Tag: lucknow

  • ರಾನು ನಂತ್ರ ಇಂಟರ್‌ನೆಟ್‌ ಸ್ಟಾರ್ ಆದ ಕ್ಯಾಬ್ ಡ್ರೈವರ್: ವಿಡಿಯೋ

    ರಾನು ನಂತ್ರ ಇಂಟರ್‌ನೆಟ್‌ ಸ್ಟಾರ್ ಆದ ಕ್ಯಾಬ್ ಡ್ರೈವರ್: ವಿಡಿಯೋ

    ಲಕ್ನೋ: ಸಾಮಾಜಿಕ ಜಾಲತಾಣದಲ್ಲಿ ರಾನು ಮೊಂಡಲ್ ನಂತರ ಕ್ಯಾಬ್ ಚಾಲಕ ಇಂಟರ್‌ನೆಟ್‌ ಸ್ಟಾರ್ ಆಗಿದ್ದಾರೆ. ಸದ್ಯ ಚಾಲಕ ಹಾಡು ಹಾಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಉಬರ್ ಕ್ಯಾಬ್‍ನಲ್ಲಿ ಹೋಗುತ್ತಿದ್ದ ಪ್ರಯಾಣಿಕ ಚಾಲಕನಿಗೆ ಹಾಡು ಹಾಡುವಂತೆ ಕೇಳಿಕೊಂಡಿದ್ದಾರೆ. ಈ ವೇಳೆ ಚಾಲಕ 1990ರಲ್ಲಿ ಬಿಡುಗಡೆಯಾದ ‘ಆಶಿಕಿ’ ಚಿತ್ರದ ‘ನಜರ್ ಕೀ ಸಾಮನೇ’ ಹಾಡನ್ನು ಹಾಡಿದ್ದಾರೆ. ಚಾಲಕ ಹಾಡು ಹಾಡುತ್ತಿರುವಾಗ ಪ್ರಯಾಣಿಕ ಇದನ್ನು ವಿಡಿಯೋ ಮಾಡಿದ್ದಾರೆ.

    https://twitter.com/crowngaurav/status/1172899827979452416?ref_src=twsrc%5Etfw%7Ctwcamp%5Etweetembed%7Ctwterm%5E1172899827979452416&ref_url=https%3A%2F%2Fwww.indiatoday.in%2Ftrending-news%2Fstory%2Fuber-driver-sings-kumar-sanu-hit-nazar-ke-saamne-on-rider-s-request-in-lucknow-viral-video-1599642-2019-09-16

    ಪ್ರಯಾಣಿಕ ಈ ವಿಡಿಯೋವನ್ನು ತನ್ನ ಟ್ವಿಟ್ಟರಿನಲ್ಲಿ ಹಾಕಿ ಅದಕ್ಕೆ, ಉಬರ್ ಇಂಡಿಯಾ ಚಾಲಕ ವಿನೋದ್ ಅವರನ್ನು ಭೇಟಿ ಮಾಡಿದೆ. ಅವರು ಅದ್ಭುತ ಗಾಯಕ ಹಾಗೂ ನಾನು ಕ್ಯಾಬ್‍ನಲ್ಲಿ ಪ್ರಯಾಣಿಸಿದ ನಂತರ ಅವರಿಗೆ ಒಂದು ಹಾಡು ಹಾಡಲು ಹೇಳಿದೆ. ಇದಕ್ಕಿಂದ ಹೆಚ್ಚಾಗಿ ಇನ್ನೇನು ಬೇಕು” ಎಂದು ಟ್ವೀಟ್ ಮಾಡಿಕೊಂಡಿದ್ದಾರೆ.

    ಈ ವೈರಲ್ ವಿಡಿಯೋ ಇದುವರೆಗೂ 7 ಸಾವಿರಕ್ಕೂ ಹೆಚ್ಚು ವ್ಯೂ ಹಾಗೂ 400ಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ಅಲ್ಲದೆ ಈ ವಿಡಿಯೋ ನೋಡಿ ಕೆಲವರು ‘ತುಂಬಾ ಚೆನ್ನಾಗಿದೆ’, ‘ನಿಮ್ಮ ಧ್ವನಿ ಅದ್ಭುತವಾಗಿದೆ’ ಎಂದು ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

  • ಬಸ್ ಟಾಪ್ ಮೇಲೆ ವಿದ್ಯಾರ್ಥಿಗಳು – ಮಾಲೀಕ, ಚಾಲಕನ ಮೇಲೆ ಎಫ್‍ಐಆರ್

    ಬಸ್ ಟಾಪ್ ಮೇಲೆ ವಿದ್ಯಾರ್ಥಿಗಳು – ಮಾಲೀಕ, ಚಾಲಕನ ಮೇಲೆ ಎಫ್‍ಐಆರ್

    ಲಕ್ನೋ: ಬಸ್ಸಲ್ಲಿ ಜನ ತುಂಬಿ ತುಳುಕುತ್ತಿದ್ದರೂ, ಅಪಾಯವಿದೆ ಎಂದು ಗೊತ್ತಿದ್ದರೂ ಟಾಪ್, ಹಿಂಬದಿಯ ಏಣಿಯ ಮೇಲೆ, ಬಾಗಿಲ ಫುಟ್ ರೆಸ್ಟ್ ಮೇಲೆ ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಹೋಗಿದ್ದಕ್ಕೆ ಬಸ್ ಮಾಲೀಕ, ಚಾಲಕನ ಮೇಲೆ ಎಫ್‍ಐಆರ್ ದಾಖಲಾಗಿದೆ.

    ವಸ್ತುಗಳನ್ನು ತುರುಕಿ ವಾಹನದಲ್ಲಿ ಲೋಡ್ ಮಾಡುವ ರೀತಿ ವಿದ್ಯಾರ್ಥಿಗಳು ಬಸ್ ಮೇಲೆ, ಬಾಗಿಲ ಬಳಿ ನೇತಾಡಿಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಡೆದಿದೆ. ಪ್ರತಿ ನಿತ್ಯ ಮುಜಾಫರ್‌ನಗರದಿಂದ ಮೀರಾಪುರ ಮಾರ್ಗವಾಗಿ ಹೋಗುವ ಬಸ್ಸಿನಲ್ಲಿ ಹೀಗೆ ವಿದ್ಯಾರ್ಥಿಗಳು ನೇತಾಡುತ್ತಾ ಹೋಗಿದ್ದಾರೆ. ಪ್ರತಿನಿತ್ಯ ಈ ಭಾಗದಲ್ಲಿ ಹೀಗೆ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಚಾಲಕ, ನಿರ್ವಾಹಕ ಹೋಗುತ್ತಾರೆ.

    ಆದರೆ ಶುಕ್ರವಾರದಂದು ಹೀಗೆ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಬಸ್ ಸಾಗುತ್ತಿದ್ದ ವೇಳೆ ಹಿಂದಿನಿಂದ ಬರುತ್ತಿದ್ದ ವಾಹನದ್ದಲ್ಲಿದ್ದವರು ವಿಡಿಯೋ ಮಾಡಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಜವಾಬ್ದಾರಿಯಿಲ್ಲದೆ ವಿದ್ಯಾರ್ಥಿಗಳನ್ನು ಬೇಕಾಬಿಟ್ಟಿ ಬಸ್ಸಿನಲ್ಲಿ ತುಂಬಿಸಿಕೊಂಡು ಅವರ ಜೀವದೊಂದಿಗೆ ಚೆಲ್ಲಾಟ ಆಡಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.

    ಈ ವಿಡಿಯೋಗೆ ನೆಟ್ಟಿಗರು ಭಾರಿ ವಿರೋಧ ವ್ಯಕ್ತಪಡಿಸಿ, ಪೊಲೀಸರು ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂಬ ಕೂಗು ಕೇಳಿಬಂದಿತ್ತು. ಈ ವಿಡಿಯೋ ನೋಡಿ ಎಚ್ಚೆತ್ತ ಪೊಲೀಸರು ಕೊನೆಗೆ ಆ ಬಸ್ ಯಾವುದು? ಯಾವ ಮಾರ್ಗದಿಂದ ಸಂಚರಿಸುತ್ತೆ? ಹೀಗೆ ಎಲ್ಲಾ ಮಾಹಿತಿಗಳನ್ನು ಪತ್ತೆ ಮಾಡಿ, ಬಸ್ ಮಾಲೀಕ ಹಾಗೂ ಚಾಲಕನ ಮೇಲೆ ಕೇಸ್ ಹಾಕಿದ್ದಾರೆ.

    ಇನ್ನಾದರೂ ಬಸ್ ಮಾಲೀಕರು ಹಾಗೂ ಚಾಲಕರು ಎಚ್ಚೆತ್ತುಕೊಂಡು ದುಡ್ಡಿನ ಆಸೆಗೆ ಹೀಗೆ ಪ್ರಯಾಣಿಕರನ್ನು ಬೇಕಾಬಿಟ್ಟಿ ಹತ್ತಿಸಿಕೊಳ್ಳುವುದನ್ನು ಬಿಡಬೇಕು. ಈ ರೀತಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಅವರ ಜೀವಕ್ಕೆ ಕುತ್ತು ಬಾರದಂತೆ ನೋಡಿಕೊಂಡು ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ಜನ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

  • ಬುರ್ಖಾ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರನ್ನು ವಾಪಸ್ ಕಳುಹಿಸಿದ ಸಿಬ್ಬಂದಿ

    ಬುರ್ಖಾ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರನ್ನು ವಾಪಸ್ ಕಳುಹಿಸಿದ ಸಿಬ್ಬಂದಿ

    ಲಕ್ನೊ: ಬುರ್ಖಾ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಯರಿಗೆ ತರಗತಿಯೊಳಗೆ ಪ್ರವೇಶಿಸಲು ನಿರಾಕರಿಸಿ ಕಾಲೇಜಿನ ಸಿಬ್ಬಂದಿ ವಾಪಸ್ ಕಳುಹಿಸಿದ ಘಟನೆ ಉತ್ತರ ಪ್ರದೇಶದ ಫಿರ್ಜೋಬಾದಿನಲ್ಲಿ ನಡೆದಿದೆ.

    ಫಿರ್ಜೋಬಾದಿನ ಎಸ್‌ಆರ್‌ಕೆ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿಗೆ ಬುರ್ಖಾ ಧರಿಸಿ ಬಂದಿದ್ದರು. ಈ ವೇಳೆ ಅವರನ್ನು ಗಮನಿಸಿದ ಕಾಲೇಜು ಸಿಬ್ಬಂದಿ ವಿದ್ಯಾರ್ಥಿನಿಯರನ್ನು ತಡೆದು ಬುರ್ಖಾ ಧರಿಸಿ ಕಾಲೇಜಿಗೆ ಬರುವಂತಿಲ್ಲ, ತರಗತಿ ಪ್ರವೇಶವಿಲ್ಲ ಎಂದು ಹೇಳಿದ್ದಾರೆ.

    ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಪ್ರತಿಕ್ರಿಯಿಸಿ, ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ. ಬುರ್ಖಾ ಕಾಲೇಜಿನ ಸಮವಸ್ತ್ರದ ಭಾಗವಲ್ಲ. ಆದ್ದರಿಂದ ಬುರ್ಖಾವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದೆ. ಅಲ್ಲದೆ ಕಾಲೇಜಿಗೆ ಬರುವಾಗ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ, ಕಾಲೇಜಿನ ಐಡಿ ಕಾರ್ಡಿನೊಂದಿಗೆ ಬರಬೇಕೆಂಬುದು ಹಿಂದಿನಿಂದಲೂ ನಿಯಮವಿದೆ. ಆದರೆ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ನಡೆಯುತ್ತಿರುವ ಕಾರಣಕ್ಕೆ ಇದನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಅನುಸರಿಸುತ್ತಿರಲಿಲ್ಲ. ಈಗ ಪ್ರವೇಶ ಪ್ರಕ್ರಿಯೆ ಮುಗಿದಿದೆ. ಆದ್ದರಿಂದ ನಿಯಮವನ್ನು ಕಡ್ಡಾಯ ಮಾಡಿದ್ದೇವೆ ಎಂದು ಹೇಳಿದೆ.

    ಕಾಲೇಜಿನ ಪ್ರಾಂಶುಪಾಲ ಪ್ರಭಾಕರ್ ರೈ ಮಾತನಾಡಿ, ಸೆಪ್ಟೆಂಬರ್ 11ರ ನಂತರ ಸಮವಸ್ತ್ರ ಮತ್ತು ಐಡಿ ಕಾರ್ಡ್ ಇಲ್ಲದ ವಿದ್ಯಾರ್ಥಿಗಳನ್ನು ಕಾಲೇಜಿನೊಳಗೆ ಬಿಡುತ್ತಿಲ್ಲ. ಕಾಲೇಜಿನ ಡ್ರೆಸ್ ಕೋಡ್‍ನಲ್ಲಿ ಬುರ್ಖಾ ಸೇರಲ್ಲ. ಅಲ್ಲದೆ ಕಾಲೇಜಿನ ನಿಯಮದಂತೆ ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರದಲ್ಲಿಯೇ ವಿದ್ಯಾರ್ಥಿಗಳು ತರಗತಿಗೆ ಬರಬೇಕಾಗುತ್ತದೆ ಎಂದು ತಿಳಿಸಿದರು.

    ಆದರೆ ಬುರ್ಖಾ ಧರಿಸಿ ಕಾಲೇಜಿನೊಳಗೆ ಬಂದಿದ್ದ ವಿದ್ಯಾರ್ಥಿನಿಯರು ಹೇಳುವುದೇ ಬೇರೆಯಾಗಿದೆ. ಈ ಹಿಂದೆ ಹೀಗೆ ಇರಲಿಲ್ಲ. ಈ ನಿಯಮ ಕಡ್ಡಾಯ ಇರಲಿಲ್ಲ, ಇದ್ದಕ್ಕಿದ್ದ ಹಾಗೆ ಕಾಲೇಜಿಗೆ ಬಂದವರನ್ನು ತರಗತಿಗೆ ಬಿಡದಿದ್ದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಕೆಲ ವಿದ್ಯಾರ್ಥಿನಿಯರು ನಮಗೆ ಬುರ್ಖಾ ತೆಗೆಯುವಂತೆ ಹೇಳಿದರು ಎಂದು ಆರೋಪಿಸಿದ್ದಾರೆ.

    ಈ ಸಂಬಂಧ ಜಿಲ್ಲಾಧಿಕಾರಿ ಚಂದ್ರ ವಿಜಯ್ ಸಿಂಗ್ ಅವರು ಮಾತನಾಡಿ, ಇದು ಕಾಲೇಜಿನ ಆಂತರಿಕ ವಿಚಾರ. ಘಟನೆ ನಡೆದಿದ್ದು ನನ್ನ ಗಮನಕ್ಕೆ ಬಂದಿದೆ. ಕಾಲೇಜಿನ ನಿಯಮದಂತೆ ಸಮವಸ್ತ್ರ, ಐಡಿ ಕಾರ್ಡ್ ಕಡ್ಡಾಯ, ಆದ್ದರಿಂದ ಸಿಬ್ಬಂದಿ ಬುರ್ಖಾ ಧರಿಸಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ್ದಾರೆ. ಅವರಿಗೆ ಬುರ್ಖಾ ತೆಗೆಯಿರಿ ಎಂದು ಕಾಲೇಜು ಆಡಳಿತ ಮಂಡಳಿ ಹೇಳಿಲ್ಲ. ನೀವು ಬುರ್ಖಾ ಧರಿಸಿ ಬರಬಾರದು, ಕಾಲೇಜಿನ ಸಮವಸ್ತ್ರದಲ್ಲಿ ಬರಬೇಕೆಂದು ತಿಳಿಸಿದ್ದಾರೆ ಅಷ್ಟೇ ಎಂದು ಸಿಬ್ಬಂದಿ ಮೇಲಿನ ಆರೋಪವನ್ನು ತಳ್ಳಿ ಹಾಕಿದ್ದಾರೆ.

  • ಕುಟುಂಬಸ್ಥರಿಗೆ ವಿಷ ಹಾಕಿ ಪ್ರಿಯಕರನ ಜೊತೆ ಅಪ್ರಾಪ್ತೆ ಎಸ್ಕೇಪ್

    ಕುಟುಂಬಸ್ಥರಿಗೆ ವಿಷ ಹಾಕಿ ಪ್ರಿಯಕರನ ಜೊತೆ ಅಪ್ರಾಪ್ತೆ ಎಸ್ಕೇಪ್

    ಲಕ್ನೋ: ಅಪ್ರಾಪ್ತೆಯೊಬ್ಬಳು ತನ್ನ ಇಡೀ ಕುಟುಂಬಸ್ಥರ ಊಟದಲ್ಲಿ ವಿಷ ಹಾಕಿ ಪ್ರಿಯಕರನ ಜೊತೆ ಓಡಿ ಹೋದ ಘಟನೆ ಉತ್ತರ ಪ್ರದೇಶದ ಮೋರದಾಬಾದ್ ಜಿಲ್ಲೆಯಲ್ಲಿ ನಡೆದಿದೆ.

    ಕುಟುಂಬದ ಸದಸ್ಯರು ಮಾಡಿದ ಊಟದಲ್ಲಿ ವಿಷದ ಪ್ರಮಾಣ ಕಡಿಮೆ ಇತ್ತು. ಹಾಗಾಗಿ ಅವರು ಪ್ರಜ್ಞೆ ತಪ್ಪಿದ್ದರು. ಸದ್ಯ ಕುಟುಂಬಸ್ಥರು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪ್ರಾಪ್ತೆಯನ್ನು ಹುಡುಕುತ್ತಿದ್ದಾರೆ.

    ಮಂಗಳವಾರ ರಾತ್ರಿ ಅಪ್ರಾಪ್ತೆ ತನ್ನ ಮನೆಯಲ್ಲಿ ತಯಾರಿಸಿದ್ದ ಅಡುಗೆಯಲ್ಲಿ ವಿಷದ ಪದಾರ್ಥವನ್ನು ಮಿಶ್ರಣ ಮಾಡಿದ್ದಾಳೆ. ಈ ಊಟವನ್ನು ಮಾಡಿದ ಅಪ್ರಾಪ್ತೆಯ ತಾಯಿ, ಇಬ್ಬರು ಸಹೋದರಿಯರು, ಇಬ್ಬರು ಸಹೋದರರು, ಅತ್ತಿಗೆ ಹಾಗೂ ಸೋದರಳಿಯ ಪ್ರಜ್ಞೆ ತಪ್ಪಿದ್ದಾರೆ. ಕುಟುಂಬಸ್ಥರು ಪ್ರಜ್ಞೆ ತಪ್ಪುತ್ತಿದ್ದಂತೆ ಬಾಲಕಿ ತನ್ನ ಪ್ರಿಯಕರನಿಗೆ ಕರೆ ಮಾಡಿ ಆತನ ಜೊತೆ ಎಸ್ಕೇಪ್ ಆಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬಾಲಕಿ ಓಡಿಹೋದ ಯುವಕ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದಿದ್ದನು. ಯುವಕ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪ ಕೇಳಿ ಬರುತ್ತಿದೆ. ಇವರಿಬ್ಬರ ಸಂಬಂಧಕ್ಕೆ ಅಪ್ರಾಪ್ತೆ ಮನೆಯಲ್ಲಿ ವಿರೋಧವಿತ್ತು. ಅಲ್ಲದೆ ಅಪ್ರಾಪ್ತೆಯ ಕುಟುಂಬಸ್ಥರು ಯುವಕನನ್ನು ಅತ್ಯಾಚಾರದ ಪ್ರಕರಣದಲ್ಲಿ ಸಿಲುಕಿಸಿದ್ದರು. ಯುವಕ ಜಾಮೀನಿನ ಮೇಲೆ ಹೊರ ಬಂದ ನಂತರ ಬಾಲಕಿಯನ್ನು ಸಂಪರ್ಕಿಸಿದ್ದಾನೆ. ಬಳಿಕ ಇಬ್ಬರು ಪ್ಲಾನ್ ಮಾಡಿ ಓಡಿ ಹೋಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಬಾಲಕಿ ತಂದೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಬಾಲಕಿ ಕುಟುಂಬದ ಇಬ್ಬರು ಸದಸ್ಯರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಮಹಿಳೆ ಹಾಗೂ ಅವರ ಮಗು ಆಸ್ಪತ್ರೆಯಲ್ಲಿ ಇನ್ನು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್‍ಪಿ ಉದಯ್ ಶಂಕರ್ ಸಿಂಗ್ ತಿಳಿಸಿದ್ದಾರೆ. ಬಳಿಕ ಮಾತನಾಡಿದ ಎಸ್‍ಎಚ್‍ಒ ಮನೋಜ್ ಕುಮಾರ್ ಅವರು, ಬಾಲಕಿ ಅಪ್ರಾಪ್ತೆ ಆಗಿರುವ ಕಾರಣ ಆರೋಪಿ ಅರವಿಂದ್ ಕುಮಾರ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

  • ಟಿಕ್‍ಟಾಕ್‍ನಲ್ಲಿ 40 ಸಾವಿರ ಫಾಲೋವರ್ಸ್ ಹೊಂದಿದ್ದ ಯುವಕ ಅರೆಸ್ಟ್

    ಟಿಕ್‍ಟಾಕ್‍ನಲ್ಲಿ 40 ಸಾವಿರ ಫಾಲೋವರ್ಸ್ ಹೊಂದಿದ್ದ ಯುವಕ ಅರೆಸ್ಟ್

    ಲಕ್ನೋ: ಟಿಕ್‍ಟಾಕ್‍ನಲ್ಲಿ 40 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದ ಯುವಕನನ್ನು ಕಳ್ಳತನದ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಶಾರೂಕ್ ಖಾನ್(23) ಅರೆಸ್ಟ್ ಆದ ಯುವಕ. ಶಾರೂಕ್ ಖಾನ್ ಟಿಕ್‍ಟಾಕ್‍ನಲ್ಲಿ ಯಾವಾಗಲೂ ಡ್ಯಾನ್ಸ್ ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದನು. ಅಲ್ಲದೆ ಆತನ ಮೂವರು ಸ್ನೇಹಿತರಾದ ಆಸೀಫ್, ಫೈಯಾಜ್ ಹಾಗೂ ಮುಕೇಶ್ ಆತನಿಗೆ ಸಾಮಾಜಿಕ ಜಾಲತಾಣದಲ್ಲಿ ಆತನ ಪೋಸ್ಟ್ ಗೆ ಸಹಾಯ ಮಾಡುತ್ತಿದ್ದರು.

    ಇಂದು ಬೆಳಗ್ಗೆ ಪೊಲೀಸರು ಶಾರೂಕ್ ಹಾಗೂ ಆತನ ಮೂವರು ಸ್ನೇಹಿತರನ್ನು ಕಳ್ಳತನದ ಪ್ರಕರಣದಲ್ಲಿ ಬಂಧಿಸಿದ್ದಾರೆ. ಸದ್ಯ ಪೊಲೀಸರು ಆರೋಪಿಗಳ ಬಳಿ ಐದು ಮೊಬೈಲ್, ಒಂದು ಬೈಕ್ ಹಾಗೂ 3 ಸಾವಿರ ರೂ. ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ನೋಯ್ಡಾದ ವಿವಿಧ ಸ್ಥಳಗಳಿಂದ ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ನಾವು ಅವರನ್ನು ಹಿಡಿಯಲು ಸಾಧ್ಯವಾಯಿತು. ಅವರು ಪ್ರಯಾಣಿಕರಿಂದ ಮೊಬೈಲ್ ಹಾಗೂ ಹಣವನ್ನು ಕದಿಯುತ್ತಿದ್ದರು. ಬಳಿಕ ಬಾಲ್ಟಾ 2, ನಾಲೆಡ್ಜ್ ಪಾರ್ಕ್ ಮತ್ತು ಸುರ್ಜಾಪುರದಲ್ಲಿ ಸಕ್ರಿಯರಾಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿ ರನ್‍ವಿಜಯ್ ಸಿಂಗ್ ತಿಳಿಸಿದ್ದಾರೆ.

    ವಿಚಾರಣೆ ವೇಳೆ ಆರೋಪಿಗಳು ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ಕನಿಷ್ಠ ಆರು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವುದನ್ನು ನಾಲ್ವರು ಒಪ್ಪಿಕೊಂಡಿದ್ದಾರೆ. ನಾಲ್ವರಲ್ಲಿ ಮುಕೇಶ್ ಎಂಬವನು ಬಿಹಾರ್ ಮೂಲದವನಾಗಿದ್ದು, ಉಳಿದ ಮೂವರು ಬುಲಂದ್‍ಶಹರ್ ನಿವಾಸಿಗಳು ಎಂದು ಪೊಲೀಸರು ಹೇಳಿದ್ದಾರೆ.

  • 8ರ ಬಾಲಕಿ ಮೇಲೆ 6ನೇ ತರಗತಿ ವಿದ್ಯಾರ್ಥಿ ಸೇರಿ ಮೂವರಿಂದ ಗ್ಯಾಂಗ್ ರೇಪ್

    8ರ ಬಾಲಕಿ ಮೇಲೆ 6ನೇ ತರಗತಿ ವಿದ್ಯಾರ್ಥಿ ಸೇರಿ ಮೂವರಿಂದ ಗ್ಯಾಂಗ್ ರೇಪ್

    ಲಕ್ನೋ: 8 ವರ್ಷದ ಬಾಲಕಿ ಮೇಲೆ 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಹಾಗೂ ಆತನ ಇಬ್ಬರು ಸಹೋದರರು ಸೇರಿ ಅತ್ಯಾಚಾರ ಮಾಡಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದೆ.

    ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ದಿನೇ ದಿನೇ ಹೆಚ್ಚುತ್ತಲೇ ಇದೆ. ಬಾಗ್ಪಾಟ್ ಪ್ರದೇಶದ ರಾಮಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ 6ನೇ ತರಗತಿ ವಿದ್ಯಾರ್ಥಿ ಹಾಗೂ ಆತನ ಸಹೋದರರು ಸೇರಿ, 3ನೇ ತರಗತಿ ಬಾಲಕಿ ಮೇಲೆ ಶಾಲೆಯ ಶೌಚಾಲಯದಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

    ಈ ಸಂಬಂಧ ಬಾಲಕಿಯ ತಂದೆ ಆರೋಪಿಗಳ ವಿರುದ್ಧ ದೂರು ನೀಡಲು ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿದ್ದರು. ಆದರೆ ಅಲ್ಲಿ ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲು ಪೊಲೀಸರು 15 ದಿನಗಳ ಕಾಲ ನಿರಾಕರಿಸಿದ್ದರು. ಹಾಗೆಯೇ ಸ್ಟೇಷನ್ ಹೌಸ್ ಅಧಿಕಾರಿಯನ್ನು ಕೂಡ ಈ ಪ್ರಕರಣವನ್ನು ಕೈಬಿಡುವಂತೆ ಬಾಲಕಿಯ ತಂದೆಗೆ ಒತ್ತಾಯಿಸಿದ್ದರು ಎನ್ನಲಾಗಿದೆ.

    ಸೋಮವಾರದಂದು ಬಾಲಕಿ ಆರೋಗ್ಯದಲ್ಲಿ ಏರುಪೇರಾದಾಗ ಈ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದ ಜಿಲ್ಲಾ ಪೊಲೀಸ್ ಮುಖ್ಯಸ್ಥರು ಬೇಜವಾಬ್ಧಾರಿ ಮೆರೆದ ಸ್ಟೇಷನ್ ಹೌಸ್ ಅಧಿಕಾರಿಯನ್ನು ಕರ್ತವ್ಯದಿಂದ ವಜಾಗೊಳಿಸಿದ್ದಾರೆ. ಸದ್ಯ ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

    ಈ ಬಗ್ಗೆ ಬಾಗ್ಪತ್ ಎಸ್‍ಪಿ ಪ್ರತಾಪ್ ಗೋಪೇಂದ್ರ ಯಾದವ್ ಮಾತನಾಡಿ, ಘಟನೆ 6ನೇ ತರಗತಿಯ ಓದುತ್ತಿರುವ ವಿದ್ಯಾರ್ಥಿಯ ಅಣ್ಣ ಈ ಕೃತ್ಯವೆಸೆಗಿದ್ದಾನೆ ಎನ್ನಲಾಗಿದೆ. ಆದರೆ ಬಾಲಕಿಯ ತಂದೆ ವಿದ್ಯಾರ್ಥಿ ಜೊತೆಗೆ ಅವನ ಇನ್ನಿಬ್ಬರು ಸಹೋದರರ ಹೆಸರನ್ನೂ ಕೂಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ತನಿಖೆ ನಂತರವೇ ನಿಜಾಂಶ ತಿಳಿಯಲಿದೆ ಎಂದು ಹೇಳಿದರು.

    ಸದ್ಯ ಈ ಸಂಬಂಧ ಮೂವರು ಆರೋಪಿಗಳ ವಿರುದ್ಧವೂ ಐಪಿಸಿ ಸೆಕ್ಷನ್ 376ರ(ಅತ್ಯಾಚಾರ) ಅಡಿಯಲ್ಲಿ ಹಾಗೂ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಮಂಗಳವಾರದಂದು ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ. ಒಮ್ಮೆ ಬಾಲಕಿ ಚೇತರಿಸಿಕೊಂಡ ಬಳಿಕ ಆಕೆಯ ಹೇಳಿಕೆ ಪಡೆದು, ಮುಂದಿನ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಎಸ್‍ಪಿ ತಿಳಿಸಿದರು.

  • ಊಟಕ್ಕೆ ರೊಟ್ಟಿ ಮಾಡಿಲ್ಲವೆಂದು ಸಹೋದರಿಗೇ ಗುಂಡಿಕ್ಕಿ ಕೊಂದ

    ಊಟಕ್ಕೆ ರೊಟ್ಟಿ ಮಾಡಿಲ್ಲವೆಂದು ಸಹೋದರಿಗೇ ಗುಂಡಿಕ್ಕಿ ಕೊಂದ

    ಲಕ್ನೋ: ಊಟಕ್ಕೆ ರೊಟ್ಟಿ ಮಾಡಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಯುವಕನೊಬ್ಬ ತನ್ನ ಸಹೋದರಿಯನ್ನು ಗುಂಡಿಕ್ಕಿ ಕೊಂದು ವಿಕೃತಿ ಮೆರೆದಿರುವ ಘಟನೆ ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದಿದೆ.

    ಲಖಿಂಪುರ್ ಖೇರಿಯ ಬರ್ಖೇಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬರ್ಖೇಡಾ ಗ್ರಾಮದ ನಿವಾಸಿ ಸೋನು ಸಿಂಗ್ ತನ್ನ ಸೋದರ ಸಂಬಂಧಿ ಸುಮನ್‍ನನ್ನು ಗುಂಡಿಕ್ಕಿ ಕೊಲೆಗೈದಿದ್ದಾನೆ. ಎರಡು ದಿನಗಳ ಹಿಂದೆ ಸುಮನ್ ತನ್ನ ಅತ್ತೆಯ ಮನೆಗೆ ಬಂದಿದ್ದಳು. ಈ ವೇಳೆ ಸೋನುಗೆ ಅಡುಗೆ ಮಾಡಿ ಊಟ ಬಡಿಸುತ್ತಿದ್ದಳು. ಕುಡಿದು ಮನೆಗೆ ಬಂದಿದ್ದ ಸೋನುಗೆ ಆ ಅಡುಗೆ ಇಷ್ಟವಿರಲಿಲ್ಲ. ಆಗ ಆತ ರೊಟ್ಟಿ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದ್ದನು. ಈ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದು, ಮಾತಿಗೆ ಮಾತು ಬೆಳೆದು ಜಗಳವಾಗಿದೆ.

    ಇಷ್ಟಕ್ಕೆ ಕೋಪಗೊಂಡ ಸೋನು ಮನೆಯಲಿದ್ದ ತನ್ನ ತಂದೆಯ ಲೈಸನ್ಸ್ ಇರುವ ಬಂದೂಕನ್ನು ತೆಗೆದುಕೊಂಡು ಸೋದರಿಯ ತಲೆಗೆ ಗುಂಡು ಹೊಡೆದಿದ್ದಾನೆ. ಪರಿಣಾಮ ಆಕೆ ಸ್ಥಳದಲ್ಲಿಯೇ ಪ್ರಾಣಬಿಟ್ಟಿದ್ದಾಳೆ. ಒಂದು ವರ್ಷದ ಹಿಂದೆಯಷ್ಟೇ ಸುಮನ್ ವಿವಾಹವಾಗಿದ್ದರು.

    ಕೆಲವು ವರ್ಷಗಳ ಹಿಂದೆ ಸುಮನ್ ತಂದೆ ತೀರಿಹೋಗಿದ್ದರು. ಆ ಬಳಿಕ ಸುಮನ್‍ ತನ್ನ ಸೋದರ ಸಂಬಂಧಿ ಸೋನುವನ್ನೇ ತನ್ನ ನಿಜವಾದ ಸಹೋದರನಂತೆ ನೋಡಿಕೊಳ್ಳುತ್ತಿದ್ದರು. ಆದರೆ ಸೋನು ಸುಮನ್‍ರನ್ನು ಹತ್ಯೆ ಮಾಡುವಷ್ಟು ಕಟುಕನಾಗುತ್ತಾನೆ ಎಂದು ಯಾರೂ ಊಹೆ ಕೂಡ ಮಾಡಿರಲಿಲ್ಲ.

    ಘಟನೆಯ ಬಳಿಕ ಆರೋಪಿ ಸೋನು ಪರಾರಿ ಆಗಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಸೋನು ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

  • ಸತ್ತು ಹೋಗಿದ್ದೇನೆ ರಜೆ ಕೊಡಿ ಎಂದು ಪತ್ರ – ಮಂಜೂರು ಮಾಡಿದ ಪ್ರಾಂಶುಪಾಲ

    ಸತ್ತು ಹೋಗಿದ್ದೇನೆ ರಜೆ ಕೊಡಿ ಎಂದು ಪತ್ರ – ಮಂಜೂರು ಮಾಡಿದ ಪ್ರಾಂಶುಪಾಲ

    ಲಕ್ನೋ: ಸತ್ತು ಹೋಗಿದ್ದೇನೆ ರಜೆ ಕೊಡಿ ಎಂದು ಪತ್ರ ಬರೆದ ವಿದ್ಯಾರ್ಥಿಗೆ ಪ್ರಾಂಶುಪಾಲ ರಜೆ ಮಂಜೂರು ಮಾಡಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

    8ನೇ ತರಗತಿ ವಿದ್ಯಾರ್ಥಿಯೊಬ್ಬ ರಜೆ ಕೇಳಲು ಪತ್ರದಲ್ಲಿ ತಪ್ಪಾಗಿ ತಾನು ಸತ್ತು ಹೋಗಿದ್ದೇನೆ ಎಂದು ಬರೆದಿದ್ದಾನೆ. ಆಶ್ಚರ್ಯದ ವಿಷಯ ಏನೆಂದರೆ ಪ್ರಾಂಶುಪಾಲ ವಿದ್ಯಾರ್ಥಿಗೆ ರಜೆಯನ್ನು ಮಂಜೂರು ಮಾಡಿದ್ದಾರೆ. ಸದ್ಯ ವಿದ್ಯಾರ್ಥಿ ಬರೆದ ಪತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ವಿದ್ಯಾರ್ಥಿ ಪತ್ರದಲ್ಲಿ ತನ್ನ ಅಜ್ಜಿ ಮೃತಪಟ್ಟಿದ್ದಾರೆ ಎಂದು ಬರೆಯುವ ಬದಲು ತಾನು ಸತ್ತು ಹೋಗಿದ್ದೇನೆ ಎಂದು ತಪ್ಪಾಗಿ ಬರೆದಿದ್ದಾನೆ. ರಜೆ ಮಂಜೂರು ಆದ ಬಳಿಕ ವಿದ್ಯಾರ್ಥಿ ತನ್ನ ಅಜ್ಜಿಯ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದಾನೆ. ಈ ಪತ್ರ ವೈರಲ್ ಆಗುತ್ತಿದ್ದಂತೆ ಭಾರೀ ಚರ್ಚೆಗೆ ಕಾರಣವಾಗಿದೆ.

    ಪತ್ರದಲ್ಲಿ ವಿದ್ಯಾರ್ಥಿ, “ಮಾನ್ಯ ಪ್ರಾಂಶುಪಾಲರೇ, ಇಂದು(ಅಗಸ್ಟ್ 20) ಬೆಳಗ್ಗೆ ಸುಮಾರು 10 ಗಂಟೆಗೆ ನಾನು ಸತ್ತು ಹೋಗಿದ್ದೇನೆ. ದಯವಿಟ್ಟು ನನಗೆ ಅರ್ಧ ದಿನ ರಜೆ ಕೊಡಿ” ಎಂದು ಬರೆದಿದ್ದಾನೆ. ಪತ್ರವನ್ನು ಓದದೇ ಪ್ರಾಂಶುಪಾಲ ರೆಡ್ ಪೆನ್‍ನಲ್ಲಿ ಸಹಿ ಮಾಡಿ ರಜೆ ಮಂಜೂರು ಮಾಡಿದ್ದಾರೆ.

    ಶಾಲೆಯ ವ್ಯಕ್ತಿಯೊಬ್ಬ ಈ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಂತೆ ಈ ಪತ್ರ ಭಾರೀ ವೈರಲ್ ಆಗಿದ್ದು, ಜನರು ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

  • ರಸ್ತೆಯಲ್ಲಿ ಬಟ್ಟೆ ಹರಿದಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿದ ಯುವತಿ

    ರಸ್ತೆಯಲ್ಲಿ ಬಟ್ಟೆ ಹರಿದಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿದ ಯುವತಿ

    ಲಕ್ನೋ: ರಸ್ತೆಯಲ್ಲಿ ಬಟ್ಟೆ ಹರಿದಿದ್ದಕ್ಕೆ ಯುವತಿಯೊಬ್ಬಳು ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಉತ್ತರ ಪ್ರದೇಶದ ಜನಪದ್ ಮೊರಾದಾಬಾದ್ ನಲ್ಲಿ ನಡೆದಿದೆ. ಸದ್ಯ ಯುವತಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಯುವತಿ ಬಟ್ಟೆ ಹರಿದಿದ್ದಕ್ಕೆ ಯುವಕನನ್ನು ಥಳಿಸುತ್ತಿದ್ದಳು. ಇದನ್ನು ನೋಡಿದ ಸ್ಥಳೀಯರು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋವನ್ನು ಸೆರೆ ಹಿಡಿದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ವಿಡಿಯೋದಲ್ಲಿ ಜನರು ಯುವತಿಯ ಉಡುಪು ಹರಿದಿದ್ದೀಯಾ ಎಂದು ಪ್ರಶ್ನಿಸಿ ಯುವಕನಿಗೆ ಥಳಿಸಿದ್ದಾರೆ. ಅಲ್ಲದೆ ಯುವತಿಯ ಉಡುಪು ಹರಿದಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

    ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಯುವಕನನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿ, ವೈರಲ್ ಆಗಿರುವ ಫೋಟೋ ಹಾಗೂ ವಿಡಿಯೋಗಳು ಏನೇ ಇರಲಿ ಅದು ತನಿಖೆಯ ಭಾಗವಾಗಿರುತ್ತದೆ ಎಂದು ಹೇಳಿದ್ದಾರೆ.

    ಆಗಿದ್ದೇನು?
    ಯುವತಿ ಪ್ರತಿದಿನ ಟ್ಯೂಶನ್‍ಗೆ ಹೋಗುತ್ತಿದ್ದಳು. ಈ ವೇಳೆ ಯುವಕ ಆಕೆಯನ್ನು ಹಿಂಬಾಲಿಸುತ್ತಿದ್ದಳು. ಸೋಮವಾರ ಕೂಡ ಯುವತಿ ಟ್ಯೂಶನ್‍ಗೆ ಎಂದು ಹೋಗುತ್ತಿದ್ದಾಗ ಯುವಕ ಆಕೆಯ ಹತ್ತಿರ ಬಂದು ಬಲವಂತ ಮಾಡಿದ್ದಾನೆ. ಅಲ್ಲದೆ ಆಕೆಯ ಬಟ್ಟೆ ಕೂಡ ಹರಿದಿದ್ದಾನೆ. ಇದರಿಂದ ಕೋಪಗೊಂಡ ಯುವತಿ ಜೋರಾಗಿ ಕಿರುಚಾಡಿದ್ದಾಳೆ. ಈ ವೇಳೆ ಅಕ್ಕಪಕ್ಕದಲ್ಲಿದ್ದ ಜನರು ಜಮಾಯಿಸಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸ್ಥಳೀಯರ ಜೊತೆ ಯುವತಿ ಕೂಡ ಯುವಕನಿಗೆ ಕಾಲಿನಿಂದ ಒದಿದ್ದಾಳೆ. ಈ ವಿಡಿಯೋದಲ್ಲಿ ಯುವಕ ತನ್ನ ಹೆಸರು ಕಬೀರ್ ಎಂದು ತಿಳಿಸಿದ್ದಾನೆ.

  • ಖಾಸಗಿ ತರಬೇತಿ ವಿಮಾನ ಪತನ – ಆರು ಮಂದಿ ಬಚಾವ್

    ಖಾಸಗಿ ತರಬೇತಿ ವಿಮಾನ ಪತನ – ಆರು ಮಂದಿ ಬಚಾವ್

    ಲಕ್ನೋ: ಲ್ಯಾಂಡಿಂಗ್ ಸಮಯದಲ್ಲಿ ಚಕ್ರಕ್ಕೆ ವಿದ್ಯುತ್ ವಯರ್ ಸಿಕ್ಕಿಹಾಕಿಕೊಂಡ ಪರಿಣಾಮ ಖಾಸಗಿ ತರಬೇತಿ ವಿಮಾನ ಪತನಗೊಂಡಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ 6 ಮಂದಿ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಧಾನಿಪುರ ವಾಯುನೆಲೆಯಲ್ಲಿ ಈ ಅಪಘಾತ ಸಂಭವಿಸಿದೆ. ಇಂದು ಬೆಳಗ್ಗೆ ವಾಯುನೆಲೆಯಲ್ಲಿ ವಿಟಿ-ಎವಿವಿ ವಿಮಾನ ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ಚಕ್ರಗಳಿಗೆ ವಿದ್ಯುತ್ ವಯರ್‌ಗಳು ಸಿಕ್ಕಿಹಾಕಿಕೊಂಡ ಪರಿಣಾಮ ವಿಮಾನ ಪತನವಾಗಿದೆ.

    ನಿರ್ವಹಣೆ ಸಂಬಂಧ ವಿಮಾನವನ್ನು ಧಾನಿಪುರದಲ್ಲಿ ಲ್ಯಾಂಡಿಂಗ್ ಮಾಡಲಾಗುತ್ತಿತ್ತು. ವಿಮಾನ ಪತನಗೊಂಡ ಬಳಿಕ ಅದರಲ್ಲಿ ಇದ್ದವರು ವಿಮಾನದಿಂದ ಹೇಗೋ ಹೊರಬಂದಿದ್ದಾರೆ. ನಂತರ ಕೆಲ ನಿಮಿಷಗಳಲ್ಲಿಯೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು ಸುಟ್ಟುಹೋಗಿದೆ. ಈ ಬಗ್ಗೆ ತಿಳಿದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.