Tag: Lucknow franchise

  • ಲಕ್ನೋ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ನೇಮಕ

    ಲಕ್ನೋ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ನೇಮಕ

    ಮುಂಬೈ: 15ನೇ ಆವೃತ್ತಿ ಐಪಿಎಲ್‍ಗೆ ಸೇರ್ಪಡೆಗೊಂಡಿರುವ ನೂತನ ತಂಡ ಲಕ್ನೋ ಫ್ರಾಂಚೈಸ್‍ನ ಮೆಂಟರ್ ಆಗಿ ಭಾರತ ತಂಡದ ಮಾಜಿ ಆಟಗಾರ ಬಿಜೆಪಿ ಸಂಸದ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ.

    ಟೀಂ ಇಂಡಿಯಾ ಪರ ಆರಂಭಿಕರಾಗಿ ಆಡುತ್ತಿದ್ದ ಗೌತಮ್ ಗಂಭೀರ್ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಬಳಿಕ ಐಪಿಎಲ್‍ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಡೆಲ್ಲಿ ಕಾಪಿಟಲ್ಸ್ ತಂಡದ ಪರ ನಾಯಕನಾಗಿ ಆಡಿದ್ದರು. ಕೋಲ್ಕತ್ತಾ ಪರ ಎರಡು ಬಾರಿ ಐಪಿಎಲ್ ಟ್ರೋಫಿ ಗೆದ್ದ ನಾಯಕರಾಗಿದ್ದರು. ಇದೀಗ ಮತ್ತೆ ಐಪಿಎಲ್‍ನಲ್ಲಿ ಕಾಣಿಸಿಕೊಳ್ಳುವ ಅವಕಾಶ ಗಂಭೀರ್‌ಗೆ ಒಲಿದು ಬಂದಿದೆ. ಇದನ್ನೂ ಓದಿ: ಐಪಿಎಲ್‍ನ ನೂತನ ಫ್ರಾಂಚೈಸ್ ಲಕ್ನೋ ತಂಡದ ಕೋಚ್ ಆಗಿ ಆ್ಯಂಡಿ ಫ್ಲವರ್ ನೇಮಕ

    ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಸಂಜೀವ್ ಗೋಯೆಂಕಾ ಗ್ರೂಪ್, ಲಕ್ನೋ ತಂಡ ಗೌತಮ್ ಗಂಭೀರ್ ಅವರನ್ನು ಮೆಂಟರ್ ಆಗಿ ತಂಡಕ್ಕೆ ಸೇರಿಸಿಕೊಂಡಿದೆ. ಆರ್‌ಪಿಎಸ್‌ಜಿ ಕುಟುಂಬಕ್ಕೆ ಸ್ವಾಗತ ಎಂದು ಬರೆದುಕೊಂಡಿದೆ. ನಿನ್ನೆ ಲಕ್ನೋ ಫ್ರಾಂಚೈಸ್ ಕೋಚ್ ಆಗಿ ಜಿಂಬಾಬ್ವೆ ತಂಡದ ಮಾಜಿ ನಾಯಕ ಆ್ಯಂಡಿ ಫ್ಲವರ್‌ರನ್ನು ನೇಮಿಸಿಕೊಂಡಿತ್ತು. ಇದೀಗ ಗಂಭೀರ್ ಕೂಡ ತಂಡ ಸೇರುವ ಮೂಲಕ ಉತ್ತಮವಾದ ತಂಡ ಕಟ್ಟುವ ಯೋಜನೆಯಲ್ಲಿ ಲಕ್ನೋ ತಂಡವಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರೋಹಿತ್, ಜಡೇಜಾ ಪ್ರಾಕ್ಟೀಸ್

  • ಐಪಿಎಲ್‍ನ ನೂತನ ಫ್ರಾಂಚೈಸ್ ಲಕ್ನೋ ತಂಡದ ಕೋಚ್ ಆಗಿ ಆ್ಯಂಡಿ ಫ್ಲವರ್ ನೇಮಕ

    ಐಪಿಎಲ್‍ನ ನೂತನ ಫ್ರಾಂಚೈಸ್ ಲಕ್ನೋ ತಂಡದ ಕೋಚ್ ಆಗಿ ಆ್ಯಂಡಿ ಫ್ಲವರ್ ನೇಮಕ

    ಮುಂಬೈ: 15ನೇ ಆವೃತ್ತಿ ಐಪಿಎಲ್‍ಗೆ ಎಂಟ್ರಿ ಕೊಟ್ಟಿರುವ ನೂತನ ತಂಡ ಲಕ್ನೋ ಫ್ರಾಂಚೈಸ್‍ನ ಕೋಚ್ ಆಗಿ ಜಿಂಬಾಬ್ವೆ ತಂಡದ ಮಾಜಿ ನಾಯಕ ಆಂಡ್ಯಿ ಫ್ಲವರ್ ನೇಮಕಗೊಂಡಿದ್ದಾರೆ.

    ನಾನು ಲಕ್ನೋ ತಂಡವನ್ನು ಸೇರಿಕೊಳ್ಳಲು ತುಂಬಾ ಕಾತುರನಾಗಿದ್ದು ಇದು ನನಗೆ ಸಿಕ್ಕ ಅತ್ಯುತ್ತಮ ಅವಕಾಶವಾಗಿದೆ. ಭಾರತ ಕ್ರಿಕೆಟ್‍ಗೆ ನೀಡುವ ಪ್ರಾಶಸ್ತ್ಯದ ಭಾಗವಾಗಿ ಐಪಿಎಲ್ ಹುಟ್ಟುಕೊಂಡಿದ್ದು, ಇದೀಗ ಸಂಜೀವ್ ಗೋಯೆಂಕಾ ಅವರ ಲಕ್ನೋ ಟೀಮ್ ಜೊತೆ ಕೈಜೋಡಿಸುತ್ತಿದ್ದೇನೆ ಎಂದು ಸ್ಥಳೀಯ ಮಾಧ್ಯಮವೊಂದರಲ್ಲಿ ಆಂಡ್ಯಿ ಫ್ಲವರ್ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರೋಹಿತ್, ಜಡೇಜಾ ಪ್ರಾಕ್ಟೀಸ್

    ಆಂಡ್ಯಿ ಫ್ಲವರ್ ಈ ಹಿಂದೆ ಇಂಗ್ಲೆಂಡ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ ಅನುಭವಿದೆ. ಜೊತೆಗೆ ಐಪಿಎಲ್‍ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಂಡ್ಯಿ ಫ್ಲವರ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಆಂಡ್ಯಿ ಫ್ಲವರ್ ಕೋಚ್ ಆಗಿ ಸೇರ್ಪಡೆಗೊಳ್ಳುತ್ತಿದ್ದಂತೆ ಕನ್ನಡಿಗ ಕೆ.ಎಲ್ ರಾಹುಲ್ ಕೂಡ ಲಕ್ನೋ ತಂಡವನ್ನು ಸೇರ್ಪಡೆಗೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ: ಹೇಳದೇ ಕೇಳದೇ ನಾಯಕ ಪಟ್ಟದಿಂದ ತೆಗೆದ್ರು – ಮೌನ ಮುರಿದ ಕೊಹ್ಲಿ