Tag: LokSabha election

  • ಯಾವುದೇ ಕಾರಣಕ್ಕೂ ಮುನಿಯಪ್ಪಗೆ ಬೆಂಬಲ ನೀಡಲ್ಲ: ಕೈ ಶಾಸಕ ನಾರಾಯಣಸ್ವಾಮಿ

    ಯಾವುದೇ ಕಾರಣಕ್ಕೂ ಮುನಿಯಪ್ಪಗೆ ಬೆಂಬಲ ನೀಡಲ್ಲ: ಕೈ ಶಾಸಕ ನಾರಾಯಣಸ್ವಾಮಿ

    ಕೋಲಾರ: ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್‍ನಲ್ಲಿ ನಾಯಕರ ನಡುವೆ ಭಿನ್ನಮತ ಬುಗಿಲೆದ್ದಿದ್ದು, ಕೈ ನಾಯಕ ಕೆ.ಎಚ್.ಮುನಿಯಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಶಾಸಕ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ವಿ.ಮುನಿಯಪ್ಪ, ಸುಧಾಕರ್ ರೆಡ್ಡಿ, ಶ್ರೀನಿವಾಸಗೌಡ, ಕೊತ್ತೂರು ಮಂಜುನಾಥ್, ವೆಂಕಟಶಿವಾರೆಡ್ಡಿ, ಚೌಡರೆಡ್ಡಿ, ಎಂ.ನಾರಾಯಣಸ್ವಾಮಿ ಅವರನ್ನ ಮೂಲೆಗುಂಪು ಮಾಡಿದ್ದಷ್ಟೆ ಮುನಿಯಪ್ಪನವರ ಸಾಧನೆ. ಕೋಲಾರ ಜಿಲ್ಲೆಗೆ ಮುನಿಯಪ್ಪ ಕೊಡುಗೆ ಶೂನ್ಯ. ಹೀಗಾಗಿ ಬದಲಾವಣೆ ಬೇಕು ಎಂದು ಲೋಕಸಭೆ ಚುನಾವಣೆಗೆ ಹೆಚ್.ಸಿ ಮಹದೇವಪ್ಪರನ್ನು ಕಣಕ್ಕಿಳಿಸುವಂತೆ ಹೈಕಮಾಂಡ್‍ನಲ್ಲಿ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

    ಒಂದು ವೇಳೆ ಮುನಿಯಪ್ಪ ಅವರಿಗೆ ಟಿಕೆಟ್ ನೀಡಿದ್ದಲ್ಲಿ, ನಾವೆಲ್ಲ ಕೂತು ಚರ್ಚಿಸಿ ಮುಂದೇನು ಮಾಡಬೇಕು ಅಂತ ತೀರ್ಮಾನ ತೆಗೆದುಕೊಳ್ಳುತ್ತೇವೆ. ನಾಳೆ ಎಲ್ಲವೂ ತಿಳಿಯುತ್ತದೆ. ಈ ಬಾರಿ ಪರಿಸ್ಥಿತಿ ವಿಭಿನ್ನವಾಗಿದೆ, ಯಾವುದೇ ಕಾರಣಕ್ಕೂ ಮುನಿಯಪ್ಪ ಅವರಿಗೆ ಬೆಂಬಲ ನೀಡಲ್ಲ ಎಂದು ಪರೋಕ್ಷವಾಗಿ ನಾರಾಯಣಸ್ವಾಮಿ ಹೇಳಿದ್ದಾರೆ.

  • ಮದುವೆ ಗಂಡು ಯಾರು ಎಂಬುದು ನಾಳೆ ಗೊತ್ತಾಗಲಿದೆ: ಶಾಸಕ ರಾಮದಾಸ್

    ಮದುವೆ ಗಂಡು ಯಾರು ಎಂಬುದು ನಾಳೆ ಗೊತ್ತಾಗಲಿದೆ: ಶಾಸಕ ರಾಮದಾಸ್

    ಮೈಸೂರು: ಮೈಸೂರು- ಕೊಡಗು ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಯಾರು ಎಂಬುದು ನಾಳೆ ಗೊತ್ತಾಗಲಿದೆ. ಮದುವೆ ಗಂಡು ಯಾರು ಎಂಬುದು ನಾಳೆ ಗೊತ್ತಾಗಲಿದ್ದು ಮದುವೆ ಗಂಡಿಗೆ ನಾಳೆ ಕಂಕಣ ಕಟ್ತೀವಿ ಎಂದು ಬಿಜೆಪಿ ಶಾಸಕ ಎಸ್.ಎ. ರಾಮದಾಸ್ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

    ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಮದಾಸ್ ಅವರು, “ಬಹುತೇಕ ನಾಳೆ ಮದುವೆ ಮನೆ ಗಂಡುಗಳಿಗೆ ಕಂಕಣ ಕಟ್ಟಿ ಬಳಿಕ ಆಯಾ ಕ್ಷೇತ್ರಗಳಿಗೆ ಕರೆದುಕೊಂಡು ಬರುತ್ತೇವೆ. ಯಾರೇ ಬಂದರೂ ಈ ಕ್ಷೇತ್ರವನ್ನು ಗೆಲ್ಲುತ್ತೇವೆ. ಹೊಸ ಗಂಡಾದ್ರು ಸರಿ, ಹಳೆ ಗಂಡಾದ್ರು ಸರಿ” ಎಂದು ಹೇಳಿದರು.

    ನಾವು ಕರ್ನಾಟಕದಲ್ಲಿ 28 ಕ್ಷೇತ್ರದಲ್ಲಿ ಗೆಲ್ಲಬೇಕು ಎಂದುಕೊಂಡಿದ್ದೇವೆ. ಮೋದಿ ಮುಖ ನೋಡಿ ಚುನಾವಣೆ ಕೆಲಸ ಮಾಡ್ತೀವಿ. ಲೋಕಸಭಾ ಚುನಾವಣೆಗೆ ಸ್ಥಳೀಯ ನಾಯಕತ್ವದ ಪ್ರಶ್ನೆ ಬರಲ್ಲ. ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ, ನಮಗೆ ಮೋದಿ ಅಷ್ಟೇ ಎಂದರು.

    ಹಾಸನ ಹಾಗೂ ಮಂಡ್ಯ ಕ್ಷೇತ್ರದಲ್ಲಿ ಅಲ್ಲಿನ ಪರಿಸರಕ್ಕೆ ಅನುಗುಣವಾಗಿ ಚುನಾವಣೆ ನಡೆಯುತ್ತದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೇಶದ ಪ್ರಧಾನಿ ಹುದ್ದೆಗೆ ರಾಹುಲ್ ಸಿದ್ಧರಾಗಿಲ್ಲ : ಕಾಂಗ್ರೆಸ್ ಮಾಜಿ ಸಚಿವ

    ದೇಶದ ಪ್ರಧಾನಿ ಹುದ್ದೆಗೆ ರಾಹುಲ್ ಸಿದ್ಧರಾಗಿಲ್ಲ : ಕಾಂಗ್ರೆಸ್ ಮಾಜಿ ಸಚಿವ

    ಕಲಬುರಗಿ: ಭಾರತದ ಪ್ರಧಾನಿಯಾಗಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೂಕ್ತವಲ್ಲ. ಅವರು ಇನ್ನೂ ಪ್ರಧಾನಿಯಾಗುವ ಮಟ್ಟಿಗೆ ಸಿದ್ಧವಾಗಿಲ್ಲ ಎಂದು ಕಾಂಗ್ರೆಸ್ ಮಾಜಿ ಸಚಿವ ಮಾಲಕರೆಡ್ಡಿ ನೀಡಿದ್ದಾರೆ.

    ಬಿಜೆಪಿ ಸೇರ್ಪಡೆ ವದಂತಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಲಕರೆಡ್ಡಿ, ನಾನು ಕಾಂಗ್ರೆಸ್ ಬಿಡುವುದಿಲ್ಲ. ಅನಾರೋಗ್ಯದ ಕಾರಣದಿಂದ ಚುನಾವಣೆ ವಿಚಾರದಲ್ಲಿ ದೂರವಿದ್ದೇನೆ. ದೇಶದ ಪ್ರಧಾನಿ ಹುದ್ದೆಗೆ ರಾಹುಲ್ ಸೂಕ್ತವಲ್ಲ. ಅವರು ಪ್ರಧಾನಿ ಹುದ್ದೆ ನಿರ್ವಹಿಸಲು ಸಿದ್ಧರಾಗಿಲ್ಲ. ದೇಶದ ರಕ್ಷಣೆ ಮುಖ್ಯ, ಸದ್ಯ ಇರುವ ಪರಿಸ್ಥತಿಯಲ್ಲಿ ಮೋದಿ ಅವರು ದೇಶದ ರಕ್ಷಣಾ ವಿಚಾರದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಈ ವಿಷಯದಲ್ಲಿ ನಾನು ಪ್ರಧಾನಿ ಮೋದಿಯನ್ನು ಬೆಂಬಲಿಸುತ್ತೆನೆ. ರಾಷ್ಟ್ರ ಮಟ್ಟದಲ್ಲಿ ರಾಜಕಾರಣ ಮಾಡಿ ಅನುಭವವಿರುವ ನಾಯಕರೇ ಮೋದಿ ನಾಯಕತ್ವವನ್ನು ಒಪ್ಪಿದ್ದಾರೆ ಎಂದು ಹೇಳಿದರು.

    ಸೋನಿಯಾ ಗಾಂಧಿ ಅವರಿಗೆ ರಾಜಕೀಯದ ಮೇಲಿದ್ದ ಜಾಣ್ಮೆ ರಾಹುಲ್ ಅವರಲ್ಲಿ ನಾನು ಕಂಡಿಲ್ಲ. ಅವರು ಇನ್ನೂ ರಾಜಕೀಯದಲ್ಲಿರುವ ಅನುಭವ ಸಾಲದು. ನಾನು ಪಕ್ಷ ಬಿಡುವ ಆಲೋಚನೆ ಮಾಡಿಲ್ಲ. ನನಗೆ ಯಾವುದೇ ಅಸಮಾಧಾನ ಇಲ್ಲ. ನಾನು ಖರ್ಗೆ ಪರ ಪ್ರಚಾರ ಮಾಡಲ್ಲ, ಪಕ್ಷದ ಪರವಾಗಿ ಪ್ರಚಾರ ಮಾಡುತ್ತೆನೆ. ಯಾಕೆಂದರೆ ಇತ್ತೀಚಿಗೆ ಕ್ಷೇತ್ರದಲ್ಲಿ ಖರ್ಗೆಯವರ ವರ್ಚಸ್ಸು ಕಡಿಮೆ ಆಗಿದೆ. ಅದಕ್ಕಾಗಿ ಖರ್ಗೆ ಆಪ್ತರು ಅವರನ್ನು ಬಿಟ್ಟು ಹೋಗುತ್ತಿದ್ದಾರೆ. ನಾನು ಖರ್ಗೆಯ ನಾಯಕತ್ವ ಸಹ ಒಪ್ಪಲ್ಲ ಎಂದು ಹೇಳುವ ಮೂಲಕ ಸ್ಥಳೀಯ ನಾಯಕತ್ವದ ಬಗ್ಗೆ ಬೇಸರ ವ್ಯಕ್ತಪಡಿಸಿದರು.

  • ರಾಹುಲ್ ಗಾಂಧಿಗೆ ಪತ್ರ ಬರೆದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

    ರಾಹುಲ್ ಗಾಂಧಿಗೆ ಪತ್ರ ಬರೆದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

    ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ.

    ಕರ್ನಾಟಕದಿಂದಲೇ ಸ್ಪರ್ಧೆ ಮಾಡುವಂತೆ ಪತ್ರ ಬರೆಯುವ ಮೂಲಕ ರಾಹುಲ್ ಗಾಂಧಿ ಅವರಿಗೆ ದಿನೇಶ್ ಗುಂಡೂರಾವ್ ಆಹ್ವಾನ ನೀಡಿದ್ದಾರೆ.

    ಪತ್ರದಲ್ಲಿ ಏನಿದೆ?
    “ನಿಮ್ಮ ಸ್ಪರ್ಧೆಯಿಂದ ಇಡೀ ಕರ್ನಾಟಕಕ್ಕಷ್ಟೇ ಅಲ್ಲ, ಇಡೀ ದಕ್ಷಿಣ ಭಾರತಕ್ಕೆ ಬಲ ಬರಲಿದೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಇದೆ. ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಈ ಸಲ ಗೆಲ್ಲಲಿದೆ. ನಿಮ್ಮ ಸ್ಪರ್ಧೆಗೆ ಸದಾ ಸ್ವಾಗತ. ರಾಜ್ಯ ಕಾಂಗ್ರೆಸ್ ನಿಮ್ಮ ಸ್ಪರ್ಧೆಯ ನಿರೀಕ್ಷೆಯಲ್ಲಿದೆ. ಅಲ್ಲದೆ ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಮತ್ತು ಸೋನಿಯಾ ಗಾಂಧಿಯ ಅವರನ್ನು ನಮ್ಮ ರಾಜ್ಯದಿಂದ ಲೋಕಸಭೆಗೆ ಗೆಲ್ಲಿಸಿ ಕಳುಹಿಸಿದ್ದೇವೆ” ಎಂದು ದಿನೇಶ್ ಗುಂಡೂರಾವ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಕಳೆದ ವಾರ ಚಾಮರಾಜನಗರದಲ್ಲಿ ನಡೆದ ಕಾಂಗ್ರೆಸ್ ಪರಿವರ್ತನಾ ರ‍್ಯಾಲಿಯಲ್ಲಿ ಮಾತನಾಡಿದ ದಿನೇಶ್, ರಾಹುಲ್ ಗಾಂಧಿಯವರು ಕೇವಲ ಉತ್ತರ ಭಾರತದಿಂದ ಮಾತ್ರ ಸ್ಪರ್ಧೆ ಮಾಡುವುದಲ್ಲ, ದಕ್ಷಿಣ ಭಾರತದಿಂದಲೂ ಸ್ಪರ್ಧೆ ಮಾಡಲಿ. ಅದರಲ್ಲೂ ಕರ್ನಾಟಕದಿಂದಲೇ ಸ್ಪರ್ಧೆ ಮಾಡಲಿ ಎಂದು ಹೇಳಿ ಆಹ್ವಾನ ನೀಡಿದ್ದರು. ಈ ಹಿಂದೆ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ನಾವು ಆಯ್ಕೆ ಮಾಡಿದ್ದೆವು. ಈಗ ರಾಹುಲ್ ಗಾಂಧಿಯನ್ನು ಆಯ್ಕೆ ಮಾಡಿ ಪ್ರಧಾನ ಮಂತ್ರಿಯನ್ನಾಗಿ ಮಾಡೋಣ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೋಕಸಭಾ ಚುನಾವಣೆ: ಯಾವ ಕ್ಷೇತ್ರದಲ್ಲಿ ಯಾರಿಗೆ ಬಿಜೆಪಿ ಟಿಕೆಟ್?

    ಲೋಕಸಭಾ ಚುನಾವಣೆ: ಯಾವ ಕ್ಷೇತ್ರದಲ್ಲಿ ಯಾರಿಗೆ ಬಿಜೆಪಿ ಟಿಕೆಟ್?

    ಬೆಂಗಳೂರು: ಹಾಲಿ ಬಿಜೆಪಿಯ ಎಲ್ಲ ಸಂಸದರಿಗೆ ಟಿಕೆಟ್ ಬಹುತೇಕ ಫಿಕ್ಸ್ ಆಗಿದೆ. ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡುವ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಯಡಿಯೂರಪ್ಪ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಸದಾನಂದಗೌಡ, ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಸಿ.ಟಿ.ರವಿ, ಅರವಿಂದ ಲಿಂಬಾವಳಿ, ನಳಿನ್ ಕುಮಾರ್ ಕಟೀಲ್, ಆರ್. ಅಶೋಕ್, ಪ್ರಹ್ಲಾದ್ ಜೋಶಿ, ಅರುಣ್ ಕುಮಾರ್ ಭಾಗಿಯಾಗಿದ್ದರು.

    ಅಂತಿಮಗೊಳಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಹಿಡಿದುಕೊಂಡು ಯಡಿಯೂರಪ್ಪ ಇಂದು ರಾತ್ರಿಯೇ ದೆಹಲಿಗೆ ತೆರಳಲಿದ್ದು ಸೋಮವಾರ ಹೈಕಮಾಂಡ್ ನಾಯಕರು ಚರ್ಚೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಹಾಕಬೇಕೋ? ಬೇಡವೋ ಎಂಬುದರ ನಿರ್ಧಾರ ಹೈಕಮಾಂಡ್ ನಿರ್ಧಾರಕ್ಕೆ ಬಿಡಲಾಗಿದೆ. ಹೈಕಮಾಂಡ್ ಅಭ್ಯರ್ಥಿಯನ್ನು ನಿಲ್ಲಿಸಿ ಎಂದು ಸೂಚನೆ ನೀಡಿದರೆ ಸಿದ್ದರಾಜು ಹೆಸರು ಅಂತಿಮಗೊಳಿಸುವ ಸಾಧ್ಯತೆಯಿದೆ.


    ಸಂಭಾವ್ಯ ಅಭ್ಯರ್ಥಿಗಳು
    ಚಿಕ್ಕೋಡಿ- ರಮೇಶ್ ಕತ್ತಿ
    ಬೆಳಗಾವಿ- ಸುರೇಶ್ ಅಂಗಡಿ
    ಬಾಗಲಕೋಟೆ- ಪಿ.ಸಿ ಗದ್ದಿಗೌಡರ್
    ವಿಜಯಪುರ- ರಮೇಶ್ ಜಿಗಜಿಣಗಿ

    ಕಲಬುರಗಿ- ಉಮೇಶ್ ಜಾದವ್
    ರಾಯಚೂರು- ಅನಂತರಾಜು ನಾಯಕ್,ಅಮರೇಶ್ ನಾಯಕ್, ಮಹದೇವಮ್ಮ
    ಬೀದರ್- ಭಗವಂತ ಖೂಬಾ
    ಕೊಪ್ಪಳ- ಕರಡಿ ಸಂಗಣ್ಣ
    ಬಳ್ಳಾರಿ- ದೇವೇಂದ್ರಪ್ಪ

    ಹಾವೇರಿ- ಶಿವಕುಮಾರ್ ಉದಾಸಿ
    ಧಾರವಾಡ- ಪ್ರಹ್ಲಾದ ಜೋಷಿ
    ಉತ್ತರ ಕನ್ನಡ- ಅನಂತ್ ಕುಮಾರ್ ಹೆಗಡೆ
    ದಾವಣಗೆರೆ- ಜಿ.ಎಂ ಸಿದ್ದೇಶ್ವರ್
    ಶಿವಮೊಗ್ಗ- ಬಿ.ವೈ ರಾಘವೇಂದ್ರ

    ಉಡುಪಿ – ಚಿಕ್ಕಮಗಳೂರು- ಶೋಭಾ ಕರಂದ್ಲಾಜೆ
    ಹಾಸನ – ಎ.ಮಂಜು
    ದಕ್ಷಿಣ ಕನ್ನಡ- ನಳೀನ್ ಕುಮಾರ್ ಕಟೀಲ್
    ಚಿತ್ರದುರ್ಗ- ಜನಾರ್ದನ್ ಸ್ವಾಮಿ, ಮಾನಪ್ಪ ವಜ್ಜಲ್

    ತುಮಕೂರು- ಜಿ.ಎಸ್. ಬಸವರಾಜು
    ಮೈಸೂರು- ಪ್ರತಾಪ್ ಸಿಂಹ
    ಚಾಮರಾಜನಗರ – ವಿ. ಶ್ರೀನಿವಾಸ್ ಪ್ರಸಾದ್
    ಬೆಂಗಳೂರು ಗ್ರಾಮಾಂತರ- ಸಿ.ಪಿ ಯೋಗೇಶ್ವರ್, ರುದ್ರೇಶ್

    ಬೆಂಗಳೂರು ಉತ್ತರ- ಡಿ. ವಿ ಸದಾನಂದಗೌಡ
    ಬೆಂಗಳೂರು ಸೆಂಟ್ರಲ್- ಪಿ.ಸಿ ಮೋಹನ್
    ಬೆಂಗಳೂರು ದಕ್ಷಿಣ- ತೇಜಸ್ವಿನಿ ಅನಂತ್ ಕುಮಾರ್
    ಚಿಕ್ಕಬಳ್ಳಾಪುರ- ಬಿ.ಎನ್. ಬಚ್ಚೇಗೌಡ

    ಕೋಲಾರ- ಡಿ.ಎಸ್ ವೀರಯ್ಯ/ ಛಲವಾದಿ ನಾರಾಯಣಸ್ವಾಮಿ
    ಮಂಡ್ಯ – ಸಿದ್ದರಾಮಯ್ಯ (ನಿಲ್ಲಬಹುದು/ ನಿಲ್ಲದೇ ಇರಬಹುದು)

  • ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ರಮ್ಯಾರನ್ನು ನೆನೆದ ಅಭಿಮಾನಿ

    ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ರಮ್ಯಾರನ್ನು ನೆನೆದ ಅಭಿಮಾನಿ

    ಮಂಡ್ಯ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಂಸದೆ ರಮ್ಯಾರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಿದ್ದಾರೆ. ರಮ್ಯಾ ಅವರ ಸೋಲಿನ ನೋವು ನನ್ನ ಮನಸಲ್ಲಿ ಇನ್ನೂ ಇದೆ, ಮರಿಯೋಕೆ ಆಗುತ್ತಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಅಭಿಮಾನಿ ನೋವು ತೋಡಿಕೊಂಡಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಸ್ಟೂಟೆಂಡ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಜೀವ್ ಅವರು ತಮ್ಮ ನೋವು ತೋಡಿಕೊಂಡಿದ್ದಾರೆ. ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ರಮ್ಯಾರನ್ನು ನೆನೆದಿರುವ ಅಭಿಮಾನಿ ರಾಜೀವ್ ಪೋಸ್ಟ್ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಪೋಸ್ಟ್ ಗೆ ನೆಟ್ಟಿಗರು ರಮ್ಯಾ ಸೋಲಿಗೆ ಯಾರು ಕಾರಣ? ಕಾಂಗ್ರೆಸ್ ಬಣ ರಾಜಕೀಯ ತಾನೇ ಕಾರಣ ಎಂದು ಕಾಲೆಳೆಯುತ್ತಿದ್ದಾರೆ. ಇನ್ನೊಂದೆಡೆ ರಮ್ಯಾ ಸೋಲಿನ ನೋವನ್ನು ಸುಮಲತಾ ಗೆಲುವಿನ ಮೂಲಕ ತೀರಿಸಿಕೊಳ್ಳಲು ಹೊರಟ್ರಾ ರಮ್ಯಾ ಅಭಿಮಾನಿಗಳು? ರಮ್ಯಾ ಸೋಲಿಗೆ ಅಂಬರೀಷ್ ಕಾರಣಾನ? ಎಂಬ ಪ್ರಶ್ನೆಗಳು ಕೂಡ ಹುಟ್ಟಿಕೊಂಡಿದೆ.

    ರಮ್ಯಾ ಅಭಿಮಾನಿಗೆ ಸೋಲಿಗೆ ಕಾರಣ ಯಾರು ತಿಳಿಸಿ ಎಂದು ಪ್ರಶ್ನಿಸುತ್ತ, ಮಂಡ್ಯದಲ್ಲಿ ಹಿಂದೆ ಅಂಬರೀಷ್, ಎಸ್‍ಎಂಕೆ ಬಣ ರಾಜೀಕೀಯ ಇತ್ತು. ಚುನಾವಣೆಯಲ್ಲಿ ಅಂಬರೀಷ್ ಸಪೋರ್ಟ್ ಮಾಡದೇ ಇದಿದ್ದೇ ರಮ್ಯಾ ಸೋಲಿಗೆ ಕಾರಣ ಎಂದು ಕಮೆಂಟ್‍ಗಳನ್ನು ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಡುಪಿ- ಚಿಕ್ಕಮಗಳೂರು ಲೋಕಸಭಾ ಟಿಕೆಟ್ ಮೀನುಗಾರ ಮುಖಂಡ ಯಶ್ ಪಾಲ್‍ಗೆ ನೀಡಿ..!

    ಉಡುಪಿ- ಚಿಕ್ಕಮಗಳೂರು ಲೋಕಸಭಾ ಟಿಕೆಟ್ ಮೀನುಗಾರ ಮುಖಂಡ ಯಶ್ ಪಾಲ್‍ಗೆ ನೀಡಿ..!

    – ಬಿಜೆಪಿ ಕಾರ್ಯಕರ್ತರ ಒತ್ತಾಯ

    ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ಹೊಸ ಅಭ್ಯರ್ಥಿಯ ಹೆಸರು ಕೇಳಿಬಂದಿದೆ. ತೀವ್ರ ವಿರೋಧದ ನಡುವೆಯೂ ಶೋಭಾ ಕರಂದ್ಲಾಜೆ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದರೂ ಕೂಡ ಮೀನುಗಾರ ಸಮುದಾಯದ ಮುಖಂಡರ ಹೆಸರು ಬಿಜೆಪಿ ವಲಯದಲ್ಲಿ ಓಡಾಡುತ್ತಿದೆ.

    ಉಡುಪಿ-ಚಿಕ್ಕಮಗಳೂರಿಗೆ ಜಯಪ್ರಕಾಶ್ ಹೆಗ್ಡೆ ಅವರನ್ನು ಅಭ್ಯರ್ಥಿಯಾಗಿ ಘೋಷಿಸಬೇಕು ಎಂಬ ಒತ್ತಾಯವೂ ಇಲ್ಲಿ ಜೋರಾಗಿ ಕೇಳಿಬರುತ್ತಿದೆ. ಎರಡೂ ಬಣಗಳ ಲಾಬಿಯೂ ಜೋರಾಗಿರುವಾಗಲೇ ಯಶ್ ಪಾಲ್ ಸುವರ್ಣ ಹೆಸರು ಈ ನಡುವೇ ಪ್ರಸ್ತಾಪವಾಗುತ್ತಿದೆ. ಮೊಗವೀರ ಮುಖಂಡ ಯಶಪಾಲ್ ಸುವರ್ಣ ಅವರು ಸಂಘ ಪರಿವಾರದ ಹಿನ್ನೆಲೆ ಇರುವ ಮೀನುಗಾರಿಕಾ ಫೆಡರೇಷನ್‍ನ ನಾಯಕನಾಗಿದ್ದಾರೆ. ಹಾಗೆಯೇ ಮೀನುಗಾರ ಸಮುದಾಯದ ಮುಂಚೂಣಿ ಮುಖಂಡ ಎನಿಸಿದ್ದಾರೆ.

    ಶೋಭಾ ಕರಂದ್ಲಾಜೆ ಅವರು ರಾಜ್ಯ ರಾಜಕಾರಣಕ್ಕೆ ಮರಳಲು ಬಯಸಿದರೆ, ಯಶಪಾಲ್ ಹೆಸರನ್ನು ಮುಂಚೂಣಿಗೆ ತರಲು ಕಾರ್ಯಕರ್ತರು ಉತ್ಸುಕತೆ ತೋರಿದ್ದಾರೆ. ಆರ್.ಎಸ್.ಎಸ್ ನಾಯಕ ಬಿ.ಎಲ್.ಸಂತೋಷ್ ಅವರ ಮೂಲಕ ಒತ್ತಾಯ ಹೇರಲು ತಯಾರಿಗಳು ನಡೆಯುತ್ತಿವೆ. ಜಯಪ್ರಕಾಶ್ ಹೆಗ್ಡೆಯನ್ನು ಒಪ್ಪದ ಬಿಜೆಪಿ ಮುಖಂಡರು ಶೋಭಾ ಕರಂದ್ಲಾಜೆ ಬದಲಾಗಿ ಯಶ್ ಪಾಲ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿ ಎಂದು ಜನರು ಹೇಳಿದ್ದಾರೆ. ಶೋಭಾ ಕರಂದ್ಲಾಜೆಗೆ ರಾಜ್ಯ ರಾಜಕಾರಣದಲ್ಲಿ ಉನ್ನತ ಸ್ಥಾನ ಕೊಡುವ ಮೂಲಕ ಸ್ಪರ್ಧೆಯಿಂದ ಹಿಂದಕ್ಕೆ ಸರಿಯಲು ಸೂಚಿಸುವ ಸಾಧ್ಯತೆ ಇದೆ ಎಂದು ಕರಾವಳಿಯ ಬಿಜೆಪಿ ವಲಯದಲ್ಲಿ ಚರ್ಚೆಯಾಗುತ್ತಿದೆ. ವಾಟ್ಸಾಪ್, ಫೇಸ್‍ಬುಕ್‍ನಲ್ಲಿ ಇಂತಹ ಸಂದೇಶ ಹರಿದಾಡುತ್ತಿದೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಯಶ್ ಪಾಲ್ ಸುವರ್ಣ, ನಾನೊಬ್ಬ ಬಿಜೆಪಿಯ ಸಕ್ರಿಯ ಕಾರ್ಯಕರ್ತ. ಹೋರಾಟದಿಂದ ಬಂದವನು. ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡು ಪಕ್ಷ ಬಲವರ್ಧನೆಗೆ ಹಗಲು ರಾತ್ರಿ ದುಡಿದಿದ್ದೇನೆ. ದೇಶ ಸೇವೆ, ಜನಸೇವೆ ಮಾಡಬೇಕೆಂಬ ಉದ್ದೆಶದಿಂದ ಮದುವೆಯಾಗದೆ ಬ್ರಹ್ಮಚಾರಿಯಾಗಿದ್ದೇನೆ. ಜೀವದ ಕೊನೆಯ ಉಸಿರು ಇರೋವರೆಗೆ ಜನರ ಕಷ್ಟ ಸುಖದ ಜೊತೆ ಇರುತ್ತೇನೆ. ಪಕ್ಷ, ನಾಯಕರು ಅವಕಾಶ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಸಚಿವ ಎ.ಮಂಜು ಮನವೊಲಿಕೆಗೆ ಮುಂದಾದ ಸಿದ್ದರಾಮಯ್ಯ..!

    ಮಾಜಿ ಸಚಿವ ಎ.ಮಂಜು ಮನವೊಲಿಕೆಗೆ ಮುಂದಾದ ಸಿದ್ದರಾಮಯ್ಯ..!

    ಬೆಂಗಳೂರು: ಬಿಜೆಪಿ ಸೇರುವ ನಿರ್ಧಾರವನ್ನು ತೆಗೆದುಕೊಳ್ಳಬೇಡ ಎಂದು ಮಾಜಿ ಸಚಿವ ಎ. ಮಂಜು ಮನವೊಲಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.

    ಸಿದ್ದರಾಮಯ್ಯ ತನ್ನ ಶಿಷ್ಯ ಎ.ಮಂಜು ಅವರಿಗೆ ದೂರವಾಣಿ ಕರೆ ಮಾಡಿ, “ಬಿಜೆಪಿ ಸೇರುವ ನಿರ್ಧಾರ ತಗೋಬೇಡ. ಅಲ್ಲಿ ಹೋದರೆ ನಿನ್ನ ರಾಜಕೀಯ ಭವಿಷ್ಯ ಹಾಳಾಗುತ್ತೆ. ಬಿಜೆಪಿಗೆ ಹೋಗದೇ ಕಾಂಗ್ರೆಸ್ ನಲ್ಲೇ ಇರು. ಬಿಜೆಪಿಗೆ ಹೋದರೆ ಅಲ್ಲಿ ಕಡೆಗಣನೆಗೆ ಒಳಗಾಗ್ತೀಯ. ಅಲ್ಲೂ ಇಲ್ಲ, ಇಲ್ಲೂ ಇಲ್ಲ ಅನ್ನುವ ಸ್ಥಿತಿ ತಂದುಕೊಳ್ಳಬೇಡ ಎಂದು ಬುದ್ಧಿ ಮಾತು ಹೇಳಿದ್ದಾರೆ” ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಎ. ಮಂಜು ಬಿಜೆಪಿ ಸೇರುವ ನಿರ್ಧಾರ ಕೈಗೊಂಡಿರುವ ಬಗ್ಗೆ ಸಿದ್ದರಾಮಯ್ಯಗೆ ಖಚಿತ ಪಡಿಸಿದ್ದಾರೆ. ಹಾಸನದಲ್ಲಿ ನೀವ್ಯಾರೂ ಜೆಡಿಎಸ್ ನವರ ಕಾಟ ತಡೆಯಲಿಲ್ಲ. ಪ್ರಜ್ವಲ್ ನಂಥವರ ಪರ ಕಾಂಗ್ರೆಸ್ ನವರು ಹೇಗೆ ಮತ ಕೇಳೋದು?. ಮೊಮ್ಮಗನನ್ನು ನಿಲ್ಲಿಸುವ ದೇವೇಗೌಡರ ನಿರ್ಧಾರ ಸರಿಯಲ್ಲ. ನಾವು ಆಗಿನಿಂದಲೂ ಜೆಡಿಎಸ್ ವಿರುದ್ಧವೇ ಹೋರಾಡಿಕೊಂಡು ಬಂದಿದ್ದೇವೆ. ಈಗ ಪ್ರಜ್ವಲ್ ಪರ ಮತ ಕೇಳಲು ಹೋದರೆ ಜನ ಏನನ್ನಲ್ಲ?. ಜೆಡಿಎಸ್ ನವರಿಗೆ ಬುದ್ಧಿ ಕಲಿಸೋದಿಕ್ಕೆ ಇದೇ ಒಳ್ಳೆಯ ಅವಕಾಶ ಎಂದು ಮಂಜು, ಸಿದ್ದರಾಮಯ್ಯ ಬುದ್ಧಿ ಮಾತಿಗೊಪ್ಪದೆ ತಮ್ಮ ನಿಲುವಿನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

    ಶುಕ್ರವಾರ ಹಾಸನದ ಅರಸೀಕೆರೆ ಯಲ್ಲಿ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಈ ಬಗ್ಗೆ ಕಾಂಗ್ರೆಸ್ ತೊರೆಯುವ ಬಗ್ಗೆ ಎ.ಮಂಜು ಅವರು ಘೋಷಿಸಿದ್ದರು. ಮಂಜು ಜೊತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್ ಕೂಡ ಕಾಂಗ್ರೆಸ್ಸಿಗೆ ಗುಡ್‍ಬೈ ಹೇಳುವ ಸಾಧ್ಯತೆಯಿದೆ. ಹಾಗೆಯೇ ಕಾಂಗ್ರೆಸ್‍ನಿಂದ ಬಿಜೆಪಿಗೆ ಎ. ಮಂಜು ಜಿಗಿಯಲಿದ್ದಾರೆ. ಮಂಜು ಜೊತೆಗೆ ಕಾಂಗ್ರೆಸ್‍ನ ಬಹುತೇಕ ಜನಪ್ರತಿನಿಧಿಗಳು ಸಹ ಕಾಂಗ್ರೆಸ್ ಬಿಡಲು ಪ್ಲಾನ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿಯಲ್ಲಿ ಭಿನ್ನಮತ- ಪಕ್ಷ ತೊರೆಯಲು ಮುಂದಾಗಿದ್ದಾರೆ ಇಬ್ಬರು ಪ್ರಭಾವಿ ನಾಯಕರು..!

    ಬಿಜೆಪಿಯಲ್ಲಿ ಭಿನ್ನಮತ- ಪಕ್ಷ ತೊರೆಯಲು ಮುಂದಾಗಿದ್ದಾರೆ ಇಬ್ಬರು ಪ್ರಭಾವಿ ನಾಯಕರು..!

    ಕಲಬುರಗಿ: ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಭುಗಿಲೆದ್ದಿದ್ದು ಬಿಜೆಪಿ ತೊರೆಯಲು ಇಬ್ಬರು ಪ್ರಭಾವಿ ನಾಯಕರಾದ ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಬಾಬುರಾವ್ ಚೌಹ್ಹಾಣ್ ಮತ್ತು ಗುರುಮಠಕಲ್ ಬಿಜೆಪಿ ಮುಖಂಡ ಶ್ಯಾಮರಾವ್ ಪ್ಯಾಟಿ ಕಮಲಕ್ಕೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ.

    ಲೋಕಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಲೇ ಇದೆ. ಒಂದೆಡೆ ಕಾಂಗ್ರೆಸ್ ನಾಯಕರು ಪಕ್ಷ ಬಿಟ್ಟು ಬಿಜೆಪಿ ಸೇರುತ್ತಿದ್ದರೆ, ಇನ್ನೊಂದೆಡೆ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಸದ್ಯ ಕಾಂಗ್ರೆಸ್ ನಾಯಕ ಎ.ಮಂಜು ಪಕ್ಷ ತೊರೆದು ಬಿಜೆಪಿ ಸೇರಿಲಿದ್ದಾರೆ ಎನ್ನಲಾಗುತ್ತಿದೆ. ಆದ್ರೆ ಇನ್ನೊಂದೆಡೆ ಬಿಜೆಪಿ ನಾಯಕರೇ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ. ಬಿಜೆಪಿ ಬಿಡಲು ಮುಂದಾಗಿರುವ ಶ್ಯಾಮರಾವ್ ಪ್ಯಾಟಿ ಅವರು ಈ ಹಿಂದೆ ಗುರುಮಠಕಲ್ ಕ್ಷೇತ್ರದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ, 5 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು.

    ಆದರೆ ಬಿಜೆಪಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗದ ಹಿನ್ನೆಲೆಯಲ್ಲಿ ಪಕ್ಷ ತೊರೆಯಲು ಇದೀಗ ಅವರು ನಿರ್ಧಾರ ಮಾಡಿದ್ದಾರೆ. ಮಾರ್ಚ್ 18ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಬಾಬುರಾವ್ ಚೌಹ್ಹಾಣ್ ಹಾಗೂ ಶ್ಯಾಮರಾವ್ ಪ್ಯಾಟಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಮಾಹಿತಿ ಲಭ್ಯವಾಗಿದೆ.

    ಈ ಸಮಾವೇಶ ಕಲಬುರಗಿ ನಗರದ ಎನ್‍ವ್ಹಿ ಕಾಲೇಜು ಮೈದಾನದಲ್ಲಿ ನಡೆಯಲಿದ್ದು ಆಪರೇಷನ್ ಹಸ್ತದ ಮೂಲಕ ಮತ್ತಷ್ಟು ಬಿಜೆಪಿ ನಾಯಕರನ್ನ ತನ್ನತ್ತ ಸೆಳೆಯಲು ಕಾಂಗ್ರೆಸ್ ಪ್ಲಾನ್ ಮಾಡುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂದು ಕಾಂಗ್ರೆಸ್‍ಗೆ ಮಾಜಿ ಸಚಿವ ಎಂ.ಮಂಜು ಗುಡ್‍ಬೈ..!

    ಇಂದು ಕಾಂಗ್ರೆಸ್‍ಗೆ ಮಾಜಿ ಸಚಿವ ಎಂ.ಮಂಜು ಗುಡ್‍ಬೈ..!

    – ಕೈ ತೊರೆಯಲಿದ್ದಾರೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ

    ಹಾಸನ: ಲೋಕಸಭಾ ಚುನಾವಣೆಯ ಹಿನ್ನೆಲೆಯಿಂದಾಗಿ ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆಗಳಾಗುತ್ತಿದ್ದು, ಇಂದು ಮಾಜಿ ಸಚಿವ ಎ.ಮಂಜು ಕಾಂಗ್ರೆಸ್‍ಗೆ ಗುಡ್‍ಬೈ ಹೇಳಲಿದ್ದಾರೆ.

    ಶುಕ್ರವಾರ ಹಾಸನದ ಅರಸೀಕೆರೆ ಯಲ್ಲಿ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಈ ಬಗ್ಗೆ ಎ.ಮಂಜು ಅವರು ಘೋಷಿಸಿದ್ದಾರೆ. ಮಂಜು ಜೊತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್ ಕೂಡ ಕಾಂಗ್ರೆಸ್ಸಿಗೆ ಗುಡ್‍ಬೈ ಹೇಳುವ ಸಾಧ್ಯತೆಯಿದೆ. ಹಾಗೆಯೇ ಕಾಂಗ್ರೆಸ್‍ನಿಂದ ಬಿಜೆಪಿಗೆ ಎ. ಮಂಜು ಜಿಗಿಯಲಿದ್ದಾರೆ. ಮಂಜು ಜೊತೆಗೆ ಕಾಂಗ್ರೆಸ್‍ನ ಬಹುತೇಕ ಜನಪ್ರತಿನಿಧಿಗಳು ಸಹ ಕಾಂಗ್ರೆಸ್ ಬಿಡಲು ಪ್ಲಾನ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಬಿಜೆಪಿಗೆ ಸೇರಿ ಹಾಸನದಲ್ಲಿ ಕಾಂಗ್ರೆಸ್‍ಗೆ ಬಿಗ್ ಶಾಕ್ ನೀಡಲು ಎ.ಮಂಜು ಸಿದ್ಧರಾಗಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಎ.ಮಂಜು ಸ್ಪರ್ಧಿಸುವ ಸಾಧ್ಯತೆ ಇದ್ದು, ಮಂಜು ತನ್ನ ಜೊತೆ ನೂರಾರು ಪ್ರಮುಖ ಜಿಲ್ಲಾ ನಾಯಕರನ್ನ ಬಿಜೆಪಿಗೆ ಕರೆದುಕೊಂಡು ಹೋಗ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

    ಸದ್ಯ ಎ.ಮಂಜು ಜೊತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತ ದೇವರಾಜ್ ಕೂಡ ಕಾಂಗ್ರೆಸ್ ತೊರೆಯಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv