Tag: Lokendra Surya

  • ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್ ರಿಲೀಸ್

    ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್ ರಿಲೀಸ್

    ರೆಡ್ ಅಂಡ್ ವೈಟ್ ಸೆವೆನ್ ರಾಜ್  ನಿರ್ಮಾಣದ ‘ಅಥಿ ಐ ಲವ್ ಯು’ (Athi I Love You) ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದೆ ಚಿತ್ರ ತಂಡ. ಚಾಮುಂಡೇಶ್ವರಿ ಸ್ಟುಡಿಯೋ ನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮಾ ಹರೀಶ್ ಹಾಗೂ ಕರ್ನಾಟಕದ ಖ್ಯಾತ ಸಾಹಸ ನಿರ್ದೇಶಕರಾದ ಥ್ರಿಲ್ಲರ್ ಮಂಜು ಅವರು ಚಿತ್ರದ  ಫಸ್ಟ್ ಲುಕ್ (First Look)ಪೋಸ್ಟರ್  ಅನಾವರಣಗೊಳಿಸಿದರು.

    ವೇದಿಕೆಯಲ್ಲಿ ನಿರ್ಮಾಪಕರಾದ ರೆಡ್ ಅಂಡ್ ವೈಟ್ ಸೆವೆನ್ ರಾಜ್, ಶಿಲ್ಪಾ ಶ್ರೀನಿವಾಸ್ ನಿರ್ಮಾಪಕ ರಾಜು ಕಲ್ಕುಣಿ,  ಸಿವಿಜಿ ಪಬ್ಲಿಕೇಶನ್ ಚಂದ್ರು ಹಾಗೂ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದ್ದು ಸದ್ದಿಲ್ಲದೆ ಕುಂಬಳಕಾಯಿಯನ್ನು ಒಡೆದು ಮುಗಿಸಿರುವುದಾಗಿಯೂ ನಿರ್ಮಾಪಕ ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರು ಹೇಳಿಕೊಂಡರು. ಇದನ್ನೂ ಓದಿ:Exclusive: ಅರ್ಜುನ್ ಸರ್ಜಾ ನಿರ್ದೇಶನದ ಚಿತ್ರದಲ್ಲಿ ಉಪ್ಪಿ ಅಣ್ಣನ ಮಗ ನಟಿಸುತ್ತಾರಾ? ನಿರಂಜನ್ ಸ್ಪಷ್ಟನೆ

    ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಹುತೇಕ ಮುಗಿಯುವ ಹಂತದಲ್ಲಿದ್ದು ಜೂನ್ ತಿಂಗಳಲ್ಲಿ ಚಿತ್ರ ಸೆನ್ಸರ್ ಬಾಗಿಲಿಗೆ ತೆರಳುವ ಸಾಧ್ಯತೆ ಇದೆ ಎಂದು ನಿರ್ದೇಶಕ ಮತ್ತು ನಟ ಲೋಕೇಂದ್ರ ಸೂರ್ಯ (Lokendra Surya) ಹೇಳಿದರು.

     

    ಚಿತ್ರದ ನಟಿ ಶ್ರಾವ್ಯ (Shravya) ಮತ್ತೊಂದು ಚಿತ್ರದ ಶೂಟಿಂಗ್ನಲ್ಲಿ ತೊಡಗಿದ್ದ ಕಾರಣ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲವೆಂದು ತಿಳಿಸಿದರು. ಜೂನ್ ತಿಂಗಳಲ್ಲಿ ಅಥಿ ಐ ಲವ್ ಯು ಚಿತ್ರದ ಟ್ರೈಲರ್ ಕೂಡ ಬಿಡುಗಡೆ ಮಾಡುವ ಯೋಚನೆ ಚಿತ್ರತಂಡಕ್ಕಿದೆ.

     

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಚಿತ್ರೀಕರಣ ಮುಗಿದ ನಂತರ ಫೋಟೋಶೂಟ್ ಮಾಡಿದ ‘ಅಥಿ’ ತಂಡ

    ಚಿತ್ರೀಕರಣ ಮುಗಿದ ನಂತರ ಫೋಟೋಶೂಟ್ ಮಾಡಿದ ‘ಅಥಿ’ ತಂಡ

    ಒಂದು ಮನೆ, ಎರಡು ಪಾತ್ರಗಳನ್ನಿಟ್ಟುಕೊಂಡು ಸಿನಿಮಾ ರೂಪಿಸುವುದು ಅಂದರೆ ಸುಲಭದ ಮಾತಲ್ಲ. ಅದೂ ಹತ್ತಕ್ಕೂ ಹೆಚ್ಚು ನಿಮಿಷಗಳ ಸಿಂಗಲ್ ಶಾಟ್ಸ್ ಕಂಪೋಸ್ ಮಾಡೋದು ಕೂಡಾ ಕಷ್ಟದ ಕೆಲಸವೇ. ಆರಂಭದಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಕುತೂಹಲ ಹೆಚ್ಚಿಸಿಕೊಂಡು ಬಂದಿರುವ ಚಿತ್ರ ‘ಅಥಿ’ (Athi). ಹಾಗೆ ನೋಡಿದರೆ ಕನ್ನಡದಲ್ಲಿ ಗಂಡ-ಹೆಂಡತಿಯ ಸಂಬಂಧದ ಕುರಿತ ಸಾಕಷ್ಟು ಚಿತ್ರಗಳು ಬಂದಿವೆ. ಆದರೆ ಈವರೆಗೂ ಎಲ್ಲೂ, ಯಾರೂ ಹೇಳಿರದ ಹೊಸ ವಿಚಾರವೊಂದನ್ನು ನಾವಿನ್ನಲಿ ಅಥಿಯ ಮೂಲಕ ಅನಾವರಣ ಮಾಡುತ್ತಿದ್ದೇವೆ ಅನ್ನೋದು ಸ್ವತಃ ಚಿತ್ರದ ನಾಯಕನಟರೂ ಆಗಿರುವ, ನಿರ್ದೇಶಕ ಲೋಕೇಂದ್ರ ಸೂರ್ಯ (Lokendra Surya) ಅವರ ಮಾತು.

    ʻಅಟ್ಟಯ್ಯ ವರ್ಸಸ್ ಹಂದಿ ಕಾಯೋಳುʼ ಎನ್ನುವ ಚಿತ್ರದ ಮೂಲಕ ಚಿತ್ರರಂಗದ ಅಚ್ಛರಿ ಮೂಡಿಸಿದವರು ಲೋಕೇಂದ್ರ. ಆ ತನಕ ಯಾವ ಚಿತ್ರಗಳಲ್ಲೂ ನಟಿಸದ, ತಮಗೆ ಪರಿಚಿತರಿರುವವರನ್ನೇ ಪಾತ್ರಗಳನ್ನಾಗಿಸಿ, ಸಿನಿಮಾದ ಅನುಭವವೇ ಇರದವರನ್ನು ತಂತ್ರಜ್ಞರನ್ನಾಗಿಸಿ , ಕಾಡುವ ಕತೆಯ, ಚೆಂದದ ಸಿನಿಮಾ ನೀಡಿ ಎಲ್ಲರ ಗಮನ ಸೆಳೆದಿದ್ದರು. ಈ ಚಿತ್ರ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಸಾಕಷ್ಟು ಸಿನಿಮೋತ್ಸವಗಳಲ್ಲಿ ಪ್ರದರ್ಶನಗೊಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಲೋಕೇಂದ್ರ ಅವರೇ ರೂಪಿಸಿರುವ ʻಕುಗ್ರಾಮʼ ಚಿತ್ರ ಕೂಡ ಬಿಡುಗಡೆಗೆ ತಯಾರಾಗಿದೆ.

    ಸದ್ಯ ಸೂರ್ಯ ಸಿನಿ ಫ್ಯಾಕ್ಟರಿಯಲ್ಲಿ ʻಅಥಿʼ ಚಿತ್ರಕ್ಕಾಗಿ ಕ್ಯೂಟ್ ಮತ್ತು ರೊಮ್ಯಾಂಟಿಕ್ ಫೋಟೋಶೂಟ್ ಮಾಡಲಾಗಿದೆ. ʻʻಫೋಟೋಗಳು ಎಲ್ಲರನ್ನೂ ಆಕರ್ಷಿಸುವುದರ ಜೊತೆಗೆ ಸಿನಿಮಾ ಕಂಟೆಂಟ್ ಹೇಳುವಂತಿರಬೇಕು ಎನ್ನುವ ಕಾರಣಕ್ಕೆ ಚಿತ್ರೀಕರಣವೆಲ್ಲಾ ಬಹುತೇಕ ಮುಕ್ತಾಯವಾಗುವ ಈ ಹಂತದಲ್ಲಿ ಫೋಟೋ ಶೂಟ್ ಮಾಡಿದ್ದೇವೆ. ಚುನಾವಣೆ ಮುಗಿಯುತ್ತಿದ್ದಂತೇ ಮೇ 13ರ ನಂತರ ʻಅಥಿʼ ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡುತ್ತೇವೆʼʼ ಎಂದು ಚಿತ್ರದ ನಿರ್ಮಾಪಕರಾದ  ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರು ಹೇಳಿದ್ದಾರೆ. ನಟಿಯಾಗಿ ಸಾಕಷ್ಟು ಹೆಸರು ಮಾಡಿರುವ ಋತುಚೈತ್ರ ಅವರು ವಸ್ತ್ರವಿನ್ಯಾಸ  ಮಾಡಿರುವುದು ಈ ಫೋಟೋಶೂಟ್ ನ ಮತ್ತೊಂದು ವಿಶೇಷ.

    ಇನ್ನುಳಿದಂತೆ ಸೆವೆನ್ ರಾಜ್ ಆರ್ಟ್ಸ್ ನಿರ್ಮಿಸುತ್ತಿರುವ ಅಥಿ ಐ ಲವ್ ಯು ಚಿತ್ರಕ್ಕೆ ಲೋಕೇಂದ್ರ ಸೂರ್ಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಅನಂತ್ ಆರ್ಯನ್ ಸಂಗೀತ ಚಿತ್ರಕ್ಕಿದೆ. ಎನ್. ಓಂ ಪ್ರಕಾಶ್ ರಾವ್ ಅವರ ಪುತ್ರಿ ಶ್ರಾವ್ಯಾ ರಾವ್ (Shravya Rao) ಅಂದ್ರೆ ಸಾತ್ವಿಕ (Satvik) ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಚಿತ್ರದ ಪರದೆಯನ್ನು ಬಹುತೇಕ ಸಾತ್ವಿಕ ಆವರಿಸಿಕೊಂಡಿದ್ದು ಬಿಡುಗಡೆಗೆ ಕಾತರದಲ್ಲಿ ಕಾಯುತ್ತಿರುವುದಾಗಿ ಹೇಳಿದ್ದಾರೆ ಸಾತ್ವಿಕ ಹೇಳಿದ್ದಾರೆ. ಅಲ್ಲದೆ  ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರ ನಿರ್ಮಾಣದ ಎರಡನೇ ಚಿತ್ರ ಇದಾಗಿದೆ.

  • ಹೊಸದೊಂದು ಸಾಹಸಕ್ಕೆ ಸಾಕ್ಷಿಯಾದ ನಟಿ ಶ್ರಾವ್ಯಾ, ನಟ ಲೋಕೇಂದ್ರ

    ಹೊಸದೊಂದು ಸಾಹಸಕ್ಕೆ ಸಾಕ್ಷಿಯಾದ ನಟಿ ಶ್ರಾವ್ಯಾ, ನಟ ಲೋಕೇಂದ್ರ

    ಟ, ನಿರ್ದೇಶಕ ಲೋಕೇಂದ್ರ (Lokendra Surya) ಹಾಗೂ ಶ್ರಾವ್ಯಾ ರಾವ್ (Shravya Rao) ಕಾಂಬಿನೇಷನ್ ನ ‘ಅಥಿ ಐ ಲವ್ ಯು’ (Athi I Love You) ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಒಂದೇ ದಿನದಲ್ಲಿ, ಒಂದು ಮನೆಯಲ್ಲಿ ನಡೆಯುವ ಕತೆ ಈ ಚಿತ್ರದಲ್ಲಿದೆ. ಗಂಡ-ಹೆಂಡತಿಯ ನಡುವಿನ ಆಪ್ತ ದೃಶ್ಯಗಳು ಇಲ್ಲಿ ಪ್ರಮುಖವಾಗಿರಲಿದೆ. ಅದು ಬೆಂಗಳೂರಿನ ಮನೆಯಲ್ಲಿ ನಡೆದ ಚಿತ್ರೀಕರಣ. ಬರೋಬ್ಬರಿ ಹನ್ನೊಂದು ನಿಮಿಷದ ದೊಡ್ಡ ದೃಶ್ಯವದು. ಅದೂ ಸಿಂಗಲ್‌ ಶಾಟ್‌ನಲ್ಲಿ ಕಂಪೋಸ್‌ ಮಾಡಲಾಗಿತ್ತು. ಮಲಗಿದ್ದ ಗಂಡ ಹೆಂಡತಿ ಎದ್ದನಂತರದ ದೀರ್ಘವಾದ ಈ ದೃಶ್ಯಕ್ಕಾಗಿ ಸಾಕಷ್ಟು ತಯಾರಿಯನ್ನೂ ಮಾಡಿಕೊಳ್ಳಲಾಗಿತ್ತು. ಮನೆಯಲ್ಲೇ ವಿವಿಧ ಕೋನಗಳಲ್ಲಿ ಲೈಟಿಂಗ್‌ ವ್ಯವಸ್ಥೆ ರೂಪಿಸಿ, ಕ್ಯಾಮೆರಾ ಚಲನೆಗೆ ಪ್ಲಾನ್‌ ಮಾಡಲಾಗಿತ್ತು. ಅಂದುಕೊಂಡಂತೇ ಈ ದೃಶ್ಯ ಮೂಡಿಬಂದಿದ್ದು ಚಿತ್ರತಂಡದ ಸಂತಸಕ್ಕೆ ಕಾರಣವಾಗಿದೆ. ಈ ರೀತಿಯ ದೀರ್ಘಾವಧಿಯ ದೃಶ್ಯಗಳು ಚಿತ್ರದುದ್ದಕ್ಕೂ ಮೂಡಿಬರಲಿದೆಯಂತೆ.  ಒಂದು ನಿಮಿಷದ ದೃಶ್ಯವನ್ನು ಕಂಪೋಸ್‌ ಮಾಡುವುದು ಕಷ್ಟದ ಕೆಲಸ. ಇಂಥಾದ್ದರಲ್ಲಿ ಹತ್ತು ನಿಮಿಷಕ್ಕೂ ಅಧಿಕ ಸಮಯದ ದೃಶ್ಯವನ್ನು ಕಟ್ಟುವುದು ನಿಜಕ್ಕೂ ಸವಾಲಿನ ಕೆಲಸ. ಅದನ್ನು ಸ್ವತಃ ನಾಯಕನಾಗಿ ನಟಿಸಿ, ನಿರ್ದೇಶನವನ್ನೂ ಮಾಡಿರುವ ಲೋಕೇಂದ್ರ ಸೂರ್ಯ ಯಶಸ್ವಿಯಾಗಿ ನಿಭಾಯಿಸಿದ್ದಾರೆ. ನಾಯಕಿ ಶ್ರಾವ್ಯಾ ರಾವ್‌ ಕೂಡಾ ಈ ಚಿತ್ರಕ್ಕಾಗಿ ವಿಶೇಷ ತಯಾರಿ ಮಾಡಿಕೊಂಡು ಕ್ಯಾಮೆರಾ ಮುಂದೆ ನಿಂತಿದ್ದಾರೆ.

    ʻʻದೊಡ್ಡ ದೃಶ್ಯಗಳು ಚಿತ್ರದುದ್ದಕ್ಕೂ ಸಹಜವಾಗಿಯೇ ಕಾಣಸಿಗುತ್ತವೆ, ಕತ್ತರಿಸಿ ಜೋಡಿಸಿದರೂ ಸಿಗದ  ಅನುಭವವನ್ನು ಶಾಟ್ ಕಟ್ ಮಾಡದೆಯೇ ಪರದೆಯ ಮೇಲೆ ತರಬೇಕಾದರೆ, ಕಲಾವಿದರು ತಮ್ಮ ಸಾಮರ್ಥ್ಯವನ್ನು ಸಾಭೀತು ಪಡಿಸಬೇಕಾಗುತ್ತದೆ. ಅಂತಹ ಪ್ರಯತ್ನದಲ್ಲಿ ಶ್ರಾವ್ಯ ಅವರು ನನಗೆ ಉತ್ತಮವಾದ ಸಾಥ್ ನೀಡಿದ್ದಾರೆ.  ಭಾವನಾತ್ಮಕ ದೃಶ್ಯಗಳನ್ನು ಅಲ್ಲಲ್ಲಿ ಸಣ್ಣ ಶಾಟ್‌ಗಳಾಗಿ ವಿಭಾಗಿಸಿದರೆ, ಭಾವನೆಗಳನ್ನು ಹಿಡಿದಿಡುವುದು ಕಷ್ಟ. ಆದಕಾರಣ ಕೆಲವು ದೃಶ್ಯಗಳನ್ನು ಒಂದೊಂದೇ ಶಾಟ್‌ಗಳಲ್ಲಿ ಚಿತ್ರಿಸುತ್ತಿದ್ದೇವೆ. ಅದು ಪ್ರೇಕ್ಷಕರಿಗೆ ಮತ್ತಷ್ಟು ಹಿತವೆನಿಸುತ್ತದೆʼʼ ಎನ್ನುವುದು ನಿರ್ದೇಶಕ ಲೋಕೇಂದ್ರ ಸೂರ್ಯ ಅವರ ಮಾತು.

    ʻʻಸಾಕಷ್ಟು ಸಿನಿಮಾಗಳಲ್ಲಿ ನಾನು ಅಭಿನಯಿಸಿದ್ದೇನೆ. ಎಲ್ಲವೂ ನನಗೆ ಇಷ್ಟವಾದವುಗಳೇ, ಆದರೆ, ಅಥಿ ಐ ಲವ್ ಯು ಚಿತ್ರದಲ್ಲಿ ನಾನು ಬೇರೊಂದು ಬಗೆಯಲ್ಲಿ ಅನುಭವ ಪಡೆದುಕೊಳ್ಳುತ್ತಿದ್ದೇನೆ. ಈ ಚಿತ್ರದ ಚಿತ್ರೀಕರಣ ನನಗೊಂದು ವಿಷೇಶವಾದ ಅನುಭವ ನೀಡುತ್ತಿದೆ. ನಿರ್ದೇಶಕ ಲೋಕೇಂದ್ರ ಸೂರ್ಯ ಅವರ ಜೊತೆ ಅಭಿನಯಿಸುವುದರ ಜೊತೆಗೆ, ಅವರ ನಿರ್ದೇಶನದ ರೀತಿಯೂ ಹೊಸತನದಿಂದ ಕೂಡಿದೆ. ಅಥಿ ಐ ಲವ್ ಯು ನನ್ನ ಚಿತ್ರ ಗುಚ್ಚದಲ್ಲಿ ಒಂದೊಳ್ಳೆ ಚಿತ್ರವಾಗುತ್ತದೆ.“ ಎಂದು ನಟಿ ಶ್ರಾವ್ಯ ರಾವ್ ಹೇಳಿದರು.  ಇದನ್ನೂ ಓದಿ:ಬರ್ತ್‌ಡೇ ಬಗ್ಗೆ ಅಪ್‌ಡೇಟ್ ನೀಡಿದ ರಾಧಿಕಾ ಪಂಡಿತ್

    ನಾನು ಈ ಬಾರಿ ಚಿತ್ರದ ನಿರ್ಮಾಣದಲ್ಲಿ ತುಂಬಾ ಸಂತಸವನ್ನು ಹೊಂದಿದ್ದೇನೆ, ಒಂದೊಳ್ಳೆ ಚಿತ್ರದ ನಿರ್ಮಾಣ ನನ್ನ ಬ್ಯಾನರ್ ನಲ್ಲಿ ನಡೆಯುತ್ತಿರುವುದು ನನಗೆ ಮತ್ತಷ್ಟು ಸಂತಸವನ್ನು ತಂದುಕೊಟ್ಟಿದೆ. ಚಿತ್ರೀಕರಣದ ವೇಳೆಯಲ್ಲಿ ಕೆಲವು ದೃಶ್ಯಗಳು ನನಗೆ ತುಂಬಾ ಮಜಾ ಎನಿಸಿದೆ. ನಾನು ಅದೆಷ್ಟು ಅನುಭವಿಸಿದ್ದೇನೆ ಅನ್ನೋದನ್ನು ಪರದೆಯ ಮೇಲೆ ಚಿತ್ರ ವೀಕ್ಷಣೆ ಮಾಡಿದರೆ ಗೊತ್ತಾಗುತ್ತದೆ. ಎಲ್ಲಾ ಅಂದುಕೊಂಡತೆ ಚಿತ್ರದ ಫಸ್ಟ್ ಕಾಪಿ ರೆಡಿಯಾದ ಕೂಡಲೇ ಬಿಡುಗಡೆಗೆ ತಡ ಮಾಡುವುದಿಲ್ಲ. ಮೇ ಮೊದಲ ವಾರದಲ್ಲೇ ಬಿಡುಗಡೆ ಮಾಡುತ್ತೇವೆ. ಆದಷ್ಟು ಬೇಗ ಈ ಚಿತ್ರವನ್ನು ಪ್ರೇಕ್ಷಕರ ಮಡಿಲಿಗೆ ಹಾಕಬೇಕು ಎನ್ನುವ ತವಕ ನನ್ನದಾಗಿದೆʼʼ ಎಂದು ನಿರ್ಮಾಪಕ ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರು ತಮ್ಮ ಸಂತೋಷವನ್ನು ಹೇಳಿಕೊಂಡರು. ಇನ್ನು ಕುಗ್ರಾಮ ಚಿತ್ರದ ನಟಿ ಋತು ಚೈತ್ರಾ ಅವರೇ ವಸ್ತ್ರ ವಿನ್ಯಾಸ ಮಾಡಿದ್ದು, ಜೋಡಿಗಳಿಗೆ ಮತ್ತಷ್ಟು ಅಂದವನ್ನು ಹೆಚ್ಚಿಸಿದ್ದಾರೆ.  ಇದೇ ತಿಂಗಳಲ್ಲಿ ಚಿತ್ರದ ಕುಂಬಳ ಕಾಯಿ ಹೊಡೆಯುವ ಯೋಚನೆ ಚಿತ್ರ ತಂಡಕ್ಕಿದೆ.

    ಸೆವೆನ್ ರಾಜ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ, ರೆಡ್ ಅಂಡ್ ವೈಟ್ ಸೆವೆನ್ ರಾಜ್ ʻಅಥಿ ಐ ಲವ್ ಯೂʼ ಚಿತ್ರದಲ್ಲಿ ಲೋಕೇಂದ್ರ ಸೂರ್ಯ ಕಥೆ, ಚಿತ್ರಕತೆ, ಸಂಭಾಷಣೆಯ ಜೊತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಅನಂತ್ ಆರ್ಯನ್ ಸಂಗೀತ ಚಿತ್ರಕ್ಕಿದೆ. ನಟಿ ಋತು ಚೈತ್ರ ಈ ಚಿತ್ರಕ್ಕೆ ವಸ್ತ್ರ ವಿನ್ಯಾಸ ಮಾಡಿರುವುದು ವಿಶೇಷ. ಎನ್. ಓಂಪ್ರಕಾಶ್ ರಾವ್ ಅವರ ಪುತ್ರಿ ಶ್ರಾವ್ಯಾ ರಾವ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

  • ‘ಐ ಲವ್ ಯೂ’ ಎಂದ ನಟಿ ಶ್ರಾವ್ಯ ರಾವ್

    ‘ಐ ಲವ್ ಯೂ’ ಎಂದ ನಟಿ ಶ್ರಾವ್ಯ ರಾವ್

    ಟ್ಟಯ್ಯ ವರ್ಸಸ್‌ ಹಂದಿ ಕಾಯೋಳು ಎನ್ನುವ ಭಿನ್ನ ಸಿನಿಮಾದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದವರು ಲೋಕೇಂದ್ರ ಸೂರ್ಯ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದಲ್ಲಿ ಪ್ರದರ್ಶನಗೊಂಡಿದ್ದ ಆ ಚಿತ್ರವನ್ನು ಎಲ್ಲ ವಲಯದ ಜನ ಇಷ್ಟ ಪಟ್ಟಿದ್ದರು. ನಂತರ ಲೋಕೇಂದ್ರ ಅವರು ʻಚೆಡ್ಡಿದೋಸ್ತ್‌ʼ ಚಿತ್ರಕ್ಕೆ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಟಿಸಿದ್ದರು. ಆ ನಂತರ ಥ್ರಿಲ್ಲರ್‌ ಮಂಜು ಅವರ ಡೆಡ್ಲಿ ಕಿಲ್ಲರ್‌ ಚಿತ್ರದಲ್ಲಿ ಖಳನಟನಾಗಿ ಅಭಿನಯಿಸಿದ್ದಾರೆ. ಇತ್ತೀಚೆಗಷ್ಟೇ ಸಿಂಗಾಪೂರದಲ್ಲಿ ಕಾರ್ನಿವಲ್‌ ಫೆಸ್ಟಿವಲ್‌ನಲ್ಲಿ ಅತ್ಯುತ್ತಮ ಛಾಯಾಗ್ರಹಣ ಪ್ರಶಸ್ತಿ ಪಡೆದ ಮತ್ತು ಹಲವು ದೇಶಗಳಲ್ಲಿ ಪ್ರಶಸ್ತಿಗಳನ್ನು ಪಡೆದ ʻಕುಗ್ರಾಮʼ ಚಿತ್ರದ ರಚನೆ ಮತ್ತು ನಿರ್ದೇಶನ ಕೂಡಾ ಇವರದ್ದೇ. ಇನ್ನೇನು ತೆರೆಗೆ ಬರಲು ಸಿದ್ದಗೊಳ್ಳುತ್ತಿರುವ ʻಬ್ರಹ್ಮಕಮಲʼ ಚಿತ್ರಕ್ಕೆ ಲೋಕೇಂದ್ರ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

    ನಟನೆ, ನಿರ್ದೇಶನದ ಜೊತೆಗೆ ಛಾಯಾಗ್ರಾಹಕರಾಗಿಯೂ ಕೆಲಸ ಮಾಡುತ್ತಿರುವ ಲೋಕೇಂದ್ರ ಸೂರ್ಯ ಈಗ ಹೊಸ ಸಿನಿಮಾವೊಂದನ್ನು ಆರಂಭಿಸಿದ್ದಾರೆ. ಸ್ವತಃ ಲೋಕೇಂದ್ರ ಅವರೇ ನಿರ್ದೇಶಿಸಿ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ʻಅಥಿ ಐ ಲವ್‌ ಯೂʼ ಎಂಬ ಹೆಸರನ್ನಿಡಲಾಗಿದೆ. ಫೆಬ್ರವರಿ 7ರ ಬೆಳಿಗ್ಗೆ ರಾಜಾಜಿನಗರದ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಸರಳ ಪೂಜಾ ಕಾರ್ಯದೊಂದಿಗೆ ʻಅಥಿ ಐ ಲವ್‌ ಯೂʼ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಈ ಮುಹೂರ್ತ ಕಾರ್ಯಕ್ರಮಕ್ಕೆ ಆಗಮಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಭಾ ಮ ಹರೀಶ್‌ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರು. ಭಾ ಮ ಗಿರೀಶ್‌ ಕ್ಯಾಮೆರಾ ಚಾಲನೆ ಮಾಡಿದರು. ನಿರ್ಮಾಪಕ ರೆಡ್‌ & ವೈಟ್‌ ಸೆವೆನ್‌ ರಾಜ್‌ ಉಪಸ್ಥಿತರಿದ್ದರು. ಇವರ ಜೊತೆಗೆ ಚಿತ್ರರಂಗದ ಅನೇಕ ಗಣ್ಯರು ಭಾಗವಹಿಸಿದ್ದರು. ಇದನ್ನೂ ಓದಿ: ನಟ ಪ್ರಭಾಸ್ ಜೊತೆ ಕೃತಿ ಸನೋನ್ ಮದುವೆ: ಬ್ರೇಕಿಂಗ್ ನ್ಯೂಸ್ ಎಂದ ಉಮೈರ್

    ಸೆವೆನ್‌ ರಾಜ್‌ ಆರ್ಟ್ಸ್‌ ಬ್ಯಾನರ್‌ ಅಡಿಯಲ್ಲಿ, ರೆಡ್‌ ಅಂಡ್‌ ವೈಟ್‌ ಸೆವೆನ್‌ ರಾಜ್‌ ʻಅಥಿ ಐ ಲವ್‌ ಯೂʼ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಲೋಕೇಂದ್ರ ಸೂರ್ಯ ಕಥೆ, ಚಿತ್ರಕತೆ, ಸಂಭಾಷಣೆಯ ಜೊತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಯುಡಿವಿ ವೆಂಕಿ ಸಂಕಲನ, ಅನಂತ್‌ ಆರ್ಯನ್‌ ಸಂಗೀತ ಚಿತ್ರಕ್ಕಿದೆ. ನಟಿ ಋತು ಚೈತ್ರ ಈ ಚಿತ್ರಕ್ಕೆ ವಸ್ತ್ರ ವಿನ್ಯಾಸ ಮಾಡಿರುವುದು ವಿಶೇಷ. ಈಗಾಗಲೇ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಉತ್ತಮ ಹೆಸರು ಪಡೆದಿರುವ ಎನ್.‌ ಓಂ ಪ್ರಕಾಶ್‌ ರಾವ್‌ ಅವರ ಪುತ್ರಿ ಶ್ರಾವ್ಯಾ ರಾವ್‌ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

    ʻʻಗಂಡ-ಹೆಂಡತಿ ನಡುವೆ ಒಂದು ದಿನದಲ್ಲಿ ನಡೆಯುವ ಕತೆ ʻಅಥಿ ಐ ಲವ್‌ ಯೂʼ ಪ್ರಧಾನ ಎಳೆಯಾಗಿದೆ. ಎರಡು ಪಾತ್ರಳನ್ನು ಕೇಂದ್ರವಾಗಿಟ್ಟುಕೊಂಡು ಚಿತ್ರಕತೆ ರೂಪಿಸಲಾಗಿದೆ. ಗಂಡ ಕೆಲಸಕ್ಕೆಂದು ಹೊರ ಹೋದ ನಂತರ ನಡೆಯುವ ಒಂದಷ್ಟು ಘಟನೆಗಳನ್ನು ರೋಚಕವಾಗಿ ತೋರಸಲಾಗುತ್ತದೆʼ ಎಂದು ಲೋಕೇಂದ್ರ ಸೂರ್ಯ ಹೇಳಿಕೊಂಡಿದ್ದಾರೆ. ʻʻಇತ್ತೀಚೆಗೆ ಹಲವಾರು ಸಿನಿಮಾಗಳ ಕತೆ ಕೇಳಿದ್ದೇನೆ. ಆದರೆ ʻಅಥಿʼ ಚಿತ್ರದ ಕತೆ ನನಗೆ ಅಪಾರವಾಗಿ ಇಷ್ಟವಾಯ್ತು. ಈ ಪಾತ್ರ ಮತ್ತು ಸಿನಿಮಾ ಎರಡೂ ಕನ್ನಡದ ಮಟ್ಟಿಗೆ ತೀರಾ ಹೊಸದಾಗಿದೆ. ಇಡೀ ಚಿತ್ರ ನನ್ನ ಪಾತ್ರದ ಮೇಲೇ ಹೆಚ್ಚು ಕ್ಯಾರಿ ಆಗುತ್ತಿರುವುದು ನನಗೆ ಖುಷಿ ಕೊಟ್ಟಿದೆʼʼ ಎಂದು ನಾಯಕಿ ಶ್ರಾವ್ಯ ರಾವ್‌ ಹೇಳಿದ್ದಾರೆ. ಸದ್ಯ ʻಅಥಿ ಐ ಲವ್‌ ಯೂʼ ಚಿತ್ರದ ಮುಹೂರ್ತ ನೆರವೇರಿದ್ದು, ಬೆಂಗಳೂರಿನಲ್ಲೇ ಬಹುತೇಕ ಚಿತ್ರೀಕರಣ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k