Tag: Lottery Ticket

  • ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಲಾಟರಿ ಮಾರಾಟ ಆರಂಭಿಸಿ – 15 ವರ್ಷಗಳ ಬಳಿಕ ರಾಜ್ಯದಲ್ಲಿ ಮತ್ತೆ ಲಾಟರಿ?

    ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಲಾಟರಿ ಮಾರಾಟ ಆರಂಭಿಸಿ – 15 ವರ್ಷಗಳ ಬಳಿಕ ರಾಜ್ಯದಲ್ಲಿ ಮತ್ತೆ ಲಾಟರಿ?

    ಬೆಂಗಳೂರು: 15 ವರ್ಷಗಳ ಬಳಿಕ ಕರ್ನಾಟಕದಲ್ಲಿ (Karnataka) ಲಾಟರಿ (Lottery) ಮಾರಾಟವನ್ನು ಸರ್ಕಾರ ಅಧಿಕೃತಗೊಳಿಸುತ್ತಾ? ಈ ಬಗ್ಗೆ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಖುದ್ದು ರಾಜ್ಯಪಾಲರ ಕಛೇರಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ.

    ಲಾಟರಿ ಮಾರಾಟ ಬ್ಯುಸಿನೆಸ್, ನೆರೆಯ ಕೇರಳ (Kerala) ರಾಜ್ಯದಲ್ಲಿ ಎಷ್ಟು ಫೇಮಸ್ ಆಗಿದ್ದು, ನಮ್ಮ ರಾಜ್ಯದಲ್ಲಿಯೂ ಇದು ಚಾಲ್ತಿಯಲ್ಲಿತ್ತು. ಲಾಟರಿ ಮಾರಾಟದಿಂದ ಸಾವಿರಾರು ಕುಟುಂಬಗಳು ಬೀದಿಗೆ ಬಿದ್ವು ಅಂತ 2007ರಲ್ಲಿ ರಾಜ್ಯ ಸರ್ಕಾರ ಲಾಟರಿ ಮಾರಾಟವನ್ನು ನಿಷೇಧಿಸಿತು. ಆದ್ರೆ ಇದೀಗಾ ಮತ್ತೆ ಲಾಟರಿ ಮಾರಾಟವನ್ನು ಶುರು ಮಾಡಬೇಕು ಎಂದು ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ. ಈ ಬಗ್ಗೆ ಸಿಎಂ ಹಾಗೂ ರಾಜ್ಯಪಾಲರಿಗೂ ಪತ್ರ ಬರೆದಿದ್ದು, ಪುನರಾರಂಭ ಮಾಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಈ ಬಗ್ಗೆ ರಾಜ್ಯಪಾಲರ ಕಛೇರಿಯಿಂದ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೂ ಪತ್ರ ಬರೆಯಲಾಗಿದ್ದು, ಮತ್ತೆ ಲಾಟರಿ ಶುರುವಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇದನ್ನೂ ಓದಿ: ನನ್ನನ್ನ `ಟಗರು’ ಅಂತಾರೆ, ನಾನು ಯಾರಿಗೆ ಗುಮ್ಮಿದ್ದೇನೆ – ಸಿದ್ದು ಪ್ರಶ್ನೆ

    ರಾಜ್ಯದಲ್ಲಿ 2007ಕ್ಕಿಂತ ಮುಂಚೆ, ಸರ್ಕಾರವೇ 7 ಲಾಟರಿಗಳನ್ನು ನಡೆಸ್ತಿತ್ತು. ವಾರ್ಷಿಕ ನೂರು ಕೋಟಿ ಆದಾಯ ಸರ್ಕಾರಕ್ಕೆ ಬರ್ತಿತ್ತು. ಈ ಮೂಲಕ ಲಾಟರಿ ಮಾರಾಟ ಮಾಡುವ ಏಜೆಂಟ್‍ಗಳು ಕೂಡ ಬದುಕು ಸಾಗಿಸ್ತಿದ್ರು. ಆದ್ರೆ ರಾಜ್ಯ ಸರ್ಕಾರ ನಿಷೇಧ ಮಾಡಿದ ಬಳಿಕ, ಕೆಲವರು 2014ರಲ್ಲಿ ಸುಪ್ರೀಂಕೋರ್ಟ್‍ನಲ್ಲಿ ಮೊಕದ್ದಮೆ ಹೂಡ್ತಾರೆ. ಸುಪ್ರೀಂಕೋರ್ಟ್ ಕೂಡ ಇದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿವೇಚನೆ ಅಂತ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಮತ್ತೆ ಲಾಟರಿ ಮಾರಾಟವನ್ನು ಪುನರಾರಂಭಿಸಬೇಕೆಂದು ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ ಒತ್ತಾಯಿಸಿದೆ. ಇದನ್ನೂ ಓದಿ: ಕಾಸಿಲ್ಲದೆ ಏನೂ ನಡೆಯಲ್ಲ ಅನ್ನೋದು ವಿಧಾನಸೌಧದ ಪ್ರತಿ ಗೋಡೆಗೂ ಗೊತ್ತು: ಡಿಕೆಶಿ

    ಲಾಟರಿ ಮಾರಾಟ ಮರು ಅನುಷ್ಠಾನ ಹಾಗೂ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಹಾಗೂ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ನಿರ್ದೇಶನಾಲಯಕ್ಕೂ ರಾಜ್ಯಪಾಲರ ಕಛೇರಿಯಿಂದ ಪತ್ರ ಬರೆಯಲಾಗಿದ್ದು, ಸರ್ಕಾರದ ಅಂಗ ಸಂಸ್ಥೆ MSIL ಮೂಲಕ ಲಾಟರಿಯನ್ನು ಸರ್ಕಾರ ನಡೆಸುತಿತ್ತು. ರಾಜ್ಯದಲ್ಲಿ ಸಾಂಪ್ರದಾಯಿಕ ಲಾಟರಿ ವ್ಯವಸ್ಥೆ ಪುನರಾರಂಭಕ್ಕೆ ಸರ್ಕಾರ ಮುಂದಾಗಬೇಕು, ಲಾಟರಿ ಮಂತ್ರಿಯನ್ನು ನೇಮಕ ಮಾಡಬೇಕು. ರಾಜ್ಯದ ಸಂಪನ್ಮೂಲ ಹೆಚ್ಚಳದ ಜೊತೆಗೆ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಲಾಟರಿ ಮಾರಾಟ ವ್ಯವಸ್ಥೆಯನ್ನು ಶುರುಮಾಡಬೇಕೆಂದು ಸಂಘಟನೆಯಿಂದ ತೀವ್ರ ಒತ್ತಡವಿದೆ. ಆದ್ರೆ ಇದು ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಆಗಿರೋದ್ರಿಂದ ಸರ್ಕಾರ ಏನು ನಿಲುವು ತೆಗೆದುಕೊಳ್ಳುತ್ತೆ ಎಂಬುದನ್ನು ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೇರಳ ರಾಜ್ಯದ ಲಾಟರಿ ಮಾರಾಟ – ಬಡವರು, ಕೂಲಿ ಕಾರ್ಮಿಕರೇ ಟಾರ್ಗೆಟ್!

    ಕೇರಳ ರಾಜ್ಯದ ಲಾಟರಿ ಮಾರಾಟ – ಬಡವರು, ಕೂಲಿ ಕಾರ್ಮಿಕರೇ ಟಾರ್ಗೆಟ್!

    ಚಾಮರಾಜನಗರ: ರಾಜ್ಯದಲ್ಲಿ ಬಡವರ ಬದುಕಿಗೆ ಕೊಳ್ಳಿ ಇಟ್ಟಿದ್ದ ಲಾಟರಿ ನಿಷೇಧಿಸಿ 15 ವರ್ಷಗಳೇ ಕಳೆದಿವೆ. ಆದರೆ ಗಡಿಜಿಲ್ಲೆ ಚಾಮರಾಜನಗರದಲ್ಲಿ ಕೇರಳ ರಾಜ್ಯದ ಲಾಟರಿ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಹೊರರಾಜ್ಯದ ಲಾಟರಿ ಆಮಿಷಕ್ಕೆ ಬಲಿ ಬೀಳುತ್ತಿರುವ ಬಡವರು, ಕೂಲಿ ಕಾರ್ಮಿಕರ ಬದುಕು ಮೂರಾಬಟ್ಟೆಯಾಗುತ್ತಿದೆ.

    ಬಡಬಗ್ಗರು, ಕೂಲಿ ಕಾರ್ಮಿಕರು ಬೆವರು ಸುರಿಸಿ ದುಡಿದ ಹಣವನ್ನೆಲ್ಲಾ ಲಾಟರಿಗೆ ಸುರಿದು ಜೀವನ ಹಾಳು ಮಾಡಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ 2007ರಲ್ಲಿ ಅಂದಿನ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡು ರಾಜ್ಯದಲ್ಲಿ ಲಾಟರಿ ನಿಷೇಧಿಸಿತ್ತು. ರಾಜ್ಯದಲ್ಲಿ ಲಾಟರಿ ನಿಷೇಧವಷ್ಟೇ ಅಲ್ಲ ಹೊರರಾಜ್ಯಗಳ ಮಾರಾಟವನ್ನು ನಿರ್ಬಂಧಿಸಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಗಡಿಜಿಲ್ಲೆ ಚಾಮರಾಜನಗರದಲ್ಲಿ ಹೊರ ರಾಜ್ಯಗಳ ಲಾಟರಿ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಇದನ್ನೂ ಓದಿ: ಹಂಪಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಿಂತನೆ: ವಚನಾನಂದ ಮಹಾಸ್ವಾಮೀಜಿ 

    ಬಸ್‍ಗಳಲ್ಲಿ ಕೇರಳಕ್ಕೆ ಹೋಗುವ ದಂಧೆಕೋರರು ಅಲ್ಲಿನ ಲಾಟರಿಗಳನ್ನು ತಂದು ಕಾಡಂಚಿನ ಗ್ರಾಮಗಳಲ್ಲಿ ಮಾರಾಟ ಮಾಡುತ್ತಿದ್ದಾರೆ. ಲಾಟರಿ ಆಸೆಗೆ ಬಲಿ ಬಿದ್ದು ಬಡಜನರು ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಅವರು ಈ ಕುರಿತು ಮಾತನಾಡಿದ್ದು, ಸೆನ್ ಹಾಗು ಜಿಲ್ಲೆಯ ವಿವಿಧ ಠಾಣೆಗಳ ಪೆÇಲೀಸರು ಇತ್ತೀಚಿನ ದಿನಗಳಲ್ಲಿ ಹೊರರಾಜ್ಯಗಳ ಲಾಟರಿ ದಂಧೆ ಪತ್ತೆ ಹಚ್ಚಿ 12 ಪ್ರಕರಣ ದಾಖಲಿಸಿಕೊಂಡು ಹಲವರನ್ನು ಬಂಧಿಸಲಾಗಿದೆ. ಇದರ ಜೊತೆಗೆ ಲಕ್ಷಾಂತರ ರೂ. ಮೌಲ್ಯದ ಲಾಟರಿ ಟಿಕೆಟ್ ವಶಪಡಿಸಿಕೊಳ್ಳಲಾಗಿದೆ. ಮಲೆಮಹದೇಶ್ವರಬೆಟ್ಟ, ಕೊಳ್ಳೇಗಾಲ ಗುಂಡ್ಲುಪೇಟೆ ಸೇರಿದಂತೆ ಗಡಿಯಂಚಿನ ಗ್ರಾಮಗಳಲ್ಲಿ ಕೇರಳ ರಾಜ್ಯದ ಲಾಟರಿಗಳನ್ನು ಕದ್ದುಮುಚ್ಚಿ ಮಾರಾಟ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಲಾಟರಿ ದಂಧೆ ವಿರುದ್ಧ ತೀವ್ರ ನಿಗಾ ವಹಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡ್ರಾಮಾ ಜ್ಯೂನಿಯರ್ ನೋಡಲು ಮನೆ ಬಿಟ್ಟು ಬೆಂಗಳೂರಿನತ್ತ ಬಂದ 4 ಮಕ್ಕಳು 

    12 ಪ್ರಕರಣ ದಾಖಲಾಗಿದ್ದರೂ ಕೇರಳ ಲಾಟರಿ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಕೇರಳದಿಂದ ನಿತ್ಯ ಚಾಮರಾಜನಗರ ಜಿಲ್ಲೆಗೆ ಬರುವವರ ಮೇಲೆ ನಿಗಾ ವಹಿಸಬೇಕು. ಲಾಟರಿ ದಂಧೆಯಲ್ಲಿ ತೊಡಗಿರುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಂಡು ಬಂಧಿಸಬೇಕು. ಆ ಮೂಲಕ ಗಡಿಯಂಚಿನ ಜನರ ಬದುಕಿಗೆ ಮಾರಕವಾಗಿರುವ ಹೊರರಾಜ್ಯಗಳ ಲಾಟರಿ ದಂಧೆಗೆ ಕಡಿವಾಣ ಹಾಕಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

  • ಮಾಲು ಸಮೇತ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದ!

    ಮಾಲು ಸಮೇತ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದ!

    ಮಡಿಕೇರಿ: ಅಕ್ರಮವಾಗಿ ಮಾರಾಟ ಮಾಡಲು ಲಾಟರಿಯನ್ನು ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಪೊಲೀಸರು ಬಂಧಿಸಿದ್ದಾರೆ.

    ಸೈನಾಫ್ (34) ಬಂಧಿತ ವ್ಯಕ್ತಿ. ಈತನನ್ನು ವಿಶೇಷ ಅಪರಾಧ ಪತ್ತೆದಳದ ಸಿಬ್ಬಂದಿ ಮಾಲು ಸಮೇತ ಬಂಧಿಸಿದ್ದಾರೆ. ಈತ ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆಯ ಮೆಟ್ನಹಳ್ಳ ನಿವಾಸಿ ಮೊಹಮ್ಮದ್ ಎಂಬವರ ಮಗ ಎಂದು ತಿಳಿದುಬಂದಿದೆ.

    ಬಂಧಿತ ಸೈನಾಫ್ ಕೇರಳದ ಇರಿಟಿಯಿಂದ ಕಾರಿನಲ್ಲಿ ರೂ.76,000 ಮೌಲ್ಯದ 2,300 ಲಾಟರಿ ಟಿಕೆಟ್ ಗಳನ್ನು ಮಾರಾಟ ಮಾಡಲು ಏಳನೇ ಹೊಸಕೋಟೆಯತ್ತ ತರುತ್ತಿದ್ದನು. ಈ ಸಂದರ್ಭ ಜಿಲ್ಲಾ ಎಸ್‍ಪಿ ಸುಮನ್ ಡಿ ಪೆನ್ನಕರ್, ಸೋಮವಾರಪೇಟೆ ಡಿವೈಎಸ್‍ಪಿ ದಿನಕರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಕುಶಾಲನಗರ ಸಿಪಿಐ ದಿನೇಶ್ ಕುಮಾರ್, ಸುಂಟಿಕೊಪ್ಪ ಪಿಎಸ್‍ಐ ಜಯರಾಮ್ ಅವರು ಕಾರ್ಯಾಚರಣೆ ನಡೆಸಿ ಮಾಲು ಸಮೇತ ಸೈನಾಫ್ ಅನ್ನು ಬಂಧಿಸಿದ್ದಾರೆ.

    ಕಳೆದ ಕೆಲವು ದಿನಗಳಿಂದ ಮತ್ತೆ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಕೇರಳದ ರಾಜ್ಯದ ಲಾಟರಿಗಳ ಮಾರಾಟ ಹೆಚ್ಚಾಗಿದ್ದು, ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.

  • ಭಾರತೀಯನಿಗೆ ಒಲಿಯಿತು 6.5 ಕೋಟಿ ಬಂಪರ್ ಲಾಟರಿ!

    ಭಾರತೀಯನಿಗೆ ಒಲಿಯಿತು 6.5 ಕೋಟಿ ಬಂಪರ್ ಲಾಟರಿ!

    ದುಬೈ: ಭಾರತೀಯ ಮೂಲದ 25 ವರ್ಷದ ಯುವಕನಿಗೆ ಒಂದು ಮಿಲಿಯನ್(6.5 ಕೋಟಿ ರೂ.) ಯುಎಸ್ ಡಾಲರ್ ಬಹುಮಾನ ಲಾಟರಿ ಹೊಡೆದಿದೆ.

    ದುಬೈ ಡ್ಯೂಟಿ ಫ್ರೀ (ಡಿಡಿಎಫ್) ಅವರು ನಡೆಸಿದ ಮಿಲೆನಿಯಮ್ ಮಿಲಿಯನೇರ್ ಸ್ಪರ್ಧೆಯಲ್ಲಿ ಭಾರಿ ಮೊತ್ತದ ಬಹುಮಾನ ಧಾನೀಶ್ ಕೋಥರಂಬನ್ ಅವರಿಗೆ ಸಿಕ್ಕಿದೆ.

    ಧಾನೀಶ್ ಮೂಲತಃ ಕೇರಳದವರಾಗಿದ್ದು, ದುಬೈನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲವು ವಾರಗಳ ಹಿಂದೆ ಧಾನೀಶ್ ರಜೆಗೆಂದು ಕೇರಳಗೆ ಹೋಗುತ್ತಿದ್ದಾಗ ತಮ್ಮ ಮಿಲೆನಿಯಮ್ ಡಾಲರ್ ನ ಮೊದಲ ಟಿಕೆಟ್ ತೆಗೆದುಕೊಂಡಿದ್ದರು.


    ಈ ಕುರಿತು ಧಾನೀಶ್ ಅವರು ಕೇರಳದಲ್ಲಿ ಮಾತನಾಡಿ, ಡಿಡಿಎಫ್ ಪ್ರತಿನಿಧಿಗಳಿಂದ ಮಿಲಿಯನ್ ಡಾಲರ್ ನಲ್ಲಿ ಗೆದ್ದಿರುವುದಾಗಿ ಕರೆ ಬಂದಾಗ ನನಗೆ ತಕ್ಷಣ ಆಶ್ಚರ್ಯವಾಯಿತು. ನಿಜವಾಗಿ ನಾನು ಗೆದ್ದಿರುವುದನ್ನು ನನಗೆ ನಂಬಲು ಸಾಧ್ಯವಾಗಲಿಲ್ಲ. ಚಿಕ್ಕ ವಯಸ್ಸಿನಲ್ಲಿಯೇ ನಾನು ಈ ದೊಡ್ಡ ಗೆಲುವು ಸಾಧಿಸಬಹುದೆಂದು ನಾನು ಭಾವಿಸಿರಲಿಲ್ಲ! ಈ ಅದ್ಭುತ ಕೊಡುಗೆಗಾಗಿ ದೇವರಿಗೆ ಮತ್ತು ದುಬೈ ಡ್ಯೂಟಿ ಫ್ರೀ ಧನ್ಯವಾದಗಳು” ಎಂದು ತಮ್ಮ ಖುಷಿಯನ್ನ ಹೇಳಿಕೊಂಡಿದ್ದಾರೆ.

    ಈ ಹಿಂದೆ ಜನವರಿಯಲ್ಲಿ ಅಬುದಾಬಿಯಲ್ಲಿ ಯು.ಎ.ಇ.ನಲ್ಲಿ ಭಾರತೀಯ ಮೂಲದ ವ್ಯಕ್ತಿಗಳಿಗೆ ಭಾರೀ ಮೊತ್ತದ ಬಹುಮಾನ ಬಂದಿತ್ತು. ಕಳೆದ ವರ್ಷ ಅಕ್ಟೋಬರ್ ನಲ್ಲಿ ನಡೆದ ಮೆಗಾ ರಾಫೆಲ್ ಡ್ರಾನಲ್ಲಿ ಪ್ರತಿವರ್ಷ 1 ಮಿಲಿಯನ್ ಡಾಲರ್ (ಯುಎಸ್‍ಡಿ 2.7 ಲಕ್ಷ) ಗೆದ್ದುಕೊಂಡ 10 ಜನರ ಪೈಕಿ ಎಂಟು ಭಾರತೀಯರು ಸೇರಿದ್ದರು. ಈಗ ಧಾನೀಶ್ ಕೋಥರಂಬನ್ ಸುಮಾರು 6.5 ಕೋಟಿ ರೂ. ಬಹುಮಾನವನ್ನು ಗೆದ್ದಿದ್ದಾರೆ.

    ಮಿಲೆನಿಯಮ್ ಮಿಲಿಯನೇರ್ ಎರಡನೇ ವಿಜೇತ ಯಾಝನ್ ಕ್ಯೂರ್ಔಟ್ ಆಗಿದ್ದು, ಇದು ತಮ್ಮ ಮದುವೆ ಆದ ನಂತರ ಎರಡನೇ ಖುಷಿ ಸಮಯ ಎಂದು ಹೇಳಿಕೊಂಡಿದ್ದಾರೆ.