Tag: lucknow

  • ಲಕ್ನೋದ ಹಾಸ್ಟೆಲ್‌ನಲ್ಲಿ ಎನ್‌ಐಎ ಅಧಿಕಾರಿ ಪುತ್ರಿಯ ನಿಗೂಢ ಸಾವು!

    ಲಕ್ನೋದ ಹಾಸ್ಟೆಲ್‌ನಲ್ಲಿ ಎನ್‌ಐಎ ಅಧಿಕಾರಿ ಪುತ್ರಿಯ ನಿಗೂಢ ಸಾವು!

    – 19 ವರ್ಷದ ಕಾನೂನು ವಿದ್ಯಾರ್ಥಿನಿ ಸಾವಿನ ಬಗ್ಗೆ ಪೊಲೀಸರು ಹೇಳಿದ್ದೇನು?

    ಲಕ್ನೋ: 19 ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ಲಕ್ನೋದ ಹಾಸ್ಟೆಲ್‌ (Lucknow Hostel) ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

    ಲಕ್ನೋದ ಆಶಿಯಾನಾ ಪ್ರದೇಶದಲ್ಲಿರುವ ರಾಮ್ ಮನೋಹರ್ ಲೋಹಿಯಾ ಕಾನೂನು ವಿವಿ (Ram Manohar Lohia National Law University) ಹಾಸ್ಟೆಲ್ ಕೊಠಡಿಯಲ್ಲಿ ನೆಲದ ಮೇಲೆ ಕಾನೂನು ವಿದ್ಯಾರ್ಥಿನಿ ಅನಿಕಾ ರಸ್ತೋಗಿ ಶವವಾಗಿ ಪತ್ತೆಯಾಗಿದ್ದಾರೆ. 3ನೇ ವರ್ಷದ ಎಲ್‌ಎಲ್‌ಬಿ ವಿದ್ಯಾರ್ಥಿನಿಯಾಗಿರುವ ಅನಿಕಾ, ಪ್ರಸ್ತುತ ದೆಹಲಿ NIA (ರಾಷ್ಟ್ರೀಯ ತನಿಖಾ ಸಂಸ್ಥೆ) ಇನ್ಸ್ಪೆಕ್ಟರ್‌ ಜನರಲ್‌ ಆಗಿ ಸೇವೆ ಸಲ್ಲಿಸುತ್ತಿರುವ ಸಂತೋಷ್‌ ರಸ್ತೋಗಿ ಅವರ ಪುತ್ರಿ.

    ಅನಿಕಾ (Anika Rastogi) ಶನಿವಾರ ತಡರಾತ್ರಿ ಹಾಸ್ಟೆಲ್‌ ಕೊಠಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಆಕೆಯನ್ನ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟೊತ್ತಿಗಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಕೆಯ ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಕೇಸ್‌ ದಾಖಲಿಸಿಕೊಂಡು ಆಶಿಯಾನಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: MUDA Scam | ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ – ಕೋವಿಡ್ ಹಗರಣ ವರದಿಗೆ ಉತ್ತರ ಕೊಡ್ತೇವೆ: ಬೊಮ್ಮಾಯಿ

    ಪ್ರಾಥಮಿಕ ವರದಿಗಳ ಪ್ರಕಾರ, ಅನಿಕಾ ಶನಿವಾರ ಬೇಗನೆ ಹಾಸ್ಟೆಲ್‌ ರೂಮ್‌ ಸೇರಿಕೊಂಡಿದ್ದರು. ಎಷ್ಟು ಬಾರಿ ಫೋನ್‌ ಕರೆ ಮಾಡಿದರೂ ಪ್ರತಿಕ್ರಿಯೆ ಸಿಗಲಿಲ್ಲ. ಹಾಸ್ಟೆಲ್‌ ರೂಮ್‌ ಬಾಗಿಲು ಬಡಿದರೂ ಆಕೆ ತೆರೆಯದೇ ಇದ್ದಾಗ ಬಾಗಿಲು ಒಡೆದು ನೋಡಿದ್ದಾರೆ. ಆಗ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆಕೆಯಿದ್ದ ಕೊಠಡಿಯಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ಎಂದು ಸಹ ತಿಳಿದುಬಂದಿದೆ. ಇದನ್ನೂ ಓದಿ: Bengaluru | ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಆಯುಕ್ತರಿಗೆ ಡಿಸಿಎಂ 15 ದಿನಗಳ ಗಡುವು

    ಅಲ್ಲದೇ ಅನಿಕಾ ಅವರ ಬಟ್ಟೆ ಯಥಾಸ್ಥಿತಿಯಲ್ಲಿತ್ತು, ಆಕೆ ದೇಹದಲ್ಲೂ ಯಾವುದೇ ಗಾಯಗಳು ಕಂಡುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕವಷ್ಟೇ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸದ್ಯಕ್ಕೆ ಪೊಲೀಸರು ಕುಟುಂಬದಿಂದ ಯಾವುದೇ ದೂರು ಸ್ವೀಕರಿಸಿಲ್ಲ. ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಡುಪಿ | ಸಮುದ್ರದಲ್ಲಿ ಮುಳುಗುತ್ತಿದ್ದ ಮೀನುಗಾರ – ಸತತ 1 ಗಂಟೆ ಕಾರ್ಯಾಚರಣೆ ನಡೆಸಿ ರಕ್ಷಣೆ

  • ರೈಲು ಹಳಿಗಳ ಮೇಲೆ ಮರದ ದಿಮ್ಮಿ – ರೈತ ಮುಖಂಡನ ಪುತ್ರ, ಸ್ನೇಹಿತ ಅರೆಸ್ಟ್

    ರೈಲು ಹಳಿಗಳ ಮೇಲೆ ಮರದ ದಿಮ್ಮಿ – ರೈತ ಮುಖಂಡನ ಪುತ್ರ, ಸ್ನೇಹಿತ ಅರೆಸ್ಟ್

    ಲಕ್ನೋ: ಉತ್ತರಪ್ರದೇಶದಲ್ಲಿ (Uttarpradesh) ರೈಲು ಹಳಿಗಳ ಮೇಲೆ ಮರದ ದಿಮ್ಮಿ ಹಾಕಿ ಕೃತ್ಯವೆಸಗಲು ಮುಂದಾದ ರೈತ ಮುಖಂಡನ ಪುತ್ರ ಹಾಗೂ ಸ್ನೇಹಿತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ರೈಲು ಹಳಿಗಳ ಮೇಲೆ ಮರದ ದಿಮ್ಮಿಗಳನ್ನು ಹಾಕಿ ಹಳಿ ತಪ್ಪಿಸಲು ಯತ್ನಿಸಿದಾಗ ಲೋಕೋ ಪೈಲೆಟ್  ಸಮಯಕ್ಕೆ ಸರಿಯಾಗಿ ಬ್ರೇಕ್ ಹಾಕುವ ಮೂಲಕ ದುರಂತವನ್ನು ಸಂಭವಿಸುವುದನ್ನು ತಪ್ಪಿಸಿದ್ದಾರೆ. ಇದನ್ನೂ ಓದಿ: ರಾಜ ಎಲ್ಲಿದರೂ ರಾಜನೇ ಅಂತ ಘೋಷಣೆ- ದರ್ಶನ್‌ ನೋಡಲು ಮುಗಿಬಿದ್ದ ಫ್ಯಾನ್ಸ್‌

    ಇಪ್ಪತ್ತು ವರ್ಷದ ದೇವ್ ಸಿಂಗ್ ಹಾಗೂ ಫರೂಕಾಬಾದ್ ಅರಿಯಾರಾ ಗ್ರಾಮದ ಮೊಹನ್ ಕುಮಾರ್ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ದೇವ್ ಸಿಂಗ್‌ನ ತಂದೆ ಕಮಲೇಶ್ ರೈತ ಮುಖಂಡ. ಇದನ್ನೂ ಓದಿ: ಇಂದಿನಿಂದ 5 ದಿನಗಳ ಕಾಲ ಪಾಸ್‌ಪೋರ್ಟ್ ಸೇವಾ ಪೋರ್ಟಲ್ ಸ್ಥಗಿತ

    ವಿಚಾರಣೆಯ ವೇಳೆ ತಮ್ಮ ಹೆಸರು ಹೆಚ್ಚು ಪ್ರಸಿದ್ಧಿ ಪಡೆಯುತ್ತದೆ ಎಂಬ ಕಾರಣಕ್ಕಾಗಿ ಹೀಗೆ ಕೃತ್ಯವೆಸಗಿರುವುದಾಗಿ ಹೇಳಿದ್ದಾರೆ ಎಂದು ಕಾಯಮ್ ಗಂಜ್ ಪೊಲೀಸ್ ಅಧಿಕಾರಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಮೂವರು ಭಯೋತ್ಪಾದಕರ ಹತ್ಯೆ

    ಈ ಘಟನೆಯ ಬಗ್ಗೆ ಭಾರತೀಯ ರೈಲ್ವೇ ಉದ್ಯೋಗಿ ಜಮೀರ್ ಅಹ್ಮದ್ ಖಾನ್ ಆಗಸ್ಟ್ 24 ರಂದು ದೂರು ನೀಡಿದ್ದು, ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದರು. ಇದನ್ನೂ ಓದಿ: 10 ದಿನಗಳಲ್ಲಿ ಎತ್ತಿನಹೊಳೆ ಯೋಜನೆ ಉದ್ಘಾಟನೆಗೆ ಸಿಎಂ ಬಳಿ ಚರ್ಚಿಸಿ ನಿರ್ಧಾರ: ಡಿಕೆಶಿ

    ಅಪರಾಧ ಮಾಡಿರುವ ವ್ಯಕ್ತಿಗಳು ತನಿಖೆಯ ವೇಳೆ, ತಾವು ಶನಿವಾರ ರಾತ್ರಿ ಆ ಪ್ರದೇಶದಲ್ಲಿ ಯಾರು ಇಲ್ಲದ ಸಮಯದಲ್ಲಿ ಪಕ್ಕದಲ್ಲಿದ್ದ ಗದ್ದೆಯಿಂದ ಮರದ ದಿಮ್ಮಿಗಳನ್ನು ತಂದು 80 ಮೀಟರ್ ದೂರದಲ್ಲಿರುವು ರೈಲು ಹಳಿಗಳ ಮೇಲೆ ಹಾಕಿರುವುದಾಗಿ ಹೇಳಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳ ಮುಂದೆ ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ 53 ಎಫ್‌ಎಂ ಸ್ಥಾಪನೆಗೆ ಅನುಮತಿ – ಯಾವ ನಗರಗಳಲ್ಲಿ ಬರಲಿದೆ?

    ಆರೋಪಿ ಸಿಂಗ್ ಹಾಗೂ ಕುಮಾರ್ ರೈತರಾಗಿದ್ದು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 327 ಮತ್ತು ರೈಲ್ವೇ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೈಯಲ್ಲಿ ಬೆಡ್‌ ಶೀಟ್‌ ಹಿಡ್ಕೊಂಡು ಬಳ್ಳಾರಿ ಜೈಲಿಗೆ ಆಗಮಿಸಿದ ದರ್ಶನ್‌

  • ಲಕ್ನೋದಲ್ಲೇ ರಾಹುಲ್‌ ಉಳಿಸಿಕೊಳ್ಳಲು ಗೋಯೆಂಕಾ ಪ್ರಯತ್ನ

    ಲಕ್ನೋದಲ್ಲೇ ರಾಹುಲ್‌ ಉಳಿಸಿಕೊಳ್ಳಲು ಗೋಯೆಂಕಾ ಪ್ರಯತ್ನ

    ನವದೆಹಲಿ: ನಾಯಕ, ವಿಕೆಟ್ ಕೀಪರ್ ಕೆ.ಎಲ್ ರಾಹುಲ್ (KL Rahul) ಅವರನ್ನು ಲಕ್ನೋ ತಂಡದಲ್ಲಿಯೇ (Lucknow Super Giants) ಉಳಿಸಿಕೊಳ್ಳಲು ತಂಡದ ಮಾಲೀಕ ಸಂಜಯ್ ಗೋಯಂಕ್ ಮಾತುಕತೆ ನಡೆಸಿದ್ದಾರೆ.

    ಅಲಿಪುರ್‌ನ ತಮ್ಮ ಕಚೇರಿಯಲ್ಲಿ ಮೂರು ಗಂಟೆಗಳ ಕಾಲ ಮಾತುಕತೆ ನಡೆಸಿದ ಅವರು ರಾಹುಲ್ ಅವರನ್ನು ಲಕ್ನೋ ತಂಡದಲ್ಲಿಯೇ ಮುಂದುವರೆಯುವಂತೆ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಈ ಬಾರಿಯ ಐಪಿಎಲ್‌ನಲ್ಲಿ ಹೈದರಾಬಾದ್ ಮತ್ತು ಲಕ್ನೋ ವಿರುದ್ಧದ ಪಂದ್ಯದಲ್ಲಿ ಲಕ್ನೋ ತಂಡವು 10 ವಿಕೆಟ್‌ನಿಂದ ಹಿನಾಯವಾಗಿ ಸೋತಿತ್ತು. ಇದರಿಂದ ಸಿಟ್ಟಿಗೆದ್ದ ಲಕ್ನೋ ತಂಡದ ಮಾಲಿಕ ಗೋಯೆಂಕಾ ಡಗೌಟ್‌ಗೆ ಬಂದು ಸಾರ್ವಜನಿಕವಾಗಿಯೇ ನಾಯಕ ಕೆ.ಎಲ್ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

    ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ತುಂಬಾ ಚರ್ಚೆಗೆ ಕಾರಣವಾಗಿತ್ತು. ಮಾಲೀಕರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಾರ್ವಜನಿಕರು, ಎಲ್ಲರ ಮುಂದೆಯೇ ಅವರು ಹೀಗೆ ಮಾಡಬಾರದಾಗಿತ್ತು. ರಾಹುಲ್‌ಗೆ ಲಕ್ನೋ ತಂಡದಲ್ಲಿ ಅವಮಾನವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

    ಇದೀಗ ಲಕ್ನೋ ತಂಡದ ಮಾಲೀಕ ಸಂಜಯ್ ಗೋಯೆಂಕ್ ಅವರು ಕೆ.ಎಲ್ ರಾಹುಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಅವರನ್ನು ಲಕ್ನೋ ತಂಡದಲ್ಲಿಯೇ ಮುಂದುವರೆಯಲು ಕೇಳಿಕೊಂಡಿದ್ದು ಚರ್ಚೆಯಾಗುತ್ತಿದೆ. ಇದನ್ನೂ ಓದಿ: ಅಂಪೈರ್ ವಿರುದ್ಧ ಸಿಟ್ಟು – ಹೆಲ್ಮೆಟ್‌ನಲ್ಲಿ ಸಿಕ್ಸ್‌ ಹೊಡೆದ ಬ್ರಾಥ್‌ವೈಟ್!

    ಆರ್‌ಸಿಬಿ ತಂಡ ಸೇರ್ತಾರಾ?
    ಈ ಹಿಂದೆಯ ಸಂದರ್ಶನವೊಂದರಲ್ಲಿ ಕೆಎಲ್ ರಾಹುಲ್ ಆರ್‌ಸಿಬಿ (RCB) ತಂಡದ ಪರವಾಗಿ ಆಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಕನ್ನಡಿಗರು ಮತ್ತು ಕ್ರಿಕೆಟ್ ಅಭಿಮಾನಿಗಳು ರಾಹುಲ್ ಅವರಿಗೆ ಲಕ್ನೋ ತಂಡದಲ್ಲಿ ಅವಮಾನವಾಗುತ್ತಿದೆ. ಹಾಗಾಗಿ ಅವರು ಆರ್‌ಸಿಬಿ ಪರವಾಗಿ ಆಟವಾಡಬೇಕು ಎಂದು ಕೋರಿಕೊಂಡಿದ್ದರು. ಆರ್‌ಸಿಬಿ ಫ್ರಾಂಚೈಸಿ ಕೂಡ ರಾಹುಲ್ ಅವರನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಇಲ್ಲಿಯವರೆಗೆ ರಾಹುಲ್ ಯಾವುದೇ ಅಧಿಕೃತ ನಿರ್ಧಾರ ಪ್ರಕಟಿಸಿಲ್ಲ. ಹೀಗಾಗಿ ರಾಹುಲ್‌ರ ಮುಂದಿನ ನಡೆ ಕುತೂಹಲ ಮೂಡಿಸಿದೆ.

     

  • 7 ವರ್ಷಗಳಿಂದ ಬಾಲಕನ ಗಂಟಲಲ್ಲಿ ಸಿಲುಕಿದ್ದ ನಾಣ್ಯ ಹೊರ ತೆಗೆದ ವೈದ್ಯರು

    7 ವರ್ಷಗಳಿಂದ ಬಾಲಕನ ಗಂಟಲಲ್ಲಿ ಸಿಲುಕಿದ್ದ ನಾಣ್ಯ ಹೊರ ತೆಗೆದ ವೈದ್ಯರು

    ಲಕ್ನೋ: 12 ವರ್ಷದ ಬಾಲಕನೊಬ್ಬನ ಗಂಟಲಿನಲ್ಲಿ ಸಿಲುಕಿದ್ದ ನಾಣ್ಯವನ್ನು ವೈದ್ಯರು ಏಳು ವರ್ಷಗಳ ಬಳಿಕ ಶಸ್ತ್ರಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರತೆಗೆದಿರುವ ವಿಶೇಷ ಪ್ರಕರಣ ಉತ್ತರ ಪ್ರದೇಶದ (Uttar Pradesh, ENT, ENT surgeon, Lucknow) ಹಾರ್ಡೋಯ್‍ನಲ್ಲಿ ನಡೆದಿದೆ.

    ಬಾಲಕ ಐದು ವರ್ಷದವರಾಗಿದ್ದಾಗ ಒಂದು ರೂ. ನಾಣ್ಯವನ್ನು ನುಂಗಿದ್ದ. ಅದು ಗಂಟಲಿನ ಅನ್ನನಾಳದ ಒಂದು ಭಾಗದಲ್ಲಿ ಅಂಟಿಕೊಂಡಿತ್ತು. ಇಷ್ಟು ವರ್ಷ ಬಾಲಕನಿಗೆ ಹೆಚ್ಚಿನ ಸಮಸ್ಯೆಯಾಗದ ರೀತಿಯಲ್ಲಿ ಅಂಟಿಕೊಂಡಿತ್ತು. ಇದೀಗ ವಿಶೇಷ ಶಸ್ತ್ರಚಿಕಿತ್ಸೆ ಮೂಲಕ ಆತನ ಗಂಟಲಿನಲ್ಲಿದ್ದ ನಾಣ್ಯವನ್ನು ಹೊರಗೆ ತೆಗೆಯಲಾಗಿದೆ ಎಂದು ಇಎನ್‍ಟಿ ಶಸ್ತ್ರಚಿಕಿತ್ಸಕ (ENT surgeon) ಡಾ.ವಿವೇಕ್ ಸಿಂಗ್ ತಿಳಿಸಿದ್ದಾರೆ.

    ಬಾಗೌಲಿಯ ಮುರಳಿಪುರವ ಗ್ರಾಮದ ನಿವಾಸಿ ಅಂಕುಲ್ ಎಂಬ ಬಾಲಕನಿಗೆ ಈ ವರ್ಷ ಏಪ್ರಿಲ್‍ನಲ್ಲಿ ಹೊಟ್ಟೆ ನೋವು ಎಂದು ವೈದ್ಯರ ಬಳಿ ತೋರಿಸಲಾಗಿತ್ತು. ಚಿಕಿತ್ಸೆ ಬಳಿಕ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಬಳಿಕ ಜೂನ್ 4 ರಂದು, ಆತನಿಗೆ ಗಂಟಲು ನೋವು ಕಾಣಿಸಿಕೊಂಡಿತ್ತು. ವೈದ್ಯರು ಪರೀಕ್ಷೆ ನಡೆಸಿದಾಗ ಬಾಲಕನ ಗಂಟಲಿನಲ್ಲಿ ಒಂದು ರೂ. ನಾಣ್ಯ ಇರುವುದು ಪತ್ತೆಯಾಗಿತ್ತು.

    ಗಂಟಲಿನಲ್ಲಿ ಅಂಟಿಕೊಂಡಿದ್ದ ನಾಣ್ಯ ಕಪ್ಪಾಗಲು ಪ್ರಾರಂಭಿಸಿತ್ತು. ಬಾಲಕನಿಗೆ ಒಂದೂವರೆ ತಿಂಗಳ ಹಿಂದೆ ಜಾಂಡೀಸ್ ಇರುವುದು ಪತ್ತೆಯಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿ ನಾಣ್ಯ ತೆಗೆದ ಬಳಿಕವೂ ಬಾಲಕನಿಗೆ ತೊಂದರೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ವೈದ್ಯರು ತಿಳಿಸಿದ್ದಾರೆ.

  • ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಪುತ್ರನ ಬೆಂಗಾವಲು ವಾಹನ ಬೈಕ್‌ಗೆ ಡಿಕ್ಕಿ – ಇಬ್ಬರು ಯುವಕರ ದುರ್ಮರಣ

    ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಪುತ್ರನ ಬೆಂಗಾವಲು ವಾಹನ ಬೈಕ್‌ಗೆ ಡಿಕ್ಕಿ – ಇಬ್ಬರು ಯುವಕರ ದುರ್ಮರಣ

    ಲಕ್ನೋ: ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಅವರ ಪುತ್ರ ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಫಾರ್ಚುನರ್ ಎಸ್‌ಯುವಿ (Toyota Fortuner SUV) ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಓರ್ವ ಸೇರಿದಂತೆ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ.

    ಬುಧವಾರ (ಇಂದು) ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ರೇಹಾನ್‌ (17) ಮತ್ತು ಶಹಜಾನ್‌ (24) ಎಂಬ ಯುವಕರು ಔಷಧಿ ಖರೀದಿಸಲು ಬೈಕ್‌ ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಎಸ್‌ಯುವಿ ಡಿಕ್ಕಿ ಹೊಡೆದಿದೆ. ಬಳಿಕ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಜನರು ಜಮಾಯಿಸಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮೃತರ ತಾಯಿ ಚಂದಾ ಬೇಗಂ ಎಂಬವರು ದೂರು ದಾಖಲಿಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

    ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು (UP Police) ಚಾಲಕನನ್ನ ಬಂಧಿಸಿ, ಎಸ್‌ಯುವಿ ಅನ್ನು ವಶಪಡಿಸಿಕೊಂಡಿದ್ದಾರೆ. ಆದ್ರೆ ಅಪಘಾತ ಸಂದರ್ಭದಲ್ಲಿ ಕರಣ್‌ ಭೂಷಣ್‌ ಸಿಂಗ್‌ ಪ್ರಯಾಣಿಸುತ್ತಿದ್ದರೇ ಅನ್ನೂ ಬಗ್ಗೆ ಸ್ಪಷ್ಟನೆ ಇಲ್ಲ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ರಾಧೇಶ್ಯಾಮ್ ರೈ ತಿಳಿಸಿದ್ದಾರೆ. ಇದನ್ನೂ ಓದಿ: ಬಸವಕಲ್ಯಾಣ ತೆಗೆದು ಎಲ್ಲಾ ಬಸ್‌ಗಳ ಮೇಲೆ ಕ್ರೈಸ್ತ ಕಲ್ಯಾಣ ಅಂತಾ ಮಾಡುತ್ತೇನೆ: ಯಾದಗಿರಿಯಲ್ಲಿ ವ್ಯಕ್ತಿ ಕಿರಿಕ್‌

    ಬ್ರಿಜ್‌ ಭೂಷಣ್‌ ವಿರುದ್ಧ ಮಹಿಳೆ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಆರೋಪದ ಕೇಳಿಬಂದ ಬಳಿಕ ಅವರನ್ನ ಅವರನ್ನ ಡಬ್ಲ್ಯೂಎಫ್‌ಒ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಅವರ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸಲು ದೆಹಲಿ ಕೋರ್ಟ್‌ ಪೊಲೀಸರಿಗೆ ಆದೇಶಿಸಿತ್ತು. ಈ ಬೆಳವಣಿಗೆ ನಂತರ ಬ್ರಿಜ್‌ ಭೂಷಣ್‌ ಅವರಿಗೆ ಬಿಜೆಪಿ ಟಿಕೆಟ್‌ ಸಹ ನಿರಾಕರಿಸಿತು, ಅವರ ಪುತ್ರ ಕರಣ್‌ ಭೂಷಣ್‌ ಸಿಂಗ್‌ನನ್ನ ಕಣಿಕ್ಕಿಳಿತು. ಬ್ರಿಜ್‌ ಭೂಷಣ್‌ ಅವರ ಮತ್ತೋಬ್ಬ ಪುತ್ರ ಪ್ರತೀಕ್ ಭೂಷಣ್ ಸಿಂಗ್ ಗೊಂಡಾ ಕ್ಷೇತ್ರದಿಂದ ಶಾಸಕರಾಗಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಸಲೂನ್‌ಗೆ ಹೋಗಿ ಕ್ಲೀನ್ ಆಗಿ ಬಂದಿದ್ದಾರೆ, ಇದಕ್ಕೆ ಅಮಿತ್ ಶಾ ಡೈರೆಕ್ಟರ್: ಪ್ರಿಯಾಂಕ್‌ ಖರ್ಗೆ ವಾಗ್ದಾಳಿ 

  • ಎಣ್ಣೆ ಬೇಡ ಎಂದಿದ್ದಕ್ಕೆ ಸ್ನೇಹಿತನೇ ಮನೆಯ ಟೆರೇಸ್‌ನಿಂದ ತಳ್ಳಿದ!

    ಎಣ್ಣೆ ಬೇಡ ಎಂದಿದ್ದಕ್ಕೆ ಸ್ನೇಹಿತನೇ ಮನೆಯ ಟೆರೇಸ್‌ನಿಂದ ತಳ್ಳಿದ!

    – ಕೆಳಕ್ಕೆ ಬಿದ್ದ ನಂತ್ರ ಮನಬಂದಂತೆ ಗೆಳೆಯರಿಂದ ಥಳಿತ

    ಲಕ್ನೋ: ಮದ್ಯ (Alcohol) ಸೇವಿಸಲು ನಿರಾಕರಿಸಿದನೆಂದು ಆತನ ಸ್ನೇಹಿತನೇ ಮನೆಯ ಟೆರೇಸ್‌ನಿಂದ ಕೆಳಕ್ಕೆ ತಳ್ಳಿದ ಘಟನೆ ಉತ್ತರಪ್ರದೇಶದಲ್ಲಿ (Uttarpradesh) ನಡೆದಿದೆ.

    ಗಾಯಾಳುವನ್ನು ರಂಜೀತ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಈತನನ್ನು ಲಕ್ನೋದ ರುಪ್ಪುರ್ ಖಾದ್ರಾದಲ್ಲಿರುವ ಅವರ ಮನೆಯ ಟೆರೇಸ್‌ನಿಂದ ಓರ್ವ ಕೆಳಕ್ಕೆ ತಳ್ಳಿದ್ದಾನೆ. ಅಲ್ಲದೇ ಕೆಳಗೆ ಬಿದ್ದ ಬಳಿಕ ಇತರ ಮೂವರು ಸೇರಿ ರಂಜೀತ್‌ಗೆ ಮನಬಂದಂತೆ ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ; ಗೋವಾದಲ್ಲಿ ಕನ್ನಡ ನಿರ್ಮಾಪಕರ ಗಲಾಟೆ

    ಘಟನೆಯ ಸಂಪೂರ್ಣ ದೃಶ್ಯ ಮನೆಯ ಸುತ್ತಮುತ್ತ ಇರುವ ಕಟ್ಟಡದಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೀಡಿಯೋದಲ್ಲಿ ಯುವಕನೊಬ್ಬ ರಂಜೀತ್ ಸಿಂಗ್‌ನನ್ನು ಟೆರೇಸ್‌ನಿಂದ ತಳ್ಳುತ್ತಿರುವುದನ್ನು ತೋರಿಸುತ್ತದೆ. ಇನ್ನು ಇತರ ಮೂವರು ರಸ್ತೆಯಲ್ಲಿ ನಿಂತಿರುವುದನ್ನು ಕಾಣಬಹುದು. ಹಲ್ಲೆ ಅಲ್ಲಿಗೆ ನಿಲ್ಲುವುದಿಲ್ಲ. ರಂಜೀತ್‌ ಕೆಳಕ್ಕೆ ಬಿದ್ದ ಬಳಿಕ ಆತನ ಮೇಲೆ ಹಿಗ್ಗಾಮುಗ್ಗ ಥಳಿಸುವುದನ್ನು ಕೂಡ ಕಾಣಬಹುದಾಗಿದೆ.

    ಘಟನೆ ನಡೆದ ಕೂಡಲೇ ರಂಜೀತ್ ಸಿಂಗ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ಡಿಸ್ಚಾರ್ಜ್ ಮಾಡಲಾಗಿದೆ. ಪ್ರಕರಣ ಸಂಬಂಧ ನಾಲ್ವರ ಪೈಕಿ ಮೂವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ನಾಲ್ಕನೇ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

  • ಅಮಿತ್ ಶಾ ಪ್ರಧಾನಿ ಮಾಡಲು ಮೋದಿ ಮತ ಕೇಳುತ್ತಿದ್ದಾರೆ: ಕೇಜ್ರಿವಾಲ್

    ಅಮಿತ್ ಶಾ ಪ್ರಧಾನಿ ಮಾಡಲು ಮೋದಿ ಮತ ಕೇಳುತ್ತಿದ್ದಾರೆ: ಕೇಜ್ರಿವಾಲ್

    ಲಕ್ನೋ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮಗಾಗಿ ಮತ ಕೇಳುತ್ತಿಲ್ಲ, ಅಮಿತ್ ಶಾ (Amit Shah) ಅವರನ್ನು ಪ್ರಧಾನಿ ಮಾಡಲು ಮತ ಕೇಳುತ್ತಿದ್ದಾರೆ. ಮೋದಿ ಅವರು ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಎರಡು ತಿಂಗಳೊಳಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪದಚ್ಯುತಿಗೊಳಿಸುತ್ತಾರೆ. ಇದರ ಜೊತೆಗೆ ಮೀಸಲಾತಿ ರದ್ದುಗೊಳಿಸಲಾಗುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.

    ಲಕ್ನೋದಲ್ಲಿ ಎಸ್ಪಿ ಕಚೇರಿಯಲ್ಲಿ ಮಾಜಿ ಸಿಎಂ ಅಖಿಲೇಶ್ ಯಾದವ್ (Akhilesh Yadav) ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾದಾಗ ನಿವೃತ್ತಿ ವಯಸ್ಸನ್ನು 75 ವರ್ಷಕ್ಕೆ ನಿರ್ಣಯಿಸಿದರು. ಸುಮಿತ್ರಾ ಮಹಾಜನ್, ಮುರಳಿ ಮನೋಹರ ಜೋಶಿ, ಲಾಲ್ ಕೃಷ್ಣ ಅಡ್ವಾಣಿ ಇದಕ್ಕೆ ಉದಾಹರಣೆ. ಮುಂದಿನ ವರ್ಷ ಸೆ.17ಕ್ಕೆ ಮೋದಿಗೆ 75 ವರ್ಷ ತುಂಬಲಿದೆ ಎಂದರು. ಇದನ್ನೂ ಓದಿ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಕ್ಯಾನ್ಸರ್‌ನಿಂದ ನಿಧನ

    ಅಮಿತ್ ಶಾ ಅವರನ್ನು ಪ್ರಧಾನಿ ಮಾಡಲು ಅವರ ಹಾದಿಯಲ್ಲಿದ್ದ ಕಂಟಕಗಳನ್ನು ಮೋದಿ ಹಂತ ಹಂತವಾಗಿ ತೆಗೆದುಹಾಕಿದರು. ವಸುಂಧರಾ ರಾಜೆ, ಸುಮಿತ್ರಾ ಮಹಾಜನ್, ಶಿವರಾಜ್ ಸಿಂಗ್ ಚೌಹಾಣ್, ಡಾ.ರಮಣ್ ಸಿಂಗ್ ಅವರನ್ನು ಮೂಲೆಗುಂಪು ಮಾಡಲಾಯಿತು. ಈಗ ಯೋಗಿ ಮಾತ್ರ ಅಡ್ಡಿಯಾಗಿದ್ದಾರೆ. ಅವರನ್ನು ತೆಗೆದುಹಾಕಲಾಗುವುದು. ತಾವು ಮಾಡಿದ ನಿಯಮಗಳನ್ನು ಮೋದಿ ಅವರು ಉಲ್ಲಂಘಿಸುವುದಿಲ್ಲ. ಉಲ್ಲಂಘಿಸಿದರೆ ಜನರು ಅವರನ್ನು ಪ್ರಶ್ನಿಸಲಿದ್ದಾರೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರನ್ನು ತೆಗೆದುಹಾಕಲು ಅವರು ಈ ನಿಯಮಗಳನ್ನು ಮಾಡಿದ್ದರು ಎಂದು ಆರೋಪಿಸಿದರು. ಇದನ್ನೂ ಓದಿ: ಕೇಜ್ರಿವಾಲ್‌ಗೆ ʼವಿಶೇಷ ಸೌಲಭ್ಯʼ ನೀಡಲಾಗಿದೆ ಅಂತ ಜನ ಮಾತನಾಡ್ತಿದ್ದಾರೆ: ಜಾಮೀನು ಬಗ್ಗೆ ಅಮಿತ್‌ ಶಾ ಮಾತು

    ಬಿಜೆಪಿ 220 ಸ್ಥಾನಗಳಿಗಿಂತ ಹೆಚ್ಚು ಪಡೆಯುವುದಿಲ್ಲ. ರಾಜಸ್ಥಾನ, ಹರಿಯಾಣ, ಜಾರ್ಖಂಡ್, ದೆಹಲಿ, ಪಂಜಾಬ್ ಮತ್ತು ಬಂಗಾಳದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆಯಾಗುತ್ತಿವೆ. ಬಿಜೆಪಿ ಯಾವಾಗಲೂ ಮೀಸಲಾತಿ ವಿರುದ್ಧವಾಗಿದೆ. ಅವರು ಆಡಳಿತಕ್ಕೆ ಬಂದಾಗಿನಿAದ ಪರಿಸ್ಥಿತಿ ಹದಗೆಟ್ಟಿದೆ. ನಮ್ಮ ಇಂಡಿಯಾ ಒಕ್ಕೂಟದ ಸರ್ಕಾರ ಬಂದ ಬಳಿಕ ಅದನ್ನು ಸರಿಪಡಿಸಲಾಗುವುದು. ಜೂನ್ 4 ರಂದು ಭಾರತ ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಗೋಧ್ರಾ ಗಲಭೆ ನಂತರ ಮುಸ್ಲಿಮರಲ್ಲಿ ನನ್ನ ವ್ಯಕ್ತಿತ್ವಕ್ಕೆ ಕಳಂಕ ತರಲಾಗಿದೆ: ಮೋದಿ ಬೇಸರ

    ಇದೇ ವೇಳೆ ಮಾತನಾಡಿದ ಮಾಜಿ ಸಿಎಂ ಅಖಿಲೇಶ್ ಯಾದವ್, ಬಿಜೆಪಿ 400 ಗಡಿ ದಾಟುವ ಘೋಷಣೆ ಮಾಡಿದೆ. 543 ರಲ್ಲಿ 400ರ ಗಡಿ ದಾಟಿದರೆ ಉಳಿಯುವುದೇ 143 ಸ್ಥಾನಗಳು, ಬಿಜೆಪಿ ಅಷ್ಟೇ ಸ್ಥಾನಗಳನ್ನು ಪಡೆಯಲಿದೆ. ಭಾರತದ 140 ಕೋಟಿ ಜನರು ಬಿಜೆಪಿಯನ್ನು 140 ಸ್ಥಾನಗಳಿಗೆ ಸೀಮಿತ ಮಾಡಲಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್‌: ಜಾರ್ಖಂಡ್‌ನ ಕಾಂಗ್ರೆಸ್‌ ಸಚಿವ ಅಲಂಗೀರ್ ಆಲಂ ಬಂಧನ!

  • ಗುಡಿಸಲಿಗೆ ಬೆಂಕಿ – ನಾಲ್ವರು ಬಾಲಕಿಯರ ಸಜೀವ ದಹನ

    ಗುಡಿಸಲಿಗೆ ಬೆಂಕಿ – ನಾಲ್ವರು ಬಾಲಕಿಯರ ಸಜೀವ ದಹನ

    ಲಕ್ನೋ: ಗುಡಿಸಲಿಗೆ ಬೆಂಕಿ (Fire Accident) ಬಿದ್ದ ಪರಿಣಾಮ ನಾಲ್ವರು ಬಾಲಕಿಯರು ಸಜೀವ ದಹನಗೊಂಡ ದಾರುಣ ಘಟನೆ ಉತ್ತರಪ್ರದೇಶದ (Uttar Pradesh) ಬರೇಲಿಯಲ್ಲಿ ನಡೆದಿದೆ.

    ಅಗ್ನಿ ಅವಘಡದಲ್ಲಿ ಪ್ರಿಯಾಂಶಿ (3), ಮಾನ್ವಿ (6) ಮತ್ತು ನೈನಾ (5) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೀತು (6) ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾಳೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಗೋಧ್ರಾ ಮಾದರಿಯಲ್ಲಿ ರೈಲು ಸುಟ್ಟು ಹಾಕುವುದಾಗಿ ಬೆದರಿಕೆ: ಸಮಗ್ರ ತನಿಖೆಗೆ ಸಿ.ಟಿ.ರವಿ ಆಗ್ರಹ

    ಅಗ್ನಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಯಾತ್ರಿಕರ ರೈಲು ಗಲಾಟೆ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದ ಫಲ: ಪ್ರಹ್ಲಾದ್ ಜೋಶಿ

  • ಮದುವೆಯಲ್ಲಿ ಡಿಜೆಗಾಗಿ ಜಗಳ, ಠಾಣೆ ಮೆಟ್ಟಿಲೇರಿದ ಕುಟುಂಬಸ್ಥರು

    ಮದುವೆಯಲ್ಲಿ ಡಿಜೆಗಾಗಿ ಜಗಳ, ಠಾಣೆ ಮೆಟ್ಟಿಲೇರಿದ ಕುಟುಂಬಸ್ಥರು

    ಲಕ್ನೋ: ಮದುವೆ ಮದುವೆಯಲ್ಲಿ ನೃತ್ಯ ಮಾಡುವ ವೇಳೆ ಡಿಜೆ ಹಾಡುಗಳಿಗಾಗಿ ಜಗಳವಾಡಿ ಕುಟುಂಬಸ್ಥರು ಠಾಣೆ ಮೆಟ್ಟಿಲೇರಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಮದುವೆ ಅಂದರೆ ಎಲ್ಲೆಡೆ ಸಂಭ್ರಮ ಮನೆಮಾಡಿರುತ್ತದೆ. ಆದರೆ ಲಕ್ನೋದಲ್ಲಿ ನಡೆದ ಮುದುವೆಯಲ್ಲಿ ಡಿಜೆಗಾಗಿ ಕಿತ್ತಾಡಿಕೊಂಡಿರುವ ವೀಡಿಯೋ ಸಾಮಾಜಿಕ ಜಾಲಾತಣಗಳಲ್ಲಿ ಭಾರೀ ವೈರಲ್ ಆಗಿದೆ. ಎರಡೂ ಕಡೆಯವರು ಪರಸ್ಪರ ಜಗಳವಾಡಿ, ಮದುವೆ ಮನೆಯಲ್ಲಿದ್ದ ಕುರ್ಚಿಗಳನ್ನು ಎಸೆದು ಕುಟುಂಬಸ್ಥರು ಹೊಡೆದಾಡಿಕೊಂಡಿದ್ದಾರೆ. ಇದನ್ನೂ ಓದಿ:ನಿಮ್ಮ ಪೋಷಕರು ನನಗೆ ಮತ ಹಾಕದಿದ್ರೆ 2 ದಿನ ಊಟ ಮಾಡ್ಬೇಡಿ- ಶಾಸಕರ ವಿವಾದಾತ್ಮಕ ಹೇಳಿಕೆ

    ಮದುವೆ ಮನೆಯಲ್ಲಿ ಮೊದಲು ಎರಡು ಕಡೆಯವರಿಗೆ ಊಟದ ವಿಚಾರವಾಗಿ ಜಗಳವಾಗಿದೆ. ನಂತರ ಆರತಕ್ಷತೆಗೆ ಸಿದ್ಧತೆಗಳು ನಡೆದಿದ್ದು, ವಧು-ವರ ಎಂಟ್ರಿಗೆ ಕುಟುಂಬಸ್ಥರು ನೃತ್ಯ ಮಾಡಿದ್ದಾರೆ. ಅದೇ ಸಮಯದಲ್ಲಿ ಡಿಜೆ ಹಾಡುಗಳಿಗಾಗಿ ಜಗಳವಾಗಿದೆ. ಇದರಿಂದ ಇನಷ್ಟು ಕೋಪಗೊಂಡು ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಆಚಾರ್ಯ ಪ್ರಮೋದ್ ಕೃಷ್ಣಂ ಉಚ್ಛಾಟನೆ- ಕೈ ನಾಯಕ ಹೇಳಿದ್ದೇನು?

    ಮಾತಿಗೆ ಮಾತು ಬೆಳೆದು ಮದುವೆಯಲ್ಲಿ ಜಗಳ ಶರುವಾಗಿದೆ. ಕುಟುಂಬಸ್ಥರು ಮದುವೆ ಮನೆಯಲ್ಲಿದ್ದ ಕುರ್ಚಿಗಳನ್ನು ತಳ್ಳಿ ಹಾಕಿ ಅದರಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಎರಡು ಕಡೆಯವರನ್ನು ಸಮಾಧಾನ ಮಾಡಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಬೆಂಗಳೂರು ರೈಲುಗಳು ಹೈಟೆಕ್- 6 ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆ ಜಾರಿ

    ಈ ಘಟನೆಗೆ ಸಂಬಂಧಿಸಿದಂತೆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ- ಮೈತ್ರಿ ನಾಯಕರ ಭೇಟಿ ಇಂದೇ ನಡೆಯುತ್ತಾ?

  • ಪಾಕ್ ISIಗೆ ಸೇನಾ ಮಾಹಿತಿ ರವಾನೆ – ಭಾರತೀಯ ರಾಯಭಾರಿ ಕಚೇರಿ ಉದ್ಯೋಗಿ ಅರೆಸ್ಟ್

    ಪಾಕ್ ISIಗೆ ಸೇನಾ ಮಾಹಿತಿ ರವಾನೆ – ಭಾರತೀಯ ರಾಯಭಾರಿ ಕಚೇರಿ ಉದ್ಯೋಗಿ ಅರೆಸ್ಟ್

    ಲಕ್ನೋ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಾಸ್ಕೋದಲ್ಲಿರುವ ಭಾರತೀಯ ರಾಜಭಾರಿ ಕಚೇರಿಯ ಉದ್ಯೋಗಿಯೊಬ್ಬನನ್ನ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ATS) ಬಂಧಿಸಿದೆ.

    ಬೇಹುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯನ್ನು ಮೀರತ್‌ನಲ್ಲಿ ಬಂಧಿಸಲಾಗಿದ್ದು, ಸತ್ಯೇದ್ರ ಸಿವಾಲ್, 2021 ರಿಂದ ಮಾಸ್ಕೋದಲ್ಲಿರುವ (Moscow) ಭಾರತೀಯ ರಾಯಭಾರ ಕಚೇರಿಯಲ್ಲಿ ಭಾರತ ಆಧಾರಿತ ಭದ್ರತಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದ. ಇದನ್ನೂ ಓದಿ: ಯಾವ ಔಷಧಿ ಕಂಪನಿಯೂ ನನಗೆ ಹಣ ನೀಡಿಲ್ಲ: ಜಾಗೃತಿಗಾಗಿ ಡ್ರಾಮಾ ಮಾಡಿದೆ ಎಂದ ಪೂನಂ

    ಐಎಸ್‌ಐ ಹ್ಯಾಂಡ್ಲರ್‌ಗಳು ಭಾರತೀಯ ವಿದೇಶಾಂಗ ಸಚಿವಾಲಯದ ಉದ್ಯೋಗಿಗಳನ್ನ ತಮ್ಮತ್ತ ಸೆಳೆಯುತ್ತಿದ್ದು, ಅದಕ್ಕಾಗಿ ಹಣದ ಆಮಿಷ ತೋರಿಸುತ್ತಿದ್ದಾರೆ ಎಂಬ ಸೂಕ್ಷ್ಮ ಮಾಹಿತಿ ಭಾರತೀಯ ಸೇನೆ ಹಾಗೂ ಗುಪ್ತಚರ ಇಲಾಖೆಗೆ ಲಭ್ಯವಾಗಿತ್ತು. ಈ ಬಗ್ಗೆ ಮಾಹಿತಿ ಪಡೆದಿದ್ದ ಭಯೋತ್ಪಾದನಾ ನಿಗ್ರಹ ದಳ ರಹಸ್ಯವಾಗಿಯೇ ತನ್ನ ಕಾರ್ಯಾಚರಣೆ ಮುಂದುವರಿಸಿತ್ತು.

    ಉತ್ತರ ಪ್ರದೇಶ (Uttar Pradesh) ಹಾಪುರ್‌ನ ಶಹಮಹಿಯುದ್ದೀನ್‌ಪುರ ಗ್ರಾಮದ ನಿವಾಸಿಯಾಗಿದ್ದ ಸತೇಂದ್ರ ಸಿವಾಲ್, ಬೇಹುಗಾರಿಕೆ ಜಾಲದ ಪ್ರಮುಖ ರುವಾರಿಯಾಗಿದ್ದ. ಮಾಸ್ಕೋದಲ್ಲಿರುವ ತನ್ನ ಭಾರತೀಯ ರಾಯಭಾರಿ ಕಚೇರಿಯಲ್ಲಿ ತನ್ನ ಸ್ಥಾನವನ್ನು ದುರ್ಬಕೆ ಮಾಡಿಕೊಂಡು ಗೌಪ್ಯ ದಾಖಲೆಗಳನ್ನ ಹೊರ ತೆಗೆಯುತ್ತಿದ್ದ. ಹಣದ ಆಸೆಗಾಗಿ ರಕ್ಷಣಾ ಸಚಿವಾಲಯ, ವಿದೇಶಾಂಗ ಸಚಿವಾಲಯ ಮತ್ತು ಭಾರತೀಯ ಸೇನೆಯ ಆಂತರಿಕೆ ಮತ್ತು ಬಾಹ್ಯ ಕಾರ್ಯಾಚರಣೆ ಚಟುವಟಿಕೆಗಳ ಬಗ್ಗೆ ಮಾಹಿತಿ ಹೊರತೆಗೆದು ಅದನ್ನು ಐಎಸ್‌ಐ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಾಮೂಹಿಕ ವಿವಾಹದಲ್ಲಿ ಗೋಲ್ಮಾಲ್ – ಹಣಕ್ಕೆ ದಂಪತಿಯಾದ ಜೋಡಿಗಳು, 15 ಮಂದಿ ಸೇರಿ ಇಬ್ಬರು ಅಧಿಕಾರಿಗಳ ಬಂಧನ

    ಇತ್ತೀಚಿನ ದಿನಗಳಲ್ಲಿ ಐಎಸ್‌ಐ ಉಗ್ರರು ಭಾರತೀಯ ಸೇನೆಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಪಡೆಯಲು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಉದ್ಯೋಗಿಗಳಿಗೆ ಹಣದ ಆಮಿಷ ಒಡ್ಡುತ್ತಿದ್ದಾರೆ. ಇದರಿಂದ ಭಾರತದ ಆಂತರಿಕ ಮತ್ತು ಬಾಹ್ಯ ಭದ್ರತೆಗೆ ದೊಡ್ಡ ಅಪಾಯ ಉಂಟುಮಾಡುವ ಆತಂಕ ಎದುರಾಗುತ್ತಿದೆ ಎಂದು ಕೆಲ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: 1 ಕಿ.ಮಿಗೆ 1.59 ಲಕ್ಷ, ದಿನಕ್ಕೆ 50 ಲಕ್ಷ – ಭಾರತ್‌ ಜೋಡೋ ಯಾತ್ರೆಗೆ ಬರೋಬ್ಬರಿ 71 ಕೋಟಿ ಖರ್ಚು