Tag: lpg cylinder

  • LPG ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ – ಸಿಲಿಂಡರ್‌ಗಳ ಸರಣಿ ಸ್ಫೋಟ, ಕಿ.ಮೀಗಟ್ಟಲೇ ಕಾಣಿಸಿದ ಜ್ವಾಲೆ

    LPG ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ – ಸಿಲಿಂಡರ್‌ಗಳ ಸರಣಿ ಸ್ಫೋಟ, ಕಿ.ಮೀಗಟ್ಟಲೇ ಕಾಣಿಸಿದ ಜ್ವಾಲೆ

    ಜೈಪುರ: ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು (LPG cylinders) ತುಂಬಿದ್ದ ಟ್ರಕ್‌ಗೆ (Truck), ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿರುವ ಘಟನೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ (Jaipur-Ajmer highway) ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಏಳು ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

    ಚಾಲಕ ರಸ್ತೆಬದಿಯಲ್ಲಿ ಟ್ರಕ್ ಅನ್ನು ನಿಲ್ಲಿಸಿ, ಊಟಕ್ಕೆಂದು ಹೋಟೆಲ್ ಹೋಗಿದ್ದ. ಈ ವೇಳೆ ಟ್ಯಾಂಕರೊಂದು (Tanker) ತಿರುವು ಪಡೆಯುತ್ತಿದ್ದಾಗ ನಿಯಂತ್ರಣ ತಪ್ಪಿ ಸಿಲಿಂಡರ್ ತುಂಬಿದ್ದ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಫಿಲ್ಮಿ ಸ್ಟೈಲ್‌ ಗಂಗಾವತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ

    ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡು, ನಂತರ ಗ್ಯಾಸ್ ಸಿಲಿಂಡರ್‌ಗಳು ಒಂದರ ನಂತರ ಒಂದರಂತೆ ಸರಣಿ ಸ್ಫೋಟಗೊಂಡಿದೆ. ಸ್ಫೋಟದ ಸದ್ದು ಕಿಲೋಮೀಟರ್ ಉದ್ದಕ್ಕೂ ಕೇಳಿಸಿದ್ದು, ಬೆಂಕಿಯ ಜ್ವಾಲೆಯು ಹತ್ತು ಕಿ.ಮೀ ದೂರಕ್ಕೂ ಕಾಣಿಸಿದೆ ಎನ್ನಲಾಗಿದೆ.

    ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.

  • ವಾಣಿಜ್ಯ ಬಳಕೆಯ ಎಲ್‌ಪಿಜಿ ಬೆಲೆ 6 ರೂ. ಏರಿಕೆ

    ವಾಣಿಜ್ಯ ಬಳಕೆಯ ಎಲ್‌ಪಿಜಿ ಬೆಲೆ 6 ರೂ. ಏರಿಕೆ

    ನವದೆಹಲಿ: ದೇಶದಲ್ಲಿ ಇದೀಗ ವಾಣಿಜ್ಯ ಬಳಕೆಯ 19 ಕೆ.ಜಿಯ ಎಲ್‌ಪಿಜಿ ದರವನ್ನು 6 ರೂ. ಏರಿಕೆ ಮಾಡಲಾಗಿದೆ.

    ದೆಹಲಿ, ಕೋಲ್ಕತ್ತಾ, ಮುಂಬೈ ಸೇರಿದಂತೆ ಹಲವು ಕಡೆಗಳಲ್ಲಿ ಎಲ್‌ಪಿಜಿ ದರ 6 ರೂ. ಏರಿಕೆಯಾಗಿದೆ. ಇದಕ್ಕೂ ಮುನ್ನ ಫೆ.1 ರಂದು ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 7 ರೂ.ಗೆ ಇಳಿಕೆ ಮಾಡಿದ್ದವು.ಇದನ್ನೂ ಓದಿ: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ

    ದರ ಏರಿಕೆಯಾದ ಬಳಿಕ ದೆಹಲಿಯಲ್ಲಿ 1,803 ರೂ., ಮುಂಬೈನಲ್ಲಿ 1,755 ರೂ., ಕೋಲ್ಕತ್ತಾದಲ್ಲಿ 1,913 ರೂ. ಚೆನ್ನೈನಲ್ಲಿ 1,965 ರೂ.ಗೆ ಹೆಚ್ಚಳವಾಗಿದೆ.

    ಗೃಹಬಳಕೆ ಎಲ್‌ಪಿಜಿ ಬೆಲೆ ಮೊದಲಿನಂತೆಯೇ ಉಳಿದಿದ್ದು, ದೆಹಲಿಯಲ್ಲಿ 14.2 ಕೆ.ಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 803 ರೂ., ಮುಂಬೈನಲ್ಲಿ 802.50 ರೂ., ಕೋಲ್ಕತ್ತಾದಲ್ಲಿ 829 ರೂ. ಮತ್ತು ಚೆನ್ನೈನಲ್ಲಿ 818.50 ರೂ. ಆಗಿದೆ.ಇದನ್ನೂ ಓದಿ: ತುಮಕೂರು| ಮದುವೆಯಾದ ಒಂದೂವರೆ ವರ್ಷಕ್ಕೆ ಗೃಹಿಣಿ ನಿಗೂಢ ಸಾವು

     

  • ಗ್ಯಾಸ್ ಸೋರಿಕೆಯಿಂದ ಪದೇ ಪದೇ ಅಗ್ನಿ ಅವಘಡ – ಏಜೆನ್ಸಿ ವಿರುದ್ಧ ಎಫ್‌ಐಆರ್‌

    ಗ್ಯಾಸ್ ಸೋರಿಕೆಯಿಂದ ಪದೇ ಪದೇ ಅಗ್ನಿ ಅವಘಡ – ಏಜೆನ್ಸಿ ವಿರುದ್ಧ ಎಫ್‌ಐಆರ್‌

    ಬೆಂಗಳೂರು: ಪದೇ ಪದೇ ಗ್ಯಾಸ್ ಸೋರಿಕೆಯಿಂದ (Gas Leakage) ಅಗ್ನಿ ಅವಘಡದಲ್ಲಿ ಸಾಕಷ್ಟು ಸಾವು ನೋವುಗಳ ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತಿದೆ.

    ಇದೇ ಮೊದಲ ಬಾರಿಗೆ ಗ್ಯಾಸ್ ಕಂಪನಿ ಹಾಗೂ ಏಜೆನ್ಸಿ (Gas Agency) ವಿರುದ್ಧ ಬೇಗೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಗ್ಯಾಸ್ ಲೀಕ್, ಗ್ಯಾಸ್ ಸ್ಫೋಟಕ್ಕೆ ಯಾವುದೇ ಕೇಸ್ ದಾಖಲಾಗುತ್ತಿರಲಿಲ್ಲ. ಇದೀಗ ಪ್ರೈವೆಟ್ ಗ್ಯಾಸ್ ಕಂಪನಿ ಮಾಲೀಕ ಚೋಟಾ ಸಿಕಂದರ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ, ಯೋಗ್ಯ ಅಂದ್ರೆ ಜನರ ವೋಟು ಗ್ಯಾರಂಟಿ: ಮುಖ್ಯಮಂತ್ರಿ ಚಂದ್ರು

    ಎಲ್‌ಎಲ್‌ಬಿ ವಿದ್ಯಾರ್ಥಿನಿ ಜಾಹ್ನವಿ ನೀಡಿದ ದೂರಿನ ಮೇಲೆ ಬೇಗೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜಾಹ್ನವಿ ತಂದೆ ಪಶ್ಚಿಮ ಬಂಗಾಳ ಮೂಲದ ನೇತ್ಯಾ ನಯ್ಯ ಎಂಬುವರಿಗೆ ಮನೆ ಬಾಡಿಗೆಗೆ ಕೊಟ್ಟಿದ್ರು. ಇದೇ ತಿಂಗಳ 1ನೇ ತಾರೀಖು ಸಿಲಿಂಡರ್ ಬ್ಲ್ಯಾಸ್ಟ್‌ ಆಗಿ ನೇತ್ಯಾ ನಯ್ಯ ಹಾಗೂ ಅವರ ಪತ್ನಿ ಗಂಭೀರ ಗಾಯಗೊಂಡಿದ್ದರು. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ – CBI ತನಿಖೆಗೆ ವಹಿಸಲು ಹೈಕೋರ್ಟ್‌ ನಕಾರ

    ಸಿಲಿಂಡರ್ ಬ್ಲ್ಯಾಸ್ಟ್‌ಗೆ ಖಾಸಗಿ ಪ್ರೈವೆಟ್ ಸಿಲಿಂಡರ್ ಕಂಪನಿ ಏಜೆನ್ಸಿಯೇ ಕಾರಣ. ಹೀಗಾಗಿ ಮಾಲೀಕ ಚೋಟಾ ಸಿಕಂದರ್ ಡಿಸ್ಟ್ರಿಬ್ಯೂಟರ್ ನೈಸ್ ಎಸ್‌ಕೆಎಲ್ ಮೇಲೆ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ದೂರಿನನ್ವಯ ಇದೀ ಬಿಎನ್‌ಎಸ್ 125(ಎ), 287, 324(2) ಅಡಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: RBI: 5 ವರ್ಷಗಳ ಬಳಿಕ ರೆಪೊ ದರ ಕಡಿತ ಮಾಡಿದ ಆರ್‌ಬಿಐ

  • ರೈಲು ಹಳಿ ಮೇಲೆ ಸಿಲಿಂಡರ್‌ ಇರಿಸಿ ಹಳಿತಪ್ಪಿಸಲು ಯತ್ನ – ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಪಾರು

    ರೈಲು ಹಳಿ ಮೇಲೆ ಸಿಲಿಂಡರ್‌ ಇರಿಸಿ ಹಳಿತಪ್ಪಿಸಲು ಯತ್ನ – ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಪಾರು

    ಡೆಹ್ರಾಡೂನ್: ಇಂದು ಮುಂಜಾನೆ ಉತ್ತರಾಖಂಡದ  (Uttarakhand) ರೂರ್ಕಿ ಬಳಿ ರೈಲ್ವೇ ಹಳಿಯ ಮೇಲೆ ಖಾಲಿ ಎಲ್‌ಪಿಜಿ ಸಿಲಿಂಡರ್ (LPG Cylinder) ಇರಿಸಿ ರೈಲನ್ನು (Indian Railway) ಹಳಿ ತಪ್ಪಿಸಲು ಯತ್ನಿಸಲಾಗಿದೆ.

    ಅದೃಷ್ಟವಶಾತ್ ಗೂಡ್ಸ್ ರೈಲಿನ ಲೋಕೋ ಪೈಲಟ್ ಸಿಲಿಂಡರ್‌ನ್ನು ಗುರುತಿಸಿದ್ದಾರೆ. ಇದರಿಂದ ಸಂಭಾವ್ಯ ಹಳಿತಪ್ಪುವಿಕೆಯನ್ನು ತಪ್ಪಿದೆ. ಬಳಿಕ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ.

    ಧಂಧೇರಾದಿಂದ ಸರಿಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಲಂಡೌರಾ ಮತ್ತು ಧಂಧೇರಾ ನಿಲ್ದಾಣಗಳ ನಡುವೆ ಬೆಳಿಗ್ಗೆ 6:35 ಕ್ಕೆ ಈ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸಿಬ್ಬಂದಿಯನ್ನು ಕಳುಹಿಸಲಾಯಿತು. ಸಿಲಿಂಡರ್ ಖಾಲಿಯಾಗಿದೆ ಎಂಬುದ್ನು ಖಚಿತಪಡಿಸಿಕೊಂಡು ಧಂಧೇರಾದಲ್ಲಿ ಸ್ಟೇಷನ್‌ಗೆ ತರಲಾಯಿತು. ಈ ಬಗ್ಗೆ ಸ್ಥಳೀಯ ಪೊಲೀಸರು ಹಾಗೂ ರೈಲ್ವೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭಾರತದಾದ್ಯಂತ ರೈಲು ಹಳಿತಪ್ಪಿಸುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚಾಗಿದೆ. ಆಗಸ್ಟ್‌ನಿಂದ ದೇಶಾದ್ಯಂತ ಇಂತಹ 18 ಪ್ರಯತ್ನಗಳು ನಡೆದಿವೆ ಎಂದು ಭಾರತೀಯ ರೈಲ್ವೆ ಇಲಾಖೆ ಬಹಿರಂಗಪಡಿಸಿದೆ.

    ಜೂನ್ 2023ರಿಂದ ಎಲ್‌ಪಿಜಿ ಸಿಲಿಂಡರ್‌ಗಳು, ಸೈಕಲ್‌ಗಳು, ಕಬ್ಬಿಣದ ರಾಡ್‌ಗಳು ಮತ್ತು ಸಿಮೆಂಟ್ ಬ್ಲಾಕ್‌ಗಳು ಸೇರಿದಂತೆ ವಿವಿಧ ವಸ್ತುಗಳನ್ನು ಇರಿಸಿದ 24 ಪ್ರಕರಣಗಳು ನಡೆದಿವೆ. ಇವುಗಳಲ್ಲಿ 15 ಘಟನೆಗಳು ಆಗಸ್ಟ್‌ನಲ್ಲಿ ಸಂಭವಿಸಿವೆ. ಸೆಪ್ಟೆಂಬರ್‌ನಲ್ಲಿ 5 ಘಟನೆಗಳು ನಡೆದಿವೆ.

  • ಕಲಬುರಗಿ ಹೋಟೆಲ್‌ನಲ್ಲಿ ಸಿಲಿಂಡರ್‌ ಸ್ಫೋಟ – 11 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

    ಕಲಬುರಗಿ ಹೋಟೆಲ್‌ನಲ್ಲಿ ಸಿಲಿಂಡರ್‌ ಸ್ಫೋಟ – 11 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

    ಕಲಬುರಗಿ: ಇಲ್ಲಿನ ಹೋಟೆಲ್‌ವೊಂದರಲ್ಲಿ ಅಡುಗೆ ಸಿಲಿಂಡರ್‌ ಸ್ಫೋಟಗೊಂಡಿದ್ದು (LPG Cylinder Blast), ಭಾರೀ ಅನಾಹುತ ಸಂಭವಿಸಿದೆ. 11 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

    ‌ಬೆಳ್ಳಂ ಬೆಳಗ್ಗೆ ಕಲಬುರಗಿಯ (Kalaburagi) ಸಪ್ತಗಿರಿ ಆರೆಂಜ್ ಹೋಟೆಲ್ ನಲ್ಲಿ ಘಟನೆದು ನಾಲ್ವರು ಹೋಟೆಲ್‌ ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ‌ ಬೆಂಕಿ ನಂದಿಸಿ, ಕಾರ್ಮಿಕರನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಅತ್ತೆಯ ಕೈ ಮುರಿದು ಬೈಕ್‌ಗಳಿಗೆ ಬೆಂಕಿ ಹಚ್ಚಿದ ಅಳಿಯ!

    ಘಟನೆಯಲ್ಲಿ ಕಾರ್ಮಿಕರಾದ ರಾಕೇಶ್, ಶಂಕರ್, ಗುರುಮೂರ್ತಿ, ಪ್ರಶಾಂತ್, ಸತ್ಯವಾನ ಶರ್ಮ್, ಅಪ್ಪಾರಾಯ, ಮಲ್ಲಿನಾಥ್, ವಿಠಲ್, ಮಹೇಶ್ ಲಕ್ಷ್ಮಣ ಸೇರಿ 10 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ಆರೋಪ – ಸಿಬಿಐನಿಂದ ಎಫ್‍ಐಆರ್

    ಬ್ರಹ್ಮಪುರ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ:  ವಿಧಾನಸೌಧದ ಎದುರು ಡಿಕೆಶಿ ಯೋಗ – ನಟಿ ಅನು ಪ್ರಭಾಕರ್‌, ಕ್ರಿಕೆಟಿಗ ಮನಿಷ್‌ ಪಾಂಡೆ ಸಾಥ್‌

  • ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ – 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿ!

    ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ – 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿ!

    ಕಾರವಾರ: ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು (LPG Cylinder Blast) ಮನೆಯ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ (UttaraKannada) ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ನಡೆದಿದೆ.

    ನಿಲೇಶ್ ತಾಳೇಕರ್ ಎಂಬುವವರ ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಪೀಠೋಪಕರಣ, ಫ್ರಿಜ್ , ವಾಶಿಂಗ್ ಮಿಷನ್, ಅಡುಗೆ ಸಾಮಗ್ರಿ ಸೇರಿ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದೆ. ಈ ಘಟನೆಯಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿಯಾಗಿವೆ. ಇದನ್ನೂ ಓದಿ: ಪಿಂಚಣಿ, ನರೇಗಾ ಹಣ ಸಾಲ ಮರುಪಾವತಿಗೆ ಹೊಂದಿಸದಂತೆ ʼಕೈʼ ಸರ್ಕಾರ ಆದೇಶ ನೀಡಲಿ: ಅಶೋಕ್ ಆಗ್ರಹ

    ಸ್ಫೋಟದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಮನೆ ಮಾಲೀಕ ನಿಲೇಶ್ ತಾಳೇಕರ್‌ ಗಾಯಗೊಂಡಿದ್ದಾರೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ (Fire Department) ಬೆಂಕಿ ನಂದಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಇದನ್ನೂ ಓದಿ: ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು 

  • ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ 100 ರೂ. ಇಳಿಕೆ – ಮಹಿಳಾ ದಿನಾಚರಣೆಗೆ ಮೋದಿ ಗಿಫ್ಟ್‌

    ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ 100 ರೂ. ಇಳಿಕೆ – ಮಹಿಳಾ ದಿನಾಚರಣೆಗೆ ಮೋದಿ ಗಿಫ್ಟ್‌

    ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳೆಯರಿಗೆ ಗುಡ್‌ ನ್ಯೂಸ್.  ಕೇಂದ್ರ ಸರ್ಕಾರ (Union Government)  ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ (LPG cylinder) ಬೆಲೆಯಲ್ಲಿ 100 ರೂ. ಕಡಿತಗೊಳಿಸಿದೆ.

    ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಹಿಳಾ ದಿನಾಚರಣೆಯಂದು (Women’s Day) ದರವನ್ನು ಕಡಿಮೆ ಮಾಡಿದ್ದೇವೆ ಎಂದು ಬರೆದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಶೃಂಗೇರಿ ಬಾಲಕಿ ರೇಪ್ ಕೇಸ್ – 53 ಆರೋಪಿಗಳ ಪೈಕಿ ತಾಯಿ ಸೇರಿ, ನಾಲ್ವರು ದೋಷಿಗಳು

    ಮೋದಿ ಪೋಸ್ಟ್‌ನಲ್ಲಿ ಏನಿದೆ?
    ಇಂದು  ಮಹಿಳಾ ದಿನ. ನಮ್ಮ ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 100 ರೂ. ಇಳಿಕೆ ಮಾಡಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ.

    ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮ ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ.  ಮಹಿಳೆಯರ ಸಬಲೀಕರಣ ಹಾಗೂ ಹೆಣ್ಣುಮಕ್ಕಳು ಸುಲಭವಾಗಿ ಜೀವನ ಸಾಗಿಸುವ  ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಪ್ರಯತ್ನವಾಗಿದೆ ಎಂದು ಬರೆದಿದ್ದಾರೆ.

     

  • Exclusive: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ – ಎದೆ ಝಲ್ ಎನಿಸುವಂತಿದೆ ಸಿಸಿಟಿವಿ ದೃಶ್ಯಗಳು

    Exclusive: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ – ಎದೆ ಝಲ್ ಎನಿಸುವಂತಿದೆ ಸಿಸಿಟಿವಿ ದೃಶ್ಯಗಳು

    ಬೆಂಗಳೂರು: ವೈಟ್ ಫೀಲ್ಡ್ ಬಳಿ ಬ್ರೂಕ್ ಫೀಲ್ಡ್‌ನ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಫೋಟ (Rameshwaram Cafe Blast) ಸಂಭವಿಸಿದ್ದು, ಎದೆ ಝಲ್ ಎನಿಸುವ ಸಿಸಿಟಿವಿ ದೃಶ್ಯಗಳು ಬೆಳಕಿಗೆ ಬಂದಿದೆ.

    ಬ್ಲಾಸ್ಟ್ ಸಂಭವಿಸೋದಕ್ಕೆ ಕೆಲವೇ ಕ್ಷಣಗಳಿಗೂ ಮುನ್ನ ಹೋಟೆಲಿನಲ್ಲಿ ಕೆಲವರು ಕ್ಯಾಶ್ ಕೌಂಟರ್ ಬಳಿ ಇದ್ದರೆ, ಇನ್ನು ಕೆಲವರು ಉಪಾಹಾರ ತೆಗೆದುಕೊಳ್ಳಲು ನಿಂತಿದ್ದರು. ಒಂದಷ್ಟು ಮಂದಿ ಊಟ ಮುಗಿಸಿ ಕೈತೊಳೆಯುವ ಜಾಗಕ್ಕೆ ತೆರಳುತ್ತಿದ್ದರು. ಈವೇಳೆ ಯಾರ ಊಹೆಗೂ ಮೀರಿದಂತೆ ಬಾಂಬ್ ಸ್ಫೋಟ ಸಂಭವಿಸಿದೆ. ಮಧ್ಯಾಹ್ನ 12:55ಕ್ಕೆ ಬಾಂಬ್ ಸ್ಫೋಟ ಸಂಭವಿಸಿದ್ದು, ಸ್ಫೋಟವಾಗುತ್ತಿದ್ದಂತೆ ದಟ್ಟ ಹೊಗೆ ಆವರಿಸಿದೆ. ಗ್ರಾಹಕರು ಮತ್ತು ಸಿಬ್ಬಂದಿ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ.

    ಸ್ಟೋಟದ ಭಯಾನಕ ದೃಶ್ಯಗಳು ಹೋಟೇಲ್ ಒಳಗಡೆ ಅಳವಡಿಸಿದ್ದ ಎರಡು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯಗಳನ್ನು `ಪಬ್ಲಿಕ್ ಟಿವಿ’ ಹಂಚಿಕೊಂಡಿದೆ. 10 ಸೆಕೆಂಡುಗಳಲ್ಲಿ ಎರಡು ಸ್ಫೋಟ ಸಂಭವಿಸಿದೆ. ಈ ವೇಳೆ ಕೆಲವರಿಗೆ ಕಣ್ಣು-ತಲೆಯ ಭಾಗಕ್ಕೆ ಪೆಟ್ಟಾಗಿದೆ. ಯುವತಿಯೊಬ್ಬಳ ಬಟ್ಟೆ ಸುಟ್ಟುಹೋಗಿದೆ. ಸ್ಫೋಟದ ತೀವ್ರತೆಗೆ ನಡುಗಿದ ಗ್ರಾಹಕರು ಗಾಯಾಳುಗಳನ್ನು ಎತ್ತಿಕೊಂಡು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

    ರಾಮೇಶ್ವರ ಕೆಫೆ ಎಂ.ಡಿ. ಸ್ಫೋಟಕ ಮಾಹಿತಿ:
    ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳನ್ನು ಗಮನಿಸಿದ್ದೇನೆ. 10 ಸೆಕೆಂಡುಗಳಲ್ಲಿ ಎರಡು ಬಾರಿ ಸ್ಫೋಟ ಸಂಭವಿಸಿದೆ. ಕೈತೊಳೆಯುವ ಜಾಗದಲ್ಲಿ ಸ್ಫೋಟ ಸಂಭವಿಸಿದೆ. ಅಲ್ಲಿ ಯಾವುದೇ ಸಿಲಿಂಡರ್ ಇಟ್ಟಿರಲಿಲ್ಲ. ಅಲ್ಲದೇ ಕೆಫೆಯಲ್ಲಿಟ್ಟಿದ್ದ ಸಿಲಿಂಡರ್‌ಗಳು ಸೇಫ್ ಆಗಿದೆ. ಸ್ಫೋಟ ಸಂಭವಿಸಿದ ಜಾಗದಲ್ಲಿ ಉದ್ಯೋಗಿಯೊಬ್ಬರ ಐಡಿ ಕಾರ್ಡ್ ಪತ್ತೆಯಾಗಿದೆ. ಬ್ಯಾಟರಿ ಬೋಲ್ಟ್‌ಗಳು  ಸಿಕ್ಕಿರೋದನ್ನ ಗಮನಿಸಿದ್ದೇನೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯುತ್ತಿದ್ದೇನೆ ಎಂದು ರಾಮೇಶ್ವರ ಕೆಫೆ ವ್ಯವಸ್ಥಾಪಕ ನಿರ್ದೇಶಕಿ ದಿವ್ಯಾ ಹೇಳಿದ್ದಾರೆ.

    ನಮಗೆ ಸಿಕ್ಕ ಮಾಹಿತಿ ಪ್ರಕಾರ, ಯಾರೋ ಗ್ರಾಹಕರ ರೀತಿ ಬಂದು ಬ್ಯಾಗ್ ಇಟ್ಟು ಹೋಗಿದ್ದಾರೆ. ಆ ಬ್ಯಾಗ್‌ನಿಂದ ಬ್ಲಾಸ್ಟ್ ಆಗಿದೆ. ಆತ ಬಂದು ಹೋಗಿರುವ ನಿಖರವಾದ ಸಮಯದ ಬಗ್ಗೆ ಮಾಹಿತಿ ಇಲ್ಲ. ಸಿಸಿಟಿವಿ ದೃಶ್ಯಗಳನ್ನು ಪೊಲೀಸರಿಗೆ ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ.

    ಒಟ್ಟು 150ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡ್ತಿದ್ದಾರೆ. ಘಟನೆಯಲ್ಲಿ ಮೂವರು ಸಿಬ್ಬಂದಿ ಹಾಗೂ ಓರ್ವ ಗ್ರಾಹಕರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುವ ಕೆಲಸ ಮಾಡಿದ್ದೇವೆ. ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ. ಒಟ್ಟಿನಲ್ಲಿ ಇದು ಸಿಲಿಂಡರ್‌ನಿಂದ ಸಂಭವಿಸಿರುವ ಬ್ಲಾಸ್ಟ್ ಅಲ್ಲ. ನಮ್ಮ ಸಿಲಿಂಡರ್‌ಗಳೆಲ್ಲವೂ ಸೇಫ್ ಆಗಿವೆ ಎಂದು ಹೇಳಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಂದೆ ಏನಾಗುತ್ತೆ ಅನ್ನೋದನ್ನು ಕಾದು ನೋಡಬೇಕು ಎಂದು ಹೇಳಿದ್ದಾರೆ.

  • Exclusive: 10 ಸೆಕೆಂಡುಗಳಲ್ಲೇ ಎರಡು ಬಾರಿ ಸ್ಫೋಟ – ರಾಮೇಶ್ವರಂ ಕೆಫೆ ಎಂಡಿ ಸ್ಫೋಟಕ ಮಾಹಿತಿ

    Exclusive: 10 ಸೆಕೆಂಡುಗಳಲ್ಲೇ ಎರಡು ಬಾರಿ ಸ್ಫೋಟ – ರಾಮೇಶ್ವರಂ ಕೆಫೆ ಎಂಡಿ ಸ್ಫೋಟಕ ಮಾಹಿತಿ

    ಬೆಂಗಳೂರು: ವೈಟ್ ಫೀಲ್ಡ್ ಬಳಿ ಬ್ರೂಕ್‌ ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ನಿಗೂಢ ಸ್ಫೋಟಕ್ಕೆ (Rameshwaram Cafe Blast) ಸಂಬಂಧಿಸಿದಂತೆ ರಾಮೇಶ್ವರಂ ಕೆಫೆ ವ್ಯವಸ್ಥಾಪಕ ನಿರ್ದೇಶಕಿ ದಿವ್ಯಾ ಸ್ಫೋಟಕ ಮಾಹಿತಿ ನೀಡಿದ್ದಾರೆ.

    ʻಪಬ್ಲಿಕ್ ಟಿವಿʼಯೊಂದಿಗೆ ಮಾತನಾಡಿದ ದಿವ್ಯಾ ಅವರು, ಸಿಸಿಟಿವಿ (CCTV) ದೃಶ್ಯಗಳನ್ನು ಗಮನಿಸಿದ್ದೇನೆ. 10 ಸೆಕೆಂಡುಗಳಲ್ಲಿ ಎರಡು ಬಾರಿ ಸ್ಫೋಟ ಸಂಭವಿಸಿದೆ. ಕೈತೊಳೆಯುವ ಜಾಗದಲ್ಲಿ ಸ್ಫೋಟ ಸಂಭವಿಸಿದೆ. ಅಲ್ಲಿ ಯಾವುದೇ ಸಿಲಿಂಡರ್ ಇಟ್ಟಿರಲಿಲ್ಲ. ಅಲ್ಲದೇ ಕೆಫೆಯಲ್ಲಿಟ್ಟಿದ್ದ ಸಿಲಿಂಡರ್‌ಗಳು (LPG Cylinder) ಸೇಫ್‌ ಆಗಿದೆ. ಸ್ಫೋಟ ಸಂಭವಿಸಿದ ಜಾಗದಲ್ಲಿ ಉದ್ಯೋಗಿಯೊಬ್ಬರ ಐಡಿ ಕಾರ್ಡ್ ಪತ್ತೆಯಾಗಿದೆ. ಬ್ಯಾಟರಿ ಬೋಲ್ಟ್‌ಗಳು ಸಿಕ್ಕಿರೋದನ್ನ ಗಮನಿಸಿದ್ದೇನೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

    ನಮಗೆ ಸಿಕ್ಕ ಮಾಹಿತಿ ಪ್ರಕಾರ, ಯಾರೋ ಗ್ರಾಹಕರ ರೀತಿ ಬಂದು ಬ್ಯಾಗ್‌ ಇಟ್ಟು ಹೋಗಿದ್ದಾರೆ. ಆ ಬ್ಯಾಗ್‌ನಿಂದ ಬ್ಲಾಸ್ಟ್‌ ಆಗಿದೆ. ಆತ ಬಂದು ಹೋಗಿರುವ ನಿಖರವಾದ ಸಮಯದ ಬಗ್ಗೆ ಮಾಹಿತಿ ಇಲ್ಲ. ಸಿಸಿಟಿವಿ ದೃಶ್ಯಗಳನ್ನು ಪೊಲೀಸರಿಗೆ ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ.

    ಒಟ್ಟು 150ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡ್ತಿದ್ದಾರೆ. ಘಟನೆಯಲ್ಲಿ ಮೂವರು ಸಿಬ್ಬಂದಿ ಹಾಗೂ ಓರ್ವ ಗ್ರಾಹಕರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುವ ಕೆಲಸ ಮಾಡಿದ್ದೇವೆ. ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ. ಒಟ್ಟಿನಲ್ಲಿ ಇದು ಸಿಲಿಂಡರ್‌ನಿಂದ ಸಂಭವಿಸಿರುವ ಬ್ಲಾಸ್ಟ್‌ ಅಲ್ಲ. ನಮ್ಮ ಸಿಲಿಂಡರ್‌ಗಳೆಲ್ಲವೂ ಸೇಫ್‌ ಆಗಿವೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಂದೆ ಏನಾಗುತ್ತೆ ಅನ್ನೋದನ್ನು ಕಾದು ನೋಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಮೇಶ್ವರ ಕೆಫೆಯಲ್ಲಿ ಸ್ಫೋಟ – ಸ್ಥಳಕ್ಕೆ ಭಯೋತ್ಪಾದನಾ ನಿಗ್ರಹ ದಳ ಎಂಟ್ರಿ

    ಈಗಾಗಲೇ ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳ ತಂಡ, ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿದೆ. ಡಿಜಿಪಿ ಅಲೋಕ್ ಮೋಹನ್ ಸಹ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಕೆಫೆಯಲ್ಲಿ ಭೀಕರ ಸ್ಫೋಟ – Photos

  • ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಲಾರಿ ಪಲ್ಟಿ – ತಪ್ಪಿದ ಭಾರೀ ಅನಾಹುತ

    ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಲಾರಿ ಪಲ್ಟಿ – ತಪ್ಪಿದ ಭಾರೀ ಅನಾಹುತ

    ಚಿಕ್ಕಮಗಳೂರು: ದಟ್ಟ ಮಂಜು ಕವಿದ ವಾತಾವರಣದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಲಾರಿ (Lorry) ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ನಡೆದಿದೆ.

    ಚಿಕ್ಕಮಗಳೂರಿನ ಕಳಸ ತಾಲೂಕಿನ ಬಾಳೆಹೊಳೆ ರಸ್ತೆಯ ಹಳುವಳ್ಳಿ ಸಮೀಪದ ಯಡ್ರಗೋಡು ಗ್ರಾಮದ ಬಳಿ ಘಟನೆ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆ ಕಣ್ತುಂಬಿಕೊಳ್ಳಲು ರಾಜ್ಯದಲ್ಲಿ ಸೋಮವಾರ ರಜೆ ಘೋಷಿಸಿ: ಸಿಎಂಗೆ ತೇಜಸ್ವಿ ಸೂರ್ಯ ಮನವಿ

    ಭದ್ರಾವತಿಯಿಂದ ಭರ್ತಿ ಎಲ್‌ಪಿಜಿ ಸಿಲಿಂಡರ್‌ಗಳನ್ನ (LPG Cylinder) ಹೊತ್ತ ಲಾರಿ ಕಳಸದಿಂದ ಬರುತ್ತಿತ್ತು. ಬೆಳಗ್ಗಿನ ಜಾವ 6:30ರ ಸುಮಾರಿಗೆ ದಟ್ಟ ಮಂಜು ಕವಿದಿದ್ದ ಹಿನ್ನೆಲೆಯಲ್ಲಿ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಲಾರಿ ಪಲ್ಟಿಯಾಗಿದೆ.

    ಅಪಘಾತದಲ್ಲಿ ಲಾರಿ ಚಾಲಕ ಆನಂದ್‌ಗೆ ಗಂಭೀರ ಗಾಯವಾಗಿ ಕಳಸ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯಲ್ಲಿ ನೂರಕ್ಕೂ ಹೆಚ್ಚು ಭರ್ತಿ ಸಿಲಿಂಡರ್‌ಗಳು ಇದ್ದವು. ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗುತ್ತಿದ್ದಂತೆ ಸಿಲಿಂಡರ್‌ಗಳು ಹೊರಗಡೆ ಚೆಲ್ಲಾಪಿಲ್ಲಿಯಾಗಿದ್ದವು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

    ಅಪಘಾತ ಸಂಭವಿಸಿದ ಕೆಲವೇ ಸಮಯದಲ್ಲಿ ಕಳಸ ತಾಲೂಕಿನ ಗ್ಯಾಸ್ ಏಜೆನ್ಸಿಯ ಸಿಬ್ಬಂದಿ ಮೋಹನ್ ಮತ್ತೊಂದು ವಾಹನ ತಂದು ಸಿಲಿಂಡರ್‌ಗಳನ್ನ ಬೇರೆಡೆ ಸಾಗಿಸಿದರು. ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸತತ ಹೀನಾಯ ಸೋಲಿನಿಂದ ಬೇಸರ – PCB ಅಧ್ಯಕ್ಷ ಸ್ಥಾನಕ್ಕೆ ಝಾಕಾ ಅಶ್ರಫ್ ಗುಡ್‌ಬೈ