ಲಕ್ನೋ: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ (Agra-lucknow Expressway) ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ 5 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಫಿರೋಜಾಬಾದ್ ಗ್ರಾಮಾಂತರ ಪೊಲೀಸ್ ಅಧಿಕಾರಿ ಅಖಿಲೇಶ್ ಭಡೋರಿಯಾ ಮಾತನಾಡಿ, ಬಸ್ ಮಥುರಾದಿಂದ ಲಕ್ನೋಗೆ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯ ಥಾನಾ ನಸಿರ್‌ಪುರ್ ಬಳಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕೋವಿಡ್ ಹಗರಣ – ಬಿಎಸ್‍ವೈ, ರಾಮುಲು ವಿರುದ್ಧ ಸರ್ಕಾರದ ಪ್ರಾಸಿಕ್ಯೂಷನ್ ಅಸ್ತ್ರ
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಚಾಲಕ ನಿದ್ರೆಗೆ ಜಾರಿದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದಿದ್ದಾರೆ.
ಲಕ್ನೋ: ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಅಡಾಲ್‌ಹಾಟ್‌ನ ನಾರಾಯಣಪುರ ಬಜಾರ್ ರೈಲು ನಿಲ್ದಾಣದ ಬಳಿ ನಡೆದಿದೆ.
ಲಕ್ನೋ: ಹಳೆಯ ಭೂಮಿ ವಿವಾದದ ಹಿನ್ನೆಲೆ 17 ವರ್ಷದ ಬಾಲಕನ ಶಿರಚ್ಛೇದನ ಮಾಡಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರದ (Jaunpur) ಕಬಿರುದ್ದೀನ್‌ಪುರ (Kabiruddinpur) ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕೆಲವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಾಯಿ ಮಗನ ತುಂಡರಿಸಿದ ತಲೆಯನ್ನು ಮಡಿಲಲ್ಲಿ ಇಟ್ಟು ಹಲವು ಗಂಟೆಗಳ ಕಾಲ ರೋಧಿಸಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಹಿರಿಯ ಆಡಳಿತಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸಿದರು.
ಜಿಲ್ಲಾ ಮ್ಯಾಜಿಸ್ಟ್ರೇಟ್ ದಿನೇಶ್ ಚಂದ್ರ ಹಾಗೂ ಲೇಖ್ಪಾಲ್ (ಸ್ಥಳೀಯ ಕಂದಾಯ ಅಧಿಕಾರಿ) ಜಗದೀಶ್ ಯಾದವ್ ಅವರನ್ನು ಅಮಾನತುಗೊಳಿಸಿದ್ದಾರೆ. ಪ್ರದೇಶವನ್ನು ನೋಡಿಕೊಳ್ಳುವ ಕಂದಾಯ ನಿರೀಕ್ಷಕ ಮುನ್ನಿ ಲಾಲ್ ವಿರುದ್ಧ ಕ್ರಮಕ್ಕಾಗಿ ಆಡಳಿತಕ್ಕೆ ವರದಿ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಬಿಟ್ಟಿದ್ದ 300 ವಿಶೇಷ ಬಸ್ ಸಂಚಾರ ರದ್ದು
ಕಬಿರುದ್ದೀನ್ ಗ್ರಾಮದಲ್ಲಿ ಇಬ್ಬರ ನಡುವೆ ಭೂಮಿ ವ್ಯಾಜ್ಯ ಉಂಟಾಗಿತ್ತು, ಇದು ತೀವ್ರಸ್ವರೂಪ ಪಡೆದುಕೊಂಡು ಅ.30 ರಂದು ಘರ್ಷಣೆಗೆ ಕಾರಣವಾಗಿತ್ತು. ಈ ಘರ್ಷಣೆಯಲ್ಲಿ ರಾಮ್ಜಿತ್ ಯಾದವ್ ಎಂಬವರ 17 ವರ್ಷದ ಪುತ್ರನ ಶಿರಚ್ಛೇದವಾಗಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಶಿರಚ್ಛೇದನ ಮಾಡಿದ ವ್ಯಕ್ತಿ ತಪ್ಪಿಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ಆರಂಭವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಡದಂತೆ ತಡೆಯಲು ಹಲವು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ.
ಸಂತ್ರಸ್ತೆಯ ಸೋದರ ಸಂಬಂಧಿ ರಾಮಜಾಸ್ ಯಾದವ್ ನೀಡಿದ ದೂರಿನ ಆಧಾರದ ಮೇಲೆ, ಆರು ಜನರ ವಿರುದ್ಧ ಜೌನ್‌ಪುರದ ಗೌರಾ ಬಾದಶಹಪುರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅವರಲ್ಲಿ ಕೆಲವರು ಅಪರಿಚಿತರು. ವಿವರವಾದ ತನಿಖೆ ನಡೆಸಲಾಗುವುದು ಎಂದು ಅಧಿಕಾರಿ ಅಜಿತ್ ಕುಮಾರ್ ರಜಾಕ್ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ, ಜೆಡಿಎಸ್‌ನಲ್ಲಿ ಭವಿಷ್ಯವಿಲ್ಲ ಎಂದು ನೂರಾರು ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ: ಡಿಕೆಶಿ
ಪೊಲೀಸರ ಪ್ರಕಾರ, ರಾಮಜೀತ್ ಯಾದವ್ ಮತ್ತು ಅವರ ನೆರೆಹೊರೆಯವರಾದ ಲಲ್ತಾ ಯಾದವ್ ನಡುವೆ ಸುಮಾರು ನಾಲ್ಕು ದಶಕಗಳಿಂದ ಜಮೀನು ವಿವಾದ ನಡೆಯುತ್ತಿದೆ. ಮಂಗಳವಾರ, ಲಲ್ತಾ ಯಾದವ್ ಅವರ ಕೆಲವು ಕುಟುಂಬ ಸದಸ್ಯರು ವಿವಾದಿತ ಸ್ಥಳದಲ್ಲಿದ್ದ ಹುಲ್ಲು ತೆರವುಗೊಳಿಸಲು ಪ್ರಾರಂಭಿಸಿದರು. ರಾಮ್‌ಜೀತ್ ಅವರ ಸಹೋದರ ಇದಕ್ಕೆ ಆಕ್ಷೇಪಣೆಯನ್ನು ಎತ್ತಿದರು ಇಬ್ಬರ ನಡುವೆ ವಾಗ್ವಾದ ನಡೆಯಿತು. ಸ್ಥಳೀಯರು ಮಧ್ಯ ಪ್ರವೇಶಿಸಿ ಸಮಾಧಾನಪಡಿಸಿದರು. ಸಧ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪಶ್ಚಿಮ ಘಟ್ಟವನ್ನು ಕಾಶ್ಮೀರವಾಗಿಸಿದ ಮಳೆಯ ಮಂಜು
ಭಾನುವಾರ (ಅ.27ರಂದು) ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, 45 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದಾರೆ. ಜೊತೆಗೆ ನೆಲಮಹಡಿಯಲ್ಲಿರುವ ಕಪ್ಪು ಚೀಲವೊಂದರಲ್ಲಿ ಸ್ಫೋಟಕ ವಸ್ತುಗಳಿವೆ. ಒಂದು ವೇಳೆ ನೀವು ಹಣ ಕೊಡದೇ ಇದ್ದರೆ ನಿಮ್ಮ ಹೋಟೆಲ್ ಸ್ಫೋಟಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನನಗೆ ಹಣ ಬೇಕು ಇಲ್ಲವಾದರೆ ನಾನು ಸ್ಫೋಟಕಗಳನ್ನು ಸ್ಫೋಟಿಸುತ್ತೇನೆ. ರಕ್ತಪಾತವಾಗುತ್ತದೆ. ನೀವು ಏನೇ ಪ್ರಯತ್ನ ಮಾಡಿದರೂ ಅದು ವ್ಯರ್ಥವಾಗುತ್ತದೆ ಎಂದು ಬರೆದಿದ್ದಾರೆ. ಜೊತೆಗೆ ಹಣ ಕಳುಹಿಸಲು ಹೆಚ್ಚಿನ ಮಾಹಿತಿಗಾಗಿ ಈ ಇಮೇಲ್‌ಗೆ shaikha.nasser20077@gmail.com ಸಂಪರ್ಕಿಸುವಂತೆ ತಿಳಿಸಿದ್ದಾರೆ.
ಇತ್ತೀಚಿಗಷ್ಟೇ ತಿರುಪತಿಯ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಇದಕ್ಕೂ ಸುಮಾರು ದೇಶ-ವಿದೇಶದ 250ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದ್ದವು. ಈ ಸಂಬಂಧ ಈಗಾಗಲೇ ತನಿಖೆ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ಸಚಿವಾಲಯ ಅಪರಾಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ.ಇದನ್ನೂ ಓದಿ: ಕುಮಾರಸ್ವಾಮಿ ಮನೆದೇವ್ರು ದುರ್ಯೋಧನ, ಲಾಂಛನ ನಾಗರಹಾವು ಅಂದಿದ್ದು ಯಡಿಯೂರಪ್ಪ: ಬಾಲಕೃಷ್ಣ
ಲಕ್ನೋ: ಪ್ರೇಯಸಿ ಜೊತೆ ಲಾಂಗ್‌ಡ್ರೈವ್ ಹೋಗಲು ಕಾರಿಲ್ಲದೇ ಪರದಾಡುತ್ತಿದ್ದ ಸ್ನೇಹಿತನಿಗಾಗಿ, ಕಾರು ಕಳ್ಳತನ ಮಾಡಿ ಫ್ರೆಂಡ್ಸ್ ಸಹಾಯ ಮಾಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ನೋಯ್ಡಾದಲ್ಲಿ (Noida) ನಡೆದಿದೆ.
ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಶ್ರೇಯ್, ಅನಿಕೇತ್ ನಗರ್ ಹಾಗೂ ದೀಪಾಂಶು ಭಾಟಿ ಎಂದು ಗುರುತಿಸಲಾಗಿದೆ. ಆದರೆ ಈ ಮೂವರ ಪೈಕಿ ಕಾರು ಕಳ್ಳತನಕ್ಕೆ ಯೋಜನೆ ರೂಪಿಸಿದ್ದವರು ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಕಳ್ಳತನದ ಕೆಲವು ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.ಇದನ್ನೂ ಓದಿ: ಕೋರಮಂಗಲದಲ್ಲಿ ರಿಲಯನ್ಸ್ ರಿಟೇಲ್ ‘ಯೂಸ್ಟಾ’ ಸ್ಟೋರ್ ಓಪನ್ – ಯುವಜನರ ಫ್ಯಾಷನ್ ಬ್ರ್ಯಾಂಡ್
ಇಬ್ಬರು ಕಾಲೇಜು ವಿದ್ಯಾರ್ಥಿಗಳು ಅವರ ಸ್ನೇಹಿತ ಹಾಗೂ ಆತನ ಪ್ರೇಯಸಿಯೊಟ್ಟಿಗೆ ಲಾಂಗ್‌ಡ್ರೈವ್ ತೆರಳಲು ಕಾರಿಲ್ಲದೇ ಇದ್ದಾಗ ಸಹಾಯ ಮಾಡಲು ಮುಂದಾಗಿದ್ದರು. ಗ್ರೇಟರ್ ನೋಯ್ಡಾದ ಶೋರೂಮ್ ಒಂದರಲ್ಲಿ ಕಾರನ್ನು ಕಳ್ಳತನ ಮಾಡುವ ಯೋಜನೆ ಹಾಕಿದ್ದರು.
ಸೆ.26 ರಂದು ಇಬ್ಬರು ಆರೋಪಿಗಳು ಗ್ರೇಟರ್ ನೋಯ್ಡಾದ ಕಾರ್ ಬಜಾರ್‌ನಲ್ಲಿ ನಿಲ್ಲಿಸಿದ್ದ ಹುಂಡೈ ವೆನ್ಯೂ (Hundai Venue) ಕಾರನ್ನು ಟೆಸ್ಟ್ ಡ್ರೈವ್ ಮಾಡಲು ಕೇಳಿದ್ದಾರೆ. ಈ ವೇಳೆ ಕಾರ್ ಡೀಲರ್ ನಿಲ್ಲಿಸಿದ್ದ ಕಾರನ್ನು ಪಾರ್ಕಿಂಗ್‌ನಿಂದ ಹೊರತೆಗೆದು ಇಬ್ಬರನ್ನು ಕಾರಿಗೆ ಹತ್ತಿಸಿಕೊಂಡಿದ್ದಾನೆ. ಕಾರ್ ಡೀಲರ್ ಕಾರನ್ನು ಓಡಿಸುತ್ತಿದ್ದ. ಇಬ್ಬರಲ್ಲಿ ಒಬ್ಬ ಮುಂದೆ ಹಾಗೂ ಇನ್ನೊಬ್ಬ ಕಾರಿನ ಹಿಂಬದಿ ಸೀಟಿನಲ್ಲಿ ಕೂತಿದ್ದ. ಬಳಿಕ ಕಾರು ಅಲ್ಲಿಂದ ತೆರಳಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಲ್ಲಿಂದ ಕಾರು ಹೊರಟ ಬಳಿಕ ಇಬ್ಬರು ಆರೋಪಿಗಳು ಕಾರ್ ಡೀಲರ್‌ನನ್ನು ಹೊರಗೆ ತಳ್ಳಿ, ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಹೋಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಲಕ್ನೋ: ಕೆಲಸ ಮಾಡುವಾಗ ಕೂತಿದ್ದ ಕುರ್ಚಿಯಿಂದ ಬಿದ್ದು ಬ್ಯಾಂಕ್ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಲಕ್ನೋದ ವಿಭೂತಿಖಂಡದ (VibhutiKhanda) ಹೆಚ್‌ಡಿಎಫ್‌ಸಿ ಬ್ಯಾಂಕ್ (HDFC Bank Branch) ಶಾಖೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು 45 ವರ್ಷದ ಸದಾಫ್ ಫಾತಿಮಾ ಎಂದು ಗುರುತಿಸಲಾಗಿದ್ದು, ಲಕ್ನೋದ ವಿಭೂತಿಖಂಡದ ಹೆಚ್‌ಡಿಎಫ್‌ಸಿ ಬ್ಯಾಂಕ್ ಶಾಖೆಯಲ್ಲಿ ಹೆಚ್ಚುವರಿ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ವಿಭೂತಿಖಂಡದ ಸಹಾಯಕ ಪೊಲೀಸ್ ಆಯುಕ್ತ ರಾಧಾರಮಣ ಮಾತನಾಡಿ, ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಾವಿಗೆ ಕಾರಣ ಏನು ಎಂಬುದು ಪರೀಕ್ಷೆಯ ಬಳಿಕ ಸ್ಪಷ್ಟವಾಗುತ್ತದೆ ಎಂದಿದ್ದಾರೆ. ಈ ಬೆನ್ನಲ್ಲೇ ಆಕೆಯ ಸಹೋದ್ಯೋಗಿ ಪ್ರತಿಕ್ರಿಯಿಸಿ, ಫಾತಿಮಾ ಕೆಲಸದ ಒತ್ತಡದಲ್ಲಿದ್ದಳು ಎಂದು ತಿಳಿಸಿದ್ದಾರೆ.
लखनऊ में काम के दबाव और तनाव के कारण एचडीएफ़सी की एक महिलाकर्मी की ऑफिस में ही, कुर्सी से गिरकर, मृत्यु का समाचार बेहद चिंतनीय है।
ऐसे समाचार देश में वर्तमान अर्थव्यवस्था के दबाव के प्रतीक हैं। इस संदर्भ में सभी कंपनियों और सरकारी विभागों तक को गंभीरता से सोचना होगा। ये देश के… pic.twitter.com/Xj49E01MSs
ಪ್ರಕರಣದ ಕುರಿತು ಸಮಾಜವಾದಿ ಪಕ್ಷದ (Samajwadi Party) ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಎಕ್ಸ್ (X) ಖಾತೆಯಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಇದು ಆತಂಕಕಾರಿ ವಿಷಯವಾಗಿದೆ. ದೇಶದ ಪ್ರಸ್ತುತ ಆರ್ಥಿಕ ಒತ್ತಡವನ್ನು ಪ್ರತಿಬಿಂಬಿಸುತ್ತದೆ. ಇದಕ್ಕೆ ಸಂಬಂಧಿಸಿದಂತೆ ಕಂಪನಿಗಳು ಹಾಗೂ ಸರ್ಕಾರಿ ಇಲಾಖೆಗಳು ಗಂಭೀರವಾಗಿ ಯೋಚಿಸಬೇಕು. ಇದು ದೇಶದ ಮಾನವ ಸಂಪನ್ಮೂಲಕ್ಕೆ ತುಂಬಲಾರದ ನಷ್ಟ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ನಿನ್ನೆ ಬಂದಿರೋದು ಪೊಲಿಟಿಕಲ್ ಜಡ್ಜ್‌ಮೆಂಟ್: ಜಮೀರ್ ಅಹ್ಮದ್
ಈ ಮೂಲಕ ಚೊಚ್ಚಲ ಹೆಜ್ಜೆಯನ್ನು ಇಡಲು ಶಂಖ್ ವಿಮಾನಯಾನ ಸಂಸ್ಥೆ ಸಿದ್ಧವಾಗಿದೆ. ಇದು ಉತ್ತರಪ್ರದೇಶದ ಲಕ್ನೋ (Lucknow) ಮತ್ತು ನೋಯ್ಡಾದಲ್ಲಿ (Noida) ಕೇಂದ್ರಗಳನ್ನು ಹೊಂದಿದೆ.
ಶಂಖ್ ಏರ್ ಇದು ಭಾರತದ ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ. ಜೊತೆಗೆ ಅಂತರರಾಜ್ಯಗಳಿಗೂ ಸೇವೆ ಸಲ್ಲಿಸಲು ಸಿದ್ಧವಾಗಿದೆ. ಇದು ಪ್ರಮುಖ ನಗರಗಳನ್ನು ಸಂಪರ್ಕಿಸುವುದು, ಕಡಿಮೆ ಪ್ರದೇಶಗಳಲ್ಲಿ ವಾಯು ಸಂಪರ್ಕವನ್ನು ಸುಧಾರಿಸುವ ಉದ್ದೇಶವನ್ನು ಹೊಂದಿದೆ.
ಈ ವಿಮಾಂನಯಾನ ಸಂಸ್ಥೆಯು ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ 63 ಶೇಕಡಾ ಮಾರುಕಟ್ಟೆ ಪಾಲನ್ನು ಹೊಂದಿದೆ ಮತ್ತು ಮತ್ತಷ್ಟು ವಿಸ್ತರಿಸುವ ಗುರಿಯನ್ನು ಹೊಂದಿದೆ ಎಂದು ಮೂಲಗಳು ತಿಳಿಸಿವೆ.
ಲಕ್ನೋ: ಅಪ್ರಾಪ್ತ ದಲಿತ ಬಾಲಕಿಯ (Dalit Girl) ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿ (Gang Rape) ಬಳಿಕ ಆಕೆಯ ತಲೆಗೆ ಇಟ್ಟಿಗೆಯಿಂದ ಹೊಡೆದಿರುವ ಘಟನೆ ಲಕ್ನೋದ (Lucknow) ಬಕ್ಷಿ ಕಾ ತಲಾಬ್ ಪ್ರದೇಶದಲ್ಲಿ ನಡೆದಿದೆ. ಬಾಲಕಿ ಆಹಾರ ಮಳಿಗೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ ಬಾಲಕಿ ತನ್ನ ಮನೆಗೆ ಬಂದು ಕುಟುಂಬದ ಸದಸ್ಯರಿಗೆ ವಿಷಯ ತಿಳಿಸಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಬಗ್ಗೆ ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಲಾಗಿದೆ. ದೂರಿನ ಬೆನ್ನಲ್ಲೇ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ. ಇದನ್ನೂ ಓದಿ: ಪೋಕ್ಸೋ ಕೇಸ್ – ಬಿಎಸ್‍ವೈಗೆ ತಾತ್ಕಾಲಿಕ ರಿಲೀಫ್
ಘಟನೆಯ ಕುರಿತು ಮಾತನಾಡಿದ ಲಕ್ನೋ ಉತ್ತರದ ಉಪ ಪೊಲೀಸ್ ಆಯುಕ್ತ ಅಭಿಜಿತ್ ಆರ್ ಶಂಕರ್, ಬಾಲಕಿಯ ದೂರಿನ ಆಧಾರದ ಮೇಲೆ, ಬಕ್ಷಿ ಕಾ ತಾಲಾಬ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್, ಪೋಕ್ಸೊ, ಎಸ್‌ಸಿ/ಎಸ್ಟಿ ಕಾಯಿದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚೀನಾಗಿಂತ ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚು – ಅಮೆರಿಕದಲ್ಲಿ ರಾಹುಲ್ ಗಾಂಧಿ ಭಾಷಣ
ಲಕ್ನೋ: ರೈಲು ಹಳಿ ಮೇಲೆ ಸಿಲಿಂಡರ್ ಇರಿಸಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ ಘಟನೆ ಉತ್ತರ ಪ್ರದೇಶದ (Uttarpradesh) ಕಾನ್ಪುರದಲ್ಲಿ (Kanpur) ನಡೆದಿದೆ.
ಭಾನುವಾರ ರಾತ್ರಿ 8:25ರ ವೇಳೆ ಕಾನ್ಪುರದಿಂದ ಭಿವಾನಿಗೆ ಪ್ರಯಾಣಿಸುತ್ತಿದ್ದ ಕಾಳಿಂದಿ ಎಕ್ಸ್‌ಪ್ರೆಸ್ (Kalindi Express) ಹಳಿ ಮೇಲಿದ್ದ ಸಿಲಿಂಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸಿಲಿಂಡರ್ ದೂರಕ್ಕೆ ಚಿಮ್ಮಿ ಸ್ಫೋಟಗೊಂಡಿದೆ.ಇದನ್ನೂ ಓದಿ: ಮುಡಾ ಕೇಸ್ ವಿಚಾರಣೆ – ಇಡೀ ದಿನ ಸಿಎಂ ಕಾರ್ಯಕ್ರಮ ರಿಸರ್ವ್
ಕಾನ್ಪುರದಿಂದ ಕಾಸ್‌ಗಂಜ್ ಮಾರ್ಗದಲ್ಲಿ ರೈಲು ಚಲಿಸುತ್ತಿತ್ತು. ರ‍್ರಾಜ್‌ಪುರ ಹಾಗೂ ಬಿಲ್ಹೌರ್ ನಿಲ್ದಾಣಗಳ ಮಧ್ಯೆ ಮುಂಡೇರಿ ಕ್ರಾಸಿಂಗ್ ಬಳಿ ಈ ಘಟನೆ ನಡೆದಿದೆ. ಮುಂಡೇರಿ ಕ್ರಾಸಿಂಗ್ ಬಳಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ.
ಗಂಟೆಗೆ 70 ರಿಂದ 80 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ರೈಲು ಹಳಿಯ ಮೇಲಿದ್ದ ಸಿಲಿಂಡರ್‌ಗೆ ಡಿಕ್ಕಿ ಹೊಡೆದಿದೆ. ರೈಲು ಹಳಿಯ ಮೇಲಿದ್ದ ಸಿಲಿಂಡರ್‌ನ್ನು ನೋಡಿ ಚಾಲಕ ರಾಜ್ ಕಿಶೋರ್ ರೈಲಿನ ತುರ್ತು ಬ್ರೇಕ್ ಬಳಸಿ ನಿಲ್ಲಿಸಿದ್ದಾರೆ.
STORY | Attempt made to derail Kalindi Express by placing LPG cylinder on tracks in Kanpur: Police
VIDEO: “We received the information from railway authorities. The train was heading towards Bhiwani from Prayagraj when the driver saw the cylinder… pic.twitter.com/nLJtQm3ri2
Kanpur: A conspiracy to cause a train accident was uncovered when the Kalindri Express hit an LPG cylinder placed on the Anwarganj-Kasganj railway track. An explosion occurred, but the loco pilot stopped the train in time. Railway officials and the RPF/GRP are investigating, and… pic.twitter.com/y7gkPedYK8
ಘಟನೆಯ ಬಳಿಕ 22 ನಿಮಿಷಗಳ ಕಾಲ ನಿಂತ ರೈಲು ಮತ್ತೆ ಪ್ರಯಾಣ ಬೆಳೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ತನಿಖೆ ವೇಳೆ ಸುಮಾರು 50 ಮೀಟರ್ ದೂರದಲ್ಲಿ ತುಂಬಿದ್ದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್, ಬೆಂಕಿ ಪೊಟ್ಟಣ ಹಾಗೂ ಪೆಟ್ರೋಲ್ ಬಾಟಲ್ ಪತ್ತೆಯಾಗಿದ್ದು, ಸ್ಫೋಟಕಗಳೆಂದು ಭಾವಿಸಲಾದ ಪುಡಿಯ ವಸ್ತು ಪತ್ತೆಯಾಗಿದೆ. ಸದ್ಯ ವಸ್ತುಗಳ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತಾದ್ಯಂತ ರೈಲುಗಳ ಮೇಲೆ ದಾಳಿ ನಡೆಸುವಂತೆ ಸ್ಲೀಪರ್ ಸೆಲ್‌ಗಳಿಗೆ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಸೂತ್ರಧಾರ ಪಾಕಿಸ್ತಾನದಲ್ಲಿರುವ ಉಗ್ರ ಫರ್ಹಾತುಲ್ಲಾ ಘೋರಿ ಕರೆ ನೀಡಿದ್ದ. ಶರ್ ಕುಕ್ಕರ್ ಬಳಸಿ ಬಾಂಬ್ ಸ್ಫೋಟಿಸುವ ವಿವಿಧ ವಿಧಾನಗಳನ್ನು ಈ ವೀಡಿಯೊದಲ್ಲಿ ವಿವರಿಸಿದ್ದಾನೆ ಎಂದು ಗುಪ್ತಚರ ಮೂಲಗಳು ತಿಳಿಸಿದ್ದವು. ಇದನ್ನೂ ಓದಿ: ಭಾರತದ ರೈಲು, ಪೆಟ್ರೋಲ್ ಪೈಪ್‌ಲೈನ್‌ಗಳ ಮೇಲೆ ದಾಳಿ ಮಾಡಿ -ರಾಮೇಶ್ವರಂ ಕೆಫೆ ಸ್ಫೋಟ ಸಂಚುಕೋರನಿಂದ ಕರೆ
ಲಕ್ನೋ: ಟ್ರಾನ್ಸ್ಪೋರ್ಟ್ ನಗರದಲ್ಲಿ ಶನಿವಾರ ಸಂಜೆ ಮೂರು ಅಂತಸ್ತಿನ ಕಟ್ಟಡ ಕುಸಿದು 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 24 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದ ಅವಶೇಷಗಳಲ್ಲಿ ಹುದುಗಿಕೊಂಡಿರುವವರನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಯುತ್ತಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್‌ಡಿಆರ್‌ಎಫ್) ರಕ್ಷಣಾ ಪಡೆಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ಘಟನೆ ನಡೆದ ಸ್ಥಳದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಮಿಷನರ್ ಜಿ.ಎಸ್ ನವೀನ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: IAS ಸೇವೆಯಿಂದಲೇ ಪೂಜಾ ಖೇಡ್ಕರ್ ವಜಾ – ಕೇಂದ್ರ ಸರ್ಕಾರ ಆದೇಶ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯದ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆ ನೋವಿನಿಂದ ಕೂಡಿದೆ. ಲಕ್ನೋದ ಮ್ಯಾಜಿಸ್ಟ್ರೇಟ್ ಜೊತೆ ಮಾತನಾಡಿದ್ದೇನೆ. ಘಟನೆಯ ಬಗ್ಗೆ ಕರೆ ಮಾಡಿ ಎಲ್ಲಾ ವಿಚಾರಗಳನ್ನು ತಿಳಿದುಕೊಂಡಿದ್ದೇನೆ ಎಂದರು. ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ನಡೆಸುತ್ತಿದೆ. ಸಂತ್ರಸ್ತರಿಗೆ ಸಾಧ್ಯವಾಗುವ ಎಲ್ಲಾ ಸಹಾಯವನ್ನು ಮಾಡುತ್ತಿದೆ ಎಂದರು. ಇದನ್ನೂ ಓದಿ: ಪ್ರೀತಿಯಿಂದ ಸುಧಾಕರ್ ಸವಾಲನ್ನು ಸ್ವೀಕರಿಸುತ್ತೇನೆ: ಡಿಕೆಶಿ