ಲಕ್ನೋ: ಮನೆಯಿಂದಾಚೆ ಆಟವಾಡುತ್ತಿದ್ದ ಅಕ್ಕ, ತಮ್ಮ ಇಬ್ಬರು ಚರಂಡಿಗೆ ಬಿದ್ದು ಸಾವನ್ನಪಿರುವ ಘಟನೆ ನಡೆದಿದೆ.
ರುಬೀನಾ (9) ಹತ್ತು ತಿಂಗಳ ಕಿರಿಯ ಸಹೋದರ ಸುಮಿತ್ ಕುಮಾರ್ ಮೃತರಾಗಿದ್ದಾರೆ. ಇಬ್ಬರು ಆಟವಾಡುತ್ತಿದ್ದಾಗ ಅಲ್ಲೇ ಪಕ್ಕದಲ್ಲಿದ್ದ ಚರಂಡಿಗೆ ಬಿದ್ದಿದ್ದಾರೆ. ಚರಂಡಿ ಸುಮಾರು 15 ಅಡಿ ಆಳವಿದ್ದುದರಿಂದ ಮಕ್ಕಳಿಬ್ಬರು ಸಾವನ್ನಪಿದ್ದಾರೆ.
ಬಿಹಾರದ ಸಮಸ್ತಿಪುರದ ನಿವಾಸಿ ಶಂಭು ಕುಮಾರ್ ಅವರು ತಮ್ಮ ಕುಟುಂಬದೊಂದಿಗೆ ಕೊಳಗೇರಿಯಲ್ಲಿ ವಾಸಿಸುತ್ತಿದ್ದಾರೆ. ಸೋಮವಾರ ಸಂಜೆ 4:30ಕ್ಕೆ ಹಿರಿಯ ಮಗಳು ರುಬೀನಾ, ಸುಮಿತ್ ಕುಮಾರ್‍ನ ಜೊತೆ ಮನೆ ಬಳಿ ಆಟವಾಡುತ್ತಿದ್ದರು. ಈ ವೇಳೆ ಇಬ್ಬರೂ ಅನುಮಾನಾಸ್ಪದವಾಗಿ ಚರಂಡಿಗೆ ಬಿದ್ದಿದ್ದಾರೆ. ಇದನ್ನೂ ಓದಿ:ಸಲಿಂಗ ಸಂಗಾತಿ ಜೊತೆಗೆ ವಧು ಎಸ್ಕೇಪ್
ಮಕ್ಕಳಿಬ್ಬರು ಎಷ್ಟು ಹೊತ್ತಾದರೂ ಮನೆಗೆ ಬಾರದೇ ಇದ್ದಾಗ ಅವರನ್ನು ಹುಡುಕತೊಡಗಿದಾಗ ಸುಮಾರು ಅರ್ಧ ಗಂಟೆಯ ನಂತರ ರುಬೀನಾ ಮತ್ತು ಅವಳ ಸಹೋದರ ಚರಂಡಿಯಲ್ಲಿ ಕಂಡು ಬಂದಿದೆ. ಚರಂಡಿಯಿಂದ ಇಬ್ಬರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ಬರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಗುದ್ದಿದ ಕಾರ್- ಐದು ಮಂದಿ ಸ್ಥಳದಲ್ಲೇ ಸಾವು
ಲಕ್ನೋ: ಬಿಜೆಪಿ ನೇತೃತ್ವದ ಉತ್ತರ ಪ್ರದೇಶದಲ್ಲಿ ಪ್ರತಿದಿನ ಒಬ್ಬ ಸಚಿವ, 2 ಅಥವಾ 3 ಬಿಜೆಪಿ ಶಾಸಕರು ಜನವರಿ 20 ರವರೆಗೆ ರಾಜೀನಾಮೆ ನೀಡುತ್ತಾರೆ ಎಂದು ಧರಂ ಸಿಂಗ್ ಸೈನಿ ಹೇಳಿದರು.
ಬಿಜೆಪಿ ತೊರೆದ ವಿಚಾರವನ್ನು ಮಾಧ್ಯಮಗಳೊಂದಿಗೆ ಬಹಿರಂಗಪಡಿಸಿದ ಅವರು, ಬಿಜೆಪಿಯಲ್ಲಿ ನಾನು ಹೇಳುವುದನ್ನು ಕೇಳುವವರು ಯಾರೂ ಇರಲಿಲ್ಲ. ಹೀಗಾಗಿ ಒಂದು ದಿನ ಸರ್ಕಾರದ ವಿರುದ್ಧ ರಾಜ್ಯದ 140 ಶಾಸಕರು ಧರಣಿ ಕುಳಿತು ಬೆದರಿಕೆ ಹಾಕುವ ಸಮಯ ಬಂದಿದೆ ಎಂದು ಸಿಡಿದರು. ಇದನ್ನೂ ಓದಿ: ಖಾಸಗಿ ಲ್ಯಾಬ್‍ಗಳಲ್ಲೂ ಉಚಿತ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಎಎಪಿ ಆಗ್ರಹ
ಇದೇ ವೇಳೆ ಸಮಾಜವಾದಿ ಪಕ್ಷವನ್ನು ಸೇರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಾನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದ್ದು, ಶುಕ್ರವಾರ ಹೆಚ್ಚಿನ ಚರ್ಚೆ ನಡೆಸುವುದಾಗಿ ತಿಳಿಸಿದರು. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನಿಷೇಧ
ಯುಪಿಯಲ್ಲಿ ಮೊದಲ ಹಂತದ ಅಸೆಂಬ್ಲಿ ಚುನಾವಣೆಗೆ ಇನ್ನೂ 1 ತಿಂಗಳು ಬಾಕಿ ಉಳಿದಿದೆ. ಆದರೆ ಬಿಜೆಪಿಯಿಂದ ಜಿಗಿದ 9ನೇ ಶಾಸಕ ಸೈನಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದರು.
ನವದೆಹಲಿ: ಉತ್ತರ ಪ್ರದೇಶದಲ್ಲಿ ಶಿವಸೇನೆ ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ ಎಂದು ರಾಜ್ಯಸಭಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಶಿವಸೇನೆ ಮೈತ್ರಿಕೂಟ ನಡೆಸುತ್ತ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ರಾಜ್ಯದಲ್ಲಿ ಬದಲಾವಣೆಯನ್ನು ಬಯಸುತ್ತೇವೆ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಂದಾಗಿ ಸಮಾಜವಾದಿ ಪಕ್ಷದೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಯುಪಿಯಲ್ಲಿ ನಮ್ಮ ಪಕ್ಷವು ಹಲವು ವರ್ಷಗಳಿಂದ ಕೆಲಸ ಮಾಡುತ್ತಿದೆ. ಆದರೆ ಬಿಜೆಪಿಯನ್ನು ನೋಯಿಸಲು ಬಯಸದ ಕಾರಣ ನಾವು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಳೆದ 24 ಗಂಟೆಯ ಅವಧಿಯಲ್ಲಿ ಯೋಗಿ ಸರ್ಕಾರದ ಎರಡು ಮಂತ್ರಿಗಳು ರಾಜೀನಾಮೆ
ಮಥುರಾಕ್ಕಾಗಿ ಯಾವುದೇ ಚಳುವಳಿ ನಡೆದರೆ ಶಿವಸೇನೆ ಭಾಗವಹಿಸಲು ಸಿದ್ಧವಾಗಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ 50-100 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಘೋಷಿಸಿದರು. ಉತ್ತರ ಪ್ರದೇಶದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ. ರಾಜ್ಯದಲ್ಲಿ ಬದಲಾವಣೆ ಖಂಡಿತಾ ಕಾಣುತ್ತೇವೆ ಎಂದರು.
ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಇತರ ಮೂವರು ಶಾಸಕರ ಯುಪಿ ಸರ್ಕಾರವನ್ನು ಬಿಟ್ಟು ಹೋಗಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ಉತ್ತರ ಪ್ರದೇಶದಲ್ಲಿ ರಾಜಕೀಯ ಬದಲಾವಣೆಯತ್ತ ಸಾಗುತ್ತಿದೆ ಎಂದು ಸೂಚಿಸುತ್ತದೆ. ಆ ಪಕ್ಷ ತಮ್ಮ ಬಗ್ಗೆ ಏನೇ ಹೇಳಿಕೊಂಡರು ಆ ಪಕ್ಷದ ಸಚಿವರು ಮತ್ತು ಶಾಸಕರು ಆ ಪಕ್ಷವನ್ನು ಏಕೆ ಬಿಟ್ಟು ಹೋಗುತ್ತಿದ್ದಾರೆ. ಇದು ಏನನ್ನು ಸೂಚಿಸುತ್ತದೆ ಎಂದು ಪ್ರಶ್ನಿಸಿದ ಅವರು, ಏನೇ ಹೇಳಿದರು ವಾಸ್ತವವೇ ಬೇರೆ ಇದೆ ಎಂದು ತಿಳಿಸಿದರು.
ಸ್ವಾಮಿ ಪ್ರಸಾದ್ ಮೌರ್ಯ ಅವರು ರಾಜಕೀಯವನ್ನು ಬಹಳ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಅವರು ಸೋಲಲಿರುವ ಪಕ್ಷದೊಂದಿಗೆ ಎಂದಿಗೂ ಉಳಿಯುವುದಿಲ್ಲ. ಅದನ್ನು ತಿಳಿದುಕೊಂಡವರು ಪಕ್ಷವನ್ನು ತೊರೆಯುತ್ತಿದ್ದಾರೆ. ಯುಪಿ ರಾಜಕೀಯ ಬದಲಾವಣೆಯತ್ತ ಸಾಗುತ್ತಿದೆ ಎಂದು ನಾನು ಭಾವಿಸುತ್ತೇನೆ ಎಂದರು. ಇದನ್ನೂ ಓದಿ: ಯೋಗಿ, ಬಿಜೆಪಿಗೆ ಬಿಗ್ ಶಾಕ್ – ಸಚಿವ ಸೇರಿ 4 ಶಾಸಕರು ರಾಜೀನಾಮೆ, ಇಂದು ಎಸ್‌ಪಿ ಸೇರ್ಪಡೆ
ಉತ್ತರ ಪ್ರದೇಶ ವಿಧಾನಸಭೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.
ಲಕ್ನೋ: ಬೀದಿ ವ್ಯಾಪಾರಿಯೊಬ್ಬ ಹಿಟ್ಟಿನ ಮೇಲೆ ಉಗುಳಿ ರೊಟ್ಟಿ ಮಾಡುತ್ತಿದ್ದ ವೀಡಿಯೋ ವೈರಲ್ ಆಗಿದ್ದು, ಆರೋಗ್ಯ ದೃಷ್ಟಿಯಿಂದ ಅಂಗಡಿಯವನನ್ನು ಸೇರಿ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಲಕ್ನೋದ ಹೊರವಲಯದಲ್ಲಿರುವ ಕಾಕೋರಿಯ ರಸ್ತೆಬದಿಯಲ್ಲಿ ಉಪಾಹಾರ ಗೃಹವಿತ್ತು. ಆ ಅಂಗಡಿಯವನು ರೊಟ್ಟಿಯನ್ನು ತಯಾರಿಸಲು ಹಿಟ್ಟಿನ ಮೇಲೆ ಉಗುಳುವುದು ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ 22 ಸೆಕೆಂಡಿನ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈ ಪರಿಣಾಮ ಅಂಗಡಿಯವನನ್ನು ಸೇರಿ ಐದು ಸಹಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ನಿಯಮ ಉಲ್ಲಂಘನೆ – ಪ್ರಭು ಚವ್ಹಾಣ್ ವಿರುದ್ಧ ದೂರು
ಈ ಕುರಿತು ಪ್ರತಿಕ್ರಿಯಿಸಿದ ಕಕೋರಿ ಸಹಾಯಕ ಪೊಲೀಸ್ ಕಮಿಷನರ್ ಅಶುತೋಷ್ ಕುಮಾರ್, ಧಾಬಾ ಮಾಲೀಕ ಯಾಕೂಬ್ ಮತ್ತು ಡ್ಯಾನಿಶ್, ಹಫೀಜ್, ಮುಖ್ತಾರ್, ಫಿರೋಜ್ ಮತ್ತು ಅನ್ವರ್‍ರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
#Lucknow A cook along with five others was arrested from Kakori area after a video showing him spitting on food went viral. pic.twitter.com/aEaZhlmMYa
ಆರೋಪಿಗಳ ವಿರುದ್ಧ ರೋಗ ಹರಡಿಸುವ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೋವಿಡ್ ಸಮಯದಲ್ಲಿ ಈ ರೀತಿಯ ಕೃತ್ಯ ಮಾಡಿದರುವುದು ದೊಡ್ಡ ಅಪರಾಧವಾಗಿದೆ. ಈ ರೀತಿ ರೊಟ್ಟಿ ಮಾಡುವುದರಿಂದ ಸೋಂಕು ಹೆಚ್ಚುತ್ತೆ. ಇವರ ನಿರ್ಲಕ್ಷ್ಯ ಸೋಂಕು ಹರಡಲು ದಾರಿಯಾಗುತ್ತೆ. ಇವರು ಸೋಂಕನ್ನು ಹರಡಲು ಮಾರಣಾಂತಿಕ ಕೃತ್ಯ ಎಸಗಿದ್ದಾರೆ ಎಂದರು. ಇದನ್ನೂ ಓದಿ: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್
ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಸುಶೀಲ್ ರಜಪೂತ್ ಅಪ್ಲೋಡ್ ಮಾಡಿದ್ದಾನೆ. ವೀಡಿಯೋವನ್ನು ದೂರದಿಂದ ಚಿತ್ರೀಕರಿಸಲಾಗಿದೆ. ಅಡುಗೆಯವರು ನಿಜವಾಗಿಯೂ ಉಗುಳಿದ್ದಾರೋ ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ. ಅದಕ್ಕೆ ನಾವು ಈ ಆರೋಪವನ್ನು ಖಚಿತಪಡಿಸಿಕೊಳ್ಳಲು ತಾಂತ್ರಿಕ ನೆರವು ಪಡೆಯುತ್ತೇವೆ ಎಂದು ವಿವರಿಸಿದರು.
ಲಕ್ನೋ: ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದ ಉತ್ತರ ಪ್ರದೇಶದ ಸದರ್ ಕ್ಷೇತ್ರದ ಬಿಜೆಪಿ ಶಾಸಕ ಪಂಕಜ್ ಗುಪ್ತಗೆ ರೈತನೋರ್ವ ಸಾರ್ವಜನಿಕ ಸಭೆಯಲ್ಲೇ ಕಪಾಳಮೋಕ್ಷ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
A video of Pankaj Gupta , a @BJP4UP MLA from Unnao in UP purportedly being ‘slapped’ by a farmer during a recent public meeting has gone viral …incident reportedly 3 days ago … reasons unclear … however now there has been a patch-up… in a new video (in next tweet) pic.twitter.com/GDzfUXjuky
ವೀಡಿಯೋದಲ್ಲಿ ಏನಿದೆ?: ವೇದಿಕೆ ಮೇಲೆ ಕುಳಿತಿದ್ದ ವೇಳೆ ಅಲ್ಲಿಗೆ ಬಂದ ವೃದ್ಧ ರೈತನೋರ್ವ ಪಂಕಜ್ ಗುಪ್ತ ಅವರ ಕೆನ್ನೆಗೆ ಹೊಡೆದಿದ್ದಾನೆ. ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆಯ ವೀಡಿಯೋ ಇದಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಡ್ರ್ಯಾಗನ್ ಫ್ರೂಟ್‍ನಲ್ಲಿ ಕೊರೊನಾ!
ರೈತನನ್ನು ಛತ್ರಪಾಲ್ ಎಂದು ಗುರುತಿಸಲಾಗಿದ್ದು, ಶಾಸಕರನ್ನು ವೇದಿಕೆಯ ಮೇಲೆ ಹೊಡೆದ ನಂತರ ಪೊಲೀಸರು ಆತನನ್ನು ಕರೆದುಕೊಂಡು ಹೋಗುತ್ತಿರುವುದನ್ನು ವೀಡಿಯೋ ತುಣುಕಿನಲ್ಲಿ ನೋಡಬಹುದಾಗಿದೆ. ಇದನ್ನೂ ಓದಿ: ಆಸ್ಕರ್ ವಿಜೇತ ಮೊದಲ ಕಪ್ಪುವರ್ಣೀಯ ಸಿಡ್ನಿ ಪೊಯ್ಟಿಯರ್ ನಿಧನ
उन्नाव सदर से भाजपा विधायक पंकज गुप्ता को आयोजित जनसभा में किसान नेता ने सार्वजनिक रूप से मंच पर ही थप्पड़ जड़ दिया ,
किसान द्वारा मारा गया ये थप्पड़ भाजपा विधायक को नहीं बल्कि यूपी की भाजपा शासित आदित्यनाथ सरकार की कुनीतियों ,कुशासन और तानाशाही के मुंह पर जड़ा गया थप्पड़ है! pic.twitter.com/PSa3DK214p
ಕೆಲವು ಜನರು ಮ್ಯಾಗಿಯನ್ನು ಸಾಕಷ್ಟು ತರಕಾರಿಗಳೊಂದಿಗೆ ಇಷ್ಟಪಟ್ಟರೆ, ಇತರರು ಇದರ ಸೂಪ್ ಅನ್ನು ಇಷ್ಟಪಡುತ್ತಾರೆ. ಆದಾಗ್ಯೂ ಕಳೆದ ಕೆಲವು ತಿಂಗಳುಗಳಲ್ಲಿ ನಾವು ಸಾಮಾಜಿಕ ಜಾಲತಾಣದಲ್ಲಿ ತಿಂಡಿಯ ಬಗ್ಗೆ ಸಾಕಷ್ಟು ವಿವಿಧ ಪ್ರಯೋಗಗಳನ್ನು ನೋಡಿದ್ದೇವೆ. ಫ್ಯಾಂಟಾ ಮ್ಯಾಗಿಯಿಂದ ಮ್ಯಾಗಿ ಮಿಲ್ಕ್ ಶೇಕ್‌ನವರೆಗೂ ಕೆಲವು ಸೂಪರ್ ಪ್ರಯೋಗಗಳು ನಡೆದಿವೆ. ಇದನ್ನೂ ಓದಿ: ಮೀನುಗಾರರ 2 ಗುಂಪುಗಳ ನಡುವೆ ಕಿತ್ತಾಟ- 7 ಮಂದಿಗೆ ಗಾಯ
ಇದೀಗ ವೈರಲ್ ಆಗಿರುವ ವೀಡಿಯೋದಲ್ಲಿ ಬೀದಿ ಬದಿ ವ್ಯಾಪಾರಿ ಪ್ಯಾನ್‍ಗೆ ಸ್ವಲ್ಪ ಎಣ್ಣೆ ಮತ್ತು ತರಕಾರಿಗಳನ್ನು ಸೇರಿಸಿದ್ದಾನೆ. ಮುಂದೆ, ಅವನು ಸ್ವಲ್ಪ ಉಪ್ಪು ಮತ್ತು ಅದಕ್ಕೆ ಬೇಕಾದ ಕೆಲವು ಮಸಾಲೆಗಳನ್ನು ಸೇರಿಸಿದ್ದು, ಈ ಮಿಶ್ರಣಕ್ಕೆ ಕೋಕಾ-ಕೋಲಾದ ಸಣ್ಣ ಬಾಟಲಿಯನ್ನು ಹಾಕಿದ್ದಾನೆ. ನಂತರ ಅವನು ನೂಡಲ್ಸ್ ಮತ್ತು ಮ್ಯಾಗಿ ಮಸಾಲವನ್ನು ಸೇರಿಸಿದ್ದು, ಈ ಮಿಶ್ರಣವನ್ನು ಮತ್ತಷ್ಟು ಬೇಯಿಸಲು ಪ್ಯಾನ್ ಅನ್ನು ಮುಚ್ಚಿದ್ದಾನೆ. ಇದನ್ನೂ ಓದಿ: ಹೆರಿಗೆಗಾಗಿ ಗರ್ಭಿಣಿಯನ್ನು ಮಂಚದ ಮೇಲೆ ಮಲಗಿಸಿ ಹೊತ್ತೊಯ್ದ ಗ್ರಾಮಸ್ಥರು!
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವೀಡಿಯೋವು 2 ಲಕ್ಷಕ್ಕೂ ಅಧಿಕ ವಿಕ್ಷಣೆಗಳನ್ನು ಪಡೆದುಕೊಂಡಿದೆ. ವೀಡಿಯೋಗೆ ಕೋಕಾ-ಕೋಲಾದೊಂದಿಗೆ ಮ್ಯಾಗಿ ಗಾಜಿಯಾಬಾದ್‍ನ ಸಾಗರ್ ಪಿಜ್ಜಾ ಅಂಗಡಿಯಲ್ಲಿ ಲಭ್ಯವಿದೆ ಎಂದು ಬರೆದುಕೊಂಡಿದ್ದು, ಸಾಕಷ್ಟು ನೆಟ್ಟಿಗರು ಕಾಮೆಂಟ್ ಬಾಕ್ಸ್ ಮೂಲಕ ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.
ಲಕ್ನೋ: ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ನಾಟಕ, ಖಿನ್ನತೆ ಮತ್ತು ದೌರ್ಜನ್ಯ ಎಂಬ ಮೂವರು ಸ್ನೇಹಿತರಿದ್ದಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಭಾಷಣವೊಂದರಲ್ಲಿ ಹೇಳಿರುವ ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ.
ಇದೇ ವೇಳೆ ಹರಿದ್ವಾದರ ಧರ್ಮ ಸಂಸತ್‍ನಲ್ಲಿನ ದ್ವೇಷದ ಭಾಷಣದ ವಿಚಾರವಾಗಿ ಪ್ರಸ್ತಾಪ ಮಾಡಿದ್ದು, ದೇಶದಲ್ಲಿ ಬಿಜೆಪಿಯವರು ದ್ವೇಷವನ್ನು ಹರಡುತ್ತಿದ್ದಾರೆ ಇವರುಗಳಿಂದ ಭಾರತದ ಸಂವಿಧಾನವನ್ನ ಉಳಿಸುವ ಅಗತ್ಯವಿದೆ ಎಂದು ವಿವಾದಾತ್ಮಕವಾದ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ‘ಫಿಟ್ ಇಂಡಿಯಾ’ ಬಗ್ಗೆ ಅರಿವು ಮೂಡಿಸಲು ಜಿಮ್‌ನಲ್ಲಿ ವರ್ಕೌಟ್ ಮಾಡಿದ ಮೋದಿ
ಲಕ್ನೋ: ಒಂದು ಕಾಲದಲ್ಲಿ ರಕ್ಷಣೆಗಾಗಿ ಬಳಸಲಾಗುತ್ತಿದ್ದ ರಾಂಪುರಿ ಚಾಕುಗಳನ್ನು ನಂತರದ ದಿನಗಳಲ್ಲಿ ಬಡವರು ಮತ್ತು ದಲಿತರ ಭೂಮಿಯನ್ನು ಆಕ್ರಮಿಸಿಕೊಳ್ಳಲು ಬಳಸುವ ಸಾಧನಗಳಾಗಿ ಪರಿವರ್ತಿಸಲಾಗಿತ್ತು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಮಾಜವಾದಿ ಪಕ್ಷದ ಆಡಳಿತದ ಅವಧಿಯಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.
ರಾಂಪುರದಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್ ಅವರು, ಒಂದು ಕಾಲದಲ್ಲಿ ರಕ್ಷಣೆಗಾಗಿ ಬಳಸಲಾಗುತ್ತಿದ್ದ ರಾಂಪುರಿ ಚಾಕುಗಳನ್ನು ಸಮಾಜವಾದಿ ಪಕ್ಷದ ಆಡಳಿತದ ಅವಧಿಯಲ್ಲಿ ದಲಿತರ ಭೂಮಿ ಮತ್ತು ಬಡವರ ಆಸ್ತಿಯನ್ನು ವಶಪಡಿಸಿಕೊಳ್ಳಲು ಬಳಸುವ ಸಾಧನಗಳಾಗಿ ಪರಿವರ್ತಿಸಲಾಗಿತ್ತು ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಕೊರೊನಾ ತಡೆಗಟ್ಟುವಲ್ಲಿ ಕೇಜ್ರಿವಾಲ್ ಸರ್ಕಾರ ವಿಫಲ: ಚರಣ್‌ಜಿತ್ ಸಿಂಗ್
ಚುನಾವಣೆ ಹಿನ್ನೆಲೆ ಶನಿವಾರ ಎಸ್‍ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ 300 ಯೂನಿಟ್‍ಗಳಷ್ಟು ಉಚಿತ ವಿದ್ಯುತ್ ಪೂರೈಸುವುದಾಗಿ ಭರವಸೆ ನೀಡಿರುವುದಾಗಿ ಕೇಳಿದೆ. ಆದರೆ ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯದ ಮೂಲೆ, ಮೂಲೆಗೂ ವಿದ್ಯುತ್ ತಲುಪುವಂತೆ ನೋಡಿಕೊಳ್ಳಲಾಗಲಿಲ್ಲ. ಈಗ ಯಾವ ಆಧಾರದ ಮೇಲೆ ಉಚಿತ ವಿದ್ಯುತ್ ಕೊಡುತ್ತಾರೆ? ಈ ವಿಚಾರವಾಗಿ ಅಖಿಲೇಶ್ ಯಾದವ್ ಅವರು ಸಾರ್ವಜನಿಕವಾಗಿ ಎಲ್ಲರ ಬಳಿ ಕ್ಷಮೆ ಯಾಚಿಸಬೇಕು ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: Whatsapp – ಒಂದೇ ತಿಂಗಳಲ್ಲಿ ಭಾರತೀಯರ 17 ಲಕ್ಷ ಖಾತೆಗಳು ಬ್ಯಾನ್
ಅಖಿಲೇಶ್ ಯಾದವ್ ಅವರು, ನಮ್ಮ ಸರ್ಕಾರ ಇದ್ದಿದ್ದರೆ ನಾವು ಸಹ ಭವ್ಯವಾದ ರಾಮಮಂದಿರವನ್ನು ನಿರ್ಮಿಸುತ್ತಿದ್ದೇವು ಎಂದು ಹೇಳುತ್ತಾರೆ. ಆದರೆ ಸ್ಮಾಶಾನಗಳನ್ನು ನಿರ್ಮಿಸುವುದಕ್ಕೇ ಅವರಿಗೆ ಸಮಯ ಉಳಿದಿರಲಿಲ್ಲ. ಸಮಯ ಇದ್ದಿದ್ದರೆ ರಾಮಮಂದಿರ ನಿರ್ಮಾಣದ ಬಗ್ಗೆ ಯೋಚಿಸುತ್ತಿದ್ದರು. ಜೊತೆಗೆ ಅಖಿಲೇಶ್ ಯಾದವ್ ಅವರ ಅಧಿಕಾರಾವಧಿಯಲ್ಲಿ ರಾಮಭಕ್ತರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು ಎಂದಿದ್ದಾರೆ.
ಲಕ್ನೋ: ಸಿಟಿಇಟಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಮಹಿಳೆಯರು ಸೇರಿದಂತೆ 18 ಮಂದಿಯನ್ನು ಗೌತಮ್ ಬುದ್ಧನಗರ ಪೊಲೀಸರು ಬಂಧಿಸಿದ್ದಾರೆ.
ಇದೇ ಡಿಸೆಂಬರ್ 30ರಂದು ಸಿಬಿಎಸ್‍ಇ ಆಯೋಜಿಸಿದ್ದ (ಸಿಟಿಇಟಿ) ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ತೊಡಗಿಕೊಂಡಿದ್ದ ಗ್ಯಾಂಗ್‍ವೊಂದನ್ನು ಬೇಧಿಸುವಲ್ಲಿ ಗೌತಮ್ ಬುದ್ಧನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಐವರು ಮಹಿಳೆಯರು ಸೇರಿದಂತೆ 18 ಮಂದಿಯನ್ನು ಗುರುವಾರ ಜಿಲ್ಲೆಯ ಸೆಕ್ಟರ್ 71 ರ ಹೋಟೆಲ್‍ನಲ್ಲಿ ಬಂಧಿಸಿದ್ದಾರೆ. ಇದನ್ನೂ ಓದಿ: ಚಿಟ್ ಫಂಡ್ ಹೆಸರಿನಲ್ಲಿ 6 ಕೋಟಿಗೂ ಹೆಚ್ಚು ಹಣ ದೋಖಾ – ಆರೋಪಿ ಅರೆಸ್ಟ್
ಗುರುವಾರ ಮುಂಜಾನೆ ಪೊಲೀಸರು ಸೆಕ್ಟರ್ 58 ರಲ್ಲಿ ಗಸ್ತು ತಿರುಗುತ್ತಿದ್ದಾಗ, ನೋಯ್ಡಾ ವಿಭಾಗದ ಸೆಕ್ಟರ್ 60 ರಲ್ಲಿ ಮಾರುತಿ ಸುಜುಕಿ ಇಕೊವೊಂದನ್ನು ಗುರುತಿಸಿದ್ದಾರೆ. ಅನುಮಾನಸ್ಪದವಾಗಿ ಆ ಕಾರನ್ನು ಪೊಲೀಸರ ತಂಡವು ಪರಿಶೀಲಿಸಿದಾಗ ಕಾರಿನಲ್ಲಿ ಐವರು ಯುವಕರು ಕುಳಿತುಕೊಂಡಿದ್ದು, ಕೆಲ ಮಹಿಳೆಯರ ಪರ್ಸ್‍ಗಳು ಪೊಲೀಸರಿಗೆ ಸಿಕ್ಕಿವೆ. ಆಗ ಕಾರಿನಲ್ಲಿದ್ದ ಯುವಕರು ಈ ಪರ್ಸ್‍ಗಳು ನೋಯ್ಡಾದ ಸೆಕ್ಟರ್ 71 ರ ಅತಿಥಿ ಗೃಹದಲ್ಲಿ ಇದ್ದ ಕೆಲವು ಮಹಿಳೆಯರಿಗೆ ಸೇರಿದ್ದು ಎಂದು ಹೇಳಿದ್ದಾರೆ.
ಆಗ ನೋಯ್ಡಾದ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಎಡಿಸಿಪಿ) ಕುಮಾರ್ ರಣವಿಜಯ್ ಸಿಂಗ್ ಆರೋಪಿಗಳ ವಿರುದ್ಧ ಅನುಮಾನ ಬಂದು ಪೊಲೀಸ್ ತಂಡದೊಂದಿಗೆ ಸೆಕ್ಟರ್ 71 ರಲ್ಲಿರುವ ಹೋಟೆಲ್ ಅನ್ನು ಶೋಧಿಸಿದ್ದಾರೆ. ಈ ವೇಳೆ ಅಲ್ಲಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳಿಂದ ನಾವು ಮೂರು ಲ್ಯಾಪ್‍ಟಾಪ್‍ಗಳು, ಒಂದು ಕೀಬೋರ್ಡ್ ಒಂದು ಪ್ರಿಂಟರ್, 20 ಮೊಬೈಲ್ ಫೋನ್‍ಗಳು, 36,000 ರೂ. ನಗದು, ಐದು ಕಾರುಗಳು ಒಂದು ಟೊಯೊಟಾ ಫಾರ್ಚುನರ್, ಮಾರುತಿ ಸ್ವಿಫ್ಟ್ ಡಿಜೈರ್, ಮಹೀಂದ್ರಾ ಎಕ್ಸ್‍ಯುವಿ 500, ಮಾರುತಿ ಸುಜುಕಿ ಬಲೆನೊ, ಮಾರುತಿ ಸುಜುಕಿ ಇಕೊ ಮತ್ತು ಸಿಟಿಇಟಿಗೆ ಸಂಬಂಧಪಟ್ಟ 50 ಪ್ರವೇಶ ಪತ್ರಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ರಣವಿಜಯ್ ಸಿಂಗ್ ಬಹಿರಂಗಪಡಿಸಿದ್ದಾರೆ.
ಪೊಲೀಸರೇ ಭಾಗಿ:
ರಾಜಸ್ಥಾನದ ನಿವೃತ್ತ ಸಿಆರ್‍ಪಿಎಫ್ ಕಾನ್‍ಸ್ಟೆಬಲ್ ಭವಾನಿ ಶರ್ಮಾ (45) ಪ್ರಸ್ತುತ ಸಿಆರ್‍ಪಿಎಫ್‍ನಲ್ಲಿ ಸೇವೆ ಸಲ್ಲಿಸುತ್ತಿರುವ ಹೆಡ್ ಕಾನ್‍ಸ್ಟೆಬಲ್ ಶಿವ ರಾಮ್ ಸಿಂಗ್ (32), ಮತ್ತು ಹರಿಯಾಣ ಮೂಲದ ದೆಹಲಿ ಪೊಲೀಸ್ ವಿಕಾಸ್ (30) ಬಂಧಿತ ಆರೋಪಿಗಳು.
ಇಡೀ ಕಾರ್ಯಾಚರಣೆಯನ್ನು ಸೋನಿಪತ್‍ನ ವಿನಯ್ ದಹಿಯಾ ಮತ್ತು ಅಂಕಿತ್ ಕುಮಾರ್ ನಡೆಸಿದ್ದು, ಅವರು ಪರಿಹರಿಸಿದ ಪ್ರಶ್ನೆ ಪತ್ರಿಕೆಗಳನ್ನು ಹಂಚಿಕೊಳ್ಳಲು ಪ್ರತಿ ಅಭ್ಯರ್ಥಿಗೆ 2.5-3 ಲಕ್ಷ ರೂ. ಶುಲ್ಕ ವಿಧಿಸುತ್ತಿದ್ದರು. ಈ ವಿಷಯವನ್ನು ತನಿಖೆ ಮಾಡಲು ನಾವು ಸಿಬಿಎಸ್‍ಇಗೆ ಪತ್ರ ಬರೆಯುತ್ತೇವೆ ಎಂದರು. ಇದನ್ನೂ ಓದಿ: ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ BSF ಯೋಧನ ಅಂತ್ಯಕ್ರಿಯೆ
ನೋಯ್ಡಾದಲ್ಲಿ ಯಾವುದೇ ಪರೀಕ್ಷಾ ಕೇಂದ್ರ ಇರಲಿಲ್ಲ. ಆದಾಗ್ಯೂ ಈ ಶಂಕಿತರು ನೋಯ್ಡಾದಲ್ಲಿ ಪರಿಹರಿಸಿದ ಪತ್ರಿಕೆಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದರು. ಮತ್ತೊಬ್ಬ ಶಂಕಿತ ರವಿ ಎಂಬಾತ ಪ್ರಶ್ನೆಪತ್ರಿಕೆ ಹೊಂದಿರುವ ಪೆನ್‍ಡ್ರೈವ್‍ನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಎಡಿಸಿಪಿ ತಿಳಿಸಿದ್ದಾರೆ.
ಲಕ್ನೋ: ಯುವಕನೊಬ್ಬ ಟ್ರೆಡ್‍ಮಿಲ್‍ನಲ್ಲಿ 12 ಗಂಟೆಗಳ ಕಾಲ ವಿಶ್ರಾಂತಿ ಪಡೆಯಾದೆ 66 ಕಿಮೀ ಓಡಿ ಎಲ್ಲರ ಗಮನ ಸೆಳೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಫಿಟ್‍ನೆಸ್ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಝೈನುಲ್ ಅಬೇದಿನ್ ಯುವಕ ಟ್ರೆಡ್‍ಮಿಲ್‍ನಲ್ಲಿ 12 ಗಂಟೆಗಳ ಕಾಲ ವಿಶ್ರಾಂತಿಯನ್ನು ಪಡೆಯದೆ 66 ಕಿಲೋಮೀಟರ್ ದೂರವನ್ನು ಓಡಿದ್ದಾರೆ. ಈ ಮೂಲಕ ರಾಜ್ಯದ ಎಲ್ಲರ ಗಮನ ಸೆಳೆದಿರುವ ಅಬೇದಿನ್ ಅವರು ತಮ್ಮ ಹೆಸರು ಗಿನ್ನೆಸ್ ಬುಕ್ ಆಫ್ ವಲ್ರ್ಡ್ ರೆಕಾರ್ಡ್‍ನಲ್ಲಿ ಸೇರಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಅವರ ಬೆಂಬಲಿಗರು ಮತ್ತು ಕಾರ್ಯಕ್ರಮದಲ್ಲಿದ್ದ ಎಲ್ಲರೂ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಇದನ್ನೂ ಓದಿ: ಸಂಸತ್ತಿನಲ್ಲೇ ಪರಸ್ಪರ ಹೊಡೆದಾಡಿಕೊಂಡ ಜನಪ್ರತಿನಿಧಿಗಳು
ಈ ವೇಳೆ ಜಿಲ್ಲೆಯ ಹಲವು ಅಧಿಕಾರಿಗಳು ಝೈನುಲ್ ಅಬೇದಿನ್ ಅವರನ್ನು ಭೇಟಿ ಮಾಡಿ ಹುರಿದುಂಬಿಸಿದರು. ಕಾರ್ಯಕ್ರಮ ಪೂರ್ಣಗೊಂಡ ನಂತರ ಶನಿವಾರ ತಡರಾತ್ರಿ, ಅಬೇದಿನ್ ಅವರ ಮೇಲೆ ಬೆಂಬಲಿಗರು ಹೂವಿನ ಮಳೆ ಸುರಿಸಿ ಅಭಿನಂದನೆ ಸಲ್ಲಿಸಿದ್ದಾರೆ
ಈ ಹಿಂದೆ ಝೈನುಲ್ ಅಬೇದಿನ್ ಅವರು ಅನೇಕ ರೇಸ್‍ಗಳಲ್ಲಿ ಭಾಗವಹಿಸಿದ್ದು, ‘ಮೊರಾದಾಬಾದ್ ಎಕ್ಸ್ ಪ್ರೆಸ್’ ಎಂದು ಜನಪ್ರಿಯರಾಗಿದ್ದಾರೆ. 2018 ರಲ್ಲಿ ಮಹಿಳೆಯರ ಗೌರವಾರ್ಥವಾಗಿ, ಅಬೇದಿನ್ ಅವರು ದೆಹಲಿಯ ಇಂಡಿಯಾ ಗೇಟ್‍ನಿಂದ ಪ್ರಾರಂಭಿಸಿ ಆಗ್ರಾ, ಜೈಪುರ ಮತ್ತು ದೆಹಲಿವರೆಗೂ ಓಡಿದ್ದರು. ಇದನ್ನೂ ಓದಿ: ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ
ಈ ಓಟವನ್ನು ಅವರು ಏಳು ದಿನ, 22 ಗಂಟೆಗಳಲ್ಲಿ ಪೂರ್ಣಗೊಳಿಸಿದ್ದರು. ಈ ಸಾಧನೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದರು. ಅಲ್ಲದೇ ಇವರು ಕೋವಿಡ್ ಸಮಯದಲ್ಲಿಯೂ ಅಬೇದಿನ್ ಪೊಲೀಸರ ಗೌರವಾರ್ಥವಾಗಿ 50 ಕಿಲೋಮೀಟರ್ ಓಡಿದ್ದರು.