Tag: LokSabha election

  • ನಾವು ಯಾವೊಬ್ಬ ಕಾಂಗ್ರೆಸ್ ಶಾಸಕರನ್ನು ಟಚ್ ಮಾಡಿಲ್ಲ: ಬಿಎಸ್‍ವೈ

    ನಾವು ಯಾವೊಬ್ಬ ಕಾಂಗ್ರೆಸ್ ಶಾಸಕರನ್ನು ಟಚ್ ಮಾಡಿಲ್ಲ: ಬಿಎಸ್‍ವೈ

    ನವದೆಹಲಿ: ನಾವು ಯಾವೊಬ್ಬ ಕಾಂಗ್ರೆಸ್ ಶಾಸಕರನ್ನು ಟಚ್ ಮಾಡಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರೇ ಸರ್ಕಾರ ಉಳಿಸಲು ನಮ್ಮ ಶಾಸಕರನ್ನು ಸಂಪರ್ಕಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

    ದೆಹಲಿಯಲ್ಲಿ ಸಭೆ ಮುಗಿಸಿದ ಬಳಿಕ ಮಾಧ್ಯಮಗಳು ಆಪರೇಷನ್ ಕಮಲದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ, ನಾವು ಯಾವುದೇ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿಲ್ಲ. ಮುಖ್ಯಮಂತ್ರಿ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ. ನಮ್ಮ ಶಾಸಕರಿಗೆ ಅವರು ಸಾಕಷ್ಟು ಹಣದ ಆಮಿಷ ಒಡ್ಡಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ ಆಪರೇಷನ್ ಕಮಲ ಹೇಳಿಕೆಗೆ ತಿರುಗೇಟು ನೀಡಿದರು. ಇದನ್ನೂ ಓದಿ: ದಿಢೀರ್ ಉಪಹಾರ ಕೂಟದ ಸಭೆಯಲ್ಲಿ ಚರ್ಚಿಸಿದ್ದೇನು – ಡಿಕೆಶಿ ಹೇಳ್ತಾರೆ ಓದಿ

    ಕಾಂಗ್ರೆಸ್ ನಾಯಕರು ಒಟ್ಟಾಗಿ ಉಪಹಾರ ಸೇವಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ವಿಚಾರವನ್ನು ನಾನು ಪ್ರತಿಕ್ರಿಯೆ ನೀಡಲು ಇಷ್ಟ ಪಡುವುದಿಲ್ಲ. ನಾವು ಹೇಗೆ ನಮ್ಮ ಶಾಸಕರ ಜೊತೆ ಸಭೆ ನಡೆಸುತ್ತೆವೆಯೋ ಅದೇ ರೀತಿಯಾಗಿ ಅವರು ಸಭೆ ನಡೆಸಿದ್ದಾರೆ. ಅದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಉಪಹಾರ ಕೂಟದ ನೆಪದಲ್ಲಿ ಆಪರೇಷನ್ ಕಮಲಕ್ಕೆ ಕಾಂಗ್ರೆಸ್ ಪ್ರತಿತಂತ್ರ!

    ಲೋಕಸಭಾ ಚುನಾವಣೆಯಲ್ಲಿ ನಾವು 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಪ್ಲಾನ್ ಮಾಡಿಕೊಂಡಿದ್ದೇವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾವು ದೆಹಲಿಯಲ್ಲಿ ರಣತಂತ್ರ ರೂಪಿಸಿದ್ದೇವೆ. ಈ ಕಾರಣಕ್ಕೆ ದೆಹಲಿಗೆ ಬಂದಿದ್ದೇವೆಯೇ ಹೊರತು ಬೇರೆ ಉದ್ದೇಶವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಆಪರೇಷನ್ ಕಮಲ ಆಗ್ತೀರೋದು ಸತ್ಯ: ಸಿಎಂ

    ಬಿಜೆಪಿ ಶಾಸಕರು ದೆಹಲಿಯಿಂದ ಯಾವಾಗ ಬೆಂಗಳೂರಿಗೆ ವಾಪಸ್ ಆಗುತ್ತಾರೆ ಎನ್ನುವ ಪ್ರಶ್ನೆಗೆ ಇಂದು ಸಂಜೆ ಇಲ್ಲಿಂದ ತೆರಳಲಿದ್ದಾರೆ ಎಂದು ಬಿಎಸ್‍ವೈ ಉತ್ತರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂಡ್ಯದಲ್ಲಿ ಭಾರೀ ಸೌಂಡ್ ಮಾಡ್ತಿದೆ ಅಭಿ-ನಿಖಿಲ್ ಹೆಸರು..!

    ಮಂಡ್ಯದಲ್ಲಿ ಭಾರೀ ಸೌಂಡ್ ಮಾಡ್ತಿದೆ ಅಭಿ-ನಿಖಿಲ್ ಹೆಸರು..!

    ಮಂಡ್ಯ: ಜಿಲ್ಲೆಯ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂಬರೀಶ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದ ಬೆನ್ನಲ್ಲೇ ಮಂಡ್ಯ ರಾಜಕೀಯ ವಲಯದಲ್ಲಿ ನಿಖಿಲ್ ಕುಮಾರಸ್ವಾಮಿ ವರ್ಸಸ್ ಅಭಿಷೇಕ್‍ಗೌಡ ಎಂಬ ಚರ್ಚೆ ಶುರುವಾಗಿದೆ.

    ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಆಗಮಿಸದ ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಶನಿವಾರ ನಡೆದ ಅಂಬಿ ನುಡಿನಮನ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಖಾನ್ ಹೊರತುಪಡಿಸಿ ಬೇರೆ ಯಾರೂ ಭಾಗವಹಿಸಿರಲಿಲ್ಲ. ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಜಿಲ್ಲೆಯ ಏಳು ಜನ ಶಾಸಕರು ಆಗಮಿಸುತ್ತಾರೆ ಎಂದು ಪ್ರಚಾರ ಮಾಡಲಾಗಿತ್ತು. ಆದರೆ ಜೆಡಿಎಸ್ ಮುಖಂಡರೆಲ್ಲ ಗೈರಾಗಿದ್ದು, ರಾಜಕೀಯ ಕಾರಣಕ್ಕೆ ಎಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಆಕ್ರೋಶ ಹೊರಹಾಕುತ್ತಿದ್ದಾರೆ.

    ಮುಂಬರುವ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಬೇಕೆಂಬ ಚರ್ಚೆ ಈಗಾಗಲೇ ಜಿಲ್ಲೆಯಲ್ಲಿ ಶುರುವಾಗಿದ್ದು, ಇದಕ್ಕೆ ಹಲವು ಜೆಡಿಎಸ್ ಮುಖಂಡರು ದನಿಗೂಡಿಸಿದ್ದಾರೆ. ಈ ನಡುವೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅಭಿಮಾನಿಗಳು ಅಭಿಷೇಕ್ ಅವರಿಗೆ ಟಿಕೆಟ್ ಕೇಳಬಹುದೆಂದು ಜೆಡಿಎಸ್ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕುತ್ತಿದ್ದಾರೆ.

    ಕಳೆದೊಂದು ವಾರದ ಹಿಂದೆ ಕಾಂಗ್ರೆಸ್ ಮಾಜಿ ಸಚಿವ ಎ.ಮಂಜು ಮಂಡ್ಯದಿಂದ ಅಂಬಿ ಪುತ್ರ ಅಭಿಷೇಕ್‍ಗೆ ಟಿಕೆಟ್ ಕೊಡಿ ಎಂದು ಮೊದಲು ದನಿ ಎತ್ತಿದ್ದರು. ಬಳಿಕ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ನಿಖಿಲ್ ಆದರೆ ಕಾಂಗ್ರೆಸ್ಸಿನಿಂದ ಅಂಬರೀಶ್ ಪುತ್ರ ಅಭಿಷೇಕ್‍ ರನ್ನ ಕಣಕ್ಕಿಳಿಸಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಪಕ್ಷಕ್ಕೆ ಒತ್ತಾಯ ಹೇರುತ್ತಿದ್ದಾರೆ. ಅಷ್ಟೇ ಅಲ್ಲದೇ ಮುಂಬರುವ ಲೋಕಸಭಾ ಚುನಾವಣೆಗೆ ಅಂಬರೀಶ್ ಪುತ್ರ ಅಭಿಷೇಕ್‍ಗೌಡ ಅವರಿಗೆ ಮಂಡ್ಯ ಕ್ಷೇತ್ರದ ಟಿಕೆಟ್ ನೀಡಬೇಕು. ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ನಾವು ನಿಖಿಲ್ ಕುಮಾರಸ್ವಾಮಿಗೆ ಸಪೋರ್ಟ್ ಮಾಡಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳುತ್ತಿದ್ದಾರೆ.

    ಇತ್ತ ಜೆಡಿಎಸ್‍ನವರೂ ಕೂಡ ನಿಖಿಲ್ ಕುಮಾರಸ್ವಾಮಿಯೇ ಅಭ್ಯರ್ಥಿ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ಮುಂಬರುವ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅಥವಾ ಅಭಿಷೇಕ್‍ಗೌಡ ಇಬ್ಬರಲ್ಲಿ ಯಾರು ಸ್ಪರ್ಧಿಸುತ್ತಾರೆ ಎಂಬ ಬಿರುಸಿನ ಚರ್ಚೆ ಶುರುವಾಗಿದೆ. ಹೀಗಾಗಿ ಮಂಡ್ಯ ರಾಜಕೀಯದ ಅಖಾಡದಲ್ಲಿ ಕಳೆದೊಂದು ವಾರದಿಂದ ಅಂಬರೀಶ್ ಪುತ್ರ ಅಭಿಷೇಕ್ ಹೆಸರೂ ಕೇಳಿಬರುತ್ತಿದೆ.

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 26 ವರ್ಷಗಳ ಬಳಿಕ ಎಸ್‍ಪಿ-ಬಿಎಸ್‍ಪಿ ಮೈತ್ರಿ

    26 ವರ್ಷಗಳ ಬಳಿಕ ಎಸ್‍ಪಿ-ಬಿಎಸ್‍ಪಿ ಮೈತ್ರಿ

    -ಮಹಾಘಟಬಂಧನ್ ದಿಂದ ಹೊರಬಂದು ಕಾಂಗ್ರೆಸ್‍ಗೆ ಶಾಕ್ ಕೊಟ್ಟ ಎಸ್‍ಪಿ-ಬಿಎಸ್‍ಪಿ
    -80 ಕ್ಷೇತ್ರಗಳಲ್ಲಿ 38-38ರಂತೆ ಹಂಚಿಕೆ

    ಲಕ್ನೋ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್‍ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ(ಬಿಎಸ್‍ಪಿ) 26 ವರ್ಷಗಳ ಬಳಿಕ ಮೈತ್ರಿ ರಚಿಸಿಕೊಂಡಿವೆ. ಈ ಮೂಲಕ ಕಾಂಗ್ರೆಸ್ ನಿಂದ ಹೊರ ಬಂದಿರುವ ಪ್ರಾದೇಶಿಕ ಪಕ್ಷಗಳು ಮಹಾಘಟಬಂಧನ್‍ಗೆ ಶಾಕ್ ನೀಡಿವೆ. ಇದೇ ಮೈತ್ರಿಯನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮುಂದುವರಿಸುವುದಾಗಿ ಎರಡು ಪಕ್ಷಗಳೂ ಹೇಳಿಕೊಂಡಿವೆ.

    ಇಂದು ನಗರದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಎಸ್‍ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಎಸ್‍ಪಿ ಮುಖ್ಯಸ್ಥೆ ಮಯಾವತಿ, ಚುನಾವಣೆಯ ಮೈತ್ರಿ ಬಗ್ಗೆ ಹೇಳಿಕೊಂಡರು. ಉತ್ತರ ಪ್ರದೇಶದ ಒಟ್ಟು 80 ಕ್ಷೇತ್ರಗಳಲ್ಲಿ ನಾವು 38-38ರಂತೆ ಕ್ಷೇತ್ರಗಳನ್ನು ಹಂಚಿಕೊಂಡಿದ್ದೇವೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸುವ ಅಮೇಥಿ ಮತ್ತು ಕಾಂಗ್ರೆಸ್ ಅಧಿನಾಯಕಿ ಸ್ಪರ್ಧಿಸುವ ರಾಯ್‍ಬರೇಲಿ ಕ್ಷೇತ್ರದಲ್ಲಿ ಎಸ್‍ಪಿ ಮತ್ತು ಬಿಎಸ್‍ಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲ್ಲ. ಉಳಿದೆರೆಡು ಕ್ಷೇತ್ರಗಳಲ್ಲಿ ರಾಜ್ಯದ ಪ್ರಾದೇಶಿಕ ಪಕ್ಷಗಳಿಗೆ ಬೆಂಬಲ ನೀಡಲಾಗುವುದು ಎಂದು ಮಯಾವತಿ ತಿಳಿಸಿದರು.

    ಮೈತ್ರಿ ಯಾಕೆ?
    ನಮ್ಮ ಈ ಸುದಿಗೋಷ್ಠಿ ಪ್ರಧಾನ ಮಂತ್ರಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಬ್ಬರ ನಿದ್ದೆಯನ್ನು ಕೆಡಿಸಲಿದೆ ಎಂದು ಹೇಳುತ್ತಲೇ ಮಾಯಾವತಿ ತಮ್ಮ ಮಾತು ಆರಂಭಿಸಿದರು. 1990ರಿಂದ ಬಿಜೆಪಿಯ ಜಾತಿವಾದಿ, ಸಂಪ್ರದಾಯಿಕ ನೀತಿಗಳಲ್ಲಿ ರಾಜಕೀಯ ತಂದಿದ್ದು, ಅಯೋಧ್ಯೆ ವಿಚಾರದಲ್ಲಿ ರಾಜಕಾರಣ ಮಾಡುತ್ತಿರೋದನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ಈ ಹಿಂದೆ ಚುನಾವಣೆಗೂ ಮುನ್ನ ನೀಡಿದ ಭರವಸೆಗಳನ್ನು ಈಡೇರಿಸಲು ಬಿಜೆಪಿ ವಿಫಲವಾಗಿದೆ. ರೈತ ವಿರೋಧಿ ನೀತಿ, ಬಿಜೆಪಿ ಸರ್ವಾಧಿಕಾರತ್ವವವನ್ನು ಶಮನಗೊಳಿಸಲು ಇಂದು ನಮ್ಮೆಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಸ್‍ಪಿ ಮತ್ತು ಬಿಎಸ್‍ಪಿ ಒಂದಾಗಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆ್ಯಕ್ಷನ್-ಕಟ್ ಪದವೇ ನಿಷಿದ್ದ, ಹುಷಾರಾಗಿರಿ ಅಂದ್ರು ಸುರೇಶ್ ಕುಮಾರ್

    ಆ್ಯಕ್ಷನ್-ಕಟ್ ಪದವೇ ನಿಷಿದ್ದ, ಹುಷಾರಾಗಿರಿ ಅಂದ್ರು ಸುರೇಶ್ ಕುಮಾರ್

    ಬೆಂಗಳೂರು: ಲೋಕಸಭಾ ಚುನಾವಣೆಗೆ ನಿಲ್ಲಲು ನಿರ್ಧರಿಸಿರುವ ಪ್ರಕಾಶ್ ರೈ ಅವರಿಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಕಿವಿ ಮಾತು ಹೇಳಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸುರೇಶ್, ಇಲ್ಲಿ ರೀ ಟೇಕ್ ಇರುವುದಿಲ್ಲ. ಎಡಿಟಿಂಗ್ ಇರುವುದೇ ಇಲ್ಲ. ಸಿದ್ಧಪಡಿಸಿರುವ ಸಂಭಾಷಣೆಗೂ ಹೆಚ್ಚು ಅವಕಾಶವಿಲ್ಲ. ಆ್ಯಕ್ಷನ್-ಕಟ್ ಪದವೇ ನಿಷಿದ್ದ, ಹುಷಾರಾಗಿರಿ ಅಂತ ಎಚ್ಚರಿಕೆ ನೀಡಿದ್ದಾರೆ.

    ಬಹುಭಾಷಾ ನಟ ಪ್ರಕಾಶ್ ರೈ ಅವರು ಆಪ್ತರೊಬ್ಬರಿಗೆ ಹೊಸ ವರ್ಷ ಶುಭಕೋರಿ 2018ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ಹೊರ ಹಾಕಿದ್ದರು. ಆಪ್ತರ ಬಳಿ ಚರ್ಚೆ ನಡೆಸಿಯೇ ನಿರ್ಧಾರ ತೆಗೆದುಕೊಂಡಿರುವ ಅವರು, ಹೊಸ ವರ್ಷದ ಶುಭ ಕೋರಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

    ಪಕ್ಷೇತರ ಅಭ್ಯರ್ಥಿಯಾಗಿ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿಯಲು ಆಪ್ತರ ಬಳಿ ಚರ್ಚಿಸಿರುವೆ. ಈ ನಿಟ್ಟಿನಲ್ಲಿ ಹೊಸ ವರ್ಷಕ್ಕೆ ಹೊಸ ಪ್ರಾರಂಭವನ್ನು ಆರಂಭಿಸುತ್ತಿದ್ದೇನೆ. ನನ್ನ ಮೇಲೆ ಹೆಚ್ಚು ಜವಾಬ್ದಾರಿಗಳಿವೆ. ನಿಮ್ಮ ಬೆಂಬಲದೊಂದಿಗೆ ಲೋಕಸಭೆಗೆ ಸ್ಪರ್ಧಿಸುತ್ತಿದ್ದೇನೆ. ಈ ಸಂಬಂಧ ಎಲ್ಲ ಮಾಹಿತಿಯನ್ನು ಸದ್ಯದಲ್ಲೇ ನಿಮಗೆ ತಿಳಿಸುತ್ತೇನೆ ಎಂದು ಪ್ರಕಾಶ್ ರೈ ಹೇಳಿದ್ದಾರೆ. ಆದರೆ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ಬಗ್ಗೆ ಹೇಳಿಕೊಂಡಿಲ್ಲ ಎಂದು ಆಪ್ತ ವಲಯವು ತಿಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೋಕಸಭೆಗೆ ದಿಕ್ಸೂಚಿಯಾಗಲಿರುವ ಪಂಚರಾಜ್ಯಗಳ ಫಲಿತಾಂಶ ಮಂಗಳವಾರ ಪ್ರಕಟ

    ಲೋಕಸಭೆಗೆ ದಿಕ್ಸೂಚಿಯಾಗಲಿರುವ ಪಂಚರಾಜ್ಯಗಳ ಫಲಿತಾಂಶ ಮಂಗಳವಾರ ಪ್ರಕಟ

    ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆಯ ದಿಕ್ಸೂಚಿ, ಮಿನಿ ಮಹಾಸಮರ ಅಂತಲೇ ಬಿಂಬಿತವಾಗಿರೋ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢ, ಮಿಜೋರಾಂ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ.

    ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ನಡೆಯಲಿದೆ. ಈಗಾಗಲೇ ಮತಗಟ್ಟೆ ಸಮೀಕ್ಷೆಗಳ ಪ್ರಕಾರ ರಾಜಸ್ಥಾನದಲ್ಲಿ ಕಾಂಗ್ರೆಸ್ ಏಕಚಕ್ರಾಧಿಪತ್ಯ ಸಾಧಿಸಲಿದ್ದರೆ, ಮಧ್ಯಪ್ರದೇಶ, ಛತ್ತೀಸ್‍ಗಢದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಫೈಟ್ ಇದ್ದು, ಮಿಜೋರಾಂನಲ್ಲಿ ಮಿಜೋರಾಂ ನ್ಯಾಷನಲ್ ಫ್ರಂಟ್-ಕಾಂಗ್ರೆಸ್ ನಡುವೆ ಫೈಟ್ ಇದೆ.

    ಛತ್ತೀಸ್‍ಗಢದಲ್ಲಿ ಕುದುರೆ ವ್ಯಾಪಾರದ ಭೀತಿಯಲ್ಲಿರೋ ಕಾಂಗ್ರೆಸ್, ತನ್ನೆಲ್ಲಾ ಶಾಸಕರು ಒಂದೆಡೆ ಇರುವಂತೆ ಆದೇಶಿಸಿದೆ. ಅಲ್ಲದೆ ತೆಲಂಗಾಣದಲ್ಲಿ ಟಿಆರ್‍ಎಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆದ್ರೆ, ಬಹುಮತ ಸಿಗೋದು ಅನುಮಾನ ಎಂದು ಸಮೀಕ್ಷೆಗಳು ತಿಳಿಸಿವೆ

    ಕರ್ನಾಟಕದಲ್ಲಿ ಬಹುಮತ ಇಲ್ಲದಿದ್ದರೂ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಮೊದಲು ಆಹ್ವಾನ ನೀಡಿದ ಘಟನೆಯಿಂದ ಕಾಂಗ್ರೆಸ್-ಟಿಡಿಪಿ ನೇತೃತ್ವದ `ಮಹಾಕೂಟಮಿ’ ಪಕ್ಷಗಳು ಎಚ್ಚೆತ್ತಿವೆ. ನಾವು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದೇವೆ. ಫಲಿತಾಂಶ ಬಂದ ಕೂಡಲೇ ಸರ್ಕಾರ ರಚನೆಗೆ ನಮ್ಮನ್ನು ಆಹ್ವಾನಿಸಬೇಕು ಅಂತ ರಾಜ್ಯಪಾಲ ಇಎಸ್‍ಎಲ್ ನರಸಿಂಹನ್ ಅವರಿಗೆ ಮನವಿ ಕೊಟ್ಟಿದ್ದಾರೆ. ಈ ಬೆನ್ನಲ್ಲೇ ಕೆಸಿಆರ್‍ಗೆ ಬೆಂಬಲ ನೀಡೋದಾಗಿ ಎಂಐಎಂನ ಓವೈಸಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಕೇಂದ್ರ ಸಚಿವೆ

    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಕೇಂದ್ರ ಸಚಿವೆ

    ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಕೇಂದ್ರದ ಬಿಜೆಪಿ ನಾಯಕಿ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆಯ ಸಚಿವೆ ಉಮಾ ಭಾರತಿ ಹೇಳಿದ್ದಾರೆ.

    ಈ ಕುರಿತು ಆಂಗ್ಲ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಧನಾತ್ಮಕ ವಾತಾವರಣವನ್ನು ರೂಪಿಸುವ ಅಗತ್ಯತೆ ಇದೆ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಅಲ್ಲದೇ ನಾನು ತಾತ್ಕಾಲಿಕವಾಗಿ ಸಕ್ರೀಯ ರಾಜಕಾರಣದಿಂದ ದೂರವಿದ್ದು, ರಾಮಮಂದಿರ ನಿರ್ಮಾಣ ಮತ್ತು ಗಂಗಾ ಶುದ್ಧೀಕರಣ ವಿಷಯದಲ್ಲಿ ತೊಡಗಿಕೊಳ್ಳುತ್ತೇನೆಂದು ಹೇಳಿದ್ದಾರೆ.

    2019ರ ಜನವರಿಯಿಂದ ಒಂದೂವರೆ ವರ್ಷಗಳ ಕಾಲ ಗಂಗಾ ಯಾತ್ರೆಯಲ್ಲಿ ತೊಡಗಿಕೊಳ್ಳುತ್ತೇನೆ. ಈ ಅವಧಿಯಲ್ಲಿ ವಿವಿಧೆಡೆ ಗಂಗಾನದಿಯ ತಟದಲ್ಲೇ ವಾಸ್ತವ್ಯ ಹೂಡಲಿದ್ದೇನೆ. ನನ್ನ ಈ ಕೋರಿಕೆಯನ್ನು ಪಕ್ಷದ ವರಿಷ್ಠರಿಗೆ ತಿಳಿಸಿ, ಅನುಮತಿಗಾಗಿ ಮನವಿ ಮಾಡಿಕೊಂಡಿದ್ದೇನೆಂದು ತಿಳಿಸಿದ್ದಾರೆ.

    ಇದಕ್ಕೂ ಮುನ್ನ ಬಿಜೆಪಿ ಮಹಿಳಾ ನಾಯಕಿಯಾಗಿ ಹಾಗೂ ಕೇಂದ್ರ ವಿದೇಶಾಂಗ ಇಲಾಖೆ ಸಚಿವರಾಗಿರುವ ಸುಷ್ಮಾ ಸ್ವರಾಜ್ ರವರು ತಮ್ಮ ಅನಾರೋಗ್ಯದ ಕಾರಣದಿಂದ ಮುಂಬರುವ ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದರು. ಈಗ ಉಮಾಭಾರತಿಯವರೂ ಸಹ ಚುನಾವಣೆಯಿಂದ ಹಿಂದೆ ಸರಿದಿರುವುದು ಬಿಜೆಪಿಯ ಮಹಿಳಾ ಘಟಕದ ಬಲ ಕುಂದುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೋಕಸಭೆ ಟಿಕೆಟ್ ನೀಡಲು 5 ಕೋಟಿ ರೂ. ಕೇಳಿದ್ರು ಮಾಯಾವತಿ- ಮಾಜಿ ಎಂಎಲ್‍ಸಿ ಆರೋಪ

    ಲೋಕಸಭೆ ಟಿಕೆಟ್ ನೀಡಲು 5 ಕೋಟಿ ರೂ. ಕೇಳಿದ್ರು ಮಾಯಾವತಿ- ಮಾಜಿ ಎಂಎಲ್‍ಸಿ ಆರೋಪ

    ಲಕ್ನೋ: ಅಲಿಗಢ್ ಕ್ಷೇತ್ರದಿಂದ ನನಗೆ ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಲು ಬಹುಜನ್ ಸಮಾಜ್ ಪಕ್ಷ (ಬಿಎಸ್‍ಪಿ) ಅಧ್ಯಕ್ಷೆ ಮಾಯಾವತಿ 5 ಕೋಟಿ ರೂ. ಕೇಳಿದ್ರು ಎಂದು ಮಾಜಿ ಎಂಎಲ್‍ಸಿ ಮುಕುಲ್ ಉಪಾಧ್ಯಾಯ ಆರೋಪಿಸಿದ್ದಾರೆ.

    ಬಿಎಸ್‍ಪಿ ಇಂದ ಹೊರಬಂದ ನಂತರ ಮುಕುಲ್ ಉಪಾಧ್ಯಾಯ, ಮಾಯಾವತಿ ಅವರು ಲೋಕಸಭೆ ಚುನಾವಣೆ ಟಿಕೆಟ್ ನೀಡಲು ನನ್ನ ಬಳಿ ನಾಲ್ಕು ಬಾರಿ 5 ಕೋಟಿ ರೂ. ಕೇಳಿದ್ರು. ಇದಕ್ಕೆ ನಿರಾಕರಿಸಿದ್ದಕ್ಕೆ ಅಲಿಗಢ್ ಕ್ಷೇತ್ರದಿಂದ ಸ್ಪರ್ಧಿಸಲು ನನ್ನ ಸಹೋದರ ರಾಮ್‍ವೀರ್ ಉಪಧ್ಯಯನ ಪತ್ನಿ ಸೀಮಾರಿಗೆ ಟಿಕೆಟ್ ನೀಡಿದ್ದಾರೆ. ರಾಜಕಾರಣಕ್ಕಾಗಿ ಸಹೋದರನೇ ನನ್ನ ವಿರುದ್ಧ ನಿಂತಿದ್ದಾನೆ ಎಂದು ಬಿಎಸ್‍ಪಿ ನಾಯಕರ ವಿರುದ್ಧ ಮುಕುಲ್ ಉಪಾಧ್ಯಾಯ ಕಿಡಿಕಾರಿದ್ದಾರೆ.

    ಅಷ್ಟೇ ಅಲ್ಲದೆ ಬಿಎಸ್‍ಪಿಯ ಸಂಯೋಜಕರು ಕೆಲವು ದಿನಗಳ ಹಿಂದೆಯಷ್ಟೆ ತನ್ನ ಬಳಿ ಅಲಿಗಢ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದ ನಿಧಿಗೆಂದು 5 ಕೋಟಿ ರೂ. ಬೇಡಿಕೆ ಇಟ್ಟಿದ್ದರು ಎಂದು ಹೇಳಿದ್ದಾರೆ.

    ಮುಕುಲ್ ಅವರ ಈ ಆರೋಪವನ್ನು ಬಿಎಸ್‍ಪಿ ತಳ್ಳಿಹಾಕಿದೆ. ಬಿಜೆಪಿಯನ್ನು ಮೆಚ್ಚಿಸಲು ಮುಕುಲ್ ಪ್ರಯತ್ನಿಸುತ್ತಿದ್ದರು ಅದಕ್ಕಾಗಿ ಪಕ್ಷದಿಂದ ಉಚ್ಛಾಟಿಸಿದ್ದೇವೆ. ಮುಕುಲ್ ಪಕ್ಷದ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಕೆಲಸವಿಲ್ಲದೆ ಅರ್ಥವಿಲ್ಲದ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ಆಗ್ರಾ- ಅಲಿಗಢ್ ವಿಭಾಗದ ಬಿಎಸ್‍ಪಿ ಪಕ್ಷದ ವಲಯ ಸಂಯೋಜಕ ಮುಖ್ಯಸ್ಥರಾದ ಸುನೀಲ್ ಚಿತ್ತೋರ್ ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಉಪಚುನಾವಣೆಯ ಫಲಿತಾಂಶ ನೋಡಿ ಸಿಟ್ಟಾದ ಮೋದಿ, ಅಮಿತ್ ಶಾ!

    ಉಪಚುನಾವಣೆಯ ಫಲಿತಾಂಶ ನೋಡಿ ಸಿಟ್ಟಾದ ಮೋದಿ, ಅಮಿತ್ ಶಾ!

    ಬೆಂಗಳೂರು: ಬಳ್ಳಾರಿ, ಮಂಡ್ಯ, ಶಿವಮೊಗ್ಗ ಉಪಚುನಾವಣಾ ಫಲಿತಾಂಶದ ಸೀಕ್ರೆಟ್ ರಿಪೋರ್ಟ್ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಿಗೆ ರವಾನೆಯಾಗಿದೆ.

    ಹೌದು. 3 ಲೋಕಸಭಾ ಉಪಚುನಾವಣೆಯ ಫಲಿತಾಂಶ ನೋಡಿ ಪ್ರಧಾನಿ ಮೋದಿ, ಶಾ ಸಿಟ್ಟಾಗಿದ್ದಾರೆ ಅಂತ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಈ ಚುನಾವಣೆಗೆ ರಾಜ್ಯ ಬಿಜೆಪಿ ನಾಯಕರು ಸಂಘಟಿತ ಹೋರಾಟ ನಡೆಸಿಲ್ಲ. ಅಷ್ಟೇ ಅಲ್ಲದೇ ಸರಿಯಾದ ಅಭ್ಯರ್ಥಿಗಳನ್ನು ನಿಲ್ಲಿಸುವಲ್ಲಿ ವಿಫಲವಾಗಿದ್ದರಿಂದ ಸೋಲಾಗಿದೆ ಎನ್ನುವ ಅಂಶ ಮೋದಿಗೆ ರವಾನೆಯಾದ ಸೀಕ್ರೆಟ್ ರಿಪೋರ್ಟ್ ನಲ್ಲಿ ಉಲ್ಲೇಖವಾಗಿದೆ.

    ಈ ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಮೋದಿಯನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡಿಲ್ಲ. ಹೀಗಾಗಿ 5ರ ಪೈಕಿ 4ರಲ್ಲಿ ಸೋಲಾಯಿತು ಎನ್ನುವ ವಿಶ್ಲೇಷಣೆಯೂ ಕೇಳಿಬಂದಿದೆ.

    2019ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಕರ್ನಾಟಕದಿಂದ ಗೆಲ್ಲಬೇಕು ಎನ್ನುವ ಗುರಿಯನ್ನು ಅಮಿತ್ ಶಾ ಹಾಕಿಕೊಂಡಿದ್ದಾರೆ. ಆದರೆ ಈ ಫಲಿತಾಂಶ ನೋಡಿ ಅಮಿತ್ ಶಾ ಪಂಚರಾಜ್ಯಗಳ ಚುನಾವಣೆಯ ಬಳಿಕ ಮತ್ತೆ ರಾಜ್ಯಕ್ಕೆ ಬಂದು ಪಕ್ಷ ಸಂಘಟಿಸುತ್ತಾರಾ ಎನ್ನುವ ಪ್ರಶ್ನೆ ಈಗ ಎದ್ದಿದೆ.

    ಕರ್ನಾಟಕದಲ್ಲಿ ಒಂದು ವೇಳೆ ಮೈತ್ರಿ ಆದ್ರೆ ಅದು ಬಿಜೆಪಿಗೆ ದೊಡ್ಡ ಹೊಡೆತ ಬೀಳಲಿದೆ. 15 ರಿಂದ 17 ಸ್ಥಾನಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಸಮೀಕ್ಷೆಯೊಂದು ಭವಿಷ್ಯ ನುಡಿದಿತ್ತು. ಈ ಭವಿಷ್ಯ ನಿಜವಾಗು ರೀತಿಯಲ್ಲಿ ಇಂದಿನ ಫಲಿತಾಂಶ ಪ್ರಕಟಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಈಗ ಆತ್ಮಾವಲೋಕನಕ್ಕೆ ಮುಂದಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲೋಕಸಭಾ ಫಲಿತಾಂಶಕ್ಕೂ ಮೊದ್ಲೇ ದೋಸ್ತಿಗೆ ಸಿಹಿ ಸುದ್ದಿ – ಶಿವಮೊಗ್ಗ ಜಿ.ಪಂನಲ್ಲಿ ಕಾಂಗ್ರೆಸ್‍ಗೆ ಗೆಲುವು

    ಲೋಕಸಭಾ ಫಲಿತಾಂಶಕ್ಕೂ ಮೊದ್ಲೇ ದೋಸ್ತಿಗೆ ಸಿಹಿ ಸುದ್ದಿ – ಶಿವಮೊಗ್ಗ ಜಿ.ಪಂನಲ್ಲಿ ಕಾಂಗ್ರೆಸ್‍ಗೆ ಗೆಲುವು

    ಶಿವಮೊಗ್ಗ: ಇನ್ನೆರಡು ದಿನವಾದ್ರೆ ಶಿವಮೊಗ್ಗದಲ್ಲಿ ಲೋಕಸಭಾ ಉಪಚುನಾವಣಾ ಮತದಾನ ನಡೆಯಲಿದೆ. ಅದಕ್ಕೂ ಮೊದಲೇ ದೋಸ್ತಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ.

    ಲೋಕಸಭಾ ಉಪಚುನಾವಣೆಗೂ ಮುನ್ನ ಮೈತ್ರಿ ಕೂಟಕ್ಕೆ ಸಂತಸ ತಂದಿದ್ದು, ಶಿವಮೊಗ್ಗ ಜಿಲ್ಲಾ ಪಂಚಾಯ್ತಿಯಲ್ಲಿ ಅಧಿಕಾರಕ್ಕೆ ಬಂದಿದೆ. ಆವಿನಹಳ್ಳಿ ಜಿಪಂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮನೇರಿ ಶಿವಪ್ಪ 530 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಸಹೋದರನ ಮಗ ಬಿ.ಟಿ.ರವಿ ಸೋಲು ಕಂಡಿದ್ದಾರೆ.

    ಕಾಗೋಡು ಅಣ್ಣಾಜಿ ನಿಧನದಿಂದ ತೆರವಾಗಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಜಿಲ್ಲಾ ಪಂಚಾಯ್ತಿ ಇದೀಗ ಮೈತ್ರಿಕೂಟದಲ್ಲೇ ತಮ್ಮ ಅಧಿಕಾರವನ್ನು ಉಳಿಸಿಕೊಂಡಿದೆ. 31 ಸ್ಥಾನ ಬಲದ ಜಿಲ್ಲಾ ಪಂಚಾಯ್ತಿನಲ್ಲಿ ಬಿಜೆಪಿ 15, ಕಾಂಗ್ರೆಸ್-ಜೆಡಿಎಸ್ 15 ಸ್ಥಾನ ಹೊಂದಿದ್ದವು. ಈ ಗೆಲುವಿನೊಂದಿಗೆ ಮೈತ್ರಿ ಪಕ್ಷಗಳ ಬಲ 16ಕ್ಕೇರಿದೆ.

    ಸೆ. 29ರಂದು ನಡೆದಿದ್ದ ಚುನಾವಣೆ, ಇಂದು ಎಂಟು ಸುತ್ತಿನಲ್ಲಿ ಮತ ಎಣಿಕೆ ಮುಗಿದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv