Tag: Loudspeaker

  • ಕಿವಿ ಗಡಚಿಕ್ಕುವಂತೆ ಲೌಡ್‌ ಸ್ಪೀಕರ್‌ ಬಳಸಿದ್ದಕ್ಕೆ ಮಸೀದಿಗೆ ಬಿತ್ತು 2 ಲಕ್ಷ ದಂಡ

    ಕಿವಿ ಗಡಚಿಕ್ಕುವಂತೆ ಲೌಡ್‌ ಸ್ಪೀಕರ್‌ ಬಳಸಿದ್ದಕ್ಕೆ ಮಸೀದಿಗೆ ಬಿತ್ತು 2 ಲಕ್ಷ ದಂಡ

    ಲಕ್ನೋ: ಕಿವಿ ಗಡಚಿಕ್ಕುವ ಧ್ವನಿವರ್ಧಕ ಬಳಸಿದ್ದಕ್ಕೆ ಸಂಭಲ್‌ ಈದ್ಗಾ ಮಸೀದಿ ಇಮಾಂಗೆ (Sambhal Mosque Imam) 2 ಲಕ್ಷ ರೂ. ದಂಡ ವಿಧಿಸಲಾಗಿದೆ.

    ಈಚೆಗೆ, ಸಂಭಲ್‌ನಲ್ಲಿ ಮೊಘಲರ ಕಾಲದ ಮಸೀದಿಯ ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ನಾಲ್ವರು ಬಲಿಯಾಗಿದ್ದರು. ಇದರ ಬೆನ್ನಲ್ಲೇ ಇಲ್ಲಿನ ಇನ್ನೊಂದು ಮಸೀದಿ ಸುದ್ದಿಯಲ್ಲಿದೆ. ಕೋಟ್ ಗರ್ವಿ ಪ್ರದೇಶದ ಅನಾರ್ ವಾಲಿ ಮಸೀದಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ- ಜಾಣ್ಮೆಯ ಹೆಜ್ಜೆಯಿಟ್ಟ ಕೇಂದ್ರ

    ಮಸೀದಿಯಲ್ಲಿ ಹೆಚ್ಚಿನ ಧ್ವನಿಯಲ್ಲಿ ಧ್ವನಿವರ್ಧಕವನ್ನು ಬಳಸಲಾಗುತ್ತಿತ್ತು. ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ಪ್ರೇರೇಪಿಸಿತು. 2 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಸಂಭಾಲ್ ಸಬ್- ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ವಂದನಾ ಮಿಶ್ರಾ ತಿಳಿಸಿದ್ದಾರೆ.

    ಕೋಟ್ ಗರ್ವಿ ಪ್ರದೇಶದಲ್ಲಿ ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ಹಿಂಸಾಚಾರ ನಡೆದಿತ್ತು. ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿಗಳ ನಡುವಿನ ಘರ್ಷಣೆಯ ಏರ್ಪಟ್ಟಿತ್ತು. ಇದನ್ನೂ ಓದಿ: ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ, ಕೊಲೆ ಕೇಸ್ – ಆರೋಪಿಗಳಿಗೆ ಜಾಮೀನು

  • ಕಟೀಲು ದೇವಸ್ಥಾನಕ್ಕೂ ಶಬ್ದ ಮಾಲಿನ್ಯದ ಬಿಸಿ – ರಾತ್ರಿ 10ರ ನಂತರ ಯಕ್ಷಗಾನಕ್ಕೆ ಬ್ರೇಕ್

    ಕಟೀಲು ದೇವಸ್ಥಾನಕ್ಕೂ ಶಬ್ದ ಮಾಲಿನ್ಯದ ಬಿಸಿ – ರಾತ್ರಿ 10ರ ನಂತರ ಯಕ್ಷಗಾನಕ್ಕೆ ಬ್ರೇಕ್

    ಮಂಗಳೂರು: ಇತ್ತಿಚೇಗಷ್ಟೆ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ (Loudspeaker) ಬಳಕೆಗೆ ಸಂಬಂಧಿಸಿದಂತೆ ಗದ್ದಲ ಉಂಟಾಗಿ, ಸರ್ಕಾರ (Government) ಧ್ವನಿವರ್ಧಕ ಬಳಕೆಗೆ ಮಾರ್ಗಸೂಚಿ ಹೊರಡಿಸಿತ್ತು. ಇದೀಗ ಈ ಆದೇಶವನ್ನು ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ (Yakshagana) ಮೇಳಗಳಿಗೂ ಅನ್ವಯಿಸಲು ಹೊರಟಿರುವುದು ವಿವಾದಕ್ಕೆ ಕಾರಣವಾಗಿದೆ.

    ರಾತ್ರಿಯಿಂದ ಬೆಳಗ್ಗಿನವರೆಗೆ ನಡೆಯುತ್ತಿದ್ದ ಯಕ್ಷಗಾನ (Yakshagana) ದೇವರ ಸೇವೆಯನ್ನು ರಾತ್ರಿ 10ರ ಒಳಗೆ ಮುಗಿಸಬೇಕೆನ್ನುವ ಆಡಳಿತ ಮಂಡಳಿಯ ನಿರ್ಧಾರಕ್ಕೆ ದೇವಿ ಭಕ್ತರಿಂದ ವಿರೋಧ ವ್ಯಕ್ತವಾಗಿದೆ. ಇದನ್ನೂ ಓದಿ: ಚಾಟಿಯಲ್ಲಿ ಬೆನ್ನಿಗೆ ಹೊಡೆದುಕೊಂಡ ರಾಹುಲ್ ಗಾಂಧಿ – ವೀಡಿಯೋ ವೈರಲ್

    ದಕ್ಷಿಣಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ (Sri Durgaaparameshwari Gudi Kateelu) 6 ಯಕ್ಷಗಾನ ಮೇಳಗಳಿಂದ ಯಕ್ಷಗಾನ ಪ್ರದರ್ಶನ ನಡೆಯುತ್ತದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಗೆ 2 ಶತಮಾನಗಳ ಇತಿಹಾಸವಿದೆ. ಕಷ್ಟ ಕಾರ್ಪಣ್ಯಗಳ ನಿವಾರಿಸಿದ ಸಲುವಾಗಿ ದೇವಿಗೆ ಹರಕೆಯಾಗಿ ಭಕ್ತರು ಈ ಯಕ್ಷಗಾನ ಪ್ರದರ್ಶನವನ್ನು ಹಮ್ಮಿಕೊಳ್ಳುತ್ತಾರೆ. ರಾತ್ರಿ ಆರಂಭವಾಗುವ ಯಕ್ಷಗಾನ ಸೇವೆ ಬೆಳಗ್ಗಿನವರೆಗೂ ನಡೆಯುತಿತ್ತು. ಆದರೆ ಅಜಾನ್ ವಿವಾದ ಶುರುವಾದ ಬಳಿಕ ಸರ್ಕಾರ ರಾತ್ರಿ 10:30ರ ನಂತರ 50 ಡೆಸಿಬಲ್‌ಗಿಂತ ಹೆಚ್ಚಿನ ಧ್ವನಿವರ್ಧಕ ಬಳಸದಂತೆ ಆದೇಶ ಹೊರಡಿಸಿತ್ತು. ಈ ಆದೇಶದನ್ವಯ ರಾತ್ರಿಯಿಡಿ ನಡೆಯುತ್ತಿದ್ದ ಯಕ್ಷಗಾನವನ್ನೂ ಸಂಜೆ 5 ಗಂಟೆಗೆ ಆರಂಭಿಸಿ ರಾತ್ರಿ 10ರ ಒಳಗೆ ಮುಗಿಸುವುದಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.

    ದೇವಿಯ ಮುಂದೆ ಕಾಲಮಿತಿ ಯಕ್ಷಗಾನ ನಡೆಸುವ ಬಗ್ಗೆ ಹೂಪ್ರಶ್ನೆ ಇಟ್ಟಾಗ ದೇವಿಯು ಈ ನಿರ್ಧಾರಕ್ಕೆ ಒಪ್ಪಿಗೆ ನೀಡಿದೆ ಎಂದು ಕ್ಷೇತ್ರದ ಪ್ರಧಾನ ಅರ್ಚಕ ಹರಿನಾರಾಯಣ ಅಸ್ರಣ್ಣ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕೋಟೆ ನಾಡಿನಲ್ಲಿ ದಾರುಣ ಘಟನೆ – ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    ಆಡಳಿತ ಮಂಡಳಿಯ ಈ ನಿರ್ಧಾರವನ್ನು ಕಟೀಲು ಯಕ್ಷಸೇವಾ (Kateelu Yakshagana) ಸಮನ್ವಯ ಸಮಿತಿ ಸೇರಿದಂತೆ ಯಕ್ಷಗಾನ ಸೇವೆ ನಡೆಸುವ ಕೆಲ ಭಕ್ತರು ಖಂಡಿಸಿದ್ದಾರೆ. ಕಟೀಲು ತಾಯಿ ರಾತ್ರಿಯ ಪೂಜೆಯ ನಂತರ ಕಟೀಲು ಮೇಳದ ಯಕ್ಷಗಾನ ವೀಕ್ಷಿಸಲು ತೆರಳುತ್ತಾಳೆ ಎಂಬುದು ಸಾರ್ವತ್ರಿಕ ನಂಬಿಕೆ. ಹೀಗಾಗಿ ಕಾಲಮಿತಿ ಯಕ್ಷಗಾನ ನಿರ್ಧಾರದಿಂದ ಮೂಲ ಆಶಯ ಸೊರಗಿ ಜನರ ಧಾರ್ಮಿಕ ನಂಬಿಕೆಗೆ ಘಾಸಿಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ನಿರ್ಧಾರವನ್ನು ಖಂಡಿಸಿ ಇದೇ 6 ತಾರೀಖಿನಂದು ನಗರ ಹೊರವಲಯದ ಬಜಪೆಯಿಂದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ದೇವಿಯ ಮುಂದೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಈ ನಿರ್ಧಾರವನ್ನು ವಾಪಸ್ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಸೀದಿಗಳ ಧ್ವನಿವರ್ಧಕಕ್ಕೆ ಸರ್ಕಾರ ಅನುಮತಿ ಕೊಟ್ಟಿದ್ದು ಸರಿಯಲ್ಲ – ಮುತಾಲಿಕ್ ಕಿಡಿ

    ಮಸೀದಿಗಳ ಧ್ವನಿವರ್ಧಕಕ್ಕೆ ಸರ್ಕಾರ ಅನುಮತಿ ಕೊಟ್ಟಿದ್ದು ಸರಿಯಲ್ಲ – ಮುತಾಲಿಕ್ ಕಿಡಿ

    ಧಾರವಾಡ: ಪ್ರಾರ್ಥನಾ ಮಂದಿರಗಳ ಲೌಡ್ ಸ್ಪೀಕರ್‌ಗೆ (Loudspeaker) ಸರ್ಕಾರ ಅನುಮತಿ‌ ನೀಡಿದ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್ (Pramod Muthalik) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ‌.

    ಈ ಬಗ್ಗೆ ಮಾತನಾಡಿದ ಅವರು, ಸರ್ಕಾರ ಈ ಕೂಡಲೇ ಅನುಮತಿ ವಾಪಸ್ ಪಡೆಯಬೇಕು. 15 ವರ್ಷಗಳ ಹಿಂದೆಯೇ ಧ್ವನಿವರ್ಧಕದ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಹೇಳಿತ್ತು. ಹೋರಾಟ ಮಾಡಿ ಹೇಳಿದರೂ ಕ್ರಮ ಆಗಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಿಂದೂಗಳು ಒಟ್ಟಾಗಿರಬೇಕೆಂಬುದು ಸಾವರ್ಕರ್ ಕನಸಾಗಿತ್ತು – ಮೊಮ್ಮಗ ಸಾತ್ಯಕಿ ಸಾವರ್ಕರ್

    mosque-loudspeakers
    ಸಾಂದರ್ಭಿಕ ಚಿತ್ರ

    ಧ್ವನಿವರ್ಧಕಗಳ ತೊಂದರೆ, ಕಿರಿಕಿರಿ ನಿಂತಿಲ್ಲ. ಈಗ ಯಾವ ಅನುಮತಿ? ಹೇಗೆ ಕೊಟ್ಟಿದ್ದೀರಿ? ಮೈಕ್ ಅವಶ್ಯಕತೆ ಇಲ್ಲವೇ ಇಲ್ಲ. ಕಾನೂನು ಉಲ್ಲಂಘಿಸಿ ಮಸೀದಿಗಳಲ್ಲಿ ಮೈಕ್ ಬಳಕೆ ಆಗುತ್ತಿದೆ. ಮಂದಿರದ ಶಬ್ದದಿಂದ ಯಾರಿಗೂ ತೊಂದರೆ ಇಲ್ಲ. ನಿತ್ಯ ಐದು ಬಾರಿ ಮಂದಿರಗಳಲ್ಲಿ ಪೂಜೆ ಇರುವುದಿಲ್ಲ. ತ್ರಿಕಾಲ ಪೂಜೆ ಇದ್ದರೂ ಮೈಕ್ ಇರುವುದಿಲ್ಲ. ಬೆಳಗ್ಗೆ 6ರ ನಂತರ ಸುಪ್ರಭಾತಕ್ಕೆ ಮಾತ್ರ ಧ್ವನಿವರ್ಧಕ ಇರುತ್ತೆ ಎಂದು ತಿಳಿಸಿದ್ದಾರೆ.

    ಮಸೀದಿಗಳಲ್ಲಿ (Mosque) ಬೆಳಗ್ಗೆ 5ಕ್ಕೆ ಪ್ರಾರ್ಥನೆ ಪ್ರಾರಂಭ ಆಗುತ್ತದೆ. ಇದರಿಂದ ಆಸ್ಪತ್ರೆ, ಶಿಕ್ಷಣಕ್ಕೆ ತೊಂದರೆ ಆಗಿತ್ತು. ಆಗ ಜನ ಕೋರ್ಟ್‌ಗೆ ಹೋಗಿದ್ದರು. ಈಗ ಅನುಮತಿ ನೀಡಲಾಗಿದೆ ಅಂತಾ ಸರ್ಕಾರ ಹೇಳಿದೆ. ಒಂದೊಂದು ಮಸೀದಿಗೂ 4 ಧ್ವನಿವರ್ಧಕ ಇರುತ್ತವೆ. ಅವುಗಳಿಗೆಲ್ಲ ಅನುಮತಿ ಇರುತ್ತಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮೌನವೇಕೆ? – BJPಯಿಂದ ಸೇ-ಸಿದ್ದು ಪೋಸ್ಟರ್ ರಿಲೀಸ್

    ಈ ಅನುಮತಿ ವಾಪಸ್‌ ಪಡೆಯಬೇಕು, ಇಲ್ಲವೇ ಉಳಿದೆಲ್ಲ ಸ್ಪೀಕರ್ ತೆಗೆಯಿಸಿ ಒಂದೇ ಇಡಬೇಕು. ಇದಕ್ಕಾಗಿ ವಿಶೇಷ ಪೊಲೀಸ ಪಡೆ ರಚಿಸಬೇಕು. ಇಲ್ಲದೇ ಹೋದಲ್ಲಿ ಇದೊಂದು ಕಣ್ಣೊರೆಸುವ ತಂತ್ರ ಆಗುತ್ತೆ. ಈ ನಾಟಕ ಸರ್ಕಾರ ನಿಲ್ಲಿಸಬೇಕು. ಕಠಿಣ ಕ್ರಮ‌ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯಾದ್ಯಂತ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿದ ಸರ್ಕಾರ

    ರಾಜ್ಯಾದ್ಯಂತ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿದ ಸರ್ಕಾರ

    ಬೆಂಗಳೂರು: ಕರ್ನಾಟಕದಲ್ಲಿ (Karnataka) ಆಜಾನ್ (Azaan) ದಂಗಾಲ್ ಹಿನ್ನೆಲೆ ಪರವಾನಗಿ ಇಲ್ಲದೇ ಲೌಡ್ ಸ್ಪೀಕರ್ (Loudspeaker) ಬಳಸುವಂತಿಲ್ಲ ಎಂದು ಸರ್ಕಾರ ನಿರ್ಬಂಧ ಹೇರಿತ್ತು. ಆ ಬಳಿಕ ಇದೀಗ ಪರವಾನಿಗೆ ನೀಡಿ ಒಟ್ಟು 10,889 ಮಸೀದಿಗಳಿಗೆ (Mosques)  ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿದೆ.

    loudspeakers

    ಆಜಾನ್ ವಿರುದ್ಧ ವಿರೋಧ ಕೇಳಿ ಬಂದ ಬಳಿಕ ರಾಜ್ಯ ಸರ್ಕಾರ ಲೌಡ್ ಸ್ಪೀಕರ್‌ಗೆ ಬ್ರೇಕ್ ಹಾಕಲು ಮುಂದಾಗಿತ್ತು. ಪರವಾನಗಿ ಇಲ್ಲದೇ ಲೌಡ್ ಸ್ಪೀಕರ್ ಬಳಸುವಂತಿಲ್ಲ ಎಂದು ನಿರ್ಬಂಧ ಹೇರಲಾಗಿತ್ತು. ಆ ಬಳಿಕ ಪರವಾನಿಗೆ ನೀಡಲು ಮಸೀದಿ, ದೇವಾಲಯ (Temples), ಚರ್ಚ್‍ಗಳಿಗೆ (Churche) ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ನೀಡಿತ್ತು. ಪರವಾನಗಿ ನೀಡುವ ಅಧಿಕಾರವನ್ನು ಸರ್ಕಾರ ರಾಜ್ಯ ಪೊಲೀಸರಿಗೆ ನೀಡಿತ್ತು. ಈ ಹಿನ್ನೆಲೆ ಮಂದಿರ, ಮಸೀದಿ, ಚರ್ಚ್‍ಗಳಿಂದ 17 ಸಾವಿರಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ರಾಜ್ಯಾದ್ಯಂತ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿ ಕರ್ನಾಟಕ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಈ ಬಾರಿ ಸಂಪುಟ ವಿಸ್ತರಣೆಯೋ, ಪುನರ್‌ ರಚನೆಯೋ ಕಾದು ನೋಡಿ: ಬೊಮ್ಮಾಯಿ

    loud speaker

    17 ಸಾವಿರದ 850 ಅರ್ಜಿಗಳ ಪೈಕಿ 10 ಸಾವಿರ ಅರ್ಜಿಗಳಿಗೆ ಸರ್ಕಾರ ಎರಡು ವರ್ಷಗಳ ಅವಧಿಗೆ ಅನುಮತಿ ನೀಡಿ ಆದೇಶ ಮಾಡಿದೆ. 450 ರೂಪಾಯಿ ಶುಲ್ಕ ಪಡೆದು ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ಪಡೆಯಲಾಗಿತ್ತು. ಈ ಪೈಕಿ ಬೆಂಗಳೂರಿನಲ್ಲಿ (Bengaluru) 1,841 ಮಸೀದಿಗಳಿಗೆ ಅನುಮತಿ ನೀಡಲಾಗಿದೆ. ರಾಜ್ಯಾದ್ಯಂತ ಮೂರು ಸಾವಿರಕ್ಕೂ ಹೆಚ್ಚು ಹಿಂದೂ ದೇವಾಲಯ, 1,400ಕ್ಕೂ ಹೆಚ್ಚು ಚರ್ಚ್‍ಗಳಿಗೆ ಸರ್ಕಾರ ಅನುಮತಿ ನೀಡಿದೆ. ಇದನ್ನೂ ಓದಿ: ಜನಪ್ರತಿನಿಧಿಗಳೇ ಬದುಕಿದ್ದೀರಾ? ಅಧಿಕಾರಿಗಳೇ ಇತ್ತ ಗಮನಿಸಿ – ಫ್ಲೆಕ್ಸ್‌ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ

     17 ಸಾವಿರದ 850 ಅರ್ಜಿಗಳನ್ನು ಪರಿಶೀಲಿಸಿ ಸದ್ಯ 10 ಸಾವಿರ ಅರ್ಜಿದಾರರಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿರುವ ರಾಜ್ಯ ಸರ್ಕಾರ ಕೆಲ ನಿಯಮಾವಳಿಗಳನ್ನು ಜಾರಿಗೆ ತಂದಿದೆ.

    ನಿಯಮಾವಳಿಗಳು:
    ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಲೌಡ್ ಸ್ಪೀಕರ್ ಬಳಸಬೇಕು. ನಿಯಮಿತ ಡೆಸಿಬಲ್ ಮಾತ್ರ ಬಳಸಬೇಕು. ಡೆಸಿಬಲ್ ನಿಯಂತ್ರಿಸೋ ಉಪಕರಣ ಅಳವಡಿಕೆ ಕಡ್ಡಾಯ. ರೆಸಿಡೆನ್ಸಿಯಲ್, ಕಮರ್ಷಿಯಲ್, ಕೈಗಾರಿಕಾ ಪ್ರದೇಶಗಳ ಅನುಗುಣವಾಗಿ ಡೆಸಿಬಲ್ ಅಳವಡಿಕೆ, ಮಸೀದಿ – ಮಂದಿರದ ಆವರಣದ ಒಳಗೆ ಲೌಡ್ ಸ್ಪೀಕರ್‌ಗಳು ಇರಬೇಕು. ಪೊಲೀಸರು ಸೂಚಿಸಿರುವಷ್ಟು ಮಾತ್ರ ಲೌಡ್ ಸ್ಪೀಕರ್ ಬಳಸಬೇಕು.

    Live Tv
    [brid partner=56869869 player=32851 video=960834 autoplay=true]

  • ಕ್ಲಬ್‌ಹೌಸ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ- ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ಧ FIR

    ಕ್ಲಬ್‌ಹೌಸ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ- ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ಧ FIR

    ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದಂದು ಕ್ಲಬ್ ಹೌಸ್‌ನಲ್ಲಿ ಕಿಡಿಗೇಡಿಗಳ ಗುಂಪೊಂದು ಪಾಕ್ ಧ್ವಜ ಹಾಕಿ ಉದ್ಧಟತನ ಪ್ರದರ್ಶಿಸಿದೆ.

    ಪಾಕಿಸ್ತಾನ ಜಿಂದಾಬಾದ್, ಭಾರತಕ್ಕೆ ನಿಂದನೆ ಮಾಡುವ ಕಾಮೆಂಟ್‌ಗಳನ್ನ ಕನ್ನಡದಲ್ಲಿ ಹಾಕಿ ವಿಕೃತಿ ಮೆರೆದಿದ್ರು. ಪಾಕಿಸ್ತಾನದ ರಾಷ್ಟ್ರಗೀತೆ ಸಹ ಅಪ್ಲೋಡ್ ಮಾಡಿದ್ರು, ನಮ್ಮನ್ನ ಏನೂ ಮಾಡೋಕೆ ಆಗಲ್ಲ ಅಂತ ಜಂಬ ಮೆರೆದಿದ್ದಾರೆ. ಇದೀಗ ಕಿಡಿಗೇಡಿಗಳ ವಿರುದ್ಧ ಐಪಿಸಿ 353A ಅಡಿ ಸಂಪಿಗೆಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸದ್ಯ ಕಿಡಿಗೇಡಿಗಳ ಎಸ್ಕೇಪ್ ಆಗಿದ್ದು ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಜನರನ್ನು ದಾರಿ ತಪ್ಪಿಸಬೇಡಿ: ಬಾಬಾ ರಾಮದೇವ್‌ ವಿರುದ್ಧ ದೆಹಲಿ ಹೈಕೋರ್ಟ್‌ ಕಿಡಿ

    ಆಜಾನ್ ಸಮರಕ್ಕೆ ಕರೆ: ರಾಜ್ಯದಲ್ಲಿ ಮತ್ತೆ ಮೈಕ್ ದಂಗಲ್ ಶುರುವಾಗಿದೆ. ಆಜಾನ್‌ಗೆ ಬಳಸೋ ಧ್ವನಿವರ್ಧಕ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಶ್ರೀರಾಮಸೇನೆ ಸಜ್ಜಾಗಿದೆ. ಆಗಸ್ಟ್ 23 ರಂದು ರಾಜ್ಯದ ಎಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡೋದಾಗಿ ಕಲಬುರಗಿಯಲ್ಲಿ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ಹೇಳಿದ್ದಾರೆ.  ಇದನ್ನೂ ಓದಿ: ರೀಲ್ಸ್ ಮಾಡಲು ಮಹಿಳೆಯ ಕತ್ತು ಸೀಳಿ ಮೊಬೈಲ್ ಕದ್ದ ಅಪ್ರಾಪ್ತ

    ರಾಜ್ಯದಲ್ಲಿ ಅನಧಿಕೃತವಾಗಿ ಆಜಾನ್‌ಗೆ ಮೈಕ್ ಗಳನ್ನು ಬಳಸಲಾಗುತ್ತಿದೆ. ಸರ್ಕಾರದ ಸುತ್ತೋಲೆಯಂತೆ ಕಡಿಮೆ ಡೆಸಿಬಲ್ ಬಳಸುತ್ತಿಲ್ಲ. ಹೀಗಾಗಿ ಆಗಸ್ಟ್ 23 ರಂದು ಬೃಹತ್ ಪ್ರತಿಭಟನೆ ನಡೆಸುತ್ತೇವೆ ಅಂತ ಸಿದ್ದಲಿಂಗ ಸ್ವಾಮಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೈಕ್ ಅನುಮತಿ ಪಡೆಯೋದ್ರಲ್ಲಿ ಹಿಂದೂ ದೇಗುಲಗಳ ನಿರಾಸಕ್ತಿ – ಮಸೀದಿ, ಚರ್ಚ್‌ಗಳೇ ಟಾಪ್

    ಮೈಕ್ ಅನುಮತಿ ಪಡೆಯೋದ್ರಲ್ಲಿ ಹಿಂದೂ ದೇಗುಲಗಳ ನಿರಾಸಕ್ತಿ – ಮಸೀದಿ, ಚರ್ಚ್‌ಗಳೇ ಟಾಪ್

    ಬೆಂಗಳೂರು: ರಾಜ್ಯದಲ್ಲಿ ಮೈಕ್ ದಂಗಲ್ ಬಳಿಕ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಸಲು ಪೊಲೀಸರ ಅನುಮತಿ ಕಡ್ಡಾಯ ಮಾಡಲಾಗಿದೆ. ಅದರಂತೆ, ಕೊಟ್ಟ ಗಡುವಿನಲ್ಲಿ ಧಾರ್ಮಿಕ ಕೇಂದ್ರಗಳು ಅನುಮತಿ ಪಡೆದಿವೆ.

    loudspeakers

    ವಿಶೇಷವೆಂದರೆ ಮೈಕ್ ಅನುಮತಿ ಪಡೆದ ಧಾರ್ಮಿಕ ಕೇಂದ್ರಗಳ ಪಟ್ಟಿಯಲ್ಲಿ ದೇಗುಲಗಳೇ ಅತಿ ಕಡಿಮೆ ಇವೆ. ಮೈಕ್ ಅನುಮತಿ ಪಡೆಯೋದ್ರದಲ್ಲಿ ದೇಗುಲಗಳು ಹಿಂದುಳಿದಿದ್ದು, ಮಸೀದಿ, ಚರ್ಚ್‌ಗಳು ಹೆಚ್ಚಿನ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಂಡಿವೆ. ಬೆಂಗಳೂರಲ್ಲಿ ಸಲ್ಲಿಕೆ ಆಗಿದ್ದ 1,530 ಅರ್ಜಿಗಳ ಪೈಕಿ 797 ಅರ್ಜಿಗಳು ಮಸೀದಿಗಳಿಂದಲೇ ಸಲ್ಲಿಕೆಯಾಗಿವೆ. ಒಟ್ಟು ಅರ್ಜಿಗಳ ಪೈಕಿ 10 ಅರ್ಜಿಗಳು ರದ್ದಾಗಿದ್ದು, 79 ಅರ್ಜಿಗಳು ಇನ್ನೂ ಪರಿಶೀಲನೆ ಹಂತದಲ್ಲಿದೆ. ಇದನ್ನೂ ಓದಿ: ಬರಗೂರು ಸಮಿತಿಯ ಪರಿಷ್ಕೃತ ಪಠ್ಯಪುಸ್ತಕದ ಗುಣಮಟ್ಟ ಸರಿಯಿಲ್ಲ: NCERT

    LOUDSPEAKER (1)

    ನಗರದಲ್ಲಿ ಒಟ್ಟು 308 ದೇಗುಲಗಳು ಅರ್ಜಿ ಸಲ್ಲಿಸಿದ್ದು, 295 ದೇಗುಲಗಳು ಅನುಮತಿ ಪಡೆದುಕೊಂಡಿದೆ. ಹಾಗೆಯೇ 797 ಮಸೀದಿಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, 762 ಮಸೀದಿಗಳು ಅನುಮತಿ ಪಡೆದಿವೆ. 358 ಚರ್ಚ್‌ಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, ಈ ಪೈಕಿ 320 ಚರ್ಚ್‌ಗಳಿಗೆ ಮೈಕ್‌ಗಳನ್ನು ಬಳಸಲು ಅನುಮತಿ ನೀಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರಾರ್ಥನಾ ಮಂದಿರಗಳಲ್ಲಿ ಮೈಕ್‌ ಸಕ್ರಮಕ್ಕೆ ನೀಡಿದ್ದ ಗಡುವು ಅಂತ್ಯ – ಇಂದಿನಿಂದ ಪೊಲೀಸ್‌ ಕಾರ್ಯಾಚರಣೆ

    ಪ್ರಾರ್ಥನಾ ಮಂದಿರಗಳಲ್ಲಿ ಮೈಕ್‌ ಸಕ್ರಮಕ್ಕೆ ನೀಡಿದ್ದ ಗಡುವು ಅಂತ್ಯ – ಇಂದಿನಿಂದ ಪೊಲೀಸ್‌ ಕಾರ್ಯಾಚರಣೆ

    ಬೆಂಗಳೂರು: ದೇವಾಲಯ, ಮಸೀದಿ ಹಾಗೂ ಚರ್ಚ್‌ಗಳಲ್ಲಿ ಮೈಕ್ ಸಕ್ರಮಕ್ಕೆ ಸರ್ಕಾರ ನೀಡಿದ್ದ ಗಡುವು ನಿನ್ನೆಗೆ ಅಂತ್ಯವಾಗಿದೆ. ಇಂದಿನಿಂದ ಅನಧಿಕೃತ ಮೈಕ್‌ಗಳ ತೆರವು ಕಾರ್ಯಾಚರಣೆಯನ್ನು ಪೊಲೀಸರು ನಡೆಸಲಿದ್ದಾರೆ.

    ಯಾರೆಲ್ಲ ಅಕ್ರಮವಾಗಿ ಇನ್ನೂ ಮೈಕ್‌ಗಳನ್ನು ಹಾಕಿದ್ದಾರೋ ಅಂತಹವರ ವಿರುದ್ಧ ಪೊಲೀಸರು ಈಗ ಸಮರ ಸಾರಲಿದ್ದಾರೆ. ಅನಧಿಕೃತ ಮೈಕ್ ಅಳವಡಿಸಿಕೊಂಡಿರುವವರ ವಿರುದ್ಧ ಪೊಲೀಸರು ಫೀಲ್ಡ್‌ಗೆ ಇಳಿಯಲಿದ್ದು, ಕಾನೂನು ಅಸ್ತ್ರ ಪ್ರಯೋಗಿಸಲಿದ್ದಾರೆ. ಇದನ್ನೂ ಓದಿ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    loud speaker

    ಮಸೀದಿ, ಮಂದಿರ ಹಾಗೂ ಚರ್ಚ್‌ಗಳಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ಕೋರಿ 900ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದ್ದವು. ಈ ಪೈಕಿ 121 ಅರ್ಜಿ ವಿಲೇವಾರಿ ಮಾಡಿ ಪೊಲೀಸರು ಅನುಮತಿ ನೀಡಿದ್ದಾರೆ. ಕೋರ್ಟ್‌ ಆದೇಶ ಹಾಗೂ ಸರ್ಕಾರದ ಸೂಚನೆಗಳ ಅನುಸಾರವಾಗಿ ಅರ್ಜಿ ವಿಲೇವಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಬಿಜೆಪಿ ಸರ್ಕಾರಕ್ಕೆ ಗಂಡಸ್ತನವಿಲ್ಲ: ಮುತಾಲಿಕ್

    ಬಿಜೆಪಿ ಸರ್ಕಾರಕ್ಕೆ ಗಂಡಸ್ತನವಿಲ್ಲ: ಮುತಾಲಿಕ್

    ಹುಬ್ಬಳ್ಳಿ: ರಾಜ್ಯದ ಮಸೀದಿಗಳ ಮೇಲೆ ಇರುವ ಅನಧಿಕೃತ ಮೈಕ್‍ಗಳ ತೆರವು ಹೋರಾಟದ ಪರಿಣಾಮವಾಗಿ ಹಿಂದೂ ಸಂಘಟನೆಗಳು ಹುಟ್ಟುಹಾಕಿರುವ ಸುಪ್ರಭಾತ ಅಭಿಯಾನ ಎರಡನೇ ರೂಪ ಪಡೆದುಕೊಂಡಿದೆ.

    ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸದ ಎದುರು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಕಾರ್ಯಕರ್ತರ ಜೊತೆಗೆ ಪ್ರತಿಭಟನೆ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, ಬಿಜೆಪಿ ಸರ್ಕಾರಕ್ಕೆ ಗಂಡಸ್ತನವಿಲ್ಲ. ಇವರ ಕೈಯಲ್ಲಿ ಆಗಲಿಲ್ಲ ಅಂದರೆ ನನಗೆ ಅಧಿಕಾರ ಕೊಟ್ಟು ನೋಡಲಿ. ಯೋಗಿ ಮಾದರಿ ಕಾನೂನು ಜಾರಿಗೆ ತಂದು ಸುಪ್ರೀಂ ಕೋರ್ಟ್ ಆದೇಶಕ್ಕೆ ಬೆಲೆ ನೀಡದವರಿಗೆ ತಕ್ಕ ಶಾಸ್ತಿ ಮಾಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    bjP

    ಬಿಜೆಪಿ ನಾಯಕರು ಹೀಗೆ ತಮ್ಮ ನಿರ್ಲಕ್ಷ್ಯ ಧೋರಣೆ ಮುಂದುವರಿಸಿದರೆ, ಮುಂದಿನ ದಿನಗಳಲ್ಲಿ ಅವರ ಮನೆಯ ಎದರು ಮೈಕ್ ಹಾಕಿ ಭಜನೆ ಅಭಿಯಾನ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ಶ್ರೀರಾಮಸೇನೆ ಸರ್ಕಾರಕ್ಕೆ ನೀಡಿದ ಗಡುವು ಮುಗಿದಿದ್ದರೂ ಸರ್ಕಾರ ಮಾತ್ರ ಇನ್ನೂ ಎಚ್ಚೆತ್ತಿಲ್ಲ ಎಂದ ಅವರು, ಜಗದೀಶ್ ಶೆಟ್ಟರ್ ಸೇರಿದಂತೆ ಬಿಜೆಪಿ ಶಾಸಕರು ಹಾಗೂ ನಾಯಕರ ವಿರುದ್ಧ ಕಿಡಿಕಾರಿದರು. ಇನ್ನೂ ಇದೇ ವೇಳೆ ಈ ಹಿಂದೆ ನೀಡಿದ್ದ ಗುಂಡು ಹಾಕಿ ಸರಿ ಮಾಡುವ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥನೆ ಮಾಡಿಕೊಂಡರು. ಇದನ್ನೂ ಓದಿ: ಮೈಕ್‌ ದಂಗಲ್‌ – ಇಂದು ಬಿಜೆಪಿ ಮುಖಂಡರ ಮನೆ ಮುಂದೆ ಶ್ರೀರಾಮ ಸೇನೆಯಿಂದ ಪ್ರತಿಭಟನೆ

    ಇಂದು ಸುಪ್ರಭಾತ ಅಭಿಯಾನದ ನಿಮಿತ್ತ ರಾಜ್ಯದ ಎಲ್ಲಾ ಬಿಜೆಪಿ ಶಾಸಕರ ಕಚೇರಿ ಎದುರು ಹೋರಾಟಕ್ಕೆ ಕರೆ ನೀಡಿದ್ದರು. ಈ ಪರಿಣಾಮ ರಾಜ್ಯದ ವಿವಿಧ ಕಡೆ ಎರಡನೇ ಹಂತದ ಹೋರಾಟ ಏಕಕಾಲದಲ್ಲಿ ಆರಂಭಗೊಂಡಿದೆ. ಇದನ್ನೂ ಓದಿ: ಮಂತ್ರಿ, ಮುಖ್ಯಮಂತ್ರಿ ಯಾವುದನ್ನೂ ತಲೆಯಲ್ಲಿ ಇಟ್ಟುಕೊಂಡು ಕೆಲಸ ಮಾಡ್ತಿಲ್ಲ: ವಿಜಯೇಂದ್ರ

  • ಮೈಕ್‌ ದಂಗಲ್‌ – ಇಂದು ಬಿಜೆಪಿ ಮುಖಂಡರ ಮನೆ ಮುಂದೆ ಶ್ರೀರಾಮ ಸೇನೆಯಿಂದ ಪ್ರತಿಭಟನೆ

    ಮೈಕ್‌ ದಂಗಲ್‌ – ಇಂದು ಬಿಜೆಪಿ ಮುಖಂಡರ ಮನೆ ಮುಂದೆ ಶ್ರೀರಾಮ ಸೇನೆಯಿಂದ ಪ್ರತಿಭಟನೆ

    ಧಾರವಾಡ: ರಾಜ್ಯದಲ್ಲಿ ಮೈಕ್ ದಂಗಲ್‍ನ 2ನೇ ಚಾಪ್ಟರ್ ಶುರು ಮಾಡಲು ಶ್ರೀರಾಮಸೇನೆ ಸಜ್ಜಾಗಿದೆ. ಸುಪ್ರೀಂಕೋರ್ಟ್ ಆದೇಶದನ್ವಯ ಮೈಕ್ ತೆರವು ವಿಳಂಬವಾಗಿರೋದ್ರಿಂದ ಇವತ್ತು ಬಿಜೆಪಿ ಮುಖಂಡರ ಮನೆ ಮುಂದೆ ಪ್ರತಿಭಟನೆ ಆಯೋಜಿಸಲಾಗಿದೆ.

    ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಮನೆ ಮುಂದೆ ಧರಣಿಗೆ ಶ್ರೀರಾಮಸೇನೆ ಕರೆ ಕೊಟ್ಟಿದೆ. ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಪ್ರತಿಭಟನೆಗೆ ಹಲವು ಹಿಂದೂಪರ ಸಂಘಟನೆಗಳು ಬೆಂಬಲ ಕೊಟ್ಟಿವೆ. ಇದನ್ನೂ ಓದಿ: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದಕ್ಕೆ ಮಗಳನ್ನು ಕೊಂದ ಪೋಷಕರು

    ಈಗಾಗಲೇ ಸೋಷಿಯಲ್ ಮೀಡಿಯಾ ಮೂಲಕ ಧರಣಿಯಲ್ಲಿ ಭಾಗವಹಿಸುವಂತೆ ಶ್ರೀರಾಮಸೇನೆಯ ಸದಸ್ಯರಿಗೆ, ಪದಾಧಿಕಾರಿಗಳಿಗೆ, ಹಿಂದೂಪರ ಸಂಘಟನೆ ಮತ್ತು ಹಿಂದೂಗಳಿಗೆ ಸಂದೇಶ ರವಾನಿಸಲಾಗಿದೆ. ಈ ಬಗ್ಗೆ ಜೂನ್ 2ರಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮುತಾಲಿಕ್ ಮಾಹಿತಿ ಕೊಟ್ಟಿದ್ದರು. ಜೂನ್ 8ರಂದು ಬಿಜೆಪಿ ಎಂಎಲ್‍ಎಗಳ ಕಚೇರಿ ಮುಂದೆ ಧರಣಿ ಕೂರುವ ಬಗ್ಗೆ ಎಚ್ಚರಿಸಿದ್ದರು. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಟ್ವೀಟ್ – ಬಿಜೆಪಿ ಮುಖಂಡ ಅರೆಸ್ಟ್

  • ಬೆಂಗಳೂರಿನಲ್ಲಿ ಲೌಡ್‌ ಸ್ಪೀಕರ್‌ ಸಕ್ರಮ – ಯಾವ ವಲಯದಿಂದ  ಎಷ್ಟು ಅರ್ಜಿ ಸಲ್ಲಿಕೆ?

    ಬೆಂಗಳೂರಿನಲ್ಲಿ ಲೌಡ್‌ ಸ್ಪೀಕರ್‌ ಸಕ್ರಮ – ಯಾವ ವಲಯದಿಂದ ಎಷ್ಟು ಅರ್ಜಿ ಸಲ್ಲಿಕೆ?

    ಬೆಂಗಳೂರು: ಧಾರ್ಮಿಕ ಕೇಂದ್ರಗಳಲ್ಲಿ ಅಳವಡಿಸಲಾಗಿರುವ ಲೌಡ್‌ ಸ್ಪೀಕರ್‌ ಸಕ್ರಮಗೊಳಿಸಲು ನಗರದ ಠಾಣೆಗಳಲ್ಲಿ ಸಾಲು ಸಾಲು ಅರ್ಜಿ ಸಲ್ಲಿಕೆಯಾಗಿದೆ.

    ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಕೆ ವಿಚಾರ ತಾರಕಕ್ಕೇರಿದ್ದರಿಂದ ಸಕ್ರಮಕ್ಕೆ ಸರ್ಕಾರ 15 ದಿನಗಳ ಗಡುವು ನೀಡಿ ಡೆಡ್‍ಲೈನ್ ಕೊಟ್ಟಿತ್ತು. ಅಲ್ಲದೇ ಯಾವುದೇ ಧಾರ್ಮಿಕ ಕೇಂದ್ರಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಪೊಲೀಸರ ಅನುಮತಿ ಕಡ್ಡಾಯ ಎಂದು ಸರ್ಕಾರ ಆದೇಶಿಸಿತ್ತು.

    loudspeakers

    ಈ ಬೆನ್ನಲ್ಲೇ ನಗರದ ಎಂಟೂ ವಿಭಾಗಗಳ ಎಸಿಪಿ ಕಚೇರಿಗಳು, ಠಾಣೆಗಳಿಗೆ ಸಾಲು ಸಾಲು ಅರ್ಜಿಗಳು ಬಂದಿವೆ. ನಗರದಾದ್ಯಂತ 700ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಇದರಲ್ಲಿ ಮಸೀದಿ ಅರ್ಜಿಗಳೇ ಜಾಸ್ತಿ ಇದೆ. 62 ದೇವಾಲಯ, 611 ಮಸೀದಿ, 42 ಚರ್ಚ್, ಇತರೆ ಕೇಂದ್ರಗಳಿಂದ 2 ಅರ್ಜಿಗಳು ಸಲ್ಲಿಕೆಯಾಗಿವೆ. ಇದನ್ನೂ ಓದಿ: ಧರ್ಮ ದಂಗಲ್‌ಗೆ ತೆರೆ ಎಳೆಯಲು ಮುಂದಾದ ಬಿಜೆಪಿ – ರಾಜ್ಯ ಘಟಕಗಳಿಗೆ ಹೈಕಮಾಂಡ್‌ ವಾರ್ನಿಂಗ್‌

    ಯಾವ ವಲಯದಿಂದ ಎಷ್ಟು?
    ಬೆಂಗಳೂರು ಕೇಂದ್ರ ವಿಭಾಗ 36 ಅರ್ಜಿ – ದೇವಾಲಯ 1, ಮಸೀದಿ 32, 2 ಚರ್ಚ್
    ಪೂರ್ವ ವಿಭಾಗ 233 ಅರ್ಜಿ – ದೇವಾಲಯ 22, ಮಸೀದಿ 191, 20 ಚರ್ಚ್
    ಪಶ್ಚಿಮ ವಿಭಾಗ 114 ಅರ್ಜಿ – ದೇವಾಲಯ 5, ಮಸೀದಿ 108, 1 ಚರ್ಚ್

    mosque-loudspeakers
    ಸಾಂದರ್ಭಿಕ ಚಿತ್ರ

    ದಕ್ಷಿಣ ವಿಭಾಗ 47 ಅರ್ಜಿ – ದೇವಾಲಯ 2, ಮಸೀದಿ 43, ಇತರೆ 2
    ಉತ್ತರ ವಿಭಾಗ 101 ಅರ್ಜಿ – ದೇವಾಲಯ 10, ಮಸೀದಿ 79, 12 ಚರ್ಚ್
    ಈಶಾನ್ಯ ವಿಭಾಗ 86 ಅರ್ಜಿ – ದೇವಾಲಯ 18, ಮಸೀದಿ 66, 2 ಚರ್ಚ್

    ಆಗ್ನೇಯ ವಿಭಾಗ 67 ಅರ್ಜಿ – ದೇವಾಲಯ 3, ಮಸೀದಿ 60, 4 ಚರ್ಚ್
    ವೈಟ್ ಫೀಲ್ಡ್ ವಿಭಾಗ 33 ಅರ್ಜಿ – ದೇವಾಲಯ 1, ಮಸೀದಿ 31, 1 ಚರ್ಚ್