Tag: LokSabha election

  • ಕರ್ನಾಟಕದಲ್ಲಿ ಪ್ರಧಾನಿ ಮೋದಿ ರಣಕಹಳೆ – ಚಿಕ್ಕೋಡಿಯಲ್ಲಿ ಬೃಹತ್ ರ‍್ಯಾಲಿಯಲ್ಲಿ ಭಾಷಣ

    ಕರ್ನಾಟಕದಲ್ಲಿ ಪ್ರಧಾನಿ ಮೋದಿ ರಣಕಹಳೆ – ಚಿಕ್ಕೋಡಿಯಲ್ಲಿ ಬೃಹತ್ ರ‍್ಯಾಲಿಯಲ್ಲಿ ಭಾಷಣ

    ಬೆಳಗಾವಿ: ಲೋಕಸಭಾ ಚುನಾವಣೆಗೆ ಪಕ್ಷಗಳು ಸಿದ್ಧತೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇದೇ ತಿಂಗಳು ಕರ್ನಾಟಕ್ಕೆ ಆಗಮಿಸಲಿದ್ದಾರೆ.

    ಜುಲೈ 29ರಂದು ಬೆಳಗಾವಿಗೆ ಪ್ರಧಾನಿ ಆಗಮಿಸಲಿದ್ದು, ಜಿಲ್ಲೆಯ ಚಿಕ್ಕೋಡಿಯಲ್ಲಿ ರೈತರ ಬೃಹತ್ ರ‍್ಯಾಲಿಯಲ್ಲಿ ಭಾಷಣ ಮಾಡಲಿದ್ದಾರೆ. ಭಾಷಣದಲ್ಲಿ ಕನಿಷ್ಠ ಬೆಂಬಲ ಬೆಲೆ, ಕಬ್ಬಿಗೆ ಬೆಂಬಲ ಬೆಲೆ ಸೇರಿದಂತೆ ರೈತರ ಪರ ಯೋಜನೆಗಳ ಬಗ್ಗೆ ಮಾತಾಡಲಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ರೈತರ 50 ಬೃಹತ್ ರ‍್ಯಾಲಿಗಳನ್ನು ನಡೆಸಲಿದ್ದಾರೆ.

    ದೇಶಾದ್ಯಂತ ಕುತೂಹಲ ಮೂಡಿಸಿದ್ದ ಅವಿಶ್ವಾಸ ನಿರ್ಣಯ ಮಂಡನೆ ಶುಕ್ರವಾರ ಲೋಕಸಭೆಯಲ್ಲಿ ನಡೆದಿದ್ದು, ನಿರೀಕ್ಷೆಯಂತೆ ಪ್ರತಿಪಕ್ಷಗಳಿಗೆ ಸೋಲಾಗಿದೆ. ವಿಶ್ವಾಸಮತ ಸಾಧಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಯಶಸ್ವಿಯಾಗಿದೆ. ಬಹುಮತ ಸಾಬೀತಿಗೆ 226 ಮತ ಬೇಕಾಗಿತ್ತು. ಆದರೆ ಎನ್‍ಡಿಎ ಪರ 325 ಮತಗಳು ಚಲಾವಣೆಯಾದವು. ಕಾಂಗ್ರೆಸ್ ಮೈತ್ರಿಕೂಟದ ಪರವಾಗಿ ಕೇವಲ 126 ಮತ ಚಲಾವವಣೆಯಾದವು. ಹೀಗಾಗಿ 199 ಮತಗಳ ಅಂತರದಿಂದ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಗೆಲುವು ಸಾಧಿಸಿದೆ. ಇನ್ನು ಈ ವೇಳೆ ಸದನದಲ್ಲಿ ಒಟ್ಟು 451 ಸದಸ್ಯರು ಹಾಜರಿದ್ದರು. ಇನ್ನು ಒಂದೂವರೆ ಗಂಟೆಗೂ ಹೆಚ್ಚು ಕಾಲ ಮಾತನಾಡಿದ ಮೋದಿ, ರಾಹುಲ್ ಗಾಂಧಿಯ ಎಲ್ಲಾ ಆರೋಪಕ್ಕೆ ಕೌಂಟರ್ ಕೊಟ್ಟಿದ್ದರು.

  • ಕಾಂಗ್ರೆಸ್ ಟಿಕೆಟ್ ಕೊಟ್ರೆ ಸಿಕಂದರಾಬಾದ್‍ನಿಂದ ನಿಲ್ತೀನಿ: ಅಜರುದ್ದೀನ್

    ಕಾಂಗ್ರೆಸ್ ಟಿಕೆಟ್ ಕೊಟ್ರೆ ಸಿಕಂದರಾಬಾದ್‍ನಿಂದ ನಿಲ್ತೀನಿ: ಅಜರುದ್ದೀನ್

    ಹೈದರಾಬಾದ್: 2019ರ ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣದ ಸಿಕಂದರಬಾದ್‍ನಿಂದ ಸ್ಪರ್ಧಿಸಲು ಬಯಸುವುದಾಗಿ ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಕಾಂಗ್ರೆಸ್ ನಾಯಕ ಮೊಹಮ್ಮದ್ ಅಜರುದ್ದೀನ್‍ರವರು ಹೇಳಿದ್ದಾರೆ.

    ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ಟಿಕೆಟ್ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಅಂತಿಮ ಎಂದರು.

    ನಾನು ಈ ಕ್ಷೇತ್ರದಲ್ಲಿನ ಹಲವಾರು ಸ್ಥಳಗಳು ಮತ್ತು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ರೈತರು, ಜನರೊಂದಿಗೆ ಮಾತಾನಾಡಿದ್ದೇನೆ. ಭೇಟಿ ವೇಳೆ ಈ ಚುನಾವಣೆಯಲ್ಲಿ ಇಲ್ಲಿಂದ ಸ್ಪರ್ಧಿಸುವಂತೆ ಕೇಳಿಕೊಂಡಿದ್ದಾರೆ. ಜನರಿಗಾಗಿ ಕೆಲಸ ಮಾಡಲು ಇಚ್ಛಿಸುತ್ತೇನೆ. ಆದರೆ ಪ್ರಚಾರವನ್ನು ನಾನು ಬಯಸುವುದಿಲ್ಲ. ನಾನು ನಿಲ್ಲಬೇಕೆಂದು ಜನ ಆಶಿಸುತ್ತಿದ್ದಾರೆ ಎಂದರು.

    2009 ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮೊರಾದಬಾದ್‍ನಲ್ಲಿ ಕಣಕ್ಕೆ ನಿಂತು ಜಯಗಳಿಸಿದ್ದ ಅಜರುದ್ದೀನ್, 2014 ರ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಸ್ಪರ್ಧಿಸಿ ಸೋತಿದ್ದರು.

    ಕಳೆದ ವರ್ಷ ಜನವರಿಯಲ್ಲಿ ಅಜರುದ್ದೀನ್ ಅವರು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್(ಎಚ್‍ಸಿಎ) ಅಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿದ್ದರು. ಆದರೆ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಅಜರ್ ಅರ್ಜಿ ತಿರಸ್ಕೃತಗೊಂಡಿತ್ತು.

  • ಲೋಕಸಭಾ ಚುನಾವಣೆಗೆ ಸ್ಫರ್ಧಿಸುವ ಬಗ್ಗೆ ಶ್ರೀರಾಮುಲು ಸ್ಪಷ್ಟನೆ

    ಲೋಕಸಭಾ ಚುನಾವಣೆಗೆ ಸ್ಫರ್ಧಿಸುವ ಬಗ್ಗೆ ಶ್ರೀರಾಮುಲು ಸ್ಪಷ್ಟನೆ

    ಮೈಸೂರು: ನಾನು ಮತ್ತೆ ಲೋಕಸಭೆ ಚುನಾವಣೆಗೆ ನಿಲ್ಲೋದಿಲ್ಲ. ನಾನು ಶಾಸಕನಾಗಿಯೇ ಮುಂದುವರಿಯುತ್ತೇನೆ. ಮತ್ತೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡೋ ಇಂಗಿತ ಇಲ್ಲ ಅಂತ ಬಿಜೆಪಿ ಶಾಸಕ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

    ನಗರದ ಕೆ.ಆರ್.ಮೋಹಲ್ಲದಲ್ಲಿರುವ ಅರ್ಜುನ್ ಗುರೂಜಿ ನಿವಾಸಕ್ಕೆ ಶಾಸಕ ಶ್ರೀರಾಮುಲು ಭೇಟಿ ನೀಡಿ ಗೌಪ್ಯ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಅವರು, ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸ್ತೇನೆ ಅನ್ನೋದು ಸತ್ಯಕ್ಕೆ ದೂರವಾದದ್ದು ಅಂತ ಅವರು ಹೇಳಿದ್ರು.

    ಇದೇ ವೇಳೆ ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ತಾರತಮ್ಯ ಮಾಡಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಕೇವಲ ಮೂರ್ನಾಲ್ಕು ಜಿಲ್ಲೆಗೆ ಸೀಮಿತಗೊಳಿಸಿ ಬಜೆಟ್ ಮಂಡಿಸಿದ್ದಾರೆ. ಅವರ ಬಜೆಟ್ ಅನ್ನು ಯಾರು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಉತ್ತರ ಕರ್ನಾಟಕ ಜನರು ಪ್ರತ್ಯೇಕ ರಾಜ್ಯ ಕೇಳುತ್ತಿದ್ದಾರೆ. ಬಜೆಟ್‍ನಲ್ಲಿ ಆ ಭಾಗವನ್ನ ಕಡೆಗಣಿಸಿದ್ದು, ಅದಕ್ಕೆ ಪುಷ್ಠಿ ನೀಡಿದಂತಾಗಿದೆ. ಆದ್ರೆ ಯಾವುದೇ ಕಾರಣಕ್ಕೂ ಇದಕ್ಕೆ ನನ್ನ ಸಹಮತ ಇಲ್ಲ. ಈ ಬಗ್ಗೆ ವಿಧಾನಸಭೆಯಲ್ಲಿ ಮಾತಾಡುತ್ತೇನೆ ಅಂದ್ರು.

    ಕರಾವಳಿ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಬಲಿಷ್ಠವಾಗಿದೆ. ಬಜೆಟ್‍ನಲ್ಲಿ ಆ ಭಾಗಕ್ಕೆ ಯಾವುದೇ ರೀತಿ ಪ್ಯಾಕೇಜ್ ನೀಡಿಲ್ಲ. ಇದು ಕುಮಾರಸ್ವಾಮಿಯವರ ಆಡಳಿತ ತೋರುತ್ತದೆ. ಕುಮಾರಸ್ವಾಮಿ ಕೇವಲ 2 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದಾರೆ. ಈ ಹಿಂದೆ ಇದ್ದ ಸರ್ಕಾರ 4 ಸಾವಿರ ಕೋಟಿ ಸಾಲಮನ್ನಾ ಬಾಕಿ ಉಳಿಸಿಕೊಂಡಿದೆ. ಈ ವರ್ಷದ ಬಜೆಟ್‍ನಲ್ಲಿ ಎಚ್‍ಡಿಕೆ 6 ಸಾವಿರ ಕೋಟಿ ಮನ್ನಾ ಮಾಡಿದ್ದಾರೆ. ಅಂದ್ರೆ ಇವರು ನಿಜವಾಗಿಯೂ ಮನ್ನಾ ಮಾಡಿದ ಸಾಲ ಕೇವಲ 2 ಸಾವಿರ ಕೋಟಿ. ಇವರು ಕೊಟ್ಟ ಪ್ರಣಾಳಿಕೆ ಏನೂ ಇವರು ಮಾಡಿದ ಸಾಲಮನ್ನವೆಷ್ಟು ಎಂದು ಕುಮಾರಸ್ವಾಮಿಯವರನ್ನ ಪ್ರಶ್ನಿಸಿದ್ರು.

    ರೇವಣ್ಣ, ಕುಮಾರಸ್ವಾಮಿ ವಚನ ಭ್ರಷ್ಟರೆಂದು ರಾಜ್ಯದ ಜನರಿಗೆ ಗೊತ್ತಿದೆ. ಮೊದಲು ಯಡಿಯೂರಪ್ಪನವರಿಗೆ ಅಧಿಕಾರ ಕೊಡದೆ ವಚನ ಭ್ರಷ್ಟರಾದ್ರು. ಇದೀಗ ರೈತರಿಗೆ ಸಾಲಮನ್ನಾ ಮಾಡದೆ ವಚನ ಭ್ರಷ್ಟರಾಗಿದ್ದಾರೆ. ಅದಕ್ಕೆ ರಾಜ್ಯದ ಜನ ಇವರನ್ನು ನಂಬದೆ ಕಾಂಗ್ರೆಸ್-ಜೆಡಿಎಸ್‍ಗೆ ಬಹುಮತ ಕೊಟ್ಟಿಲ್ಲ. ಇವರಿಬ್ಬರಿಗೂ ಪ್ರಧಾನಿ ಮೋದಿ ಲೋಕಸಭೆ ಚುನಾವಣೆಯಲ್ಲೇ ಏಟು ಕೊಡ್ತಾರೆ. ಮತ್ತೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಅಂತ ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ರು.

  • ಮೈತ್ರಿ ಸರ್ಕಾರದಲ್ಲಿ ಒಳಜಗಳ- ಬಿಜೆಪಿಯಿಂದ ಮಾಸ್ಟರ್ ಪ್ಲಾನ್

    ಮೈತ್ರಿ ಸರ್ಕಾರದಲ್ಲಿ ಒಳಜಗಳ- ಬಿಜೆಪಿಯಿಂದ ಮಾಸ್ಟರ್ ಪ್ಲಾನ್

    ನವದೆಹಲಿ: ರಾಜ್ಯ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ಮಾಸ್ಟರ್ ಪ್ಲಾನ್ ಮಾಡುತ್ತಿದ್ದು, ಇದರಿಂದ ರಾಜ್ಯದಲ್ಲಿ ಮತ್ತೆ ಇತಿಹಾಸ ಮರುಕಳಿಸುತ್ತಾ ಎಂಬ ಪ್ರಶ್ನೆಯೊಂದು ಇದೀಗ ಎದ್ದಿದೆ.

    ಲೋಕಸಭೆ ಜೊತೆಗೆ ಮಧ್ಯಂತರ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಗಳು ಹೆಚ್ಚಿವೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಆಗುತ್ತಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಎಲ್ಲದಕ್ಕೂ ಸಿದ್ಧವಾಗುವಂತೆ ರಾಜ್ಯ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ಲೋಕಸಭೆ ಚುನಾವಣೆಯೊಳಗೆ ಒಳ ಜಗಳದಿಂದ ಮೈತ್ರಿ ಸರ್ಕಾರ ಕುಸಿದರೆ ಮತ್ತೆ ಚುನಾವಣೆ ಹೋಗಲು ಚಿಂತನೆ ನಡೆಸಲಾಗಿದೆ. ರಾಷ್ಟ್ರಪತಿ ಆಡಳಿತ ಹೇರುವ ಮೂಲಕ ಲೋಕಸಭೆಗೆ ಅಖಾಡ ಸಿದ್ಧಪಡಿಸಿಕೊಳ್ಳಲಿರುವ ಬಿಜೆಪಿ ಮೈತ್ರಿ ಸರ್ಕಾರದ ವಿಫಲತೆ ಮುಂದಿಟ್ಟುಕೊಂಡು ಚುನಾವಣೆಗೆ ಹೋಗುವ ಸಾಧ್ಯತೆಗಳಿವೆ.

    2006 ರಲ್ಲಿ ಅನುಕಂಪದ ಆಧಾರದ ಮೇಲೆ ಚುನಾವಣೆ ಎದುರಿಸಿ 110 ಸ್ಥಾನ ಗೆದಿದ್ದ ಬಿಜೆಪಿ, ಮೈತ್ರಿ ಸರ್ಕಾರದ ವಿರೋಧಿ ಅಲೆ ಲೋಕಸಭೆ ಮತ್ತು ವಿಧಾನ ಸಭೆಗೆ ಸಹಕಾರಿಯಾಗುವ ಹಿನ್ನೆಲೆಯಲ್ಲಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಪ್ಲಾನ್ ಮಾಡಿದೆ. ಒಟ್ಟಿನಲ್ಲಿ 2006 ರಂತೆ ಇತಿಹಾಸ ರಿಪಿಟ್ ಮಾಡಲು ಬಿಜೆಪಿ ತಯಾರಿ ನಡೆಸಿದೆ ಎನ್ನಲಾಗಿದೆ.

  • ಸಂಪುಟ ರಚನೆ ಬಳಿಕ ಕಾಂಗ್ರೆಸ್-ಜೆಡಿಎಸ್ ನಡುವೆ ವಾರ್ ಆರಂಭ

    ಸಂಪುಟ ರಚನೆ ಬಳಿಕ ಕಾಂಗ್ರೆಸ್-ಜೆಡಿಎಸ್ ನಡುವೆ ವಾರ್ ಆರಂಭ

    ಬೆಂಗಳೂರು: ಚುನಾವಣೆ ಬಳಿಕ ಜೆಡಿಎಸ್-ಕಾಂಗ್ರೆಸ್ ಜೊತೆಯಾಗಿ ಮೈತ್ರಿ ಸರ್ಕಾರ ರಚನೆ ಮಾಡಿಕೊಂಡಿವೆ. ಆದ್ರೆ ಸಂಪುಟ ರಚನೆಯ ಬಳಿಕ ಎರಡೂ ಪಕ್ಷಗಳಲ್ಲಿ ಭಿನ್ನಮತದ ಹೊಗೆ ಕಾಣುತ್ತಿದ್ದು, ಕೆಲ ನಾಯಕರು ಪಕ್ಷದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕುತ್ತಿದ್ದಾರೆ.

    ಇತ್ತ ಕಾಂಗ್ರೆಸ್-ಜೆಡಿಎಸ್ ಲೋಕಸಭಾ ಚುನಾವಣೆಗೂ ಮೈತ್ರಿ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪೂರ್ವ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ. ಭಾನುವಾರ ಕಾಂಗ್ರೆಸ್ ಸಂಸದರಿಂದ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಗೆ ಕಾಂಗ್ರೆಸ್ ಸಂಸದರು ತಗಾದೆ ತೆಗೆದಿದ್ದಾರೆ ಎನ್ನಲಾಗಿದೆ.

    ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿನ ಕ್ಷೇತ್ರಗಳನ್ನು ಕೇಳುತ್ತಿದೆ ಎಂದು ಹೇಳಲಾಗುತ್ತಿದೆ. ಕಾರಣ ಜೆಡಿಎಸ್ ದಕ್ಷಿಣ ಕರ್ನಾಟಕದಲ್ಲಿ ಪ್ರಾಬಲ್ಯತೆಯನ್ನು ಹೊಂದಿದ್ದು, ಸುಲಭವಾಗಿ ಗೆಲುವು ಸಾಧಿಸಬಹುದು ಎಂಬುದು ಜೆಡಿಎಸ್ ಲೆಕ್ಕಾಚಾರವಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಎಂಬಿ ಪಾಟೀಲ್‍ಗೆ ಹೇಳಿದ್ದೇನು?- ಮಾತುಕತೆಯ ಮಾಹಿತಿ ಇಲ್ಲಿದೆ

    ರಾಯಚೂರು, ಚಿಕ್ಕಬಳ್ಳಾಪುರ, ಮಂಡ್ಯ, ಹಾಸನ, ಚಾಮರಾಜನಗರ, ಚಿತ್ರದುರ್ಗ, ತುಮಕೂರು ಮತ್ತು ಶಿವಮೊಗ್ಗ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಕೇಳಿದೆಯಂತೆ. ಆದರೆ ಈ ಕ್ಷೇತ್ರಗಳಲ್ಲಿ ಸದ್ಯ ಕಾಂಗ್ರೆಸ್ ಸಂಸದರು ಇದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‍ನ ಈ ಬಲಿಷ್ಠ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟು ಕೊಡೋದು ಹೇಗೆ? ಬಿಟ್ಟು ಕೊಟ್ರೆ, ಪಕ್ಷದ ಹಾಲಿ ಸಂಸದರು ಎಲ್ಲಿಗೆ ಹೋಗಬೇಕು ? ಇದ್ರಿಂದ ನಮಗೆ ಡ್ಯಾಮೇಜ್ ಆಗಲ್ವಾ ಅಂತ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರನ್ನು ಸಂಸದರು ಪ್ರಶ್ನೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಇದನ್ನೂ ಓದಿ: ಜೆಡಿಎಸ್‍ನಲ್ಲೂ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಫೋಟ

    ಲೋಕಸಭಾ ಚುನಾವಣೆಗೆ ಬೇಕಾದರೆ ಜೆಡಿಎಸ್‍ಗೆ ಹಾಸನ, ಮಂಡ್ಯ, ಶಿವಮೊಗ್ಗ, ಮೈಸೂರು ಬಿಟ್ಟುಕೊಡೋಣ. ಉಳಿದ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಲಿ. ಆ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳೊಣ ಅಂತಾ ಎಲ್ಲ ಸಂಸದರು ಪರಮೇಶ್ವರ್ ಅವರಿಗೆ ಸಲಹೆ ನೀಡಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

  • ಲೋಕ ಚುನಾವಣೆಯಲ್ಲಿ ಕೈ, ತೆನೆ ಜಂಟಿ ಸ್ಪರ್ಧೆ ಅಧಿಕೃತ: ಸಂಪುಟದಲ್ಲಿ ಯಾವ ಪಕ್ಷಕ್ಕೆ ಯಾವ ಖಾತೆ?

    ಲೋಕ ಚುನಾವಣೆಯಲ್ಲಿ ಕೈ, ತೆನೆ ಜಂಟಿ ಸ್ಪರ್ಧೆ ಅಧಿಕೃತ: ಸಂಪುಟದಲ್ಲಿ ಯಾವ ಪಕ್ಷಕ್ಕೆ ಯಾವ ಖಾತೆ?

    ಬೆಂಗಳೂರು: ವಿಧಾನಸಭಾ ಚುನಾವಣೆಯ ಅಧಿಕಾರಕ್ಕೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಜೆಡಿಎಸ್ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಳ್ಳುವುದಾಗಿ ಅಧಿಕೃತವಾಗಿ ತಿಳಿಸಿದೆ.

    ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಚುನಾವಣೆ ಪೂರ್ವ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಹೇಳಿದ್ದಾರೆ.

    ನಗರದ ಅಶೋಕ್ ಹೋಟೆಲ್‍ನಲ್ಲಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವೇಣುಗೋಪಾಲ್, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಯಲ್ಲಿ ಸ್ಪರ್ಧೆ ಮಾಡಲಿದೆ. ಆದರೆ ಮೈತ್ರಿಯ ಕುರಿತು ಮುಂದಿನ ದಿನಗಳಲ್ಲಿ ಪೂರ್ಣ ಮಾಹಿತಿ ನೀಡುವುದಾಗಿ ತಿಳಿಸಿದರು.

    ಇದೇ ವೇಳೆ ಸರ್ಕಾರ ಸಂಪುಟ ರಚನೆ ಕುರಿತು ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಎರಡು ಪಕ್ಷಗಳು ಸಮ್ಮಿಶ್ರ ಸರ್ಕಾರ ಅಡಿ ಕಾರ್ಯ ನಿರ್ವಹಿಸುತ್ತದೆ. ಸಂಪುಟ ರಚನೆ ಎರಡು ಪಕ್ಷದ ನಾಯಕರು ಒಮ್ಮತದ ತೀರ್ಮಾನ ಕೈಗೊಂಡಿದ್ದು, ರಾಹುಲ್ ಗಾಂಧಿ ಸಹ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಇವುಗಳ ಆಧಾರದ ಮೇಲೆ ಸಂಪುಟ ರಚನೆ ಮಾಡಿರುವುದಾಗಿ ಮಾಹಿತಿ ನೀಡಿದರು.

    ಇದೇ ವೇಳೆ ಬುಧವಾರ ಸಂಪುಟ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ಸ್ಪಷ್ಟಪಡಿಸಿದ ಸಿಎಂ ಕುಮಾರಸ್ವಾಮಿ ಯಾರಿಗೆ ಯಾವ ಖಾತೆ ನೀಡಲಾಗುತ್ತದೆ ಎಂದು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.

    ಸಮನ್ವಯ ಸಮಿತಿ ರಚನೆ: ಸರ್ಕಾರದ 5 ವರ್ಷಗಳ ಕಾಲ ಉತ್ತಮ ಆಡಳಿತ ನೀಡಲು ಸಮನ್ವಯ ರಚಿಸಿರುವುದಾಗಿ ವೇಣುಗೋಪಾಲ್ ತಿಳಿಸಿದರು. ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕಗೊಂಡಿದ್ದರೆ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಸಮಿತಿಯಲ್ಲಿ ಇರುತ್ತಾರೆ.

    ಜಂಟಿ ಸುದ್ದಿಗೋಷ್ಠಿ ವೇಳೆ ಡಿಸಿಎಂ ಪರಮೇಶ್ವರ್, ಸಂಸದ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಉಪಸ್ಥಿತರಿದ್ದರು.

    ಕಾಂಗ್ರೆಸ್ಸಿಗೆ ಯಾವ ಖಾತೆ?
    ಗೃಹ ಇಲಾಖೆ, ಕಂದಾಯ, ಮುಜರಾಯಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಬೆಂಗಳೂರು ನಗರಾಭಿವೃದ್ಧಿ, ಕೃಷಿ, ಗಣಿ ಮತ್ತು ಭೂ ವಿಜ್ಞಾನ, ಬೃಹತ್ ಕೈಗಾರಿಕೆ, ಆರೋಗ್ಯ, ಆಹಾರ, ಆರಣ್ಯ ಇಲಾಖೆ, ನೀರಾವರಿ ಮತ್ತು ಜಲಸಂಪನ್ಮೂಲ, ಅಲ್ಪಸಂಖ್ಯಾತ, ಕಾನೂನು ಸಂಸದೀಯ, ಸಮಾಜ ಕಲ್ಯಾಣ, ಸಕ್ಕರೆ, ಐಟಿಬಿಟಿ, ಯುವಜನ ಮತ್ತು ಕ್ರೀಡಾ, ಕನ್ನಡ ಸಂಸ್ಕೃತಿ, ವೈದ್ಯಕೀಯ ಶಿಕ್ಷಣದಂತಹ ಪ್ರಮುಖ ಖಾತೆ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿದೆ.

    ಜೆಡಿಎಸ್‍ಗೆ ಯಾವ ಖಾತೆ?
    ಹಣಕಾಸು, ಶಿಕ್ಷಣ, ಇಂಧನ, ಅಬಕಾರಿ, ಪಿಡಬ್ಲ್ಯೂಡಿ, ಸಹಕಾರ, ಪ್ರವಾಸೋದ್ಯಮ, ಶಿಕ್ಷಣ, ಸಾರಿಗೆ, ತೋಟಗಾರಿಕೆ, ಸಣ್ಣ ಕೈಗಾರಿಕೆ ಇಲಾಖೆ ಪ್ರಮುಖ ಖಾತೆಗಳು ಲಭಿಸಿದೆ.

  • ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ – ಕೋರ್ಟ್‍ಗೆ ಹಾಜರಾದ ಶಿವರಾಜ್‍ಕುಮಾರ್ ದಂಪತಿ

    ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ – ಕೋರ್ಟ್‍ಗೆ ಹಾಜರಾದ ಶಿವರಾಜ್‍ಕುಮಾರ್ ದಂಪತಿ

    ಶಿವಮೊಗ್ಗ: ಕಳೆದ ಲೋಕಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಇಂದು ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದರು.

    2013 ರ ಲೋಕಸಭಾ ಚುನಾವಣೆಯಲ್ಲಿ ಮತದಾನದ 48 ಗಂಟೆಗಳ ಮೊದಲು ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ಈ ಪ್ರಕರಣದ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ನ್ಯಾಯಾಲಯ ಇಬ್ಬರಿಗೂ ಸೂಚನೆ ನೀಡಿತ್ತು.

    ಈ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗದ ಜೆಎಂಎಫ್‍ಸಿ ಹೆಚ್ಚುವರಿ ನ್ಯಾಯಾಲಯಕ್ಕೆ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಹಾಜರಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರು ಮಾರ್ಚ್ 1ಕ್ಕೆ ವಿಚಾರಣೆ ಮುಂದೂಡಿದ್ದಾರೆ.