ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ನಂತರ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಘಟನೆ ಕುರಿತು ಮೂವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನಾವ್‍ನ ಹೆಚ್ಚುವರಿ ಎಸ್ಪಿ ಶಶಿ ಶೇಖರ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಅವನನ್ನ ಪ್ಲೀಸ್ ಬಿಡಬೇಡಿ, ಅವನಿಗೆ ಶಿಕ್ಷೆಯಾಗಲೇ ಬೇಕು: ಪೊಲೀಸರನ್ನು ಬೇಡಿಕೊಂಡ ಆಸಿಡ್ ಸಂತ್ರಸ್ತೆ
ನರ್ಸಿಂಗ್ ಹೋಂನ ನಿರ್ವಾಹಕ ಸೇರಿದಂತೆ ಮೂವರನ್ನು ಆರೋಪಿಗಳೆಂದು ಹೆಸರಿಸಿದ್ದಾರೆ. ಘಟನೆ ಸಂಬಂಧ ಎಫ್‍ಐಆರ್ ದಾಖಲಾಗಿದೆ. ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಲಕ್ನೋ: ಹಿಂದಿಯನ್ನು ಇಷ್ಟಪಡದವರು ವಿದೇಶಿಯರೆಂದು ನಾನು ಭಾವಿಸುತ್ತೇನೆ. ಭಾಷೆ ಬಾರದವರು ದೇಶವನ್ನು ಬಿಟ್ಟು ಹೋಗಬಹುದು ಎಂದು ಹೇಳುವ ಮೂಲಕ ಉತ್ತರ ಪ್ರದೇಶದ ಮೀನುಗಾರಿಕೆ ಸಚಿವ ಸಂಜಯ್ ನಿಶಾದ್ ವಿವಾದಕ್ಕೆ ಸಿಕ್ಕಿಕೊಂಡಿದ್ದಾರೆ.
ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಕನ್ನಡ ನಟ ಕಿಚ್ಚ ಸುದೀಪ್ ಅವರ ಟ್ವೀಟ್ ವಾರ್ ಈಗ ಎಲ್ಲಕಡೆ ದೊಡ್ಡ ಸುದ್ದಿಯಾಗಿದೆ. ಈ ವಾರ್ ಸಿನಿರಂಗದಲ್ಲಿ ಮಾತ್ರವಲ್ಲ ರಾಜಕೀಯಕ್ಕೂ ಪ್ರವೇಶ ಮಾಡಿದ್ದು ಭಾಷಾ ಚರ್ಚೆ ನಡೆಯುತ್ತಿದೆ. ಪರಿಣಾಮ ಈ ಕುರಿತು ನಿಶಾದ್ ಅವರನ್ನು ಮಾಧ್ಯಮಗಳು ಪ್ರಶ್ನಿಸಿದಾಗ ಅವರು, ಭಾರತದಲ್ಲಿ ವಾಸಿಸಲು ಬಯಸುವವರು ಹಿಂದಿಯನ್ನು ಪ್ರೀತಿಸಬೇಕಾಗುತ್ತದೆ. ನೀವು ಹಿಂದಿಯನ್ನು ಪ್ರೀತಿಸದಿದ್ದರೆ, ನೀವು ವಿದೇಶಿ ಅಥವಾ ವಿದೇಶಿ ಶಕ್ತಿಗಳೊಂದಿಗೆ ಸಂಬಂಧ ಹೊಂದಿದ್ದೀರಿ ಎಂದು ಭಾವಿಸಲಾಗುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಜಮೀನು ಹಣ ನೀಡಲ್ಲ ಎಂದು ತಂದೆಯ 13 ಲಕ್ಷ ರೂ. ಕದ್ದ ಮಗ
ನಾವು ಪ್ರಾದೇಶಿಕ ಭಾಷೆಗಳನ್ನು ಗೌರವಿಸುತ್ತೇವೆ. ಆದರೆ ಈ ದೇಶ ಒಂದೇ ಮತ್ತು ಭಾರತದ ಸಂವಿಧಾನವು ಭಾರತವು ಹಿಂದೂಸ್ಥಾನ್ ಎಂದು ಹೇಳುತ್ತದೆ. ಅಂದರೆ ಹಿಂದಿ ಮಾತನಾಡುವವರಿಗೆ ಒಂದು ಸ್ಥಳ. ಹಿಂದೂಸ್ಥಾನವು ಹಿಂದಿ ಮಾತನಾಡದವರಿಗೆ ಇರುವ ಸ್ಥಳವಲ್ಲ. ಅವರು ಈ ದೇಶವನ್ನು ಬಿಟ್ಟು ಬೇರೆಡೆ ಹೋಗಬೇಕು ಎಂದು ಆಕ್ರೋಶ ಹೊರಹಾಕಿದರು.
ಕಾನೂನಿನ ಪ್ರಕಾರ ಹಿಂದಿ ರಾಷ್ಟ್ರೀಯ ಭಾಷೆಯಾಗಿದೆ. ಕಾನೂನನ್ನು ಉಲ್ಲಂಘಿಸುವ ಯಾರಾದರೂ ಅವರು ಎಷ್ಟೇ ದೊಡ್ಡ ರಾಜಕಾರಣಿ ಅಥವಾ ಶಕ್ತಿಶಾಲಿಯಾಗಿದ್ದರೂ ಅವರನ್ನು ಕಂಬಿ ಹಿಂದೆ ಹಾಕಬೇಕು. ಕೆಲವರು ಹಿಂದಿ ಮಾತನಾಡಲು ನಿರಾಕರಿಸುವ ಮೂಲಕ ದೇಶದ ವಾತಾವರಣವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಇಂತಹ ಅಂಶಗಳು ದೇಶದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸುತ್ತೆ. ಆದರೆ ಇದಕ್ಕೆ ತಕ್ಕ ಉತ್ತರವನ್ನು ನೀಡುತ್ತಾರೆ ಎಂದು ಹೇಳಿದರು.
ಸಂಜಯ್ ನಿಶಾದ್ ಅವರು ನಿರ್ಬಲ್ ಇಂಡಿಯನ್ ಶೋಷಿತ್ ಹಮಾರಾ ಆಮ್(NISHAD) ದಳದ ಮುಖ್ಯಸ್ಥರಾಗಿದ್ದಾರೆ. ಈ ಪಕ್ಷವನ್ನು ಸಾಮಾನ್ಯವಾಗಿ ಎಲ್ಲರೂ ನಿಶಾದ್ ಪಕ್ಷ ಎಂದೇ ಕರೆಯುತ್ತಾರೆ. ಈ ಪಕ್ಷವು ಆಡಳಿತಾರೂಢ ಬಿಜೆಪಿಯೊಂದಿಗೆ ಮಿತ್ರ ಪಕ್ಷವಾಗಿ ಉತ್ತರಪ್ರದೇಶದಲ್ಲಿ ಕೆಲಸ ಮಾಡುತ್ತಿದೆ. ಇದನ್ನೂ ಓದಿ: ವಿದ್ಯುತ್ ಸಮಸ್ಯೆಗೆ ಮೋದಿ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ: ಚಿದಂಬರಂ ವ್ಯಂಗ್ಯ
ಸಂವಿಧಾನವು ಯಾವುದೇ ಭಾಷೆಗೆ ‘ರಾಷ್ಟ್ರೀಯ ಭಾಷೆ’ ಸ್ಥಾನಮಾನವನ್ನು ನೀಡುವುದಿಲ್ಲ. ಎಂಟನೇ ಶೆಡ್ಯೂಲ್ 22 ‘ಅಧಿಕೃತ ಭಾಷೆಗಳನ್ನು’ ಪಟ್ಟಿ ಮಾಡಲಾಗಿದೆ. ಅಧಿಕೃತ ಭಾಷೆಗಳ ಕಾಯಿದೆ, 1963, ಕೇಂದ್ರ ಸರ್ಕಾರದ ಅಧಿಕೃತ ಉದ್ದೇಶಗಳಿಗಾಗಿ ಬಳಸಲು ಇಂಗ್ಲಿಷ್ ಮತ್ತು ಹಿಂದಿ ಭಾಷೆಯನ್ನು ಗೊತ್ತುಪಡಿಸಲಾಗಿದೆ.
ಲಕ್ನೋ: ಗಾರ್ಡನ್ಸ್ ಗ್ಯಾಲೇರಿಯಾ ಮಾಲ್‍ನಲ್ಲಿ ವ್ಯಕ್ತಿಯೊಬ್ಬನ ಹತ್ಯೆಗೆ ಸಂಬಂಧಿಸಿ ಒಂಬತ್ತು ಜನರಲ್ಲಿ 7 ಮಂದಿಯನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.
ಘಟನೆ ನಡೆದ ಲಾಸ್ಟ್ ಲೆಮನ್ಸ್ ಬಾರ್‌ನ ಇಬ್ಬರು ಮಾಲ್ ಭದ್ರತಾ ಸಿಬ್ಬಂದಿ ಮತ್ತು ಐವರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ಒಟ್ಟು ಒಂಬತ್ತು ಜನರು ಕೊಲೆಗೆ ಸಂಪರ್ಕ ಹೊಂದಿದ್ದರು. ಅವರಲ್ಲಿ ಎಂಟು ಜನರನ್ನು ಗುರುತಿಸಲಾಗಿದೆ. ಆದರೆ ಕೊನೆಯ ವ್ಯಕ್ತಿಯ ಗುರುತು ತಿಳಿದಿಲ್ಲ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಇದನ್ನೂ ಓದಿ: ನಿರ್ಗತಿಕನಿಗೆ ಸ್ನಾನ ಮಾಡಿಸಿದ ಪೊಲೀಸ್ ಆಫೀಸರ್ – ಸಾರ್ವಜನಿಕರಿಂದ ಭಾರೀ ಮೆಚ್ಚುಗೆ
ಏನಿದು ಘಟನೆ?
ಸೋಮವಾರ ರಾತ್ರಿ ನೋಯ್ಡಾದ ಸೆಕ್ಟರ್-38 ರ ಗಾರ್ಡನ್ಸ್ ಗ್ಯಾಲೇರಿಯಾ ಮಾಲ್‍ನಲ್ಲಿ ಲಾಸ್ಟ್ ಲೆಮನ್ಸ್ ಬಾರ್‌ನ ಬೌನ್ಸರ್‌ಗಳಿಂದ ಬಿಹಾರದ ಚಾಪ್ರಾದ ಬ್ರಿಜೇಶ್ ರೈ ಎಂಬ 30 ವರ್ಷದ ವ್ಯಕ್ತಿಗೆ ಮಾರಣಾಂತಿಕವಾಗಿ ಥಳಿಸಿ ಹಲ್ಲೆ ಮಾಡಲಾಗಿತ್ತು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ – ಪುಂಡರ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗಕ್ಕೆ ಪ್ಲ್ಯಾನ್
ಬಿಲ್ ಪಾವತಿ ವಿಚಾರವಾಗಿ ವಾಗ್ವಾದ ನಡೆದಿದ್ದು, ವಾದವು ಅತಿರೇಕಕ್ಕೇರಿ ಜಗಳಕ್ಕೆ ತಿರುಗಿತ್ತು. ಅಲ್ಲಿ ಬೌನ್ಸರ್‌ಗಳು ಬ್ರಿಜೇಶ್‍ನನ್ನು ಥಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಈ ವೇಳೆ ತೀವ್ರ ಗಾಯಗೊಂಡಿದ್ದ ಬ್ರಿಜೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದರು.
ನೋಯ್ಡಾದ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ರಣವಿಜಯ್ ಸಿಂಗ್ ಪ್ರಕಾರ, ಬಾರ್‌ನಲ್ಲಿದ್ದ ಜನರು ಬಿಲ್‍ಗಾಗಿ ಜಗಳವಾಡಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬ್ರಿಜೇಶ್ ಜೊತೆಗಿದ್ದವರ ಹೇಳಿಕೆಯನ್ನೂ ಪಡೆಯಲಾಗುವುದು, ನಂತರ ಕೊಲೆಗೆ ನಿಜವಾದ ಕಾರಣ ತಿಳಿಯಲಿದೆ ಎಂದು ತಿಳಿಸಿದರು.
ಲಕ್ನೋ: ನರ್ಸ್ ತೋಳುನಿಂದ ಜಾರಿ ಬಿದ್ದು ನವಜಾತ ಶಿಶು ಸಾವನ್ನಪ್ಪಿರುವ ಘಟನೆ ಲಕ್ನೋದ ಚಿನ್ಹಾಟ್‍ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಹೆರಿಗೆಯಾದ ಬಳಿಕ ನರ್ಸ್ ಮಗುವನ್ನು ಟವೆಲ್‍ನಲ್ಲಿ ಸುತ್ತಿದೇ ಮೇಲಕ್ಕೆತ್ತಿದ್ದು, ಮಗು ಜಾರಿ ನೆಲಕ್ಕೆ ಬಿದ್ದಿದೆ. ಇದನ್ನು ಕಂಡು ಮಗುವಿನ ತಾಯಿ ಕಿರುಚಾಡಲು ಆರಂಭಿಸಿದ್ದು, ಈ ಶಬ್ಧ ಕೇಳಿ ಮನೆಯವರು ಲೇಬರ್ ರೂಮ್‍ಗೆ ಹೋಗಲು ಪ್ರಯತ್ನಿಸಿದರು. ಈ ವೇಳೆ ಆಸ್ಪತ್ರೆ ಅಧಿಕಾರಿಗಳು ಅವರನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆದರೂ ಮಗು ಆರೋಗ್ಯವಾಗಿ ಜನಿಸಿದೆಯೇ ಎಂಬುವುದನ್ನು ತಿಳಿದುಕೊಳ್ಳಲು ಕುಟುಂಬಸ್ಥರು ಕೊಠಡಿಗೆ ನುಗ್ಗಿದ್ದಾರೆ. ಈ ವೇಳೆ ಕೆಳಗೆ ಬಿದ್ದಿದ್ದ ಮಗುವನ್ನು ನರ್ಸ್ ಒಂದು ಕೈಯಲ್ಲಿ ಹಿಡಿದುಕೊಂಡಿರುವುದನ್ನು ನೋಡಿದ್ದಾರೆ. ಇದನ್ನೂ ಓದಿ:ರಥೋತ್ಸವದಲ್ಲಿ ವಿದ್ಯುತ್ ತಗುಲಿ ಇಬ್ಬರು ಮಕ್ಕಳು ಸೇರಿ 11 ಮಂದಿ ದುರ್ಮರಣ
ಮಗು ಸತ್ತಿದ್ದರೂ, ಮಗು ಬದುಕಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು, ವೈದ್ಯರು ಹಾಗೂ ಸಿಬ್ಬಂದಿ ಸುಳ್ಳನ್ನು ಹೇಳಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಕುಟುಂಬಸ್ಥರು ಚಿನ್ಹತ್ ಪೊ ಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದೀಗ ಪೊಲೀಸರು ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ವೇಳೆ ಮಗುವಿನ ತಲೆಯ ಮೇಲೆ ಗಾಯದ ಗುರುತಿರುವುದು ಬಹಿರಂಗಗೊಂಡಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ – ಮೌಲ್ವಿ ವಾಸೀಂ ಪಠಾಣ್ ಇಂದು ಕೋರ್ಟ್‍ಗೆ
ಲಕ್ನೋ: 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಅಡಿ ಉತ್ತರ ಪ್ರದೇಶದ ಚರ್ಚ್ ಪಾದ್ರಿಯನ್ನು ಬಂಧಿಸಲಾಗಿದೆ.
ಚಾಂದಿನಗರ ಪ್ರದೇಶದ ಗ್ರಾಮವೊಂದರಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ, ಆಕೆಯ ಮಗಳು ಸೈಕ್ಲಿಂಗ್‍ಗಾಗಿ ಚರ್ಚ್‍ಗೆ ಹೋಗಿದ್ದ ವೇಳೆ ಪಾದ್ರಿ ಆಲ್ಬರ್ಟ್ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ನೀರಜ್ ಜಾದೂನ್ ತಿಳಿಸಿದ್ದಾರೆ. ಇದನ್ನೂ ಓದಿ:ಬರಲಿ ಚೆಂದ ಬರಲಿ ನ್ಯೂಸ್ ಹಾಕ್ರಿ – ಮಾಧ್ಯಮಗಳ ಮುಂದೆ ಆರೋಪಿಗಳ ದರ್ಪ
ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿ ಬಾಲಕಿಗೆ ಬೆದರಿಕೆ ಹಾಕಿದ್ದಾನೆ. ಆದರೆ, ಬಾಲಕಿ ಮನೆಗೆ ಬಂದ ಬಳಿಕ ತನಗಾದ ಸಂಕಷ್ಟವನ್ನು ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಶಾಲಾ ಕೊಠಡಿಯಲ್ಲೇ ಶಿಕ್ಷಕಿ ಜೊತೆ ಪ್ರಿನ್ಸಿಪಾಲ್ ರೋಮ್ಯಾನ್ಸ್ -ಗ್ರಾಮಸ್ಥರು ಆಕ್ರೋಶ
ಲಕ್ನೋ: ಆಗ್ರಾದಲ್ಲಿ ಪೊಲೀಸರ ಅನುಮತಿಯಿಲ್ಲದೆ ಮಸೀದಿಯ ಮುಂಭಾಗದ ರಸ್ತೆಯಲ್ಲಿ ನಮಾಜ್ ಮಾಡಿದ 150ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ವಿರೋಧಿಸಿ ಹಿಂದೂ ಸಂಘನೆಗಳು ಪ್ರತಿಭಟನೆ ನಡೆಸಿದ ನಂತರ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸುವಂತೆ ಆದೇಶ ಹೊರಡಿಸಿದೆ. ಆದರೂ ಆದೇಶ ಹೊರಡಿಸಿದ ಕೆಲವೇ ದಿನಗಳಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸೆಕ್ಷನ್ 144 ಉಲ್ಲಂಘಿಸಿದ್ದು, ಧಾರ್ಮಿಕ ಭಾವನೆಯನ್ನು ಘಾಸಿಗೊಳಿಸಿದೆ ಎಂದು ಹೇಳಿ ಪೊಲೀಸರು ಸಾರ್ವಜನಿಕ ಆಸ್ತಿಗೆ ಹಾನಿ ತಡೆ ಕಾಯ್ದೆ ಪ್ರಕರಣ ದಾಖಲಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಇದನ್ನೂ ಓದಿ: ಯಾರೋ ಒಬ್ಬ ಮೌಲ್ವಿ ತಪ್ಪು ಮಾಡಿದ್ರೆ ಎಲ್ಲರೂ ತಪ್ಪು ಮಾಡಿದ್ದಾರೆ ಎಂದರ್ಥವಲ್ಲ: ಸಿದ್ದು
ಸರೋಜಿನಿ ನಾಯ್ಡು ಮೆಡಿಕಲ್ ಕಾಲೇಜು ರಸ್ತೆಯಲ್ಲಿರುವ ಇಮ್ಲಿವಾಲಿ ಮುಂಭಾಗದ ಮಸೀದಿ ರಸ್ತೆಯಲ್ಲಿ 5 ದಿನಗಳ ಕಾಲ ರಾತ್ರಿ 9 ರಿಂದ 11 ಗಂಟೆ ವರೆಗೆ ಭಕ್ತರಿಗೆ ನಮಾಜ್ ಮಾಡಲು ಅನುಮತಿ ನೀಡಲಾಗಿತ್ತು. ಇದಕ್ಕಾಗಿ ಸ್ಥಳೀಯ ಮಳಿಗೆದಾರರು ಹಾಗೂ ಅಡಳಿತದ ಒಪ್ಪಿಗೆಯನ್ನೂ ಪಡೆದಿದ್ದರು. ಆದರೆ ಈ ವರ್ಷ ರಸ್ತೆಯಲ್ಲಿ ಪ್ರಾರ್ಥನೆ ಮಾಡಲು ಹಿಂದೂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಅಲ್ಲದೆ ಹನುಮಾನ್ ಚಾಲೀಸಾ ಪಠಿಸುವುದಾಗಿಯೂ ಬೆದರಿಕೆ ಹಾಕಿದ್ದವು. ಹೀಗಾಗಿ ಅನಿರೀಕ್ಷಿತ ಕೋಮು ಸಂಘರ್ಷವನ್ನು ತಪ್ಪಿಸಲು ಜಿಲ್ಲಾಡಳಿತ ತಕ್ಷಣ ಅನುಮತಿ ಹಿಂಪಡೆಯಿತು. ಇದನ್ನೂ ಓದಿ: ಕುಂಕುಮ ಇಟ್ಟವರು ಯಾರು ಬಾಂಬ್ ಹಾಕಿಲ್ಲ, ಬಾಂಬ್ ಹಾಕೋರು ಟೋಪಿ ಹಾಕಿದವರು: ಸಿ.ಟಿ ರವಿ
ಸಾಂದರ್ಭಿಕ ಚಿತ್ರ
ಇಮ್ಲಿವಾಲಿ ಮಸೀದಿ ಮುಂಭಾಗದ ರಸ್ತೆಯಲ್ಲಿ ಕಳೆದ 40 ವರ್ಷಗಳಿಂದ ನಮಾಜ್‌ಗೆ ಅವಕಾಶ ನೀಡಲಾಗುತ್ತಿತ್ತು ಎಂದು ಮಸೀದಿಯ ವ್ಯವಸ್ಥಾಪಕ ಇರ್ಫಾನ್ ಸಲೀಂ ಮತ್ತು ಅವರ ಬೆಂಬಲಿಗರು ಹೇಳಿದರು. ಆದರೆ ಈ ಬಾರಿ ಸಂಜಯ್ ಜಾಟ್ ಅವರ ನೇತೃತ್ವದಲ್ಲಿ ಹಿಂದೂ ಮಹಾಸಭಾದ ಸದಸ್ಯರು ಪ್ರಾರ್ಥನಾ ಸ್ಥಳಕ್ಕೆ ಆಗಮಿಸಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಬೆದರಿಕೆ ಹಾಕಿದರು. ಹಿಂದುತ್ವ ಸಂಘಟನೆಗಳ ಒತ್ತಡಕ್ಕೆ ಮಣಿದು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಹೇಳಲಾಗಿದೆ.
ಲಕ್ನೋ: ಉತ್ತರ ಪ್ರದೇಶ ಸರ್ಕಾರದ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಸೋಮವಾರ ಹ್ಯಾಕ್ ಮಾಡಲಾಗಿದೆ.
ಶನಿವಾರ ಮುಖ್ಯಮಂತ್ರಿ ಕಚೇರಿಯ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಿದ ಎರಡು ದಿನಗಳ ನಂತರ ಟ್ವಿಟ್ಟರ್ ಖಾತೆಯಿಂದ ಮುಖ್ಯಮಂತ್ರಿಗಳ ಡಿಸ್‍ಪ್ಲೇ ಚಿತ್ರವನ್ನು ಹ್ಯಾಕರ್‌ಗಳು ತೆಗೆದುಹಾಕಿದ್ದರು.
ಸೋಮವಾರ ಉತ್ತರ ಪ್ರದೇಶ ಸರ್ಕಾರದ ಅಧಿಕೃತ ಖಾತೆಯಿಂದ ವಿಚಿತ್ರ ಟ್ವೀಟ್‍ಗಳನ್ನು ಪೋಸ್ಟ್ ಮಾಡಲಾಗಿದೆ. ಸ್ವಲ್ಪ ಸಮಯದ ನಂತರ ಟ್ವೀಟ್‍ಗಳನ್ನು ಅಳಿಸಲಾಗಿದೆ. ನಂತರದ ಟ್ವೀಟ್‍ಗಳಲ್ಲಿ, ಹಲವಾರು ಅಸಂಬಂಧ ಖಾತೆಗಳನ್ನು ಟ್ಯಾಗ್ ಮಾಡಲಾಗಿದೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ಅಶ್ಲೀಲ ವೀಡಿಯೋ ಪೋಸ್ಟ್: ದೂರು ದಾಖಲು
ಲಕ್ನೋ: ಉತ್ತರ ಪ್ರದೇಶದ ಪಿಜಿಐ ಪೊಲೀಸ್ ಠಾಣಾ ವ್ಯಾಪ್ತಿಯ ರೇವ್ತಾಪುರ್ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ (ಎಸ್‍ಪಿ) ಮುಖಂಡರೊಬ್ಬರನ್ನು ಬರ್ಬರವಾಗಿ ಥಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಂಭೀರ ಗಾಯಗೊಂಡಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತ ರೋಹಿತ್ (26) ಮೇಲೆ ಸಚಿನ್ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದಾರೆ. ಕಬ್ಬಿಣದ ಕೋಲುಗಳು, ಹರಿತವಾದ ಆಯುಧಗಳು ಮತ್ತು ಲಾಠಿಗಳಿಂದ ತೀವ್ರವಾಗಿ ಥಳಿಸಿದ್ದಾರೆ. ಈ ವೇಳೆ ಅವರನ್ನು ತಕ್ಷಣ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ಅಶ್ಲೀಲ ವೀಡಿಯೋ ಪೋಸ್ಟ್: ದೂರು ದಾಖಲು
ಮೃತರ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಸಚಿನ್ ಮತ್ತು ಐವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲಕ್ನೋ: ಹಾರ್ಡ್‍ವೇರ್ ಅಂಗಡಿಯನ್ನು ದರೋಡೆ ಮಾಡಿದ ನಂತರ ಕಳ್ಳರು ಡ್ಯಾನ್ಸ್ ಮಾಡಿರುವ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.
ಉತ್ತರ ಪ್ರದೇಶದ ಚಾ ಅಂಡೌಲಿ ಎಂಬಲ್ಲಿ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರ ನಿವಾಸದ ಬಳಿ ಶನಿವಾರ ಈ ಘಟನೆ ನಡೆದಿದೆ. ಉತ್ತರ ಪ್ರದೇಶದ ಚಂದೌಲಿಯಲ್ಲಿ ಹಾರ್ಡ್‍ವೇರ್ ಅಂಗಡಿಯಲ್ಲಿ ಕಳ್ಳತನ ಮಾಡಿದ ನಂತರ ಕಳ್ಳ ಅಂಗಡಿಯೊಳಗೆ ಡ್ಯಾನ್ಸ್ ಮಾಡಲು ಪ್ರಾರಂಭಿಸಿದನು. ಕಳ್ಳ ಖುಷಿಯಲ್ಲಿ ತೇಲಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಬಂಡೀಪುರದಲ್ಲಿ ಅವಳಿ ಮರಿಗಳಿಗೆ ಜನ್ಮ ಕೊಟ್ಟ ಕಾಡಾನೆ
ಅಂಗಡಿಯೊಳಗೆ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಕಳೆದ ವಾರ ನಡೆದ ಸಂಪೂರ್ಣ ಘಟನೆ ಸೆರೆಯಾಗಿದೆ. ಮುಖವನ್ನು ಮುಚ್ಚಿಕೊಂಡು ಅಂಗಡಿಗೆ ಪ್ರವೇಶಿಸಿದ ಕಳ್ಳ, ತನಗೆ ಬೇಕಾದುದನ್ನು ಕದ್ದು, ಡ್ಯಾನ್ಸ್ ಮಾಡಿ ನಂತರ ಅಲ್ಲಿಂದ ನುಸುಳಿಕೊಂಡು ಹೋಗಿರುವ ದೃಶ್ಯಾವಳಿ ಸೆರೆಯಾಗಿದೆ.
Thief started dancing inside the shop after stealing from a hardware shop in Chandauli, Uttar Pradesh.
ಕಳ್ಳ ಎಲ್ಲ ನಗದನ್ನು ಎತ್ತಿಕೊಂಡು ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳನ್ನು ಕದ್ದಿದ್ದಾನೆ ಎಂದು ಅಂಗಡಿ ಮಾಲೀಕ ಅಂಶು ಸಿಂಗ್ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ. ಷಟರ್ ಮುರಿದಿರುವುದನ್ನು ನೋಡಿದ ಸಿಂಗ್ ಅಂಗಡಿ ತೆರೆದು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸಾಮಾನ್ಯವಾಗಿ ಸುರಕ್ಷತಾ ಕಾರಣಗಳಿಗಾಗಿ ಮತ್ತು ಕಳ್ಳರನ್ನು ಹೆದರಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಆಳವಡಿಸಲಾಗುತ್ತೆ. ಆದರೆ ಈ ಕಳ್ಳ ಯಾವುದನ್ನು ಲೆಕ್ಕಿಸಿಲ್ಲ. ಅಂಗಡಿಯೊಳಗಿದ್ದ ಸಿಸಿಟಿವಿ ಕ್ಯಾಮೆರಾ ಕಣ್ಣಿಗೆ ಬಿದ್ದ ತಕ್ಷಣ ಡ್ಯಾನ್ಸ್ ಮಾಡತೊಡಗಿದ್ದಾನೆ. ಇದನ್ನೂ ಓದಿ: ತಾಯಿಯಾಗುತ್ತಿದ್ದಾರೆ ಚಂದ್ರನ ರಾಣಿ ಶ್ರಿಯಾ ಸರನ್
ಅಕ್ಟೋಬರ್ 2018 ರಲ್ಲಿ ಅಹಮದಾಬಾದ್‍ನಲ್ಲಿ ಇದೇ ರೀತಿಯ ಘಟನೆ ಸಂಭವಿಸಿದೆ. ಐದು ಜನರ ಗ್ಯಾಂಗ್‍ನ ಕಳ್ಳರಲ್ಲಿ ಒಬ್ಬ ಎಲ್ಲವನ್ನು ದೋಚಿದ ನಂತರ ಸಿಸಿಟಿವಿ ಮುಂದೆ ಬಂದು ಡ್ಯಾನ್ಸ್ ಮಾಡಿದ್ದನು.
ಲಕ್ನೋ: ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್ ಸದ್ದು ಮಾಡಿದೆ. ಬುಲ್ಡೋಜರ್ ಮೂಲಕ ಮನೆಯನ್ನು ಕೆಡವಲಾಗುತ್ತದೆ ಎಂಬ ಭಯಕ್ಕೆ ಬಿದ್ದು ಎಲ್ಲ ಕಾರು ಕಳ್ಳರ ಕಿಂಗ್‍ಪಿನ್ ಎಲ್ಲ ಆರೋಪಿಗಳ ಹೆಸರನ್ನು ಬಾಯಿಬಿಟ್ಟಿದ್ದಾನೆ.
ಈತನ ಮಾಹಿತಿ ಮೇರೆಗೆ ಎರಡೂವರೆ ಕೋಟಿ ಮೌಲ್ಯದ 10 ಕಾರುಗಳು ಹಾಗೂ 40 ವಾಹನಗಳ ಬಿಡಿ ಭಾಗಗಳು ಪತ್ತೆಯಾಗಿದೆ. ಗ್ಯಾಂಗ್‍ನ 12 ಸದಸ್ಯರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಗ್ಯಾಂಗ್ ಸದಸ್ಯರ ವಿರುದ್ಧ ದೆಹಲಿ, ಅಮ್ರೋಹಾ, ರಾಂಪುರ, ಬದೌನ್, ಸಂಭಾಲ್, ಮೊರಾದಾಬಾದ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ಯುಪಿ, ಮಧ್ಯಪ್ರದೇಶ ಆಯ್ತು ಈಗ ಗುಜರಾತ್‌ನಲ್ಲೂ ಬುಲ್ಡೋಜರ್ ಸದ್ದು
ಪಾಕ್ಬ್ರಾದ ಗಿಂಡೌಡಾ ಗ್ರಾಮದ ನಿವಾಸಿ ನಾಸಿರುದ್ದೀನ್ ಅಲಿಯಾಸ್ ನಾಸಿರ್ ಈ ಗ್ಯಾಂಗ್‍ನ ಕಿಂಗ್‍ಪಿನ್. ಗ್ಯಾಂಗ್ ಸದಸ್ಯರು ಎರಡು ವರ್ಷಗಳಿಂದ ಕದ್ದ ವಾಹನಗಳನ್ನು ಗ್ರಾಮದ ಹೊರಗಿನ ಅರಣ್ಯದಲ್ಲಿ ನಿರ್ಮಿಸಿದ ಗೋದಾಮಿಗೆ ತರುತ್ತಿದ್ದರು. ಬಳಿಕ ಕಾರಿನ ಸಾಮಾಗ್ರಿಗಳನ್ನು ತೆಗೆದು ಮಾರಾಟ ಮಾಡುತ್ತಿದ್ದರು. ಇದನ್ನೂ ಓದಿ: ಯೋಗಿಗೆ ಬೆದರಿಕೆ ಹಾಕಿದ್ದ ಎಸ್‍ಪಿ ಶಾಸಕನ ಅಕ್ರಮ ಪೆಟ್ರೋಲ್ ಬಂಕ್ ಧ್ವಂಸ
ಖಚಿತ ಮಾಹಿತಿ ಮೇರೆಗೆ ಗಿಂಡೌಡ ಗ್ರಾಮದ ಕಿಂಗ್‍ಪಿನ್ ನಾಸೀರ್‍ನನ್ನು ಪೊಲೀಸರು ಬಂಧಿಸಿದ್ದರು. ವಿಚಾರಣೆ ಸಮಯದಲ್ಲಿ ಆತ ಉಳಿದ ಆರೋಪಿಗಳ ಬಗ್ಗೆ ಮಾಹಿತಿ ನೀಡಿರಲಿಲ್ಲ. ಕೊನೆಗೆ ಎಸ್‍ಎಚ್‍ಒ ರಂಜನ್ ಶರ್ಮಾ ಅವರು ಬುಲ್ಡೋಜರ್ ಮೂಲಕ ಮನೆಯನ್ನು ಒಡೆಸಲು ಸಿದ್ಧತೆ ಮಾಡಿ ಎಂದು ಸಿಬ್ಬಂದಿಗೆ ಸೂಚಿಸಿದಾಗ ಭಯಕ್ಕೆ ಬಿದ್ದ ಆರೋಪಿ ಉಳಿದ ಎಲ್ಲ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಜೊತೆಗೆ ಕದ್ದ ಕದ್ದ ಸರಕುಗಳ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತನ ಮಾಹಿತಿಯ ಮೇರೆಗೆ ಗೋದಾಮಿನಿಂದ ಕದ್ದ 10 ಕಾರುಗಳು ಮತ್ತು 40 ವಾಹನಗಳ ಕತ್ತರಿಸಿದ ಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೊದಲು ಮೂರು ಜನರೊಂದಿಗೆ ಕೃತ್ಯ ಆರಂಭಿಸಿದರು. ಕಳ್ಳತನದಿಂದ ಲಾಭ ಬರುತ್ತಿದ್ದಂತೆ ಗ್ಯಾಂಗ್ ಸದಸ್ಯರ ಸಂಖ್ಯೆ ಹೆಚ್ಚಳವಾಯಿತು.
ನಾಸಿರುದ್ದೀನ್ ವಿಚಾರಣೆಯ ಆಧಾರದ ಮೇಲೆ ಪೊಲೀಸರು ಶಾಹಿದ್ ಅಮ್ರೋಹಾ, ರಿಜುಲ್ ಅಮ್ರೋಹಾ, ಇಮ್ರಾನ್ ಅಮ್ರೋಹಾ, ಫುರ್ಕನ್ ಮೊರಾದಾಬಾದ್, ಅರ್ಮಾನ್ ಅಮ್ರೋಹಾರನ್ನು ಬಂಧಿಸಿದ್ದಾರೆ. ಆರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ನಗರ ಎಸ್ಪಿ ಅಖಿಲೇಶ್ ಬದೌರಿಯಾ ತಿಳಿಸಿದ್ದಾರೆ. ನಾಸಿರ್ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದನು. ಫುರ್ಕನ್ ಆಟೋ ಓಡಿಸುತ್ತಿದ್ದನು ಎಂದು ತಿಳಿದು ಬಂದಿದೆ.