Tag: love failure

  • ಅಪ್ರಾಪ್ತೆಯೊಂದಿಗೆ ಪ್ರೇಮ ವೈಫಲ್ಯ ಶಂಕೆ – ʻಮಿಸ್ ಯು ಚಿನ್ನʼ ಅಂತ ಪೋಸ್ಟ್‌ ಮಾಡಿ ಯುವಕ ನೇಣಿಗೆ ಶರಣು

    ಅಪ್ರಾಪ್ತೆಯೊಂದಿಗೆ ಪ್ರೇಮ ವೈಫಲ್ಯ ಶಂಕೆ – ʻಮಿಸ್ ಯು ಚಿನ್ನʼ ಅಂತ ಪೋಸ್ಟ್‌ ಮಾಡಿ ಯುವಕ ನೇಣಿಗೆ ಶರಣು

    – ಹುಡುಗಿ ವೇಲ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ
    – ಬೇರೊಬ್ಬನನ್ನ ಲವ್‌ ಮಾಡುತ್ತಾ, ಚಿರುತ್‌ನನ್ನ ಅವಾಯ್ಡ್‌ ಮಾಡ್ತಿದ್ದಳಂತೆ ಹುಡುಗಿ

    ಚಿಕ್ಕಬಳ್ಳಾಪುರ: ಆತನಿಗೆ ಇನ್ನೂ 18 ವರ್ಷ ವಯಸ್ಸು. ಆದ್ರೆ ಹದಿಹರೆಯದ ವಯಸ್ಸಲ್ಲೇ ಪ್ರೀತಿ ಪ್ರೇಮ ಅಂತ ಅಪ್ರಾಪ್ತೆ ಜೊತೆ ಪ್ರಣಯದಾಟವೂ ಆಡಿದ್ದ. ಇದ್ದಕ್ಕಿದ್ದಂತೆ ಅದೇನಾಯ್ತೋ ಏನೋ ಕೊನೆಗೆ ಆಕೆಯ ವೇಲ್‌ನಿಂದಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಬಾಲಕುಂಟಹಳ್ಳಿ ಗ್ರಾಮದ ಬಳಿ ನಡೆದಿದೆ.

    ಬಾಲಕುಂಟಹಳ್ಳಿ ಗ್ರಾಮದ 18 ವರ್ಷದ ಯುವಕ ಚಿರುತ್ ಕುಮಾರ್ ಆತ್ಮಹತ್ಯೆ (Suicide) ಮಾಡಿಕೊಂಡವ. ಅಂದಹಾಗೆ ಸಾಯುವ ಮುನ್ನ ʻಮಿಸ್ ಯು ಚಿನ್ನʼ ಅಂತ ಆಕೆಯೊಂದಿಗಿನ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಆಕೆಯ ವೇಲ್‌ನಿಂದಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    SSLCನಲ್ಲಿ ಒಂದಲ್ಲ ಎರಡಲ್ಲ ಅಂತ ಮೂರು ಬಾರಿ ಫೇಲ್ ಆಗಿದ್ದ ಚಿರುತ್ ಊರಲ್ಲೇ ಕೃಷಿ ಕೆಲಸ ಮಾಡಿಕೊಂಡಿದ್ದ. ಆದ್ರೆ ಚಿರುತ್ ಕುಮಾರ್ ಇದ್ದಕ್ಕಿದ್ದಂತೆ ಜಕ್ಕಲಮಡುಗು ಜಲಾಶಯದ ಬಳಿ ಜಮೀನು ಪಕ್ಕದಲ್ಲೇ ಇದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಂದಹಾಗೆ ತಂದೆ ತಾಯಿಗೆ ಒಬ್ಬನೇ ಮಗನಾಗಿದ್ದ ಚಿರುತ್ ಕುಮಾರ್ ಅದ್ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದ ಅನ್ನೋದು ಆರಂಭದಲ್ಲಿ ಸಂಬಂಧಿಕರಿಗೂ ಗೊತ್ತಾಗಿರಲಿಲ್ಲ. ಕೊನಗೆ ಆತನ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನ ಜಾಲಾಡಿದಾಗ ಆತ ಸಾಯುವ ಮುನ್ನ ಅಪ್ರಾಪ್ತ ಬಾಲಕಿಯೊಂದಿಗೆ ಇರುವ ಫೋಟೋಗಳನ್ನ ಹಾಕಿಕೊಂಡಿದ್ದಾನೆ. ಇದ್ರಿಂದ ಪ್ರೇಮ ವೈಫಲ್ಯದಿಂದಲೇ ಚಿರುತ್ ಕುಮಾರ್ ಸೂಸೈಡ್ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ಈ ಹಿಂದೆಯೂ ಎರಡು ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಸಾಯುವುದಾಗಿ ಚಿರುತ್ ಕುಮಾರ್ ಪೋಸ್ಟ್ ಮಾಡಿದ್ದನಂತೆ. ಆಗ ಸ್ನೇಹಿತರೇ ಹೋಗಿ ಅವನಿಗೆ ಬುದ್ದಿ ಮಾತು ಹೇಳಿ ಮನೆಗೆ ಕರೆದುಕೊಂಡು ಬಂದಿದ್ರಂತೆ. ಆದ್ರೆ ಮೂರನೇ ಬಾರಿ ಸೂಸೈಡ್ ಮಾಡಿಕೊಂಡು ಸಾವಿನ ಮನೆ ಸೇರಿಕೊಂಡಿದ್ದಾನೆ.

    ಇನ್ನೂ ಅಪ್ರಾಪ್ತ ಬಾಲಕಿ, ಚಿರುತ್‌ನನ್ನ ಬಿಟ್ಟು ಬೇರೆ ಯಾರೋ ಹುಡುಗನನ್ನ ಪ್ರೀತಿ ಮಾಡುತ್ತಿದ್ದಳಂತೆ, ಚಿರುತ್ ಫೋನ್‌ ರಿಸೀವ್ ಮಾಡದೇ ಅವಾಯ್ಡ್‌ ಮಾಡಿದ್ಲಂತೆ. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಆಪ್ತ ಸ್ನೇಹಿತರು ಬಳಗದಿಂದ ಮಾಹಿತಿ ಲಭ್ಯವಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

  • ಲವ್ವರ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿ – ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣು

    ಲವ್ವರ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿ – ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣು

    ಚಿಕ್ಕಬಳ್ಳಾಪುರ: ಲವ್ವರ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಪೇರೇಸಂದ್ರ (Peresandra) ಗ್ರಾಮದ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ.

    ಕೇರಳದ (Kerala) ವಯನಾಡು (Wayanadu) ಮೂಲದ ಮೊಹಮ್ಮದ್ ಶಬ್ಬೀರ್ (26) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಆರ್‌ಸಿಟಿ ಎನ್ನುವ ಅಲೈಡ್ ಸೈನ್ಸ್ ಕೋರ್ಸ್‌ನ (Allied Science Course) ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ ಎಂದು ತಿಳಿದುಬಂದಿದೆ.ಇದನ್ನೂ ಓದಿ: MLC Nomination | ಮೇಲ್ಮನೆ ಸದಸ್ಯರಾಗಿ ರಮೇಶ್‌ಬಾಬು, ಆರತಿ ಕೃಷ್ಣ ಸೇರಿ ನಾಲ್ವರು ನಾಮನಿರ್ದೇಶನ

    ಇನ್ನೇನು ಕೆಲವೇ ತಿಂಗಳುಗಳಲ್ಲಿ ಕೋರ್ಸ್ ಮುಗಿಸಿ ಮನೆಗೆ ಮರಳಬೇಕಿದ್ದ ವಿದ್ಯಾರ್ಥಿ ಭಾನುವಾರ (ಸೆ.7) ಬೆಳಗ್ಗೆ ಹಾಸ್ಟೆಲ್‌ನ ರೂಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ರೂಮ್‌ನ ಕಿಟಕಿಗೆ ಟವೆಲ್‌ ಕಟ್ಟಿ, ಅದರಿಂದ ಕತ್ತು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿದ ಪೇರೇಸಂದ್ರ ಠಾಣಾ ಪೊಲೀಸರು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ರೂಮ್‌ ಪರಿಶೀಲನೆ ನಡೆಸಿದಾಗ ಡೆತ್‌ನೋಟ್ ಸಿಕ್ಕಿದೆ.

    ಡೆತ್‌ನೋಟ್‌ನಲ್ಲಿ ಏನಿದೆ?
    I didn’t stop anything until…. I always love you forever , You are my first and you are My last ಎಂದು ಬರೆದಿದ್ದಾನೆ.

    ಡೆತ್‌ನೋಟ್‌ನಲ್ಲಿ ಬರೆದಿರುವಂತೆ ಮೃತ ವಿದ್ಯಾರ್ಥಿ ಶಬ್ಬೀರ್ ತನ್ನ ಸಹಪಾಠಿಯೊಬ್ಬಳನ್ನು ಲವ್ ಮಾಡುತ್ತಿದ್ದ. ಕಳೆದ ಕೆಲವು ದಿನಗಳಿಂದ ಮೃತ ಶಬ್ಬೀರ್‌ನ ಪೋನ್ ನಂಬರ್‌ನ್ನು ಆ ಹುಡುಗಿ ಬ್ಲಾಕ್ ಮಾಡಿದ್ದಳಂತೆ. ಜೊತೆಗೆ ಸರಿಯಾಗಿ ರೆಸ್ಪಾನ್ಸ್ ಮಾಡಿರಲಿಲ್ಲವಂತೆ. ಹೀಗಾಗಿ ಇದರಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

    ಸದ್ಯ ಪೇರೇಸಂದ್ರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ಕೈಗೊಂಡಿದ್ದಾರೆ.ಇದನ್ನೂ ಓದಿ: ಬರ್ತ್‌ಡೇ ಸೆಲೆಬ್ರೇಷನ್‌ಗೆ ಕರೆದೊಯ್ದು ಪರಿಚಯಸ್ಥರಿಂದಲೆ ಮಹಿಳೆಯ ಗ್ಯಾಂಗ್‌ ರೇಪ್‌

  • ಪ್ರೇಮ ವೈಫಲ್ಯ; ಪೆಟ್ರೋಲ್ ಸುರಿದುಕೊಂಡು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

    ಪ್ರೇಮ ವೈಫಲ್ಯ; ಪೆಟ್ರೋಲ್ ಸುರಿದುಕೊಂಡು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

    – ಸಿಇಟಿ ಪರೀಕ್ಷೆಯಲ್ಲಿ ಉ.ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿದ್ದ ಯುವಕ

    ಕಾರವಾರ: ಪ್ರೇಮ ವೈಫಲ್ಯದಿಂದ ಮನನೊಂದ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ (Karwar) ತಾಲೂಕಿನ ಅಮದಳ್ಳಿಯ ಟೋಲ್‌ನಾಕಾದಲ್ಲಿ ನಡೆದಿದೆ.

    ಜಿತೆಂದ್ರ ಜಗದೀಶ ಪಡ್ತಿ (20), ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ ಈತ ಇತ್ತೀಚೆಗೆ ಸಿಇಟಿ ಪರೀಕ್ಷೆಯಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿದ್ದ. ಕಾಲೇಜಿನಲ್ಲಿ ಈತ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದು, ಪ್ರೇಮ ನಿವೇದನೆ ಮಾಡಿದ್ದ. ಆದರೆ, ಆಕೆ ಆತನೊಂದಿಗೆ ಸ್ನೇಹದಲ್ಲಿ ಇದ್ದು, ಪ್ರೀತಿಯನ್ನು ನಿರಾಕರಿಸಿದ್ದಳು. ಇನ್ನು ಆಕೆ ಹೆಚ್ಚಿನ ಓದಿಗಾಗಿ ಗೋವಾದಲ್ಲಿ ಇದ್ದಳು. ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಜೋಡಿಗೆ ನೇಗಿಲು ಕಟ್ಟಿ ಎತ್ತುಗಳಂತೆ ಉಳುಮೆ ಮಾಡಿಸಿ ಚಿತ್ರಹಿಂಸೆ

    ಆದರೆ, ಈತ ಬೇರೆ ಬೇರೆ ನಂಬರ್‌ನಿಂದ ಕಾಲ್ ಮಾಡಿ ಪ್ರೀತಿ ಮಾಡುವಂತೆ ಪೀಡಿಸಿದ್ದ. ಇನ್ನು ಆಕೆ ನಿರಾಕರಿಸುತ್ತಾ ಬಂದಿದ್ದರಿಂದ ಮನನೊಂದು ಆಕೆ ಮತ್ತು ಆಕೆಯ ಕುಟುಂಬದವರ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಮುಂದಾಗಿದ್ದ. ಮನೆಯಲ್ಲಿದ್ದವರು ಬೇರೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ಮನೆಯ ಎರಡೂ ಬದಿಯಲ್ಲಿ ಬಾಗಿಲು ಹಾಕಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

    ಮನೆಯಿಂದ ಬೆಂಕಿಯ ಹೊಗೆ ಬರುತ್ತಿರೋದು ಗಮನಿಸಿದ ಯುವಕನ ಪೋಷಕರು ಕೂಡಲೇ ಆತನನ್ನು ರಕ್ಷಣೆ ಮಾಡಲು ಪ್ರಯತ್ನಿಸಿದ್ದು, ಬಹುತೇಕ ಬೆಂಕಿಯಿಂದ ಸುಟ್ಟುಹೋಗಿದ್ದ ಆತನನ್ನು ಕಾರವಾರದ ಕ್ರಿಮ್ಸ್ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಿದ್ದರು. ಇದನ್ನೂ ಓದಿ: ಕುರ್ಚಿ ಸಿಗುವುದೇ ಕಷ್ಟ, ಕುರ್ಚಿ ಸಿಕ್ಕಾಗ ತೆಪ್ಪಗೆ ಬಂದು ಕುಳಿತುಕೊಳ್ಳಬೇಕು: ಡಿಕೆಶಿ

    ಆದರೆ, ಶೇ.35 ಕ್ಕೂ ಹೆಚ್ಚು ದೇಹ ಸುಟ್ಟಿದ್ದರಿಂದ ಆತ ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾನೆ. ಘಟನೆ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೈ ಕೊಟ್ಟ ಪ್ರೀತಿಸಿದ ಹುಡುಗಿ – ಮನನೊಂದು ಯುವಕ ನೇಣಿಗೆ ಶರಣು

    ಕೈ ಕೊಟ್ಟ ಪ್ರೀತಿಸಿದ ಹುಡುಗಿ – ಮನನೊಂದು ಯುವಕ ನೇಣಿಗೆ ಶರಣು

    ಚಾಮರಾಜನಗರ: ಪ್ರೀತಿಸಿದ ಹುಡುಗಿ ಕೈ ಕೊಟ್ಟಿದ್ದರಿಂದ ಮನನೊಂದು ನನ್ನ ಸಾವಿಗೆ ಆಕೆಯೇ ಕಾರಣ ಎಂದು ವೀಡಿಯೋ ಹರಿಬಿಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ (Gundlupete) ತಾಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ.

    ಸಂತೋಷ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಸಂತೋಷ್ ಹಾಗೂ ಸಾಗಡೆ ಗ್ರಾಮದ ಯುವತಿಯು ಪರಸ್ಪರ ಪ್ರೀತಿಸುತ್ತಿದ್ದರು. ಆಕೆಯು ಬೇರೊಬ್ಬ ಯುವಕನಿಗೆ ಮೆಸೇಜ್ ಮಾಡಿದ್ದನ್ನು ಸಂತೋಷ್ ಪ್ರಶ್ನಿಸಿದ್ದ. ಈ ಕಾರಣಕ್ಕೆ ಯುವತಿಯು ಸಂತೋಷ್‌ನಿಂದ ಅಂತರ ಕಾಯ್ದುಕೊಂಡಿದ್ದಳು ಎನ್ನಲಾಗಿದೆ. ಇದನ್ನೂ ಓದಿ: 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ರೈಲ್ವೆ ಟ್ರ‍್ಯಾಕ್‌ನಲ್ಲಿ ಶವವಾಗಿ ಪತ್ತೆ

    ಇದರಿಂದ ಮನನೊಂದ ಸಂತೋಷ್, ನನ್ನ ಸಾವಿಗೆ ಆಕೆಯೇ ಕಾರಣ. ಅವಳನ್ನು ಬಿಟ್ಟು ಇನ್ಯಾರು ಕಾರಣರಲ್ಲ ಎಂದು ಆತ್ಮಹತ್ಯೆಗೂ ಮುನ್ನ ವೀಡಿಯೋ ಮಾಡಿ ವಾಟ್ಸಪ್ ಸ್ಟೇಟಸ್‌ಗೆ ತಮ್ಮಿಬ್ಬರ ಫೋಟೋ ಹಾಕಿದ್ದ. ಬಳಿಕ ಸಂತೋಷ್, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಘಟನಾ ಸಂಬಂಧ ತೆರಕಣಾಂಬಿ ಪೋಲಿಸ್ ಠಾಣೆಯಲ್ಲಿ (Terakanambi Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವಯಸ್ಕರಲ್ಲಿ ದಿಢೀರ್ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್ ಕಾರಣವಲ್ಲ; ಐಸಿಎಂಆರ್-ಏಮ್ಸ್ ವರದಿಯಲ್ಲಿ ಸ್ಪಷ್ಟನೆ

  • ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್‌ಗೆ ಟ್ವಿಸ್ಟ್ – 2 ಮಕ್ಕಳ ತಂದೆಯೊಂದಿಗೆ ಪ್ರೇಮ ವೈಫಲ್ಯ

    ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್‌ಗೆ ಟ್ವಿಸ್ಟ್ – 2 ಮಕ್ಕಳ ತಂದೆಯೊಂದಿಗೆ ಪ್ರೇಮ ವೈಫಲ್ಯ

    ಚಂಡೀಗಢ/ಮಂಗಳೂರು: ಧರ್ಮಸ್ಥಳ (Dharmasthala) ಮೂಲದ ಏರೋಸ್ಪೆಸ್ ಎಂಜಿನಿಯರ್ (Aerospace Engineer) ಪಂಜಾಬ್ ಕಾಲೇಜಿನಲ್ಲಿ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರೇಮ ವೈಫಲ್ಯದಿಂದ (Love Failure) ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ.

    ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್ 6 ತಿಂಗಳ ಹಿಂದೆ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಹೆಚ್ಚಿನ ತರಬೇತಿಗೆ ಜರ್ಮನಿಗೆ ತೆರಳಲು ತಯಾರಿ ನಡೆಡಸಿದ್ದ ಆಕಾಂಕ್ಷ ಕೆಲವು ಶೈಕ್ಷಣಿಕ ದಾಖಲೆಗಳನ್ನು ಶುಕ್ರವಾರ ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗೆ ತೆರಳಿದ್ದಳು. ಬಳಿಕ ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಳು. ಆಕಾಂಕ್ಷ ಪೋಷಕರು ಕಾಲೇಜಿನವರೇ ನನ್ನ ಮಗಳಿಗೆ ಏನೋ ಮಾಡಿದ್ದಾರೆ, ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಹುಡುಗಿಯಲ್ಲ ಎಂದು ಆರೋಪಿಸಿದ್ದರು. ಆದರೆ ಅಸಲಿ ವಿಚಾರ ಈಗ ಹೊರಬಿದ್ದಿದೆ. ಇದನ್ನೂ ಓದಿ: ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ಪಂಜಾಬ್‌ನಲ್ಲಿ ನಿಗೂಢ ಸಾವು

    ಆಕಾಂಕ್ಷಗೆ ತಾನು ಓದುತ್ತಿದ್ದ ಯೂನಿವರ್ಸಿಟಿಯ ಪ್ರೊಫೆಸರ್ ಜೊತೆ ಪ್ರೇಮವಾಗಿತ್ತು. ಕೇರಳದ ಕೊಟ್ಟಾಯಂ ನಿವಾಸಿ ಎರಡು ಮಕ್ಕಳ ತಂದೆ ಬಿಜಿಲ್ ಮ್ಯಾಥ್ಯೂ ಜೊತೆ ಆಕಾಂಕ್ಷಗೆ ಪ್ರೇಮಾಂಕುರವಾಗಿತ್ತು. ಅಲ್ಲದೇ ಮ್ಯಾಥ್ಯೂ ಜೊತೆ ಆತನ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಆಕಾಂಕ್ಷ ಜಗಳ ಮಾಡಿದ್ದಳು. ಬಳಿಕ ಕಾಲೇಜಿನಲ್ಲೂ ಜಗಳ ಮಾಡಿ ಕಟ್ಟಡದ ನಾಲ್ಕನೇ ಮಹಡಿಗೆ ಹೋಗಿ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಏರೋಸ್ಪೇಸ್ ಎಂಜಿನಿಯರ್ ಸಾವು

    ಆತ್ಮಹತ್ಯೆಗೆ ಪ್ರೇರಣೆ ಹಿನ್ನೆಲೆ ಮ್ಯಾಥ್ಯೂ ವಿರುದ್ದ ಪಂಜಾಬ್‌ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಂದು ಶವಪರೀಕ್ಷೆ ಬಳಿಕ ಹೆತ್ತವರಿಗೆ ಆಕಾಂಕ್ಷಳ ಮೃತದೇಹ ಹಸ್ತಾಂತರಿಸಲಾಗುತ್ತದೆ. ಇಂದು ಸಂಜೆ ವೇಳೆಗೆ ಧರ್ಮಸ್ಥಳ ಬೊಳಿಯೂರು ಮನೆಯಲ್ಲಿ ಆಕಾಂಕ್ಷ ಅಂತ್ಯಸಂಸ್ಕಾರ ನಡೆಯಲಿದೆ.‌ ಇದನ್ನೂ ಓದಿ: ಬೆಂಗಳೂರಿನ ಸಿಸಿಬಿ ಕಚೇರಿ ಜಲಾವೃತ | ಬೊಮ್ಮನಹಳ್ಳಿ -ಸಿಲ್ಕ್ ಬೋರ್ಡ್ ರಸ್ತೆಯಲ್ಲಿ 3 ಅಡಿ ನೀರು

  • ಮುಂಬೈ: 14ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

    ಮುಂಬೈ: 14ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

    ಮುಂಬೈ: 20 ವರ್ಷದ ಯುವತಿಯೊಬ್ಬಳು 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ(Mumbai) ದಾದರ್ ಪ್ರದೇಶದಲ್ಲಿ ನಡೆದಿದೆ.

    ಬಿ.ಕಾಂ. ವಿದ್ಯಾರ್ಥಿನಿ ಝಾನಾ ಸೇಥಿಯಾ(20) ಮೃತ ಯುವತಿ. ಇದನ್ನೂ ಓದಿ: ಪೋಷಕರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ – ಜ್ಯೂಸ್ ಎಂದು ಕ್ರಿಮಿನಾಶಕ ಸೇವಿಸಿದ ವಿದ್ಯಾರ್ಥಿನಿ ಸಾವು

    ಝಾನಾ, ಹಿಂದೂ ಕಾಲೋನಿಯ ಟೆಕ್ನೋ ಹೈಟ್ಸ್ ಕಟ್ಟಡದ ಎಂಟನೇ ಮಹಡಿಯಲ್ಲಿ ಹೆತ್ತವರೊಂದಿಗೆ ವಾಸಿಸುತ್ತಿದ್ದಳು. ಪ್ರತಿದಿನ ಆಕೆ, ಇಬ್ಬರು ಸ್ನೇಹಿತರೊಂದಿಗೆ 14ನೇ ಮಹಡಿಯಲ್ಲಿರುವ ಟೆರೇಸ್‌ಗೆ ತೆರಳುತ್ತಿದ್ದಳು. ಮಂಗಳವಾರ ಸಂಜೆಯೂ ಸಹ ಸ್ನೇಹಿತರೊಂದಿಗೆ ಟೆರೇಸ್‌ಗೆ ತೆರಳಿದ್ದಳು. ಈ ವೇಳೆ ಝಾನಾ ಟೆರೇಸ್‌ನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬದುಕು ಕೊಟ್ಟ ರೆಸ್ಟೋರೆಂಟ್‌ಗೆ ಶೈನ್ ಶೆಟ್ಟಿ ಗುಡ್ ಬೈ- ಫ್ಯಾನ್ಸ್‌ಗೆ ಬಹಿರಂಗ ಪತ್ರ ಬರೆದ ನಟ

    ಆಸ್ಪತ್ರೆಗೆ ಕರೆದೊಯ್ದ ವೇಳೆ ಆಕೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಡೈರಿಯಲ್ಲಿ ಆತ್ಮಹತ್ಯೆ ಆಲೋಚನೆಗಳ ಬಗ್ಗೆ ಆಕೆ ಬರೆದುಕೊಂಡಿರುವುದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್‌ಪೆಕ್ಟರ್‌ ಶಾಕ್ – ಲೋಕಾ ದಾಳಿ ವೇಳೆ ಪರಾರಿ

    ಪ್ರೇಮ ವೈಫಲ್ಯದಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು ಎಂದು ಸ್ನೇಹಿತರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಮಟುಂಗಾ ಪೊಲೀಸ್ ಠಾಣೆಯಲ್ಲಿ( Matunga police station) ಆಕಸ್ಮಿಕ ಸಾವಿನ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಲವ್ ಫೈಲ್ಯೂರ್‌ನಿಂದ ಆತ್ಮಹತ್ಯೆಗೆ ಶರಣಾದ್ರಾ ಪೊಲೀಸ್ ಪೇದೆ?

    ಲವ್ ಫೈಲ್ಯೂರ್‌ನಿಂದ ಆತ್ಮಹತ್ಯೆಗೆ ಶರಣಾದ್ರಾ ಪೊಲೀಸ್ ಪೇದೆ?

    ಬೀದರ್: ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಟೂರಿಸ್ಟ್ ಲಾಡ್ಜ್ ನಲ್ಲಿ ನಡೆದಿದೆ.

    ಉಮೇಶ್ ನಾಯ್ಕ್ (25) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ. ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ ಎಂದು ಹೇಳಲಾಗುತ್ತಿದೆ.

    2021 ರಲ್ಲಿ ಪೊಲೀಸ್ ಪೇದೆಯಾಗಿ ಆಯ್ಕೆಯಾಗಿದ್ದ ನಾಯ್ಕ್, ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರ ಠಾಣೆಯಲ್ಲಿ ಹಲವು ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ವಿಜಯನಗರ ಜಿಲ್ಲೆಯ ಪೊಲೀಸ್ ಪೇದೆಯಾಗಿರುವ ನಾಯ್ಕ್ ಸದ್ಯ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಹೆಚ್‍ಡಿಕೆ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ- ಶೀಘ್ರವೇ ಡಿಸ್ಚಾರ್ಜ್

    ವಿಷಯ ತಿಳಿದು ಪೋಷಕರು ಬೀದರ್‌ಗೆ ಪೋಷಕರು ಬಂದಿದ್ದಾರೆ. ಬಸವಕಲ್ಯಾಣ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತನ್ನ ವಾಟ್ಸಾಪ್ ಸ್ಟೇಟಸ್‍ನಲ್ಲೇ Rip ಎಂದು ಬರೆದು ನೇಣು ಹಾಕಿಕೊಂಡ

    ತನ್ನ ವಾಟ್ಸಾಪ್ ಸ್ಟೇಟಸ್‍ನಲ್ಲೇ Rip ಎಂದು ಬರೆದು ನೇಣು ಹಾಕಿಕೊಂಡ

    ರಾಮನಗರ: ಪ್ರೇಮ ವೈಫಲ್ಯದಿಂದಾಗಿ ಓರ್ವ ಯುವಕ ನೇಣಿಗೆ ಶರಣಾಗಿರುವ ಘಟನೆ ಅರ್ಚಕರಹಳ್ಳಿಯಲ್ಲಿ ನಡೆದಿದೆ.

    ಸೋಮಶೇಖರ್(26) ಮೃತ ಯುವಕ. ಸಾಯುವ ಮೊದಲೇ ಸೋಮಶೇಖರ್ ತನ್ನ ವಾಟ್ಸಾಪ್ ಸ್ಟೇಟಸ್‍ನಲ್ಲಿ ಬೆಳಗ್ಗೆ 12 ಗಂಟೆ ಸುಮಾರಿಗೆ ರಿಪ್ ಎಂದು ಬರೆದುಕೊಂಡಿದ್ದ. ಸಂಜೆ 5 ಗಂಟೆ ಸುಮಾರಿಗೆ ನೇಣಿಗೆ ಶರಣಾಗಿದ್ದಾನೆ. ಘಟನೆ ನಡೆದ ವೇಳೆ ಮನೆಯಲ್ಲಿ ಯಾರು ಇರಲಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ:  ಹಳ್ಳದಲ್ಲಿ ಕೊಚ್ಚಿ ಹೋಗಿದ್ದವ ಶವವಾಗಿ ಪತ್ತೆ – ತಕ್ಷಣವೇ ಐದು ಲಕ್ಷ ರೂ. ಪರಿಹಾರ ವಿತರಣೆ 

    ದತ್ತುಮಗ
    ಅರ್ಚಕರಹಳ್ಳಿಯ ಸೋದರಸಂಬಂಧಿಯೊಬ್ಬರಿಗೆ ಮಕ್ಕಳಿಲ್ಲದ ಕಾರಣ ಈತನನ್ನು ದತ್ತುಮಗನಂತೆ ಸಾಕುತ್ತಿದ್ದರು ಎನ್ನಲಾಗಿದೆ. ಸೋಮಶೇಖರ್ ಚನ್ನಪಟ್ಟಣ ಮೂಲದ ಯುವಕನಾಗಿದ್ದು, ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸುವ ಸಲುವಾಗಿ ನಗರದ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.

    ಈ ಸಂಬಂಧ ಐಜೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ:ಇಬ್ರಾಹಿಂ ಸಾಹೇಬ್ರು ಸೋತು ಸುಣ್ಣವಾಗಿದ್ದಾರೆ: ಜಮೀರ್ ತಿರುಗೇಟು 

    Live Tv
    [brid partner=56869869 player=32851 video=960834 autoplay=true]

  • ಪ್ರೇಮ ವೈಫಲ್ಯ – ವೀಡಿಯೋ ಮಾಡಿಟ್ಟು ಜಿಮ್ ಟ್ರೈನರ್ ಆತ್ಮಹತ್ಯೆ

    ಪ್ರೇಮ ವೈಫಲ್ಯ – ವೀಡಿಯೋ ಮಾಡಿಟ್ಟು ಜಿಮ್ ಟ್ರೈನರ್ ಆತ್ಮಹತ್ಯೆ

    ಬೆಂಗಳೂರು: ಪ್ರೇಮ ವೈಫಲ್ಯದಿಂದ ಜಿಮ್ ಟ್ರೈನರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ..

    ಕಾರ್ತಿಕ್ ಆತ್ಮಹತ್ಯೆಗೆ ಶರಣಾದ ಜಿಮ್ ಟ್ರೈನರ್. ಆರ್ ಆರ್ ನಗರದ ಮಾರಪ್ಪ ಲೇಔಟ್ ನಲ್ಲಿ ಘಟನೆ ನಡೆದಿದ್ದು, ಕಳೆದ ಮೂರು ವರ್ಷಗಳಿಂದ ಕಾರ್ತಿಕ್ ಯುವತಿಯನ್ನು ಪ್ರೀತಿ ಮಾಡುತ್ತಿದ್ದರು. ಇತ್ತೀಚಿಗೆ ಕಾರ್ತಿಕ್‌ನಿಂದ ಯುವತಿ ದೂರವಾಗಿದ್ದರು.

    ಪ್ರೇಮ ವೈಫಲ್ಯದ ಬಗ್ಗೆ ಆಪ್ತರ ಬಳಿ ಸಹ ಕಾರ್ತಿಕ್ ಹೇಳಿಕೊಂಡಿದ್ದ.‌ ಈ ವಿಚಾರ ತಿಳಿದ ಪೋಷಕರು ಮದುವೆ ಮಾಡಲು ಮುಂದಾಗಿದ್ದರು. ಭಾನುವಾರ ಕಾರ್ತಿಕ್ ಗೆ ಹೆಣ್ಣು ನೋಡುವ ಶಾಸ್ತ್ರಕ್ಕೆ ಹೋಗಬೇಕಿದ್ದ ಪೋಷಕರು, ರೆಡಿಯಾಗುವಂತೆ ಸೂಚಿಸಿದ್ದರು. ಆದರೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೆಪಿಟಿಸಿಎಲ್ ಹೈಟೆನ್ಷನ್ ಲೈನ್‍ಗೆ ಮರ ತಗುಲಿ ಭಾರೀ ಸ್ಫೋಟ

    ಆತ್ಮಹತ್ಯೆಗೂ ಮುನ್ನ ಪ್ರೇಮ ವೈಫಲ್ಯ ಬಗ್ಗೆ ವಿಡಿಯೋ ಮಾಡಿರುವ ಕಾರ್ತಿಕ್, ತನ್ನ ಮೊಬೈಲ್ ನಲ್ಲಿ ವೀಡಿಯೋ ಮಾಡಿ ನೋವು ತೋಡಿಕೊಂಡಿದ್ದಾರೆ.‌ ಪೊಲೀಸರು ಮೊಬೈಲ್ ವಶಕ್ಕೆ ಪಡೆದು ವೀಡಿಯೋ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

  • ರೈಲಿಗೆ ಸಿಲುಕಿ ವಿದ್ಯಾರ್ಥಿ ಸಾವು – ಆತ್ಮಹತ್ಯೆ ಶಂಕೆ

    ರೈಲಿಗೆ ಸಿಲುಕಿ ವಿದ್ಯಾರ್ಥಿ ಸಾವು – ಆತ್ಮಹತ್ಯೆ ಶಂಕೆ

    ತುಮಕೂರು: ತಿಪಟೂರು ನಗರದ ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ರೈಲಿಗೆ ಸಿಲುಕಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.

    ಆರ್. ಮಧು ಮೃತಪಟ್ಟ ವಿದ್ಯಾರ್ಥಿ.  ಬೆಂಗಳೂರು ಮೂಲದವನಾಗಿರುವ ಮಧು ತಿಪಟೂರಿನ ಕಲ್ಪತರು ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಸೋಮವಾರ ಸಂಜೆ ಜೈಪುರ ಎಕ್ಸ್ ಪ್ರೆಸ್ ರೈಲು ಹೋಗುತ್ತಿದ್ದಾಗ ಈತ ಅಡ್ಡ ಬಂದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

    ಪ್ರತ್ಯಕ್ಷದರ್ಶಿಗಳ ಪ್ರಕಾರ, ಇದು ಅಪಘಾತವಲ್ಲ. ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ಮಧು ರೈಲಿಗೆ ಅಡ್ಡ ಬಂದಿದ್ದಾನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರೇಮ ವೈಫಲ್ಯದಿಂದ ಮಧು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಜನರು ಮಾತನಾಡಿಕೊಳ್ಳುತ್ತಿದ್ದರು.

    ಸದ್ಯ ಅಪಘಾತದ ರಭಸಕ್ಕೆ ಮಧು ರುಂಡ-ಮುಂಡ ಬೇರ್ಪಟ್ಟಿದೆ. ಈ ಬಗ್ಗೆ ಅರಸಿಕೆರೆ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.