವಣಾ (Lok shabha Elections 2024 ) ರ‍್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶಕ್ಕೆ ದ್ರೋಹ ಬಗೆದಿವೆ. ಮತ್ತೊಮ್ಮೆ ತಮ್ಮ ಸುಳ್ಳು ಪ್ರಣಾಳಿಕೆಯೊಂದಿಗೆ ಈಗ ನಿಮ್ಮ ಬಳಿಗೆ ಬಂದಿವೆ. ನೀವೇ ಹೇಳಿ, ಈ ದೇಶವನ್ನು ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ನಡೆಸುತ್ತದೆಯೇ? ಅಥವಾ ಷರಿಯತ್ ನಡೆಸುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

    ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆಯಲ್ಲಿ ಜನರ ಆಸ್ತಿ ಮರುಹಂಚಿಕೆ ವಿಚಾರ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಚುನಾವಣಾ ರ‍್ಯಾಲಿಯಲ್ಲಿ ಹೇಳಿದ್ದಾರೆ. ಕಾಂಗ್ರೆಸ್‍ನವರು ತಮ್ಮ ಪ್ರಣಾಳಿಕೆಯಲ್ಲಿ ವೈಯಕ್ತಿಕ ಕಾನೂನು ಜಾರಿಗೆ ತರುವುದಾಗಿ ಹೇಳುತ್ತಾರೆ. ಮೋದಿ ತ್ರಿವಳಿ ತಲಾಖ್ ಪದ್ಧತಿಯನ್ನು ನಿಷೇಧಿಸಿದ್ದಕ್ಕೆ ಅವರು ಈ ತೀರ್ಮಾನ ಮಾಡಿದ್ದಾರೆ ಎಂದು ಅವರು ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಕಾಂಗ್ರೆಸ್‌ ಪತನ 2014 ರಿಂದ ಅಲ್ಲ1996 ರಿಂದ ಆರಂಭ!

    2006ರಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಮಾಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ಯೋಗಿ ಆದಿತ್ಯನಾಥ್, ಸಿಂಗ್ ಅವರು ಪ್ರಧಾನಿಯಾಗಿದ್ದಾಗ ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಹೇಳಿದ್ದರು. ಹಾಗಾದರೆ ನಮ್ಮ ದಲಿತರು, ಹಿಂದುಳಿದವರು, ಬಡವರು ಮತ್ತು ರೈತರು ಎಲ್ಲಿಗೆ ಹೋಗಬೇಕು ಎಂದು ಅವರು ಕಿಡಿಕಾರಿದ್ದಾರೆ.

    2014ರ ನಂತರ ಭಯೋತ್ಪಾದನೆಯನ್ನು ನಿಯಂತ್ರಿಸಲಾಗಿದೆ. 2019ರ ಹೊತ್ತಿಗೆ ಭಯೋತ್ಪಾದನೆಯ ಮೂಲ ಜಮ್ಮು-ಕಾಶ್ಮೀರದ 370 ನೇ ವಿಧಿಯನ್ನು ರದ್ದುಪಡಿಸುವಂಥ ಕೆಲಸವನ್ನು ಮೋದಿಜಿ ಮಾಡಿದರು. ಭಯೋತ್ಪಾದನೆ ಭಾರತದಲ್ಲಿ ನಾಶವಾಗಿದೆ. ಈಗ ಎಲ್ಲಿಯಾದರೂ ಪಟಾಕಿಗಳು ಸಿಡಿದಾಗ ಪಾಕಿಸ್ತಾನವು ತನ್ನ ಕೈವಾಡವಿಲ್ಲ ಎಂದು ಸ್ಪಷ್ಟಪಡಿಸುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ವೋಟ್‌ ಹಾಕಿ.. ದೀದಿ ಗೂಂಡಾಗಳನ್ನು ತಲೆಕೆಳಗಾಗಿ ನೇತು ಹಾಕ್ತೀವಿ: ಅಮಿತ್‌ ಶಾ

  • ಮೋದಿ ವಿರುದ್ಧದ ದೂರು ಪರಿಗಣನೆಯಲ್ಲಿದೆ: ಚುನಾವಣಾ ಆಯೋಗ

    ಮೋದಿ ವಿರುದ್ಧದ ದೂರು ಪರಿಗಣನೆಯಲ್ಲಿದೆ: ಚುನಾವಣಾ ಆಯೋಗ

    ನವದೆಹಲಿ: ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ (Congress) ಸಲ್ಲಿಸಿದ್ದ ದೂರು ಸ್ವೀಕರಿಸಲಾಗಿದ್ದು, ಅರ್ಜಿ ಪರಿಗಣನೆಯಲ್ಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ (ECI) ಮೂಲಗಳು ತಿಳಿಸಿವೆ.

    ಪ್ರಧಾನಿ ಮೋದಿಯವರ `ಸಂಪತ್ತಿನ ಮರುಹಂಚಿಕೆ’ ಭಾಷಣಕ್ಕಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಸೋಮವಾರ ಕಾಂಗ್ರೆಸ್ ನಾಯಕರ ನಿಯೋಗ ಚುನಾವಣಾ ಆಯೋಗವನ್ನು ಭೇಟಿ ಮಾಡಿ ದೂರು ನೀಡಿತ್ತು. ದೂರಿನಲ್ಲಿ ಪ್ರಧಾನಿಯವರು ಸುಳ್ಳು ಹೇಳುತ್ತಿದ್ದಾರೆ. ಹಿಂದೂ ಮತ್ತು ಮುಸ್ಲಿಮರ ನಡುವೆ ಒಡಕು ಮೂಡಿಸುತ್ತಿದ್ದಾರೆ. ರಾಜಸ್ಥಾನ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿಯವರ ಸಂಪತ್ತಿನ ಮರುಹಂಚಿಕೆ ಹೇಳಿಕೆ ದುರುದ್ದೇಶಪೂರಿತವಾದದ್ದು. ಕಾಂಗ್ರೆಸ್‍ಗೆ ಮತ ಹಾಕದಂತೆ ಮೋದಿಯವರು ಧರ್ಮವನ್ನು ಬಳಸುತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ದೇಶವಾಸಿಗಳೇ ಎಚ್ಚರ, ಕಾಂಗ್ರೆಸ್‌ ನಿಮ್ಮ ಆಸ್ತಿ, ಚಿನ್ನದ ಮೇಲೆ ಕಣ್ಣಿಟ್ಟಿದೆ: ಮೋದಿ

    ಭಾನುವಾರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಮೋದಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ, ತಾಯಂದಿರು ಮತ್ತು ಸಹೋದರಿಯರ ಚಿನ್ನದ ಮಾಹಿತಿ ಪಡೆದು ಲೆಕ್ಕ ಹಾಕಿ ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಮನಮೋಹನ್ ಸಿಂಗ್ ಸರ್ಕಾರ ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಹೇಳಿದ್ದರು. ಹೆಚ್ಚು ಮಕ್ಕಳಿರುವವರಿಗೆ ನಿಮ್ಮ ಸಂಪತ್ತನ್ನು ಹಂಚಲಾಗುತ್ತದೆ ಎಂದು ಅವರು ಹೇಳಿದ್ದರು.

    ನೀವು ಕಷ್ಟಪಟ್ಟು ದುಡಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಒಪ್ಪುತ್ತೀರಾ? ನಿಮ್ಮ ಆಸ್ತಿಯನ್ನು ವಶಪಡಿಸಿಕೊಳ್ಳಲು ಸರ್ಕಾರಕ್ಕೆ ಹಕ್ಕಿದೆಯೇ? ಚಿನ್ನವು ಪ್ರದರ್ಶನಕ್ಕಾಗಿ ಅಲ್ಲ, ಅದು ಮಹಿಳೆಯರ ಸ್ವಾಭಿಮಾನಕ್ಕೆ ಸಂಬಂಧಿಸಿದೆ. ಮಂಗಳಸೂತ್ರವು ಮಹಿಳೆಯರ ಕನಸಿಗೆ ಸಂಬಂಧಿಸಿದೆ. ಕಾಂಗ್ರೆಸ್ ಈಗ ನಗರ ನಕ್ಸಲರ ಹಿಡಿತದಲ್ಲಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಕರ್ನಾಟಕಕ್ಕೆ ಅನ್ಯಾಯ, ಮೋದಿ ಸರ್ಕಾರ ರೈತರನ್ನು ದ್ವೇಷಿಸುತ್ತಿದೆ: ಸಿಎಂ ಕಿಡಿ