Tag: lucknow

  • ಸಾಮೂಹಿಕ ವಿವಾಹದಲ್ಲಿ ಗೋಲ್ಮಾಲ್ – ಹಣಕ್ಕೆ ದಂಪತಿಯಾದ ಜೋಡಿಗಳು, 15 ಮಂದಿ ಸೇರಿ ಇಬ್ಬರು ಅಧಿಕಾರಿಗಳ ಬಂಧನ

    ಸಾಮೂಹಿಕ ವಿವಾಹದಲ್ಲಿ ಗೋಲ್ಮಾಲ್ – ಹಣಕ್ಕೆ ದಂಪತಿಯಾದ ಜೋಡಿಗಳು, 15 ಮಂದಿ ಸೇರಿ ಇಬ್ಬರು ಅಧಿಕಾರಿಗಳ ಬಂಧನ

    ಲಕ್ನೋ: ಸಾಮೂಹಿಕ ವಿವಾಹ (Mass Marriage) ಕಾರ್ಯಕ್ರಮದ ಹೆಸರಿನಲ್ಲಿ ಸ್ಥಳೀಯ ನಿವಾಸಿಗಳಿಗೆ ಹಣ ನೀಡಿ ದಂಪತಿಗಳಾಗಿ ನಟಿಸಲು ಸೂಚಿಸಿದ ಇಬ್ಬರು ಅಧಿಕಾರಿ ಸೇರಿ 15 ಮಂದಿಯನ್ನು ಉತ್ತರ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಉತ್ತರ ಪ್ರದೇಶದ (Uttar Pradesh) ಉತ್‌ನ ಬಾಲಿಯಾ ಜಿಲ್ಲೆಯಲ್ಲಿ ಜನವರಿ 25 ರಂದು ಸಮೂಹಿಕ ವಿವಾಹವನ್ನು ಆಯೋಜಿಸಲಾಗಿತ್ತು. 568 ಜೋಡಿಗಳ ಮದುವೆ ಸಮಾರಂಭಕ್ಕೆ ಬಿಜೆಪಿ (BJP) ಶಾಸಕ ಕೇತ್ಕಿ ಸಿಂಗ್ ಮುಖ್ಯ ಅತಿಥಿಯಾಗಿದ್ದರು. ಇದನ್ನೂ ಓದಿ: ಮಲೆ ಮಹದೇಶ್ವರನಿಗೆ ಹಣದ ಮಳೆ – 1 ತಿಂಗಳಲ್ಲಿ ಕೋಟಿ ಕೋಟಿ ಆದಾಯ, ವಿದೇಶಿ ಕರೆನ್ಸಿಗಳು ಪತ್ತೆ

    ಈ ವಿವಾಹ ಕಾರ್ಯಕ್ರಮದಲ್ಲಿ ವಧುಗಳು ತಮಗೆ ತಾವೇ ಹಾರ ಹಾಕಿಕೊಂಡಿದ್ದರು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ತನಿಖೆ ನಡೆಸಿ 15 ಮಂದಿಯನ್ನು ಬಂಧಿಸಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪೊಲೀಸರ ಮೇಲೆ ಹಲ್ಲೆ – ಕಾಂಗ್ರೆಸ್ ಮಾಜಿ ಶಾಸಕನ ಪುತ್ರ ಅರೆಸ್ಟ್‌

    ಕೆಲವು ಪುರುಷರು ಅವರ ಮುಖಗಳನ್ನು ಮರೆಮಾಚಿ ವರರಂತೆ ಉಡುಪುಗಳನ್ನು ಧರಿಸಿ ನಟಿಸಿದ್ದರು. ಸ್ಥಳೀಯ ನಿವಾಸಿಗಳಿಗೆ ವಧು-ವರರಂತೆ ನಟಿಸಲು 500 ರಿಂದ 2,000 ರೂ. ಹಣವನ್ನು ನೀಡಲಾಗಿತ್ತು. ಇದನ್ನೂ ಓದಿ: ಪಂಜಾಬ್‌ ರಾಜ್ಯಪಾಲ ಸ್ಥಾನಕ್ಕೆ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ

    ಸರ್ಕಾರವು ಸಾಮೂಹಿಕ ವಿವಾಹ ಯೋಜನೆಯಡಿ 51,000 ಸಾವಿರ ರೂಪಾಯಿ ನೀಡುತ್ತದೆ. ಅದರಲ್ಲಿ 35,000 ರೂ. ವಧುವಿಗಾಗಿ ಮತ್ತು 10,000 ರೂ. ಮದುವೆ ಸಾಮಗ್ರಿಗಳನ್ನು ಖರೀದಿಸಲು ಹಾಗೂ 6,000 ಕಾರ್ಯಕ್ರಮಕ್ಕೆಂದು ನೀಡಲಾಗುತ್ತದೆ. ಇದನ್ನೂ ಓದಿ: ಯಾದಗಿರಿಯಲ್ಲಿ ಪಡಿತರ ಅಕ್ಕಿಗೆ ಕನ್ನ – 69,000 ರೂ. ಮೌಲ್ಯದ ಅಕ್ಕಿ ವಶ

    ಘಟನೆಯಲ್ಲಿ ಆರೋಪಿಗಳಿಗೆ ಹಣ ವರ್ಗಾವಣೆಯಾಗುವ ಮೊದಲೇ ಈ ಹಗರಣ ಬಯಲಾಗಿದೆ. ಈ ವಿಷಯದ ಬಗ್ಗೆ ತನಿಖೆ ನಡೆಸಲು ಮತ್ತು ಎಲ್ಲಾ ಫಲಾನುಭವಿಗಳನ್ನು ಪರಿಶೀಲಿಸಲು ತಕ್ಷಣ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ. ಸಂಪೂರ್ಣ ತನಿಖೆ ಆಗುವರೆಗೂ ಯಾವುದೇ ಪ್ರಯೋಜನಗಳನ್ನು ಫಲಾನುಭವಿಗಳಿಗೆ ವರ್ಗಾಯಿಸಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಟ್ಟಡಗಳ ತೆರಿಗೆ ಭಾರೀ ಏರಿಕೆ – ಜಯಪುರದಲ್ಲಿ ವರ್ತಕರಿಂದ ಅಂಗಡಿ ಬಂದ್‌, ಸರ್ಕಾರದ ವಿರುದ್ಧ ಆಕ್ರೋಶ

  • ಕಠಿಣ ಕ್ರಮ ಕೈಗೊಳ್ಳದಿದ್ರೆ ನಾನೇ NCP ನಾಯಕನ ಕೊಲೆ ಮಾಡ್ತೀನಿ: ಅಯೋಧ್ಯೆ ಅರ್ಚಕ ಕಿಡಿ

    ಕಠಿಣ ಕ್ರಮ ಕೈಗೊಳ್ಳದಿದ್ರೆ ನಾನೇ NCP ನಾಯಕನ ಕೊಲೆ ಮಾಡ್ತೀನಿ: ಅಯೋಧ್ಯೆ ಅರ್ಚಕ ಕಿಡಿ

    ಲಕ್ನೋ: ರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (NCP) ಶರದ್ ಪವಾರ್ ಬಣದ ನಾಯಕ ಜಿತೇಂದ್ರ ಅವ್ಹಾದ್ (Jitendra Awhad) ವಿರುದ್ಧ ಅಯೋಧ್ಯೆಯ (Ayodhya) ಅರ್ಚಕ ಪರಮಹಂಸ ಆಚಾರ್ಯ (Paramhansa Acharya) ಎಚ್ಚರಿಕೆ ನೀಡಿದ್ದಾರೆ.

    ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, ಇನ್ನೊಂದು ಧರ್ಮದ ಬಗ್ಗೆ ಇಂತಹ ಹೇಳಿಕೆ ನೀಡಿದ್ದರೆ ಬಹುಶಃ ಅವರು ಇಲ್ಲಿಯವರೆಗೆ ಬದುಕಿರುತ್ತಿರಲಿಲ್ಲ. ರಾಮನನ್ನು ಅವಮಾನಿಸುವುದನ್ನು ಸಹಿಸುವುದಿಲ್ಲ. ಶ್ರೀರಾಮನ ಟೀಕೆಗೆ ಕಿವಿಗೊಡದ ಭಾರತ ಇದು ಎಂದು ನಮ್ಮ ಧರ್ಮಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. ಎನ್‌ಸಿಪಿ ನಾಯಕನ ವಿರುದ್ಧ ಮಹಾರಾಷ್ಟ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಜಿತೇಂದ್ರ ಅವ್ಹಾದ್ ರನ್ನು ನಾನೇ ಹತ್ಯೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಜಿತೇಂದ್ರ ಅವ್ಹಾದ್ ಅವರು ನೀಡಿದ ಹೇಳಿಕೆಯು ಅವಹೇಳನಕಾರಿಯಾಗಿದೆ. ಇದು ರಾಮ ಭಕ್ತರ ಭಾವನೆಗೆ ನೋವುಂಟುಮಾಡುತ್ತದೆ. ರಾಮನ ಬಗ್ಗೆ ಕೆಟ್ಟದಾಗಿ ಮಾತನಾಡುವ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾನು ಮಹಾರಾಷ್ಟ್ರ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಆಚಾರ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಬಾಲರಾಮನ ಮೂರ್ತಿ ಹೇಗಿರಲಿದೆ – ಕುತೂಹಲದ ಪ್ರಶ್ನೆಗೆ ಜ.22 ರಂದು ಸಿಗಲಿದೆ ಉತ್ತರ

    ಇದಕ್ಕೂ ಮುನ್ನ ರಾಮಜನ್ಮಭೂಮಿಯ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಎನ್‌ಸಿಪಿ ನಾಯಕನ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದರು. ಅವರ ಹೇಳಿಕೆ ಸರಿಯಲ್ಲ. ರಾಮನು ವನವಾಸಕ್ಕೆ ಹೋದಾಗ ಗಡ್ಡೆ, ಹಣ್ಣು ತಿನ್ನುತ್ತಿದ್ದರು ಎಂದು ಬರೆಯಲಾಗಿತ್ತೇ ಹೊರತು ಮಾಂಸ ತಿಂದ ಎಂದು ಯಾವುದೇ ಗ್ರಂಥದಲ್ಲಿ ಬರೆದಿಲ್ಲ ಎಂದರು.  ಇದನ್ನೂ ಓದಿ: ಶ್ರೀರಾಮ ಮಾಂಸಾಹಾರಿಯಾಗಿದ್ದ.. ಬೇಟೆಯಾಡಿ ತಿನ್ನುವ ರಾಮ ನಮ್ಮವ: ಎನ್‌ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ

    ಜಿತೇಂದ್ರ ಅವ್ಹಾದ್ ಹೇಳಿದ್ದೇನು..?: ರಾಮ ನಮ್ಮವನು. ರಾಮ ಬಹುಜನರಿಗೆ ಸೇರಿದವನು. ಬೇಟೆಯಾಡಿ ತಿನ್ನುವ ರಾಮ ನಮ್ಮವನು, ನಾವು ಬಹುಜನರಿಗೆ ಸೇರಿದವರು. ನೀವು ನಮ್ಮೆಲ್ಲರನ್ನು ಸಸ್ಯಾಹಾರಿಯನ್ನಾಗಿ ಮಾಡಲು ಹೋದಾಗ, ನಾವು ರಾಮನ ಆದರ್ಶಗಳನ್ನು ಅನುಸರಿಸುತ್ತೇವೆ. ಇಂದು ನಾವು ಕುರಿ ಮಾಂಸವನ್ನು ತಿನ್ನುತ್ತೇವೆ. ಇದು ರಾಮನ ಆದರ್ಶ. ರಾಮ ಸಸ್ಯಾಹಾರಿಯಾಗಿರಲಿಲ್ಲ, ಮಾಂಸಾಹಾರಿಯಾಗಿದ್ದ ಎಂದು ತಿಳಿಸಿದ್ದಾರೆ.

  • ಆಸ್ತಿ ಬರೆಯಲು ನಿರಾಕರಿಸಿದ ಅಮ್ಮನ ಶಿರಚ್ಛೇದ ಮಾಡಿದ ಪಾಪಿ ಪುತ್ರ!

    ಆಸ್ತಿ ಬರೆಯಲು ನಿರಾಕರಿಸಿದ ಅಮ್ಮನ ಶಿರಚ್ಛೇದ ಮಾಡಿದ ಪಾಪಿ ಪುತ್ರ!

    ಲಕ್ನೋ: ತನ್ನ ಹೆಸರಿಗೆ ಆಸ್ತಿ ವರ್ಗಾಯಿಸಲು ನಿರಾಕರಿಸಿದ ಕಾರಣಕ್ಕೆ ಮಗ (Son) ತನ್ನ ತಾಯಿಯ (Mother) ಶಿರಚ್ಛೇದ ಮಾಡಿ ರುಂಡದೊಂದಿಗೆ ಪರಾರಿಯಾದ ಘಟನೆ ಉತ್ತರಪ್ರದೇಶದ (Uttar Pradesh) ಸೀತಾಪುರ (Sitapur) ಜಿಲ್ಲೆಯ ತಾಳಂಗಾವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಜಿಲ್ಲೆಯ ಮೇಜಾಪುರ ಗ್ರಾಮದಲ್ಲಿ ಶನಿವಾರ ಘಟನೆ ನಡೆದಿದ್ದು, ಆರೋಪಿ ದಿನೇಶ್ ಪಾಸಿ (35) ತನ್ನ ತಾಯಿ ಕಮಲಾ ದೇವಿಯನ್ನು (65) ಕೃಷಿ ಬ್ಲೇಡ್‌ನಿಂದ ಹತ್ಯೆಗೈದು ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಸೀತಾಪುರ ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ ಹಾಕಿದವ ಅರೆಸ್ಟ್

    ದಿನೇಶ್ ಮದ್ಯವ್ಯಸನಿಯಾಗಿದ್ದ. ಈತ ಪ್ರತಿದಿನ ಕುಡಿದು ಬಂದು ತಾಯಿಯೊಂದಿಗೆ ಜಗಳವಾಡುತ್ತಿದ್ದು, ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸುವಂತೆ ಕಿರುಕುಳ ನೀಡುತ್ತಿದ್ದ. ಅದೇ ರೀತಿ ಶನಿವಾರವೂ ಇವರಿಬ್ಬರ ಮಧ್ಯೆ ಜಗಳ ನಡೆದಿದ್ದು, ಜಗಳ ವಿಕೋಪಕ್ಕೆ ತಿರುಗಿ ತಾಯಿಯ ರುಂಡವನ್ನು ಕತ್ತರಿಸಿದ್ದಾನೆ. ರುಂಡವಿಲ್ಲದ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಮಿಶ್ರಾ ತಿಳಿಸಿದ್ದಾರೆ. ಇದನ್ನೂ ಓದಿ: ಮಿನಿ ಬಸ್‌ಗೆ ಕಾರು ಡಿಕ್ಕಿ – ಪ್ರೇಮಿಗಳ ದಾರುಣ ಸಾವು

  • ಅಕ್ರಮ ಸಂಬಂಧಕ್ಕೆ ಬೇಸತ್ತು ಇನ್ಸ್‌ಪೆಕ್ಟರ್ ಪತಿಯನ್ನೇ ಹತ್ಯೆಗೈದ ಪತ್ನಿ

    ಅಕ್ರಮ ಸಂಬಂಧಕ್ಕೆ ಬೇಸತ್ತು ಇನ್ಸ್‌ಪೆಕ್ಟರ್ ಪತಿಯನ್ನೇ ಹತ್ಯೆಗೈದ ಪತ್ನಿ

    ಲಕ್ನೋ: ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿಯನ್ನೇ ಹತ್ಯೆಗೈದಿದ್ದ ಪತ್ನಿ ಹಾಗೂ ಆಕೆಯ ಸಹೋದರನನ್ನು ಉತ್ತರ ಪ್ರದೇಶದ (Uttar Pradesh) ಪೊಲಿಸರು (Police) ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಭಾವನ ಸಿಂಗ್ ಮತ್ತು ಆಕೆಯ ಸಹೋದರ ದೇವೇಂದ್ರ ಕುಮಾರ್ ವರ್ಮಾ ಎಂದು ಗುರುತಿಸಲಾಗಿದೆ. ಆರೋಪಿಗಳು ಇನ್ಸ್‌ಪೆಕ್ಟರ್ ಆಗಿದ್ದ ಸತೀಶ್ ಸಿಂಗ್ ಅವರನ್ನು ಹತ್ಯೆಗೈದಿದ್ದರು. ಅಲ್ಲದೇ ಪ್ರಕರಣದ ದಿಕ್ಕು ತಪ್ಪಿಸಲು ಸೈಕಲ್ ಮೇಲೆ ಬಂದ ವ್ಯಕ್ತಿ ಕೊಲೆಗೈದು ಹೋಗಿದ್ದಾಗಿ ಕತೆಕಟ್ಟಿದ್ದರು. ಕೊಲೆ ನಡೆದ ಸ್ವಲ್ಪ ದೂರದಲ್ಲಿ ಸೈಕಲ್ ಹಾಗೂ ಬಟ್ಟೆಯನ್ನು ಎಸೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರ ಏರ್‌ಪೋರ್ಟ್ ಮೇಲೆ ಅಪರಿಚಿತ ಡ್ರೋನ್ ಹಾರಾಟ – ಹೆಚ್ಚಿದ ಆತಂಕ

    ತನಿಖೆಯ ವೇಳೆ ಇನ್ಸ್‌ಪೆಕ್ಟರ್ ಸತೀಶ್ ಸಿಂಗ್ ಅನೇಕ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿರುವುದು ಬೆಳಕಿಗೆ ಬಂದಿದೆ. ಇದರಿಂದಾಗಿ ಭಾವನಾ ಸಿಂಗ್ ಮತ್ತು ಸತೀಶ್ ಸಿಂಗ್ ನಡುವೆ ನಿರಂತರವಾಗಿ ವಾಗ್ವಾದ ನಡೆಯುತ್ತಿತ್ತು. ಇದರಿಂದ ಆತನನ್ನು ಹತ್ಯೆಗೈಯಲು ಆರೋಪಿಗಳು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಪ್ರಕರಣದ ತನಿಖೆಗೆ 10 ಕಿಲೋಮೀಟರ್ ವ್ಯಾಪ್ತಿಯ 400 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೇಲಾಧಿಕಾರಿಗಳ ಕಿರುಕುಳ – ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬೀಳಗಿಯ ಚಾಲಕ

  • ಚಂದ್ರಯಾನ-3 ಯಶಸ್ಸಿಗೆ ಮಸೀದಿಯಲ್ಲಿ ನಮಾಜ್‌ ಮಾಡಿ ಮುಸ್ಲಿಮರ ಪ್ರಾರ್ಥನೆ

    ಚಂದ್ರಯಾನ-3 ಯಶಸ್ಸಿಗೆ ಮಸೀದಿಯಲ್ಲಿ ನಮಾಜ್‌ ಮಾಡಿ ಮುಸ್ಲಿಮರ ಪ್ರಾರ್ಥನೆ

    ಲಕ್ನೋ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಹತ್ವಾಕಾಂಕ್ಷೆಯ ಚಂದ್ರಯಾನ-3 (Chandrayaan-3) ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿ ಮುಸ್ಲಿಮರು ಮಸೀದಿಯಲ್ಲಿ ನಮಾಜ್‌ (Namaz) ಮಾಡಿ ಪ್ರಾರ್ಥಿಸಿದ್ದಾರೆ.

    ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್‌ ಆಗಲಿ ಎಂದು ಮುಸ್ಲಿಮರು ಲಕ್ನೋದ ಇಸ್ಲಾಮಿಕ್ ಸೆಂಟರ್ ಆಫ್ ಇಂಡಿಯಾದಲ್ಲಿ ನಮಾಜ್ ಮಾಡಿದ್ದಾರೆ. ಇದನ್ನೂ ಓದಿ: Aditya-L1: ಚಂದ್ರಯಾನ ಆಯ್ತು – ಈಗ ಸೂರ್ಯ ಸವಾರಿಯತ್ತ ಇಸ್ರೋ ಚಿತ್ತ

    ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್‌ಗಾಗಿ ಮುಸ್ಲಿಂ ಸಮುದಾಯದ ಸದಸ್ಯರು ಪ್ರಾರ್ಥನೆ ಸಲ್ಲಿಸುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದಕ್ಕೂ ಮುನ್ನ ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯಲು ವಾರಣಾಸಿಯ ಕಾಮಾಖ್ಯ ದೇವಸ್ಥಾನದಲ್ಲಿ ಹವನ ನಡೆಸಲಾಯಿತು.

    ಚಂದ್ರನ ಮೇಲಿನ ಕಾರ್ಯಾಚರಣೆಗಾಗಿ ಇಸ್ರೋ ಚಂದ್ರಯಾನ-3 ಮಿಷನ್‌ ಕೈಗೊಂಡಿದೆ. ಜು.14 ರಂದು ಚಂದ್ರಯಾನ-3 ನೌಕೆ ಉಡಾವಣೆ ಮಾಡಿತ್ತು. ನಾಳೆ (ಆ.23) ನೌಕೆಯನ್ನು ಚಂದ್ರನ ಮೇಲೆ ಲ್ಯಾಂಡಿಂಗ್‌ ಮಾಡಲು ದಿನಾಂಕ ನಿಗದಿಪಡಿಸಲಾಗಿದೆ. ಇದನ್ನೂ ಓದಿ: Chandrayaan-3; ರಾಜ್ಯದ ಎಲ್ಲಾ ಶಾಲೆಗಳಲ್ಲೂ ಲ್ಯಾಂಡಿಂಗ್‌ ನೇರ ಪ್ರಸಾರ: ಯೋಗಿ ಆದಿತ್ಯನಾಥ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಲಕನ ಮೇಲೆ ಅತ್ಯಾಚಾರ ಎಸಗಿದ ದುರುಳರು – ಓರ್ವ ಅರೆಸ್ಟ್

    ಬಾಲಕನ ಮೇಲೆ ಅತ್ಯಾಚಾರ ಎಸಗಿದ ದುರುಳರು – ಓರ್ವ ಅರೆಸ್ಟ್

    ಲಕ್ನೋ: ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು (Police) ವ್ಯಕ್ತಿಯೊಬ್ಬನನ್ನು ಗಾಜಿಯಾಬಾದ್‍ನಲ್ಲಿ (Ghaziabad) ಬಂಧಿಸಿದ್ದಾರೆ.

    ತನ್ನೊಂದಿಗೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ 13 ವರ್ಷದ ಬಾಲಕನನ್ನು ಅಂಗಡಿಯ ಮಹಡಿ ಮೇಲೆ ಕರೆದೊಯ್ದು ಇಬ್ಬರು ದೌರ್ಜನ್ಯ ಎಸಗಿದ್ದಾರೆ. ಅದರಲ್ಲಿ ಓರ್ವನನ್ನು ಬಂಧಿಸಲಾಗಿದೆ. ಮತ್ತೋರ್ವನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲಿಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಾರಿಗೆ ಅವ್ಯವಸ್ಥೆ – ಬಸ್ ತಡೆದು ದೊಡ್ಡಬಳ್ಳಾಪುರದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

    ಜುಲೈ 7 ರಂದು ಈ ಘಟನೆ ನಡೆದಿದೆ. ಮದ್ಯಾಹ್ನದ ವೇಳೆಗೆ ಉಳಿದ ಕೆಲಸಗಾರರು ಅಂಗಡಿಯ ಒಳಗಿದ್ದಾರು. ಈ ವೇಳೆ ಆರೋಪಿಗಳಾದ ಚುನೂ ಮತ್ತು ಮುನೂ ಬಾಲಕನನ್ನು ಮಹಡಿಗೆ ಕರೆದೊಯ್ದಿದ್ದಾರೆ. ಬಳಿಕ ಆತನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಸಂಬಂಧ ಚುನೂ ಮತ್ತು ಮುನೂ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಆರೋಪಿ ಚುನೂನನ್ನು ಬಂಧಿಸಲಾಗಿದೆ. ಮುನೂ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಜೈನ ಮುನಿ ಹತ್ಯೆ ಹಿಂದೆ ಐಸಿಸ್‌ ಚಿತಾವಣೆಯಿದೆ – ಶಾಸಕ ಸಿದ್ದು ಸವದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಲಿಸುತ್ತಿದ್ದ ಬಸ್ಸಿನಲ್ಲೇ ಮಹಿಳೆ ಜೊತೆ ಕಂಡಕ್ಟರ್ ಸೆಕ್ಸ್- ವೀಡಿಯೋ ವೈರಲ್

    ಚಲಿಸುತ್ತಿದ್ದ ಬಸ್ಸಿನಲ್ಲೇ ಮಹಿಳೆ ಜೊತೆ ಕಂಡಕ್ಟರ್ ಸೆಕ್ಸ್- ವೀಡಿಯೋ ವೈರಲ್

    ಲಕ್ನೋ: ಬಸ್ ನಿರ್ವಾಹಕ (Bus Conductor) ನೊಬ್ಬ ಚಲಿಸುತ್ತಿದ್ದ ಬಸ್ಸಿನಲ್ಲೇ ಮಹಿಳೆಯ ಜೊತೆ ಸೆಕ್ಸ್ ಮಾಡಿ ಸಿಕ್ಕಿಬಿದ್ದು, ಇದೀಗ ಕೆಲಸ ಕಳೆದುಕೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ (Uttarpradesh) ನಡೆದಿದೆ.

    ಬಸ್ ಹತ್ರಾಸ್ ಡಿಪೋದ್ದಾಗಿದ್ದು, ಲಕ್ನೋ (Hathras To Lucknow) ಕಡೆ ತೆರಳುತ್ತಿತ್ತು. ಕಂಡಕ್ಟರ್ ಸೆಕ್ಸ್ ನಲ್ಲಿ ತೊಡಗಿರುವುದನ್ನು ಪ್ರಯಾಣಿಕರು ಕೆಲಕಾಲ ಗಮನಿಸಿದ್ದಾರೆ. ಆದರೆ ಈ ವಿಚಾರ ಕಂಡಕ್ಟರ್ ಗಮನಕ್ಕೆ ಬಂದಿರಲಿಲ್ಲ. ಇತ್ತ ಸಹಪ್ರಯಾಣಿಕರು ಇದರ ವೀಡಿಯೋ ಕೂಡ ಮಾಡಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

    ಕಂಡಕ್ಟರ್ ಹಾಗೂ ಮಹಿಳೆ ಕಂಬಳಿ ಹೊದ್ದು ಕುಳಿತಿದ್ದರು. ಈ ವೇಳೆ ಕಂಡಕ್ಟರ್ ವರ್ತನೆ ಕಂಡು ಸಹ ಪ್ರಯಾಣಿಕರು ಸೀಟ್ ಬಳಿ ತೆರಳಿದ್ದಾರೆ. ಆಗ ಕಂಡಕ್ಟರ್ ರಾಸಲೀಲೆಯಲ್ಲಿ ತೊಡಗಿರುವುದು ಬಯಲಾಗಿದೆ. ಅಂತೆಯೇ ಪ್ರಯಾಣಿಕರು ತಮ್ಮ ಮೊಬೈಲ್ ನಲ್ಲಿ ವೀಡಿಯೋ ಮಾಡಿದ್ದಾರೆ. ಆಗ ಎಚ್ಚರಗೊಂಡ ಕಂಡಕ್ಟರ್ ಕಂಬಳಿಯಿಂದ ತನ್ನ ಮಾನ ಮುಚ್ಚಿಕೊಂಡು ಗೊಂದಲಕ್ಕೆ ಒಳಗಾಗಿದ್ದಾನೆ. ಅಲ್ಲದೆ ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದಾನೆ. ಪರಿಣಾಮ ಕಂಡಕ್ಟರ್ ಹಾಗೂ ಪ್ರಯಾಣಿಕರ ಮಧ್ಯೆ ವಾಗ್ವಾದ ನಡೆದಿದೆ.

    ಮಾತಿನ ಚಕಮಕಿಯ ವೇಳೆ ಪ್ರಯಾಣಿಕರೊಬ್ಬರು ಸುಮಾರು ಒಂದು ಗಂಟೆಗಳಿಂದ ಕಂಡಕ್ಟರ್ ರಾಸಲೀಲೆಯಲ್ಲಿ ತೊಡಗಿದ್ದಾನೆ ಎಂದು ಹೇಳುವುದು ವೀಡಿಯೋದಲ್ಲಿ ಗಮನಿಸಬಹುದಾಗಿದೆ. ಇದನ್ನೂ ಓದಿ: ಅನ್ಯ ಜಾತಿ ಹುಡ್ಗನನ್ನ ಪ್ರೀತಿಸಿ ಮದ್ವೆಯಾಗಿದ್ದಕ್ಕೆ ಬದುಕಿದ್ದಾಗಲೇ ಮಗಳ ಅಂತ್ಯಸಂಸ್ಕಾರ ಮಾಡಿದ ತಂದೆ

    ಪ್ರಯಾಣಿಕರು ಆಲಂಬಾಗ್ ತಲುಪಿದ ನಂತರ ಬಸ್ ಕಂಡಕ್ಟರ್ ವಿರುದ್ಧ ದೂರು ನೀಡಲು ನಿರ್ಧರಿಸಿದ್ದರು. ಆದರೆ ಕಾರಣಾಂತರಗಳಿಂದ ದೂರು ಕೊಡಲಿಲ್ಲ. ಸದ್ಯ ವೀಡಿಯೋ ವೈರಲ್ ಆದ ಬೆನ್ನಲ್ಲೇ ಕಂಡಕ್ಟರ್‍ನನ್ನು ಕೆಲಸದಿಂದ ವಜಾ ಮಾಡಲಾಗಿದೆ. ಈ ಘಟನೆ 10 ದಿನಗಳ ಹಿಂದೆ ನಡೆದಿದ್ದಾಗಿ ಅಲ್ಲಿನ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 500 ರೂ. ಕಂತೆ ಕಂತೆ ನೋಟುಗಳ ಜೊತೆ ಪತ್ನಿ, ಮಕ್ಕಳ ಸೆಲ್ಫಿ- ಪೊಲೀಸಪ್ಪನಿಗೆ ಸಂಕಷ್ಟ

    500 ರೂ. ಕಂತೆ ಕಂತೆ ನೋಟುಗಳ ಜೊತೆ ಪತ್ನಿ, ಮಕ್ಕಳ ಸೆಲ್ಫಿ- ಪೊಲೀಸಪ್ಪನಿಗೆ ಸಂಕಷ್ಟ

    ಲಕ್ನೋ: ಪತ್ನಿ ಹಾಗೂ ಮಕ್ಕಳು 500 ರೂ. ನೋಟುಗಳ ಜೊತೆ ಸೆಲ್ಫಿ ತೆಗೆದುಕೊಂಡು ಪರಿಣಾಮ ಇದೀಗ ಪೊಲೀಸ್ ಅಧಿಕಾರಿಯೊಬ್ಬರು ಫಜೀತಿಗೆ ಸಿಲುಕಿರುವ ಘಟನೆ ಉತ್ತರಪ್ರದೇಶದ ಉನ್ನಾವೋದಲ್ಲಿ ( Uttar Pradesh’s Unnao) ನಡೆದಿದೆ.

    ಹೌದು. ಹೆಂಡ್ತಿ, ಮಕ್ಕಳು ಕಂತೆ ಕಂತೆ ನೋಟುಗಳ ಜೊತೆ ಸೆಲ್ಫಿ (SelfiE With 500 Rs. Notes) ತೆಗೆದುಕೊಂಡ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಈ ಬೆನ್ನಲ್ಲೇ ಠಾಣೆಯ ಉಸ್ತುವಾರಿಯಾಗಿದ್ದ ರಮೇಶ್ ಚಂದ್ರ ಸಹನಿಯನ್ನು (Ramesh Chandra Sahani) ತಕ್ಷಣ ಬೇರೆ ಕಡೆ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ಸ್ಟಾಲಿನ್ V/s ರವಿ ಸಂಘರ್ಷ- ವಿವಾದಾತ್ಮಕ ಆದೇಶ ವಾಪಸ್ ಪಡೆದ ಗವರ್ನರ್

    ಫೋಟೋದಲ್ಲೇನಿದೆ..?: 500 ರೂ. ನೋಟಿನ ಬಂಡಲ್‍ಗಳನ್ನು ಮಂಚದ ಮೇಲೆ ನೀಟಾಗಿ ಜೋಡಿಸಿ ಅಧಿಕಾರಿಯ ಪತ್ನಿ ಮತ್ತು ಮಕ್ಕಳಿಬ್ಬರು ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ಫೋಟೋ ಶೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಆಕ್ರೋಶಗಳು ಕೇಳಿಬಂದಿವೆ. ಇದು ಭ್ರಷ್ಟ ವ್ಯವಸ್ಥೆಗೆ ಹಿಡಿದ ಕೈಗನ್ನಡಿ ಎಂಬ ಟೀಕೆಗಳು ಕೇಳಿಬಂದವು. ಸುಮಾರು 14 ಲಕ್ಷ ರೂ. ಮೌಲ್ಯದ ಹಣ ಕತೆಗಳೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

    ಟೀಕೆಗಳು ಕೇಳಿಬಂದ ಬೆನ್ನಲ್ಲೇ ಅಧಿಕಾರಿಯನ್ನು ವರ್ಗಾವಣೆ ಮಾಡಿ ತನಿಖೆ ಆರಂಭಿಸಲಾಗಿದೆ. ತನಿಖೆಯ ವೇಳೆ, ಇದು 2021ರ ನವೆಂಬರ್ 14 ರಂದು ತಮ್ಮ ಕುಟುಂಬದ ಆಸ್ತಿ ಮಾರಾಟ ಮಾಡಿದಾಗ ಬಂದಂತಹ ಹಣವಾಗಿದೆ. ಈ ಹಣದ ಜೊತೆ ಮನೆಯವರು ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ಸಹನಿ ಸಮರ್ಥಿಸಿಕೊಂಡಿದ್ದಾರೆ.

    ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಹನಿ ಅವರ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುಪಿ ಕೋರ್ಟ್‍ನಲ್ಲೇ ಗ್ಯಾಂಗ್‍ಸ್ಟರ್ ಹತ್ಯೆ

    ಯುಪಿ ಕೋರ್ಟ್‍ನಲ್ಲೇ ಗ್ಯಾಂಗ್‍ಸ್ಟರ್ ಹತ್ಯೆ

    ಲಕ್ನೋ: ಗ್ಯಾಂಗ್‍ಸ್ಟರ್ (Gangster) ಮುಕ್ತರ್ ಸಹಚರನನ್ನು ಕೋರ್ಟ್‌ನ (Court) ಕೊಠಡಿಯಲ್ಲೇ ಗುಂಡು ಹಾರಿಸಿ ಕೊಲೆಗೈದ ಘಟನೆ ಉತ್ತರ ಪ್ರದೇಶದ ಕೈಸರ್‌ಬಾಗ್ ಸ್ಥಳೀಯ ನ್ಯಾಯಾಲಯದಲ್ಲಿ ನಡೆದಿದೆ.

    ವಕೀಲರ (Lawyer) ವೇಷದಲ್ಲಿ ಬಂದ ಹಂತಕರು ಏಕಾಏಕಿ ಗ್ಯಾಂಗ್‍ಸ್ಟರ್ ಸಂಜೀವ್ ಜೀವಾ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ನೆಲಕ್ಕೆ ಕುಸಿದ ಆತನ ರಕ್ತಸ್ರಾವವನ್ನು ತಡೆಯಲು ಅಧಿಕಾರಿಗಳು ಪ್ರಯತ್ನಪಟ್ಟಿದ್ದಾರೆ. ಆದರೆ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಲ್ಲದೇ ಘಟನೆಯಲ್ಲಿ ಓರ್ವ ಪೊಲೀಸ್ ಅಧಿಕಾರಿಯ ಕಾಲಿಗೆ ಗುಂಡು ತಗುಲಿದೆ.

    ಈ ಕೊಲೆ ಪ್ರಕರಣದಲ್ಲಿ ಎಷ್ಟು ಜನ ಶೂಟರ್‌ಗಳು ಇದ್ದರು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ದಾಳಿಕೋರರು ರಿವಾಲ್ವರ್ ಹಿಡಿದುಕೊಂಡು ನ್ಯಾಯಾಲಯದ ಆವರಣಕ್ಕೆ ಹೇಗೆ ಪ್ರವೇಶಿಸಿದರು ಎಂಬುದು ಸ್ಪಷ್ಟವಾಗಿಲ್ಲ. ಆದರೆ ನ್ಯಾಯಾಲಯದಲ್ಲಿ ಹಾಜರಿದ್ದ ವಕೀಲರು ದಾಳಿಕೋರರಲ್ಲಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

    ಮೃತ ಸಂಜೀವ್ ಜೀವಾ ಪಶ್ಚಿಮ ಯುಪಿಯಲ್ಲಿ ಕ್ರಿಮಿನಲ್ ಗ್ಯಾಂಗ್ ನಡೆಸುತ್ತಿದ್ದ. ಅಲ್ಲದೇ ಉತ್ತರಾಖಂಡ (Uttarakhand) ಹಾಗೂ ಉತ್ತರ ಪ್ರದೇಶದಲ್ಲಿ (Uttar Pradesh) ಆತನ ವಿರುದ್ಧ ಕನಿಷ್ಠ 50 ಕ್ರಿಮಿನಲ್ ಪ್ರಕರಣಗಳಿವೆ. ಆತ ಹಲವು ವರ್ಷಗಳಿಂದ ಜೈಲಿನಲ್ಲಿದ್ದ ಎಂದು ತಿಳಿದು ಬಂದಿದೆ.

  • ಮೃತ ಸ್ನೇಹಿತನ ಚಿತೆಗೆ ಜಿಗಿದು ಪ್ರಾಣ ಬಿಟ್ಟ ಆಪ್ತಮಿತ್ರ

    ಮೃತ ಸ್ನೇಹಿತನ ಚಿತೆಗೆ ಜಿಗಿದು ಪ್ರಾಣ ಬಿಟ್ಟ ಆಪ್ತಮಿತ್ರ

    ಲಕ್ನೋ: ಸ್ನೇಹಿತನ (Friend) ಸಾವಿನಿಂದ ಬೇಸತ್ತ ವ್ಯಕ್ತಿಯೊಬ್ಬ ಅಂತ್ಯ ಸಂಸ್ಕಾರದ ವೇಳೆ ಚಿತೆಗೆ (Funeral Pyre) ಜಿಗಿದು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ (UttarPradesh) ನಡೆದಿದೆ.

    ನಾಗ್ಲಾ ಖಂಗರ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಅಶೋಕ್ (42) ಎಂಬವರು ಕ್ಯಾನ್ಸರ್‍ನಿಂದ ಬಳಲುತ್ತಿದ್ದು, ಶನಿವಾರ ಬೆಳಗ್ಗೆ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರ ಯಮುನಾ ನದಿಯ (Yamuna River) ದಡದಲ್ಲಿ ನಡೆಯುತ್ತಿತ್ತು. ಈ ವೇಳೆ ಮೃತನ ಸ್ನೇಹಿತ ಚಿತೆಗೆ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ RJD ವಿರುದ್ಧ ಓವೈಸಿ ವಾಗ್ದಾಳಿ

    ಚಿತೆಗೆ ಜಿಗಿದ ವ್ಯಕ್ತಿಯನ್ನು ಆನಂದ್ (40) ಎಂದು ಗುರುತಿಸಲಾಗಿದೆ. ಕೂಡಲೇ ಅಲ್ಲಿದ್ದ ಜನರು ಆತನನ್ನು ಬೆಂಕಿಯಿಂದ ಹೊರಗೆಳೆದು ಆಗ್ರಾದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಆನಂದ್ ಅವರ ಕುಟುಂಬದ ಸದಸ್ಯರನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನೂತನ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಆರ್‌ಜೆಡಿ – ಕಾನೂನು ಸಮರಕ್ಕೆ ಮುಂದಾದ ಬಿಜೆಪಿ