Tag: lucknow

  • ಲಡ್ಡು ತಿನ್ನಿಸುವ ಮೂಲಕ ವೈವಾಹಿಕ ವಿವಾದ ಕೊನೆಗೊಳಿಸಿದ 70ರ ಹರೆಯ ದಂಪತಿ

    ಲಡ್ಡು ತಿನ್ನಿಸುವ ಮೂಲಕ ವೈವಾಹಿಕ ವಿವಾದ ಕೊನೆಗೊಳಿಸಿದ 70ರ ಹರೆಯ ದಂಪತಿ

    ಲಕ್ನೋ: ಇಳಿವಯಸ್ಸಿನ ದಂಪತಿ ತಮ್ಮ ವೈವಾಹಿಕ ವಿವಾದವನ್ನು ಲಡ್ಡು ತಿನ್ನಿಸುವ ಮೂಲಕ ಕೊನೆಗೊಳಿಸಿದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಉತ್ತರ ಪ್ರದೇಶದ ಗೊಂಡಾದಲ್ಲಿ ಈ ಅಚ್ಚರಿ ಸುದ್ದಿ ನಡೆದಿದೆ. ಪೊಲೀಸ್ ಅಧಿಕಾರಿ ಸಚಿನ್ ಕೌಶಿಕ್ ಈ ವೀಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ಇಳಿವಯಸ್ಸಿನ ದಂಪತಿ ಪೊಲೀಸರ ಸಮ್ಮುಖದಲ್ಲಿ ಒಬ್ಬರಿಗೊಬ್ಬರು ಲಡ್ಡು ತಿನ್ನಿಸುವ ಮೂಲಕ ತಮ್ಮ ದಾಂಪತ್ಯ ಕಲಹಕ್ಕೆ ಮುಕ್ತಯವಾಡಿದ್ದಾರೆ. ಇದನ್ನೂ ಓದಿ:  ಸಂತೋಷ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರಿಂದಲೇ ಹೈಡ್ರಾಮಾ

    ಏನಿದು ಘಟನೆ?
    ದಂಪತಿ ತಮ್ಮ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳು ಬಂದು ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಇದನ್ನು ತಿಳಿದ ಗ್ರಾಮಸ್ಥರು ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದರು. ಅಲ್ಲಿ ಪೊಲೀಸರು ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸಿ ಎಪ್ಪತ್ತರ ಹರೆಯ ದಂಪತಿಯನ್ನು ಒಂದು ಮಾಡಿದ್ದಾರೆ.

    ಇಳಿವಯಸ್ಸಿನ ಮಹಿಳೆ ತನ್ನ ಪತಿಗೆ ಲಡ್ಡು ತಿನ್ನಿಸುತ್ತಿರುವ ದೃಶ್ಯ ಕ್ಲೈಮ್ಯಾಕ್ಸ್‌ನಲ್ಲಿ ಸೆರೆಹಿಡಿಯಲಾಗಿದೆ. ಈ ದೃಶ್ಯವನ್ನು ನೋಡಿದ ನೆಟ್ಟಿಗರು, ಮುದ್ದಾದ ವೀಡಿಯೋ ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ಸಂತೋಷ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆಗ್ರಹ

    ಅದರಲ್ಲಿಯೂ ಈ ವೀಡಿಯೋ ಕೊನೆಯಲ್ಲಿ ಹೆಂಡತಿಗೆ ಲಡ್ಡು ತಿನ್ನಿಸುವಾಗ ಇಳಿವಯಸ್ಸಿನ ಪತಿ ನನ್ನ ಕೈಯನ್ನು ಕಚ್ಚಬೇಡ ಎಂದು ಹೇಳುತ್ತಾರೆ. ಇದು ಅಲ್ಲಿ ನೆರೆದಿಂದ ಜನರನ್ನು ನಗಿಸುವಂತೆ ಮಾಡುತ್ತೆ. ಒಟ್ಟಿನಲ್ಲಿ ವೀಡಿಯೋದಲ್ಲಿರುವ ಈ ಮುದ್ದಾದ ಜೋಡಿ ನೋಡಿ ಎಂಜಯ್ ಮಾಡುತ್ತಿದ್ದಾರೆ.

  • ಕೆಜಿಗೆ 350ರೂ. ದಾಟಿದ ನಿಂಬೆಹಣ್ಣಿನ  ಬೆಲೆ – ಜನ ಸಾಮಾನ್ಯರು ತತ್ತರ

    ಕೆಜಿಗೆ 350ರೂ. ದಾಟಿದ ನಿಂಬೆಹಣ್ಣಿನ ಬೆಲೆ – ಜನ ಸಾಮಾನ್ಯರು ತತ್ತರ

    ಲಕ್ನೋ: ದಿನೇ ದಿನೇ ನಿಂಬೆ ಹಣ್ಣಿನ ಬೆಲೆ ಗಗನಕ್ಕೇರುತ್ತಿದೆ. ಗಾಜಿಯಾಬಾದ್‍ನ ಸಗಟು ತರಕಾರಿ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಲ್ಲಿ ಕೆಜಿಗೆ ನಿಂಬೆ ಹಣ್ಣಿನ ಬೆಲೆ 350ರೂ.ಗೆ ಏರಿಕೆಯಾಗಿದೆ. ಇದರಿಂದಾಗಿ ವ್ಯಾಪಾರಿಗಳು ಕೂಡ ಆಶ್ಚರ್ಯಗೊಂಡಿದ್ದಾರೆ.

    ಹೈದರಾಬಾದ್‍ನಲ್ಲಿ ಒಂದು ಕೆಜಿ ನಿಂಬೆ ಹಣ್ಣು 10 ರೂಪಾಯಿಗೆ ಮಾರಾಟವಾಗುತ್ತಿದೆ. ಆದರೆ ಗುಜರಾತ್‍ನಲ್ಲಿ ಒಂದು ಕೆಜಿ ನಿಂಬೆ ಹಣ್ಣು 200 ರೂಪಾಯಿಗೆ ಮಾರಾಟವಾಗುತ್ತಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ವ್ಯಾಪಾರಿಯೊಬ್ಬರು, ಬೆಲೆಗಳು ಏರಿಕೆಯಾಗುತ್ತಿದೆ. ನಾವು ಮೊದಲು 700ರೂ.ಗೆ ಒಂದು ಗೋಣಿ ಚೀಲ ತುಂಬಾ ನಿಂಬೆಹಣ್ಣನ್ನು ಖರೀಸುತ್ತಿದ್ದೇವು. ಆದರೀಗ 3,500ರೂ. ಆಗಿದೆ. ನಾವು ಒಂದು ನಿಂಬೆ ಹಣ್ಣನ್ನು 10ರೂ.ಗೆ ಮಾರಾಟ ಮಾಡುತ್ತಿದ್ದೇವೆ. ಆದರೂ ನಿಂಬೆ ಹಣ್ಣನ್ನು ಖರೀದಿಸಲು ಯಾರು ಸಿದ್ಧರಿಲ್ಲ ಮತ್ತು ಅದನ್ನು ಒಪ್ಪಿಕೊಳ್ಳಲು ಕೂಡ ಯಾರು ತಯಾರಿಲ್ಲ. ಇದರಿಂದಾಗಿ ನಿಂಬೆಹಣ್ಣು ಕೊಳೆತು ಹಾಳಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಮುಖಾಮುಖಿ ಭೇಟಿಯಾದ ನಂತರವಷ್ಟೇ ಈಶ್ವರಪ್ಪ ರಾಜೀನಾಮೆ ನಿರ್ಧಾರ: ಬೊಮ್ಮಾಯಿ

    ಮತ್ತೋರ್ವ ವ್ಯಾಪಾರಿ ನನ್ನ 30 ವರ್ಷಗಳ ವೃತ್ತಿ ಜೀವನದಲ್ಲಿ ನಿಂಬೆಹಣ್ಣಿನ ಬೆಲೆ ಗರಿಷ್ಠವೆಂದರೆ 150ರೂ.ಗೆ ಮಾರಾಟವಾಗಿದ್ದರೂ, 300ರೂ. ಅಷ್ಟು ಆಗಿರಲಿಲ್ಲ. ಆದರೆ ಡೀಸೆಲ್ ಬೆಲೆ ಏರಿಯಿಂದ ಟ್ರಕ್ ಸಾಗಾಟನೆ ವೆಚ್ಚ 24,000ರೂ. ಆಗಿದೆ. ಹದಿನೈದು ದಿನಗಳ ಹಿಂದೆಯಷ್ಟೇ ನಿಂಬೆಹಣ್ಣು ಕೆ.ಜಿ.ಗೆ 50 ರಿಂದ 100ರೂ.ಗೆ ಮಾರಾಟವಾಗುತ್ತಿತ್ತು ಎಂದು ತಿಳಿಸಿದ್ದಾರೆ. ನಿಂಬೆ ಹಣ್ಣಿನ ಜೊತೆಗೆ ಹಸಿ ಮೆಣಸಿನಕಾಯಿ, ಹಾಗಲಕಾಯಿ ಸೇರಿದಂತೆ ಇತರೆ ತರಕಾರಿಗಳ ಬೆಲೆ ಎರಡು ವಾರಗಳಲ್ಲಿ ದುಪ್ಪಟ್ಟಾಗಿದೆ. ಇದನ್ನೂ ಓದಿ:  ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರ ತ್ಯಾಗ ಮುಂದಿನ ಪೀಳಿಗೆಗೆ ಪ್ರೇರಣೆ: ಮೋದಿ

  • ಅಪಹರಿಸಿ, ಸಾರ್ವಜನಿಕವಾಗಿ ಅತ್ಯಾಚಾರ ಮಾಡ್ತೀನಿ: ಮುಸ್ಲಿಂ ಮಹಿಳೆಯರಿಗೆ ಸ್ವಾಮೀಜಿ ಬೆದರಿಕೆ

    ಅಪಹರಿಸಿ, ಸಾರ್ವಜನಿಕವಾಗಿ ಅತ್ಯಾಚಾರ ಮಾಡ್ತೀನಿ: ಮುಸ್ಲಿಂ ಮಹಿಳೆಯರಿಗೆ ಸ್ವಾಮೀಜಿ ಬೆದರಿಕೆ

    ಲಕ್ನೋ: ಅಪಹರಿಸಿ, ಸಾರ್ವಜನಿಕವಾಗಿ ಅತ್ಯಾಚಾರ ಮಾಡುತ್ತೇನೆ ಎಂದು ಮುಸ್ಲಿಂ ಮಹಿಳೆಯರಿಗೆ ಸ್ವಾಮೀಜಿ ಬೆದರಿಕೆ ಹಾಕಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಈ ವಿವಾದಾತ್ಮಕ ಹೇಳಿಕೆ ನೀಡಿದ ಸ್ವಾಮೀಜಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

    ಕೇಸರಿ ವಸ್ತ್ರಧಾರಿ ಸ್ವಾಮೀಜಿಯೊಬ್ಬ ಪ್ರಚಾರ ವಾಹನದಲ್ಲಿ ತೆರಳುತ್ತಾ ಮೈಕ್‍ನಲ್ಲಿ ಘೋಷಣೆಗಳನ್ನು ಕೂಗುತ್ತಿರುವ ವೀಡಿಯೋ ವೈರಲ್ ಆಗಿದೆ. ಪ್ರಚಾರ ವಾಹನದಲ್ಲಿ ಪೊಲೀಸರು ಕೂಡ ಇದ್ದಾರೆ. ಈ ವೇಳೆಯೇ ಸ್ವಾಮೀಜಿ, ಮುಸ್ಲಿಂ ಮಹಿಳೆಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾನೆ. ಅಲ್ಲದೇ ಕೋಮು ಭಾವನೆಗೆ ಧಕ್ಕೆ ತರುವ ಪ್ರಚೋದನಕಾರಿ ಹೇಳಿಕೆ ನೀಡಿದ್ದಾನೆ. ಇದನ್ನೂ ಓದಿ: ಈ ನಡುವೆ ಸರ್ಕಾರಗಳು ನ್ಯಾಯಾಂಗವನ್ನು ನಿಂದಿಸುವ ಪ್ರವೃತ್ತಿ ಆರಂಭಿಸಿವೆ: ಸಿಜೆಐ ಆಕ್ರೋಶ

    ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ ಆರು ದಿನಗಳ ನಂತರ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ, ಯಾವುದೇ ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ: ಸಿದ್ದರಾಮಯ್ಯ

    ಮಹಮ್ಮದ್ ಜಬ್ಬೀರ್ ಎಂಬವರು ಈ ವೀಡಿಯೋವನ್ನು ಹಂಚಿಕೊಂಡಿದ್ದರು. ಈ ಘಟನೆ ಏ.2ರಂದು ನಡೆದಿದೆ. ಆದರೆ ಈವರೆಗೂ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಬಳಿಕ ಎಚ್ಚೆತ್ತ ಪೊಲೀಸರು, ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    ಈ ವೀಡಿಯೋ ಎಪ್ರಿಲ್ 2 ರಂದು ಚಿತ್ರೀಕರಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಸತ್ಯಗಳ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಈ ಸಂಬಂಧ ಸೀತಾಪುರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಟ್ವೀಟ್ ಮಾಡಿ ತಿಳಿಸಿದ್ದಾರೆ.

    ವಿಡಿಯೋದಲ್ಲಿ ಏನಿದೆ?: ಈ ಪ್ರದೇಶದಲ್ಲಿ ಯಾವುದೇ ಹುಡುಗಿಗೆ ಮುಸ್ಲಿಮರು ಕಿರುಕುಳ ನೀಡಿದರೆ, ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಸಾರ್ವಜನಿಕವಾಗಿ ಅತ್ಯಾಚಾರ ಮಾಡಲಾಗುವುದು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿ ಹೇಳುವ ಪ್ರತಿಯೊಂದು ಮಾತುಗಳಿಗೆ ಜನರು ಜೈಕಾರ ಹಾಕಿದ್ದಾರೆ.

  • ಉತ್ತರಪ್ರದೇಶ ಜೈಲಿನಲ್ಲಿ ಮೊಳಗಲಿದೆ ಗಾಯತ್ರಿ, ಮಹಾ ಮೃತ್ಯುಂಜಯ ಮಂತ್ರ

    ಉತ್ತರಪ್ರದೇಶ ಜೈಲಿನಲ್ಲಿ ಮೊಳಗಲಿದೆ ಗಾಯತ್ರಿ, ಮಹಾ ಮೃತ್ಯುಂಜಯ ಮಂತ್ರ

    ಲಕ್ನೋ: ಇನ್ನು ಮುಂದೆ ಉತ್ತರ ಪ್ರದೇಶದ ಎಲ್ಲ ಜೈಲುಗಳಲ್ಲಿ ಗಾಯತ್ರಿ ಮಂತ್ರ ಮತ್ತು ಮಹಾ ಮೃತ್ಯುಂಜಯ ಮಂತ್ರಗಳು ಮೊಳಗಲಿವೆ.

    ಜೈಲಿನಲ್ಲಿರುವ ಖೈದಿಗಳ ಮಾನಸಿಕ ಶಾಂತಿಗಾಗಿ ಈ ಮಂತ್ರಗಳನ್ನು ಮೊಳಗಿಸಲಾಗುತ್ತದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಈಗಾಗಲೇ ರಾಜ್ಯ ಕಾರಾಗೃಹ ಸಚಿವ ಧರಂವೀರ್ ಪ್ರಜಾಪತಿ ಅವರು ಕಾರಾಗೃಹ ಆಡಳಿತ ಮಂಡಳಿಗೆ ಈ ಮಂತ್ರಗಳನ್ನು ಮೊಳಗಿಸುವಂತೆ ಆದೇಶಿಸಿದ್ದಾರೆ. ಇದನ್ನೂ ಓದಿ: ಶಕ್ತಿ ಸ್ವರೂಪಿಣಿ ದೇವಿಯು ಅಪಾರ ದ್ವೇಷದಿಂದ ಕೂಡಿದ ಬಿಜೆಪಿ ನಾಯಕರ ಆತ್ಮವನ್ನು ಶುದ್ಧೀಕರಿಸಲಿ: ಸುರ್ಜೇವಾಲಾ

    jail

    ಮಾಹಿತಿ ಪ್ರಕಾರ ಧರಂವೀರ್ ಪ್ರಜಾಪತಿ ಅವರ ಸೂಚನೆ ಮೇರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಯತ್ರಿ, ಮಹಾಮೃತ್ಯುಂಜಯ ಮಂತ್ರಗಳು ಕೇಳಿ ಬರುತ್ತಿವೆ. ಈ ಮಂತ್ರಗಳ ಪಠಣ ಮಾಡುವುದರಿಂದ ಖೈದಿಗಳಿಗೆ ನೆಮ್ಮದಿ ಸಿಗುತ್ತದೆ. ಜೈಲಿನಿಂದ ಹೊರಬಂದು ಉತ್ತಮ ನಾಗರಿಕರಾಗುತ್ತಾರೆ. ಜೊತೆಗೆ ಅವರು ಆಧ್ಯಾತ್ಮಿಕತೆಯೊಂದಿಗೆ ಸಂಪರ್ಕ ಹೊಂದಿರುತ್ತಾರೆ ಎಂಬುದು ಸರ್ಕಾರದ ನಂಬಿಕೆ. ಆದ್ದರಿಂದ ಕಾರಾಗೃಹಗಳಲ್ಲಿ ಈ ಮಂತ್ರಗಳ ರಾಗಗಳನ್ನು ನುಡಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಕುರಾನ್ ಮೇಲೆ ದೇಶ ನಡೆಯಲ್ಲ, ತಂದೆಯ ಜೊತೆಗೆ ಮುಸ್ಕಾನ್‌ಳನ್ನು ಬಂಧಿಸಬೇಕು: ಮುತಾಲಿಕ್

    ಇದರೊಂದಿಗೆ ಯೋಗಿ ಆದಿತ್ಯನಾಥ್ ಸರ್ಕಾರವು ಕಾರಾಗೃಹಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಹಾಗೂ ಸರಕನ್ನು ನಿಷೆಧಿಸಿದೆ.

  • ಆಟವಾಡ್ತಿದ್ದ ಮಕ್ಕಳ ಮೇಲೆ 20ಕ್ಕೂ ಹೆಚ್ಚು ಬೀದಿನಾಯಿಗಳು ದಾಳಿ; ಮುಂದೇನಾಯ್ತು ನೋಡಿ…

    ಆಟವಾಡ್ತಿದ್ದ ಮಕ್ಕಳ ಮೇಲೆ 20ಕ್ಕೂ ಹೆಚ್ಚು ಬೀದಿನಾಯಿಗಳು ದಾಳಿ; ಮುಂದೇನಾಯ್ತು ನೋಡಿ…

    ಲಕ್ನೋ: ಲಕ್ನೋದ ಠಾಕೂರ್‌ಗಂಜ್‌ನ ಮುಸಾಹಿಬ್‌ಗಂಜ್‌ನಲ್ಲಿರುವ ತಮ್ಮ ಮನೆಯ ಹೊರಗೆ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

    ಈ ದಾಳಿಯಲ್ಲಿ 8 ವರ್ಷದ ಹುಡುಗ ಮೃತಪಟ್ಟಿದ್ದು, ಮೃತನ ಸಹೋದರಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ತೀವ್ರವಾಗಿ ಗಾಯಗೊಂಡಿದ್ದ ಅಣ್ಣ-ತಂಗಿಯನ್ನು ಕೆಜಿಎಂಯುನ ಟ್ರಾಮಾ ಸೆಂಟರ್‌ಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಆದರೆ ಬಾಲಕ ಮೊಹಮ್ಮದ್ ಹೈದರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಅವರ 5 ವರ್ಷದ ಸಹೋದರಿ ಜನ್ನತ್ ಸ್ಥಿತಿ ಗಂಭೀರವಾಗಿದ್ದು, ICUಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಕಬಡ್ಡಿ ಆಟಗಾರ ಧರ್ಮಿಂದರ್ ಸಿಂಗ್ ಮನೆಗೆ ಭೇಟಿ ಕೊಟ್ಟ ನವಜೋತ್ ಸಿಂಗ್ ಸಿಧು

    dogs

    ಮೃತ ಬಾಲಕನ ಪೋಷಕರು ಲಕ್ನೋದ ಮುನ್ಸಿಪಲ್ ಕಾರ್ಪೊರೇಷನ್ ವಿರುದ್ಧ ಧ್ವನಿ ಎತ್ತಿದ್ದಾರೆ. ಬೀದಿ ನಾಯಿಗಳನ್ನು ಹಿಡಿಯಲು ಆದೇಶ ನೀಡಬೇಕೆಂದು ಅವರು ಅಧಿಕಾರಿಗಳಿಗೆ ಈ ಹಿಂದೆಯೇ ಮನವಿ ಮಾಡಿದ್ದರು. ಪದೇ – ಪದೇ ಸ್ಥಳಿಯರಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರು ನೀಡಿ ಮನವರಿಕೆ ಮಾಡಿಕೊಡಲಾಗಿತ್ತು. ಆದರೂ, ಲಕ್ನೋ ಮಹಾನಗರ ಪಾಲಿಕೆ (LMC) ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

    ಸರ್ಕಾರೇತರ ಸಂಸ್ಥೆಗಳು (NGO) ನಾಯಿಗಳನ್ನು ಹಿಡಿಯಲು ವಿರೋಧ ವ್ಯಕ್ತಪಡಿಸಿರುವುದರಿಂದ ನಾಯಿಗಳನ್ನು ಹಿಡಿಯಲು ಸಾಧ್ಯವಿಲ್ಲ ಎಂದು ಎಲ್‌ಎಂಸಿ ನಿರಾಕರಿಸಿತ್ತು. ಸಂತ್ರಸ್ತೆಯ ತಂದೆ ಮುನ್ಸಿಪಲ್ ಕಾರ್ಪೊರೇಷನ್ ವಲಯ 6ರ ಅಧಿಕಾರಿಗಳು ಮತ್ತು ಇತರರ ವಿರುದ್ಧ ಠಾಕೂರ್‌ಗಂಜ್ ಪೊಲೀಸರಿಗೆ ದೂರು ನೀಡಿದ್ದಾರೆ.

  • ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಆರೋಪಿ ಅರೆಸ್ಟ್

    ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಆರೋಪಿ ಅರೆಸ್ಟ್

    ಲಕ್ನೋ: ಅಪ್ರಾಪ್ತ ದಲಿತ ಬಾಲಕಿಯೊಬ್ಬಳನ್ನು ಗ್ರಾಮದ ಸಮುದಾಯದ ಯುವಕನೊಬ್ಬ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಬುಲಂದ್‍ಶಹರ್ ಜಿಲ್ಲೆಯಲ್ಲಿ ನಡೆದಿದೆ.

    ಘಟನೆ ಕುರಿತು ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಅಪಹರಣದ ದೂರು ದಾಖಲಿಸಿದ್ದಾರೆ. ಘಟನೆಯ ಕುರಿತು ಬಾಲಕಿಯು ಮ್ಯಾಜಿಸ್ಟ್ರೆಟ್ ಮುಂದೆ ಸಂಪೂರ್ಣ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಶಿಕ್ಷಕನಿಂದ ಲೈಂಗಿಕ ಕಿರುಕುಳ – ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

    ತಲೆಮರೆಸಿಕೊಂಡಿದ್ದ ಹುಡುಗ ಮತ್ತು ಆತನ ಇಬ್ಬರು ಸಹಚರರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ಹೇಳಿಕೆ ಆಧರಿಸಿ ಮೂವರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಘಟನೆಗೆ ಹಿಂದೂ ಸಂಘಟನೆಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳ ಬಂಧನಕ್ಕೆ ಹಿಂದೂ ಸಂಘಟನೆಗಳು ಮನವಿ ಪತ್ರವನ್ನೂ ಸಲ್ಲಿಸಿವೆ. ಇದನ್ನೂ ಓದಿ: ಹಸ್ತಮೈಥುನದ ವೀಡಿಯೋ ಕಳುಹಿಸಿ ಯುವತಿಯನ್ನು ಮಂಚಕ್ಕೆ ಕರೆದ ಎಂಬಿಎ ವಿದ್ಯಾರ್ಥಿ ಅರೆಸ್ಟ್

    ಪಹಸು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 26 ರಂದು, ಗ್ರಾಮದ ಹುಡುಗನೊಬ್ಬ ಅಪ್ರಾಪ್ತ ದಲಿತ ಬಾಲಕಿಯನ್ನು ಮೋಹಿಸಿ ಕರೆದುಕೊಂಡು ಹೋಗಿದ್ದಾನೆ. ಇದಾದ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ವಿಚಾರ ತಿಳಿದ ಹಿಂದೂ ಸಂಘಟನೆಗಳು ಆಕ್ರೋಶಗೊಂಡು ಪಹಾಸು ಪೊಲೀಸ್ ಠಾಣೆಗೆ ಬಂದು ಮನವಿ ಪತ್ರ ಸಲ್ಲಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಎಸ್‍ಎಸ್‍ಪಿ ಸುರೇಂದ್ರ ತಿವಾರಿ ಮಾತನಾಡಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದು ಸ್ಪಷ್ಟವಾಯಿತು. ಘಟನೆಯಲ್ಲಿ ಇನ್ನೂ ಇಬ್ಬರು ಭಾಗಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುತ್ತಿದೆ.

  • ಹಸ್ತಮೈಥುನದ ವೀಡಿಯೋ ಕಳುಹಿಸಿ ಯುವತಿಯನ್ನು ಮಂಚಕ್ಕೆ ಕರೆದ ಎಂಬಿಎ ವಿದ್ಯಾರ್ಥಿ ಅರೆಸ್ಟ್

    ಹಸ್ತಮೈಥುನದ ವೀಡಿಯೋ ಕಳುಹಿಸಿ ಯುವತಿಯನ್ನು ಮಂಚಕ್ಕೆ ಕರೆದ ಎಂಬಿಎ ವಿದ್ಯಾರ್ಥಿ ಅರೆಸ್ಟ್

    ಲಕ್ನೋ: ಆರೋಪಿಯೊಬ್ಬ ಹಸ್ತಮೈಥುನದ ವೀಡಿಯೋವೊಂದನ್ನು ಯುವತಿಗೆ ವಾಟ್ಸಪ್‍ನಲ್ಲಿ ಕಳುಹಿಸಿ ಆಕೆಯನ್ನು ಲೈಂಗಿಕ ಸಂಬಂಧಕ್ಕೆ ಕರೆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ನೋಯ್ದಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಮಾಧ್ಯಮಗಳ ವರದಿ ಪ್ರಕಾರ ಆರೋಪಿ ಮತ್ತು ಯುವತಿ ಸುಮಾರು ಎರಡು ವರ್ಷಗಳಿಂದ ಪರಿಚಿತರು. ಆರೋಪಿಯ ವರ್ತನೆ ಇಷ್ಟವಾಗದ ಕಾರಣ ಆಕೆ ಇತ್ತೀಚೆಗೆ ಆತನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ್ದಳು. ಇದಾದ ನಂತರ, ಮಾರ್ಚ್ 19 ರಂದು, ಆರೋಪಿಯು ಜಿಮ್‍ನಲ್ಲಿ ಆಕೆಗೆ ನನ್ನ ಜೊತೆ ಲೈಂಗಿಕ ಸಂಬಂಧ ಬೆಳೆಸಲು ಒಂದು ಅವಕಾಶ ನೀಡು ಎಂದು ಪೀಡಿಸುತ್ತಿದ್ದನು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಗೇಮ್ ನಿಷೇಧ ರದ್ದು: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ

    ಹಂತ-3 ಪೊಲೀಸ್ ಠಾಣೆಯ ಉಸ್ತುವಾರಿ ವಿವೇಕ್ ತ್ರಿವೇದಿ ಅವರ ಪ್ರಕಾರ, ಯುವತಿಯು ಆರೋಪಿಯ ವಿರುದ್ಧ ಭಾನುವಾರ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಇಬ್ಬರ ನಡುವೆ ಮತ್ತೆ ಮಾತುಕತೆ ಆರಂಭವಾದಾಗ ಯುವಕ ತನ್ನೊಂದಿಗೆ ದೈಹಿಕ ಸಂಬಂಧ ಹೊಂದುವ ಆಸೆ ವ್ಯಕ್ತಪಡಿಸಿದ್ದಾಗಿ ಸಂತ್ರಸ್ತೆ ಅದರಲ್ಲಿ ಹೇಳಿದ್ದರು. ಆದರೆ ಯುವತಿ ನಿರಾಕರಿಸಿದ್ದಾಳೆ. ಇದರ ನಂತರ, ಮಾರ್ಚ್ 21 ರಂದು, ಮಧ್ಯಾಹ್ನ 2:40ರ ಸುಮಾರಿಗೆ ಆರೋಪಿಯು ವಾಟ್ಸಾಪ್‍ನಲ್ಲಿ ಅಶ್ಲೀಲ ವೀಡಿಯೊವನ್ನು ಆಕೆಗೆ ಕಳುಹಿಸಿದ್ದಾನೆ. ಸಂತ್ರಸ್ತೆ ತನ್ನ ದೂರಿನಲ್ಲಿ, ನಾನು ಸಂದೇಶವನ್ನು ತೆರೆದಾಗ, ಅದು ಅವನ ಹಸ್ತಮೈಥುನದ ವೀಡಿಯೊವಾಗಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಆರ್.ಎನ್ ನಾಯಕ ಕೊಲೆ ಕೇಸ್ – ಭೂಗತಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ

    ದೂರಿನ ಮೇರೆಗೆ ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 354 (ಮಹಿಳೆಯ ಮೇಲೆ ಮಾನಭಂಗ ಮಾಡುವ ಉದ್ದೇಶದಿಂದ ಅವಳ ಮೇಲೆ ಹಲ್ಲೆ) ಮತ್ತು 509 (ಮಹಿಳೆಯ ವಿನಯವನ್ನು ಅವಮಾನಿಸುವ ಉದ್ದೇಶ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ಎಸ್‍ಎಚ್‍ಒ, ಆರೋಪಿಯನ್ನು ಹಿಡಿಯಲು ತಂಡವನ್ನು ರಚಿಸಿದ್ದರು. ಸೋಮವಾರ ಬೆಳಗ್ಗೆ ಸೆಕ್ಟರ್ 61 ರ ರಿಂಗ್ ಕ್ರಾಸ್‍ರೋಡ್‍ನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ತನಿಖೆಯ ವೇಳೆ ಆರೋಪಿ ಕಾಲೇಜಿನಲ್ಲಿ ಎಂಬಿಎ ಓದುತ್ತಿದ್ದ ವಿಚಾರ ತಿಳಿದು ಬಂದಿದೆ.

  • ವಿವಾಹ ಮಹೋತ್ಸವದಲ್ಲೂ ಬುಲ್ಡೋಜರ್ ಬಾಬಾ ಟ್ರೆಂಡ್: ವಧು-ವರರಿಗೂ ಅದೇ ಗಿಫ್ಟ್

    ವಿವಾಹ ಮಹೋತ್ಸವದಲ್ಲೂ ಬುಲ್ಡೋಜರ್ ಬಾಬಾ ಟ್ರೆಂಡ್: ವಧು-ವರರಿಗೂ ಅದೇ ಗಿಫ್ಟ್

    ಲಕ್ನೋ: ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಬುಲ್ಡೋಜರ್ ಒಂದು ಖ್ಯಾತಿ ತಂದಿದ್ದು, ಸಾಮೂಹಿಕ ವಿವಾಹ ಮಹೋತ್ಸವದ ಸಮಾರಂಭಗಳಲ್ಲಿ ಮಿನಿಯೇಚರ್ ಬುಲ್ಡೋಜರ್‌ಗಳನ್ನು ಉಡುಗೊರೆಯಾಗಿ ನೀಡುವ ಟ್ರೆಂಡ್ ಹುಟ್ಟಿಕೊಂಡಿದೆ.

    ಚೌರಾಸಿಯಾ ಸಮುದಾಯವು ಪ್ರಯಾಗ್‌ರಾಜ್‌ನ ಕತ್ರಾದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹಮಹೋತ್ಸವ ಸಮಾರಂಭದಲ್ಲಿ, 9 ಜೋಡಿಗಳಿಗೆ ಬುಲ್ಡೋಜರ್ ಆಟಿಕೆ ಮತ್ತು ಗೃಹೋಪಯೋಗಿ ವಸ್ತುಗಳು ಸೇರಿದಂತೆ ಇತರ ವಿನೂತನ ಉಡುಗೊರೆಗಳನ್ನು ನೀಡಲಾಗಿದೆ. ಇದಕ್ಕಾಗಿ ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ವಾತಾವರಣ ಸೃಷ್ಟಿಸಿದ್ದಕ್ಕಾಗಿ ಈಗ `ಬುಲ್ಡೋಜರ್ ಬಾಬಾ’ ಎಂದು ಕರೆಯಲ್ಪಡುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ವಧುಗಳು ಸಾಮೂಹಿಕವಾಗಿ ಧನ್ಯವಾದ ಅರ್ಪಿಸಿದ್ದಾರೆ.  ಇದನ್ನೂ ಓದಿ: ಉಚಿತ ಊಟ ನೀಡಲು ಮುಂದಾದ ಯೋಗಿ ಸರ್ಕಾರ 

    YOGI

    ಈ ವೇಳೆ ಪ್ರಯಾಗ್ ರಾಜ್ ಮೇಯರ್ ಅಭಿಲಾಷಾ ಗುಪ್ತಾ ಮಾತನಾಡಿ, ಬುಲ್ಡೋಜರ್ ಮಹಿಳೆಯರ ಸುರಕ್ಷತೆಯ ಸಂಕೇತವಾಗಿದೆ ಮತ್ತು ಉತ್ತರ ಪ್ರದೇಶದ ಅಭಿವೃದ್ಧಿಯ ಸಂಕೇತವಾಗಿದೆ. ಬುಲ್ಡೋಜರ್ ಅನ್ನು ಯೋಗಿ ಆದಿತ್ಯನಾಥ್ ಅವರು ತಮ್ಮ ಮೊದಲ ಅವಧಿಯಲ್ಲಿ ಮಾಫಿಯಾ ಮತ್ತು ಅಪರಾಧಿಗಳ ಅಕ್ರಮ ಆಸ್ತಿಗಳನ್ನು ಕೆಡವಲು ವ್ಯಾಪಕವಾಗಿ ಬಳಸಿದರು. ಅಲ್ಲದೆ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಯುಪಿಯಲ್ಲಿ ಪಡಿತರ ಯೋಜನೆ ವಿಸ್ತರಣೆ- 2ನೇ ಅವಧಿಯಲ್ಲಿ ಯೋಗಿ ಸರ್ಕಾರದ ಮೊದಲ ನಿರ್ಧಾರ

    CM YOGI

    ಸ್ವಾಮಿ ಕಲ್ಯಾಣಿ ನಂದಗಿರಿ ಅಕಾ ಛೋಟಿ ಗುರು ಮಾತನಾಡಿ, ಬುಲ್ಡೋಜರ್ ಆಟಿಕೆಗಳು ಜೀವನದಲ್ಲಿ ಅನುಸರಿಸುವ ಒಳ್ಳೆಯ ಕ್ರಮವನ್ನು ಸಂಕೇತಿಸುತ್ತವೆ. ಆದ್ದರಿಂದ ನವ ಜೋಡಿಗಳಿಗೆ ಅಗತ್ಯ ಗೃಹೋಪಯೋಗಿ ವಸ್ತುಗಳೊಂದಿಗೆ ಬುಲ್ಡೋಜರ್ ಆಟಿಕೆಗಳನ್ನೂ ನೀಡಿದ್ದೇವೆ. ಇದರಿಂದ ಅವರು ಶಾಂತಿ ಮತ್ತು ಸಾಮರಸ್ಯದ ಜೀವನ ನಡೆಸುತ್ತಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸಲು ಸರ್ಕಾರ ಮಾಡುತ್ತಿರುವ ಉತ್ತಮ ಕಾರ್ಯಕ್ಕೆ ಇದು ಅನುಮೋದನೆಯಾಗಿದೆ ಎಂಬುದಾಗಿ ಹೇಳಿದ್ದಾರೆ.

  • ಎಂಟು ಬಾರಿ ಬಿಜೆಪಿ ಶಾಸಕ ಸತೀಶ್ ಮಹಾನಾ ಈಗ ಯುಪಿ ಸ್ಪೀಕರ್

    ಎಂಟು ಬಾರಿ ಬಿಜೆಪಿ ಶಾಸಕ ಸತೀಶ್ ಮಹಾನಾ ಈಗ ಯುಪಿ ಸ್ಪೀಕರ್

    ಲಕ್ನೋ: ಎಂಟು ಬಾರಿ ಬಿಜೆಪಿ ಶಾಸಕರಾಗಿದ್ದ ಸತೀಶ್ ಮಹಾನಾ ಅವರು ಮಂಗಳವಾರ ಉತ್ತರ ಪ್ರದೇಶ ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರ ಆಯ್ಕೆಯನ್ನು ಶ್ಲಾಘಿಸಿದರು. ಸದನದ ಕಾರ್ಯಚಟುವಟಿಕೆಗೆ ಸಕಾರಾತ್ಮಕವಾಗಿ ಕೊಡುಗೆ ನೀಡುವುದಾಗಿ ಭರವಸೆ ನೀಡಿದರು.

    ಮಹಾನಾ ಅವರನ್ನು ಸಭಾಧ್ಯಕ್ಷರ ಪೀಠಕ್ಕೆ ಕರೆದೊಯ್ದ ನಂತರ ವಿಧಾನಸಭೆಯಲ್ಲಿ ಮಾತನಾಡಿದ ಆದಿತ್ಯನಾಥ್, ಪ್ರಜಾಪ್ರಭುತ್ವದ ಎರಡು ಚಕ್ರಗಳು (ಆಡಳಿತ ಮತ್ತು ವಿರೋಧ) ಒಂದೇ ದಿಕ್ಕಿನಲ್ಲಿ ಚಲಿಸುತ್ತಿರುವುದು ರಾಜ್ಯಕ್ಕೆ ಉತ್ತಮ ಸಂಕೇತವಾಗಿದೆ ಎಂದು ಹೇಳಿದರು.

    ಚುನಾವಣೆ ಮುಗಿದಿದ್ದು, ಉತ್ತರ ಪ್ರದೇಶದ ಪ್ರಗತಿಗೆ ಶ್ರಮಿಸುವುದು ಅವರ ನಮ್ಮೆಲ್ಲರ ಕರ್ತವ್ಯ ಎಂದು ಅವರು ಸದನದ ಸದಸ್ಯರಿಗೆ ಮನವಿ ಮಾಡಿದರು. ಇದನ್ನೂ ಓದಿ: 5.21 ಲಕ್ಷ ಮನೆ ಉದ್ಘಾಟನೆ, ಬಡವರ ಸಬಲೀಕರಣಕ್ಕಾಗಿ ಬಿಜೆಪಿ ಕೆಲಸ: ಮೋದಿ

    ನಂತರ ಮಾತನಾಡಿದ ಯಾದವ್, ಸಭಾಧ್ಯಕ್ಷರನ್ನು ಸರ್ವಾನುಮತದಿಂದ ಆಯ್ಕೆ ಮಾಡುವ ಮೂಲಕ ಸದನದಲ್ಲಿ ಆರೋಗ್ಯಕರ ಸಂಪ್ರದಾಯದ ಆರಂಭ ಎಂದು ಶ್ಲಾಘಿಸಿದರು. ಸಭಾಪತಿಯಾಗಿ ತಟಸ್ಥತೆಯಿಂದ ವರ್ತಿಸಿ ಪ್ರತಿಪಕ್ಷಗಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಮಹಾನಾ ಅವರಿಗೆ ಒತ್ತಾಯಿಸಿದರು. ನೀವು ಮೂಲ ಬಿಜೆಪಿಯಿಂದ ಬಂದವರೂ ಈಗ ನೀವು ಎಡ ವಿರೋಧದ ಕಡೆಗೆ ಹೆಚ್ಚು ಗಮನಹರಿಸಬೇಕು. ಹೌಸ್‍ನ ರೆಫರಿಯಾಗಿರುವ ನೀವು ಬಿಜೆಪಿಯವರ ಆಟದ ಭಾಗವಾಗಬಾರದು. ಪ್ರತಿಪಕ್ಷಗಳ ಹಕ್ಕುಗಳನ್ನು ಕಾಪಾಡುವುದು ಮತ್ತು ಸರ್ಕಾರ ಸರ್ವಾಧಿಕಾರಿಯಾಗುವುದನ್ನು ತಡೆಯುವುದು ನಿಮ್ಮ ಕರ್ತವ್ಯ ಎಂದು ಯಾದವ್ ಹೇಳಿದರು.

    ಹಂಗಾಮಿ ಸ್ಪೀಕರ್ ರಮಾಪತಿ ಶಾಸ್ತ್ರಿ ಅವರು, ಇಂದು ಮಹಾನಾ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಮಾರ್ಚ್ 29 ರಂದು ಸ್ಪೀಕರ್ ಆಯ್ಕೆಗೆ ದಿನಾಂಕ ನಿಗದಿಪಡಿಸಿದ್ದರು.

    ಮಹಾನಾ ಅವರ ನಾಮನಿರ್ದೇಶನವನ್ನು ಆದಿತ್ಯನಾಥ್ ಪ್ರಸ್ತಾಪಿಸಿದರು. ಹಿರಿಯ ಸಚಿವ ಸುರೇಶ್ ಖನ್ನಾ ಅವರು ಅನುಮೋದಿಸಿದರು. ಸಮಾಜವಾದಿ ಪಕ್ಷದ (ಎಸ್‍ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಮಹಾನಾ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಅವರ ಪಕ್ಷದ ಅವಧೇಶ್ ಪ್ರಸಾದ್ ಕೂಡಾ ಇದಕ್ಕೆ ಬೆಂಬಲಿಸಿದ್ದರು.

    ಮಹಾನಾ ಅವರು ಕಾನ್ಪುರ ಜಿಲ್ಲೆಯ ಮಹಾರಾಜಪುರ ಕ್ಷೇತ್ರದಿಂದ ಎಂಟನೇ ಬಾರಿಗೆ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 14, 1960 ರಂದು ಕಾನ್ಪುರದಲ್ಲಿ ಜನಿಸಿದ ಅವರು 1991 ರಲ್ಲಿ ಮೊದಲ ಬಾರಿಗೆ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾದರು. ಬಿಎಸ್‍ಪಿ-ಬಿಜೆಪಿ ಮೈತ್ರಿಕೂಟದ ಮಾಯಾವತಿ ನೇತೃತ್ವದ ಸರ್ಕಾರದಲ್ಲಿ ನಗರಾಭಿವೃದ್ಧಿ ಖಾತೆ ರಾಜ್ಯ ಸಚಿವರಾಗಿದ್ದಲ್ಲದೆ, ಕಲ್ಯಾಣ್ ಸಿಂಗ್, ರಾಮ್ ಪ್ರಕಾಶ್ ಗುಪ್ತಾ ಮತ್ತು ರಾಜನಾಥ್ ಸಿಂಗ್ ನೇತೃತ್ವದ ಸರ್ಕಾರಗಳಲ್ಲಿ ಸಚಿವರೂ ಆಗಿದ್ದಾರೆ. ಇದನ್ನೂ ಓದಿ: ಪರವಾನಿಗೆ ಇಲ್ಲದೆ ಬಂದೂಕುಗಳನ್ನು ಹೊಂದಲು ಕೊಡವರಿಗೆ ಅವಕಾಶ- ರಾಜ್ಯಕ್ಕೆ ಸುಪ್ರೀಂ ನೋಟಿಸ್‌

    ಮಹಾನಾ ಹಿಂದಿನ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಕೈಗಾರಿಕಾ ಅಭಿವೃದ್ಧಿ ಸಚಿವರಾಗಿದ್ದರು. ಉತ್ತರ ಪ್ರದೇಶ ವಿಧಾನಸಭೆಗೆ ಏಳು ಹಂತದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ 273 ಸ್ಥಾನಗಳನ್ನು ಗಳಿಸಿತ್ತು. ಎಸ್‍ಪಿ ನೇತೃತ್ವದ ಮೈತ್ರಿಕೂಟ 125 ಸ್ಥಾನಗಳನ್ನು ಗಳಿಸಿತ್ತು. ಕಾಂಗ್ರೆಸ್ ಮತ್ತು ಜನಸತ್ತಾದಳ ಲೋಕತಾಂತ್ರಿಕ್ ತಲಾ ಎರಡು ಸ್ಥಾನಗಳನ್ನು ಪಡೆದರೆ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷವು ಒಂದು ಸ್ಥಾನವನ್ನು ಪಡೆದುಕೊಂಡಿದೆ.

  • ಯೋಗಿ 2.0 ಆಡಳಿತ: 2 ಎನ್‍ಕೌಂಟರ್ – ಪರಾರಿಯಾಗಿದ್ದ 50ಕ್ಕೂ ಹೆಚ್ಚು ಅಪರಾಧಿಗಳು ಶರಣು

    ಯೋಗಿ 2.0 ಆಡಳಿತ: 2 ಎನ್‍ಕೌಂಟರ್ – ಪರಾರಿಯಾಗಿದ್ದ 50ಕ್ಕೂ ಹೆಚ್ಚು ಅಪರಾಧಿಗಳು ಶರಣು

    ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೇ ತಡ, ರಾಜ್ಯದಲ್ಲಿ 50 ಕ್ಕೂ ಹೆಚ್ಚು ಅಪರಾಧಿಗಳು ಪೊಲೀಸರಿಗೆ ಶರಣಾಗಿದ್ದಾರೆ ಅಂತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

    ಇಬ್ಬರು ಅಪರಾಧಿಗಳನ್ನು ಎನ್‍ಕೌಂಟರ್ ಮಾಡಿ ಹತ್ಯೆ ಮಾಡಲಾಗಿದೆ. ಹಲವು ಅಪರಾಧಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: 89 ಜನರಿಗೆ ಕೊರೊನಾ, 85 ಜನ ಡಿಸ್ಚಾರ್ಜ್ – 4 ಸಾವು

    ತಲೆಮರೆಸಿಕೊಂಡಿದ್ದ ಅನೇಕ ಕ್ರಿಮಿನಲ್‍ಗಳು ನಾನು ಶರಣಾಗುತ್ತಿದ್ದೇನೆ. ದಯವಿಟ್ಟು ನನ್ನನ್ನು ಶೂಟ್ ಮಾಡಬೇಡಿ ಎಂಬ ಸಂದೇಶಗಳಿರುವ ಫಲಕಗಳನ್ನು ಕುತ್ತಿಗೆಗೆ ನೇತುಹಾಕಿಕೊಂಡು ಪೊಲೀಸ್ ಠಾಣೆಗೆ ಹಿಂತಿರುಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

    ಕಳೆದ ವಾರ ರೈಲ್ವೆ ನಿಲ್ದಾಣದ ಬಳಿಯ ಶೌಚಾಲಯದಲ್ಲಿ ಮಹಿಳೆಯ ಮೇಲೆ ಆರೋಪಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಆರೋಪಿ ಪತ್ತೆ ಕಾರ್ಯ ಕಷ್ಟವಾಗಿತ್ತು. ಹೀಗಾಗಿ ಆರೋಪಿಯ ಮನೆ ಮುಂದೆ ಬುಲ್ಡೋಜರ್ ನಿಲ್ಲಿಸಲಾಗಿತ್ತು. 24 ಗಂಟೆಯ ಒಳಗಡೆ ಶರಣಾಗದೇ ಇದ್ದರೆ ಮನೆಯನ್ನು ಕೆಡವಲಾಗುತ್ತದೆ ಎಂದು ಸಂದೇಶವನ್ನು ಅಧಿಕಾರಿಗಳು ರವಾನೆ ಮಾಡಿದ್ದರು. ಈ ವಿಚಾರ ತಿಳಿದಿದ್ದೇ ತಡ ಆರೋಪಿ ಠಾಣೆಗೆ ಬಂದು ಶರಣಾಗಿದ್ದ.

     

    ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಯೋಗಿ ಆದಿತ್ಯನಾಥ್ ಸರ್ಕಾರ ಅಕ್ರಮ ಕಟ್ಟಡಗಳೆಂದು ಬಹಳಷ್ಟು ಕಟ್ಟಡಗಳನ್ನು ಕೆಡವಿ ಹಾಕಿತ್ತು. ಯೋಗಿ ಈ ತೆರವು ಕ್ರಮಗಳನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಟೀಕಿಸಿ ಬುಲ್ಡೋಜರ್ ಬಾಬಾ ಎಂದು ವ್ಯಂಗ್ಯವಾಡಿದ್ದರು. ಇದನ್ನೂ ಓದಿ: ವುಹಾನ್‌ ನಂತರ ಚೀನಾದಲ್ಲಿ ಅತಿದೊಡ್ಡ ಲಾಕ್‌ಡೌನ್: 2.6 ಕೋಟಿ ಜನ ಮನೆಯಲ್ಲೇ ಲಾಕ್

    ಯೋಗಿ ಆದಿತ್ಯನಾಥ್ ಬುಲ್ಡೋಜರ್ ಅನ್ನು ಅಭಿವೃದ್ಧಿ ಹಾಗೂ ಶಕ್ತಿಯ ಸಂಕೇತ ಎಂದು ಬಿಂಬಿಸಿದ್ದರು. ಬಿಜೆಪಿ ತನ್ನ ಚುನಾವಣಾ ಪ್ರಚಾರದಲ್ಲಿ ಅನಧಿಕೃತ, ಅಕ್ರಮ ಕಟ್ಟಡಗಳನ್ನು ಕೆಡವುವ ಮೂಲಕ ಭೂಮಾಫಿಯಾಗೆ ಬಿಸಿ ಮುಟ್ಟಿಸುವ ಹಾಗೂ ಎಕ್ಸ್‌ಪ್ರೆಸ್ ಹೈವೇಗಳನ್ನು ಕಟ್ಟುವ ಸಾಧನವಾಗಿ ಅದನ್ನು ಬಿಂಬಿಸಿತ್ತು.