Tag: Look Out

  • ಸಲ್ಮಾನ್ ಖಾನ್ ಗೆ ಬೆದರಿಕೆ: ವಿದ್ಯಾರ್ಥಿ ವಿರುದ್ಧ ನೋಟಿಸ್

    ಸಲ್ಮಾನ್ ಖಾನ್ ಗೆ ಬೆದರಿಕೆ: ವಿದ್ಯಾರ್ಥಿ ವಿರುದ್ಧ ನೋಟಿಸ್

    ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ (Salman Khan) ಗೆ ಜೀವ ಬೆದರಿಕೆ (Threat) ಹಾಕುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪೊಲೀಸ್ ಇಲಾಖೆಯು ಅವರಿಗೆ ಭಾರೀ ಭದ್ರತೆ ನೀಡಿದ್ದರೂ, ಅಂಚೆ ಮೂಲಕ, ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗುತ್ತಿದೆ. ಅಂಥದ್ದೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ವಿದ್ಯಾರ್ಥಿಯೊಬ್ಬನಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

    ಸಲ್ಮಾನ್ ಖಾನ್ ಗೆ ಬೆದರಿಕೆಯ ಇ-ಮೇಲ್  ರವಾನಿಸಿದ್ದ ಬ್ರಿಟನ್ (Britain) ನಲ್ಲಿರುವ ಭಾರತದ ವಿದ್ಯಾರ್ಥಿಗೆ (Student) ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್ (Look Out Notice) ಜಾರಿ ಮಾಡಿದ್ದಾರೆ. ಬ್ರಿಟನ್ ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಈ ಸ್ಟೂಡೆಂಟ್ ಹರಿಯಾಣದವನು ಎಂದು ಹೇಳಲಾಗುತ್ತಿದೆ. ಜೈಲಿನಲ್ಲಿರುವ ಪಾತಕಿ ಗೋಲ್ಡಿ ಬ್ರಾರ್ ಹೆಸರಿನಲ್ಲಿ ಈತ ಬೆದರಿಕೆ ಒಡ್ಡಿದ್ದ ಎಂದು ವರದಿಯಾಗಿದೆ. ಇದನ್ನೂ ಓದಿ:ಶಾಹಿದ್ ಕಪೂರ್ ಜೊತೆ ಪೂಜಾ ಹೆಗ್ಡೆ ರೊಮ್ಯಾನ್ಸ್

    ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಅವರ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೆ ಮುಂಬೈ ಪೊಲೀಸರು ಟೈಟ್ ಸೆಕ್ಯೂರಿಟಿ ನೀಡಿದ್ದಾರೆ. ಮನೆ ಸುತ್ತಮುತ್ತ ತಪಾಸಣೆ ಕಾರ್ಯವನ್ನೂ ಪೊಲೀಸರು ಆರಂಭಿಸಿದ್ದು, ಯಾವುದೇ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತಿಳಿಸಿದ್ದಾರೆ. ಸಲ್ಮಾನ್ ಖಾನ್ ಅವರನ್ನು ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೊಲ್ಲುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಅಗತ್ಯ ಕ್ರಮಗಳನ್ನು ತಗೆದುಕೊಳ್ಳಲು ಮುಂದಾಗಿದ್ದಾರೆ.

    salman

    ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ (gangster) ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ನಡುವಿನ ಕಾಳಗ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈಗಾಗಲೇ ಸಲ್ಮಾನ್ ಖಾನ್ ಕೊಲ್ಲಲು (Death Threats) ಬಿಷ್ಣೋಯ್ ಮತ್ತು ಟೀಮ್  ಹಲವು ರೀತಿಯಲ್ಲಿ ಪ್ರಯತ್ನ ಮಾಡಿ ವಿಫಲವಾಗಿದೆ. ಈ ಸಂಬಂಧವಾಗಿ ಅನೇಕರು ಬಂಧನ ಕೂಡ ಆಗಿದ್ದಾರೆ. ಸ್ವತಃ ಬಿಷ್ಣೋಯ್ ಜೈಲಿನಲ್ಲೇ ಇದ್ದಾನೆ. ಜೈಲಿನಿಂದಲೇ ಮತ್ತೆ ಸಲ್ಮಾನ್ ಬಗ್ಗೆ ಮಾತನಾಡಿದ್ದಾನೆ.

    ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಲಾರೆನ್ಸ್ ಬಿಷ್ಣೋಯ್ ‘ನನ್ನ ಜೀವನದ ಅಂತಿಮ ಗುರಿ ಅಂತಿದ್ದರೆ ಅದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ಆಗಿದೆ. ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ. ಅವನ ಈ ಮಾತು ಬಾಲಿವುಡ್ ನಲ್ಲಿ ಭಾರೀ ಆತಂಕ ಸೃಷ್ಟಿ ಮಾಡಿದೆ. ಹಾಗಾಗಿ ಸಲ್ಮಾನ್ ಖಾನ್ ಗೆ ಸಾಕಷ್ಟು ಭದ್ರತೆಯನ್ನು ನೀಡಲಾಗಿದೆ.

  • ಕಾಳಿಗೆ ಅವಮಾನ : ನಿರ್ಮಾಪಕಿ ಲೀನಾ ಮಣಿಮೇಕಲೈಗೆ ಲುಕ್ ಔಟ್ ಸಂಕಟ

    ಕಾಳಿಗೆ ಅವಮಾನ : ನಿರ್ಮಾಪಕಿ ಲೀನಾ ಮಣಿಮೇಕಲೈಗೆ ಲುಕ್ ಔಟ್ ಸಂಕಟ

    ಹಿಂದೂ ದೇವರನ್ನು ಸತತವಾಗಿ ಅವಮಾನಿಸುತ್ತಿರುವ ಲೀನಾ ಮಣಿಮೇಕಲೈ ವಿರುದ್ಧ ದೇಶಾದ್ಯಂತ ದೂರುಗಳು ದಾಖಲಾಗುತ್ತಿವೆ. ಕಾಳಿ ಕೈಯಲ್ಲಿ ಸಿಗರೇಟು ಮತ್ತು ಎಲ್‍ಜಿಬಿಡಿಕ್ಯೂ ಧ್ವಜ ಕೊಟ್ಟು ಹಿಂದೂಗಳ ಕಂಗೆಣ್ಣಿಗೆ ಗುರಿಯಾಗಿದ್ದ ಲೀನಾ, ಮೊನ್ನೆಯಷ್ಟೇ ಶಿವ ಪಾರ್ವತಿ ಕೈಯಲ್ಲೂ ಸಿಗರೇಟು ಕೊಟ್ಟು ಅಪಮಾನ ಮಾಡಿದ್ದಾರೆ. ಹೀಗಾಗಿ ಲೀನಾ ವಿರುದ್ಧ ದೂರುಗಳ ಮಹಾಪುರವೇ ಹರಿದು ಬರುತ್ತಿವೆ. ಅವರನ್ನು ಕೂಡಲೇ ಬಂಧಿಸಬೇಕು ಎಂಬ ಆಗ್ರಹ ಶುರುವಾಗಿದೆ.

    ಮಧ್ಯ ಪ್ರದೇಶದಲ್ಲಿ ಅತೀ ಹೆಚ್ಚು ದೂರುಗಳು ಲೀನಾ ಮೇಲೆ ದಾಖಲಾಗಿರುವುದರಿಂದ, ಮಧ್ಯಪ್ರದೇಶ ಪೊಲೀಸರು ಲೀನಾ ವಿರುದ್ಧ ಲುಕ್‍ ಔಟ್ ಸುತ್ತೋಲೆ ಹೊರಡಿಸಿದ್ದಾರೆ. ಐಪಿಸಿ ಸೆಕ್ಸನ್ 295 ಎ (ಧಾರ್ಮಿಕ ನಂಬಿಕೆಗಳಿಗೆ ಉದ್ದೇಶಪೂರ್ವಕವಾಗಿ ಭಾವನೆಗಳನ್ನು ಕೆರಳಿಸುವ ಕೃತ್ಯ) ಅಡಿಯಲ್ಲಿ ಭೋಪಾಲ್ ನಲ್ಲಿ ಎಫ್.ಐ.ಆರ್ ದಾಖಲಾಗಿದೆ. ಇದನ್ನೂ ಓದಿ:ತಮಿಳು ಕಿರುತೆರೆಯತ್ತ `ಪಾರು’ ಖ್ಯಾತಿಯ ಮೋಕ್ಷಿತಾ ಪೈ

    ಎಫ್.ಐ.ಆರ್ ದಾಖಲಾಗುತ್ತಿದ್ದಂತೆಯೇ ಮಧ್ಯ ಪ್ರದೇಶದ ಗೃಹ ಸಚಿವಾಲಯದ ಆದೇಶದ ಮೇರೆಗೆ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ. ಲೀನಾ ಮಣಿಮೇಕಲೈ ಕಾಳಿ ಬಗ್ಗೆ ಸಾಕ್ಷ್ಯ ಚಿತ್ರವನ್ನು ತಯಾರಿಸಿ ಅದನ್ನು ಈಗ ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಕಳುಹಿಸಿದ್ದಾರೆ. ಹಾಗಾಗಿ ಜುಲೈ 4 ರಂದು ಕಾಳಿಯ ಕೈಯಲ್ಲಿ ಸಿಗರೇಟು ಇರುವಂತಹ ಪೋಸ್ಟರ್ ಅನ್ನು ಹಂಚಿಕೊಂಡಿದ್ದರು. ಈ ಪೋಸ್ಟರ್ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.

    Live Tv
    [brid partner=56869869 player=32851 video=960834 autoplay=true]