Tag: LokSabha election

  • ಮುಸ್ಲಿಂರ ನೆಚ್ಚಿನ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ: ಷಹನವಾಜ್ ಹುಸೇನ್

    ಮುಸ್ಲಿಂರ ನೆಚ್ಚಿನ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ: ಷಹನವಾಜ್ ಹುಸೇನ್

    ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಮುಸ್ಲಿಂ ಸಮುದಾಯದ ನೆಚ್ಚಿನ ಪ್ರಧಾನಿ ಅಭ್ಯರ್ಥಿಯೆಂದು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಸೈಯದ್ ಷಹನವಾಸ್ ಹುಸೇನ್ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019ರ ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯ ನರೇಂದ್ರ ಮೋದಿಯವರನ್ನೇ ನೆಚ್ಚಿನ ಪ್ರಧಾನಿ ಅಭ್ಯರ್ಥಿಯನ್ನಾಗಿ ಸ್ವೀಕರಿಸಿದ್ದಾರೆ. ಮುಸ್ಲಿಂ ಸಮುದಾಯ ಹಾಗೂ ವಿಶೇಷವಾಗಿ ಮುಸ್ಲಿಂ ಮಹಿಳೆಯರು ಪ್ರಧಾನಿ ಮೋದಿಯವರ ಮೇಲಿಟ್ಟಿರುವ ನಂಬಿಕೆಯೇ ಇದಕ್ಕೆ ಕಾರಣ. ಮುಸ್ಲಿಂ ಸಮುದಾಯದಲ್ಲಿ ಮೋದಿಯವರ ಮೇಲಿನ ನಂಬಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ದೇಶದ ಪ್ರಧಾನಿಯಾಗಿರುವ ಮೋದಿಯವರು 132 ಕೋಟಿ ಜನರನ್ನು ಭಾರತೀಯರೆಂಬ ದೃಷ್ಟಿಕೋನದಿಂದ ನೋಡುತ್ತಾರೆ. ಆದರೆ ಇತರೆ ರಾಜಕೀಯ ಪಕ್ಷಗಳು ಮುಸ್ಲಿಂ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ರೀತಿಯಲ್ಲಿ ನೋಡುತ್ತವೆ. ಈಗಾಗಲೇ ಈ ಬಗ್ಗೆ ಮುಸ್ಲಿಂ ಸಮುದಾಯ ಸೇರಿದಂತೆ ಭಾರತೀಯರಿಗೂ ಅರ್ಥವಾಗಿದೆ. ಹೀಗಾಗಿಯೇ ಪ್ರಧಾನಿ ಮೋದಿಯವರು ಎಲ್ಲರ ಅಚ್ಚು-ಮೆಚ್ಚಿನ ನಾಯಕ ಎಂದು ತಿಳಿಸಿದರು.

    ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ದೇಶದಲ್ಲಿ ಮುಸ್ಲಿಂ ಸಮುದಾಯ ಹಿಂದುಳಿದಿರುವುದು ಹಾಗೂ ಬಡತನದ ಸುಳಿಯಲ್ಲಿ ಸಿಲುಕಲು ಕಾಂಗ್ರೆಸ್ಸೇ ನೇರ ಕಾರಣ. ಇಂದು ಪ್ರಧಾನಿ ಮೋದಿಯವರು ಮುಸ್ಲಿಂ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಅವರು ಜಾರಿಗೆ ತಂದ ತ್ರಿವಳಿ ತಲಾಖ್ ರದ್ದು ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಭದ್ರತೆಯನ್ನು ಒದಗಿಸಿದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚುನಾವಣಾ ಪ್ರಚಾರ ಸಭೆಯಲ್ಲಿ ಕಣ್ಣೀರು ಹಾಕಿದ್ರು ಶಿವರಾಮೇಗೌಡ!

    ಚುನಾವಣಾ ಪ್ರಚಾರ ಸಭೆಯಲ್ಲಿ ಕಣ್ಣೀರು ಹಾಕಿದ್ರು ಶಿವರಾಮೇಗೌಡ!

    ಮಂಡ್ಯ: ಜಿಲ್ಲೆಯಲ್ಲಿ ಇದೀಗ ಕಣ್ಣೀರಿನ ಪಾಲಿಟಿಕ್ಸ್ ಆರಂಭವಾಗಿದೆ. ಮಂಡ್ಯ ಲೋಕಸಭಾ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ಎಲ್‍ಆರ್.ಶಿವರಾಮೇಗೌಡ ಅವರು ಬಹಿರಂಗ ಸಭೆಯಲ್ಲಿ ಕಣ್ಣೀರು ಹಾಕಿದ್ದಾರೆ.

    ಮಂಡ್ಯ ಜಿಲ್ಲೆ, ನಾಗಮಂಗಲ ಪಟ್ಟಣದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸುಮಾರು 25 ವರ್ಷಗಳ ಹಿಂದೆ ನಡೆದ ಪತ್ರಕರ್ತನ ಗಂಗಾಧರ ಮೂರ್ತಿ ಕೊಲೆ ಪ್ರಕರಣ ನೆನೆದು ಕಣ್ಣೀರು ಹಾಕಿದ್ದಾರೆ. ಪತ್ರಕರ್ತನ ಕೊಲೆ ಪ್ರಕರಣದಲ್ಲಿ ನನ್ನ ಮೇಲೆ ಆರೋಪ ಬಂದಿತ್ತು. ಆರೋಪ ಕೇಳಿ ಬಂದ ಬಳಿಕ ನಾನು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದೆ. ದೇವರೇ ನನಗೂ ಅದಕ್ಕೂ ಸಂಬಂಧವಿಲ್ಲ. ಈ ಬಗ್ಗೆ ನಿಮಗೆ ಗೊತ್ತು. ಬೇರೆಯವರಿಗೆ ಗೊತ್ತಿಲ್ಲ. ಆದರೆ ನಾನು ನಿರಪರಾಧಿ ಎಂಬುದು ಆನಂತರ ಸಾಬೀತಾಯ್ತು. ಆದರೂ ಕೂಡ ಈಗ ಚುನಾವಣೆ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮಾತನಾಡುತ್ತಲೇ ಸೇರಿದ್ದ ಜನರ ಮುಂದೆ ಅತ್ತುಬಿಟ್ಟರು.

    ಇಂದು ಕುಮಾರಸ್ವಾಮಿ ಅವರು ಶಿವರಾಮೇ ಗೌಡ ಅವರಿಗೆ ಅಧಿಕಾರವಿಲ್ಲ, ಅವರಿಗೆ ಅಧಿಕಾರಿ ಕೊಡಿಸಬೇಕು ಅಂತ ಆಶೀರ್ವಾದ ಮಾಡಿ ಲೋಕಸಭೆಗೆ ಕಳುಹಿಸಿಕೊಡೋದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ನಾನು ಯಾವತ್ತೂ ಯಾರ ಜೇಬಿಗೂ ಕೈ ಹಾಕಿಲ್ಲ. ಯಾರಿಗೂ ತೊಂದರೆ ಕೊಟ್ಟಿಲ್ಲ ಅಂತ ಅವರು ತಿಳಿಸಿದ್ರು.

    ಕುಡುಕನಲ್ಲಿ ಮನವಿ:
    ಶಿವರಾಮೇಗೌಡರು ಮಾತನಾಡುವಾಗ ಕುಡುಕನೊಬ್ಬ ಪದೇ ಪದೇ ಮಧ್ಯೆ ಮಾತನಾಡುತ್ತಿದ್ದನು. ಈ ವೇಳೆ ಜೆಡಿಎಸ್ ಅಭ್ಯರ್ಥಿ ಎಲ್‍ಆರ್.ಶಿವರಾಮೇಗೌಡರು ಕುಡುಕನಲ್ಲಿ, ನಿನ್ನ ದಮ್ಮಯ್ಯ ಕಣೋ ಕಾಲಿಗೆ ಬೀಳುತ್ತೇನೆ ಕುಳಿತುಕೋ.. ಅಂತ ಜೋರಾಗಿ ಗದರಲಾಗದೇ ಸುಮ್ಮನಿರುವಂತೆ ಬೇಡಿಕೊಂಡ ಪ್ರಸಂಗ ನಡೆಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಪಚುನಾವಣೆಗೆ ಭರ್ಜರಿ ತಯಾರಿ ನಡೆಸ್ತಿದ್ದಾರೆ ರಮ್ಯಾ ತಾಯಿ!

    ಉಪಚುನಾವಣೆಗೆ ಭರ್ಜರಿ ತಯಾರಿ ನಡೆಸ್ತಿದ್ದಾರೆ ರಮ್ಯಾ ತಾಯಿ!

    ಮಂಡ್ಯ: ಲೋಕಸಭೆ ಉಪಚುನಾವಣೆಗೆ ಸ್ಪರ್ಧಿಸಲು ಮಾಜಿ ಸಂಸದೆ ರಮ್ಯಾ ತಾಯಿ ರಂಜಿತಾ ತಯಾರಿ ನಡೆಸುತ್ತಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು ರಂಜಿತಾ ಅವರು ಈಗಾಗಲೇ ಅಫಿಡವಿಡ್ ರೆಡಿ ಮಾಡುತ್ತಿದ್ದಾರೆ.

    ದಾಖಲೆಯಲ್ಲಿ ಯಾವುದೇ ರೀತಿ ತಪ್ಪಾಗದಂತೆ ತಮ್ಮ ಆಪ್ತ ವಕೀಲರನ್ನು ಭೇಟಿ ಮಾಡಿ ಸಲಹೆ ಪಡೆದಿದ್ದಾರೆ. ಸಡನ್ ಆಗಿ ಹೆಸರು ಅನೌನ್ಸ್ ಮಾಡಿದ್ರೆ ಸಿದ್ಧವಿರೋಣ ಅಂತಾ ಅಫಿಡವಿಡ್ ರೆಡಿ ಮಾಡ್ತಿದ್ದೇವೆ ಅಂತ ಸುದ್ದಿಗಾರರಿಗೆ ಹೇಳಿದ್ದಾರೆ.

    ಜೆಡಿಎಸ್‍ಗೆ ಮಂಡ್ಯ ಕ್ಷೇತ್ರ ಬಿಟ್ಟುಕೊಡುವುದು ಸಮಂಜಸವಲ್ಲ. ಈಗಲೂ ಅಭ್ಯರ್ಥಿ ಹಾಕದಿದ್ರೆ 2019ರ ಚುನಾವಣೆಯಲ್ಲಿ ಕಷ್ಟ ಆಗುತ್ತೆ. ಮಂಡ್ಯದಲ್ಲಿ ರಮ್ಯಾಗೆ ಮತ್ತೆ ಅವಕಾಶ ಕೊಡಿ. ಅವರು ವಾಪಸ್ ಬರ್ತಾರೆ. ಇಲ್ಲ ನನಗೆ ಅವಕಾಶ ಕೊಡಿ. ನಾನು ಸ್ವತಂತ್ರ ಅಭ್ಯರ್ಥಿ ಆಗಿ ಸ್ಪರ್ಧಿಸಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ಕೇಳುತ್ತೇವೆ ಅಂತ ಅವರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಕ್ಷಯ್ ಕುಮಾರ್, ಮೋಹನ್‍ಲಾಲ್ ಸೇರಿದಂತೆ ಹಲವು ಸೆಲೆಬ್ರೆಟಿಗಳಿಗೆ ಬಿಜೆಪಿ ಟಿಕೆಟ್?

    ಅಕ್ಷಯ್ ಕುಮಾರ್, ಮೋಹನ್‍ಲಾಲ್ ಸೇರಿದಂತೆ ಹಲವು ಸೆಲೆಬ್ರೆಟಿಗಳಿಗೆ ಬಿಜೆಪಿ ಟಿಕೆಟ್?

    ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಸಿನಿಮಾ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿರುವ ಪ್ರಮುಖರನ್ನು ಅಖಾಡಕ್ಕೆ ಇಳಿಸಲು ಚಿಂತನೆ ನಡೆಸಿದೆ.

    ಈಗಾಗಲೇ ಪ್ರಮುಖ ಸಿನಿಮಾ ನಟರಾದ ಅಕ್ಷಯ್ ಕುಮಾರ್, ಸನ್ನಿ ಡಿಯೋಲ್, ಮೋಹನ್ ಲಾಲ್, ಮಾಧುರಿ ದೀಕ್ಷಿತ್ ಹಾಗೂ ಕ್ರೀಡಾ ವಿಭಾಗದಿಂದ ಕ್ರಿಕೆಟ್ ಆಟಗಾರ ವಿರೇಂದ್ರ ಸೆಹ್ವಾಗ್‍ರವರನ್ನು 2019ರ ಲೋಕಸಭಾ ಚುನಾವಣೆಯಲ್ಲಿ ಅಖಾಡಕ್ಕೆ ಇಳಿಸುವ ಕುರಿತು ಬಿಜೆಪಿ ಚಿಂತನೆ ನಡೆಸಿದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

    ಇವರಲ್ಲದೇ ಬಿಜೆಪಿಯು ಸಿನಿಮಾ, ಕಲೆ, ಸಂಸ್ಕೃತಿ, ಕ್ರೀಡೆ, ಮಾಧ್ಯಮ, ಆರೋಗ್ಯ ಸೇವೆ ಸೇರಿದಂತೆ ಇತೆರೆ ಕ್ಷೇತ್ರಗಳಲ್ಲಿ ಹೆಸರುಗಳಿಸಿರುವ ಪ್ರಮುಖ ವೃತ್ತಿಪರರನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಈ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರು ಸ್ವತಂತ್ರವಾಗಿ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇವರನ್ನು ರಾಜಕೀಯದಲ್ಲಿ ಬೆಳೆಸಿದರೆ, ಪಕ್ಷಕ್ಕೆ ಹೆಚ್ಚಿನ ಲಾಭವಾಗುವ ನಿರೀಕ್ಷೆಯನ್ನು ಇಟ್ಟುಕೊಂಡಿದೆ.

    ಈಗಾಗಲೇ ಅಕ್ಷಯ್ ಕುಮಾರ್‌ರವರನ್ನು ದೆಹಲಿಯಿಂದ, ಸನ್ನಿ ಡಿಯೋಲ್‍ರನ್ನು ಗುರುದಾಸ್ ಪುರದಿಂದ, ಮಾಧುರಿ ದೀಕ್ಷಿತ್‍ರನ್ನು ಮುಂಬೈನಿಂದ ಹಾಗೂ ಮೋಹನ್‍ಲಾಲ್ ಅವರನ್ನು ತಿರುವನಂತಪುರಂ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ತಮ್ಮ ಸೇವಾ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಪ್ರಮುಖರನ್ನು ರಾಜಕೀಯಕ್ಕೆ ತರಬೇಕೆಂಬುದು ಪ್ರಧಾನಿ ನರೇಂದ್ರ ಮೋದಿಯವರ ಅಭಿಲಾಷೆಯಾಗಿದೆ. ಅಲ್ಲದೇ ಆಡಳಿತ ವಿರೋಧಿ ಅಲೆ ಇರುವ ಕಡೆ ಇಂತಹವರಿಗೆ ಅವಕಾಶ ಕೊಟ್ಟರೆ ಪಕ್ಷಕ್ಕೆ ಲಾಭವಾಗಲಿದೆ ಎನ್ನುವ ದೂರದೃಷ್ಟಿಯನ್ನು ಬಿಜೆಪಿ ಹಾಕಿಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಂಡ್ಯದಲ್ಲಿ ಬಿಜೆಪಿಯಿಂದ ಯಧುವೀರ್ ಸ್ಪರ್ಧೆ?

    ಮಂಡ್ಯದಲ್ಲಿ ಬಿಜೆಪಿಯಿಂದ ಯಧುವೀರ್ ಸ್ಪರ್ಧೆ?

    ಮಂಡ್ಯ: ಮೈಸೂರು ಮಹಾರಾಜರಾದ ಯಧುವೀರ್ ಒಡೆಯರ್ ನೇತೃತ್ವದೊಂದಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಮಲವನ್ನು ಅರಳಿಸಲು ಬಿಜೆಪಿ ತಂತ್ರ ರೂಪಿಸುತ್ತಿದೆ ಎನ್ನಲಾಗಿದೆ.

    ಬಿಜೆಪಿಯು ಸದ್ದಿಲ್ಲದೆ ಮೈಸೂರು ರಾಜಮನೆತನವನ್ನು ಮಂಡ್ಯಕ್ಕೆ ಕರೆತರಲು ಸಿದ್ದತೆ ನಡೆಸಿದ್ದು, ಜಿಲ್ಲೆಯಲ್ಲಿ ಪ್ರಾಬಲ್ಯವಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಅನ್ನು ಮಣಿಸಲು ತಂತ್ರ ರೂಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಮೈಸೂರು ಮಹಾರಾಜ ಯಧುವೀರ್ ಒಡೆಯರ್ ಅವರನ್ನು ಅಖಾಡಕ್ಕೆ ಇಳಿಸಲು ಸಿದ್ಧತೆ ನಡೆಸಿರುವುವಾಗಿ ತಿಳಿದು ಬಂದಿದೆ.

    ಈಗಾಗಲೇ ಬಿಜೆಪಿಯು ಯಧುವೀರ್ ಒಡೆಯವರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸಹ ಒಡೆಯರ್ ಅವರನ್ನೇ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಅಲ್ಲದೇ ಯಧುವೀರ್ ಅವರು ಮಂಡ್ಯದಿಂದ ಸ್ಪರ್ಧಿಸಿದರೆ, ಸಕ್ಕರೆ ನಾಡಿನ ಜನರು ಅವರ ಕೈ ಹಿಡಿಯುವ ಸಾಧ್ಯತೆ ಹೆಚ್ಚು ಎಂದು ಎನ್ನುವ ವಿಚಾರ ಬಿಜೆಪಿ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಎಚ್‍ಡಿಡಿ ಪ್ರತಿಕ್ರಿಯೆ

    ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಎಚ್‍ಡಿಡಿ ಪ್ರತಿಕ್ರಿಯೆ

    ರಾಯಚೂರು: ನನಗೆ ಲೋಕಸಭಾ ಚುನಾವಣೆಗೆ ನಿಲ್ಲುವ ಭ್ರಮೆಯಿಲ್ಲ. ಆದ್ರೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಡ ಇದೆ ಅಂತ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ತಿಳಿಸಿದ್ದಾರೆ.

    ಇಂದು ಮಂತ್ರಾಲಯಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಕೊಡುವಂತೆ ರಾಯರಲ್ಲಿ ಬೇಡಿಕೊಳ್ಳುತ್ತೇನೆ. ರಾಜಕೀಯವಾಗಿ ಎಲ್ಲವನ್ನೂ ಅನುಭವಿಸಿದ್ದೇನೆ. ಮುಂದೆ ಲೊಕಸಭಾ ಚುನಾವಣೆಗೆ ಕೂಡ ಇದೇ ಶಕ್ತಿ ಬೇಕು ಅಂತ ಹೇಳಿದ್ರು.

    ನನಗೆ ಚುನಾವಣೆಗೆ ನಿಲ್ಲುವ ಭ್ರಮೆಯಿಲ್ಲ. ಆದ್ರೆ ನಿಲ್ಲುವಂತೆ ನಮ್ಮ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ಚುನಾವಣೆಗೆ ಇನ್ನೂ 10 ತಿಂಗಳು ಬಾಕಿಯಿದೆ. ಗುರುಗಳ ಪ್ರೇರಣೆ, ದೇಹದ ಪ್ರಕೃತಿ ಆಧಾರದ ಮೇಲೆ ನಡೆಯುತ್ತೇನೆ. ಗುರುಗಳ ಆಶಿರ್ವಾದ ಪಡೆಯಲು ಬಂದಿದ್ದೇನೆ. ಹೀಗಾಗಿ ಇಲ್ಲಿ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ. ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿಯಾಗಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿದೆ. ಆದ್ರೆ ಇದುವರೆಗೂ ಆರ್ಥಿಕ ಭರವಸೆ ಸಿಕ್ಕಿಲ್ಲ ಅಂತ ಅವರು ವಿಷಾದ ವ್ಯಕ್ತಪಡಿಸಿದ್ರು.

    ಇಂದು ಮಂತ್ರಾಲಯದಲ್ಲೆ ತಂಗಿದ್ದು ರಾಯರ ದರ್ಶನ ಪಡೆಯಲಿರುವ ದೇವೆಗೌಡರು ನಾಳೆ ಮಂತ್ರಾಲಯದಿಂದ ತೆರಳಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಮ್ಮಿಶ್ರ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ: ಸಚಿವ ದೇಶಪಾಂಡೆ

    ಸಮ್ಮಿಶ್ರ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ: ಸಚಿವ ದೇಶಪಾಂಡೆ

    -ನಾನೂ ಉತ್ತರ ಕರ್ನಾಟಕದವನೇ

    ಬಾಗಲಕೋಟೆ: ಸಮ್ಮಿಶ್ರ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯವಾಗಿಲ್ಲ, ನಾನೂ ಕೂಡ ಉತ್ತರ ಕರ್ನಾಟಕದವನೇ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

    ಮಳೆ ಹಾಗೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಲು ಜಿಲ್ಲೆಗೆ ಆಗಮಿಸಿದ್ದಾಗ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಲೋಕಸಭೆ ಚುನಾವಣೆ ನಂತರ ಪತನವಾಗಲಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿ, ವಿರೋಧ ಪಕ್ಷದವರು ಆ ರೀತಿ ಮಾತನಾಡುತ್ತಿರುವುದು ತಪ್ಪಲ್ಲ. ಸಮ್ಮಿಶ್ರ ಸರ್ಕಾರಕ್ಕೆ ನಾಡಿನ ಜನ ಬೆಂಬಲ ಕೊಡುತ್ತಾರೆ. ಯಾವುದೇ ಚುನಾವಣೆಯಾಗಲಿ, ಮತದಾರರೇ ದೇವರು. ಅವರ ನಿರ್ಧಾರಕ್ಕೆ ಎಲ್ಲರೂ ತಲೆ ಬಾಗೋದು ಧರ್ಮ. ಸಮ್ಮಿಶ್ರ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯವಾಗಿಲ್ಲ, ನಾನೂ ಕೂಡ ಉತ್ತರ ಕರ್ನಾಟಕದವನೇ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಗೆ ಹೆಚ್ಚಿನ ಸ್ಥಾನಗಳು ಬರುತ್ತವೆ ಎಂದರು.

    ಸುದ್ದಿಗಾರರು ಕೊಡಗು ಸಂತ್ರಸ್ತರಿಗೆ ಸಚಿವ ರೇವಣ್ಣ ಬಿಸ್ಕತ್ ಎಸೆದ ವಿಚಾರ ಪ್ರಸ್ತಾಪಿಸಿದಾಗ, ಅವರು ಮಾಡಿದ ರೀತಿ ಸರಿಯಲ್ಲ, ಆದರೆ ಅವರು ಉದ್ದೇಶ ಪೂರ್ವಕವಾಗಿ ಮಾಡಿಲ್ಲ. ಪರಿಹಾರ ಕೇಂದ್ರದಲ್ಲಿ ಸಾಕಷ್ಟು ಸಂತ್ರಸ್ತರಿದ್ದರಿಂದ ಗೊಂದಲವುಂಟಾಗಿದೆ. ಎಲ್ಲರಿಗೂ ಬಿಸ್ಕೆಟ್ ನೀಡುವ ಅವಸರದಲ್ಲಿ ರೇವಣ್ಣ ಹಾಗೆ ಮಾಡಿದ್ದಾರೆ ಅಷ್ಟೇ ಎಂದು ತಿಳಿಸಿದರು.

    ಈ ವೇಳೆ ಕೃಷ್ಣಾ ಮೇಲ್ದಂಡೆ ಕಾಮಾಗಾರಿ ವಿಳಂಬದ ಬಗ್ಗೆ ಪರಿಸೀಲನೆ ನಡೆದಿದೆ, ಈ ಬಗ್ಗೆ ಸಚಿವ ಡಿ.ಕೆ ಶಿವಕುಮಾರ್ ಜೊತೆ ಮಾತನಾಡೋದಾಗಿ ಹೇಳಿ, ಕಾಂಗ್ರೆಸ್ಸಿನ 9 ಶಾಸಕರುಗಳು ಬಿಜೆಪಿಗೆ ಬರುತ್ತಾರೆಂಬ ಬಿ.ವೈ. ರಾಘವೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಅವರು, ರಾಘವೇಂದ್ರರವರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಮೊದಲು ತಮ್ಮ 82 ಶಾಸಕರು ಎಲ್ಲಿದ್ದಾರೆಂದು ಹೇಳಲಿ ಎಂದು ವ್ಯಂಗ್ಯವಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅವಕಾಶ ಸಿಕ್ಕರೆ ಖಂಡಿತ ಎಚ್‍ಡಿಡಿ ಆಸೆ ನೆರವೇರಿಸುತ್ತೇನೆ- ಪ್ರಜ್ವಲ್ ರೇವಣ್ಣ

    ಅವಕಾಶ ಸಿಕ್ಕರೆ ಖಂಡಿತ ಎಚ್‍ಡಿಡಿ ಆಸೆ ನೆರವೇರಿಸುತ್ತೇನೆ- ಪ್ರಜ್ವಲ್ ರೇವಣ್ಣ

    ಹಾಸನ: ಲೋಕಸಭೆಗೆ ಸ್ಪರ್ಧಿಸುವ ಕುರಿತು ಎಚ್‍ಡಿಡಿ ಅವರು ನನ್ನ ಬಳಿ ಏನೂ ಹೇಳಿಲ್ಲ. ದೇವರ ಪೂಜೆ ಮಾಡಿಸಿ ಹೊರ ಬರುತ್ತಿದ್ದಂತೆಯೇ ಒಳ್ಳೆಯ ಸುದ್ದಿ ಕೇಳಿದ್ದೇನೆ. ಒಂದು ವೇಳೆ ಅಂತಹ ಸಂದರ್ಭ ಬಂದ್ರೆ ಖಂಡಿತವಾಗಿಯೂ ಅವರ ಆಸೆ ನೆರವೇರಿಸುತ್ತೇನೆ ಅಂತ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

    ನಗರದ ಹರದನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕ್ಷೇತ್ರ ಎನ್ನುವುದರ ಕುರಿತು ಇದುವರೆಗೂ ಯಾವುದೇ ಚರ್ಚೆ ಆಗಿಲ್ಲ. ಯಾವ ಕ್ಷೇತ್ರವೇ ಆಗಲಿ. ದೇವೇಗೌಡ ಅವರು ಏನು ಆಶೀರ್ವಾದ ಮಾಡುತ್ತಾರೆಯೋ ಅದನ್ನು ಸ್ವೀಕರಿಸಲು ನಾನು ತಯಾರಾಗಿದ್ದೇನೆ. ಅವರು ಏನೇ ಅವಕಾಶ ಕೊಟ್ಟರೂ ಈ ರಾಜ್ಯದ ಜನತೆಗೋಸ್ಕರ ದುಡಿಯುತ್ತೇನೆ ಅಂದ್ರು.

    ಪುರಸಭೆ ಚುನಾವಣೆಯಲ್ಲಿ ಅತೀ ಹೆಚ್ಚಿನ ಸೀಟುಗಳನ್ನು ಪಡೆದು ಬಹುತ ಸಾಧಿಸಬೇಕೆಂಬುದು ನಮ್ಮ ಆಶಯವಾಗಿದೆ. ಪ್ರತಿಯೊಂದು ಚುನಾವಣೆಯೂ ನಮಗೆ ಅತಿ ಮುಖ್ಯವಾದುದಾಗಿದೆ. ವಿಧಾಸನಭೆ, ಪುರಸಭೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಅಥವಾ ಸಂಸದರ ಚುನಾವಣೆಯೇ ಇರಬಹುದು. ಹೀಗೆ ಪ್ರತಿಯೊಂದು ಚುನಾವಣೆಯೂ ಬಹುಮುಖ್ಯವಾಗಿದ್ದು, ಇದಕ್ಕಾಗಿ ಶ್ರಮ ವಹಿಸುತ್ತೇನೆ. ಇದನ್ನೂ ಓದಿ: ಲೋಕಸಭಾ ಚುನಾವಣಾ ಸಮರ – ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ನಿಶ್ಚಿತ

    ಇದೇ ವೇಳೆ ಮಂಡ್ಯದಲ್ಲಿ ಜನರು ಪ್ರಜ್ವಲ್ ರೇವಣ್ಣ ಅವರು ಇಲ್ಲೇ ಸ್ಪರ್ಧಿಸಬೇಕೆಂದು ಕೇಳಿಕೊಳ್ಳುವುದಕ್ಕೆ ಪ್ರತಿಕ್ರಿಯಿಸಿದ ಅವರು, ಮಂಡ್ಯ ಜನತೆಗೆ ಮೊದಲು ನಾನು ಧನ್ಯವಾದ ತಿಳಿಸುತ್ತೇನೆ. ಯಾಕಂದ್ರೆ ನಾನು ಆ ಜಿಲ್ಲೆಗೆ ಅಥವಾ ಕ್ಷೇತ್ರಕ್ಕೆ ಸಂಬಂಧಪಡದೇ ಇದ್ದರೂ ಕೂಡ ಅಲ್ಲಿನ ಜನತೆ 7 ಸೀಟು ಕೊಟ್ಟು ಇಂದು ನಮಗೆ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ಆ ಜಿಲ್ಲೆಯ ಜನತೆಗೆ ನಾನು ಯಾವತ್ತೂ ಚಿರಋಣಿಯಾಗಿರುತ್ತೇನೆ. ಒಂದು ವೇಳೆ ಅದೇ ಕ್ಷೇತ್ರದಲ್ಲಿ ಅವಕಾಶ ಸಿಕ್ಕರೇ ಅದು ನನ್ನ ಪುಣ್ಯ, ಖಂಡಿತವಾಗಿಯೂ ಅದನ್ನು ನಾನು ಸ್ವೀಕರಿಸುತ್ತೇನೆ ಅಂತ ಹೇಳಿದ್ರು.

    ಒಟ್ಟಿನಲ್ಲಿ ದೊಡ್ಡವರ ನಿರ್ಧಾರಕ್ಕೆ ನಾನು, ನಮ್ಮ ನಾಯಕರು ಹಾಗೂ ಕಾರ್ಯಕರ್ತರೆಲ್ಲರೂ ಬದ್ಧರಾಗಿರುತ್ತೇವೆ ಅಂತ ಅವರು ತಿಳಿಸಿದ್ರು. ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

    https://www.youtube.com/watch?v=PPxd3hiJGY4

  • ಲೋಕಸಭಾ ಚುನಾವಣೆಯ ಕಾಂಗ್ರೆಸ್ ತಂತ್ರ ಬಿಚ್ಚಿಟ್ಟ ಪರಮೇಶ್ವರ್

    ಲೋಕಸಭಾ ಚುನಾವಣೆಯ ಕಾಂಗ್ರೆಸ್ ತಂತ್ರ ಬಿಚ್ಚಿಟ್ಟ ಪರಮೇಶ್ವರ್

    ತುಮಕೂರು: ಮುಂಬರುವ ಲೋಕಸಭಾ ಚುನಾವಣೆಗಳಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಲಾಗುವುದೆಂದು ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆಯೊಂದಿಗೆ ಚುನಾವಣೆ ಎದುರಿಸಲು ನಿರ್ಧಾರವಾಗಿದೆ. ಆದರೆ ಯಾವ ಯಾವ ಕ್ಷೇತ್ರಗಳಲ್ಲಿ ಮೈತ್ರಿ ಮುಂದುವರಿಯುತ್ತದೆ ಎಂದು ಸ್ಪಷ್ಟವಾಗಿಲ್ಲ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು.

    ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಯುವಕರು ಹಾಗೂ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲು ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿಯವರು ಈಗಾಗಲೇ ಸೂಚಿಸಿದ್ದಾರೆ ಎಂದು ಹೇಳುವ ಮೂಲಕ ಟಿಕೆಟ್ ವಿಚಾರದಲ್ಲಿ ಹಾಲಿ ಸಂಸದರಿಗೆ ಪರೋಕ್ಷವಾದ ಎಚ್ಚರಿಕೆಯನ್ನು ಡಿಸಿಎಂ ನೀಡಿದರು.

    ಸರ್ಕಾರ ಉಸ್ತುವಾರಿ ನೇಮಕ ಹಾಗೂ ಸಾಲಮನ್ನಾ ವಿಚಾರದಲ್ಲಿ ಕಾಲ ಕಳೆಯುತ್ತದೆಂದು ಆರೋಪಿಸಿದ್ದ ಬಿಎಸ್‍ವೈ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪನವರು ನೀಡೋ ಸರ್ಟಿಫೀಕೆಟ್ ನಮಗೆ ಬೇಕಿಲ್ಲ. ಮೊದಲು ಅವರು ತಮ್ಮ ಹಿಂದಿನ ಅವಧಿಯನ್ನು ತಿರುಗಿ ನೋಡಿಕೊಳ್ಳಲು ಎಂದು ತಿರುಗೇಟು ನೀಡಿದರು.

    ಪಕ್ಷದಲ್ಲಿನ ಉಸ್ತುವಾರಿ ನೇಮಕ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿ, ಸಮನ್ವಯ ಸಮಿತಿಯಲ್ಲಿ ಈ ವಿಚಾರ ಚರ್ಚೆ ನಡೆಯಬೇಕೆಂದೇನಿಲ್ಲ. ಎರಡು ಪಕ್ಷದ ಪ್ರಮುಖ ಮುಖಂಡರುಗಳ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಜನರ ಒಳಿತಿಗಾಗಿ ಸಮ್ಮಿಶ್ರ ಸರ್ಕಾರ ರಚನೆಯಾಗಿರುವುದಾಗಿ ಅವರು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಲೋಕಸಭಾ ಚುನಾವಣಾ ರಾಜಕೀಯ ಬಿರುಸು – ದೀದಿ ಯಾಕ್ ಪ್ರಧಾನಿಯಗ್ಬಾರರ್ದು ಅಂದ್ರು ಎಚ್‍ಡಿಡಿ

    ಲೋಕಸಭಾ ಚುನಾವಣಾ ರಾಜಕೀಯ ಬಿರುಸು – ದೀದಿ ಯಾಕ್ ಪ್ರಧಾನಿಯಗ್ಬಾರರ್ದು ಅಂದ್ರು ಎಚ್‍ಡಿಡಿ

    ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಪ್ರಬಲ ಮೈತ್ರಿಗೆ ಕರೆ ನೀಡಿರುವ ಮಾಜಿ ಪ್ರಧಾನಿ ದೇವೇಗೌಡರು, ಪ್ರತಿಪಕ್ಷಗಳ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇಲ್ಲವೇ, ಬಿಎಸ್ಪಿ ವರಿಷ್ಠೆ ಮಾಯಾವತಿ ಅವರನ್ನ ಬಿಂಬಿಸಿದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.

    ಖಾಸಗಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಇಂತಹದ್ದೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆ ಫಲಿತಾಂಶದ ಬಳಿಕವಷ್ಟೇ ಪ್ರತಿಪಕ್ಷಗಳ ಮೈತ್ರಿಕೂಟದ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬ ಸಂದೇಶವನ್ನು ಕಾಂಗ್ರೆಸ್ ರವಾನಿಸಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದಿದೆ. ಇದನ್ನೂ ಓದಿ: ಮಮತಾ ಬ್ಯಾನರ್ಜಿ ಹೋರಾಟಕ್ಕೆ ಎಚ್‍ಡಿಡಿ ಬೆಂಬಲ

    ಇದರ ಜತೆಗೆ ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ ವಿಚಾರದಲ್ಲಿ ಕೇಂದ್ರದ ವಿರುದ್ಧ ಸಮರ ಸಾರಿರುವ ದೀದಿ ಪ್ರತಿಪಕ್ಷಗಳ ಒಗ್ಗಟ್ಟಿಗೆ ತೀವ್ರ ಪ್ರಯತ್ನ ನಡೆಸುತ್ತಿರುವ ಕಾರಣಕ್ಕೆ ಗೌಡರ ಮಾತುಗಳು ಹೆಚ್ಚು ಪ್ರಸ್ತುತವೆನಿಸಿವೆ. ಇದನ್ನೂ ಓದಿ: ರಾಹುಲ್ ಗಾಂಧಿ ಪ್ರಧಾನಿಯಾಗಲು ನನ್ನ ತಕರಾರಿಲ್ಲ ಎಂದ್ರು ಎಚ್‍ಡಿಡಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews